ಭೂತಾನ್‌ನಿಂದ ಅಡಿಕೆಯನ್ನು ಆಮದು ಮಾಡಿಕೊಳ್ಳಲು […]" /> ಭೂತಾನ್‌ನಿಂದ ಅಡಿಕೆಯನ್ನು ಆಮದು ಮಾಡಿಕೊಳ್ಳಲು […]"> ಭೂತಾನ್ ನಿಂದ ಅಡಿಕೆ ಆಮದು : ಕೇಂದ್ರ ಸರ್ಕಾರದ 'ವಿಶ್ವಾಸ ದ್ರೋಹ'‌ ದ ಸಾಂಕ್ರಾಮಿಕ ರೋಗ ಅಡಿಕೆ ಬೆಳೆಗಾರರನ್ನು ಆವರಿಸಿದೆ - ಸಿದ್ಧರಾಮಯ್ಯ ಆಕ್ರೋಶ - Nikhara News | Kannada News Website
Connect with us

ಸುಳ್ಯ

ಭೂತಾನ್ ನಿಂದ ಅಡಿಕೆ ಆಮದು : ಕೇಂದ್ರ ಸರ್ಕಾರದ ‘ವಿಶ್ವಾಸ ದ್ರೋಹ’‌ ದ ಸಾಂಕ್ರಾಮಿಕ ರೋಗ ಅಡಿಕೆ ಬೆಳೆಗಾರರನ್ನು ಆವರಿಸಿದೆ – ಸಿದ್ಧರಾಮಯ್ಯ ಆಕ್ರೋಶ

Published

on

Ad Widget

Ad Widget

Ad Widget

Ad Widget

ಬೆಂಗಳೂರು, ಅ 6 : ಭೂತಾನ್ ನಿಂದ ಅಡಿಕೆ ಆಮದಿಗೆ ಸಂಬಂಧಿಸಿದಂತೆ ಅಡಕೆ ಬೆಳೆಗಾರರ ಬದುಕು ನೆಲಕಚ್ಚುವಂತಾಗಿದೆ ಎಂದು ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಕೇಂದ್ರ ಸರ್ಕಾರದ ಕುರಿತು ಟೀಕಿಸಿದ್ದಾರೆ.

Ad Widget

Ad Widget

Ad Widget

Ad Widget

ಈಗಾಗಲೇ ರಾಜ್ಯದಾದ್ಯಂತ ಅಡಿಕೆ ಬೆಳೆಗೆ ಹಲವು ರೀತಿಯ ರೋಗವು ವಿಪರೀತ ಹರಡಿದ್ದು ಅಡಿಕೆ ಬೆಳೆಗಾರರು ಕಂಗಾಲಾಗಿರುವ ಹೊತ್ತಲ್ಲೇ ಕೇಂದ್ರ ಸರ್ಕಾರದ ‘ವಿಶ್ವಾಸ ದ್ರೋಹ’‌‌ದ ಸಾಂಕ್ರಾಮಿಕ ರೋಗ ಈಗ ಅಡಿಕೆ ಬೆಳೆಗಾರರನ್ನು ಆವರಿಸಿದೆ ಎಂದು ಕೇಂದ್ರ ಸರಕಾರವನ್ನು ಟೀಕಿಸಿದ್ದಾರೆ.

Ad Widget

Ad Widget alt="Ad Widget"/>

Ad Widget

ಭೂತಾನ್‌ನಿಂದ ಅಡಿಕೆಯನ್ನು ಆಮದು ಮಾಡಿಕೊಳ್ಳಲು ಕೇಂದ್ರ ಸರ್ಕಾರ ಅನುಮತಿ ನೀಡಿ ಅಧಿಸೂಚನೆ ಹೊರಡಿಸಿರುವುದು ಅಡಿಕೆ ಬೆಳೆ ಮತ್ತು ಬೆಳೆಗಾರರ ಬದುಕಿಗೆ ಬರೆ ಎಳೆದಂತಾಗಿದೆ. ಅಡಿಕೆ ಆಮದನ್ನು ಸಂಪೂರ್ಣವಾಗಿ ನಿಷೇಧಿಸಬೇಕು ಎನ್ನುವ ಬೇಡಿಕೆಗಳನ್ನು ಇಟ್ಟುಕೊಂಡು ನಾಡಿನ ಅಡಿಕೆ ಬೆಳೆಗಾರರು ಪ್ರತಿಭಟನೆಯ ಹಾದಿ ಹಿಡಿಯುತ್ತಿರುವ ಹೊತ್ತಲ್ಲೇ ಭೂತಾನ್ ಅಡಿಕೆ ಆಮದಿಗೆ ಒಪ್ಪಿಗೆ ನೀಡುವ ಮೂಲಕ ಕೇಂದ್ರ ಸರ್ಕಾರ ತನ್ನ ಸಾಂಪ್ರದಾಯಿಕ ಅಹಂಕಾರ ಮೆರೆದಿದೆ’ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Ad Widget

