Connect with us

ಬಿಗ್ ನ್ಯೂಸ್

Shobha Karandlaje : ಹೆಸರು ಬದಲಾವಣೆಯ ಊಹಾಪೋಹದ ಬಗ್ಗೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹೇಳಿದ್ದೇನು ?

Published

on

Ad Widget

Ad Widget

Ad Widget

Ad Widget

ಉಡುಪಿ Udupi ಸೆ 30 :  ಕೇಂದ್ರ ಸಚಿವೆ ಶೋಭಾ ಕೆರಂದ್ಲಾಜೆ (Shobha Karandlaje) ಹೆಸರು ಬದಲಾಯಸಿಕೊಳ್ಳುತ್ತಾರೆ (Name change) , ತನ್ನ ಹೆಸರಿನ ಮುಂದೆ ಗೌಡ ಎಂಬ ಜಾತಿ ಸೂಚಕ ಪದ ಬಳಸಿಕೊಳ್ಳುತ್ತಾರೆ ಎಂಬ ವದಂತಿಗಳಿಗೆ ಸ್ವತ: ಶೋಭಾ ಕೆರಂದ್ಲಾಜೆಯವರೇ ಸ್ಪಷ್ಟನೆ ನೀಡಿದ್ದಾರೆ. ಈ ಬಗ್ಗೆ ಮಾಧ್ಯಮ ಪ್ರತಿನಿಧಿಗಳ ಮುಂದೆ ಖಾರವಾಗಿ ಪ್ರತಿಕ್ರಿಯಿಸಿದ  ಶೋಭಾ ಹೆಸರು ಬದಲಾಯಿಸಿಕೊಳ್ಳಲು ನನಗೇನು ತಲೆಕೆಟ್ಟಿದೆಯಾ ಎಂದು ಮರು ಪ್ರಶ್ನಿಸಿದ್ದಾರೆ.

Ad Widget

Ad Widget

Ad Widget

Ad Widget

ನನ್ನ ವಿರುದ್ಧ ಯಾರೋ ಷಡ್ಯಂತ್ರ ಮಾಡುತ್ತಿದ್ದಾರೆ. ಯಾಕೆ ಈ ಚರ್ಚೆ ಶುರುವಾಯಿತು ಗೊತ್ತಿಲ್ಲ. ‘ರಾಜಕಾರಣಿಗಳನ್ನು ಕೆಲವರು ಜೋಕರ್ ಅಂದುಕೊಂಡಿದ್ದಾರೆ. ಮಾಧ್ಯಮ, ಸಾಮಾಜಿಕ  ಜಾಲತಾಣ, ರಾಜಕೀಯ ವಲಯ ಅಥವಾ ವಿರೋಧ ಪಕ್ಷದವರು ಅಪಪ್ರಚಾರವನ್ನು ನಿಲ್ಲಿಸಿ’ ಹೀಗೆ ಅಪಪ್ರಚಾರ ಮಾಡ್ತಿರುವವರಿಗೆ ಇದು ನನ್ನ ಮನವಿ ಎಂದು ಅವರು ಹೇಳಿದರು.

Ad Widget

Ad Widget alt="Ad Widget"/>

Ad Widget

ಈ ರೀತಿಯ ಅಪಪ್ರಚಾರ ಏತಕ್ಕಾಗಿ ನಢೆಯುತ್ತಿರಬಹುದು ಎಂದು ಪತ್ರಕರ್ತರು ಪ್ರಶ್ನಿಸಿದಾಗ “ ಗೊತ್ತಿಲ್ಲ ಎಂದು ಉತ್ತರಿಸಿದ ಅವರು ಇದರ ಹಿಂದೆ ಷಡ್ಯಂತ್ರ ಇದೆ ಎಂದು ಹೇಳಿದರು.ಯಾಕೆ ಈ ಚರ್ಚೆ ಶುರುವಾಯಿತು ಗೊತ್ತಿಲ್ಲ. ಹೆಸರು ಬದಲಾಯಿಸಲು (Name Change) ನನಗೆ ತಲೆ ಕೆಟ್ಟಿದ್ಯಾ ಎಂದು ಪ್ರಶ್ನಿಸಿದ್ದಾರೆ.

