Connect with us

ಕಾರ್ಯಕ್ರಮಗಳು

Tiger Dance : ಅ 1 : ಮಾಜಿ ಶಾಸಕಿ ಶಕುಂತಳಾ ಶೆಟ್ಟಿ ಸಾರಥ್ಯದಲ್ಲಿ ಪುತ್ತೂರಿನಲ್ಲಿ ಪ್ರಪ್ರಥಮ ಬಾರಿಗೆ ಪಿಲಿ ರಂಗ್ ಸೀಸನ್-1 ಪಿಲಿನಲಿಕೆ ಸ್ಪರ್ಧೆ ಕಾರ್ಯಕ್ರಮ

Published

on

Ad Widget

Ad Widget

Ad Widget

Ad Widget

ಪುತ್ತೂರು: Puttur ಸೆ 28 :  ತುಳುನಾಡಿನ ಸಂಸ್ಕೃತಿಯ ಅವಿಭಾಜ್ಯ ಅಂಗವಾದ ಹಾಗೂ ಧಾರ್ಮಿಕ ಹಿನ್ನಲೆಯನ್ನು ಹೊಂದಿರುವ  ನವರಾತ್ರಿ ಹಬ್ಬದ ಸಂದರ್ಭ ವಿಶೇಷವಾಗಿ ಆಚರಿಸಲ್ಪಡುವ ಹುಲಿ ನೃತ್ಯ (ಪಿಲಿ ನಲಿಕೆ)ಕ್ಕೆ (Pili Nalike) ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ  ಪುತ್ತೂರಿನ ಇತಿಹಾಸದಲ್ಲೆ ಪ್ರಪ್ರಥಮ ಭಾರಿಗೆ ಜಿಲ್ಲಾಮಟ್ಟದ  ಆಯೋಜಿಸಿದ್ದೇವೆ. ಪುತ್ತೂರಿನ ಕಿಲ್ಲೆ ಮೈದಾನದಲ್ಲಿ ಸುಮಾರು 10 ಲ ರೂ ವೆಚ್ಚದಲ್ಲಿ  ಪಿಲಿ ರಂಗ್ ಸೀಸನ್-1 ಪಿಲಿನಲಿಕೆ (Tiger Dance ) ಸ್ಪರ್ಧೆ ಕಾರ್ಯಕ್ರಮ ನಡೆಯಲಿದೆ ಎಂದು ಮಾಜಿ ಶಾಸಕಿ ಶಕುಂತಳಾ ಶೆಟ್ಟಿ (shakuntala Shetty) ಯವರು ತಿಳಿಸಿದರು.

Ad Widget

Ad Widget

Ad Widget

Ad Widget

ಪುತ್ತೂರಿನ ಪತ್ರಿಕಾಭವನದಲ್ಲಿ ಮಂಗಳಾವರ ಪತ್ರಿಕಾಗೋಷ್ಟಿಯನ್ನು ಉದ್ದೇಶಿಸಿ ಮಾತನಾಡಿದ ಕಾರ್ಯಕ್ರಮದ ಸಾರಥ್ಯವನ್ನು ವಹಿಸಿರುವ ಶೆಟ್ಟಿಯವರು, ಹುಲಿಕುಣಿತವನ್ನು ಪ್ರೋತ್ಸಾಹಿಸುವ ಹಾಗೂ ಮು೦ದಿನ ಪೀಳಿಗೆಗೂ ಉಳಿಸಿ ಬೆಳೆಸುವ ನಿಟ್ಟಿನಿಂದ ಎಲ್ಲರ ಸಹಕಾರ ಅಗತ್ಯವಿದೆ ಎಂದರು.

