ಆರೋಗ್ಯ
Childhood Obesity : ಹೆಚ್ಚುತ್ತಿದೆ ಮಕ್ಕಳಲ್ಲಿ ಬೊಜ್ಜಿನ ಸಮಸ್ಯೆ – ನಿಯಂತ್ರಣಕ್ಕೆ ಈ ಕ್ರಮಗಳನ್ನು ಅನುಸರಿಸಿ
ವಿಶ್ವ ಆರೋಗ್ಯ ಸಂಸ್ಥೆ (WHO) ಪ್ರಕಾರ, ಮಕ್ಕಳ ಸ್ಥೂಲಕಾಯತೆಯು 21 ನೇ ಶತಮಾನದ ಅತಿದೊಡ್ಡ ಆರೋಗ್ಯ ಸಮಸ್ಯೆಗಳಲ್ಲಿ (Health Problems) ಒಂದಾಗಿದೆ. ಕಳೆದ 40 ವರ್ಷಗಳಲ್ಲಿ, ಮಕ್ಕಳು ಮತ್ತು ಹದಿಹರೆಯದವರಲ್ಲಿ ಬೊಜ್ಜು ಸಮಸ್ಯೆ ಅತಿ ಹೆಚ್ಚಾಗಿ ಕಾಡುತ್ತಿದೆ.
ಇತ್ತೀಚೆಗೆ ಭಾರತದಲ್ಲಿ ನಡೆದ ರಾಷ್ಟ್ರೀಯ ಕುಟುಂಬ ಆರೋಗ್ಯ ಸಮೀಕ್ಷೆಯಲ್ಲಿ ಈ ವಿಷಯ ಬಹಿರಂಗವಾಗಿದೆ.
ಆರೋಗ್ಯ ಸಮೀಕ್ಷೆಯಲ್ಲಿ 22 ರಾಜ್ಯಗಳನ್ನು ಸೇರಿಸಲಾಗಿತ್ತು. ಈ ಪೈಕಿ 20 ರಾಜ್ಯಗಳಲ್ಲಿ ಮಕ್ಕಳು ಸ್ಥೂಲಕಾಯ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಸ್ಥೂಲಕಾಯವು ಒಬ್ಬರ ಜೀವನವನ್ನು ಹಾಳುಮಾಡುವಷ್ಟು ಭಯಾನಕ ಕಾಯಿಲೆ ಎಂದರೆ ತಪ್ಪಾಗಲಾರದು. ಅಧ್ಯಯನದ ಪ್ರಕಾರ ಭಾರತದಲ್ಲಿ 1.44 ಕೋಟಿ ಮಕ್ಕಳಲ್ಲಿ ಈ ಸಮಸ್ಯೆಯಿಂದ ಬಳಲುತ್ತಿದ್ದಾರೆ.
ಈ ಖಾಯಿಲೆಯಿಂದಾಗಿ ಮಕ್ಕಳಲ್ಲಿ ದೀರ್ಘಕಾಲದ ಆರೋಗ್ಯ ಸಮಸ್ಯೆಗಳನ್ನು ಉಂಟು ಮಾಡುತ್ತದೆ. ಅಸ್ತಮಾ, ನಿದ್ರೆಯಲ್ಲಿ ಉಸಿರುಗಟ್ಟುವಿಕೆ, ಮೂಳೆ ಹಾಗೂ ಸಂಧಿ ನೋವು ಸ್ಥೂಲ ಖಾಯಿಲೆಯಿಂದ ಮಕ್ಕಳನ್ನು ಕಾಡುವ ಸಮಸ್ಯೆಗಳು . ಹಾಗೇ ತೂಕ ಹೆಚ್ಚಾಗುವುದರಿಂದ ಮಧುಮೇಹ ಕಾಯಿಲೆಯೂ ಕಾಣಿಸಿಕೊಳ್ಳಬಹುದು. ಇದರಿಂದ ಮಕ್ಕಳಲ್ಲಿ ಹೃದಯದ ಕಾಯಿಲೆಗಳು ಹಾಗೂ ಕಿಡ್ನಿ ವೈಫಲ್ಯವೂ ಆಗಬಹುದು. ಇವಿಷ್ಟೇ ಅಲ್ಲ, ಮಕ್ಕಳ ಮನಸ್ಸಿನ ಆರೋಗ್ಯದ ಮೇಲೂ ಕೆಟ್ಟ ಪರಿಣಾಮ ಬೀರುವುದರಿಂದ ಮಕ್ಕಳಲ್ಲಿ ಅನ್ಯಮನಸ್ಕತೆ ತರಬಹುದು.
