ಅಪರಾಧ
Inspired By ‘Drishyam’ Movie :ಪ್ರಿಯಕರನ ಜತೆ ಸೇರಿ ತಂದೆಯ ಹತ್ಯೆ ಮಾಡಿದ ತಾಯಿ ಮಗಳು, ಪೊಲೀಸರ ಮುಂದೆ ಬೇರೆಯೇ ಕಥೆ ಕಟ್ಟಿದ್ದರು..! ಸಿನಿಮಾದಿಂದ ಸ್ಫೂರ್ತಿ ಪಡೆದ ಖದೀಮರು
ಬೆಳಗಾವಿ: ಮಲಯಾಳಂ ಸಿನಿಮಾದಿಂದ ಪ್ರೇರಿತರಾಗಿ , ಅದೇ ಮಾದರಿಯಲ್ಲಿ ತಪ್ಪಿಸಿಕೊಳ್ಳಬಹುದು ಎಂಬ ದೂರಾಲೋಚನೆಯಿಂದ ಪತ್ನಿ ಮತ್ತು ಮಗಳು ಪ್ರಿಯಕರನ ಜತೆ ಸೇರಿ ಪತಿಯನ್ನು ಹತ್ಯೆ ಮಾಡಿ ಸಿಕ್ಕಿ ಹಾಕಿಕೊಂಡ ಘಟನೆ ಬೆಳಗಾವಿ ಜಿಲ್ಲೆಯಲ್ಲಿ ನಡೆದಿದೆ.
ಇಲ್ಲಿನ ಕ್ಯಾಂಪ್ ಪ್ರದೇಶದ ಮದ್ರಾಸ್ ಓಣಿಯ ನಿವಾಸಿ, ರಿಯಲ್ ಎಸ್ಟೇಟ್ ಕುಳ ಸುಧೀರ ಭಗವಾನದಾಸ ಕಾಂಬಳೆ (57) ಹತ್ಯೆಯಾದವರು. ಸುಧೀರ ಪತ್ನಿ ರೋಹಿಣಿ, ಪುತ್ರಿ ಸ್ನೇಹಾ ಹಾಗೂ ಆಕೆಯ ಪ್ರಿಯಕರ ಅಕ್ಷಯ ಮಹಾದೇವ ವಿಠಕರ ಬಂಧಿತರು. ಸೆ 17 ರಂದು ಆರೋಪಿಗಳು ಸುಧೀರ್ ಹತ್ಯೆ ಮಾಡಿದ್ದರು.
ಕೊಲೆ ನಡೆದ 10 ದಿನಗಳ ಬಳಿಕ ಆರೋಪಿಗಳನ್ನು ಖೆಡ್ಡಾಕ್ಕೆ ಕೆಡುವಲ್ಲಿ ಬೆಳಗಾವಿ ಪೊಲೀಸರು ಸಫಲರಾಗಿದ್ದಾರೆ. ಸುಧೀರ್ ಹಲವು ವರ್ಷಗಳಿಂದ ದುಬೈನಲ್ಲಿ ಉದ್ಯೋಗಿಯಾಗಿದ್ದರು . ಪತ್ನಿ ಹಾಗೂ ಪುತ್ರಿ ಬೆಳಗಾವಿಯಲ್ಲೇ ವಾಸಿಸುತ್ತಿದ್ದರು. ಕೋವಿಡ್ ಸಂದರ್ಭದಲ್ಲಿ ಲಾಕ್‌ಡೌನ್ ಕಾರಣ ಮರಳಿ ಬೆಳಗಾವಿಗೆ ಬಂದಿದ್ದ ಸುಧೀರ, ಕುಟುಂಬದ ಜತೆ ವಾಸವಾಗಿದ್ದರು.
