ಆರೋಗ್ಯ
Rice Side effects : ಅನ್ನವನ್ನು ಅತಿಯಾಗಿ ಸೇವಿಸಿದರೇ ಈ ಸಮಸ್ಯೆಗಳು ಕಟ್ಟಿಟ್ಟ ಬುತ್ತಿ – ಇಲ್ಲಿದೆ ದುಷ್ಪರಿಣಾಮಗಳ ಪಟ್ಟಿ
ಭಾರತದಲ್ಲಿ ಅಹಾರವಾಗಿ( food) ಅತೀ ಹೆಚ್ಚು ಬಳಕೆ ಮಾಡುವ ಆಹಾರ ಅನ್ನ (Rice). ಬಹುತೇಕ ಪ್ರತಿಯೊಬ್ಬರ ಮನೆಯಲ್ಲೂ ಪ್ರತಿದಿನ ಅನ್ನ ತಯಾರಿಸಲಾಗುತ್ತದೆ. ಮನೆಯವರು ಕನಿಷ್ಟ ಒಂದು ಹೊತ್ತು ಆದರೂ ಅನ್ನ ಸೇವಿಸಿಯೇ ಸೇವಿಸುತ್ತಾರೆ. ಕೆಲವರಂತೂ ಮೂರು ಹೊತ್ತು ಅನ್ನ ಸೇವಿಸುತ್ತಾರೆ.
ಅಷ್ಟೇ ಅಲ್ಲ ಬೆಳಗ್ಗಿನ ಉಪಹಾರಕ್ಕೆ ಅಕ್ಕಿಯಿಂದ ತಯಾರಿಸಿದ ತಿನಿಸುಗಳಾದ ದೋಸೆ, ಇಡ್ಲಿ, ಕಡುಬು ಹೀಗೆ ನಾನಾ ರೀತಿಯ ತಿಂಡಿಗಳನ್ನು ತಿನ್ನುತ್ತಾರೆ. ಅವರಿಗೆ ಅಕ್ಕಿ ಅವರ ಜೀವನದ ಪ್ರಮುಖ ಆಹಾರವಾಗಿಬಿಟ್ಟಿದೆ.
ಇಂದು ನಾವು ನಿಮಗೆ ಅನ್ನಕ್ಕೆ ಸಂಬಂಧಿಸಿದ ಒಂದು ಆಶ್ಚರ್ಯಕರ ವಿಷಯವನ್ನು ಹೇಳಲಿದ್ದೇವೆ. ಹೆಚ್ಚು ಅನ್ನ ತಿನ್ನುವವರಿಗೆ ತಕ್ಷಣಕ್ಕೆ ಏನೂ ಅನಿಸದಿರಬಹುದು. ಆದರೆ ಕ್ರಮೇಣ ಅವರ ದೇಹವು ಖಂಡಿತವಾಗಿಯೂ ಸಮಸ್ಯೆಗಳನ್ನು ಎದುರಿಸಲು ಪ್ರಾರಂಭಿಸುತ್ತದೆ. ಅನ್ನದ ಅತಿಯಾದ ಸೇವನೆಯು ದೇಹದ ಮೇಲೆ ಹೇಗೆ ಕೆಟ್ಟ ಪರಿಣಾಮ ಬೀರುತ್ತದೆ ಎಂಬುದನ್ನು ಇಲ್ಲಿ ವಿವರಿಸಲಾಗಿದೆ.
ಅಕ್ಕಿ ದೇಹಕ್ಕೆ ಹಾನಿ ಮಾಡುತ್ತದೆಯೇ?
ಅಕ್ಕಿಯ ಅತಿಯಾದ ಸೇವನೆಯು ನಮ್ಮ ದೇಹಕ್ಕೆ ಹಾನಿಕಾರಕ ಎಂದು ಕೇಳಲು ವಿಚಿತ್ರವೆನಿಸಬಹುದು. 100 ಗ್ರಾಂ ಬಿಳಿ ಅಕ್ಕಿಯಲ್ಲಿ 123 ಕ್ಯಾಲೋರಿಗಳು ಮತ್ತು 2.9 ಗ್ರಾಂ ಪ್ರೋಟೀನ್ ಇದೆ. ಇದಲ್ಲದೆ, ಇದು 30 ಗ್ರಾಂ ಕಾರ್ಬೋಹೈಡ್ರೇಟ್ ಗಳನ್ನು ಹೊಂದಿರುತ್ತದೆ. ಹೆಚ್ಚಿನ ಪ್ರಮಾಣದಲ್ಲಿ ಅನ್ನವನ್ನು ತಿನ್ನುವುದರಿಂದ ದೇಹಕ್ಕೆ ಹೆಚ್ಚಿನ ಹಾನಿಯಾಗುತ್ತದೆ.
