Connect with us

ಅಪರಾಧ

ಪುತ್ತೂರು : ಲಾರಿ ಮತ್ತು ಆಕ್ಟಿವಾ ನಡುವೆ ಭೀಕರ ಅಪಘಾತ – ಸವಾರರಿಬ್ಬರು ಗಂಭೀರ | ಜೀವ ಉಳಿಸಿದ ಹೆಲ್ಮೆಟ್

Published

on



Ad Widget

Ad Widget

Ad Widget

Ad Widget

ಲಾರಿ ಮತ್ತು ಆಕ್ಟಿವಾ ನಡುವೆ ಭೀಕರ ಅಪಘಾತ ನಡೆದು ಇಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ಪುತ್ತೂರಿನ ಹೊರ ವಲಯ ಮೊಟ್ಟೆತಡ್ಕ ಎಂಬಲ್ಲಿ ಇಂದು ( ನ 9) ರಂದು ಸಂಜೆ ನಡೆದಿದೆ.

Ad Widget

Ad Widget

Ad Widget

Ad Widget

ಕುರಿಯ ಬಳ್ಳಮಜಲು ನಿವಾಸಿ ನಾರಾಯಣ ನಾಯ್ಕ ಎಂಬವರು ದ್ವಿಚಕ್ರ ವಾಹನ ಚಲಾಯಿಸುತ್ತಿದ್ದು ಅವರು ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಅವರ ಜತೆ ಸವಾರ ಕುರಿಯ ಬಳ್ಳಮಜಲು ನಿವಾಸಿ ವಸಂತ ರೈ ಯವರು ಕೂಡ ಗಂಭೀರವಾಗಿ ಗಾಯಗೊಂಡಿದ್ದರು .

Ad Widget

Ad Widget

Ad Widget alt="Ad Widget"/>

Ad Widget

ದ್ವಿ ಚಕ್ರ ವಾಹನ ಸವಾರರಿಬ್ಬರು ಗಾರೆ ಕೆಲಸದವರಾಗಿದ್ದು ಸೆಂಟ್ರಿಗ್‌ ಕೆಲಸಕ್ಕೆ ಹೋಗಿ ಪುತ್ತೂರಿನಿಂದ ವಾಪಸ್ಸು ಕುರಿಯಕ್ಕೆ ಬರುತಿದ್ದಾಗ ಮೊಟ್ಟೆತಡ್ಕದ ಎನ್‌ ಅರ್‌ ಸಿಸಿ ಹೆಲಿಪ್ಯಾಡ್‌ ಬಳಿ ಪಂಜಳದಿಂದ ಪುತ್ತೂರು ಕಡೆಗೆ ಬರುತ್ತಿದ್ದ ಟಿಪ್ಪರ್‌ ಲಾರಿಗೆ ಡಿಕ್ಕಿ ಹೊಡೆದಿದೆ.

Ad Widget

Ad Widget <> Ad Widget

ಡಿಕ್ಕಿಯ ರಬ್ಬಸಕ್ಕೆ ಕುರಿಯ ಕಡೆ ತೆರಳುತಿದ್ದ ದ್ವಿ ಚಹಕ್ರ ವಾಹನ ಅದರ ವಿರುದ್ದ ದಿಕ್ಕು ಅಂದರೇ ಪುತ್ತೂರು ಕಡೆ ಮುಖ ಮಾಡಿ ನಿಂತಿತ್ತು. ಆಕ್ಟಿವಾದಲ್ಲಿದ್ದ ಇಬ್ಬರು ಸವಾರರು ಬಲವಾಗಿ ರಸ್ತೆಗೆ ಅಪ್ಪಳಿಸಿದ್ದು ಇದರಿಂದ ಕಾಲು ತುಂಡಾಗಿದೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.



