Connect with us

ಮಂಗಳೂರು

Fish Price Drop : ಓಯ್! ದ.ಕ. ಉಡುಪಿಯಲ್ಲಿ ಮೀನು ಸಕ್ಕತ್ ಅಗ್ಗ ಮಾರ್ರೆ ! ಅಂಜಲ್, ಬಂಗುಡೆ ಎಲ್ಲ ಕಮ್ಮಿ ಕಮ್ಮಿ

Published

on



Ad Widget

Ad Widget

Ad Widget

Ad Widget

ಮಂಗಳೂರು Mangalore ಅ 1 :  ನವರಾತ್ರಿ ಹಬ್ಬದ ಸಂಭ್ರಮದ ಮಧ್ಯೆ ಆಳ ಸಮುದ್ರಕ್ಕೆ  ಮೀನುಗಾರಿಕೆಗೆ  ತೆರಳಿದವರು ಮೀನಿನ ಭರ್ಜರಿ ಬೇಟೆಯಾಡುತ್ತಿದ್ದಾರೆ. ಆದರೇ ನವರಾತ್ರಿ ವ್ರತಾಚರಣೆಯಿಂದ ಕೊಳ್ಳುವವರ ಸಂಖ್ಯೆ ಕಡಿಮೆಯಾಗಿ ಮೀನಿನ ಧಾರಣೆಯಲ್ಲಿ ದಿಢೀರ್‌ ಕುಸಿತ ಕಾಣಿಸಿದೆ. ಒಂದು ರೀತಿಯಲ್ಲಿ ಮತ್ಸ್ಯ ಪ್ರಿಯರಿಗೆ ಸುಗ್ಗಿ ಎನ್ನುವಂತಹ ಸ್ಥಿತಿ ಸದ್ಯ ಕರಾವಳಿ ಕರ್ನಾಟದಲ್ಲಿ ನಿರ್ಮಾಣವಾಗಿದೆ.

Ad Widget

Ad Widget

Ad Widget

Ad Widget

ಎರಡು ವಾರಗಳ ಹಿಂದೆ ಒಂದು ಸಾವಿರ ರೂ.ಗೆ ಮಾರಾಟವಾಗುತ್ತಿದ್ದ ಅಂಜಲ್‌ ನ ಇಂದಿನ ದರ ಕೆಜಿಗೆ ಬರೀ 350 . ಅಂದರೇ ಸರಿ ಸುಮಾರು 65% ಕುಸಿತ ಕಾಣಿಸಿದೆ. ಇಷ್ಟೇ ಪ್ರಮಾಣದಲ್ಲಿ ಬಂಗುಡೆ ಹಾಗೂ ಬೂತಾಯಿ ರೇಟ್‌ ನಲ್ಲೂ ಕುಸಿತ ಉಂಟಾಗಿದೆ. ವಾರದ ಹಿಂದೆ 250 ರಷ್ಟಿದ್ದ ಕೆ ಜಿ ಬಂಗುಡೆ ಸದ್ಯ ಕೆಜಿಗೆ 100 ರೂಪಾಯಿಗೆ ದೊರಕುತ್ತಿದೆ. 200 ರ ಅಸುಪಾಸಿನಲ್ಲಿ ಭೂತಾಯಿ ಒಂದೂವರೆ ಕೆಜಿಗೆ 100 ರೂಪಾಯಿಗೆ ಮಾರಾಟವಾಗುತ್ತಿದೆ   ಇನ್ನು ಮೀಡಿಯಂ ಬಂಗುಡೆಗೆ ಬೇಡಿಕೆ ಇಲ್ಲದೆ, ಕೆಜಿಗೆ 20 ರೂ.ನಂತರ ಫಿಶ್ ಮೀಲ್ಗೆ ಮಾರಾಟವಾಗುತ್ತಿದೆ.

