ರಾಜಕೀಯ
PFI Case | ಕಾಂಗ್ರೇಸ್ ಸರ್ಕಾರದ ಅವಧಿಯಲ್ಲಿ ಪಿಎಫ್ಐ ಕಾರ್ಯಕರ್ತರ ಮೇಲೆ ದಾಖಲಾಗಿದ್ದ ಪ್ರಕರಣಗಳನ್ನು ಹಿಂದಕ್ಕೆ ಪಡೆಯಲಾಗಿದೆಯೇ..? ಸಿದ್ದರಾಮಯ್ಯ ಕೇಳಿದ ಪ್ರಶ್ನೆಗೆ ಬಿಜೆಪಿ ಸರ್ಕಾರ ಕೊಟ್ಟ ಉತ್ತರವೇನು..?
ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಪಿಎಫ್ಐ ಮೇಲಿನ ಮೊಕದ್ದಮೆಗಳನ್ನು (PFI Case) ಹಿಂದಕ್ಕೆ ಪಡೆಯಲಾಗಿತ್ತು ಎನ್ನುವ ಬಿಜೆಪಿ ಪರಿವಾರದ ಸುಳ್ಳಿನ ಕತೆ ಎಂದು ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ (Siddaramaiah) ತೀವ್ರವಾಗಿ ಖಂಡಿಸಿ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿದ್ದಾರೆ.
“ಸುಳ್ಳು” ಬಿಜೆಪಿ ಮತ್ತು ಸಂಘ ಪರಿವಾರದವರ ಮನೆ ದೇವರು. ಆಧಾರ ರಹಿತ ಸುಳ್ಳು ಪ್ರಚಾರಗಳಿಂದಲೇ ತಮ್ಮ ಅಸ್ತಿತ್ವ ಉಳಿಸಿಕೊಂಡಿರುವ ಈ ಪರಿವಾರ ನನ್ನ ವಿರುದ್ಧ ಇದುವರೆಗೂ ಸಾವಿರದೊಂದು ಸುಳ್ಳುಗಳನ್ನು ಪ್ರಚಾರ ಮಾಡಿದೆ. ಈ ಸುಳ್ಳುಗಳಲ್ಲಿ ಪಿಎಫ್ಐ ಸಂಘಟನೆ ನನ್ನಿಂದಲೇ ಬೆಳೆದಿದ್ದು, ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಪಿಎಫ್ಐ ಕಾರ್ಯಕರ್ತರ ಮೇಲೆ ದಾಖಲಾಗಿದ್ದ ಸಾವಿರ ಸುಳ್ಳುಗಳನ್ನು ಹಿಂದಕ್ಕೆ ಪಡೆದಿದ್ದೇನೆ ಎಂದು ಸುಳ್ಳು ಉದುರಿಸಿಕೊಳ್ಳುತ್ತಾ ತಿರುಗುತ್ತಿದ್ದಾರೆ ಎಂದು ಸಿದ್ದರಾಮಯ್ಯ ಹೇಳಿದರು.
ಇದೇ ಆರೋಪವನ್ನು ಈ ಹಿಂದೆಯೂ ಮಾಡಿದ್ದರು. ಆಗಲೇ ನಾನು ಬಿಜೆಪಿ ಸರ್ಕಾರಕ್ಕೆ ಈ ಬಗ್ಗೆ ನಾಲ್ಕು ಪತ್ರಗಳನ್ನು ಬರೆದು ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಪಿಎಫ್ಐ ಕಾರ್ಯಕರ್ತರ ಮೇಲೆ ದಾಖಲಾಗಿದ್ದ ಪ್ರಕರಣಗಳನ್ನು ಹಿಂದಕ್ಕೆ ಪಡೆಯಲಾಗಿದೆಯೇ? ಯಾವುದೇ ರಾಜಕೀಯ ಪಕ್ಷ ಮತ್ತು ಸಂಘಟನೆಗಳ ಕಾರ್ಯಕರ್ತರ ಮೇಲೆ ದಾಖಲಾಗಿದ್ದ ಪ್ರಕರಣಗಳನ್ನು ಹಿಂದಕ್ಕೆ ಪಡೆಯಲಾಗಿತ್ತೇ ಎನ್ನುವ ಪ್ರಶ್ನೆ ಕೇಳಿದ್ದೇ ಎಂದು ಸಿದ್ದರಾಮಯ್ಯ ಹೇಳಿಕೆಯಲ್ಲಿ ಉಲ್ಲೇಖಿಸಿದ್ದಾರೆ.

ನನ್ನ ಪ್ರಶ್ನೆಗಳಿಗೆ ಬಿಜೆಪಿ ಸರ್ಕಾರವೇ ನೀಡಿರುವ ಉತ್ತರದಲ್ಲಿ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಯಾವುದೇ ಪಿಎಫ್ಐ ಕಾರ್ಯಕರ್ತರ ಮೇಲೆ ದಾಖಲಾಗಿದ್ದ ಪ್ರಕರಣಗಳನ್ನು ಹಿಂದಕ್ಕೆ ಪಡೆದಿದಿರುವುದರ ಬಗ್ಗೆ ಉಲ್ಲೇಖಗಳೇ ಇಲ್ಲ.
ಬದಲಿಗೆ ನಾನು ಮುಖ್ಯಮಂತ್ರಿ ಆಗಿದ್ದ ಸರ್ಕಾರದ ಅವಧಿಯಲ್ಲಿ ರೈತ, ದಲಿತ, ಕಾರ್ಮಿಕ, ಕಮ್ಯುನಿಸ್ಟ್ ಸಂಘಟನೆಗಳ ಕಾರ್ಯಕರ್ತರು ಮತ್ತು ಮುಖಂಡರುಗಳ ಮೇಲೆ ದಾಖಲಾಗಿರುವ ಪ್ರಕರಣಗಳನ್ನು ಹಿಂದಕ್ಕೆ ಪಡೆಯಲಾಗಿತ್ತು ಎನ್ನುವ ಬಗ್ಗೆ ಬಿಜೆಪಿ ಸರ್ಕಾರವೇ ಉತ್ತರಿಸಿದೆ.
ಕಾಂಗ್ರೆಸ್ ಸರ್ಕಾರ ಹಿಂದಕ್ಕೆ ಪಡೆದ ಪ್ರಕರಣಗಳ ಸ್ವರೂಪ ಮತ್ತು ಘಟನೆಗಳ ಕುರಿತಾಗಿ ಬಿಜೆಪಿ ಸರ್ಕಾರವೇ ನೀಡಿರುವ ಉತ್ತರದ ಕೆಲವೊಂದು ಸ್ಯಾಂಪಲ್ಗಳನ್ನು ಮಾತ್ರ ಇಲ್ಲಿ ನೀಡಿದ್ದೇನೆ. ನೂರಾರು ಪುಟಗಳಲ್ಲಿ ಸರ್ಕಾರ ಉತ್ತರ ನೀಡಿದೆ. ಯಾವ ಉತ್ತರದಲ್ಲೂ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಪಿಎಫ್ಐ ಕಾರ್ಯಕರ್ತರ ಮೇಲಿನ ಮೊಕದ್ದಮೆಗಳ ಉಲ್ಲೇಖವಿಲ್ಲ ಎಂದು ತಿಳಿಸಿದ್ದಾರೆ.
ಕೇಸ್ ಹಿಂಪಡೆದ ವಿವರ:
• ಕಬ್ಬಿನ ಬೆಳೆಗೆ ಸೂಕ್ತ ಬೆಲೆ ಹಾಗೂ ಗುಲ್ಬರ್ಗಾ ಹೊಸೂರ ಕಾಮಗಾರಿ ಮತ್ತು ಅಫ್ಜಲಪುರ ತಾಲ್ಲೂಕಿನ ಒಳರಸ್ತೆಗಳ ತ್ವರಿತ ಸುಧಾರಣೆ ವಿಷಯವಾಗಿ ಹೋರಾಟ ಮಾಡಿದ್ದಕ್ಕಾಗಿ ರೈತರ ಮೇಲೆ ಅಫಜಲಪುರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಮೊಕದ್ದಮೆ ಸಂಖ್ಯೆ 15/11 ನ್ನು ಹಿಂಪಡೆಯಲಾಗಿದೆ.
