ಆರೋಗ್ಯ
Tea With Bread Side Effects : ಚಹಾದ ಜತೆಗೆ ಬ್ರೆಡ್ ಸೇವಿಸುವ ಅಭ್ಯಾಸ ಇದೀಯಾ? ಹಾಗಾದರೇ ಇದನ್ನು ಓದಲೇ ಬೇಕು
tea With Bread Side Effects: ಬಹುತೇಕರ ಜೀವನ ಆರಂಭವಾಗುವುದೇ ಚಹಾದೊಂದಿಗೆ , ಅದರಲ್ಲಿ ಹಲವರು ಚಹಾದ ಜತೆಗೆ ಬ್ರೆಡ್ ತಿನ್ನುವುದನ್ನು ಇಷ್ಟ ಪಡುತ್ತಾರೆ. ಈಗಿನ ಅಧುನಿಕ ಜೀವನ ಶೈಲಿ, ವೇಗದ ಬದುಕು ಅವರನ್ನು ಬ್ರೆಡ್ ತಿನ್ನಲು ಪ್ರೇರೆಪಿಸುತ್ತದೆ.
ಮೊದಲೆಲ್ಲ ರೋಗಿಗಳ ಆಹಾರ ಎನಿಸಿಕೊಂಡಿದ ಬ್ರೆಡ್ ಇಧಿಗ ನಗರ ಪಟ್ಟಣಗಳಲ್ಲಿ ಪ್ರತಿಯೊಬ್ಬರ ಆಹಾರವಾಗಿ ಬದಲಾಗಿದೆ.
ಆದರೆ ಅತಿ ಹೆಚ್ಚಾಗಿ ಬ್ರೆಡ್ ಸೇವನೆ ಮಾಡುವುದು ಹಲವು ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗುತ್ತದೆ ಎಂದು ತಜ್ಞರು ತಿಳಿಸಿದ್ದಾರೆ.
ಚಹಾದೊಂದಿಗೆ ಬ್ರೆಡ್ ತಿನ್ನುವ ಅನಾನುಕೂಲಗಳು:
ತೂಕ ಹೆಚ್ಚಾಗುತ್ತದೆ :
ಬ್ರೆಡ್ ಅನ್ನು ಹೆಚ್ಚಾಗಿ ಎಲ್ಲಾ ಮೈದಾ ಹಿಟ್ಟಿನಿಂದ ತಯಾರಿಸಲಾಗುತ್ತದೆ. ಜೊತೆಗೆ ಅವುಗಳಲ್ಲಿ ಹಾನಿಕಾರಕ ರಾಸಾಯನಿಕಗಳನ್ನು ಬೆರೆಸಲಾಗುತ್ತದೆ. ಈ ಕಾರಣದಿಂದಾಗಿ, ಅವುಗಳನ್ನು ಜೀರ್ಣಿಸಿಕೊಳ್ಳಲು ಕಷ್ಟವಾಗುತ್ತದೆ. ಇದರಿಂದಾಗಿ ಇದು ಹೊಟ್ಟೆಗೆ ಸಂಬಂಧಿಸಿದ ಸಮಸ್ಯೆಗಳಿಗೆ ಕಾರಣವಾಗುವುದಲ್ಲದೆ ತೂಕವನ್ನು ಹೆಚ್ಚಿಸಬಹುದು. ಆದ್ದರಿಂದ ನೀವು ಚಹಾದೊಂದಿಗೆ ಬ್ರೆಡ್ ತಿನ್ನಲು ಇಷ್ಟಪಡುತ್ತಿದ್ದರೆ, ಇಂದೇ ನಿಮ್ಮ ಅಭ್ಯಾಸವನ್ನು ಬದಲಿಸಿ.
