ಉದ್ಯೋಗ
SBI Recruitment 2022 : ಭಾರತೀಯ ಸ್ಟೇಟ್ ಬ್ಯಾಂಕ್ ನಿಂದ 1673 ವಿವಿಧ ಹುದ್ದೆಗಳ ನೇಮಕಾತಿ : ದಿನಾಂಕ, ಅರ್ಹತೆ, ಅರ್ಜಿ ಸಲ್ಲಿಸುವ ಪ್ರಕ್ರಿಯೆ ಬಗ್ಗೆ ಮಾಹಿತಿ
ಭಾರತೀಯ ಸ್ಟೇಟ್ ಬ್ಯಾಂಕ್(ಎಸ್‌ಬಿಐ) ತಮ್ಮಲ್ಲಿ ಖಾಲಿ ಇರುವ ವಿವಿಧ ಹಂತದ 1673 ಹುದ್ದೆಗಳ ನೇಮಕಾತಿಗೆ ( SBI Recruitment 2022) ಅರ್ಜಿಯನ್ನು ಆಹ್ವಾನಿಸಿವೆ. ದೇಶದಾದ್ಯಂತವಿರುವ ತನ್ನ ಬ್ಯಾಂಕ್‌ನ ವಿವಿಧ ಶಾಖೆಗಳಲ್ಲಿ ಖಾಲಿ ಇರುವ 73 ಬ್ಯಾಕ್‌ಲಾಗ್ ಹುದ್ದೆಗಳೂ ಸೇರಿದಂತೆ 1673 ಪ್ರೊಬೆಷನರಿ ಆಫೀಸರ್ (Probationary officer) ಹುದ್ದೆಗಳಿಗೆ ಈ ಬಾರಿ ಅರ್ಜಿ ಆಹ್ವಾನಿಸಿದೆ
ಸಾಮಾನ್ಯ ವರ್ಗದವರಿಗೆ 648,ಆರ್ಥಿಕವಾಗಿ ದುರ್ಬಲ ವರ್ಗದವರಿಗೆ 160, ಪರಿಶಿಷ್ಟ ಜಾತಿಯವರಿಗೆ 270, ಪರಿಶಿಷ್ಟ ವರ್ಗಕ್ಕೆ 131 ಮತ್ತು ಹಿಂದುಳಿದ ವರ್ಗದವರಿಗೆ 464 ಹುದ್ದೆಗಳನ್ನು ಮೀಸಲಿಡಲಾಗಿದೆ. ಆಸಕ್ತರು ಬ್ಯಾಂಕ್‌ನ ಅಧಿಕೃತ ಜಾಲತಾಣದ ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹು ದಾಗಿದೆ. ಅರ್ಜಿ ಸಲ್ಲಿಸ ಬಯಸುವ ಆಸಕ್ತರು ಸಂಸ್ಥೆಯ ಅಧಿಕೃತ ವೆಬ್ ಸೈಟ್ : https://bank.sbi/careers ಅಥಾವ https:// www.sbi.co.in /careers ಗೆ ಹೋಗಿ ನೋಟಿಫಿಕೇಶನ್ ಓದಿಕೊಳ್ಳಬೇಕು ಮತ್ತು ಅಲ್ಲಿಯೇ ಅರ್ಜಿ ಸಲ್ಲಿಸಬೇಕು. ಅಕ್ಟೋಬರ್ 12 ಅರ್ಜಿ ಸಲ್ಲಿಕೆಗೆ ಕೊನೆಯ ದಿನ.
ವಿದ್ಯಾರ್ಹತೆ
ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಯಾವುದೇ ವಿಷಯದಲ್ಲಿ ಪದವಿ ಅಥವಾ ತತ್ಸಮಾನ ವಿದ್ಯಾರ್ಹತೆ ಪಡೆದಿರಬೇಕು.
ಪದವಿ ಅಂತಿಮ ವರ್ಷ/ಸೆಮಿಸ್ಟರ್ ನಲ್ಲಿರುವವರು ಅರ್ಜಿ ಸಲ್ಲಿಸಬಹುದು. ಆದರೇ, ಅವರು ಸಂದರ್ಶನದ ಸಂದರ್ಭ ಡಿಸೆಂಬರ್ 31, 2022 ಅಥವಾ ಅದಕ್ಕಿಂತ ಮೊದಲು ಪದವಿ ಪರೀಕ್ಷೆ ಉತ್ತೀರ್ಣರಾಗಿರುವುದಕ್ಕೆ ದಾಖಲೆ ನೀಡಬೇಕಾಗುತ್ತದೆ
ಇಂಟಿಗ್ರೇಟೆಡ್ ಡ್ಯುಯಲ್ ಡಿಗ್ರಿ (ಐಡಿಡಿ) ಪ್ರಮಾಣಪತ್ರ ಹೊಂದಿರುವ ಅಭ್ಯರ್ಥಿಗಳೂ ಡಿಸೆಂಬರ್ 31, 2022 ಅಥವಾ ಅದಕ್ಕಿಂತ ಮುಂಚೆಯೇ ಈ ಕೋರ್ಸ್‌ನಲ್ಲಿ ಉತ್ತೀರ್ಣರಾ ಗಿರುವುದನ್ನು ದೃಢೀಕರಿಸಬೇಕು. ವೈದ್ಯಕೀಯ, ಎಂಜಿನಿಯರಿಂಗ್ ಚಾರ್ಟರ್ಡ್ ಅಕೌಂಟೆಂಟ್ ಅಥವಾ ಕಾಸ್ಟ್ ಅಕೌಂಟೆಂಟ್ ಪದವಿ ಪಡೆದವರೂ ಅರ್ಜಿ ಸಲ್ಲಿಸಬಹುದು.