• ದಿವಂಗತ ಕೆ.ಹೆಚ್.ಪಾಟೀಲ್ರವರ ಪುತ್ಥಳಿಗೆ ದುಷ್ಕರ್ಮಿಗಳು ಅಪಮಾನಗೊಳಿಸಿದ ಸಂಬAಧ ನಡೆದ ಗಲಭೆಗೆ ಸಂಬಂಧಪಟ್ಟಂತೆ ಗದಗ ಜಿಲ್ಲೆಯ ಗದಗ ಗ್ರಾಮೀಣ ಹಾಗೂ ಶಹರ ಪೊಲೀಸ್ ಠಾಣೆಗಳಲ್ಲಿ ದಾಖಲಾಗಿರುವ ಐದು ಪ್ರಕರಣಗಳನ್ನು ಹಿಂದಕ್ಕೆ ಪಡೆದುಕೊಳ್ಳಲಾಗಿದೆ.
• ಪತ್ರಕರ್ತ ನವೀನ್ ಸೂರಿಂಜೆ ವಿರುದ್ಧ ಮಂಗಳೂರು ಗ್ರಾಮಾಂತರ ಠಾಣೆಯಲ್ಲಿ ದಾಖಲಾಗಿದ್ದ ಮೊಕದ್ದಮೆ ಸಂಖ್ಯೆ 229/2012. ಸಂಘ ಪರಿವಾರದವರು ಮಂಗಳೂರು ಹೋಂ ಸ್ಟೇ ಮೇಲೆ ದಾಳಿ ಮಾಡಿ ನಡೆಸಿದ ಹಲ್ಲೆಯನ್ನು ವರದಿ ಮಾಡಿದ್ದಕ್ಕಾಗಿ ಪತ್ರಕರ್ತ ನವೀನ್ ಸೂರಿಂಜೆಯನ್ನು ಆರೋಪಿಯನ್ನಾಗಿಸಿದ್ದ ಪ್ರಕರಣ.
• ಹೊನ್ನಾಳಿ ತಾಲ್ಲೂಕಿನ ಚಟ್ನಳ್ಳಿ ಗ್ರಾಮದಲ್ಲಿ ಸಾರ್ವಜನಿಕರು ಹಾಗೂ ರೈತರು ವಿದ್ಯುತ್ ಸಮಸ್ಯೆಯ ಬಗ್ಗೆ ಪ್ರತಿಭಟಿಸಿದ ಸಂಬAಧ ನ್ಯಾಮತಿ ಠಾಣೆಯಲ್ಲಿ ದಾಖಲಾದ ಮೊಕದ್ದಮೆ ಸಂಖ್ಯೆ 148/2009, 149/2009 ನ್ನು ಹಿಂದಕ್ಕೆ ಪಡೆಯಲಾಗಿದೆ.
• ಟೊಯೋಟಾ ಕಿರ್ಲೊಸ್ಕರ್ ಮೋಟಾರ್ ಪ್ರೈ ಲಿಮಿಟೆಡ್ನಲ್ಲಿ ವಜಾಗೊಂಡ ನೌಕರರನ್ನು ಪುನಃ ಕೆಲಸಕ್ಕೆ ತೆಗೆದುಕೊಳ್ಳಬೇಕೆಂದು ಮುಷ್ಕರ ಮಾಡಿದ ಸಂಬಂಧ ಹಲಸೂರು ಗೇಟ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ 26/2006 ನ್ನು ಹಿಂಪಡೆಯಲಾಗಿದೆ.
• ಮಂಡ್ಯ ಪಶ್ಚಿಮ ಠಾಣೆಯಲ್ಲಿ ಪೌರ ಕಾರ್ಮಿಕರ ಮೇಲೆ ಹೂಡಲಾಗಿದ್ದ ಮೊಕದ್ದಮೆ ಸಂಖ್ಯೆ 44/2009, 247/2009, 248/2009 ನ್ನು ಹಿಂದಕ್ಕೆ ಪಡೆಯಲಾಗಿದೆ.
• ಹೆಚ್.ಟಿ.ಕೃಷ್ಣೇಗೌಡ ಹಾಗೂ ಇತರ 25 ಜನರ ವಿರುದ್ಧ ಅರಣ್ಯ ಇಲಾಖೆ ಸಿಬ್ಬಂದಿ ಜತೆ ಅನುಚಿತವಾಗಿ ವರ್ತಿಸಿದ ಅರಣ್ಯ ಇಲಾಖೆಯ ಆವರಣದಲ್ಲಿ ನಿಲ್ಲಿಸಲಾಗಿದ್ದ ಟ್ರಾಕ್ಟರನ್ನು ತೆಗೆದುಕೊಂಡು ಹೋಗಿದ್ದು ಮತ್ತು ರಸ್ತೆ ತಡೆ ನಡೆಸಿದ ಸಂಬಂಧ ನಾಗಮಂಗಲ ಪಟ್ಟಣ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಮೊಕದ್ದಮೆ ಸಂಖ್ಯೆ 15/2010 ನ್ನು ಹಿಂದಕ್ಕೆ ಪಡೆಯಲಾಗಿದೆ.
• ಉದ್ಯೋಗ ಖಾತ್ರಿ ಯೋಜನೆಯಡಿಯಲ್ಲಿ ಕೆಲಸ ಮಾಡಿದ ಫಲಾನುಭವಿಗಳಿಗೆ ಹಣ ಬಿಡುಗಡೆ ಮಾಡದಿರುವುದನ್ನು ವಿರೋಧಿಸಿ ಪ್ರತಿಭಟನೆ ನಡೆಸಿದ ಹಸಿರು ಸೇನೆ ಮತ್ತು ರೈತ ಕೂಲಿ ಕಾರ್ಮಿಕರ ಮೇಲೆ ದಾಖಲಾಗಿದ್ದ ಮೊಕದ್ದಮೆ ಸಂಖ್ಯೆ 79/2011 ನ್ನು ಹಿಂದಕ್ಕೆ ಪಡೆಯಲಾಗಿದೆ.
• ಕೋಟಾ ಪೊಲೀಸ್ ಠಾಣೆಯಲ್ಲಿ ಎರಡು ಕೋಮುಗಳ ನಡುವಿನ ಗಲಾಟೆ, ಗಲಭೆ ಸಂಬಂಧ ದಾಖಲಿಸಲಾಗಿದ್ದ ಮೊಕದ್ದಮೆ ಸಂಖ್ಯೆ 95/2006 ನ್ನು ಹಿಂದಕ್ಕೆ ಪಡೆಯಲಾಗಿದೆ.
• ಎ.ಜೆ.ಸದಾಶಿವ ಆಯೋಗದ ವರದಿಯನ್ನು ಅಂಗೀಕರಿಸುವಂತೆ ಒತ್ತಾಯಿಸಿ 2012ರ ಜುಲೈ 30 ರಂದು ಅಂದಿನ ಮುಖ್ಯಮಂತ್ರಿಗಳ ಮನೆಗೆ ಮುತ್ತಿಗೆ ಹಾಕಲು ಯತ್ನಿಸಿದ ಡಿಎಸ್ಎಸ್ ಮತ್ತು ಡಿಎಸ್ಎಫ್ ಕಾರ್ಯಕರ್ತರ ಮೇಲೆ ಹೈಗ್ರೌಂಡ್ಸ್ ಠಾಣೆಯಲ್ಲಿ ದಾಖಲಾಗಿದ್ದ ಮೊಕದ್ದಮೆ ಸಂಖ್ಯೆ 207/2012 ನ್ನು ಹಿಂದಕ್ಕೆ ಪಡೆಯಲಾಗಿದೆ.
