ಮಂಗಳೂರು
Arrecanut Rate ಭೂತನ್ ನಿಂದ ಅಡಿಕೆ ಆಮದಿಗೆ ಷರತ್ತು ರಹಿತ ಅನುಮತಿ ಬೆನ್ನಲೆ ಧಾರಣೆ ಕುಸಿತದ ಆತಂಕ – ಹೆಚ್ಚಿದ ಭಯ | ಭೀತಿ ಬೇಡ : ರಾಜ್ಯ , ಕೇಂದ್ರ ಸಚಿವರ ಅಭಯ
ಮಂಗಳೂರು Mangalore ಅ 1: ದೇಶದ ಅಡಿಕೆ ಬೆಳೆಗಾರರ ಹಿತ ರಕ್ಷಣೆಗೆ ತರಲಾಗಿದ್ದ ಅಡಿಕೆ ಆಮದು ನಿರ್ಬಂಧ ನಿಯಮಗಳಿಗೆ ಕೇಂದ್ರ ವಾಣಿಜ್ಯ ಸಚಿವಾಲಯ ತಿದ್ದುಪಡಿ ತಂದು ಷರತ್ತು ರಹಿತವಾಗಿ ಭೂತಾನ್‌ನಿಂದ ಆಮದಿಗೆ ಅನುಮತಿ ಕಲ್ಪಿಸಿದ್ದು ಆಡಿಕೆ ಮಾರುಕಟ್ಟೆಯಲ್ಲಿ ದೊಡ್ಡ ಹಲ್ ಚಲ್ ಸೃಷ್ಟಿಸಿದೆ. ಗಣೇಶ ಚತುರ್ಥಿಯ ಅಸುಪಾಸಿನಲ್ಲಿ ಏರಿಕೆಯತ್ತ ಮುಖ ಮಾಡಿದೆ ಅಡಿಕೆ ಧಾರಣೆ , ಬಳಿಕ ಸ್ಥಿರಗೊಂಡಿತ್ತು. ಆದರೇ ಆಡಿಕೆ ಆಮದಿಗೆ ಅನುಮತಿಗೆ ಸರಕಾರ ಅನುಮತಿ ನೀಡುತ್ತಲೇ , ಮಾರುಕಟ್ಟೆಯಲ್ಲಿ ಧಾರಣೆ ಕುಸಿತದ ಪರ್ವ ಆರಂಭಗೊಂಡಿದೆ.
ಭೂತಾನ್‌ನಿಂದ ಎಂಐಪಿ ಇಲ್ಲದೆ ಪ್ರತಿವರ್ಷ 17,000 ಟನ್ ಹಸಿ ಅಡಿಕೆ ಆಮದು ಮಾಡಿಕೊಳ್ಳಲು ವಾಣಿಜ್ಯ ಸಚಿವಾಲಯವು ಸೆ 28 ರಂದು ಅನುಮತಿ ನೀಡಿದೆ. ಕಡಿಮೆ ಬೆಲೆಗೆ ಅಡಿಕೆ ಆಮದಾಗಿ ದೇಸಿಯ ಬೆಳೆಗಾರ ನಷ್ಟ ಅನುಭವಿಸುವದನ್ನು ತಪ್ಪಿಸಲು ಕೆಲ ವರ್ಷಗಳ ಹಿಂದೆ ಕನಿಷ್ಠ ಆಮದು ಬೆಲೆ (ಮಿನಿಮಮ್ ಇಂಪೋರ್ಟ್ ಪ್ರೈಸ್–ಎಂಐಪಿ) ನೀತಿಯನ್ನು ಕೇಂದ್ರ ವಾಣಿಜ್ಯ ಸಚಿವಾಲಯ ಜಾರಿಗೆ ತಂದಿತ್ತು. ಈ ಪ್ರಕಾರ ಪ್ರತಿ ಕೆ.ಜಿ ಅಡಿಕೆಗೆ ₹251 ಎಂಐಪಿ ನಿಗದಿ ಮಾಡಲಾಗಿತ್ತು. ಆದರೇ ಇದೀಗ ಅದಕ್ಕೆ ತಿದ್ದುಪಡಿ ಮಾಡಿ ಆಮದಿಗೆ ಅನುಮತಿ ನೀಡಿರುವುದು ಆಡಿಕೆ ಮಾರುಕಟ್ಟೆಯನ್ನು ಅಧೀರಗೊಳಿಸಿದೆ.
ವರದಿಗಳ ಪ್ರಕಾರ, ಶುಕ್ರವಾರ ಮಂಗಳೂರು ಅಡಿಕೆ ಮಾರುಕಟ್ಟೆಯಲ್ಲಿ ಧಾರಣೆ ಕುಸಿತ ಕಂಡಿದೆ. ಆದರೇ ಸದ್ಯ ಕ್ಯಾಂಪ್ಕೋದಲ್ಲಿ ಧಾರಣೆಯನ್ನು ಸ್ಥಿರವಾಗಿ ಇಡಲಾಗಿದೆ. ಕ್ಯಾಂಪ್ಕೋದಲ್ಲಿ ಕಳೆದೆರಡು ವಾರದಿಂದ ಹೊಸ ಅಡಿಕೆಗೆ ಪ್ರತಿ ಕೆಜಿಗೆ ಗರಿಷ್ಟ 475 ಹಾಗೂ ಹಳೇ ಆಡಿಕೆಗೆ ಗರಿಷ್ಟ 565 ರೂಪಾಯಿಗೆ ಖರೀದಿಸಲಾಗುತ್ತಿದೆ. ಮುಕ್ತ ಮಾರುಕಟ್ಟೆಯಲ್ಲಿ ಶುಕ್ರವಾರ ಹೊಸ ಅಡಿಕೆ ದರ 480ರ ಅಸುಪಾಸಿನಲ್ಲಿದೆ. ಅದಕ್ಕೂ ಮೊದಲು ಇತ್ತು 495ರ ಅಸುಪಾಸಿನಲ್ಲಿ ಗಿರಕಿ ಹೊಡೆಯುತಿತ್ತು. ಇನ್ನು ಹಳೆ ಅಡಿಕೆ ಧಾರಣೆಯಲ್ಲೂ 10 ರೂಪಾಯಿಯಷ್ಟು ಕುಸಿತ ಉಂಟಾಗಿದೆ.