Ad Widget

Ad Widget alt="Ad Widget"/>

Ad Widget

ದ.ಕ.ಜಿಲ್ಲೆಯ ಹೆಸರಾಂತ ಎಂಟು ಆಹ್ವಾನಿತ ತಂಡಗಳು ಈ ಸ್ಪರ್ಧೆಯಲ್ಲಿ ಭಾಗವಹಿಸಲಿದೆ. ಝೂಮ್ ಇನ್ ಟಿಎ ಸಹಯೋಗದೊಂದಿಗೆ ಕಾರ್ಯಕ್ರಮ ನಡೆಯಲಿದೆ.  ಸ್ಪರ್ಧೆಯು ಅ.1ರಂದು ಬೆಳಿಗ್ಗೆ 11 ಗಂಟೆಗೆ ಪ್ರಾರಂಭವಾಗಿ ರಾತ್ರಿವರೆಗೆ ನಡೆಯಲಿದೆ. ಪೌಲಕುಣಿತ ಸ್ಪರ್ಧೆ, ವಾದ್ಯ ಘೋಷದ ಕುಣಿತ ಸ್ಪರ್ಧೆ,ತಾಸೆ ಬಡಿತದೊಂದಿಗೆ ಕುಣಿತ ಸ್ಪರ್ಧೆ, ವಾದ್ಯ ತಾಸೆ ಬಡಿತದೊಂದಿಗೆ ಕುಣಿತ ಸ್ಪರ್ಧೆ, ಅಕ್ಕಿಮುಡಿಯನ್ನು ತಲೆಯ ಮೇಲಿಂದ ಹಾರಿಸುವಸ್ಪರ್ಧೆ, ನಡೆಯಲಿದೆ. ಸಾಹಸ, ಪ್ರವೇಶ, ಉಗಾಲಕ ಸಂಯೋಜನೆ, ಸಮನ್ವಯತೆಗಳನ್ನು ಪರಿಗಣಿಸಿ ನುರಿತ ತೀರ್ಪುಗಾರರು ಅಂಕ ನೀಡುವ ಮೂಲಕ ಸ್ಪರ್ಧೆ ನಡೆಸಲಾಗುವುದು.

Ad Widget

Ad Widget <> Ad Widget

ಕಾರ್ಯಕ್ರಮವು  ಸರಳ ರೀತಿಯಲ್ಲಿ ಉದ್ಘಾಟನೆಗೊಳ್ಳಲಿದೆ. ಕಾರ್ಯಕ್ರಮಕ್ಕೆ ಪ್ರಾಯೋಜಕತ್ವ ನೀಡಿದವರು ವೇದಿಕೆಯಲ್ಲಿ ಇರಲಿದ್ದಾರೆ ಎಂದು ಅವರು ತಿಳಿಸಿದ್ದಾರೆ.

Ad Widget

Ad Widget

Gold Rate Today : ಚಿನ್ನದ ದರ ಯಥಾಸ್ಥಿತಿ – ಖರೀದಿಗೂ ಮುನ್ನ ಇಂದಿನ ಚಿನ್ನ ಹಾಗೂ ಬೆಳ್ಳಿಯ ರೇಟ್ ತಿಳಿಯಿರಿ

 ಉಡುಪಿಯ ಮಹಿಳಾ ಪಿಲಿಗೊಬ್ಬು ತಂಡದಿಂದ  ಹುಲಿಕುಣಿತ ಪ್ರದರ್ಶನ ಕಾರ್ಯಕ್ರಮದ ವಿಶೇಷ ಅಕರ್ಷಣೆಯಾಗಿರಲಿದೆ .  ಪುತ್ತೂರಿನಲ್ಲಿ  ಹುಲಿಕುಣಿತಕ್ಕೆ ಹೆಸರುವಾಸಿಯಾಗಿರುವ ರಾಧಾಕೃಷ್ಣ ಶೆಟ್ಟಿ, ಬಣ್ಣ ಹಾಕುವುದರಲ್ಲಿ ಹೆಸರುವಾಸಿಯಾದ ರಮೇಶ್‌ರವರನ್ನು  ಕಾರ್ಯಕ್ರಮದಲ್ಲಿ ಸನ್ಮಾನಿಸಲಾಗುವುದು.  ಎಂದು ಶಕುಂತಳಾ ಶೆಟ್ಟಿ ತಿಳಿಸಿದರು.

