Connect with us

ದಕ್ಷಿಣ ಕನ್ನಡ

 Muliya Jwells ಪುತ್ತೂರು: ಮುಳಿಯ ಜ್ಯುವೆಲ್ಸ್‌ನಲ್ಲಿ ಹೊಚ್ಚ ಹೊಸ ಟ್ರೆಂಡಿ ಆಭರಣಗಳ ಅನಾವರಣ :  ಮುಳಿಯ ಕಲರ್ಸ್‌- ನವರಾತ್ರಿ ಸ್ಪೆಷಲ್‌ Gem Stone collection Fest

Published

on



Ad Widget

Ad Widget

Ad Widget

Ad Widget

ಪುತ್ತೂರು Puttur :  ಪುತ್ತೂರಿನ ಹೆಸರಾಂತ ಚಿನ್ನಾಭರಣಗಳ ಮಳಿಗೆ ಮುಳಿಯ ಜ್ಯುವೆಲ್ಸ್‌, ( Muliya Jwells)   ಮುಳಿಯ ಕಲರ್ಸ್‌- ನವರಾತ್ರಿ ವಿಶೇಷ ‘ರತ್ನಾಭರಣಗಳ ಸಂಗ್ರಹ ಉತ್ಸವ’ (ಜೆಮ್‌ ಸ್ಟೋನ್‌ ಕಲೆಕ್ಷನ್‌ ಫೆಸ್ಟ್‌) ವನ್ನು ನವರಾತ್ರಿ- ದಸರಾ ಹಬ್ಬದ ಪ್ರಯುಕ್ತ  ಆಯೋಜಿಸಿದೆ. ಸೆ.26ರಿಂದ ಅಕ್ಟೋಬರ್‌ 5ರ ವರೆಗೆ ನಡೆಯುವ ಈ ಉತ್ಸವದಲ್ಲಿ ಪ್ರತಿದಿನ ಆಯಾ ಬಣ್ಣದ ರತ್ನಗಳನ್ನು ವಿಶೇಷ ಆದ್ಯತೆಯೊಂದಿಗೆ ಮಾರಾಟ ಮಾಡಲಾಗುತ್ತಿದೆ. ನವದುರ್ಗೆಯರನ್ನು ನವ ವರ್ಣಗಳಲ್ಲಿ ಆರಾಧಿಸಲು ಈ ನವ ರತ್ನಗಳು ಗ್ರಾಹಕರಿಗೆ ಅತ್ಯಂತ ಸೂಕ್ತವಾಗಿದ್ದು, ಆಕರ್ಷಕ ಬೆಲೆಯಲ್ಲಿ ದೊರೆಯುತ್ತವೆ.

Ad Widget

Ad Widget

Ad Widget

Ad Widget

ನವರಾತ್ರಿಯ ಈ ದಿನಗಳಲ್ಲಿ ಪ್ರತಿದಿನವೂ ಹೊಚ್ಚ ಹೊಸ ಟ್ರೆಂಡಿ ಆಭರಣಗಳನ್ನು ಅನಾವರಣಗೊಳಿಸಲಾಗುತ್ತಿದೆ. ಪ್ರತಿದಿನ ಆಯಾ ದಿನದ ಬಣ್ಣದ ಸಾಂಪ್ರದಾಯಿಕ ಉಡುಗೆಗಳನ್ನು ಧರಿಸಿದ ಮಾತೆಯರಿಂದ ಈ ಆಭರಣಗಳನ್ನು ಅನಾವರಣಗೊಳಿಸಲಾಗುತ್ತಿದೆ.

Ad Widget

Ad Widget

Ad Widget alt="Ad Widget"/>

Ad Widget

ನವದುರ್ಗಾ ಆರಾಧನೆ:

ಮುಳಿಯ ರತ್ನಾಭರಣಗಳ ಸಂಗ್ರಹ ಉತ್ಸವಕ್ಕೆ ಕಳಶವಿಟ್ಟಂತೆ ಶುಕ್ರವಾರ ಸಂಜೆ 5 ಗಂಟೆಗೆ ನವಮಾತೆಯರಿಗೆ ಗೌರವ ಸಮರ್ಪಣೆಯೊಂದಿಗೆ ನವದುರ್ಗಾ ಆರಾಧನೆ ನೆರವೇರಿಸಲಾಯಿತು.  ಈ ಕಾರ್ಯಕ್ರಮದಲ್ಲಿ ಅತಿಥಿಗಳಾಗಿ 9 ಮಂದಿ ಮಾತೆಯರು ಒಂಬತ್ತು ಬಣ್ಣಗಳ ಉಡುಗೆಗಳನ್ನು ಧರಿಸಿ ಪಾಲ್ಗೊಂಡರು.

