ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ […]" /> ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ […]"> IND V/s SA 2nd T 20 :ಅಂತಿಮ ಕ್ಷಣದಲ್ಲಿ ಸಿಡಿದ ದ. ಆಫ್ರಿಕಾ - ಮಿಲ್ಲರ್ ಸ್ಪೋಟಕ ಶತಕ : ಕೊನೆಗೆ ರೋಚಕ ಗೆಲುವು ಸಾಧಿಸಿದ ಭಾರತ - Nikhara News | Kannada News Website
Connect with us

ಕ್ರೀಡೆ

IND V/s SA 2nd T 20 :ಅಂತಿಮ ಕ್ಷಣದಲ್ಲಿ ಸಿಡಿದ ದ. ಆಫ್ರಿಕಾ – ಮಿಲ್ಲರ್ ಸ್ಪೋಟಕ ಶತಕ : ಕೊನೆಗೆ ರೋಚಕ ಗೆಲುವು ಸಾಧಿಸಿದ ಭಾರತ

Published

on

Ad Widget

Ad Widget

Ad Widget

Ad Widget

ಗುವಾಹಟಿಯ ಬರ್ಸಾಪುರ ಕ್ರೀಡಾಂಗಣದಲ್ಲಿ ನಡೆದ ಟಿ20 ಸರಣಿಯ ಎರಡನೇ ಪಂದ್ಯದಲ್ಲಿ
ಭಾರತ ತಂಡವು ಆತಿಥೇಯ ದಕ್ಷಿಣ ಆಫ್ರಿಕಾ ಟೀಮ್ ಅನ್ನು 16 ರನ್‌ಗಳ ಅಂತರದಿಂದ ಸೋಲಿಸಿದೆ. ಈ
ಮೂಲಕ ಟೀಂ ಇಂಡಿಯಾ 2-0 ಅಂತರದಲ್ಲಿ ಸರಣಿ ಗೆಲವು ಸಾಧಿಸಿದೆ.

Ad Widget

Ad Widget

Ad Widget

Ad Widget

ಕಳೆದ ಟಿ20 ವಿಶ್ವಕಪ್‌ ನಂತರ ಭಾರತ 9 ದ್ವಿಪಕ್ಷೀಯ ಟಿ20 ಸರಣಿಗಳಲ್ಲಿ 8ರಲ್ಲಿ ಜಯಗಳಿಸಿದೆ. ದಕ್ಷಿಣ ಆಫ್ರಿಕಾ ವಿರುದ್ಧ ಟೀಂ ಇಂಡಿಯಾ ತವರಿನಲ್ಲಿ ಮೊದಲ ಟಿ20 ಸರಣಿ ಗೆಲವು ಸಾಧಿಸಿದೆ.

Ad Widget

Ad Widget alt="Ad Widget"/>

Ad Widget

ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಟೀಂ ಇಂಡಿಯಾ ದಕ್ಷಿಣ ಆಫ್ರಿಕಾ ತಂಡಕ್ಕೆ 238 ರನ್‌ಗಳ ಬೃಹತ್ ಗುರಿ ನೀಡಿತು. ಇದನ್ನು ಬೆನ್ನತ್ತಿದ ದಕ್ಷಿಣ ಆಫ್ರಿಕಾ ತಂಡಕ್ಕೆ ಅರ್ಶ್‌ದೀಪ್ ಸಿಂಗ್ ಆರಂಭದಲ್ಲೇ ಆಘಾತ ನೀಡಿದರು. ದಕ್ಷಿಣ ಆಫ್ರಿಕಾ ತಂಡದ ನಾಯಕ ಟೆಂಬಾ ಬವುಮಾ ಮತ್ತು ರಿಲೀ ರೊಸೊವ್ ಶೂನ್ಯಕ್ಕೆ ಔಟಾದರು.‌‌ಈ ಮೂಲಕ ದ. ಅಫ್ರಿಕಾ ಕೇವಲ 5 ರನ್ ಗೆ 2 ವಿಕೆಟ್ ಕಳಕೊಂಡಿತ್ತು.

Ad Widget

Ad Widget <> Ad Widget

ಬಳಿಕ ಅನುಭವಿ  ಆಟಗಾರ ವಿಕೆಟ್ ಕೀಪರ್ ಬ್ಯಾಟರ್ ಕ್ವಿಂಟನ್ ಡಿ ಕಾಕ್ ಮತ್ತು ಐಡೆನ್ ಮಾರ್ಕ್ರಾಮ್ ಉತ್ತಮ ಜೊತೆಯಾಟ ಆಡಿದರು. 19 ಎಸೆತಗಳಲ್ಲಿ 33 ರನ್ ಗಳಿಸಿದ ಮಾರ್ಕ್ರಾಮ್ ಔಟದರು.