ಈ ಸಮಸ್ಯೆ ಮಕ್ಕಳಲ್ಲಿ ಅನಾರೋಗ್ಯಕರ ಆಹಾರ ಸೇವನೆ, ದೈಹಿಕ ಚಟುವಟಿಕೆಯ ಕೊರತೆ, ಅಸಮರ್ಪಕ ನಿದ್ರೆ, ಅತಿಯಾಗಿ ಟಿವಿ, ಮೊಬೈಲ್ ವೀಕ್ಷಣೆ ಹಾಗೂ ಓದಿನ ಅತಿ ಒತ್ತಡದಿಂದಲೂ ಬರಬಹುದು. ಇಂತಹ ಮಕ್ಕಳು ವೈದ್ಯರ ಸಲಹೆ ಪಡೆಯದೇ ಒಂದೇ ಬಾರಿ ತೂಕ ಇಳಿಸಿಕೊಳ್ಳುವಂತಹ ಸಾಹಸವನ್ನೂ ಮಾಡಬಾರದು. ಲ್ಯಾಪ್ ಟಾಪ್ ನಲ್ಲಿ ಚಲನಚಿತ್ರಗಳನ್ನು ನೋಡುವುದು ಅಥವಾ ಫೋನ್ ನಲ್ಲಿ ವೀಡಿಯೊ ಗೇಮ್ ಗಳನ್ನು ಆಡುವುದು ಮುಂತಾದ ಜಡ ಚಟುವಟಿಕೆಗಳನ್ನು ನಿಯಂತ್ರಿಸುವುದು ಅತಗತ್ಯ ಕ್ರಮವಾಗಿದೆ.
ಈ ಸಮಸ್ಯೆಯಿಂದ ಬಳಲುವ ಮಕ್ಕಳ ಬಗ್ಗೆ ಪೋಷಕರು ಗಮನ ಹರಿಸಿ ಅವರ ದಿನನಿತ್ಯದ ಆಹಾರ ಕ್ರಮ ಹಾಗೂ ಚಟುವಟಿಕೆಗಳಲ್ಲಿ ಕೊಂಚ ಬದಲಾವಣೆ ತಂದರೆ ಈ ಸಮಸ್ಯೆಯನ್ನು ದೂರ ಮಾಡಬಹುದು. ಕೆಲ ಸಲಹೆಗಳು ಇಲ್ಲಿವೆ.
ಮಕ್ಕಳ ತಿನ್ನುವ ಕ್ರಮವನ್ನು ನಿಯಂತ್ರಣ ಮಾಡಬಾರದು. ಅದರ ಬದಲಾಗಿ ಆರೋಗ್ಯಕರ ಆಹಾರ ಸೇವಿಸುವತ್ತ ಗಮನಹರಿಸಬೇಕು. ಮಕ್ಕಳ ಪ್ರತಿದಿನ ಆಹಾರದಲ್ಲಿ ಹಣ್ಣುಗಳು ಹಾಗೂ ಹಸಿ ತರಕಾರಿಗೆ ಪ್ರಾಮುಖ್ಯತೆ ಇರಲಿ. ಹಾಗೇ ಮೊಳಕೆ ಬರಿಸಿದ ಧಾನ್ಯಗಳೂ ಇರಲಿ. ಕಡಿಮೆ ಕೊಬ್ಬಿನಂಶ ಇರುವ ಆಹಾರ, ಹಾಲಿನ ಉತ್ಪನ್ನಗಳು ಹಾಗೂ ಕಡಿಮೆ ಕೊಬ್ಬು ಇರುವ ಹಾಲು ನೀಡಬೇಕು.
ಹೆಚ್ಚು ನೀರು ಕುಡಿಸಬೇಕು
ಮಕ್ಕಳು ಬೆಳಗ್ಗಿನ ಉಪಹಾರವನ್ನು ತಪ್ಪಿಸದಂತೆ ನೋಡಿಕೊಳ್ಳಬೇಕು. ಬಳಿಕ ಹಸಿವಾದಾಗ ಮಕ್ಕಳು ಹೊರಗಡೆ ಸಿಗುವ ಜಂಕ್ಫುಡ್ಗಳನ್ನು ತಿನ್ನುತ್ತಾರೆ.
ಟಿವಿ ಅಥವಾ ಕಂಪ್ಯೂಟರ್ ಮುಂದೆ ಕೂತು ತಿಂದರೆ ಮಿತಿಮೀರಿ ತಿನ್ನಬಹುದು. ಆದ್ದರಿಂದ ಮಕ್ಕಳಿಗೆ ಎಲ್ಲರ ಜೊತೆಗೆ ಕುಳಿತು ಊಟ ಮಾಡುವ ಅಭ್ಯಾಸ ಬೆಳೆಸಿ
ಮಕ್ಕಳು ದಿನಕ್ಕೆ 60 ನಿಮಿಷಗಳ ಕಾಲ ದೈಹಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವಂತೆ ನೋಡಿಕೊಳ್ಳಬೇಕು. ಹಾಗಾಗಿ ಮನೆಯಲ್ಲಿಯೇ ಸಣ್ಣಪುಟ್ಟ ಕೆಲಸ ಮಾಡುವಂತೆ ಹಾಗೂ ವ್ಯಾಯಾಮ ಮಾಡುವಂತೆ ಮಕ್ಕಳ ಮನಸ್ಸನ್ನು ಪುಸಲಾಯಿಸಬೇಕು. ಕ್ರೀಡೆ, ಈಜುನಂತಹ ತರಗತಿಗಳಿಗೆ ಕಳುಹಿಸಿದರೆ ಮಕ್ಕಳೂ ಆಸಕ್ತಿಯಿಂದ ಪಾಲ್ಗೊಳ್ಳುತ್ತಾರೆ.