Gold Rate Today : ಚಿನ್ನದ ಬೆಲೆಯಲ್ಲಿ ಏರಿಕೆ – ಇಂದಿನ ಚಿನ್ನ ಹಾಗೂ ಬೆಳ್ಳಿ ದರವನ್ನು ಇಲ್ಲಿ ತಿಳಿಯಿರಿ
ವಯೋಮಿತಿ
ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ಕನಿಷ್ಠ 21 ವರ್ಷ, ಗರಿಷ್ಠ 30 ವರ್ಷಗಳು (01.04.2022ಕ್ಕೆ ಅನ್ವಯವಾಗುವಂತೆ).
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ 5 ವರ್ಷಗಳು, ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷಗಳು ಹಾಗೂ ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷಗಳಷ್ಟು ವಯೋಮಿತಿಯನ್ನು ಹೆಚ್ಚಿಸಲಾಗಿದೆ
ಅರ್ಜಿ ಶುಲ್ಕ: ಸಾಮಾನ್ಯ ಹಾಗೂ ಒಬಿಸಿ ಅಭ್ಯರ್ಥಿಗಳಿಗೆ ₹750 ಅರ್ಜಿ ಶುಲ್ಕ ನಿಗದಿಪಡಿಸಲಾಗಿದೆ. ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗ ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ ಸಂಪೂರ್ಣ ಶುಲ್ಕ ವಿನಾಯಿತಿ ನೀಡಲಾಗಿದೆ.
ಪರೀಕ್ಷಾ ಹಂತಗಳು
ಪೂರ್ವಭಾವಿ ಹಾಗೂ ಮುಖ್ಯ ಪರೀಕ್ಷೆ ಎರಡು ಲಿಖಿತ ಪರೀಕ್ಷೆಗಳು ಆನ್‌ಲೈನ್‌ನಲ್ಲೇ ನಡೆಯಲಿವೆ.
ಮೊದಲ ಹಂತ: ಪೂರ್ವಭಾವಿ ಪರೀಕ್ಷೆ – ಡಿಸೆಂಬರ್ 17ರಿಂದ 20, 2022ರವರೆಗೆ
ಎರಡನೇ ಹಂತ: ಮುಖ್ಯ ಪರೀಕ್ಷೆ – ಜನವರಿ- ಫೆಬ್ರುವರಿ– 2023.
ಮೂರನೇ ಹಂತ: ಸೈಕೋಮೆಟ್ರಿಕ್ ಪರೀಕ್ಷೆ (ಇದು ಈ ಬಾರಿಯಲ್ಲಾಗಿರುವ ಬದಲಾವಣೆ)
ಮೂರನೇ ಹಂತದಲ್ಲಿ ಶಾರ್ಟ್‌ಲಿಸ್ಟ್ ಆದ ಅಭ್ಯರ್ಥಿಗಳನ್ನು ಮುಂದೆ ಸಂದರ್ಶನಕ್ಕೆ ಆಯ್ಕೆ ಮಾಡಲು ಸೈಕೊಮೆಟ್ರಿಕ್ ಪರೀಕ್ಷೆ ನಡೆಸಲಾಗುತ್ತದೆ. ಇದೇ ಮೊದಲ ಬಾರಿಗೆ ಇಂಥದ್ದೊಂದು ಹೊಸ ಬದಲಾವಣೆ ತರಲಾಗಿದೆ. ಅಭ್ಯರ್ಥಿಗಳ ವ್ಯಕ್ತಿತ್ವ ಪ್ರೊಫೈಲಿಂಗ್‌ಗಾಗಿ ಬ್ಯಾಂಕ್ ಸೈಕೊಮೆಟ್ರಿಕ್ ಪರೀಕ್ಷೆಯನ್ನು ನಡೆಸುತ್ತಿದೆ. ಅಭ್ಯರ್ಥಿಗಳ ದೃಷ್ಟಿಕೋನವನ್ನು ಪರಿಶೀಲಿಸುವುದು ಇದರ ಉದ್ದೇಶ. ಈ ಸೈಕೊಮೆಟ್ರಿಕ್ ಪರೀಕ್ಷೆ, ಸಂದರ್ಶನ ಮತ್ತು ಗುಂಪು ಚರ್ಚೆ ಫೆಬ್ರುವರಿ / ಮಾರ್ಚ್ 2023ರಂದು ನಡೆಯಲಿದೆ.
ನೇಮಕಾತಿ ಪ್ರಕ್ರಿಯೆ
ಮೊದಲ ಹಂತದಲ್ಲಿ ಪೂರ್ವಭಾವಿ ಪರೀಕ್ಷೆ (ಪ್ರಿಲಿಮ್ಸ್) ನಡೆಯಲಿದೆ. ಬೆಳಗಾವಿ, ಬೆಂಗಳೂರು, ಬೀದರ್, ದಾವಣಗೆರೆ, ಧಾರವಾಡ ಕಲಬುರಗಿ, ಹಾಸನ, ಹುಬ್ಬಳ್ಳಿ, ಮಂಡ್ಯ, ಮಂಗಳೂರು, ಮೈಸೂರು, ಶಿವಮೊಗ್ಗ ಮತ್ತು ಉಡುಪಿಯಲ್ಲಿ ಪೂರ್ವಭಾವಿ ಪರೀಕ್ಷಾ ಕೇಂದ್ರಗಳಿರಲಿವೆ.
