Connect with us

ದಕ್ಷಿಣ ಕನ್ನಡ

Ashok Kumar Rai : ಅಶೋಕ್ ಕುಮಾರ್ ರೈ ಕೋಡಿಂಬಾಡಿ ಪ್ರವರ್ತಿತ ರೈ ಚಾರಿಟೇಬಲ್ ಟ್ರಸ್ಟ್ ನಿಂದ ದೀಪಾವಳಿಯಂದು 26 ಸಾವಿರ ಮಂದಿಗೆ ವಸ್ತ್ರ ವಿತರಣೆ : ಪುತ್ತೂರಿನ ಕಿಲ್ಲೆ ಮೈದಾನದಲ್ಲಿ ಬೃಹತ್ ಸಮಾವೇಶ

Published

on



Ad Widget

Ad Widget

Ad Widget

Ad Widget

ಪುತ್ತೂರು Puttur ಅ 10 : ಕಳೆದ 10 ವರ್ಷಗಳಿಂದ ದೀಪಾವಳಿ ಹಬ್ಬದ ಸಂದರ್ಭ ರೈ ಎಸ್ಟೇಟ್ ಎಜ್ಯುಕೇಶನಲ್ ಎಂಡ್ ಚಾರಿಟೇಬಲ್ ಟ್ರಸ್ಟ್( Rai education and Charitable Trust) ವತಿಯಿಂದ ಮಹಿಳೆಯರಿಗೆ ಹಾಗೂ ಪುರುಷರಿಗೆ ವಸ್ತ್ರ ವಿತರಣೆ ಕಾರ್ಯಕ್ರಮ ನಡೆಸಲಾಗುತ್ತಿದೆ. ಕೊವೀಡ್‌ ಕಾರಣದಿಂದ ಕಳೆದೆರಡು ವರ್ಷ ಈ ಕಾರ್ಯ ನಡೆದಿರಲಿಲ್ಲ . ಕೊನೆಯ ಬಾರಿ 2020ರಲ್ಲಿ ಈ ಕಾರ್ಯಕ್ರಮ ನಡೆದಾಗ 12800 ಮಂದಿಗೆ ವಸ್ತ್ರ ವಿತರಿಸಲಾಗುತಿತ್ತು. ಆದರೇ ಈ ಬಾರಿ 26 ಸಾವಿರ ಮಂದಿಗೆ ವಸ್ತ್ರ ವಿತರಿಸುವ ಯೋಜನೆ ಟ್ರಸ್ಟ್‌ ನಿಂದ ಹಮ್ಮಿಕೊಳ್ಳಲಾಗಿದೆ ಎಂದು ಟ್ರಸ್ಟ್‌ ನ  ಪ್ರವರ್ತಕ, ಉದ್ಯಮಿ ಅಶೋಕ್ ಕುಮಾರ್ ರೈ ಕೋಡಿಂಬಾಡಿ ಹೇಳಿದರು.

Ad Widget

Ad Widget

Ad Widget

Ad Widget

ರೈ ಎಸ್ಟೇಟ್ ಎಜ್ಯುಕೇಶನಲ್ ಎಂಡ್ ಚಾರಿಟೇಬಲ್ ಟ್ರಸ್ಟ್ ಮತ್ತು ಜನಸೇವಾ ಕೇಂದ್ರದ ವತಿಯಿಂದ ದೀವಾವಳಿ ಹಬ್ಬದ ದಿನವಾದ  ಅ.26 ರಂದು ಪುತ್ತೂರಿನ ಕಿಲ್ಲೆ ಮೈದಾನದಲ್ಲಿ ಫಲಾನುಭವಿಗಳ ಸಮಾವೇಶ ಮತ್ತು ವಸ್ತ್ರ ವಿತರಿಸುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಕಾರ್ಯಕ್ರಮದ ಪೂರ್ವಭಾವಿ ತಯಾರಿಯ ಬಗ್ಗೆ ಚರ್ಚಿಸಲು  ಶನಿವಾರ `ಪುತ್ತೂರು ಕ್ಲಬ್’ ನಲ್ಲಿ `ಸಿದ್ಧತಾ ಸಮಾವೇಶ-ಸ್ನೇಹಕೂಟ’  ಕಾರ್ಯಕ್ರಮ ನಡೆಯಿತು.