Gold Rate Today : ಚಿನ್ನ – ಬೆಳ್ಳಿ ದರದಲ್ಲಿ ಏರಿಕೆ : ಇಂದಿನ ದರ ಇಲ್ಲಿ ತಿಳಿಯಿರಿ
ಧಾರಣೆ ಕುಸಿತಕ್ಕಿಂತಲೂ. ಕಳೆದೆರಡು ದಿನಗಳಿಂದ ಮಾರುಕಟ್ಟೆಯಲ್ಲಿ ಖರೀದಿಗೆ ಮೊದಲಿನ ಉತ್ಸಾಹವಿಲ್ಲ. ವರ್ತಕರು ನಿರಾಸಕ್ತಿ ತೋರುತ್ತಿದ್ದಾರೆ ಎನ್ನುತ್ತಿದ್ದಾರೆ ಬೆಳೆಗಾರರು . ಆದರೇ ಧಾರಣೆ ಕುಸಿತಕ್ಕೂ ಅಡಿಕೆ ಅಮದಿಗೆ ಅನುಮತಿ ನೀಡಿರುವದಕ್ಕೂ ಸಂಬಂಧವಿಲ್ಲ ಎನ್ನುತ್ತಿದ್ದಾರೆ ಕೆಲ ಮಾರುಕಟ್ಟೆ ತಜ್ಞರು. ಧಾರಣೆ ಕುಸಿತ ಎನ್ನುವುದು ಪರಿಸ್ಥಿತಿಯ ಲಾಭ ಪಡೆಯಲು ಕೆಲ ವರ್ತಕರು ಮಾಡುತ್ತಿರುವ ತಂತ್ರ . ಆದರೇ ಇದಕ್ಕೆ ಬೆಳೆಗಾರ ವಿಚಲಿತನಾಗದೇ ಮಾರುಕಟ್ಟೆ ಸ್ಥಿರ ಆಗುವವರೆಗೆ ಕಾದರೇ ಮತ್ತೆ ಧಾರಣೆ ಹೆಚ್ಚಳವಾಗುವ ಸಾಧ್ಯತೆ ಇದೆ ಎನ್ನುತ್ತಾರೆ ಹಲವು ತಜ್ಞರು.
ಆದರೇ ಇದೇ ವೇಳೆ ಆಡಿಕೆ ಆಮದಿಗೆ ಅನುಮತಿ ನೀಡಿರುವುದು, ಆಡಿಕೆ ಮಾರುಕಟ್ಟೆ ಮೇಲೆ ದೂರಗಾಮಿ ಪರಿಣಾಮ ಬೀರಲಿದೆ ಎಂಬ ಅಭಿಪ್ರಾಯವನ್ನು ಅವರು ವ್ಯಕ್ತಪಡಿಸುತ್ತಿದ್ದಾರೆ. ಈಗ ನೀಡಿರುವ ಅನುಮತಿ ಸಣ್ಣ ಪ್ರಮಾಣದ್ದು ಆಗಿದ್ದು, ಇದಕ್ಕೆ ಬೆಳೆಗಾರ ತಕ್ಕ ಪ್ರತಿರೋಧ ತೋರದೆ ಹೋದರೆ ಗುಟ್ಕಾ ಕಂಪೆನಿಗಳ ಹಿತ ಕಾಯುವ ಉದ್ದೇಶದಿಂದ ಇನ್ನಷ್ಟು ಆಮದಿಗೆ ವಾಣಿಜ್ಯ ಸಚಿವಾಲಯ ಅವಕಾಶ ನೀಡುವ ಸಾಧ್ಯತೆ ಇದ್ದು, ಇದು ಆಡಿಕೆ ಧಾರಣೆಯ ಮೇಲೆ ನಿಶ್ಚಿತವಾಗಿಯೂ ಕೆಟ್ಟ ಪರಿಣಾಮ ಬೀರಲಿದೆ ಎನ್ನುವುದು ತಜ್ಞರ ಅಂಬೋಣ.
Cockroaches: ಮನೆಯಲ್ಲಿ ಜಿರಳೆ, ನೊಣ ಕಾಟವಿದ್ದರೆ, ಓಡಿಸಲು ಇಲ್ಲಿದೆ ಸುಲಭೋಪಾಯ
ಇನ್ನು ಭೂತನ್ ನಿಂದ ಬರುವ ಆಡಿಕೆ ಕಳಪೆ ಗುಣಮಟ್ಟದಾಗಿದ್ದು , ಅದು ಕಡಿಮೆಗೆ ಸಿಗುವ ಹಿನ್ನಲೆಯಲ್ಲಿ ಅದನ್ನು ದೇಸಿ ಆಡಿಕೆ ಜತೆ ಮಧ್ಯವರ್ತಿಗಳು ಮಿಶ್ರಣ ಮಾಡಿ ಮಾರಾಟ ಮಾಡುವ ಆಪಾಯವಿದೆ ಇದು ಕೂಡ ಆಡಿಕೆ ಧಾರಣೆಯ ಮೇಲೆ ವ್ಯತಿರಿಕ್ತ ಪರಿಣಾಮ ಭೀರುವ ಸಾಧ್ಯತೆಯಿದೆ. ಹೀಗಾಗಿ ಈಗಾಗಲೇ ಆಡಿಕೆ ಬೆಳೆಗಾರರ ಸಂಘ ಹಾಗೂ ಕ್ಯಾಂಪ್ಕೂ ಕೇಂದ್ರ ಸರಕಾರದ ಆಮದು ನೀತಿಗೆ ತೀವ್ರ ವಿರೋಧ ವ್ಯಕ್ತಪಡಿಸಿದೆ.
ಸಚಿವರ ಅಭಯ
ಆಡಿಕೆ ಬೆಳೆ ಬೆಳೆಯುವ ಪ್ರದೇಶದವರೇ ಆಗಿರುವ ಕೇಂದ್ರ ಕೃಷಿ ಸಚಿವೆ ಶೋಭಾ ಕರಂದ್ಲಾಜೆ ಹಾಗೂ ರಾಜ್ಯ ಗೃಹ ಸಚಿವ ಅರಗ ಜ್ಞಾನೇಂದ್ರ ರವರು ಕೇಂದ್ರ ಸರಕಾರದ ಆಮದು ನೀತಿಯಿಂದ ಆಡಿಕೆ ಧಾರಣೆ ಮೇಲೆ ಯಾವುದೇ ವ್ಯತಿರಿಕ್ತ ಪರಿಣಾಮ ಭೀರುವುದಿಲ್ಲ ಎಂಬ ಭರವಸೆ ನೀಡಿದ್ದಾರೆ.
ಕೇಂದ್ರ ಕೃಷಿ ಸಚಿವೆ ಹೇಳಿದ್ದೇನು ?
