ಮಂಗಳೂರು
ಯಕ್ಷಗಾನದ ಮೇರು ಕಲಾವಿದ ಸರಪಾಡಿ ಅಶೋಕ ಶೆಟ್ಟಿಯವರಿಗೆ 60 ರ ಸಂಭ್ರಮ – ಷಷ್ಟ್ಯಬ್ದ ಸಮಾರಂಭ ಆಯೋಜಿಸಲು ಸಮಾಲೋಚನಾ ಸಭೆ
ಬಂಟ್ವಾಳ Bantwala ಅ 10 : “ಸರಪಾಡಿದಸರ್ಪೆ” ಖ್ಯಾತಿಯ ಸರಪಾಡಿ ಅಶೋಕ ಶೆಟ್ಟಿಯವರ 60ನೇ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ಷಷ್ಟ್ಯಬ್ದ ಸಮಾರಂಭ ಆಯೋಜಿಸಲು ಅವರ ಅಭಿಮಾನಿಗಳು ನಿರ್ಧರಿಸಿದ್ದಾರೆ. ಈ ಕುರಿತ ಸಮಾಲೋಚನಾ ಸಭೆಯು ಬಿ.ಸಿ.ರೋಡಿನ ಹೋಟೆಲ್ ರಂಗೋಲಿ ಸಭಾಂಗಣದಲ್ಲಿ ಅ 9 ರಂದು ನಡೆಯಿತು.
ಸಭೆಯಲ್ಲಿ ಸಮಾರಂಭದ ರೂಪುರೇಖೆ, ಕಾರ್ಯಕ್ರಮ ಸಂಯೋಜನೆ, ಸಂಚಿಕೆ ಬಿಡುಗಡೆಯ ಕುರಿತು ವಿಸ್ತಾರವಾಗಿ ಚರ್ಚಿಸಲಾಯಿತು. ಮುಂದಿನ ದಿನಗಳಲ್ಲಿ ಸಭೆ ಸೇರಿ ಅಭಿನಂದನಾ ಸಮಿತಿಯನ್ನು ರಚಿಸಲು ತೀರ್ಮಾನಿಸಲಾಯಿತು.
ಪ್ರಮುಖರಾದ ಜಗನ್ನಾಥ ಚೌಟ ಬದಿಗುಡ್ಡೆ, ನಾರಾಯಣ ಭಟ್ ಕೈಯೂರು, ಎಚ್.ಕೆ.ನೈನಾಡು, ರತ್ನಾಕರ ಶೆಟ್ಟಿ ಕಲ್ಲಡ್ಕ, ಡಾ|ಬಾಲಚಂದ್ರ ಶೆಟ್ಟಿ ಸರಪಾಡಿ, ಡಿ.ಮನೋಹರ್‌ಕುಮಾರ್,ರಾಜೇಶ್ ಗುಜರನ್, ಮೋಹನದಾಸ ಕೊಟ್ಟಾರಿ, ತಾರಾನಾಥ ಕೊಟ್ಟಾರಿ ತೇವು, ಎಂ.ನಾ.ಚಂಬಲ್ತಿಮಾರ್, ರತ್ನದೇವ್ ಪುಂಜಾಲಕಟ್ಟೆ, ಮಂಜು ವಿಟ್ಲ, ರವಿರಾಜ್ ಶೆಟ್ಟಿ ಪೆರುವಾಯಿ, ಗಣೇಶ್ ರೈ ಪುತ್ತೂರು, ಯೋಗೀಶ್ ಶೆಟ್ಟಿ ಆರುಮುಡಿ ಅವರನ್ನು ಸಂಚಾಲಕರನ್ನಾಗಿ ನೇಮಿಸಲಾಯಿತು.

ಸಭೆಯಲ್ಲಿ ಸುಭಾಶ್ಚಂದ್ರ ಜೈನ್, ಉದಯಕುಮಾರ್ ಬಿ, ಎಸ್.ಶಂಕರನಾರಾಯಣ ಹೊಳ್ಳ, ಮೋಹನದಾಸ ಶೆಟ್ಟಿಮುನ್ನಲಾಯಿಗುತ್ತು ಶಿವರಾಮ ಶೆಟ್ಟಿ ದೋಟ, ರಾಧಾಕೃಷ್ಣ ರೈ ಕೊಟ್ಟುಂಜ, ದಯಾನಂದ ಶೆಟ್ಟಿ, ಪ್ರಕಾಶ್ಚಂದ್ರ ಆಳ್ವ, ಕೀರ್ತನ್ಶೆಟ್ಟಿ ವಗೆನಾಡು, ದಿನೇಶ್ ಶೆಟ್ಟಿ, ಪ್ರಶಾಂತ್ ಆಚಾರ್, ಆನಂದ ಶೆಟ್ಟಿ ಬಾಚಕೆರೆ, ಆನಂದ ಶೆಟ್ಟಿ ಆರುಮುಡಿ, ಯಾದವ ಶೆಟ್ಟಿ ಹಂಡೀರು, ಅಖಿಲ್ ಶೆಟ್ಟಿ ಕುರ್ಯಾಳ, ಮನೋಜ್ ಶೆಟ್ಟಿ, ಎಂ.ಅಪ್ಪಯ್ಯ ಶೆಟ್ಟಿ, ಅನಾರು ಕೃಷ್ಣ ಶರ್ಮ, ನಯನಾಡು ಹರೀಶ ಶೆಟ್ಟಿ, ಕೆ.ಕುಸುಮಾಕರ ಶೆಟ್ಟಿ, ವಿಕ್ರಮ್ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.