*ಹಣ್ಣು, ತರಕಾರಿಗಳನ್ನು ಜಾಸ್ತಿ ಸೇವಿಸಬೇಕೆಂದು ಒಂದೇ ರೀತಿಯ ಆಹಾರ ಮಾಡಿ ಬಡಿಸಿದರೆ ಮಕ್ಕಳಿಗೂ ಇಷ್ಟವಾಗಲ್ಲ. ಹಾಗಾಗಿ ಆಹಾರವನ್ನು ರುಚಿ ರುಚಿಯಾಗಿ ಹಾಗೂ ಅಲಂಕರಿಸಿ ಕೊಡಿ. ಆಹಾರವನ್ನು ಆಕರ್ಷಣೀಯವಾಗಿ ಅಲಂಕರಿಸಿ ಕೊಡುವುದರ ಜೊತೆಗೆ ಅದರಲ್ಲಿ ಬಳಸಿರುವ ಎಲ್ಲಾ ತರಕಾರಿಗಳು ಮಕ್ಕಳ ಆರೋಗ್ಯಕ್ಕೆ ಉತ್ತಮ ಎಂಬುದನ್ನು ಗಮನಿಸಬೇಕು
ಒಂದು ವೇಳೆ ಮಕ್ಕಳಿಗೆ ಜಂಕ್ಫುಡ್ ತಿನ್ನುವ ಅಭ್ಯಾಸವಿದ್ದರೆ ಮನೆಯಲ್ಲೇ ಇರುವ ಶ್ಯಾವಿಗೆ ಮೊದಲಾದ ಪದಾರ್ಥಗಳಿಂದ ಹೊಸ ರುಚಿ ಮಾಡಿ ಕೊಡಬಹುದು. ಧಾನ್ಯಗಳನ್ನು ಮೊಳಕೆ ಬರಿಸಿ ಅದನ್ನು ಒಣಗಿಸಿ ಅದರ ಹಿಟ್ಟಿನಿಂದ ಬಗೆ ಬಗೆ ತಿಂಡಿಗಳನ್ನು ತಯಾರಿಸಿ ಕೊಟ್ಟರೆ ಮಕ್ಕಳ ಆರೋಗ್ಯಕ್ಕೆ ಉತ್ತಮ. ಮಕ್ಕಳ ಆಹಾರ ತಯಾರಿಸುವಾಗ ಅತಿ ಹೆಚ್ಚು ಕೊಬ್ಬು ಇರುವ ಪದಾರ್ಥಗಳು ಹಾಗೂ ಚೀಸ್ಗಳನ್ನು ಬಳಸಬಾರದು.
Gold Rate Today : ಗೋಲ್ಡ್ ಖರೀದಿಗೆ ಪ್ರಶಸ್ತ ದಿನ – ಇಂದಿನ ಚಿನ್ನ ಬೆಳ್ಳಿಯ ದರ ಇಲ್ಲಿ ತಿಳಿಯಿರಿ
ನಿದ್ರೆಯ ದಿನಚರಿ
ಟೈಪ್ 2 ಮಧುಮೇಹ, ಬೊಜ್ಜು ಮತ್ತು ನಡವಳಿಕೆಯ ಅಸ್ವಸ್ಥತೆಗಳು ಸೇರಿದಂತೆ ವಿವಿಧ ಆರೋಗ್ಯ ಪರಿಸ್ಥಿತಿಗಳನ್ನು ಸಾಕಷ್ಟು ನಿದ್ರೆಯಿಂದ ತಪ್ಪಿಸಬಹುದು. ಒಬ್ಬ ಯುವಕ ಅಥವಾ ಅವಳು ನಿದ್ರೆಯಿಂದ ವಂಚಿತರಾದಾಗ ಅಥವಾ ಸಾಕಷ್ಟು ನಿದ್ರೆಯನ್ನು ಪಡೆಯದಿದ್ದಾಗ ಅನಾರೋಗ್ಯಕರ ತೂಕವನ್ನು ಅಭಿವೃದ್ಧಿಪಡಿಸುವ ಸಾಧ್ಯತೆ ಹೆಚ್ಚು.
ಮಾನಸಿಕ ಬೆಂಬಲ
ಬೆಂಬಲ ಮತ್ತು ಲವಲವಿಕೆಯಿಂದಿರಿ. ಕೆಲವು ಮಕ್ಕಳು ತಮ್ಮ ಆಕರ್ಷಣೆ ಅಥವಾ ದೈಹಿಕ ನೋಟದಿಂದಾಗಿ ಅಹಿತಕರ ಮತ್ತು ಮುಜುಗರವನ್ನು ಅನುಭವಿಸುತ್ತಾರೆ.