ಭೂತಾನ್ ದೇಶವು ಕೇಂದ್ರ ಸರ್ಕಾರಕ್ಕೆ ಮಾಡಿಕೊಂಡ ಕೋರಿಕೆಯಂತೆ ಒಂದು ವರ್ಷದ ಮಟ್ಟಿಗೆ ಅಡಿಕೆ ಆಮದು ಮಾಡಿಕೊಳ್ಳಲಾಗುತ್ತಿದೆ. ಈ ಆಮದು ಕಾರಣದಿಂದ ಭಾರತದ ಅಡಿಕೆ ಮಾರುಕಟ್ಟೆಯಲ್ಲಿ ಯಾವುದೇ ಬದಲಾವಣೆ ಆಗದು ಭಾರತದಲ್ಲಿ ಸುಮಾರು 15 ಲಕ್ಷ ಟನ್ ಅಡಿಕೆ ಬೆಳೆಯಲಾಗುತ್ತದೆ. ಭೂತಾನ್ ದೇಶದಲ್ಲಿ ಕೇವಲ 17 ಸಾವಿರ ಟನ್ ಅಡಿಕೆ ಬೆಳೆಯಲಾಗುತ್ತಿದೆ. ನಮ್ಮ ದೇಶದ ಬೆಳೆಯ 0.02 ಪ್ರಮಾಣದಷ್ಟು ಮಾತ್ರಾ ಅಲ್ಲಿ ಅಡಿಕೆ ಇದೆ. ಹೀಗಾಗಿ ಈ ಅಡಿಕೆ ಆಮದು ಕಾರಣದಿಂದ ಭಾರತದ ಅಡಿಕೆ ಮಾರುಕಟ್ಟೆಗೆ ಪರಿಣಾಮವಾಗದು. ಭೂತಾನ್ ದೇಶದ ಆರ್ಥಿಕ ಪರಿಸ್ಥಿತಿ ಹದಗೆಡುತ್ತಿರುವ ಕಾರಣ ಭೂತಾನ್ ಕೇಂದ್ರ ಸರ್ಕಾರಕ್ಕೆ ಮಾಡಿಕೊಂಡ ಕೋರಿಕೆಯಂತೆ ಒಂದು ವರ್ಷದ ಮಟ್ಟಿಗೆ ಅಡಿಕೆ ಆಮದು ಮಾಡಿಕೊಳ್ಳಲಾಗುತ್ತಿದೆಯಷ್ಟೇ. ಇದರಿಂದ ಭಾರತದ ಅಡಿಕೆ ಧಾರಣೆ ಮೇಲೆ ಪರಿಣಾಮ ಬೀರದು ಎಂದು ಕೇಂದ್ರ ಕೃಷಿ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಹೇಳಿದರು.
ಕೇಂದ್ರ ಸರ್ಕಾರ ಅಡಿಕೆ ಬೆಳೆಗಾರರ ಪರವಾಗಿದೆ. ಅಡಿಕೆ ಬೆಳೆಗಾರರಿಗೆ ಸಂಕಷ್ಟವಾಗದಂತೆ ಹಿಂದೆಯೂ ಕೆಲಸ ಮಾಡಿದೆ. ಅಡಿಕೆ ಆಮದು ಮೇಲೆ ಅಧಿಕ ತೆರಿಗೆ ವಿಧಿಸಿದ ಕಾರಣದಿಂದ ಅಡಿಕೆ ಆಮದು ತಡೆಯಾಗಿತ್ತು ಹಾಗೂ ಅಡಿಕೆ ಇಂದು 450 ರಿಂದ 500 ರೂ. ಬೆಲೆಗೆ ಮಾರಾಟವಾಗುತ್ತಿದೆ . ಅಡಿಕೆ ಕಳ್ಳಸಾಗಾಣಿಕೆಯ ವಿರುದ್ದವೂ ಕೇಂದ್ರ ಸರ್ಕಾರ ಕಟ್ಟುನಿಟ್ಟಿನ ಕ್ರಮ ಕೈಗೊಂಡಿತ್ತು. ಎಂದು ಅವರು ಹೇಳಿದ್ದಾರೆ.
ಅರಗ ಜ್ಞಾನೇಂದ್ರ ಹೇಳಿದ್ದೇನು ?
ಪ್ರಸ್ತುತ ನಮ್ಮ ದೇಶದಿಂದ ಭೂತಾನ್ ದೇಶಕ್ಕೆ, ಸಂಸ್ಕರಿತ ಅಡಿಕೆ ಉತ್ಪನ್ನಗಳು, ಆಮದು ಪ್ರಮಾಣಕ್ಕಿಂತ ಹೆಚ್ಚು ರಫ್ತು ಆಗುತ್ತಿದ್ದು, ಭೂತಾನ್ ನಿಂದ ಕೇವಲ ಹಸಿ ಅಡಿಕೆ ಮಾತ್ರ ಅನುಮತಿ ನೀಡಲಾಗಿದೆ, ನೆರೆಯ ಭೂತಾನ್ ದೇಶ, ಭಾರತದ ಪರಂಪರಾಗತ ಮಿತ್ರ ದೇಶವಾಗಿದ್ದು, ಉಭಯ ದೇಶಗಳ ನಡುವೆ ಉತ್ತಮ ವಾಣಿಜ್ಯ ವಹಿವಾಟು ನಡೆಸಲಾಗುತ್ತಿದೆ ಎಂದು ರಾಜ್ಯ ಅಡಿಕೆ ಟಾಸ್ಕ್ ಫೋರ್ಸ್ ಅಧ್ಯಕ್ಷರೂ ಆಗಿರುವ ಗೃಹ ಸಚಿವ ಅರಗ ಜ್ಞಾನೇಂದ್ರ ಹೇಳಿದ್ದಾರೆ.
ನಿಯೋಗ ಕೊಂಡೊಯ್ಯಲಾಗುವುದು
ಅಡಿಕೆ ಮಾರುಕಟ್ಟೆಯಲ್ಲಿ, ಸ್ಥಿರತೆಯನ್ನು ಕಾಯ್ದು ಕೊಳ್ಳಲು, ಕೇಂದ್ರ ಸರಕಾರದ ಜತೆಗೆ ಸತತ ಸಂಪರ್ಕ ದಲ್ಲಿದ್ದು, ಭೂತಾನ್ ಅಡಕೆ ಆಮದು ವಿಚಾರವಾಗಿಯೂ, ಮಾತುಕತೆ ನಡೆಸಲಾಗುವುದು, ಬೆಳೆಗಾರರುಯಾವುದೇ ಗೊಂದಲ, ಆತಂಕಕ್ಕೊಳಗಾಗುವುದು ಬೇಡ ಎಂದು ಅಭಯ ನೀಡಿದ್ದಾರೆ. ಈ ವಿಚಾರ ಕುರಿತು, ಕೇಂದ್ರಕ್ಕೆ ಮನವರಿಕೆ ಮಾಡಿ ಕೊಡಲು ಲೋಕ ಸಭಾ ಸದಸ್ಯರ ನೇತೃತ್ವದಲ್ಲಿ, ನಿಯೋಗವೊಂದನ್ನು ಕೊಂಡೊಯ್ಯಲಾಗುವುದು ಎಂದೂ ಸಚಿವರು ತಿಳಿಸಿದ್ದಾರೆ.