ಮಂಗಳೂರು
MRPL accident-MRPL ಅವಘಡದಲ್ಲಿ ಮೃತಪಟ್ಟ ಕರ್ಕಡ ಕುಟುಂಬಕ್ಕೆ EPFO ಕ್ಲೈಮ್ ಸಂದಾಯ
MRPL ಕಾರ್ಮಿಕರ ಭವಿಷ್ಯ ನಿಧಿ ಸಂಘಟನೆ (EPFO), ಮಂಗಳೂರು ಪ್ರಾದೇಶಿಕ ಕಚೇರಿಯು, 30.09.2026 ರಂದು ಮಂಗಳೂರು ಪೆಟ್ರೋಕೆಮಿಕಲ್ಸ್ ಲಿಮಿಟೆಡ್ ನಲ್ಲಿ ಸಂಭವಿಸಿದ ಕೈಗಾರಿಕಾ ಅಪಘಾತದಲ್ಲಿ ಮರಣ ಹೊಂದಿದ ಭವಿಷ್ಯ ನಿಧಿ ಚಂದಾದಾರರಾದ ದಿವಂಗತ ಮನೀಶ್ ಕರ್ಕಡ ಅವರ ಕುಟುಂಬದ ಅವಲಂಬಿತರ ಸಾಮಾಜಿಕ ಭದ್ರತಾ ಸೌಲಭ್ಯಗಳ ಕ್ಷೇಮುಗಳನ್ನು ತ್ವರಿತವಾಗಿ ಇತ್ಯರ್ಥಪಡಿಸಲಾಗಿದೆ.
ಮಂಗಳೂರು : MRPL ಕಾರ್ಮಿಕರ ಭವಿಷ್ಯ ನಿಧಿ ಸಂಘಟನೆ (EPFO), ಮಂಗಳೂರು ಪ್ರಾದೇಶಿಕ ಕಚೇರಿಯು, 30.09.2026 ರಂದು ಮಂಗಳೂರು ಪೆಟ್ರೋಕೆಮಿಕಲ್ಸ್ ಲಿಮಿಟೆಡ್ ನಲ್ಲಿ ಸಂಭವಿಸಿದ ಕೈಗಾರಿಕಾ ಅಪಘಾತದಲ್ಲಿ ಮರಣ ಹೊಂದಿದ ಭವಿಷ್ಯ ನಿಧಿ ಚಂದಾದಾರರಾದ ದಿವಂಗತ ಮನೀಶ್ ಕರ್ಕಡ ಅವರ ಕುಟುಂಬದ ಅವಲಂಬಿತರ ಸಾಮಾಜಿಕ ಭದ್ರತಾ ಸೌಲಭ್ಯಗಳ ಕ್ಷೇಮುಗಳನ್ನು ತ್ವರಿತವಾಗಿ ಇತ್ಯರ್ಥಪಡಿಸಲಾಗಿದೆ.
ಕಾರ್ಮಿಕರ ಭವಿಷ್ಯ ನಿಧಿ ಸಂಘಟನೆ (EPFO) ವತಿಯಿಂದ ಕುಟುಂಬಕ್ಕೆ ಪಾವತಿಸಬೇಕಾದ ಉದ್ಯೋಗಿಗಳ ಭವಿಷ್ಯ ನಿಧಿ ಹಾಗೂ ಉದ್ಯೋಗಿಗಳ ಠೇವಣಿ ಆಧಾರಿತ ವಿಮಾ ಸೌಲಭ್ಯಗಳ ಕ್ಷೇಮುಗಳನ್ನು ಇತ್ಯರ್ಥಪಡಿಸಲಾಗಿದೆ.
ಇದರೊಂದಿಗೆ ಉದ್ಯೋಗಿಗಳ ಪಿಂಚಣಿ ಯೋಜನೆ 2026ರ ಅಡಿಯಲ್ಲಿ, ಮಾಸಿಕ ಪಿಂಚಣಿಯನ್ನೂ ಮಂಜೂರು ಮಾಡಿ ಪಾವತಿ ಪ್ರಾರಂಭಿಸಲಾಗಿದೆ. ಈ ಎಲ್ಲಾ ಸೌಲಭ್ಯಗಳನ್ನು 08.10.2026 ರಂದು ಇತ್ಯರ್ಥಪಡಿಸಿ ಜಾರಿಗೊಳಿಸಲಾಗಿದೆ ಹಾಗೂ ಮೊತ್ತವನ್ನು ಪಾವತಿಸಲಾಗಿದೆ.
