ಶಿಕ್ಷಣ
Scholarship : ವಿದ್ಯಾಸಿರಿ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಅಹ್ವಾನ – ಯಾರೆಲ್ಲ ಅರ್ಜಿ ಸಲ್ಲಿಸಬಹುದು? ನಿಯಮಗಳೇನು?
ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳಿಗೆ ಸರ್ಕಾರ ಸಿಹಿ ಸುದ್ದಿಯೊಂದನ್ನ ನೀಡಿದೆ. 2022-23 ನೇ ಸಾಲಿನ ವಿದ್ಯಾಸಿರಿ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನಿಸಲಾಗಿದ್ದು, ಪಿಯುಸಿ ಹಾಗೂ ಪದವಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ
ಅಲ್ಪಸಂಖ್ಯಾತರ ಸಮುದಾಯದ ವಿದ್ಯಾರ್ಥಿಗಳು (ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್ ಮತ್ತು ಪಾರ್ಸಿ) ವಿದ್ಯಾಸಿರಿ ಯೋಜನೆಯಡಿ ಅರ್ಜಿ ಸಲ್ಲಿಸಬಹುದು.
ಅಕ್ಟೋಬರ್ 20 ಅರ್ಜಿ ಸಲ್ಲಿಸಲು ಕೊನೆದಿನವಾಗಿದೆ. https://sevasindhu.karnataka.gov.in ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ನಿಯಮಗಳು :
ವಿದ್ಯಾರ್ಥಿಯು ಕರ್ನಾಟಕ ರಾಜ್ಯ ನಿವಾಸಿಯಾಗಿರಬೇಕು. ವಿದ್ಯಾರ್ಥಿಯು ಕುಟುಂಬದ ವಾರ್ಷಿಕ ವರಮಾನ ರೂ.2 ಲಕ್ಷಗಳ ಮಿತಿಯಲ್ಲಿರಬೇಕು. ಪ್ರವರ್ಗ-1ರಲ್ಲಿ ಬರುವ ಅಲ್ಪಸಂಖ್ಯಾತರ ಸಮುದಾಯದ ವಿದ್ಯಾರ್ಥಿಗಳ ವಾರ್ಷಿಕ ವರಮಾನ ರೂ. 2.50 ಲಕ್ಷಗಳ ಮಿತಿಯಲ್ಲಿರಬೇಕು.
ವಿದ್ಯಾರ್ಥಿಗಳು ಗ್ರಾಮೀಣ ಪ್ರದೇಶದವರಾಗಿದ್ದು, ಅವರು ಓದುತ್ತಿರುವ ಕಾಲೇಜು ಕನಿಷ್ಠ 5 ಕಿ.ಮೀ ಗಳ ದೂರ ಇರಬೇಕು. ಆದರೆ ವಿದ್ಯಾರ್ಥಿಯ ಸ್ವಂತ ಸ್ಥಳ, ನಗರ ಪಟ್ಟಣ ಆಗಿದ್ದು, ಅವರು ಬೇರೆ ನಗರ, ಪಟ್ಟಣದಲ್ಲಿರುವ ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿದ್ದಲ್ಲಿ ಅಂತಹವರು ಈ ಸೌಲಭ್ಯಕ್ಕೆ ಅರ್ಹರಿರುತ್ತಾರೆ. (ಒಂದೇ ನಗರದ ವ್ಯಾಪ್ತಿಯಲ್ಲಿರುವವರು ಅರ್ಹರಿರುವುದಿಲ್ಲ)
ಪ್ರಸಕ್ತ ಸಾಲಿನಲ್ಲಿ ಅಲ್ಪಸಂಖ್ಯಾತರ ವಿದ್ಯಾರ್ಥಿನಿಲಯದಲ್ಲಿ ಪ್ರವೇಶಕ್ಕಾಗಿ ಅರ್ಜಿಗಳನ್ನು ಸಲ್ಲಿಸಿ, ಸ್ಥಳಾವಕಾಶವಿಲ್ಲದೇ ಇರುವ ಅರ್ಜಿಗಳಿಗೆ ಮಾತ್ರ ವಿದ್ಯಾಸಿರಿ ಯೋಜನೆಯಡಿ ಸಹಾಯಧನ ಮಂಜೂರು ಮಾಡಲಾಗುವುದು. ಸ್ವೀಕೃತವಾದ ಅರ್ಹ ಅರ್ಜಿಗಳನ್ನು ಹಿಂದಿನ ವರ್ಷದ ವಾರ್ಷಿಕ, ಸೆಮಿಸ್ಟರ್ ತರಗತಿಯಲ್ಲಿ ಹೆಚ್ಚು ಅಂಕಗಳನ್ನು ಪಡೆದ ವಿದ್ಯಾರ್ಥಿಗಳಿಗೆ ಇಳಿಕೆ ಕ್ರಮಾನುಸಾರ ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿರುವ ಕೋರ್ಸುಗಳ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ.