Ad Widget

Ad Widget <> Ad Widget

Gold Rate Today : ಚಿನ್ನ ಹಾಗೂ ಬೆಳ್ಳಿ ದರದಲ್ಲಿ ಏರಿಕೆ – ಇಂದಿನ ದರ ಇಲ್ಲಿ ತಿಳಿಯಿರಿ

ರಾಜ್ಯ ರಾಜಕಾರಣಕ್ಕೆ ಮರಳುವ ಉದ್ದೇಶ ಹೊಂದಿರುವ ಶೋಭಾ ಕರಂದ್ಲಾಜೆಯವರು, ಒಕ್ಕಲಿಗ ಮತ ಬ್ಯಾಂಕ್‌ ಸೆಳೆಯುವ ಉದ್ಧೇಶದಿಂದ ತಮ್ಮ ಹೆಸರಿನ ಮುಂದೆ ಗೌಡ ಸರ್‌ ನೇಮ್‌ ಬಳಸಿಕೊಳ್ಳಲಿದ್ದಾರೆ ಎಂದು ಕನ್ನಡದ ಪ್ರತಿಷ್ಟಿತ ಮಾಧ್ಯಮವೊಂದು ವರದಿ ಬಿತ್ತರಿಸಿತ್ತು. ಕೇಂದ್ರ ನಾಯಕರ ಸೂಚನೆ ಮೇರೆಗೆ ಶೋಭಾ ಈ ಕಾರ್ಯಕ್ಕೆ ಮುಂದಾಗಿದ್ದು, ಅದಕ್ಕಾಗಿ ಅವರು ಸಂಖ್ಯಾ ಶಾಸ್ತ್ರಜ್ಞರನ್ನು ಸಂಪರ್ಕಿಸಿದ್ದಾರೆ ಎಂದು ಕೂಡ ಅದು ತನ್ನ ವರದಿಯಲ್ಲಿ ತಿಳಿಸಿತ್ತು.

Ad Widget

Ad Widget

ಆದರೇ ಸ್ವಕ್ಷೇತ್ರ ಉಡುಪಿಯಲ್ಲಿ ಕೇಂದ್ರ ಸಚಿವೆ ಈ ಎಲ್ಲಾ ಊಹಾಪೋಹಗಳಿಗೆ ತೆರೆ ಎಳೆದಿದ್ದಾರೆ. ಇದು ಎಲ್ಲ ಮಾಧ್ಯಮ ಸೃಷ್ಟಿ. ಈ ಸುದ್ದಿಯಲ್ಲಿ ಯಾವುದೇ ಹುರುಳಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.

SBI Recruitment 2022 : ಭಾರತೀಯ ಸ್ಟೇಟ್‌ ಬ್ಯಾಂಕ್‌ ನಿಂದ 1673 ವಿವಿಧ ಹುದ್ದೆಗಳ ನೇಮಕಾತಿ : ದಿನಾಂಕ, ಅರ್ಹತೆ, ಅರ್ಜಿ ಸಲ್ಲಿಸುವ ಪ್ರಕ್ರಿಯೆ ಬಗ್ಗೆ ಮಾಹಿತಿ  

Ad Widget
Click to comment

Leave a Reply

ಬಿಗ್ ನ್ಯೂಸ್

Puttur-ಎಸ್‌ಐಆರ್ ರದ್ದುಗೊಳಿಸುವವರೆಗೆ ಯಾವುದೇ ಚುನಾವಣೆ ನಡೆಸಬಾರದು: ಅನ್ವರ್ ಸಾದಾತ್ ಎಸ್.; ಜ್ಞಾನೇಶ್ ಕುಮಾರ್ ಅವರನ್ನು ವಜಾಗೊಳಿಸಲು ಹಾಗೂ ಎಸ್‌ಐಆರ್ ರದ್ದುಗೊಳಿಸಲು ಆಗ್ರಹಿಸಿ ಕಬಕದಲ್ಲಿ ಎಸ್‌ಡಿಪಿಐ ಜಂತರ್ ಮಂತರ್ ಪ್ರತಿಭಟನಾ ಧರಣಿ

Published

on

Ad Widget

Ad Widget

Ad Widget

Ad Widget

ಎಸ್‌ಐಆರ್ (SIR) ಪ್ರಕ್ರಿಯೆಯನ್ನು ಸಂಪೂರ್ಣವಾಗಿ ರದ್ದುಗೊಳಿಸುವವರೆಗೆ ದೇಶದಲ್ಲಿ ಯಾವುದೇ ಚುನಾವಣೆಯನ್ನು ನಡೆಸಬಾರದು. ಮತದಾನದ ಹಕ್ಕು ಪ್ರತಿಯೊಬ್ಬ ಅರ್ಹ ನಾಗರಿಕನ ಸಾಂವಿಧಾನಿಕ ಹಕ್ಕಾಗಿದ್ದು, ಆ ಹಕ್ಕನ್ನು ಕಸಿದುಕೊಳ್ಳುವ ಯಾವುದೇ ಪ್ರಯತ್ನವನ್ನು ಸಹಿಸಲು ಸಾಧ್ಯವಿಲ್ಲ ಎಂದು ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (SDPI) ಮಂಗಳೂರು ಗ್ರಾಮಾಂತರ ಜಿಲ್ಲಾಧ್ಯಕ್ಷರಾದ ಅನ್ವರ್ ಸಾದಾತ್ ಎಸ್. ಆಗ್ರಹಿಸಿದರು.