ಸ್ಪರ್ಧೆಯು ಜಿಲ್ಲಾ ಮಟ್ಟದಲ್ಲಿ ನಡೆಯಲಿದ್ದು ಸ್ಪರ್ಧಾ ವಿಜೇತರಿಗೆ ಪ್ರಥಮ ಬಹುಮಾನ ರೂ.1ಲಕ್ಷ ಹಾಗೂ ಶಾಶ್ವತ ಫಲಕ, ದ್ವಿತೀಯ ಬಹುಮಾನ ರೂ. 50,000 ಹಾಗೂಶಾಶ್ವತ ಫಲಕ, ಭಾಗವಹಿಸಿದ ತಂಡಗಳಿಗೆ ರೂ.25000 ಮತ್ತು ಸ್ಮರಣಿಕೆ ಹಾಗೂಉತ್ತಮ ಛಾಯಾಗ್ರಾಹಕ ಪ್ರಶಸ್ತಿಯಾಗಿರೂ. 5000 ಮತ್ತು ಶಾಶ್ವತ ಫಲಕ ನೀಡಲಾಗುವುದು. ಎಂದು ಶಕುಂತಳಾ ಶೆಟ್ಟಿ ತಿಳಿಸಿದ್ದಾರೆ.

PFI Ban : ದೇಶದಲ್ಲಿ PFIನಿಂದ ಒಟ್ಟು10 ಹತ್ಯೆ- ಕರಾವಳಿಯ ಇಬ್ಬರ ಸಹಿತ ರಾಜ್ಯದ ನಾಲ್ವರ ಹತ್ಯೆ : ನಿಷೇಧಕ್ಕೆ ಒಳಗಾದ PFIಯ 8 ಅಂಗ ಸಂಘಟನೆಗಳ ವಿವರ ಹಾಗೂ ಕಾರಣ ಇಲ್ಲಿದೆ

ಪತ್ರಿಕಾಗೋಷ್ಠಿಯಲ್ಲಿ ಗೌರವಾಧ್ಯಕ್ಷ ಎನ್. ಚಂದ್ರಹಾಸ ಶೆಟ್ಟಿ, ಅಧ್ಯಕ್ಷ ಪಂಜಿಗುಡ್ಡೆ ಈಶ್ವರ ಭಟ್, ಕಾರ್ಯಾಧ್ಯಕ್ಷಉದ್ಯಮಿ ಎನ್. ಶಿವರಾಮ ಅಳ್ವ ಉಪಸ್ಥಿತರಿದ್ದರು.

Ad Widget
Click to comment

Leave a Reply

ಕಾರ್ಯಕ್ರಮಗಳು

Puttur-ಪುತ್ತೂರಿನಲ್ಲಿ ‘ಸಾಮರಸ್ಯದ ತುಡರ್’ ಕಾರ್ಯಕ್ರಮ: ಮಹಾಲಿಂಗೇಶ್ವರ ದೇವಸ್ಥಾನದಿಂದ ಮನೆಮನೆಗೆ ದೀಪದ ಬೆಳಕು

Published

on

Ad Widget

Ad Widget

Ad Widget

Ad Widget

ಸಾಮರಸ್ಯ ವೇದಿಕೆ ಪುತ್ತೂರು ಜಿಲ್ಲೆ ಹಾಗೂ ಸಾಮರಸ್ಯ ವೇದಿಕೆ ಪುತ್ತೂರು ನಗರ ಘಟಕದ ವತಿಯಿಂದ ‘ಸಾಮರಸ್ಯದ ತುಡರ್’ ಕಾರ್ಯಕ್ರಮ ನಡೆಯಿತು. ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಗರ್ಭಗುಡಿಯಲ್ಲಿ ಉರಿಯುತ್ತಿದ್ದ ದೀಪದಿಂದ ಉರ್ಲಾಂಡಿ, ಮಣ್ಣಾಪು, ಶೇವಿರೆ ಹಾಗೂ ಬ್ರಹ್ಮನಗರ ಪ್ರದೇಶದ ಉಪೇಕ್ಷಿತ ಬಂಧುಗಳು ತಂದ ದೀಪಗಳನ್ನು ದೇವಸ್ಥಾನದ ಅರ್ಚಕರು ಬೆಳಗಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

Ad Widget

Ad Widget

Ad Widget

Ad Widget

ಪುತ್ತೂರು: ಸಾಮರಸ್ಯ ವೇದಿಕೆ ಪುತ್ತೂರು ಜಿಲ್ಲೆ ಹಾಗೂ ಸಾಮರಸ್ಯ ವೇದಿಕೆ ಪುತ್ತೂರು ನಗರ ಘಟಕದ ವತಿಯಿಂದ ‘ಸಾಮರಸ್ಯದ ತುಡರ್’ ಕಾರ್ಯಕ್ರಮ ನಡೆಯಿತು.