Ad Widget <> Ad Widget

ಕೇಂದ್ರ ಸರ್ಕಾರವು ರೈತರು, ಬೆಳೆಗಾರರ ವಿಚಾರದಲ್ಲಿ ಮೊದಲಿನಿಂದಲೂ ಅಹಂಕಾರವನ್ನೇ ಪ್ರದರ್ಶಿಸುತ್ತಿದೆ. ಕನಿಷ್ಠ ಆಮದು ಬೆಲೆಯ ಷರತ್ತು (ಎಂಐಸಿ) ಕೂಡ ವಿಧಿಸದೆ ಸದ್ಯ ಭೂತಾನ್ ಅಡಿಕೆ ಆಮದಿಗೆ ಅನುಮತಿ ನೀಡಿದೆ. ಮುಂದಿನ ದಿನಗಳಲ್ಲಿ ಇನ್ನಷ್ಟು ದೇಶಗಳಿಂದ ಅಡಿಕೆ ಆಮದಾಗುವ ಅಪಾಯದ ಹೆಬ್ಬಾಗಿಲನ್ನು ಕೇಂದ್ರ ಸರ್ಕಾರ ತೆರೆದಿಟ್ಟಿದೆ’ ಎಂದಿದ್ದಾರೆ.

ಕೇಂದ್ರ ಸರ್ಕಾರ, ವಿದೇಶಿ ಅಡಿಕೆಯ ಆಮದಿನ ಮೇಲಿನ ಅಬಕಾರಿ ಸುಂಕವನ್ನು ಶೇ110 ರಷ್ಟು ಕಡಿಮೆ ಮಾಡಿ, ನಮ್ಮ ರೈತರು ಬೆಳೆಯುವ ಅಡಿಕೆ ಮೇಲಿನ ಜಿಎಸ್‌ಟಿ ಹೆಚ್ಚಳ ಮಾಡಲು ಮುಂದಾದಾಗಲೂ ನಾನು ಎಚ್ಚರಿಕೆ ನೀಡಿದ್ದೆ.
ಈ ಬಗ್ಗೆ ರಾಜ್ಯ ಸರ್ಕಾರ ಕೂಡಲೇ ಮಧ್ಯ ಪ್ರವೇಶಿಸಿ ಬೆಳೆಗಾರರ ಸಂಕಷ್ಟವನ್ನು ಕೇಂದ್ರಕ್ಕೆ ಮನವರಿಕೆ ಮಾಡಿಸುವಂತೆ ಆಗ್ರಹಿಸಿಯೂ ಇದ್ದೆ.

Ad Widget

Ad Widget

ಆದರೆ ಪ್ರೊಬೇಷನರಿ ಮುಖ್ಯಮಂತ್ರಿ ಮತ್ತು ಸಂಪುಟಕ್ಕೆ ರಾಜ್ಯದ ರೈತರ ಸಂಕಷ್ಟವನ್ನು ಕೇಂದ್ರಕ್ಕೆ ತಲುಪಿಸುವ ಶಕ್ತಿ ಇಲ್ಲವಾಗಿದೆ ಎನ್ನುವುದು ಮತ್ತೊಮ್ಮೆ ಸಾಬೀತಾಗಿದೆ’ ಎಂದು ಆಕ್ರೋಶ ಹೊರ ಹಾಕಿದರು.

‘ಮಲೆನಾಡಿನ ರೈತರು ಮತ್ತು ಅಡಿಕೆ ಬೆಳೆಗಾರರು ಆ ಜಿಲ್ಲೆಗಳ ಪ್ರವಾಹ ಪರಿಸ್ಥಿತಿ ವೀಕ್ಷಣೆಗೆ ತೆರಳಿದ್ದಾಗ ನನ್ನನ್ನು ಸಂಪರ್ಕಿಸಿ ಸಮಸ್ಯೆಗಳನ್ನು ಹೇಳಿಕೊಂಡಿದ್ದರು. ರಾಜ್ಯ ಮತ್ತು ಕೇಂದ್ರ ಸರ್ಕಾರಗಳಿಗೆ ತಮ್ಮ ಸಮಸ್ಯೆಗಳನ್ನು ನಿವೇದಿಸಿಕೊಂಡರೂ ಯಾವುದೇ ಪ್ರಯೋಜನವಾಗುವ ಬದಲಿಗೆ ಸಮಸ್ಯೆ ಬಿಗಡಾಯಿಸುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದರು. ಈಗ ಆ ಆತಂಕ ನಿಜವಾಗಿದೆ.