Ad Widget

Ad Widget

Ad Widget

Ad Widget

ಪುತ್ತೂರು: ಎಸ್‌ಐಆರ್ (SIR) ಪ್ರಕ್ರಿಯೆಯನ್ನು ಸಂಪೂರ್ಣವಾಗಿ ರದ್ದುಗೊಳಿಸುವವರೆಗೆ ದೇಶದಲ್ಲಿ ಯಾವುದೇ ಚುನಾವಣೆಯನ್ನು ನಡೆಸಬಾರದು. ಮತದಾನದ ಹಕ್ಕು ಪ್ರತಿಯೊಬ್ಬ ಅರ್ಹ ನಾಗರಿಕನ ಸಾಂವಿಧಾನಿಕ ಹಕ್ಕಾಗಿದ್ದು, ಆ ಹಕ್ಕನ್ನು ಕಸಿದುಕೊಳ್ಳುವ ಯಾವುದೇ ಪ್ರಯತ್ನವನ್ನು ಸಹಿಸಲು ಸಾಧ್ಯವಿಲ್ಲ ಎಂದು ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (SDPI) ಮಂಗಳೂರು ಗ್ರಾಮಾಂತರ ಜಿಲ್ಲಾಧ್ಯಕ್ಷರಾದ ಅನ್ವರ್ ಸಾದಾತ್ ಎಸ್. ಆಗ್ರಹಿಸಿದರು.

Ad Widget

Ad Widget alt="Ad Widget"/>

Ad Widget

ನವೆಂಬರ್ 24ರಂದು ಕಬಕ ಜಂಕ್ಷನ್‌ನಲ್ಲಿ ಜ್ಞಾನೇಶ್ ಕುಮಾರ್ ಅವರನ್ನು ವಜಾಗೊಳಿಸಬೇಕು ಹಾಗೂ ಎಸ್‌ಐಆರ್ ಪ್ರಕ್ರಿಯೆಯನ್ನು ರದ್ದುಗೊಳಿಸಬೇಕು ಎಂದು ಆಗ್ರಹಿಸಿ SDPI ಪುತ್ತೂರು ವಿಧಾನಸಭಾ ಕ್ಷೇತ್ರ ಸಮಿತಿ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಜಂತರ್ ಮಂತರ್ ಪ್ರತಿಭಟನಾ ಧರಣಿಯಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಅವರು ಮಾತನಾಡಿದರು.

Ad Widget

Ad Widget <> Ad Widget

ಎಸ್‌ಐಆರ್ ಪ್ರಕ್ರಿಯೆಯಿಂದ ಅರ್ಹ ಮತದಾರರು ಮತದಾನದ ಹಕ್ಕನ್ನು ಕಳೆದುಕೊಳ್ಳುವ ಆತಂಕ ಎದುರಾಗಿದೆ. ಪ್ರಜಾಪ್ರಭುತ್ವದ ಮೂಲ ಆಶಯವಾದ ಮತದಾನದ ಹಕ್ಕನ್ನು ರಕ್ಷಿಸುವುದು ಸರ್ಕಾರದ ಜವಾಬ್ದಾರಿಯಾಗಿದ್ದು, ಅರ್ಹ ಮತದಾರರಿಗೆ ಯಾವುದೇ ಅನ್ಯಾಯವಾಗದಂತೆ ಕ್ರಮ ಕೈಗೊಳ್ಳಬೇಕು ಎಂದು ಅವರು ಒತ್ತಾಯಿಸಿದರು.

ಯಂಗ್ ಡೆಮಾಕ್ರಟ್ಸ್ ಕೇರಳ ರಾಜ್ಯ ಸಮಿತಿ ಸದಸ್ಯರಾದ ಅಹ್ಮದ್ ನಿಸಾರ್ ಮಾತನಾಡಿ, ಸಂಘಪರಿವಾರದ ರಾಜಕೀಯ ನಿಲುವುಗಳು ಹಾಗೂ ಬಿಜೆಪಿ ಸರ್ಕಾರದ ನೀತಿಗಳನ್ನು ಟೀಕಿಸಿದರು. ಪ್ರಜಾಪ್ರಭುತ್ವದ ಮೌಲ್ಯಗಳನ್ನು ಮತ್ತು ಸಂವಿಧಾನ ನೀಡಿರುವ ಹಕ್ಕುಗಳನ್ನು ರಕ್ಷಿಸುವ ಅಗತ್ಯವನ್ನು ಒತ್ತಿಹೇಳಿದ ಅವರು, ಎಸ್‌ಐಆರ್ ಪ್ರಕ್ರಿಯೆಯಿಂದ ಅರ್ಹ ಮತದಾರರಿಗೆ ಅನ್ಯಾಯವಾಗಬಾರದು ಎಂದು ಆಗ್ರಹಿಸಿದರು.

Ad Widget

Ad Widget

SDPI ಕರ್ನಾಟಕ ರಾಜ್ಯ ಸಮಿತಿ ಸದಸ್ಯರಾದ ಅಡ್ವೊಕೇಟ್ ಮಜೀದ್ ಖಾನ್ ಮಾತನಾಡಿ, ಮತದಾನದ ಹಕ್ಕು ಪ್ರತಿಯೊಬ್ಬ ಅರ್ಹ ನಾಗರಿಕನಿಗೂ ಖಾತರಿಯಾಗಬೇಕು. ಎಸ್‌ಐಆರ್ ಪ್ರಕ್ರಿಯೆಯಿಂದ ಮತದಾರರ ಪಟ್ಟಿಯಲ್ಲಿ ಉಂಟಾಗಬಹುದಾದ ಲೋಪಗಳನ್ನು ತಡೆಯುವ ನಿಟ್ಟಿನಲ್ಲಿ ಈ ಪ್ರಕ್ರಿಯೆಯನ್ನು ರದ್ದುಗೊಳಿಸಬೇಕು ಎಂದು ಒತ್ತಾಯಿಸಿದರು.

