ರಾಜ್ಯ
Kantara | ತುಳುನಾಡಿನ ದೈವರಾಧನೆಯ ಪ್ರಾಮುಖ್ಯತೆಯ ‘ಕಾಂತಾರ’ ಪ್ರತಿ ಮನೆ ಮನೆಗೆ ಮುಟ್ಟಬೇಕು : ಮುಖ್ಯಮಂತ್ರಿಗಳೇ ದಯವಿಟ್ಟು ತೆರಿಗೆ ವಿನಾಯಿತಿ ಮಾಡಿ – ಮಿಥುನ್ ರೈ ಮನವಿ
ಮಂಗಳೂರು: ಭಾರಿ ಯಶಸ್ಸು ಕಾಣುತ್ತಿರುವ ಕಾಂತಾರ ಚಿತ್ರವನ್ನು ( Kantara ) ತೆರಿಗೆ ವಿನಾಯಿತಿ ಮಾಡುವಂತೆ ದಕ್ಷಿಣ ಕನ್ನಡದ ಕಾಂಗ್ರೇಸ್ ನಾಯಕ ಮಿಥುನ್ ರೈ (Mithun Rai) ಮುಖ್ಯಮಂತ್ರಿ ಬೊಮ್ಮಾಯಿಗೆ ಮನವಿ ಮಾಡಿದ್ದಾರೆ.
ತನ್ನ ಫೇಸ್ಬುಕಲ್ಲಿ ಈ ಕುರಿತು ಬರೆದುಕೊಂಡಿರುವ ಮಿಥುನ್ ರೈ , ಇಡೀ ಜಗತ್ತಿನಲ್ಲಿ “ದೈವಾರಾಧನೆ”ಗೆ ಇವತ್ತು ಒಂದು ಪ್ರಮುಖವಾದ ಪ್ರಾಶ್ಯಸ್ತತೆ ಇದೆ, ಅದು ಹುಟ್ಟಿಕೊಂಡಿದ್ದು ನಮ್ಮ ತುಳುನಾಡಿನ ಮಣ್ಣಿನಲ್ಲಿ . ದೈವಾರಾಧನೆಗೆ ಜನರಿಗೆ ಇರುವ ಭಯ ಭಕ್ತಿ ಇವತ್ತು ಮಾಸುವಂತಹ ಸಂದಿಗ್ನ ಪರಿಸ್ಥಿತಿಗಳಲ್ಲಿ , ಒಂದು ಸಿನಿಮಾದ ಮುಖಾಂತರ ದೈವಾರಾಧನೆಯ ವಿಶಿಷ್ಟತೆ ಹಾಗೂ ಪ್ರಾಮುಖ್ಯತೆಯ ಬಗ್ಗೆ ಜನರ ಮನಮುಟ್ಟಿಸುವ ಪ್ರಯತ್ನ ಇವತ್ತು “ಕಾಂತಾರ” ಚಿತ್ರದ ಮೂಲಕ ಫಲಿಸಿದೆ . “#kanthara” ಚಲನಚಿತ್ರ … ಮಾತಿನಲ್ಲಿ ಎಷ್ಟು ಹೇಳಿದರೂ ಸಾಲದು … ಇದರ ಅಧ್ಬುತ ಪರಿಕಲ್ಪನೆಗ ಬಗ್ಗೆ ಶಬ್ದಗಳೇ ಬಾರದು ! ಸನ್ಮಾನ ಮುಖ್ಯಮಂತ್ರಿಗಳಲ್ಲಿ ವಿನಮ್ರತೆಯಿಂದ ಮನವಿ ಮಾಡುತ್ತಾ ಇದ್ದೇನೆ, “ಕಾಂತಾರ” ಚಲನಚಿತ್ರ ಪ್ರತಿ ಮನೆಮನೆಗೆ ಮುಟ್ಟಬೇಕು, ಈ ಚಿತ್ರಕ್ಕೆ ತೆರಿಗೆ ಮುಕ್ತ ಮಾಡಬೇಕು. ತುಳುನಾಡಿನ ದೈವಾರಾಧನೆಯ ಮಹತ್ವ ಸಮಸ್ತ ಕರ್ನಾಟಕದಲ್ಲಿ ತಿಳಿಯಬೇಕೆಂದು ಸಮಸ್ತ ತುಳುವೆರ ಕೋರಿಕೆ.