ಚಿನ್ನ-ಬೆಳ್ಳಿ ದರ
Gold Rate Today : ಸಿಹಿ ಸುದ್ದಿ – ಗೋಲ್ಡ್ ದರದಲ್ಲಿ ಇಳಿಕೆ – ಖರೀದಿಗೂ ಮುನ್ನ ಚಿನ್ನ – ಬೆಳ್ಳಿಯ ದರ ತಿಳಿಯಿರಿ
ಬೆಂಗಳೂರು Bangalore ಅ 11 : ಕಳೆದ ಎರಡು ಮೂರು ವಾರಗಳಿಂದ ಚಿನ್ನದ ದರ ( Gold Rate) ಹಾವು ಏಣಿ ಆಟದಲ್ಲಿ ತೊಡಗಿದೆ. ನವರಾತ್ರಿ ಹಬ್ಬಕ್ಕಿಂತ ಮುಂಚಿನ ದಿನಗಳಲ್ಲಿ ಇಳಿಕೆಯತ್ತ ಮುಖ ಮಾಡಿದ ಹಳದಿ ಲೋಹದ ದರ ಆಯುಧ ಪೂಜೆ , ವಿಜಯ ದಶಮಿ ಹಬ್ಬಗಳಂದು ಏರಿಕೆ ಕಂಡಿತ್ತು . ಹಬ್ಬದ ಬಳಿಕ ಚಿನ್ನದ ಧಾರಣೆಯಲ್ಲಿ ಇಳಿಕೆ ಕಾಣ ಬಹುದು ಅಂದ್ಕೊಂಡವರಿಗೆ ಶಾಕ್ ಆಗುವಂತೆ ಹಬ್ಬದ ಬಳಿಕ ಗೋಲ್ಡ್ ರೇಟ್ ಹೆಚ್ಚಾಯಿತು.
ಆದರೇ ಕಳೆದ ಮೂರು ದಿನಗಳಿಂದ ಚಿನ್ನದ ರೇಟ್ ಒಂದಷ್ಟು ಸ್ಥಿರಗೊಂಡಿತ್ತು. ಇಂದು ಗೋಲ್ಡ್ ರೇಟ್ ತುಸು ಕಡಿಮೆಯಾಗಿದ್ದಾರೆ ಬೆಳ್ಳಿ ದರದಲ್ಲಿ ಭಾರೀ ಇಳಿಕೆ ಕಾಣಿಸಿದೆ. ದೇಶದ ಪ್ರಮುಖ ನಗರಗಳ ಇಂದಿನ ಚಿನ್ನ ಹಾಗೂ ಬೆಳ್ಳಿಯ ದರವನ್ನು ಕೆಳಗೆ ನೀಡಲಾಗಿದೆ
(Gold Rate Today) ಇಂದು ಅಕ್ಟೋಬರ್ 11 ಮಂಗಳವಾರ ಬೆಳಗಿನ ವೇಳೆಗೆ ದೇಶದಲ್ಲಿ 1 ಗ್ರಾಂ (24 ಕ್ಯಾರಟ್) ಬಂಗಾರದ ಬೆಲೆ ₹5,193 ರೂ. ದಾಖಲಾಗಿದೆ. ಬೆಂಗಳೂರಿನಲ್ಲಿ 1 ಗ್ರಾಂ (24 ಕ್ಯಾರಟ್) ಬಂಗಾರಕ್ಕೆ ₹5,198 ರೂಪಾಯಿ ನಿಗದಿಯಾಗಿದೆ.
ದೈನಂದಿನ ಬೆಲೆ ಪ್ರಕ್ರಿಯೆಯಲ್ಲಿ ಇಂದು ಬೆಳಗಿನ ವೇಳೆಗೆ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ 10 ಗ್ರಾಂ (22 ಕ್ಯಾರಟ್) ಚಿನ್ನದ ಬೆಲೆಗೆ ₹47,650 ರೂಪಾಯಿ ನಿಗದಿಯಾಗಿದೆ. ಬೆಂಗಳೂರಿನಲ್ಲಿ 10 ಗ್ರಾಂ ಅಪರಂಜಿ ಚಿನ್ನದ (24 ಕ್ಯಾರಟ್) ಬೆಲೆ ₹51,980 ರೂಪಾಯಿ ದಾಖಲಾಗಿದೆ.