ಕಿಬ್ಬೊಟ್ಟೆ ಹಿಗ್ಗುವಿಕೆ
ಅನ್ನವನ್ನು ತಿಂದ ನಂತರ ಕೆಲವರಿಗೆ ಉಬ್ಬುವಿಕೆಯಂತಹ ಸಮಸ್ಯೆಗಳು ಕಾಡುತ್ತವೆ. ಇದಕ್ಕೆ ಕಾರಣ ನಿಮ್ಮ ಆಹಾರ ಕ್ರಮವೂ ಆಗಿರಬಹುದು. ಹೆಚ್ಚು ಅನ್ನ ಸೇವಿಸುವುದರಿಂದ ಹೊಟ್ಟೆ ಉರಿ, ಹೊಟ್ಟೆ ಉಬ್ಬುವುದು ಮುಂತಾದ ಸಮಸ್ಯೆಗಳು ಕಾಡಲಾರಂಭಿಸುತ್ತವೆ. ಅಕ್ಕಿಯಲ್ಲಿ ಕಂಡುಬರುವ ಪಿಷ್ಟವೇ ಇದಕ್ಕೆ ಕಾರಣ.
ತೂಕ ಹೆಚ್ಚಳ
ಹೆಚ್ಚು ಅನ್ನ ತಿನ್ನುವುದರಿಂದ ನಿಮ್ಮ ತೂಕವೂ ಹೆಚ್ಚಾಗಬಹುದು. ಊಟ ಮಾಡಿದ ತಕ್ಷಣ ಮಲಗುವುದರಿಂದ ಸ್ಥೂಲಕಾಯ ಹೆಚ್ಚಾಗುತ್ತದೆ. ಇನ್ನು ಅಕ್ಕಿಯನ್ನು ಸಮತೋಲಿತ ಪ್ರಮಾಣದಲ್ಲಿ ಸೇವಿಸುವ ಮತ್ತು ವ್ಯಾಯಾಮ ಮಾಡುವ ಜನರಲ್ಲಿ ಇದು ಕಡಿಮೆ ಪರಿಣಾಮ ಬೀರುತ್ತದೆ.
ರಕ್ತದಲ್ಲಿ ಸಕ್ಕರೆ ಪ್ರಮಾಣ ಹೆಚ್ಚಳ
ಅಕ್ಕಿಯ ಅತಿಯಾದ ಸೇವನೆಯು ರಕ್ತದಲ್ಲಿನ ಸಕ್ಕರೆಯ ಅಪಾಯವನ್ನು ಹೆಚ್ಚಿಸುತ್ತದೆ. ಅನ್ನವನ್ನು ಅತಿಯಾಗಿ ಸೇವಿಸಿದರೆ ಅದು ಟೈಪ್ 2 ಮಧುಮೇಹದ(Diabetes) ಅಪಾಯವನ್ನು ಹೆಚ್ಚಿಸುತ್ತದೆ. ನೀವು ಅನ್ನವನ್ನು ತಿನ್ನಲು ಇಷ್ಟಪಡುತ್ತಿದ್ದರೆ, ನೀವು ಬ್ರೌನ್ ರೈಸ್ ಅನ್ನು ಸೇವಿಸಬಹುದು ಉತ್ತಮ
ಆರೋಗ್ಯ
Puttur-ಸೆ.29: ವಿಶ್ವ ಹೃದಯ ದಿನ: ಪುತ್ತೂರಿನ ಮೆಡ್‌ಲ್ಯಾಂಡ್ ಆಸ್ಪತ್ರೆಯಲ್ಲಿ ಹೃದಯ ತಪಾಸಣಾ ಶಿಬಿರ
ವಿಶ್ವ ಹೃದಯ ದಿನದ ಅಂಗವಾಗಿ ಪುತ್ತೂರಿನ ಸಂಪ್ಯದಲ್ಲಿರುವ ಮೆಡ್‌ಲ್ಯಾಂಡ್ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಸೆ.29, ಮಂಗಳವಾರದಂದು ಸಂಜೆ ಗಂಟೆ 3ರಿಂದ ವಿಶೇಷ ಹೃದಯ ತಪಾಸಣಾ ಶಿಬಿರ ಹಾಗೂ ಮಾಹಿತಿ ಕಾರ್ಯಾಗಾರವನ್ನು ಆಯೋಜಿಸಲಾಗಿದೆ.
