ಸುಳ್ಯ
ಸುಳ್ಯ : ಅಪ್ರಾಪ್ತ ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರ – ಯುವಕನ ಬಂಧನ
ಸುಳ್ಯ Sullia : ಸೆ 27 : ಅಪ್ರಾಪ್ತ ವಿದ್ಯಾರ್ಥಿನಿಗೆ ಅತ್ಯಾಚಾರ ಎಸಗಿ ಆಕೆಯನ್ನು ಗರ್ಭಿಣಿಯಾಗಿಸಿದ ಆರೋಪದಡಿ 25ರ ಯುವಕನ ಮೇಲೆ ಸುಳ್ಯ ಪೊಲೀಸ್ ಠಾಣೆಯಲ್ಲಿ ಪೋಕ್ಸೊ ಪ್ರಕರಣ ದಾಖಲಾಗಿದೆ. ಸುಳ್ಯ ತಾಲೂಕಿನ ಮಿತ್ತೂರು ಸಮೀಪದ ಉಬರಡ್ಕ ಬಳಿ ನಿವಾಸಿ ತೀರ್ಥರಾಮ್ (25) ಆರೋ ಕಲಂ: 376 ಐಪಿಸಿ ಮತ್ತು Sec: 4, POCSO Act 2012 ರಡಿ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.
ಆರೋಪಿ ಹಾಗೂ ಬಾಲಕಿಗೆ ಸಮುದಾಯವೊಂದರ ವಾಟ್ಸಾಪ್ ಗ್ರೂಪಿನಲ್ಲಿ ನಾಲ್ಕು ತಿಂಗಳ ಹಿಂದೆ ಪರಿಚಯವಾಗಿದೆ. ಬಳಿಕ ಅವರಿಬ್ಬರು ಹಲವು ಬಾರಿ ಫೋನಿನಲ್ಲಿ ಮಾತನಾಡಿಕೊಂಡಿದ್ದಾರೆ. ಜೂ 30 ರಂದು ಆರೋಪಿಯು ಸುಳ್ಯಕ್ಕೆ ಬರುವಂತೆ ಬಾಲಕಿಗೆ ಪುಸಲಾಯಿಸಿದ್ದಾನೆ. ಸುಳ್ಯ ಬಸ್ಸು ನಿಲ್ದಾಣಕ್ಕೆ ಬಂದ ಬಾಲಕಿಯನ್ನು ಆರೋಪಿಯು ತನ್ನ ಬೈಕಿನಲ್ಲಿ ಕರೆದುಕೊಂಡು ಹೋಗಿ ಸ್ನೇಹಿತನ ರೂಮ್ ನಲ್ಲಿ ಅತ್ಯಾಚಾರ ಎಸಗಿದ್ದಾನೆ . ಅಲ್ಲದೇ ಈ ವಿಚಾರವನ್ನು ಯಾರಿಗೂ ತಿಳಿಸದಂತೆ ಬೆದರಿಕೆ ಒಡ್ಡಿದ್ದಾನೆ.
ಸೆ 26 ರಂದು ಬಾಲಕಿಗೆ ಹೊಟ್ಟೆ ನೋವು ಕಾಣಿಸಿಕೊಂಡ ಹಿನ್ನಲೆಯಲ್ಲಿ ಆಕೆಯ ತಂದೆ ಆಕೆಯನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ . ಈ ವೇಳೆ ಅನುಮಾನಗೊಂಡ ವೈದ್ಯರು ಸ್ಕ್ಯಾನಿಂಗ್ ಮಾಡಿಸಿದ್ದು, ಈ ವೇಳೆ ಆಕೆ ಗರ್ಭಿಣಿಯಾಗಿರುವುದು ಪತ್ತೆಯಾಗಿದೆ. ಈ ಮಾಹಿತಿಯನ್ನು ಅವರು ಬಾಲಕಿಯ ತಂದೆಗೆ ನೀಡಿದ್ದರು.