Ad Widget

Ad Widget <> Ad Widget

Gold Rate Today : ಚಿನ್ನ ಹಾಗೂ ಬೆಳ್ಳಿ ದರ ಸ್ಥಿರ – ಇಂದಿನ ದರ ಇಲ್ಲಿ ತಿಳಿಯಿರಿ



Ad Widget

 ಭಾಗವಹಿಸಿದ ನವ ಮಾತೆಯರು

1. ಶ್ರೀಮತಿ ಸಿಂಧು (ವಿವೇಕಾನಂದ ಸಿಬಿಎಸ್‌ಇ ವಿಭಾಗ ಮುಖ್ಯಸ್ಥರು)- ಬಿಳಿ

Ad Widget

Ad Widget

2. ಡಾ.ಅನಿಲ (ಕ್ಲಸ್ಟರ್ ಹೆಡ್ ಜನೌಷಧಿ)- ನೀಲಿ

3 . ಶ್ರೀಮತಿ ಚೇತನ ಗೌರಿ ಪ್ರಸನ್ನ ಕಜೆ- .ಕೆಂಪು

4. ಶ್ರೀಮತಿ ಆಶಾ ಪ್ರಕಾಶ್ (ಡಾ ಈಶ್ವರಪ್ರಕಾಶ್) – ಹಳದಿ

5. ಸುಪ್ರಭಾ ಬೋನಂತಾಯ (ಕೊಕೊ ಗುರು) -ಬೂದು

6. ಸುಮನಾ (w/o ರಾಮಪ್ರಕಾಶ್)- .ಹಸಿರು

7. ಐಶ್ವರ್ಯ ಶೆಟ್ಟಿ (ಪಾರ್ಲರ್ ಮಾಲೀಕರು)- .ಕಿತ್ತಳೆ

8. ಸೀಮಾ ನಾಗರಾಜ್ (ವಕೀಲರು)- ಗುಲಾಬಿ

9. ಸೋನಾ ಪ್ರದೀಪ್ (ಕೊಟ್ಟಕ್ಕಲ್ ಕ್ಲಿನಿಕ್)- ನೇರಳೆ

Bank of baroda recruitment 2022 :  ಬ್ಯಾಂಕ್ ಆಫ್ ಬರೋಡಾದಲ್ಲಿ 346 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

ಈ 9 ಮಂದಿ ದೀಪ ಬೆಳಗಿಸುವ ಮೂಲಕ  ಕಾರ್ಯಕ್ರಮ ಉದ್ಘಾಟಿಸಿದರು. ಬಳಿಕ  ಹೊಸ ಟ್ರೆಂಡಿಆಭರಣಗಳನ್ನು ಅನಾವರಣಗೊಳಿಸಿದರು. ಮುಳಿಯ ಜ್ಯುವೆಲ್ಲರ್‌ನ ಸಿಬಂದಿ ಪ್ರವೀಣ್ ಹೊಸ ಟ್ರೆಂಡಿ ಆಭರಣಗಳ ಪರಿಚಯಮಾಡಿದರು. ನವಮಾತೆಯರ ಪೈಕಿ ಡಾ.ಅನಿಲ, ಸೀಮಾ ನಾಗರಾಜ್, ಸುಪ್ರಭಾ ಬೋನಂತಾಯ ಹಾಗೂ ಸಿಂಧುರವರು  ಮಾತನಾಡಿ ಮುಳಿಯ ಸಂಸ್ಥೆಯ ಸಾಮಾಜಿಕ ಕಾರ್ಯ ಹಾಗೂ ಸೇವ ಪರತೆಯನ್ನು ಕೊಂಡಾಡಿದರು.

ಮುಳಿಯ ಜ್ಯುವೆಲ್ಲರ್‌ನ ಸಿಎಂಡಿ ಕೇಶವ ಪ್ರಸಾದ್ ಮುಳಿಯ ಮಾತನಾಡಿ “ ನವರಾತ್ರಿಯಲ್ಲಿ ನವಮಾತೆಯರನ್ನು ಕರೆದು ಕಾರ್ಯಕ್ರಮ ಆಯೋಜಿಸಿದ್ದು ಸಂತೋಷ ನೀಡಿದೆ. ಮಹಿಳೆಯರು ಆಭರಣ ಖರೀದಿಯ ಸಮಯದಲ್ಲಿ ತುಂಬಾ ತಲ್ಲೀನತೆಯನ್ನುಹೊಂದಿರುತ್ತಾರೆ. ಚಿನ್ನ ಖರೀದಿಯು ಕಾಲಾತೀತ ಮತ್ತು ದೇಶಾತೀತವಾಗಿದೆ. ಚಿನ್ನ ಯಾವತ್ತೂ ನಮ್ಮ ಕೈಬಿಡುವುದಿಲ್ಲ ಎಂದು ಹೇಳಿದರು.