ರಕ್ತದಲ್ಲಿನ ಸಕ್ಕರೆ ಮಟ್ಟ ಹೆಚ್ಚಾಗುತ್ತದೆ :
ಚಹಾ ಮತ್ತು ಬ್ರೆಡ್ ಸೇವನೆಯು ಮಧುಮೇಹಿಗಳಿಗೆ ತುಂಬಾ ಹಾನಿಕಾರಕವೆಂದು ಸಾಬೀತುಪಡಿಸಬಹುದು. ಇದನ್ನು ಸೇವಿಸುವುದರಿಂದ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಹೆಚ್ಚಿಸಬಹುದು. ಇದರಿಂದಾಗಿ ಮಧುಮೇಹಿಗಳ ಸ್ಥಿತಿ ಹದಗೆಡಬಹುದು. ಆದ್ದರಿಂದ, ಮಧುಮೇಹ ರೋಗಿಗಳು ಚಹಾದೊಂದಿಗೆ ಬ್ರೆಡ್ ಸೇವಿಸಬಾರದು.
ಅಧಿಕ ರಕ್ತದೊತ್ತಡದ ಸಮಸ್ಯೆ :
ಇದು ರಕ್ತದೊತ್ತಡ ಇರುವ ರೋಗಿಗಳಲ್ಲಿ ಅಧಿಕ ಬಿಪಿ ಮಟ್ಟಕ್ಕೆ ಕಾರಣವಾಗಬಹುದು. ಆದ್ದರಿಂದ, ರಕ್ತದೊತ್ತಡ ಹೊಂದಿರುವವರು ಮರೆತು ಕೂಡ ಬೆಳಿಗ್ಗೆ ಚಹಾದೊಂದಿಗೆ ಬ್ರೆಡ್ ತಿನ್ನಬಾರದು.
ಹೊಟ್ಟೆಯಲ್ಲಿ ಹುಣ್ಣುಗಳು ಇರಬಹುದು :
ನೀವು ಬೆಳಿಗ್ಗೆ ಚಹಾವನ್ನು ಬ್ರೆಡ್ನೊಂದಿಗೆ ಸೇವಿಸಿದರೆ, ಅದು ಹೊಟ್ಟೆಯ ಒಳಪದರ ಮತ್ತು ಕರುಳನ್ನು ಕರಗಿಸಲು ಕಾರಣವಾಗಬಹುದು ಏಕೆಂದರೆ ಚಹಾ ಸೇವನೆಯಿಂದ ಆಸಿಡಿಟಿ ಸಮಸ್ಯೆ ಉಂಟಾಗುತ್ತದೆ. ಮತ್ತೊಂದೆಡೆ, ನೀವು ಅದರೊಟ್ಟಿಗೆ ಬ್ರೆಡ್ ತಿನ್ನುತ್ತಿದ್ದರೆ, ಅದು ಪರಿಸ್ಥಿತಿಯನ್ನು ಇನ್ನಷ್ಟು ಹದಗೆಡಿಸುತ್ತದೆ.
ಮೆದುಳಿನ ಆರೋಗ್ಯ ಹಾಳು ಮಾಡುತ್ತದೆ.
ಬ್ರೆಡ್ನಲ್ಲಿ ಗ್ಲುಟನ್ ಎಂಬ ಆಮ್ಲವನ್ನು ಹೊಂದಿರುತ್ತದೆ. ಇದು ಮೆದುಳಿನ ಮೇಲೆ ತೀವ್ರ ಪರಿಣಾಮ ಬೀರುತ್ತದೆ ಎಂದು ಹೇಳಲಾಗಿದೆ. ಆದ್ದರಿಂದ, ಬೆಳಿಗ್ಗೆ ಬ್ರೆಡ್ ಸೇವನೆ ಮಾಡುವುದರಿಂದ ಮೆದುಳಿನ ಕಾರ್ಯ ಕಡಿಮೆಯಾಗುತ್ತದೆ ಮತ್ತು ಒತ್ತಡ ಹೆಚ್ಚಾಗುತ್ತದೆ ಎಂದು ಅಧ್ಯಯನಗಳು ಸಾಬೀತು ಮಾಡಿವೆ.