ಪ್ರಮುಖ ನಗರಗಳಲ್ಲಿ ಇಂದು 10 ಗ್ರಾಂ ಚಿನ್ನದ ಬೆಲೆ ಹೀಗಿದೆ:
ಬೆಂಗಳೂರು: ₹47,650 (22 ಕ್ಯಾರಟ್) – ₹51,980 (24 ಕ್ಯಾರಟ್)
ಚೆನ್ನೈ: ₹48,050 (22 ಕ್ಯಾರಟ್) – ₹52,420 (24 ಕ್ಯಾರಟ್)
ದಿಲ್ಲಿ: ₹47,750 (22 ಕ್ಯಾರಟ್) – ₹52,100 (24 ಕ್ಯಾರಟ್)
ಹೈದರಾಬಾದ್: ₹47,600 (22 ಕ್ಯಾರಟ್) – ₹51,930 (24 ಕ್ಯಾರಟ್)
ಕೋಲ್ಕತಾ: ₹47,600 (22 ಕ್ಯಾರಟ್) – ₹51,930 (24 ಕ್ಯಾರಟ್)
ಮಂಗಳೂರು: ₹47,650 (22 ಕ್ಯಾರಟ್) – ₹51,980 (24 ಕ್ಯಾರಟ್)
ಮುಂಬಯಿ: ₹47,600 (22 ಕ್ಯಾರಟ್) – ₹51,930 (24 ಕ್ಯಾರಟ್)
ಮೈಸೂರು: ₹47,650 (22 ಕ್ಯಾರಟ್) – ₹51,980 (24 ಕ್ಯಾರಟ್)
Gold Rate Today : ಗೋಲ್ಡ್ ಖರೀದಿಗೆ ಪ್ರಶಸ್ತ ದಿನ – ಇಂದಿನ ಚಿನ್ನ ಬೆಳ್ಳಿಯ ದರ ಇಲ್ಲಿ ತಿಳಿಯಿರಿ
ಬೆಳ್ಳಿ ದರ (Silver Rate)
ದೇಶದಲ್ಲಿ ಬೆಳ್ಳಿ ಬೆಲೆ ಒಂದು ಕೆಜಿಗೆ ₹59,500 ರೂಪಾಯಿ ದಾಖಲಾಗಿದೆ. ಬೆಂಗಳೂರಿನಲ್ಲಿ ಒಂದು ಕೆಜಿ ಬೆಳ್ಳಿ ಬೆಲೆ ₹64,800 ರೂ. ಇದೆ. ದೇಶಾದ್ಯಂತ ಕೆಲವು ನಗರಗಳನ್ನು ಹೊರತುಪಡಿಸಿ ಅನೇಕ ಕಡೆ ಬೆಳ್ಳಿ ಬೆಲೆಯಲ್ಲಿ ಏಕರೂಪವಿದೆ. ಚೆನ್ನೈ, ವಿಜಯವಾಡ, ಹೈದರಾಬಾದ್, ವಿಶಾಖಪಟ್ಟಣಂದಲ್ಲಿಯೂ ₹64,800 ರೂ. ನಿಗದಿಯಾಗಿದೆ.
ಒಟ್ಟಾರೆ ಇಂದು ಬೆಳಗ್ಗಿನ ವೇಳೆಗೆ ದೇಶದ ಪ್ರಮುಖ ಮಹಾನಗರಗಳಲ್ಲಿ ಹಳದಿ ಲೋಹದ ಬೆಲೆಯಲ್ಲಿ ಇಳಿಕೆ ಕಂಡು ಬಂದರೆ, ಬೆಳ್ಳಿ ಬೆಲೆಯಲ್ಲಿಯೂ ಇಳಿಕೆ ಕಂಡು ಬಂದಿದೆ. .