ತುಳುನಾಡಿನ ದೈವಾರಾಧನೆಯ ವೈಶಿಷ್ಟ್ಯತೆಯನ್ನು ಬಿಂಬಿಸುವ ಜತೆಗೆ ಆರಾಧನೆಯ ಮಹತ್ವವನ್ನು ಸಾರಿ ಹೇಳಿದ ‘ಕಾಂತಾರ’ ಸಿನಿಮಾ ನಿಜಕ್ಕೂ ಅದ್ಭುತವಾಗಿ ಮೂಡಿಬಂದಿದೆ. ದೈವಾರಾಧನೆ ಮತ್ತು ನಂಬಿಕೆಯನ್ನು ಎಳೆಎಳೆಯಾಗಿ ಪ್ರಸ್ತುಪಡಿಸುವ ಮೂಲಕ ಯುವಸಮಾಜದಲ್ಲಿ ಮತ್ತಷ್ಟು ನಂಬಿಕೆ ಜಾಗೃತಿಗೊಳಿಸಿದೆ. ಈ ಸಿನಿಮಾವನ್ನು Chief Minister of Karnataka ವೀಕ್ಷಣೆ ಮಾಡಬೇಕು ಮತ್ತು ಈ ಸಿನಿಮಾಕ್ಕೆ ತೆರಿಗೆ ವಿನಾಯಿತಿಯನ್ನು ನೀಡಬೇಕು ಎಂಬುವುದು ಸರ್ವ ತುಳುನಾಡಿಗರ ಪರವಾಗಿ ಆಗ್ರಹ.Rishab Shetty Films ಹಾಗೂ ಅವರ ತಂಡ ಕರಾವಳಿ ಭಾಗದ ಧಾರ್ಮಿಕ, ಸಾಂಸ್ಕೃತಿಕ ಹಾಗೂ ಪರಂಪರೆಯ ಕುರಿತು ಸಮಗ್ರವಾಗಿ ವೇದಿಕೆ ತರುವಲ್ಲಿ ಯಶಸ್ವಿಯಾಗಿ ದುಡಿದಿರುವುದು ಶ್ಲಾಘನೀಯವಾದದ್ದು ಈ ಒಂದು ಚಲನಚಿತ್ರವನ್ನು ಮನೋರಂಜನ ದೃಷ್ಟಿಯಲ್ಲಿ ನೋಡದೆ ಸಮಾಜದ ಎಲ್ಲಾ ಜನರು ಇದು ಇತಿಹಾಸದ ಕುರಿತು ಒಂದು ಅವಲೋಕನ ಎಂಬಂತೆ ಎಲ್ಲರೂ ವೀಕ್ಷಣೆ ಮಾಡಬೇಕು ಎನ್ನುವುದು ನನ್ನ ಕೋರಿಕೆ.ನಿಮ್ಮ ಈ ಚಲನಚಿತ್ರ ಇತಿಹಾಸದ ಮೈಲುಗಲ್ಲನ್ನು ನಿರ್ಮಾಣ ಮಾಡುವಂತಾಗಲಿ ಮುಂದಿನ ಜನಾಂಗಕ್ಕೆ ಉತ್ತಮ ಸಂದೇಶವನ್ನು ತಲುಪಿಸುವಂತಾಗಲಿ ಎಂದು ಹಾರೈಸುತ್ತೇನೆ ಎಂದು ಮಿಥುನ್ ರೈ ತನ್ನ ಫೇಸ್ಬುಕಲ್ಲಿ ಬರೆದುಕೊಂಡಿದ್ದಾರೆ. ವಿಜಯ ಕಿರಗಂದೂರು ರವರ ಹೊಂಬಾಳೆ ಬ್ಯಾನರಿನಡಿ ನಿರ್ಮಾಣವಾದ ರಿಷಭ್ ಶೆಟ್ಟಿ ನಟನೆಯ ಕಾಂತಾರ ಚಿತ್ರ ಭಾರಿ ಯಶಸ್ಸು ಕಾಣುತ್ತಿದೆ.
ರಾಜಕೀಯ
Sudha Yadav-ಆರು ರಾಜ್ಯಗಳಿಗೆ ರಾಜ್ಯಪಾಲರ ಬದಲಾವಣೆ: ಕರ್ನಾಟಕಕ್ಕೆ ನೂತನ ರಾಜ್ಯಪಾಲರಾಗಿ ಸುಧಾ ಯಾದವ್
ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಕರ್ನಾಟಕ ಸೇರಿದಂತೆ ಆರು ರಾಜ್ಯಗಳಿಗೆ ನೂತನ ರಾಜ್ಯಪಾಲರನ್ನು ನೇಮಕ ಮಾಡಿದ್ದಾರೆ. ಸುಧಾ ಯಾದವ್ ಅವರನ್ನು ಕರ್ನಾಟಕದ ನೂತನ ರಾಜ್ಯಪಾಲರನ್ನಾಗಿ ನೇಮಿಸಲಾಗಿದೆ.
ಹೊಸದಿಲ್ಲಿ: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಕರ್ನಾಟಕ ಸೇರಿದಂತೆ ಆರು ರಾಜ್ಯಗಳಿಗೆ ನೂತನ ರಾಜ್ಯಪಾಲರನ್ನು ನೇಮಕ ಮಾಡಿದ್ದಾರೆ.