ಬಳಿಕ ಬಂದ ಡೇವಿಡ್ ಮಿಲ್ಲರ್ ಪಂದ್ಯವನ್ನು ಭಾರತದ ಕೈಯಿಂದ ಸೆಳೆಯುವ ಎಲ್ಲ ಪ್ರಯತ್ನ ನಡೆಸಿದರು. ಸ್ಪೋಟಕ ಶತಕ‌ ಸಿಡಿಸಿದ ಅವರು ಒಂದು ಹಂತದಲ್ಲಿ ಭಾರತದ ಕೈಯಿಂದ ಪಂದ್ಯ ಜಾರುತಿದೆಯೇ ಎಂಬ ಆತಂಕ ಸೃಷ್ಟಿಸಿದರು.

ಡೇವಿಡ್ ಮಿಲ್ಲರ್ ಕೇವಲ 47 ಎಸೆತಗಳಲ್ಲಿ 8 ಬೌಂಡರಿ ಮತ್ತು 7 ಸಿಕ್ಸರ್‍‌ಗಳ ನೆರವಿನಿಂದ ಅಜೇಯ 106 ರನ್ ಗಳಿಸಿದರು. ಕ್ವಿಂಟನ್ ಡಿ ಕಾಕ್ 48 ಎಸೆತಗಳಲ್ಲಿ3 ಬೌಂಡರಿ ಮತ್ತು 4 ಸಿಕ್ಸರ್‍‌ಗಳ ನೆರವಿನಿಂದ ಅಜೇಯ 69 ರನ್ ಗಳಿಸಿದರು ಕೂಡ ತಂಡವನ್ನು ಗೆಲ್ಲಿಸಲು ಸಾಧ್ಯವಾಗಲಿಲ್ಲ.

Ad Widget

Ad Widget

ಕೊನೆಯ 5 ಓವರ್‌ಗಳಲ್ಲಿ 78‌ ರನ್‌ ಸಿಡಿಸಿದ ಈ ಜೋಡಿ ಗೆಲುವಿನ ಸನಿಹದಲ್ಲಿತ್ತು. ಟಾರ್ಗೆಟ್‌ ಕೊಂಚ ಕಡಿಮೆ ಇದ್ದರೂ, ಗೆಲ್ಲುವ ಎಲ್ಲಾ ಸಾಧ್ಯತೆ ಇತ್ತು. ಆದರೆ, ಹರಿಣಗಳ ಇನ್ನಿಂಗ್ಸ್‌ ಆರಂಭದಲ್ಲಿ ಸಪ್ಪೆಯಾಗಿದ್ದ ಕಾರಣ ದೊಡ್ಡ ರನ್‌ ಪೇರಿಸಲು ಅವರಿಂದ ಸಾಧ್ಯವಾಗಲಿಲ್ಲ. ಅಂತಿಮವಾಗಿ ತಂಡ 20 ಓವರ್‌ಗಳಲ್ಲಿ 3 ವಿಕೆಟ್‌ ನಷ್ಟಕ್ಕೆ 221 ರನ್‌ ಗಳಿಸಲಷ್ಟೇ ಶಕ್ತವಾಯ್ತು. ಈ ಮೂಲಕ ಭಾರತ 16 ರನ್‌ಗಳ ರೋಚಕ ಜಯ ಸಾಧಿಸಿತು.

ಭಾರತದ ಇನ್ನಿಂಗ್ಸ್

ಎರಡನೇ ಟಿ20 ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಆರಂಭಿಸಿದ ತಂಡ ಸ್ಫೋಟಕ ಆರಂಭ ಪಡೆಯಿತು. ನಾಯಕ ರೋಹಿತ್ ಶರ್ಮಾ ಮತ್ತು ಕೆಎಲ್‌ ರಾಹುಲ್ ಉತ್ತಮ ಬ್ಯಾಟಿಂಗ್ ಮಾಡಿದರು.

ನಾಯಕ ರೋಹಿತ್ ಶರ್ಮಾ 37 ಎಸೆತಗಳಲ್ಲಿ 7 ಬೌಂಡರಿ ಒಂದು ಸಿಕ್ಸರ್ ಸಹಿತ 43 ರನ್ ಗಳಿಸಿದರೆ, ಉಪನಾಯಕ ಕೆಎಲ್ ರಾಹುಲ್ 28 ಎಸೆತಗಳಲ್ಲಿ 57 ರನ್ ಗಳಿಸಿ ತಂಡಕ್ಕೆ ಉತ್ತಮ ಆರಂಭ ಒದಗಿಸಿದರು. ಈ ಜೋಡಿ ಮೊದಲನೇ ವಿಕೆಟ್‌ಗೆ 96 ರನ್‌ಗಳನ್ನು ಕಲೆ ಹಾಕಿ ಉತ್ತಮ ಅಡಿಪಾಯ ಹಾಕಿತು.