Ad Widget

Ad Widget

Ad Widget alt="Ad Widget"/>

Ad Widget

ಸಾಧಾರಣ ಗಾತ್ರದ ಬಿಳಿ ಪಾಂಫ್ರೆಟ್ ಕೆಜಿಗೆ 500- 600 ರೂ., ದೊಡ್ಡ ಗಾತ್ರದ ಕಪ್ಪು ಪಾಂಫ್ರೆಟ್ 400 ರೂ., ಅಡೆ ಮೀನ್ 200 ರೂ., ಬೊಳೆಂಜಿರ್ 100 ರೂ., ಕಾಣೆ 500 ರೂಪಾಯಿಗೆ ಸೇಲ್‌ ಮಾಡುತ್ತಿದ್ದಾರೆ. ”ಕರಾವಳಿಯಾದ್ಯಂತ ಅಂಜಲ್, ಬಂಗುಡೆ, ಬೊಳೆಂಜಿರ್, ಫಿಶ್ ಮೀಲ್ಗೆ ಹೋಗುವ ಚಮ್ಮೀನ್ ಇತ್ಯಾದಿ 25-30 ಟನ್ ಬಂದಿದೆ. ಇದೆ ವೇಳೆ ಹಿಂದೂಗಳ ಪವಿತ್ರ ಹಬ್ಬ ನವರಾತ್ರಿಯು ಬಂದಿದೆ.  ಈ ವೇಳೆ ಹೆಚ್ಚಿನ  ಹಿಂದೂಗಳು ಮೀನು ತಿನ್ನುವುದು ಕಡಿಮೆ . ಹೀಗಾಗಿ ಮೀನಿಗೆ ಬೇಡಿಕೆ ಕುಸಿದಿದೆ.

Ad Widget

Ad Widget <> Ad Widget

ಉಡುಪಿಯಲ್ಲಿ ಮೀನಿನ ಸುಗ್ಗಿ

Gold Rate Today : ಚಿನ್ನ – ಬೆಳ್ಳಿ ದರದಲ್ಲಿ ಏರಿಕೆ : ಇಂದಿನ ದರ ಇಲ್ಲಿ ತಿಳಿಯಿರಿ



Ad Widget

ಸಾಮಾನ್ಯವಾಗಿ ಈಗಿನ ತಾಜಾ ಬಂಗುಡೆ ಫ್ರೀಝಿಂಗ್ಗೆ ಕೊಂಡೊಯ್ಯುವುದು ವಾಡಿಕೆ. ಈ ಬಾರಿ ಕೊಂಡೊಯ್ಯದೆ, ರಫ್ತೂ ಆಗದೆ ಬಂಗುಡೆ ದರ ನೆಲಕಚ್ಚಿದೆ. ರಫ್ತಾಗುವ ಬೊಂಡಾಸ್, ಕಪ್ಪೆ ಬೊಂಡಾಸ್ ಮಾತ್ರ ರಫ್ತಾಗುತ್ತಿದೆ” ಎನ್ನುತ್ತಾರೆ ಮೀನುಗಾರರ ಮುಖಂಡರು.

Ad Widget

Ad Widget

ಹೀಗಾಗಿ ಬೇಡಿಕೆ ಕುಸಿದು ಬೋಟ್‌ ಮಾಲಕರು ದರ ಕಡಿತ ಮಾರಾಟ ಮಾಡುತ್ತಿದ್ದಾರೆ . ಹೀಗಾಗಿ ಮೀನುಗಳೇನು ಮಾರುಕಟ್ಟೆಯಲ್ಲಿ ಕಡಿಮೆ ಲಭ್ಯವಾಗುತ್ತಿದೆ. ಆದರೇ ಅದೇ ವೇಳೆ ಬೋಟ್‌ ಮಾಲಕರು ತೀವ್ರ ನಷ್ಟ ಅನುಭವಿಸುತ್ತಿದ್ದಾರೆ. ಈ ರೇಟ್‌ ಗೆ ಮೀನು ಮಾರಾಟ ಮಾಡಿದ್ರೆ ಬೋಟಿಗೆ ಹಾಕಿದ ಇಂಧನ ಹಾಗೂ ಕಾರ್ಮಿಕರ ಸಂಬಳವು ಉಳಿಯುವುದಿಲ್ಲ. ಇನ್ನು ಬ್ಯಾಂಕಿನ ಕಂತು ಬೇರೆಯೇ. ಧಾರಣೆ ಕುಸಿತದಿಂದ ಬೋಟ್‌ ಮಾಲಕರ ಸ್ಥಿತಿ ಹೇಳ ತೀರದಾಗಿದೆ.

