Connect with us

ನಿಧನ ವಾರ್ತೆ

Kodiyeri Balakrishnan | ಪಿಣರಾಯಿ ನಂತರದ ಪ್ರಭಾವಿ ಸಿಪಿಐಎಂ ನಾಯಕ, ಕೇರಳದ ಮಾಜಿ ಗೃಹ ಸಚಿವ ಕೊಡಿಯೇರಿ ಬಾಲಕೃಷ್ಣನ್ ನಿಧನ – ‘ರೆಡ್ ಸೆಲ್ಯೂಟ್ ಕಾಮ್ರೇಡ್ ‘ ಎಂದ ಕಮ್ಮೂನಿಸ್ಟರು : ನಿನ್ನೆಯಷ್ಟೇ ಪುತ್ರನ ಅತ್ಯಾಚಾರ ಪ್ರಕರಣ ವಜಾ..!

Published

on

Ad Widget

Ad Widget

Ad Widget

Ad Widget

ತಿರುವನಂತಪುರಂ: ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾರ್ಕ್ಸ್‌ ವಾದಿ) ಪೋಲಿಟ್ ಬ್ಯೂರೋ ಸದಸ್ಯ , ಕೇರಳದ ಮಾಜಿ ಗೃಹ ಸಚಿವ ಮತ್ತು ಪಕ್ಷದ ಕೇರಳ ಘಟಕದ ಮಾಜಿ ರಾಜ್ಯ ಕಾರ್ಯದರ್ಶಿ ಕೊಡಿಯೇರಿ ಬಾಲಕೃಷ್ಣನ್ (Kodiyeri Balakrishnan) ಅವರು ಅಕ್ಟೋಬರ್ 1 ರಂದು ಚೆನ್ನೈನ ಅಪೋಲೋ ಆಸ್ಪತ್ರೆಯಲ್ಲಿ ನಿಧನರಾದರು. ಅವರಿಗೆ 68 ವರ್ಷ ವಯಸ್ಸಾಗಿತ್ತು. ತಮಿಳುನಾಡು ಸಿಎಂ ಸ್ಟಾಲಿನ್ ಆಸ್ಪತ್ರೆಗೆ ತೆರಳಿ ಮೃತರ ಅಂತಿಮ ದರ್ಶನ ಪಡೆದರು.

Ad Widget

Ad Widget

Ad Widget

Ad Widget

ಕೊಡಿಯೆರಿ ತುರ್ತು ಪರಿಸ್ಥಿತಿಯ ಸಂದರ್ಭ ಜೈಲು ಸೇರಿದ್ದರು. ಇವರು ದೇಶಭಿಮಾನಿ ಪತ್ರಿಕೆಯ ಸಂಪಾದಕರಾಗಿಯೂ ಕಾರ್ಯನಿರ್ವಹಿಸಿದರು. ಇದೀಗ ಮೃತಪಟ್ಟ ನಾಯಕನಿಗೆ ಸಿಎಂ ಪಿಣರಾಯಿ ಸಹಿತ ಕಮ್ಮೂನಿಷ್ಟರು ‘ರೆಡ್ ಸೆಲ್ಯೂಟ್’ ಹೊಡೆದು ಸಂತಾಪ ಸೂಚಿಸುತಿದ್ದಾರೆ.

Ad Widget

Ad Widget alt="Ad Widget"/>

Ad Widget

ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಇತ್ತಿಚಿನವರೆಗೆ ಅವರು ರಾಜ್ಯ ಕಾರ್ಯದರ್ಶಿ ಹುದ್ದೆಯಲ್ಲಿದ್ದರು. ಅವರ ಅನಾರೋಗ್ಯದಿಂದಾಗಿ ಕರ್ತವ್ಯಗಳನ್ನು ನಿರ್ವಹಿಸಲು ಕಷ್ಟಕರವಾದಾಗ ಅವರು ತಮ್ಮ ಸ್ಥಾನವನ್ನು ತ್ಯಜಿಸಿದರು. ಇವರು ಕೇರಳ ರಾಜ್ಯದ ಮಾಜಿ ಗೃಹ ಸಚಿವರಾಗಿ , ಸಿಪಿಎಂ ಪಕ್ಷದಲ್ಲಿ ಪಿಣರಾಯಿ ವಿಜಯನ್ ನಂತರದ ಸ್ಥಾನದಲ್ಲಿ ಪ್ರಭಾವಿ ನಾಯಕರಾಗಿದ್ದರು.