‘ಈಗಾಗಲೇ ಅಡಕೆ ಬೆಳೆಗೆ ಕೊಳೆ ರೋಗ, ಹಳದಿ ಎಲೆ, ಚುಕ್ಕೆ ಇನ್ನಿತರ ರೋಗವೂ ಕಾಡುತ್ತಿದೆ. ಸಾಲದ್ದಕ್ಕೆ ವಿಪರೀತ ಮಳೆ ಹಾಗೂ ಮಂಗಗಳ ಹಾವಳಿಯಿಂದ ಅಡಿಕೆ ಗೊನೆಗಳು ನೆಲೆಕಚ್ಚುತ್ತಲೇ ಇವೆ. ಇವೆಲ್ಲದರಿಂದ ಸಣ್ಣ ಪುಟ್ಟ ಅಡಿಕೆ ಬೆಳೆಗಾರರು ಬೀದಿಗೆ ಬೀಳುವಂತಾಗಿದ್ದು, ಅಲ್ಲದೇ ಮಧ್ಯಮ ಮಟ್ಟದ ಬೆಳೆಗಾರರ ಆದಾಯ ಅಷ್ಟಕಷ್ಟೆ ಎನ್ನುವಂತಾಗಿದೆ.

ಇಷ್ಟೆಲ್ಲಾ ಸಂಕಟಗಳ ನಡುವೆ ಗಾಯದ ಮೇಲೆ ಬರೆ ಎಳೆದಂತೆ ಕೇಂದ್ರ ಸರ್ಕಾರ ನಮ್ಮ ಅಡಿಕೆಯ ಮೇಲೆ ಜಿಎಸ್‌ಟಿ ಹೆಚ್ಚಿಸುತ್ತಾ, ವಿದೇಶದಿಂದ ಬರುವ ಆಮದು ಅಡಕೆ ಮೇಲಿನ ಅಬಕಾರಿ ಸುಂಕವನ್ನು ಕಡಿಮೆ ಮಾಡಿ ‘ದೇಶಕ್ಕೆ ಮಾರಿ ನೆರೆ ದೇಶಕ್ಕೆ ಉಪಕಾರಿ’ಯಂತಾಗಿದೆ. ಈಗ ಅಡಿಕೆಯನ್ನು ಆಮದು ಮಾಡಿಕೊಳ್ಳಲು ಮುಂದಾಗಿರುವುದು ಜನದ್ರೋಹದ ಪರಮಾವಧಿಯಾಗಿದೆ’.ರಾಜ್ಯ ಗೃಹ ಸಚಿವರೂ ಆಗಿರುವ ಆರಗ ಜ್ಞಾನೇಂದ್ರ ಅವರೇ ಅಡಿಕೆ ಸಮಸ್ಯೆ ಬಗೆಹರಿಸುವ ಸಲುವಾಗಿ ರಚಿಸಲಾಗಿರುವ ಟಾಸ್ಕ್ ಫೋರ್ಸ್ನ್ ಅಧ್ಯಕ್ಷರೂ ಆಗಿದ್ದಾರೆ. ಇವರು ಭೂತಾನ್ ಅಡಿಕೆ ಆಮದನ್ನು ವಿರೋಧಿಸಿ ಕೇಂದ್ರಕ್ಕೆ ಖಾರವಾಗಿ ಪ್ರತಿಕ್ರಿಯಿಸುವ ಬದಲಿಗೆ ಆಮದಿನಿಂದ ಏನೂ ನಷ್ಟ ಆಗುವುದಿಲ್ಲ. ಭೂತಾನ್ ದೇಶ ನಮ್ಮ ಸಾಂಪ್ರದಾಯಿಕ ಮಿತ್ರ ಎಂದು ಭಜನೆ ಮಾಡುತ್ತಿದ್ದಾರೆ. ಇಂಥಾ ಭಜನೆಗಳು ನಾಡಿನ ರೈತರ ಸಂಕಷ್ಟವನ್ನು ಪರಿಹರಿಸುವುದಿಲ್ಲ ಎನ್ನುವ ಸಾಮಾನ್ಯ ಜ್ಞಾನವೂ ಇಲ್ಲದವರಂತೆ ಗೃಹ ಸಚಿವರು ಮತ್ತು ಸರ್ಕಾರ ವರ್ತಿಸುತ್ತಿದೆ ಎಂದರು.

ಬರ್ಮಾ, ಮ್ಯಾನ್ಮಾರ್ ನಿಂದ ಭಾರತಕ್ಕೆ ಬರುವ ವಿದೇಶಗಳ ಆಮದು ಅಡಿಕೆಯ ಮೇಲೆ ಅಬಕಾರಿ ಸುಂಕ ಹೆಚ್ಚಿಸಬೇಕು ಎಂದು ಸ್ಥಳೀಯ ಅಡಿಕೆ ಬೆಳೆಗಾರರು ಹತ್ತಾರು ಬಾರಿ ಮನವಿ ಮಾಡಿದ್ದಾರೆ. ಬೆಳೆಗಾರರ ನಿಯೋಗ ಆರಗ ಜ್ಞಾನೇಂದ್ರರ ನೇತೃತ್ವದಲ್ಲಿ ಈ ಕುರಿತು ಕೇಂದ್ರ ಸಚಿವರನ್ನು ಭೇಟಿಯಾಗಿ ಮನವಿ ಮಾಡಿದ್ದರು. ಆದರೂ ಕೇಂದ್ರ ಸರ್ಕಾರ ಮಾತ್ರ ಅಡಕೆ ಬೆಳೆಗಾರರ ಮನವಿಯನ್ನು ತಿಪ್ಪೆಗೆಸೆದು ಈಗ ಭೂತಾನ್‌ನಿಂದಲೂ ಆಮದು ಮಾಡಿಕೊಳ್ಳುತ್ತಿದೆ.

