ಬಿಗ್ ನ್ಯೂಸ್
ರಾಜ್ಯ ಸರಕಾರದಿಂದ ಹೊಸ ಮರಳು ನೀತಿ ಪ್ರಕಟ – ಕಡಿಮೆ ದರದಲ್ಲಿ ಜನಸಾಮಾನ್ಯರಿಗೂ ಮರಳು ಲಭ್ಯ | ದ.ಕ. ದಲ್ಲಿ ಯಾಂತ್ರಿಕ ಮರಳುಗಾರಿಕೆಗೆ ನಿಷೇಧ- ಇನ್ನಾದರೂ ಬೀಳುವುದೆ ಅಕ್ರಮಕ್ಕೆ ಕಡಿವಾಣ? ಹೊಸ ನೀತಿಯ ಸಂಪೂರ್ಣ ವಿವರ ಇಲ್ಲಿದೆ
ನ : 9 : ಕರ್ನಾಟಕ ರಾಜ್ಯ ಸರ್ಕಾರವೂ ಜನ ಸಾಮನ್ಯರಿಗೆ ಕಡಿಮೆ ದರದಲ್ಲಿ ಕೈಗೆಟುಕುವ ದರದಲ್ಲಿ ಮರಳು ಸಿಗಲು ಅನುಕೂಲವಾಗುವಂತೆ ಹೊಸ ಮರಳು ನೀತಿ ಜಾರಿಗೆ ತಂದಿದೆ. ನ .8 ರಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯೂ ‘ಕರ್ನಾಟಕ ಉಪಖನಿಜ ರಿಯಾಯಿತಿ (ತಿದ್ದುಪಡಿ) ನಿಯಮ 2021’ ಕ್ಕೆ ಅನುಮೋದನೆ ನೀಡಿದೆ.
ಸಚಿವ ಸಂಪುಟ ಸಭೆಯ ಬಳಿಕ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ.ಮಾಧುಸ್ವಾಮಿ ಸುದ್ದಿಗೋಷ್ಠಿ ನಡೆಸಿ ರಾಜ್ಯದಲ್ಲಿ ಹೊಸ ಮರಳು ನೀತಿ ಜಾರಿಯಾಗಿರುವುದರಿಂದ ಇನ್ನು ಮುಂದೆ ಕಡಿಮೆ ದರದಲ್ಲಿ ಜನಸಾಮಾನ್ಯರಿಗೂ ಮರಳು ಲಭ್ಯವಾಗಲಿದೆ ಎಂದರು
ಮರಳು ಗಣಿಗಾರಿಕೆ ಮಾಡಿ ಅದರ ಸಾಗಣೆಗಾಗಿ ಮೂರು ಹಂತಗಳನ್ನು ರೂಪಿಸಲಾಗಿದೆ. ಗ್ರಾಮ ಮಟ್ಟ, ನದಿ ಪಾತ್ರ ಮತ್ತು ಸಮುದ್ರ ತೀರ ಎಂದು ಮೂರು ಹಂತಗಳನ್ನು ನಿಗದಿಪಡಿಸಲಾಗಿದೆ. ಗ್ರಾಮ ಮಟ್ಟದಲ್ಲಿ ಮಾರಲು ಪ್ರತಿ ಟನ್‌ಗೆ ₹300, ನದಿ ಸೇರುವ ಪಾತ್ರಗಳು ಮತ್ತು ಪಟ್ಟಣಗಳಿಗೆ ಟನ್‌ಗೆ ₹700 ನಿಗದಿ ಮಾಡಲಾಗಿದೆ ಎಂದರು.
ಗ್ರಾಮಪಂಚಾಯ್ತಿ ಮಟ್ಟದಲ್ಲಿ ಮರಳು ಶೇಖರಣೆ ಮಾಡಿ ಮಾರಾಟ ಮಾಡಲು ಅವಕಾಶವಿದೆ. ಜತೆಗೆ ಗ್ರಾಮ ಪಂಚಾಯಿತಿಗಳಿಗೆ ಜಿಲ್ಲಾ ಖನಿಜ ಟ್ರಸ್‌ನಿಂದ ಶೇ 2 ರಷ್ಟು ನಿಧಿ ನೀಡಲು ಅವಕಾಶವನ್ನು ಕಲ್ಪಿಸಲಾಗಿದೆ. ಸರ್ಕಾರಕ್ಕೆ ಬರುವ ಶೇ 50 ರಷ್ಟು ರಾಯಲ್ಟಿಯಲ್ಲಿ ಶೇ 25 ಆಯಾ ಪಂಚಾಯಿತಿಗಳಿಗೆ ನೀಡಲಾಗುವುದು. ಸರ್ಕಾರದ ವಸತಿ ಯೋಜನೆಯೂ ಸೇರಿದಂತೆ ವಿವಿಧ ಯೋಜನೆಗಳು ಮತ್ತು ಬಡವರಿಗೆ ರಿಯಾಯ್ತಿ ದರದಲ್ಲಿ ಮರಳು ನೀಡುವ ಅಧಿಕಾರವನ್ನು ಆಯಾ ಗ್ರಾಮ ಪಂಚಾಯಿತಿಗಳಿಗೇ ನೀಡಲಾಗಿದೆ ಎಂದು ಹೇಳಿದರು.

