ಸುಳ್ಯ
arecanut policy issues: ಅಡಕತ್ತರಿಯಲ್ಲಿ ಅಡಿಕೆ ಬೆಳೆಗಾರ : ಕನಿಷ್ಠ ಅಮದು ಬೆಲೆಯ ಷರತ್ತುಗಳಿಲ್ಲದೇ ಬೂತಾನ್ ನಿಂದ 17000 ಟನ್ ಅಡಿಕೆ ಆಮದಿಗೆ ಕೇಂದ್ರ ಸರಕಾರ ಅನುಮತಿ – ಕ್ಯಾಂಪ್ಕೋ ತೀವ್ರ ವಿರೋಧ
ಮಂಗಳೂರು Mangalore ಸೆ 29 : ಕನಿಷ್ಟ ಅಮದು ಬೆಲೆಯ ಷರತ್ತು ಇಲ್ಲದೆಯೇ ಭೂತನ್ ನಿಂದ ಪ್ರತಿ ವರ್ಷ 17000 ಟನ್ ಹಸಿ ಅಡಿಕೆ ಆಮದಿಗೆ ಕೇಂದ್ರ ಸರಕಾರವು DGFT (ವಿದೇಶಿ ವ್ಯಾಪಾರದ ಮಹಾ ನಿರ್ದೇಶನಾಲಯ) ಮೂಲಕ ಸೆ 28 ರಂದು (ಬುಧವಾರ) ಅನುಮತಿ ನೀಡಿದೆ. ಕೇಂದ್ರ ಸರಕಾರ ಹೊರಡಿಸಿರುವ ಈ ಅಧಿಸೂಚನೆಗೆ ಕ್ಯಾಂಪ್ಕೊ ತೀವ್ರ ವಿರೋಧ ವ್ಯಕ್ತಪಡಿಸಿದೆ.
2017 ರಲ್ಲಿ ದೇಶದ ಅಡಿಕೆ ಬೆಳೆಗಾರರ ಹಿತ ಕಾಪಾಡುವ ದೃಷ್ಟಿಯಿಂದ ವಿದೇಶದಿಂದ ಆಮದಾಗುವ ಅಡಿಕೆಗಳಿಗೆ ಕನಿಷ್ಟ ಅಮದು ಬೆಲೆ ಪ್ರತಿ ಕೆಜಿಗೆ ರೂಪಾಯಿ 215 ನ್ನು ವಿಧಿಸಿ ಸರಕಾರ ಆದೇಶಿಸಿತ್ತು. 2018 ರಿಂದ ವಿದೇಶದಿಂದ ಬರುವ ಯಾವುದೇ ರೀತಿಯ ಆಡಿಕೆಯ ದರ ಪ್ರತಿ ಕೆಜಿ ರೂ 251 ಕ್ಕಿಂತ ಅಧಿಕವಿದ್ದರೇ ಮಾತ್ರ ಬರಲು ಅನುಮತಿ ನೀಡಲಾಗುತಿತ್ತು.ಈ ಮಿತಿಗಿಂತ ಕಡಿಮೆ ಇರುವ ಅಡಿಕೆ ಭಾರತ ಪ್ರವೇಶಿಸದಂತೆ ಸರಕಾರ ಕಟ್ಟುನಿಟ್ಟಾಗಿ ನೋಡಿಕೊಂಡಿತ್ತು. ಇದು ಅಡಿಕೆ ಬೆಳೆಯ ದರ ದೇಶಿಯವಾಗಿ ಹೆಚ್ಚಾಗಿ , ಇದರಿಂದ ಅಡಿಕೆ ಬೆಳೆಗಾರರು ಲಾಭ ಪಡೆಯುವಂತಾಗಿತ್ತು ಎನ್ನುತ್ತಾರೆ ಅಡಿಕೆ ಮಾರುಕಟ್ಟೆ ತಜ್ಙರು.

