ಸುಳ್ಯ
Crop Insurance : ರೈತರ ಖಾತೆಗೆ ಜಮೆಯಾಗುತ್ತಿದೆ ಬೆಳೆ ವಿಮೆ ಪರಿಹಾರ – ಈ ಬಾರಿ ಪಾವತಿಯಾಗುತ್ತಿರುವ ಮೊತ್ತ ಎಷ್ಟು ಗೊತ್ತೆ?
ಮಂಗಳೂರು Mangalore ಅ 11; ಕಳೆದ ವರ್ಷದ ಅವಧಿಗೆ ಬೆಳೆ ವಿಮೆಯ ( Crop Insurence) ಕಂತು ಪಾವತಿಸಿದವರಿಗೆ ಪರಿಹಾರ ಮೊತ್ತ ಸಂಬಂಧಪಟ್ಟವರ ಬ್ಯಾಂಕ್ ಖಾತೆಗೆ ಪಾವತಿಯಾಗಲು ಈಗಾಗಲೇ ಆರಂಭಗೊಂಡಿದೆ. ತೋಟಗಾರಿಕೆ ಬೆಳೆಗಳಿಗೆ ಮರು ವಿನ್ಯಾಸಗೊಳಿಸಿದ 2021-22ನೇ ಸಾಲಿನ ವಿಮಾ ಮೊತ್ತ ಇದಾಗಿದೆ.
ಈ ಹಿಂದೆ ನವೆಂಬರ್ ನಿಂದ ಜನವರಿ ತಿಂಗಳ ಒಳಗಡೆ ಜಮೆಯಾಗುತ್ತಿದ್ದ ವಿಮೆ ಹಣ , ಈ ಬಾರಿ ಅಕ್ಟೋಬರ್ ತಿಂಗಳಿನಲ್ಲಿಯೇ ಕೃಷಿಕರ ಖಾತೆ ಸೇರುತ್ತಿದೆ. ಈಗಾಗಲೇ ಹಲವು ಫಲಾನುಭವಿ ಕೃಷಿಕರ ಖಾತೆಗಳಿಗೆ ಹಣ ಜಮೆಯಾಗಿದೆ.
ಪ್ರಿಮಿಯಮ್ ಮೊತ್ತ
ದಕ್ಷಿಣ ಕನ್ನಡ ಜಿಲ್ಲೆಯಲ್ಲಿಅಡಕೆ ಹಾಗೂ ಕಾಳುಮೆಣಸು ಬೆಳೆಗಳು ಬೆಳೆ ವಿಮೆ ಯೋಜನೆಯಡಿಯಲ್ಲಿ ಬರುತ್ತದೆ. ವಿಮಾ ಪರಿಹಾರ ಬಯಸುವ ರೈತರು ಅಡಕೆ ಕೃಷಿಗೆ ಸಂಬಂಧಿಸಿದಂತೆ ಹೆಕ್ಟೇರ್ ಒಂದಕ್ಕೆ 6,400 ರೂ. ಪಾವತಿಸಬೇಕಿತ್ತು. ಕಾಳುಮೆಣಸಿಗೆ ವಿಮೆ ಮಾಡಲು ಇಚ್ಚಿಸುವವರು ಹೆಕ್ಟೇರ್ ಒಂದಕ್ಕೆ 2,350 ರೂ. ವಿಮಾ ಕಂತನ್ನು ಪಾವತಿಸುವಂತೆ ಸೂಚಿಸಲಾಗಿತ್ತು. ಈ ವಿಮಾ ಮೊತ್ತವನ್ನು ಸಹಕಾರಿ ಸಂಘ ಅಥವಾ ರಾಷ್ಟ್ರೀಕೃತ ಬ್ಯಾಂಕುಗಳ ಮೂಲಕ ಪಾವತಿಸಬಹುದಾಗಿದೆ.