Ad Widget

Ad Widget <> Ad Widget

ಆಗಸ್ಟ್ ಅಂತ್ಯದಲ್ಲಿ, ಕೊಡಿಯೇರಿ ಅವರು ಸತತ ಮೂರು ಅವಧಿಗೆ ಪಕ್ಷದ ಕಾರ್ಯದರ್ಶಿ ಸ್ಥಾನದಿಂದ ತಮ್ಮನ್ನು ಮುಕ್ತಗೊಳಿಸುವಂತೆ ಪಕ್ಷಕ್ಕೆ ಮನವಿ ಮಾಡಿದ್ದರು. ನಂತರ ಅವರನ್ನು ಚಿಕಿತ್ಸೆಗಾಗಿ ಚೆನ್ನೈನ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಸೆಪ್ಟೆಂಬರ್ 9 ರಂದು ಕೊಡಿಯೇರಿ ಅವರನ್ನು ಭೇಟಿ ಮಾಡಿದ್ದು, ಅವರ ಆರೋಗ್ಯ ಸ್ಥಿತಿ ಹದಗೆಟ್ಟಿದೆ ಎಂಬ ಊಹಾಪೋಹಗಳನ್ನು ಹುಟ್ಟುಹಾಕಿತ್ತು.

Ad Widget

Ad Widget

ಅವರ ಸ್ಥಾನಕ್ಕೆ ಪಕ್ಷದ ಹಿರಿಯ ನಾಯಕ ಎಂವಿ ಗೋವಿಂದನ್ ಆಯ್ಕೆಯಾಗಿದ್ದಾರೆ. ಕೊಡಿಯೇರಿ ಅವರು ತಮ್ಮ ಸಹೋದ್ಯೋಗಿ ಎ. ವಿಜಯರಾಘವನ್ ಅವರಿಗೆ ಅಧಿಕಾರವನ್ನು ಹಸ್ತಾಂತರಿಸಿದ ನಂತರ ನವೆಂಬರ್, 2020 ರಲ್ಲಿ ಆರೋಗ್ಯ ಸಮಸ್ಯೆಗಳಿಂದಾಗಿ ಕೆಲಸದಿಂದ ತಾತ್ಕಾಲಿಕ ವಿರಾಮವನ್ನು ಪಡೆದರು. ಡಿಸೆಂಬರ್ 2021 ರಲ್ಲಿ, ತಿಂಗಳ ಚಿಕಿತ್ಸೆಯ ನಂತರ ಪಕ್ಷದ ರಾಜ್ಯ ಕಾರ್ಯದರ್ಶಿಯಾಗಿ ಮತ್ತೆ ಸೇರಿದ ಒಂದು ದಿನದ ಬಳಿಕ, ಆಂಕೊಲಾಜಿಸ್ಟ್‌ಗಳು ಆಯೋಜಿಸಿದ್ದ ಕಾರ್ಯಕ್ರಮವೊಂದರಲ್ಲಿ ಮಾತನಾಡುವಾಗ ಕೊಡಿಯೇರಿ ತಮ್ಮ ಅನಾರೋಗ್ಯದ ಬಗ್ಗೆ ಹೇಳಿಕೊಂದಿದ್ದರು.