ಸುಧಾ ಯಾದವ್ ಅವರನ್ನು ಕರ್ನಾಟಕದ ನೂತನ ರಾಜ್ಯಪಾಲರನ್ನಾಗಿ ನೇಮಿಸಲಾಗಿದೆ. ಸಿಕ್ಕಿಂ ರಾಜ್ಯಪಾಲರಾಗಿದ್ದ ಓಂ ಪ್ರಕಾಶ್ ಮಾಥುರ್ ಅವರನ್ನು ಕೇರಳದ ರಾಜ್ಯಪಾಲರನ್ನಾಗಿ ನೇಮಕ ಮಾಡಲಾಗಿದೆ. ಕೇರಳದ ರಾಜ್ಯಪಾಲರಾಗಿದ್ದ ರಾಜೇಂದ್ರ ವಿಶ್ವನಾಥ್ ಅರ್ಲೇಕರ್ ಅವರಿಗೆ ತಮಿಳುನಾಡಿನ ರಾಜ್ಯಪಾಲರ ಜವಾಬ್ದಾರಿ ನೀಡಲಾಗಿದೆ.
ಇತರ ನೇಮಕಾತಿಗಳ ವಿವರ ಹೀಗಿದೆ:
ಒಡಿಶಾ: ಬ್ರಜ್ ಮೋಹನ್ ರಾಮ್
ಉತ್ತರಾಖಂಡ: ಧಲ್ ಸಿಂಗ್ ಬಿಸೇನ್
ಸಿಕ್ಕಿಂ: ದುಷ್ಯಂತ್ ಗೌತಮ್
ಈ ನೇಮಕಾತಿಗಳೊಂದಿಗೆ ಆರು ರಾಜ್ಯಗಳ ರಾಜ್ಯಪಾಲರ ಹುದ್ದೆಗಳಲ್ಲಿ ಬದಲಾವಣೆಗಳಾಗಿವೆ.
ರಾಜ್ಯ
Robotic technology-ರೋಬೋಟಿಕ್ ತಂತ್ರಜ್ಞಾನದ ಅದ್ಭುತ: ಸ್ಪೇನ್ನಲ್ಲಿ ಕುಳಿತು ಕರ್ನಾಟಕದ ಮಹಿಳೆಗೆ ಹೃದಯ ಶಸ್ತ್ರಚಿಕಿತ್ಸೆ
ಸ್ಪೇನ್ನ ಬಾರ್ಸಿಲೋನಾದಲ್ಲಿ ಕುಳಿತು ವೈದ್ಯರೊಬ್ಬರು 12 ಸಾವಿರ ಕಿ.ಮೀ.ಗೂ ಹೆಚ್ಚು ದೂರದಲ್ಲಿರುವ ಕರ್ನಾಟಕದ ಮುದ್ದೇನಹಳ್ಳಿಯ ಆಸ್ಪತ್ರೆಯಲ್ಲಿ ಮಹಿಳೆಯೊಬ್ಬರಿಗೆ ರೋಬೋಟಿಕ್ ಹೃದಯ ಶಸ್ತ್ರಚಿಕಿತ್ಸೆ ನಡೆಸಿದ್ದಾರೆ. ಈ ಮೂಲಕ ವೈದ್ಯಕೀಯ ಕ್ಷೇತ್ರದಲ್ಲಿ ರೋಬೋಟಿಕ್ ಶಸ್ತ್ರಚಿಕಿತ್ಸೆಯ ಸಾಧ್ಯತೆಗಳನ್ನು ಮತ್ತೊಮ್ಮೆ ಸಾಬೀತುಪಡಿಸಲಾಗಿದೆ.
ಚಿಕ್ಕಬಳ್ಳಾಪುರ: ಸ್ಪೇನ್ನ ಬಾರ್ಸಿಲೋನಾದಲ್ಲಿ ಕುಳಿತು ವೈದ್ಯರೊಬ್ಬರು 12 ಸಾವಿರ ಕಿ.ಮೀ.ಗೂ ಹೆಚ್ಚು ದೂರದಲ್ಲಿರುವ ಕರ್ನಾಟಕದ ಮುದ್ದೇನಹಳ್ಳಿಯ ಆಸ್ಪತ್ರೆಯಲ್ಲಿ ಮಹಿಳೆಯೊಬ್ಬರಿಗೆ ರೋಬೋಟಿಕ್ ಹೃದಯ ಶಸ್ತ್ರಚಿಕಿತ್ಸೆ ನಡೆಸಿದ್ದಾರೆ. ಈ ಮೂಲಕ ವೈದ್ಯಕೀಯ ಕ್ಷೇತ್ರದಲ್ಲಿ ರೋಬೋಟಿಕ್ ಶಸ್ತ್ರಚಿಕಿತ್ಸೆಯ ಸಾಧ್ಯತೆಗಳನ್ನು ಮತ್ತೊಮ್ಮೆ ಸಾಬೀತುಪಡಿಸಲಾಗಿದೆ.
ಮುದ್ದೇನಹಳ್ಳಿಯ ಶ್ರೀ ಮಧುಸೂದನ ಸಾಯಿ ವೈದ್ಯಕೀಯ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯಲ್ಲಿ (SMSIMSR) ಈ ಶಸ್ತ್ರಚಿಕಿತ್ಸೆ ಯಶಸ್ವಿಯಾಗಿ ನೆರವೇರಿದೆ.