ರಾಹುಲ್, ಸೂರ್ಯಕುಮಾರ್ ಯಾದವ್ ಅರ್ಧಶತಕ, ಕೊಹ್ಲಿ ಜಸ್ಟ್ ಮಿಸ್

ಕಳೆದ ಪಂದ್ಯದಲ್ಲಿ ನಿಧಾನಗತಿಯ ಬ್ಯಾಟಿಂಗ್‌ಗಾಗಿ ಟೀಕೆಗೆ ಗುರಿಯಾಗಿದ್ದ ಕೆಎಲ್ ರಾಹುಲ್ ತಮ್ಮ ಬ್ಯಾಟಿಂಗ್‌ನಿಂದ ಟೀಕಾಕಾರರ ಬಾಯಿ ಮುಚ್ಚಿಸಿದರು. ಕೇವಲ 28 ಎಸೆತಗಳಲ್ಲಿ 200 ಸ್ಟ್ರೈಕ್‌ ರೇಟ್‌ನಲ್ಲಿ ತಮ್ಮ ಅರ್ಧಶತಕವನ್ನು ಪೂರೈಸಿದರು. ತಮ್ಮ ಇನ್ನಿಂಗ್ಸ್‌ನಲ್ಲಿ ರಾಹುಲ್ 5 ಬೌಂಡಿ, 4 ಭರ್ಜರಿ ಸಿಕ್ಸರ್ ಸಿಡಿಸಿದರು.

ಕೆಎಲ್ ರಾಹುಲ್ ಔಟಾದ ನಂತರ ಕ್ರೀಸ್‌ಗೆ ಬಂದ ಸೂರ್ಯಕುಮಾರ್ ಯಾದವ್ ಅಕ್ಷರರ್ಶ ಆರ್ಭಟಿಸಿದರು. ಕೇವಲ 18 ಎಸೆತಗಳಲ್ಲಿ ಅರ್ಧಶತಕವನ್ನು ಪೂರೈಸಿದ ಸೂರ್ಯಕುಮಾರ್ ಯಾದವ್ ದಕ್ಷಿಣ ಆಫ್ರಿಕಾ ಬೌಲರ್ ಗಳ ಬೆಂಡೆತ್ತಿದರು. ಕೇವಲ 22 ಎಸೆತಗಳಲ್ಲಿ 5 ಬೌಂಡರಿ 5 ಭರ್ಜರಿ ಸಿಕ್ಸರ್ ನೆರವಿನಿಂದ 61 ರನ್ ಗಳಿಸಿದ ಅವರು ರನೌಟ್ ಆಗುವ ಮೂಲಕ ನಿರಾಸೆ ಅನುಭವಿಸಿದರು.

ವಿರಾಟ್ ಕೊಹ್ಲಿ ಕೂಡ ಅಂತಿಮ ಓವರ್ ಗಳಲ್ಲಿ ಆರ್ಭಟಿಸಿದರು. 28 ಎಸೆತಗಳನ್ನು ಎದುರಿಸಿದ ಅವರು 7 ಬೌಂಡರಿ 1 ಸಿಕ್ಸರ್ ನೆರವಿನಿಂದ 49 ರನ್ ಗಳಿಸಿದರು. ಕೇವಲ ಒಂದು ರನ್‌ನಿಂದ ತಮ್ಮ ಅರ್ಧಶತಕ ತಪ್ಪಿಸಿಕೊಂಡರು. ಅಂತಿಮ ಓವರ್ ನಲ್ಲಿ ಡಿಕೆ ಅಬ್ಬರಿಸಿ 7 ಎಸೆತಗಳಲ್ಲಿ ಎರಡು ಸಿಕ್ಸರ್, ಒಂದು ಬೌಂಡರಿ ನೆರವಿನಿಂದ 17 ರನ್ ಗಳಿಸಿದರು.

ದಕ್ಷಿಣ ಆಫ್ರಿಕಾ ಪರ ಕೇಶವ್ ಮಹಾರಾಜ್ 4 ಓವರ್ ಗಳಲ್ಲಿ 23 ರನ್ ನೀಡಿ ರೋಹಿತ್ ಶರ್ಮಾ, ಕೆಎಲ್ ರಾಹುಲ್ ವಿಕೆಟ್ ಪಡೆಯುವಲ್ಲಿ ಯಶಸ್ವಿಯಾದರು.

೨೦ ಓವರ್‌ಗಳಲ್ಲಿ 3 ವಿಕೆಟ್‌ಗೆ 238 (ಕೆ. ಎಲ್‌ ರಾಹುಲ್‌ ೫೭, ವಿರಾಟ್‌ ಕೊಹ್ಲಿ 49* , ಸೂರ್ಯಕುಮಾರ್‌ ಯಾದವ್‌ 61; ಕೇಶವ್‌ ಮಹಾರಾಜ್‌ 23ಕ್ಕೆ2).
: ೨೦ ಓವರ್‌ಗಳಲ್ಲಿ 3 ವಿಕೆಟ್‌ 221 (ಡೇವಿಡ್‌ ಮಿಲ್ಲರ್‌ 107, ಕ್ವಿಂಟನ್ ಡಿ ಕಾಕ್‌ 68; ಅರ್ಶ್‌ದೀಪ್‌ ಸಿಂಗ್‌ 62ಕ್ಕೆ2).