Gold Rate Today : ಚಿನ್ನದ ಬೆಲೆಯಲ್ಲಿ ಏರಿಕೆ – ಇಂದಿನ ಚಿನ್ನ ಹಾಗೂ ಬೆಳ್ಳಿ ದರವನ್ನು ಇಲ್ಲಿ ತಿಳಿಯಿರಿ
ಗಂಡ ದುಬಾಯಿನಲ್ಲಿದ್ದ ವೇಳೆ ಪತ್ನಿ ಮತ್ತೊಬ್ಬನ ಜೊತೆಗೆ ಅನೈತಿಕ ಸಂಬಂಧ ಇಟ್ಟುಕೊಂಡಿದ್ದಳು. ಮಗಳು ಕೂಡ ಪ್ರಿಯಕರನನ್ನು ಹುಡುಕಿಕೊಂಡಿದ್ದಳು. ಕೊವೀಡ್ ಕಾರಣ ಬೆಳಗಾವಿಗೆ ಮರಳಿದ ಸುಧೀರ್ಗೆ ಹೆಂಡತಿ ಅನೈತಿಕ ಸಂಬಂಧ ಮತ್ತು ಮಗಳ ಲವ್ ವಿಚಾರ ಗೊತ್ತಾಗುತ್ತದೆ. ಇದೇ ವಿಷಯಕ್ಕೆ ಸಂಬಂಧಿಸಿದಂತೆ ಪ್ರತಿ ದಿನವೂ ಒಂದಿಲ್ಲೊಂದು ಕಾರಣಕ್ಕೆ ಮನೆಯಲ್ಲಿ ಗಲಾಟೆ ನಡೆಯುತ್ತಿತ್ತು.
ಹೀಗಾಗಿ ಸುಧೀರ್ ನನ್ನು ಮುಗಿಸಲು ತಾಯಿ ಮಗಳು ಸ್ಕೆಚ್ ಹಾಕುತ್ತಾರೆ. ಇದಕ್ಕೆ ಮಗಳ ಪ್ರಿಯಕರ ಅಕ್ಷಯ್ ನೆರವು ಪಡೆದುಕೊಳ್ಳುತ್ತಾರೆ. ಹೀಗಾಗಿ ಸುಧೀರ್ ಕೊಲೆಯ ಉದ್ದೇಶದಿಂದ ಅಕ್ಷಯ್ ದೂರದ ಪುಣೆಯಿಂದ ಬೆಳಗಾವಿಗೆ ಬಂದು ಲಾಡ್ಜ್ ರೂಮ್ ನಲ್ಲಿ ಹೊಂಚು ಹಾಕಿದ್ದಾನೆ. ಸೆ. 17ರಂದು ಹತ್ಯೆಯ ಮುಹೂರ್ತ ಕೂಡಿ ಬಂದಿದೆ. ರಾತ್ರಿ ಸುಧೀರ ಊಟ ಮಾಡಿ ಮಲಗಿದ್ದರು. ಈ ವೇಳೆ ಮೂವರೂ ಸೇರಿಕೊಂಡು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ್ದರು.
Abortion : ಮದ್ವೆಯಾಗಲಿ, ಆಗದೇ ಇರಲಿ… ಗರ್ಭಪಾತದ ಬಗ್ಗೆ ಸುಪ್ರೀಂ ಕೋರ್ಟು ಮಹತ್ವದ ತೀರ್ಪು
ಬಳಿಕ ಏನೂ ಗೊತ್ತಿಲ್ಲ ಎಂಬಂತೆ ಪತ್ನಿ ಹಾಗೂ ಪುತ್ರಿ ರಾತ್ರಿಯಿಡೀ ಪಕ್ಕದ ಕೋಣೆಯಲ್ಲಿ ಮಲಗಿದ್ದರು. ನಸುಕಿನ 5ರ ಸುಮಾರಿಗೆ ಎದ್ದ ತಾಯಿ ಮಗಳು ಬೀದಿಗೆಲ್ಲಾ ಕೇಳಿಸುವಂತೆ ರಂಪಾಟ ಮಾಡಿದ್ದಾರೆ. ರಾತ್ರಿ ಯಾರೋ ಮನೆಗೆ ನುಗ್ಗಿ ಹಣಕ್ಕಾಗಿ ಕೊಲೆ ಮಾಡಿದ್ದಾರೆ’ ಎಂದು ನಾಟಕವಾಡಿದ್ದರು.
