ಸಾಮಾಜಿಕ ಮಾಧ್ಯಮ
Moral Policing : ಹಿಂದೂ ಯುವಕನ ಜತೆ ಬೈಕ್ ನಲ್ಲಿ ತೆರಳಿದ ಮುಸ್ಲಿಂ ಯುವತಿ – ತಂಡದಿಂದ ನೈತಿಕ ಪೊಲೀಸ್ ಗಿರಿ – ವಿಡಿಯೋ ವೈರಲ್
ದೇವನಹಳ್ಳಿ: ಯುವಕನ ಜತೆ ಅನ್ಯಕೋಮಿನ ಯುವತಿ ಹೋಗುತ್ತಿದ್ದಾಗ ನೈತಿಕ ಪೊಲೀಸ್ಗಿರಿ (Moral Policing) ನಡೆಸಿರುವ ಘಟನೆ ಬೆಂಗಳೂರು ಗ್ರಾ. ಜಿಲ್ಲೆಯ ದೊಡ್ಡಬಳ್ಳಾಪುರ (Doddaballapur)ನಗರದ ತೇರಿನ ಬೀದಿಯಲ್ಲಿ ನಡೆದ ಬಗ್ಗೆ ತಡವಾಗಿ ವರದಿಯಾಗಿದೆ. ಘಟನೆ ನಾಲ್ಕು ದಿನಗಳ ಹಿಂದೆ ಅಂದರೇ ಸೆ 25 ರಂದು ನಡೆದಿದೆ ಎನ್ನಲಾಗುತ್ತಿದೆ. ಈ ಬಗೆಗಿನ ವಿಡಿಯೋ ಕೂಡ ಸಾಮಾಜಿಕ ಜಾಲತಾಣದಲ್ಲಿ (Social Media) ವೈರಲ್( Video Viral) ಆಗಿದೆ. ಹಿಂದೂ ಯುವಕ (Hindu Youth) ಮುಸ್ಲಿಂ ಯುವತಿ (Muslim Girl) ಜೋಡಿ ಬೈಕಿನಲ್ಲಿ ತೆರಳುತ್ತಿದ್ದಾಗ ಘಟನೆ ನಡೆದಿದೆ.

ನಗರದ ತೇರಿನ ಬೀದಿಯಲ್ಲಿ ಕಳೆದ ಭಾನುವಾರ ಜೋಡಿಗಳು ತೆರಳುತ್ತಿದ್ದ ಬೈಕನ್ನು ಇಸ್ಲಾಂಪುರ ನಿವಾಸಿ ಹೂಜೂರ್ ಮತ್ತು ತಂಡ ಅಡ್ಡಗಟ್ಟಿದೆ. ಬೈಕ್ ನಲ್ಲಿ ಯುವತಿಯನ್ನು ತರಾಟೆಗೆತ್ತಿಕೊಂಡ ದುಷ್ಕರ್ಮಿಗಳು ತಂಡ ಆಕೆಯ ಬಳಿ ಆಕೆಯ ಪೋಷಕರ ಫೋನ್ ನಂಬರ್ ಕೇಳಿದೆ.ಅಲ್ಲದೇ ಜತೆಯಲ್ಲಿದ್ದ ಯುವಕನಿಗೂ ಬೆದರಿಕೆ ಹಾಕಿದ್ದಾರೆ ಎನ್ನಲಾಗಿದೆ
ಅಲ್ಲದೇ ಈ ಕೃತ್ಯವನ್ನು ಇದೇ ತಂಡದ ಕೆಲ ಸದಸ್ಯರು ಮೊಬೈಲ್ನಲ್ಲಿ ಸೆರೆ ಹಿಡಿದು ವೈರಲ್ ಮಾಡಿದ್ದಾರೆ. ಘಟನೆ ಸಂಬಂದ ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲು ಆಗಿದೆ. ದೂರು ದಾಖಲಿಸಿಕೊಂಡ ಪೊಲೀಸರು, 30 ವರ್ಷದ ಅಕ್ಬರ್ ಎಂಬಾತನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ.
Gold Rate Today : ಚಿನ್ನದ ಬೆಲೆಯಲ್ಲಿ ಏರಿಕೆ – ಇಂದಿನ ಚಿನ್ನ ಹಾಗೂ ಬೆಳ್ಳಿ ದರವನ್ನು ಇಲ್ಲಿ ತಿಳಿಯಿರಿ
ವಿಡಿಯೋದಲ್ಲಿ ಏನಿದೆ?