Ad Widget

Ad Widget

Ad Widget alt="Ad Widget"/>

Ad Widget

ರೈ ಎಸ್ಟೇಟ್ ಎಜ್ಯುಕೇಶನಲ್ ಎಂಡ್ ಚಾರಿಟೇಬಲ್ ಟ್ರಸ್ಟ್ ನ ಪ್ರಮುಖ ಧ್ಯೇಯವಾಗಿದೆ. ಟ್ರಸ್ಟ್ ನ  ಮೂಲಕ 10 ವರ್ಷಗಳಿಂದ ಹಲವು ಸಮಾಜಮುಖಿ ಕಾರ್ಯ  ಮಾಡುತ್ತಾ ಬಂದಿದೆ.  ಹಲವರು ರೈ ಚಾರೀಟೆಬಲ್‌ ಟ್ರಸ್ಟ್‌ ಏನೂ ಮಾಡಿದೆ ಎಂದು ಕೇಳುತ್ತಾರೆ. ಆದರೆ ಕಳೆದ 10 ವರ್ಷಗಳಲ್ಲಿ   15 800 ಮನೆಗಳ ನಿರ್ಮಾಣಕ್ಕೆ ವಿವಿಧ ರೀತಿಯ  ಸಹಾಯ ಮಾಡಲಾಗಿದೆ. 99 ವಾಸ್ತವ್ಯ ಯೋಗ್ಯ ಮನೆಗಳನ್ನು ಸಂಪೂರ್ಣವಾಗಿ ಟ್ರಸ್ಟ್‌ ನ ವತಿಯಿಂದ  ಕಟ್ಟಿಕೊಡಲಾಗಿದೆ.  ಸಾವಿರಾರು ಮಂದಿಗೆ ಸರಕಾರಿ ಸವಲತ್ತುಗಳನ್ನು ಒದಗಿಸಿಕೊಡಲಾಗಿದೆ.  ಹಾಗೂ ಇದಕ್ಕಾಗಿ ಒಂದೇ ಒಂದು ರೂಪಾಯಿಯನ್ನು  ಹೊರಗಡೆಯಿಂದ  ಡೊನೇಷನ್‌ ಪಡೆದುಕೊಂಡಿಲ್ಲ. ಉದ್ಯಮದ ಮೂಲಕ ಸಂಪಾದಿಸಿದ ಹಣದ ಒಂದು ಪಾಲನ್ನು ಬಡವರ ಕಷ್ಟ-ಕಾರ್ಪಣ್ಯಗಳಿಗೆ ಬಳಸಿದ ದ ತೃಪ್ತಿ ನನಗಿದೆ ಎಂದು ಅಶೋಕ್ ಕುಮಾರ್ ರೈ ಹೇಳಿದರು.

Ad Widget

Ad Widget <> Ad Widget

ಈ ಬಾರಿ 26  ಸಾವಿರ ಮಂದಿಗೆ ವಸ್ತ್ರ ವಿತರಿಸುವ ಕಾರ್ಯಕ್ರಮ ಇಟ್ಟುಕೊಳ್ಳಲಾಗಿದೆ.  ಇವರೆಗೆ ಈ ಕಾರ್ಯಕ್ರಮವನ್ನು ಮನೆಯಲ್ಲಿ ಮಾಡಲಾಗುತಿತ್ತು. ಆದರೇ ಇದೆ ಮೊದಲ ಬಾರಿಗೆ ಇದನ್ನು ಹೊರಗಡೆ ಪುತ್ತೂರು ನಗರದಲ್ಲಿ ಮಾಡಲು ಉದ್ದೇಶಿಸಲಾಗಿದೆ. ಹೀಗಾಗಿ 26 ಸಾವಿರಕ್ಕೂ ಮಿಕ್ಕಿ ಜನರು ಆಗಮಿಸುವ ಸಾಧ್ಯತೆಯಿದ್ದು,   5ಸಾವಿರ  ಹೆಚ್ಚುವರಿ ವಸ್ತ್ರಗಳನ್ನು ತಂದಿರಿಸಲಾಗಿದೆ.  ಎಷ್ಟೇ ಮಂದಿ ಬಂದರೂ ಬಂದವರಿಗೆಲ್ಲರಿಗೂ ವಸ್ತ್ರ  ಹಾಗೂ  ಊಟದ ವ್ಯವಸ್ಥೆಯನ್ನು ಸೂಕ್ತ ರೀತಿಯಲ್ಲಿ ಮಾಡಲಾಗುವುದು ಎಂದರು.