ಆತಂಕದಲ್ಲಿ ಆಡಿಕೆ ಬೆಳೆಗಾರ
ಆದರೇ ಸರಕಾರ ಇದೀಗ ಸೆ 28 ರಂದು ಯಾವುದೇ ಷರತ್ತುಗಳಿಲ್ಲದೇ ಬೂತಾನ್‌ನಿಂದ 17000 ಟನ್ ಅಡಿಕೆ ಆಮದು ಮಾಡಿಕೊಳ್ಳಲು ಅವಕಾಶ ಕಲ್ಪಿಸಿದ್ದು ಅಡಿಕೆ ಬೆಳೆಗಾರರ ಆತಂಕಕ್ಕೆ ಕಾರಣವಾಗಿದೆ. ಕಳೆದ ಮೂರು ನಾಲ್ಕು ವರ್ಷಗಳಿಂದ ಅಡಿಕೆಗೆ ಕೈ ತುಂಬಾ ದರ ಸಿಗುತ್ತಿದೆ. ಇದರಿಂದ ಅಡಿಕೆಯ ಉತ್ಪಾದನ ವೆಚ್ಚವು ಸಿಕ್ಕಾಪಟ್ಟೆ ಏರಿಕೆ ಕಾಣಿಸಿದೆ. ಸದ್ಯ ಪ್ರತಿ ಕೆಜಿ ಅಡಿಕೆ ಉತ್ಪಾದನೆಗೆ ಕನಿಷ್ಟ ರೂ 360 ಉತ್ಪಾದನ ವೆಚ್ಚ ಇದೆ ಎನ್ನುತ್ತಾರೆ ಅಡಿಕೆ ಬೆಳೆಗಾರರು.
Gold Rate Today : ಚಿನ್ನದ ಬೆಲೆಯಲ್ಲಿ ಏರಿಕೆ – ಇಂದಿನ ಚಿನ್ನ ಹಾಗೂ ಬೆಳ್ಳಿ ದರವನ್ನು ಇಲ್ಲಿ ತಿಳಿಯಿರಿ
ಅಲ್ಲದೇ ಕೊಳೆ ರೋಗ, ಹಳದಿ ಎಲೆ, ಚುಕ್ಕೆ ರೋಗ ಅಡಿಕೆಯನ್ನು ಕಾಡುತ್ತಿದೆ. ಇದೆಲ್ಲಾದರಿಂದ ಅಡಿಕೆ ಇಳುವರಿಯಲ್ಲಿ ಬಲು ದೊಡ್ಡ ಖೋತಾ ಆಗಿದೆ. ಹೀಗಾಗಿ ಅಡಿಕೆ ಧಾರಣೆ ಹೆಚ್ಚಾದರೂ , ಅಡಿಕೆ ಬೆಳೆಗಾರ ದೊಡ್ಡ ಮಟ್ಟದಲ್ಲಿ ಲಾಭ ಮಾಡಿಕೊಳ್ಳುತ್ತಿಲ್ಲ. ಉತ್ಪಾದನ ವೆಚ್ಚ ಏರಿರುವುದರಿಂದ ಹಾಗೂ ಇಳುವರಿಯಲ್ಲಿ ಖೋತಾ ಉಂಟಾಗಿರುವುದರಿಂದ ಅಡಿಕೆ ರೇಟ್ ರೂ 500 ರ ಅಸುಪಾಸಿನಲ್ಲಿದ್ದರೂ ಅಡಿಕೆ ಬೆಳೆಗಾರ ಬಾರೀ ಖುಷಿಯಲ್ಲೇನು ಇಲ್ಲ . ಆದರೇ ಉಳಿದ ಕೃಷಿಕರಿಗಿಂತ ಅಡಿಕೆ ಬೆಳೆಗಾರನ ಸ್ಥಿತಿ ಉತ್ತಮವಾಗಿದೆ.
ಕ್ಯಾಂಪ್ಕೋ ತೀವ್ರ ವಿರುದ್ದ
ಆದರೇ ಇದೀಗ ಕೇಂದ್ರ ಸರಕಾರ ಷರತ್ತುಗಳಿಲ್ಲದೇ 17 ಸಾವಿರ ಟನ್ ಆಡಿಕೆ ಆಮದಿಗೆ ಅವಕಾಶ ನೀಡಿರುವುದು ಆಡಿಕೆ ಬೆಳೆಗಾರರ ಅಡ ಕತ್ತರಿಯಲ್ಲಿ ಸಿಕ್ಕಿ ಹಾಕಿಕೊಳ್ಳುವಂತೆ ಮಾಡಿದೆ. ಸರಕಾರದ ಈ ನಿರ್ಧಾರವನ್ನು ಬಿಜೆಪಿ ನೇತ್ರತ್ವದ ಸರಕಾರದ ಪ್ರಭಲ ಸಮರ್ಥಕ ಎನಿಸಿರುವ ಕ್ಯಾಂಪ್ಕೋ ಕೂಡ ಟೀಕಿಸಿರುವುದು , ಪರಿಸ್ಥಿತಿಯ ತೀವ್ರತೆಯನ್ನು ತೋರಿಸುತ್ತಿದೆ. ಪ್ರಧಾನ ಮಂತ್ರಿಗಳ ಮಹತ್ವಾಕಾಂಕ್ಷೆಯಂತೆ ರೈತರ ಆದಾಯ ದ್ವಿಗುಣಗೊಳಿಸುವ ಕೇಂದ್ರದ ಸಮಗ್ರ ನೀತಿಗೆ ವ್ಯತಿರಿಕ್ತ ಪರಿಣಾಮ ಬೀರಲಿದೆ ಕಟುವಾಗಿ ವ್ಯಾಖ್ಯಾನಿಸಿದೆ.