WIM ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ನಸ್ರಿಯಾ ಬೆಳ್ಳಾರೆ ಮಾತನಾಡಿ, ಮಹಿಳೆಯರು ಸೇರಿದಂತೆ ಸಮಾಜದ ಪ್ರತಿಯೊಬ್ಬ ಅರ್ಹ ನಾಗರಿಕನಿಗೂ ಮತದಾನದ ಹಕ್ಕು ಸಮಾನವಾಗಿ ದೊರೆಯಬೇಕು. ಯಾವುದೇ ಅರ್ಹ ಮತದಾರರು ಮತದಾರರ ಪಟ್ಟಿಯಿಂದ ಹೊರಗುಳಿಯುವ ಪರಿಸ್ಥಿತಿ ನಿರ್ಮಾಣವಾಗದಂತೆ ಸರ್ಕಾರ ಜವಾಬ್ದಾರಿಯಿಂದ ನಡೆದುಕೊಳ್ಳಬೇಕು ಎಂದರು.

ಮತದಾನ ವಂಚನೆ, ಬೆಲೆ ಏರಿಕೆ ವಿರುದ್ಧ ಹೆನ್ರಿ ಡಿಸೋಜಾ ಆಕ್ರೋಶ:
SDTU ಮಂಗಳೂರು ಗ್ರಾಮಾಂತರ ಜಿಲ್ಲಾಧ್ಯಕ್ಷರಾದ ಹೆನ್ರಿ ಡಿಸೋಜಾ ಮಾತನಾಡಿ, ಮತದಾನದ ಹಕ್ಕು ಕಸಿಯುವ ಹುನ್ನಾರ ನಡೆಯುತ್ತಿದ್ದು, ಹಕ್ಕಿಗಾಗಿ ಹೋರಾಡುವವರನ್ನು ಜೈಲಿಗೆ ಹಾಕುವ ಪ್ರಯತ್ನ ಖಂಡನೀಯ ಎಂದರು. ಮತದಾನ ವಂಚನೆಯ ಆರೋಪ ಹೊತ್ತಿರುವ ಜ್ಞಾನೇಶ್ ಕುಮಾರ್ ಅವರನ್ನು ಕೂಡಲೇ ಅಧಿಕಾರದಿಂದ ವಜಾಗೊಳಿಸಿ, ಬಂಧಿಸಿ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು. ಸಮಾಜಸೇವಕ ಹರೇಕಳ ಹಾಜಬ್ಬ ಅವರಂತಹವರ ಹೆಸರೇ ಮತದಾರರ ಪಟ್ಟಿಯಿಂದ ಕೈಬಿಟ್ಟು ಹೋಗಿದ್ದು, ಸುಮಾರು 13 ಕೋಟಿಗೂ ಅಧಿಕ ಮತದಾರರ ಹೆಸರುಗಳು ಪಟ್ಟಿಯಿಂದ ಡಿಲೀಟ್ ಆಗಿರುವುದು ಆತಂಕಕಾರಿಯಾಗಿದೆ ಎಂದರು. ಇದೇ ವೇಳೆ ಅಗತ್ಯ ವಸ್ತುಗಳ ಬೆಲೆ ಏರಿಕೆ ಹಾಗೂ ಮಂಗಳೂರು ವಿಮಾನ ನಿಲ್ದಾಣದ ಖಾಸಗೀಕರಣ ಮತ್ತು ಪ್ರವೇಶ ಶುಲ್ಕ ವಸೂಲಾತಿಯ ವಿರುದ್ಧವೂ ಅವರು ಆಕ್ರೋಶ ವ್ಯಕ್ತಪಡಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು SDPI ಪುತ್ತೂರು ಕ್ಷೇತ್ರಾಧ್ಯಕ್ಷರಾದ ಅಶ್ರಫ್ ಬಾವು ವಹಿಸಿದ್ದರು.
ವೇದಿಕೆಯಲ್ಲಿ SDTU ಕರ್ನಾಟಕ ರಾಜ್ಯ ಸಮಿತಿ ಸದಸ್ಯ ಹಮೀದ್ ಸಾಲ್ಮರ, SDPI ಮಂಗಳೂರು ಗ್ರಾಮಾಂತರ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸಿದ್ದೀಕ್ ಪುತ್ತೂರು, ಕಾರ್ಯದರ್ಶಿಗಳಾದ ಅಶ್ರಫ್ ತಲಪಾಡಿ, ಶಾಕಿರ್ ಅಲಕೆಮಜಲು, ಉಪಾಧ್ಯಕ್ಷ ಇನಾಸ್ ರೊಡ್ರಿಗಸ್, ಸದಸ್ಯ ಸಿದ್ದೀಕ್ ಅಲೆಕ್ಕಾಡಿ, ಯಂಗ್ ಡೆಮಾಕ್ರಟ್ಸ್ ಮಂಗಳೂರು ಗ್ರಾಮಾಂತರ ಸದಸ್ಯರಾದ ಹಮ್ದಾ ಮೆಲ್ಕಾರ್, ಹಮೀದ್ ಪುತ್ತೂರು, SDPI ಬಂಟ್ವಾಳ ವಿಧಾನಸಭಾ ಕ್ಷೇತ್ರ ಅಧ್ಯಕ್ಷ ಶಾಹುಲ್ ಹಮೀದ್ ಎಸ್.ಎಚ್., ಪುತ್ತೂರು ವಿಧಾನಸಭಾ ಕ್ಷೇತ್ರ ಸಮಿತಿ ಕಾರ್ಯದರ್ಶಿ ಇಸ್ಮಾಯಿಲ್ ಕೆಮ್ಮಾಯಿ ಉಪಸ್ಥಿತರಿದ್ದರು.