ಪ್ರತಿ ಪರೀಕ್ಷೆಯಲ್ಲೂ ಕನಿಷ್ಠ ಅಂಕ ಗಳಿಸಬೇಕೆಂಬ ನಿಯಮವಿಲ್ಲ. ಆದರೆ ಒಟ್ಟಾರೆ ಹೆಚ್ಚು ಅಂಕಗಳಿಸುವುದು ಮುಖ್ಯ. (ಆಯಾ ವರ್ಗಗಳಿಗೆ ಇರುವ ಹುದ್ದೆಗಳ ಸಂಖ್ಯೆಗಿಂತ 10 ಪಟ್ಟು (1:10 ಅನುಪಾತ) ಹೆಚ್ಚು ಅಭ್ಯರ್ಥಿಗಳನ್ನು ಮುಖ್ಯ ಪರೀಕ್ಷೆಗೆ ಆಯ್ಕೆ ಮಾಡಲಾಗುತ್ತದೆ)
ಈ ಪರೀಕ್ಷೆಯಲ್ಲಿ ಉತ್ತೀರ್ಣರಾದವರು ಮುಖ್ಯ ಪರೀಕ್ಷೆಗೆ ಅರ್ಹತೆ ಪಡೆಯುತ್ತಾರೆ. ಮುಖ್ಯ ಪರೀಕ್ಷೆಯು ಬೆಂಗಳೂರಿನಲ್ಲಿ ಮಾತ್ರ ನಡೆಯಲಿದೆ. ಎರಡು ಹಂತಗಳಲ್ಲಿ ಈ ಪರೀಕ್ಷೆ ನಡೆಯಲಿದೆ. ಮೂರು ಗಂಟೆಗಳ ಅವಧಿಯ ಈ ಪರೀಕ್ಷೆಯಲ್ಲಿ 200 ಅಂಕಗಳಿಗೆ 155 ಪ್ರಶ್ನೆಗಳನ್ನು ಕೇಳಲಾಗುತ್ತದೆ.
ಏಳು ದಿನದೊಳಗೆ ಕೃಷಿ ಜಮೀನಿನ ಭೂ ಪರಿವರ್ತನೆ – ಸುಗ್ರೀವಾಜ್ಞೆ ತರಲು ನಿರ್ಧಾರ | ಮಸೂದೆಯ ಮುಖ್ಯಾಂಶಗಳು ಇಲ್ಲಿದೆ
ಉದ್ಯೋಗ
Puttur-Salesನಿಂದ Technicianವರೆಗೆ; ಪುತ್ತೂರಿನ ಶ್ರೀ ತಿರುಮಲಾ TVSನಲ್ಲಿ ಭರ್ಜರಿ Job Opening
ಉದ್ಯೋಗ ಹುಡುಕುತ್ತಿರುವ ಯುವಕ-ಯುವತಿಯರಿಗೆ ಇಲ್ಲಿದೆ ಉತ್ತಮ ಅವಕಾಶ. ದ್ವಿಚಕ್ರ ವಾಹನ ಕ್ಷೇತ್ರದಲ್ಲಿ ವೃತ್ತಿಜೀವನ ರೂಪಿಸಿಕೊಳ್ಳಲು ಬಯಸುವವರಿಗೆ ಪುತ್ತೂರಿನ ಶ್ರೀ ತಿರುಮಲಾ TVS ಸಂಸ್ಥೆಯಲ್ಲಿ ಸೇಲ್ಸ್, ಸರ್ವೀಸ್, ಅಕೌಂಟ್ಸ್, ಫೈನಾನ್ಸ್, ಇನ್ಶೂರೆನ್ಸ್ ಸೇರಿದಂತೆ ವಿವಿಧ ವಿಭಾಗಗಳಲ್ಲಿ ಹಲವು ಹುದ್ದೆಗಳಿಗೆ ನೇಮಕಾತಿ ನಡೆಯುತ್ತಿದೆ.
ಪುತ್ತೂರು: ಉದ್ಯೋಗ ಹುಡುಕುತ್ತಿರುವ ಯುವಕ-ಯುವತಿಯರಿಗೆ ಇಲ್ಲಿದೆ ಉತ್ತಮ ಅವಕಾಶ. ದ್ವಿಚಕ್ರ ವಾಹನ ಕ್ಷೇತ್ರದಲ್ಲಿ ವೃತ್ತಿಜೀವನ ರೂಪಿಸಿಕೊಳ್ಳಲು ಬಯಸುವವರಿಗೆ ಪುತ್ತೂರಿನ ಶ್ರೀ ತಿರುಮಲಾ TVS ಸಂಸ್ಥೆಯಲ್ಲಿ ಸೇಲ್ಸ್, ಸರ್ವೀಸ್, ಅಕೌಂಟ್ಸ್, ಫೈನಾನ್ಸ್, ಇನ್ಶೂರೆನ್ಸ್ ಸೇರಿದಂತೆ ವಿವಿಧ ವಿಭಾಗಗಳಲ್ಲಿ ಹಲವು ಹುದ್ದೆಗಳಿಗೆ ನೇಮಕಾತಿ ನಡೆಯುತ್ತಿದೆ.
TVS ಸಂಸ್ಥೆಯ ಪ್ರೀಮಿಯಂ, EV ಹಾಗೂ IC ವಿಭಾಗಗಳಲ್ಲಿ ಉದ್ಯೋಗಾವಕಾಶ ಕಲ್ಪಿಸಲಾಗಿದ್ದು, ‘ಪುತ್ತೂರಿನ ಅತಿದೊಡ್ಡ 2-ವೀಲರ್ ಜಾಬ್ ಓಪನಿಂಗ್’ ಎಂಬ ಘೋಷಣೆಯೊಂದಿಗೆ ನೇಮಕಾತಿ ಪ್ರಕ್ರಿಯೆ ನಡೆಯುತ್ತಿದೆ.