ಅಂತಾರಾಷ್ಟ್ರೀಯ ಟ್ರೆಂಡ್, ಚಿನ್ನದ ಮೇಲಿನ ಆಮದು ಸುಂಕ ಮತ್ತು ಡಾಲರ್ ಎದುರು ರೂಪಾಯಿ ಮೌಲ್ಯವನ್ನು ಆಧರಿಸಿ ಆಯಾ ದಿನದ ಬಂಗಾರ ಹಾಗೂ ಬೆಳ್ಳಿ ದರ ನಿರ್ಧಾರವಾಗುತ್ತದೆ. ನಿಮ್ಮ ನಗರಗಳಲ್ಲಿ ಇಂದಿನ ದಿನ ಚಿನ್ನ ಮತ್ತು ಬೆಳಿಗೆ ಎಷ್ಟು ದರ ಇವೆ ಅನ್ನೋದನ್ನು ಇಲ್ಲಿ ನೀವು ಪ್ರತಿ ದಿನ ತಿಳಿದುಕೊಳ್ಳಬಹುದು.
Childhood Obesity : ಹೆಚ್ಚುತ್ತಿದೆ ಮಕ್ಕಳಲ್ಲಿ ಬೊಜ್ಜಿನ ಸಮಸ್ಯೆ – ನಿಯಂತ್ರಣಕ್ಕೆ ಈ ಕ್ರಮಗಳನ್ನು ಅನುಸರಿಸಿ
ಚಿನ್ನ-ಬೆಳ್ಳಿ ದರ
Gold Rate Today -ಅಮೆರಿಕ-ಇರಾನ್ ಸಂಘರ್ಷದ ಎಫೆಕ್ಟ್: 10 ಗ್ರಾಂ ಚಿನ್ನಕ್ಕೆ ಬರೋಬ್ಬರಿ ₹1.48 ಲಕ್ಷ; ಬೆಳ್ಳಿಯೂ ದುಬಾರಿ
ಇಂದು 10 ಗ್ರಾಂ ಚಿನ್ನದ ಬೆಲೆಯಲ್ಲಿ ಬರೋಬ್ಬರಿ 2,940 ರೂ. ಏರಿಕೆಯಾಗಿದ್ದು, ಒಟ್ಟು ದರ 1,48,580 ರೂ. ತಲುಪಿದೆ. ಪ್ರತಿ ಗ್ರಾಂಗೆ 294 ರೂ. ಹೆಚ್ಚಳವಾಗಿದ್ದು, 14,858 ರೂ. ದಾಖಲಾಗಿದೆ. ಬೆಳ್ಳಿಯ ದರದಲ್ಲಿ ಇಂದು ಒಂದೇ ದಿನ 10,000 ರೂ. ಏರಿಕೆಯಾಗಿದ್ದು, ಕೆಜಿ ಬೆಳ್ಳಿಯ ಬೆಲೆ 2,60,000 ರೂ. ನೊಂದಿಗೆ ಹೊಸ ದಾಖಲೆ ಬರೆದಿದೆ.
ಬೆಂಗಳೂರು: ಜಾಗತಿಕ ರಾಜಕೀಯ ಬೆಳವಣಿಗೆಗಳು ಅಂತರಾಷ್ಟ್ರೀಯ ಮಾರುಕಟ್ಟೆಯ ಮೇಲೆ ಭಾರಿ ಪ್ರಭಾವ ಬೀರಿದ್ದು, ಚಿನ್ನ ಮತ್ತು ಬೆಳ್ಳಿಯ ಬೆಲೆಯಲ್ಲಿ ಭಾರಿ ಏರಿಕೆ ಕಂಡುಬಂದಿದೆ. ಅಮೆರಿಕ ಮತ್ತು ಇರಾನ್ ನಡುವಿನ ಉದ್ವಿಗ್ನ ಪರಿಸ್ಥಿತಿ ಹಾಗೂ ಮಧ್ಯಪ್ರಾಚ್ಯದ ಸಂಘರ್ಷದ ಹಿನ್ನೆಲೆಯಲ್ಲಿ ಹೂಡಿಕೆದಾರರು ಚಿನ್ನದತ್ತ ಮುಖ ಮಾಡಿರುವುದು ಈ ಬೆಲೆ ಏರಿಕೆಗೆ ಪ್ರಮುಖ ಕಾರಣವಾಗಿದೆ.