Ad Widget
Click to comment

Leave a Reply

ಕ್ರೀಡೆ

Vivekananda-ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನ ಭುವನ್‌ರಾಮ್ ಭಾರ ಎತ್ತುವ ಸ್ಪರ್ಧೆಯಲ್ಲಿ ವಿಟಿಯು ತಂಡಕ್ಕೆ ಆಯ್ಕೆ

Published

on

Ad Widget

Ad Widget

Ad Widget

Ad Widget

ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಭುವನ್‌ರಾಮ್ ಜಗದೀಶ್ ಭಂಡಾರಿ ಇವರು ಅಖಿಲ ಭಾರತ ದಕ್ಷಿಣ ವಲಯ ಅಂತರ್ ವಿಶ್ವವಿದ್ಯಾನಿಲಯ ಭಾರ ಎತ್ತುವ ಸ್ಪರ್ಧೆಯಲ್ಲಿ 75 ಕೆಜಿ ವಿಭಾಗದಲ್ಲಿ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯ ತಂಡಕ್ಕೆ ಆಯ್ಕೆಯಾಗಿದ್ದಾರೆ.

Ad Widget

Ad Widget

Ad Widget

Ad Widget

ಪುತ್ತೂರು: ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಭುವನ್‌ರಾಮ್ ಜಗದೀಶ್ ಭಂಡಾರಿ ಇವರು ಅಖಿಲ ಭಾರತ ದಕ್ಷಿಣ ವಲಯ ಅಂತರ್ ವಿಶ್ವವಿದ್ಯಾನಿಲಯ ಭಾರ ಎತ್ತುವ ಸ್ಪರ್ಧೆಯಲ್ಲಿ 75 ಕೆಜಿ ವಿಭಾಗದಲ್ಲಿ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯ ತಂಡಕ್ಕೆ ಆಯ್ಕೆಯಾಗಿದ್ದಾರೆ.

Ad Widget

Ad Widget alt="Ad Widget"/>

Ad Widget

ಅಂತಿಮ ವರ್ಷದ ಮೆಕ್ಯಾನಿಕಲ್ ಇಂಜಿನಿಯರಿಂಗ್ ವಿಭಾಗದ ವಿದ್ಯಾರ್ಥಿಯಾಗಿರುವ ಇವರು ಚೆನ್ನೈನ ವಿನಾಯಕ ಮಿಶನ್ಸ್ ರೀಸರ್ಚ್ ಫೌಂಡೇಶನ್ ಆಶ್ರಯದಲ್ಲಿ ನವೆಂಬರ್ 21 ರಿಂದ 23 ರವರೆಗೆ ನಡೆಯುವ ಈ ಸ್ಪರ್ಧೆಯಲ್ಲಿ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯವನ್ನು ಪ್ರತಿನಿಧಿಸಲಿದ್ದಾರೆ.

Ad Widget

Ad Widget <> Ad Widget

ಇವರಿಗೆ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಬಾಲಚಂದ್ರ ಗೌಡ ಭಾರ್ತಿಕುಮೇರು ಮಾರ್ಗದರ್ಶನವನ್ನು ನೀಡಿದ್ದಾರೆ ಎಂದು ಪ್ರಾಂಶುಪಾಲ ಡಾ.ಪುರುಷೋತ್ತಮ ಚಿಪ್ಪಾರ್ ತಿಳಿಸಿದ್ದಾರೆ.

Ad Widget
Continue Reading

ಕ್ರೀಡೆ

IPL 2027-ಐಪಿಎಲ್ 2027 ಮಿನಿ ಹರಾಜು ಡಿ.16ಕ್ಕೆ ಫಿಕ್ಸ್: ಆರ್‌ಸಿಬಿ ಸೇರಿ 10 ತಂಡಗಳ ಪರ್ಸ್ ವಿವರ ಇಲ್ಲಿದೆ..

Published

on

Ad Widget

Ad Widget

Ad Widget

Ad Widget

ಐಪಿಎಲ್ 2027ರ ಮಿನಿ ಹರಾಜಿಗೆ ಸಿದ್ಧತೆಗಳು ಪೂರ್ಣಗೊಂಡಿದ್ದು, ಎಲ್ಲಾ 10 ಫ್ರಾಂಚೈಸಿಗಳು ತಾವು ಉಳಿಸಿಕೊಂಡಿರುವ ಹಾಗೂ ಬಿಡುಗಡೆ ಮಾಡಿರುವ ಆಟಗಾರರ ಅಂತಿಮ ಪಟ್ಟಿಯನ್ನು ನವೆಂಬರ್ 17ರ ಗಡುವಿನೊಳಗೆ ಬಿಸಿಸಿಐಗೆ ಸಲ್ಲಿಸಿವೆ. ಕಳೆದ ಕೆಲವು ತಿಂಗಳುಗಳಿಂದ ನಡೆಯುತ್ತಿದ್ದ ಆಟಗಾರರ ರಿಟೆನ್ಷನ್ ಮತ್ತು ಟ್ರೇಡಿಂಗ್ ಪ್ರಕ್ರಿಯೆ ಮುಕ್ತಾಯಗೊಂಡಿದ್ದು, ಇದೀಗ ಹರಾಜಿನಲ್ಲಿ ಯಾವ ತಂಡದ ಬಳಿ ಎಷ್ಟು ಹಣ ಉಳಿದಿದೆ ಮತ್ತು ಎಷ್ಟು ಆಟಗಾರರನ್ನು ಖರೀದಿಸಲು ಅವಕಾಶವಿದೆ ಎಂಬ ಲೆಕ್ಕಾಚಾರ ಬಹಿರಂಗವಾಗಿದೆ.