Ad Widget

ಸವಾರಿಬ್ಬರು ಹೆಲ್ಮೇಟ್‌ ಧರಿಸಿದ್ದು ಹೀಗಾಗಿ ತಲೆ ಭಾಗಕ್ಕೆ ಯಾವುದೇ ಪೆಟ್ಟಾಗದೇ ಪ್ರಾಣಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ. ಬಿದ್ದ ರಭಸಕ್ಕೆ ಅವರು ಧರಿಸಿದ್ದ ಹೆಲ್ಮೆಟ್‌ ಕೂಡ ಸಂಪೂರ್ಣ ಹಾನಿಗೊಂಡಿತ್ತು. ಹಾಗಾಗಿಯೂ ಹೆಲ್ಮೇಟ್‌ ಧರಿಸಿದ್ದರಿಂದ ತಲೆಯ ಭಾಗಕ್ಕೆ ಯಾವುದೇ ಹಾನಿಯಾಗಿಲ್ಲದಿರುವುದು ಹೆಲ್ಮೆಟ್‌ ಜೀವ ರಕ್ಷಕ ಮತ್ತೊಮ್ಮೆ ಸಾಭೀತಾಗಿದೆ. ಆದರೂ ವಸಂತ್‌ ರೈ ಯವರ ಸ್ಥಿತಿ ಚಿಂತಾಜನಕವಾಗಿದೆ ಎಂದು ಹೇಳಲಾಗಿದೆ.

Ad Widget

Ad Widget

ಗಾಯಾಳುಗಳನ್ನು ಮೊದಲು ಪುತ್ತೂರಿನ ಖಾಸಗಿ ಆಸ್ಫತ್ರೆಗೆ ಕರೆದುಕೊಂಡು ಹೋಗಲಾಗಿದ್ದು, ಬಳಿಕ ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿನ ಎ,ಜೆ ಆಸ್ಫತ್ರೆಗೆ ದಾಖಲಿಸಲಾಗಿದೆ.ಪುತ್ತೂರು ಸಂಚಾರಿ ಠಾಣೆಯ ಯಸ್. ಐ. ರಾಮ ನಾಯ್ಕ್ ಮತ್ತು ಸಿಬ್ಬಂದಿಗಳು ಸ್ಥಳಕ್ಕೆ ಭೇಟಿ ನೀಡಿ ದೂರು ದಾಖಲಿಸಿದ್ದಾರೆ

Ad Widget
Click to comment

Leave a Reply

ಅಂತರ ರಾಜ್ಯ

Arrested-ಕಾಸರಗೋಡು: ಮದುವೆಯ ನೆಪದಲ್ಲಿ ಹತ್ತಾರು ಯುವತಿಯರಿಗೆ ವಂಚನೆ: ಮದುವೆಯಾದ ಮೂರೇ ದಿನಕ್ಕೆ ಚಿನ್ನ, ಹಣದೊಂದಿಗೆ ಪರಾರಿ; ಆರೋಪಿ ಬಿಜು ಆಂಟನಿ ಬಂಧನ

Published

on



Ad Widget

Ad Widget

Ad Widget

Ad Widget

ವೈದ್ಯ, ಎಂಜಿನಿಯರ್ ಎಂದು ಪರಿಚಯಿಸಿಕೊಂಡು ಮದುವೆಯಾಗುವುದಾಗಿ ನಂಬಿಸಿ ಹತ್ತಾರು ಯುವತಿಯರಿಗೆ ವಂಚಿಸಿ ಚಿನ್ನಾಭರಣ ಹಾಗೂ ಹಣದೊಂದಿಗೆ ಪರಾರಿಯಾಗುತ್ತಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಮಂಜೇಶ್ವರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಅತ್ಯಾಚಾರ ಪ್ರಕರಣ ಸೇರಿದಂತೆ ಹಲವು ವಂಚನೆ ಪ್ರಕರಣಗಳಿಗೆ ಸಂಬಂಧಿಸಿದಂತೆ ವಯನಾಡು ಜಿಲ್ಲೆಯ ಮಾನಂತವಾಡಿ, ವೆಳ್ಳರ, ಚೆನ್ನಿಕ್ಕರ ನಿವಾಸಿ ಬಿಜು ಆಂಟನಿ (45) ಬಂಧಿತ ಆರೋಪಿ.