ಪರಿಹಾರ ಮೊತ್ತವು ಅಯಾಯ ವರ್ಷ ಬಿದ್ದ ಮಳೆಯ ಪ್ರಮಾಣ , ಇದರಿಂದ ಉಂಟಾಗಬಹುದಾದ ಕೃಷಿಯ ನಷ್ಟವನ್ನು ಪರಿಗಣಿಸಿ ಪರಿಹಾರ ನೀಡಲಾಗುತ್ತಿದೆ. ಇಡಿ ಜಿಲ್ಲೆಯಲ್ಲಿ ಒಂದೇ ಪ್ರಮಾಣದಲ್ಲಿ ಪರಿಹಾರ ಮೊತ್ತ ಬಿಡುಗಡೆಗೊಂಡಿಲ್ಲ. ಕಳೆದ 15 ವರ್ಷಗಳಲ್ಲಿ ಸುರಿದ ಮಳೆ ಪ್ರಮಾಣದ ಮಾನದಂಡದೊಂದಿಗೆ ಸರಾಸರಿ ಮಳೆ ಆಧಾರದ ಮೇಲೆ ವಿಮಾ ಮೊತ್ತವನ್ನು ನಿಗದಿಪಡಿಸಲಾಗುತ್ತದೆ.
ತೋಟಗಾರಿಕೆ ಇಲಾಖೆ ಈ ಬಗ್ಗೆ ರೈತರಿಗೆ ಹಾಗೂ ಸಂಬಂಧಪಟ್ಟವರಿಗೆ ಮಾಹಿತಿಗಳನ್ನು ಒದಗಿಸುತ್ತದೆ. ಮೊತ್ತವನ್ನು ಸರಕಾರ ಹಾಗೂ ವಿಮಾ ಕಂಪನಿಗಳು ನಿಗದಿಪಡಿಸಿ ಬಳಿಕ ರೈತರ ರಾಷ್ಟ್ರೀಕೃತ ಬ್ಯಾಂಕ್ ಖಾತೆಗೆ ಜಮೆಗೊಳಿಸಲಾಗುತ್ತದೆ.
ಜುಲೈ 1ರಿಂದ ಜೂನ್ 30ರ ತನಕದ ಅವಧಿಯ ಈ ಯೋಜನೆ ಇದಾಗಿದ್ದು ಈ ಸಮಯದ ಹವಮಾನವನ್ನು ಅವಲಂಬಿಸಿ ವಿಮಾ ಪರಿಹಾರ ಮೊತ್ತ ನಿಗದಿ ಪಡಿಸಲಾಗಿರುತ್ತದೆ.
ರಾಷ್ಟ್ರೀಯ ಹವಾಮಾನ ಮತ್ತು ವಿಪತ್ತು ನಿರ್ವಹಣೆ ಸಂಸ್ಥೆಯ ಆಯಾ ಪ್ರದೇಶಗಳಲ್ಲಿ ಉಂಟಾಗಿರುವ ಮಳೆಯ ಲೆಕ್ಕಾಚಾರ ಹಾಕಿ ವಾರ್ಷಿಕ ವರದಿ ಸಲ್ಲಿಸಿದ ಬಳಿಕ ಗ್ರಾಮವಾರು ಮೊತ್ತ ಸರಕಾರ ಹಾಗೂ ವಿಮೆ ಕಂಪನಿಗಳು ನಿಗದಿಗೊಳಿಸುತ್ತವೆ. ಕೃಷಿಕರ ಹಿತಾಸಕ್ತಿ ದೃಷ್ಟಿಯಿಂದ ಈ ಬಾರಿ ಬೆಳೆ ವಿಮೆಯ ಮೊತ್ತವನ್ನು ತ್ವರಿತವಾಗಿ ಜಮೆ ಮಾಡಲಾಗಿದೆ. ಇದು ಎಲ್ಲ ಅರ್ಹ ರೈತರನ್ನು ತಲುಪುವಂತೆ ಕ್ರಮ ವಹಿಸಲಾಗಿದೆ ಎಂದು ದಕ್ಷಿಣ ಕನ್ನಡ ತೋಟಗಾರಿಕೆ ಇಲಾಖೆ ಉಪ ನಿರ್ದೇಶಕ ಎಚ್.ಆರ್.ನಾಯ್ಕ್ ಹೇಳಿದ್ದಾರೆ.