Arrecanut Rate ಭೂತನ್‌ ನಿಂದ ಅಡಿಕೆ ಆಮದಿಗೆ ಷರತ್ತು ರಹಿತ ಅನುಮತಿ ಬೆನ್ನಲೆ ಧಾರಣೆ ಕುಸಿತದ ಆತಂಕ  – ಹೆಚ್ಚಿದ ಭಯ | ಭೀತಿ ಬೇಡ : ರಾಜ್ಯ , ಕೇಂದ್ರ ಸಚಿವರ ಅಭಯ

 ಆಗಸ್ಟ್, ಸೆಪ್ಟೆಂಬರ್ ಮತ್ತು ಅಕ್ಟೋಬರ್ನಲ್ಲಿ ಸಮುದ್ರ ತಂಪಾಗಿರುವಾಗ ಹೇರಳ ಪ್ರಮಾಣದಲ್ಲಿ ಮೀನು ಸಿಗುತ್ತಿದೆ. ಈ ಸಂದರ್ಭದಲ್ಲಿ ದರ ನೆಲಕಚ್ಚಿದರೆ ಬೋಟ್ನವರಿಗೆ ನಷ್ಟ. ನವೆಂಬರ್ ಬಳಿಕ ಬಿಸಿಲು ಏರಿದಂತೆ ಮೀನು ಆಳಕ್ಕೆ ಹೋಗಿ ಹೆಚ್ಚು ಸಿಗುವುದಿಲ್ಲ.

”ಆಳಸಮುದ್ರ, ಟ್ರಾಲ್ ಬೋಟ್ ಮೀನುಗಾರಿಕೆ ಚೆನ್ನಾಗಿ ನಡೆಯುತ್ತಿದೆ. ನಿತ್ಯ ಹೋಗಿ ರಾಣಿ ಬಲೆ ಮತ್ತಿತರ ಮೀನುಗಾರರಿಗೆ ಮೀನು ಕಡಿಮೆ ಸಿಗುತ್ತಿದೆ. ತಮಿಳುನಾಡಿನಲ್ಲಿ ಪೊಟ್ಟಾಸ್ ಹಬ್ಬ ಮತ್ತು ರಾಜ್ಯದಲ್ಲಿ ನವರಾತ್ರಿ ಹಿನ್ನೆಲೆಯಲ್ಲಿ ಮೀನು ತಿನ್ನದೆ ಬೇಡಿಕೆ ಕಡಿಮೆಯಾಗಿದೆ. ನಾನು 12 ಬಂಗುಡೆಯ ಒಂದು ಕೆಜಿ ಕೇವಲ 25 ರೂ.ಗೆ ಮಾರಾಟ ಮಾಡಿದ್ದೇನೆ. ಹೀಗಾದರೆ ನಮಗೆ ನಷ್ಟ” ಎಂದು ಮತ್ಸ್ಯೋದ್ಯಮಿ ಮೋಹನ್ ಬೆಂಗರೆ ಹೇಳುತ್ತಾರೆ.