ಪುತ್ತೂರು: ವಿಶ್ವ ಹೃದಯ ದಿನದ ಅಂಗವಾಗಿ ಪುತ್ತೂರಿನ ಸಂಪ್ಯದಲ್ಲಿರುವ ಮೆಡ್‌ಲ್ಯಾಂಡ್ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಸೆ.29, ಮಂಗಳವಾರದಂದು ಸಂಜೆ ಗಂಟೆ 3ರಿಂದ ವಿಶೇಷ ಹೃದಯ ತಪಾಸಣಾ ಶಿಬಿರ ಹಾಗೂ ಮಾಹಿತಿ ಕಾರ್ಯಾಗಾರವನ್ನು ಆಯೋಜಿಸಲಾಗಿದೆ.
ಶಿಬಿರದಲ್ಲಿ ಹೃದಯದ ಆರೋಗ್ಯಕ್ಕೆ ಸಂಬಂಧಿಸಿದಂತೆ ಇ.ಸಿ.ಜಿ., ಇಕೋ (ECHO), ಟಿ.ಎಂ.ಟಿ. (TMT) ಸೇರಿದಂತೆ ಅಗತ್ಯ ತಪಾಸಣೆಗಳನ್ನು ನಡೆಸಲಾಗುವುದು. ತಪಾಸಣೆಯ ಬಳಿಕ ಹೃದ್ರೋಗ ತಜ್ಞ ವೈದ್ಯರಿಂದ ಸೂಕ್ತ ಸಲಹೆ ಮತ್ತು ಮಾರ್ಗದರ್ಶನವೂ ದೊರೆಯಲಿದೆ.
ಹೃದಯ ಸಂಬಂಧಿ ಕಾಯಿಲೆಗಳನ್ನು ಆರಂಭಿಕ ಹಂತದಲ್ಲೇ ಪತ್ತೆಹಚ್ಚಿ ಸೂಕ್ತ ಚಿಕಿತ್ಸೆ ಪಡೆಯಲು ಶಿಬಿರವು ಸಾರ್ವಜನಿಕರಿಗೆ ಉಪಯುಕ್ತ ಅವಕಾಶವಾಗಲಿದೆ. ವಿಶೇಷವಾಗಿ ಎದೆನೋವು, ಉಸಿರಾಟದ ತೊಂದರೆ, ಹೃದಯ ಬಡಿತದಲ್ಲಿ ವ್ಯತ್ಯಾಸ, ಅಧಿಕ ರಕ್ತದೊತ್ತಡ, ಮಧುಮೇಹ ಅಥವಾ ಕುಟುಂಬದಲ್ಲಿ ಹೃದಯ ಕಾಯಿಲೆಯ ಹಿನ್ನೆಲೆ ಹೊಂದಿರುವವರು ಶಿಬಿರದ ಪ್ರಯೋಜನ ಪಡೆಯುವಂತೆ ಆಸ್ಪತ್ರೆಯ ಆಡಳಿತ ಮಂಡಳಿ ಮನವಿ ಮಾಡಿದೆ.
ಹೃದಯದ ಆರೋಗ್ಯದ ಬಗ್ಗೆ ಮುನ್ನೆಚ್ಚರಿಕೆ ವಹಿಸುವುದು ಹಾಗೂ ನಿಯಮಿತ ತಪಾಸಣೆ ಮಾಡಿಸಿಕೊಳ್ಳುವ ಮೂಲಕ ಆರೋಗ್ಯಕರ ಜೀವನಶೈಲಿಯನ್ನು ರೂಢಿಸಿಕೊಳ್ಳುವಂತೆ ಆಸ್ಪತ್ರೆ ತಿಳಿಸಿದೆ.