Ad Widget

Ad Widget

Ad Widget

Ad Widget

ಕಾಸರಗೋಡು: ವೈದ್ಯ, ಎಂಜಿನಿಯರ್ ಎಂದು ಪರಿಚಯಿಸಿಕೊಂಡು ಮದುವೆಯಾಗುವುದಾಗಿ ನಂಬಿಸಿ ಹತ್ತಾರು ಯುವತಿಯರಿಗೆ ವಂಚಿಸಿ ಚಿನ್ನಾಭರಣ ಹಾಗೂ ಹಣದೊಂದಿಗೆ ಪರಾರಿಯಾಗುತ್ತಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಮಂಜೇಶ್ವರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಅತ್ಯಾಚಾರ ಪ್ರಕರಣ ಸೇರಿದಂತೆ ಹಲವು ವಂಚನೆ ಪ್ರಕರಣಗಳಿಗೆ ಸಂಬಂಧಿಸಿದಂತೆ ವಯನಾಡು ಜಿಲ್ಲೆಯ ಮಾನಂತವಾಡಿ, ವೆಳ್ಳರ, ಚೆನ್ನಿಕ್ಕರ ನಿವಾಸಿ ಬಿಜು ಆಂಟನಿ (45) ಬಂಧಿತ ಆರೋಪಿ.

Ad Widget

Ad Widget

Ad Widget alt="Ad Widget"/>

Ad Widget

ಚೇರ್ತಲ ಪೊಲೀಸರು ಆರೋಪಿಯನ್ನು ಬಂಧಿಸಿದ್ದು, ಸುಲ್ತಾನ್ ಬತ್ತೇರಿ ಮೂಲದ ಪತ್ನಿ ಮತ್ತು ಮಕ್ಕಳೊಂದಿಗೆ ವಾಸಿಸುತ್ತಿದ್ದ ವೇಳೆ ಆತ ಸಿಕ್ಕಿಬಿದ್ದಿದ್ದಾನೆ ಎಂದು ತಿಳಿದುಬಂದಿದೆ.

Ad Widget

Ad Widget <> Ad Widget

ವೈದ್ಯನೆಂದು ನಂಬಿಸಿ ಅತ್ಯಾಚಾರ ಆರೋಪ
ವೈದ್ಯನೆಂದು ಪರಿಚಯಿಸಿಕೊಂಡು ತಳಿಪರಂಬ ಮೂಲದ ಯುವತಿಯೊಬ್ಬಳನ್ನು ಮಂಜೇಶ್ವರದ ಹೊಸಂಗಡಿಯ ಲಾಡ್ಜ್‌ಗೆ ಕರೆದೊಯ್ದು ಅತ್ಯಾಚಾರ ಎಸಗಿದ ಆರೋಪ ಬಿಜು ಆಂಟನಿ ವಿರುದ್ಧವಿದೆ. ಈ ಸಂಬಂಧ ಮಂಜೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಯುವತಿಯಿಂದ ಮೂರೂವರೆ ಪವನ್ ಚಿನ್ನಾಭರಣವನ್ನೂ ಪಡೆದಿದ್ದಾನೆ ಎಂದು ಆರೋಪಿಸಲಾಗಿದೆ.