ಕಣ್ಣೂರು ಜಿಲ್ಲೆಯ ತಲಶ್ಶೇರಿಯ ಕೊಡಿಯೇರಿ ಗ್ರಾಮದಲ್ಲಿ ಜನಿಸಿದ ಅವರು, 1970ರಲ್ಲಿ ಹದಿಹರೆಯದಲ್ಲಿದ್ದಾಗಲೇ ಸಿಪಿಐ(ಎಂ) ಸೇರಿದ್ದರು. ಸ್ಟೂಡೆಂಟ್ಸ್ ಫೆಡರೇಶನ್ ಆಫ್ ಇಂಡಿಯಾ ಮತ್ತು ಡೆಮಾಕ್ರಟಿಕ್ ಯೂತ್ ಫೆಡರೇಶನ್ ಆಫ್ ಇಂಡಿಯಾ ಸೇರಿದಂತೆ ಪಕ್ಷದ ವಿವಿಧ ಪ್ರಮುಖ ಸಂಘಟನೆಗಳಲ್ಲಿ ನಾಯಕತ್ವ ವಹಿಸಿದ್ದರು. 1975-77ರ ತುರ್ತು ಪರಿಸ್ಥಿತಿಯಲ್ಲಿ, ಕೊಡಿಯೇರಿಯವರು ತಮ್ಮ 20ನೇ ವಯಸ್ಸಿನಲ್ಲಿದ್ದಾಗ 16 ತಿಂಗಳುಗಳ ಕಾಲ ಜೈಲು ವಾಸ ಅನುಭವಿಸಿದ್ದರು.

ಸಿಪಿಐ(ಎಂ)ನ ಕಣ್ಣೂರು ಜಿಲ್ಲಾ ಸಮಿತಿಯ ಕಾರ್ಯದರ್ಶಿಯಾಗಿಯೂ ಸೇವೆ ಸಲ್ಲಿಸಿದ್ದಾರೆ. ಅವರು ಐದು ಬಾರಿ ತಲಶ್ಶೇರಿಯಿಂದ ಶಾಸಕರಾಗಿ ಆಯ್ಕೆಯಾಗಿದ್ದರು. 1982, 1987, 2001, 2006 ಮತ್ತು 2011. 2006 ರಲ್ಲಿ ಎಡ ಪ್ರಜಾಸತ್ತಾತ್ಮಕ ರಂಗವು ಅಧಿಕಾರಕ್ಕೆ ಬಂದಾಗ ಅವರು ಗೃಹ ಸಚಿವರಾಗಿಯೂ ಕಾರ್ಯ ನಿರ್ವಹಿಸಿದ್ದರು.

ಕನ್ನಡ ಸಿನಿಮಾ ಜಗತ್ತಿಗೆ ಡ್ರಗ್ಸ್ ಸಪ್ಲೈ ಪ್ರಕರಣದಲ್ಲಿ ಪುತ್ರ ಬಂಧನ :

ಚಂದನವನಕ್ಕೆ ಮಾದಕ ಜಾಲದ ನಂಟು ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇರಳದ ಮಾಜಿ ಗೃಹ ಸಚಿವ ಕೋಡಿಯೇರಿ ಬಾಲಕೃಷ್ಣನ್ ಪುತ್ರ ಬಿನೇಶ್ ಕೋಡಿಯೇರಿಯನ್ನು ಬೆಂಗಳೂರು ಜಾರಿ ನಿರ್ದೇಶನಾಲಯ ಅಧಿಕಾರಿಗಳು ವಶಕ್ಕೆ ಪಡೆದು ನಂತರ ಹಣಕಾಸು ವರ್ಗಾವಣೆ ವಿಷಯವಾಗಿ ತನಿಖೆ ನಡೆದು ಬಿಡುಗಡೆಗೊಳಿಸಿದ್ದರು.

ನಟಿ ರಾಗಿಣಿ ಮತ್ತು ಸಂಜನಾ ಬಂಧನವಾದಗ ಈತನ ಹೆಸರು ತುಳುಕು ಹಾಕಿಕೊಂಡಿತ್ತು.