ಕೆಲ ವರ್ಷಗಳ ಹಿಂದೆ ತೆರೆಕಂಡ ‘ದೃಶ್ಯಂ’ ಚಲನಚಿತ್ರವನ್ನು 5 ರಿಂದ 10 ಬಾರಿ ಆರೋಪಿಗಳು ನೋಡಿದ್ದರು. ಕೊಲೆಗಾರ ಹತ್ಯೆ ಮಾಡಿ ಪೊಲೀಸರಿಂದ ಹೇಗೆ ತಪ್ಪಿಸಿಕೊಳ್ಳಬಹುದು ಎಂದು ಅದರಲ್ಲಿ ತೋರಿಸಲಾಗಿತ್ತು. ಅದೇ ರೀತಿ ಕೊಲೆ ಮಾಡಿ, ತಮಗೇನೂ ಗೊತ್ತಿಲ್ಲ ಎಂಬಂತೆ ನಾಟಕ ಮಾಡಲು ತಾಯಿ ಮಗಳು ಸಂಚು ರೂಪಿಸಿದ್ದರು.
‘ಸುಧೀರ ಮೈಮೇಲೆ ಆದ ಗಾಯ ಹಾಗೂ ಪಕ್ಕೆಲಬುಗಳು ಮುರಿದಿದ್ದನ್ನು ಕಂಡಾಗ, ಕೊಲೆಯಲ್ಲಿ ಪುರುಷನ ಕೈವಾಡ ಇರುವುದು ಪೊಲೀಸರಿಗೆ ಖಚಿತವಾಗಿತ್ತು. ಪತ್ನಿ, ಪುತ್ರಿಯ ನಾಟಕೀಯ ಹೇಳಿಕೆಗಳಿಂದ ಸಂಶಯಗೊಂಡು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ, ಪ್ರಕರಣ ಬಯಲಿಗೆ ಬಂತು’ ಎಂದು ಪೊಲೀಸರು ತಿಳಿಸಿದ್ದಾರೆ.
‘ಕೊಲೆಯಾದ ಮರುದಿನ ಪೊಲೀಸರು ಸ್ಥಳ ಪರಿಶೀಲನೆ ನಡೆಸುವ ವೇಳೆ, ಆರೋಪಿ ಅಕ್ಷಯ ಕೂಡ ಅಮಾಯಕನಂತೆ ಬಂದು ನಿಂತಿದ್ದ. ಆರೋಪಿ ರೋಹಿಣಿಯ ತವರೂರು ಪುಣೆ. ಅವರ ಪುತ್ರಿ ಸ್ನೇಹಾ ಕೂಡ ಕೆಲ ವರ್ಷಗಳ ಹಿಂದೆ ಪುಣೆಯಲ್ಲಿ ವೃತ್ತಿಪರ ಕೋರ್ಸ್ ಓದುತ್ತಿದ್ದರು. ಅಕ್ಷಯ ಬೆಳಗಾವಿ ಮೂಲದವನಾಗಿದ್ದರೂ ಪುಣೆಯಲ್ಲಿ ಕೆಲಸ ಮಾಡುತ್ತಿದ್ದ. ಅಲ್ಲಿಯೇ ಸ್ನೇಹಾ ಜೊತೆಗೆ ಪ್ರೇಮ ಸಂಬಂಧ ಬೆಳೆಸಿದ್ದ. ಆತನಿಗೆ ಈಗಾಗಲೇ ಮದುವೆಯಾಗಿದ್ದು, ಒಂದು ಮಗು ಕೂಡ ಇದೆ. ಕೊಲೆ ಮಾಡುವ ಉದ್ದೇಶದಿಂದಲೇ ಬೆಳಗಾವಿಗೆ ಬಂದು ನೆಲೆಸಿದ್ದ’ ಎಂದೂ ಡಿಸಿಪಿ ರವೀಂದ್ರ ಗಡಾದಿ ತಿಳಿಸಿದರು.