ಆರೋಗ್ಯ
Bantwal-ಆಯುಷ್ಮಾನ್ ಭಾರತ್ ಯೋಜನೆಯಡಿ ಬಂಟ್ವಾಳ ಸರ್ಕಾರಿ ಆಸ್ಪತ್ರೆಯಲ್ಲಿ ಉಚಿತ ಹಿಪ್ ರಿಪ್ಲೇಸ್‌ಮೆಂಟ್ ಶಸ್ತ್ರಚಿಕಿತ್ಸೆ ಯಶಸ್ವಿ
ಕಳೆದ ಎಂಟು ತಿಂಗಳಿನಿಂದ ಎರಡೂ ಸೊಂಟಗಳ ತೀವ್ರ ನೋವಿನಿಂದ ಬಳಲುತ್ತಿದ್ದ 41 ವರ್ಷದ ವ್ಯಕ್ತಿಯೊಬ್ಬರಿಗೆ ಬಂಟ್ವಾಳ ತಾಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ ಆಯುಷ್ಮಾನ್ ಭಾರತ್–ಆರೋಗ್ಯ ಕರ್ನಾಟಕ ಯೋಜನೆಯಡಿ ಸಂಪೂರ್ಣ ಉಚಿತವಾಗಿ ಯಶಸ್ವಿ ಹಿಪ್ ರಿಪ್ಲೇಸ್‌ಮೆಂಟ್ ಶಸ್ತ್ರಚಿಕಿತ್ಸೆ ನಡೆಸಲಾಗಿದೆ.
ಬಂಟ್ವಾಳ: ಕಳೆದ ಎಂಟು ತಿಂಗಳಿನಿಂದ ಎರಡೂ ಸೊಂಟಗಳ ತೀವ್ರ ನೋವಿನಿಂದ ಬಳಲುತ್ತಿದ್ದ 41 ವರ್ಷದ ವ್ಯಕ್ತಿಯೊಬ್ಬರಿಗೆ ಬಂಟ್ವಾಳ ತಾಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ ಆಯುಷ್ಮಾನ್ ಭಾರತ್–ಆರೋಗ್ಯ ಕರ್ನಾಟಕ ಯೋಜನೆಯಡಿ ಸಂಪೂರ್ಣ ಉಚಿತವಾಗಿ ಯಶಸ್ವಿ ಶಸ್ತ್ರಚಿಕಿತ್ಸೆ ನಡೆಸಲಾಗಿದೆ.
ಬಂಟ್ವಾಳ ತಾಲೂಕಿನ ನಿವಾಸಿಯಾಗಿರುವ ಈ ವ್ಯಕ್ತಿಗೆ ‘ಬೈಲ್ಯಾಟರಲ್ ಹಿಪ್ ಅವಾಸ್ಕುಲರ್ ನೆಕ್ರೋಸಿಸ್’ (Bilateral Hip Avascular Necrosis) ಎಂಬ ಕಾಯಿಲೆ ಇರುವುದು ವೈದ್ಯಕೀಯ ತಪಾಸಣೆಯಲ್ಲಿ ಪತ್ತೆಯಾಗಿತ್ತು. ಇದರಿಂದ ಎರಡೂ ಸೊಂಟದ ಮೂಳೆಗಳು ಹಾನಿಗೊಳಗಾಗಿದ್ದು, ಬಲಭಾಗಕ್ಕಿಂತ ಎಡಭಾಗದ ಮೂಳೆಯ ಸ್ಥಿತಿ ಗಂಭೀರವಾಗಿತ್ತು.
ಈ ಹಿಂದೆ ಮಂಗಳೂರಿನ ವೆನ್ಲಾಕ್ ಜಿಲ್ಲಾ ಆಸ್ಪತ್ರೆ ಸೇರಿದಂತೆ ವಿವಿಧ ಖಾಸಗಿ ಆಸ್ಪತ್ರೆಗಳು ಹಾಗೂ ಮೂಳೆ ತಜ್ಞರನ್ನು ಸಂಪರ್ಕಿಸಿದ್ದ ರೋಗಿಗೆ ಶಸ್ತ್ರಚಿಕಿತ್ಸೆಯೊಂದೇ ಶಾಶ್ವತ ಪರಿಹಾರ ಎಂದು ವೈದ್ಯರು ಸಲಹೆ ನೀಡಿದ್ದರು. ಬಳಿಕ ಸ್ಥಳೀಯರ ಸಹಕಾರದೊಂದಿಗೆ ಹೆಚ್ಚಿನ ಚಿಕಿತ್ಸೆಗಾಗಿ ಬಂಟ್ವಾಳ ತಾಲೂಕು ಸಾರ್ವಜನಿಕ ಆಸ್ಪತ್ರೆಗೆ ದಾಖಲಾಗಿದ್ದರು.
ರೋಗಿಯ ಆರ್ಥಿಕ ಹಾಗೂ ಆರೋಗ್ಯದ ಸಂಕಷ್ಟವನ್ನು ಅರಿತ ಆಸ್ಪತ್ರೆಯ ವೈದ್ಯಕೀಯ ತಂಡವು ಆಯುಷ್ಮಾನ್ ಭಾರತ್–ಆರೋಗ್ಯ ಕರ್ನಾಟಕ ಯೋಜನೆಯಡಿ ಉಚಿತವಾಗಿ ಶಸ್ತ್ರಚಿಕಿತ್ಸೆ ನಡೆಸಲು ನಿರ್ಧರಿಸಿತು. ನವೆಂಬರ್ 4ರಂದು ಯೋಜನೆಯಡಿ ಅನುಮೋದನೆಗಾಗಿ ಅರ್ಜಿ ಸಲ್ಲಿಸಲಾಗಿದ್ದು, ನವೆಂಬರ್ 11ರಂದು ಅನುಮತಿ ದೊರೆತಿತ್ತು. ಬಳಿಕ ನವೆಂಬರ್ 17ರಂದು ವೈದ್ಯರ ತಂಡ ಯಶಸ್ವಿಯಾಗಿ ಶಸ್ತ್ರಚಿಕಿತ್ಸೆ ಪೂರ್ಣಗೊಳಿಸಿದೆ.