ಬಿಜೆಪಿ ರಾಜ್ಯಾಧ್ಯಕ್ಷರು, ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ, ರಾಜ್ಯ ಪ್ರಧಾನ ಕಾರ್ಯದರ್ಶಿಗಳೂ ಅಡಿಕೆ ಬೆಳೆಯುವ ಪ್ರದೇಶದವರೇ ಆಗಿದ್ದಾರೆ. ಮಲೆನಾಡು, ಕರಾವಳಿ ಸೇರಿದಂತೆ ಅಡಿಕೆ ಬೆಳೆಯುವ ಜಿಲ್ಲೆಗಳ ಸಂಸದರು, ಸಚಿವರು, ಶಾಸಕರು ಕೂಡ ಬಾಯಿ ಬಿಡುತ್ತಿಲ್ಲ. ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಹಾಗೂ ಸಚಿವೆ ಶೋಭಾ ಕರಂದ್ಲಾಜೆ ಅಡಿಕೆ ಬೆಳೆಗಾರರಿಗೂ ತಮಗೂ ಸಂಬಂಧವೇ ಇಲ್ಲ ಎಂದು ಕೇಂದ್ರ ಸರ್ಕಾರದ ಜನದ್ರೋಹಕ್ಕೆ ಮೌನ ಸಮ್ಮತಿ ಸೂಚಿಸಿದ್ದಾರೆ. ಇವರೆಲ್ಲರೂ ಸೇರಿ ಅಡಕೆ ಬೆಳೆಗಾರರಿಗೆ ಮರಣ ಶಾಸನ ಬರೆಯುತ್ತಿರುವುದು ನಾಚಿಕೆಗೇಡು ಎಂದು ಆಕ್ರೋಶ ಹೊರಹಾಕಿದ್ದಾರೆ.

ಈ ಹಿನ್ನಲೆಯಲ್ಲಿ ಭೂತಾನ್ ನ ಅಡಿಕೆ ಆಮದಿಗೆ ನೀಡಿರುವ ಅನುಮತಿಯನ್ನು ತಕ್ಷಣ ಹಿಂದಕ್ಕೆ ಪಡೆಯಬೇಕು. ಅದಲ್ಲದೇ ಅಡಿಕೆ ಮೇಲಿನ ಜಿಎಸ್‌ಟಿಯನ್ನು ರದ್ದುಗೊಳಿಸಿ ಆಮದು ಅಡಕೆ ಮೇಲೆ ಅಬಕಾರಿ ಸುಂಕ ಹೆಚ್ಚಿಸಲು ರಾಜ್ಯ ಸರ್ಕಾರ ಕೇಂದ್ರದ ಮೇಲೆ ಒತ್ತಡ ಹೇರಬೇಕು’ ಎಂದು ಸಿದ್ದರಾಮಯ್ಯ ಪತ್ರಿಕಾ ಹೇಳಿಕೆಯ ಮೂಲಕ ಆಗ್ರಹಿಸಿದ್ದಾರೆ.

Ad Widget
Click to comment

Leave a Reply

ಸುಳ್ಯ

Sullia-ಸುಳ್ಯ: ಜಾನುವಾರು ಕಳ್ಳತನಕ್ಕೆ ಯತ್ನ: ಇಬ್ಬರು ಪೊಲೀಸ್ ವಶಕ್ಕೆ

Published

on

Ad Widget

Ad Widget

Ad Widget

Ad Widget

ಮಾಂಸ ಮಾಡಿ ಮಾರಾಟ ಮಾಡುವ ಉದ್ದೇಶದಿಂದ ಜಾನುವಾರುಗಳನ್ನು ಕಳ್ಳತನ ಮಾಡಲು ಯತ್ನಿಸಿದ ಇಬ್ಬರನ್ನು ಸುಳ್ಯ ಪೊಲೀಸರು ವಶಕ್ಕೆ ಪಡೆದ ಘಟನೆ ನ.18ರ ಮುಂಜಾನೆ ಸುಳ್ಯ ಕಸಬಾ ಗ್ರಾಮದ ಗಾಂಧಿನಗರ ಶಾಲಾ ಮೈದಾನದ ಬಳಿ ನಡೆದಿದೆ.