ಸೇಲ್ಸ್ ವಿಭಾಗದಲ್ಲಿ ಹಲವು ಅವಕಾಶ
ಪುತ್ತೂರು ಸೇಲ್ಸ್ ವಿಭಾಗದಲ್ಲಿ ಸೇಲ್ಸ್ ಎಕ್ಸಿಕ್ಯೂಟಿವ್, ಸೇಲ್ಸ್ ಮ್ಯಾನೇಜರ್, ಎಕ್ಸ್‌ಚೇಂಜ್ ಕೋಆರ್ಡಿನೇಟರ್, ಸೇಲ್ಸ್ ಟೆಲಿಕಾಲಿಂಗ್ (CRE), ಅಕೌಂಟ್ಸ್ ಮ್ಯಾನೇಜರ್, ಫೈನಾನ್ಸ್ ಮ್ಯಾನೇಜರ್, ರಿಸೆಪ್ಷನಿಸ್ಟ್, RTO ಎಕ್ಸಿಕ್ಯೂಟಿವ್, ಇನ್‌ವಾಯ್ಸ್ ಎಕ್ಸಿಕ್ಯೂಟಿವ್, ಅಕೌಂಟ್ಸ್ ಎಕ್ಸಿಕ್ಯೂಟಿವ್, ಫೈನಾನ್ಸ್ ಕೋಆರ್ಡಿನೇಟರ್ ಹಾಗೂ ಇನ್ಶೂರೆನ್ಸ್ ಎಕ್ಸಿಕ್ಯೂಟಿವ್ ಸೇರಿದಂತೆ ಹಲವು ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ.

ಸರ್ವೀಸ್ ವಿಭಾಗದಲ್ಲೂ ಭರ್ಜರಿ ನೇಮಕಾತಿ
ಸರ್ವೀಸ್ ವಿಭಾಗದಲ್ಲಿ ಅಡ್ವೈಸರ್, ಫ್ಲೋರ್ ಸೂಪರ್‌ವೈಸರ್, ಟೆಕ್ನಿಷಿಯನ್, ಪಾರ್ಟ್ಸ್ ಪಿಕರ್, ಬಿಲ್ಲಿಂಗ್/ರಿಸೆಪ್ಷನಿಸ್ಟ್ ಎಕ್ಸಿಕ್ಯೂಟಿವ್, ಪಾರ್ಟ್ಸ್ ಮ್ಯಾನೇಜರ್, ವಾಷಿಂಗ್ ಸಿಬ್ಬಂದಿ, PDI ಟೆಕ್ನಿಷಿಯನ್, ಸರ್ವೀಸ್ ಮ್ಯಾನೇಜರ್, ನೆಟ್‌ವರ್ಕ್ ಕೋಆರ್ಡಿನೇಟರ್, ವಾರಂಟಿ ಇನ್‌ಚಾರ್ಜ್, ಅಕ್ಸಿಡೆಂಟ್ ಸೂಪರ್‌ವೈಸರ್, CRE ಟೆಲಿಕಾಲಿಂಗ್, CRM, PDI ಸೂಪರ್‌ವೈಸರ್ ಹಾಗೂ ಪೇಂಟರ್ ಮತ್ತು ಡೆಂಟಿಂಗ್ ಹುದ್ದೆಗಳಿಗೆ ಅವಕಾಶವಿದೆ.

ಬೆಳ್ಳಾರೆಯಲ್ಲೂ ಉದ್ಯೋಗದ ಬಾಗಿಲು ತೆರೆದಿದೆ
ಬೆಳ್ಳಾರೆ ಭಾಗದಲ್ಲಿಯೂ ಉದ್ಯೋಗಾವಕಾಶ ಕಲ್ಪಿಸಲಾಗಿದೆ. ಸರ್ವೀಸ್ ವಿಭಾಗದಲ್ಲಿ ಅಡ್ವೈಸರ್, ಪಾರ್ಟ್ಸ್ ಪಿಕರ್, ಬಿಲ್ಲಿಂಗ್/ರಿಸೆಪ್ಷನಿಸ್ಟ್ ಎಕ್ಸಿಕ್ಯೂಟಿವ್, ಫ್ಲೋರ್ ಸೂಪರ್‌ವೈಸರ್, ಟೆಕ್ನಿಷಿಯನ್ ಹಾಗೂ ವಾಷಿಂಗ್ ಸಿಬ್ಬಂದಿ ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ.

ಸೇಲ್ಸ್ ವಿಭಾಗದಲ್ಲಿ 6 ಸೇಲ್ಸ್ ಎಕ್ಸಿಕ್ಯೂಟಿವ್ ಹಾಗೂ 2 ರಿಸೆಪ್ಷನಿಸ್ಟ್ ಹುದ್ದೆಗಳಿಗೂ ಅವಕಾಶವಿದೆ.
PF, ESI ಜೊತೆಗೆ ₹25 ಸಾವಿರದವರೆಗೆ ಗಳಿಕೆ!
ಆಯ್ಕೆಯಾಗುವ ಅಭ್ಯರ್ಥಿಗಳಿಗೆ PF, ESI, ಸ್ಪಾಟ್ ಇನ್ಸೆಂಟಿವ್, ಮಾಸಿಕ ಹಾಗೂ ತ್ರೈಮಾಸಿಕ ಇನ್ಸೆಂಟಿವ್ ಸೌಲಭ್ಯಗಳು ದೊರೆಯಲಿವೆ. 25 ಕಿ.ಮೀ.ಗಿಂತ ಹೆಚ್ಚಿನ ಪ್ರಯಾಣಕ್ಕೆ ಪೆಟ್ರೋಲ್ ವೋಚರ್ ನೀಡಲಾಗುತ್ತಿದ್ದು, ಅರ್ಹ ಅಭ್ಯರ್ಥಿಗಳಿಗೆ ತಿಂಗಳಿಗೆ ₹25,000 ವರೆಗೆ ಗಳಿಸುವ ಅವಕಾಶ ಇದೆ ಎಂದು ಸಂಸ್ಥೆ ತಿಳಿಸಿದೆ.