• ಉಡುಪಿ ಕೃಷ್ಣ ಮಠದಲ್ಲಿ ಪಂಕ್ತಿ ಬೇಧ ಮಾಡುವುದನ್ನು ಮತ್ತು ಕುಕ್ಕೆ ಸುಬ್ರಮಣ್ಯ ದೇವಸ್ಥಾನದಲ್ಲಿ ಮಡೆಸ್ನನವೆಂಬ ಅನಿಷ್ಠ ಆಚರಿಸುವುದನ್ನು ವಿರೋಧಿಸಿ ಪ್ರತಿಭಟನೆ ನಡೆಸಿದ ಭಾರತ ಕಮ್ಯುನಿಸ್ಟ್ ಪಕ್ಷದ ಕಾರ್ಯಕರ್ತರು ಮತ್ತು ಮುಖಂಡರ ಮೇಲೆ ದಾಖಲಾಗಿದ್ದ ಮೊಕದ್ದಮೆ ಸಂಖ್ಯೆ 456/2012 ನ್ನು ಹಿಂದಕ್ಕೆ ಪಡೆಯಲಾಗಿದೆ.
• 24/10/2011 ರಂದು ಕೋಲಾರ ಜಿಲ್ಲೆಯ ರಾಬರ್ಟ್ಸನ್ ಪೊಲೀಸ್ ಠಾಣೆ ವ್ಯಾಪ್ತಿಗೆ ಸೇರಿದ ಜಾಗದಲ್ಲಿ ಮ್ಯಾನ್ಹೋಲ್ ಸ್ವಚ್ಚಗೊಳಿಸುವಾಗ 3 ಮಂದಿ ಕಾರ್ಮಿಕರು ಉಸಿರು ಕಟ್ಟಿ ಸತ್ತಿದ್ದರು. ಇದನ್ನು ಪ್ರತಿಭಟಿಸಿ ಮೃತರ ಕುಟುಂಬಕ್ಕೆ 10 ಲಕ್ಷ ಪರಿಹಾರಕ್ಕೆ ಆಗ್ರಹಿಸಿದವರ ಮೇಲೆ ದಾಖಲಿಸಲಾಗಿದ್ದ ಮೊಕದ್ದಮೆ ಸಂಖ್ಯೆ 168/2011 ನ್ನು ಹಿಂದಕ್ಕೆ ಪಡೆಯಲಾಗಿದೆ.
• ಈರುಳ್ಳಿ ಬೆಳೆಗಳಿಗೆ ಬೆಂಬಲ ಬೆಲೆ ನೀಡುವಂತೆ ಆಗ್ರಹಿಸಿ ಪ್ರತಿಭಟನೆ ನಡೆಸಿದ ರೈತ ಕಾರ್ಯಕರ್ತರ ಮೇಲೆ ಚಾಮರಾಜನಗರ ಜಿಲ್ಲೆ ಪೂರ್ವ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಮೊಕದ್ದಮೆ ಸಂಖ್ಯೆ 57/2012 ನ್ನು ಹಿಂದಕ್ಕೆ ಪಡೆಯಲಾಗಿದೆ.
• ಮೈಸೂರು ನಗರ ನರಸಿಂಹರಾಜ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪೂರ್ವಾನುಮತಿ ಪಡೆಯದೆ ಪ್ರತಿಭಟಿಸಿದ ಕಾರ್ಯಕರ್ತರ ಮೇಲೆ ದಾಖಲಾಗಿದ್ದ ಮೊಕದ್ದಮೆ ಸಂಖ್ಯೆ 145/201 ನ್ನು ಹಿಂದಕ್ಕೆ ಪಡೆಯಲಾಗಿದೆ. ಪ್ರತಿಭಟನೆಗೆ ಕಾರಣವಾದ ಸಂಗತಿಗಳನ್ನು ಸರ್ಕಾರ ಒದಗಿಸಿಲ್ಲ.
• 2010 ರಲ್ಲಿ ತಸ್ಲೀಮಾ ನಸ್ರೀಂರವರ ಫರ್ದಾ ಏ ಫರ್ದಾ ಲೇಖನ ತರ್ಜುಮೆಗೊಂಡು ಕನ್ನಡ ದಿನಪತ್ರಿಕೆಯೊಂದರಲ್ಲಿ ಪ್ರಕಟವಾದ ಸಂಬಂಧ ಶಿವಮೊಗ್ಗ ಮತ್ತು ಹಾಸನ ಜಿಲ್ಲೆಗಳಲ್ಲಿ ದಾಖಲಾಗಿದ್ದ ಮೊಕದ್ದಮೆಗಳನ್ನು ಹಿಂದಕ್ಕೆ ಪಡೆಯಲಾಗಿದೆ. ಅದರಂತೆ ಸರ್ಕಾರಿ ಆದೇಶ ಸಂಖ್ಯೆ ಒಇ 14 ಮೊಹಿಬ 2012, ಬೆಂಗಳೂರು, ದಿನಾಂಕ 15/06/2015. ಶಿವಮೊಗ್ಗ ದೊಡ್ಡಪೇಟೆ ಠಾಣೆಯಲ್ಲಿ ದಾಖಲಾಗಿದ್ದ 54 ಪ್ರಕರಣ, ತುಂಗಾನಗರ ಠಾಣೆಯಲ್ಲಿ ದಾಖಲಾಗಿದ್ದ 5 ಮತ್ತು ಕೋಟೆ ಠಾಣೆಯಲ್ಲಿ ದಾಖಲಾಗಿದ್ದ 45, ವಿನೋಭನಗರ ಠಾಣೆಯಲ್ಲಿ ದಾಖಲಾಗಿದ್ದ 2, ಜಯನಗರ ಠಾಣೆಯಲ್ಲಿ ದಾಖಲಾಗಿದ್ದ 1 ಪ್ರಕರಣವನ್ನು ಹಿಂದಕ್ಕೆ ಪಡೆಯಲಾಯಿತು. ಹಾಗೆಯೇ ಹಾಸನ ಜಿಲ್ಲೆಯ ಪೆನ್ಷನ್ಮೊಹಲ್ಲಾ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ 9 ಮತ್ತು ಹಾಸನ ಬಡಾವಣೆ ಠಾಣೆಯಲ್ಲಿ ದಾಖಲಾಗಿದ್ದ 12 ಮೊಕದ್ದಮೆಗಳನ್ನು ಹಿಂದಕ್ಕೆ ಪಡೆಯಲಾಯಿತು.
ಹಿಂದಕ್ಕೆ ಪಡೆಯಲಾದ ಈ ಪ್ರಕರಣಗಳಲ್ಲಿ ಪಿಎಸ್ಐ ಕಾರ್ಯಕರ್ತರು ಆರೋಪಿಗಳಾಗಿದ್ದರು ಎನ್ನುವುದರ ಬಗ್ಗೆ ಬಿಜೆಪಿ ಸರ್ಕಾರ ಕೊಟ್ಟ ಉತ್ತರದಲ್ಲಿ ಯಾವುದೇ ಉಲ್ಲೇಖಗಳಿಲ್ಲ ಎಂದು ತಿಳಿಸಿದ್ದಾರೆ.
ಹೀಗಾಗಿ ಬಿಜೆಪಿ ಮತ್ತು ಪರಿವಾರದ ಮಂದಿ ಸಾರ್ವಜನಿಕವಾಗಿ ಸುಳ್ಳನ್ನೇ ಆರಾಧಿಸುತ್ತಾ, ಸುಳ್ಳನ್ನೇ ಭಜಿಸುತ್ತಾ, ಸುಳ್ಳನ್ನೇ ತೀರ್ಥ ಪ್ರಸಾದದಂತೆ ಹಂಚುತ್ತಾ ತಿರುಗುವುದನ್ನು ನಿಲ್ಲಿಸಬೇಕು. ಯಾವ ಪಿಎಫ್ಐ ಕಾರ್ಯಕರ್ತರ ಮೇಲಿನ ಯಾವ ಪ್ರಕರಣವನ್ನು ಕಾಂಗ್ರೆಸ್ ಅವಧಿಯಲ್ಲಿ ಹಿಂದಕ್ಕೆ ಪಡೆಯಲಾಗಿತ್ತು ಎನ್ನುವುದನ್ನು ಬಿಜೆಪಿ ಹೇಳಬೇಕು ಎಂದು ಹೇಳಿದರು.