ಕ್ಯಾಂಪ್ಕೋ ಅಧ್ಯಕ್ಷರಾದ ಎ.ಕಿಶೋರ್ ಕುಮಾರ್ ಕೊಡ್ಗಿಯವರು ದ್ದು, “ಕೇಂದ್ರ ಸರಕಾರವು ದಿನಾಂಕ 28 ಸೆಪ್ಟಂಬರ್ ,2022ರಂದು DGFT ಮೂಲಕ ಹೊರಡಿಸಿರುವ ಅಧಿಸೂಚನೆ ಸಂಖ್ಯೆ.36/2015-2020ರಲ್ಲಿ ಭೂತನ್ ನಿಂದ 17000 ಟನ್ ಹಸಿ ಅಡಿಕೆ ಆಮದಿಗೆ ಅನುಮತಿ ನೀಡಿರುತ್ತದೆ.ಇದರಿಂದ ನಮ್ಮ ದೇಶದ ವಿಶೇಷವಾಗಿ ಕರ್ನಾಟಕ ಮತ್ತು ಕೇರಳ ರಾಜ್ಯದ ಅಡಿಕೆ ಬೆಳೆಗಾರರು ಆತಂಕ ಪಡುವ ಅಗತ್ಯ ಇಲ್ಲ. ಇದು ನಮ್ಮಲ್ಲಿನ ಅಡಿಕೆಯ ದರದ ಸ್ಥಿರತೆಗೆ ಯಾವುದೇ ಪರಿಣಾಮ ಉಂಟುಮಾಡುವುದಿಲ್ಲ. ಇದರಿಂದ ದೇಶೀಯ ಗುಣಮಟ್ಟದ ಚಾಲಿಗೆ ಯಾವುದೇ ತೊಂದರೆ ಇಲ್ಲ. ಎಂದು ತಿಳಿಸಿದ್ದಾರೆ.
ಅವರು ಮುಂದುವರಿದು “ ಆದಾಗ್ಯೂ, ಕೇಂದ್ರ ಸರಕಾರವು ಹೊರಡಿಸಿರುವ ಅಧಿಸೂಚನೆಗೆ ಕ್ಯಾಂಪ್ಕೊ ತೀವ್ರ ವಿರೋಧ ವ್ಯಕ್ತಪಡಿಸಿದೆ. ಕೇಂದ್ರ ವಾಣಿಜ್ಯ ಸಚಿವರಾದ ಸನ್ಮಾನ್ಯ ಪಿಯೂಷ್ ಗೋಯಲ್ ಮತ್ತು ಇತರ ಸಂಬಂಧಪಟ್ಟ ಅಧಿಕಾರಿಗಳಿಗೆ ಕ್ಯಾಂಪ್ಕೊ ಪತ್ರದ ಮೂಲಕ ವಿರೋಧ ವ್ಯಕ್ತಪಡಿಸಿದೆ. ಆಮದು ಆಗುವ ಚಾಲಿ ಅಡಿಕೆಗೆ ಕೆಜಿ ಗೆ 360/- ರೂಪಾಯಿ ಕನಿಷ್ಠ ಆಮದು ಬೆಲೆ ನಿಗದಿ ಪಡಿಸುವಂತೆ ಕ್ಯಾಂಪ್ಕೊ ದೆಹಲಿ ನಿಯೋಗದ ಮೂಲಕ ಈಗಾಗಲೇ ಕೇಂದ್ರ ಸರಕಾರವನ್ನು ಒತ್ತಾಯಿಸಿದೆ ಎಂದು ಹೇಳಿದ್ದಾರೆ.