Ad Widget

Ad Widget

Ad Widget

Ad Widget

ಸುಳ್ಯ: ಮಾಂಸ ಮಾಡಿ ಮಾರಾಟ ಮಾಡುವ ಉದ್ದೇಶದಿಂದ ಜಾನುವಾರುಗಳನ್ನು ಕಳ್ಳತನ ಮಾಡಲು ಯತ್ನಿಸಿದ ಇಬ್ಬರನ್ನು ಸುಳ್ಯ ಪೊಲೀಸರು ವಶಕ್ಕೆ ಪಡೆದ ಘಟನೆ ನ.18ರ ಮುಂಜಾನೆ ಸುಳ್ಯ ಕಸಬಾ ಗ್ರಾಮದ ಗಾಂಧಿನಗರ ಶಾಲಾ ಮೈದಾನದ ಬಳಿ ನಡೆದಿದೆ.

Ad Widget

Ad Widget alt="Ad Widget"/>

Ad Widget

ಜಾನುವಾರುಗಳನ್ನು ಕಳ್ಳತನ ಮಾಡಿ ಸಾಗಾಟ ಮಾಡಲು ಯತ್ನಿಸುತ್ತಿರುವ ಬಗ್ಗೆ ಸುಳ್ಯ ಪೊಲೀಸ್ ಠಾಣೆಯ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಪೊಲೀಸ್ ಉಪನಿರೀಕ್ಷಕ ಉದಯ ರವಿ ಅವರಿಗೆ ಮಾಹಿತಿ ಲಭಿಸಿತ್ತು. ತಕ್ಷಣ ಸಿಬ್ಬಂದಿಗಳೊಂದಿಗೆ ಸ್ಥಳಕ್ಕೆ ತೆರಳಿ ಪರಿಶೀಲಿಸಿದಾಗ, ಶಾಲಾ ಮೈದಾನದಲ್ಲಿದ್ದ ಕಂಬವೊಂದಕ್ಕೆ ಎರಡು ಜಾನುವಾರುಗಳನ್ನು ಹಗ್ಗದಿಂದ ಕಟ್ಟಿ ಹಾಕಿರುವುದು ಕಂಡುಬಂದಿದೆ.

Ad Widget

Ad Widget <> Ad Widget

ಸ್ಥಳದಲ್ಲಿದ್ದ ಇಬ್ಬರನ್ನು ವಶಕ್ಕೆ ಪಡೆದು ವಿಚಾರಿಸಿದಾಗ, ಅವರು ಸುಳ್ಯ ಆಲೆಟ್ಟಿ ನಿವಾಸಿಗಳಾದ ಹಾಶಿರ್ (28) ಮತ್ತು ಸಂಶುದ್ದೀನ್ (25) ಎಂದು ತಿಳಿದುಬಂದಿದೆ.

ಜಾನುವಾರುಗಳನ್ನು ಕಳ್ಳತನ ಮಾಡಿ ಮಾಂಸವನ್ನಾಗಿ ಮಾಡಿ ಮಾರಾಟ ಮಾಡುವ ಉದ್ದೇಶ ಹೊಂದಿದ್ದಾಗಿ ಆರೋಪಿಗಳು ವಿಚಾರಣೆ ವೇಳೆ ತಿಳಿಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

Ad Widget

Ad Widget

ಕೃತ್ಯಕ್ಕೆ ಬಳಸಲು ಸ್ಥಳಕ್ಕೆ ತಂದಿದ್ದ ದ್ವಿಚಕ್ರ ವಾಹನ ಹಾಗೂ ಎರಡು ಜಾನುವಾರುಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಈ ಕುರಿತು ಸುಳ್ಯ ಪೊಲೀಸ್ ಠಾಣೆಯಲ್ಲಿ ಅಪರಾಧ ಸಂಖ್ಯೆ 161/2026ರಂತೆ ಭಾರತೀಯ ನ್ಯಾಯ ಸಂಹಿತೆ (BNS) 2023ರ ಕಲಂ 303(2) ಜೊತೆಗೆ 62 ಹಾಗೂ ಕರ್ನಾಟಕ ಗೋಹತ್ಯೆ ನಿಷೇಧ ಕಾಯ್ದೆಯ ಕಲಂ 7 ಮತ್ತು 15ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