ಮುಳಿಯ ಜ್ಯುವೆಲ್ಲರ್‌ನ ಮ್ಯಾನೇಜಿಂಗ್ ಡೈರೆಕ್ಟರ್ ಕೃಷ್ಣನಾರಾಯಣ ಮುಳಿಯ ಮಾತನಾಡಿ ನವ ಎಂದರೆ ಒಂಭತ್ತು ಅಥವಾ ಹೊಸದು. ನಾವು ಇಂದು 9 ಟ್ವೆಂಡಿ ಆಭರಣಗಳನ್ನು ಬಿಡುಗಡೆಗೊಳಿಸುತ್ತಿದ್ದೇವೆ. ನವರಾತ್ರಿಗೂ ಮುಳಿಯ ಜ್ಯುವೆಲ್ಲರ್‌ ಪ್ರಾರಂಭಕ್ಕೂ ಸಂಬಂಧವಿದೆ ಎಂದು ಹೇಳಿ ಗ್ರಾಹಕರ ಸಹಕಾರ ಕೋರಿದರು.

Railway Recruitment 2022 : ಐಟಿಐ ಆದವರಿಗೆ ರೈಲ್ವೆಯಲ್ಲಿ ಉದ್ಯೋಗ ಅವಕಾಶ – ಇಲ್ಲಿದೆ ನೇಮಕಾತಿ ಪ್ರಕ್ರಿಯೆಯ ಸಂಪೂರ್ಣ ವಿವರ

ಕೃಷ್ಣವೇಣಿ ಮುಳಿಯ ಮತ್ತು ಅಶ್ವಿನಿ ಮುಳಿಯರವರು ವಿಶಿಷ್ಟ ರೀತಿಯಲ್ಲಿ ನವ ಮಾತೆಯರಿಗೆ ಗೌರವ ಆರ್ಪಿಸಿದರು. ಶಾಖಾ ಪ್ರಬಂಧಕ ನಾಮದೇವ್ ಮಲ್ಯಸ್ವಾಗತಿಸಿ, ಮಾರ್ಕೆಟಿಂಗ್ ಮ್ಯಾನೇಜರ್‌ ಸಂಜೀವ ವಂದಿಸಿದರು. ಸಿಬ೦ದಿ ಸೌರಭಕಾರ್ಯಕ್ರಮ ನಿರೂಪಿಸಿದರು. ಮುಳಿಯ ಜ್ಯುವೆಲ್ಲರ್‌ನ ಹಿರಿಯರಾದ ಸರಾಫ್ ಶ್ಯಾಮಭಟ್ ಮತ್ತು ಸುಲೋಚನ ಶ್ಯಾಮ್ ಭಟ್ ದಂಪತಿ ಹಾಗೂ ಸಿಬಂದಿಗಳು ಉಪಸ್ಥಿತರಿದ್ದರು.

Ad Widget
Click to comment

Leave a Reply

ರಾಜಕೀಯ

Sanjeev Mathandur-ಬೆಳೆ ವಿಮೆ ಪರಿಹಾರದಲ್ಲಿ ತಾರತಮ್ಯ; ‘ಷಡ್ಯಂತ್ರ, ಭ್ರಷ್ಟಾಚಾರದ ಶಂಕೆ’ – ಸಂಜೀವ ಮಠಂದೂರು

Published

on



Ad Widget

Ad Widget

Ad Widget

Ad Widget

ದಕ್ಷಿಣ ಕನ್ನಡ ಜಿಲ್ಲೆಯ ರೈತರಿಗೆ ಹವಾಮಾನ ಆಧಾರಿತ ಬೆಳೆ ವಿಮಾ ಯೋಜನೆಯಡಿ ಪರಿಹಾರ ವಿತರಣೆಯಲ್ಲಿ ಅನ್ಯಾಯವಾಗುತ್ತಿದ್ದು, ಇದರ ಹಿಂದೆ ಷಡ್ಯಂತ್ರ ಹಾಗೂ ಭ್ರಷ್ಟಾಚಾರದ ಶಂಕೆ ವ್ಯಕ್ತವಾಗುತ್ತಿದೆ. ಈ ಕುರಿತು ಸಮಗ್ರ ಹಾಗೂ ಕೂಲಂಕಷ ತನಿಖೆ ನಡೆಸಬೇಕು ಎಂದು ಮಾಜಿ ಶಾಸಕ ಸಂಜೀವ ಮಠಂದೂರು ಆಗ್ರಹಿಸಿದ್ದಾರೆ.

Ad Widget

Ad Widget

Ad Widget

Ad Widget

ಪುತ್ತೂರು: ದಕ್ಷಿಣ ಕನ್ನಡ ಜಿಲ್ಲೆಯ ರೈತರಿಗೆ ಹವಾಮಾನ ಆಧಾರಿತ ಬೆಳೆ ವಿಮಾ ಯೋಜನೆಯಡಿ ಪರಿಹಾರ ವಿತರಣೆಯಲ್ಲಿ ಅನ್ಯಾಯವಾಗುತ್ತಿದ್ದು, ಇದರ ಹಿಂದೆ ಷಡ್ಯಂತ್ರ ಹಾಗೂ ಭ್ರಷ್ಟಾಚಾರದ ಶಂಕೆ ವ್ಯಕ್ತವಾಗುತ್ತಿದೆ. ಈ ಕುರಿತು ಸಮಗ್ರ ಹಾಗೂ ಕೂಲಂಕಷ ತನಿಖೆ ನಡೆಸಬೇಕು ಎಂದು ಮಾಜಿ ಶಾಸಕ ಸಂಜೀವ ಮಠಂದೂರು ಆಗ್ರಹಿಸಿದ್ದಾರೆ.