ನಿನ್ನೆಯಷ್ಟೇ ಪುತ್ರನ ಅತ್ಯಾಚಾರ ಪ್ರಕರಣ ವಜಾ..! :
ಕೊಡಿಯೇರಿ ಪುತ್ರನ ವಿರುದ್ಧದ ಅತ್ಯಾಚಾರ ಪ್ರಕರಣವನ್ನು ಸೆ.30ರಂದು ಬಾಂಬೆ ಹೈಕೋರ್ಟ್ ರದ್ದುಪಡಿಸಿದೆ. ಸಂತ್ರಸ್ತೆ ಹಾಗೂ ಅತ್ಯಾಚಾರ ಪ್ರಕರಣದಿಂದ ಜನಿಸಿದ ಮಗುವಿಗೆ ಜೊತೆಯಾಗಿ 80 ಲಕ್ಷ ರೂ. ಪರಿಹಾರ ನೀಡಿದ ಹಿನ್ನೆಲೆಯಲ್ಲಿ ಕೋಡಿಯೇರಿ ಬಾಲಕೃಷ್ಣನ್ ಪುತ್ರ ಬಿನೋಯ್ ವಿರುದ್ಧದ ಪ್ರಕರಣವನ್ನು ಬಾಂಬೆ ಹೈಕೋರ್ಟ್ ವಜಾಗೊಳಿಸಿದೆ. 

ಆರೋಪಿ ಬಿನೋಯ್ ಕೊಡಿಯೇರಿ ( Binoy Kodiyeri), ಮದುವೆಯ ಭರವಸೆ ನೀಡಿ ಬಹಳ ಕಾಲದವರೆಗೆ ನನ್ನ ಜೊತೆ ಸಂಬಂಧದಲ್ಲಿದ್ದು(Relationship) ಬಳಿಕ ತನಗೆ ಮೋಸ ಮಾಡಿದ್ದಲ್ಲದೇ ತನ್ನ ಮೇಲೆ ದಬ್ಬಾಳಿಕೆ ಮಾಡಿದ್ದಾನೆ. ಈ ಸಂಬಂಧದಿಂದ ತನಗೆ ಮಗು ಕೂಡ ಜನಿಸಿದೆ. ಆದರೆ 2018 ರ ನಂತರ ಬಿನೋಯ್ ತನ್ನನ್ನು ಹಾಗೂ ಮಗುವನ್ನು ತ್ಯಜಿಸಿ ಹೋಗಿದ್ದು, ಯಾವುದೇ ಪರಿಹಾರವನ್ನು ಕೂಡ ನೀಡಿಲ್ಲ ಎಂದು 33 ವರ್ಷದ ಮಹಿಳೆ ಕೋರ್ಟ್ ಮೆಟ್ಟಿಲೇರಿದ್ದರು. ಈ ಹಿನ್ನೆಲೆಯಲ್ಲಿ ಬಿನೋಯ್ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 376 ಅಡಿ (ಅತ್ಯಾಚಾರಕ್ಕೆ ಶಿಕ್ಷೆ), 420 (ಮೋಸ ಹಾಗೂ ಅಪ್ರಾಮಾಣಿಕವಾಗಿ ಆಸ್ತಿಯ ವಿತರಣೆ), 506 (ಅಪರಾಧ ಬೆದರಿಕೆಗೆ ಶಿಕ್ಷೆ) ಅಡಿ ಎಫ್‌ಐಆರ್ ದಾಖಲಾಗಿತ್ತು.