ರೆಡ್ ಟೀ ಶರ್ಟ್ ಧರಿಸಿದ ಯುವಕನ ಜೊತೆ ಸ್ಕೂಟಿಯಲ್ಲಿ ತೆರಳುತ್ತಿದ್ದ ಯುವತಿಯನ್ನು ಅಡ್ಡಗಟ್ಟಿದ್ದ ತಂಡ ಗಾಡಿಯಿಂದ ಇಳಿಯುವಂತೆ ಯುವತಿಗೆ ಸೂಚಿಸಿದ್ದಾರೆ. ಆಗ ಯುವತಿ ನಾನ್ಯಾಕೆ ಇಳಿಯಬೇಕು ಎಂದು ಪ್ರಶ್ನೆ ಮಾಡಿದ್ದಾರೆ. ಕಪಾಳಕ್ಕೆ ಹೊಡದ್ರೆ ಕಿವಿ ಗೊಂಯ್ ಅನ್ನಬೇಕು ಎಂದು ಹೇಳುತ್ತಾ ಅವಾಚ್ಯ ಪದ ಬಳಸಿ ನಿಂದಿಸಿದ್ದಾರೆ.ಸ್ಕೂಟಿ ನಿಲ್ಲಿಸಿದ ಯುವಕ, ಏನ್ ನಿಮ್ಮ ಗಲಾಟೆ? ಪೊಲೀಸ್ ಠಾಣೆಗೆ ಹೋಗಬೇಕಾ? ಬನ್ನಿ ಹೋಗೋಣ ಎಂದು ಹೇಳಿದ್ದಾನೆ. ಯುವತಿ ಪೊಲೀಸ್ ಠಾಣೆಗೆ ಹೋಗೋದೆಲ್ಲ ಬೇಡ, ಇಲ್ಲಿಂದ ಹೊರಡೋಣ ಅಂತ ಗೆಳೆಯನಿಗೆ ಹೇಳಿದ್ದಾಳೆ
ನೈತಿಕ ಪೊಲೀಸ್ ಗಿರಿಯ ವಿಡಿಯೋ ನೋಡಿ
ನಿಮಗ್ಯಾಕೆ ನಾನು ನಂಬರ್ ಕೊಡಲಿ?
ಈ ಯುವಕನನ್ನು ಮದುವೆ ಆಗ್ತಿದ್ದಿಯಾ ಅಲ್ಲವಾ? ನಿಮ್ಮ ಪೋಷಕರ ನಂಬರ್ ಕೊಡು. ನಾವೇ ನಿಮ್ಮ ಮದುವೆ ಮಾಡಿಸುತ್ತೇನೆ ಎಂದು ಮತ್ತೆ ನಂಬರ್ ಕೇಳಿದ್ದಾನೆ. ಹೌದು, ಮದುವೆ ಆಗ್ತಿನಿ. ನಿಮಗ್ಯಾಕೆ ನಾನು ನಂಬರ್ ಕೊಡಲಿ ಎಂದು ಯುವತಿ ಮರು ಪ್ರಶ್ನೆ ಮಾಡಿದ್ದಾಳೆ. ಇತ್ತ ಯುವಕ ತನ್ನ ಸ್ನೇಹಿತರಿಗೆ ಮಾಡಿ ತಮ್ಮ ಆಪ್ತರನ್ನು ಘಟನಾ ಸ್ಥಳಕ್ಕೆ ಬರುವಂತೆ ಹೇಳಿದ್ದಾನೆ.
ಏಳು ದಿನದೊಳಗೆ ಕೃಷಿ ಜಮೀನಿನ ಭೂ ಪರಿವರ್ತನೆ – ಸುಗ್ರೀವಾಜ್ಞೆ ತರಲು ನಿರ್ಧಾರ | ಮಸೂದೆಯ ಮುಖ್ಯಾಂಶಗಳು ಇಲ್ಲಿದೆ
ಇತ್ತ ಯುವಕರು ಮಾತ್ರ ಯುವತಿಗೆ ನಿಮ್ಮ ಮನೆ ಎಲ್ಲಿದೆ? ಯಾವ ಏರಿಯಾ ಎಂದು ಪದೇ ಪದೇ ಪ್ರಶ್ನೆ ಮಾಡುತ್ತಿದ್ದರು. ಮಧ್ಯ ಪ್ರವೇಶಿಸಿದ ಗೆಳೆಯ, ರಸ್ತೆಯಲ್ಲಿ ಕಿರುಕುಳ ನೀಡುತ್ತಿದ್ದಾರೆ ಎಂದು ಪೊಲೀಸ್ ಠಾಣೆಯಲ್ಲಿ ನೀನು ದೂರು ದಾಖಲಿಸು ಎಂದು ಹೇಳಿದ್ದಕ್ಕೆ, ಕಪ್ಪು ಬಣ್ಣದ ಟೀ ಶರ್ಟ್ ಧರಿಸಿದ ದಡೂತಿ ದೇಹದ ವ್ಯಕ್ತಿ ಸ್ಕೂಟಿ ಸ್ಟಾರ್ಟ್ ಮಾಡಲು ಮುಂದಾಗುತ್ತಾನೆ.
