ಬಿಗ್ ನ್ಯೂಸ್
AICC Election : ಕಾಂಗ್ರೆಸ್ ಅಧ್ಯಕ್ಷ ಸ್ಥಾನದ ಚುನಾವಣೆ : ಒಂದು ನಾಮಪತ್ರ ತಿರಸ್ಕೃತ – ಇಬ್ಬರ ಮಧ್ಯೆ ಹಣಾಹಣಿ
ನವದೆಹಲಿ ಅ 1: ಕಾಂಗ್ರೆಸ್ ಅಧ್ಯಕ್ಷ ಸ್ಥಾನದ ಚುನಾವಣೆಗೆ ಜಾರ್ಖಂಡ್ ನ ಮಾಜಿ ಸಚಿವ ಕೆ.ಎನ್. ತ್ರಿಪಾಠಿ ಸಲ್ಲಿಸಿದ್ದ ನಾಮಪತ್ರ ತಿರಸ್ಕೃತಗೊಂಡಿದೆ. ಹೀಗಾಗಿ, ಅಂತಿಮ ಕಣದಲ್ಲಿ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಮತ್ತು ಸಂಸದ ಶಶಿ ತರೂರ್ ಉಳಿದಿದ್ದು, ಇವರಿಬ್ಬರ ನಡುವೆ ಪೈಪೋಟಿ ಏರ್ಪಡಲಿದೆ.
ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿದ್ದ ಶುಕ್ರವಾರ ಖರ್ಗೆ, ತರೂರ್ ಮತ್ತು ತ್ರಿಪಾಠಿ ನಾಮಪತ್ರ ಸಲ್ಲಿಸಿದ್ದರು. ಖರ್ಗೆ 14 ಫಾರ್ಮ್ಗಳನ್ನು ಸಲ್ಲಿಸಿದರೆ, ತರೂರ್ 6 ಮತ್ತು ತ್ರಿಪಾಠಿ ಒಂದು ಫಾರ್ಮ್ ಅನ್ನು ಸಲ್ಲಿಸಿದ್ದರು.
ದೆಹಲಿಯ ಕಾಂಗ್ರೆಸ್ ಪ್ರಧಾನ ಕಚೇರಿಯಲ್ಲಿ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಎಐಸಿಸಿ ಕೇಂದ್ರ ಚುನಾವಣಾ ಪ್ರಾಧಿಕಾರದ ಅಧ್ಯಕ್ಷ ಮಧುಸೂದನ್ ಮಿಸ್ತ್ರಿ, ನಾಮಪತ್ರ ಸಲ್ಲಿಸುವಾಗ ಒಟ್ಟು 20 ಫಾರ್ಮ್ಗಳು ಬಂದಿದ್ದು, ಅವುಗಳಲ್ಲಿ ನಾಲ್ಕು ತಿರಸ್ಕೃತವಾಗಿವೆ .ಸಹಿ ಹೊಂದಿಕೆಯಾಗದ ಕಾರಣ ತ್ರಿಪಾಠಿ ಅವರ ಸೂಚಕರ ಫಾರ್ಮ್ ಅನ್ನು ತಿರಸ್ಕರಿಸಲಾಗಿದೆ ಎಂದು ಮಿಸ್ತ್ರಿ ಹೇಳಿದರು.
Gold Rate Today : ಚಿನ್ನ – ಬೆಳ್ಳಿ ದರದಲ್ಲಿ ಏರಿಕೆ : ಇಂದಿನ ದರ ಇಲ್ಲಿ ತಿಳಿಯಿರಿ
ರಾಜಕೀಯ ವಿಶ್ಲೇಷಕರ ಪ್ರಕಾರ ಕರ್ನಾಟಕ ರಾಜ್ಯದವರಾದ ಮಲ್ಲಿಕಾರ್ಜುನ ಖರ್ಗೆಯವರು ಕಾಂಗ್ರೆಸ್ ಅಧ್ಯಕ್ಷರಾಗುವುದು ಬಹುತೇಕ ನಿಶ್ಚಿತ. ನೆಹರು – ಗಾಂಧಿ ಕುಟುಂಬದ ಸೂಚನೆಯ ಮೇರೆಗೆ ಅವರು ಈ ಚುನಾವಣೆಯಲ್ಲಿ ಸ್ಪರ್ಧಿಸುತ್ತಿದ್ದಾರೆ ಎಂಬ ಮಾತುಗಳು ಕಾಂಗ್ರೆಸ್ ಹಾಗೂ ರಾಜಕೀಯ ವಲಯದಲ್ಲಿ ಕೇಳಿ ಬರುತ್ತಿದೆ. ಇನ್ನು ಈ ಚುನಾವಣೆಯಲ್ಲಿ ಸೋನಿಯಾ ಗಾಂಧಿ, ರಾಹುಲ್ ಗಾಂದಿ ಹಾಗೂ ಪ್ರಿಯಾಂಕ ಗಾಂಧಿ ತಟಸ್ಥವಾಗಿರುವುದಾಗಿ ತಿಳಿಸಿದ್ದಾರೆ.
