ನಿಧನ ವಾರ್ತೆ
Kambala: ಕಂಬಳ ಕ್ಷೇತ್ರದ ಸಾಧಕ, ನೂರಾರು ಮೆಡಲ್ʼಗಳನ್ನು ಗೆದ್ದ ಕೋಣಗಳ ಮಾಲಕ ಇರುವೈಲ್ ಪಾಣಿಲ ಬಾಡ ಪೂಜಾರಿ ಅಸ್ತಂಗತ
ಉಡುಪಿ Udupi ಅ 11: ಕಂಬಳದ (kambala) ಕೆಸರು ಗದ್ದೆಯಲ್ಲಿ ನೂರಾರು ಪದಕಗಳನ್ನು ಗೆದ್ದ ಕೋಣಗಳ ಯಜಮಾನ, ಕಂಬಳ ಕ್ಷೇತ್ರದ ದಿಗ್ಗಜ , ಇರುವೈಲ್ ಪಾಣಿಲ ಬಾಡ ಪೂಜಾರಿ (82) (Bada poojary) ಯವರು ಇಂದು ಬೆಳಿಗ್ಗೆನಿಧನ ಹೊಂದಿದ್ದಾರೆ. ದಕ್ಷಿಣ ಕನ್ನಡ, ಉಡುಪಿ, ಕಾಸರಗೋಡು ಜಿಲ್ಲೆಯಲ್ಲಿ ವ್ಯಾಪಿಸಿರುವ ಕಂಬಳ ಕ್ಷೇತ್ರದಲ್ಲಿ ಪಾನಿಲ ಬಾಡ ಪೂಜಾರಿಯವರದು ಖ್ಯಾತ ಹೆಸರು. ವಯೋ ಸಹಜ ಅನಾರೋಗ್ಯಕ್ಕೆ ತುತ್ತಾಗಿದ್ದ ಅವರು ಮಂಗಳವಾರ ಬೆಳಿಗ್ಗೆ ಅಸ್ತಂಗತರಾಗಿದ್ದರೆ.
ಕಂಬಳ ಕ್ಷೇತ್ರಕ್ಕೆ ಇವರು ನೀಡಿದ ಕೊಡುಗೆ ಅವಿಸ್ಮರಣೀಯ. ಕಳೆದೆರಡು ದಶಕಗಳಿಂದ ತುಳುನಾಡಿನಲ್ಲಿ ನಡೆಯುತ್ತಿದ್ದ ಎಲ್ಲ ಪ್ರತಿಷ್ಟಿತ ಕಂಬಳ ಕೂಟಗಳಲ್ಲಿ ಬಾಡ ಪೂಜಾರಿಯವರ ಕೋಣಗಳು ಭಾಗವಹಿಸುತ್ತಿದ್ದವು. ಅಲ್ಲದೇ ಈ ಕಂಬಳ ಕೂಟಗಳಲ್ಲಿ ಇವರ ಕೋಣಗಳು ಪಾರಮ್ಯ ಮೆರೆಯುತ್ತಿದ್ದವು. ನೂರಾರು ಮೆಡಲ್ ಗಳನ್ನು ಇವರ ಕೋಣಗಳು ಬಾಚಿವೆ. ಇವರ ಕೋಣಗಳು ನೇಗಿಲು ಕಿರಿಯ ಮತ್ತು ಹಿರಿಯ ವಿಭಾಗದಲ್ಲಿ ದಾಖಲೆಯ ಸಂಖ್ಯೆಯಲ್ಲಿ ಕಂಬಳದ ಮೆಡಲ್ ಗಳನ್ನು ಪಡೆದಿದೆ.