ಪ್ರತಿಭಟನೆಯಲ್ಲಿ ಪುತ್ತೂರು ಕ್ಷೇತ್ರ ಸಮಿತಿ ಸದಸ್ಯ ಸಿರಾಜ್ ಕೂರ್ನಡ್ಕ ಮತ್ತು ತಂಡ ಎಸ್‌ಐಆರ್ ವಿರೋಧಿ ಹಾಡುಗಳನ್ನು ಹಾಡುವ ಮೂಲಕ ಪ್ರತಿಭಟನೆಗೆ ಧ್ವನಿಗೂಡಿಸಿದರು.

ಪುತ್ತೂರು ವಿಧಾನಸಭಾ ಕ್ಷೇತ್ರ ಸಮಿತಿ ಜೊತೆ ಕಾರ್ಯದರ್ಶಿ ಅಬ್ದುಲ್ ರಹಿಮಾನ್ ಸ್ವಾಗತಿಸಿದರು. ಪುತ್ತೂರು ನಗರ ಸಮಿತಿ ಅಧ್ಯಕ್ಷ ತಾಜುದ್ದೀನ್ ಸಾಲ್ಮರ ವಂದಿಸಿದರು. ಪುತ್ತೂರು ವಿಧಾನಸಭಾ ಕ್ಷೇತ್ರ ಸಮಿತಿ ಕಾರ್ಯದರ್ಶಿ ಉಸ್ಮಾನ್ ಎ.ಕೆ. ಕಾರ್ಯಕ್ರಮ ನಿರೂಪಿಸಿದರು.

Ad Widget
Continue Reading

ಬಿಗ್ ನ್ಯೂಸ್

Rain-ಸುಳ್ಯ-ಪುತ್ತೂರು ಭಾಗಗಳಲ್ಲಿ ಹಲವೆಡೆ ಮಳೆ : ಎಷ್ಟು ದಿನ ಮಳೆಯಾಗಲಿದೆ ಗೊತ್ತೇ..?

Published

on

Ad Widget

Ad Widget

Ad Widget

Ad Widget

ಕರಾವಳಿಯ ದ.ಕ ಕಾಸರಗೋಡು ಜಿಲ್ಲೆಗಳಲ್ಲಿ ಹಾಗೂ ಮಲೆನಾಡಿನಲ್ಲಿ ನಿನ್ನೆ ಸಂಜೆ ಮೋಡದ ವಾತಾವರಣದಿಂದ ಕೂಡಿದ್ದು ಪುತ್ತೂರು , ಕಡಬ, ಸುಳ್ಯದ ಕೆಲವು ಭಾಗಗಳಲ್ಲಿ ಉತ್ತಮ ಮಳೆಯಾಗಿದೆ. ನ.25ರ ರಾತ್ರಿ ಕಡಬ ತಾಲೂಕಿನ ಕಾಣಿಯೂರು , ಪಂಜ ಭಾಗಗಳಲ್ಲಿ ಉತ್ತಮ ಮಳೆಯಾಗಿದೆ. ಪುತ್ತೂರಿನ ಹಲವು ಕಡೆ ಸಾಧಾರಣ ಮಳೆಯಾಗಿದೆ.

Ad Widget

Ad Widget

Ad Widget

Ad Widget

ಪುತ್ತೂರು : ಕರಾವಳಿಯ ದ.ಕ ಕಾಸರಗೋಡು ಜಿಲ್ಲೆಗಳಲ್ಲಿ ಹಾಗೂ ಮಲೆನಾಡಿನಲ್ಲಿ ನಿನ್ನೆ ಸಂಜೆ ಮೋಡದ ವಾತಾವರಣದಿಂದ ಕೂಡಿದ್ದು ಪುತ್ತೂರು , ಕಡಬ, ಸುಳ್ಯದ ಕೆಲವು ಭಾಗಗಳಲ್ಲಿ ಉತ್ತಮ ಮಳೆಯಾಗಿದೆ.