ಮಂಗಳೂರು
MRPL accident-MRPL ಅವಘಡದಲ್ಲಿ ಮೃತಪಟ್ಟ ಕರ್ಕಡ ಕುಟುಂಬಕ್ಕೆ EPFO ಕ್ಲೈಮ್ ಸಂದಾಯ
MRPL ಕಾರ್ಮಿಕರ ಭವಿಷ್ಯ ನಿಧಿ ಸಂಘಟನೆ (EPFO), ಮಂಗಳೂರು ಪ್ರಾದೇಶಿಕ ಕಚೇರಿಯು, 30.09.2026 ರಂದು ಮಂಗಳೂರು ಪೆಟ್ರೋಕೆಮಿಕಲ್ಸ್ ಲಿಮಿಟೆಡ್ ನಲ್ಲಿ ಸಂಭವಿಸಿದ ಕೈಗಾರಿಕಾ ಅಪಘಾತದಲ್ಲಿ ಮರಣ ಹೊಂದಿದ ಭವಿಷ್ಯ ನಿಧಿ ಚಂದಾದಾರರಾದ ದಿವಂಗತ ಮನೀಶ್ ಕರ್ಕಡ ಅವರ ಕುಟುಂಬದ ಅವಲಂಬಿತರ ಸಾಮಾಜಿಕ ಭದ್ರತಾ ಸೌಲಭ್ಯಗಳ ಕ್ಷೇಮುಗಳನ್ನು ತ್ವರಿತವಾಗಿ ಇತ್ಯರ್ಥಪಡಿಸಲಾಗಿದೆ.
ಮಂಗಳೂರು : MRPL ಕಾರ್ಮಿಕರ ಭವಿಷ್ಯ ನಿಧಿ ಸಂಘಟನೆ (EPFO), ಮಂಗಳೂರು ಪ್ರಾದೇಶಿಕ ಕಚೇರಿಯು, 30.09.2026 ರಂದು ಮಂಗಳೂರು ಪೆಟ್ರೋಕೆಮಿಕಲ್ಸ್ ಲಿಮಿಟೆಡ್ ನಲ್ಲಿ ಸಂಭವಿಸಿದ ಕೈಗಾರಿಕಾ ಅಪಘಾತದಲ್ಲಿ ಮರಣ ಹೊಂದಿದ ಭವಿಷ್ಯ ನಿಧಿ ಚಂದಾದಾರರಾದ ದಿವಂಗತ ಮನೀಶ್ ಕರ್ಕಡ ಅವರ ಕುಟುಂಬದ ಅವಲಂಬಿತರ ಸಾಮಾಜಿಕ ಭದ್ರತಾ ಸೌಲಭ್ಯಗಳ ಕ್ಷೇಮುಗಳನ್ನು ತ್ವರಿತವಾಗಿ ಇತ್ಯರ್ಥಪಡಿಸಲಾಗಿದೆ.
ಕಾರ್ಮಿಕರ ಭವಿಷ್ಯ ನಿಧಿ ಸಂಘಟನೆ (EPFO) ವತಿಯಿಂದ ಕುಟುಂಬಕ್ಕೆ ಪಾವತಿಸಬೇಕಾದ ಉದ್ಯೋಗಿಗಳ ಭವಿಷ್ಯ ನಿಧಿ ಹಾಗೂ ಉದ್ಯೋಗಿಗಳ ಠೇವಣಿ ಆಧಾರಿತ ವಿಮಾ ಸೌಲಭ್ಯಗಳ ಕ್ಷೇಮುಗಳನ್ನು ಇತ್ಯರ್ಥಪಡಿಸಲಾಗಿದೆ.
ಇದರೊಂದಿಗೆ ಉದ್ಯೋಗಿಗಳ ಪಿಂಚಣಿ ಯೋಜನೆ 2026ರ ಅಡಿಯಲ್ಲಿ, ಮಾಸಿಕ ಪಿಂಚಣಿಯನ್ನೂ ಮಂಜೂರು ಮಾಡಿ ಪಾವತಿ ಪ್ರಾರಂಭಿಸಲಾಗಿದೆ. ಈ ಎಲ್ಲಾ ಸೌಲಭ್ಯಗಳನ್ನು 08.10.2026 ರಂದು ಇತ್ಯರ್ಥಪಡಿಸಿ ಜಾರಿಗೊಳಿಸಲಾಗಿದೆ ಹಾಗೂ ಮೊತ್ತವನ್ನು ಪಾವತಿಸಲಾಗಿದೆ.
ದುಃಖತಪ್ತ ಕುಟುಂಬಕ್ಕೆ ಸಂತಾಪ ಹಾಗೂ ಸಾಂತ್ವನ ಸಲ್ಲಿಸುವ ಉದ್ದೇಶದಿಂದ, ಪ್ರಾದೇಶಿಕ ಭವಿಷ್ಯ ನಿಧಿ ಆಯುಕ್ತರಾದ ಸಂದೀಪ್ ಬಿಸ್ವಾಸ್ ಅವರು, ಸಹಾಯಕ ಭವಿಷ್ಯ ನಿಧಿ ಆಯುಕ್ತರಾದ ಅಂಕಿತ್ ಸಿಂಗ್ ಹಾಗೂ ಪ್ರವರ್ತನಾಧಿಕಾರಿಯಾದ ಶ್ರೀಮತಿ ಅನಿತಾ ಆರ್ ಅವರೊಂದಿಗೆ 09.10.2026 ರಂದು ದಿವಂಗತ ಶ್ರೀ ಮನೀಶ್ ಕರ್ಕಡ ಅವರ ನಿವಾಸಕ್ಕೆ ಭೇಟಿ ನೀಡಿ, ಫಲಾನುಭವಿಗೆ ಪಿಂಚಣಿ ಪಾವತಿ ಆದೇಶವನ್ನು (PPO) ಹಸ್ತಾಂತರಿಸಿದರು. ಈ ಭೇಟಿಯು ಸಂಕಷ್ಟದ ಸಂದರ್ಭದಲ್ಲಿ ತನ್ನ ಸದಸ್ಯರ ಕುಟುಂಬಗಳೊಂದಿಗೆ ನಿಲ್ಲುವ EPFO ಸಂಸ್ಥೆಯ ಮಾನವೀಯ ಕಾಳಜಿ ಮತ್ತು ಬದ್ಧತೆಯನ್ನು ಪ್ರತಿಬಿಂಬಿಸುತ್ತದೆ.
ಅನಿರೀಕ್ಷಿತ ದುರಂತಗಳ ಸಂದರ್ಭದಲ್ಲಿ ತನ್ನ ಸದಸ್ಯರ ಕುಟುಂಬಗಳಿಗೆ ಸಲ್ಲಬೇಕಾದ ಸಾಮಾಜಿಕ ಭದ್ರತಾ ಸೌಲಭ್ಯಗಳನ್ನು ಸಕಾಲದಲ್ಲಿ ಒದಗಿಸುವುದು EPFO ಸಂಸ್ಥೆಯ ಬದ್ಧತೆಯಾಗಿದೆ ಎಂಬುದನ್ನು ಈ ತ್ವರಿತ ಇತ್ಯರ್ಥವು ಮತ್ತೊಮ್ಮೆ ದೃಢಪಡಿಸಿದೆ.