Ad Widget

Ad Widget

Ad Widget alt="Ad Widget"/>

Ad Widget

ಅ.8ರಂದು ಪುತ್ತೂರಿನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, 2025-26ನೇ ಸಾಲಿನಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಒಂಬತ್ತು ತಾಲೂಕುಗಳ ರೈತರು ಒಟ್ಟು ₹294.26 ಕೋಟಿ ವಿಮಾ ಮೊತ್ತ ಪಾವತಿಸಿದ್ದಾರೆ. ಆದರೆ ಸುಮಾರು ₹840 ಕೋಟಿ ಪರಿಹಾರ ಬರಬೇಕಿದ್ದು, ವಾಸ್ತವವಾಗಿ ರೈತರಿಗೆ ಎಷ್ಟು ಮೊತ್ತ ವಿತರಿಸಲಾಗಿದೆ ಎಂಬುದನ್ನು ಸರಕಾರ ಹಾಗೂ ವಿಮಾ ಕಂಪನಿಗಳು ಅಂಕಿ-ಅಂಶಗಳ ಸಹಿತ ಬಹಿರಂಗಪಡಿಸಬೇಕು ಎಂದು ಒತ್ತಾಯಿಸಿದರು.

Ad Widget

Ad Widget <> Ad Widget

ರೈತರು ಪಾವತಿಸಿದ ವಿಮಾ ಮೊತ್ತಕ್ಕೆ ಅನುಗುಣವಾಗಿ ಎಷ್ಟು ಪರಿಹಾರ ನೀಡಲಾಗಿದೆ? ಗ್ರಾಮದಿಂದ ಗ್ರಾಮಕ್ಕೆ ಪರಿಹಾರ ಮೊತ್ತದಲ್ಲಿ ವ್ಯತ್ಯಾಸವಾಗಲು ಕಾರಣವೇನು? ಯಾವ ವೈಜ್ಞಾನಿಕ ಮಾನದಂಡದ ಆಧಾರದಲ್ಲಿ ಪರಿಹಾರ ನಿಗದಿಪಡಿಸಲಾಗುತ್ತಿದೆ ಎಂಬುದನ್ನು ಸ್ಪಷ್ಟಪಡಿಸಬೇಕು ಎಂದರು.



Ad Widget

ಟರ್ಮ್‌ಶೀಟ್ ಬದಲಾದ ಬಳಿಕ ಸಮಸ್ಯೆ

Ad Widget

Ad Widget

2023-24ನೇ ಸಾಲಿನವರೆಗೆ ಹವಾಮಾನ ಆಧಾರಿತ ಬೆಳೆ ವಿಮಾ ಯೋಜನೆಯ ಪರಿಹಾರ ವಿತರಣೆಯಲ್ಲಿ ಜಿಲ್ಲೆಯಲ್ಲಿ ದೊಡ್ಡ ಪ್ರಮಾಣದ ಸಮಸ್ಯೆ ಇರಲಿಲ್ಲ. ಆದರೆ ಬಳಿಕ ಟರ್ಮ್‌ಶೀಟ್ ಬದಲಾವಣೆಯಾದ ನಂತರ ಸಮಸ್ಯೆಗಳು ಆರಂಭವಾಗಿವೆ ಎಂದು ಮಠಂದೂರು ಆರೋಪಿಸಿದರು.

ಒಂದೇ ತಾಲೂಕು, ಹೋಬಳಿ ಹಾಗೂ ಒಂದೇ ರೀತಿಯ ಭೌಗೋಳಿಕ ಪರಿಸ್ಥಿತಿಯಲ್ಲಿರುವ ಗ್ರಾಮಗಳ ನಡುವೆ ಪರಿಹಾರ ಮೊತ್ತದಲ್ಲಿ ಭಾರಿ ವ್ಯತ್ಯಾಸ ಕಂಡುಬರುತ್ತಿದೆ. ಕೆಲವೆಡೆ ಕೇವಲ 100 ಮೀಟರ್ ಅಂತರದಲ್ಲಿರುವ ರೈತರಿಗೂ ₹10 ಸಾವಿರದಿಂದ ₹15 ಸಾವಿರದವರೆಗೆ ವ್ಯತ್ಯಾಸವಾಗುತ್ತಿದೆ. ಪಂಚಾಯಿತಿಯಿಂದ ಪಂಚಾಯಿತಿಗೆ, ಗ್ರಾಮದಿಂದ ಗ್ರಾಮಕ್ಕೆ ಪರಿಹಾರ ಬದಲಾಗುತ್ತಿರುವುದರ ಹಿಂದಿನ ಕಾರಣವನ್ನು ಪರಿಶೀಲಿಸಬೇಕು ಎಂದು ಆಗ್ರಹಿಸಿದರು.