Ad Widget

ವಿವಿಧ ಸಮಿತಿ

ವಸ್ತ್ರ  ವಿತರಿಸುವ ಕಾರ್ಯಕ್ರಮವನ್ನು ಯಾವುದೇ ಲೋಪಗಳು ಬಾರದಂತೆ ವ್ಯವಸ್ಥಿತವಾಗಿ ನಡೆಸುವ ನಿಟ್ಟಿನಲ್ಲಿ ಸ್ವಾಗತ ಸಮಿತಿ, ಸ್ವಯಂ ಸೇವಕರ ಸಮಿತಿ, ಕೌಂಟರ್ ಸಮಿತಿ, ಸೀರೆ ವಿತರಣಾ ವ್ಯವಸ್ಥಾ ಸಮಿತಿ, ಆರೋಗ್ಯ ಸಮಿತಿ, ಆಹಾರ ನಿರ್ವಹಣಾ ಸಮಿತಿ, ವಾಹನ ಪಾರ್ಕಿಂಗ್ ನಿರ್ವಹಣಾ ಸಮಿತಿ ಮೊದಲಾದ ಸಮಿತಿಗಳನ್ನು ಈಗಾಗಲೇ ರಚಿಸಲಾಗಿದ್ದು, ಎಲ್ಲಾ ಸಮಿತಿಯವರು ಕಾರ್ಯಕ್ರಮದ ಯಶಸ್ವಿಗಾಗಿ ಸಹಕರಿಸಬೇಕು ಎಂದು ಅವರು ಮನವಿ ಮಾಡಿದ ಅವರು, ಪುತ್ತೂರು ಕ್ಷೇತ್ರದ 44 ಗ್ರಾಮಗಳಲ್ಲೂ ಮುಂದಿನ ದಿನಗಳಳಲ್ಲಿ ಸಭೆ ನಡೆಸಿ ಜನ ಸಂಪರ್ಕ ಮಾಡಲಾಗುವುದು. ಈ ಸಂದರ್ಭದಲ್ಲಿ ಸ್ವಾಭಿಮಾನಿಗಳಿಗೆ ಸನ್ಮಾನ ಹಮ್ಮಿಕೊಳ್ಳಲಾಗುವುದು ಎಂದರು.

Ad Widget

Ad Widget

ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ನಿದೇಋಶಕ ಶಶಿಕುಮಾರ್ ರೈ ಬಾಲ್ಯೊಟ್ಟು, ಪಾಣಾಜೆ ರಣಮಂಗಲ ದೇವಸ್ಥಾನದ ಆಡಳಿತ ಮೊಕ್ತೇಸರ ಶ್ರೀಕೃಷ್ಣ ಬೊಳ್ಳಿಲ್ಲಾಯ, ಬನ್ನೂರು ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಈಶ್ವರ ಭಟ್ ಪಂಜಿಗುಡ್ಡೆ ಅವರು ಮಾತನಾಡಿ, ಜಾತಿ-ಮತ ಬೇಧ ತೋರದೆ ಬಡವರ ಕಣ್ಣೀರೊರೆಸುವ ಕಾರ್ಯದಲ್ಲಿ ಸದಾ ತೊಡಗಿಸಿಕೊಂಡಿರುವ ಅಶೋಕ್ ಕುಮಾರ್ ರೈ ಅವರು ಸಮಾಜದ ಶಕ್ತಿಯಾಗಿದ್ದಾರೆ. ಯಾರು ಏನೇ ನೆರವು ಕೇಳಿಕೊಂಡು ಬಂದರೂ ತಕ್ಷಣ ಸ್ಪಂದಿಸುವ ದೊಡ್ಡ ಗುಣ ಅವರಲ್ಲಿದೆ ಎಂದು ಶ್ಲಾಘಿಸಿದರು.

ಸನ್ಮಾನ

ಕಾಂತಾರ ಚಿತ್ರದಲ್ಲಿ ನಟಿಸಿರುವ ಎಡ್ತೂರು ರಾಜೀವ ಶೆಟ್ಟಿ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು. ಮಠಂತಬೆಟ್ಟು ಮಹಿಷಮರ್ಧಿನಿ ದೇವಸ್ಥಾನದ ಬ್ರಹ್ಮಕಲಶೋತ್ಸವ ಸಮಿತಿಯ ಕಾರ್ಯಾಧ್ಯಕ್ಷ ಸೀತಾರಾಮ ಶೆಟ್ಟಿ ಹೆಗ್ಡೆಹಿತ್ಲು, ಮಾಮೇಶ್ವರ ದೇವಸ್ಥಾನದ ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷ ವಿಶ್ವನಾಥ ಗೌಡ ನಾಯ್ತೊಟ್ಟು ಅತಿಥಿಗಳಾಗಿದ್ದರು.

ಮಠಂತಬೆಟ್ಟು ಮಹಿಷಮರ್ಧಿನಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಮಾಜಿ ಅಧ್ಯಕ್ಷ ನಿರಂಜನ ರೈ ಮಠಂತಬೆಟ್ಟು ಸ್ವಾಗತಿಸಿ, ಕೋಡಿಂಬಾಡಿ ಗ್ರಾಮ ಪಂಚಾಯಿತಿ ಸದಸ್ಯ ಜಯಪ್ರಕಾಶ್ ಬದಿನಾರು ವಂದಿಸಿದರು. ಸಂತೋಷ್ ಕುಮಾರ್ ಕಾರ್ಯಕ್ರಮ ನಿರ್ವಹಿಸಿದರು.