Cockroaches: ಮನೆಯಲ್ಲಿ ಜಿರಳೆ, ನೊಣ ಕಾಟವಿದ್ದರೆ, ಓಡಿಸಲು ಇಲ್ಲಿದೆ ಸುಲಭೋಪಾಯ

Ad Widget

ಮಂಗಳೂರು

Mangaluru-ಬೆಳೆ ವಿಮೆ ಅನ್ಯಾಯ ಆರೋಪ: ಅ.9ರಂದು ಮಂಗಳೂರಿನಲ್ಲಿ ರೈತರ ಬೃಹತ್ ಹಕ್ಕೊತ್ತಾಯ | ಸಹಕಾರ ಭಾರತಿ – ಬಿಜೆಪಿ ಬೆಂಬಲ

Published

on



Ad Widget

Ad Widget

Ad Widget

Ad Widget

ಬೆಳೆ ವಿಮೆ ಪಾವತಿಯಲ್ಲಿ ರೈತರಿಗೆ ಅನ್ಯಾಯವಾಗಿದೆ ಎಂದು ಆರೋಪಿಸಿ ಸಹಕಾರ ಭಾರತಿ ಹಾಗೂ ಬಿಜೆಪಿ ನೇತೃತ್ವದಲ್ಲಿ ಅ.9ರಂದು ಮಂಗಳೂರಿನಲ್ಲಿ ಬೃಹತ್ ಹಕ್ಕೊತ್ತಾಯ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಮಂಗಳೂರಿನ ಟೌನ್‌ಹಾಲ್‌ನಲ್ಲಿ ಶುಕ್ರವಾರ ಬೆಳಗ್ಗೆ 10.30ಕ್ಕೆ ಕಾರ್ಯಕ್ರಮ ನಡೆಯಲಿದೆ.

Ad Widget

Ad Widget

Ad Widget

Ad Widget

ಮಂಗಳೂರು: ಬೆಳೆ ವಿಮೆ ಪಾವತಿಯಲ್ಲಿ ರೈತರಿಗೆ ಅನ್ಯಾಯವಾಗಿದೆ ಎಂದು ಆರೋಪಿಸಿ ಸಹಕಾರ ಭಾರತಿ ಹಾಗೂ ಬಿಜೆಪಿ ನೇತೃತ್ವದಲ್ಲಿ ಅ.9ರಂದು ಮಂಗಳೂರಿನಲ್ಲಿ ಬೃಹತ್ ಹಕ್ಕೊತ್ತಾಯ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

Ad Widget

Ad Widget

Ad Widget alt="Ad Widget"/>

Ad Widget

ಮಂಗಳೂರಿನ ಟೌನ್‌ಹಾಲ್‌ನಲ್ಲಿ ಶುಕ್ರವಾರ ಬೆಳಗ್ಗೆ 10.30ಕ್ಕೆ ಕಾರ್ಯಕ್ರಮ ನಡೆಯಲಿದೆ. ಬೆಳೆ ವಿಮೆ ಯೋಜನೆಯಡಿ ರೈತರಿಗೆ ಸೂಕ್ತ ಪರಿಹಾರ ದೊರೆಯದಿರುವುದು ಸೇರಿದಂತೆ ವಿಮೆ ಪಾವತಿಗೆ ಸಂಬಂಧಿಸಿದ ಸಮಸ್ಯೆಗಳ ಕುರಿತು ಸಭೆಯಲ್ಲಿ ಧ್ವನಿ ಎತ್ತಲಾಗುತ್ತದೆ.

Ad Widget

Ad Widget <> Ad Widget

ಬೆಳೆ ವಿಮೆ ಯೋಜನೆಯಡಿ ರೈತರಿಗೆ ನ್ಯಾಯಯುತ ಪರಿಹಾರ ದೊರೆಯಬೇಕು ಹಾಗೂ ವಿಮೆ ಪಾವತಿಯಲ್ಲಿ ಉಂಟಾಗಿರುವ ಸಮಸ್ಯೆಗಳಿಗೆ ಶೀಘ್ರ ಪರಿಹಾರ ಕಲ್ಪಿಸಬೇಕು ಎಂಬುದು ಪ್ರಮುಖ ಬೇಡಿಕೆಯಾಗಿದೆ.