ರಾಜ್ಯ ಸರಕಾರವೂ ವಿಮಾ ಮೊತ್ತದ ಶೇ.20ರಷ್ಟು ಪಾಲು ಪಾವತಿಸುತ್ತಿರುವುದರಿಂದ ವಿಮಾ ಕಂಪನಿಗಳ ಕಾರ್ಯವೈಖರಿ ಕುರಿತು ರಾಜ್ಯ ಸರಕಾರವೇ ತನಿಖೆ ನಡೆಸಬೇಕು. ರೈತರಿಗೆ ಅನ್ಯಾಯವಾಗುತ್ತಿದ್ದರೂ ಸರಕಾರ ಕಣ್ಮುಚ್ಚಿ ಕುಳಿತಿದೆ ಎಂದು ಅವರು ಆರೋಪಿಸಿದರು.

274 ಗ್ರಾಮ ಪಂಚಾಯಿತಿಗಳ ಪೈಕಿ 231 ಮಳೆ ಮಾಪಕ ಮಾತ್ರ ಕಾರ್ಯನಿರ್ವಹಣೆ

ಬಿಜೆಪಿ ಸತ್ಯಶೋಧನ ಸಮಿತಿ ಜಿಲ್ಲೆಯ ಒಂಬತ್ತು ತಾಲೂಕುಗಳಲ್ಲಿ ನಡೆಸಿದ ಅಧ್ಯಯನದಲ್ಲಿ ಹಲವು ಕಡೆ ಮಳೆ ಮಾಪಕಗಳು ಸಮರ್ಪಕವಾಗಿ ಕಾರ್ಯನಿರ್ವಹಿಸುತ್ತಿಲ್ಲ ಎಂಬುದು ಕಂಡುಬಂದಿದೆ. ಈ ವಿಚಾರವನ್ನು ಜಿಲ್ಲಾಧಿಕಾರಿಗಳ ಗಮನಕ್ಕೂ ತರಲಾಗಿತ್ತು. ಬಳಿಕ ಕೆಲವು ಮಳೆ ಮಾಪಕಗಳ ದುರಸ್ತಿಗೆ ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಿದರು.

ದಕ್ಷಿಣ ಕನ್ನಡ ಜಿಲ್ಲೆಯ 274 ಗ್ರಾಮ ಪಂಚಾಯಿತಿಗಳಲ್ಲಿ ಮಳೆ ಮಾಪಕಗಳನ್ನು ಅಳವಡಿಸಲಾಗಿದ್ದು, 231 ಮಾತ್ರ ಸಮರ್ಪಕವಾಗಿ ಕಾರ್ಯನಿರ್ವಹಿಸುತ್ತಿವೆ. 20 ಹೋಬಳಿ ಮಟ್ಟದಲ್ಲಿ ಉಷ್ಣಾಂಶ ಮಾಪಕಗಳಿವೆ. ಮಳೆ ಹಾಗೂ ಉಷ್ಣಾಂಶದ ದಾಖಲೆಗಳ ಆಧಾರದಲ್ಲಿ ಟರ್ಮ್‌ಶೀಟ್ ಪ್ರಕಾರ ವಿಮಾ ಪರಿಹಾರ ನಿರ್ಧರಿಸಲಾಗುತ್ತದೆ ಎಂದು ವಿವರಿಸಿದರು.

‘ಗ್ರಾಮಕ್ಕೊಂದು ಮಾನದಂಡ ಸಲ್ಲ’

ತಾಲೂಕಿನ ಎಲ್ಲ ಗ್ರಾಮಗಳ ರೈತರಿಗೆ ಒಂದೇ ಮಾನದಂಡದಲ್ಲಿ ವಿಮಾ ಪರಿಹಾರ ನೀಡಬೇಕು. ಒಂದು ಗ್ರಾಮಕ್ಕೆ ಗರಿಷ್ಠ ಪರಿಹಾರ ನೀಡಲು ಅನ್ವಯಿಸುವ ಮಾನದಂಡವಿದ್ದರೆ, ಅದೇ ಮಾನದಂಡವನ್ನು ಇತರ ಗ್ರಾಮಗಳಿಗೂ ಅನ್ವಯಿಸಬೇಕು. ಪಂಚಾಯಿತಿ, ಹೋಬಳಿ ಹಾಗೂ ಗ್ರಾಮವಾರು ಪ್ರತ್ಯೇಕ ಮಾನದಂಡಗಳಿಂದ ಪರಿಹಾರ ನೀಡಿದರೆ ರೈತರು ಬೆಳೆ ವಿಮಾ ಯೋಜನೆಯ ಮೇಲಿನ ವಿಶ್ವಾಸ ಕಳೆದುಕೊಳ್ಳಲಿದ್ದಾರೆ ಎಂದು ಮಠಂದೂರು ಹೇಳಿದರು.