Gold Rate Today : ಚಿನ್ನದ ದರ ಯಥಾಸ್ಥಿತಿ – ಖರೀದಿಗೂ ಮುನ್ನ ಇಂದಿನ ಚಿನ್ನ ಹಾಗೂ ಬೆಳ್ಳಿಯ ರೇಟ್ ತಿಳಿಯಿರಿ
ತಂದೆಯೂ ಬಾಲಕಿಯನ್ನು ವಿಚಾರಿಸಿದ್ದು ಈ ವೇಳೆ ತೀರ್ಥರಾಮ ಕೃತ್ಯ ಎಸಗಿರುವುದು ಬೆಳಕಿಗೆ ಬಂದಿದೆ. ಬಾಲಕಿಯ ತಂದೆ ನೀಡಿದ ದೂರಿನಂತೆ ಸುಳ್ಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ತನಿಖೆ ಕೈಗೆತ್ತಿಕೊಂಡ ಪೊಲೀಸರು ಕ್ಷಿಪ್ರ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ.
ಸುಳ್ಯ
ಸಿಜೆಪಿ ಮುಖಂಡರಾದ ಸೌರವ್ ದಾಸ್, ಅಶುತೋಷ್ ರಾಂಕಾ ಮತ್ತು ಅಜಿಂಕ್ಯ ಶಿಂಧೆ ಬಂಧನ, ತಿಹಾರ್ ಜೈಲಿಗೆ ಶಿಫ್ಟ್ ಸಾಧ್ಯತೆ

ನವದೆಹಲಿ: ನಿಷೇಧಿತ ಪ್ರದೇಶವಾದ ಜಂತರ್ ಮಂತರ್ ಪ್ರವೇಶಿಸಿ, ಪೊಲೀಸ್ ಬ್ಯಾರಿಕೇಡ್ ಉಲ್ಲಂಘಿಸಿದ ಹಾಗೂ ಸರ್ಕಾರಿ ಅಧಿಕಾರಿಯ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದ ಮೇಲೆ ‘ಕಾಕ್ರೋಚ್ ಜನತಾ ಪಾರ್ಟಿ’ (ಸಿಜೆಪಿ) ಮುಖಂಡರಾದ ಸೌರವ್ ದಾಸ್, ಅಶುತೋಷ್ ರಾಂಕಾ ಮತ್ತು ಅಜಿಂಕ್ಯ ಶಿಂಧೆ ಅವರನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ.
ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ ಸಿಜೆಪಿ ನಾಯಕರು ಮಂಗಳವಾರ ಮುಂಜಾನೆ ಜಂತರ್ ಮಂತರ್ ಬಳಿ ಪ್ರತಿಭಟನೆಗೆ ಯತ್ನಿಸಿದ್ದರು. ಈ ವೇಳೆ ಪೊಲೀಸರು ಅಳವಡಿಸಿದ್ದ ಬ್ಯಾರಿಕೇಡ್ಗಳನ್ನು ಭೇದಿಸಿ ಒಳಪ್ರವೇಶಿಸಿದ ಅವರು, ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದ ಹಿನ್ನೆಲೆಯಲ್ಲಿ ವಶಕ್ಕೆ ಪಡೆಯಲಾಗಿತ್ತು.
ಬಂಧಿತ ನಾಯಕರನ್ನು ಇಂದು (ಬುಧವಾರ) ವಿಶೇಷ ಕಾರ್ಯಕಾರಿ ಮ್ಯಾಜಿಸ್ಟ್ರೇಟ್ (ಎಸ್ಇಎಂ) ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗುತ್ತಿದ್ದು, ಬಳಿಕ ಅವರನ್ನು ತಿಹಾರ್ ಜೈಲಿಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸುವ ಸಾಧ್ಯತೆಯಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಪೊಲೀಸರ ವಿರುದ್ಧ ಸಿಜೆಪಿ ಆರೋಪ:
ಸಿಜೆಪಿ ಕಾನೂನು ಘಟಕದ ಮುಖ್ಯಸ್ಥೆ ರತ್ನಾ ಸಿಂಗ್ ಅವರು ‘ಎಕ್ಸ್’ (ಟ್ವಿಟರ್) ಮೂಲಕ ಘಟನೆಯ ಬಗ್ಗೆ ಮಾಹಿತಿ ನೀಡಿದ್ದು, ಪೊಲೀಸರ ಕ್ರಮವನ್ನು ತೀವ್ರವಾಗಿ ಖಂಡಿಸಿದ್ದಾರೆ.