Ad Widget

Ad Widget alt="Ad Widget"/>

Ad Widget

ನ.25ರ ರಾತ್ರಿ ಕಡಬ ತಾಲೂಕಿನ ಕಾಣಿಯೂರು , ಪಂಜ ಭಾಗಗಳಲ್ಲಿ ಉತ್ತಮ ಮಳೆಯಾಗಿದೆ. ಪುತ್ತೂರಿನ ಹಲವು ಕಡೆ ಸಾಧಾರಣ ಮಳೆಯಾಗಿದೆ.

Ad Widget

Ad Widget <> Ad Widget

ದಕ್ಷಿಣ ಒಳನಾಡಿನ ಚಿಕ್ಕಬಳ್ಳಾಪುರ ಕೋಲಾರ ರಾಮನಗರ ಬೆಂಗಳೂರು ತುಮಕೂರು ಜಿಲ್ಲೆಗಳ ಹಲವೆಡೆ ಮಳೆಯಾಗಿದೆ.

ಇವತ್ತಿನ ಮುನ್ಸೂಚನೆ ಪ್ರಕಾರ ಕರಾವಳಿ ಜಿಲ್ಲೆಗಳಲ್ಲಿ ಸಂಜೆ ಮೋಡದ ವಾತಾವರಣ ಇರಲಿದ್ದು ದ.ಕ. ಉಡುಪಿ ಉ.ಕ ಜಿಲ್ಲೆಗಳ ಅಲ್ಲಲ್ಲಿ ಸಂಜೆ ಅಥವಾ ರಾತ್ರಿ ಮಳೆ ಬರುವ ಸಾಧ್ಯತೆ ಇದೆ. ರಾತ್ರಿ ಗುಡುಗು ಮಳೆಯ ಮುನ್ಸೂಚನೆ ಇದ್ದರೂ ವಾತಾವರಣದ ಹ್ಯುಮಿಡಿಟಿ ಕಡಿಮೆ ಆದರೇ ಮಳೆ ಪ್ರಮಾಣ ಕಡಿಮೆ ಆಗಿ ಮೋಡದ ವಾತಾವರಣ ಮುಂದುವರೆಯಬಹುದು ಎನ್ನಲಾಗಿದೆ. ನವೆಂಬರ್ 28 ತನಕ ಸಂಜೆ ಮೋಡ – ಮಳೆಯ ಸಾಧ್ಯತೆ ಮುಂದುವರೆಯಬಹುದು ಎಂದು ಹವಮಾನ ತಜ್ಞರು ಅಭಿಪ್ರಾಯ ಪಟ್ಟಿದ್ದಾರೆ.

Ad Widget

Ad Widget

ಮಲೆನಾಡಿನಲ್ಲಿ ಸಂಜೆಯ ಮೋಡ ಬರಲಿದ್ದು ಕೊಡಗು ಹಾಸನ ಚಿಕ್ಕಮಗಳೂರು ಶಿವಮೊಗ್ಗ ಜಿಲ್ಲೆಗಳ ಅಲ್ಲಲ್ಲಿ ಗುಡುಗು ಸಹಿತ ತುಂತುರು – ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. 27 ತನಕ ಸಂಜೆ ಮಳೆಯ ಸಾಧ್ಯತೆ ಇದೆ.

ದಕ್ಷಿಣ ಒಳನಾಡಿನ ಕೋಲಾರ ಚಿಕ್ಕಬಳ್ಳಾಪುರ ಬೆಂಗಳೂರು – ಗ್ರಾಮಾಂತರ ರಾಮನಗರ ಚಾಮರಾಜನಗರ ಮೈಸೂರು ಮಂಡ್ಯ ಜಿಲ್ಲೆಗಳ ಅಲ್ಲಲ್ಲಿ ಸಾಧಾರಣ ಮಳೆಯ ಮುನ್ಸೂಚನೆ ಇದೆ. ತುಮಕೂರು ಚಿತ್ರದುರ್ಗ ದಾವಣಗೆರೆ ವಿಜಯನಗರ ಜಿಲ್ಲೆಗಳ ಅಲ್ಲಲ್ಲಿ ತುಂತುರು ಮಳೆಯಾಗಬಹುದು. ನ 28 ರಿಂದ ಮಳೆ ಪೂರ್ತಿ ಕಡಿಮೆ ಆಗಬಹುದು.

ಉತ್ತರ ಒಳನಾಡಿನಲ್ಲಿ ಮೋಡದ ವಾತಾವರಣ ಬರಬಹುದು.ಬಳ್ಳಾರಿ ರಾಯಚೂರು ಹಾವೇರಿ ಗದಗ ಧಾರವಾಡ ಜಿಲ್ಲೆಗಳ ಅಲ್ಲಲ್ಲಿ ತುಂತುರು/ ಸಾಮಾನ್ಯ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನ ಮೋಡ ಮಧ್ಯ ಕರ್ನಾಟಕ ಚಲಿಸುವ ಕಾರಣ ಒಂದೆರಡು ದಿನ ಸಣ್ಣ ಮಳೆಯಾಗಲಿದ್ದು ನಂತರ ಚಳಿ ಮುಂದುವರೆಯಬಹುದು.