ಕೆಲವು ಸಂದರ್ಭಗಳಲ್ಲಿ, ಇದನ್ನು ಸೇವನೆ ಮಾಡಬಹುದು. ಹಣ್ಣುಗಳನ್ನು ಸೇವನೆ ಮಾಡಿದ ತಕ್ಷಣ ಬ್ರೆಡ್ ಸೇವನೆ ಮಾಡುವುದು ತಪ್ಪಲ್ಲ ಎಂದು ಹೇಳಲಾಗುತ್ತದೆ. ಆದರೆ ನಿಯಮಿತವಾಗಿ ಬ್ರೆಡ್ ಸೇವನೆ ಮಾಡುವುದು ಸೂಕ್ತವಲ್ಲ ಎಂದು ಹೇಳಲಾಗುತ್ತದೆ.
ಬ್ರಿಟಿಷ್ ಮೆಡಿಕಲ್ ಜರ್ನಲ್ನಲ್ಲಿ ಪ್ರಕಟವಾದ ಹೊಸ ಅಧ್ಯಯನವು ಹೆಚ್ಚಿನ ಪ್ರಮಾಣದ ಸಂಸ್ಕರಿಸಿದ ಆಹಾರ ಪದಾರ್ಥಗಳನ್ನು ಸೇವನೆ ಮಾಡುವುದು ಆರೋಗ್ಯಕ್ಕೆ ಅಪಾಯಕಾರಿ. ಆದ್ದರಿಂದ ಬಿಳಿ ಬ್ರೆಡ್, ಬ್ರೆಡ್ಸ್ಟಿಕ್ಗಳು, ಕ್ರೋಸೆಂಟ್ಗಳನ್ನು ಸೇವನೆ ಮಾಡಬಾರದು. ಇದು ಪ್ರಮುಖ ಹೃದಯರಕ್ತನಾಳದ ಕಾಯಿಲೆ, ಪಾರ್ಶ್ವವಾಯುವಿನ ಅಪಾಯವನ್ನು ಹೆಚ್ಚಿಸುತ್ತದೆ , ಮತ್ತು ಹೃದಯಾಘಾತಕ್ಕೆ ಕಾರಣವಾಗುತ್ತದೆ.
ಆರೋಗ್ಯ
Puttur-ಸೆ.29: ವಿಶ್ವ ಹೃದಯ ದಿನ: ಪುತ್ತೂರಿನ ಮೆಡ್‌ಲ್ಯಾಂಡ್ ಆಸ್ಪತ್ರೆಯಲ್ಲಿ ಹೃದಯ ತಪಾಸಣಾ ಶಿಬಿರ
ವಿಶ್ವ ಹೃದಯ ದಿನದ ಅಂಗವಾಗಿ ಪುತ್ತೂರಿನ ಸಂಪ್ಯದಲ್ಲಿರುವ ಮೆಡ್‌ಲ್ಯಾಂಡ್ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಸೆ.29, ಮಂಗಳವಾರದಂದು ಸಂಜೆ ಗಂಟೆ 3ರಿಂದ ವಿಶೇಷ ಹೃದಯ ತಪಾಸಣಾ ಶಿಬಿರ ಹಾಗೂ ಮಾಹಿತಿ ಕಾರ್ಯಾಗಾರವನ್ನು ಆಯೋಜಿಸಲಾಗಿದೆ.
ಪುತ್ತೂರು: ವಿಶ್ವ ಹೃದಯ ದಿನದ ಅಂಗವಾಗಿ ಪುತ್ತೂರಿನ ಸಂಪ್ಯದಲ್ಲಿರುವ ಮೆಡ್‌ಲ್ಯಾಂಡ್ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಸೆ.29, ಮಂಗಳವಾರದಂದು ಸಂಜೆ ಗಂಟೆ 3ರಿಂದ ವಿಶೇಷ ಹೃದಯ ತಪಾಸಣಾ ಶಿಬಿರ ಹಾಗೂ ಮಾಹಿತಿ ಕಾರ್ಯಾಗಾರವನ್ನು ಆಯೋಜಿಸಲಾಗಿದೆ.