ಜಿಲ್ಲಾ ಆರೋಗ್ಯಾಧಿಕಾರಿ ಡಾ. ತಿಮ್ಮಯ್ಯ ಅವರ ಮಾರ್ಗದರ್ಶನದಲ್ಲಿ ಮಾರ್ಗದರ್ಶಕ ಶಸ್ತ್ರಚಿಕಿತ್ಸಕ ಡಾ. ಅಭಿಷೇಕ್ ಶೆಟ್ಟಿ ಹಾಗೂ ಬಂಟ್ವಾಳ ಸರ್ಕಾರಿ ಆಸ್ಪತ್ರೆಯ ಮೂಳೆ ತಜ್ಞ ಡಾ. ಚೇತನ್‌ರಾಜ್ ಅವರ ನೇತೃತ್ವದಲ್ಲಿ ಶಸ್ತ್ರಚಿಕಿತ್ಸೆ ನೆರವೇರಿತು.
ಅರವಳಿಕೆ ತಜ್ಞರಾದ ಡಾ. ವಿದ್ಯಾಸಾಗರ್ ಹಾಗೂ ಡಾ. ತುಷಾರ್ ಕೆ., ಶಸ್ತ್ರಚಿಕಿತ್ಸಾ ವಿಭಾಗದ ಶುಶ್ರೂಷಾಧಿಕಾರಿಗಳಾದ ವಾಣಿ, ಪುಷ್ಪಾ, ಕೀರ್ತಿಶಾಲಿನಿ, ತಂತ್ರಜ್ಞರಾದ ಧನ್ಯಾ ಮತ್ತು ಶಶಿಕಲಾ ಹಾಗೂ ಡಿ-ದರ್ಜೆ ನೌಕರರಾದ ಸವಿತಾ, ಜಲಜಾ ಮತ್ತು ಚಂದ್ರಾವತಿ ಅವರು ಶಸ್ತ್ರಚಿಕಿತ್ಸೆಗೆ ಸಹಕರಿಸಿದರು.
ಸರ್ಕಾರಿ ಆಸ್ಪತ್ರೆಯಲ್ಲೇ ಯಾವುದೇ ವೆಚ್ಚವಿಲ್ಲದೆ ಗುಣಮಟ್ಟದ ಚಿಕಿತ್ಸೆ ದೊರೆತಿರುವುದಕ್ಕೆ ರೋಗಿಯ ಕುಟುಂಬಸ್ಥರು ಹಾಗೂ ಸಾರ್ವಜನಿಕರು ವೈದ್ಯಕೀಯ ತಂಡಕ್ಕೆ ಕೃತಜ್ಞತೆ ಸಲ್ಲಿಸಿದ್ದಾರೆ ಎಂದು ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ. ದಿನೇಶ್ ಕಾಮತ್ ತಿಳಿಸಿದ್ದಾರೆ.
ಆರೋಗ್ಯ
Puttur-ಪುತ್ತೂರು: ಸಿಟಿ ಆಸ್ಪತ್ರೆಯಲ್ಲಿ ಉಚಿತ ಮೂಳೆ ಖನಿಜ ಸಾಂದ್ರತೆ (BMD) ಚಿಕಿತ್ಸಾ ಶಿಬಿರ
ಪುತ್ತೂರು ಸಿಟಿ ಆಸ್ಪತ್ರೆ ಚಾರಿಟೇಬಲ್ ಟ್ರಸ್ಟ್ ಹಾಗೂ ಇನ್ನರ್ ವೀಲ್ ಕ್ಲಬ್ ಪುತ್ತೂರು ಇವರ ಸಹಯೋಗದಲ್ಲಿ ಇಂದು (ನ.19) ಬೆಳಿಗ್ಗೆ 9.30ರಿಂದ ಮಧ್ಯಾಹ್ನ 2.30ರವರೆಗೆ ಉಚಿತ ಮೂಳೆ ಖನಿಜ ಸಾಂದ್ರತೆ (BMD) ಚಿಕಿತ್ಸಾ ಶಿಬಿರವು ನಡೆಯಿತು. ಪುತ್ತೂರು ಸಿಟಿ ಆಸ್ಪತ್ರೆಯಲ್ಲಿ ಶಿಬಿರವನ್ನು ಏರ್ಪಡಿಸಲಾಗಿತ್ತು.