ಗ್ರಾಮವಾರು ಬೇರೆ ಬೇರೆ ಮೊತ್ತ:
ದ.ಕ. ಜಿಲ್ಲೆಯ ನಾನಾ ತಾಲೂಕುಗಳ ವಿವಿಧ ಗ್ರಾಮಗಳಲ್ಲಿ ಸುರಿದಿರುವ ಮಳೆಯ ಆಧಾರದಲ್ಲಿ ವಿಮೆಯ ಮೊತ್ತ ಬಿಡುಗಡೆಗೊಳ್ಳುವ ಕಾರಣ ಎಲ್ಲ ಗ್ರಾಮದ ರೈತರಿಗೆ ಒಂದೇ ರೀತಿಯ ಮೊತ್ತ ಜಮೆಯಾಗಿಲ್ಲ. ಪ್ರತಿ ಹೆಕ್ಟೇರಿಗೆ 50,000 ರೂ. ಆಸುಪಾಸಿನ ಮೊತ್ತ ಬಿಡುಗಡೆಯಾಗಿದ್ದರೆ, ಇನ್ನು ಉಳಿದ ಗ್ರಾಮಗಳಲ್ಲಿ ಇದು 60,000 ರೂ. ತನಕ ಜಮೆಗೊಂಡಿದೆಯೆಂದು ವರದಿಯಾಗಿದೆ.
2018-19ರಲ್ಲಿ ಗರಿಷ್ಠ ಮಿತಿ 1,28,000 ರೂ., 2019-20 ರಲ್ಲಿ 60,000 ರೂ., 2020-21 ರಲ್ಲಿ 51,879 ರೂ. ಬಿಡುಗಡೆಗೊಂಡಿತ್ತು. ಇದೀಗ 2021-22 ರಲ್ಲಿ ಸರಾಸರಿ 60,000 ರೂ. ಮೊತ್ತ ಪ್ರತಿ ಹೆಕ್ಟೇರಿಗೆ ಬಿಡುಗಡೆಗೊಂಡಿದೆ.
ಸುಳ್ಯ
Sullia-ಸುಳ್ಯ: ಜಾನುವಾರು ಕಳ್ಳತನಕ್ಕೆ ಯತ್ನ: ಇಬ್ಬರು ಪೊಲೀಸ್ ವಶಕ್ಕೆ
ಮಾಂಸ ಮಾಡಿ ಮಾರಾಟ ಮಾಡುವ ಉದ್ದೇಶದಿಂದ ಜಾನುವಾರುಗಳನ್ನು ಕಳ್ಳತನ ಮಾಡಲು ಯತ್ನಿಸಿದ ಇಬ್ಬರನ್ನು ಸುಳ್ಯ ಪೊಲೀಸರು ವಶಕ್ಕೆ ಪಡೆದ ಘಟನೆ ನ.18ರ ಮುಂಜಾನೆ ಸುಳ್ಯ ಕಸಬಾ ಗ್ರಾಮದ ಗಾಂಧಿನಗರ ಶಾಲಾ ಮೈದಾನದ ಬಳಿ ನಡೆದಿದೆ.
ಸುಳ್ಯ: ಮಾಂಸ ಮಾಡಿ ಮಾರಾಟ ಮಾಡುವ ಉದ್ದೇಶದಿಂದ ಜಾನುವಾರುಗಳನ್ನು ಕಳ್ಳತನ ಮಾಡಲು ಯತ್ನಿಸಿದ ಇಬ್ಬರನ್ನು ಸುಳ್ಯ ಪೊಲೀಸರು ವಶಕ್ಕೆ ಪಡೆದ ಘಟನೆ ನ.18ರ ಮುಂಜಾನೆ ಸುಳ್ಯ ಕಸಬಾ ಗ್ರಾಮದ ಗಾಂಧಿನಗರ ಶಾಲಾ ಮೈದಾನದ ಬಳಿ ನಡೆದಿದೆ.
ಜಾನುವಾರುಗಳನ್ನು ಕಳ್ಳತನ ಮಾಡಿ ಸಾಗಾಟ ಮಾಡಲು ಯತ್ನಿಸುತ್ತಿರುವ ಬಗ್ಗೆ ಸುಳ್ಯ ಪೊಲೀಸ್ ಠಾಣೆಯ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಪೊಲೀಸ್ ಉಪನಿರೀಕ್ಷಕ ಉದಯ ರವಿ ಅವರಿಗೆ ಮಾಹಿತಿ ಲಭಿಸಿತ್ತು. ತಕ್ಷಣ ಸಿಬ್ಬಂದಿಗಳೊಂದಿಗೆ ಸ್ಥಳಕ್ಕೆ ತೆರಳಿ ಪರಿಶೀಲಿಸಿದಾಗ, ಶಾಲಾ ಮೈದಾನದಲ್ಲಿದ್ದ ಕಂಬವೊಂದಕ್ಕೆ ಎರಡು ಜಾನುವಾರುಗಳನ್ನು ಹಗ್ಗದಿಂದ ಕಟ್ಟಿ ಹಾಕಿರುವುದು ಕಂಡುಬಂದಿದೆ.