ಮಲ್ಲಿಕಾರ್ಜುನ ಖರ್ಗೆ ಬಗ್ಗೆ
ಬೀದರ್ ಜಿಲ್ಲೆಯ ಭಾಲ್ಕಿ ತಾಲೂಕಿನ ವರವಟ್ಟಿ ಅನ್ನೋ ಗ್ರಾಮದಲ್ಲಿ ಜುಲೈ 21, 1942ರಲ್ಲಿ ಜನಿಸಿದ್ದ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಇದೀಗ 80 ವರ್ಷ. ಚಿಕ್ಕ ವಯಸ್ಸಿನಲ್ಲಿಯೇ ವರವಟ್ಟಿಯಲ್ಲಿದ್ದ ಅವರ ಮನೆಗೆ ಬೆಂಕಿ ಬಿದ್ದಿದ್ದರಿಂದ ಕುಟುಂಬದ ಅನೇಕರನ್ನು ಕಳೆದುಕೊಂಡಿದ್ದ ಖರ್ಗೆ ಅವರು, ತಂದೆಯ ಜೊತೆಗೆ ಕಲಬುರಗಿಗೆ ಬಂದವರು.
ಪದವಿ ಓದುತ್ತಿದ್ದಾಗಲೇ ವಿದ್ಯಾರ್ಥಿ ಒಕ್ಕೂಟದ ಪ್ರಧಾನ ಕಾರ್ಯದರ್ಶಿಯಾಗಿ ಆಯ್ಕೆಯಾಗಿದ್ದರು. ನಂತರ ವಿದ್ಯಾರ್ಥಿ ಒಕ್ಕೂಟದ ಉಪಾಧ್ಯಕ್ಷರಾಗಿದ್ದರು. ಎಲ್ಎಲ್ ಬಿ ಪದವಿ ಪಡೆದಿರುವ ಮಲ್ಲಿಕಾರ್ಜುನ ಖರ್ಗೆ, ಕಲಬುರಗಿ ನಗರದಲ್ಲಿರುವ ಎಂ ಎಸ್ ಕೆ ಮಿಲ್ ನೌಕರರ ಕಾನೂನು ಸಲಹೆಗಾರರಾಗಿ, ಕಾರ್ಮಿಕ ಹಕ್ಕಗಳಿಗಾಗಿ ಹೋರಾಟ ನಡೆಸಿದ್ದರು. 1969 ರಲ್ಲಿ ಕಾಂಗ್ರೆಸ್ ಪಕ್ಷವನ್ನು ಸೇರ್ಪಡೆಗೊಂಡಿದ್ದ ಮಲ್ಲಿಕಾರ್ಜುನ ಖರ್ಗೆ, ನಗರ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು.
ಖರ್ಗೆಗೆ ಇದುವರೆಗೆ 12 ಚುನಾವಣೆ-11 ಗೆಲವು-1 ಸೋಲು
1972 ರಲ್ಲಿ ಅನಿರೀಕ್ಷಿತವಾಗಿ ಅಂದಿನ ಕಲಬುರಗಿ ಜಿಲ್ಲೆಯ ಗುರಮಠಕಲ್ ಎಸ್ಸಿ ಮೀಸಲು ವಿಧಾನಸಭಾ ಕ್ಷೇತ್ರದಿಂದ ವಿಧಾನಸಭೆಗೆ ಸ್ಪರ್ಧಿಸಿದ್ದ ಮಲ್ಲಿಕಾರ್ಜುನ ಖರ್ಗೆ ಅವರು ಮೊದಲ ಪ್ರಯತ್ನದಲ್ಲಿಯೇ ಶಾಸಕರಾಗಿ ಆಯ್ಕೆಯಾಗಿದ್ದರು. 1976 ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರಾಗಿ ಆಯ್ಕೆಯಾಗಿದ್ದರು. 2004 ರವರಗೆ ಗುರುಮಠಕಲ್ ಕ್ಷೇತ್ರದಿಂದ ಎಂಟು ಬಾರಿ ಸ್ಪರ್ಧಿಸಿ, ಎಂಟು ಬಾರಿ ಗೆಲವು ಸಾಧಿಸಿದ್ದ ಮಲ್ಲಿಕಾರ್ಜುನ ಖರ್ಗೆ, ರಾಜ್ಯದಲ್ಲಿ ಅನೇಕ ಖಾತೆಗಳ ಸಚಿವರಾಗಿ ಕಾರ್ಯನಿರ್ವಹಿಸಿದ್ದರು.
2008 ರಲ್ಲಿ ಕಲಬುರಗಿ ಜಿಲ್ಲೆಯ ಚಿತ್ತಾಪುರ ಕ್ಷೇತ್ರದಿಂದ ಸ್ಪರ್ಧಿಸಿ 9 ನೇ ಬಾರಿಗೆ ವಿಧಾನಸಭೆಯನ್ನು ಪ್ರವೇಶಿಸಿದ್ದರು. 2009 ರಲ್ಲಿ ನಡೆದ ಲೋಕಸಭಾ ಚುನಾವಣೆಯಲ್ಲಿ ಕಲಬುರಗಿ ಕ್ಷೇತ್ರದಿಂದ ಸ್ಪರ್ಧಿಸಿ ಜಯಗಳಿಸಿದ್ದರು. ಕೇಂದ್ರದಲ್ಲಿ ಕಾರ್ಮಿಕ ಸಚಿವರಾಗಿ, ರೈಲ್ವೆ ಸಚಿವರಾಗಿ ಕೆಲಸ ಮಾಡಿದ್ದಾರೆ.