ಇಂದಿನ ಚಿನ್ನದ ದರ ವಿವರ (ಜೂನ್ 12, 2026):
24 ಕ್ಯಾರೆಟ್ ಚಿನ್ನ (ಶುದ್ಧ ಚಿನ್ನ):
ಇಂದು 10 ಗ್ರಾಂ ಚಿನ್ನದ ಬೆಲೆಯಲ್ಲಿ ಬರೋಬ್ಬರಿ 2,940 ರೂ. ಏರಿಕೆಯಾಗಿದ್ದು, ಒಟ್ಟು ದರ 1,48,580 ರೂ. ತಲುಪಿದೆ. ಪ್ರತಿ ಗ್ರಾಂಗೆ 294 ರೂ. ಹೆಚ್ಚಳವಾಗಿದ್ದು, 14,858 ರೂ. ದಾಖಲಾಗಿದೆ.
22 ಕ್ಯಾರೆಟ್ ಚಿನ್ನ (ಆಭರಣ ಚಿನ್ನ):
ಆಭರಣ ಚಿನ್ನದ ಬೆಲೆಯೂ ಏರಿಕೆಯ ಹಾದಿಯಲ್ಲಿದ್ದು, 10 ಗ್ರಾಂಗೆ 2,700 ರೂ. ಹೆಚ್ಚಳವಾಗಿದೆ. ಇದರೊಂದಿಗೆ 22 ಕ್ಯಾರೆಟ್ ಚಿನ್ನದ ಬೆಲೆ 1,36,200 ರೂ. ಗೆ ತಲುಪಿದೆ.
ಬೆಳ್ಳಿ ಬೆಲೆಯಲ್ಲಿ ಭಾರಿ ಜಿಗಿತ:
ಬೆಳ್ಳಿಯ ದರದಲ್ಲಿ ಇಂದು ಒಂದೇ ದಿನ 10,000 ರೂ. ಏರಿಕೆಯಾಗಿದ್ದು, ಕೆಜಿ ಬೆಳ್ಳಿಯ ಬೆಲೆ 2,60,000 ರೂ. ನೊಂದಿಗೆ ಹೊಸ ದಾಖಲೆ ಬರೆದಿದೆ.
ಬೆಲೆ ಏರಿಕೆಗೆ ಕಾರಣವೇನು?
ಅಮೆರಿಕ ಮತ್ತು ಇರಾನ್ ನಡುವಿನ ಸಂಘರ್ಷ ತಾರಕಕ್ಕೇರಿರುವುದು ಜಾಗತಿಕ ಮಾರುಕಟ್ಟೆಯಲ್ಲಿ ಆತಂಕ ಮೂಡಿಸಿದೆ. ಇರಾನ್ ಪಡೆಗಳು ಗಲ್ಫ್ ರಾಷ್ಟ್ರಗಳಲ್ಲಿನ ಅಮೆರಿಕದ ಸೇನಾ ನೆಲೆಗಳ ಮೇಲೆ ದಾಳಿ ನಡೆಸಿರುವುದು ಮತ್ತು ಹಾರ್ಮುಜ್ ಜಲಸಂಧಿಯನ್ನು ಬಂದ್ ಮಾಡಿರುವುದು ತೈಲ ಬೆಲೆ ಏರಿಕೆಗೆ ದಾರಿ ಮಾಡಿಕೊಟ್ಟಿದೆ. ಇದರ ಜೊತೆಗೆ ಒಮಾನ್ ಕರಾವಳಿಯಲ್ಲಿ ಭಾರತದ ಹಡಗುಗಳ ಮೇಲೆ ಸರಣಿ ದಾಳಿಗಳು ನಡೆದಿರುವುದು ಮಾರುಕಟ್ಟೆಯ ಏರುಪೇರಿಗೆ ಕಾರಣವಾಗಿದೆ.