ದುಃಖತಪ್ತ ಕುಟುಂಬಕ್ಕೆ ಸಂತಾಪ ಹಾಗೂ ಸಾಂತ್ವನ ಸಲ್ಲಿಸುವ ಉದ್ದೇಶದಿಂದ, ಪ್ರಾದೇಶಿಕ ಭವಿಷ್ಯ ನಿಧಿ ಆಯುಕ್ತರಾದ ಸಂದೀಪ್ ಬಿಸ್ವಾಸ್ ಅವರು, ಸಹಾಯಕ ಭವಿಷ್ಯ ನಿಧಿ ಆಯುಕ್ತರಾದ ಅಂಕಿತ್ ಸಿಂಗ್ ಹಾಗೂ ಪ್ರವರ್ತನಾಧಿಕಾರಿಯಾದ ಶ್ರೀಮತಿ ಅನಿತಾ ಆರ್ ಅವರೊಂದಿಗೆ 09.10.2026 ರಂದು ದಿವಂಗತ ಶ್ರೀ ಮನೀಶ್ ಕರ್ಕಡ ಅವರ ನಿವಾಸಕ್ಕೆ ಭೇಟಿ ನೀಡಿ, ಫಲಾನುಭವಿಗೆ ಪಿಂಚಣಿ ಪಾವತಿ ಆದೇಶವನ್ನು (PPO) ಹಸ್ತಾಂತರಿಸಿದರು. ಈ ಭೇಟಿಯು ಸಂಕಷ್ಟದ ಸಂದರ್ಭದಲ್ಲಿ ತನ್ನ ಸದಸ್ಯರ ಕುಟುಂಬಗಳೊಂದಿಗೆ ನಿಲ್ಲುವ EPFO ಸಂಸ್ಥೆಯ ಮಾನವೀಯ ಕಾಳಜಿ ಮತ್ತು ಬದ್ಧತೆಯನ್ನು ಪ್ರತಿಬಿಂಬಿಸುತ್ತದೆ.
ಅನಿರೀಕ್ಷಿತ ದುರಂತಗಳ ಸಂದರ್ಭದಲ್ಲಿ ತನ್ನ ಸದಸ್ಯರ ಕುಟುಂಬಗಳಿಗೆ ಸಲ್ಲಬೇಕಾದ ಸಾಮಾಜಿಕ ಭದ್ರತಾ ಸೌಲಭ್ಯಗಳನ್ನು ಸಕಾಲದಲ್ಲಿ ಒದಗಿಸುವುದು EPFO ಸಂಸ್ಥೆಯ ಬದ್ಧತೆಯಾಗಿದೆ ಎಂಬುದನ್ನು ಈ ತ್ವರಿತ ಇತ್ಯರ್ಥವು ಮತ್ತೊಮ್ಮೆ ದೃಢಪಡಿಸಿದೆ.
EPFO ಸಂಸ್ಥೆಯು ಮೃತ ಸದಸ್ಯರ ಕುಟುಂಬಕ್ಕೆ ತನ್ನ ತೀವ್ರ ಸಂತಾಪವನ್ನು ವ್ಯಕ್ತಪಡಿಸುತ್ತಿದ್ದು, ಈ ಕಷ್ಟದ ಸಮಯದಲ್ಲಿ ಅಗತ್ಯವಿರುವ ಎಲ್ಲಾ ರೀತಿಯ ನೆರವು ನೀಡಲು ಬದ್ಧವಾಗಿದೆ.
ಮಂಗಳೂರು
Mangalore-ಮಂಗಳೂರು : 2 ತಿಂಗಳ ಬಳಿಕ ಸಮಾಧಿಯಿಂದ ಹೊರಬರಲಿದೆ ಆಲ್ಬರ್ಟ್ ರೇಗೋ ಶವ..!; ಮಗಳಿಂದಲೇ ತಂದೆಯ ಕೊಲೆ : ಸ್ನೇಹಿತನ ಆರೋಪ – ತನಿಖೆಗೆ ಸಿಗಲಿದೆ ಮಹತ್ವದ ತಿರುವು
ಎರಡು ತಿಂಗಳ ಹಿಂದೆ ಮೃತಪಟ್ಟ ವ್ಯಕ್ತಿಯ ಸಾವಿನ ಸುತ್ತ ಅನುಮಾನದ ಹುತ್ತ ಬೆಳೆದಿದ್ದು, ಇದೀಗ ಹೂತು ಹಾಕಿದ್ದ ಶವವನ್ನೇ ಹೊರತೆಗೆದು ಪರೀಕ್ಷೆ ನಡೆಸಲು ಪೊಲೀಸರು ಮುಂದಾಗಿದ್ದಾರೆ ಎಂಬ ಮಾಹಿತಿ ಎಲ್ಲೆಡೆ ಹರಡಿದೆ. ಆಸ್ತಿ ವಿವಾದದ ಹಿನ್ನೆಲೆಯಲ್ಲಿ ಮಗಳೇ ತಂದೆಯ ಕೊಲೆಗೆ ಸಂಚು ರೂಪಿಸಿದ್ದಾರೆ ಎಂಬ ಆರೋಪ ಕೇಳಿಬಂದಿರುವ ಈ ಪ್ರಕರಣ ಮಂಗಳೂರಿನಲ್ಲಿ ತೀವ್ರ ಕುತೂಹಲ ಮೂಡಿಸಿದೆ.