2014 ರಲ್ಲಿ ಎರಡನೇ ಬಾರಿಗೆ ಕೂಡಾ ಕಲಬುರಗಿ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಿ ಗೆದ್ದಿದ್ದರು. ಆದ್ರೆ 2018 ರಲ್ಲಿ ನಡೆದ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಿ, ಮೊದಲ ಬಾರಿಗೆ ಮಲ್ಲಿಕಾರ್ಜುನ ಖರ್ಗೆ ಸೋಲನ್ನು ಅನುಭವಿಸಿದ್ದರು. ನ್ನು 2014 ರಲ್ಲಿ ಲೋಕಸಭೆಯಲ್ಲಿ ಕಾಂಗ್ರೆಸ್ ಪಕ್ಷದ ನಾಯಕರಾಗಿದ್ದ ಮಲ್ಲಿಕಾರ್ಜುನ ಖರ್ಗೆ, ಸರ್ಕಾರದ ವಿರುದ್ದ ತಮ್ಮ ಮೊನಚಾದ ಮಾತುಗಳಿಂದ ತಿವಿದು, ಪ್ರತಿಪಕ್ಷದ ಜವಾಬ್ದಾರಿಯನ್ನು ಸರಿಯಾಗಿ ನಿರ್ವಹಿಸಿದ್ದರು.
Cockroaches: ಮನೆಯಲ್ಲಿ ಜಿರಳೆ, ನೊಣ ಕಾಟವಿದ್ದರೆ, ಓಡಿಸಲು ಇಲ್ಲಿದೆ ಸುಲಭೋಪಾಯ
ಇದೇ ಕಾರಣಕ್ಕೆ 2019ರ ಲೋಕಸಭಾ ಚುನಾವಣೆಯಲ್ಲಿ ಖರ್ಗೆಯವರು ಚುನಾವಣೆಯಲ್ಲಿ ಸೋತರು ಸೋನಿಯಾ ಗಾಂಧಿ ಅವರು, ಮಲ್ಲಿಕಾರ್ಜುನ ಖರ್ಗೆ ಅವರನ್ನು ರಾಜ್ಯಸಭೆಗೆ ಆಯ್ಕೆ ಮಾಡಿಸಿ, ರಾಜ್ಯಸಭೆಯ ವಿರೋಧ ಪಕ್ಷದ ನಾಯಕನ ಜವಾಬ್ದಾರಿಯನ್ನು ನೀಡಿದ್ದರು. ಪಕ್ಷ ನೀಡಿದ ಜವಾಬ್ದಾರಿಯನ್ನು ಶಿಸ್ತಿನಿಂದ ನಿಭಾಯಿಸುವುದು, ನಂಬಿರುವ ಸಿದ್ದಾಂತ ಬಿಟ್ಟು ನಡೆಯದೇ ಇರುವ ಮಲ್ಲಿಕಾರ್ಜುನ ಖರ್ಗೆ ಅವರ ಆಚಾರ, ವಿಚಾರಗಳಿಂದ ಇದೀಗ ಅವರು ಎಐಸಿಸಿ ಅಧ್ಯಕ್ಷ ಸ್ಥಾನಕ್ಕೆ ತಂದು ನಿಲ್ಲಿಸಿವೆ.
ಮಲ್ಲಿಕಾರ್ಜುನ ಖರ್ಗೆ ಅವರಿಗೆ ಎಐಸಿಸಿ ಅಧ್ಯಕ್ಷ ಸ್ಥಾನ ಸಿಗ್ತಾಯಿರುವದು ನಮಗೆಲ್ಲಾ ಸಂಭ್ರಮ ತರಿಸಿದೆ. ನುಡಿದಂತೆ ನಡೆಯುವ ಮಲ್ಲಿಕಾರ್ಜುನ ಖರ್ಗೆ ಅವರು ಈ ಕಲ್ಯಾಣ ಕರ್ನಾಟಕಕ್ಕೆ ದೊಡ್ಡ ಕೊಡುಗೆ ನೀಡಿದ್ದಾರೆ ಎಂದು ಶರಣು ಮೋದಿ, ಕೆಪಿಸಿಸಿ ಕಾರ್ಯದರ್ಶಿ ಹೇಳುತ್ತಾರೆ.
ಮಂಗಳೂರು
Mangalore-ಮಂಗಳೂರು ವಿದ್ಯಾರ್ಥಿನಿ ಅಪಹರಣ ಪ್ರಕರಣಕ್ಕೆ ಹೊಸ ತಿರುವು: ಮನೆಯವರ ಜೊತೆ ತೆರಳಲು ಯುವತಿ ನಕಾರ..!