ಆದರೆ, ಅಂತಿಮವಾಗಿ ಅಮೆರಿಕ ಅಧ್ಯಕ್ಷ ಟ್ರಂಪ್ ಅವರು ಇರಾನ್ ಮೇಲಿನ ಯೋಜಿತ ದಾಳಿಯನ್ನು ರದ್ದುಗೊಳಿಸಿ, ಶಾಂತಿ ಸಂಧಾನಕ್ಕೆ ಮುಂದಾಗುವುದಾಗಿ ಹೇಳಿರುವುದು ಮಾರುಕಟ್ಟೆಯಲ್ಲಿ ಸಕಾರಾತ್ಮಕ ಸಂಚಲನ ಮೂಡಿಸಿದೆ. ಸುರಕ್ಷಿತ ಹೂಡಿಕೆಯ ದೃಷ್ಟಿಯಿಂದ ಚಿನ್ನ ಮತ್ತು ಬೆಳ್ಳಿಗೆ ಬೇಡಿಕೆ ಹೆಚ್ಚಾಗಿರುವುದು ಬೆಲೆ ಏರಿಕೆಗೆ ಪುಷ್ಟಿ ನೀಡಿದೆ.
ಚಿನ್ನ-ಬೆಳ್ಳಿ ದರ
Gold Rate Today -ಆಭರಣ ಪ್ರಿಯರಿಗೆ ಬಂಪರ್ ಗುಡ್ ನ್ಯೂಸ್: ಒಂದೇ ದಿನ ಸಾವಿರ ರೂಪಾಯಿ ಇಳಿಕೆ ಕಂಡ ಚಿನ್ನದ ಬೆಲೆ..!
ವಾರದ ಮೊದಲ ದಿನವಾದ ಸೋಮವಾರ ಆಭರಣ ಖರೀದಿದಾರರಿಗೆ ದೊಡ್ಡ ಸಿಹಿ ಸುದ್ದಿ ಸಿಕ್ಕಿದೆ. ಜೂನ್ ತಿಂಗಳ ಆರಂಭದಿಂದಲೇ ಇಳಿಕೆಯ ಹಾದಿ ಹಿಡಿದಿರುವ ಚಿನ್ನದ ಬೆಲೆ, ಇಂದು ಮತ್ತಷ್ಟು ಕುಸಿತ ಕಾಣುವ ಮೂಲಕ ಗ್ರಾಹಕರ ಮುಖದಲ್ಲಿ ಮಂದಹಾಸ ಮೂಡಿಸಿದೆ.
ಬೆಂಗಳೂರು: ವಾರದ ಮೊದಲ ದಿನವಾದ ಸೋಮವಾರ ಆಭರಣ ಖರೀದಿದಾರರಿಗೆ ದೊಡ್ಡ ಸಿಹಿ ಸುದ್ದಿ ಸಿಕ್ಕಿದೆ. ಜೂನ್ ತಿಂಗಳ ಆರಂಭದಿಂದಲೇ ಇಳಿಕೆಯ ಹಾದಿ ಹಿಡಿದಿರುವ ಚಿನ್ನದ ಬೆಲೆ, ಇಂದು ಮತ್ತಷ್ಟು ಕುಸಿತ ಕಾಣುವ ಮೂಲಕ ಗ್ರಾಹಕರ ಮುಖದಲ್ಲಿ ಮಂದಹಾಸ ಮೂಡಿಸಿದೆ.
ಬೆಲೆ ಇಳಿಕೆಗೆ ಕಾರಣಗಳೇನು?