Ad Widget

ಮದುವೆಯಾದ ಮೂರೇ ದಿನಕ್ಕೆ ಪರಾರಿ
ಆರೋಪಿ 2020ರಲ್ಲಿ ತನ್ನ ವಂಚನೆಯ ಜಾಲ ಆರಂಭಿಸಿದ್ದ ಎನ್ನಲಾಗಿದೆ. ಚೇರ್ತಲ ಸಮೀಪದ ನಿವಾಸಿ ರಮ್ಯಾ ಎಂಬ ಯುವತಿಯನ್ನು ರಾಜೇಶ್ ಎಂಬ ಹೆಸರಿನಲ್ಲಿ ಮದುವೆಯಾಗಿದ್ದ ಆತ, ಮದುವೆಯಾದ ಮೂರನೇ ದಿನವೇ ₹30 ಸಾವಿರ ನಗದು ಮತ್ತು ಏಳು ಪವನ್ ಚಿನ್ನಾಭರಣ ಪಡೆದುಕೊಂಡು ಪರಾರಿಯಾಗಿದ್ದಾನೆ ಎಂದು ಆರೋಪಿಸಲಾಗಿದೆ.

Ad Widget

Ad Widget

ಈ ಸಂಬಂಧ ರಮ್ಯಾ ನೀಡಿದ ದೂರಿನ ಮೇರೆಗೆ ಚೇರ್ತಲ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದರು. ಆದರೆ, ಆರೋಪಿಯನ್ನು ಪತ್ತೆಹಚ್ಚಲು ಸಾಧ್ಯವಾಗಿರಲಿಲ್ಲ. ಇದೀಗ ಸುಮಾರು ಆರು ವರ್ಷಗಳ ಬಳಿಕ ಅದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜು ಆಂಟನಿಯನ್ನು ಬಂಧಿಸಲಾಗಿದೆ.

ಬೇರೆ ಬೇರೆ ಹೆಸರುಗಳಲ್ಲಿ ವಂಚನೆ
ವೈದ್ಯನೆಂದು ಹೇಳಿಕೊಂಡು ಮದುವೆ ಜಾಹೀರಾತುಗಳನ್ನು ನೀಡುವ ಮೂಲಕ ಮಹಿಳೆಯರನ್ನು ಪರಿಚಯಿಸಿಕೊಳ್ಳುತ್ತಿದ್ದ ಆರೋಪಿ, ಬಳಿಕ ಮದುವೆಯಾಗುವುದಾಗಿ ನಂಬಿಸಿ ಅವರಿಂದ ಚಿನ್ನಾಭರಣ ಹಾಗೂ ಹಣ ಪಡೆದು ಪರಾರಿಯಾಗುತ್ತಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

ವಿವಿಧ ಸ್ಥಳಗಳಲ್ಲಿ ಬೇರೆ ಬೇರೆ ಹೆಸರುಗಳನ್ನು ಬಳಸಿಕೊಂಡು ಮಹಿಳೆಯರಿಗೆ ವಂಚಿಸುತ್ತಿದ್ದ ಎಂಬುದು ಪೊಲೀಸ್ ತನಿಖೆಯಿಂದ ತಿಳಿದುಬಂದಿದೆ. ಆರೋಪಿಯ ವಿರುದ್ಧದ ಪ್ರಕರಣಗಳ ಕುರಿತು ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.

Ad Widget
Continue Reading

ಅಪರಾಧ

Puttur-ಪುತ್ತೂರು: ಅಕ್ರಮ ಗೋ ಸಾಗಾಟ ಪ್ರಕರಣ; ಪರಾರಿಯಾಗಿದ್ದ ಇಬ್ಬರು ವಶಕ್ಕೆ, ಆರೋಪಿ ಶಿವಪ್ರಸಾದ್ ಮನೆ ಮಹಜರು?