ಮಂಗಳೂರಿನ ದೇರಳಕಟ್ಟೆಯ ಖಾಸಗಿ ವೈದ್ಯಕೀಯ ಕಾಲೇಜು ಆವರಣದಿಂದ ವೈದ್ಯಕೀಯ ವಿದ್ಯಾರ್ಥಿನಿಯನ್ನು ಮಹೀಂದ್ರಾ ಥಾರ್ ವಾಹನದಲ್ಲಿ ಬಲವಂತವಾಗಿ ಕರೆದೊಯ್ದಿದ್ದ ಪ್ರಕರಣ ಇದೀಗ ಹೊಸ ತಿರುವು ಪಡೆದುಕೊಂಡಿದೆ. ಕೇರಳಂನಲ್ಲಿ ವಿದ್ಯಾರ್ಥಿನಿಯನ್ನು ಪತ್ತೆಹಚ್ಚಿದ ಪೊಲೀಸರು ಆಕೆಯ ಹೇಳಿಕೆ ದಾಖಲಿಸಿದ್ದು, ಮನೆಯವರ ಜೊತೆ ತೆರಳಲು ತನಗೆ ಇಷ್ಟವಿಲ್ಲ ಎಂದು ಯುವತಿ ಸ್ಪಷ್ಟಪಡಿಸಿದ್ದಾಳೆ.
ಮಂಗಳೂರು: ಮಂಗಳೂರಿನ ದೇರಳಕಟ್ಟೆಯ ಖಾಸಗಿ ವೈದ್ಯಕೀಯ ಕಾಲೇಜು ಆವರಣದಿಂದ ವೈದ್ಯಕೀಯ ವಿದ್ಯಾರ್ಥಿನಿಯನ್ನು ಮಹೀಂದ್ರಾ ಥಾರ್ ವಾಹನದಲ್ಲಿ ಬಲವಂತವಾಗಿ ಕರೆದೊಯ್ದಿದ್ದ ಪ್ರಕರಣ ಇದೀಗ ಹೊಸ ತಿರುವು ಪಡೆದುಕೊಂಡಿದೆ. ಕೇರಳಂನಲ್ಲಿ ವಿದ್ಯಾರ್ಥಿನಿಯನ್ನು ಪತ್ತೆಹಚ್ಚಿದ ಪೊಲೀಸರು ಆಕೆಯ ಹೇಳಿಕೆ ದಾಖಲಿಸಿದ್ದು, ಮನೆಯವರ ಜೊತೆ ತೆರಳಲು ತನಗೆ ಇಷ್ಟವಿಲ್ಲ ಎಂದು ಯುವತಿ ಸ್ಪಷ್ಟಪಡಿಸಿದ್ದಾಳೆ.
ಏನಿದು ಪ್ರಕರಣ?
ನ.19ರ ಗುರುವಾರ ಸಂಜೆ ಕಾಲೇಜು ಆವರಣದಿಂದ ಕರೆದೊಯ್ಯಲ್ಪಟ್ಟ ಯುವತಿ ದಕ್ಷಿಣ ಕನ್ನಡ ಜಿಲ್ಲೆಯ ಪುಂಜಾಲಕಟ್ಟೆ ಮೂಲದವರಾಗಿದ್ದು, ದೇರಳಕಟ್ಟೆಯ ಕಣಚೂರು ವೈದ್ಯಕೀಯ ಕಾಲೇಜಿನಲ್ಲಿ ಪ್ರಥಮ ವರ್ಷದ ಎಂಬಿಬಿಎಸ್ ವ್ಯಾಸಂಗ ಮಾಡುತ್ತಿದ್ದಾರೆ ಎನ್ನಲಾಗಿದೆ.
ಯುವತಿ ಮಂಗಳೂರಿನ ಮತ್ತೊಂದು ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಡಿಎಸ್ ವ್ಯಾಸಂಗ ಮಾಡುತ್ತಿರುವ ಯುವಕನನ್ನು ಪ್ರೀತಿಸುತ್ತಿದ್ದಳು ಎನ್ನಲಾಗಿದೆ. ಈ ವಿಚಾರ ತಿಳಿದ ಯುವತಿಯ ಪೋಷಕರು ಹಾಗೂ ಸಂಬಂಧಿಕರು ಕಾಲೇಜು ಆವರಣಕ್ಕೆ ಆಗಮಿಸಿ, ಆಕೆಯ ಇಚ್ಛೆಗೆ ವಿರುದ್ಧವಾಗಿ ಬಲವಂತವಾಗಿ ಎಳೆದೊಯ್ದು ಮಹೀಂದ್ರಾ ಥಾರ್ ವಾಹನದಲ್ಲಿ ಕರೆದೊಯ್ದಿದ್ದರು. ಈ ಘಟನೆಗೆ ಸಂಬಂಧಿಸಿದ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದವು.
ಘಟನೆಯ ಬಳಿಕ ಕಾರ್ಯಾಚರಣೆ ನಡೆಸಿದ ಪೊಲೀಸರು, ಕೇರಳಂನ ಸಂಬಂಧಿಕರ ಮನೆಯಲ್ಲಿದ್ದ ವಿದ್ಯಾರ್ಥಿನಿಯನ್ನು ಪತ್ತೆಹಚ್ಚಿ ಸುರಕ್ಷಿತವಾಗಿ ಮಂಗಳೂರಿಗೆ ಕರೆತಂದಿದ್ದಾರೆ.