Ad Widget
Click to comment

Leave a Reply

ಶಿಕ್ಷಣ

Ambika-ಅಂಬಿಕಾ ವಿದ್ಯಾಲಯದ ಸಿಬಿಎಸ್‌ಇ ಸಂಸ್ಥೆಯಲ್ಲಿ ಯೋಧ ಗೌರವ ಕಾರ್ಯಕ್ರಮ; ಸೈನಿಕರ ಪ್ರಾಣರಕ್ಷಣೆಗೆ ಆಧುನಿಕ ತಂತ್ರಜ್ಞಾನಗಳಿವೆ – ಸುಂದರ ಪೂಜಾರಿ

Published

on



Ad Widget

Ad Widget

Ad Widget

Ad Widget

ನಟ್ಟೋಜ ಫೌಂಡೇಶನ್ ಟ್ರಸ್ಟ್ ಪ್ರವರ್ತಿತ ಬಪ್ಪಳಿಗೆಯ ಅಂಬಿಕಾ ವಿದ್ಯಾಲಯ ಸಿ.ಬಿ.ಎಸ್.ಇ. ಸಂಸ್ಥೆಯಲ್ಲಿ ಶನಿವಾರ ಆಯೋಜಿಸಲಾದ ಗೌರವ ಕಾರ್ಯಕ್ರಮದಲ್ಲಿ ಭಾಗವಹಿಸಿ ಸನ್ಮಾನ ಸ್ವೀಕರಿಸಿದ ದೇಶದ ಗಡಿ ಭದ್ರತಾ ಪಡೆಯಲ್ಲಿ ಸತತವಾಗಿ 34 ವರ್ಷಗಳ ಸೇವೆಯನ್ನು ಸಲ್ಲಿಸಿ ನಿವೃತ್ತಿ ಹೊಂದಿ ಮರಳಿ ಊರಿಗೆ ಆಗಮಿಸಿದ ಸುಂದರ ಪೂಜಾರಿ ಅವರು ಮಾತನಾಡಿದರು.

Ad Widget

Ad Widget

Ad Widget

Ad Widget

ಪುತ್ತೂರು: ಈಗಿನ ದಿನಮಾನಗಳಲ್ಲಿ ಸೈನ್ಯದ ಎಲ್ಲಾ ವಿಭಾಗಗಳಲ್ಲೂ ಸೈನಿಕರ ಪ್ರಾಣಕ್ಕೆ ಅಪಾಯವಾಗದಂತೆ ತಡೆಯಲು ತಂತ್ರಜ್ಞಾನ ಸಹಾಯಕವಾಗಿದೆ. ಸೈನಿಕರ ಪ್ರಾಣಕ್ಕೆ ತೊಂದರೆಯಾಗಬಾರದೆನ್ನುವ ಕಾರಣದಿಂದ ಕರ್ತವ್ಯದ ಸಮಯದಲ್ಲಿ ಸೈನಿಕರು ಎಲ್ಲಿದ್ದರೂ ಮಿಲಿಟರಿ ವ್ಯವಸ್ಥೆಗೆ ಸೂಚನೆ ಸಿಗುವ ತಂತ್ರಜ್ಞಾನವಿದೆ ಎಂದು ದೇಶದ ಗಡಿ ಭದ್ರತಾ ಪಡೆಯಲ್ಲಿ ಸತತವಾಗಿ 34 ವರ್ಷಗಳ ಸೇವೆಯನ್ನು ಸಲ್ಲಿಸಿ ಜುಲೈ 31ರಂದು ನಿವೃತ್ತಿ ಹೊಂದಿ ಮರಳಿ ಊರಿಗೆ ಆಗಮಿಸಿದ ಸುಂದರ ಪೂಜಾರಿ ಹೇಳಿದರು.

Ad Widget

Ad Widget

Ad Widget alt="Ad Widget"/>

Ad Widget

ಅವರು ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಪ್ರವರ್ತಿತ ಬಪ್ಪಳಿಗೆಯ ಅಂಬಿಕಾ ವಿದ್ಯಾಲಯ ಸಿ.ಬಿ.ಎಸ್.ಇ. ಸಂಸ್ಥೆಯಲ್ಲಿ ಶನಿವಾರ ಆಯೋಜಿಸಲಾದ ಗೌರವ ಕಾರ್ಯಕ್ರಮದಲ್ಲಿ ಭಾಗವಹಿಸಿ ಸನ್ಮಾನ ಸ್ವೀಕರಿಸಿ ಮಾತನಾಡಿದರು.