ಜಾಗತಿಕ ಮಾರುಕಟ್ಟೆಯಲ್ಲಿನ ಏರುಪೇರುಗಳು ಚಿನ್ನದ ಬೆಲೆಯ ಮೇಲೆ ನೇರ ಪರಿಣಾಮ ಬೀರಿವೆ. ಅಮೆರಿಕ ಮತ್ತು ಇರಾನ್ ನಡುವಿನ ಯುದ್ಧದ ಭೀತಿ, ಕಚ್ಚಾ ತೈಲ ಬೆಲೆಯಲ್ಲಿನ ಏರಿಕೆ ಹಾಗೂ ಹಣದುಬ್ಬರದ ಅಪಾಯಗಳ ನಡುವೆಯೂ ಹೂಡಿಕೆದಾರರು ಹೆಚ್ಚಿನ ಬಡ್ಡಿದರ ಸಿಗುವ ಸುರಕ್ಷಿತ ಕಡೆಗಳಲ್ಲಿ ಹೂಡಿಕೆ ಮಾಡುತ್ತಿದ್ದಾರೆ. ಈ ಕಾರಣದಿಂದಾಗಿ ಚಿನ್ನದ ಮೇಲಿನ ಬೇಡಿಕೆ ಕುಸಿದು ಬೆಲೆಯಲ್ಲಿ ಇಳಿಕೆಯಾಗಿದೆ ಎಂದು ವರದಿಯಾಗಿದೆ.
ಇಂದಿನ ಚಿನ್ನದ ಬೆಲೆ ವಿವರ (ಜೂನ್ 8):
24 ಕ್ಯಾರೆಟ್ ಚಿನ್ನ (ಅಪರಂಜಿ): ಇಂದು 10 ಗ್ರಾಂ ಚಿನ್ನದ ಬೆಲೆಯಲ್ಲಿ 1,040 ರೂಪಾಯಿ ಭಾರಿ ಇಳಿಕೆಯಾಗಿದೆ. ಇದರಿಂದಾಗಿ ಒಂದು ಗ್ರಾಂ 24 ಕ್ಯಾರೆಟ್ ಚಿನ್ನದ ಬೆಲೆ 15,169 ರೂಪಾಯಿಗೆ ತಲುಪಿದೆ.
22 ಕ್ಯಾರೆಟ್ ಚಿನ್ನ (ಆಭರಣ ಚಿನ್ನ): ಇಂದು 10 ಗ್ರಾಂ ಚಿನ್ನದ ಬೆಲೆಯಲ್ಲಿ 950 ರೂಪಾಯಿ ಕುಸಿತ ಕಂಡಿದೆ. ಇದರೊಂದಿಗೆ ಒಂದು ಗ್ರಾಂ 22 ಕ್ಯಾರೆಟ್ ಚಿನ್ನದ ಬೆಲೆ 13,905 ರೂಪಾಯಿಯಾಗಿದೆ.
ಕಳೆದ 10 ದಿನಗಳ ಟ್ರೆಂಡ್:
ಕಳೆದ ಹತ್ತು ದಿನಗಳಿಂದ ಚಿನ್ನದ ಬೆಲೆ ನಿರಂತರವಾಗಿ ಇಳಿಯುತ್ತಲೇ ಸಾಗಿದೆ. ಕಳೆದ 10 ದಿನಗಳಲ್ಲಿ 24 ಕ್ಯಾರೆಟ್ 10 ಗ್ರಾಂ ಚಿನ್ನದ ಮೇಲೆ ಬರೋಬ್ಬರಿ 5,350 ರೂಪಾಯಿ ಹಾಗೂ 22 ಕ್ಯಾರೆಟ್ ಚಿನ್ನದ ಮೇಲೆ 4,900 ರೂಪಾಯಿ ಇಳಿಕೆಯಾಗಿರುವುದು ಮಧ್ಯಮ ವರ್ಗದ ಜನರಿಗೆ ನಿಟ್ಟುಸಿರು ಬಿಡುವಂತೆ ಮಾಡಿದೆ.
ಚಿನ್ನ-ಬೆಳ್ಳಿ ದರ
Gold Rate Today -ಕದನ ವಿರಾಮದ ಬೆನ್ನಲ್ಲೇ ಭಾರಿ ಏರಿಕೆ ಕಂಡ ಚಿನ್ನ ಮತ್ತು ಬೆಳ್ಳಿ ದರ..! ಒಂದೇ ದಿನ ಕೆ.ಜಿ ಬೆಳ್ಳಿಗೆ ₹11,000 ಹೆಚ್ಚಳ..!