ಇದಕ್ಕೆ ಕೋಪಗೊಂಡ ಯುವಕ ನೀನ್ ಯಾವನೋ ನನ್ನ ಗಾಡಿ ಸ್ಟಾರ್ಟ್ ಮಾಡೋಕೆ ಅಂದಾಗ ಆತನ ಮೇಲೆ ಹಲ್ಲೆ ನಡೆಸಲಾಗಿದೆ. ಹೀಗೆ ಗಲಾಟೆ ಮುಂದುವರಿದಿದೆ.
ಸಾಮಾಜಿಕ ಮಾಧ್ಯಮ
ನೀವು ಕಳ್ಳರ ಜೊತೆಗಾದರೂ ಇರಿ. ಯಾರ ಜೊತೆಗಾದರೂ ಇರಿ. ಆದರೆ, ಸತ್ಯದ ಪರವಾಗಿ ಇರಿ: ಎಲೆಕ್ಟ್ರಾನಿಕ್ ಮೀಡಿಯಾದವರಿಗೆ ಸಿಎಂ ಕರೆ : ಯುಟ್ಯೂಬ್ ಚಾನಲ್ ಗಳ ಆರಂಭಕ್ಕೆ ಪರವಾನಗಿ ನಿಗಧಿ ಮಾಡುವ ಬಗ್ಗೆ ಪರಿಶೀಲನೆ – ಕರ್ನಾಟಕ ಎಲೆಕ್ಟ್ರಾನಿಕ್ ಮೀಡಿಯಾ ಜರ್ನಲಿಸ್ಟ್ ಅಸೋಸಿಯೇಷನ್ ಉದ್ಘಾಟಿಸಿ ಸಿಎಂ ಸಿದ್ದರಾಮಯ್ಯ
ಹುಬ್ಬಳ್ಳಿ ಸೆ 15: ಮೊದಲು ನೀವೆಲ್ಲಾ ಊಹಾ ಪತ್ರಿಕೋದ್ಯಮವನ್ನು ನಿಲ್ಲಿಸಿ. ಇದು ಸಮಾಜಕ್ಕೆ ಹಾನಿಕರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎಲೆಕ್ಟ್ರಾನಿಕ್ ಮೀಡಿಯಾ ಪತ್ರಕರ್ತರಿಗೆ ಕರೆ ನೀಡಿದರು.
ಕರ್ನಾಟಕ ಎಲೆಕ್ಟ್ರಾನಿಕ್ ಮೀಡಿಯಾ ಜರ್ನಲಿಸ್ಟ್ ಅಸೋಸಿಯೇಷನ್ ಉದ್ಘಾಟಿಸಿ, ಲೋಗೋ ಬಿಡುಗಡೆ ಮಾಡಿ ಮಾತನಾಡಿದರು.
ನಾನು ರಾಜಕಾರಣಕ್ಕೆ ಬಂದು ಇಷ್ಟು ವರ್ಷದಲ್ಲಿ ಯಾವ ಮಾಧ್ಯಮಗಳಿಗೂ ನನ್ನ ಬಗ್ಗೆ ಹೀಗೇ ಬರೆಯಿರಿ, ಹಾಗೇ ಬರೆಯಿರಿ ಎಂದು ಯಾವತ್ತೂ ಹೇಳಿಲ್ಲ. ನನ್ನ ಬಗ್ಗೆ ಸುಳ್ಳುಗಳನ್ನು ಸತತವಾಗಿ ತೋರಿಸುವಾಗಲೂ ಯಾಕೆ ಹೀಗೆ ತೋರಿಸ್ತೀರಿ ಅಂತಲೂ ಯಾರಿಗೂ ಕೇಳಿಲ್ಲ. ನಿಮ್ಮಿಂದ ನನಗೆ ಏನೇನೂ ಅಪೇಕ್ಷೆ ಇಲ್ಲ. ಸಾಧ್ಯವಾದರೆ ಸತ್ಯ ತೋರಿಸಿ, ಸತ್ಯ ಬರೆಯಿರಿ ಎಂದರು.
ನನ್ನ ಕಾರಿನ ಮೇಲೆ ಕಾಗೆ ಕುಳಿತದ್ದೇ ಏನ್ ದೊಡ್ಡ ದೊಡ್ಡ ಚರ್ಚೆ ನಡೆಸಿದರು. ಆ ಚರ್ಚೆಯಲ್ಲಿ ಜ್ಯೋತಿಷಿಗಳು, ಚಾನಲ್ ಗಳು ತೋರಿಸಿದ್ದೆಲ್ಲಾ ಅಪ್ಪಟ ಸುಳ್ಳಾಯ್ತು. ನೀವು ಹೀಗೆಲ್ಲಾ ತೋರಿಸಿದರೆ ಜನ ಒಪ್ತಾರಾ ಯೋಚನೆ ಮಾಡಿ ಎಂದರು.
ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೆ ನಮ್ಮ ಸರ್ಕಾರ ಸದಾ ಸಿದ್ದ. ಯಾವತ್ತೂ ಇದಕ್ಕೆ ಧಕ್ಕೆ ತರುವ ಕೆಲಸವನ್ನು ನಾನೂ ಯಾವತ್ತೂ ಮಾಡಿಲ್ಲ, ನಮ್ಮ ಸರ್ಕಾರವೂ ಮಾಡುವುದಿಲ್ಲ ಎಂದರು.
ಸಂಘದ ಬೇಡಿಕೆ
ಬ್ಲಾಕ್ ಮೇಲ್ ಮತ್ತು ಕೀಳು ಮಟ್ಟದ ಪ್ರಾಕ್ಟೀಸ್ ಮಾಡುತ್ತಿರುವ ಯು ಟ್ಯೂಬ್ ಚಾನಲ್ ಗಳು ಸಮಾಜಕ್ಕೆ ಶಾಪ ಆಗಿದ್ದು, ಇಂಥವರಿಂದ ಪತ್ರಿಕೋದ್ಯಮದ ಘನತೆ ಹಾಳಾಗಿದೆ. ಹೀಗಾಗಿ ಯು ಟ್ಯೂಬ್ ಚಾನಲ್ ಗಳ ಹಾವಳಿ ತಡೆಯಲು ಇವರಿಗೂ ಲೈಸೆನ್ಸ್ ಕಡ್ಡಾಯಗೊಳಿಸಬೇಕು ಎಂದು ಸಂಘ ಮುಖ್ಯಮಂತ್ರಿಗಳಿಗೆ ಬೇಡಿಕೆ ಸಲ್ಲಿಸಿತು. ಈ ಬೇಡಿಕೆ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಲಾಗಿವುದು ಎಂದು ಮುಖ್ಯಮಂತ್ರಿಗಳು ಭರವಸೆ ನೀಡಿದರು.
ಸಿನೆಮಾ
Kiara Advani War 2 bikini look: ಕಿಯಾರಾ ಬಿಕಿನಿ ಕಿಡಿ – ಎಲ್ಲರ ಕಣ್ಣು ಅಲ್ಲೇ! ‘ವಾರ್ 2’ ಟೀಸರ್ನಿಂದ ಇಂಟರ್ನೆಟ್ನಲ್ಲಿ ಅಲ್ಲೋಲ ಕಲ್ಲೋಲ

ವಾರ್ 2′ ಟೀಸರ್ನಲ್ಲಿ ಕಿಯಾರಾ ಅಡ್ವಾಣಿಯವರ ಚಿನ್ನದ ಬಿಕಿನಿ ಲುಕ್ ಇಂಟರ್ನೆಟ್ನಲ್ಲಿ ಬಿರುಗಾಳಿ ಎಬ್ಬಿಸಿದ್ದು, ಕ್ಷಣಾರ್ಧದಲ್ಲಿ ವೈರಲ್ ಆಗಿದೆ. ಅವರ ಕೇವಲ ಎರಡು ಸೆಕೆಂಡ್ಗಳ ಹಾಟ್ ದೃಶ್ಯವು ಎಲ್ಲೆಡೆ ಭಾರಿ ಚರ್ಚೆಗೆ ಕಾರಣವಾಗಿದೆ.
Kiara Advani War 2 bikini look ಬಾಲಿವುಡ್ನ ಬ್ಯೂಟಿ ಕ್ವೀನ್ ಕಿಯಾರಾ ಅಡ್ವಾಣಿ ಇದೀಗ ಇಂಟರ್ನೆಟ್ನಲ್ಲಿ ಅಕ್ಷರಶಃ ಬೆಂಕಿ ಹಚ್ಚಿದ್ದಾರೆ! “ವಾರ್ 2” ಚಿತ್ರದ ಟೀಸರ್ನಲ್ಲಿ ಅವರು ತೊಟ್ಟ ಚಿನ್ನದ ಬಿಕಿನಿ ಇದೀಗ ನ್ಯಾಷನಲ್ ಹಾಟ್ ಟಾಪಿಕ್. ಜೂನಿಯರ್ ಎನ್ಟಿಆರ್ ಹುಟ್ಟುಹಬ್ಬದ ಗಿಫ್ಟ್ ಆಗಿ ರಿಲೀಸ್ ಆದ ಈ ಟೀಸರ್ನಲ್ಲಿ ಹೃತಿಕ್ ರೋಷನ್ರವರ ಮೈ ಜುಮ್ಮೆನ್ನಿಸೋ ಆಕ್ಷನ್ ಸೀಕ್ವೆನ್ಸ್ಗಳಿವೆ, ನಿಜ. ಆದರೆ, ಎಲ್ಲರ ಕಣ್ಣು, ಮನಸ್ಸು ಕದ್ದಿದ್ದು ಮಾತ್ರ ಕಿಯಾರಾ ಅವರ ಹಾಟ್ ಅವತಾರ!