ಶಿಬಿರದಲ್ಲಿ ಹೃದಯದ ಆರೋಗ್ಯಕ್ಕೆ ಸಂಬಂಧಿಸಿದಂತೆ ಇ.ಸಿ.ಜಿ., ಇಕೋ (ECHO), ಟಿ.ಎಂ.ಟಿ. (TMT) ಸೇರಿದಂತೆ ಅಗತ್ಯ ತಪಾಸಣೆಗಳನ್ನು ನಡೆಸಲಾಗುವುದು. ತಪಾಸಣೆಯ ಬಳಿಕ ಹೃದ್ರೋಗ ತಜ್ಞ ವೈದ್ಯರಿಂದ ಸೂಕ್ತ ಸಲಹೆ ಮತ್ತು ಮಾರ್ಗದರ್ಶನವೂ ದೊರೆಯಲಿದೆ.
ಹೃದಯ ಸಂಬಂಧಿ ಕಾಯಿಲೆಗಳನ್ನು ಆರಂಭಿಕ ಹಂತದಲ್ಲೇ ಪತ್ತೆಹಚ್ಚಿ ಸೂಕ್ತ ಚಿಕಿತ್ಸೆ ಪಡೆಯಲು ಶಿಬಿರವು ಸಾರ್ವಜನಿಕರಿಗೆ ಉಪಯುಕ್ತ ಅವಕಾಶವಾಗಲಿದೆ. ವಿಶೇಷವಾಗಿ ಎದೆನೋವು, ಉಸಿರಾಟದ ತೊಂದರೆ, ಹೃದಯ ಬಡಿತದಲ್ಲಿ ವ್ಯತ್ಯಾಸ, ಅಧಿಕ ರಕ್ತದೊತ್ತಡ, ಮಧುಮೇಹ ಅಥವಾ ಕುಟುಂಬದಲ್ಲಿ ಹೃದಯ ಕಾಯಿಲೆಯ ಹಿನ್ನೆಲೆ ಹೊಂದಿರುವವರು ಶಿಬಿರದ ಪ್ರಯೋಜನ ಪಡೆಯುವಂತೆ ಆಸ್ಪತ್ರೆಯ ಆಡಳಿತ ಮಂಡಳಿ ಮನವಿ ಮಾಡಿದೆ.
ಹೃದಯದ ಆರೋಗ್ಯದ ಬಗ್ಗೆ ಮುನ್ನೆಚ್ಚರಿಕೆ ವಹಿಸುವುದು ಹಾಗೂ ನಿಯಮಿತ ತಪಾಸಣೆ ಮಾಡಿಸಿಕೊಳ್ಳುವ ಮೂಲಕ ಆರೋಗ್ಯಕರ ಜೀವನಶೈಲಿಯನ್ನು ರೂಢಿಸಿಕೊಳ್ಳುವಂತೆ ಆಸ್ಪತ್ರೆ ತಿಳಿಸಿದೆ.
ಆರೋಗ್ಯ
HIV test-ಯುವಜನರಲ್ಲಿ ಹೆಚ್ಚುತ್ತಿದೆ HIV ಸೋಂಕು; ರಾಜ್ಯದ ಪದವಿ ಮತ್ತು ಎಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಎಚ್‌ಐವಿ ತಪಾಸಣೆ
ರಾಜ್ಯದ ಯುವ ಸಮೂಹದಲ್ಲಿ ಎಚ್‌ಐವಿ (HIV) ಸೋಂಕು ಆತಂಕಕಾರಿ ರೀತಿಯಲ್ಲಿ ಹರಡುತ್ತಿರುವುದನ್ನು ಮನಗಂಡಿರುವ ಕರ್ನಾಟಕ ಸರ್ಕಾರ, ಎಲ್ಲ ಪದವಿ ಮತ್ತು ಎಂಜಿನಿಯರಿಂಗ್ ಕಾಲೇಜುಗಳಲ್ಲಿ ವಿದ್ಯಾರ್ಥಿಗಳಿಗೆ ಎಚ್‌ಐವಿ ತಪಾಸಣೆ ನಡೆಸಲು ನಿರ್ಧರಿಸಿದೆ.