Health Tips :ಮೊಸರು ಸೇವನೆಯಿಂದ ಸಿಗಲಿದೆ ಈ ಆರು ಪ್ರಯೋಜನಗಳು
ಈ ಅಧಿಸೂಚನೆಯ ಅನುಷ್ಠಾನದಿಂದ ದೇಶೀಯ ಮಾರುಕಟ್ಟೆಗೆ ಯಾವುದೇ ತೊಂದರೆ ಇಲ್ಲದಿದ್ದರೂ ,ಸನ್ಮಾನ್ಯ ಪ್ರಧಾನ ಮಂತ್ರಿಗಳ ಮಹತ್ವಾಕಾಂಕ್ಷೆಯಂತೆ ರೈತರ ಆದಾಯ ದ್ವಿಗುಣಗೊಳಿಸುವ ಕೇಂದ್ರದ ಸಮಗ್ರ ನೀತಿಗೆ ವ್ಯತಿರಿಕ್ತ ಪರಿಣಾಮ ಬೀರುವ ಕುರಿತು ವಾಣಿಜ್ಯ ಸಚಿವರಿಗೆ ಕ್ಯಾಂಪ್ಕೋ ತನ್ನ ಆತಂಕ ವ್ಯಕ್ತಪಡಿಸಿದೆ. ಮುಂದಿನ ದಿನಗಳಲ್ಲಿ ಕೇಂದ್ರ ಸರಕಾರವು ರೈತರ ಹಿತ ಕಾಪಾಡಲು ಸಕರಾತ್ಮಕ ನಿರ್ಧಾರ ತೆಗೆದುಕೊಳ್ಳುವ ಬಗ್ಗೆ ಕ್ಯಾಂಪ್ಕೊ ಆಶಾಭಾವನೆ ಹೊಂದಿದೆ ಎಂದು ಕ್ಯಾಂಪ್ಕೋ ತಿಳಿಸಿದೆ.
ಸುಳ್ಯ
Sevaratna-ಕಲ್ಪವೃಕ್ಷದ ಕಾಯಕಯೋಗಿಗೆ ‘ಸೇವಾರತ್ನ’ ಗೌರವ; 20 ವರ್ಷಗಳ ನಿರಂತರ ಕಾಯಕಕ್ಕೆ ಅಚ್ಚುತ ನಾಯಕ್ ಕಿಲಂಗೋಡಿಯವರಿಗೆ ಜಿಲ್ಲಾಮಟ್ಟದ ಪ್ರಶಸ್ತಿ
ಕಲ್ಪವೃಕ್ಷವೆಂದೇ ಕರೆಯಲ್ಪಡುವ ತೆಂಗಿನ ಮರವನ್ನು ಏರಿ, ಕಳೆದ ಎರಡು ದಶಕಗಳಿಂದ ರೈತರು ಹಾಗೂ ಸಾರ್ವಜನಿಕರಿಗೆ ನಿರಂತರ ಸೇವೆ ಸಲ್ಲಿಸುತ್ತಿರುವ ಕಳಂಜ ಗ್ರಾಮದ ಶ್ರೀ ಅಚ್ಚುತ ನಾಯಕ್ ಕಿಲಂಗೋಡಿಯವರು ತಮ್ಮ ಕಾಯಕನಿಷ್ಠೆ ಹಾಗೂ ಸೇವೆಯಿಂದ ಇದೀಗ ಜಿಲ್ಲಾಮಟ್ಟದ ಗೌರವಕ್ಕೆ ಪಾತ್ರರಾಗಿದ್ದಾರೆ.
ಸುಳ್ಯ: ಕಲ್ಪವೃಕ್ಷವೆಂದೇ ಕರೆಯಲ್ಪಡುವ ತೆಂಗಿನ ಮರವನ್ನು ಏರಿ, ಕಳೆದ ಎರಡು ದಶಕಗಳಿಂದ ರೈತರು ಹಾಗೂ ಸಾರ್ವಜನಿಕರಿಗೆ ನಿರಂತರ ಸೇವೆ ಸಲ್ಲಿಸುತ್ತಿರುವ ಕಳಂಜ ಗ್ರಾಮದ ಶ್ರೀ ಅಚ್ಚುತ ನಾಯಕ್ ಕಿಲಂಗೋಡಿಯವರು ತಮ್ಮ ಕಾಯಕನಿಷ್ಠೆ ಹಾಗೂ ಸೇವೆಯಿಂದ ಇದೀಗ ಜಿಲ್ಲಾಮಟ್ಟದ ಗೌರವಕ್ಕೆ ಪಾತ್ರರಾಗಿದ್ದಾರೆ.