ಸ್ಥಳದಲ್ಲಿದ್ದ ಇಬ್ಬರನ್ನು ವಶಕ್ಕೆ ಪಡೆದು ವಿಚಾರಿಸಿದಾಗ, ಅವರು ಸುಳ್ಯ ಆಲೆಟ್ಟಿ ನಿವಾಸಿಗಳಾದ ಹಾಶಿರ್ (28) ಮತ್ತು ಸಂಶುದ್ದೀನ್ (25) ಎಂದು ತಿಳಿದುಬಂದಿದೆ.
ಜಾನುವಾರುಗಳನ್ನು ಕಳ್ಳತನ ಮಾಡಿ ಮಾಂಸವನ್ನಾಗಿ ಮಾಡಿ ಮಾರಾಟ ಮಾಡುವ ಉದ್ದೇಶ ಹೊಂದಿದ್ದಾಗಿ ಆರೋಪಿಗಳು ವಿಚಾರಣೆ ವೇಳೆ ತಿಳಿಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
ಕೃತ್ಯಕ್ಕೆ ಬಳಸಲು ಸ್ಥಳಕ್ಕೆ ತಂದಿದ್ದ ದ್ವಿಚಕ್ರ ವಾಹನ ಹಾಗೂ ಎರಡು ಜಾನುವಾರುಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಈ ಕುರಿತು ಸುಳ್ಯ ಪೊಲೀಸ್ ಠಾಣೆಯಲ್ಲಿ ಅಪರಾಧ ಸಂಖ್ಯೆ 161/2026ರಂತೆ ಭಾರತೀಯ ನ್ಯಾಯ ಸಂಹಿತೆ (BNS) 2023ರ ಕಲಂ 303(2) ಜೊತೆಗೆ 62 ಹಾಗೂ ಕರ್ನಾಟಕ ಗೋಹತ್ಯೆ ನಿಷೇಧ ಕಾಯ್ದೆಯ ಕಲಂ 7 ಮತ್ತು 15ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
ಸುಳ್ಯ
Black pepper-ಕಾಳುಮೆಣಸು ದರದಲ್ಲಿ ಭರ್ಜರಿ ಏರಿಕೆ: ₹750ರ ಗಡಿ ತಲುಪಿದ ಕಪ್ಪು ಚಿನ್ನ
ಕೃಷಿಕರ ಪಾಲಿನ ‘ಕಪ್ಪು ಚಿನ್ನ’ ಎಂದೇ ಕರೆಯಲ್ಪಡುವ ಕಾಳುಮೆಣಸಿನ ಧಾರಣೆಯಲ್ಲಿ ನವೆಂಬರ್ ಮೊದಲ ವಾರಾಂತ್ಯದಿಂದ ಮತ್ತೆ ಚೇತರಿಕೆ ಕಂಡಿದ್ದು, ನಿರಂತರವಾಗಿ ಏರಿಕೆಯಾಗುತ್ತಾ ಇದೀಗ ನ.16ರ ವೇಳೆಗೆ ಪ್ರತಿ ಕೆ.ಜಿ. ಕಾಳುಮೆಣಸಿನ ಬೆಲೆ ₹750ರ ಗಡಿಯನ್ನು ತಲುಪಿರುವುದು ಬೆಳೆಗಾರರಲ್ಲಿ ಹೊಸ ನಿರೀಕ್ಷೆ ಮೂಡಿಸಿದೆ.
ಸುಳ್ಯ: ಕೃಷಿಕರ ಪಾಲಿನ ‘ಕಪ್ಪು ಚಿನ್ನ’ ಎಂದೇ ಕರೆಯಲ್ಪಡುವ ಕಾಳುಮೆಣಸಿನ ಧಾರಣೆಯಲ್ಲಿ ಮತ್ತೆ ಏರಿಕೆ ಕಂಡುಬಂದಿದ್ದು, ಪ್ರತಿ ಕೆ.ಜಿ.ಗೆ ₹750ರ ಗಡಿಯನ್ನು ತಲುಪಿದೆ. ನಿರಂತರ ದರ ಏರಿಕೆಯಿಂದ ಕಾಳುಮೆಣಸು ಬೆಳೆಗಾರರಲ್ಲಿ ಸಂತಸ ಮೂಡಿದೆ.