ಮನೆಯವರ ಜೊತೆ ಹೋಗಲು ನಿರಾಕರಣೆ
ಪೊಲೀಸರು ರಕ್ಷಿಸಿದ ಬಳಿಕ ಯುವತಿಯ ಹೇಳಿಕೆ ದಾಖಲಿಸಿದ್ದು, ತನ್ನ ಪೋಷಕರು ಅಥವಾ ಮನೆಯವರ ಜೊತೆ ಹೋಗಲು ಇಚ್ಛಿಸುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾಳೆ ಎನ್ನಲಾಗಿದೆ. ಯುವತಿ ವಯಸ್ಕಳಾಗಿರುವುದರಿಂದ ತಾನು ಎಲ್ಲಿ ವಾಸಿಸಬೇಕು ಎಂಬುದನ್ನು ನಿರ್ಧರಿಸುವ ಕಾನೂನುಬದ್ಧ ಹಕ್ಕು ಆಕೆಗಿದೆ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತರು ತಿಳಿಸಿದ್ದಾರೆ.
ವೈದ್ಯಕೀಯ ತಪಾಸಣೆಯ ಬಳಿಕ ಯುವತಿಯ ಇಚ್ಛೆಯ ಸ್ಥಳಕ್ಕೆ ಅಥವಾ ಸಾಂತ್ವನ ಕೇಂದ್ರಕ್ಕೆ ಪೊಲೀಸ್ ರಕ್ಷಣೆಯಲ್ಲಿ ಕಳುಹಿಸಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ವರದಿಯಾಗಿದೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಭಾರತೀಯ ನ್ಯಾಯ ಸಂಹಿತೆ (BNS) ಸೆಕ್ಷನ್ 140(3) ಮತ್ತು 126ರ ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು, ಇಬ್ಬರನ್ನು ವಿಚಾರಣೆಗೆ ಕರೆಸಲಾಗಿದೆ. ಏಳು ವರ್ಷಕ್ಕಿಂತ ಕಡಿಮೆ ಶಿಕ್ಷೆಯಿರುವ ಅಪರಾಧವಾಗಿರುವ ಹಿನ್ನೆಲೆಯಲ್ಲಿ ಬಿಎನ್‌ಎಸ್‌ಎಸ್ ಅಡಿಯಲ್ಲಿ ನೋಟಿಸ್ ಜಾರಿ ಮಾಡುವ ಪ್ರಕ್ರಿಯೆ ನಡೆಯುತ್ತಿದೆ ಎಂದು ವರದಿಯಾಗಿದೆ.
ಅಂತರ ರಾಜ್ಯ
Former CBI officer-ಅಧಿಕಾರ, ಹಣ, ಐಷಾರಾಮಿ ಬದುಕಿಗೆ ಗುಡ್‌ಬೈ; ಗುಹೆಯಲ್ಲಿ ಧ್ಯಾನ ಮಾಡುತ್ತಿರುವ ಮಾಜಿ ಸಿಬಿಐ ಅಧಿಕಾರಿ..!
ಉನ್ನತ ಸರ್ಕಾರಿ ಹುದ್ದೆ, ಕೈತುಂಬಾ ಸಂಬಳ, ಕಾರು, ಬಂಗಲೆಯಂತಹ ಐಷಾರಾಮಿ ಸೌಲಭ್ಯಗಳಿದ್ದರೂ ನೆಮ್ಮದಿ ಸಿಗದ ಹಿನ್ನೆಲೆಯಲ್ಲಿ ಕೇಂದ್ರ ತನಿಖಾ ದಳದ (ಸಿಬಿಐ) ಮಾಜಿ ಇನ್ಸ್‌ಪೆಕ್ಟರ್ ಒಬ್ಬರು ತಮ್ಮ ಪ್ರತಿಷ್ಠಿತ ಹುದ್ದೆಗೆ ರಾಜೀನಾಮೆ ನೀಡಿ ಸನ್ಯಾಸ ಜೀವನವನ್ನು ಆಯ್ಕೆ ಮಾಡಿಕೊಂಡಿದ್ದಾರೆ. ಇದೀಗ ಅರಣ್ಯದ ಗುಹೆಗಳಲ್ಲಿ ಸರಳ ಜೀವನ ನಡೆಸುತ್ತಿರುವ ಅವರ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗಿದೆ.
ನವದೆಹಲಿ: ಉನ್ನತ ಸರ್ಕಾರಿ ಹುದ್ದೆ, ಕೈತುಂಬಾ ಸಂಬಳ, ಕಾರು, ಬಂಗಲೆಯಂತಹ ಐಷಾರಾಮಿ ಸೌಲಭ್ಯಗಳಿದ್ದರೂ ನೆಮ್ಮದಿ ಸಿಗದ ಹಿನ್ನೆಲೆಯಲ್ಲಿ ಕೇಂದ್ರ ತನಿಖಾ ದಳದ (ಸಿಬಿಐ) ಮಾಜಿ ಇನ್ಸ್‌ಪೆಕ್ಟರ್ ಒಬ್ಬರು ತಮ್ಮ ಪ್ರತಿಷ್ಠಿತ ಹುದ್ದೆಗೆ ರಾಜೀನಾಮೆ ನೀಡಿ ಸನ್ಯಾಸ ಜೀವನವನ್ನು ಆಯ್ಕೆ ಮಾಡಿಕೊಂಡಿದ್ದಾರೆ. ಇದೀಗ ಅರಣ್ಯದ ಗುಹೆಗಳಲ್ಲಿ ಸರಳ ಜೀವನ ನಡೆಸುತ್ತಿರುವ ಅವರ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗಿದೆ.