Ad Widget

Ad Widget alt="Ad Widget"/>

Ad Widget

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಗರ್ಭಗುಡಿಯಲ್ಲಿ ಉರಿಯುತ್ತಿದ್ದ ದೀಪದಿಂದ ಉರ್ಲಾಂಡಿ, ಮಣ್ಣಾಪು, ಶೇವಿರೆ ಹಾಗೂ ಬ್ರಹ್ಮನಗರ ಪ್ರದೇಶದ ಉಪೇಕ್ಷಿತ ಬಂಧುಗಳು ತಂದ ದೀಪಗಳನ್ನು ದೇವಸ್ಥಾನದ ಅರ್ಚಕರು ಬೆಳಗಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

Ad Widget

Ad Widget <> Ad Widget

ಬಳಿಕ ದೇವಸ್ಥಾನದಲ್ಲಿ ಬೆಳಗಿಸಿದ ದೀಪವನ್ನು ಮೆರವಣಿಗೆಯ ಮೂಲಕ ಕೊಂಡೊಯ್ದು ಉರ್ಲಾಂಡಿ, ಮಣ್ಣಾಪು, ಶೇವಿರೆ ಹಾಗೂ ಬ್ರಹ್ಮನಗರ ಪ್ರದೇಶಗಳ ಸುತ್ತಮುತ್ತಲಿನ ಮನೆಗಳಲ್ಲಿ ದೀಪ ಬೆಳಗಿಸಲಾಯಿತು.

ಕಾರ್ಯಕ್ರಮದಲ್ಲಿ ಮಂಗಳೂರು ವಿಭಾಗದ ಸಾಮರಸ್ಯ ಸಂಯೋಜಕ ರವೀಂದ್ರ, ಜಿಲ್ಲಾ ಸಾಮರಸ್ಯ ಸಂಯೋಜಕ ಶ್ರೀಕುಮಾರ್ ಸುಬ್ರಹ್ಮಣ್ಯ, ದಾಮೋದರ ಪಾಟಲಿ, ಅಪ್ಪಯ್ಯ ಮಣಿಯಾಣಿ, ರಮೇಶ್ ಪ್ರಭು, ಸಂತೋಷ್ ಬೊನಂತಾಯ, ರಮೇಶ್ ನೆಗಳಗುಳಿ, ದಯಾನಂದ ಬೋಲ್ವಾರ್, ಸಚಿನ್ ಶೆಣೈ, ರಮೇಶ್ ಉರ್ಲಾಂಡಿ, ಅಶೋಕ್ ಬ್ರಹ್ಮನಗರ ಸೇರಿದಂತೆ ಪ್ರಮುಖರು ಹಾಗೂ ಮಾತೆಯರು ಉಪಸ್ಥಿತರಿದ್ದರು.

Continue Reading

ಕಾರ್ಯಕ್ರಮಗಳು

Puttur-ಡಿ.8ರಂದು ಪುತ್ತೂರು ದೀಪೋತ್ಸವ: ದೇವಸ್ಥಾನದ ಮುಂಭಾಗದಲ್ಲಿ ಚಪ್ಪರ ಮುಹೂರ್ತ

Published

on

Ad Widget

Ad Widget

Ad Widget

Ad Widget

ಪುತ್ತೂರು ದೀಪೋತ್ಸವ ಸಮಿತಿಯ ವತಿಯಿಂದ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸಹಯೋಗದೊಂದಿಗೆ ಡಿ.8ರಂದು ದೇವಸ್ಥಾನದ ಮುಂಭಾಗದಲ್ಲಿ ನಡೆಯಲಿರುವ ಪುತ್ತೂರು ದೀಪೋತ್ಸವದ ಪೂರ್ವಭಾವಿಯಾಗಿ ಚಪ್ಪರ ಮುಹೂರ್ತ ಸಮಾರಂಭ ಬುಧವಾರ ನಡೆಯಿತು.