ಆರೋಗ್ಯ
HIV test-ಯುವಜನರಲ್ಲಿ ಹೆಚ್ಚುತ್ತಿದೆ HIV ಸೋಂಕು; ರಾಜ್ಯದ ಪದವಿ ಮತ್ತು ಎಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಎಚ್‌ಐವಿ ತಪಾಸಣೆ
ರಾಜ್ಯದ ಯುವ ಸಮೂಹದಲ್ಲಿ ಎಚ್‌ಐವಿ (HIV) ಸೋಂಕು ಆತಂಕಕಾರಿ ರೀತಿಯಲ್ಲಿ ಹರಡುತ್ತಿರುವುದನ್ನು ಮನಗಂಡಿರುವ ಕರ್ನಾಟಕ ಸರ್ಕಾರ, ಎಲ್ಲ ಪದವಿ ಮತ್ತು ಎಂಜಿನಿಯರಿಂಗ್ ಕಾಲೇಜುಗಳಲ್ಲಿ ವಿದ್ಯಾರ್ಥಿಗಳಿಗೆ ಎಚ್‌ಐವಿ ತಪಾಸಣೆ ನಡೆಸಲು ನಿರ್ಧರಿಸಿದೆ.
ಬೆಂಗಳೂರು: ರಾಜ್ಯದ ಯುವ ಸಮೂಹದಲ್ಲಿ ಎಚ್‌ಐವಿ (HIV) ಸೋಂಕು ಆತಂಕಕಾರಿ ರೀತಿಯಲ್ಲಿ ಹರಡುತ್ತಿರುವುದನ್ನು ಮನಗಂಡಿರುವ ಕರ್ನಾಟಕ ಸರ್ಕಾರ, ಎಲ್ಲ ಪದವಿ ಮತ್ತು ಎಂಜಿನಿಯರಿಂಗ್ ಕಾಲೇಜುಗಳಲ್ಲಿ ವಿದ್ಯಾರ್ಥಿಗಳಿಗೆ ಎಚ್‌ಐವಿ ತಪಾಸಣೆ ನಡೆಸಲು ನಿರ್ಧರಿಸಿದೆ.
ದೇಶದಲ್ಲೇ ಮೂರನೇ ಸ್ಥಾನ:
ರಾಷ್ಟ್ರೀಯ ಏಡ್ಸ್ ನಿಯಂತ್ರಣ ಸಂಸ್ಥೆಯ ವರದಿ ಪ್ರಕಾರ, ಎಚ್‌ಐವಿ ಸೋಂಕಿತರ ಸಂಖ್ಯೆಯಲ್ಲಿ ಕರ್ನಾಟಕವು ದೇಶದಲ್ಲೇ 3ನೇ ಸ್ಥಾನದಲ್ಲಿದೆ. ರಾಜ್ಯದಲ್ಲಿ ಒಟ್ಟು 2.60 ಲಕ್ಷ ಸೋಂಕಿತರಿದ್ದು, ಈ ಪೈಕಿ ಸುಮಾರು 54 ಸಾವಿರ ಮಂದಿಗೆ ತಮಗೆ ಸೋಂಕು ತಗುಲಿರುವ ಅರಿವೇ ಇಲ್ಲದಿರುವುದು ದೊಡ್ಡ ಆತಂಕಕ್ಕೆ ಕಾರಣವಾಗಿದೆ. ವಿಶೇಷವಾಗಿ 18 ರಿಂದ 35 ವರ್ಷದೊಳಗಿನವರಲ್ಲಿ ಸೋಂಕು ವೇಗವಾಗಿ ಹರಡುತ್ತಿದೆ ಎಂದು ಕರ್ನಾಟಕ ರಾಜ್ಯ ಏಡ್ಸ್ ತಡೆ ಸೊಸೈಟಿ (KSAPS) ಕಳವಳ ವ್ಯಕ್ತಪಡಿಸಿದೆ.