ದಕ್ಷಿಣ ಕನ್ನಡದಲ್ಲಿ ಹೇಗೆ ?
ಕರಾವಳಿ ತೀರ ಪ್ರದೇಶದಲ್ಲಿ ಯಂತ್ರಗಳನ್ನು ಬಳಸಿ ಮರಳುಗಾರಿಕೆ ನಡೆಸುವುದು ಪರಿಸರಕ್ಕೆ ಹಾನಿಕರ ಎಂಬ ಹಿನ್ನೆಲೆಯಲ್ಲಿ ಸಂಪ್ರದಾಯದಂತೆ ಮಾನವರ ಮೂಲಕವೇ ಮರಳು ತೆಗೆಯುವುದನ್ನು ಮುಂದುವರೆಸಲು ತೀರ್ಮಾನಿಸಲಾಗಿದೆ
“ದಕ್ಷಿಣ ಕನ್ನಡದಲ್ಲಿ ಪರಂಪರಾಗತವಾಗಿ ನದಿಯಲ್ಲಿ ಮುಳುಗಿ ಮರಳು ತೆಗೆಯುವುದಕ್ಕೂ ಅವಕಾಶ ನೀಡಲಾಗಿದೆ. ಆದರೆ, ಇದಕ್ಕೆ ಯಾವುದೇ ರೀತಿಯ ಯಂತ್ರಗಳನ್ನು ಬಳಸುವಂತಿಲ್ಲ. ಸ್ಥಳೀಯರು ತಮ್ಮ ಮನೆಗಳನ್ನು ಕಟ್ಟಿಕೊಳ್ಳಲು ಈ ರೀತಿಯಲ್ಲಿ ಮರಳು ತೆಗೆಯಬಹುದಾಗಿದೆ. ಪರಿಸರಕ್ಕೆ ಹಾನಿಯಾಗುವಂತೆ ಮರಳು ತೆಗೆಯುವುದಕ್ಕೆ ಅವಕಾಶವಿಲ್ಲ” ಎಂದೂ ಅವರು ಸ್ಪಷ್ಟಪಡಿಸಿದರು.
* ಜಿಲ್ಲಾ ಮಟ್ಟದಲ್ಲಿ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಮತ್ತು ತಾಲ್ಲೂಕು ಮಟ್ಟದಲ್ಲಿ ಉಪವಿಭಾಗಾಧಿಕಾರಿಗಳ ಅಧ್ಯಕ್ಷತೆಯಲ್ಲಿ ‘ಮರಳು ಸಮಿತಿ’ಗಳ ರಚನೆ.
* ಮರಳು ಗಣಿಗಾರಿಕೆ ಮತ್ತು ಸಾಗಣೆಯ ಉಸ್ತುವಾರಿಯನ್ನು ಈ ಸಮಿತಿಗಳು ಮೇಲುಸ್ತುವಾರಿ ವಹಿಸಲಿವೆ. ಯಾವುದೇ ನಿಯಮಗಳ ಉಲ್ಲಂಘನೆ ಮಾಡಿದಲ್ಲಿ ದಂಡಿಸುವ ಅಧಿಕಾರ ನೀಡಲಾಗಿದೆ.
* ಸ್ವಂತ ಬಳಕೆಗಾಗಿ ಟ್ರ್ಯಾಕ್ಟರ್, ಎತ್ತಿನ ಬಂಡಿ, ದ್ವಿಚಕ್ರವಾಹನಗಳಲ್ಲಿ ಮರಳು ಸಾಗಣೆ ಮಾಡಿದರೆ ಪ್ರಕರಣ ದಾಖಲಿಸುವುದಿಲ್ಲ. ಆದರೆ, ಬೇರೆ ಜಿಲ್ಲೆಗಳಿಗೆ ಸಾಗಣೆ ಮಾಡುವಂತಿಲ್ಲ. ಒಂದು ವೇಳೆ ಸಾಗಣಿಕೆ ಮಾಡಿದರೆ ಪ್ರಕರಣ ದಾಖಲಿಸಲಾಗುವುದು.