Ad Widget

Ad Widget

Ad Widget

Ad Widget

ಬೆಂಗಳೂರು, ನ.18: ಐಪಿಎಲ್ 2027ರ ಮಿನಿ ಹರಾಜಿಗೆ ಸಿದ್ಧತೆಗಳು ಪೂರ್ಣಗೊಂಡಿದ್ದು, ಎಲ್ಲಾ 10 ಫ್ರಾಂಚೈಸಿಗಳು ತಾವು ಉಳಿಸಿಕೊಂಡಿರುವ ಹಾಗೂ ಬಿಡುಗಡೆ ಮಾಡಿರುವ ಆಟಗಾರರ ಅಂತಿಮ ಪಟ್ಟಿಯನ್ನು ನವೆಂಬರ್ 17ರ ಗಡುವಿನೊಳಗೆ ಬಿಸಿಸಿಐಗೆ ಸಲ್ಲಿಸಿವೆ. ಕಳೆದ ಕೆಲವು ತಿಂಗಳುಗಳಿಂದ ನಡೆಯುತ್ತಿದ್ದ ಆಟಗಾರರ ರಿಟೆನ್ಷನ್ ಮತ್ತು ಟ್ರೇಡಿಂಗ್ ಪ್ರಕ್ರಿಯೆ ಮುಕ್ತಾಯಗೊಂಡಿದ್ದು, ಇದೀಗ ಹರಾಜಿನಲ್ಲಿ ಯಾವ ತಂಡದ ಬಳಿ ಎಷ್ಟು ಹಣ ಉಳಿದಿದೆ ಮತ್ತು ಎಷ್ಟು ಆಟಗಾರರನ್ನು ಖರೀದಿಸಲು ಅವಕಾಶವಿದೆ ಎಂಬ ಲೆಕ್ಕಾಚಾರ ಬಹಿರಂಗವಾಗಿದೆ.

Ad Widget

Ad Widget alt="Ad Widget"/>

Ad Widget

ಲಕ್ನೋ ಸೂಪರ್ ಜೈಂಟ್ಸ್ ಬಳಿ ಅತಿ ಹೆಚ್ಚು ಹಣ!
ಐಪಿಎಲ್ 2027ರ ಮಿನಿ ಹರಾಜಿನಲ್ಲಿ ಲಕ್ನೋ ಸೂಪರ್ ಜೈಂಟ್ಸ್ ತಂಡ ಅತಿ ಹೆಚ್ಚು ಹಣದೊಂದಿಗೆ ಕಣಕ್ಕಿಳಿಯಲಿದೆ. ಆಟಗಾರರನ್ನು ಉಳಿಸಿಕೊಂಡ ಬಳಿಕ ತಂಡದ ಪರ್ಸ್‌ನಲ್ಲಿ ಬರೋಬ್ಬರಿ ₹47.45 ಕೋಟಿ ಉಳಿದಿದೆ.

Ad Widget

Ad Widget <> Ad Widget

ಕೋಲ್ಕತ್ತಾ ನೈಟ್ ರೈಡರ್ಸ್ ₹41.65 ಕೋಟಿ ಹಾಗೂ ಸನ್‌ರೈಸರ್ಸ್ ಹೈದರಾಬಾದ್ ₹40.15 ಕೋಟಿ ಹಣದೊಂದಿಗೆ ನಂತರದ ಸ್ಥಾನಗಳಲ್ಲಿವೆ. ಡೆಲ್ಲಿ ಕ್ಯಾಪಿಟಲ್ಸ್ ಬಳಿ ₹39.50 ಕೋಟಿ ಹಾಗೂ ಮುಂಬೈ ಇಂಡಿಯನ್ಸ್ ಬಳಿ ₹32.60 ಕೋಟಿ ಹಣವಿದೆ.

ಇನ್ನೊಂದೆಡೆ, ಗುಜರಾತ್ ಟೈಟಾನ್ಸ್ ತಂಡದ ಬಳಿ ಕೇವಲ ₹8.75 ಕೋಟಿ ಮಾತ್ರ ಉಳಿದಿದ್ದು, 10 ತಂಡಗಳ ಪೈಕಿ ಅತ್ಯಂತ ಕಡಿಮೆ ಮೊತ್ತ ಹೊಂದಿರುವ ತಂಡವಾಗಿದೆ.