ಆಕ್ಸಿಸ್ ಬ್ಯಾಂಕ್ ಹಾಗೂ ಮ್ಯಾಕ್ಸ್ ಲೈಫ್ ಇನ್ಶೂರೆನ್ಸ್ ವತಿಯಿಂದ ಕೊಡಮಾಡುವ ಜಿಲ್ಲಾಮಟ್ಟದ ‘ಸೇವಾರತ್ನ ಪ್ರಶಸ್ತಿ’ಗೆ ಅಚ್ಚುತ ನಾಯಕ್ ಕಿಲಂಗೋಡಿಯವರನ್ನು ಆಯ್ಕೆ ಮಾಡಲಾಗಿದೆ.
ಒಕ್ಟೊಬರ್ 9ರಂದು ಸಂಜೆ 4.30ಕ್ಕೆ ಮoಗಳೂರಿನಲ್ಲಿ ಈ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ.
ತೆಂಗಿನ ಮರವೇರುವುದು ಸುಲಭದ ಕೆಲಸವಲ್ಲ. ಮರದ ಎತ್ತರ, ಗಾಳಿಯ ವೇಗ, ಹವಾಮಾನ ವೈಪರೀತ್ಯ ಸೇರಿದಂತೆ ಹಲವು ಸವಾಲುಗಳ ನಡುವೆಯೂ ಮರದ ತುದಿಗೆ ಏರಿ ತೆಂಗಿನಕಾಯಿಗಳನ್ನು ಕೊಯ್ದು ಕೆಳಗಿಳಿಸುವ ಈ ಕಾಯಕಕ್ಕೆ ಧೈರ್ಯ, ದೈಹಿಕ ಸಾಮರ್ಥ್ಯ, ಕೌಶಲ್ಯ ಹಾಗೂ ಅಪಾರ ಅನುಭವದ ಅಗತ್ಯವಿದೆ. ಇಂತಹ ಅಪಾಯಭರಿತ ಕಾಯಕವನ್ನು ಅಚ್ಚುತ ನಾಯಕ್ ಅವರು ಕಳೆದ 20 ವರ್ಷಗಳಿಂದ ಅತ್ಯಂತ ಪ್ರಾಮಾಣಿಕತೆ ಮತ್ತು ಕಾಯಕನಿಷ್ಠೆಯಿಂದ ಮಾಡಿಕೊಂಡು ಬರುತ್ತಿದ್ದಾರೆ.
ಕಳಂಜ ಗ್ರಾಮಕ್ಕೆ ಮಾತ್ರ ಸೀಮಿತವಾಗದೆ ಸುಳ್ಯ ತಾಲೂಕು ಹಾಗೂ ಹೊರ ತಾಲೂಕುಗಳ ವಿವಿಧ ಪ್ರದೇಶಗಳಿಗೆ ತೆರಳಿ, ರೈತರು ಮತ್ತು ಸಾರ್ವಜನಿಕರ ತೆಂಗಿನ ಮರಗಳಿಂದ ತೆಂಗಿನಕಾಯಿಗಳನ್ನು ಕೊಯ್ದು ತೆಗೆದು ಕೊಡುವ ಸೇವೆಯನ್ನು ಅವರು ನಿರಂತರವಾಗಿ ಸಲ್ಲಿಸುತ್ತಿದ್ದಾರೆ. ಗ್ರಾಮೀಣ ಪ್ರದೇಶದ ಕೃಷಿಕರಿಗೆ ಅತ್ಯಗತ್ಯವಾಗಿರುವ ಈ ಸೇವೆಯನ್ನು ಯಾವುದೇ ಪ್ರಚಾರದ ನಿರೀಕ್ಷೆಯಿಲ್ಲದೆ ಮಾಡುತ್ತಿರುವುದು ಅವರ ಕಾಯಕದ ವಿಶೇಷತೆಯಾಗಿದೆ.
ಮೌನ ಸಾಧಕರ ಸೇವೆಗೆ ಮತ್ತೊಂದು ಗೌರವ
ಅಚ್ಚುತ ನಾಯಕ್ ಅವರ ಸೇವೆಯನ್ನು ಈಗಾಗಲೇ ಹಲವು ಸಂಸ್ಥೆಗಳು ಗುರುತಿಸಿವೆ. ರೋಟರಿ ಕ್ಲಬ್ ಬೆಳ್ಳಾರೆ ಸಂಸ್ಥೆಯು 2018–19ನೇ ಸಾಲಿನಲ್ಲಿ ಅವರ ಸೇವೆಯನ್ನು ಗುರುತಿಸಿ ಗೌರವಿಸಿತ್ತು.