ಕಾಲೇಜುಗಳಲ್ಲಿ ಆರೋಗ್ಯ ಶಿಬಿರ ಮತ್ತು ಜಾಗೃತಿ:
ಸೋಂಕನ್ನು ಆರಂಭಿಕ ಹಂತದಲ್ಲೇ ಪತ್ತೆಹಚ್ಚಲು ಆರೋಗ್ಯ ಇಲಾಖೆ ಹಾಗೂ ಕಾಲೇಜು ಶಿಕ್ಷಣ ಇಲಾಖೆಯು ಜಂಟಿಯಾಗಿ ‘ಸಂಯೋಜಿತ ಆರೋಗ್ಯ ಶಿಬಿರ’ಗಳನ್ನು (IHC) ಆಯೋಜಿಸುತ್ತಿವೆ.
ವಿಟಿಯು (VTU) ವ್ಯಾಪ್ತಿಯಲ್ಲೂ ತಪಾಸಣೆ: ರಾಜ್ಯದ ಎಲ್ಲ ಎಂಜಿನಿಯರಿಂಗ್ ಕಾಲೇಜುಗಳಲ್ಲಿ ತಪಾಸಣೆ ಹಾಗೂ ಆಪ್ತ ಸಮಾಲೋಚನೆ ನಡೆಸುವಂತೆ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ ಸೂಚನೆ ನೀಡಿದೆ.
ವಿವಿಧ ಸ್ಪರ್ಧೆಗಳು: 2026ರ ಜುಲೈನಿಂದ 2027ರ ಫೆಬ್ರವರಿವರೆಗೆ ಕಾಲೇಜುಗಳಲ್ಲಿ ಬೀದಿ ನಾಟಕ, ರಸಪ್ರಶ್ನೆ ಮತ್ತು ತಜ್ಞರ ಉಪನ್ಯಾಸಗಳ ಮೂಲಕ ಜಾಗೃತಿ ಮೂಡಿಸಲು ಯೋಜನೆ ರೂಪಿಸಲಾಗಿದೆ. ಇದಕ್ಕೆ ಅಂಕಗಳ ಆಧಾರದ ಮೇಲೆ ಮಾರ್ಗಸೂಚಿಯನ್ನೂ ನೀಡಲಾಗಿದೆ.
ಮಾಹಿತಿಯ ಗೌಪ್ಯತೆಗೆ ಆದ್ಯತೆ (QR Code ಸೌಲಭ್ಯ):
ವಿದ್ಯಾರ್ಥಿಗಳು ತಮ್ಮ ಎಚ್‌ಐವಿ ಸ್ಥಿತಿಯನ್ನು ಅತ್ಯಂತ ಗೌಪ್ಯವಾಗಿ ತಿಳಿದುಕೊಳ್ಳಲು ಸರ್ಕಾರವು ವಿಶೇಷ ತಂತ್ರಜ್ಞಾನದ ಮೊರೆ ಹೋಗಿದೆ.
ಕ್ಯೂಆರ್ ಕೋಡ್ (QR Code): ಕಾಲೇಜುಗಳಲ್ಲಿ ಕಡ್ಡಾಯವಾಗಿ ಕ್ಯೂಆರ್ ಕೋಡ್ ಪ್ರದರ್ಶಿಸಲಾಗುತ್ತದೆ. ಇದನ್ನು ಸ್ಕ್ಯಾನ್ ಮಾಡುವ ಮೂಲಕ ವಿದ್ಯಾರ್ಥಿಗಳು ಸ್ವಯಂ-ಅಪಾಯ ಮೌಲ್ಯಮಾಪನ ಮಾಡಿಕೊಳ್ಳಬಹುದು.
ವೆಬ್‌ಸೈಟ್: ಗೌಪ್ಯ ಮಾರ್ಗದರ್ಶನಕ್ಕಾಗಿ www.breakfreeindia.org ಜಾಲತಾಣವನ್ನು ಬಳಸಿಕೊಳ್ಳಲು ಅವಕಾಶ ನೀಡಲಾಗಿದೆ.