Published

on



Ad Widget

Ad Widget

Ad Widget

Ad Widget

ಪಿಕಪ್ ವಾಹನದಲ್ಲಿ 11 ಜಾನುವಾರುಗಳನ್ನು ಹಿಂಸಾತ್ಮಕ ರೀತಿಯಲ್ಲಿ ತುಂಬಿಸಿ, ಅಗತ್ಯ ಪರವಾನಿಗೆ ಇಲ್ಲದೆ ಕೇರಳದ ಕಡೆಗೆ ಸಾಗಿಸುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿ, ಪೊಲೀಸ್ ಕಾರ್ಯಾಚರಣೆ ವೇಳೆ ಪರಾರಿಯಾಗಿದ್ದ ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಜಾನುವಾರುಗಳನ್ನು ಪರವಾನಿಗೆ ಇಲ್ಲದೆ ಮಾರಾಟ ಮಾಡಿದ ಆರೋಪದ ಮೇಲೆ ಬಂಧಿತನಾಗಿರುವ ಆರ್ಯಾಪು ನಿವಾಸಿ ಶಿವಪ್ರಸಾದ್‌ಗೆ ಸೇರಿದ ದೇವಸ್ಯದಲ್ಲಿರುವ ಮನೆಯನ್ನು ಪೊಲೀಸರು ಮಹಜರು ನಡೆಸಲಿದ್ದಾರೆ ಎಂದು ತಿಳಿದುಬಂದಿದೆ.

Ad Widget

Ad Widget

Ad Widget

Ad Widget

ಪುತ್ತೂರು: ಪಿಕಪ್ ವಾಹನದಲ್ಲಿ 11 ಜಾನುವಾರುಗಳನ್ನು ಹಿಂಸಾತ್ಮಕ ರೀತಿಯಲ್ಲಿ ತುಂಬಿಸಿ, ಅಗತ್ಯ ಪರವಾನಿಗೆ ಇಲ್ಲದೆ ಕೇರಳದ ಕಡೆಗೆ ಸಾಗಿಸುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿ, ಪೊಲೀಸ್ ಕಾರ್ಯಾಚರಣೆ ವೇಳೆ ಪರಾರಿಯಾಗಿದ್ದ ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಜಾನುವಾರುಗಳನ್ನು ಪರವಾನಿಗೆ ಇಲ್ಲದೆ ಮಾರಾಟ ಮಾಡಿದ ಆರೋಪದ ಮೇಲೆ ಬಂಧಿತನಾಗಿರುವ ಆರ್ಯಾಪು ನಿವಾಸಿ ಶಿವಪ್ರಸಾದ್‌ಗೆ ಸೇರಿದ ದೇವಸ್ಯದಲ್ಲಿರುವ ಮನೆಯನ್ನು ಪೊಲೀಸರು ಮಹಜರು ನಡೆಸಿದ್ದಾರೆ ಎಂದು ಹೇಳಲಾಗುತ್ತಿದೆ. ಆದರೇ ಪೊಲೀಸ್‌ ಇಲಾಖೆ ಅದನ್ನು ಖಚಿತ ಪಡಿಸಿಲ್ಲ.

Ad Widget

Ad Widget

Ad Widget alt="Ad Widget"/>

Ad Widget

ಬಲ್ನಾಡಿನಲ್ಲಿ 11 ಜಾನುವಾರುಗಳ ರಕ್ಷಣೆ
ಕೇರಳದ ಕಡೆಗೆ ಅಕ್ರಮವಾಗಿ ಜಾನುವಾರುಗಳನ್ನು ಸಾಗಿಸಲಾಗುತ್ತಿದೆ ಎಂಬ ಮಾಹಿತಿ ಮೇರೆಗೆ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯ ಉಪನಿರೀಕ್ಷಕಿ ಸುಷ್ಮಾ ಭಂಡಾರಿ ಅವರು ಸಿಬ್ಬಂದಿಯೊಂದಿಗೆ ಬಲ್ನಾಡು ಗ್ರಾಮದ ಬೆಳೆಯೂರುಕಟ್ಟೆ ಬಳಿ ಕಾರ್ಯಾಚರಣೆ ನಡೆಸಿದ್ದರು.