EPFO ಸಂಸ್ಥೆಯು ಮೃತ ಸದಸ್ಯರ ಕುಟುಂಬಕ್ಕೆ ತನ್ನ ತೀವ್ರ ಸಂತಾಪವನ್ನು ವ್ಯಕ್ತಪಡಿಸುತ್ತಿದ್ದು, ಈ ಕಷ್ಟದ ಸಮಯದಲ್ಲಿ ಅಗತ್ಯವಿರುವ ಎಲ್ಲಾ ರೀತಿಯ ನೆರವು ನೀಡಲು ಬದ್ಧವಾಗಿದೆ.
ಮಂಗಳೂರು
Mangalore-ಮಂಗಳೂರು : 2 ತಿಂಗಳ ಬಳಿಕ ಸಮಾಧಿಯಿಂದ ಹೊರಬರಲಿದೆ ಆಲ್ಬರ್ಟ್ ರೇಗೋ ಶವ..!; ಮಗಳಿಂದಲೇ ತಂದೆಯ ಕೊಲೆ : ಸ್ನೇಹಿತನ ಆರೋಪ – ತನಿಖೆಗೆ ಸಿಗಲಿದೆ ಮಹತ್ವದ ತಿರುವು
ಎರಡು ತಿಂಗಳ ಹಿಂದೆ ಮೃತಪಟ್ಟ ವ್ಯಕ್ತಿಯ ಸಾವಿನ ಸುತ್ತ ಅನುಮಾನದ ಹುತ್ತ ಬೆಳೆದಿದ್ದು, ಇದೀಗ ಹೂತು ಹಾಕಿದ್ದ ಶವವನ್ನೇ ಹೊರತೆಗೆದು ಪರೀಕ್ಷೆ ನಡೆಸಲು ಪೊಲೀಸರು ಮುಂದಾಗಿದ್ದಾರೆ ಎಂಬ ಮಾಹಿತಿ ಎಲ್ಲೆಡೆ ಹರಡಿದೆ. ಆಸ್ತಿ ವಿವಾದದ ಹಿನ್ನೆಲೆಯಲ್ಲಿ ಮಗಳೇ ತಂದೆಯ ಕೊಲೆಗೆ ಸಂಚು ರೂಪಿಸಿದ್ದಾರೆ ಎಂಬ ಆರೋಪ ಕೇಳಿಬಂದಿರುವ ಈ ಪ್ರಕರಣ ಮಂಗಳೂರಿನಲ್ಲಿ ತೀವ್ರ ಕುತೂಹಲ ಮೂಡಿಸಿದೆ.

ಮಂಗಳೂರು, ಅ 9: ಎರಡು ತಿಂಗಳ ಹಿಂದೆ ಮೃತಪಟ್ಟ ವ್ಯಕ್ತಿಯ ಸಾವಿನ ಸುತ್ತ ಅನುಮಾನದ ಹುತ್ತ ಬೆಳೆದಿದ್ದು, ಇದೀಗ ಹೂತು ಹಾಕಿದ್ದ ಶವವನ್ನೇ ಹೊರತೆಗೆದು ಪರೀಕ್ಷೆ ನಡೆಸಲು ಪೊಲೀಸರು ಮುಂದಾಗಿದ್ದಾರೆ ಎಂಬ ಮಾಹಿತಿ ಎಲ್ಲೆಡೆ ಹರಡಿದೆ. ಆಸ್ತಿ ವಿವಾದದ ಹಿನ್ನೆಲೆಯಲ್ಲಿ ಮಗಳೇ ತಂದೆಯ ಕೊಲೆಗೆ ಸಂಚು ರೂಪಿಸಿದ್ದಾರೆ ಎಂಬ ಆರೋಪ ಕೇಳಿಬಂದಿರುವ ಈ ಪ್ರಕರಣ ಮಂಗಳೂರಿನಲ್ಲಿ ತೀವ್ರ ಕುತೂಹಲ ಮೂಡಿಸಿದೆ.
ಮಂಗಳೂರಿನ ಕೊಟ್ಟಾರ ಫಸ್ಟ್ ಕ್ರಾಸ್ ನಿವಾಸಿ ಆಲ್ಬರ್ಟ್ ರೇಗೋ (Albert Rego) ಅವರು ಕಳೆದ ಜುಲೈ 19ರಂದು ಸಂಶಯಾಸ್ಪದ ರೀತಿಯಲ್ಲಿ ಮೃತಪಟ್ಟಿದ್ದರು. ಅವರ ಸಾವಿನ ಬಳಿಕ ಮರಣೋತ್ತರ ಪರೀಕ್ಷೆ ನಡೆಸದೆ ಅಂತ್ಯಕ್ರಿಯೆ ನೆರವೇರಿಸಲಾಗಿದೆ ಎಂಬ ಆರೋಪ ಪ್ರಕರಣಕ್ಕೆ ಹೊಸ ತಿರುವು ನೀಡಿದೆ. ಇದೀಗ ಕುಂಟಿಕಾನ ಸಮೀಪದ ದೇರೆಬೈಲ್ ಚರ್ಚ್ ಆವರಣದ ದಫನ ಭೂಮಿಯಲ್ಲಿ ಹೂತು ಹಾಕಿರುವ ಅವರ ಶವವನ್ನು ಹೊರತೆಗೆದು ವಿಧಿವಿಜ್ಞಾನ ಪ್ರಯೋಗಾಲಯದ (ಎಫ್‌ಎಸ್‌ಎಲ್) ತಜ್ಞರ ನೆರವಿನಿಂದ ಪರಿಶೀಲಿಸಲು ಪೊಲೀಸರು ಸಿದ್ಧತೆ ನಡೆಸಿದ್ದಾರೆ ಎನ್ನಲಾಗಿದೆ.
ಸ್ನೇಹಿತನ ದೂರಿನಿಂದ ಬಯಲಿಗೆ ಬಂದ ಅನುಮಾನ
ಆಲ್ಬರ್ಟ್ ರೇಗೋ ಅವರ ಸಾವಿನ ಕುರಿತು ಅನುಮಾನ ವ್ಯಕ್ತಪಡಿಸಿದ ಅವರ ಸ್ನೇಹಿತ ಹೆರಾಲ್ಡ್ ಪಿರೇರಾ ಅವರು ಉರ್ವಾ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಸಾವಿನ ಬಗ್ಗೆ ಸ್ಥಳೀಯರಿಗೆ ಹಾಗೂ ಕುಟುಂಬದ ಇತರ ಸದಸ್ಯರಿಗೆ ಮಾಹಿತಿ ನೀಡದೆ, ಆಪ್ತರ ಮೂಲಕ ಮಗಳು ಮಾಯಾ ರೇಗೋ ಅಂತ್ಯಕ್ರಿಯೆ ನಡೆಸಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ. ಈ ಹಿನ್ನೆಲೆಯಲ್ಲಿ ಮಾಯಾ ರೇಗೋ ಸೇರಿದಂತೆ ಇತರರ ವಿರುದ್ಧ ಪೊಲೀಸರು ಎಫ್‌ಐಆರ್ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದರು.