ಭಾರತೀಯ ರೋಬೋಟಿಕ್ ಹೃದಯ ಶಸ್ತ್ರಚಿಕಿತ್ಸಾ ಕ್ಷೇತ್ರದ ಪ್ರಮುಖ ತಜ್ಞ ಡಾ. ಸುಧೀರ್ ಶ್ರೀವಾಸ್ತವ ಅವರು ಬಾರ್ಸಿಲೋನಾದಲ್ಲಿ ನಡೆದ ಯುರೋಪಿಯನ್ ಅಸೋಸಿಯೇಷನ್ ಫಾರ್ ಕಾರ್ಡಿಯೋ-ಥೊರಾಸಿಕ್ ಸರ್ಜರಿ (EACTS) ವಾರ್ಷಿಕ ಸಮ್ಮೇಳನದಲ್ಲಿ ಪಾಲ್ಗೊಂಡಿದ್ದಾಗಲೇ ದೂರದಿಂದ ರೋಬೋಟ್ ನಿಯಂತ್ರಿಸಿ ಶಸ್ತ್ರಚಿಕಿತ್ಸೆ ನಡೆಸಿದರು.
ಜನ್ಮಜಾತ ಹೃದಯ ಸಮಸ್ಯೆಗೆ ಚಿಕಿತ್ಸೆ
ಕೋಲಾರ ಜಿಲ್ಲೆಯ 26 ವರ್ಷದ ಮಹಿಳೆಯೊಬ್ಬರು ಹೃದಯದ ಮೇಲಿನ ಎರಡು ಕೋಣೆಗಳ ನಡುವಿನ ಗೋಡೆಯಲ್ಲಿ ಜನ್ಮಜಾತ ರಂಧ್ರವಿರುವ ಸಮಸ್ಯೆಯಿಂದ ಬಳಲುತ್ತಿದ್ದರು. ವೈದ್ಯಕೀಯ ಭಾಷೆಯಲ್ಲಿ ಇದನ್ನು ಆಟ್ರಿಯಲ್ ಸೆಪ್ಟಲ್ ಡಿಫೆಕ್ಟ್ (ASD) ಎಂದು ಕರೆಯಲಾಗುತ್ತದೆ.
ಬಾರ್ಸಿಲೋನಾದಲ್ಲಿ ಅಳವಡಿಸಲಾಗಿದ್ದ ರೋಬೋಟಿಕ್ ಶಸ್ತ್ರಚಿಕಿತ್ಸಾ ಕನ್ಸೋಲ್ ಮೂಲಕ ಡಾ. ಸುಧೀರ್ ಶ್ರೀವಾಸ್ತವ ಅವರು ಮುದ್ದೇನಹಳ್ಳಿಯ ಆಸ್ಪತ್ರೆಯ ಶಸ್ತ್ರಚಿಕಿತ್ಸಾ ಕೊಠಡಿಯಲ್ಲಿದ್ದ ‘ಎಸ್ಎಸ್ಐ ಮಂತ್ರ’ ರೋಬೋಟಿಕ್ ವ್ಯವಸ್ಥೆಯನ್ನು ನಿಯಂತ್ರಿಸಿದರು. ಸುಮಾರು ಮೂರರಿಂದ ನಾಲ್ಕು ಗಂಟೆಗಳ ಕಾಲ ಶಸ್ತ್ರಚಿಕಿತ್ಸೆ ನಡೆಯಿತು.
ಮಣಿಪಾಲ್ ಆಸ್ಪತ್ರೆಯ ಜೈಪುರ ಘಟಕದ ಮುಖ್ಯ ಹೃದಯ ಶಸ್ತ್ರಚಿಕಿತ್ಸಕ ಹಾಗೂ ರೋಬೋಟಿಕ್ ಶಸ್ತ್ರಚಿಕಿತ್ಸಕ ಡಾ. ಲಲಿತ್ ಮಲಿಕ್ ಮತ್ತು ಮುದ್ದೇನಹಳ್ಳಿಯ ಸಂಸ್ಥೆಯ ಮುಖ್ಯ ಹೃದಯ ಶಸ್ತ್ರಚಿಕಿತ್ಸಕ ಡಾ. ಸಿ.ಎಸ್. ಹಿರೇಮಠ ಅವರು ಸ್ಥಳದಲ್ಲಿದ್ದು, ಶಸ್ತ್ರಚಿಕಿತ್ಸೆಗೆ ಅಗತ್ಯವಾದ ನೆರವು ನೀಡಿದರು. ರೋಗಿಯ ಆರೋಗ್ಯದ ಮೇಲೂ ನಿರಂತರ ನಿಗಾ ವಹಿಸಿದರು.