Health Tips :ಮೊಸರು ಸೇವನೆಯಿಂದ ಸಿಗಲಿದೆ ಈ ಆರು ಪ್ರಯೋಜನಗಳು
ಅಪರಾಧ
Bantwal-ಬಂಟ್ವಾಳ: 17 ವರ್ಷಗಳಿಂದ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿದ್ದ ಆರೋಪಿ ಅರೆಸ್ಟ್..!
ಸುಮಾರು 17 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ, ವಾರೆಂಟ್ ಜಾರಿಯಾಗಿದ್ದ ಆರೋಪಿ ಬಂಟ್ವಾಳದ ತಲಪಾಡಿ ನಿವಾಸಿ ಹನೀಫ್ ಅಲಿಯಾಸ್ ಕೊಕ್ಕಡ ಹನೀಫ್ (57)ನನ್ನು ಬಂಟ್ವಾಳ ನಗರ ಪೊಲೀಸರು ಬಂಧಿಸಿದ್ದಾರೆ.
ಬಂಟ್ವಾಳ: ಸುಮಾರು 17 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ, ವಾರೆಂಟ್ ಜಾರಿಯಾಗಿದ್ದ ಆರೋಪಿ ಬಂಟ್ವಾಳದ ತಲಪಾಡಿ ನಿವಾಸಿ ಹನೀಫ್ ಅಲಿಯಾಸ್ ಕೊಕ್ಕಡ ಹನೀಫ್ (57)ನನ್ನು ಬಂಟ್ವಾಳ ನಗರ ಪೊಲೀಸರು ಬಂಧಿಸಿದ್ದಾರೆ.
2009ರಲ್ಲಿ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಕರ್ನಾಟಕ ಅಬಕಾರಿ ಕಾಯ್ದೆಯ ವಿವಿಧ ಕಲಂಗಳಡಿ ದಾಖಲಾಗಿದ್ದ ಪ್ರಕರಣದಲ್ಲಿ ಹನೀಫ್ ಆರೋಪಿಯಾಗಿದ್ದ. ಈ ಪ್ರಕರಣಕ್ಕೆ ಸಂಬಂಧಿಸಿ ಸುಮಾರು 17 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಎನ್ನಲಾಗಿದೆ.
ಇದಲ್ಲದೆ, 2023ರಲ್ಲಿ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಅ.ಕ್ರ 143/2023 ಕಲಂ 143,147, 448, 427, 436, 307, 149 IPC ಪ್ರಕರಣದಲ್ಲಿ ಆರೋಪಿಯಾಗಿದ್ದ ಆತನ ವಿರುದ್ಧ ವಾರೆಂಟ್ ಜಾರಿಯಾಗಿತ್ತು.
ಅಕ್ಟೋಬರ್ 9ರಂದು ಮೂಡುಬಿದಿರೆಯ ಶಿರ್ತಾಡಿ ಎಂಬಲ್ಲಿ ಬಂಟ್ವಾಳ ನಗರ ಠಾಣೆಯ ಎಎಸ್‌ಐ ಬಶೀರ್, ಹೆಡ್ ಕಾನ್‌ಸ್ಟೆಬಲ್‌ಗಳಾದ ಜಗದೀಶ್ ಮತ್ತು ಸಂತೋಷ್ ಹಾಗೂ ಪೊಲೀಸ್ ಕಾನ್‌ಸ್ಟೆಬಲ್ ಗವಿಸಿದ್ದಪ್ಪ ಅವರ ತಂಡ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಿದೆ.