Ad Widget

ನಿಧನ ವಾರ್ತೆ

Savitri Devi-ಸಿಎಂ ಯೋಗಿ ಆದಿತ್ಯನಾಥ್ ತಾಯಿ ಸಾವಿತ್ರಿ ದೇವಿ ನಿಧನ

Published

on

Ad Widget

Ad Widget

Ad Widget

Ad Widget

ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ತಾಯಿ ಸಾವಿತ್ರಿ ದೇವಿ (91) ಅವರು ವಯೋಸಹಜ ಅನಾರೋಗ್ಯದಿಂದ ನಿಧನರಾಗಿದ್ದಾರೆ. ಉತ್ತರಾಖಂಡದ ಪೌರಿ ಜಿಲ್ಲೆಯ ಯಮಕೇಶ್ವರ ಬ್ಲಾಕ್‌ನ ಪಂಚೂರ್ ಗ್ರಾಮದಲ್ಲಿರುವ ತಮ್ಮ ನಿವಾಸದಲ್ಲಿ ಅವರು ಕೊನೆಯುಸಿರೆಳೆದಿದ್ದಾರೆ.

Ad Widget

Ad Widget

Ad Widget

Ad Widget

ಡೆಹ್ರಾಡೂನ್: ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ತಾಯಿ ಸಾವಿತ್ರಿ ದೇವಿ (91) ಅವರು ವಯೋಸಹಜ ಅನಾರೋಗ್ಯದಿಂದ ನಿಧನರಾಗಿದ್ದಾರೆ. ಉತ್ತರಾಖಂಡದ ಪೌರಿ ಜಿಲ್ಲೆಯ ಯಮಕೇಶ್ವರ ಬ್ಲಾಕ್‌ನ ಪಂಚೂರ್ ಗ್ರಾಮದಲ್ಲಿರುವ ತಮ್ಮ ನಿವಾಸದಲ್ಲಿ ಅವರು ಕೊನೆಯುಸಿರೆಳೆದಿದ್ದಾರೆ.

Ad Widget

Ad Widget alt="Ad Widget"/>

Ad Widget

ಸಾವಿತ್ರಿ ದೇವಿ ಅವರ ನಿಧನಕ್ಕೆ ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಈ ಸುದ್ದಿ ಅತ್ಯಂತ ದುಃಖದಾಯಕ ಹಾಗೂ ಹೃದಯವಿದ್ರಾವಕವಾಗಿದೆ ಎಂದು ಅವರು ತಿಳಿಸಿದ್ದಾರೆ.

Ad Widget

Ad Widget <> Ad Widget

ತಾಯಿಯ ವಾತ್ಸಲ್ಯ, ಆಶೀರ್ವಾದ ಮತ್ತು ಪ್ರೀತಿ ಜೀವನದ ಅತ್ಯಮೂಲ್ಯ ಸಂಪತ್ತು. ಅವರ ಅಗಲಿಕೆ ಕುಟುಂಬಕ್ಕೆ ತುಂಬಲಾರದ ನಷ್ಟವಾಗಿದೆ ಎಂದು ಧಾಮಿ ಸಂತಾಪ ಸೂಚಿಸಿದ್ದಾರೆ.

ಅಗಲಿದ ಆತ್ಮಕ್ಕೆ ಭಗವಾನ್ ಕೇದಾರನಾಥರು ಶಾಂತಿ ಕರುಣಿಸಲಿ. ತಾಯಿ ಅಗಲಿಕೆಯ ದುಃಖವನ್ನು ಸಹಿಸಿಕೊಳ್ಳುವ ಶಕ್ತಿಯನ್ನು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹಾಗೂ ಅವರ ಕುಟುಂಬದವರಿಗೆ ನೀಡಲಿ ಎಂದು ಪ್ರಾರ್ಥಿಸಿದ್ದಾರೆ.

Ad Widget

Ad Widget

ಯೋಗಿ ಆದಿತ್ಯನಾಥ್ ಅವರು ತಾಯಿಯ ಅಂತಿಮ ದರ್ಶನಕ್ಕೆ ತೆರಳುವ ಕುರಿತು ಹೆಚ್ಚಿನ ಮಾಹಿತಿ ಇನ್ನಷ್ಟೇ ಲಭ್ಯವಾಗಬೇಕಿದೆ.