Ad Widget

Ad Widget

Ad Widget

Ad Widget

ಪುತ್ತೂರು, ನ.18: ಪುತ್ತೂರು ದೀಪೋತ್ಸವ ಸಮಿತಿಯ ವತಿಯಿಂದ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸಹಯೋಗದೊಂದಿಗೆ ಡಿ.8ರಂದು ದೇವಸ್ಥಾನದ ಮುಂಭಾಗದಲ್ಲಿ ನಡೆಯಲಿರುವ ಪುತ್ತೂರು ದೀಪೋತ್ಸವದ ಪೂರ್ವಭಾವಿಯಾಗಿ ಚಪ್ಪರ ಮುಹೂರ್ತ ಸಮಾರಂಭ ಬುಧವಾರ ನಡೆಯಿತು.

Ad Widget

Ad Widget alt="Ad Widget"/>

Ad Widget

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಪುತ್ತೂರಿನ ಉದ್ಯಮಿ ವಾಮನ ಪೈ ಮಾತನಾಡಿ, ಶ್ರೀ ಮಹಾಲಿಂಗೇಶ್ವರ ದೇವರ ಅನುಗ್ರಹದಿಂದ ದೀಪೋತ್ಸವ ಕಾರ್ಯಕ್ರಮ ಯಶಸ್ವಿಯಾಗಿ ನೆರವೇರಲಿ ಎಂದು ಹಾರೈಸಿದರು.

Ad Widget

Ad Widget <> Ad Widget

ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಸದಸ್ಯ ಸುಭಾಶ್ ರೈ ಬೆಳ್ಳಿಪ್ಪಾಡಿ ಮಾತನಾಡಿ, ದೇವಸ್ಥಾನದ ಮುಂಭಾಗದಲ್ಲಿ ನಡೆಯುವ ಎಲ್ಲಾ ಧಾರ್ಮಿಕ ಕಾರ್ಯಕ್ರಮಗಳಿಗೂ ವ್ಯವಸ್ಥಾಪನಾ ಸಮಿತಿಯ ಸಂಪೂರ್ಣ ಸಹಕಾರ ಇರಲಿದೆ. ಮುಂದಿನ ದಿನಗಳಲ್ಲಿ ಎಲ್ಲರ ಸಹಕಾರದೊಂದಿಗೆ ದೇವಸ್ಥಾನದ ಜೀರ್ಣೋದ್ಧಾರ ಕಾರ್ಯಗಳನ್ನೂ ಕೈಗೆತ್ತಿಕೊಳ್ಳಲಾಗುವುದು ಎಂದರು.

ದೀಪೋತ್ಸವ ಸಮಿತಿ ಅಧ್ಯಕ್ಷ ಎನ್. ರವೀಂದ್ರ ಶೆಟ್ಟಿ ನುಳಿಯಾಲು ಪ್ರಾಸ್ತಾವಿಕವಾಗಿ ಮಾತನಾಡಿ, ಈ ಬಾರಿ ದೀಪೋತ್ಸವವನ್ನು ಉತ್ಸವದ ರೀತಿಯಲ್ಲಿ ಆಯೋಜಿಸಲಾಗುತ್ತಿದೆ. ಐದು ಸಾವಿರಕ್ಕೂ ಅಧಿಕ ಮಂದಿ ದೀಪ ಬೆಳಗಿಸುವ ನಿರೀಕ್ಷೆಯಿದ್ದು, ಕಾರ್ಯಕ್ರಮದ ಯಶಸ್ಸಿಗಾಗಿ ಉತ್ತಮ ಸಮಿತಿ ರಚಿಸಿ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತಿದೆ ಎಂದು ತಿಳಿಸಿದರು.

Ad Widget

Ad Widget

ವೇದಿಕೆಯಲ್ಲಿ ಉದ್ಯಮಿ ಜಯಕುಮಾರ್ ನಾಯರ್, ಸ್ವರ್ಣೋದ್ಯಮಿ ಈಶ್ವರ ಮುರಳಿ ಹಾಗೂ ದೀಪೋತ್ಸವ ಸಮಿತಿ ಉಪಾಧ್ಯಕ್ಷ ಕರುಣಾಕರ ರೈ ದೇರ್ಲ ಉಪಸ್ಥಿತರಿದ್ದರು.

ಸ್ವಾಗತ ಸಮಿತಿ ಅಧ್ಯಕ್ಷ ಪದ್ಮನಾಭ ಶೆಟ್ಟಿ ವಂದಿಸಿದರು. ಸಂಚಾಲಕ ಸಂತೋಷ್ ಕುಮಾರ್ ರೈ ಗಾಡಿಗುಡ್ಡೆ ಕಾರ್ಯಕ್ರಮ ನಿರ್ವಹಿಸಿದರು.