ಬಂಗಾಳಕೊಲ್ಲಿಯಿಂದ ಬೀಸುವ ಪೂರ್ವದ ಮಾರುತಗಳಿಂದ ತಮಿಳುನಾಡು ಕೇರಳ ಕರ್ನಾಟಕದಲ್ಲಿ ಮಳೆಯಾಗುತ್ತಿದ್ದು ಮುಂದಿನ 3-4 ದಿನ ಮಳೆ ಮುಂದುವರೆಯುವ ಮುನ್ಸೂಚನೆ ಇದೆ. ಡಿಸೆಂಬರ್ ಮೊದಲ ವಾರ ದಕ್ಷಿಣ ಬಂಗಾಳಕೊಲ್ಲಿಯಲ್ಲಿ ಇನ್ನೊಂದು ವಾಯುಭಾರ ಕುಸಿತವಾಗಿ ದಕ್ಷಿಣ ಶ್ರೀಲಂಕಾ ಮೂಲಕ ಅರಬ್ಬೀಸಮುದ್ರದತ್ತ ಚಲಿಸುವ ಸಾಧ್ಯತೆಯೂ ಇದೆ.

Ad Widget
Continue Reading

ಮಂಗಳೂರು

Soujanya case: Big Breaking: ಸೌಜನ್ಯ ಪ್ರಕರಣದಲ್ಲಿ ಯೂಟ್ಯೂಬ್ ಚಾನೆಲ್‌ಗಳ ಮಸಾಲಾ ಸುದ್ದಿಗೆ ಖರ್ಗೆ ಗರಂ! ವೈಜ್ಞಾನಿಕ ದಾಖಲೆಗಳ ಆಧಾರದಲ್ಲೆ ತನಿಖೆ

Published

on

Ad Widget

Ad Widget

Ad Widget

Ad Widget

ಸೌಜನ್ಯ ಪ್ರಕರಣ ಅತ್ಯಂತ ಸೂಕ್ಷ್ಮ ವಿಚಾರವಾಗಿದ್ದು, ಪ್ರಕರಣದ ಮರುತನಿಖೆ ಸೇರಿದಂತೆ ಯಾವುದೇ ಕ್ರಮ ಕೈಗೊಳ್ಳುವಾಗ ವೈಜ್ಞಾನಿಕ ದಾಖಲೆಗಳು ಹಾಗೂ ಸಾಕ್ಷ್ಯಗಳ ಆಧಾರದಲ್ಲೇ ಮುಂದುವರಿಯಬೇಕು. ಯಾರಿಗೂ ಅನ್ಯಾಯವಾಗಬಾರದು ಎಂಬುದು ಸರ್ಕಾರದ ಉದ್ದೇಶ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.

Ad Widget

Ad Widget

Ad Widget

Ad Widget

ಮಂಗಳೂರು: ಸೌಜನ್ಯ ಪ್ರಕರಣ ಅತ್ಯಂತ ಸೂಕ್ಷ್ಮ ವಿಚಾರವಾಗಿದ್ದು, ಪ್ರಕರಣದ ಮರುತನಿಖೆ ಸೇರಿದಂತೆ ಯಾವುದೇ ಕ್ರಮ ಕೈಗೊಳ್ಳುವಾಗ ವೈಜ್ಞಾನಿಕ ದಾಖಲೆಗಳು ಹಾಗೂ ಸಾಕ್ಷ್ಯಗಳ ಆಧಾರದಲ್ಲೇ ಮುಂದುವರಿಯಬೇಕು. ಯಾರಿಗೂ ಅನ್ಯಾಯವಾಗಬಾರದು ಎಂಬುದು ಸರ್ಕಾರದ ಉದ್ದೇಶ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.

Ad Widget

Ad Widget alt="Ad Widget"/>

Ad Widget

ಮಂಗಳೂರಿನಲ್ಲಿ ಸೌಜನ್ಯ ಪ್ರಕರಣದ ಮರುತನಿಖೆಗೆ ಸಂಬಂಧಿಸಿದಂತೆ ಮಾತನಾಡಿದ ಅವರು, ಪ್ರಕರಣದ ಸೂಕ್ಷ್ಮತೆ ಹಾಗೂ ಸಾರ್ವಜನಿಕರ ಭಾವನೆಗಳನ್ನು ಗಮನದಲ್ಲಿಟ್ಟುಕೊಂಡು ತನಿಖಾಧಿಕಾರಿಗಳ ಬದಲಾವಣೆ ಮಾಡಲಾಗಿದೆ ಎಂದು ತಿಳಿಸಿದರು.

Ad Widget

Ad Widget <> Ad Widget

ಪ್ರಕರಣ ನಡೆದು ಸುಮಾರು 14 ವರ್ಷಗಳಾಗಿವೆ. ಇಂತಹ ಸಂದರ್ಭದಲ್ಲಿ ಸತ್ಯವನ್ನು ಹೊರತರುವುದಕ್ಕೆ ವೈಜ್ಞಾನಿಕ ದಾಖಲೆಗಳು ಹಾಗೂ ಸಾಕ್ಷ್ಯಗಳ ಆಧಾರ ಅಗತ್ಯವಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಹಲವು ಮಂದಿ ಪತ್ರ ಬರೆದು ಕೆಲವು ವಿಚಾರಗಳನ್ನು ನನ್ನ ಗಮನಕ್ಕೆ ತಂದಿದ್ದಾರೆ. ಆ ಮಾಹಿತಿಗಳನ್ನು ತನಿಖೆಗೆ ನೀಡಲಾಗಿದೆ ಎಂದು ಹೇಳಿದರು.