Ad Widget
Continue Reading

ನಿಧನ ವಾರ್ತೆ

Kasaragod-ಕಾಸರಗೋಡು : ಬೇಟೆಯಾಡಲು ಸ್ಕೂಟರ್ ನಲ್ಲಿ ಸಂಚರಿಸುತ್ತಿದ್ದಾಗ ಗುಂಡು ಹಾರಿ ಯುವಕ ಸಾವು..!

Published

on

Ad Widget

Ad Widget

Ad Widget

Ad Widget

ಬೇಟೆಯಾಡಲು ಸ್ಕೂಟರ್‌ನಲ್ಲಿ ತೆರಳುತ್ತಿದ್ದ ವೇಳೆ ಲೋಡ್ ಮಾಡಿದ್ದ ರೈಫಲ್ ಆಕಸ್ಮಿಕವಾಗಿ ಸಿಡಿದು 28 ವರ್ಷದ ಯುವಕನೊಬ್ಬ ಮೃತಪಟ್ಟ ದಾರುಣ ಘಟನೆ ಕಾಸರಗೋಡಿನ ಮುಳಿಯಾರ್ ಪಂಚಾಯತ್ ವ್ಯಾಪ್ತಿಯ ಕಟ್ಟಿಪ್ಪಳಂನಲ್ಲಿ ಭಾನುವಾರ ರಾತ್ರಿ ನಡೆದಿದೆ. ಕಟ್ಟಿಪ್ಪಳಂ ನಿವಾಸಿಗಳಾದ ಮೊಯ್ದು ಮತ್ತು ಜಮೀಲಾ ದಂಪತಿಯ ಪುತ್ರ ಹೈದರ್ ಅಲಿ (28) ಮೃತಪಟ್ಟವರು.

Ad Widget

Ad Widget

Ad Widget

Ad Widget

ಕಾಸರಗೋಡು, ನ.16: ಬೇಟೆಯಾಡಲು ಸ್ಕೂಟರ್‌ನಲ್ಲಿ ತೆರಳುತ್ತಿದ್ದ ವೇಳೆ ಲೋಡ್ ಮಾಡಿದ್ದ ರೈಫಲ್ ಆಕಸ್ಮಿಕವಾಗಿ ಸಿಡಿದು 28 ವರ್ಷದ ಯುವಕನೊಬ್ಬ ಮೃತಪಟ್ಟ ದಾರುಣ ಘಟನೆ ಕಾಸರಗೋಡಿನ ಮುಳಿಯಾರ್ ಪಂಚಾಯತ್ ವ್ಯಾಪ್ತಿಯ ಕಟ್ಟಿಪ್ಪಳಂನಲ್ಲಿ ಭಾನುವಾರ ರಾತ್ರಿ ನಡೆದಿದೆ.

Ad Widget

Ad Widget alt="Ad Widget"/>

Ad Widget

ಕಟ್ಟಿಪ್ಪಳಂ ನಿವಾಸಿಗಳಾದ ಮೊಯ್ದು ಮತ್ತು ಜಮೀಲಾ ದಂಪತಿಯ ಪುತ್ರ ಹೈದರ್ ಅಲಿ (28) ಮೃತಪಟ್ಟವರು.