ಅದೇ ರೀತಿ ಜೆಸಿಐ ಬೆಳ್ಳಾರೆ ಸಂಸ್ಥೆಯು 2025ರಲ್ಲಿ ಅವರ ನಿರಂತರ ಹಾಗೂ ಶ್ರಮದಾಯಕ ಸೇವೆಯನ್ನು ಗುರುತಿಸಿ ‘ಸೆಲ್ಯೂಟ್ ದಿ ಸೈಲೆಂಟ್ ಸ್ಟಾರ್’ ಪ್ರಶಸ್ತಿ ನೀಡಿ ಗೌರವಿಸಿತ್ತು.
ಯಾವುದೇ ಪ್ರಚಾರದ ಹಿಂದೆ ಹೋಗದೆ, ತನ್ನ ಶ್ರಮವನ್ನೇ ಬಂಡವಾಳವನ್ನಾಗಿ ಮಾಡಿಕೊಂಡು ಪ್ರತಿದಿನವೂ ದುಡಿಯುತ್ತಿರುವ ಅಚ್ಚುತ ನಾಯಕ್ ಅವರು ನಿಜವಾದ ಮೌನ ಕಾಯಕಯೋಗಿ. ತೆಂಗಿನ ಮರದ ತುದಿಯಲ್ಲಿ ನಿಂತು ಅವರು ಮಾಡುವ ಪ್ರತಿಯೊಂದು ಕೆಲಸದ ಹಿಂದೆಯೂ ಧೈರ್ಯ, ಪರಿಶ್ರಮ, ಕೌಶಲ್ಯ ಮತ್ತು ಕುಟುಂಬದ ಬದುಕಿಗಾಗಿ ನಡೆಸುವ ಪ್ರಾಮಾಣಿಕ ಹೋರಾಟವಿದೆ.
ಕಲ್ಪವೃಕ್ಷದೊಂದಿಗೆ ಎರಡು ದಶಕಗಳ ಕಾಲ ನಂಟು ಬೆಳೆಸಿಕೊಂಡಿರುವ ಅಚ್ಚುತ ನಾಯಕ್ ಅವರ ಕಾಯಕವು ಗ್ರಾಮೀಣ ಶ್ರಮಜೀವಿಗಳ ಬದುಕಿನ ಪ್ರತೀಕವಾಗಿದೆ. ರೈತರ ಅಗತ್ಯಕ್ಕೆ ಸ್ಪಂದಿಸುತ್ತಾ, ಅಪಾಯವನ್ನು ಲೆಕ್ಕಿಸದೆ ತಮ್ಮ ವೃತ್ತಿಯನ್ನು ಮುಂದುವರಿಸಿಕೊಂಡು ಬಂದಿರುವ ಅವರ ಸೇವೆಗೆ ‘ಸೇವಾರತ್ನ’ ಪ್ರಶಸ್ತಿ ಮತ್ತೊಂದು ಸಾರ್ಥಕ ಗೌರವವಾಗಿದೆ.
ಕಾಯಕಕ್ಕೆ ಸಂದ ಸಾರ್ಥಕ ಗೌರವ
ಕಳೆದ 20 ವರ್ಷಗಳಿಂದ ತೆಂಗಿನ ಮರದ ತುದಿಯಲ್ಲಿ ಬೆವರು ಸುರಿಸಿ, ರೈತರು ಮತ್ತು ಸಾರ್ವಜನಿಕರಿಗೆ ಅಗತ್ಯವಾದ ಸೇವೆಯನ್ನು ಸಲ್ಲಿಸುತ್ತಿರುವ ಅಚ್ಚುತ ನಾಯಕ್ ಕಿಲಂಗೋಡಿಯವರಿಗೆ ದೊರೆಯುತ್ತಿರುವ ‘ಸೇವಾರತ್ನ’ ಪ್ರಶಸ್ತಿ, ಅವರ ಕಾಯಕನಿಷ್ಠೆಗೆ ಸಂದ ಗೌರವ ಮಾತ್ರವಲ್ಲದೆ, ಗ್ರಾಮೀಣ ಶ್ರಮಜೀವಿಗಳ ಪರಿಶ್ರಮಕ್ಕೂ ಸಂದ ಗೌರವವಾಗಿದೆ.
ಕಲ್ಪವೃಕ್ಷದ ಕಾಯಕಯೋಗಿಯ ಎರಡು ದಶಕಗಳ ನಿರಂತರ ಸೇವೆಗೆ ಇದೀಗ ‘ಸೇವಾರತ್ನ’ದ ಗೌರವದ ಕಿರೀಟ ದೊರೆತಿದೆ.