Ad Widget

ದಕ್ಷಿಣ ಕನ್ನಡ ಜಿಲ್ಲೆಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಸದಸ್ಯರು ಸೇರಿದಂತೆ ರೈತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಬೆಳೆ ವಿಮೆಯಲ್ಲಿ ಆಗಿರುವ ಅನ್ಯಾಯದ ವಿರುದ್ಧ ಒಗ್ಗಟ್ಟಿನಿಂದ ಹಕ್ಕೊತ್ತಾಯ ಮಂಡಿಸುವಂತೆ ಆಯೋಜಕರು ಮನವಿ ಮಾಡಿದ್ದಾರೆ.

Continue Reading

ಅಪರಾಧ

Digital Arrest-‘ಡಿಜಿಟಲ್ ಅರೆಸ್ಟ್’ ಹೆಸರಿನಲ್ಲಿ 75 ವರ್ಷದ ಮಹಿಳೆಗೆ ₹2 ಕೋಟಿ ವಂಚನೆ

Published

on



Ad Widget

Ad Widget

Ad Widget

Ad Widget

‘ಡಿಜಿಟಲ್ ಅರೆಸ್ಟ್’ ಹೆಸರಿನಲ್ಲಿ ಬೆದರಿಕೆ ಹಾಕಿ 75 ವರ್ಷದ ಮಹಿಳೆಯೊಬ್ಬರಿಂದ ಸೈಬರ್‌ ಖದೀಮರು ಬರೋಬ್ಬರಿ ₹2 ಕೋಟಿ ವಂಚಿಸಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ. ಪೊಲೀಸ್‌ ಹಾಗೂ ಸಿಬಿಐ ಅಧಿಕಾರಿಗಳೆಂದು ಪರಿಚಯಿಸಿಕೊಂಡ ಅಪರಿಚಿತರು ಹಂತ ಹಂತವಾಗಿ ಹಣ ವರ್ಗಾಯಿಸಿಕೊಂಡಿದ್ದು, ಈ ಕುರಿತು ಸೈಬರ್‌ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Ad Widget

Ad Widget

Ad Widget

Ad Widget

ಮಂಗಳೂರು: ‘ಡಿಜಿಟಲ್ ಅರೆಸ್ಟ್’ ಹೆಸರಿನಲ್ಲಿ ಬೆದರಿಕೆ ಹಾಕಿ 75 ವರ್ಷದ ಮಹಿಳೆಯೊಬ್ಬರಿಂದ ಸೈಬರ್‌ ಖದೀಮರು ಬರೋಬ್ಬರಿ ₹2 ಕೋಟಿ ವಂಚಿಸಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ. ಪೊಲೀಸ್‌ ಹಾಗೂ ಸಿಬಿಐ ಅಧಿಕಾರಿಗಳೆಂದು ಪರಿಚಯಿಸಿಕೊಂಡ ಅಪರಿಚಿತರು ಹಂತ ಹಂತವಾಗಿ ಹಣ ವರ್ಗಾಯಿಸಿಕೊಂಡಿದ್ದು, ಈ ಕುರಿತು ಸೈಬರ್‌ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Ad Widget

Ad Widget

Ad Widget alt="Ad Widget"/>

Ad Widget

ಸೆ.25ರಂದು ಅಪರಿಚಿತ ವ್ಯಕ್ತಿಯೊಬ್ಬರು ಮಹಿಳೆಗೆ ಕರೆ ಮಾಡಿ ತಾನು ಮುಂಬೈನ ಕೊಲಾಬಾ ಪೊಲೀಸ್‌ ಅಧಿಕಾರಿ ಸಂದೀಪ್‌ ರಾವ್‌ ಎಂದು ಪರಿಚಯಿಸಿಕೊಂಡಿದ್ದಾನೆ. ಅಂತಾರಾಷ್ಟ್ರೀಯ ಹಣ ಅಕ್ರಮ ವರ್ಗಾವಣೆ ಪ್ರಕರಣದ ಆರೋಪಿ ನರೇಶ್‌ ಗೋಯಲ್‌ ಜತೆ ಹಣ ವರ್ಗಾವಣೆ, ಮಾದಕವಸ್ತು ವ್ಯವಹಾರ ಹಾಗೂ ಮಕ್ಕಳ ಕಳ್ಳಸಾಗಣೆ ಸೇರಿದಂತೆ ಹಲವು ಅಪರಾಧಗಳಲ್ಲಿ ನೀವು ಭಾಗಿಯಾಗಿದ್ದೀರಿ. ಈ ಸಂಬಂಧ ಮುಂಬೈ ಕೊಲಾಬಾ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಹೇಳಿ ಭಯ ಹುಟ್ಟಿಸಿದ್ದಾನೆ.