Ad Widget

Ad Widget <> Ad Widget

ಅಡೂರು ಪೊಲೀಸರು ನೀಡಿರುವ ಮಾಹಿತಿಯ ಪ್ರಕಾರ, ಹೈದರ್ ಅಲಿ ಭಾನುವಾರ ರಾತ್ರಿ ಬೇಟೆಯಾಡುವ ಉದ್ದೇಶದಿಂದ ಸ್ಕೂಟರ್‌ನಲ್ಲಿ ತೆರಳುತ್ತಿದ್ದರು. ಈ ವೇಳೆ ರೈಫಲ್ ಕೆಳಗೆ ಬೀಳದಂತೆ ಅದರ ಬಟ್ ಭಾಗವನ್ನು ಸ್ಕೂಟರ್‌ನ ಫುಟ್‌ಬೋರ್ಡ್‌ನಲ್ಲಿ ಕಾಲುಗಳ ನಡುವೆ ಇರಿಸಿಕೊಂಡು, ಮೇಲ್ಭಾಗವನ್ನು ಶರ್ಟ್‌ನ ಒಳಗೆ ಇಟ್ಟುಕೊಂಡಿದ್ದರು ಎನ್ನಲಾಗಿದೆ.

ಸ್ಕೂಟರ್ ಚಲಾಯಿಸುತ್ತಿದ್ದ ಸಂದರ್ಭದಲ್ಲಿ ಆಕಸ್ಮಿಕವಾಗಿ ರೈಫಲ್‌ನ ಟ್ರಿಗರ್ ಒತ್ತಲ್ಪಟ್ಟು ಗುಂಡು ಸಿಡಿದಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ. ಗುಂಡು ಹೈದರ್ ಅಲಿ ಅವರ ಗಲ್ಲ ಮತ್ತು ತಲೆಯನ್ನು ಸೀಳಿಕೊಂಡು ಹೋಗಿದೆ ಎನ್ನಲಾಗಿದೆ.

Ad Widget

Ad Widget

ಕಟ್ಟಿಪ್ಪಳಂನ ಮೈದಾನವೊಂದರ ಬಳಿ ಸ್ಕೂಟರ್ ಹಾಗೂ ರೈಫಲ್ ಪಕ್ಕದಲ್ಲೇ ಹೈದರ್ ಅಲಿ ರಕ್ತದ ಮಡುವಿನಲ್ಲಿ ಬಿದ್ದಿರುವುದು ಪತ್ತೆಯಾಗಿದೆ. ತಕ್ಷಣ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ, ಅದಾಗಲೇ ಮೃತಪಟ್ಟಿರುವುದಾಗಿ ವೈದ್ಯರು ಘೋಷಿಸಿದ್ದಾರೆ.

ಘಟನೆಗೆ ಬಳಸಲಾದ ರೈಫಲ್ ಪರವಾನಗಿ ಪಡೆದದ್ದೇ ಅಥವಾ ಅಕ್ರಮವಾಗಿ ತಯಾರಿಸಿದ ದೇಶೀಯ ಬಂದೂಕೇ ಎಂಬುದು ಇನ್ನೂ ಖಚಿತವಾಗಿಲ್ಲ. ತನಿಖೆಯ ಬಳಿಕವಷ್ಟೇ ಈ ಕುರಿತು ಸ್ಪಷ್ಟ ಮಾಹಿತಿ ಲಭ್ಯವಾಗಲಿದೆ ಎಂದು ಅಡೂರು ವೃತ್ತ ನಿರೀಕ್ಷಕರು ತಿಳಿಸಿದ್ದಾರೆ.

ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಕಾಸರಗೋಡು ಜನರಲ್ ಆಸ್ಪತ್ರೆಯ ಶವಾಗಾರಕ್ಕೆ ಸ್ಥಳಾಂತರಿಸಲಾಗಿದೆ. ಅಡೂರು ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.

Ad Widget
Continue Reading

ನಿಧನ ವಾರ್ತೆ

Car crash-ಮರಕ್ಕೆ ಅಪ್ಪಳಿಸಿದ ಕಾರು: ಇಬ್ಬರು ಎಂಜಿನಿಯರಿಂಗ್ ವಿದ್ಯಾರ್ಥಿನಿಯರ ಬದುಕು ಅಂತ್ಯ; ನಾಲ್ವರು ಆಸ್ಪತ್ರೆಗೆ ದಾಖಲು