ಸರ್ಕಾರದ ಮುಂದಿರುವ ಸವಾಲು:
ಕಾಲೇಜುಗಳಲ್ಲಿ ಮಾದಕ ದ್ರವ್ಯಗಳ ವಿರುದ್ಧ ಸಮರ ಸಾರಿರುವ ಸರ್ಕಾರಕ್ಕೆ, ಈಗ ಎಚ್‌ಐವಿ ಹರಡದಂತೆ ತಡೆಯುವುದು ದೊಡ್ಡ ಸವಾಲಾಗಿದೆ. ರಾಜ್ಯದ ಸರ್ಕಾರಿ ಮತ್ತು ಖಾಸಗಿ ಕಾಲೇಜುಗಳಲ್ಲಿರುವ ಲಕ್ಷಾಂತರ ವಿದ್ಯಾರ್ಥಿಗಳ ಆರೋಗ್ಯ ಸುರಕ್ಷತೆಯ ದೃಷ್ಟಿಯಿಂದ ಈ ಕ್ರಮ ಅನಿವಾರ್ಯ ಎಂದು ಕೆಎಸ್‌ಎಪಿಎಸ್ ತಿಳಿಸಿದೆ. ಜಿಲ್ಲಾ ಏಡ್ಸ್ ನಿಯಂತ್ರಣಾಧಿಕಾರಿಗಳು ಈ ತಪಾಸಣಾ ಪ್ರಕ್ರಿಯೆಯ ಉಸ್ತುವಾರಿ ವಹಿಸಲಿದ್ದಾರೆ.
ಆರೋಗ್ಯ
Puttur-ಪುತ್ತೂರು: ಜು.9ರಂದು ಡಾ. ನಝೀರ್ ಅಹಮ್ಮದ್ ರವರ ಕ್ಲಿನಿಕ್ ನಲ್ಲಿ ಮಾಸಿಕ ಉಚಿತ ಆರೋಗ್ಯ ತಪಾಸಣಾ ಶಿಬಿರ
ಸಾರ್ವಜನಿಕರ ಆರೋಗ್ಯದ ಕಾಳಜಿಯೊಂದಿಗೆ, ಪುತ್ತೂರಿನ ಖ್ಯಾತ ವೈದ್ಯಕೀಯ ತಜ್ಞ ಡಾ. ನಝೀರ್ ಅಹಮದ್, ರೋಟರಿ ಕ್ಲಬ್ ಪುತ್ತೂರು ಸಿಟಿ ಹಾಗೂ ರೋಟರ್ಯಾಕ್ಟ್ ಕ್ಲಬ್ ಪುತ್ತೂರು ಇವರ ಜಂಟಿ ಆಶ್ರಯದಲ್ಲಿ ಮಾಸಿಕ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಆಯೋಜಿಸಲಾಗಿದೆ.
ಪುತ್ತೂರು: ಸಾರ್ವಜನಿಕರ ಆರೋಗ್ಯದ ಕಾಳಜಿಯೊಂದಿಗೆ, ಪುತ್ತೂರಿನ ಖ್ಯಾತ ವೈದ್ಯಕೀಯ ತಜ್ಞ ಡಾ. ನಝೀರ್ ಅಹಮದ್, ರೋಟರಿ ಕ್ಲಬ್ ಪುತ್ತೂರು ಸಿಟಿ ಹಾಗೂ ರೋಟರ್ಯಾಕ್ಟ್ ಕ್ಲಬ್ ಪುತ್ತೂರು ಇವರ ಜಂಟಿ ಆಶ್ರಯದಲ್ಲಿ ಮಾಸಿಕ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಆಯೋಜಿಸಲಾಗಿದೆ.
ಶಿಬಿರವು ಜು.9, ಗುರುವಾರದಂದು ಬೆಳಗ್ಗೆ 9-30ರಿಂದ ಮಧ್ಯಾಹ್ನ 12-30ರವರೆಗೆ ಪುತ್ತೂರಿನ ಕಲ್ಲಾರೆಯಲ್ಲಿರುವ ಡಾ. ನಝೀರ್ ಅಹಮದ್ ರವರ ಕ್ಲಿನಿಕ್ ನಲ್ಲಿ ನಡೆಯಲಿರುವುದು.