Ad Widget
Continue Reading

ಕಾರ್ಯಕ್ರಮಗಳು

Puttur-ಪುತ್ತೂರು: ವಿದ್ಯಾಭಾರತಿ ಅಖಿಲ ಭಾರತ ಶಿಕ್ಷಾ ಸಂಸ್ಥಾನ ಹಾಗೂ ವಿವೇಕಾನಂದ ಸೆಂಟ್ರಲ್ ಸ್ಕೂಲ್ ಸಹಯೋಗದಲ್ಲಿ ರಾಷ್ಟ್ರೀಯ ಈಜು ಚಾಂಪಿಯನ್‌ಶಿಪ್-2026

Published

on

Ad Widget

Ad Widget

Ad Widget

Ad Widget

ವಿದ್ಯಾಭಾರತಿ ಅಖಿಲ ಭಾರತ ಶಿಕ್ಷಾ ಸಂಸ್ಥಾನ ಹಾಗೂ ಪುತ್ತೂರಿನ ವಿವೇಕಾನಂದ ಸೆಂಟ್ರಲ್ ಸ್ಕೂಲ್ ಸಹಯೋಗದಲ್ಲಿ 37ನೇ ರಾಷ್ಟ್ರೀಯ ಸ್ವಿಮ್ಮಿಂಗ್ ಚಾಂಪಿಯನ್‌ಶಿಪ್-2026 ನವೆಂಬರ್ 20ರಿಂದ 22ರವರೆಗೆ ಪುತ್ತೂರಿನಲ್ಲಿ ನಡೆಯಲಿದೆ ಎಂದು ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಜತೆ ಕಾರ್ಯದರ್ಶಿ ಭರತ್ ಪೈ ತಿಳಿಸಿದರು.

Ad Widget

Ad Widget

Ad Widget

Ad Widget

ಪುತ್ತೂರು: ವಿದ್ಯಾಭಾರತಿ ಅಖಿಲ ಭಾರತ ಶಿಕ್ಷಾ ಸಂಸ್ಥಾನ ಹಾಗೂ ಪುತ್ತೂರಿನ ವಿವೇಕಾನಂದ ಸೆಂಟ್ರಲ್ ಸ್ಕೂಲ್ ಸಹಯೋಗದಲ್ಲಿ 37ನೇ ರಾಷ್ಟ್ರೀಯ ಸ್ವಿಮ್ಮಿಂಗ್ ಚಾಂಪಿಯನ್‌ಶಿಪ್-2026 ನವೆಂಬರ್ 20ರಿಂದ 22ರವರೆಗೆ ಪುತ್ತೂರಿನಲ್ಲಿ ನಡೆಯಲಿದೆ ಎಂದು ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಜತೆ ಕಾರ್ಯದರ್ಶಿ ಭರತ್ ಪೈ ತಿಳಿಸಿದರು.

Ad Widget

Ad Widget alt="Ad Widget"/>

Ad Widget

ಪುತ್ತೂರಿನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ರಾಷ್ಟ್ರಮಟ್ಟದ ಈಜು ಸ್ಪರ್ಧೆಯಲ್ಲಿ ವಿದ್ಯಾಭಾರತಿಯ ಅಧೀನದಲ್ಲಿರುವ ದೇಶದ ವಿವಿಧ ರಾಜ್ಯಗಳ ಆರು ಕ್ಷೇತ್ರಗಳ ಒಟ್ಟು 162 ವಿದ್ಯಾರ್ಥಿಗಳು ಪಾಲ್ಗೊಳ್ಳಲಿದ್ದಾರೆ. ಇವರೊಂದಿಗೆ 30 ಎಸ್ಕಾರ್ಟ್‌ಗಳು ಹಾಗೂ ತರಬೇತುದಾರರು ಭಾಗವಹಿಸಲಿದ್ದು, ಒಟ್ಟು 104 ಸ್ಪರ್ಧಾ ವಿಭಾಗಗಳನ್ನು ಆಯೋಜಿಸಲಾಗಿದೆ ಎಂದು ಮಾಹಿತಿ ನೀಡಿದರು.