ಪುತ್ತೂರು: ಪುತ್ತೂರು ಸಿಟಿ ಆಸ್ಪತ್ರೆ ಚಾರಿಟೇಬಲ್ ಟ್ರಸ್ಟ್ ಹಾಗೂ ಇನ್ನರ್ ವೀಲ್ ಕ್ಲಬ್ ಪುತ್ತೂರು ಇವರ ಸಹಯೋಗದಲ್ಲಿ ಇಂದು (ನ.19) ಬೆಳಿಗ್ಗೆ 9.30ರಿಂದ ಮಧ್ಯಾಹ್ನ 2.30ರವರೆಗೆ ಉಚಿತ ಮೂಳೆ ಖನಿಜ ಸಾಂದ್ರತೆ (BMD) ಚಿಕಿತ್ಸಾ ಶಿಬಿರವು ನಡೆಯಿತು. ಪುತ್ತೂರು ಸಿಟಿ ಆಸ್ಪತ್ರೆಯಲ್ಲಿ ಶಿಬಿರವನ್ನು ಏರ್ಪಡಿಸಲಾಗಿತ್ತು.
ಬೆನ್ನು ನೋವು, ಮೊಣಕಾಲು ನೋವು, ಸೊಂಟ ನೋವು ಹಾಗೂ ಸ್ನಾಯು ನೋವು ಮುಂತಾದ ಸಮಸ್ಯೆಗಳು ಮೂಳೆ ಸವೆತ ಅಥವಾ ಮುಂದಿನ ದಿನಗಳಲ್ಲಿ ಮೂಳೆ ಮುರಿತಕ್ಕೆ ಕಾರಣವಾಗುವ ಸಾಧ್ಯತೆಯಿದೆ. ಇಂತಹ ಲಕ್ಷಣಗಳನ್ನು ನಿರ್ಲಕ್ಷಿಸದೆ ಆರಂಭದಲ್ಲೇ ತಪಾಸಣೆ ಮಾಡಿಸಿಕೊಂಡು ಸೂಕ್ತ ಚಿಕಿತ್ಸೆ ಪಡೆಯುವುದು ಅಗತ್ಯ. ಈ ನಿಟ್ಟಿನಲ್ಲಿ ಸಾರ್ವಜನಿಕರಿಗೆ ಅನುಕೂಲವಾಗುವಂತೆ ಉಚಿತ BMD ಶಿಬಿರವನ್ನು ಆಯೋಜಿಸಲಾಗಿತ್ತು. ಆರೋಗ್ಯ ಸೇವಾ ವಿಭಾಗದ ಇಂಡ್‌ಕೆಮಿ ಹೆಲ್ತ್ ಸ್ಪೆಷಾಲಿಟಿ ಪ್ರೈವೇಟ್ ಲಿಮಿಟೆಡ್ ಪ್ರಾಯೋಜಕತ್ವದಲ್ಲಿ ಶಿಬಿರ ನಡೆಯಿತು.
ಶಿಬಿರದಲ್ಲಿ ಮೂಳೆ ತಜ್ಞರಾದ ಡಾ. ಭಾಸ್ಕರ್ ಎಸ್. (D’Ortho), ಆಡಳಿತ ನಿರ್ದೇಶಕರು, ಪುತ್ತೂರು ಸಿಟಿ ಆಸ್ಪತ್ರೆ ಇವರು ತಪಾಸಣೆ ಹಾಗೂ ಸಲಹೆ ನೀಡಿದರು.
ಇನ್ನರ್ ವೀಲ್ ಕ್ಲಬ್ ನ ನಿರ್ದೇಶಕಿ ಮಂಜುಳ ಭಾಸ್ಕರ್, ಅಧ್ಯಕ್ಷೆ ಮನೋರಮಾ ಸೂರ್ಯ, ಖಜಾಂಜಿ ಕವಿತಾ ಕೊಳತ್ತಾಯ, ಕಾರ್ಯದರ್ಶಿ ಶ್ರುತಿ ಎಸ್. ಬಂಗೇರ ಶಿಬಿರದಲ್ಲಿ ಉಪಸ್ಥಿತರಿದ್ದರು.
ಆರೋಗ್ಯ
‘Ritu Taare’ scheme-35 ವರ್ಷ ಮೇಲ್ಪಟ್ಟ ಮಹಿಳೆಯರ ಆರೋಗ್ಯಕ್ಕೆ ‘ಋತು ತಾರೆ’ ಯೋಜನೆ; ದ.ಕ.ದಲ್ಲಿ ಮೂರು ತಿಂಗಳ ಪ್ರಾಯೋಗಿಕ ಅನುಷ್ಠಾನ..! ನಟಿ ರಮ್ಯಾ ರಾಯಭಾರಿ
35 ವರ್ಷ ಮೇಲ್ಪಟ್ಟ ಮಹಿಳೆಯರ ಆರೋಗ್ಯ ಮತ್ತು ಆರೈಕೆಗೆ ವಿಶೇಷ ಆದ್ಯತೆ ನೀಡುವ ಉದ್ದೇಶದಿಂದ ರಾಜ್ಯ ಸರಕಾರ ‘ಋತು ತಾರೆ’ ಎಂಬ ಮಧ್ಯವಯಸ್ಕ ಮಹಿಳೆಯರ ಆರೋಗ್ಯ ಮತ್ತು ಮೆನೋಪಾಸ್ ಕಾರ್ಯಕ್ರಮವನ್ನು ಜಾರಿಗೆ ತಂದಿದೆ. ಈ ಕಾರ್ಯಕ್ರಮದ ರಾಯಭಾರಿಯಾಗಿ ಚಿತ್ರನಟಿ ರಮ್ಯಾ ಕಾರ್ಯನಿರ್ವಹಿಸಲಿದ್ದಾರೆ.