ಕಂಬಳ ಕೂಟದ ಹೆಸರಾಂತ ಓಟಗಾರರು ಇವರ ಕೋಣಗಳನ್ನು ಓಡಿಸುವ ಮೂಲಕ ಖ್ಯಾತಿಯನ್ನು ಸಂಪಾದಿಸಿದ್ದಾರೆ. ಉಸೇನ್ ಬೋಲ್ಟ್ ಎಂದೇ ಕಂಬಳ ಕ್ಷೇತ್ರದಲ್ಲಿ ಪ್ರಸಿದ್ದಿ ಪಡೆದಿರುವ ಕಂಬಳ ಜಾಕಿ ಶ್ರೀನಿವಾಸ ಗೌಡ, ಕ್ರೀಡಾರತ್ನ ಪ್ರಶಸ್ತಿ ಪುರಸ್ಕೃತ ಇರ್ವತ್ತೂರು ಆನಂದ ರವರ ಸಾಧನೆಯ ಹಿಂದಿನ ಶಕ್ತಿ ಬಾಡ ಪೂಜಾರಿಯವರದು. ಇವರ ಕೋಣಗಳನ್ನು ಓಡಿಸುವ ಮೂಲಕ ಇವರು ಖ್ಯಾತಿಯ ಉತ್ತುಂಗಕ್ಕೆರಿದವರು. ಪ್ರತಿಭೆಗಳನ್ನು ಗುರುತಿಸಿ ಅವರನ್ನು ಬಳಸಿಕೊಳ್ಳುವಲ್ಲಿ ಬಾಡ ಪೂಜಾರಿಯವರದು ಎತ್ತಿದ್ದ ಕೈ.
SSC CGL Recruitment 2022 : 2000 ಗ್ರೂಪ್ ಬಿ ಮತ್ತು ಗ್ರೂಪ್ ಸಿ ಹುದ್ದೆಗಳ ಅರ್ಜಿ ಸಲ್ಲಿಕೆಗೆ ಅ.13 ಕೊನೆ ದಿನ
ಬಾಡ ಪೂಜಾರಿಯವರು ಸಾಕಿ ಸಲಹಲ್ಪಟ್ಟ ತಾಟೆ ಮತ್ತು ಬೊಟ್ಟಿಯಾರ್ ಎಂಬ ಕೋಣಗಳು ಕಂಬಳ ಕ್ಷೇತ್ರದಲ್ಲಿ ತನ್ನದೇ ಆದ ಛಾಪು ಮೂಡಿಸಿದ ಜೋಡಿಗಳು. ಈ ಕೋಣಗಳು ಅಪಾರ ಸಂಖ್ಯೆಯ ಅಭಿಮಾನಿಗಳನ್ನು ಪಡೆದುಕೊಂಡಿವೆ. ಇದೀಗ ಇವೆರೆಡು ದಣಿಯನ್ನು ಕಳಕೊಂಡು ಶೋಕ ಸಾಗರದಲ್ಲಿ ಮುಳುಗಿದೆ.
ನಿಧನ ವಾರ್ತೆ
Uppinangadi-ಉಪ್ಪಿನಂಗಡಿ: ಸೇತುವೆ ಮೇಲೆ ಬೈಕ್, ಮೊಬೈಲ್ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ನದಿಯಲ್ಲಿ ಶವವಾಗಿ ಪತ್ತೆ
ಕುಮಾರಧಾರ ಹಳೆ ಸೇತುವೆ ಮೇಲೆ ಬೈಕ್ ಹಾಗೂ ಮೊಬೈಲ್ ಇಟ್ಟು ನಾಪತ್ತೆಯಾಗಿದ್ದ ಹಿರೇಬಂಡಾಡಿ ಗ್ರಾಮದ ಪೆರಾಬೆ ನಿವಾಸಿ ಮಾಧವ ಗೌಡ (44) ಅವರ ಮೃತದೇಹ ನೇತ್ರಾವತಿ ನದಿಯಲ್ಲಿ ಪತ್ತೆಯಾಗಿದೆ. ಅವರು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ತಿಳಿದುಬಂದಿದೆ.