ಬರೀ ಎರಡೇ ಎರಡು ಸೆಕೆಂಡುಗಳ ಕಾಲ ಕಡಲತೀರದಲ್ಲಿ, ಚಿನ್ನದ ಬಿಕಿನಿಯಲ್ಲಿ ಕಂಗೊಳಿಸಿರುವ ಕಿಯಾರಾ, ತಮ್ಮ ಫಿಟ್ ದೇಹ ಮತ್ತು ಆಕರ್ಷಕ ಮೈಮಾಟದಿಂದ ಅಭಿಮಾನಿಗಳ ಹೃದಯ ಕದ್ದಿದ್ದಾರೆ. ರೆಡ್ಡಿಟ್ನಂತಹ ಸಾಮಾಜಿಕ ಜಾಲತಾಣಗಳಲ್ಲಿ ಈ ದೃಶ್ಯ ಕಾಳ್ಗಿಚ್ಚಿನಂತೆ ಹಬ್ಬಿದೆ. ‘ಕಿಯಾರಾ ಎರಡೇ ಸೆಕೆಂಡ್ನಲ್ಲಿ ಇಡೀ ಶೋ ಕದ್ದಿದ್ದಾರೆ’ ಎಂದು ಕೆಲವರು ಹೊಗಳಿದರೆ, ‘ಗರ್ಭಿಣಿಯಾಗಿದ್ದರೂ ಕಿಯಾರಾ ದೇವತೆಯಂತೆ ಕಾಣುತ್ತಿದ್ದಾರೆ’ ಎಂದು ಅಭಿಮಾನಿಗಳು ಮೆಚ್ಚುಗೆಯ ಮಹಾಪೂರವನ್ನೇ ಹರಿಸಿದ್ದಾರೆ.ಅವರ ಫಿಟ್ನೆಸ್, ಆಕರ್ಷಕ ಮೈಮಾಟಕ್ಕೆ ಫ್ಯಾನ್ಸ್ ಫಿದಾ ಆಗಿದ್ದಾರೆ.
ಸದ್ಯ ಪತಿ ಸಿದ್ಧಾರ್ಥ್ ಮಲ್ಹೋತ್ರಾ ಜೊತೆ ತಮ್ಮ ಮೊದಲ ಮಗುವಿನ ನಿರೀಕ್ಷೆಯಲ್ಲಿರುವ ಕಿಯಾರಾಗೆ, ‘ವಾರ್ 2’ ಹಲವು ಪ್ರಥಮಗಳ ಚಿತ್ರ. ಯಶ್ ರಾಜ್ ಫಿಲ್ಮ್ಸ್ ಬ್ಯಾನರ್ನಲ್ಲಿ ಮೊದಲ ಸಿನಿಮಾ, ಮೊದಲ ಪಕ್ಕಾ ಆಕ್ಷನ್ ಸಿನಿಮಾ, ಮತ್ತು ಹೌದು, ತೆರೆಮೇಲೆ ಮೊದಲ ಬಿಕಿನಿ ದೃಶ್ಯ ಕೂಡಾ ಇದೇ! ಅಯಾನ್ ಮುಖರ್ಜಿ ನಿರ್ದೇಶನದ ಈ ಚಿತ್ರ 2025ರ ಆಗಸ್ಟ್ 14ಕ್ಕೆ ತೆರೆಗೆ ಅಪ್ಪಳಿಸಲಿದೆ.

ಆದರೆ, ಇಲ್ಲೊಂದು ಸಣ್ಣ ಟ್ವಿಸ್ಟ್! ಈ ಹಾಟ್ ಲುಕ್ ಕೆಲವರಲ್ಲಿ ಅನುಮಾನದ ಕಿಡಿಯನ್ನೂ ಹತ್ತಿಸಿದೆ. ಕೆಲವರು ಇದನ್ನು ಸಿಜಿಐ (ಕಂಪ್ಯೂಟರ್ ಜನರೇಟೆಡ್ ಇಮೇಜರಿ) ಇರಬೇಕು “ಇಲ್ಲ, ಬಾಡಿ ಡಬಲ್ ಇರಬಹುದು” ಅಂತೆಲ್ಲಾ ಕೆಲ ನೆಟ್ಟಿಗರು ಗುಸುಗುಸು ಶುರುಮಾಡಿದ್ದಾರೆ. ಆದರೆ, ಕಿಯಾರಾ ಅವರ ತಂಡ, “ಅದೆಲ್ಲಾ ಸುಳ್ಳು, ಕಿಯಾರಾ ಈ ಲುಕ್ಗಾಗಿ ಸಖತ್ ಆಗಿ ಜಿಮ್ನಲ್ಲಿ ಬೆವರು ಹರಿಸಿದ್ದಾರೆ” ಅಂತ ಸ್ಪಷ್ಟನೆ ಕೊಟ್ಟಿದೆ.