Ad Widget
Continue Reading

ಸುಳ್ಯ

Black pepper-ಕಾಳುಮೆಣಸು ದರದಲ್ಲಿ ಭರ್ಜರಿ ಏರಿಕೆ: ₹750ರ ಗಡಿ ತಲುಪಿದ ಕಪ್ಪು ಚಿನ್ನ

Published

on

Ad Widget

Ad Widget

Ad Widget

Ad Widget

ಕೃಷಿಕರ ಪಾಲಿನ ‘ಕಪ್ಪು ಚಿನ್ನ’ ಎಂದೇ ಕರೆಯಲ್ಪಡುವ ಕಾಳುಮೆಣಸಿನ ಧಾರಣೆಯಲ್ಲಿ ನವೆಂಬರ್ ಮೊದಲ ವಾರಾಂತ್ಯದಿಂದ ಮತ್ತೆ ಚೇತರಿಕೆ ಕಂಡಿದ್ದು, ನಿರಂತರವಾಗಿ ಏರಿಕೆಯಾಗುತ್ತಾ ಇದೀಗ ನ.16ರ ವೇಳೆಗೆ ಪ್ರತಿ ಕೆ.ಜಿ. ಕಾಳುಮೆಣಸಿನ ಬೆಲೆ ₹750ರ ಗಡಿಯನ್ನು ತಲುಪಿರುವುದು ಬೆಳೆಗಾರರಲ್ಲಿ ಹೊಸ ನಿರೀಕ್ಷೆ ಮೂಡಿಸಿದೆ.

Ad Widget

Ad Widget

Ad Widget

Ad Widget

ಸುಳ್ಯ: ಕೃಷಿಕರ ಪಾಲಿನ ‘ಕಪ್ಪು ಚಿನ್ನ’ ಎಂದೇ ಕರೆಯಲ್ಪಡುವ ಕಾಳುಮೆಣಸಿನ ಧಾರಣೆಯಲ್ಲಿ ಮತ್ತೆ ಏರಿಕೆ ಕಂಡುಬಂದಿದ್ದು, ಪ್ರತಿ ಕೆ.ಜಿ.ಗೆ ₹750ರ ಗಡಿಯನ್ನು ತಲುಪಿದೆ. ನಿರಂತರ ದರ ಏರಿಕೆಯಿಂದ ಕಾಳುಮೆಣಸು ಬೆಳೆಗಾರರಲ್ಲಿ ಸಂತಸ ಮೂಡಿದೆ.

Ad Widget

Ad Widget alt="Ad Widget"/>

Ad Widget

ಕ್ಯಾಂಪ್ಕೋ ಮಂಗಳೂರು (ಸುಳ್ಯ ಶಾಖೆ) ದರ ಮಾಹಿತಿಯ ಪ್ರಕಾರ, ಕಳೆದ ಅಕ್ಟೋಬರ್ 19ರ ವೇಳೆಗೆ ಕಾಳುಮೆಣಸಿನ ಧಾರಣೆ ₹700ರ ಗಡಿ ದಾಟಿತ್ತು. ಅಕ್ಟೋಬರ್ 29ರ ವೇಳೆಗೆ ₹730ಕ್ಕೆ ಏರಿಕೆಯಾಗಿತ್ತು. ಬಳಿಕ ಕೊಂಚ ಇಳಿಕೆ ಕಂಡು ನವೆಂಬರ್ ತಿಂಗಳ ಆರಂಭದಲ್ಲಿ ₹710ಕ್ಕೆ ತಲುಪಿತ್ತು.

Ad Widget

Ad Widget <> Ad Widget

ಆದರೆ, ನವೆಂಬರ್ ಮೊದಲ ವಾರಾಂತ್ಯದಿಂದ ಮತ್ತೆ ಚೇತರಿಕೆ ಕಂಡ ಧಾರಣೆ ನಿರಂತರವಾಗಿ ಏರಿಕೆಯಾಗುತ್ತಾ ಸಾಗಿದೆ. ಇದೀಗ ನವೆಂಬರ್ 16ರ ವೇಳೆಗೆ ಪ್ರತಿ ಕೆ.ಜಿ. ಕಾಳುಮೆಣಸಿನ ಬೆಲೆ ₹750ರ ಗಡಿಯನ್ನು ತಲುಪಿರುವುದು ಬೆಳೆಗಾರರಲ್ಲಿ ಹೊಸ ನಿರೀಕ್ಷೆ ಮೂಡಿಸಿದೆ.

ಕರಾವಳಿ ಹಾಗೂ ಮಲೆನಾಡು ಭಾಗದ ಪ್ರಮುಖ ವಾಣಿಜ್ಯ ಬೆಳೆಯಾದ ಅಡಿಕೆ ಇತ್ತೀಚಿನ ದಿನಗಳಲ್ಲಿ ಕೊಳೆರೋಗ, ಹಳದಿ ಎಲೆಚುಕ್ಕೆ ರೋಗ ಸೇರಿದಂತೆ ವಿವಿಧ ರೋಗಬಾಧೆಗಳಿಂದ ಇಳುವರಿ ಕುಂಠಿತಗೊಳ್ಳುತ್ತಿದೆ. ಇಂತಹ ಸಂಕಷ್ಟದ ಸಂದರ್ಭದಲ್ಲಿ ಕಾಳುಮೆಣಸಿನ ಧಾರಣೆಯಲ್ಲಿನ ಏರಿಕೆ ಕೃಷಿಕರಿಗೆ ಆರ್ಥಿಕವಾಗಿ ದೊಡ್ಡ ಮಟ್ಟದ ಆಸರೆಯಾಗುವ ನಿರೀಕ್ಷೆಯಿದೆ.