Ad Widget

Ad Widget <> Ad Widget

ಬಳಿಕ ಮತ್ತೊಂದು ಮೊಬೈಲ್‌ ಸಂಖ್ಯೆಯಿಂದ ವಾಟ್ಸ್‌ಆ್ಯಪ್‌ ವಿಡಿಯೊ ಕರೆ ಬಂದಿದ್ದು, ಕರೆ ಮಾಡಿದ ವ್ಯಕ್ತಿ ತಾನು ಸಿಬಿಐ ಅಧಿಕಾರಿ ಸಮಾಧಾನ್‌ ಪವಾರ್‌ ಎಂದು ಪರಿಚಯಿಸಿಕೊಂಡಿದ್ದಾನೆ. ಅಂತಾರಾಷ್ಟ್ರೀಯ ಮಟ್ಟದ ಅಪರಾಧದಲ್ಲಿ ನೀವು ಭಾಗಿಯಾಗಿದ್ದೀರಿ. ‘ನ್ಯಾಷನಲ್‌ ಸೀಕ್ರೆಸಿ ಆ್ಯಕ್ಟ್‌’ ಪಾಲಿಸಬೇಕು ಎಂದು ಹೇಳಿ ಮಹಿಳೆಯನ್ನು ಮತ್ತಷ್ಟು ಹೆದರಿಸಿದ್ದಾನೆ. ಅಲ್ಲದೆ, ತಾವು ಸರ್ವೇಲೈನ್ಸ್‌ನಲ್ಲಿರುವುದರಿಂದ ಈ ವಿಚಾರವನ್ನು ಯಾರಿಗೂ ತಿಳಿಸಬಾರದು ಎಂದು ಬೆದರಿಕೆ ಹಾಕಿದ್ದಾನೆ.



Ad Widget

ನಂತರ ಮಹಿಳೆಯ ಆಸ್ತಿ ಹಾಗೂ ಬ್ಯಾಂಕ್‌ ಖಾತೆಗಳನ್ನು ಪರಿಶೀಲಿಸಿ ಎರಡು ದಿನಗಳಲ್ಲಿ ಕ್ಲಿಯರೆನ್ಸ್ ನೀಡುವುದಾಗಿ ಆರೋಪಿಗಳು ನಂಬಿಸಿದ್ದಾರೆ. ಈ ನೆಪದಲ್ಲಿ ಬ್ಯಾಂಕ್‌ ಖಾತೆ ಹಾಗೂ ಆಸ್ತಿ ವಿವರಗಳನ್ನು ಪಡೆದುಕೊಂಡಿದ್ದಾರೆ. ಬಳಿಕ ತಮ್ಮ ಸೂಚನೆಯಂತೆ ನಿರ್ದಿಷ್ಟ ಬ್ಯಾಂಕ್‌ ಖಾತೆಗಳಿಗೆ ಹಣ ವರ್ಗಾಯಿಸುವಂತೆ ಸೂಚಿಸಿದ್ದಾರೆ.