2025-26ನೇ ಸಾಲಿನಲ್ಲಿ ರೈತರು ಶೇ.5, ರಾಜ್ಯ ಸರಕಾರ ಶೇ.20 ಹಾಗೂ ಕೇಂದ್ರ ಸರಕಾರ ಶೇ.10ರಷ್ಟು ಪಾಲನ್ನು ಪಾವತಿಸಿವೆ. ಜಿಲ್ಲೆಯ ರೈತರಿಂದ ₹42.03 ಕೋಟಿ, ಕೇಂದ್ರದಿಂದ ₹84.07 ಕೋಟಿ ಹಾಗೂ ರಾಜ್ಯದಿಂದ ₹168.14 ಕೋಟಿ ಸೇರಿದಂತೆ ಒಟ್ಟು ₹294.26 ಕೋಟಿ ವಿಮಾ ಮೊತ್ತ ಪಾವತಿಯಾಗಿದೆ ಎಂದರು.

ರೈತರು ಪ್ರತಿ ಹೆಕ್ಟೇರ್ ಅಡಿಕೆಗೆ ₹6,475 ಹಾಗೂ ಕಾಳುಮೆಣಸಿಗೆ ₹2,377ರಂತೆ ವಿಮಾ ಮೊತ್ತ ಪಾವತಿಸಿದ್ದಾರೆ. ಆದರೆ ಬಜತ್ತೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸುಮಾರು ₹45 ಸಾವಿರ ವಿಮಾ ಮೊತ್ತ ಪಾವತಿಸಿದ್ದರೂ ಕೆಲ ರೈತರಿಗೆ ಪ್ರತಿ ಹೆಕ್ಟೇರ್‌ಗೆ ಕನಿಷ್ಠ ₹10,800 ಮಾತ್ರ ಪರಿಹಾರ ದೊರೆತಿದೆ. ಅದೇ ಪ್ರದೇಶದ ಕೆಲವು ರೈತರ ಖಾತೆಗೆ ₹51,824 ಪರಿಹಾರ ಜಮೆಯಾಗಿರುವುದಾಗಿ ಅವರು ತಿಳಿಸಿದರು.

‘ರಾಜ್ಯ ಸರಕಾರ ರೈತ ವಿರೋಧಿ’

ಅಡಿಕೆ ಬೆಳೆಗಾರರು ವಿಮಾ ಮೊತ್ತ ಪಾವತಿಸಿದರೂ ಸಮರ್ಪಕ ಪರಿಹಾರ ದೊರೆಯುತ್ತಿಲ್ಲ. ಮತ್ತೊಂದೆಡೆ ಅಡಿಕೆ ಧಾರಣೆಯಲ್ಲೂ ಕುಸಿತವಾಗಿದೆ. ಹಿಂದಿನ ಅವಧಿಯಲ್ಲಿ ರೈತರಿಗೆ ದೊರೆಯುತ್ತಿದ್ದ ಕಿಸಾನ್ ಸನ್ಮಾನ್ ಹಾಗೂ ವಿದ್ಯಾನಿಧಿ ಯೋಜನೆಗಳನ್ನು ಈಗಿನ ಸರಕಾರ ಸ್ಥಗಿತಗೊಳಿಸಿದೆ. ರೈತರಿಗೆ ಒಂದಲ್ಲೊಂದು ರೀತಿಯಲ್ಲಿ ತೊಂದರೆ ನೀಡುತ್ತಿರುವ ರಾಜ್ಯ ಸರಕಾರ ರೈತ ವಿರೋಧಿ ನೀತಿ ಅನುಸರಿಸುತ್ತಿದೆ ಎಂದು ಮಠಂದೂರು ಆರೋಪಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಬಿಜೆಪಿ ಗ್ರಾಮಾಂತರ ಮಂಡಲ ಅಧ್ಯಕ್ಷ ದಯಾನಂದ ಶೆಟ್ಟಿ ಉಜಿರೆಮಾರ್, ನಗರ ಮಂಡಲ ಅಧ್ಯಕ್ಷ ಶಿವಕುಮಾರ್ ಕಲ್ಲಿಮಾರ್, ಬಿಜೆಪಿ ವಕ್ತಾರ ರಾಜೇಶ್ ಬನ್ನೂರು ಹಾಗೂ ರೈತ ಮೋರ್ಚಾ ಅಧ್ಯಕ್ಷ ಶರತ್ನಂದ ಬೈಪಾಡಿತ್ತಾಯ ಉಪಸ್ಥಿತರಿದ್ದರು.