Ad Widget

Ad Widget <> Ad Widget

ದೇಶಸೇವೆ ಮಾಡಲು ಸೈನ್ಯಕ್ಕೆ ಸೇರುವುದು ಒಂದು ಉತ್ತಮ ಸಾಧ್ಯತೆ. ಹಾಗೆಂದು ಸೈನ್ಯಕ್ಕೆ ಸೈನಿಕರಾಗಿಯೇ ಸೇರಬೇಕೆಂದಿಲ್ಲ. ವೈದ್ಯರಾಗಿಯೂ, ಅಭಿಯಂತರರಾಗಿಯೂ, ತಂತ್ರಜ್ಞರಾಗಿಯೂ ಕೂಡ ಸೇವೆಯನ್ನು ಸಲ್ಲಿಸಲು ಅವಕಾಶಗಳಿವೆ ಎಂದರಲ್ಲದೆ ತಮ್ಮ ದೀರ್ಘಕಾಲದ ಅನುಭವದ ಸಾರವನ್ನು ವಿದ್ಯಾಥಿಗಳೊಂದಿಗೆ ಹಂಚಿಕೊಂಡರು.



Ad Widget

ಅಧ್ಯಕ್ಷತೆ ವಹಿಸಿದ್ದ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಸುಬ್ರಮಣ್ಯ ನಟ್ಟೋಜ ಮಾತನಾಡಿ ಸೈನಿಕರು ಕೇವಲ ಯುದ್ಧದ ಸಂದರ್ಭದಲ್ಲಿ ಮಾತ್ರವಲ್ಲದೆ ಪ್ರಾಕೃತಿಕ ವಿಕೋಪಗಳ ಸಂದರ್ಭದಲ್ಲಿಯೂ ಜನರನ್ನು ರಕ್ಷಿಸುವ ಕಾರ್ಯದಲ್ಲಿ ನಿರತರಾಗುತ್ತಾರೆ. ತಮ್ಮ ಕುಟುಂಬವನ್ನು ಬಿಟ್ಟು ಸಮಾಜದ ವಿವಿಧ ಕುಟುಂಬಗಳ ರಕ್ಷಣೆಗಾಗಿ ತಮ್ಮನ್ನು ಮುಡಿಪಾಗಿಟ್ಟುಕೊಳ್ಳುತ್ತಾರೆ. ಹಾಗಾಗಿ ನಾವು ಎಲ್ಲೇ ಹೋಗಲಿ, ಎಷ್ಟೇ ದೂರ ಪ್ರಯಾಣಿಸಲಿ ನಮ್ಮ ಹೆಮ್ಮೆಯ ಸೈನಿಕರನ್ನು ಗೌರವಿಸುವುದು ನಮ್ಮೆಲ್ಲರ ಕರ್ತವ್ಯ ಹಾಗೂ ಜವಾಬ್ದಾರಿಯಾಗಿದೆ. ಆದ್ದರಿಂದ ಅಂಬಿಕಾ ವಿದ್ಯಾಸಂಸ್ಥೆಯು ಕೇವಲ ಆಡಳಿತ ಮಂಡಳಿ, ಶಿಕ್ಷಕರು, ಪೋಷಕರು ಹಾಗೂ ವಿದ್ಯಾರ್ಥಿಗಳನ್ನು ಒಳಗೊಂಡಿಲ್ಲ. ನಮ್ಮ ದೇಶದ ಸೈನಿಕರನ್ನೂ ಒಡಗೂಡಿ ಅಂಬಿಕಾ ಪರಿವಾರವೆನಿಸಿಕೊಂಡಿದೆ ಎಂದು ನುಡಿದರು.
ಸುಂದರ ಪೂಜಾರಿ ದಂಪತಿಯನ್ನು ಅಂಬಿಕಾ ಸಂಸ್ಥೆಗಳ ಪರವಾಗಿ ಸನ್ಮಾನಿಸಲಾಯಿತು.

Ad Widget

Ad Widget

ಕಾರ್ಯಕ್ರಮದಲ್ಲಿ ವಿದ್ಯಾಲಯದ ಪ್ರಾಂಶುಪಾಲೆ ಮಾಲತಿ ಡಿ. ಹಾಗೂ ಉಪಪ್ರಾಂಶುಪಾಲೆ ಸುಜನಿ ಬೋರ್ಕರ್ ಉಪಸ್ಥಿತರಿದ್ದರು.

6ನೇ ತರಗತಿಯ ಆರಾಧ್ಯ ಸ್ವಾಗತಿಸಿದರು. 9ನೇ ತರಗತಿಯ ಮಾನ್ಯಲಕ್ಷೀ ಎನ್ ಪಿ ಯೋಧರ ಪರಿಚಯಗೈದರು. 9ನೇ ತರಗತಿಯ ಕುವೀರ ಕಾರ್ಯಕ್ರಮ ನಿರ್ವಹಿಸಿ ವಂದಿಸಿದರು. ವಿದ್ಯಾರ್ಥಿನಿ ದೀಪ್ತಿ ಬಿ ಪಿ ಸಹಕರಿಸಿದರು.