ಉಪ್ಪಿನಂಗಡಿ: ಕುಮಾರಧಾರ ಹಳೆ ಸೇತುವೆ ಮೇಲೆ ಬೈಕ್ ಹಾಗೂ ಮೊಬೈಲ್ ಇಟ್ಟು ನಾಪತ್ತೆಯಾಗಿದ್ದ ಹಿರೇಬಂಡಾಡಿ ಗ್ರಾಮದ ಪೆರಾಬೆ ನಿವಾಸಿ ಮಾಧವ ಗೌಡ (44) ಅವರ ಮೃತದೇಹ ನೇತ್ರಾವತಿ ನದಿಯಲ್ಲಿ ಪತ್ತೆಯಾಗಿದೆ. ಅವರು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ತಿಳಿದುಬಂದಿದೆ.
ಆತೂರಿನಲ್ಲಿ ಇತ್ತೀಚೆಗಷ್ಟೇ ಟಯರ್ ಪಂಕ್ಚರ್ ಅಂಗಡಿ ಆರಂಭಿಸಿದ್ದ ಮಾಧವ ಗೌಡ ಅವರು ಅ.2ರಂದು ಮನೆಯಿಂದ ಅಂಗಡಿಗೆ ತೆರಳಿದ್ದರು. ಆದರೆ ಬಳಿಕ ಮನೆಗೆ ವಾಪಸ್ ಆಗದೆ ನಾಪತ್ತೆಯಾಗಿದ್ದರು. ಈ ಹಿನ್ನೆಲೆಯಲ್ಲಿ ಕುಟುಂಬಸ್ಥರು ಹಾಗೂ ಸ್ಥಳೀಯರು ಹುಡುಕಾಟ ನಡೆಸಿದಾಗ, ಅವರ ಬೈಕ್ ಮತ್ತು ಮೊಬೈಲ್ ಉಪ್ಪಿನಂಗಡಿಯ ಕುಮಾರಧಾರ ನದಿಯ ಹಳೆ ಸೇತುವೆ ಮೇಲೆ ಪತ್ತೆಯಾಗಿತ್ತು.
ಅವರು ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರಬಹುದೆಂಬ ಶಂಕೆ ವ್ಯಕ್ತವಾಗಿತ್ತು. ಈ ಹಿನ್ನೆಲೆಯಲ್ಲಿ ಅ.4ರಂದು ಪುತ್ತೂರು ಅಗ್ನಿಶಾಮಕ ದಳದ ಸಿಬ್ಬಂದಿ ಹಾಗೂ ಮುಳುಗು ತಜ್ಞರು ದೋಣಿಯ ಮೂಲಕ ನದಿಯಲ್ಲಿ ಹುಡುಕಾಟ ನಡೆಸಿದ್ದರು. ಮಧ್ಯಾಹ್ನದಿಂದ ಸಂಜೆಯವರೆಗೆ ಶೋಧ ಕಾರ್ಯ ನಡೆಸಿದರೂ ಯಾವುದೇ ಸುಳಿವು ಪತ್ತೆಯಾಗಿರಲಿಲ್ಲ.