Continue Reading

ಸುಳ್ಯ

Areca nut-ಅಡಿಕೆ ರೇಟ್‌ ಜಂಪ್‌ : ಹೊಸ ಅಡಿಕೆಗೆ ₹360; ಒಂದೇ ದಿನದಲ್ಲಿ ₹10 ಏರಿಕೆ! ಡಬಲ್ ಚೋಲ್ ಧಾರಣೆಯಲ್ಲೂ ಹೆಚ್ಚಳ

Published

on

Ad Widget

Ad Widget

Ad Widget

Ad Widget

ಕಳೆದ ಕೆಲ ತಿಂಗಳುಗಳಿಂದ ಏರಿಕೆ ಕಾಣದೆ ನಿಸ್ತೇಜವಾಗಿದ್ದ ಅಡಿಕೆ ಮಾರುಕಟ್ಟೆಯಿಂದೆ ಕೊಂಚ ಸಮಾಧಾನಕರ ಸುದ್ದಿ ಲಭಿಸಿದೆ. ಚಾಲಿ ಅಡಿಕೆ ಮಾರುಕಟ್ಟೆಯಲ್ಲಿ ಹೊಸ ಅಡಿಕೆ ಹಾಗೂ ಡಬಲ್ ಚೋಲ್ ಅಡಿಕೆಯ ಧಾರಣೆಯಲ್ಲಿ ಏರಿಕೆ ದಾಖಲಾಗಿದ್ದು, ಹೊಸ ಅಡಿಕೆಯ ಗರಿಷ್ಠ ಬೆಲೆ ಒಂದೇ ದಿನದಲ್ಲಿ ಕೆ.ಜಿ.ಗೆ ₹10 ಹೆಚ್ಚಳವಾಗಿ ₹360ಕ್ಕೆ ತಲುಪಿದೆ. ಡಬಲ್ ಚೋಲ್ ಅಡಿಕೆಯ ಧಾರಣೆಯೂ ₹560ರ ಗಡಿಗೆ ಏರಿಕೆಯಾಗಿದೆ.

Ad Widget

Ad Widget

Ad Widget

Ad Widget

ಸುಳ್ಯ, ನ.12: ಕಳೆದ ಕೆಲ ತಿಂಗಳುಗಳಿಂದ ಏರಿಕೆ ಕಾಣದೆ ನಿಸ್ತೇಜವಾಗಿದ್ದ ಅಡಿಕೆ ಮಾರುಕಟ್ಟೆಯಿಂದೆ ಕೊಂಚ ಸಮಾಧಾನಕರ ಸುದ್ದಿ ಲಭಿಸಿದೆ. ಚಾಲಿ ಅಡಿಕೆ ಮಾರುಕಟ್ಟೆಯಲ್ಲಿ ಹೊಸ ಅಡಿಕೆ ಹಾಗೂ ಡಬಲ್ ಚೋಲ್ ಅಡಿಕೆಯ ಧಾರಣೆಯಲ್ಲಿ ಏರಿಕೆ ದಾಖಲಾಗಿದ್ದು, ಹೊಸ ಅಡಿಕೆಯ ಗರಿಷ್ಠ ಬೆಲೆ ಒಂದೇ ದಿನದಲ್ಲಿ ಕೆ.ಜಿ.ಗೆ ₹10 ಹೆಚ್ಚಳವಾಗಿ ₹360ಕ್ಕೆ ತಲುಪಿದೆ. ಡಬಲ್ ಚೋಲ್ ಅಡಿಕೆಯ ಧಾರಣೆಯೂ ₹560ರ ಗಡಿಗೆ ಏರಿಕೆಯಾಗಿದೆ.

Ad Widget

Ad Widget alt="Ad Widget"/>

Ad Widget

ನ.11 ಮತ್ತು ನ.12ರ ಮಾರುಕಟ್ಟೆ ದರಗಳನ್ನು ಹೋಲಿಸಿದಾಗ ಹೊಸ ಅಡಿಕೆಯ ಗರಿಷ್ಠ ಧಾರಣೆ ₹350ರಿಂದ ₹360ಕ್ಕೆ ಏರಿಕೆಯಾಗಿದೆ. ಆದರೆ ಕನಿಷ್ಠ ಧಾರಣೆ ₹280ರಲ್ಲೇ ಸ್ಥಿರವಾಗಿದೆ. ಕನಿಷ್ಠ ದರದಲ್ಲಿ ಬದಲಾವಣೆಯಾಗದಿದ್ದರೂ ಗರಿಷ್ಠ ದರದಲ್ಲಿ ಕಂಡುಬಂದಿರುವ ಏರಿಕೆ ಮಾರುಕಟ್ಟೆಯಲ್ಲಿ ಚೇತರಿಕೆಯ ಮುನ್ಸೂಚನೆ ನೀಡಿದೆ.