ಆರು ಗಂಟೆಗಳಲ್ಲಿ ಉಸಿರಾಟದ ಟ್ಯೂಬ್ ತೆರವು
ಶಸ್ತ್ರಚಿಕಿತ್ಸೆಯ ಬಳಿಕ ಮಹಿಳೆಯ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದ್ದು, ಸುಮಾರು ಆರು ಗಂಟೆಗಳ ನಂತರ ಉಸಿರಾಟಕ್ಕೆ ಅಳವಡಿಸಿದ್ದ ಟ್ಯೂಬ್ ಅನ್ನು ತೆಗೆದುಹಾಕಲಾಯಿತು ಎಂದು ಆಸ್ಪತ್ರೆ ತಿಳಿಸಿದೆ.
ಶಸ್ತ್ರಚಿಕಿತ್ಸೆ ವೇಳೆ ಮೂರು ಸಣ್ಣ ಛೇದನಗಳನ್ನು ಮಾಡಲಾಗಿದ್ದು, ಪ್ರತಿಯೊಂದೂ ಐದು ಮಿಲಿಮೀಟರ್ಗಿಂತ ಕಡಿಮೆ ಗಾತ್ರದ್ದಾಗಿತ್ತು. ಇದರಿಂದ ರಕ್ತಸ್ರಾವ ಮತ್ತು ಶಸ್ತ್ರಚಿಕಿತ್ಸೆಯ ನಂತರದ ನೋವು ಕಡಿಮೆಯಾಗಿತ್ತು ಎಂದು ಸಂಸ್ಥೆ ಹೇಳಿದೆ.
ದೂರದ ಅಂತರವನ್ನೂ ಮೀರಿದ ವೈದ್ಯಕೀಯ ತಂತ್ರಜ್ಞಾನ
ಇದೇ ಆಸ್ಪತ್ರೆಯಲ್ಲಿ ಈ ಹಿಂದೆ ಗುರುಗ್ರಾಮ್ನಿಂದ ರೋಬೋಟಿಕ್ ವ್ಯವಸ್ಥೆಯನ್ನು ನಿಯಂತ್ರಿಸಿ ಹೃದಯ ಶಸ್ತ್ರಚಿಕಿತ್ಸೆ ನಡೆಸಲಾಗಿತ್ತು. ಇದೀಗ ಸ್ಪೇನ್ನ ಬಾರ್ಸಿಲೋನಾದಿಂದಲೇ ಶಸ್ತ್ರಚಿಕಿತ್ಸೆ ನಡೆಸುವ ಮೂಲಕ ದೂರಸ್ಥ ರೋಬೋಟಿಕ್ ವೈದ್ಯಕೀಯ ತಂತ್ರಜ್ಞಾನದ ಅಂತರರಾಷ್ಟ್ರೀಯ ಬಳಕೆಯ ಸಾಧ್ಯತೆಗಳನ್ನು ಪ್ರದರ್ಶಿಸಲಾಗಿದೆ.
ಇಂತಹ ತಂತ್ರಜ್ಞಾನವು ಭವಿಷ್ಯದಲ್ಲಿ ಗ್ರಾಮೀಣ ಪ್ರದೇಶಗಳು ಹಾಗೂ ಪರಿಣತ ವೈದ್ಯರ ಕೊರತೆಯಿರುವ ಸ್ಥಳಗಳಿಗೂ ಉನ್ನತ ಮಟ್ಟದ ವೈದ್ಯಕೀಯ ಸೇವೆ ತಲುಪಿಸಲು ನೆರವಾಗಬಹುದು. ವೈದ್ಯಕೀಯ ಶಿಕ್ಷಣ, ಶಸ್ತ್ರಚಿಕಿತ್ಸಾ ತರಬೇತಿ ಮತ್ತು ವಿವಿಧ ದೇಶಗಳ ತಜ್ಞ ವೈದ್ಯರ ಸಹಯೋಗಕ್ಕೂ ಇದು ಹೊಸ ಅವಕಾಶಗಳನ್ನು ಕಲ್ಪಿಸಬಹುದು.
ಆದರೆ ಇಂತಹ ಶಸ್ತ್ರಚಿಕಿತ್ಸೆಗಳನ್ನು ಸುರಕ್ಷಿತವಾಗಿ ನಡೆಸಲು ವಿಶ್ವಾಸಾರ್ಹ ಸಂವಹನ ವ್ಯವಸ್ಥೆ, ಸ್ಥಳೀಯ ವೈದ್ಯಕೀಯ ತಂಡದ ಸಮನ್ವಯ ಮತ್ತು ಸೂಕ್ತ ಸುರಕ್ಷತಾ ಕ್ರಮಗಳು ಅತ್ಯಗತ್ಯ.