ಇದೀಗ ಎರಡು ದಿನಗಳ ಬಳಿಕ ನೆಕ್ಕಿಲಾಡಿ ಗ್ರಾಮದ ಬೊಳ್ಳಾರ್ ಸಮೀಪ ನೇತ್ರಾವತಿ ನದಿಯಲ್ಲಿ ಮಾಧವ ಗೌಡ ಅವರ ಮೃತದೇಹ ಪತ್ತೆಯಾಗಿದೆ. ಅವರ ನಾಪತ್ತೆ ಕುರಿತು ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
ನಿಧನ ವಾರ್ತೆ
Accident-ಹುತಾತ್ಮ ಸೈನಿಕನ ಮೃತದೇಹ ಕೊಂಡೊಯ್ಯುತ್ತಿದ್ದ ಆಂಬ್ಯುಲೆನ್ಸ್ ಅಪಘಾತ: ಸೈನಿಕನ ಮಗ, ಸಹೋದರ ಸೇರಿ ನಾಲ್ವರು ಸಾವು
ಇತ್ತೀಚೆಗೆ ನಿಧನರಾಗಿದ್ದ ಸೈನಿಕ ಸುಬೇದಾರ್ ಮೇಜರ್ ಸತ್ಯವಾನ್ ಅವರ ಮೃತದೇಹವನ್ನು ಸ್ವಗ್ರಾಮಕ್ಕೆ ಕೊಂಡೊಯ್ಯುತ್ತಿದ್ದ ಆಂಬ್ಯುಲೆನ್ಸ್ ಭೀಕರ ಅಪಘಾತಕ್ಕೀಡಾಗಿ ನಾಲ್ವರು ಮೃತಪಟ್ಟಿರುವ ದಾರುಣ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಮೃತರಲ್ಲಿ ಸೈನಿಕನ ಮಗ, ಸಹೋದರ, ಸೋದರಳಿಯ ಹಾಗೂ ಆಂಬ್ಯುಲೆನ್ಸ್ ಚಾಲಕ ಸೇರಿದ್ದಾರೆ.
ಸುಲ್ತಾನ್‌ಪುರ (ಉತ್ತರ ಪ್ರದೇಶ): ಇತ್ತೀಚೆಗೆ ನಿಧನರಾಗಿದ್ದ ಸೈನಿಕ ಸುಬೇದಾರ್ ಮೇಜರ್ ಸತ್ಯವಾನ್ ಅವರ ಮೃತದೇಹವನ್ನು ಸ್ವಗ್ರಾಮಕ್ಕೆ ಕೊಂಡೊಯ್ಯುತ್ತಿದ್ದ ಆಂಬ್ಯುಲೆನ್ಸ್ ಭೀಕರ ಅಪಘಾತಕ್ಕೀಡಾಗಿ ನಾಲ್ವರು ಮೃತಪಟ್ಟಿರುವ ದಾರುಣ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಮೃತರಲ್ಲಿ ಸೈನಿಕನ ಮಗ, ಸಹೋದರ, ಸೋದರಳಿಯ ಹಾಗೂ ಆಂಬ್ಯುಲೆನ್ಸ್ ಚಾಲಕ ಸೇರಿದ್ದಾರೆ.
ಅಯೋಧ್ಯೆ-ಸುಲ್ತಾನ್‌ಪುರ ಗಡಿಯಲ್ಲಿರುವ ಹಲಿಯಾಪುರ ಪೊಲೀಸ್ ಠಾಣೆ ವ್ಯಾಪ್ತಿಯ ಪೂರ್ವಾಂಚಲ ಎಕ್ಸ್‌ಪ್ರೆಸ್‌ವೇಯ 79.6ನೇ ಕಿಲೋಮೀಟರ್ ಬಳಿ ಭಾನುವಾರ ಬೆಳಗ್ಗೆ ಈ ಅಪಘಾತ ಸಂಭವಿಸಿದೆ.
ಡಿಯೋರಿಯಾ ಜಿಲ್ಲೆಯ ರುದ್ರಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗಲಿಯಾ ದುದೈಲಾ ಗ್ರಾಮದ ನಿವಾಸಿ ಸುಬೇದಾರ್ ಮೇಜರ್ ಸತ್ಯವಾನ್ ಅವರು ಚಂಡೀಗಢದಲ್ಲಿ ನಿಯೋಜನೆಗೊಂಡಿದ್ದರು. ಇತ್ತೀಚೆಗೆ ಅವರು ಮೃತಪಟ್ಟಿದ್ದು, ಅವರ ಮೃತದೇಹವನ್ನು ಆಂಬ್ಯುಲೆನ್ಸ್ ಮೂಲಕ ಸ್ವಗ್ರಾಮಕ್ಕೆ ಕೊಂಡೊಯ್ಯಲಾಗುತ್ತಿತ್ತು.