Ad Widget

Ad Widget <> Ad Widget

ನವೆಂಬರ್ 20ರಂದು ಸಂಜೆ 6 ಗಂಟೆಗೆ ವಿವೇಕಾನಂದ ಸೆಂಟ್ರಲ್ ಸ್ಕೂಲ್‌ನಲ್ಲಿ ಉದ್ಘಾಟನಾ ಸಮಾರಂಭ ನಡೆಯಲಿದೆ. ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಕೃಷ್ಣಕುಮಾರ್ ಶೆಟ್ಟಿ ಕಡಬ ಅವರ ಅಧ್ಯಕ್ಷತೆಯಲ್ಲಿ ನಡೆಯುವ ಕಾರ್ಯಕ್ರಮವನ್ನು ಅಖಿಲ ಭಾರತ ಅಂತರ್ ವಿಶ್ವವಿದ್ಯಾಲಯ ಮಟ್ಟದ ಈಜುಪಟು ರಾಧಾಕೃಷ್ಣ ನಾಯಕ್ ಉದ್ಘಾಟಿಸಲಿದ್ದಾರೆ.

ಮುಖ್ಯ ಅತಿಥಿಗಳಾಗಿ ವಿದ್ಯಾಭಾರತಿ ಕರ್ನಾಟಕದ ರಾಜ್ಯಾಧ್ಯಕ್ಷ ಪರಮೇಶ್ವರ ಹೆಗ್ಡೆ ಭಾಗವಹಿಸಲಿದ್ದು, ಮನಮೋಹನ್ ರೈ ಚೆಲ್ಯಡ್ಕ, ವಸಂತ ಮಾಧವ, ಯು.ಪಿ. ಹರಿದಾಸ್ ಹಾಗೂ ಬಿ.ಡಿ. ಮಣಿ ಉಪಸ್ಥಿತರಿರಲಿದ್ದಾರೆ.

Ad Widget

Ad Widget

ನವೆಂಬರ್ 21ರಂದು ಪುತ್ತೂರಿನ ಬಾಲವನ ಈಜುಕೊಳದಲ್ಲಿ ವಿವಿಧ ಸ್ಪರ್ಧೆಗಳು ನಡೆಯಲಿವೆ.

ನವೆಂಬರ್ 22ರಂದು ಬೆಳಗ್ಗೆ 11.30ಕ್ಕೆ ವಿವೇಕಾನಂದ ಸೆಂಟ್ರಲ್ ಸ್ಕೂಲ್‌ನಲ್ಲಿ ಸಮಾರೋಪ ಸಮಾರಂಭ ಆಯೋಜಿಸಲಾಗಿದೆ. ವಿದ್ಯಾಭಾರತಿ ದಕ್ಷಿಣ ಮಧ್ಯ ಕ್ಷೇತ್ರದ ಜಂಟಿ ಕಾರ್ಯದರ್ಶಿ ವಸಂತ ಮಾಧವ ಅವರ ಅಧ್ಯಕ್ಷತೆಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಬೆಂಗಳೂರಿನ ಬ್ರಾಂಡ್ ಮತ್ತು ಡಿಜಿಟಲ್ ಮಾರ್ಕೆಟಿಂಗ್ ಮ್ಯಾನೇಜರ್ ಶ್ರೀಕಾಂತ್ ಪ್ರಭು ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ. ವಸಂತಿ ಕೆ. ಹಾಗೂ ಪ್ರತಿಮಾ ಹೆಗ್ಡೆ ಉಪಸ್ಥಿತರಿರಲಿದ್ದಾರೆ ಎಂದು ಭರತ್ ಪೈ ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ವಿವೇಕಾನಂದ ಸೆಂಟ್ರಲ್ ಸ್ಕೂಲ್ ಆಡಳಿತ ಮಂಡಳಿ ಅಧ್ಯಕ್ಷ ವಿಷ್ಣು ಪ್ರಸಾದ್ ಸಿ., ಪ್ರಾಂಶುಪಾಲೆ ಸಿಂಧು ವಿ.ಜಿ., ರವಿನಾರಾಯಣ, ಶ್ಯಾಮಲಾ ಹಾಗೂ ವೆಂಕಟರಮಣ ಮಂಕುಡೆ ಉಪಸ್ಥಿತರಿದ್ದರು

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!