ದ್ವಿಚಕ್ರ ವಾಹನ ಕ್ಷೇತ್ರದಲ್ಲಿ ಆಸಕ್ತಿ ಹೊಂದಿರುವವರು ಮಾತ್ರವಲ್ಲದೆ, ಸೇಲ್ಸ್, ಅಕೌಂಟ್ಸ್, ಫೈನಾನ್ಸ್, ಟೆಲಿಕಾಲಿಂಗ್, ಗ್ರಾಹಕ ಸೇವೆ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಉದ್ಯೋಗ ಹುಡುಕುತ್ತಿರುವವರೂ ಈ ಅವಕಾಶವನ್ನು ಬಳಸಿಕೊಳ್ಳಬಹುದಾಗಿದೆ.
ಉದ್ಯೋಗಾವಕಾಶ ಸೀಮಿತವಾಗಿರುವುದರಿಂದ ಆಸಕ್ತ ಅಭ್ಯರ್ಥಿಗಳು ಕೂಡಲೇ ಸಂಪರ್ಕಿಸಬಹುದು.
📞 ಸಂಪರ್ಕ: +91 82965 79206
📍 ವಿಳಾಸ: ಶ್ರೀ ತಿರುಮಲಾ TVS, ಬೈಪಾಸ್ ಜಂಕ್ಷನ್, ಮಂಜಲ್ಪಡ್ಡು, ಮೇನ್ ರೋಡ್, ಬೋಳ್ವಾರ್ ವೆಸ್ಟ್, ಪುತ್ತೂರು–574201.
ಉದ್ಯೋಗ
Constable recruitment: ಕಾನ್‌ಸ್ಟೆಬಲ್ ನೇಮಕಾತಿ: ಸೆ.28ರಿಂದ ದೈಹಿಕ ಪರೀಕ್ಷೆ; 3,991 ಹುದ್ದೆಗಳಿಗೆ 19,396 ಅಭ್ಯರ್ಥಿಗಳು
ರಾಜ್ಯ ಪೊಲೀಸ್ ಇಲಾಖೆಯ ಸಿವಿಲ್ ಪೊಲೀಸ್ ಕಾನ್‌ಸ್ಟೆಬಲ್ (ಆರ್‌ಪಿಸಿ ಮತ್ತು ಕೆಕೆ) ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದ ದೇಹದಾರ್ಢ್ಯ ಪರೀಕ್ಷೆ (ಪಿಎಸ್‌ಟಿ) ಹಾಗೂ ಸಹಿಷ್ಣುತೆ ಪರೀಕ್ಷೆ (ಇಟಿ) ಸೆ.28ರಿಂದ ಆರಂಭವಾಗಲಿದೆ. ಪೊಲೀಸ್ ನೇಮಕಾತಿ ವಿಭಾಗವು ವಲಯವಾರು ವೇಳಾಪಟ್ಟಿಯನ್ನು ಪ್ರಕಟಿಸಿದೆ.
ಬೆಂಗಳೂರು, ಸೆ.25: ರಾಜ್ಯ ಪೊಲೀಸ್ ಇಲಾಖೆಯ ಸಿವಿಲ್ ಪೊಲೀಸ್ ಕಾನ್‌ಸ್ಟೆಬಲ್ (ಆರ್‌ಪಿಸಿ ಮತ್ತು ಕೆಕೆ) ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದ ದೇಹದಾರ್ಢ್ಯ ಪರೀಕ್ಷೆ (ಪಿಎಸ್‌ಟಿ) ಹಾಗೂ ಸಹಿಷ್ಣುತೆ ಪರೀಕ್ಷೆ (ಇಟಿ) ಸೆ.28ರಿಂದ ಆರಂಭವಾಗಲಿದೆ. ಪೊಲೀಸ್ ನೇಮಕಾತಿ ವಿಭಾಗವು ವಲಯವಾರು ವೇಳಾಪಟ್ಟಿಯನ್ನು ಪ್ರಕಟಿಸಿದೆ.
ಈ ನೇಮಕಾತಿ ಪ್ರಕ್ರಿಯೆಯಡಿ ಒಟ್ಟು 3,991 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದ್ದು, ರಾಜ್ಯಾದ್ಯಂತ 19,396 ಅಭ್ಯರ್ಥಿಗಳು ದೈಹಿಕ ಪರೀಕ್ಷೆಗೆ ಅರ್ಹತೆ ಪಡೆದಿದ್ದಾರೆ. ಉಳಿಕೆ ಮೂಲ ವೃಂದದ (ಆರ್‌ಪಿಸಿ) 3,395 ಹುದ್ದೆಗಳಿಗೆ 16,454 ಅಭ್ಯರ್ಥಿಗಳು ಹಾಗೂ ಕಲ್ಯಾಣ ಕರ್ನಾಟಕ (ಕೆಕೆ) ವೃಂದದ 596 ಹುದ್ದೆಗಳಿಗೆ 2,942 ಅಭ್ಯರ್ಥಿಗಳು ಪರೀಕ್ಷೆಗೆ ಆಯ್ಕೆಯಾಗಿದ್ದಾರೆ.