Published

on

Ad Widget

Ad Widget

Ad Widget

Ad Widget

ನಿಯಂತ್ರಣ ತಪ್ಪಿದ ಕಾರೊಂದು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಎಂಜಿನಿಯರಿಂಗ್ ವಿದ್ಯಾರ್ಥಿನಿಯರು ಮೃತಪಟ್ಟಿದ್ದು, ನಾಲ್ವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನೆಲಮಂಗಲದ ಗುಡೇಮಾರನಹಳ್ಳಿ ಬಳಿ ನಡೆದಿದೆ. ಜಾನ್ಹವಿ ಹಾಗೂ ವೈಷ್ಣವಿ ಮೃತಪಟ್ಟ ವಿದ್ಯಾರ್ಥಿನಿಯರು.

Ad Widget

Ad Widget

Ad Widget

Ad Widget

ಬೆಂಗಳೂರು: ನಿಯಂತ್ರಣ ತಪ್ಪಿದ ಕಾರೊಂದು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಎಂಜಿನಿಯರಿಂಗ್ ವಿದ್ಯಾರ್ಥಿನಿಯರು ಮೃತಪಟ್ಟಿದ್ದು, ನಾಲ್ವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನೆಲಮಂಗಲದ ಗುಡೇಮಾರನಹಳ್ಳಿ ಬಳಿ ನಡೆದಿದೆ.

Ad Widget

Ad Widget alt="Ad Widget"/>

Ad Widget

ಮೃತರನ್ನು ಜಾನ್ಹವಿ (19) ಹಾಗೂ ವೈಷ್ಣವಿ (19) ಎಂದು ಗುರುತಿಸಲಾಗಿದೆ.

Ad Widget

Ad Widget <> Ad Widget

ಅಪಘಾತದಲ್ಲಿ ಗಗನ್, ಜಸ್ವಂತ್, ಹರ್ಷಿಣಿ ಎಸ್. ಹಾಗೂ ಹರ್ಷಿಣಿ ಜಿ. ಎಂಬ ನಾಲ್ವರು ವಿದ್ಯಾರ್ಥಿಗಳು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಮೃತರು ಹಾಗೂ ಗಾಯಾಳುಗಳು ತುಮಕೂರು ಮೂಲದವರಾಗಿದ್ದು, ಎಂಜಿನಿಯರಿಂಗ್ ಕಾಲೇಜಿನಲ್ಲಿ ದ್ವಿತೀಯ ವರ್ಷದ ವ್ಯಾಸಂಗ ಮಾಡುತ್ತಿದ್ದರು ಎನ್ನಲಾಗಿದೆ.

Ad Widget

Ad Widget

ಕಾರ್ಯಕ್ರಮವೊಂದರಲ್ಲಿ ಭಾಗವಹಿಸುವ ಉದ್ದೇಶದಿಂದ ವಿದ್ಯಾರ್ಥಿಗಳು ಕುಣಿಗಲ್ ಸಮೀಪದ ಹುತ್ರಿದುರ್ಗಕ್ಕೆ ಕಾರಿನಲ್ಲಿ ತೆರಳುತ್ತಿದ್ದರು. ಈ ವೇಳೆ ಗುಡೇಮಾರನಹಳ್ಳಿ ಬಳಿ ಚಾಲಕನ ನಿಯಂತ್ರಣ ತಪ್ಪಿದ ಕಾರು ರಸ್ತೆ ಬದಿಯ ಮರಕ್ಕೆ ಬಲವಾಗಿ ಡಿಕ್ಕಿ ಹೊಡೆದಿದೆ. ಡಿಕ್ಕಿಯ ತೀವ್ರತೆಗೆ ಇಬ್ಬರು ವಿದ್ಯಾರ್ಥಿನಿಯರು ಮೃತಪಟ್ಟಿದ್ದಾರೆ.

ಘಟನೆಗೆ ಸಂಬಂಧಿಸಿದಂತೆ ಕುದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!