ಮಂಗಳೂರು, ಅ 9: ಎರಡು ತಿಂಗಳ ಹಿಂದೆ ಮೃತಪಟ್ಟ ವ್ಯಕ್ತಿಯ ಸಾವಿನ ಸುತ್ತ ಅನುಮಾನದ ಹುತ್ತ ಬೆಳೆದಿದ್ದು, ಇದೀಗ ಹೂತು ಹಾಕಿದ್ದ ಶವವನ್ನೇ ಹೊರತೆಗೆದು ಪರೀಕ್ಷೆ ನಡೆಸಲು ಪೊಲೀಸರು ಮುಂದಾಗಿದ್ದಾರೆ ಎಂಬ ಮಾಹಿತಿ ಎಲ್ಲೆಡೆ ಹರಡಿದೆ. ಆಸ್ತಿ ವಿವಾದದ ಹಿನ್ನೆಲೆಯಲ್ಲಿ ಮಗಳೇ ತಂದೆಯ ಕೊಲೆಗೆ ಸಂಚು ರೂಪಿಸಿದ್ದಾರೆ ಎಂಬ ಆರೋಪ ಕೇಳಿಬಂದಿರುವ ಈ ಪ್ರಕರಣ ಮಂಗಳೂರಿನಲ್ಲಿ ತೀವ್ರ ಕುತೂಹಲ ಮೂಡಿಸಿದೆ.
ಮಂಗಳೂರಿನ ಕೊಟ್ಟಾರ ಫಸ್ಟ್ ಕ್ರಾಸ್ ನಿವಾಸಿ ಆಲ್ಬರ್ಟ್ ರೇಗೋ (Albert Rego) ಅವರು ಕಳೆದ ಜುಲೈ 19ರಂದು ಸಂಶಯಾಸ್ಪದ ರೀತಿಯಲ್ಲಿ ಮೃತಪಟ್ಟಿದ್ದರು. ಅವರ ಸಾವಿನ ಬಳಿಕ ಮರಣೋತ್ತರ ಪರೀಕ್ಷೆ ನಡೆಸದೆ ಅಂತ್ಯಕ್ರಿಯೆ ನೆರವೇರಿಸಲಾಗಿದೆ ಎಂಬ ಆರೋಪ ಪ್ರಕರಣಕ್ಕೆ ಹೊಸ ತಿರುವು ನೀಡಿದೆ. ಇದೀಗ ಕುಂಟಿಕಾನ ಸಮೀಪದ ದೇರೆಬೈಲ್ ಚರ್ಚ್ ಆವರಣದ ದಫನ ಭೂಮಿಯಲ್ಲಿ ಹೂತು ಹಾಕಿರುವ ಅವರ ಶವವನ್ನು ಹೊರತೆಗೆದು ವಿಧಿವಿಜ್ಞಾನ ಪ್ರಯೋಗಾಲಯದ (ಎಫ್‌ಎಸ್‌ಎಲ್) ತಜ್ಞರ ನೆರವಿನಿಂದ ಪರಿಶೀಲಿಸಲು ಪೊಲೀಸರು ಸಿದ್ಧತೆ ನಡೆಸಿದ್ದಾರೆ ಎನ್ನಲಾಗಿದೆ.
ಸ್ನೇಹಿತನ ದೂರಿನಿಂದ ಬಯಲಿಗೆ ಬಂದ ಅನುಮಾನ
ಆಲ್ಬರ್ಟ್ ರೇಗೋ ಅವರ ಸಾವಿನ ಕುರಿತು ಅನುಮಾನ ವ್ಯಕ್ತಪಡಿಸಿದ ಅವರ ಸ್ನೇಹಿತ ಹೆರಾಲ್ಡ್ ಪಿರೇರಾ ಅವರು ಉರ್ವಾ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಸಾವಿನ ಬಗ್ಗೆ ಸ್ಥಳೀಯರಿಗೆ ಹಾಗೂ ಕುಟುಂಬದ ಇತರ ಸದಸ್ಯರಿಗೆ ಮಾಹಿತಿ ನೀಡದೆ, ಆಪ್ತರ ಮೂಲಕ ಮಗಳು ಮಾಯಾ ರೇಗೋ ಅಂತ್ಯಕ್ರಿಯೆ ನಡೆಸಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ. ಈ ಹಿನ್ನೆಲೆಯಲ್ಲಿ ಮಾಯಾ ರೇಗೋ ಸೇರಿದಂತೆ ಇತರರ ವಿರುದ್ಧ ಪೊಲೀಸರು ಎಫ್‌ಐಆರ್ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದರು.