“ಜಂತರ್ ಮಂತರ್ ಘಟನೆಗೆ ಸಂಬಂಧಿಸಿದಂತೆ ನಮ್ಮ ನಾಯಕರಾದ ಸೌರವ್ ದಾಸ್, ಅಶುತೋಷ್ ಹಾಗೂ ಅಜಿಂಕ್ಯ ಅವರನ್ನು ಪಾರ್ಲಿಮೆಂಟ್ ಸ್ಟ್ರೀಟ್ ಪೊಲೀಸ್ ಠಾಣೆಯಲ್ಲಿ ಬಂಧಿಸಲಾಗಿದೆ. ಅವರ ಮೇಲೆ ಅಕ್ರಮ ಪ್ರವೇಶ, ಬಾಂಡ್ ಉಲ್ಲಂಘನೆ ಹಾಗೂ ಕರ್ತವ್ಯಕ್ಕೆ ಅಡ್ಡಿ ಸೇರಿದಂತೆ ವಿವಿಧ ಸೆಕ್ಷನ್ಗಳಡಿ ಪ್ರಕರಣ ದಾಖಲಿಸಲಾಗಿದೆ. ತಡರಾತ್ರಿಯವರೆಗೂ ವಕೀಲರನ್ನು ಭೇಟಿ ಮಾಡಲು ಪೊಲೀಸರು ಅವಕಾಶ ನೀಡಿರಲಿಲ್ಲ.
ಮುಂಜಾನೆ 3 ಗಂಟೆ ಸುಮಾರಿಗೆ ಖಾಸಗಿ ವ್ಯಾನ್ ಮೂಲಕ ಅವರನ್ನು ಪಾರ್ಲಿಮೆಂಟ್ ಸ್ಟ್ರೀಟ್ ಠಾಣೆಗೆ ಕರೆತರಲಾಗಿದೆ. ಈ ಎಲ್ಲ ಕಾನೂನುಬಾಹಿರ ಕ್ರಮಗಳ ನಡುವೆಯೂ ನಮ್ಮ ನಾಯಕರ ನೈತಿಕ ಸ್ಥೈರ್ಯ ಕುಗ್ಗಿಲ್ಲ” ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಹಿನ್ನೆಲೆ ಏನು?
ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ಪ್ರಕ್ರಿಯೆಯಲ್ಲಿ ಭಾರಿ ಅಕ್ರಮಗಳು ನಡೆದಿವೆ ಎಂದು ಆರೋಪಿಸಿ ಸಿಜೆಪಿ ಹಾಗೂ ಇತರ ಕೆಲವು ಸಂಘಟನೆಗಳು ದೆಹಲಿಯಲ್ಲಿ ಪ್ರತಿಭಟನೆಗಳನ್ನು ತೀವ್ರಗೊಳಿಸಿವೆ. ಈ ಹಿನ್ನೆಲೆಯಲ್ಲಿ ರಾಜಧಾನಿಯಾದ್ಯಂತ ಬಿಗಿ ಭದ್ರತೆ ಕೈಗೊಳ್ಳಲಾಗಿದೆ.
ಕಳೆದ ಅಕ್ಟೋಬರ್ 11ರಂದು ನೂತನ ಆದೇಶ ಹೊರಡಿಸಿದ್ದ ದೆಹಲಿ ಪೊಲೀಸ್ ಕಮಿಷನರ್ ಅನುರಾಗ್ ಕುಮಾರ್ ಅವರು, ಯಾವುದೇ ಧರಣಿ ಮತ್ತು ಪ್ರತಿಭಟನೆಗಳಿಗೆ ಕೇವಲ ರಾಮ್ಲೀಲಾ ಮೈದಾನ, ಬುರಾರಿ ಗ್ರೌಂಡ್ ಹಾಗೂ ಸಿಬಿಡಿ ಗ್ರೌಂಡ್ಗಳನ್ನು ಮಾತ್ರ ನಿಗದಿಪಡಿಸಿದ್ದರು. ಈ ಆದೇಶದ ಅನ್ವಯ ಜಂತರ್ ಮಂತರ್ ಅನ್ನು ಪ್ರತಿಭಟನಾ ಸ್ಥಳಗಳ ಪಟ್ಟಿಯಿಂದ ಕೈಬಿಡಲಾಗಿದ್ದು, ಅಲ್ಲಿ ಜಮಾವಣೆಯನ್ನು ನಿಷೇಧಿಸಲಾಗಿದೆ. ನಿಷೇಧದ ನಡುವೆಯೂ ಪ್ರತಿಭಟನೆ ನಡೆಸಿದ್ದರಿಂದ ಈ ಬಂಧನ ಕಾರ್ಯಾಚರಣೆ ನಡೆದಿದೆ.