* ದ್ವಿಚಕ್ರ ವಾಹನ, ಎತ್ತಿನಗಾಡಿ, ಟ್ರ್ಯಾಕ್ಟರ್, ಕತ್ತೆ ಮೇಲೆ ಮರಳು ಕೊಂಡೊಯ್ಯವ ರೈತರು ಮತ್ತು ಬಡವರಿಗೆ ರಾಯಧನದ ವಿನಾಯಿತಿ ನೀಡಲಾಗುವುದು.
*ಪಟ್ಟಾ ಭೂಮಿಯಲ್ಲಿ ಮರಳು ಗಣಿಗಾರಿಕೆ ನಿಷೇಧಿಸಲಾಗಿದ್ದರೂ, ಜಿಲ್ಲಾ ಮತ್ತು ತಾಲ್ಲೂಕು ಮರಳು ಸಮಿತಿಗಳಿಂದ ಅನಮತಿ ಪಡೆಯುವುದು ಕಡ್ಡಾಯ. ಇದಕ್ಕೆ ಸಮಿತಿಗಳು ಸಮಜಾಯಿಷಿ ನೀಡಬೇಕು.
* ಕೇಂದ್ರ ಪರಿಸರ ಮತ್ತು ಅರಣ್ಯ ಇಲಾಖೆಯು ಗಣಿಗಾರಿಕೆ ಸಂಬಂಧ ಹೊರಡಿಸಿರುವ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು.

ಪಾರದರ್ಶಕ ಟೆಂಡರ್‌ಗೆ ನ್ಯಾಯಮೂರ್ತಿ ಅಧ್ಯಕ್ಷತೆಯ ಸಮಿತಿ
ರಾಜ್ಯ ಸರ್ಕಾರದ ವಿವಿಧ ಇಲಾಖೆಗಳಲ್ಲಿ ₹50 ಕೋಟಿಗೂ ಮೇಲ್ಪಟ್ಟ ಟೆಂಡರ್‌ಗಳು ಮತ್ತು ಅವುಗಳ ಅಂದಾಜುಗಳ ಪೂರ್ವ ಪರಿಶೀಲನೆ ನಡೆಸಿ ಒಪ್ಪಿಗೆ ನೀಡಲು ಹೈಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ಅಧ್ಯಕ್ಷತೆಯಲ್ಲಿ ತಜ್ಞರನ್ನು ಒಳಗೊಂಡ ಸಮಿತಿಯನ್ನು ರಚಿಸಲು ಸರ್ಕಾರ ನಿರ್ಧರಿಸಿದೆ.
ಟೆಂಡರ್ ಪ್ರಕ್ರಿಯೆಯಲ್ಲಿ ಇನ್ನಷ್ಟು ಪಾರದರ್ಶಕತೆ ತರಲು ಮತ್ತು ಅಕ್ರಮಗಳನ್ನು ತಡೆಯುವ ಉದ್ದೇಶದಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ. ವಿವಿಧ ನಿರ್ಮಾಣ ಕಾಮಗಾರಿಗಳು, ಸರಕು ಮತ್ತು ಸೇವೆಗಳ ಸಂಗ್ರಹಣೆಯ ಟೆಂಡರ್ ಹಾಗೂ ಅಂದಾಜುಗಳನ್ನು ನ್ಯಾಯಮೂರ್ತಿ ಅಧ್ಯಕ್ಷತೆಯ ಸಮಿತಿಯೇ ಪರಿಶೀಲಿಸಿ ಅಂತಿಮಗೊಳಿಸುತ್ತದೆ. ಸಮಿತಿಯ ಒಪ್ಪಿಗೆಯ ಬಳಿಕ ಟೆಂಡರ್ ಪ್ರಕ್ರಿಯೆಗೆ ಚಾಲನೆ ನೀಡಲಾಗುವುದು ಎಂದು ಸಚಿವ ಮಾಧುಸ್ವಾಮಿ ತಿಳಿಸಿದರು.