Ad Widget

Ad Widget

ಡೆಲ್ಲಿ, ಮುಂಬೈಗೆ ಹೆಚ್ಚು ಆಟಗಾರರ ಖರೀದಿ ಅವಕಾಶ
ಖಾಲಿ ಇರುವ ಆಟಗಾರರ ಸ್ಥಾನಗಳ ಲೆಕ್ಕಾಚಾರದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಮತ್ತು ಮುಂಬೈ ಇಂಡಿಯನ್ಸ್ ತಂಡಗಳು ಮುಂಚೂಣಿಯಲ್ಲಿವೆ. ಈ ಎರಡೂ ತಂಡಗಳು ತಲಾ 9 ಆಟಗಾರರನ್ನು ಖರೀದಿಸಲು ಅವಕಾಶ ಹೊಂದಿವೆ.

ಕೋಲ್ಕತ್ತಾ ನೈಟ್ ರೈಡರ್ಸ್ 8, ಲಕ್ನೋ ಸೂಪರ್ ಜೈಂಟ್ಸ್ ಮತ್ತು ಸನ್‌ರೈಸರ್ಸ್ ಹೈದರಾಬಾದ್ ತಲಾ 7 ಆಟಗಾರರನ್ನು ಖರೀದಿಸಬಹುದು. ಚೆನ್ನೈ ಸೂಪರ್ ಕಿಂಗ್ಸ್, ರಾಜಸ್ಥಾನ್ ರಾಯಲ್ಸ್ ಮತ್ತು ಪಂಜಾಬ್ ಕಿಂಗ್ಸ್ ತಂಡಗಳಲ್ಲಿ ತಲಾ 6 ಸ್ಥಾನಗಳು ಖಾಲಿಯಿವೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ 6 ಆಟಗಾರರನ್ನು ಖರೀದಿಸುವ ಅವಕಾಶವಿದ್ದು, ಗುಜರಾತ್ ಟೈಟಾನ್ಸ್ ತಂಡದಲ್ಲಿ ಕೇವಲ 3 ಸ್ಥಾನಗಳು ಮಾತ್ರ ಖಾಲಿಯಿವೆ.

10 ತಂಡಗಳ ಪರ್ಸ್ ಮೊತ್ತ ಮತ್ತು ಖಾಲಿ ಸ್ಥಾನಗಳ ವಿವರ
ತಂಡ ಉಳಿದ ಹಣ ಖಾಲಿ ಸ್ಥಾನ ವಿದೇಶಿ ಆಟಗಾರರ ಸ್ಥಾನ
ಲಕ್ನೋ ಸೂಪರ್ ಜೈಂಟ್ಸ್ ₹47.45 ಕೋಟಿ 7 3
ಕೋಲ್ಕತ್ತಾ ನೈಟ್ ರೈಡರ್ಸ್ ₹41.65 ಕೋಟಿ 8 3
ಸನ್‌ರೈಸರ್ಸ್ ಹೈದರಾಬಾದ್ ₹40.15 ಕೋಟಿ 7 3
ಡೆಲ್ಲಿ ಕ್ಯಾಪಿಟಲ್ಸ್ ₹39.50 ಕೋಟಿ 9 4
ಮುಂಬೈ ಇಂಡಿಯನ್ಸ್ ₹32.60 ಕೋಟಿ 9 2
ಚೆನ್ನೈ ಸೂಪರ್ ಕಿಂಗ್ಸ್ ₹28.05 ಕೋಟಿ 6 2
ರಾಜಸ್ಥಾನ್ ರಾಯಲ್ಸ್ ₹27.05 ಕೋಟಿ 6 2
ಪಂಜಾಬ್ ಕಿಂಗ್ಸ್ ₹18.60 ಕೋಟಿ 6 2
ರಾಯಲ್ ಚಾಲೆಂಜರ್ಸ್ ಬೆಂಗಳೂರು ₹14.15 ಕೋಟಿ 6 1
ಗುಜರಾತ್ ಟೈಟಾನ್ಸ್ ₹8.75 ಕೋಟಿ 3 2

ಡಿಸೆಂಬರ್ 16ರಂದು ಗೋವಾದಲ್ಲಿ ಮಿನಿ ಹರಾಜು
ಐಪಿಎಲ್ 2027ರ ಮಿನಿ ಹರಾಜು ಡಿಸೆಂಬರ್ 16, 2026ರಂದು ಗೋವಾದಲ್ಲಿ ನಡೆಯಲಿದೆ. ಈ ಹರಾಜಿನಲ್ಲಿ ಎಲ್ಲಾ 10 ತಂಡಗಳು ತಮ್ಮ ತಂಡಕ್ಕೆ ಅಗತ್ಯವಿರುವ ಆಟಗಾರರನ್ನು ಖರೀದಿಸಲು ಪೈಪೋಟಿ ನಡೆಸಲಿವೆ.