ಸಾಮಾಜಿಕ ಮಾಧ್ಯಮ
ದೂರು ನೀಡಲು ಬಂದ ಮಹಿಳೆಯ ಜತೆ ಡಿವೈಎಸ್ಪಿ ಬಲವಂತದ ಸೆಕ್ಸ್ ! ಕಛೇರಿಯಲ್ಲೆ ರಾಸಲೀಲೆ ನಡೆಸುತ್ತಿರುವ ವಿಡಿಯೋ ವೈರಲ್ – ಗೃಹ ಸಚಿವರ ತವರು ಜಿಲ್ಲೆಯಲ್ಲಿ ಶಾಕಿಂಗ್ ಘಟನೆ

ಇಡೀ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹಾಗೂ ಮಹಿಳೆ, ಮಕ್ಕಳು ಸೇರಿದಂತೆ ರಾಜ್ಯದ ಜನತೆಯನ್ನು ಸುರಕ್ಷಿತವಾಗಿ ನೋಡಿಕೊಳ್ಳುವುದಾಗಿ ಪ್ರಮಾಣ ವಚನ ಸ್ವೀಕಾರ ಮಾಡಿದ ಗೃಹ ಸಚಿವ ಡಾ.ಜಿ. ಪರಮೇಶ್ವರ ಅವರ ತವರು ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ ಎಂಬುದು ಇನ್ನೂ ಅಸಹ್ಯಕರವಾಗಿದೆ. ಇಂತಹ ಅಧಿಕಾರಿಗಳು ಪೊಲೀಸ್ ಇಲಾಖೆಗೆ ಕೆಟ್ಟ ಹೆಸರು ತರುವವರಾಗಿದ್ದಾರೆ. ಇವರ ವಿರುದ್ಧ ಕಠಿಣ ಕ್ರಮ ಜರುಗಿಸಬೇಕು. ಇದು ಇಂತಹ ವಿಕೃತ ಮನೋಸ್ಥಿತಿ ಇರುವವರಿಗೆ ಬುದ್ಧಿ ಕಲಿಸುವಂತಿರಬೇಕು ಎಂದು ವಿಡಿಯೊ ನೋಡಿದವರು ಒತ್ತಾಯಿಸಿದ್ದಾರೆ.
ತುಮಕೂರು : ಜ 2ಡಿವೈಎಸ್ಪಿಯೊಬ್ಬರು ರಾಜ್ಯ ಪೊಲೀಸ್ ಇಲಾಖೆಯ ಮಾನ ಹಾಗೂ ಗೌರವವನ್ನು ಹರಾಜು ಹಾಕಿದ ಘಟನೆಯೊಂದು ಗೃಹ ಸಚಿವ ಡಾ| ಪರಮೇಶ್ವರ್ ಅವರ ತವರು ಜಿಲ್ಲೆಯಿಂದ ವರದಿಯಾಗಿದೆ. ದೂರು ನೀಡಲು ಬಂದ ಸಂತ್ರಸ್ತ ಮಹಿಳೆಯನ್ನು ತುಮಕೂರು ಜಿಲ್ಲೆಯ ಮಧುಗಿರಿಯ ಡಿವೈಎಸ್ಪಿ ತನ್ನ ಕಾಮತೃಷೆ ತೀರಿಸಲು ಬಲವಂತವಾಗಿ ಬಳಸಲು ಯತ್ನಿಸಿದ ಆರೋಪ ಕೇಳಿ ಬಂದಿದೆ.ಈ ಸಂಬಂಧ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಘಿದೆ.
ಏನಿದು ಪ್ರಕರಣ ?
ದೂರು ನೀಡಲು ಕಚೇರಿಗೆ ಬಂದ ಮಹಿಳೆಯೊಂದಿಗೆ ಮಧುಗಿರಿ ಡಿವೈಎಸ್ಪಿ ರಾಮಚಂದ್ರಪ್ಪ ಅಸಭ್ಯವಾಗಿ ವರ್ತಿಸಿದ್ದಾರೆ. ಇವರ ಹದ್ದು ಮೀರಿದ ವರ್ತನೆಯ ವಿಡಿಯೊ ವೈರಲ್ ಆಗಿದೆ. ಜಮೀನು ವ್ಯಾಜ್ಯದ ಬಗ್ಗೆ ದೂರು ಕೊಡಲು ಪಾವಗಡದಿಂದ ಬಂದಿದ್ದ ಮಹಿಳೆಯನ್ನು ಏಕಾಂತ ಕೊಠಡಿಗೆ ಎಳೆದುಕೊಂಡು ಹೋದ ರಾಮಚಂದ್ರಪ್ಪ ಲೈಂಗಿಕ ಕಿರುಕುಳ ನೀಡಿದ್ದಾರೆ.