ಆಸ್ತಿಗಾಗಿ ಕಿರುಕುಳ ನೀಡಿದ್ದ ಆರೋಪ
ಆಲ್ಬರ್ಟ್ ರೇಗೋ ಅವರು ಹಿಂದೆ ವಿದೇಶದಲ್ಲಿ ಉದ್ಯೋಗದಲ್ಲಿದ್ದು, ಸಾಕಷ್ಟು ಆಸ್ತಿ ಸಂಪಾದಿಸಿದ್ದರು ಎನ್ನಲಾಗಿದೆ. ಅವರ ಇಬ್ಬರು ಮಕ್ಕಳು ಬೇರೆ ಬೇರೆ ಕಡೆ ನೆಲೆಸಿದ್ದರೆ, ಮಾಯಾ ರೇಗೋ ಮಾತ್ರ ಅವರೊಂದಿಗೆ ವಾಸವಾಗಿದ್ದರು ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.
ಮಗಳು ನಿರಂತರವಾಗಿ ಕಿರುಕುಳ ನೀಡುತ್ತಿದ್ದು, ಬಲವಂತವಾಗಿ ಆಸ್ತಿಯನ್ನು ತನ್ನ ಹೆಸರಿಗೆ ವರ್ಗಾಯಿಸಿಕೊಳ್ಳಲು ಯತ್ನಿಸಿದ್ದಾಳೆ ಎಂಬುದು ದೂರುದಾರರ ಆರೋಪ. ತನಗೆ ಹಲ್ಲೆ ನಡೆಸಿ ಕಿರುಕುಳ ನೀಡುತ್ತಿರುವ ಬಗ್ಗೆ ಆಲ್ಬರ್ಟ್ ಅವರು ಸ್ನೇಹಿತರ ಬಳಿ ಹೇಳಿಕೊಂಡಿದ್ದರು. ತನಗೇನಾದರೂ ಅನಾಹುತ ಸಂಭವಿಸಿದರೆ ಅದಕ್ಕೆ ಮಗಳ ಕಿರುಕುಳವೇ ಕಾರಣವಾಗಬಹುದು ಎಂಬ ಆತಂಕವನ್ನೂ ವ್ಯಕ್ತಪಡಿಸಿದ್ದರು ಎಂದು ಹೆರಾಲ್ಡ್ ಪಿರೇರಾ ದೂರಿನಲ್ಲಿ ತಿಳಿಸಿದ್ದಾರೆ.
ಮಾದಕ ವ್ಯಸನದ ಆರೋಪವನ್ನೂ ಮಾಯಾ ರೇಗೋ ವಿರುದ್ಧ ಮಾಡಲಾಗಿದ್ದು, ಹಣ ಮತ್ತು ಆಸ್ತಿಯ ವಿಚಾರವಾಗಿ ಇತರರ ನೆರವಿನಿಂದ ತಂದೆಯನ್ನು ಕೊಲೆ ಮಾಡಲಾಗಿದೆ ಎಂಬ ಗಂಭೀರ ಆರೋಪವನ್ನು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಈ ಕೃತ್ಯಕ್ಕೆ ಬೋಂದೆಲ್‌ನ ವೈದ್ಯರೊಬ್ಬರು ಹಾಗೂ ಪೊಲೀಸ್ ಪೇದೆಯೊಬ್ಬರು ಸಹಕರಿಸಿದ್ದಾರೆ ಎಂದೂ ಆರೋಪಿಸಲಾಗಿದೆ. ಆದರೆ, ಈ ಆರೋಪಗಳು ತನಿಖೆಯಿಂದ ದೃಢಪಡಬೇಕಿದೆ.

ಅಸ್ಥಿಪಂಜರದ ಪರೀಕ್ಷೆಯಿಂದ ಸಿಗಲಿದೆಯೇ ಸುಳಿವು?
ಪ್ರಕರಣದ ತನಿಖೆಯಲ್ಲಿ ವಿವಿಧ ಸಾಕ್ಷ್ಯಗಳನ್ನು ಸಂಗ್ರಹಿಸಿರುವ ಪೊಲೀಸರು, ಇದೀಗ ಸಾವಿನ ನೈಜ ಕಾರಣ ಪತ್ತೆಹಚ್ಚಲು ಹೂತು ಹಾಕಿರುವ ಶವವನ್ನು ಹೊರತೆಗೆಯುವ ನಿರ್ಧಾರ ಕೈಗೊಂಡಿದ್ದಾರೆ. ದೇರೆಬೈಲ್ ಚರ್ಚ್ ಆವರಣದ ದಫನ ಭೂಮಿಯಲ್ಲಿ ಪೊಲೀಸರು ಹಾಗೂ ಎಫ್‌ಎಸ್‌ಎಲ್ ತಜ್ಞರು ಸ್ಥಳಕ್ಕೆ ಆಗಮಿಸಿ ಪ್ರಕ್ರಿಯೆಗೆ ಮುಂದಾಗಿದ್ದಾರೆ.
ಮಾಯಾ ರೇಗೋ ಹಾಗೂ ದೂರುದಾರರ ಸಮ್ಮುಖದಲ್ಲಿ ಅಸ್ಥಿಪಂಜರವನ್ನು ಹೊರತೆಗೆದು ವಿಧಿವಿಜ್ಞಾನ ಪರೀಕ್ಷೆಗೆ ಒಳಪಡಿಸುವ ಪ್ರಕ್ರಿಯೆ ನಡೆಯಲಿದೆ ಎಂದು ತಿಳಿದುಬಂದಿದೆ.
ಎರಡು ತಿಂಗಳ ಹಿಂದೆ ನಡೆದ ಸಾವು ಕೊಲೆ ಕೃತ್ಯವೇ? ಸಾವಿನ ಹಿಂದಿದೆಯಾ ಆಸ್ತಿ ವಿವಾದ ? ಎಂಬ ಪ್ರಶ್ನೆಗಳಿಗೆ ವಿಧಿವಿಜ್ಞಾನ ಪರೀಕ್ಷೆ ಮತ್ತು ಪೊಲೀಸ್ ತನಿಖೆಯಿಂದ ಉತ್ತರ ಸಿಗಬೇಕಿದೆ. ಸದ್ಯ ಪ್ರಕರಣದ ಆರೋಪಗಳು ತನಿಖಾ ಹಂತದಲ್ಲಿದ್ದು, ಪರೀಕ್ಷೆಯ ವರದಿ ಹಾಗೂ ಮುಂದಿನ ತನಿಖೆ ನಿರ್ಣಾಯಕವಾಗಲಿವೆ.