ನಿಧನ ವಾರ್ತೆ
Kalmadka-ಸುಳ್ಯ ಕಲ್ಮಡ್ಕದಲ್ಲಿ ದುರಂತ: ವಿದ್ಯುತ್ ಸ್ಪರ್ಶಿಸಿ ಮೀನು ಹಿಡಿಯಲು ಹೋದ ಬಾವ–ಬಾಮೈದ ಸಾವು
ಮೀನು ಹಿಡಿಯಲು ತೆರಳಿದ್ದ ಇಬ್ಬರು ವಿದ್ಯುತ್ ಸ್ಪರ್ಶಿಸಿ ಮೃತಪಟ್ಟ ದಾರುಣ ಘಟನೆ ಸುಳ್ಯ ತಾಲೂಕಿನ ಕಲ್ಮಡ್ಕದಲ್ಲಿ ಅ.12ರ ರಾತ್ರಿ ಸಂಭವಿಸಿದೆ. ಮೃತಪಟ್ಟವರು ಬಾವ–ಬಾಮೈದ ಸಂಬಂಧಿಗಳಾಗಿದ್ದು, ಅವರೊಂದಿಗೆ ತೆರಳಿದ್ದ ಮತ್ತೊಬ್ಬ ಯುವಕ ಗಾಯಗೊಂಡಿದ್ದಾರೆ.
ಕಲ್ಮಡ್ಕ: ಮೀನು ಹಿಡಿಯಲು ತೆರಳಿದ್ದ ಇಬ್ಬರು ವಿದ್ಯುತ್ ಸ್ಪರ್ಶಿಸಿ ಮೃತಪಟ್ಟ ದಾರುಣ ಘಟನೆ ಸುಳ್ಯ ತಾಲೂಕಿನ ಕಲ್ಮಡ್ಕದಲ್ಲಿ ಅ.12ರ ರಾತ್ರಿ ಸಂಭವಿಸಿದೆ. ಮೃತಪಟ್ಟವರು ಬಾವ–ಬಾಮೈದ ಸಂಬಂಧಿಗಳಾಗಿದ್ದು, ಅವರೊಂದಿಗೆ ತೆರಳಿದ್ದ ಮತ್ತೊಬ್ಬ ಯುವಕ ಗಾಯಗೊಂಡಿದ್ದಾರೆ.
ಕಲ್ಮಡ್ಕದ ಬೊಮ್ಮೆಟ್ಟಿ ನಿವಾಸಿಗಳಾದ ಬಾಬು–ಸೀತಾ ದಂಪತಿಯ ಪುತ್ರ ಭರತ್ (28) ಹಾಗೂ ಭರತ್ ಅವರ ಸಹೋದರಿ ಭವ್ಯಾ ಅವರ ಪತಿ, ಬೆಳ್ತಂಗಡಿ ತಾಲೂಕಿನ ಮುಂಗೆಲು ನಿವಾಸಿಗಳಾದ ವೀರಪ್ಪ–ಸೀತಮ್ಮ ದಂಪತಿಯ ಪುತ್ರ ರಮೇಶ್ (34) ಮೃತಪಟ್ಟವರು. ಗಾಯಗೊಂಡ ಯುವಕನನ್ನು ಅವರ ಸಂಬಂಧಿ ಸಿಂಚನ್ ಎಂದು ಗುರುತಿಸಲಾಗಿದೆ.
ಅ.12ರಂದು ರಾತ್ರಿ ಸುಮಾರು 10.30ರ ವೇಳೆಗೆ ಭರತ್, ರಮೇಶ್ ಹಾಗೂ ಸಿಂಚನ್ ಅವರು ಮನೆಯಿಂದ ಸುಮಾರು ಒಂದೂವರೆ ಕಿ.ಮೀ. ದೂರದಲ್ಲಿರುವ ತೋಡಿಗೆ ಮೀನು ಹಿಡಿಯಲು ತೆರಳಿದ್ದರು ಎನ್ನಲಾಗಿದೆ. ತೋಡಿನ ಮೇಲ್ಭಾಗದಲ್ಲಿ ತಂತಿ ಅಳವಡಿಸಿ ಅದಕ್ಕೆ ವಿದ್ಯುತ್ ಸಂಪರ್ಕ ನೀಡಲಾಗಿತ್ತು ಎಂದು ತಿಳಿದುಬಂದಿದೆ.