ಕ್ಯಾಂಪ್ಕೋ ಮಂಗಳೂರು (ಸುಳ್ಯ ಶಾಖೆ) ದರ ಮಾಹಿತಿಯ ಪ್ರಕಾರ, ಕಳೆದ ಅಕ್ಟೋಬರ್ 19ರ ವೇಳೆಗೆ ಕಾಳುಮೆಣಸಿನ ಧಾರಣೆ ₹700ರ ಗಡಿ ದಾಟಿತ್ತು. ಅಕ್ಟೋಬರ್ 29ರ ವೇಳೆಗೆ ₹730ಕ್ಕೆ ಏರಿಕೆಯಾಗಿತ್ತು. ಬಳಿಕ ಕೊಂಚ ಇಳಿಕೆ ಕಂಡು ನವೆಂಬರ್ ತಿಂಗಳ ಆರಂಭದಲ್ಲಿ ₹710ಕ್ಕೆ ತಲುಪಿತ್ತು.
ಆದರೆ, ನವೆಂಬರ್ ಮೊದಲ ವಾರಾಂತ್ಯದಿಂದ ಮತ್ತೆ ಚೇತರಿಕೆ ಕಂಡ ಧಾರಣೆ ನಿರಂತರವಾಗಿ ಏರಿಕೆಯಾಗುತ್ತಾ ಸಾಗಿದೆ. ಇದೀಗ ನವೆಂಬರ್ 16ರ ವೇಳೆಗೆ ಪ್ರತಿ ಕೆ.ಜಿ. ಕಾಳುಮೆಣಸಿನ ಬೆಲೆ ₹750ರ ಗಡಿಯನ್ನು ತಲುಪಿರುವುದು ಬೆಳೆಗಾರರಲ್ಲಿ ಹೊಸ ನಿರೀಕ್ಷೆ ಮೂಡಿಸಿದೆ.
ಕರಾವಳಿ ಹಾಗೂ ಮಲೆನಾಡು ಭಾಗದ ಪ್ರಮುಖ ವಾಣಿಜ್ಯ ಬೆಳೆಯಾದ ಅಡಿಕೆ ಇತ್ತೀಚಿನ ದಿನಗಳಲ್ಲಿ ಕೊಳೆರೋಗ, ಹಳದಿ ಎಲೆಚುಕ್ಕೆ ರೋಗ ಸೇರಿದಂತೆ ವಿವಿಧ ರೋಗಬಾಧೆಗಳಿಂದ ಇಳುವರಿ ಕುಂಠಿತಗೊಳ್ಳುತ್ತಿದೆ. ಇಂತಹ ಸಂಕಷ್ಟದ ಸಂದರ್ಭದಲ್ಲಿ ಕಾಳುಮೆಣಸಿನ ಧಾರಣೆಯಲ್ಲಿನ ಏರಿಕೆ ಕೃಷಿಕರಿಗೆ ಆರ್ಥಿಕವಾಗಿ ದೊಡ್ಡ ಮಟ್ಟದ ಆಸರೆಯಾಗುವ ನಿರೀಕ್ಷೆಯಿದೆ.
ಸುಳ್ಯ
Areca nut-ಅಡಿಕೆ ರೇಟ್ ಜಂಪ್ : ಹೊಸ ಅಡಿಕೆಗೆ ₹360; ಒಂದೇ ದಿನದಲ್ಲಿ ₹10 ಏರಿಕೆ! ಡಬಲ್ ಚೋಲ್ ಧಾರಣೆಯಲ್ಲೂ ಹೆಚ್ಚಳ
ಕಳೆದ ಕೆಲ ತಿಂಗಳುಗಳಿಂದ ಏರಿಕೆ ಕಾಣದೆ ನಿಸ್ತೇಜವಾಗಿದ್ದ ಅಡಿಕೆ ಮಾರುಕಟ್ಟೆಯಿಂದೆ ಕೊಂಚ ಸಮಾಧಾನಕರ ಸುದ್ದಿ ಲಭಿಸಿದೆ. ಚಾಲಿ ಅಡಿಕೆ ಮಾರುಕಟ್ಟೆಯಲ್ಲಿ ಹೊಸ ಅಡಿಕೆ ಹಾಗೂ ಡಬಲ್ ಚೋಲ್ ಅಡಿಕೆಯ ಧಾರಣೆಯಲ್ಲಿ ಏರಿಕೆ ದಾಖಲಾಗಿದ್ದು, ಹೊಸ ಅಡಿಕೆಯ ಗರಿಷ್ಠ ಬೆಲೆ ಒಂದೇ ದಿನದಲ್ಲಿ ಕೆ.ಜಿ.ಗೆ ₹10 ಹೆಚ್ಚಳವಾಗಿ ₹360ಕ್ಕೆ ತಲುಪಿದೆ. ಡಬಲ್ ಚೋಲ್ ಅಡಿಕೆಯ ಧಾರಣೆಯೂ ₹560ರ ಗಡಿಗೆ ಏರಿಕೆಯಾಗಿದೆ.