‘ಕೆಲವು ಇಲಾಖೆಗಳಲ್ಲಿ ಇತ್ತೀಚಿನ ವರ್ಷಗಳಲ್ಲಿ ಕೆಲವೇ ಮಂದಿ ಮಾತ್ರ ಟೆಂಡರ್‌ಗಳಲ್ಲಿ ಪಾಲ್ಗೊಳ್ಳುತ್ತಾರೆ. ಟೆಂಡರ್ ಮೊತ್ತವೂ ಉತ್ಪ್ರೇಕ್ಷಿತವಾಗಿರುತ್ತದೆ. ಇದನ್ನು ಸರಿಪಡಿಸಲು ಹೆಚ್ಚು ಜನ ಟೆಂಡರ್‌ಗಳಲ್ಲಿ ಭಾಗವಹಿಸುವಂತಾಗಬೇಕು. ಪೂರ್ವ ಅನುಭವ, ಸಾಮರ್ಥ್ಯ ಒರೆಗೆ ಹಚ್ಚಲು ಸಮಿತಿಗೆ ಸಾಧ್ಯವಾಗುತ್ತದೆ. ಸಮಿತಿ ಪ್ರತಿಯೊಂದು ಟೆಂಡರ್‌ನ ಪೂರ್ವ ಪರಿಶೀಲನೆಯನ್ನು 15 ದಿನಗಳಲ್ಲಿ ನಡೆಸಿ ವರದಿ ನೀಡಬೇಕು. ಕಾರ್ಯ ಒತ್ತಡ ಹೆಚ್ಚಾದರೆ, ಇನ್ನೊಂದು ತಜ್ಞರ ಸಮಿತಿಯನ್ನು ರಚಿಸಲೂ ಅವಕಾಶವಿದೆ ಎಂದರು.
ಅಕ್ರಮಕ್ಕೆ ಕಡಿವಾಣ:
ರಾಜ್ಯದಲ್ಲಿ ಮರಳುಗಾರಿಕೆಯಲ್ಲಿ ಮಾಫಿಯಾಕೋರರದೆ ಸಾಮ್ರಾಜ್ಯ ಎಂಬಲ್ಲಿಗೆ ಪರಿಸ್ಥಿತಿ ಬಂದು ತಲುಪಿದೆ. ಅಕ್ರಮ ದಂಧೆಕೋರರು, ರಾಜಕಾರಣಿಗಳು, ಕಂದಾಯ, ಪೊಲಿಸ್, ಗಣಿ ಇಲಾಖೆಯ ಅಧಿಕಾರಿಗಳು ಒಟ್ಟಾಗಿ ಈ ಮಾಫಿಯಾದ ಭಾಗವಾಗಿದ್ದಾರೆ. ಹೀಗಾಗಿ ಸಕ್ರಮ ಮರಳುಗಾರಿಕೆ ಶೇ 10ರಷ್ಟು ನಡೆದರೆ 90% ಮರಳುಗಾರಿಕೆ ಅಕ್ರಮವಾಗಿ ಸಂಬಂಧ ಪಟ್ಟವರಿಗೆ ಮಾಮೂಲಿ ನೀಡಿ ನಡೆಸಲಾಗುತ್ತದೆ. ಈ ಹೊಸ ನೀತಿಯ ಬಳಿಕವಾದರೂ ಈ ಅಕ್ರಮಕ್ಕೆ ಕಡಿವಾಣ ಬೀಳುವುದೆ ಎಂದು ಕಾದು ನೋಡಬೇಕಿದೆ
ಮಂಗಳೂರು
Mulki-ಮೂಲ್ಕಿ: ಚಲಿಸುತ್ತಿದ್ದ ಮಂಗಳೂರು – ಕಾರ್ಕಳ ಎಕ್ಸ್ ಪ್ರೆಸ್ ಬಸ್‌ಗೆ ಬಡಿದ ಗಿಡುಗ: ಗಾಜು ಪುಡಿಪುಡಿ, ಪುತ್ತೂರು ಮೂಲದ ಚಾಲಕನ ಸಮಯಪ್ರಜ್ಞೆಯಿಂದ ತಪ್ಪಿದ ಭಾರಿ ಅವಘಡ
ಮೂಲ್ಕಿ ಸಮೀಪದ ಹಳೆಯಂಗಡಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಚಲಿಸುತ್ತಿದ್ದ ಮಂಗಳೂರು- ಕಾರ್ಕಳ ಎಕ್ಸ್‌ಪ್ರೆಸ್ ಬಸ್‌ನ ಮುಂಭಾಗದ ಗಾಜಿಗೆ ಗಿಡುಗವೊಂದು ಬಡಿದ ಪರಿಣಾಮ ಗಾಜು ಪುಡಿಪುಡಿಯಾದ ಘಟನೆ ನಡೆದಿದೆ. ಘಟನೆಯಲ್ಲಿ ಒಬ್ಬರಿಗೆ ಗಾಯವಾಗಿದೆ ಎಂದು ತಿಳಿದುಬಂದಿದೆ.