ಸುಳ್ಯ
ಸುಳ್ಯ :ಗ್ಯಾರೇಜ್‌ನಲ್ಲಿ ಬೈಕ್‌ಗೆ ಬೆಂಕಿ: ಇಬ್ಬರ ಬಂಧನ

ಸುಳ್ಯ: ಗ್ಯಾರೇಜ್‌ನಲ್ಲಿ ನಿಲ್ಲಿಸಿದ್ದ ಬೈಕ್‌ಗೆ ಬೆಂಕಿ ಹಚ್ಚಿ ಸುಟ್ಟುಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಳ್ಯ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ.
ಆರೋಪಿಗಳನ್ನು ಸುಳ್ಯ ಐವರ್ನಾಡು ನಿವಾಸಿ ದಯಾನಂದ (30) ಹಾಗೂ ಸುಳ್ಯ ಕಸಬಾ ನಿವಾಸಿ ದರ್ಶನರಾಜು (23) ಎಂದು ಗುರುತಿಸಲಾಗಿದೆ.
ಸುಳ್ಯ ಕಸಬಾ ಗ್ರಾಮದ ಅಂಬೆಟಡ್ಕದಲ್ಲಿ ಆ.26ರ ರಾತ್ರಿ ಗ್ಯಾರೇಜ್‌ನಲ್ಲಿ ನಿಲ್ಲಿಸಿದ್ದ ಬೈಕ್‌ಗೆ ದುಷ್ಕರ್ಮಿಗಳು ಬೆಂಕಿ ಹಚ್ಚಿದ್ದರು. ಘಟನೆಗೆ ಸಂಬಂಧಿಸಿದಂತೆ ಸುಳ್ಯ ಪೊಲೀಸ್ ಠಾಣೆಯಲ್ಲಿ ಅ.ಕ್ರ.120/2026ರಂತೆ ಭಾರತೀಯ ನ್ಯಾಯ ಸಂಹಿತೆ (BNS) 2023ರ ಕಲಂ 326(g) ಅಡಿ ಪ್ರಕರಣ ದಾಖಲಾಗಿತ್ತು.
ಪ್ರಕರಣದ ತನಿಖೆ ನಡೆಸಿದ ಸುಳ್ಯ ಠಾಣೆ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ನ್ಯಾಯಾಲಯವು ಆರೋಪಿಗಳಿಗೆ ನ್ಯಾಯಾಂಗ ಬಂಧನ ವಿಧಿಸಿದೆ ಎಂದು ಪೊಲೀಸ್ ಪ್ರಕಟಣೆ ತಿಳಿಸಿದೆ.
ಸುಳ್ಯ
Dr. Deviprasad Kanattur-ಪಂಜ ದೇಗುಲದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರ ಮೇಲೆ ಅವ್ಯವಹಾರದ ಆರೋಪ; ಸತ್ಯ ಪ್ರಮಾಣಕ್ಕೆ ಡಾ. ದೇವಿಪ್ರಸಾದ್ ಕಾನತ್ತೂರ್ ನಿರ್ಧಾರ
ಪಂಜ ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷರಾದ ಡಾ. ದೇವಿಪ್ರಸಾದ್ ಕಾನತ್ತೂರ್ ಅವರು ತನ್ನ ಮೇಲಿನ ಅವ್ಯವಹಾರದ ಆರೋಪಕ್ಕೆ ಸತ್ಯಪ್ರಮಾಣಕ್ಕೆ ನಿರ್ಧರಿಸಿದ್ದು ಆರೋಪ ಹೊರಿಸಿದವರು, ಪ್ರಮಾಣಕ್ಕೆ ಬರುವಂತೆ ಸವಾಲು ಹಾಕಿದ್ದಾರೆ.
ಪಂಜ ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷರಾದ ಡಾ. ದೇವಿಪ್ರಸಾದ್ ಕಾನತ್ತೂರ್ ಅವರು ತನ್ನ ಮೇಲಿನ ಅವ್ಯವಹಾರದ ಆರೋಪಕ್ಕೆ ಸತ್ಯಪ್ರಮಾಣಕ್ಕೆ ನಿರ್ಧರಿಸಿದ್ದು ಆರೋಪ ಹೊರಿಸಿದವರು, ಪ್ರಮಾಣಕ್ಕೆ ಬರುವಂತೆ ಸವಾಲು ಹಾಕಿದ್ದಾರೆ.