Ad Widget

Ad Widget <> Ad Widget

ಈ ವೇಳೆ ಪಿಕಪ್ ವಾಹನವನ್ನು ತಡೆದು ಪರಿಶೀಲಿಸಿದಾಗ, ವಾಹನದೊಳಗೆ 11 ಜಾನುವಾರುಗಳನ್ನು ಹಿಂಸಾತ್ಮಕ ರೀತಿಯಲ್ಲಿ ತುಂಬಿಸಿರುವುದು ಪತ್ತೆಯಾಗಿತ್ತು. ಪೊಲೀಸರು ವಾಹನವನ್ನು ತಡೆದ ಸಂದರ್ಭದಲ್ಲಿ ಚಾಲಕ ಹಾಗೂ ಮತ್ತೋರ್ವ ವ್ಯಕ್ತಿ ಸ್ಥಳದಿಂದ ಪರಾರಿಯಾಗಿದ್ದರು.



Ad Widget

ಜಾನುವಾರುಗಳನ್ನು ಅಗತ್ಯ ಪರವಾನಿಗೆ ಇಲ್ಲದೆ ಮಾಂಸಕ್ಕಾಗಿ ಮಾರಾಟ ಮಾಡುವ ಉದ್ದೇಶದಿಂದ ಕೇರಳದ ಕಡೆಗೆ ಸಾಗಿಸಲಾಗುತ್ತಿತ್ತು ಎಂಬ ಆರೋಪದ ಮೇರೆಗೆ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

Ad Widget

Ad Widget

ಪರಾರಿಯಾಗಿದ್ದ ಇಬ್ಬರು ವಶಕ್ಕೆ
ಪ್ರಕರಣದ ತನಿಖೆ ಮುಂದುವರಿಸಿದ ಪೊಲೀಸರು, ಅಗತ್ಯ ಪರವಾನಿಗೆ ಇಲ್ಲದೆ ಜಾನುವಾರುಗಳನ್ನು ಮಾರಾಟ ಮಾಡಿದ ಆರೋಪದ ಮೇಲೆ ಆರ್ಯಾಪು ನಿವಾಸಿ ಶಿವಪ್ರಸಾದ್‌ನನ್ನು ಬಂಧಿಸಿದ್ದರು. ಬಳಿಕ ಪರಾರಿಯಾಗಿದ್ದ ಪಿಕಪ್ ಚಾಲಕ ಹಾಗೂ ಮತ್ತೋರ್ವ ಆರೋಪಿಯ ಪತ್ತೆಗಾಗಿ ಕಾರ್ಯಾಚರಣೆ ಮುಂದುವರಿಸಿದ್ದರು.

ಇದೀಗ ಸರೋಳಿ ನಿವಾಸಿ ಇಸ್ಮಾಯಿಲ್ ಅವರ ಪುತ್ರ ಹಸ್ಪರ್ ಅಲಿಯಾಸ್ ಅಮ್ಮಿ ಹಾಗೂ ಕದಿಲ ಗ್ರಾಮದ ಸತ್ತಿಕಲು ನಿವಾಸಿ ಅಬ್ಬಾಸ್ ಅವರ ಪುತ್ರ ಇಬ್ರಾಹಿಂ ಮಾಡಲಾ ಎಂಬಿಬ್ಬರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಜಾನುವಾರುಗಳನ್ನು ಪರವಾನಿಗೆ ಇಲ್ಲದೆ ಮಾರಾಟ ಮಾಡಿದ ಆರೋಪ ಎದುರಿಸುತ್ತಿರುವ ಶಿವಪ್ರಸಾದ್‌ಗೆ ಸೇರಿದ ಆರ್ಯಾಪು ಗ್ರಾಮದ ದೇವಸ್ಯದಲ್ಲಿರುವ ಮನೆಯನ್ನು ಪೊಲೀಸರು ಮಹಜರು ನಡೆಸಿದ್ದಾರೆ ಎಂದು ಮೂಲಗಳಿಂದ ತಿಳಿದುಬಂದಿದ್ದು ಸೀಜ್‌ ಮಾಡುವ ಅಧಿಕೃತ ಪ್ರಕ್ರಿಯೆ ಸಹಾಯಕ ಆಯುಕ್ತರ ಆದೇಶದ ಬಳಿಕ ನಡೆಯಲಿದೆ ಎಂದು ತಿಳಿದು ಬಂದಿದೆ. ಪ್ರಕರಣದ ಕುರಿತು ಹೆಚ್ಚಿನ ತನಿಖೆ ಮುಂದುವರಿದಿದೆ.