ಮಂಗಳೂರು: ಮೂಲ್ಕಿ ಸಮೀಪದ ಹಳೆಯಂಗಡಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಚಲಿಸುತ್ತಿದ್ದ ಮಂಗಳೂರು- ಕಾರ್ಕಳ ಎಕ್ಸ್‌ಪ್ರೆಸ್ ಬಸ್‌ನ ಮುಂಭಾಗದ ಗಾಜಿಗೆ ಗಿಡುಗವೊಂದು ಬಡಿದ ಪರಿಣಾಮ ಗಾಜು ಪುಡಿಪುಡಿಯಾದ ಘಟನೆ ನಡೆದಿದೆ. ಘಟನೆಯಲ್ಲಿ ಒಬ್ಬರಿಗೆ ಗಾಯವಾಗಿದೆ ಎಂದು ತಿಳಿದುಬಂದಿದೆ.
ಲಕ್ಷ್ಮಿ ಗಣೇಶ್ ಹೆಸರಿನ ಎಕ್ಸ್‌ಪ್ರೆಸ್ ಬಸ್ ಸಂಚರಿಸುತ್ತಿದ್ದ ವೇಳೆ ಏಕಾಏಕಿ ಗಿಡುಗ ಬಸ್‌ನ ಮುಂಭಾಗದ ಗಾಜಿಗೆ ಬಡಿದಿದೆ. ಇದರಿಂದ ಗಾಜು ಒಡೆದು ಚೂರುಚೂರಾಗಿದೆ.
ಘಟನೆಯಿಂದ ಪ್ರಯಾಣಿಕರಲ್ಲಿ ಆತಂಕದ ವಾತಾವರಣ ನಿರ್ಮಾಣವಾದರೂ, ಚಾಲಕ ಹರೀಶ್ ಪೂಜಾರಿ ಅವರು ವಿಚಲಿತರಾಗದೆ ಸಮಯಪ್ರಜ್ಞೆಯಿಂದ ಬಸ್ ನಿಲ್ಲಿಸಿದ್ದಾರೆ. ಅವರ ಈ ನಡೆಗೆ ಸಾರ್ವಜನಿಕರಿಂದ ಮೆಚ್ಚುಗೆ ವ್ಯಕ್ತವಾಗಿದೆ.
ಬಸ್ ಚಾಲಕ ಪುತ್ತೂರಿನ ಸಂಟ್ಯಾರು ಕೂರೇಲು ನಿವಾಸಿ ಹರೀಶ್ ಪೂಜಾರಿ ಮೇಲೆ ಗಾಜಿನ ಚೂರುಗಳು ಬಿದ್ದು ಗಾಯಗೊಂಡಿದ್ದರು ಅವರು ವೇಗವಾಗಿ ಹೋಗುತ್ತಿದ್ದ ಬಸ್ ನ್ನು ತಕ್ಷಣ ನಿಯಂತ್ರಿಸಿದ್ದಾರೆ. ಅವಘಡ ಸಂದರ್ಭ ಡ್ರೈವರ್ ಸ್ಟೇರೀಂಗ್ ಕೈಬಿಟ್ಟದ್ದರೂ ಬಸ್ ಡಿವೈಡರ್ ಹಾರಿ ಭಾರೀ ಅವಘಡ ಸಂಭವಿಸುತ್ತಿತ್ತು ಎನ್ನಲಾಗಿದೆ.
ಮಂಗಳೂರು
Ujire-ಭಾರೀ ಜನಸ್ತೋಮದೊಂದಿಗೆ ಸೌಜನ್ಯ ನ್ಯಾಯದ ನಡಿಗೆ
ಧರ್ಮಸ್ಥಳದ ಸೌಜನ್ಯ ಪ್ರಕರಣದ ಮರುತನಿಖೆಗೆ ಆಗ್ರಹಿಸಿ ಸೌಜನ್ಯ ಪರ ಹೋರಾಟಗಾರರು ಉಜಿರೆಯಿಂದ ಬೆಳ್ತಂಗಡಿವರೆಗೆ ನ್ಯಾಯದ ನಡಿಗೆ ಹಮ್ಮಿಕೊಂಡಿದ್ದಾರೆ.

ಮಂಗಳೂರು: ಧರ್ಮಸ್ಥಳದ ಸೌಜನ್ಯ ಪ್ರಕರಣದ ಮರುತನಿಖೆಗೆ ಆಗ್ರಹಿಸಿ ಸೌಜನ್ಯ ಪರ ಹೋರಾಟಗಾರರು ಉಜಿರೆಯಿಂದ ಬೆಳ್ತಂಗಡಿವರೆಗೆ ನ್ಯಾಯದ ನಡಿಗೆ ಹಮ್ಮಿಕೊಂಡಿದ್ದಾರೆ.