ಮಂಗಳೂರಿನಲ್ಲಿ 395 ಹುದ್ದೆಗಳಿಗೆ 1,803 ಅಭ್ಯರ್ಥಿಗಳು
ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ (ಕಾರವಾರ), ಚಿಕ್ಕಮಗಳೂರು ಹಾಗೂ ಮಂಗಳೂರು ನಗರ ಘಟಕಗಳ ವ್ಯಾಪ್ತಿಯ 395 ಹುದ್ದೆಗಳಿಗೆ 1,803 ಅಭ್ಯರ್ಥಿಗಳು ದೈಹಿಕ ಪರೀಕ್ಷೆಯಲ್ಲಿ ಭಾಗವಹಿಸಲಿದ್ದಾರೆ. ಈ ಅಭ್ಯರ್ಥಿಗಳಿಗೆ ಸೆ.28ರಿಂದ ಅ.3ರವರೆಗೆ ಮಂಗಳೂರಿನ ಲಾಲ್‌ಬಾಗ್‌ನ ಮಂಗಳ ಕ್ರೀಡಾಂಗಣದಲ್ಲಿ ದೈಹಿಕ ಪರೀಕ್ಷೆ ನಡೆಯಲಿದೆ.
ಕರೆಪತ್ರ ಡೌನ್‌ಲೋಡ್‌ಗೆ ಸೂಚನೆ
ದೈಹಿಕ ಪರೀಕ್ಷೆಗೆ ಅರ್ಹತೆ ಪಡೆದ ಅಭ್ಯರ್ಥಿಗಳು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ (ಕೆಇಎ) ಅಧಿಕೃತ ವೆಬ್‌ಸೈಟ್‌ನಿಂದ ತಮ್ಮ ಕರೆಪತ್ರವನ್ನು ಡೌನ್‌ಲೋಡ್ ಮಾಡಿಕೊಳ್ಳಬಹುದು. ಅಭ್ಯರ್ಥಿಗಳು ಕರೆಪತ್ರದಲ್ಲಿ ನಮೂದಿಸಿರುವ ದಿನಾಂಕದಂದು ನಿಗದಿತ ಪರೀಕ್ಷಾ ಕೇಂದ್ರಕ್ಕೆ ಕಡ್ಡಾಯವಾಗಿ ಹಾಜರಾಗುವಂತೆ ಪೊಲೀಸ್ ನೇಮಕಾತಿ ವಿಭಾಗ ಸೂಚಿಸಿದೆ.
ಕಾನ್‌ಸ್ಟೆಬಲ್ ಲಿಖಿತ ಪರೀಕ್ಷೆಯ ತಾತ್ಕಾಲಿಕ ಫಲಿತಾಂಶ ಪ್ರಕಟ
ಇದೇ ವೇಳೆ, ಕೆಎಸ್‌ಆರ್‌ಪಿ, ಕೆಎಸ್‌ಐಎಸ್‌ಎಫ್ ಹಾಗೂ ಐಆರ್‌ಬಿ ಪೊಲೀಸ್ ಕಾನ್‌ಸ್ಟೆಬಲ್ ನೇಮಕಾತಿಗಾಗಿ ಸೆ.20ರಂದು ನಡೆದ ಲಿಖಿತ ಪರೀಕ್ಷೆಯ ತಾತ್ಕಾಲಿಕ ಫಲಿತಾಂಶವನ್ನು ಕೇವಲ ಐದು ದಿನಗಳಲ್ಲಿ ಕೆಇಎ ಪ್ರಕಟಿಸಿದೆ.
ಪರೀಕ್ಷೆಯ ಫಲಿತಾಂಶಕ್ಕೆ ಆಕ್ಷೇಪಣೆಗಳಿದ್ದಲ್ಲಿ ಅಭ್ಯರ್ಥಿಗಳು ಸೆ.27ರೊಳಗೆ ನಿಗದಿತ ಲಿಂಕ್ ಮೂಲಕ ಸಲ್ಲಿಸಬಹುದು ಎಂದು ಕೆಇಎ ತಿಳಿಸಿದೆ.
ಉಳಿಕೆ ಮೂಲ ವೃಂದದ 1,13,390 ಹಾಗೂ ಕಲ್ಯಾಣ ಕರ್ನಾಟಕ ವೃಂದದ 33,061 ಅಭ್ಯರ್ಥಿಗಳು ಲಿಖಿತ ಪರೀಕ್ಷೆ ಬರೆದಿದ್ದರು. ಪರೀಕ್ಷೆ ನಡೆದ ದಿನವೇ ಎಲ್ಲ ಅಭ್ಯರ್ಥಿಗಳ ಒಎಂಆರ್ ಉತ್ತರ ಪತ್ರಿಕೆಗಳನ್ನು ಸ್ಕ್ಯಾನ್ ಮಾಡಿ ವೆಬ್‌ಸೈಟ್‌ನಲ್ಲಿ ಅಪ್‌ಲೋಡ್ ಮಾಡಲಾಗಿತ್ತು ಎಂದು ಕೆಇಎ ಕಾರ್ಯನಿರ್ವಾಹಕ ನಿರ್ದೇಶಕ ಎಚ್. ಪ್ರಸನ್ನ ತಿಳಿಸಿದ್ದಾರೆ.