Ad Widget
Continue Reading

ಮಂಗಳೂರು

Mangaluru-ಬೆಳೆ ವಿಮೆ ಅನ್ಯಾಯ ಆರೋಪ: ಅ.9ರಂದು ಮಂಗಳೂರಿನಲ್ಲಿ ರೈತರ ಬೃಹತ್ ಹಕ್ಕೊತ್ತಾಯ | ಸಹಕಾರ ಭಾರತಿ – ಬಿಜೆಪಿ ಬೆಂಬಲ

Published

on



Ad Widget

Ad Widget

Ad Widget

Ad Widget

ಬೆಳೆ ವಿಮೆ ಪಾವತಿಯಲ್ಲಿ ರೈತರಿಗೆ ಅನ್ಯಾಯವಾಗಿದೆ ಎಂದು ಆರೋಪಿಸಿ ಸಹಕಾರ ಭಾರತಿ ಹಾಗೂ ಬಿಜೆಪಿ ನೇತೃತ್ವದಲ್ಲಿ ಅ.9ರಂದು ಮಂಗಳೂರಿನಲ್ಲಿ ಬೃಹತ್ ಹಕ್ಕೊತ್ತಾಯ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಮಂಗಳೂರಿನ ಟೌನ್‌ಹಾಲ್‌ನಲ್ಲಿ ಶುಕ್ರವಾರ ಬೆಳಗ್ಗೆ 10.30ಕ್ಕೆ ಕಾರ್ಯಕ್ರಮ ನಡೆಯಲಿದೆ.

Ad Widget

Ad Widget

Ad Widget

Ad Widget

ಮಂಗಳೂರು: ಬೆಳೆ ವಿಮೆ ಪಾವತಿಯಲ್ಲಿ ರೈತರಿಗೆ ಅನ್ಯಾಯವಾಗಿದೆ ಎಂದು ಆರೋಪಿಸಿ ಸಹಕಾರ ಭಾರತಿ ಹಾಗೂ ಬಿಜೆಪಿ ನೇತೃತ್ವದಲ್ಲಿ ಅ.9ರಂದು ಮಂಗಳೂರಿನಲ್ಲಿ ಬೃಹತ್ ಹಕ್ಕೊತ್ತಾಯ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

Ad Widget

Ad Widget

Ad Widget alt="Ad Widget"/>

Ad Widget

ಮಂಗಳೂರಿನ ಟೌನ್‌ಹಾಲ್‌ನಲ್ಲಿ ಶುಕ್ರವಾರ ಬೆಳಗ್ಗೆ 10.30ಕ್ಕೆ ಕಾರ್ಯಕ್ರಮ ನಡೆಯಲಿದೆ. ಬೆಳೆ ವಿಮೆ ಯೋಜನೆಯಡಿ ರೈತರಿಗೆ ಸೂಕ್ತ ಪರಿಹಾರ ದೊರೆಯದಿರುವುದು ಸೇರಿದಂತೆ ವಿಮೆ ಪಾವತಿಗೆ ಸಂಬಂಧಿಸಿದ ಸಮಸ್ಯೆಗಳ ಕುರಿತು ಸಭೆಯಲ್ಲಿ ಧ್ವನಿ ಎತ್ತಲಾಗುತ್ತದೆ.

Ad Widget

Ad Widget <> Ad Widget

ಬೆಳೆ ವಿಮೆ ಯೋಜನೆಯಡಿ ರೈತರಿಗೆ ನ್ಯಾಯಯುತ ಪರಿಹಾರ ದೊರೆಯಬೇಕು ಹಾಗೂ ವಿಮೆ ಪಾವತಿಯಲ್ಲಿ ಉಂಟಾಗಿರುವ ಸಮಸ್ಯೆಗಳಿಗೆ ಶೀಘ್ರ ಪರಿಹಾರ ಕಲ್ಪಿಸಬೇಕು ಎಂಬುದು ಪ್ರಮುಖ ಬೇಡಿಕೆಯಾಗಿದೆ.



Ad Widget

ದಕ್ಷಿಣ ಕನ್ನಡ ಜಿಲ್ಲೆಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಸದಸ್ಯರು ಸೇರಿದಂತೆ ರೈತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಬೆಳೆ ವಿಮೆಯಲ್ಲಿ ಆಗಿರುವ ಅನ್ಯಾಯದ ವಿರುದ್ಧ ಒಗ್ಗಟ್ಟಿನಿಂದ ಹಕ್ಕೊತ್ತಾಯ ಮಂಡಿಸುವಂತೆ ಆಯೋಜಕರು ಮನವಿ ಮಾಡಿದ್ದಾರೆ.

Continue Reading

ಶಿಕ್ಷಣ

Philomena-ಸಂತ ಫಿಲೋಮಿನಾ ಪ. ಪೂ ಕಾಲೇಜಿನಲ್ಲಿ ಕನ್ನಡ ಭಾಷಾ ಕಾರ್ಯಾಗಾರ

Published

on



Ad Widget

Ad Widget

Ad Widget

Ad Widget

ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ಕನ್ನಡ ಸಂಘದ ಆಶ್ರಯದಲ್ಲಿ ಅ 7 ರಂದು ಭಾಷಣ ಕಲೆ, ಕವನ ರಚನೆ, ಕಥಾ ರಚನೆ, ಕಾರ್ಯಕ್ರಮ ನಿರೂಪಣೆ ಹಾಗೂ ಪತ್ರಿಕಾ ವರದಿಯ ಕುರಿತು ಕಾರ್ಯಾಗಾರವು ಕಾಲೇಜು ಸಭಾಂಗಣದಲ್ಲಿ ನಡೆಯಿತು.