Ad Widget
Continue Reading

ಶಿಕ್ಷಣ

Vivekananda-ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನಲ್ಲಿ ಜಾಗೃತಿ ಕಾರ್ಯಕ್ರಮ

Published

on



Ad Widget

Ad Widget

Ad Widget

Ad Widget

ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಕಾಲೇಜು ಆಂತರಿಕ ದೂರು ಸಮಿತಿ, ಡಾಟಾ ಸೈನ್ಸ್ ಎಂಜಿನಿಯರಿಂಗ್ ವಿಭಾಗ, ಡಾಟಾ ಸೈನ್ಸ್ ವಿದ್ಯಾರ್ಥಿ ಸಂಘ, ಪೇರೆಂಟ್ ರಿಲೇಶನ್ ಸೆಲ್ ಮತ್ತು ಗ್ರೀವೆನ್ಸ್ ರೆಡ್ರೆಸ್ಸಲ್ ಸೆಲ್ ಇದರ ಸಂಯುಕ್ತ ಆಶ್ರಯದಲ್ಲಿ ಪರದೆಯಿಂದ ಆತ್ಮದ ಕಡೆಗೆ: ಜೆನ್-ಜೀ ನಡವಳಿಕೆಗಳು, ಮಿತಿಗಳು ಮತ್ತು ಅದರಾಚೆಗಿನ ಆಯಾಮಗಳು ಈ ವಿಷಯದ ಬಗ್ಗೆ ನಡೆದ ಜಾಗೃತಿ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಪುತ್ತೂರಿನ ಪ್ರಗತಿ ಸ್ಪೆಶಾಲಿಟಿ ಆಸ್ಪತ್ರೆಯ ವೃದ್ಧಾಪ್ಯ ರೋಗ ಮತ್ತು ಮಧುಮೇಹ ತಜ್ಞರಾದ ಡಾ. ಅನನ್ಯಲಕ್ಷ್ಮೀ ಸಂದೀಪ್ ಮಾತಾಡಿದರು.

Ad Widget

Ad Widget

Ad Widget

Ad Widget

ಪುತ್ತೂರು: ಲೈಂಗಿಕ ಕಿರುಕುಳ ಎನ್ನುವುದು ಕೇವಲ ದೈಹಿಕ ಸ್ಪರ್ಶಕ್ಕೆ ಸೀಮಿತವಾಗಿಲ್ಲ ಬದಲಾಗಿ ಆಶ್ಲೀಲ ಸಂದೇಶಗಳನ್ನು ಕಳುಹಿಸುವುದು, ಮಾತುಗಳನ್ನಾಡುವುದು ಅಥವಾ ಅಂತಹ ಯಾವುದೇ ರೀತಿಯ ವರ್ತನೆಗಳೂ ಕೂಡಾ ಇದರಲ್ಲಿ ಸೇರಿವೆ ಎಂದು ಪುತ್ತೂರಿನ ಪ್ರಗತಿ ಸ್ಪೆಶಾಲಿಟಿ ಆಸ್ಪತ್ರೆಯ ವೃದ್ಧಾಪ್ಯ ರೋಗ ಮತ್ತು ಮಧುಮೇಹ ತಜ್ಞರಾದ ಡಾ. ಅನನ್ಯಲಕ್ಷ್ಮೀ ಸಂದೀಪ್ ಹೇಳಿದರು.

Ad Widget

Ad Widget

Ad Widget alt="Ad Widget"/>

Ad Widget

ಅವರು ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಕಾಲೇಜು ಆಂತರಿಕ ದೂರು ಸಮಿತಿ, ಡಾಟಾ ಸೈನ್ಸ್ ಎಂಜಿನಿಯರಿಂಗ್ ವಿಭಾಗ, ಡಾಟಾ ಸೈನ್ಸ್ ವಿದ್ಯಾರ್ಥಿ ಸಂಘ, ಪೇರೆಂಟ್ ರಿಲೇಶನ್ ಸೆಲ್ ಮತ್ತು ಗ್ರೀವೆನ್ಸ್ ರೆಡ್ರೆಸ್ಸಲ್ ಸೆಲ್ ಇದರ ಸಂಯುಕ್ತ ಆಶ್ರಯದಲ್ಲಿ ಪರದೆಯಿಂದ ಆತ್ಮದ ಕಡೆಗೆ: ಜೆನ್-ಜೀ ನಡವಳಿಕೆಗಳು, ಮಿತಿಗಳು ಮತ್ತು ಅದರಾಚೆಗಿನ ಆಯಾಮಗಳು ಈ ವಿಷಯದ ಬಗ್ಗೆ ನಡೆದ ಜಾಗೃತಿ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಮಾತಾಡಿದರು.

Ad Widget

Ad Widget <> Ad Widget

ಇಂದಿನ ಪೀಳಿಗೆ, ಅವರ ಪೋಷಕರು, ಶಿಕ್ಷಕರ ನಡುವಿನ ವ್ಯತ್ಯಾಸ ಮತ್ತು ಜವಾಬ್ಧಾರಿಗಳ ಬಗ್ಗೆ ವಾಸ್ತವಿಕ ಉದಾಹರಣೆಗಳನ್ನು ಉಲ್ಲೇಖಿಸಿದ ಅವರು ಯುವಜನತೆ ಪಾಲಿಸಬೇಕಾದ ಮತ್ತು ಪಾಲಿಸಬಾರದ ವಿಷಯಗಳ ಬಗ್ಗೆ ತಿಳಿಸಿದರು. ಒಬ್ಬರ ಸಾಮರ್ಥ್ಯವನ್ನು, ದೇಹದ ಆಕಾರವನ್ನು ಟೀಕಿಸುವುದು ಕೂಡಾ ಅಪರಾಧ. ಅಂತಹ ಸಂದರ್ಭದಲ್ಲಿ ಅದನ್ನು ಎದುರಿಸುವ, ಪ್ರತಿಕ್ರಿಯಿಸುವ ಬಗೆ ಮತ್ತು ದೂರು ಸಲ್ಲಿಸಬೇಕಾದ ಪ್ರಾಧಿಕಾರಗಳ ಬಗ್ಗೆ ತಿಳಿಸಿದರು. ನೀವು ಕೋಪಗೊಂಡಿದ್ದರೆ, ಅತಿಯಾದ ಉತ್ಸಾಹದಲ್ಲಿದ್ದರೆ ಅಥವಾ ಒತ್ತಡದಲ್ಲಿದ್ದರೆ ಯಾವುದೇ ಪ್ರಮುಖ ನಿರ್ಧಾರಗಳನ್ನು ತೆಗೆದುಕೊಳ್ಳುವುದನ್ನು 10 ನಿಮಿಷಗಳ ಕಾಲ ಮುಂದೂಡಿ. ಸಾಧ್ಯವಾದರೆ ಆ ಬಗ್ಗೆ ತೀರ್ಮಾನ ತೆಗೆದುಕೊಳ್ಳುವ ಮೊದಲು ಒಂದು ರಾತ್ರಿ ಚೆನ್ನಾಗಿ ಯೋಚಿಸಿ ಎಂದು ಹೇಳಿದರು.



Ad Widget

ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಕಾಲೇಜು ಆಡಳಿತ ಮಂಡಳಿಯ ನಿರ್ದೇಶಕಿ ರಕ್ಷ.ಎಸ್.ಆರ್ ಮಾತನಾಡಿ ಮೊದಲು ಆಲಿಸಿ ನಂತರ ಮಾತನಾಡಿ, ಕೆಲವೊಮ್ಮೆ ಅಲ್ಲಿ ಉಪಸ್ಥಿತರಿದ್ದು ಮೌನವಾಗಿ ಆಲಿಸುವುದರಿಂದ ಜೀವನದಲ್ಲಿ ಹೆಚ್ಚಿನ ಪ್ರಯೋಜನಗಳಾಗುತ್ತದೆ ಎಂದರು. ಒಬ್ಬ ಉತ್ತಮ ಇಂಜಿನಿಯರ್ ಆಗುವ ಜತೆಯಲ್ಲಿ ದೇಶದ ಪ್ರಜ್ಞಾವಂತ ಪ್ರಜೆಯಾಗಿ ಎಂದು ನುಡಿದರು.
ಕಾಲೇಜು ಆಂತರಿಕ ದೂರು ಸಮಿತಿಯ ಅಧ್ಯಕ್ಷೆ ಡಾ.ಜೋತಿಮಣಿ.ಕೆ, ಡಾಟಾಸೈನ್ಸ್ ವಿಭಾಗ ಮುಖ್ಯಸ್ಥೆ ಪ್ರೊ.ರೂಪಾ.ಜಿ.ಕೆ ವೇದಿಕೆಯಲ್ಲಿ ಉಪಸ್ಥಿತರಿದ್ದರು.

Ad Widget

Ad Widget

ಡಾಟಾಸೈನ್ಸ್ ವಿಭಾಗದ ವಿದ್ಯಾರ್ಥಿಗಳಾದ ಗಗನ್‌ದೀಪ್ ಸ್ವಾಗತಿಸಿ, ನಿಹಾರಿಕಾ ಅತಿಥಿಗಳನ್ನು ಪರಿಚಯಿಸಿದರು. ಆಶ್ಲೇಷ್ ವಂದನಾರ್ಪಣೆಗೈದರು. ಶ್ರೇಯಾ ಎಮ್. ಕಾರ್ಯಕ್ರಮ ನಿರ್ವಹಿಸಿದರು.