ಆಧುನಿಕ ಜಗತ್ತಿನ ಸಕಲ ಸೌಕರ್ಯಗಳಿಂದ ದೂರವಾಗಿ ಗುಹೆಗಳಲ್ಲಿ ವಾಸಿಸುತ್ತಿರುವ ಮಾಜಿ ಅಧಿಕಾರಿಯು, ತಮ್ಮ ಆಧ್ಯಾತ್ಮಿಕ ಪಯಣದ ಅನುಭವಗಳನ್ನು ಹಂಚಿಕೊಂಡಿದ್ದಾರೆ. ಅರಣ್ಯದ ವಾತಾವರಣದಲ್ಲಿ ಬದುಕಲು ಆರಂಭಿಸಿದ ಬಳಿಕ ಜೀವನದ ನೈಜ ಅರ್ಥ ಹಾಗೂ ನೆಮ್ಮದಿಯ ಮಹತ್ವ ಅರಿವಾಯಿತು ಎಂದು ಅವರು ಹೇಳಿದ್ದಾರೆ.
ಸಿಬಿಐ ಇನ್ಸ್‌ಪೆಕ್ಟರ್ ಹುದ್ದೆ ದೊರೆತ ಆರಂಭದಲ್ಲಿ ಜೀವನದಲ್ಲಿ ಎಲ್ಲವನ್ನೂ ಸಾಧಿಸಿದ್ದೇನೆ ಎಂದು ಭಾವಿಸಿದ್ದ ಅವರು, ಕಾಲಕ್ರಮೇಣ ಆ ವ್ಯವಸ್ಥೆಯೊಳಗೆ ಮಾನಸಿಕ ಒತ್ತಡ ಅನುಭವಿಸಲಾರಂಭಿಸಿದರು. ಕಾನೂನು ಪಾಲನೆಯ ಹೆಸರಿನಲ್ಲಿ ಜನರೊಂದಿಗೆ ಕಠಿಣವಾಗಿ ಹಾಗೂ ಒರಟಾಗಿ ವರ್ತಿಸಬೇಕಾದ ಪರಿಸ್ಥಿತಿ ತಮ್ಮ ಸ್ವಭಾವಕ್ಕೆ ಹೊಂದಿಕೆಯಾಗುತ್ತಿರಲಿಲ್ಲ. ಹಣ, ಮನೆ, ಕಾರು ಸೇರಿದಂತೆ ಎಲ್ಲ ಸೌಲಭ್ಯಗಳಿದ್ದರೂ ಮನಸ್ಸಿಗೆ ಬೇಕಾದ ನೆಮ್ಮದಿ ಮತ್ತು ಸ್ವಾತಂತ್ರ್ಯ ಸಿಗುತ್ತಿಲ್ಲ ಎಂಬ ಅರಿವಾದ ಬಳಿಕ ಹುದ್ದೆಗೆ ರಾಜೀನಾಮೆ ನೀಡಲು ನಿರ್ಧರಿಸಿದರು.
ನಂತರ ಹಲವು ರಾಜ್ಯಗಳಲ್ಲಿ ಸಂಚರಿಸಿದ ಅವರು, ಕೊನೆಗೆ ಮಧ್ಯಪ್ರದೇಶದ ಓಂಕಾರೇಶ್ವರದ ಸಮೀಪ ನರ್ಮದಾ ನದಿ ತೀರಕ್ಕೆ ತಲುಪಿದರು. ಅಲ್ಲಿ ಸರಳ ಜೀವನ ಆರಂಭಿಸಿ, ಚಪ್ಪಲಿ ಇಲ್ಲದೆ, ಮಲಗಲು ಚಾಪೆಯನ್ನೂ ಬಳಸದೆ, ದೊರೆಯುವ ಆಹಾರವನ್ನು ಸೇವಿಸುತ್ತಾ ಧ್ಯಾನ ಮತ್ತು ದೇವಿಯ ಪ್ರಾರ್ಥನೆಯಲ್ಲಿ ತೊಡಗಿಸಿಕೊಂಡರು.
ಬಳಿಕ ಬೆಟ್ಟದ ಮೇಲಿರುವ ದೇವಸ್ಥಾನವೊಂದರಲ್ಲಿ ಸಾಧುಗಳೊಂದಿಗೆ ಕೆಲವು ವರ್ಷಗಳನ್ನು ಕಳೆದರು. ಈ ಸಂದರ್ಭದಲ್ಲಿ ಗ್ರಾಮದ ಮಕ್ಕಳಿಗೆ ಪ್ರಕೃತಿಯೊಂದಿಗೆ ಬೆರೆಯುವ ಪಾಠವನ್ನೂ ಕಲಿಸಿದರು. ಸದ್ಯ ದಟ್ಟ ಅರಣ್ಯದ ಗುಹೆಗಳಲ್ಲಿ ವಾಸಿಸುತ್ತಿರುವ ಅವರು, ಒಲೆಯ ಮೇಲೆ ಅಡುಗೆ ಮಾಡಿಕೊಂಡು ಧ್ಯಾನದಲ್ಲಿ ಕಾಲ ಕಳೆಯುತ್ತಿದ್ದಾರೆ.