ಅಂತರ ರಾಜ್ಯ
Oracle-‘ಇಂದು ನಿಮ್ಮ ಕೊನೆಯ ಕೆಲಸದ ದಿನ’; Oracle ಉದ್ಯೋಗಿಗಳಿಗೆ ಮುಂಜಾನೆ ʻಇ-ಮೇಲ್ ʼಶಾಕ್
ಜಾಗತಿಕ ಸಾಫ್ಟ್‌ವೇರ್ ದೈತ್ಯ ಒರಾಕಲ್ (Oracle) ಸಂಸ್ಥೆಯ ಉದ್ಯೋಗಿಗಳಿಗೆ ಮಂಗಳವಾರ ಮುಂಜಾನೆ ಕಳುಹಿಸಲಾದ ಇ-ಮೇಲ್‌ವೊಂದು ಆತಂಕ ಮೂಡಿಸಿದೆ. “ನಿಮ್ಮ ಹುದ್ದೆಗೆ ಸಂಬಂಧಿಸಿದಂತೆ ಕೆಲವು ಕಠಿಣ ಸುದ್ದಿಯನ್ನು ಹಂಚಿಕೊಳ್ಳುತ್ತಿದ್ದೇವೆ. ಇಂದು ನಿಮ್ಮ ಕೊನೆಯ ಕೆಲಸದ ದಿನ” ಎಂದು ಇ-ಮೇಲ್‌ನಲ್ಲಿ ತಿಳಿಸಲಾಗಿದೆ ಎಂದು ಬಿಸಿನೆಸ್ ಇನ್‌ಸೈಡರ್ ವರದಿ ಮಾಡಿದೆ.
ನವದೆಹಲಿ, ಸೆ.16: ಜಾಗತಿಕ ಸಾಫ್ಟ್‌ವೇರ್ ದೈತ್ಯ ಒರಾಕಲ್ (Oracle) ಸಂಸ್ಥೆಯ ಉದ್ಯೋಗಿಗಳಿಗೆ ಮಂಗಳವಾರ ಮುಂಜಾನೆ ಕಳುಹಿಸಲಾದ ಇ-ಮೇಲ್‌ವೊಂದು ಆತಂಕ ಮೂಡಿಸಿದೆ. “ನಿಮ್ಮ ಹುದ್ದೆಗೆ ಸಂಬಂಧಿಸಿದಂತೆ ಕೆಲವು ಕಠಿಣ ಸುದ್ದಿಯನ್ನು ಹಂಚಿಕೊಳ್ಳುತ್ತಿದ್ದೇವೆ. ಇಂದು ನಿಮ್ಮ ಕೊನೆಯ ಕೆಲಸದ ದಿನ” ಎಂದು ಇ-ಮೇಲ್‌ನಲ್ಲಿ ತಿಳಿಸಲಾಗಿದೆ ಎಂದು ಬಿಸಿನೆಸ್ ಇನ್‌ಸೈಡರ್ ವರದಿ ಮಾಡಿದೆ.
ಮಂಗಳವಾರ ಬೆಳಗ್ಗೆ ಸುಮಾರು 6 ಗಂಟೆಗೆ ಉದ್ಯೋಗಿಗಳಿಗೆ ಈ ಇ-ಮೇಲ್ ಕಳುಹಿಸಲಾಗಿದೆ ಎನ್ನಲಾಗಿದ್ದು, ಸಂಸ್ಥೆಯ ವ್ಯಾಪಕ ಸಾಂಸ್ಥಿಕ ಪುನರ್‌ರಚನೆಯ ಭಾಗವಾಗಿ ಕೆಲವು ಹುದ್ದೆಗಳನ್ನು ರದ್ದುಗೊಳಿಸಲಾಗಿದೆ ಎಂದು ತಿಳಿಸಲಾಗಿದೆ. ಆದರೆ, ನಿರ್ದಿಷ್ಟ ಉದ್ಯೋಗಿಯನ್ನು ವೈಯಕ್ತಿಕವಾಗಿ ಕೆಲಸದಿಂದ ತೆಗೆದುಹಾಕಲು ಕಾರಣವೇನು ಎಂಬುದನ್ನು ಇ-ಮೇಲ್‌ನಲ್ಲಿ ವಿವರಿಸಲಾಗಿಲ್ಲ.
ಉದ್ಯೋಗಿಗಳ ಕಂಪ್ಯೂಟರ್, ಇ-ಮೇಲ್, ವಾಯ್ಸ್‌ಮೇಲ್ ಹಾಗೂ ಫೈಲ್‌ಗಳಿಗೆ ಇರುವ ಲಾಗಿನ್ ಪ್ರವೇಶವನ್ನು ಶೀಘ್ರದಲ್ಲೇ ಸ್ಥಗಿತಗೊಳಿಸಲಾಗುವುದು ಎಂದು ಕಂಪನಿ ತಿಳಿಸಿದೆ. ಅಲ್ಲದೆ, ಪರಿಹಾರಧನ ಹಾಗೂ ಇತರ ಅಗತ್ಯ ದಾಖಲೆಗಳನ್ನು ಪಡೆಯಲು ವೈಯಕ್ತಿಕ ಇ-ಮೇಲ್ ವಿಳಾಸವನ್ನು ನೀಡುವಂತೆ ಉದ್ಯೋಗಿಗಳಿಗೆ ಸೂಚಿಸಲಾಗಿದೆ.