ಆಂಬ್ಯುಲೆನ್ಸ್‌ನಲ್ಲಿ ಸತ್ಯವಾನ್ ಅವರ ಮಗ ಗೌರವ್ ಸಿಂಗ್, ಸಹೋದರ ರಾಜನ್ ಚೌಧರಿ, ಸೋದರಳಿಯ ರಾಮ್ ಸಂಜು ಸಿಂಗ್ ಹಾಗೂ ಚಾಲಕ ಜಸ್ಪಾಲ್ ಪ್ರಯಾಣಿಸುತ್ತಿದ್ದರು.
ಪೂರ್ವಾಂಚಲ ಎಕ್ಸ್‌ಪ್ರೆಸ್‌ವೇಯಲ್ಲಿ ತೆರಳುತ್ತಿದ್ದ ಆಂಬ್ಯುಲೆನ್ಸ್‌ಗೆ ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದಿದೆ. ಪರಿಣಾಮ ನಿಯಂತ್ರಣ ತಪ್ಪಿದ ಆಂಬ್ಯುಲೆನ್ಸ್ ರಸ್ತೆ ಬದಿಯಲ್ಲಿ ನಿಲ್ಲಿಸಲಾಗಿದ್ದ ಟ್ರಕ್‌ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಆಂಬ್ಯುಲೆನ್ಸ್ ಸಂಪೂರ್ಣ ನಜ್ಜುಗುಜ್ಜಾಗಿದ್ದು, ಗೌರವ್ ಸಿಂಗ್ ಹಾಗೂ ಚಾಲಕ ಜಸ್ಪಾಲ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ತೀವ್ರವಾಗಿ ಗಾಯಗೊಂಡಿದ್ದ ರಾಜನ್ ಚೌಧರಿ ಹಾಗೂ ರಾಮ್ ಸಂಜು ಸಿಂಗ್ ಅವರನ್ನು ಅಯೋಧ್ಯೆಯ ಕುಮಾರ್‌ಗಂಜ್‌ನ ಸಯಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಬ್ಬರೂ ಮೃತಪಟ್ಟಿದ್ದಾರೆ. ಇದರೊಂದಿಗೆ ಅಪಘಾತದಲ್ಲಿ ಮೃತಪಟ್ಟವರ ಸಂಖ್ಯೆ ನಾಲ್ಕಕ್ಕೆ ಏರಿಕೆಯಾಗಿದೆ.
ಸುಬೇದಾರ್ ಮೇಜರ್ ಸತ್ಯವಾನ್ ಅವರ ಮೃತದೇಹವನ್ನು ಪೊಲೀಸ್ ಠಾಣೆ ಆವರಣದಲ್ಲಿ ಯೋಧರ ಪೂರ್ಣ ಗೌರವದೊಂದಿಗೆ ಇರಿಸಲಾಗಿದ್ದು, ಅಪಘಾತಕ್ಕೆ ಕಾರಣವಾದ ಅಪರಿಚಿತ ವಾಹನದ ಪತ್ತೆಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಘಟನೆಗೆ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸಂತಾಪ ಸೂಚಿಸಿದ್ದು, ಮೃತರ ಕುಟುಂಬಸ್ಥರಿಗೆ ಸಾಂತ್ವನ ತಿಳಿಸಿರುವುದರ ಜೊತೆಗೆ ಅಗತ್ಯ ನೆರವು ಒದಗಿಸುವಂತೆ ಜಿಲ್ಲಾಡಳಿತಕ್ಕೆ ಸೂಚಿಸಿದ್ದಾರೆ.