ಭ್ರಷ್ಟಾಚಾರದ ಬಗ್ಗೆ ಅವರ ಅಭಿಪ್ರಾಯವೇನು?
ಸಮಾಜದಲ್ಲಿನ ಭ್ರಷ್ಟಾಚಾರದ ಕುರಿತು ಮಾತನಾಡಿರುವ ಮಾಜಿ ಅಧಿಕಾರಿ, ಭ್ರಷ್ಟಾಚಾರದ ಬೀಜ ಮನೆಯಲ್ಲಿಯೇ ಬಿತ್ತನೆಯಾಗುತ್ತದೆ ಎಂದು ಅಭಿಪ್ರಾಯಪಟ್ಟಿದ್ದಾರೆ.
ಪೋಷಕರು ತಮ್ಮ ಮಕ್ಕಳನ್ನು ನೆರೆಹೊರೆಯವರ ಶ್ರೀಮಂತಿಕೆಯೊಂದಿಗೆ ಹೋಲಿಕೆ ಮಾಡುವುದು ಮಕ್ಕಳಲ್ಲಿ ಹಣ ಮತ್ತು ಐಷಾರಾಮಿ ಜೀವನದ ಮೇಲಿನ ಅತಿಯಾದ ಆಸೆ ಬೆಳೆಸುತ್ತದೆ. ಇಂತಹ ಮನೋಭಾವದಲ್ಲಿ ಬೆಳೆಯುವ ಮಕ್ಕಳು ಮುಂದೆ ಜಿಲ್ಲಾಧಿಕಾರಿ, ವೈದ್ಯ ಅಥವಾ ಎಂಜಿನಿಯರ್‌ನಂತಹ ಉನ್ನತ ಸ್ಥಾನಕ್ಕೇರಿದರೂ ಸಮಾಜವನ್ನು ಶೋಷಿಸುವ ಸಾಧ್ಯತೆ ಇದೆ ಎಂದು ಎಚ್ಚರಿಸಿದ್ದಾರೆ.
ಆದ್ದರಿಂದ ಮಕ್ಕಳನ್ನು ಐಎಎಸ್, ಐಪಿಎಸ್ ಅಧಿಕಾರಿಗಳನ್ನಾಗಿ ಅಥವಾ ಸನ್ಯಾಸಿಗಳನ್ನಾಗಿ ರೂಪಿಸುವುದಕ್ಕಿಂತ ಮೊದಲು ಅವರನ್ನು ಉತ್ತಮ ಮನುಷ್ಯರನ್ನಾಗಿ ಬೆಳೆಸುವುದು ಪೋಷಕರ ಆದ್ಯತೆಯಾಗಬೇಕು ಎಂದು ಸಲಹೆ ನೀಡಿದ್ದಾರೆ.
ಕೇವಲ ಬಟ್ಟೆ ಅಥವಾ ವೇಷ ಬದಲಾಯಿಸಿಕೊಳ್ಳುವುದರಿಂದ ಸನ್ಯಾಸಿಯಾಗಲು ಸಾಧ್ಯವಿಲ್ಲ. ತಾನು ಮಾಡುವ ಕೆಲಸದಲ್ಲಿ ಸಂಪೂರ್ಣ ಪ್ರಾಮಾಣಿಕತೆ ಮತ್ತು ಸಮರ್ಪಣಾ ಮನೋಭಾವ ಹೊಂದಿರುವುದೇ ನಿಜವಾದ ಪವಿತ್ರತೆ ಎಂಬ ಸಂದೇಶವನ್ನೂ ಅವರು ನೀಡಿದ್ದಾರೆ.
ಬಿಗ್ ನ್ಯೂಸ್
Bail rejected-ಸಿದ್ದರಾಮಯ್ಯ ವಿರುದ್ಧದ ‘ಸ್ಟಿಂಗ್’ ಪ್ರಕರಣ: ಕೃಪಾ ಆಳ್ವಾ, ರಾಕೇಶ್ ಶೆಟ್ಟಿ ಸೇರಿ 6 ಮಂದಿಯ ಜಾಮೀನು ಅರ್ಜಿ ವಜಾ
ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಸ್ಟಿಂಗ್ ವಿಡಿಯೋ ಚಿತ್ರೀಕರಣ ಹಾಗೂ ಅದನ್ನು ಪ್ರಸಾರ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಕೃಪಾ ಆಳ್ವಾ, ರಾಕೇಶ್ ಶೆಟ್ಟಿ ಸೇರಿದಂತೆ ಆರು ಮಂದಿ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಗಳನ್ನು ನ್ಯಾಯಾಲಯ ವಜಾಗೊಳಿಸಿದೆ. ಇದರಿಂದ ಆರೋಪಿಗಳು ಪೊಲೀಸರಿಗೆ ಶರಣಾಗಬೇಕಾದ ಪರಿಸ್ಥಿತಿ ಎದುರಾಗಿದೆ.
ಬೆಂಗಳೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಸ್ಟಿಂಗ್ ವಿಡಿಯೋ ಚಿತ್ರೀಕರಣ ಹಾಗೂ ಅದನ್ನು ಪ್ರಸಾರ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಕೃಪಾ ಆಳ್ವಾ, ರಾಕೇಶ್ ಶೆಟ್ಟಿ ಸೇರಿದಂತೆ ಆರು ಮಂದಿ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಗಳನ್ನು ನ್ಯಾಯಾಲಯ ವಜಾಗೊಳಿಸಿದೆ. ಇದರಿಂದ ಆರೋಪಿಗಳು ಪೊಲೀಸರಿಗೆ ಶರಣಾಗಬೇಕಾದ ಪರಿಸ್ಥಿತಿ ಎದುರಾಗಿದೆ.
ಸಿದ್ದರಾಮಯ್ಯ ವಿರುದ್ಧ ಸ್ಟಿಂಗ್ ನಡೆಸಲಾಗಿದೆ ಎಂದು ಹೇಳಲಾದ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿತ್ತು. ಈ ವಿಡಿಯೋ ಕುರಿತು ಸಿದ್ದರಾಮಯ್ಯ ಅವರು ನಗರ ಪೊಲೀಸ್ ಆಯುಕ್ತರಿಗೆ ದೂರು ನೀಡಿದ್ದರು. ದೂರಿನ ಆಧಾರದ ಮೇಲೆ ಬೆಂಗಳೂರಿನ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಕೇಂದ್ರ ಅಪರಾಧ ವಿಭಾಗ (CCB) ಪೊಲೀಸರು ತನಿಖೆ ಕೈಗೊಂಡಿದ್ದರು.
ಪ್ರಕರಣದ ತನಿಖೆಯ ಭಾಗವಾಗಿ ಪವರ್ ಟಿವಿ ವ್ಯವಸ್ಥಾಪಕ ನಿರ್ದೇಶಕ ರಾಕೇಶ್ ಶೆಟ್ಟಿ, ಕಾಂಗ್ರೆಸ್‌ನಿಂದ ಉಚ್ಚಾಟಿತರಾಗಿರುವ ಕೃಪಾ ಆಳ್ವಾ, ಪ್ರಜ್ವಲ್ ಪ್ರಸಾದ್, ಚಂದನ್ ಎಚ್.ಎಸ್., ಕೆ.ವಿ. ಪ್ರಶಾಂತ್ ಕುಮಾರ್ ಹಾಗೂ ವಿನೋದ್ ಕುಮಾರ್ ಅವರಿಗೆ ಸಿಸಿಬಿ ಪೊಲೀಸರು ನೋಟಿಸ್ ಜಾರಿ ಮಾಡಿದ್ದರು.
ಈ ಹಿನ್ನೆಲೆಯಲ್ಲಿ ಆರು ಮಂದಿ ಆರೋಪಿಗಳು ಬಂಧನದ ಭೀತಿಯಿಂದ ನಿರೀಕ್ಷಣಾ ಜಾಮೀನು ಕೋರಿ ನ್ಯಾಯಾಲಯದ ಮೊರೆ ಹೋಗಿದ್ದರು. ಅರ್ಜಿಗಳ ವಿಚಾರಣೆ ನಡೆಯುವವರೆಗೆ ನ್ಯಾಯಾಲಯ ಷರತ್ತುಬದ್ಧ ಮಧ್ಯಂತರ ನಿರೀಕ್ಷಣಾ ಜಾಮೀನು ಮಂಜೂರು ಮಾಡಿತ್ತು.
ಆದರೆ, ನವೆಂಬರ್ 20ರಂದು ವಿಚಾರಣೆ ಪೂರ್ಣಗೊಳಿಸಿದ 66ನೇ ಸಿಸಿಎಚ್ ನ್ಯಾಯಾಲಯ ಆರು ಮಂದಿ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಗಳನ್ನು ವಜಾಗೊಳಿಸಿದೆ. ಈ ಹಿಂದೆ ಮಧ್ಯಂತರ ರಕ್ಷಣೆ ನೀಡುವಾಗ, ಅಂತಿಮವಾಗಿ ನಿರೀಕ್ಷಣಾ ಜಾಮೀನು ದೊರೆಯದಿದ್ದಲ್ಲಿ ತನಿಖಾಧಿಕಾರಿಗಳ ಮುಂದೆ ಶರಣಾಗುವಂತೆ ನ್ಯಾಯಾಲಯ ಷರತ್ತು ವಿಧಿಸಿತ್ತು ಎನ್ನಲಾಗಿದೆ.
ಇದೀಗ ಜಾಮೀನು ಅರ್ಜಿಗಳು ವಜಾಗೊಂಡಿರುವುದರಿಂದ ಆರೋಪಿಗಳು ಪೊಲೀಸರಿಗೆ ಶರಣಾಗಬೇಕಿದ್ದು, ಇಲ್ಲವಾದಲ್ಲಿ ಬಂಧನಕ್ಕೆ ಒಳಗಾಗುವ ಸಾಧ್ಯತೆ ಎದುರಾಗಿದೆ.