ಅಲ್ಲದೆ, ಸಂಘ ಪರಿವಾರದ ಅಂಗಳದಲ್ಲೇ ಇರುವ ಪ್ರಮೋದ್ ಮುತಾಲಿಕ್ ಅವರೇ ಕೆಲವು ದಿನಗಳ ಹಿಂದಷ್ಟೇ, “ಪಿಎಫ್ಐ ಮತ್ತು ಎಸ್ಡಿಪಿಐ ಎರಡಕ್ಕೂ ಬಿಜೆಪಿಯೇ ಪೋಷಕ. ಬಿಜೆಪಿಯಿಂದಲೇ ಈ ಎರಡೂ ಬೆಳೆದಿವೆ” ಎಂದು ಬಹಿರಂಗವಾಗಿ ಹೇಳಿಕೆ ನೀಡಿದ್ದಾರೆ. ಈ ಹೇಳಿಕೆಯನ್ನು ಇದುವರೆಗೂ ಬಿಜೆಪಿಯವರಾಗಲೀ, ಸಂಘ ಪರಿವಾರವಾಗಲೀ ಅಲ್ಲಗಳೆದಿಲ್ಲ ಏಕೆ? ಹಾಗಾದರೆ ಪ್ರಮೋದ್ ಮುತಾಲಿಕ್ ಅವರ ಮಾತು ನಿಜ ತಾನೆ?
ಹಾಗೆಯೇ ಸಂಘ ಪರಿವಾರದ ಅಂಗಳದಲ್ಲೇ ಇರುವ ಸತ್ಯಜಿತ್ ಸೂರತ್ಕಲ್ ಅವರು, ಪಿಎಫ್ಐ ಮತ್ತು ಎಸ್ಡಿಪಿಐ ಎರಡೂ ಬಿಜೆಪಿಯ ಬಿ ಟೀಮ್ ಎಂದು ಹೇಳಿಕೆ ನೀಡಿದ್ದಾರೆ. ಇದನ್ನೂ ಬಿಜೆಪಿ ಮತ್ತು ಸಂಘ ಪರಿವಾರ ಅಲ್ಲಗಳೆದಿಲ್ಲ.
ಎಲ್ಲಕ್ಕಿಂತ ಮುಖ್ಯವಾಗಿ ಪಿಎಫ್ಐ ಮತ್ತು ಎಸ್ಡಿಪಿಐ ಚಟುವಟಿಕೆಗಳಿಂದ ಅತ್ಯಂತ ಹೆಚ್ಚು ರಾಜಕೀಯ ಲಾಭ ಮಾಡಿಕೊಳ್ಳುತ್ತಿರುವುದು ಬಿಜೆಪಿಯೇ ಎನ್ನುವುದು ಇಡಿ ರಾಜ್ಯದ ಜನತೆಗೆ ಗೊತ್ತಿದೆ ಎಂದರು.
ಹೀಗಾಗಿ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ರೈತರು, ಕಾರ್ಮಿಕರು, ದಲಿತರು, ಪೌರ ಕಾರ್ಮಿಕರು, ಕಬ್ಬು ಬೆಳೆಗಾರರ ಮೇಲಿನ ಪ್ರಕರಣಗಳನ್ನು ಹಿಂದಕ್ಕೆ ಪಡೆದಿರುವುದೇ ಹೆಚ್ಚು. ಕೆಲವೊಂದು ಪ್ರಕರಣಗಳಲ್ಲಿ ಆರೋಪಿಗಳು ಮುಸ್ಲೀಮರಾಗಿದ್ದಾರೆ. ಅವರೆಲ್ಲರನ್ನೂ ಪಿಎಫ್ಐ ಎಂದು ಬಿಂಬಿಸಿ ತಮ್ಮ ಸುಳ್ಳಿನ ಭಜನೆ ಮಾಡಿದರೆ ಜನ ನಂಬುವುದಿಲ್ಲ ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ರಾಜಕೀಯ
Puttur-ಪುತ್ತೂರಿನಲ್ಲಿ ಎಲ್ಲಿ ನೋಡಿದರೂ ಭ್ರಷ್ಟಾಚಾರ ಮತ್ತು ದುಷ್ಟ ರಾಜಕೀಯವೇ ತಾಂಡವವಾಡುತ್ತಿದೆ: ಬೂಡಿಯಾರು; ಶಾಸಕರು ಬ್ಯಾನರ್ ಹಾಕಿ, ತೆಂಗಿನಕಾಯಿ ಒಡೆಯುವುದು ಮಾತ್ರ : ಸಾಜ
ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ ನೀತಿಗಳನ್ನು ಖಂಡಿಸಿ ಭಾರತೀಯ ಜನತಾ ಪಾರ್ಟಿ ಪುತ್ತೂರು ಗ್ರಾಮಾಂತರ ಮಂಡಲ ಹಾಗೂ ನೆಟ್ಟಣಿಗೆ ಮುಡೂರು ಶಕ್ತಿ ಕೇಂದ್ರದ ವತಿಯಿಂದ ನ.18ರಂದು ಈಶ್ವರಮಂಗಲದಲ್ಲಿ ನಡೆದ ‘ನಮ್ಮ ಹಕ್ಕಿಗಾಗಿ ನಮ್ಮ ಹೆಜ್ಜೆ’ ಪ್ರತಿಭಟನಾ ಸಭೆಯಲ್ಲಿ ಜಿಲ್ಲಾ ಬಿಜೆಪಿ ಮಾಜಿ ಉಪಾಧ್ಯಕ್ಷ ಹಾಗೂ ಪಾದಯಾತ್ರೆಯ ಜಿಲ್ಲಾ ಸಹ ಸಂಚಾಲಕ ಬೂಡಿಯಾರ್ ರಾಧಾಕೃಷ್ಣ ರೈ ಅವರು ಮಾತನಾಡಿದರು.
ಪುತ್ತೂರು: ಪುತ್ತೂರಿನಲ್ಲಿ ಎಲ್ಲಿ ನೋಡಿದರೂ ಭ್ರಷ್ಟಾಚಾರ ಮತ್ತು ದುಷ್ಟ ರಾಜಕೀಯವೇ ತಾಂಡವವಾಡುತ್ತಿದೆ. ಅಭಿವೃದ್ಧಿಯ ಹೆಸರಿನಲ್ಲಿ ನೀಡಲಾಗುತ್ತಿರುವ ಭರವಸೆಗಳು ಕೇವಲ ಬ್ಯಾನರ್ಗಳಿಗೆ ಸೀಮಿತವಾಗಿದ್ದು, ಕ್ಷೇತ್ರಕ್ಕೆ ಯಾವುದೇ ಗಮನಾರ್ಹ ಅನುದಾನ ಬರುತ್ತಿಲ್ಲ. ಶಾಸಕರು ಕಳೆದ ಮೂರೂವರೆ ವರ್ಷಗಳಲ್ಲಿ ಎಷ್ಟು ಅನುದಾನ ತಂದಿದ್ದಾರೆ ಎಂಬುದನ್ನು ಬಹಿರಂಗಪಡಿಸಲಿ ಎಂದು ಜಿಲ್ಲಾ ಬಿಜೆಪಿ ಮಾಜಿ ಉಪಾಧ್ಯಕ್ಷ ಹಾಗೂ ಪಾದಯಾತ್ರೆಯ ಜಿಲ್ಲಾ ಸಹ ಸಂಚಾಲಕ ಬೂಡಿಯಾರ್ ರಾಧಾಕೃಷ್ಣ ರೈ ಸವಾಲು ಹಾಕಿದರು.
ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ ನೀತಿಗಳನ್ನು ಖಂಡಿಸಿ ಭಾರತೀಯ ಜನತಾ ಪಾರ್ಟಿ ಪುತ್ತೂರು ಗ್ರಾಮಾಂತರ ಮಂಡಲ ಹಾಗೂ ನೆಟ್ಟಣಿಗೆ ಮುಡೂರು ಶಕ್ತಿ ಕೇಂದ್ರದ ವತಿಯಿಂದ ನ.18ರಂದು ಈಶ್ವರಮಂಗಲದಲ್ಲಿ ನಡೆದ ‘ನಮ್ಮ ಹಕ್ಕಿಗಾಗಿ ನಮ್ಮ ಹೆಜ್ಜೆ’ ಪ್ರತಿಭಟನಾ ಸಭೆಯಲ್ಲಿ ಅವರು ಮಾತನಾಡಿದರು.
ರೈತರಿಗೆ ಬೆಳೆ ವಿಮೆಯ ಸೂಕ್ತ ಮೊತ್ತ ನೀಡದೆ ವಂಚಿಸಲಾಗುತ್ತಿದೆ. ಕಾರ್ಮಿಕರ ನಿಧಿಯ ವಿಚಾರದಲ್ಲೂ ಅನ್ಯಾಯವಾಗುತ್ತಿದೆ. ಕ್ಷೇತ್ರದಾದ್ಯಂತ ರಸ್ತೆ ದುರಸ್ತಿ ಕಾರ್ಯಗಳು ಸಮರ್ಪಕವಾಗಿ ನಡೆಯುತ್ತಿಲ್ಲ. ಒಂದಿಷ್ಟು ಅನುದಾನ ಬಂದಿದ್ದರೆ ಅದು ಕೇಂದ್ರ ಸರ್ಕಾರದಿಂದ ಮಾತ್ರವೇ ಹೊರತು ರಾಜ್ಯ ಸರ್ಕಾರದಿಂದಲ್ಲ ಎಂದು ಆರೋಪಿಸಿದರು.

ಅನ್ನಭಾಗ್ಯ ಯೋಜನೆಯಡಿ ಕೇಂದ್ರ ಸರ್ಕಾರ ನೀಡುವ ಅಕ್ಕಿಯನ್ನೇ ವಿತರಿಸಲಾಗುತ್ತಿದೆ. ಆದರೆ ಬೆಳೆ ವಿಮೆಯಲ್ಲಿ ರಾಜ್ಯ ಸರ್ಕಾರ ತನ್ನ ಪಾಲಿನ ಮೊತ್ತವನ್ನು ನೀಡದೆ ರೈತರಿಗೆ ಅನ್ಯಾಯ ಮಾಡುತ್ತಿದೆ. ಅಭಿವೃದ್ಧಿಯ ಬಗ್ಗೆ ದೊಡ್ಡ ದೊಡ್ಡ ಮಾತುಗಳನ್ನಾಡುವ ಶಾಸಕರು ಕ್ಷೇತ್ರಕ್ಕೆ ತಂದಿರುವ ಅನುದಾನದ ಲೆಕ್ಕವನ್ನು ಜನರ ಮುಂದಿಡಬೇಕು ಎಂದು ಆಗ್ರಹಿಸಿದರು.
ಬಿಜೆಪಿ ಅವಧಿಯಲ್ಲಿ ನೆಟ್ಟಣಿಗೆ ಮುಡೂರಿಗೆ ₹29.50 ಕೋಟಿ ಅನುದಾನ: ಸಾಜ ರಾಧಾಕೃಷ್ಣ ಆಳ್ವ
ಗ್ರಾಮಾಂತರ ಮಂಡಲದ ನಿಕಟಪೂರ್ವ ಅಧ್ಯಕ್ಷ ಸಾಜ ರಾಧಾಕೃಷ್ಣ ಆಳ್ವ ಮಾತನಾಡಿ, ಬಿಜೆಪಿ ಸರ್ಕಾರದ ಅವಧಿಯಲ್ಲಿ ನೆಟ್ಟಣಿಗೆ ಮುಡೂರು ಗ್ರಾಮಕ್ಕೆ ಅಂದಿನ ಶಾಸಕ ಸಂಜೀವ ಮಠಂದೂರು ಹಾಗೂ ಸಂಸದ ನಳಿನ್ ಕುಮಾರ್ ಕಟೀಲು ಅವರ ಮೂಲಕ ಒಟ್ಟು ₹29.50 ಕೋಟಿ ಅನುದಾನ ಒದಗಿಸಲಾಗಿತ್ತು ಎಂದು ತಿಳಿಸಿದರು.
ಈಶ್ವರಮಂಗಲ-ಸುಳ್ಯಪದವು ರಸ್ತೆ ಹಾಗೂ ಹನುಮಗಿರಿಯಿಂದ ನಿಡಳ್ಳಿ ಮುಂಡೂರು ರಸ್ತೆಯನ್ನು ಪಿಎಂಜಿಎಸ್ವೈ ಯೋಜನೆಯಡಿ ಅಭಿವೃದ್ಧಿಪಡಿಸಲಾಗಿತ್ತು. ಆದರೆ ಈಗಿನ ಶಾಸಕರು ಮೂರೂವರೆ ವರ್ಷಗಳಲ್ಲಿ ಸಾಕಷ್ಟು ಅನುದಾನ ತಂದಿದ್ದೇನೆ ಎಂದು ಹೇಳಿಕೊಳ್ಳುತ್ತಿರುವುದು ಕೇವಲ ಭಾಷಣಗಳಿಗೆ ಸೀಮಿತವಾಗಿದೆ. ಬಂದಿರುವುದು ಶಾಸನಬದ್ಧ ಅನುದಾನ ಮಾತ್ರ ಎಂದು ಟೀಕಿಸಿದರು.
ಅನುದಾನ ಮಂಜೂರಾಗಿದೆ ಎಂದು ಬ್ಯಾನರ್ ಹಾಕಿ, ತೆಂಗಿನಕಾಯಿ ಒಡೆದು ಶಿಲಾನ್ಯಾಸ ನೆರವೇರಿಸಲಾಗುತ್ತದೆ. ಆದರೆ ಕಾಮಗಾರಿಗಳು ಆರಂಭವಾಗಲು ಒಂದು ವರ್ಷವೇ ಬೇಕಾಗುತ್ತದೆ. ಶಿಲಾನ್ಯಾಸ ನಡೆದ ಹಲವು ಕಾಮಗಾರಿಗಳು ಇನ್ನೂ ಅನುಷ್ಠಾನಗೊಂಡಿಲ್ಲ. ಆದರೂ ಹಿಂದಿನ ಬಿಜೆಪಿ ಆಡಳಿತದ ಅವಧಿಯಲ್ಲಿ ಯಾವುದೇ ಅಭಿವೃದ್ಧಿ ಕಾರ್ಯಗಳು ನಡೆದಿಲ್ಲ ಎಂದು ಅಪಪ್ರಚಾರ ಮಾಡಲಾಗುತ್ತಿದೆ ಎಂದು ಆರೋಪಿಸಿದರು.

ಕಳೆದ ಬಿಜೆಪಿ ಆಡಳಿತದ ಅವಧಿಯಲ್ಲಿ ನೆಟ್ಟಣಿಗೆ ಮುಡೂರು ಗ್ರಾಮಕ್ಕೆ ಬಂದಿರುವ ಅನುದಾನಗಳ ಸಂಪೂರ್ಣ ಪಟ್ಟಿ ಶಕ್ತಿ ಕೇಂದ್ರದ ಪ್ರಮುಖರ ಬಳಿ ಇದೆ ಎಂದು ಅವರು ಹೇಳಿದರು.
ಸಭೆಯಲ್ಲಿ ಶಕ್ತಿ ಕೇಂದ್ರದ ಅಧ್ಯಕ್ಷ ರಾಜೇಶ್ ರೈ ಪರ್ಪುಂಜ ಹಾಗೂ ಗ್ರಾಮಾಂತರ ಮಂಡಲದ ಪ್ರಧಾನ ಕಾರ್ಯದರ್ಶಿ ಲೋಕೇಶ್ ಚಾಕೋಟೆ ಉಪಸ್ಥಿತರಿದ್ದರು.