Ad Widget

Ad Widget

ಆರೋಪಿಗಳ ಮಾತು ನಂಬಿದ ಮಹಿಳೆ, ಅವರ ಸೂಚನೆಯಂತೆ ₹60 ಲಕ್ಷವನ್ನು ಹಾಗೂ ಅ.3ರಂದು ₹1.40 ಕೋಟಿ ಹಣವನ್ನು ಆರ್‌ಟಿಜಿಎಸ್‌ ಮೂಲಕ ವರ್ಗಾಯಿಸಿದ್ದಾರೆ. ಸೆ.25ರಿಂದ ಅ.5ರವರೆಗೆ ಹಂತ ಹಂತವಾಗಿ ಒಟ್ಟು ₹2 ಕೋಟಿ ಹಣ ವರ್ಗಾಯಿಸಿರುವುದಾಗಿ ದೂರಿನಲ್ಲಿ ತಿಳಿಸಲಾಗಿದೆ.

ಇತ್ತೀಚಿನ ದಿನಗಳಲ್ಲಿ ‘ಡಿಜಿಟಲ್ ಅರೆಸ್ಟ್’ ಸೇರಿದಂತೆ ವಿವಿಧ ರೀತಿಯ ಸೈಬರ್‌ ವಂಚನೆ ಪ್ರಕರಣಗಳು ಹೆಚ್ಚಾಗುತ್ತಿವೆ. ಪೊಲೀಸ್‌ ಅಥವಾ ತನಿಖಾ ಸಂಸ್ಥೆಗಳ ಹೆಸರಿನಲ್ಲಿ ಬೆದರಿಸಿ, ಹಣ ವರ್ಗಾಯಿಸುವಂತೆ ಒತ್ತಡ ಹೇರುವುದು ವಂಚಕರ ಸಾಮಾನ್ಯ ತಂತ್ರವಾಗಿದೆ.

ಸೈಬರ್‌ ವಂಚನೆಗೆ ಒಳಗಾದರೆ ತಕ್ಷಣವೇ ಪೊಲೀಸರಿಗೆ ಮಾಹಿತಿ ನೀಡುವುದು ಅತ್ಯಂತ ಮುಖ್ಯ. ವಂಚನೆಯಾದ ಕೂಡಲೇ ‘ಗೋಲ್ಡನ್ ಅವರ್’ನಲ್ಲಿ ದೂರು ನೀಡಿದರೆ ಹಣದ ವರ್ಗಾವಣೆಯನ್ನು ತಡೆಯಲು ಅಥವಾ ವಂಚಿತ ಹಣವನ್ನು ಫ್ರೀಜ್‌ ಮಾಡಲು ಪೊಲೀಸರು ಪ್ರಯತ್ನಿಸಬಹುದು. ದೂರು ನೀಡಲು ವಿಳಂಬವಾದಷ್ಟೂ ಹಣವನ್ನು ಮರಳಿ ಪಡೆಯುವುದು ಕಷ್ಟವಾಗುವ ಸಾಧ್ಯತೆ ಇದೆ.

Ad Widget
Continue Reading

ಮಂಗಳೂರು

Mangalore-ರಿಕ್ಷಾದಲ್ಲಿ ಬಿಟ್ಟುಹೋದ 48 ಗ್ರಾಂ ಚಿನ್ನದ ನೆಕ್ಲೇಸ್‌ ವಾಪಸ್ ನೀಡಿ ಪ್ರಾಮಾಣಿಕತೆ ಮೆರೆದ ಚಾಲಕ

Published

on



Ad Widget

Ad Widget

Ad Widget

Ad Widget

ಸುಲ್ತಾನ್ ಗೋಲ್ಡ್‌ ಶಾಪ್‌ನಲ್ಲಿ 48 ಗ್ರಾಂ ತೂಕದ ಚಿನ್ನದ ನೆಕ್ಲೇಸ್‌ ಸರ ಖರೀದಿಸಿ ರಿಕ್ಷಾದಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಚಿನ್ನವಿದ್ದ ಬ್ಯಾಗನ್ನು ರಿಕ್ಷಾದಲ್ಲೇ ಮರೆತುಹೋದ ಮಹಿಳೆಗೆ, ರಿಕ್ಷಾ ಚಾಲಕರೊಬ್ಬರು ಅದನ್ನು ಸುರಕ್ಷಿತವಾಗಿ ವಾರಸುದಾರರಿಗೆ ಹಸ್ತಾಂತರಿಸುವ ಮೂಲಕ ಪ್ರಾಮಾಣಿಕತೆ ಮೆರೆದಿದ್ದಾರೆ.