ಬೆಂಗಳೂರು: ರಾಜ್ಯದ ಯುವ ಸಮೂಹದಲ್ಲಿ ಎಚ್‌ಐವಿ (HIV) ಸೋಂಕು ಆತಂಕಕಾರಿ ರೀತಿಯಲ್ಲಿ ಹರಡುತ್ತಿರುವುದನ್ನು ಮನಗಂಡಿರುವ ಕರ್ನಾಟಕ ಸರ್ಕಾರ, ಎಲ್ಲ ಪದವಿ ಮತ್ತು ಎಂಜಿನಿಯರಿಂಗ್ ಕಾಲೇಜುಗಳಲ್ಲಿ ವಿದ್ಯಾರ್ಥಿಗಳಿಗೆ ಎಚ್‌ಐವಿ ತಪಾಸಣೆ ನಡೆಸಲು ನಿರ್ಧರಿಸಿದೆ.
ದೇಶದಲ್ಲೇ ಮೂರನೇ ಸ್ಥಾನ:
ರಾಷ್ಟ್ರೀಯ ಏಡ್ಸ್ ನಿಯಂತ್ರಣ ಸಂಸ್ಥೆಯ ವರದಿ ಪ್ರಕಾರ, ಎಚ್‌ಐವಿ ಸೋಂಕಿತರ ಸಂಖ್ಯೆಯಲ್ಲಿ ಕರ್ನಾಟಕವು ದೇಶದಲ್ಲೇ 3ನೇ ಸ್ಥಾನದಲ್ಲಿದೆ. ರಾಜ್ಯದಲ್ಲಿ ಒಟ್ಟು 2.60 ಲಕ್ಷ ಸೋಂಕಿತರಿದ್ದು, ಈ ಪೈಕಿ ಸುಮಾರು 54 ಸಾವಿರ ಮಂದಿಗೆ ತಮಗೆ ಸೋಂಕು ತಗುಲಿರುವ ಅರಿವೇ ಇಲ್ಲದಿರುವುದು ದೊಡ್ಡ ಆತಂಕಕ್ಕೆ ಕಾರಣವಾಗಿದೆ. ವಿಶೇಷವಾಗಿ 18 ರಿಂದ 35 ವರ್ಷದೊಳಗಿನವರಲ್ಲಿ ಸೋಂಕು ವೇಗವಾಗಿ ಹರಡುತ್ತಿದೆ ಎಂದು ಕರ್ನಾಟಕ ರಾಜ್ಯ ಏಡ್ಸ್ ತಡೆ ಸೊಸೈಟಿ (KSAPS) ಕಳವಳ ವ್ಯಕ್ತಪಡಿಸಿದೆ.
ಕಾಲೇಜುಗಳಲ್ಲಿ ಆರೋಗ್ಯ ಶಿಬಿರ ಮತ್ತು ಜಾಗೃತಿ:
ಸೋಂಕನ್ನು ಆರಂಭಿಕ ಹಂತದಲ್ಲೇ ಪತ್ತೆಹಚ್ಚಲು ಆರೋಗ್ಯ ಇಲಾಖೆ ಹಾಗೂ ಕಾಲೇಜು ಶಿಕ್ಷಣ ಇಲಾಖೆಯು ಜಂಟಿಯಾಗಿ ‘ಸಂಯೋಜಿತ ಆರೋಗ್ಯ ಶಿಬಿರ’ಗಳನ್ನು (IHC) ಆಯೋಜಿಸುತ್ತಿವೆ.