ಆಸ್ತಿಗಾಗಿ ಕಿರುಕುಳ ನೀಡಿದ್ದ ಆರೋಪ
ಆಲ್ಬರ್ಟ್ ರೇಗೋ ಅವರು ಹಿಂದೆ ವಿದೇಶದಲ್ಲಿ ಉದ್ಯೋಗದಲ್ಲಿದ್ದು, ಸಾಕಷ್ಟು ಆಸ್ತಿ ಸಂಪಾದಿಸಿದ್ದರು ಎನ್ನಲಾಗಿದೆ. ಅವರ ಇಬ್ಬರು ಮಕ್ಕಳು ಬೇರೆ ಬೇರೆ ಕಡೆ ನೆಲೆಸಿದ್ದರೆ, ಮಾಯಾ ರೇಗೋ ಮಾತ್ರ ಅವರೊಂದಿಗೆ ವಾಸವಾಗಿದ್ದರು ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.
ಮಗಳು ನಿರಂತರವಾಗಿ ಕಿರುಕುಳ ನೀಡುತ್ತಿದ್ದು, ಬಲವಂತವಾಗಿ ಆಸ್ತಿಯನ್ನು ತನ್ನ ಹೆಸರಿಗೆ ವರ್ಗಾಯಿಸಿಕೊಳ್ಳಲು ಯತ್ನಿಸಿದ್ದಾಳೆ ಎಂಬುದು ದೂರುದಾರರ ಆರೋಪ. ತನಗೆ ಹಲ್ಲೆ ನಡೆಸಿ ಕಿರುಕುಳ ನೀಡುತ್ತಿರುವ ಬಗ್ಗೆ ಆಲ್ಬರ್ಟ್ ಅವರು ಸ್ನೇಹಿತರ ಬಳಿ ಹೇಳಿಕೊಂಡಿದ್ದರು. ತನಗೇನಾದರೂ ಅನಾಹುತ ಸಂಭವಿಸಿದರೆ ಅದಕ್ಕೆ ಮಗಳ ಕಿರುಕುಳವೇ ಕಾರಣವಾಗಬಹುದು ಎಂಬ ಆತಂಕವನ್ನೂ ವ್ಯಕ್ತಪಡಿಸಿದ್ದರು ಎಂದು ಹೆರಾಲ್ಡ್ ಪಿರೇರಾ ದೂರಿನಲ್ಲಿ ತಿಳಿಸಿದ್ದಾರೆ.
ಮಾದಕ ವ್ಯಸನದ ಆರೋಪವನ್ನೂ ಮಾಯಾ ರೇಗೋ ವಿರುದ್ಧ ಮಾಡಲಾಗಿದ್ದು, ಹಣ ಮತ್ತು ಆಸ್ತಿಯ ವಿಚಾರವಾಗಿ ಇತರರ ನೆರವಿನಿಂದ ತಂದೆಯನ್ನು ಕೊಲೆ ಮಾಡಲಾಗಿದೆ ಎಂಬ ಗಂಭೀರ ಆರೋಪವನ್ನು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಈ ಕೃತ್ಯಕ್ಕೆ ಬೋಂದೆಲ್‌ನ ವೈದ್ಯರೊಬ್ಬರು ಹಾಗೂ ಪೊಲೀಸ್ ಪೇದೆಯೊಬ್ಬರು ಸಹಕರಿಸಿದ್ದಾರೆ ಎಂದೂ ಆರೋಪಿಸಲಾಗಿದೆ. ಆದರೆ, ಈ ಆರೋಪಗಳು ತನಿಖೆಯಿಂದ ದೃಢಪಡಬೇಕಿದೆ.

ಅಸ್ಥಿಪಂಜರದ ಪರೀಕ್ಷೆಯಿಂದ ಸಿಗಲಿದೆಯೇ ಸುಳಿವು?
ಪ್ರಕರಣದ ತನಿಖೆಯಲ್ಲಿ ವಿವಿಧ ಸಾಕ್ಷ್ಯಗಳನ್ನು ಸಂಗ್ರಹಿಸಿರುವ ಪೊಲೀಸರು, ಇದೀಗ ಸಾವಿನ ನೈಜ ಕಾರಣ ಪತ್ತೆಹಚ್ಚಲು ಹೂತು ಹಾಕಿರುವ ಶವವನ್ನು ಹೊರತೆಗೆಯುವ ನಿರ್ಧಾರ ಕೈಗೊಂಡಿದ್ದಾರೆ. ದೇರೆಬೈಲ್ ಚರ್ಚ್ ಆವರಣದ ದಫನ ಭೂಮಿಯಲ್ಲಿ ಪೊಲೀಸರು ಹಾಗೂ ಎಫ್‌ಎಸ್‌ಎಲ್ ತಜ್ಞರು ಸ್ಥಳಕ್ಕೆ ಆಗಮಿಸಿ ಪ್ರಕ್ರಿಯೆಗೆ ಮುಂದಾಗಿದ್ದಾರೆ.