Ad Widget

Ad Widget

Ad Widget

Ad Widget

ಪುತ್ತೂರು: ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ಕನ್ನಡ ಸಂಘದ ಆಶ್ರಯದಲ್ಲಿ ಅ 7 ರಂದು ಭಾಷಣ ಕಲೆ, ಕವನ ರಚನೆ, ಕಥಾ ರಚನೆ, ಕಾರ್ಯಕ್ರಮ ನಿರೂಪಣೆ ಹಾಗೂ ಪತ್ರಿಕಾ ವರದಿಯ ಕುರಿತು ಕಾರ್ಯಾಗಾರವು ಕಾಲೇಜು ಸಭಾಂಗಣದಲ್ಲಿ ನಡೆಯಿತು.

Ad Widget

Ad Widget

Ad Widget alt="Ad Widget"/>

Ad Widget

ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಗಳಾದ ಸುಳ್ಯದ ಸಾಹಿತಿ ಹಾಗೂ ಡಿಜಿಟಲ್ ಆರ್ಟ್ ನ ಉದಯ ಭಾಸ್ಕರ್ ಮಾತನಾಡಿ, ಸಾಹಿತ್ಯವು ನಮ್ಮೊಳಗಿನಿಂದ ಅಭಿವ್ಯಕ್ತಿಗೊಳ್ಳುವ ಮಾಧ್ಯಮ. ಸಾಹಿತ್ಯ ಲೋಕದ ಬರಹಗಳು ಮನುಷ್ಯನ ಕಲ್ಪನೆ ಮತ್ತು ಚಿಂತನೆಗಳ ಫಲಶ್ರುತಿ. ಸಾಹಿತಿಗೆ ಮುಖ್ಯವಾಗಿ ಶಬ್ದ ಸಂಪತ್ತು ಇರಬೇಕು. ಓದುವ ಹವ್ಯಾಸಗಳನ್ನು ಬೆಳೆಸಿಕೊಳ್ಳಬೇಕು ಎಂದು ಹೇಳಿದರು.

Ad Widget

Ad Widget <> Ad Widget

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಕಾಲೇಜಿನ ಪ್ರಾಂಶುಪಾಲರಾದ ರೆ. ಫಾ. ಅಶೋಕ್ ರಾಯನ್ ಕ್ರಾಸ್ತಾ ಮಾತನಾಡಿ, ಪ್ರತಿಯೊಂದು ಭಾಷೆಗೂ ಸಮಾನ ಗೌರವವನ್ನು ನೀಡುವುದು ಅತ್ಯಂತ ಅಗತ್ಯವಿದ್ದು, ವಿವಿಧ ಭಾಷೆಗಳನ್ನು ಕಲಿಯುವುದರಿಂದ ನಮ್ಮ ಯೋಚನಾ ಶಕ್ತಿ ವೃದ್ಧಿಸುತ್ತದೆ. ಕನ್ನಡ ಒಂದು ಅತ್ಯಂತ ಶ್ರೀಮಂತ ಭಾಷೆಯಾಗಿದ್ದು, ಕನ್ನಡವನ್ನು ಕಲಿಯುವುದರ ಜೊತೆಗೆ, ಕನ್ನಡ ಭಾಷೆಯ ಅಭಿವೃದ್ಧಿಗೆ ನಿಮ್ಮ ಕೊಡುಗೆಗಳನ್ನು ನೀಡಬೇಕೆಂದು ತಿಳಿಸಿದರು.



Ad Widget

ವೇದಿಕೆಯಲ್ಲಿ ಕನ್ನಡ ಸಂಘದ ನಿರ್ದೇಶಕರಾದ ಉಷಾ ಎ ಉಪಸ್ಥಿತರಿದ್ದರು. ಕಾಲೇಜಿನ ವಿದ್ಯಾರ್ಥಿಗಳು ಹಾಗೂ ಬೋಧಕ ಬೋಧಕೇತರ ವರ್ಗ  ಉಪಸ್ಥಿತರಿದ್ದರು.

Ad Widget

Ad Widget

ಕಾಲೇಜಿನ ವಿದ್ಯಾರ್ಥಿಗಳು ಪ್ರಾರ್ಥಿಸಿ, ವಿದ್ಯಾರ್ಥಿಗಳಾದ ಸಿಂಚನ ಸ್ವಾಗತಿಸಿ, ಗೌತಮ್ ವಂದಿಸಿ, ಗ್ರೀಷ್ಮ ಕಾರ್ಯಕ್ರಮ ನಿರೂಪಿಸಿದರು.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!

Discover more from Nikhara News | Kannada News Website

Subscribe now to keep reading and get access to the full archive.

Continue reading