ವಿಟಿಯು (VTU) ವ್ಯಾಪ್ತಿಯಲ್ಲೂ ತಪಾಸಣೆ: ರಾಜ್ಯದ ಎಲ್ಲ ಎಂಜಿನಿಯರಿಂಗ್ ಕಾಲೇಜುಗಳಲ್ಲಿ ತಪಾಸಣೆ ಹಾಗೂ ಆಪ್ತ ಸಮಾಲೋಚನೆ ನಡೆಸುವಂತೆ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ ಸೂಚನೆ ನೀಡಿದೆ.
ವಿವಿಧ ಸ್ಪರ್ಧೆಗಳು: 2026ರ ಜುಲೈನಿಂದ 2027ರ ಫೆಬ್ರವರಿವರೆಗೆ ಕಾಲೇಜುಗಳಲ್ಲಿ ಬೀದಿ ನಾಟಕ, ರಸಪ್ರಶ್ನೆ ಮತ್ತು ತಜ್ಞರ ಉಪನ್ಯಾಸಗಳ ಮೂಲಕ ಜಾಗೃತಿ ಮೂಡಿಸಲು ಯೋಜನೆ ರೂಪಿಸಲಾಗಿದೆ. ಇದಕ್ಕೆ ಅಂಕಗಳ ಆಧಾರದ ಮೇಲೆ ಮಾರ್ಗಸೂಚಿಯನ್ನೂ ನೀಡಲಾಗಿದೆ.
ಮಾಹಿತಿಯ ಗೌಪ್ಯತೆಗೆ ಆದ್ಯತೆ (QR Code ಸೌಲಭ್ಯ):
ವಿದ್ಯಾರ್ಥಿಗಳು ತಮ್ಮ ಎಚ್‌ಐವಿ ಸ್ಥಿತಿಯನ್ನು ಅತ್ಯಂತ ಗೌಪ್ಯವಾಗಿ ತಿಳಿದುಕೊಳ್ಳಲು ಸರ್ಕಾರವು ವಿಶೇಷ ತಂತ್ರಜ್ಞಾನದ ಮೊರೆ ಹೋಗಿದೆ.
ಕ್ಯೂಆರ್ ಕೋಡ್ (QR Code): ಕಾಲೇಜುಗಳಲ್ಲಿ ಕಡ್ಡಾಯವಾಗಿ ಕ್ಯೂಆರ್ ಕೋಡ್ ಪ್ರದರ್ಶಿಸಲಾಗುತ್ತದೆ. ಇದನ್ನು ಸ್ಕ್ಯಾನ್ ಮಾಡುವ ಮೂಲಕ ವಿದ್ಯಾರ್ಥಿಗಳು ಸ್ವಯಂ-ಅಪಾಯ ಮೌಲ್ಯಮಾಪನ ಮಾಡಿಕೊಳ್ಳಬಹುದು.
ವೆಬ್‌ಸೈಟ್: ಗೌಪ್ಯ ಮಾರ್ಗದರ್ಶನಕ್ಕಾಗಿ www.breakfreeindia.org ಜಾಲತಾಣವನ್ನು ಬಳಸಿಕೊಳ್ಳಲು ಅವಕಾಶ ನೀಡಲಾಗಿದೆ.
ಸರ್ಕಾರದ ಮುಂದಿರುವ ಸವಾಲು:
ಕಾಲೇಜುಗಳಲ್ಲಿ ಮಾದಕ ದ್ರವ್ಯಗಳ ವಿರುದ್ಧ ಸಮರ ಸಾರಿರುವ ಸರ್ಕಾರಕ್ಕೆ, ಈಗ ಎಚ್‌ಐವಿ ಹರಡದಂತೆ ತಡೆಯುವುದು ದೊಡ್ಡ ಸವಾಲಾಗಿದೆ. ರಾಜ್ಯದ ಸರ್ಕಾರಿ ಮತ್ತು ಖಾಸಗಿ ಕಾಲೇಜುಗಳಲ್ಲಿರುವ ಲಕ್ಷಾಂತರ ವಿದ್ಯಾರ್ಥಿಗಳ ಆರೋಗ್ಯ ಸುರಕ್ಷತೆಯ ದೃಷ್ಟಿಯಿಂದ ಈ ಕ್ರಮ ಅನಿವಾರ್ಯ ಎಂದು ಕೆಎಸ್‌ಎಪಿಎಸ್ ತಿಳಿಸಿದೆ. ಜಿಲ್ಲಾ ಏಡ್ಸ್ ನಿಯಂತ್ರಣಾಧಿಕಾರಿಗಳು ಈ ತಪಾಸಣಾ ಪ್ರಕ್ರಿಯೆಯ ಉಸ್ತುವಾರಿ ವಹಿಸಲಿದ್ದಾರೆ.