ಮಾಯಾ ರೇಗೋ ಹಾಗೂ ದೂರುದಾರರ ಸಮ್ಮುಖದಲ್ಲಿ ಅಸ್ಥಿಪಂಜರವನ್ನು ಹೊರತೆಗೆದು ವಿಧಿವಿಜ್ಞಾನ ಪರೀಕ್ಷೆಗೆ ಒಳಪಡಿಸುವ ಪ್ರಕ್ರಿಯೆ ನಡೆಯಲಿದೆ ಎಂದು ತಿಳಿದುಬಂದಿದೆ.
ಎರಡು ತಿಂಗಳ ಹಿಂದೆ ನಡೆದ ಸಾವು ಕೊಲೆ ಕೃತ್ಯವೇ? ಸಾವಿನ ಹಿಂದಿದೆಯಾ ಆಸ್ತಿ ವಿವಾದ ? ಎಂಬ ಪ್ರಶ್ನೆಗಳಿಗೆ ವಿಧಿವಿಜ್ಞಾನ ಪರೀಕ್ಷೆ ಮತ್ತು ಪೊಲೀಸ್ ತನಿಖೆಯಿಂದ ಉತ್ತರ ಸಿಗಬೇಕಿದೆ. ಸದ್ಯ ಪ್ರಕರಣದ ಆರೋಪಗಳು ತನಿಖಾ ಹಂತದಲ್ಲಿದ್ದು, ಪರೀಕ್ಷೆಯ ವರದಿ ಹಾಗೂ ಮುಂದಿನ ತನಿಖೆ ನಿರ್ಣಾಯಕವಾಗಲಿವೆ.
ಅಪರಾಧ
Mangalore-ವಾಟರ್ ಪ್ಯೂರಿಫೈಯರ್ ಒಳಗೆ ಕೋಟ್ಯಾಂತರ ರೂ ಮೌಲ್ಯದ ಡ್ರಗ್ಸ್- ಕೋರಿಯರ್ ಮೂಲಕ ಸಾಗಾಟ | ಪೊಲೀಸರ ಕಣ್ಣಿಗೆ ಮಣ್ಣೆರೆಚುವ ಯತ್ನ ಮಂಗಳೂರಿನಲ್ಲಿ ವಿಫಲ – ಮೂವರ ಬಂಧನ..!
ಕೋರಿಯರ್ ಮೂಲಕ ಮಾದಕವಸ್ತು ಎಂಡಿಎಂಎ ಸಾಗಾಟ ಮಾಡಿ ಮಂಗಳೂರು ನಗರ ಹಾಗೂ ಕೇರಳದ ವಿವಿಧ ಪ್ರದೇಶಗಳಲ್ಲಿ ಮಾರಾಟ ಮಾಡಲು ಸಂಚು ರೂಪಿಸಿದ್ದ ಜಾಲವನ್ನು ಮಂಗಳೂರು ಸಿಸಿಬಿ ಪೊಲೀಸರು ಪತ್ತೆಹಚ್ಚಿದ್ದಾರೆ. ಕಾರ್ಯಾಚರಣೆಯಲ್ಲಿ ಮೂವರು ಆರೋಪಿಗಳನ್ನು ಬಂಧಿಸಲಾಗಿದ್ದು, ₹1.58 ಕೋಟಿ ಮೌಲ್ಯದ 1 ಕೆಜಿ 796.96 ಗ್ರಾಂ ಎಂಡಿಎಂಎ ಸೇರಿದಂತೆ ಒಟ್ಟು ₹1.63 ಕೋಟಿ ಮೌಲ್ಯದ ಸೊತ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.
ಮಂಗಳೂರು: ಕೋರಿಯರ್ ಮೂಲಕ ಮಾದಕವಸ್ತು ಎಂಡಿಎಂಎ ಸಾಗಾಟ ಮಾಡಿ ಮಂಗಳೂರು ನಗರ ಹಾಗೂ ಕೇರಳದ ವಿವಿಧ ಪ್ರದೇಶಗಳಲ್ಲಿ ಮಾರಾಟ ಮಾಡಲು ಸಂಚು ರೂಪಿಸಿದ್ದ ಜಾಲವನ್ನು ಮಂಗಳೂರು ಸಿಸಿಬಿ ಪೊಲೀಸರು ಪತ್ತೆಹಚ್ಚಿದ್ದಾರೆ. ಕಾರ್ಯಾಚರಣೆಯಲ್ಲಿ ಮೂವರು ಆರೋಪಿಗಳನ್ನು ಬಂಧಿಸಲಾಗಿದ್ದು, ₹1.58 ಕೋಟಿ ಮೌಲ್ಯದ 1 ಕೆಜಿ 796.96 ಗ್ರಾಂ ಎಂಡಿಎಂಎ ಸೇರಿದಂತೆ ಒಟ್ಟು ₹1.63 ಕೋಟಿ ಮೌಲ್ಯದ ಸೊತ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.