ಇದೇ ವೇಳೆ, ಕೆಲವು ಯೂಟ್ಯೂಬ್ ಚಾನೆಲ್‌ಗಳು ಪ್ರಕರಣದ ಕುರಿತು ತಾವೇ ತೀರ್ಮಾನಗಳನ್ನು ಪ್ರಕಟಿಸುತ್ತಿರುವಂತೆ ಕಾಣುತ್ತಿದೆ. ಅವರಿಗೆ ಮಾಹಿತಿ ಎಲ್ಲಿಂದ ಬರುತ್ತಿದೆ ಎಂಬುದು ತಿಳಿದಿಲ್ಲ. ಕೆಲವು ಚಾನೆಲ್‌ಗಳು ಸುದ್ದಿಗಳಿಗೆ ಮಿರ್ಚಿ ಮಸಾಲೆ ಸೇರಿಸಿ ಪ್ರಸಾರ ಮಾಡುತ್ತಿವೆ ಎಂದು ಅವರು ಟೀಕಿಸಿದರು.

Ad Widget

Ad Widget

ಯೂಟ್ಯೂಬ್‌ನಲ್ಲಿ ಅಧಿಕೃತ ಪತ್ರಕರ್ತರು ಬಹಳ ಕಡಿಮೆ ಇದ್ದಾರೆ. ಕೆಲವರು ಮಾತ್ರ ಹಿರಿಯ ಹಾಗೂ ಪ್ರಬುದ್ಧ ಪತ್ರಕರ್ತರಾಗಿದ್ದಾರೆ. ಸಾರ್ವಜನಿಕರು ಸುಳ್ಳು ಸುದ್ದಿಗಳಿಗೆ ಕಿವಿಗೊಡಬಾರದು ಎಂದು ಪ್ರಿಯಾಂಕ್ ಖರ್ಗೆ ಮನವಿ ಮಾಡಿದರು.

Ad Widget
Continue Reading
ರಾಜಕೀಯ29 minutes ago

Priyanka Kharge-ಕರ್ನಾಟಕದ ರಾಜ್ಯ ಜಿಡಿಪಿಗೆ ಎರಡನೇ ಅತಿ ದೊಡ್ಡ ಕೊಡುಗೆ ನೀಡುವ ಜಿಲ್ಲೆ ದಕ್ಷಿಣ ಕನ್ನಡ: ಪ್ರಿಯಾಂಕ್ ಖರ್ಗೆ; ಬೆಂಗಳೂರಿನ ಬೆಳವಣಿಗೆಯ ಅಂತರವನ್ನು ಕಡಿಮೆ ಮಾಡುವ ಸಾಮರ್ಥ್ಯ ಮಂಗಳೂರಿಗಿದೆ; ಹೂಡಿಕೆ, ಕೌಶಲ್ಯಾಭಿವೃದ್ಧಿ ಮತ್ತು ನವೋದ್ಯಮಗಳ ಮೂಲಕ ಬಿಯಾಂಡ್ ಬೆಂಗಳೂರು ಅಭಿಯಾನವನ್ನು ವೇಗಗೊಳಿಸಲು ಉದ್ಯಮ ವಲಯಕ್ಕೆ ಸಚಿವರ ಕರೆ

ನಿಧನ ವಾರ್ತೆ42 minutes ago

Accident-ಯುಎಇಯಲ್ಲಿ ಭೀಕರ ಬಸ್–ಲಾರಿ ಅಪಘಾತ; ಕಾಸರಗೋಡಿನ ಅಶ್ರಫ್ ಸೇರಿ ನಾಲ್ವರು ಕೇರಳಿಗರು ಸಾವು

ಬಿಗ್ ನ್ಯೂಸ್53 minutes ago

Puttur-ಎಸ್‌ಐಆರ್ ರದ್ದುಗೊಳಿಸುವವರೆಗೆ ಯಾವುದೇ ಚುನಾವಣೆ ನಡೆಸಬಾರದು: ಅನ್ವರ್ ಸಾದಾತ್ ಎಸ್.; ಜ್ಞಾನೇಶ್ ಕುಮಾರ್ ಅವರನ್ನು ವಜಾಗೊಳಿಸಲು ಹಾಗೂ ಎಸ್‌ಐಆರ್ ರದ್ದುಗೊಳಿಸಲು ಆಗ್ರಹಿಸಿ ಕಬಕದಲ್ಲಿ ಎಸ್‌ಡಿಪಿಐ ಜಂತರ್ ಮಂತರ್ ಪ್ರತಿಭಟನಾ ಧರಣಿ

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!