ಅಂತರ ರಾಜ್ಯ
Arrested-ಕಾಸರಗೋಡು: ಮದುವೆಯ ನೆಪದಲ್ಲಿ ಹತ್ತಾರು ಯುವತಿಯರಿಗೆ ವಂಚನೆ: ಮದುವೆಯಾದ ಮೂರೇ ದಿನಕ್ಕೆ ಚಿನ್ನ, ಹಣದೊಂದಿಗೆ ಪರಾರಿ; ಆರೋಪಿ ಬಿಜು ಆಂಟನಿ ಬಂಧನ
ವೈದ್ಯ, ಎಂಜಿನಿಯರ್ ಎಂದು ಪರಿಚಯಿಸಿಕೊಂಡು ಮದುವೆಯಾಗುವುದಾಗಿ ನಂಬಿಸಿ ಹತ್ತಾರು ಯುವತಿಯರಿಗೆ ವಂಚಿಸಿ ಚಿನ್ನಾಭರಣ ಹಾಗೂ ಹಣದೊಂದಿಗೆ ಪರಾರಿಯಾಗುತ್ತಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಮಂಜೇಶ್ವರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಅತ್ಯಾಚಾರ ಪ್ರಕರಣ ಸೇರಿದಂತೆ ಹಲವು ವಂಚನೆ ಪ್ರಕರಣಗಳಿಗೆ ಸಂಬಂಧಿಸಿದಂತೆ ವಯನಾಡು ಜಿಲ್ಲೆಯ ಮಾನಂತವಾಡಿ, ವೆಳ್ಳರ, ಚೆನ್ನಿಕ್ಕರ ನಿವಾಸಿ ಬಿಜು ಆಂಟನಿ (45) ಬಂಧಿತ ಆರೋಪಿ.
ಕಾಸರಗೋಡು: ವೈದ್ಯ, ಎಂಜಿನಿಯರ್ ಎಂದು ಪರಿಚಯಿಸಿಕೊಂಡು ಮದುವೆಯಾಗುವುದಾಗಿ ನಂಬಿಸಿ ಹತ್ತಾರು ಯುವತಿಯರಿಗೆ ವಂಚಿಸಿ ಚಿನ್ನಾಭರಣ ಹಾಗೂ ಹಣದೊಂದಿಗೆ ಪರಾರಿಯಾಗುತ್ತಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಮಂಜೇಶ್ವರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಅತ್ಯಾಚಾರ ಪ್ರಕರಣ ಸೇರಿದಂತೆ ಹಲವು ವಂಚನೆ ಪ್ರಕರಣಗಳಿಗೆ ಸಂಬಂಧಿಸಿದಂತೆ ವಯನಾಡು ಜಿಲ್ಲೆಯ ಮಾನಂತವಾಡಿ, ವೆಳ್ಳರ, ಚೆನ್ನಿಕ್ಕರ ನಿವಾಸಿ ಬಿಜು ಆಂಟನಿ (45) ಬಂಧಿತ ಆರೋಪಿ.
ಚೇರ್ತಲ ಪೊಲೀಸರು ಆರೋಪಿಯನ್ನು ಬಂಧಿಸಿದ್ದು, ಸುಲ್ತಾನ್ ಬತ್ತೇರಿ ಮೂಲದ ಪತ್ನಿ ಮತ್ತು ಮಕ್ಕಳೊಂದಿಗೆ ವಾಸಿಸುತ್ತಿದ್ದ ವೇಳೆ ಆತ ಸಿಕ್ಕಿಬಿದ್ದಿದ್ದಾನೆ ಎಂದು ತಿಳಿದುಬಂದಿದೆ.
ವೈದ್ಯನೆಂದು ನಂಬಿಸಿ ಅತ್ಯಾಚಾರ ಆರೋಪ
ವೈದ್ಯನೆಂದು ಪರಿಚಯಿಸಿಕೊಂಡು ತಳಿಪರಂಬ ಮೂಲದ ಯುವತಿಯೊಬ್ಬಳನ್ನು ಮಂಜೇಶ್ವರದ ಹೊಸಂಗಡಿಯ ಲಾಡ್ಜ್‌ಗೆ ಕರೆದೊಯ್ದು ಅತ್ಯಾಚಾರ ಎಸಗಿದ ಆರೋಪ ಬಿಜು ಆಂಟನಿ ವಿರುದ್ಧವಿದೆ. ಈ ಸಂಬಂಧ ಮಂಜೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಯುವತಿಯಿಂದ ಮೂರೂವರೆ ಪವನ್ ಚಿನ್ನಾಭರಣವನ್ನೂ ಪಡೆದಿದ್ದಾನೆ ಎಂದು ಆರೋಪಿಸಲಾಗಿದೆ.