ಬೆಂಗಳೂರು: 35 ವರ್ಷ ಮೇಲ್ಪಟ್ಟ ಮಹಿಳೆಯರ ಆರೋಗ್ಯ ಮತ್ತು ಆರೈಕೆಗೆ ವಿಶೇಷ ಆದ್ಯತೆ ನೀಡುವ ಉದ್ದೇಶದಿಂದ ರಾಜ್ಯ ಸರಕಾರ ‘ಋತು ತಾರೆ’ ಎಂಬ ಮಧ್ಯವಯಸ್ಕ ಮಹಿಳೆಯರ ಆರೋಗ್ಯ ಮತ್ತು ಮೆನೋಪಾಸ್ ಕಾರ್ಯಕ್ರಮವನ್ನು ಜಾರಿಗೆ ತಂದಿದೆ.
ಈ ಕುರಿತು ಆರೋಗ್ಯ ಇಲಾಖೆ ಆದೇಶ ಹೊರಡಿಸಿದ್ದು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮೂರು ತಿಂಗಳ ಕಾಲ ಪ್ರಾಯೋಗಿಕವಾಗಿ ಕಾರ್ಯಕ್ರಮ ಅನುಷ್ಠಾನಗೊಳ್ಳಲಿದೆ. ಈ ಹಂತದ ಅನುಭವದ ಆಧಾರದಲ್ಲಿ ಬಳಿಕ ರಾಜ್ಯದಾದ್ಯಂತ ವಿಸ್ತರಿಸಲು ಸರಕಾರ ಉದ್ದೇಶಿಸಿದೆ.
ಮಹಿಳೆಯರ ಆರೋಗ್ಯವು ಕೇವಲ ತಾಯ್ತನಕ್ಕೆ ಸೀಮಿತವಾಗಿಲ್ಲ. ಮೆನೋಪಾಸ್ ಹಂತದಲ್ಲಿ ನಿದ್ರಾಹೀನತೆ, ದೇಹದಲ್ಲಿ ಏಕಾಏಕಿ ಬಿಸಿಯ ಅನುಭವ, ಕೀಲು ನೋವು, ಮೂಳೆಗಳ ದುರ್ಬಲತೆ, ಆತಂಕ ಹಾಗೂ ಮಾನಸಿಕ ಏರುಪೇರು ಸೇರಿದಂತೆ ಹಲವು ಸಮಸ್ಯೆಗಳು ಕಾಣಿಸಿಕೊಳ್ಳಬಹುದು. ಇವುಗಳನ್ನು ವಯಸ್ಸಿನ ಸಹಜ ಬದಲಾವಣೆ ಎಂದು ನಿರ್ಲಕ್ಷಿಸದೆ ಸೂಕ್ತ ತಪಾಸಣೆ ಮತ್ತು ಚಿಕಿತ್ಸೆ ಪಡೆಯುವುದು ಅಗತ್ಯ ಎಂದು ಸರಕಾರ ತಿಳಿಸಿದೆ.
‘ಋತು ತಾರೆ’ ಯೋಜನೆಯಡಿ ಮಹಿಳೆಯರಿಗಾಗಿ ಪ್ರತ್ಯೇಕ ಕ್ಲಿನಿಕ್‌ಗಳನ್ನು ತೆರೆಯಲಾಗುತ್ತದೆ. ಇಲ್ಲಿ ಸಮಗ್ರ ಆರೋಗ್ಯ ತಪಾಸಣೆ, ಮಾನಸಿಕ ಆರೋಗ್ಯ ಮತ್ತು ಪೌಷ್ಟಿಕ ಆಹಾರದ ಕುರಿತು ಮಾರ್ಗದರ್ಶನ ನೀಡಲಾಗುತ್ತದೆ. ಅಗತ್ಯವಿರುವವರಿಗೆ ತಜ್ಞ ವೈದ್ಯರಿಂದ ಚಿಕಿತ್ಸೆ ಒದಗಿಸುವುದರ ಜೊತೆಗೆ, ಆರೋಗ್ಯದ ವಿವರಗಳನ್ನು ದಾಖಲಿಸಲು ‘ಮಿಡ್-ಲೈಫ್ ಹೆಲ್ತ್ ಕಾರ್ಡ್’ ವಿತರಿಸಲಾಗುತ್ತದೆ.