Ad Widget

Ad Widget <> Ad Widget

ಡಬಲ್ ಚೋಲ್ ಅಡಿಕೆಗೂ ಬೆಲೆ ಏರಿಕೆ
ಡಬಲ್ ಚೋಲ್ ಅಡಿಕೆಯ ಮಾರುಕಟ್ಟೆಯಲ್ಲೂ ಉತ್ತಮ ಬೆಳವಣಿಗೆ ಕಂಡುಬಂದಿದೆ. ಹಿಂದಿನ ದಿನ ₹525ರಷ್ಟಿದ್ದ ಕನಿಷ್ಠ ಧಾರಣೆ ₹530ಕ್ಕೆ ಏರಿಕೆಯಾಗಿದ್ದರೆ, ಗರಿಷ್ಠ ಧಾರಣೆ ₹550ರಿಂದ ₹560ಕ್ಕೆ ತಲುಪಿದೆ. ಈ ಮೂಲಕ ಕನಿಷ್ಠ ದರದಲ್ಲಿ ₹5 ಹಾಗೂ ಗರಿಷ್ಠ ದರದಲ್ಲಿ ₹10ರಷ್ಟು ಹೆಚ್ಚಳ ದಾಖಲಾಗಿದೆ.

ಸಿಂಗಲ್ ಚೋಲ್ ಸೇರಿದಂತೆ ಇತರ ಅಡಿಕೆ ದರ ಸ್ಥಿರ
ಹೊಸ ಅಡಿಕೆ ಮತ್ತು ಡಬಲ್ ಚೋಲ್ ಹೊರತುಪಡಿಸಿ ಮಾರುಕಟ್ಟೆಯ ಇತರ ಪ್ರಮುಖ ಅಡಿಕೆ ವರ್ಗಗಳ ದರದಲ್ಲಿ ಯಾವುದೇ ಬದಲಾವಣೆಯಾಗಿಲ್ಲ. ಸಿಂಗಲ್ ಚೋಲ್ ಅಡಿಕೆ ಕೆ.ಜಿ.ಗೆ ಕನಿಷ್ಠ ₹450 ಹಾಗೂ ಗರಿಷ್ಠ ₹480ರ ದರದಲ್ಲಿ ವಹಿವಾಟು ನಡೆಸಿದೆ.

Ad Widget

Ad Widget

ಬೆಳೆಗಾರರ ಕಣ್ಣು ಮುಂದಿನ ಮಾರುಕಟ್ಟೆ ದರದತ್ತ
ಇತ್ತೀಚಿನ ದಿನಗಳಲ್ಲಿ ಅಡಿಕೆ ಧಾರಣೆಯಲ್ಲಿ ಕಂಡುಬರುತ್ತಿರುವ ಏರಿಳಿತಗಳು ಬೆಳೆಗಾರರಲ್ಲಿ ಗೊಂದಲ ಮೂಡಿಸಿದ್ದವು. ಅದರಲ್ಲೂ ಉತ್ಪಾದನಾ ವೆಚ್ಚ, ಕೂಲಿ ವೆಚ್ಚ ಹಾಗೂ ನಿರ್ವಹಣಾ ವೆಚ್ಚ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಉತ್ತಮ ಮಾರುಕಟ್ಟೆ ದರದ ನಿರೀಕ್ಷೆ ಬೆಳೆಗಾರರಲ್ಲಿದೆ.

ಇದೀಗ ಹೊಸ ಅಡಿಕೆ ಹಾಗೂ ಡಬಲ್ ಚೋಲ್ ಅಡಿಕೆಯಲ್ಲಿ ದಾಖಲಾಗಿರುವ ಏರಿಕೆ ಮಾರುಕಟ್ಟೆಗೆ ಹೊಸ ಚೈತನ್ಯ ನೀಡಿದೆ. ಆದರೆ ಈ ಏರಿಕೆ ಮುಂದಿನ ದಿನಗಳಲ್ಲೂ ಮುಂದುವರಿಯಲಿದೆಯೇ ಅಥವಾ ಮತ್ತೆ ಧಾರಣೆ ಸ್ಥಿರವಾಗಲಿದೆಯೇ ಎಂಬುದನ್ನು ಕಾದು ನೋಡಬೇಕಿದೆ. ಸದ್ಯದ ಮಟ್ಟಿಗೆ ಅಡಿಕೆ ಬೆಳೆಗಾರರ ಚಿತ್ತ ಮುಂದಿನ ಮಾರುಕಟ್ಟೆ ವಹಿವಾಟಿನತ್ತ ನೆಟ್ಟಿದೆ.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!