ಪ್ರತಿಭಟನಾ ಸಭೆಯ ಬಳಿಕ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಗ್ರಾಮ ಪಂಚಾಯತ್ ಕಚೇರಿಗೆ ತೆರಳಿ ಮನವಿ ಸಲ್ಲಿಸಿದರು. ನೆಟ್ಟಣಿಗೆ ಮುಡೂರು ಗ್ರಾಮ ಪಂಚಾಯತ್ ಮಾಜಿ ಸದಸ್ಯ ಅಬ್ದುಲ್ ಖಾದರ್ ನರಸೀನಡ್ಕ ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು. ಮಹಾಶಕ್ತಿ ಕೇಂದ್ರದ ಪ್ರಧಾನ ಕಾರ್ಯದರ್ಶಿ ದೀಪಕ್ ಕುಮಾರ್ ಮುಂಡ್ಯ ವಂದಿಸಿದರು.
ರಾಜಕೀಯ
Puttur-Big Breaking: ನಾಳೆ ಪುತ್ತೂರಿಗೆ ಬಿಜೆಪಿ ಘಟಾನುಘಟಿ ನಾಯಕರ ದಂಡು; ವಿಜಯೇಂದ್ರ, ಆರ್. ಅಶೋಕ್ ಸಹಿತ ಹಲವು ಹಿರಿಯ ನಾಯಕರ ಭೇಟಿ
ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಸೇರಿದಂತೆ ರಾಜ್ಯ ಬಿಜೆಪಿಯ ಹಲವು ಪ್ರಮುಖ ನಾಯಕರು ನಾಳೆ (ನ.19) ಪುತ್ತೂರಿಗೆ ಆಗಮಿಸಲಿದ್ದಾರೆ. ಖಾಸಗಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ಸಲುವಾಗಿ ಈ ನಾಯಕರು ಪುತ್ತೂರಿಗೆ ಭೇಟಿ ನೀಡಲಿದ್ದು, ರಾಜಕೀಯ ವಲಯದಲ್ಲಿ ಈ ಭೇಟಿಯು ಕುತೂಹಲ ಮೂಡಿಸಿದೆ.
ಪುತ್ತೂರು: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಸೇರಿದಂತೆ ರಾಜ್ಯ ಬಿಜೆಪಿಯ ಹಲವು ಪ್ರಮುಖ ನಾಯಕರು ನಾಳೆ (ನ.19) ಪುತ್ತೂರಿಗೆ ಆಗಮಿಸಲಿದ್ದಾರೆ. ಖಾಸಗಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ಸಲುವಾಗಿ ಈ ನಾಯಕರು ಪುತ್ತೂರಿಗೆ ಭೇಟಿ ನೀಡಲಿದ್ದು, ರಾಜಕೀಯ ವಲಯದಲ್ಲಿ ಈ ಭೇಟಿಯು ಕುತೂಹಲ ಮೂಡಿಸಿದೆ.
ಪುತ್ತೂರಿನ ಬಂಟರ ಭವನದಲ್ಲಿ ಬಿಜೆಪಿ ರಾಜ್ಯ ಮಾಧ್ಯಮ ಸಹ-ಸಂಚಾಲಕ ಪ್ರಶಾಂತ್ ಕೆಡೆಂಜಿ ಅವರ ವಿವಾಹ ಆರತಕ್ಷತೆ ಸಮಾರಂಭ ನಡೆಯಲಿದೆ. ಈ ಕಾರ್ಯಕ್ರಮದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್. ಅಶೋಕ್, ವಿಧಾನಪರಿಷತ್ತಿನ ವಿರೋಧ ಪಕ್ಷದ ನಾಯಕ ಚಲವಾದಿ ನಾರಾಯಣಸ್ವಾಮಿ, ಶಾಸಕ ಜನಾರ್ದನ ರೆಡ್ಡಿ ಸೇರಿದಂತೆ ಹಲವು ಹಿರಿಯ ನಾಯಕರು ಭಾಗವಹಿಸಲಿದ್ದಾರೆ ಎಂದು ಪಕ್ಷದ ಉನ್ನತ ಮೂಲಗಳು ತಿಳಿಸಿವೆ.
ಇದಲ್ಲದೆ, ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಬಹುತೇಕ ಎಲ್ಲ ಬಿಜೆಪಿ ಶಾಸಕರು ಕೂಡ ಈ ಆರತಕ್ಷತೆ ಸಮಾರಂಭದಲ್ಲಿ ಪಾಲ್ಗೊಳ್ಳುವ ನಿರೀಕ್ಷೆಯಿದೆ. ಮೂಲತಃ ಕಡಬ ತಾಲೂಕಿನ ಸವಣೂರು ಸಮೀಪದ ಕೆಡೆಂಜಿ ಬಳಿಯ ಅರಲ್ತೆಡಿ ನಿವಾಸಿಯಾಗಿರುವ ಪ್ರಶಾಂತ್ ಅವರು ಪ್ರಸ್ತುತ ಬೆಂಗಳೂರಿನ ಬಿಜೆಪಿ ರಾಜ್ಯ ಕಚೇರಿಯಲ್ಲಿ ಮಾಧ್ಯಮ ಸಹ-ಸಂಚಾಲಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.
ನಾಯಕರ ಈ ಭೇಟಿ ಖಾಸಗಿ ಕಾರ್ಯಕ್ರಮದ ಹಿನ್ನೆಲೆಯಲ್ಲಿ ನಡೆಯುತ್ತಿದ್ದು, ಮಂಗಳೂರು ವಿಮಾನ ನಿಲ್ದಾಣದಿಂದ ನೇರವಾಗಿ ಪುತ್ತೂರಿನ ವಿವಾಹ ಸಮಾರಂಭಕ್ಕೆ ಆಗಮಿಸಿ, ಕಾರ್ಯಕ್ರಮ ಮುಗಿದ ಬಳಿಕ ಬೆಂಗಳೂರಿಗೆ ಮರಳಲಿದ್ದಾರೆ ಎಂದು ಪಕ್ಷದ ಹಿರಿಯ ನಾಯಕರೊಬ್ಬರು ತಿಳಿಸಿದ್ದಾರೆ.
ಪುತ್ತೂರು ಬಿಜೆಪಿಯ ಪುನಶ್ಚೇತನಕ್ಕೆ ಸಿಗಲಿದೆಯೇ ಹೊಸ ದಿಕ್ಸೂಚಿ?
ಇನ್ನೊಂದೆಡೆ, ಕಳೆದ ಮೂರು ವರ್ಷಗಳಿಂದ ಆಂತರಿಕ ಭಿನ್ನಾಭಿಪ್ರಾಯ ಹಾಗೂ ರಾಜಕೀಯ ಸಂಘರ್ಷಗಳಿಂದಾಗಿ ಸಂಘಟನಾತ್ಮಕವಾಗಿ ಸವಾಲುಗಳನ್ನು ಎದುರಿಸುತ್ತಿರುವ ಪುತ್ತೂರು ಬಿಜೆಪಿಗೆ ಈ ನಾಯಕರ ಭೇಟಿ ಹೊಸ ಚೈತನ್ಯ ನೀಡುವ ಸಾಧ್ಯತೆ ಇದೆಯೆಂಬ ಕಾರಣಕ್ಕೆ ನಾಳಿನ ಭೇಟಿಗೆ ವಿಶೇಷ ಮಹತ್ವ ಲಭಿಸಿದೆ. ಸ್ಥಳೀಯ ಮಟ್ಟದಲ್ಲಿ ಮುಖಂಡರ ನಡುವಿನ ಅಂತರವನ್ನು ಕಡಿಮೆ ಮಾಡುವ ನಿಟ್ಟಿನಲ್ಲಿ ರಾಜ್ಯ ನಾಯಕರು ಮಧ್ಯಪ್ರವೇಶಿಸಬಹುದೇ ಎಂಬ ಚರ್ಚೆಯೂ ರಾಜಕೀಯ ವಲಯದಲ್ಲಿ ಕೇಳಿಬರುತ್ತಿದೆ.