ಅ.8ರಂದು ರಾತ್ರಿ ಸುಮಾರು 10 ಗಂಟೆಗೆ ಉಳ್ಳಾಲ ತಾಲೂಕಿನ ಕುಂಪಲದ ಡಿಮಾರ್ಟ್ ಸಮೀಪ ಸಿಸಿಬಿ ಪೊಲೀಸರು ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸಿದ್ದಾರೆ. ಆರೋಪಿಗಳಿಂದ ಎಂಡಿಎಂಎ, ಮೂರು ಮೊಬೈಲ್ ಫೋನ್‌ಗಳು, ಮಾದಕವಸ್ತು ಸಾಗಾಟಕ್ಕೆ ಬಳಸಿದ ಮಾರುತಿ ಸುಜುಕಿ ಸ್ವಿಫ್ಟ್ ಕಾರು ಮತ್ತು ಆಟೋ ರಿಕ್ಷಾ, ಕೋರಿಯರ್ ರಟ್ಟಿನ ಬಾಕ್ಸ್ ಹಾಗೂ ವಾಟರ್ ಪ್ಯೂರಿಫೈಯರ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ. ವಶಪಡಿಸಿಕೊಂಡ ಸೊತ್ತುಗಳ ಒಟ್ಟು ಮೌಲ್ಯ ₹1,63,84,000 ಎಂದು ಪೊಲೀಸರು ತಿಳಿಸಿದ್ದಾರೆ.
ಬಂಧಿತ ಆರೋಪಿಗಳು:
ಅಬ್ದುಲ್ ಹಾಪೀಲ್ (25) ಮಂಗಳಪಾಡಿ, ಕಾಸರಗೋಡು
ಜಿಯಾವುಲ್ ಹಕ್ (30) ಕಸಬಾ ಬೆಂಗ್ರೆ, ಕೂಳೂರು, ಮಂಗಳೂರು
ಅಲ್ತಾಫ್ (28) ಪಾಂಡೇಶ್ವರ, ಮಂಗಳೂರು
ವಾಟರ್ ಪ್ಯೂರಿಫೈಯರ್‌ನಲ್ಲಿ ಎಂಡಿಎಂಎ ಬಚ್ಚಿಟ್ಟು ಸಾಗಾಟಕ್ಕೆ ಸಂಚು
ಪೊಲೀಸರ ಪ್ರಾಥಮಿಕ ತನಿಖೆಯ ಪ್ರಕಾರ, ಆರೋಪಿಗಳು ಪಂಜಾಬ್‌ನ ಅಮೃತಸರದಿಂದ ಎಂಡಿಎಂಎ ಖರೀದಿಸಿ, ಅದನ್ನು ವಾಟರ್ ಪ್ಯೂರಿಫೈಯರ್‌ನ ನೀರು ಸಂಗ್ರಹಿಸುವ ಭಾಗದಲ್ಲಿ ಭದ್ರವಾಗಿ ಬಚ್ಚಿಡುತ್ತಿದ್ದರು. ಬಳಿಕ ಕೋರಿಯರ್ ಮೂಲಕ ಮಂಗಳೂರಿಗೆ ಕಳುಹಿಸಿ, ಇಲ್ಲಿಂದ ಮಂಗಳೂರು ನಗರ ಹಾಗೂ ಕೇರಳದ ವಿವಿಧ ಪ್ರದೇಶಗಳಿಗೆ ಪೂರೈಕೆ ಮಾಡಿ ಮಾರಾಟ ಮಾಡಲು ಸಂಚು ರೂಪಿಸಿದ್ದರು ಎನ್ನಲಾಗಿದೆ.
ಸಾರ್ವಜನಿಕರನ್ನು ಗುರಿಯಾಗಿಸಿಕೊಂಡು ಮಾದಕವಸ್ತು ಮಾರಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿ ಪಡೆದ ಪೊಲೀಸರು, ಕಾರ್ಯಾಚರಣೆ ನಡೆಸಿ ಜಾಲವನ್ನು ಪತ್ತೆಹಚ್ಚುವಲ್ಲಿ ಯಶಸ್ವಿಯಾಗಿದ್ದಾರೆ.
ಆರೋಪಿಗಳ ವಿರುದ್ಧ ಈ ಹಿಂದೆಯೂ ಪ್ರಕರಣ
ಬಂಧಿತ ಅಬ್ದುಲ್ ಹಾಪೀಲ್ ವಿರುದ್ಧ ಈ ಹಿಂದೆ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಮಾದಕವಸ್ತು ಸೇವನೆಗೆ ಸಂಬಂಧಿಸಿದ ಪ್ರಕರಣ ದಾಖಲಾಗಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.