ಈ ತಂತಿಯನ್ನು ದಾಟುವ ವೇಳೆ ಭರತ್ ಮತ್ತು ರಮೇಶ್ ಅವರಿಗೆ ವಿದ್ಯುತ್ ಸ್ಪರ್ಶಿಸಿದ್ದು, ಇಬ್ಬರೂ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಅವರೊಂದಿಗೆ ಇದ್ದ ಸಿಂಚನ್ ಅವರಿಗೂ ವಿದ್ಯುತ್ ತಗುಲಿ ಎಸೆಯಲ್ಪಟ್ಟಿದ್ದು, ಕೈ, ಎದೆ ಹಾಗೂ ಕಾಲುಗಳಿಗೆ ಸುಟ್ಟ ಗಾಯಗಳಾಗಿವೆ ಎಂದು ತಿಳಿದುಬಂದಿದೆ.
ನಿಧನ ವಾರ್ತೆ
Sullia-Big Breaking: ಸುಳ್ಯ: ವಿದ್ಯುತ್ ಶಾಕ್ಗೆ ಇಬ್ಬರು ಯುವಕರು ಬಲಿ; ಬಾಲಕನಿಗೆ ಗಾಯ
ಸುಳ್ಯ ತಾಲೂಕಿನ ಕಲ್ಮಡ್ಕ ಗ್ರಾಮದ ಬೊಮ್ಮೆಟ್ಟಿಯಲ್ಲಿ ವಿದ್ಯುತ್ ಶಾಕ್ ತಗುಲಿ ಇಬ್ಬರು ಯುವಕರು ಮೃತಪಟ್ಟ ದಾರುಣ ಘಟನೆ ಅ.12ರ ತಡರಾತ್ರಿ ನಡೆದಿದೆ. ಘಟನೆಯಲ್ಲಿ ಮತ್ತೋರ್ವ ಬಾಲಕ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಸುಳ್ಯ: ತಾಲೂಕಿನ ಕಲ್ಮಡ್ಕ ಗ್ರಾಮದ ಬೊಮ್ಮೆಟ್ಟಿಯಲ್ಲಿ ವಿದ್ಯುತ್ ಶಾಕ್ ತಗುಲಿ ಇಬ್ಬರು ಯುವಕರು ಮೃತಪಟ್ಟ ದಾರುಣ ಘಟನೆ ಅ.12ರ ತಡರಾತ್ರಿ ನಡೆದಿದೆ. ಘಟನೆಯಲ್ಲಿ ಮತ್ತೋರ್ವ ಬಾಲಕ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಮೃತರನ್ನು ಬೊಮ್ಮೆಟ್ಟಿ ನಿವಾಸಿಗಳಾದ ಗಣೇಶ್ ಹಾಗೂ ಭರತ್ ಎಂದು ಗುರುತಿಸಲಾಗಿದೆ. ತಡರಾತ್ರಿ ಸಂಭವಿಸಿದ ಈ ದುರಂತದಿಂದ ಸ್ಥಳೀಯರಲ್ಲಿ ಆತಂಕ ಹಾಗೂ ಶೋಕದ ವಾತಾವರಣ ನಿರ್ಮಾಣವಾಗಿದೆ.
ವಿದ್ಯುತ್ ಶಾಕ್ ತಗುಲಲು ನಿಖರ ಕಾರಣವೇನು ಎಂಬುದು ಇನ್ನಷ್ಟೇ ತಿಳಿದುಬರಬೇಕಿದೆ. ಘಟನೆಯ ಕುರಿತು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.