2025ರಿಂದ 2027ರವರೆಗಿನ ಮೂರು ವರ್ಷಗಳ ಅವಧಿಯ ಆರಂಭದಲ್ಲಿ ಪ್ರತಿ ತಂಡಕ್ಕೆ ಆಟಗಾರರ ಖರೀದಿಗಾಗಿ ₹120 ಕೋಟಿ ಪರ್ಸ್ ನಿಗದಿಪಡಿಸಲಾಗಿತ್ತು. ನಿಯಮದ ಪ್ರಕಾರ ಪ್ರತಿ ಮಿನಿ ಹರಾಜಿಗೂ ಮುನ್ನ ಈ ಮೊತ್ತಕ್ಕೆ ಹೆಚ್ಚುವರಿಯಾಗಿ ₹5 ಕೋಟಿ ಸೇರ್ಪಡೆಯಾಗುತ್ತದೆ. ಹೀಗಾಗಿ 2027ರ ಮಿನಿ ಹರಾಜಿನಲ್ಲಿ ಪ್ರತಿ ತಂಡದ ಒಟ್ಟು ಪರ್ಸ್ ಮೊತ್ತ ₹130 ಕೋಟಿಗೆ ಏರಿಕೆಯಾಗಲಿದೆ.

ಡಿಸೆಂಬರ್ 16ರಂದು ನಡೆಯಲಿರುವ ಹರಾಜಿನಲ್ಲಿ ಯಾವ ತಂಡ ಯಾವ ಸ್ಟಾರ್ ಆಟಗಾರರನ್ನು ತನ್ನ ತೆಕ್ಕೆಗೆ ತೆಗೆದುಕೊಳ್ಳಲಿದೆ ಮತ್ತು ಯಾವ ತಂಡ ಬಲಿಷ್ಠ ಪಡೆಯನ್ನು ಕಟ್ಟಲಿದೆ ಎಂಬ ಕುತೂಹಲ ಕ್ರಿಕೆಟ್ ಅಭಿಮಾನಿಗಳಲ್ಲಿ ಮನೆಮಾಡಿದೆ.

Ad Widget
Continue Reading

ಅಂತರ ರಾಜ್ಯ

Mohammed Shami: ಟೆಸ್ಟ್ ಕ್ರಿಕೆಟ್‌ಗೆ ವಿದಾಯ ಹೇಳಿದ ಟೀಂ ಇಂಡಿಯಾ ವೇಗಿ ಮೊಹಮ್ಮದ್ ಶಮಿ

Published

on

Ad Widget

Ad Widget

Ad Widget

Ad Widget

ಟೀಂ ಇಂಡಿಯಾದ ಅನುಭವಿ ವೇಗದ ಬೌಲರ್ ಮೊಹಮ್ಮದ್ ಶಮಿ ಟೆಸ್ಟ್ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ್ದಾರೆ. ಸದ್ಯ ಭಾರತ ತಂಡದಲ್ಲಿ ಸ್ಥಾನ ಪಡೆಯದಿರುವ ಶಮಿ, ಶುಕ್ರವಾರ ಇನ್‌ಸ್ಟಾಗ್ರಾಂನಲ್ಲಿ ಭಾವನಾತ್ಮಕ ಸಂದೇಶವೊಂದನ್ನು ಹಂಚಿಕೊಳ್ಳುವ ಮೂಲಕ ತಮ್ಮ ಟೆಸ್ಟ್ ಕ್ರಿಕೆಟ್ ಪಯಣಕ್ಕೆ ತೆರೆ ಎಳೆದಿದ್ದಾರೆ.

Ad Widget

Ad Widget

Ad Widget

Ad Widget

ಹೊಸದಿಲ್ಲಿ: ಟೀಂ ಇಂಡಿಯಾದ ಅನುಭವಿ ವೇಗದ ಬೌಲರ್ ಮೊಹಮ್ಮದ್ ಶಮಿ ಟೆಸ್ಟ್ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ್ದಾರೆ. ಸದ್ಯ ಭಾರತ ತಂಡದಲ್ಲಿ ಸ್ಥಾನ ಪಡೆಯದಿರುವ ಶಮಿ, ಶುಕ್ರವಾರ ಇನ್‌ಸ್ಟಾಗ್ರಾಂನಲ್ಲಿ ಭಾವನಾತ್ಮಕ ಸಂದೇಶವೊಂದನ್ನು ಹಂಚಿಕೊಳ್ಳುವ ಮೂಲಕ ತಮ್ಮ ಟೆಸ್ಟ್ ಕ್ರಿಕೆಟ್ ಪಯಣಕ್ಕೆ ತೆರೆ ಎಳೆದಿದ್ದಾರೆ.

Ad Widget

Ad Widget alt="Ad Widget"/>

Ad Widget

‘ನಾನು ಬಿಳಿ ಜೆರ್ಸಿಗೆ ವಿದಾಯ ಹೇಳುತ್ತಿದ್ದೇನೆ. ಆದರೆ ಅದರೊಂದಿಗೆ ಬೆಸೆದುಕೊಂಡಿರುವ ನೆನಪುಗಳಿಗೆ ಎಂದಿಗೂ ವಿದಾಯ ಹೇಳುವುದಿಲ್ಲ’ ಎಂದು ಶಮಿ ತಮ್ಮ ನಿವೃತ್ತಿ ನಿರ್ಧಾರವನ್ನು ಪ್ರಕಟಿಸಿದ್ದಾರೆ.