Ad Widget
Continue Reading

ಸ್ಥಳೀಯ

Navoor clinic-ನಾವೂರು ಕ್ಲಿನಿಕ್‌ಗೆ ಬೆಂಕಿ ಹಚ್ಚಿದ ಪ್ರಕರಣ: ಘಟನಾ ಸ್ಥಳಕ್ಕೆ ಎಎಸ್ಪಿ ಭೇಟಿ, ಪರಿಶೀಲನೆ

Published

on



Ad Widget

Ad Widget

Ad Widget

Ad Widget

ಡೀಸೆಲ್ ಸುರಿದು ಬೆಂಕಿ ಹಚ್ಚಲಾಗಿದ್ದ ನಾವೂರು ಆರೋಗ್ಯ ಕ್ಲಿನಿಕ್‌ಗೆ ದಕ್ಷಿಣ ಕನ್ನಡ ಜಿಲ್ಲೆಯ ಹೆಚ್ಚುವರಿ ಪೊಲೀಸ್ ಅಧೀಕ್ಷಕ ಅನಿಲ್ ಕುಮಾರ್ ಎಸ್. ಭೂಮರೆಡ್ಡಿ ಅವರು ಅ. 8ರ ಸಂಜೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

Ad Widget

Ad Widget

Ad Widget

Ad Widget

ನಾವೂರು: ಡೀಸೆಲ್ ಸುರಿದು ಬೆಂಕಿ ಹಚ್ಚಲಾಗಿದ್ದ ನಾವೂರು ಆರೋಗ್ಯ ಕ್ಲಿನಿಕ್‌ಗೆ ದಕ್ಷಿಣ ಕನ್ನಡ ಜಿಲ್ಲೆಯ ಹೆಚ್ಚುವರಿ ಪೊಲೀಸ್ ಅಧೀಕ್ಷಕ ಅನಿಲ್ ಕುಮಾರ್ ಎಸ್. ಭೂಮರೆಡ್ಡಿ ಅವರು ಅ. 8ರ ಸಂಜೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

Ad Widget

Ad Widget

Ad Widget alt="Ad Widget"/>

Ad Widget

ಈ ವೇಳೆ ಘಟನಾ ಸ್ಥಳವನ್ನು ಪರಿಶೀಲಿಸಿದ ಅವರು, ಕ್ಲಿನಿಕ್‌ನ ವೈದ್ಯ ಡಾ. ಪ್ರದೀಪ್ ಅವರಿಂದ ಘಟನೆಯ ಕುರಿತು ಮಾಹಿತಿ ಪಡೆದುಕೊಂಡರು.

Ad Widget

Ad Widget <> Ad Widget

ಪ್ರಕರಣದ ಕುರಿತು ಸಮಗ್ರ ತನಿಖೆ ನಡೆಸಿ, ಕೃತ್ಯದಲ್ಲಿ ಭಾಗಿಯಾದ ಆರೋಪಿಗಳನ್ನು ಶೀಘ್ರ ಪತ್ತೆಹಚ್ಚಿ ನ್ಯಾಯ ಒದಗಿಸುವ ಭರವಸೆಯನ್ನು ಅವರು ನೀಡಿದರು.



Ad Widget

ಈ ಸಂದರ್ಭದಲ್ಲಿ ಬೆಳ್ತಂಗಡಿ ಪೊಲೀಸ್ ಠಾಣೆಯ ಅಧಿಕಾರಿಗಳು ಹಾಗೂ ಸ್ಥಳೀಯ ಗ್ರಾಮಸ್ಥರು ಉಪಸ್ಥಿತರಿದ್ದರು.

Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!

Discover more from Nikhara News | Kannada News Website

Subscribe now to keep reading and get access to the full archive.

Continue reading