ಅಪರಾಧ
Mangalore-ವಾಟರ್ ಪ್ಯೂರಿಫೈಯರ್ ಒಳಗೆ ಕೋಟ್ಯಾಂತರ ರೂ ಮೌಲ್ಯದ ಡ್ರಗ್ಸ್- ಕೋರಿಯರ್ ಮೂಲಕ ಸಾಗಾಟ | ಪೊಲೀಸರ ಕಣ್ಣಿಗೆ ಮಣ್ಣೆರೆಚುವ ಯತ್ನ ಮಂಗಳೂರಿನಲ್ಲಿ ವಿಫಲ – ಮೂವರ ಬಂಧನ..!
ಕೋರಿಯರ್ ಮೂಲಕ ಮಾದಕವಸ್ತು ಎಂಡಿಎಂಎ ಸಾಗಾಟ ಮಾಡಿ ಮಂಗಳೂರು ನಗರ ಹಾಗೂ ಕೇರಳದ ವಿವಿಧ ಪ್ರದೇಶಗಳಲ್ಲಿ ಮಾರಾಟ ಮಾಡಲು ಸಂಚು ರೂಪಿಸಿದ್ದ ಜಾಲವನ್ನು ಮಂಗಳೂರು ಸಿಸಿಬಿ ಪೊಲೀಸರು ಪತ್ತೆಹಚ್ಚಿದ್ದಾರೆ. ಕಾರ್ಯಾಚರಣೆಯಲ್ಲಿ ಮೂವರು ಆರೋಪಿಗಳನ್ನು ಬಂಧಿಸಲಾಗಿದ್ದು, ₹1.58 ಕೋಟಿ ಮೌಲ್ಯದ 1 ಕೆಜಿ 796.96 ಗ್ರಾಂ ಎಂಡಿಎಂಎ ಸೇರಿದಂತೆ ಒಟ್ಟು ₹1.63 ಕೋಟಿ ಮೌಲ್ಯದ ಸೊತ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.
ಮಂಗಳೂರು: ಕೋರಿಯರ್ ಮೂಲಕ ಮಾದಕವಸ್ತು ಎಂಡಿಎಂಎ ಸಾಗಾಟ ಮಾಡಿ ಮಂಗಳೂರು ನಗರ ಹಾಗೂ ಕೇರಳದ ವಿವಿಧ ಪ್ರದೇಶಗಳಲ್ಲಿ ಮಾರಾಟ ಮಾಡಲು ಸಂಚು ರೂಪಿಸಿದ್ದ ಜಾಲವನ್ನು ಮಂಗಳೂರು ಸಿಸಿಬಿ ಪೊಲೀಸರು ಪತ್ತೆಹಚ್ಚಿದ್ದಾರೆ. ಕಾರ್ಯಾಚರಣೆಯಲ್ಲಿ ಮೂವರು ಆರೋಪಿಗಳನ್ನು ಬಂಧಿಸಲಾಗಿದ್ದು, ₹1.58 ಕೋಟಿ ಮೌಲ್ಯದ 1 ಕೆಜಿ 796.96 ಗ್ರಾಂ ಎಂಡಿಎಂಎ ಸೇರಿದಂತೆ ಒಟ್ಟು ₹1.63 ಕೋಟಿ ಮೌಲ್ಯದ ಸೊತ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.
ಅ.8ರಂದು ರಾತ್ರಿ ಸುಮಾರು 10 ಗಂಟೆಗೆ ಉಳ್ಳಾಲ ತಾಲೂಕಿನ ಕುಂಪಲದ ಡಿಮಾರ್ಟ್ ಸಮೀಪ ಸಿಸಿಬಿ ಪೊಲೀಸರು ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸಿದ್ದಾರೆ. ಆರೋಪಿಗಳಿಂದ ಎಂಡಿಎಂಎ, ಮೂರು ಮೊಬೈಲ್ ಫೋನ್‌ಗಳು, ಮಾದಕವಸ್ತು ಸಾಗಾಟಕ್ಕೆ ಬಳಸಿದ ಮಾರುತಿ ಸುಜುಕಿ ಸ್ವಿಫ್ಟ್ ಕಾರು ಮತ್ತು ಆಟೋ ರಿಕ್ಷಾ, ಕೋರಿಯರ್ ರಟ್ಟಿನ ಬಾಕ್ಸ್ ಹಾಗೂ ವಾಟರ್ ಪ್ಯೂರಿಫೈಯರ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ. ವಶಪಡಿಸಿಕೊಂಡ ಸೊತ್ತುಗಳ ಒಟ್ಟು ಮೌಲ್ಯ ₹1,63,84,000 ಎಂದು ಪೊಲೀಸರು ತಿಳಿಸಿದ್ದಾರೆ.
ಬಂಧಿತ ಆರೋಪಿಗಳು:
ಅಬ್ದುಲ್ ಹಾಪೀಲ್ (25) ಮಂಗಳಪಾಡಿ, ಕಾಸರಗೋಡು
ಜಿಯಾವುಲ್ ಹಕ್ (30) ಕಸಬಾ ಬೆಂಗ್ರೆ, ಕೂಳೂರು, ಮಂಗಳೂರು
ಅಲ್ತಾಫ್ (28) ಪಾಂಡೇಶ್ವರ, ಮಂಗಳೂರು
ವಾಟರ್ ಪ್ಯೂರಿಫೈಯರ್‌ನಲ್ಲಿ ಎಂಡಿಎಂಎ ಬಚ್ಚಿಟ್ಟು ಸಾಗಾಟಕ್ಕೆ ಸಂಚು
ಪೊಲೀಸರ ಪ್ರಾಥಮಿಕ ತನಿಖೆಯ ಪ್ರಕಾರ, ಆರೋಪಿಗಳು ಪಂಜಾಬ್‌ನ ಅಮೃತಸರದಿಂದ ಎಂಡಿಎಂಎ ಖರೀದಿಸಿ, ಅದನ್ನು ವಾಟರ್ ಪ್ಯೂರಿಫೈಯರ್‌ನ ನೀರು ಸಂಗ್ರಹಿಸುವ ಭಾಗದಲ್ಲಿ ಭದ್ರವಾಗಿ ಬಚ್ಚಿಡುತ್ತಿದ್ದರು. ಬಳಿಕ ಕೋರಿಯರ್ ಮೂಲಕ ಮಂಗಳೂರಿಗೆ ಕಳುಹಿಸಿ, ಇಲ್ಲಿಂದ ಮಂಗಳೂರು ನಗರ ಹಾಗೂ ಕೇರಳದ ವಿವಿಧ ಪ್ರದೇಶಗಳಿಗೆ ಪೂರೈಕೆ ಮಾಡಿ ಮಾರಾಟ ಮಾಡಲು ಸಂಚು ರೂಪಿಸಿದ್ದರು ಎನ್ನಲಾಗಿದೆ.