ಈ ಕಾರ್ಯಕ್ರಮದ ರಾಯಭಾರಿಯಾಗಿ ಚಿತ್ರನಟಿ ರಮ್ಯಾ ಕಾರ್ಯನಿರ್ವಹಿಸಲಿದ್ದಾರೆ. ಮೆನೋಪಾಸ್ ಹಾಗೂ ಮಧ್ಯವಯಸ್ಕ ಮಹಿಳೆಯರ ಆರೋಗ್ಯದ ಕುರಿತು ಜಾಗೃತಿ ಮೂಡಿಸಿ, ಕಾರ್ಯಕ್ರಮದ ಸಂದೇಶವನ್ನು ರಾಜ್ಯದ ಮೂಲೆಮೂಲೆಗೂ ತಲುಪಿಸಲು ಅವರು ಸಹಕರಿಸಲಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮೂರು ತಿಂಗಳ ಪ್ರಾಯೋಗಿಕ ಅನುಷ್ಠಾನ ಪೂರ್ಣಗೊಂಡ ಬಳಿಕ ಯೋಜನೆಯನ್ನು ರಾಜ್ಯಾದ್ಯಂತ ವಿಸ್ತರಿಸಲಾಗುವುದು. ಮಹಿಳೆಯರ ಬದುಕಿನ ಪ್ರತಿಯೊಂದು ಹಂತದಲ್ಲೂ ಉತ್ತಮ ಆರೋಗ್ಯ ಸೇವೆ, ಸೂಕ್ತ ಆರೈಕೆ ಮತ್ತು ಘನತೆಯ ಬದುಕು ದೊರೆಯಬೇಕು ಎಂಬ ಉದ್ದೇಶದಿಂದ ಈ ಕಾರ್ಯಕ್ರಮ ರೂಪಿಸಲಾಗಿದೆ ಎಂದು ಸರಕಾರ ತಿಳಿಸಿದೆ.
-
ಬಿಗ್ ನ್ಯೂಸ್23 hours agoNeralakatte-Big Breaking: ನೇರಳಕಟ್ಟೆ : ಲಾರಿ ಡಿಕ್ಕಿಯಾಗಿ ರಸ್ತೆ ದಾಟುತ್ತಿದ್ದ 14ರ ಬಾಲಕಿ ದುರ್ಮರಣ
-
ಶಿಕ್ಷಣ8 hours agoVivekananda-ವಿವೇಕಾನಂದ ಪಾಲಿಟೆಕ್ನಿಕ್ – ನೂತನ ಆಡಳಿತ ಮಂಡಳಿಯ ರಚನೆ : ಅಧ್ಯಕ್ಷರಾಗಿ ಕೃಷ್ಣಕುಮಾರ್ ಅತ್ರಿಜಾಲು, ಸಂಚಾಲಕರಾಗಿ ನರಸಿಂಹ ಪೈ
-
ಸ್ಥಳೀಯ7 hours agoBaindoor-ರೈಲಿನಲ್ಲಿ ಮೊಬೈಲ್ ಕಳವು, UPI ಮೂಲಕ ಹಣ ವರ್ಗಾವಣೆ: ಬೈಂದೂರು ಪೊಲೀಸರಿಂದ ಕುಖ್ಯಾತ ಆರೋಪಿ ಬಂಧನ
-
ಚಿನ್ನ-ಬೆಳ್ಳಿ ದರ7 hours agoGold Rate Today-ಆಭರಣಪ್ರಿಯರಿಗೆ ಗುಡ್ನ್ಯೂಸ್: ಚಿನ್ನದ ಬೆಲೆಯಲ್ಲಿ ಭಾರೀ ಕುಸಿತ: 12 ಸಾವಿರ ರೂ. ಗಡಿಯೊಳಗೆ ಬಂದ ಆಭರಣ ಚಿನ್ನ..!
-
ಸಿನೆಮಾ6 hours agoArjun Sarja-ಪುತ್ರಿ ಐಶ್ವರ್ಯಾ ವಿರುದ್ಧ ಅವಹೇಳನಕಾರಿ ವರದಿ: ಮಾಧ್ಯಮಗಳ ವಿರುದ್ಧ ಸಿಡಿದೆದ್ದ ಅರ್ಜುನ್ ಸರ್ಜಾ; ಅಧಿಕೃತ ದೂರು ದಾಖಲು
-
ಅಪರಾಧ7 hours agoMangalore-ಮಂಗಳೂರು: ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ಆರೋಪ: ಮತ್ತೊಂದು ಪೋಕ್ಸೋ ಪ್ರಕರಣದಲ್ಲಿ ಧರ್ಮಗುರು ಮರುಬಂಧನ
-
ಅಪರಾಧ7 hours agoManipal police-ಪಟಾಕಿ ಪ್ರಕರಣ: ಮಣಿಪಾಲ ಪೊಲೀಸರ ವಿರುದ್ಧ ದೌರ್ಜನ್ಯ ಆರೋಪ: ಸಿಎಂಗೆ ಇ-ಮೇಲ್ ಮಾಡಿದ ವಿದ್ಯಾರ್ಥಿಗಳು
-
ಆರೋಗ್ಯ6 hours agoBantwal-ಆಯುಷ್ಮಾನ್ ಭಾರತ್ ಯೋಜನೆಯಡಿ ಬಂಟ್ವಾಳ ಸರ್ಕಾರಿ ಆಸ್ಪತ್ರೆಯಲ್ಲಿ ಉಚಿತ ಹಿಪ್ ರಿಪ್ಲೇಸ್‌ಮೆಂಟ್ ಶಸ್ತ್ರಚಿಕಿತ್ಸೆ ಯಶಸ್ವಿ