ಮದುವೆಯಾದ ಮೂರೇ ದಿನಕ್ಕೆ ಪರಾರಿ
ಆರೋಪಿ 2020ರಲ್ಲಿ ತನ್ನ ವಂಚನೆಯ ಜಾಲ ಆರಂಭಿಸಿದ್ದ ಎನ್ನಲಾಗಿದೆ. ಚೇರ್ತಲ ಸಮೀಪದ ನಿವಾಸಿ ರಮ್ಯಾ ಎಂಬ ಯುವತಿಯನ್ನು ರಾಜೇಶ್ ಎಂಬ ಹೆಸರಿನಲ್ಲಿ ಮದುವೆಯಾಗಿದ್ದ ಆತ, ಮದುವೆಯಾದ ಮೂರನೇ ದಿನವೇ ₹30 ಸಾವಿರ ನಗದು ಮತ್ತು ಏಳು ಪವನ್ ಚಿನ್ನಾಭರಣ ಪಡೆದುಕೊಂಡು ಪರಾರಿಯಾಗಿದ್ದಾನೆ ಎಂದು ಆರೋಪಿಸಲಾಗಿದೆ.
ಈ ಸಂಬಂಧ ರಮ್ಯಾ ನೀಡಿದ ದೂರಿನ ಮೇರೆಗೆ ಚೇರ್ತಲ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದರು. ಆದರೆ, ಆರೋಪಿಯನ್ನು ಪತ್ತೆಹಚ್ಚಲು ಸಾಧ್ಯವಾಗಿರಲಿಲ್ಲ. ಇದೀಗ ಸುಮಾರು ಆರು ವರ್ಷಗಳ ಬಳಿಕ ಅದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜು ಆಂಟನಿಯನ್ನು ಬಂಧಿಸಲಾಗಿದೆ.
ಬೇರೆ ಬೇರೆ ಹೆಸರುಗಳಲ್ಲಿ ವಂಚನೆ
ವೈದ್ಯನೆಂದು ಹೇಳಿಕೊಂಡು ಮದುವೆ ಜಾಹೀರಾತುಗಳನ್ನು ನೀಡುವ ಮೂಲಕ ಮಹಿಳೆಯರನ್ನು ಪರಿಚಯಿಸಿಕೊಳ್ಳುತ್ತಿದ್ದ ಆರೋಪಿ, ಬಳಿಕ ಮದುವೆಯಾಗುವುದಾಗಿ ನಂಬಿಸಿ ಅವರಿಂದ ಚಿನ್ನಾಭರಣ ಹಾಗೂ ಹಣ ಪಡೆದು ಪರಾರಿಯಾಗುತ್ತಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.
ವಿವಿಧ ಸ್ಥಳಗಳಲ್ಲಿ ಬೇರೆ ಬೇರೆ ಹೆಸರುಗಳನ್ನು ಬಳಸಿಕೊಂಡು ಮಹಿಳೆಯರಿಗೆ ವಂಚಿಸುತ್ತಿದ್ದ ಎಂಬುದು ಪೊಲೀಸ್ ತನಿಖೆಯಿಂದ ತಿಳಿದುಬಂದಿದೆ. ಆರೋಪಿಯ ವಿರುದ್ಧದ ಪ್ರಕರಣಗಳ ಕುರಿತು ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.
ಅಪರಾಧ
Puttur-ಪುತ್ತೂರು: ಅಕ್ರಮ ಗೋ ಸಾಗಾಟ ಪ್ರಕರಣ; ಪರಾರಿಯಾಗಿದ್ದ ಇಬ್ಬರು ವಶಕ್ಕೆ, ಆರೋಪಿ ಶಿವಪ್ರಸಾದ್ ಮನೆ ಮಹಜರು?