Ad Widget
Continue Reading

ಶಿಕ್ಷಣ

Vivekananda-ವಿವೇಕಾನಂದ ಕಾಲೇಜಿನ ಎನ್ ಸಿ ಸಿ ವಿದ್ಯಾರ್ಥಿಗಳು ಸ್ಪೆಷಲ್ ನ್ಯಾಷನಲ್ ಇಂಟಿಗ್ರೇಷನ್ ಕ್ಯಾಂಪ್‌ಗೆ ಆಯ್ಕೆ

Published

on



Ad Widget

Ad Widget

Ad Widget

Ad Widget

ವಿವೇಕಾನಂದ ಕಲಾ, ವಾಣಿಜ್ಯ ಹಾಗೂ ವಿಜ್ಞಾನ ಮಹಾವಿದ್ಯಾಲಯ (ಸ್ವಾಯತ್ತ)ದ ಎನ್.ಸಿ.ಸಿ ಘಟಕದ ತೃತೀಯ ಬಿಸಿಎ ವಿದ್ಯಾರ್ಥಿನಿ ಸಿಕ್ಯೂಎಂಎಸ್ ಬಿ.ಆಶಾಕಿರಣ್ ಮತ್ತು ಪ್ರಥಮ ಬಿಎಸ್ಸಿ ವಿದ್ಯಾರ್ಥಿ ಸಿಪಿಎಲ್ ಎಸ್.ಎಂ ದರ್ಶನ್ ಇವರು ಸ್ಪೆಷಲ್ ನ್ಯಾಷನಲ್ ಇಂಟಿಗ್ರೇಷನ್ ಕ್ಯಾಂಪ್‌ನಲ್ಲಿ ಭಾಗವಹಿಸಲಿದ್ದಾರೆ.

Ad Widget

Ad Widget

Ad Widget

Ad Widget

ಪುತ್ತೂರು: ಇಲ್ಲಿನ ವಿವೇಕಾನಂದ ಕಲಾ, ವಾಣಿಜ್ಯ ಹಾಗೂ ವಿಜ್ಞಾನ ಮಹಾವಿದ್ಯಾಲಯ (ಸ್ವಾಯತ್ತ)ದ ಎನ್.ಸಿ.ಸಿ ಘಟಕದ ತೃತೀಯ ಬಿಸಿಎ ವಿದ್ಯಾರ್ಥಿನಿ ಸಿಕ್ಯೂಎಂಎಸ್ ಬಿ.ಆಶಾಕಿರಣ್ ಮತ್ತು ಪ್ರಥಮ ಬಿಎಸ್ಸಿ ವಿದ್ಯಾರ್ಥಿ ಸಿಪಿಎಲ್ ಎಸ್.ಎಂ ದರ್ಶನ್ ಇವರು ಸ್ಪೆಷಲ್ ನ್ಯಾಷನಲ್ ಇಂಟಿಗ್ರೇಷನ್ ಕ್ಯಾಂಪ್‌ನಲ್ಲಿ ಭಾಗವಹಿಸಲಿದ್ದಾರೆ.

Ad Widget

Ad Widget

Ad Widget alt="Ad Widget"/>

Ad Widget

ಗುಜರಾತ್‌ನಲ್ಲಿ ಸ್ಪೆಷಲ್ ನ್ಯಾಷನಲ್ ಇಂಟಿಗ್ರೇಷನ್ ಕ್ಯಾಂಪ್ ನಡೆಯುತ್ತಿದ್ದು, ಈ ಕ್ಯಾಂಪ್‌ನಲ್ಲಿ ಭಾಗವಹಿಸುವ ವಿದ್ಯಾರ್ಥಿಗಳು ನವೆಂಬರ್ ೧ರಂದು ನಡೆಯುವ ಸರ್ದಾರ್ ವಲ್ಲಭಬಾಯ್ ಪಟೇಲ್ ಜನ್ಮ ದಿನಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಈ ಕಾರ್ಯಕ್ರಮಕ್ಕೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಗಣ್ಯ ವ್ಯಕ್ತಿಯಾಗಿ ಆಗಮಿಸಲಿದ್ದಾರೆ.

Ad Widget

Ad Widget <> Ad Widget

ಇವರಿಗೆ ಎನ್.ಸಿ.ಸಿ ಘಟಕದ ಮುಖ್ಯಸ್ಥ ಲೆ. ಭಾಮಿ ಅತುಲ್ ಶೆಣೈ ಮಾರ್ಗದರ್ಶನ ನೀಡಿರುತ್ತಾರೆ. ವಿದ್ಯಾರ್ಥಿಗಳ ಈ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಎನ್.ಸಿ.ಸಿ ಘಟಕ, ಐಕ್ಯೂಎಸಿ ಘಟಕ, ಉಪನ್ಯಾಸಕ ಹಾಗೂ ಉಪನ್ಯಾಸಕೇತರ ವೃಂದ ಹಾಗೂ ವಿದ್ಯಾರ್ಥಿ ವೃಂದ ಶುಭಾಶಯಗಳನ್ನು ಕೋರುತ್ತಾರೆ.



Ad Widget
Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!

Discover more from Nikhara News | Kannada News Website

Subscribe now to keep reading and get access to the full archive.

Continue reading