ಬಡ ಕುಟುಂಬದ ಮಹಿಳೆಗೆ ಸಂಪೂರ್ಣ ಉಚಿತ ಚಿಕಿತ್ಸೆ
ಶಸ್ತ್ರಚಿಕಿತ್ಸೆಗೆ ಒಳಗಾದ ಮಹಿಳೆ ಇಬ್ಬರು ಮಕ್ಕಳ ತಾಯಿಯಾಗಿದ್ದು, ಅವರ ಪತಿ ಆಟೋರಿಕ್ಷಾ ಚಾಲಕರಾಗಿದ್ದಾರೆ. ಆರ್ಥಿಕವಾಗಿ ಹಿಂದುಳಿದಿರುವ ಈ ಕುಟುಂಬಕ್ಕೆ ದುಬಾರಿ ಹೃದಯ ಶಸ್ತ್ರಚಿಕಿತ್ಸೆಯ ವೆಚ್ಚ ಭರಿಸುವುದು ಕಷ್ಟವಾಗಿತ್ತು.
ಇದನ್ನು ಗಮನದಲ್ಲಿಟ್ಟುಕೊಂಡು ಶ್ರೀ ಮಧುಸೂದನ ಸಾಯಿ ವೈದ್ಯಕೀಯ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯು ಶಸ್ತ್ರಚಿಕಿತ್ಸೆ ಸೇರಿದಂತೆ ಸಂಪೂರ್ಣ ಚಿಕಿತ್ಸೆಯನ್ನು ಉಚಿತವಾಗಿ ಒದಗಿಸಿದೆ.
ಆಧುನಿಕ ರೋಬೋಟಿಕ್ ತಂತ್ರಜ್ಞಾನದ ನೆರವಿನಿಂದ ನಡೆದ ಈ ಶಸ್ತ್ರಚಿಕಿತ್ಸೆ, ದೂರದ ಅಂತರವನ್ನು ಮೀರಿಯೂ ಪರಿಣತ ವೈದ್ಯಕೀಯ ಸೇವೆಯನ್ನು ರೋಗಿಗಳಿಗೆ ತಲುಪಿಸಬಹುದೆಂಬುದಕ್ಕೆ ಮಹತ್ವದ ಉದಾಹರಣೆಯಾಗಿದೆ.
ರಾಜ್ಯ
Temperature-ಹಿಂಗಾರು ಮಳೆ ಇಳಿಮುಖ, ಬಿಸಿಲು ಏರುಮುಖ; ಕರ್ನಾಟಕಕ್ಕೆ ಹವಾಮಾನ ಎಚ್ಚರಿಕೆ..!
ರಾಜ್ಯದಲ್ಲಿ ಮುಂಗಾರು ಹಂಗಾಮು ಅಂತ್ಯಗೊಂಡು ಹಿಂಗಾರು ಆರಂಭವಾಗಿರುವ ಬೆನ್ನಲ್ಲೇ ಮಳೆ ಕೊರತೆಯ ಆತಂಕ ಎದುರಾಗಿದೆ. ಭಾರತೀಯ ಹವಾಮಾನ ಇಲಾಖೆ (IMD) ಬಿಡುಗಡೆ ಮಾಡಿರುವ ಋತುಮಾನದ ಮುನ್ಸೂಚನೆ ಪ್ರಕಾರ, ಕರ್ನಾಟಕದ ಬಹುತೇಕ ಭಾಗಗಳಲ್ಲಿ ಈ ಬಾರಿ ಹಿಂಗಾರು ಮಳೆ ವಾಡಿಕೆಗಿಂತ ಕಡಿಮೆಯಾಗುವ ಸಾಧ್ಯತೆಯಿದೆ.
ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಹಂಗಾಮು ಅಂತ್ಯಗೊಂಡು ಹಿಂಗಾರು ಆರಂಭವಾಗಿರುವ ಬೆನ್ನಲ್ಲೇ ಮಳೆ ಕೊರತೆಯ ಆತಂಕ ಎದುರಾಗಿದೆ. ಭಾರತೀಯ ಹವಾಮಾನ ಇಲಾಖೆ (IMD) ಬಿಡುಗಡೆ ಮಾಡಿರುವ ಋತುಮಾನದ ಮುನ್ಸೂಚನೆ ಪ್ರಕಾರ, ಕರ್ನಾಟಕದ ಬಹುತೇಕ ಭಾಗಗಳಲ್ಲಿ ಈ ಬಾರಿ ಹಿಂಗಾರು ಮಳೆ ವಾಡಿಕೆಗಿಂತ ಕಡಿಮೆಯಾಗುವ ಸಾಧ್ಯತೆಯಿದೆ.