ಪಿಕಪ್ ವಾಹನದಲ್ಲಿ 11 ಜಾನುವಾರುಗಳನ್ನು ಹಿಂಸಾತ್ಮಕ ರೀತಿಯಲ್ಲಿ ತುಂಬಿಸಿ, ಅಗತ್ಯ ಪರವಾನಿಗೆ ಇಲ್ಲದೆ ಕೇರಳದ ಕಡೆಗೆ ಸಾಗಿಸುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿ, ಪೊಲೀಸ್ ಕಾರ್ಯಾಚರಣೆ ವೇಳೆ ಪರಾರಿಯಾಗಿದ್ದ ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಜಾನುವಾರುಗಳನ್ನು ಪರವಾನಿಗೆ ಇಲ್ಲದೆ ಮಾರಾಟ ಮಾಡಿದ ಆರೋಪದ ಮೇಲೆ ಬಂಧಿತನಾಗಿರುವ ಆರ್ಯಾಪು ನಿವಾಸಿ ಶಿವಪ್ರಸಾದ್‌ಗೆ ಸೇರಿದ ದೇವಸ್ಯದಲ್ಲಿರುವ ಮನೆಯನ್ನು ಪೊಲೀಸರು ಮಹಜರು ನಡೆಸಲಿದ್ದಾರೆ ಎಂದು ತಿಳಿದುಬಂದಿದೆ.
ಪುತ್ತೂರು: ಪಿಕಪ್ ವಾಹನದಲ್ಲಿ 11 ಜಾನುವಾರುಗಳನ್ನು ಹಿಂಸಾತ್ಮಕ ರೀತಿಯಲ್ಲಿ ತುಂಬಿಸಿ, ಅಗತ್ಯ ಪರವಾನಿಗೆ ಇಲ್ಲದೆ ಕೇರಳದ ಕಡೆಗೆ ಸಾಗಿಸುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿ, ಪೊಲೀಸ್ ಕಾರ್ಯಾಚರಣೆ ವೇಳೆ ಪರಾರಿಯಾಗಿದ್ದ ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಜಾನುವಾರುಗಳನ್ನು ಪರವಾನಿಗೆ ಇಲ್ಲದೆ ಮಾರಾಟ ಮಾಡಿದ ಆರೋಪದ ಮೇಲೆ ಬಂಧಿತನಾಗಿರುವ ಆರ್ಯಾಪು ನಿವಾಸಿ ಶಿವಪ್ರಸಾದ್‌ಗೆ ಸೇರಿದ ದೇವಸ್ಯದಲ್ಲಿರುವ ಮನೆಯನ್ನು ಪೊಲೀಸರು ಮಹಜರು ನಡೆಸಿದ್ದಾರೆ ಎಂದು ಹೇಳಲಾಗುತ್ತಿದೆ. ಆದರೇ ಪೊಲೀಸ್ ಇಲಾಖೆ ಅದನ್ನು ಖಚಿತ ಪಡಿಸಿಲ್ಲ.
ಬಲ್ನಾಡಿನಲ್ಲಿ 11 ಜಾನುವಾರುಗಳ ರಕ್ಷಣೆ
ಕೇರಳದ ಕಡೆಗೆ ಅಕ್ರಮವಾಗಿ ಜಾನುವಾರುಗಳನ್ನು ಸಾಗಿಸಲಾಗುತ್ತಿದೆ ಎಂಬ ಮಾಹಿತಿ ಮೇರೆಗೆ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯ ಉಪನಿರೀಕ್ಷಕಿ ಸುಷ್ಮಾ ಭಂಡಾರಿ ಅವರು ಸಿಬ್ಬಂದಿಯೊಂದಿಗೆ ಬಲ್ನಾಡು ಗ್ರಾಮದ ಬೆಳೆಯೂರುಕಟ್ಟೆ ಬಳಿ ಕಾರ್ಯಾಚರಣೆ ನಡೆಸಿದ್ದರು.