ನಿಧನ ವಾರ್ತೆ
Lalitamma-ಸುಂಟರಗಾಳಿ’, ‘ಜಂಗ್ಲಿ’ ಖ್ಯಾತಿಯ ಹಿರಿಯ ನಟಿ ಲಲಿತಮ್ಮ ನಿಧನ
ನ್ನಡ ಚಿತ್ರರಂಗ ಹಾಗೂ ಕಿರುತೆರೆಯ ಹಿರಿಯ ನಟಿ ಲಲಿತಮ್ಮ (65) ಅವರು ಭಾನುವಾರ ನಿಧನರಾಗಿದ್ದಾರೆ. ಕಳೆದ ಎರಡೂವರೆ ತಿಂಗಳಿಂದ ಪಾರ್ಶ್ವವಾಯುವಿನಿಂದ ಬಳಲುತ್ತಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ.
ಬೆಂಗಳೂರು, ಅ.4: ಕನ್ನಡ ಚಿತ್ರರಂಗ ಹಾಗೂ ಕಿರುತೆರೆಯ ಹಿರಿಯ ನಟಿ ಲಲಿತಮ್ಮ (65) ಅವರು ಭಾನುವಾರ ನಿಧನರಾಗಿದ್ದಾರೆ. ಕಳೆದ ಎರಡೂವರೆ ತಿಂಗಳಿಂದ ಪಾರ್ಶ್ವವಾಯುವಿನಿಂದ ಬಳಲುತ್ತಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ.
ಹಲವು ದಶಕಗಳಿಂದ ಕನ್ನಡ ಚಿತ್ರರಂಗ, ಕಿರುತೆರೆ ಹಾಗೂ ರಂಗಭೂಮಿಯಲ್ಲಿ ಸಕ್ರಿಯರಾಗಿದ್ದ ಲಲಿತಮ್ಮ ಅವರು ಇತ್ತೀಚಿನ ದಿನಗಳಲ್ಲಿ ಅನಾರೋಗ್ಯದ ಜೊತೆಗೆ ಆರ್ಥಿಕ ಸಂಕಷ್ಟವನ್ನೂ ಎದುರಿಸುತ್ತಿದ್ದರು. ಈ ಹಿನ್ನೆಲೆಯಲ್ಲಿ ‘ಅಮ್ಮನ ಮಡಿಲು ಟ್ರಸ್ಟ್’ ಅವರ ನೆರವಿಗೆ ನಿಂತು ಆಸರೆ ನೀಡಿತ್ತು.
ನಟ ದರ್ಶನ್ ಅಭಿನಯದ ‘ಸುಂಟರಗಾಳಿ’ ಸಿನಿಮಾದಲ್ಲಿ ಖಳನಾಯಕಿ ಪಾತ್ರದಲ್ಲಿ ಕಾಣಿಸಿಕೊಂಡಿದ್ದ ಲಲಿತಮ್ಮ ಅವರು ತಮ್ಮ ನೈಜ ಅಭಿನಯದ ಮೂಲಕ ಪ್ರೇಕ್ಷಕರ ಗಮನ ಸೆಳೆದಿದ್ದರು. ಈ ಸಿನಿಮಾದ ಪಾತ್ರ ಅವರಿಗೆ ಕನ್ನಡ ಚಿತ್ರರಂಗದಲ್ಲಿ ಅಪಾರ ಜನಪ್ರಿಯತೆ ತಂದುಕೊಟ್ಟಿತ್ತು.
ಬಳಿಕ ‘ಜಂಗ್ಲಿ’, ‘ಲೈಫ್ ಇಷ್ಟೇನೆ’ ಸೇರಿದಂತೆ ಹಲವು ಸಿನಿಮಾಗಳಲ್ಲಿ ಅಭಿನಯಿಸಿದ್ದ ಅವರು, ತಮ್ಮ ವಿಭಿನ್ನ ನಟನಾ ಶೈಲಿಯಿಂದ ಗುರುತಿಸಿಕೊಂಡಿದ್ದರು. ಸಿನಿಮಾ ಮಾತ್ರವಲ್ಲದೆ ‘ರಂಗೋಲಿ’ ಸೇರಿದಂತೆ ಹಲವು ಜನಪ್ರಿಯ ಧಾರಾವಾಹಿಗಳು ಹಾಗೂ ನಾಟಕಗಳಲ್ಲಿಯೂ ಅಭಿನಯಿಸಿ ಮೆಚ್ಚುಗೆ ಗಳಿಸಿದ್ದರು.