ಅಕ್ಟೋಬರ್ನಿಂದ ಡಿಸೆಂಬರ್ವರೆಗಿನ ಹಿಂಗಾರು ಅವಧಿಯಲ್ಲಿ ರಾಜ್ಯಾದ್ಯಂತ ವಾಡಿಕೆಗಿಂತ ಕಡಿಮೆ ಮಳೆಯಾಗುವ ಸಾಧ್ಯತೆ ಇದೆ. ಕರ್ನಾಟಕದ ಈ ಅವಧಿಯ ವಾಡಿಕೆ ಸರಾಸರಿ ಮಳೆ 182.2 ಮಿ.ಮೀ. ಆಗಿದ್ದು, ದಕ್ಷಿಣ ಒಳನಾಡಿನಲ್ಲಿ 201.9 ಮಿ.ಮೀ. ವಾಡಿಕೆ ಮಳೆಯಿದೆ. ಆದರೆ ಈ ಬಾರಿ ಈ ಪ್ರಮಾಣಕ್ಕಿಂತ ಕಡಿಮೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಮಳೆ ಕೊರತೆಯ ಮುನ್ಸೂಚನೆಯು ಕೃಷಿ ಹಾಗೂ ಜಲಾಶಯಗಳ ನೀರಿನ ನಿರ್ವಹಣೆಯ ಮೇಲೆ ಪರಿಣಾಮ ಬೀರುವ ಸಾಧ್ಯತೆಯಿದೆ. ಹೀಗಾಗಿ ನೀರಿನ ಮಿತವ್ಯಯ ಹಾಗೂ ಪರ್ಯಾಯ ಬೆಳೆ ಯೋಜನೆಗಳತ್ತ ಗಮನಹರಿಸುವ ಅಗತ್ಯವಿದೆ.
ಮಳೆ ಕೊರತೆಗೆ ಕಾರಣವೇನು?
ಎಲ್ ನಿನೋ ಪ್ರಭಾವ: ಸಮಭಾಜಕ ಪೆಸಿಫಿಕ್ ಮಹಾಸಾಗರದಲ್ಲಿ ಎಲ್ ನಿನೋ ಪರಿಸ್ಥಿತಿ ಮುಂದುವರಿದಿದ್ದು, ಸಮುದ್ರದ ಮೇಲ್ಮೈ ತಾಪಮಾನ ವಾಡಿಕೆಗಿಂತ ಹೆಚ್ಚಾಗಿದೆ. ಈ ಪರಿಸ್ಥಿತಿ ವರ್ಷಾಂತ್ಯದವರೆಗೂ ಮುಂದುವರಿಯುವ ಸಾಧ್ಯತೆಯಿದ್ದು, ಹಿಂಗಾರು ಮಳೆಯ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ.
ತಟಸ್ಥ ಐಒಡಿ: ಹಿಂದೂ ಮಹಾಸಾಗರದಲ್ಲಿನ ಇಂಡಿಯನ್ ಓಷನ್ ಡೈಪೋಲ್ (IOD) ಸದ್ಯ ತಟಸ್ಥ ಸ್ಥಿತಿಯಲ್ಲಿದ್ದು, ಹಿಂಗಾರು ಅವಧಿಯಲ್ಲೂ ಇದೇ ಸ್ಥಿತಿ ಮುಂದುವರಿಯುವ ಸಾಧ್ಯತೆಯಿದೆ.
ದಕ್ಷಿಣ ಭಾರತದಲ್ಲಿ ಹೇಗಿರಲಿದೆ ಮಳೆ?
ತಮಿಳುನಾಡು, ಪುದುಚೇರಿ-ಕಾರೈಕಲ್, ಕರಾವಳಿ ಆಂಧ್ರಪ್ರದೇಶ-ಯಾನಾಂ, ರಾಯಲಸೀಮೆ, ಕೇರಳ-ಮಾಹೆ ಸೇರಿದಂತೆ ದಕ್ಷಿಣ ಭಾರತದ ಕೆಲವು ಹವಾಮಾನ ಉಪವಿಭಾಗಗಳಲ್ಲಿ ಹಿಂಗಾರು ಮಳೆ ಸಾಮಾನ್ಯ ಅಥವಾ ವಾಡಿಕೆಯಷ್ಟಿರುವ ಸಾಧ್ಯತೆಯಿದೆ. ಕರ್ನಾಟಕದ ದಕ್ಷಿಣ ಒಳನಾಡಿನಲ್ಲೂ ಮಳೆ ವಾಡಿಕೆಯಷ್ಟಿರುವ ಸಾಧ್ಯತೆ ಇದೆ ಎಂದು ಮುನ್ಸೂಚನೆ ತಿಳಿಸಿದೆ.
ದೇಶದ ಮಟ್ಟದಲ್ಲಿ ಅಕ್ಟೋಬರ್ನಲ್ಲಿ ಬಹುತೇಕ ಭಾಗಗಳಲ್ಲಿ ವಾಡಿಕೆಗಿಂತ ಕಡಿಮೆ ಮಳೆಯಾಗುವ ಸಾಧ್ಯತೆಯಿದೆ. ಆದರೆ ವಾಯವ್ಯ ಭಾರತದ ಕೆಲವು ಭಾಗಗಳು, ದಕ್ಷಿಣ ಪರ್ಯಾಯ ದ್ವೀಪ ಹಾಗೂ ಪೂರ್ವ ಭಾರತದ ಕೆಲವೆಡೆ ವಾಡಿಕೆ ಅಥವಾ ವಾಡಿಕೆಗಿಂತ ಹೆಚ್ಚಿನ ಮಳೆಯಾಗುವ ಸಾಧ್ಯತೆಯಿದೆ.