ಜಿಯಾವುಲ್ ಹಕ್ ದುಬೈನ ರಾಸ್ ಅಲ್ ಖೈಮಾದಲ್ಲಿ ಮಾದಕವಸ್ತು ಮಾರಾಟ ಪ್ರಕರಣದಲ್ಲಿ ಭಾಗಿಯಾಗಿ ಮೂರು ವರ್ಷಗಳ ಜೈಲು ಶಿಕ್ಷೆ ಅನುಭವಿಸಿ ಭಾರತಕ್ಕೆ ಮರಳಿದ್ದಾನೆ ಎಂದು ಪೊಲೀಸ್ ಪ್ರಕಟಣೆ ತಿಳಿಸಿದೆ. ಅಲ್ತಾಫ್ ವಿರುದ್ಧವೂ ಪಾಂಡೇಶ್ವರ ಪೊಲೀಸ್ ಠಾಣೆಯಲ್ಲಿ ಮಾದಕವಸ್ತು ಸೇವನೆಗೆ ಸಂಬಂಧಿಸಿದ ಪ್ರಕರಣ ದಾಖಲಾಗಿತ್ತು.
ಈ ಸಂಬಂಧ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ. ಬಂಧಿತ ಮೂವರು ಆರೋಪಿಗಳನ್ನು ವಿಚಾರಣೆಗೆ ಒಳಪಡಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತರು ತಿಳಿಸಿದ್ದಾರೆ.
-
ಮಂಗಳೂರು8 hours agoMangalore-ಮಂಗಳೂರು : 2 ತಿಂಗಳ ಬಳಿಕ ಸಮಾಧಿಯಿಂದ ಹೊರಬರಲಿದೆ ಆಲ್ಬರ್ಟ್ ರೇಗೋ ಶವ..!; ಮಗಳಿಂದಲೇ ತಂದೆಯ ಕೊಲೆ : ಸ್ನೇಹಿತನ ಆರೋಪ – ತನಿಖೆಗೆ ಸಿಗಲಿದೆ ಮಹತ್ವದ ತಿರುವು
-
ಅಪರಾಧ11 hours agoRaid-ರಾಜ್ಯದ 45 ಐಸ್ಕ್ರೀಂ ಘಟಕಗಳ ಮೇಲೆ ದಾಳಿ: 4 ಕಡೆ ನಿಯಮ ಉಲ್ಲಂಘನೆ, ಅವಧಿ ಮೀರಿದ ಪದಾರ್ಥ ಪತ್ತೆ..!
-
ಸ್ಥಳೀಯ13 hours agoGanja-ಸಾಗರದ ಲಾಡ್ಜ್ನಲ್ಲಿ ಗಾಂಜಾ ಸೇವನೆ: ಯುವತಿ ಸೇರಿ ನಾಲ್ವರು ವಶಕ್ಕೆ – ಗಾಂಜಾ ಸಾಗಾಟಗಾರನ ಮಾಹಿತಿ ಬಿಚ್ಚಿಟ್ಟ ಯುವತಿ..!
-
ಬಿಗ್ ನ್ಯೂಸ್13 hours agoAYUSH Federation-ಡಾ. ಪ್ರದೀಪ್ ನಾವೂರು ಅವರ ಆರೋಗ್ಯ ಕ್ಲಿನಿಕ್ ಗೆ ಬೆಂಕಿ : ಆಯುಷ್ ಫೆಡರೇಶನ್ ತೀವ್ರ ಖಂಡನೆ
-
ಅಪರಾಧ13 hours agoUdupi-ಭೂಗತ ಪಾತಕಿ ಹೇಮಂತ್ ಪೂಜಾರಿ ಹೆಸರಿನಲ್ಲಿ ಬೆದರಿಕೆ ಕರೆ : ಉಡುಪಿ, ಮೂಲ್ಕಿಯಲ್ಲಿ 4 ಪ್ರಕರಣ ದಾಖಲು
-
ಅಪರಾಧ8 hours agoMangalore-ವಾಟರ್ ಪ್ಯೂರಿಫೈಯರ್ ಒಳಗೆ ಕೋಟ್ಯಾಂತರ ರೂ ಮೌಲ್ಯದ ಡ್ರಗ್ಸ್- ಕೋರಿಯರ್ ಮೂಲಕ ಸಾಗಾಟ | ಪೊಲೀಸರ ಕಣ್ಣಿಗೆ ಮಣ್ಣೆರೆಚುವ ಯತ್ನ ಮಂಗಳೂರಿನಲ್ಲಿ ವಿಫಲ – ಮೂವರ ಬಂಧನ..!
-
ಸಿನೆಮಾ12 hours agoNana Patekar-ನಾನಾ ಪಾಟೇಕರ್ ಸಾವಿಗೆ ನಿಖರ ಕಾರಣವೇನು? ಗೋವಾ ಪೊಲೀಸರಿಂದ ಅಸಹಜ ಸಾವು ಪ್ರಕರಣ ದಾಖಲು
-
ಬಿಗ್ ನ್ಯೂಸ್12 hours agoGreen card-ಇನ್ಫೋಸಿಸ್, ಟಿಸಿಎಸ್ ಸೇರಿ 8 ಐಟಿ ಕಂಪನಿಗಳಿಗೆ ಅಮೆರಿಕದ ಗ್ರೀನ್ ಕಾರ್ಡ್ ಪ್ರಕ್ರಿಯೆ ಸ್ಥಗಿತ


