ಉಜಿರೆಯಿಂದ ಆರಂಭವಾದ ಬೃಹತ್ ಜಾಥಾದಲ್ಲಿ ಸಾವಿರಾರು ಸಂಖ್ಯೆಯಲ್ಲಿ ಜನರು ಭಾಗವಹಿಸಿದ್ದು, ಮೌನ ಮೆರವಣಿಗೆಯ ಮೂಲಕ ಸೌಜನ್ಯಳಿಗೆ ನ್ಯಾಯ ದೊರಕಿಸಿಕೊಡಬೇಕೆಂದು ಆಗ್ರಹಿಸಲಾಯಿತು. ಸುಮಾರು ಐದು ಕಿಲೋಮೀಟರ್ ದೂರದವರೆಗೆ ಹೋರಾಟಗಾರರು ನಡಿಗೆಯಲ್ಲಿ ಸಾಗಲಿದ್ದಾರೆ.
ನ್ಯಾಯದ ನಡಿಗೆಯ ಬಳಿಕ ಬೆಳ್ತಂಗಡಿಯ ಮೈದಾನದಲ್ಲಿ ಬೃಹತ್ ಅಭಿನಂದನಾ ಸಮಾವೇಶ ನಡೆಯಲಿದೆ. ಸೌಜನ್ಯ ಪರವಾಗಿ ಸುಪ್ರೀಂ ಕೋರ್ಟ್ ಮತ್ತು ಹೈಕೋರ್ಟ್‌ನಲ್ಲಿ ವಾದ ಮಂಡಿಸಿದ ವಕೀಲರ ತಂಡಕ್ಕೆ ಈ ಸಂದರ್ಭದಲ್ಲಿ ಅಭಿನಂದನೆ ಸಲ್ಲಿಸಲಾಗುತ್ತದೆ. ಕಾರ್ಯಕ್ರಮದಲ್ಲಿ ವಕೀಲರು ಸೇರಿದಂತೆ ಹಲವು ಗಣ್ಯರು ಭಾಗವಹಿಸಲಿದ್ದಾರೆ ಎಂದು ತಿಳಿದುಬಂದಿದೆ.
ಅಂತರ ರಾಜ್ಯ
Jantar Mantar-ಸಿಜೆಪಿ ಪ್ರತಿಭಟನೆಗೆ ದೆಹಲಿಯಲ್ಲಿ ಬಿಗಿ ಭದ್ರತೆ – ಪಂಚರ್ ಆಗಲು ರಸ್ತೆಗಳಿಗೆ ತಡೆಬೇಲಿ..! ವಿಮಾನದಲ್ಲೇ ಅಭಿಜಿತ್ ದಿಪ್ಕೆ ಪೊಲೀಸ್ ವಶಕ್ಕೆ..! ಸಾವಿರಕ್ಕೂ ಮಿಕ್ಕಿ ಪ್ರತಿಭಟನಾಕಾರರೂ ವಶಕ್ಕೆ-ಸುಪ್ರೀಂ ಕೋರ್ಟ್ ವಕೀಲರಿಗೆ ತಡೆ..! ತೀವ್ರ ಅಡೆತಡೆಗಳ ನಡುವೆ ಜಂತರ್ ಮಂತರ್ ಗೆ ಹರಿದು ಬರುತ್ತಿರುವ ಜನಸಾಗರ
ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಿರುದ್ಧ ಕಾಕ್‌ರೋಚ್ ಜನತಾ ಪಾರ್ಟಿ (ಸಿಜೆಪಿ) ಕರೆ ನೀಡಿರುವ ಪ್ರತಿಭಟನೆಯ ಹಿನ್ನೆಲೆಯಲ್ಲಿ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಬಿಗಿ ಭದ್ರತಾ ವ್ಯವಸ್ಥೆ ಕೈಗೊಳ್ಳಲಾಗಿದೆ. ನಗರದ ವಿವಿಧೆಡೆ ಹಾಗೂ ಗಡಿ ಪ್ರದೇಶಗಳಲ್ಲಿ ಈಗಾಗಲೇ ಸಾವಿರಕ್ಕೂ ಹೆಚ್ಚು ಪ್ರತಿಭಟನಾಕಾರರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಿರುದ್ಧ ಕಾಕ್‌ರೋಚ್ ಜನತಾ ಪಾರ್ಟಿ (ಸಿಜೆಪಿ) ಕರೆ ನೀಡಿರುವ ಪ್ರತಿಭಟನೆಯ ಹಿನ್ನೆಲೆಯಲ್ಲಿ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಬಿಗಿ ಭದ್ರತಾ ವ್ಯವಸ್ಥೆ ಕೈಗೊಳ್ಳಲಾಗಿದೆ. ನಗರದ ವಿವಿಧೆಡೆ ಹಾಗೂ ಗಡಿ ಪ್ರದೇಶಗಳಲ್ಲಿ ಈಗಾಗಲೇ ಸಾವಿರಕ್ಕೂ ಹೆಚ್ಚು ಪ್ರತಿಭಟನಾಕಾರರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ದೆಹಲಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಿಮಾನದೊಳಗೆ ಪ್ರವೇಶಿಸಿದ ಪೊಲೀಸರು ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಜಂತರ್ ಮಂತರ್ ನಲ್ಲಿ ಕ್ಷಣ ಕ್ಷಣ ಪ್ರತಿಭಟಕಾರರ ಸಂಖ್ಯೆ ಭಾರಿ ಏರುತ್ತಿದೆ.
ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಒತ್ತಾಯಿಸಿ ಜಂತರ್ ಮಂತರ್ ಗೆ ಆಗಮಿಸಿದ ನೂರಾರು ಸುಪ್ರೀಂ ಕೋರ್ಟಿನ ವಕೀಲರನ್ನು ಪೊಲೀಸರು ತಡೆಹಿಡಿದಿದ್ದಾರೆ ಎಂದು ವರದಿಯಾಗಿದೆ.
ನೋಯ್ಡಾ–ದೆಹಲಿ ಗಡಿ ಸೇರಿದಂತೆ ನಗರದ ವಿವಿಧ ಭಾಗಗಳಲ್ಲಿ ಪ್ರತಿಭಟನಾಕಾರರನ್ನು ಬಸ್‌ಗಳಲ್ಲಿ ಕರೆದೊಯ್ದು ವಶಕ್ಕೆ ಪಡೆಯಲಾಗಿದೆ. ಇನ್ನೂ ಟಯರ್ ಪಂಚರ್ ಆಗುವ ಕಬ್ಬಿಣದ ಬೇಲಿಯನ್ನು ಪೊಲೀಸರು ರಸ್ತೆಗಳಲ್ಲಿ ಇಟ್ಟಿರುವ ಪ್ರತಿಭಟನಕಾರರು ಆರೋಪಿಸಿದ್ದಾರೆ. ಮತ್ತೂ ನಿರ್ದಿಷ್ಟ ಸ್ಥಳಗಳಲ್ಲಿ ಮೊಬೈಲ್ ನೆಟ್‌ವರ್ಕ್ ಗಳನ್ನು ಪೊಲೀಸರ ನಿರ್ದೇಶನದ ಮೇರೆಗೆ ಟೆಲಿಕಾಂ ಕಂಪೆನಿಗಳು ನಿಷ್ಕ್ರಿಯಗೊಳಿಸಿರುವ ಬಗ್ಗೆಯೂ ಆರೋಪಗಳು ವ್ಯಕ್ತವಾಗಿದೆ.
ಭದ್ರತಾ ವ್ಯವಸ್ಥೆಯ ಭಾಗವಾಗಿ 20 ಸಾವಿರಕ್ಕೂ ಹೆಚ್ಚು ಭದ್ರತಾ ಸಿಬ್ಬಂದಿ ಹಾಗೂ ಕೇಂದ್ರ ಸಶಸ್ತ್ರ ಪೊಲೀಸ್ ಪಡೆಗಳ 200ಕ್ಕೂ ಹೆಚ್ಚು ಕಂಪನಿಗಳನ್ನು ನಿಯೋಜಿಸಲಾಗಿದೆ. ವಿಶೇಷವಾಗಿ ಕೇಂದ್ರ ದೆಹಲಿ, ಕನ್ನಾಟ್ ಪ್ಲೇಸ್ ಹಾಗೂ ನಗರದ ಪ್ರವೇಶ ಗಡಿ ಭಾಗಗಳಲ್ಲಿ ಹೆಚ್ಚಿನ ನಿಗಾ ಇರಿಸಲಾಗಿದೆ.