ಮಳೆಯಷ್ಟೇ ಅಲ್ಲ, ತಾಪಮಾನವೂ ಏರಿಕೆ
ಹಿಂಗಾರು ಮಳೆಯ ಕೊರತೆಯೊಂದಿಗೆ ದೇಶದ ಬಹುತೇಕ ಭಾಗಗಳಲ್ಲಿ ತಾಪಮಾನವೂ ವಾಡಿಕೆಗಿಂತ ಹೆಚ್ಚಾಗುವ ಸಾಧ್ಯತೆ ಇದೆ.
ಈಶಾನ್ಯ ಮತ್ತು ವಾಯವ್ಯ ಭಾರತದ ಕೆಲವು ಭಾಗಗಳನ್ನು ಹೊರತುಪಡಿಸಿ, ದೇಶದ ಬಹುತೇಕ ಕಡೆ ಹಗಲಿನ ಗರಿಷ್ಠ ತಾಪಮಾನ ವಾಡಿಕೆಗಿಂತ ಹೆಚ್ಚಾಗುವ ಸಾಧ್ಯತೆಯಿದೆ. ಇದೇ ರೀತಿ ಈಶಾನ್ಯ ಭಾರತ ಹೊರತುಪಡಿಸಿ ಬಹುತೇಕ ಪ್ರದೇಶಗಳಲ್ಲಿ ರಾತ್ರಿಯ ಕನಿಷ್ಠ ತಾಪಮಾನವೂ ವಾಡಿಕೆಗಿಂತ ಹೆಚ್ಚಾಗುವ ಸಾಧ್ಯತೆಯಿದ್ದು, ಸೆಕೆ ಮುಂದುವರಿಯುವ ಮುನ್ಸೂಚನೆ ಇದೆ.
-
ಬಿಗ್ ನ್ಯೂಸ್14 hours agoPuttur-ಪುತ್ತೂರು: ಓವರ್ ಟೆಕ್ ಬರದಲ್ಲಿ ಲಾರಿ-ಕಾರು ಅಪಘಾತ; ಪಲ್ಟಿಯಾದ ಲಾರಿ
-
ನಿಧನ ವಾರ್ತೆ17 hours agoಪುತ್ತೂರು: ಸುಳ್ಯ ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿಯ ಅಧೀಕ್ಷಕ ಶಿವಪ್ರಸಾದ್ ಜಿ.ಎಸ್. ನಿಧನ
-
ಸ್ಥಳೀಯ11 hours agoKadaba-ಅಪ್ರಾಪ್ತ ಬಾಲಕಿಯ ಅತ್ಯಾಚಾರ ಪ್ರಕರಣ: ಕಡಬ ನಿವಾಸಿ ಕಾಮುಕನಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ, ₹50 ಸಾವಿರ ದಂಡ..!
-
ಅಂತರ ರಾಜ್ಯ17 hours agoBJP minister-ಪತಿ ಎರಡು ಮದುವೆಯಾಗಿದ್ದರೆಂದು ದೂರು ದಾಖಲಿಸಿದ ಬಿಜೆಪಿ ಸಚಿವೆ..!
-
ಅಂತರ ರಾಜ್ಯ15 hours agoRamleela-ನವದೆಹಲಿ: ರಾಮಲೀಲಾದಲ್ಲಿ ಈ ಬಾರಿ ಅಸುರರ ಜತೆಗೆ ʻಜಿರಳೆʼಯೂ ದಹನ..!
-
ಕಾರ್ಯಕ್ರಮಗಳು15 hours agoMangalore-ಮಂಗಳೂರಿಗೆ ಲಗ್ಗೆ ಇಟ್ಟ ಅಲರ್ಜಿ ಪರೀಕ್ಷೆಯ ಅತ್ಯಾಧುನಿಕ ತಂತ್ರಜ್ಞಾನ ಹೊಂದಿರುವ ರಾಜ್ಯದ ಪ್ರತಿಷ್ಠಿತ ‘ಧನ್ವಂತರಿ ಕ್ಲಿನಿಕಲ್ ಲ್ಯಾಬೋರೇಟರಿ’ : ಅ.19ರಂದು 11ನೇ ಶಾಖೆ ಉದ್ಘಾಟನೆ
-
ಅಪರಾಧ16 hours agoUdupi-ಉಡುಪಿ: ಭೂಗತ ಪಾತಕಿ ಹೇಮಂತ್ ಪೂಜಾರಿ ಸಹಚರನ ಬಂಧನ
-
ಅಂತರ ರಾಜ್ಯ16 hours agoTruecaller service-ಟೆಲಿಕಾಂ ಸಂಸ್ಥೆಗಳೇ ಒದಗಿಸಲಿವೆ ಟ್ರೂ ಕಾಲರ್ ಸೇವೆ; ಅಪರಿಚಿತ ನಂಬರ್ನಿಂದ ಕರೆ ಬಂದರೂ ಹೆಸರು ಪ್ರದರ್ಶನ ಕಡ್ಡಾಯ?


