ಆರೋಗ್ಯ
Puttur-ಪುತ್ತೂರು: ಜು.9ರಂದು ಡಾ. ನಝೀರ್ ಅಹಮ್ಮದ್ ರವರ ಕ್ಲಿನಿಕ್ ನಲ್ಲಿ ಮಾಸಿಕ ಉಚಿತ ಆರೋಗ್ಯ ತಪಾಸಣಾ ಶಿಬಿರ
ಸಾರ್ವಜನಿಕರ ಆರೋಗ್ಯದ ಕಾಳಜಿಯೊಂದಿಗೆ, ಪುತ್ತೂರಿನ ಖ್ಯಾತ ವೈದ್ಯಕೀಯ ತಜ್ಞ ಡಾ. ನಝೀರ್ ಅಹಮದ್, ರೋಟರಿ ಕ್ಲಬ್ ಪುತ್ತೂರು ಸಿಟಿ ಹಾಗೂ ರೋಟರ್ಯಾಕ್ಟ್ ಕ್ಲಬ್ ಪುತ್ತೂರು ಇವರ ಜಂಟಿ ಆಶ್ರಯದಲ್ಲಿ ಮಾಸಿಕ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಆಯೋಜಿಸಲಾಗಿದೆ.
ಪುತ್ತೂರು: ಸಾರ್ವಜನಿಕರ ಆರೋಗ್ಯದ ಕಾಳಜಿಯೊಂದಿಗೆ, ಪುತ್ತೂರಿನ ಖ್ಯಾತ ವೈದ್ಯಕೀಯ ತಜ್ಞ ಡಾ. ನಝೀರ್ ಅಹಮದ್, ರೋಟರಿ ಕ್ಲಬ್ ಪುತ್ತೂರು ಸಿಟಿ ಹಾಗೂ ರೋಟರ್ಯಾಕ್ಟ್ ಕ್ಲಬ್ ಪುತ್ತೂರು ಇವರ ಜಂಟಿ ಆಶ್ರಯದಲ್ಲಿ ಮಾಸಿಕ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಆಯೋಜಿಸಲಾಗಿದೆ.
ಶಿಬಿರವು ಜು.9, ಗುರುವಾರದಂದು ಬೆಳಗ್ಗೆ 9-30ರಿಂದ ಮಧ್ಯಾಹ್ನ 12-30ರವರೆಗೆ ಪುತ್ತೂರಿನ ಕಲ್ಲಾರೆಯಲ್ಲಿರುವ ಡಾ. ನಝೀರ್ ಅಹಮದ್ ರವರ ಕ್ಲಿನಿಕ್ ನಲ್ಲಿ ನಡೆಯಲಿರುವುದು.
ಶಿಬಿರದಲ್ಲಿ ಸಿಗುವ ಸೌಲಭ್ಯಗಳು:
ಈ ಶಿಬಿರದಲ್ಲಿ ಸಾರ್ವಜನಿಕರಿಗೆ ಈ ಕೆಳಗಿನ ಪರೀಕ್ಷೆಗಳನ್ನು ಸಂಪೂರ್ಣ ಉಚಿತವಾಗಿ ಮಾಡಿಕೊಡಲಾಗುವುದು.