Ad Widget

Ad Widget

Ad Widget

Ad Widget

ಮಂಗಳೂರು: ಸುಲ್ತಾನ್ ಗೋಲ್ಡ್‌ ಶಾಪ್‌ನಲ್ಲಿ 48 ಗ್ರಾಂ ತೂಕದ ಚಿನ್ನದ ನೆಕ್ಲೇಸ್‌ ಸರ ಖರೀದಿಸಿ ರಿಕ್ಷಾದಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಚಿನ್ನವಿದ್ದ ಬ್ಯಾಗನ್ನು ರಿಕ್ಷಾದಲ್ಲೇ ಮರೆತುಹೋದ ಮಹಿಳೆಗೆ, ರಿಕ್ಷಾ ಚಾಲಕರೊಬ್ಬರು ಅದನ್ನು ಸುರಕ್ಷಿತವಾಗಿ ವಾರಸುದಾರರಿಗೆ ಹಸ್ತಾಂತರಿಸುವ ಮೂಲಕ ಪ್ರಾಮಾಣಿಕತೆ ಮೆರೆದಿದ್ದಾರೆ.

Ad Widget

Ad Widget

Ad Widget alt="Ad Widget"/>

Ad Widget

ಅಫ್ಜಿಲಾ ಎಂಬವರು ಸುಲ್ತಾನ್ ಗೋಲ್ಡ್‌ ಶಾಪ್‌ನಲ್ಲಿ 48 ಗ್ರಾಂ ತೂಕದ ಚಿನ್ನದ ನೆಕ್ಲೇಸ್‌ ಸರವನ್ನು ಖರೀದಿಸಿದ್ದರು. ಬಳಿಕ ರಿಕ್ಷಾದಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಚಿನ್ನದ ಸರವಿದ್ದ ಬ್ಯಾಗನ್ನು ರಿಕ್ಷಾದಲ್ಲೇ ಬಿಟ್ಟು ಇಳಿದಿದ್ದರು.

Ad Widget

Ad Widget <> Ad Widget

ರಿಕ್ಷಾ ಚಾಲಕ ಬಸವರಾಜ ಅವರಿಗೆ ಬ್ಯಾಗ್ ಪತ್ತೆಯಾಗಿದ್ದು, ಅದರಲ್ಲಿ ಚಿನ್ನದ ನೆಕ್ಲೇಸ್‌ ಇರುವುದನ್ನು ಗಮನಿಸಿದ್ದಾರೆ. ಬಳಿಕ ಯಾವುದೇ ಆಸೆ, ಆಮಿಷಕ್ಕೆ ಒಳಗಾಗದೆ ಬ್ಯಾಗನ್ನು ಸುರಕ್ಷಿತವಾಗಿ ವಾರಸುದಾರರಿಗೆ ಮರಳಿಸಿದ್ದಾರೆ.



Ad Widget

ಚಿನ್ನದ ಸರವನ್ನು ಮರಳಿ ಪಡೆದ ಅಫ್ಜಿಲಾ ಅವರು ರಿಕ್ಷಾ ಚಾಲಕ ಬಸವರಾಜ ಅವರ ಪ್ರಾಮಾಣಿಕತೆಗೆ ಕೃತಜ್ಞತೆ ಸಲ್ಲಿಸಿದ್ದಾರೆ. ಚಾಲಕನ ಈ ನಡೆ ಸಾರ್ವಜನಿಕ ವಲಯದಲ್ಲಿ ಮೆಚ್ಚುಗೆಗೆ ಪಾತ್ರವಾಗಿದೆ.

Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!

Discover more from Nikhara News | Kannada News Website

Subscribe now to keep reading and get access to the full archive.

Continue reading