ಜಾಗತಿಕ ಮಾರುಕಟ್ಟೆಯಲ್ಲಿ ಎರಡು ವಾರಗಳ ಕದನ ವಿರಾಮ ಘೋಷಣೆಯಾದ ಬೆನ್ನಲ್ಲೇ, ದೇಶೀಯ ಮಾರುಕಟ್ಟೆಯಲ್ಲಿ ಚಿನ್ನ ಮತ್ತು ಬೆಳ್ಳಿಯ ದರಗಳು ಭಾರಿ ಏರಿಕೆ ಕಂಡಿವೆ. ಅಖಿಲ ಭಾರತ ಸರಾಫ್ ಅಸೋಸಿಯೇಷನ್ ನೀಡಿರುವ ಮಾಹಿತಿಯಂತೆ, ಬುಧವಾರ ಚಿನಿವಾರ ಪೇಟೆಯಲ್ಲಿ ಈ ಬೆಲೆಬಾಳುವ ಲೋಹಗಳ ಬೆಲೆ ಹೊಸ ದಾಖಲೆ ಬರೆದಿದೆ.
ನವದೆಹಲಿ: ಜಾಗತಿಕ ಮಾರುಕಟ್ಟೆಯಲ್ಲಿ ಎರಡು ವಾರಗಳ ಕದನ ವಿರಾಮ ಘೋಷಣೆಯಾದ ಬೆನ್ನಲ್ಲೇ, ದೇಶೀಯ ಮಾರುಕಟ್ಟೆಯಲ್ಲಿ ಚಿನ್ನ ಮತ್ತು ಬೆಳ್ಳಿಯ ದರಗಳು ಭಾರಿ ಏರಿಕೆ ಕಂಡಿವೆ. ಅಖಿಲ ಭಾರತ ಸರಾಫ್ ಅಸೋಸಿಯೇಷನ್ ನೀಡಿರುವ ಮಾಹಿತಿಯಂತೆ, ಬುಧವಾರ ಚಿನಿವಾರ ಪೇಟೆಯಲ್ಲಿ ಈ ಬೆಲೆಬಾಳುವ ಲೋಹಗಳ ಬೆಲೆ ಹೊಸ ದಾಖಲೆ ಬರೆದಿದೆ.
ಬೆಳ್ಳಿಯ ದರದಲ್ಲಿ ಭಾರಿ ಜಿಗಿತ:
ಬೆಳ್ಳಿಯ ದರವು ಪ್ರತಿ ಕೆ.ಜಿಗೆ ಬರೋಬ್ಬರಿ ₹11,000 ರಷ್ಟು ಏರಿಕೆಯಾಗಿದೆ. ಇದರಿಂದಾಗಿ ದೇಶದಲ್ಲಿ ಬೆಳ್ಳಿಯ ಬೆಲೆ ಈಗ ₹2.51 ಲಕ್ಷದ ಗಡಿ ತಲುಪಿದೆ.
ಚಿನ್ನದ ಬೆಲೆ ಎಷ್ಟು ಹೆಚ್ಚಳ?:
ಚಿನ್ನದ ದರದಲ್ಲೂ ದೊಡ್ಡ ಮಟ್ಟದ ಏರಿಕೆ ಕಂಡುಬಂದಿದ್ದು, 10 ಗ್ರಾಂ (ಶೇ 99.9ರಷ್ಟು ಪರಿಶುದ್ಧತೆ) ಚಿನ್ನದ ಬೆಲೆಯಲ್ಲಿ ₹3,200 ಹೆಚ್ಚಳವಾಗಿದೆ. ಇದರೊಂದಿಗೆ 10 ಗ್ರಾಂ ಚಿನ್ನದ ಮಾರುಕಟ್ಟೆ ದರವು ₹1,56,400ಕ್ಕೆ ತಲುಪಿದೆ.