ಉಚಿತ ಪರೀಕ್ಷೆಗಳು: ಥೈರಾಯಿಡ್ (TSH), ರಕ್ತದ ಸಕ್ಕರೆ ಅಂಶ (Sugar), HBA1C ಮತ್ತು ಮೂಳೆ ಸಾಂದ್ರತೆ ಪರೀಕ್ಷೆ (BMD Test).
-
ಬಿಗ್ ನ್ಯೂಸ್21 hours agoಡಿಕೆಶಿ ಸರ್ಕಾರದಿಂದ ಜನತೆಗೆ ಬಿಗ್ ಶಾಕ್ – ರೈತರಿಗೆ ಬಂಪರ್ ಗಿಫ್ಟ್..! ಹಾಲಿನ ದರ 8 ರೂ. ಏರಿಕೆ : 6 ರೂ. ರೈತರಿಗೆ..! ನ.1 ರಿಂದ ಬಹುತೇಕ ಜಾರಿ
-
Uncategorized22 hours ago
ಶಿಕ್ಷೆಯ ವಿರುದ್ಧ ಹೈಕೋರ್ಟಿಗೆ ಅಪೀಲು; ನ್ಯಾಯಾಲಯಕ್ಕೆ ಗೈರು: ನೆಕ್ಕಿಲಾಡಿಯಲ್ಲಿ ಆರೋಪಿಯ ಬಂಧನ
-
ರಾಜಕೀಯ21 hours ago2027ರ ಜನವರಿ ಮೊದಲ ವಾರದಲ್ಲೇ ಜಿ.ಪಂ ಮತ್ತು ತಾ.ಪಂ ಚುನಾವಣೆ : ಸಚಿವ ಸಂಪುಟದಲ್ಲಿ ಚರ್ಚೆ..!
-
Uncategorized22 hours ago
Rahul Gandhi ;8 ಗಂಟೆಗಳ ಧರಣಿ ಬಳಿಕ ಪೊಲೀಸ್ ಆ್ಯಕ್ಷನ್: ರಾಹುಲ್–ಪ್ರಿಯಾಂಕಾ ಸೇರಿ 50 ಸಂಸದರು ವಶ
-
ಮಂಗಳೂರು10 hours agoChouta-ಫಾರಂ 7 ಕೊಟ್ಟ ಮಾತ್ರಕ್ಕೆ ಮತ ಡಿಲೀಟ್ ಆಗಲ್ಲ; ಅಕ್ರಮ ಡಿಲೀಷನ್ಗೆ ದಾಖಲೆ ತೋರಿಸಿ: ಕಾಂಗ್ರೆಸ್ಗೆ ಚೌಟ ಸವಾಲು
-
ಅಂತರ ರಾಜ್ಯ8 hours agoಕಾಸರಗೋಡು: ಆರ್ಎಸ್ಎಸ್ ವಕ್ತಾರರ ಭಾಗವಹಿಸುವಿಕೆ ವಿರೋಧಿಸಿ ಪ್ರತಿಭಟನೆ; ಘರ್ಷಣೆಯಲ್ಲಿ ಮೂವರು ವಿದ್ಯಾರ್ಥಿಗಳಿಗೆ ಗಾಯ
-
ರಾಜಕೀಯ10 hours agoAshok Rai-ಪಕ್ಷ ಸಂಘಟನೆಗೆ ಅಶೋಕ್ ರೈ ಹೊಸ ಹೆಜ್ಜೆ: ಪುತ್ತೂರು ಬ್ಲಾಕ್ ಕಾಂಗ್ರೆಸ್ಗೆ ಬೊಲೆರೋ
-
ಸ್ಥಳೀಯ8 hours agoBeltangadi-ಬೆಳ್ತಂಗಡಿ: ಚಾಲಕನ ಸಮಯಪ್ರಜ್ಞೆ; ಬಸ್ನಲ್ಲಿ ಅಸ್ವಸ್ಥಗೊಂಡ ಮಹಿಳೆ ಅಪಾಯದಿಂದ ಪಾರು


