ಈ ವೇಳೆ ಪಿಕಪ್ ವಾಹನವನ್ನು ತಡೆದು ಪರಿಶೀಲಿಸಿದಾಗ, ವಾಹನದೊಳಗೆ 11 ಜಾನುವಾರುಗಳನ್ನು ಹಿಂಸಾತ್ಮಕ ರೀತಿಯಲ್ಲಿ ತುಂಬಿಸಿರುವುದು ಪತ್ತೆಯಾಗಿತ್ತು. ಪೊಲೀಸರು ವಾಹನವನ್ನು ತಡೆದ ಸಂದರ್ಭದಲ್ಲಿ ಚಾಲಕ ಹಾಗೂ ಮತ್ತೋರ್ವ ವ್ಯಕ್ತಿ ಸ್ಥಳದಿಂದ ಪರಾರಿಯಾಗಿದ್ದರು.
ಜಾನುವಾರುಗಳನ್ನು ಅಗತ್ಯ ಪರವಾನಿಗೆ ಇಲ್ಲದೆ ಮಾಂಸಕ್ಕಾಗಿ ಮಾರಾಟ ಮಾಡುವ ಉದ್ದೇಶದಿಂದ ಕೇರಳದ ಕಡೆಗೆ ಸಾಗಿಸಲಾಗುತ್ತಿತ್ತು ಎಂಬ ಆರೋಪದ ಮೇರೆಗೆ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಪರಾರಿಯಾಗಿದ್ದ ಇಬ್ಬರು ವಶಕ್ಕೆ
ಪ್ರಕರಣದ ತನಿಖೆ ಮುಂದುವರಿಸಿದ ಪೊಲೀಸರು, ಅಗತ್ಯ ಪರವಾನಿಗೆ ಇಲ್ಲದೆ ಜಾನುವಾರುಗಳನ್ನು ಮಾರಾಟ ಮಾಡಿದ ಆರೋಪದ ಮೇಲೆ ಆರ್ಯಾಪು ನಿವಾಸಿ ಶಿವಪ್ರಸಾದ್‌ನನ್ನು ಬಂಧಿಸಿದ್ದರು. ಬಳಿಕ ಪರಾರಿಯಾಗಿದ್ದ ಪಿಕಪ್ ಚಾಲಕ ಹಾಗೂ ಮತ್ತೋರ್ವ ಆರೋಪಿಯ ಪತ್ತೆಗಾಗಿ ಕಾರ್ಯಾಚರಣೆ ಮುಂದುವರಿಸಿದ್ದರು.
ಇದೀಗ ಸರೋಳಿ ನಿವಾಸಿ ಇಸ್ಮಾಯಿಲ್ ಅವರ ಪುತ್ರ ಹಸ್ಪರ್ ಅಲಿಯಾಸ್ ಅಮ್ಮಿ ಹಾಗೂ ಕದಿಲ ಗ್ರಾಮದ ಸತ್ತಿಕಲು ನಿವಾಸಿ ಅಬ್ಬಾಸ್ ಅವರ ಪುತ್ರ ಇಬ್ರಾಹಿಂ ಮಾಡಲಾ ಎಂಬಿಬ್ಬರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಜಾನುವಾರುಗಳನ್ನು ಪರವಾನಿಗೆ ಇಲ್ಲದೆ ಮಾರಾಟ ಮಾಡಿದ ಆರೋಪ ಎದುರಿಸುತ್ತಿರುವ ಶಿವಪ್ರಸಾದ್‌ಗೆ ಸೇರಿದ ಆರ್ಯಾಪು ಗ್ರಾಮದ ದೇವಸ್ಯದಲ್ಲಿರುವ ಮನೆಯನ್ನು ಪೊಲೀಸರು ಮಹಜರು ನಡೆಸಿದ್ದಾರೆ ಎಂದು ಮೂಲಗಳಿಂದ ತಿಳಿದುಬಂದಿದ್ದು ಸೀಜ್ ಮಾಡುವ ಅಧಿಕೃತ ಪ್ರಕ್ರಿಯೆ ಸಹಾಯಕ ಆಯುಕ್ತರ ಆದೇಶದ ಬಳಿಕ ನಡೆಯಲಿದೆ ಎಂದು ತಿಳಿದು ಬಂದಿದೆ. ಪ್ರಕರಣದ ಕುರಿತು ಹೆಚ್ಚಿನ ತನಿಖೆ ಮುಂದುವರಿದಿದೆ.


