ಸಾರ್ವಜನಿಕರನ್ನು ಗುರಿಯಾಗಿಸಿಕೊಂಡು ಮಾದಕವಸ್ತು ಮಾರಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿ ಪಡೆದ ಪೊಲೀಸರು, ಕಾರ್ಯಾಚರಣೆ ನಡೆಸಿ ಜಾಲವನ್ನು ಪತ್ತೆಹಚ್ಚುವಲ್ಲಿ ಯಶಸ್ವಿಯಾಗಿದ್ದಾರೆ.
ಆರೋಪಿಗಳ ವಿರುದ್ಧ ಈ ಹಿಂದೆಯೂ ಪ್ರಕರಣ
ಬಂಧಿತ ಅಬ್ದುಲ್ ಹಾಪೀಲ್ ವಿರುದ್ಧ ಈ ಹಿಂದೆ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಮಾದಕವಸ್ತು ಸೇವನೆಗೆ ಸಂಬಂಧಿಸಿದ ಪ್ರಕರಣ ದಾಖಲಾಗಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.
ಜಿಯಾವುಲ್ ಹಕ್ ದುಬೈನ ರಾಸ್ ಅಲ್ ಖೈಮಾದಲ್ಲಿ ಮಾದಕವಸ್ತು ಮಾರಾಟ ಪ್ರಕರಣದಲ್ಲಿ ಭಾಗಿಯಾಗಿ ಮೂರು ವರ್ಷಗಳ ಜೈಲು ಶಿಕ್ಷೆ ಅನುಭವಿಸಿ ಭಾರತಕ್ಕೆ ಮರಳಿದ್ದಾನೆ ಎಂದು ಪೊಲೀಸ್ ಪ್ರಕಟಣೆ ತಿಳಿಸಿದೆ. ಅಲ್ತಾಫ್ ವಿರುದ್ಧವೂ ಪಾಂಡೇಶ್ವರ ಪೊಲೀಸ್ ಠಾಣೆಯಲ್ಲಿ ಮಾದಕವಸ್ತು ಸೇವನೆಗೆ ಸಂಬಂಧಿಸಿದ ಪ್ರಕರಣ ದಾಖಲಾಗಿತ್ತು.
ಈ ಸಂಬಂಧ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ. ಬಂಧಿತ ಮೂವರು ಆರೋಪಿಗಳನ್ನು ವಿಚಾರಣೆಗೆ ಒಳಪಡಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತರು ತಿಳಿಸಿದ್ದಾರೆ.
-
ಮಂಗಳೂರು15 hours agoMangalore-ಮಂಗಳೂರು : 2 ತಿಂಗಳ ಬಳಿಕ ಸಮಾಧಿಯಿಂದ ಹೊರಬರಲಿದೆ ಆಲ್ಬರ್ಟ್ ರೇಗೋ ಶವ..!; ಮಗಳಿಂದಲೇ ತಂದೆಯ ಕೊಲೆ : ಸ್ನೇಹಿತನ ಆರೋಪ – ತನಿಖೆಗೆ ಸಿಗಲಿದೆ ಮಹತ್ವದ ತಿರುವು
-
ಅಪರಾಧ18 hours agoRaid-ರಾಜ್ಯದ 45 ಐಸ್ಕ್ರೀಂ ಘಟಕಗಳ ಮೇಲೆ ದಾಳಿ: 4 ಕಡೆ ನಿಯಮ ಉಲ್ಲಂಘನೆ, ಅವಧಿ ಮೀರಿದ ಪದಾರ್ಥ ಪತ್ತೆ..!
-
ಬಿಗ್ ನ್ಯೂಸ್13 hours agoKaavu-BIG BREAKING: ಕಾವು ಬಳಿ ಹೆದ್ದಾರಿಗೆ ಉರುಳಿದ ಮರಗಳು, ಹೈಟೆನ್ಷನ್ ವಿದ್ಯುತ್ ಕಂಬ : ಮಾಣಿ – ಮೈಸೂರು ಹೈವೆಯಲ್ಲಿ ವಾಹನ ಸಂಚಾರ ಸ್ಥಗಿತ
-
ಸ್ಥಳೀಯ20 hours agoGanja-ಸಾಗರದ ಲಾಡ್ಜ್ನಲ್ಲಿ ಗಾಂಜಾ ಸೇವನೆ: ಯುವತಿ ಸೇರಿ ನಾಲ್ವರು ವಶಕ್ಕೆ – ಗಾಂಜಾ ಸಾಗಾಟಗಾರನ ಮಾಹಿತಿ ಬಿಚ್ಚಿಟ್ಟ ಯುವತಿ..!
-
ಅಪರಾಧ13 hours agoPuttur-ಪುತ್ತೂರು: ಅಕ್ರಮ ಗೋ ಸಾಗಾಟ ಪ್ರಕರಣ; ಪರಾರಿಯಾಗಿದ್ದ ಇಬ್ಬರು ವಶಕ್ಕೆ, ಆರೋಪಿ ಶಿವಪ್ರಸಾದ್ ಮನೆ ಮಹಜರು?
-
ಬಿಗ್ ನ್ಯೂಸ್20 hours agoAYUSH Federation-ಡಾ. ಪ್ರದೀಪ್ ನಾವೂರು ಅವರ ಆರೋಗ್ಯ ಕ್ಲಿನಿಕ್ ಗೆ ಬೆಂಕಿ : ಆಯುಷ್ ಫೆಡರೇಶನ್ ತೀವ್ರ ಖಂಡನೆ
-
ಮಂಗಳೂರು14 hours agoMRPL accident-MRPL ಅವಘಡದಲ್ಲಿ ಮೃತಪಟ್ಟ ಕರ್ಕಡ ಕುಟುಂಬಕ್ಕೆ EPFO ಕ್ಲೈಮ್ ಸಂದಾಯ
-
ಅಪರಾಧ15 hours agoMangalore-ವಾಟರ್ ಪ್ಯೂರಿಫೈಯರ್ ಒಳಗೆ ಕೋಟ್ಯಾಂತರ ರೂ ಮೌಲ್ಯದ ಡ್ರಗ್ಸ್- ಕೋರಿಯರ್ ಮೂಲಕ ಸಾಗಾಟ | ಪೊಲೀಸರ ಕಣ್ಣಿಗೆ ಮಣ್ಣೆರೆಚುವ ಯತ್ನ ಮಂಗಳೂರಿನಲ್ಲಿ ವಿಫಲ – ಮೂವರ ಬಂಧನ..!


