Ad Widget

Ad Widget <> Ad Widget

ಭಾರತದ ಟೆಸ್ಟ್ ಜೆರ್ಸಿಯನ್ನು ಮೊದಲ ಬಾರಿಗೆ ಧರಿಸಿದ ಕ್ಷಣವನ್ನು ನೆನಪಿಸಿಕೊಂಡಿರುವ ಅವರು, ‘ಮೊದಲ ಬಾರಿಗೆ ಭಾರತದ ಟೆಸ್ಟ್ ಜೆರ್ಸಿ ಧರಿಸಿದಾಗ ನನ್ನಲ್ಲಿದ್ದದ್ದು ಒಂದೇ ಕನಸು. ನನ್ನ ದೇಶಕ್ಕಾಗಿ ಏನಾದರೂ ಮಾಡಬೇಕು ಎಂಬುದಾಗಿತ್ತು. ಅಂದಿನಿಂದ ಪ್ರತಿಯೊಂದು ವಿಕೆಟ್, ಪ್ರತಿಯೊಂದು ಹೋರಾಟ, ಪ್ರತಿಯೊಂದು ಗಾಯ ಹಾಗೂ ಪ್ರತಿಯೊಂದು ಪುನರಾಗಮನವೂ ನನಗೆ ಹೊಸ ಪಾಠ ಕಲಿಸಿದೆ’ ಎಂದು ಬರೆದುಕೊಂಡಿದ್ದಾರೆ.

ಟೆಸ್ಟ್ ಕ್ರಿಕೆಟ್ ನನ್ನ ಜೀವನದ ವಿಶೇಷ ಭಾಗವಾಗಿತ್ತು
‘ನನ್ನ ಪಾಲಿಗೆ ಟೆಸ್ಟ್ ಕ್ರಿಕೆಟ್ ಕೇವಲ ಒಂದು ಮಾದರಿಯಾಗಿರಲಿಲ್ಲ. ಅದು ನನ್ನ ಜೀವನದ ಅತ್ಯಂತ ವಿಶೇಷ ಭಾಗವಾಗಿತ್ತು. ಇಂದು ಭಾರವಾದ ಹೃದಯ ಹಾಗೂ ಅಸಂಖ್ಯಾತ ಸುಂದರ ನೆನಪುಗಳೊಂದಿಗೆ ಟೆಸ್ಟ್ ಕ್ರಿಕೆಟ್‌ನಿಂದ ನಿವೃತ್ತಿಯಾಗುವ ನಿರ್ಧಾರ ಕೈಗೊಂಡಿದ್ದೇನೆ’ ಎಂದು ತಮ್ಮ ಭಾವನೆಗಳನ್ನು ವ್ಯಕ್ತಪಡಿಸಿದ್ದಾರೆ.

Ad Widget

Ad Widget

ಇದೇ ವೇಳೆ, ತಮ್ಮ ಕ್ರಿಕೆಟ್ ಪಯಣದಲ್ಲಿ ಬೆಂಬಲವಾಗಿ ನಿಂತ ಸಹ ಆಟಗಾರರು, ತರಬೇತುದಾರರು ಹಾಗೂ ಕುಟುಂಬ ಸದಸ್ಯರಿಗೆ ಶಮಿ ಹೃದಯಪೂರ್ವಕ ಧನ್ಯವಾದ ಸಲ್ಲಿಸಿದ್ದಾರೆ. ಒಳ್ಳೆಯ ಹಾಗೂ ಕಷ್ಟದ ಸಮಯಗಳಲ್ಲೂ ತಮ್ಮ ಮೇಲೆ ನಂಬಿಕೆ ಇಟ್ಟ ಲಕ್ಷಾಂತರ ಭಾರತೀಯ ಅಭಿಮಾನಿಗಳಿಗೂ ಕೃತಜ್ಞತೆ ತಿಳಿಸಿದ್ದಾರೆ.

ತಮ್ಮ ಪ್ರತಿಭೆಯನ್ನು ಗುರುತಿಸಿ, ಬೆಳೆಯಲು ಅವಕಾಶ ನೀಡಿದ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಹಾಗೂ ಕ್ರಿಕೆಟ್ ಅಸೋಸಿಯೇಷನ್ ಆಫ್ ಬೆಂಗಾಲ್ (ಸಿಎಬಿ) ಸಂಸ್ಥೆಗಳಿಗೂ ಧನ್ಯವಾದ ಅರ್ಪಿಸಿದ್ದಾರೆ. ಈ ಸಂಸ್ಥೆಗಳು ನೀಡಿದ ಬೆಂಬಲ ಹಾಗೂ ವಿಶ್ವಾಸ ಸದಾ ತಮ್ಮ ಪಾಲಿಗೆ ವಿಶೇಷವಾಗಿರಲಿದೆ ಎಂದು ಹೇಳಿದ್ದಾರೆ.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!