ಸುಳ್ಯ, ನ.12: ಕಳೆದ ಕೆಲ ತಿಂಗಳುಗಳಿಂದ ಏರಿಕೆ ಕಾಣದೆ ನಿಸ್ತೇಜವಾಗಿದ್ದ ಅಡಿಕೆ ಮಾರುಕಟ್ಟೆಯಿಂದೆ ಕೊಂಚ ಸಮಾಧಾನಕರ ಸುದ್ದಿ ಲಭಿಸಿದೆ. ಚಾಲಿ ಅಡಿಕೆ ಮಾರುಕಟ್ಟೆಯಲ್ಲಿ ಹೊಸ ಅಡಿಕೆ ಹಾಗೂ ಡಬಲ್ ಚೋಲ್ ಅಡಿಕೆಯ ಧಾರಣೆಯಲ್ಲಿ ಏರಿಕೆ ದಾಖಲಾಗಿದ್ದು, ಹೊಸ ಅಡಿಕೆಯ ಗರಿಷ್ಠ ಬೆಲೆ ಒಂದೇ ದಿನದಲ್ಲಿ ಕೆ.ಜಿ.ಗೆ ₹10 ಹೆಚ್ಚಳವಾಗಿ ₹360ಕ್ಕೆ ತಲುಪಿದೆ. ಡಬಲ್ ಚೋಲ್ ಅಡಿಕೆಯ ಧಾರಣೆಯೂ ₹560ರ ಗಡಿಗೆ ಏರಿಕೆಯಾಗಿದೆ.
ನ.11 ಮತ್ತು ನ.12ರ ಮಾರುಕಟ್ಟೆ ದರಗಳನ್ನು ಹೋಲಿಸಿದಾಗ ಹೊಸ ಅಡಿಕೆಯ ಗರಿಷ್ಠ ಧಾರಣೆ ₹350ರಿಂದ ₹360ಕ್ಕೆ ಏರಿಕೆಯಾಗಿದೆ. ಆದರೆ ಕನಿಷ್ಠ ಧಾರಣೆ ₹280ರಲ್ಲೇ ಸ್ಥಿರವಾಗಿದೆ. ಕನಿಷ್ಠ ದರದಲ್ಲಿ ಬದಲಾವಣೆಯಾಗದಿದ್ದರೂ ಗರಿಷ್ಠ ದರದಲ್ಲಿ ಕಂಡುಬಂದಿರುವ ಏರಿಕೆ ಮಾರುಕಟ್ಟೆಯಲ್ಲಿ ಚೇತರಿಕೆಯ ಮುನ್ಸೂಚನೆ ನೀಡಿದೆ.
ಡಬಲ್ ಚೋಲ್ ಅಡಿಕೆಗೂ ಬೆಲೆ ಏರಿಕೆ
ಡಬಲ್ ಚೋಲ್ ಅಡಿಕೆಯ ಮಾರುಕಟ್ಟೆಯಲ್ಲೂ ಉತ್ತಮ ಬೆಳವಣಿಗೆ ಕಂಡುಬಂದಿದೆ. ಹಿಂದಿನ ದಿನ ₹525ರಷ್ಟಿದ್ದ ಕನಿಷ್ಠ ಧಾರಣೆ ₹530ಕ್ಕೆ ಏರಿಕೆಯಾಗಿದ್ದರೆ, ಗರಿಷ್ಠ ಧಾರಣೆ ₹550ರಿಂದ ₹560ಕ್ಕೆ ತಲುಪಿದೆ. ಈ ಮೂಲಕ ಕನಿಷ್ಠ ದರದಲ್ಲಿ ₹5 ಹಾಗೂ ಗರಿಷ್ಠ ದರದಲ್ಲಿ ₹10ರಷ್ಟು ಹೆಚ್ಚಳ ದಾಖಲಾಗಿದೆ.