ನಾಯಕರು ಖಾಸಗಿ ಕಾರ್ಯಕ್ರಮಕ್ಕೆ ಮಾತ್ರ ಆಗಮಿಸುತ್ತಿದ್ದರೂ, ಪುತ್ತೂರು ಬಿಜೆಪಿಯ ಇಂದಿನ ಸ್ಥಿತಿಗತಿ ಮತ್ತು ಸಂಘಟನೆಯ ಭವಿಷ್ಯದ ಕುರಿತು ಯಾವುದೇ ಅನೌಪಚಾರಿಕ ಚರ್ಚೆ ನಡೆಯಲಿದೆಯೇ ಎಂಬ ಪ್ರಶ್ನೆ ಮೂಡಿದೆ. ಹೀಗಾಗಿ, ರಾಜ್ಯ ಬಿಜೆಪಿಯ ಘಟಾನುಘಟಿ ನಾಯಕರ ಈ ಭೇಟಿಯು ಕೇವಲ ವಿವಾಹ ಸಮಾರಂಭಕ್ಕೆ ಸೀಮಿತವಾಗುತ್ತದೆಯೇ ಅಥವಾ ಅಥವಾ ಪುತ್ತೂರಿನ ಸ್ಥಳೀಯ ರಾಜಕೀಯಕ್ಕೆ ಯಾವುದಾದರೂ ಹೊಸ ಸಂದೇಶ ನೀಡಲಿದೆಯೇ ಎಂಬುದನ್ನು ಕಾದುನೋಡಬೇಕಿದೆ.
ಅಂತರ ರಾಜ್ಯ
Election Commission-ಯುಪಿಯಲ್ಲಿ 1.27 ಕೋಟಿ ಹಿಂದೂ ಮತದಾರರು ನಾಪತ್ತೆ? ಆದಿತ್ಯನಾಥ್ ಆರೋಪಕ್ಕೆ ಚುನಾವಣಾ ಆಯೋಗದ ಸ್ಪಷ್ಟನೆ
ಉತ್ತರ ಪ್ರದೇಶದ ಮತದಾರರ ಪಟ್ಟಿಯಿಂದ ಹಿಂದೂ ಮತದಾರರ ಹೆಸರುಗಳು ನಾಪತ್ತೆಯಾಗಿವೆ ಎಂಬ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಹೇಳಿಕೆ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಈ ಕುರಿತು ಸ್ಪಷ್ಟನೆ ನೀಡಿರುವ ರಾಜ್ಯದ ಮುಖ್ಯ ಚುನಾವಣಾಧಿಕಾರಿ (ಸಿಇಒ) ನವದೀಪ್ ರಿನ್ವಾ, ಚುನಾವಣಾ ಆಯೋಗವು ಮತದಾರರ ಧರ್ಮ ಅಥವಾ ಜಾತಿಯ ಆಧಾರದಲ್ಲಿ ಯಾವುದೇ ದಾಖಲೆಗಳನ್ನು ನಿರ್ವಹಿಸುವುದಿಲ್ಲ ಎಂದು ತಿಳಿಸಿದ್ದಾರೆ.
ಲಕ್ನೋ: ಉತ್ತರ ಪ್ರದೇಶದ ಮತದಾರರ ಪಟ್ಟಿಯಿಂದ ಹಿಂದೂ ಮತದಾರರ ಹೆಸರುಗಳು ನಾಪತ್ತೆಯಾಗಿವೆ ಎಂಬ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಹೇಳಿಕೆ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಈ ಕುರಿತು ಸ್ಪಷ್ಟನೆ ನೀಡಿರುವ ರಾಜ್ಯದ ಮುಖ್ಯ ಚುನಾವಣಾಧಿಕಾರಿ (ಸಿಇಒ) ನವದೀಪ್ ರಿನ್ವಾ, ಚುನಾವಣಾ ಆಯೋಗವು ಮತದಾರರ ಧರ್ಮ ಅಥವಾ ಜಾತಿಯ ಆಧಾರದಲ್ಲಿ ಯಾವುದೇ ದಾಖಲೆಗಳನ್ನು ನಿರ್ವಹಿಸುವುದಿಲ್ಲ ಎಂದು ತಿಳಿಸಿದ್ದಾರೆ.
ಇತ್ತೀಚೆಗೆ ನೀಡಿದ ಸಂದರ್ಶನವೊಂದರಲ್ಲಿ ಮುಖ್ಯಮಂತ್ರಿ ಆದಿತ್ಯನಾಥ್ ಅವರು, ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ಪ್ರಕ್ರಿಯೆಯ ಬಳಿಕ ಪಟ್ಟಿಯಲ್ಲಿ ಹಲವು ವ್ಯತ್ಯಾಸಗಳು ಕಂಡುಬಂದಿವೆ ಎಂದು ಆತಂಕ ವ್ಯಕ್ತಪಡಿಸಿದ್ದರು.
ರಾಜ್ಯದ ಪಂಚಾಯತ್ ಚುನಾವಣೆಯ ಮತದಾರರ ಪಟ್ಟಿಯಲ್ಲಿದ್ದ ಸುಮಾರು 1.27 ಕೋಟಿ ಹಿಂದೂ ಮತದಾರರ ಹೆಸರುಗಳು ಭಾರತೀಯ ಚುನಾವಣಾ ಆಯೋಗದ ಮತದಾರರ ಪಟ್ಟಿಯಲ್ಲಿ ಕಾಣೆಯಾಗಿವೆ ಎಂದು ಅವರು ಆರೋಪಿಸಿದ್ದರು. ಈ ವ್ಯತ್ಯಾಸಗಳ ಕುರಿತು ಸ್ಪಷ್ಟನೆ ನೀಡುವಂತೆ ರಾಜ್ಯ ಸರ್ಕಾರವು ಚುನಾವಣಾ ಆಯೋಗಕ್ಕೆ ಮನವಿ ಸಲ್ಲಿಸಿದೆ ಎಂದೂ ತಿಳಿಸಿದ್ದರು.
ಮಂಗಳವಾರ ನಡೆದ ಸುದ್ದಿಗೋಷ್ಠಿಯಲ್ಲಿ ಈ ಕುರಿತು ಪ್ರತಿಕ್ರಿಯಿಸಿದ ಮುಖ್ಯ ಚುನಾವಣಾಧಿಕಾರಿ ನವದೀಪ್ ರಿನ್ವಾ, ಚುನಾವಣಾ ಇಲಾಖೆಯು ಮತದಾರರ ಧರ್ಮ ಅಥವಾ ಜಾತಿಗೆ ಸಂಬಂಧಿಸಿದ ಯಾವುದೇ ಮಾಹಿತಿಯನ್ನು ಸಂಗ್ರಹಿಸುವುದಿಲ್ಲ. ಹೀಗಾಗಿ ಧರ್ಮ ಅಥವಾ ಜಾತಿಯ ಆಧಾರದ ಮೇಲೆ ಅಧಿಕೃತ ವಿಶ್ಲೇಷಣೆ ನಡೆಸಲು ಸಾಧ್ಯವಿಲ್ಲ ಎಂದು ಸ್ಪಷ್ಟಪಡಿಸಿದರು.
ಮತದಾರರ ದತ್ತಾಂಶದಲ್ಲಿ ಹೆಸರು, ತಂದೆ ಅಥವಾ ಸಂಗಾತಿಯ ಹೆಸರು, ವಯಸ್ಸು, ಮನೆ ಸಂಖ್ಯೆ ಹಾಗೂ ಲಿಂಗದಂತಹ ವಿವರಗಳು ಮಾತ್ರ ದಾಖಲಾಗಿರುತ್ತವೆ. ಧರ್ಮ ಮತ್ತು ಜಾತಿಗೆ ಸಂಬಂಧಿಸಿದ ಮಾಹಿತಿಗಳನ್ನು ಚುನಾವಣಾ ಆಯೋಗದ ಡೇಟಾಬೇಸ್ನಲ್ಲಿ ಸಂಗ್ರಹಿಸಲಾಗುವುದಿಲ್ಲ ಎಂದು ಅವರು ವಿವರಿಸಿದರು.