-
ಬಿಗ್ ನ್ಯೂಸ್12 hours agoBantwal-Big Breaking-ದ.ಕ. ಜಿಲ್ಲೆಯಲ್ಲಿ ಗುಡುಗು-ಮಿಂಚಿನ ಮಳೆ: ಸಿಡಿಲು ಬಡಿದು ಮನೆ ಜಖಂ-ಮಹಿಳೆ ಅಸ್ವಸ್ಥ
-
ನಿಧನ ವಾರ್ತೆ7 hours agoUppinangadi-ಉಪ್ಪಿನಂಗಡಿ: ಸೇತುವೆ ಮೇಲೆ ಬೈಕ್, ಮೊಬೈಲ್ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ನದಿಯಲ್ಲಿ ಶವವಾಗಿ ಪತ್ತೆ
-
ಅಪರಾಧ13 hours agoPuttur-ಪುತ್ತೂರು: ಹಿಂಸಾತ್ಮಕ ರೀತಿಯಲ್ಲಿ 11 ಗೋವುಗಳ ಸಾಗಾಟ; ವಾಹನ ಪತ್ತೆ, ಇಬ್ಬರು ಪರಾರಿ
-
ಅಂತರ ರಾಜ್ಯ11 hours agoMurder-ಆಸ್ತಿಗಾಗಿ ಬೆಲ್ಟ್ನಿಂದ ಕುತ್ತಿಗೆ ಬಿಗಿದು ಪತಿಯ ಕೊಲೆ: ಆಕಸ್ಮಿಕ ಸಾವೆಂದು ನಂಬಿಸಿದ್ದ ಪತ್ನಿ ಅರೆಸ್ಟ್
-
ಸ್ಥಳೀಯ12 hours agoCrop insurance-ಬೆಳೆ ವಿಮೆಯಲ್ಲಿ ಭಾರೀ ಇಳಿಕೆ – ದ.ಕ. ಜಿಲ್ಲೆಯ ಅಡಿಕೆ, ಕಾಳುಮೆಣಸು ಬೆಳೆಗಾರರು ಶಾಕ್..!; ಬೇಗನೆ ಜಮೆಯಾದರೂ ಪರಿಹಾರ ಮೊತ್ತದಲ್ಲಿ ಭಾರೀ ಇಳಿಕೆ; ಲೆಕ್ಕಾಚಾರ ಬಹಿರಂಗಕ್ಕೆ ಆಗ್ರಹ
-
ನಿಧನ ವಾರ್ತೆ10 hours agoAccident-ಹುತಾತ್ಮ ಸೈನಿಕನ ಮೃತದೇಹ ಕೊಂಡೊಯ್ಯುತ್ತಿದ್ದ ಆಂಬ್ಯುಲೆನ್ಸ್ ಅಪಘಾತ: ಸೈನಿಕನ ಮಗ, ಸಹೋದರ ಸೇರಿ ನಾಲ್ವರು ಸಾವು
-
ನಿಧನ ವಾರ್ತೆ12 hours agoLalitamma-ಸುಂಟರಗಾಳಿ’, ‘ಜಂಗ್ಲಿ’ ಖ್ಯಾತಿಯ ಹಿರಿಯ ನಟಿ ಲಲಿತಮ್ಮ ನಿಧನ
-
ರಾಜಕೀಯ6 hours agoPuttur-ಪುತ್ತೂರು: ಅಲ್ಪಸಂಖ್ಯಾತ ಸೇವಾ ಕೇಂದ್ರ ಉದ್ಘಾಟನೆಗೆ ಬಿಜೆಪಿ ಮೋರ್ಚಾದಿಂದ ಆಗ್ರಹ


