ಸಿಂಗಲ್ ಚೋಲ್ ಸೇರಿದಂತೆ ಇತರ ಅಡಿಕೆ ದರ ಸ್ಥಿರ
ಹೊಸ ಅಡಿಕೆ ಮತ್ತು ಡಬಲ್ ಚೋಲ್ ಹೊರತುಪಡಿಸಿ ಮಾರುಕಟ್ಟೆಯ ಇತರ ಪ್ರಮುಖ ಅಡಿಕೆ ವರ್ಗಗಳ ದರದಲ್ಲಿ ಯಾವುದೇ ಬದಲಾವಣೆಯಾಗಿಲ್ಲ. ಸಿಂಗಲ್ ಚೋಲ್ ಅಡಿಕೆ ಕೆ.ಜಿ.ಗೆ ಕನಿಷ್ಠ ₹450 ಹಾಗೂ ಗರಿಷ್ಠ ₹480ರ ದರದಲ್ಲಿ ವಹಿವಾಟು ನಡೆಸಿದೆ.
ಬೆಳೆಗಾರರ ಕಣ್ಣು ಮುಂದಿನ ಮಾರುಕಟ್ಟೆ ದರದತ್ತ
ಇತ್ತೀಚಿನ ದಿನಗಳಲ್ಲಿ ಅಡಿಕೆ ಧಾರಣೆಯಲ್ಲಿ ಕಂಡುಬರುತ್ತಿರುವ ಏರಿಳಿತಗಳು ಬೆಳೆಗಾರರಲ್ಲಿ ಗೊಂದಲ ಮೂಡಿಸಿದ್ದವು. ಅದರಲ್ಲೂ ಉತ್ಪಾದನಾ ವೆಚ್ಚ, ಕೂಲಿ ವೆಚ್ಚ ಹಾಗೂ ನಿರ್ವಹಣಾ ವೆಚ್ಚ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಉತ್ತಮ ಮಾರುಕಟ್ಟೆ ದರದ ನಿರೀಕ್ಷೆ ಬೆಳೆಗಾರರಲ್ಲಿದೆ.
ಇದೀಗ ಹೊಸ ಅಡಿಕೆ ಹಾಗೂ ಡಬಲ್ ಚೋಲ್ ಅಡಿಕೆಯಲ್ಲಿ ದಾಖಲಾಗಿರುವ ಏರಿಕೆ ಮಾರುಕಟ್ಟೆಗೆ ಹೊಸ ಚೈತನ್ಯ ನೀಡಿದೆ. ಆದರೆ ಈ ಏರಿಕೆ ಮುಂದಿನ ದಿನಗಳಲ್ಲೂ ಮುಂದುವರಿಯಲಿದೆಯೇ ಅಥವಾ ಮತ್ತೆ ಧಾರಣೆ ಸ್ಥಿರವಾಗಲಿದೆಯೇ ಎಂಬುದನ್ನು ಕಾದು ನೋಡಬೇಕಿದೆ. ಸದ್ಯದ ಮಟ್ಟಿಗೆ ಅಡಿಕೆ ಬೆಳೆಗಾರರ ಚಿತ್ತ ಮುಂದಿನ ಮಾರುಕಟ್ಟೆ ವಹಿವಾಟಿನತ್ತ ನೆಟ್ಟಿದೆ.
-
ದಕ್ಷಿಣ ಕನ್ನಡ21 hours ago
Puttur Medical College : ಮೆಡಿಕಲ್ ಕಾಲೇಜು ಆರಂಭಕ್ಕೆ ಪುತ್ತೂರು ಸಜ್ಜು; ಪ್ಲಾನ್ “ಬಿ” ಗೆ ವೇಗ; ಮೂಲಸೌಕರ್ಯ ಪರಿಶೀಲಿಸಿದ ತಜ್ಞರ ತಂಡ – ನವೆಂಬರ್ 30ರೊಳಗೆ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ
-
ಮಂಗಳೂರು22 hours ago
Bantwal rape case verdict ಮಂಗಳೂರು: ಮಹಿಳೆ ಮೇಲೆ ಹಲ್ಲೆ ನಡೆಸಿ ಅತ್ಯಾಚಾರ : ಆರೋಪಿಗೆ 10 ವರ್ಷ ಜೈಲು, ₹54 ಸಾವಿರ ದಂಡ