ಕನ್ನಾಟ್ ಪ್ಲೇಸ್ ಪ್ರದೇಶವನ್ನು 20 ವಲಯಗಳಾಗಿ ವಿಂಗಡಿಸಲಾಗಿದ್ದು, ಪ್ರತಿ ವಲಯದ ಭದ್ರತಾ ಜವಾಬ್ದಾರಿಯನ್ನು ಡಿಸಿಪಿ ಅಥವಾ ಐಪಿಎಸ್ ಅಧಿಕಾರಿಗಳಿಗೆ ವಹಿಸಲಾಗಿದೆ. ಅಧಿಕಾರಿಗಳ ನೇತೃತ್ವದಲ್ಲಿ ವಿವಿಧೆಡೆ ಪಥಸಂಚಲನ ನಡೆಸಿ ಭದ್ರತಾ ಸಿದ್ಧತೆಗಳನ್ನು ಪರಿಶೀಲಿಸಲಾಗಿದೆ.
ಸಂದೇಹಾಸ್ಪದ ವಾಹನಗಳನ್ನು ತಡೆದು ಪರಿಶೀಲಿಸಲು ತುರ್ತು ಬಳಕೆಯ ಸ್ಪೈಕ್ ಸ್ಟ್ರಿಪ್‌ಗಳನ್ನು ಸಿದ್ಧವಾಗಿಡಲಾಗಿದೆ. ಭದ್ರತಾ ಕಾರ್ಯಾಚರಣೆಗಳಲ್ಲಿ ಪಾರದರ್ಶಕತೆ ಮತ್ತು ಹೊಣೆಗಾರಿಕೆಯನ್ನು ಹೆಚ್ಚಿಸುವ ಉದ್ದೇಶದಿಂದ ಕಾನ್‌ಸ್ಟೆಬಲ್‌ಗಳು ಹಾಗೂ ಇನ್‌ಸ್ಪೆಕ್ಟರ್‌ಗಳಂತಹ ಕೆಳಹಂತದ ಪೊಲೀಸ್ ಸಿಬ್ಬಂದಿಗೂ ಬಾಡಿ ಕ್ಯಾಮೆರಾಗಳನ್ನು ಒದಗಿಸಲಾಗಿದೆ.
ಸಾರ್ವಜನಿಕರ ಸಾಮಾನ್ಯ ಸಂಚಾರಕ್ಕೆ ಯಾವುದೇ ನಿರ್ಬಂಧ ವಿಧಿಸಿಲ್ಲ ಎಂದು ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ. ಆದರೆ, ಅನುಮತಿಯಿಲ್ಲದ ಪ್ರತಿಭಟನೆಯಲ್ಲಿ ಭಾಗವಹಿಸಲು ಮುಂದಾಗುವವರನ್ನು ತಕ್ಷಣ ವಶಕ್ಕೆ ಪಡೆಯಲಾಗುವುದು ಹಾಗೂ ಕಾನೂನುಬದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.
-
Uncategorized5 hours ago
ಬೋನಿಗೆ ಬಿದ್ದ ಅಪರೂಪದ ಕರಿ ಚಿರತೆ!
-
Uncategorized4 hours ago
ರಬ್ಬರ್ ಗೆ ಭರ್ಜರಿ ಬೆಲೆ; ರಬ್ಬರ್ ಶೀಟ್ ದರದಲ್ಲೂ ಏರಿಕೆ
-
Uncategorized6 hours ago
ಪುತ್ತೂರು–ಉಪ್ಪಿನಂಗಡಿ ರಸ್ತೆ ದುರಸ್ತಿಗೆ ಶಾಸಕ ಅಶೋಕ್ ರೈ ಸೂಚನೆ
-
Uncategorized5 hours ago
ಪುತ್ತೂರು : ನಸುಕಿನ ಜಾವ ಹಳೇ ಕಟ್ಟಡದಲ್ಲಿ ಕಾಣಿಸಿದ ಬೆಂಕಿ – ಅನಾಹುತ ತಪ್ಪಿಸಲು ನೆರವಾದ ರವಿಕುಮಾರ್ ರೈ
-
Uncategorized2 hours ago
ಸಮುದ್ರಕ್ಕೆ ಇಳಿದಿದ್ದ ಉಜಿರೆ ಕಾಲೇಜಿನ ವಿದ್ಯಾರ್ಥಿ ಅಲೆಗಳ ಸೆಳೆತಕ್ಕೆ ಬಲಿ; ಮೃತದೇಹ ಪತ್ತೆ
-
Uncategorized4 hours ago
ಮುಂಬೈನಲ್ಲಿ ‘ಬನ’ ತುಳು ಚಿತ್ರಕ್ಕೆ ಪ್ರೇಕ್ಷಕರ ಮೆಚ್ಚುಗೆ; ಎರಡೂ ಪ್ರೀಮಿಯರ್ ಶೋ ಹೌಸ್ಫುಲ್ |


