ಜಾಗತಿಕ ಮಾರುಕಟ್ಟೆಯಲ್ಲಿನ ಹಠಾತ್ ಬೆಳವಣಿಗೆಗಳು ಮತ್ತು ಹೂಡಿಕೆದಾರರ ಒಲವು ದೇಶದ ಮಾರುಕಟ್ಟೆಯ ಮೇಲೆ ನೇರ ಪರಿಣಾಮ ಬೀರಿದ್ದು, ಆಭರಣ ಖರೀದಿದಾರರಿಗೆ ಬೆಲೆ ಏರಿಕೆಯ ಬಿಸಿ ತಟ್ಟಿದೆ.
-
ದಕ್ಷಿಣ ಕನ್ನಡ23 hours ago
ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಪ್ರಯಾಣಿಸುತ್ತಿದ್ದ ಕಾರು ಅಪಘಾತ
-
ಅಪರಾಧ22 hours agoSomasekhar-ನಕಲಿ ದಾಖಲೆ ಸೃಷ್ಟಿಸಿ ಕೈದಿಯ ಬಿಡುಗಡೆ..! ಪ್ರತಿಯಾಗಿ ಆತನ ಪತ್ನಿಯನ್ನು ಲೈಂಗಿಕವಾಗಿ ಬಳಸಿಕೊಳ್ಳುವ ಒಪ್ಪಂದ ಮಾಡಿಕೊಂಡಿದ್ದ ಡಿಐಜಿ ಎಂ. ಸೋಮಶೇಖರ್
-
ನಿಧನ ವಾರ್ತೆ22 hours agoPuttur-ಪುತ್ತೂರು: ಅಪರಿಚಿತ ವಾಹನ ಡಿಕ್ಕಿ: ಚಿಕಿತ್ಸೆ ಪಡೆಯುತ್ತಿದ್ದ ಸ್ಕೂಟರ್ ಸವಾರ ಮೃತ್ಯು
-
ಬಿಗ್ ನ್ಯೂಸ್17 hours agoಡಿಕೆಶಿ ಸರ್ಕಾರದಿಂದ ಜನತೆಗೆ ಬಿಗ್ ಶಾಕ್ – ರೈತರಿಗೆ ಬಂಪರ್ ಗಿಫ್ಟ್..! ಹಾಲಿನ ದರ 8 ರೂ. ಏರಿಕೆ : 6 ರೂ. ರೈತರಿಗೆ..! ನ.1 ರಿಂದ ಬಹುತೇಕ ಜಾರಿ
-
ಶಿಕ್ಷಣ20 hours agoPhilomena-ಸಂತ ಫಿಲೋಮಿನಾ ಕಾಲೇಜು : 35 ವರ್ಷಗಳ ಬಳಿಕ ಮತ್ತೆ ಒಂದಾದ 1991ರ ಬಿ.ಎಸ್ಸಿ. ಬ್ಯಾಚ್; ನೆನಪು, ನಂಟು ಮತ್ತು ಗುರು-ಗೌರವದ ಭಾವಪೂರ್ಣ ಸಂಗಮ
-
ನಿಧನ ವಾರ್ತೆ22 hours agoDead body-ಹುಲಿವೇಷ ತರಬೇತಿಗೆಂದು ಮಂಗಳೂರಿಗೆ ಬಂದಿದ್ದ ಬೆಳ್ತಂಗಡಿ ಬಾಲಕ ಸಮುದ್ರ ಪಾಲು; ಮೃತದೇಹ ಪತ್ತೆ
-
ನಿಧನ ವಾರ್ತೆ21 hours agoKerala-ಕೇರಳ: ಸಿಡಿಲು ಬಡಿದು ಖ್ಯಾತ ‘ಪಲ್ಲಟ್ಟು ಬ್ರಹ್ಮದತ್ತನ್’ ಆನೆ ದಾರುಣ ಸಾವು
-
ಬಿಗ್ ನ್ಯೂಸ್22 hours agoPuttur-ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನ: ‘ಭಕ್ತರನ್ನು ಕಡೆಗಣಿಸಿ ಜೀರ್ಣೋದ್ಧಾರ ಸಮಿತಿ ರಚನೆ’ – ವಿಹಿಂಪ ಆಕ್ಷೇಪ


