ಮತದಾರರ ಪಟ್ಟಿಗಳು ಸಾರ್ವಜನಿಕ ದಾಖಲೆಗಳಾಗಿರುವುದರಿಂದ ಮಾಧ್ಯಮ ಸಂಸ್ಥೆಗಳು ಹಾಗೂ ಸ್ವತಂತ್ರ ವಿಶ್ಲೇಷಕರು ಮತದಾರರ ಹೆಸರುಗಳು ಮತ್ತು ಲಭ್ಯವಿರುವ ಇತರ ಮಾಹಿತಿಗಳ ಆಧಾರದಲ್ಲಿ ತಮ್ಮದೇ ಆದ ವಿಶ್ಲೇಷಣೆ ನಡೆಸಬಹುದು. ಆದರೆ ಅಂತಹ ವಿಶ್ಲೇಷಣೆಗಳನ್ನು ಚುನಾವಣಾ ಇಲಾಖೆಯ ಅಧಿಕೃತ ದತ್ತಾಂಶ ಅಥವಾ ಸಂಶೋಧನೆ ಎಂದು ಪರಿಗಣಿಸಬಾರದು ಎಂದು ರಿನ್ವಾ ಸ್ಪಷ್ಟಪಡಿಸಿದರು.
ಯುಪಿಯಲ್ಲಿ 13.58 ಕೋಟಿ ಮತದಾರರು
2027ರ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಗೆ ಸಿದ್ಧತೆ ನಡೆಯುತ್ತಿರುವ ಬೆನ್ನಲ್ಲೇ ಮಂಗಳವಾರ ಕರಡು ಮತದಾರರ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ. ಈ ಪಟ್ಟಿಯಲ್ಲಿ ಒಟ್ಟು 13.58 ಕೋಟಿ ಮತದಾರರಿದ್ದು, ಅವರಲ್ಲಿ 6.20 ಕೋಟಿ ಮಹಿಳಾ ಮತದಾರರು ಸೇರಿದ್ದಾರೆ ಎಂದು ನವದೀಪ್ ರಿನ್ವಾ ಮಾಹಿತಿ ನೀಡಿದರು.
ಏಪ್ರಿಲ್ನಲ್ಲಿ ಘೋಷಿಸಲಾಗಿದ್ದ ಎಸ್ಐಆರ್ ಪ್ರಕ್ರಿಯೆಯ ನಂತರ ನಡೆದ ವಿಶೇಷ ಸಾರಾಂಶ ಪರಿಷ್ಕರಣೆ (ಎಸ್ಎಸ್ಆರ್) ಅವಧಿಯಲ್ಲಿ 18 ಲಕ್ಷಕ್ಕೂ ಅಧಿಕ ಮತದಾರರ ಹೆಚ್ಚಳವಾಗಿದೆ ಎಂದು ಅವರು ತಿಳಿಸಿದರು.
ಉತ್ತರ ಪ್ರದೇಶದ ಅಂತಿಮ ಮತದಾರರ ಪಟ್ಟಿಯನ್ನು 2027ರ ಜನವರಿ 4ರಂದು ಪ್ರಕಟಿಸಲು ನಿರ್ಧರಿಸಲಾಗಿದೆ. ವಿಧಾನಸಭಾ ಚುನಾವಣೆಗೂ ಮುನ್ನ ಮತದಾರರ ಪಟ್ಟಿಯಲ್ಲಿನ ವ್ಯತ್ಯಾಸಗಳು ಮತ್ತು ಪರಿಷ್ಕರಣೆ ಪ್ರಕ್ರಿಯೆ ಇದೀಗ ರಾಜಕೀಯ ವಲಯದಲ್ಲಿ ಗಮನ ಸೆಳೆದಿದೆ.
-
ಬಿಗ್ ನ್ಯೂಸ್8 hours agoPuttur-ಪುತ್ತೂರು: ದರ್ಬೆಯಲ್ಲಿ ಭೀಕರ ಕಾರು ಅಪಘಾತ: ಓರ್ವ ಮೃತ್ಯು, ಮತ್ತೊಬ್ಬರಿಗೆ ಗಂಭೀರ ಗಾಯ
-
Uncategorized7 hours agoPuttur-ಪುತ್ತೂರು: ಕೃಷ್ಣನಗರದಲ್ಲಿ ಮನೆ ಕಳ್ಳತನ- 2.19 ಲಕ್ಷ ರೂ. ಮೌಲ್ಯದ ಸೊತ್ತು ಕಳವು
-
ಬಿಗ್ ನ್ಯೂಸ್8 hours agoTransfer-ರಾಜ್ಯ ಪೊಲೀಸ್ ಇಲಾಖೆಯಲ್ಲಿ ಭಾರಿ ಬದಲಾವಣೆ: 32 ಐಪಿಎಸ್ ಅಧಿಕಾರಿಗಳ ವರ್ಗಾವಣೆ – ಪಶ್ಚಿಮ ವಲಯ ಐಜಿಪಿಯಾಗಿ ಶಶಿಕುಮಾರ್
-
ಮಂಗಳೂರು8 hours agoFarmers-ಕೋಳಿ ಫಾರಂಗಳಿಂದ ಹೆಚ್ಚುತ್ತಿರುವ ನೊಣಗಳು : ಕಂಪನಿಗಳ ವಿರುದ್ಧ ಹೋರಾಟಕ್ಕೆ ರೈತರು ಸಜ್ಜು
-
ರಾಜಕೀಯ6 hours agoPuttur-ಪುತ್ತೂರಿನಲ್ಲಿ ಎಲ್ಲಿ ನೋಡಿದರೂ ಭ್ರಷ್ಟಾಚಾರ ಮತ್ತು ದುಷ್ಟ ರಾಜಕೀಯವೇ ತಾಂಡವವಾಡುತ್ತಿದೆ: ಬೂಡಿಯಾರು; ಶಾಸಕರು ಬ್ಯಾನರ್ ಹಾಕಿ, ತೆಂಗಿನಕಾಯಿ ಒಡೆಯುವುದು ಮಾತ್ರ : ಸಾಜ
-
ಶಿಕ್ಷಣ24 hours agoNarendra-ನರೇಂದ್ರ ಪ.ಪೂ. ಕಾಲೇಜಿನಲ್ಲಿ ಕರ್ನಾಟಕದ ಏಕೀಕರಣ ಕುರಿತಾಗಿ ವಿದ್ಯಾರ್ಥಿಗಳಿಂದ ವಿಚಾರಗೋಷ್ಠಿ
-
ಅಂತರ ರಾಜ್ಯ5 hours agoToll Plaza-ವಾಹನ ಸವಾರರೇ ಗಮನಿಸಿ; ಇನ್ಮುಂದೆ ಟೋಲ್ನಲ್ಲೇ ವಾಹನ ವಿಮೆ ಪರಿಶೀಲನೆ: ಅವಧಿ ಮುಗಿದಿದ್ದರೆ ಮೊಬೈಲ್ಗೆ SMS, 10 ಸಾವಿರ ರೂ.ವರೆಗೆ ದಂಡ..!
-
ಬಿಗ್ ನ್ಯೂಸ್6 hours agoPuttur-ಪುತ್ತೂರು: ಕುಂಬಾರರ ಗುಡಿ ಕೈಗಾರಿಕಾ ಸಹಕಾರ ಸಂಘಕ್ಕೆ ರಾಜ್ಯಮಟ್ಟದ ಉತ್ತಮ ಸಹಕಾರ ಸಂಘ ಪ್ರಶಸ್ತಿ