AI, ಕ್ಲೌಡ್ ಮೂಲಸೌಕರ್ಯ ವೆಚ್ಚದ ನಡುವೆ ಲೇಆಫ್
ಕೃತಕ ಬುದ್ಧಿಮತ್ತೆ (AI) ಹಾಗೂ ಕ್ಲೌಡ್ ಮೂಲಸೌಕರ್ಯ ಕ್ಷೇತ್ರದಲ್ಲಿ ಒರಾಕಲ್ ಭಾರಿ ಪ್ರಮಾಣದಲ್ಲಿ ಹೂಡಿಕೆ ಮಾಡುತ್ತಿರುವ ಸಂದರ್ಭದಲ್ಲೇ ಈ ಹೊಸ ಸುತ್ತಿನ ಉದ್ಯೋಗ ಕಡಿತ ನಡೆದಿದೆ ಎಂದು ವರದಿ ತಿಳಿಸಿದೆ. ಆದರೆ, ಪ್ರಸ್ತುತ ಸುತ್ತಿನಲ್ಲಿ ಎಷ್ಟು ಉದ್ಯೋಗಿಗಳು ಕೆಲಸ ಕಳೆದುಕೊಂಡಿದ್ದಾರೆ ಎಂಬುದನ್ನು ಒರಾಕಲ್ ಅಧಿಕೃತವಾಗಿ ಬಹಿರಂಗಪಡಿಸಿಲ್ಲ.
ಈಗಾಗಲೇ 21 ಸಾವಿರ ಉದ್ಯೋಗಿಗಳ ಕಡಿತ
2026ರ ಆರ್ಥಿಕ ವರ್ಷದಲ್ಲಿ ಒರಾಕಲ್ ತನ್ನ ಜಾಗತಿಕ ಸಿಬ್ಬಂದಿ ಬಳಗದ ಸುಮಾರು ಶೇ.13ರಷ್ಟು, ಅಂದರೆ ಸುಮಾರು 21,000 ಉದ್ಯೋಗಿಗಳನ್ನು ವಜಾಗೊಳಿಸಿತ್ತು ಎಂದು ವರದಿಯಾಗಿದೆ.
ಈ ಪುನರ್‌ರಚನಾ ಪ್ರಕ್ರಿಯೆಗಾಗಿ ಕಂಪನಿಯ ವೆಚ್ಚವು 2.8 ಬಿಲಿಯನ್ ಡಾಲರ್‌ವರೆಗೆ ಹೆಚ್ಚಾಗಿದೆ ಎನ್ನಲಾಗಿದೆ. ಉದ್ಯೋಗ ಕಡಿತಗಳ ಬಳಿಕ ಒರಾಕಲ್‌ನ ಜಾಗತಿಕ ಸಿಬ್ಬಂದಿ ಸಂಖ್ಯೆ ಸುಮಾರು 1.41 ಲಕ್ಷಕ್ಕೆ ಇಳಿದಿದೆ ಎಂದು ವರದಿ ತಿಳಿಸಿದೆ.
-
Uncategorized22 hours ago
Naana Paatekar No More : ವ್ಯವಸ್ಥೆಯ ವಿರುದ್ಧದ ಧ್ವನಿಗೆ ರೂಪ ನೀಡಿದ, ತನ್ನ ಡೈಲಾಗ್ ನಿಂದಲೇ ಅಸಂಖ್ಯಾತ ಅಭಿಮಾನಿಗಳನ್ನು ಗಳಿಸಿದ್ದ ಅಭಿಜಾತ ಕಲಾವಿದ ನಾನಾಪಾಟೇಕರ್ ಇನ್ನಿಲ್ಲ
-
ಬಿಗ್ ನ್ಯೂಸ್16 hours agoSting Operation | ಸ್ಟಿಂಗ್ ಆಪರೇಷನ್ ಚರ್ಚೆ: ಪುತ್ತೂರಿಗೂ ವ್ಯಾಪಿಸಿದೆಯೇ ರಾಜಕೀಯದ ‘ಸ್ಟಿಂಗ್’ ಸದ್ದು..?
-
ಮಂಗಳೂರು20 hours agoMangalore-ರಿಕ್ಷಾದಲ್ಲಿ ಬಿಟ್ಟುಹೋದ 48 ಗ್ರಾಂ ಚಿನ್ನದ ನೆಕ್ಲೇಸ್ ವಾಪಸ್ ನೀಡಿ ಪ್ರಾಮಾಣಿಕತೆ ಮೆರೆದ ಚಾಲಕ
-
ನಿಧನ ವಾರ್ತೆ20 hours agoBeltangadi-ಬೆಳ್ತಂಗಡಿ: ಅಡಿಕೆ ಕೊಯ್ಯುವ ವೇಳೆ ವಿದ್ಯುತ್ ತಂತಿಗೆ ದೋಟಿ ತಾಗಿ ವ್ಯಕ್ತಿ ಸಾವು
-
Uncategorized21 hours agoAshok Rai-ಬದ್ಯಾರ್ನಲ್ಲಿ 50 ವರ್ಷದ ರಸ್ತೆ ವಿವಾದಕ್ಕೆ ತೆರೆ ಎಳೆದ ಶಾಸಕ ಅಶೋಕ್ ರೈ
-
ಅಪರಾಧ21 hours agoUppinangadi-ಉಪ್ಪಿನಂಗಡಿ: ತೋಟದ ಕೆಲಸಕ್ಕೆ ಬರುತ್ತೇನೆಂದು ಹಣ ಪಡೆದು ನಾಪತ್ತೆ
-
ನಿಧನ ವಾರ್ತೆ20 hours agoAccident-ಮೂಡುಬಿದಿರೆ: ಸ್ಕೂಟರ್ ನಿಯಂತ್ರಣ ತಪ್ಪಿ ಬಿದ್ದು ಕಾಲೇಜು ವಿದ್ಯಾರ್ಥಿ ಸಾವು
-
ಬಿಗ್ ನ್ಯೂಸ್21 hours agoHalf helmet-ಕರ್ನಾಟಕದಲ್ಲಿ ಹಾಫ್ ಹೆಲ್ಮೆಟ್ ಸಂಪೂರ್ಣ ನಿಷೇಧ


