ಶಿಬಿರದಲ್ಲಿ ಸಿಗುವ ಸೌಲಭ್ಯಗಳು:
ಈ ಶಿಬಿರದಲ್ಲಿ ಸಾರ್ವಜನಿಕರಿಗೆ ಈ ಕೆಳಗಿನ ಪರೀಕ್ಷೆಗಳನ್ನು ಸಂಪೂರ್ಣ ಉಚಿತವಾಗಿ ಮಾಡಿಕೊಡಲಾಗುವುದು.
ಉಚಿತ ಪರೀಕ್ಷೆಗಳು: ಥೈರಾಯಿಡ್ (TSH), ರಕ್ತದ ಸಕ್ಕರೆ ಅಂಶ (Sugar), HBA1C ಮತ್ತು ಮೂಳೆ ಸಾಂದ್ರತೆ ಪರೀಕ್ಷೆ (BMD Test).
-
Uncategorized24 hours ago
Naana Paatekar No More : ವ್ಯವಸ್ಥೆಯ ವಿರುದ್ಧದ ಧ್ವನಿಗೆ ರೂಪ ನೀಡಿದ, ತನ್ನ ಡೈಲಾಗ್ ನಿಂದಲೇ ಅಸಂಖ್ಯಾತ ಅಭಿಮಾನಿಗಳನ್ನು ಗಳಿಸಿದ್ದ ಅಭಿಜಾತ ಕಲಾವಿದ ನಾನಾಪಾಟೇಕರ್ ಇನ್ನಿಲ್ಲ
-
ಬಿಗ್ ನ್ಯೂಸ್18 hours agoSting Operation | ಸ್ಟಿಂಗ್ ಆಪರೇಷನ್ ಚರ್ಚೆ: ಪುತ್ತೂರಿಗೂ ವ್ಯಾಪಿಸಿದೆಯೇ ರಾಜಕೀಯದ ‘ಸ್ಟಿಂಗ್’ ಸದ್ದು..?
-
ಮಂಗಳೂರು21 hours agoMangalore-ರಿಕ್ಷಾದಲ್ಲಿ ಬಿಟ್ಟುಹೋದ 48 ಗ್ರಾಂ ಚಿನ್ನದ ನೆಕ್ಲೇಸ್ ವಾಪಸ್ ನೀಡಿ ಪ್ರಾಮಾಣಿಕತೆ ಮೆರೆದ ಚಾಲಕ
-
ನಿಧನ ವಾರ್ತೆ22 hours agoBeltangadi-ಬೆಳ್ತಂಗಡಿ: ಅಡಿಕೆ ಕೊಯ್ಯುವ ವೇಳೆ ವಿದ್ಯುತ್ ತಂತಿಗೆ ದೋಟಿ ತಾಗಿ ವ್ಯಕ್ತಿ ಸಾವು
-
Uncategorized22 hours agoAshok Rai-ಬದ್ಯಾರ್ನಲ್ಲಿ 50 ವರ್ಷದ ರಸ್ತೆ ವಿವಾದಕ್ಕೆ ತೆರೆ ಎಳೆದ ಶಾಸಕ ಅಶೋಕ್ ರೈ
-
ಅಪರಾಧ23 hours agoUppinangadi-ಉಪ್ಪಿನಂಗಡಿ: ತೋಟದ ಕೆಲಸಕ್ಕೆ ಬರುತ್ತೇನೆಂದು ಹಣ ಪಡೆದು ನಾಪತ್ತೆ
-
ನಿಧನ ವಾರ್ತೆ21 hours agoAccident-ಮೂಡುಬಿದಿರೆ: ಸ್ಕೂಟರ್ ನಿಯಂತ್ರಣ ತಪ್ಪಿ ಬಿದ್ದು ಕಾಲೇಜು ವಿದ್ಯಾರ್ಥಿ ಸಾವು
-
ಬಿಗ್ ನ್ಯೂಸ್22 hours agoHalf helmet-ಕರ್ನಾಟಕದಲ್ಲಿ ಹಾಫ್ ಹೆಲ್ಮೆಟ್ ಸಂಪೂರ್ಣ ನಿಷೇಧ


