ಆಗಸ್ಟ್ 31 ರಂದು ಸೋಮವಾರ ಪೂರ್ವಾಹ್ನ ಶ್ರೀ ದೇವರು ಜಳಕ ಮಾಡುವ ಪವಿತ್ರ ನಾಗತೀರ್ಥ ನದಿಯಲ್ಲಿ ಸ್ನಾನಮಾಡಿ ದೇಗುಲದ ನಡೆಯಲ್ಲಿ ಬೆಳಗ್ಗಿನ ಮಹಾಪೂಜೆಯ ನಂತರ ನಾನು ಯಾವ ಅವ್ಯವಹಾರ ಮಾಡಿಲ್ಲ ಎಂದು ಸತ್ಯ ಪ್ರಮಾಣ ಮಾಡುತ್ತೇನೆ. ನನ್ನ ಮೇಲೆ ಸುಳ್ಳು ಆರೋಪ ಮಾಡಿದವರಿಗೆ ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇವರು ಹಾಗೂ ಪರಿವಾರ ದೈವಗಳು ಉತ್ತರ ನೀಡಲಿ ಎಂದು ಪ್ರಾರ್ಥಿಸುತ್ತೇನೆ. ಯಾರು ನನ್ನ ಮೇಲೆ ಆರೋಪ ಮಾಡಿದ್ದಾರೆ. ಅವರೂ ಪ್ರಮಾಣಕ್ಕೆ ಬರಲಿ ಎಂದು ಅವರು ತಿಳಿಸಿದ್ದಾರೆ.
-
Uncategorized19 hours ago
Naana Paatekar No More : ವ್ಯವಸ್ಥೆಯ ವಿರುದ್ಧದ ಧ್ವನಿಗೆ ರೂಪ ನೀಡಿದ, ತನ್ನ ಡೈಲಾಗ್ ನಿಂದಲೇ ಅಸಂಖ್ಯಾತ ಅಭಿಮಾನಿಗಳನ್ನು ಗಳಿಸಿದ್ದ ಅಭಿಜಾತ ಕಲಾವಿದ ನಾನಾಪಾಟೇಕರ್ ಇನ್ನಿಲ್ಲ
-
ಬಿಗ್ ನ್ಯೂಸ್13 hours agoSting Operation | ಸ್ಟಿಂಗ್ ಆಪರೇಷನ್ ಚರ್ಚೆ: ಪುತ್ತೂರಿಗೂ ವ್ಯಾಪಿಸಿದೆಯೇ ರಾಜಕೀಯದ ‘ಸ್ಟಿಂಗ್’ ಸದ್ದು..?
-
ಮಂಗಳೂರು16 hours agoMangalore-ರಿಕ್ಷಾದಲ್ಲಿ ಬಿಟ್ಟುಹೋದ 48 ಗ್ರಾಂ ಚಿನ್ನದ ನೆಕ್ಲೇಸ್ ವಾಪಸ್ ನೀಡಿ ಪ್ರಾಮಾಣಿಕತೆ ಮೆರೆದ ಚಾಲಕ
-
Uncategorized17 hours agoAshok Rai-ಬದ್ಯಾರ್ನಲ್ಲಿ 50 ವರ್ಷದ ರಸ್ತೆ ವಿವಾದಕ್ಕೆ ತೆರೆ ಎಳೆದ ಶಾಸಕ ಅಶೋಕ್ ರೈ
-
ನಿಧನ ವಾರ್ತೆ17 hours agoBeltangadi-ಬೆಳ್ತಂಗಡಿ: ಅಡಿಕೆ ಕೊಯ್ಯುವ ವೇಳೆ ವಿದ್ಯುತ್ ತಂತಿಗೆ ದೋಟಿ ತಾಗಿ ವ್ಯಕ್ತಿ ಸಾವು
-
ಅಪರಾಧ18 hours agoUppinangadi-ಉಪ್ಪಿನಂಗಡಿ: ತೋಟದ ಕೆಲಸಕ್ಕೆ ಬರುತ್ತೇನೆಂದು ಹಣ ಪಡೆದು ನಾಪತ್ತೆ
-
ನಿಧನ ವಾರ್ತೆ16 hours agoAccident-ಮೂಡುಬಿದಿರೆ: ಸ್ಕೂಟರ್ ನಿಯಂತ್ರಣ ತಪ್ಪಿ ಬಿದ್ದು ಕಾಲೇಜು ವಿದ್ಯಾರ್ಥಿ ಸಾವು
-
ಬಿಗ್ ನ್ಯೂಸ್17 hours agoHalf helmet-ಕರ್ನಾಟಕದಲ್ಲಿ ಹಾಫ್ ಹೆಲ್ಮೆಟ್ ಸಂಪೂರ್ಣ ನಿಷೇಧ


