-
ಸ್ಥಳೀಯ13 hours agoNavoor clinic-ನಾವೂರು ಕ್ಲಿನಿಕ್ಗೆ ಬೆಂಕಿ ಪ್ರಕರಣ: ರವಿ ಪೂಜಾರಿ ಬಂಧನ, ಇಬ್ಬರು ಶಂಕಿತರ ವಿಚಾರಣೆ
-
ರಾಜಕೀಯ6 hours agoH.D. Kumaraswamy-ರಾಜ್ಯ ರಾಜಕಾರಣದಲ್ಲಿ ಬಿರುಗಾಳಿ : ಬಾಂಬ್ ಸಿಡಿಸಿದ ಎಚ್.ಡಿ. ಕುಮಾರಸ್ವಾಮಿ – ಸಿದ್ದರಾಮಯ್ಯ ವಿರುದ್ಧದ ಸ್ಟಿಂಗ್ ಷಡ್ಯಂತ್ರದಲ್ಲಿ ಕೃಪಾ ಆಳ್ವ..! ಗಂಭೀರ ಆರೋಪ
-
ಅಪರಾಧ7 hours agoPuttur-ಪುತ್ತೂರಿನಲ್ಲಿ ಅಕ್ರಮ ಲಾಟರಿ ಮಾರಾಟ: ಇಬ್ಬರು ಅಂಗಡಿ ಮಾಲೀಕರ ವಿರುದ್ಧ ಪ್ರಕರಣ ದಾಖಲು
-
ಅಪರಾಧ11 hours agoB.R. Shetty-ಬ್ಯಾಂಕ್ ಆಫ್ ಬರೋಡಾ ವಿರುದ್ಧ ಯುಎಇ ಎಕ್ಸ್ಚೇಂಜ್ ಸಂಸ್ಥೆಗಳ ಸ್ಥಾಪಕ ಬಿ.ಆರ್. ಶೆಟ್ಟಿ ಕಾನೂನು ಸಮರ; ₹1.25 ಲಕ್ಷ ಕೋಟಿ ಪರಿಹಾರ ಬೇಡಿಕೆ
-
ಮಂಗಳೂರು7 hours agoSudhir Kumar Reddy-ಭಾರತ ಮಾತೆಯ ಹೆಸರಿನಲ್ಲಿ ಕಾನೂನು ಉಲ್ಲಂಘನೆ ಸಲ್ಲದು – ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ಖಡಕ್ ಸ್ಪಷ್ಟನೆ..!
-
ಬಿಗ್ ನ್ಯೂಸ್13 hours agoRenukashwami murder case-ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಮಹತ್ವದ ತಿರುವು: ಮಾಫಿ ಸಾಕ್ಷಿ ಅರ್ಜಿ ವಾಪಸ್ ಪಡೆದ ಎ10 ವಿನಯ್
-
ಅಂತರ ರಾಜ್ಯ13 hours agoMurder case-ಮೀರತ್ ಬ್ಲೂ ಡ್ರಮ್ ಕೊಲೆ ಪ್ರಕರಣ: ಪತ್ನಿ ಮುಸ್ಕಾನ್, ಪ್ರಿಯಕರ ಸಾಹಿಲ್ಗೆ ಗಲ್ಲು ಶಿಕ್ಷೆ..!
-
ರಾಜಕೀಯ11 hours agoAmal Ramachandra-ಒಳ್ಳೆಯ ರೀತಿಯಲ್ಲಿ ಬೆಳೆವಿಮೆ ಬಂದರೆ ಮೋದಿಯಿಂದಾಗಿ ಎಂದು ಬೊಬ್ಬೆ ಹಾಕುತ್ತಿದ್ದ ಬಿಜೆಪಿ ಈಗ ಕಾಂಗ್ರೆಸ್ ನ್ನು ದೂರುತ್ತಿದೆ..! ಟರ್ಮ್ ಶೀಟ್ ಬದಲಾವಣೆ ಮಾಡಿದ್ದು ಬಿಜೆಪಿ ಈ ಬಗ್ಗೆ ದಾಖಲೆಯಿದೆ; ಅಶೋಕ್ ರೈ ಹುಟ್ಟಿಸಿದ ಲಿಸ್ಟ್ ಕೊಡ್ತೇನೆ 8 ವರ್ಷಗಳಲ್ಲಿ ಬೆಳ್ತಂಗಡಿಯಲ್ಲಿ ಪೂಂಜಾ ಹುಟ್ಟಿಸಿದ್ದೇನೂ..? ಪುಡಾ ಅಧ್ಯಕ್ಷ ಅಮಳ ರಾಮಚಂದ್ರ


