ಪಾವಗಡ ಮೂಲದ ಮಹಿಳೆ ಜಮೀನು ವ್ಯಾಜ್ಯದ ಬಗ್ಗೆ ದೂರು ನೀಡಿದ್ದರು. ಈ ಸಂಬಂಧ ಮಹಿಳೆಯೊಂದಿಗೆ ಮಾತುಕತೆ ನಡೆಸಬೇಕು ಕೆಲವು ವಿಚಾರಣೆ ಮಾಡಬೇಕು ಎಂದು ಡಿವೈಎಸ್ ಪಿ ಕಚೇರಿಗೆ ಕರೆಸಲಾಗಿತ್ತು. ಈ ವೇಳೆ ಮಹಿಳೆಯನ್ನ ಪುಸಲಾಯಿಸಿರುವ ಡಿವೈಎಸ್ಪಿ ರಾಮಚಂದ್ರಪ್ಪ ದೂರು ಕೊಡಲು ಬಂದ ಮಹಿಳೆಯನ್ನ ಪುಸಲಾಯಿಸಿ ತನ್ನ ಕಾಮತೃಷೆ ತೀರಿಸಿಕೊಳ್ಳಲು ಬಳಸಿಕೊಂಡಿದ್ದಾನೆ.
ತನಗೆ ನ್ಯಾಯ ಸಿಗಬೇಕಾದರೆ ಇಂಥ ಕೆಲಸವನ್ನೂ ಮಾಡಬೇಕು ಎಂದು ಮಹಿಳೆ ಡಿವೈಎಸ್ಪಿಯ ಕಾಮತೃಷೆ ತೀರಿಸಲು ಮುಂದಾಗಿದ್ದಾಳೆ. ಇದಾದ ನಂತರ ಡಿವೈಎಸ್ಪಿ ಕಚೇರಿಯ ಶೌಚಾಲಯದ ಬಳಿ ಕರೆದುಕೊಂಡು ಹೋದ ರಾಮಚಂದ್ರಪ್ಪ ಮಹಿಳೆಯೊಂದಿಗೆ ರಾಸಲೀಲೆ ಆರಂಭಿಸಿದ್ದಾರೆ. ಆದರೆ, ಡಿವೈಎಸ್ಪಿ ರಾಮಚಂದ್ರಪ್ಪನ ರಾಸಲೀಲೆಯ ದೃಶ್ಯ ಯಾರೋ ಮೊಬೈಲ್ನಲ್ಲಿ ಸೆರೆ ಹಿಡಿದಿದ್ದಾರೆ. ಅಲ್ಲಿ ಮಹಿಳೆಯೊಂದಿಗೆ ಬಲವಂತವಾಗಿ ನಡೆದುಕೊಳ್ಳುತ್ತಿದ್ದ ದೃಶ್ಯಗಳು ಸೆರೆ ಸಿಕ್ಕಿವೆ.
ಇಡೀ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹಾಗೂ ಮಹಿಳೆ, ಮಕ್ಕಳು ಸೇರಿದಂತೆ ರಾಜ್ಯದ ಜನತೆಯನ್ನು ಸುರಕ್ಷಿತವಾಗಿ ನೋಡಿಕೊಳ್ಳುವುದಾಗಿ ಪ್ರಮಾಣ ವಚನ ಸ್ವೀಕಾರ ಮಾಡಿದ ಗೃಹ ಸಚಿವ ಡಾ.ಜಿ. ಪರಮೇಶ್ವರ ಅವರ ತವರು ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ ಎಂಬುದು ಇನ್ನೂ ಅಸಹ್ಯಕರವಾಗಿದೆ. ಇಂತಹ ಅಧಿಕಾರಿಗಳು ಪೊಲೀಸ್ ಇಲಾಖೆಗೆ ಕೆಟ್ಟ ಹೆಸರು ತರುವವರಾಗಿದ್ದಾರೆ. ಇವರ ವಿರುದ್ಧ ಕಠಿಣ ಕ್ರಮ ಜರುಗಿಸಬೇಕು. ಇದು ಇಂತಹ ವಿಕೃತ ಮನೋಸ್ಥಿತಿ ಇರುವವರಿಗೆ ಬುದ್ಧಿ ಕಲಿಸುವಂತಿರಬೇಕು ಎಂದು ವಿಡಿಯೊ ನೋಡಿದವರು ಒತ್ತಾಯಿಸಿದ್ದಾರೆ.
‘ಸಾಮಾಜಿಕ ಜಾಲ ತಾಣಗಳಲ್ಲಿ ಹರಿದಾಡುತ್ತಿರುವ ವಿಡಿಯೊವನ್ನು ನಾನೂ ವೀಕ್ಷಿಸಿದ್ದೇನೆ. ಅದರಲ್ಲಿ ಡಿವೈಎಸ್ಪಿ ರಾಮಚಂದ್ರಪ್ಪ ಆಕ್ಷೇಪಾರ್ಹವಾಗಿ ವರ್ತಿಸುತ್ತಿರುವುದು ಕಂಡು ಬಂದಿದೆ. ಸಂತ್ರಸ್ತೆಯನ್ನು ಹುಡುಕುತ್ತಿದ್ದೇವೆ. ತನಿಖೆ ನಡೆಸಿ ಕಠಿಣ ಕ್ರಮ ಕೈಗೊಳ್ಳುತ್ತೇವೆ. ಇದನ್ನು ಈಗಾಗಲೇ ಮೇಲಾಧಿಕಾರಿಗಳ ಗಮನಕ್ಕೆ ತರಲಾಗಿದೆ’ ಎಂದು ತುಮಕೂರು ಜಿಲ್ಲೆ ಎಸ್ಪಿ ಕೆ.ವಿ. ಅಶೋಕ್ ಪ್ರತಿಕ್ರಿಯಿಸಿದ್ದಾರೆ
-
ಅಪರಾಧ18 hours agoMangalore-ಕಣಚೂರು ಮೆಡಿಕಲ್ ಕಾಲೇಜು ಆವರಣದಲ್ಲೇ ವಿದ್ಯಾರ್ಥಿನಿ ಅಪಹರಣ..! ಹಿಂದೂ ಯುವಕ ಲವ್ ಆರೋಪ – ವಿಡಿಯೋ ವೈರಲ್ : ತನಿಖೆಗೆ ಕಮಿಷನರ್ ಸೂಚನೆ
-
ರಾಜಕೀಯ18 hours agoBJP leaders-ಗಡಿಪಾರಿಗೊಳಗಾದ ನರಸಿಂಹ ಮಾಣಿ ಮನೆಗೆ ಬಿಜೆಪಿ ಮುಖಂಡರ ಭೇಟಿ; ಕುಟುಂಬಕ್ಕೆ ಆತ್ಮಸ್ಥೈರ್ಯ
-
ಚಿನ್ನ-ಬೆಳ್ಳಿ ದರ23 hours agoGold Rate Today-ಆಭರಣಪ್ರಿಯರಿಗೆ ಗುಡ್ನ್ಯೂಸ್: ಚಿನ್ನದ ಬೆಲೆಯಲ್ಲಿ ಭಾರೀ ಕುಸಿತ: 12 ಸಾವಿರ ರೂ. ಗಡಿಯೊಳಗೆ ಬಂದ ಆಭರಣ ಚಿನ್ನ..!
-
ಬಿಗ್ ನ್ಯೂಸ್17 hours agoHigh Court-Social Media ಅಕೌಂಟ್ ಇದ್ದ ಮಾತ್ರಕ್ಕೆ ಮನಸ್ಸಿಗೆ ಬಂದಿದ್ದನ್ನೆಲ್ಲ ಪೋಸ್ಟ್ ಮಾಡುವ Free Licence ಇಲ್ಲ : ಬೆಳ್ತಂಗಡಿಯ ಮೋಹನ್ ಬೋಳಂಗಡಿ – ಶುಭಾ ರೈ ವಿರುದ್ಧ ದಾಖಲಾದ ಪ್ರಕರಣದಲ್ಲಿ ಹೈಕೋರ್ಟ್ ಮಹತ್ವದ ಎಚ್ಚರಿಕೆ
-
ಸಿನೆಮಾ23 hours agoArjun Sarja-ಪುತ್ರಿ ಐಶ್ವರ್ಯಾ ವಿರುದ್ಧ ಅವಹೇಳನಕಾರಿ ವರದಿ: ಮಾಧ್ಯಮಗಳ ವಿರುದ್ಧ ಸಿಡಿದೆದ್ದ ಅರ್ಜುನ್ ಸರ್ಜಾ; ಅಧಿಕೃತ ದೂರು ದಾಖಲು
-
ಸ್ಥಳೀಯ23 hours agoBaindoor-ರೈಲಿನಲ್ಲಿ ಮೊಬೈಲ್ ಕಳವು, UPI ಮೂಲಕ ಹಣ ವರ್ಗಾವಣೆ: ಬೈಂದೂರು ಪೊಲೀಸರಿಂದ ಕುಖ್ಯಾತ ಆರೋಪಿ ಬಂಧನ
-
ಅಪರಾಧ24 hours agoMangalore-ಮಂಗಳೂರು: ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ಆರೋಪ: ಮತ್ತೊಂದು ಪೋಕ್ಸೋ ಪ್ರಕರಣದಲ್ಲಿ ಧರ್ಮಗುರು ಮರುಬಂಧನ
-
ಅಪರಾಧ23 hours agoManipal police-ಪಟಾಕಿ ಪ್ರಕರಣ: ಮಣಿಪಾಲ ಪೊಲೀಸರ ವಿರುದ್ಧ ದೌರ್ಜನ್ಯ ಆರೋಪ: ಸಿಎಂಗೆ ಇ-ಮೇಲ್ ಮಾಡಿದ ವಿದ್ಯಾರ್ಥಿಗಳು
