ಮೆಟ್ರಿಕ್ ನಂತರದ ಕೋರ್ಸ್‌ಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಮುಂದುವರೆಸಲು, ಊಟ ಮತ್ತು ವಸತಿ ಸೌಲಭ್ಯಕ್ಕೆ ಸಹಾಯವನ್ನು ಒದಗಿಸಲು ಯೋಜನೆ ತರಲಾಗಿದೆ. ಯೋಜನೆಗೆ ಆಯ್ಕೆಯಾದ ವಿದ್ಯಾರ್ಥಿಗಳಿಗೆ ಪ್ರತಿ ತಿಂಗಳು ರೂ.1,500 ರಂತೆ ಶೈಕ್ಷಣಿಕ ಅವಧಿಯ 10 ತಿಂಗಳಿಗೆ( ಅನುದಾನ ಲಭ್ಯತೆಯನುಸಾರ) ಒಟ್ಟು ರೂ. 15,000 ಗಳನ್ನು ಸಂಬಂಧಪಟ್ಟ ವಿದ್ಯಾರ್ಥಿಗಳು ಬ್ಯಾಂಕ್ ಖಾತೆಗೆ ಆನ್‌ಲೈನ್ ಮುಖಾಂತರ ಜಮಾ ಮಾಡಲಾಗುವುದು.
Bigg Boss Kannada : ಸ್ವಿಮ್ ಸೂಟ್ ಧರಿಸಿ ಮಿಂಚಿದ ಅನುಪಮಾ ಗೌಡ – ಹಾಟ್ ಲುಕ್ ಗೆ ಅಭಿಮಾನಿಗಳು ಫಿದಾ
ಸೇವಾಸಿಂಧು ಪೋರ್ಟಲ್ ಮುಖಾಂತರ ಅರ್ಜಿ ಸಲ್ಲಿಸಿ, ಮೂಲಪ್ರತಿಯನ್ನು ಅಗತ್ಯ ದಾಖಲಾತಿಗಳೊಂದಿಗೆ,ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಜಿಲ್ಲಾ ಅಧಿಕಾರಿಗಳು ಹಾಗೂ ಜಿಲ್ಲೆಯ ಎಲ್ಲಾ ತಾಲ್ಲೂಕು ಅಲ್ಪಸಂಖ್ಯಾತರ ಮಾಹಿತಿ ಕೇಂದ್ರಗಳಿಗೆ ಅಗತ್ಯ ದಾಖಲಾತಿಗಳೊಂದಿಗೆ ಸಂಬಂಧಪಟ್ಟ ಪ್ರಾಂಶುಪಾಲರಿಂದ ದೃಢೀಕರಿಸಿ ಸಲ್ಲಿಸಬಹುದಾಗಿದೆ.
ಅರ್ಜಿ ಸಲ್ಲಿಸಲು ಬೇಕಾದ ದಾಖಲೆಗಳು
ಎಸ್‌ಎಸ್‌ಎಲ್‌ಸಿ ಅಂಕಪಟ್ಟಿ.
ಪಿಯುಸಿ / ಪದವಿ ಸೆಮಿಸ್ಟರ್ ಅಂಕಪಟ್ಟಿ.
ಆಧಾರ್ ಕಾರ್ಡ್.
ಬ್ಯಾಂಕ್ ಪಾಸ್ ಬುಕ್ ಪ್ರತಿ.
ಜಾತಿ ಪ್ರಮಾಣ ಪತ್ರ.
ಆದಾಯ ಪ್ರಮಾಣ ಪತ್ರ.
ಪಾಸ್ ಪೋರ್ಟ್ ಅಳತೆಯ ಭಾವಚಿತ್ರ.
ಶಾಲಾ ಶುಲ್ಕದ ರಶೀದಿ.
ನಿವಾಸಿ ದೃಢೀಕರಣ ಪತ್ರ.
Fish | ಮಂಗಳೂರು : ಬೃಹತ್ ಮತ್ಸ್ಯ ಸಮೂಹ ಬೇಟೆ – ಮೀನುಗಾರನಿಗೆ ಒಲಿದ ಅದೃಷ್ಟ
ಶಿಕ್ಷಣ
Vivekananda-ಜಿಲ್ಲಾ ಮಟ್ಟದ ಅಥ್ಲೆಟಿಕ್ಸ್ ಕ್ರೀಡಾಕೂಟ- ವಿವೇಕಾನಂದ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ರಾಜ್ಯ ಮಟ್ಟಕ್ಕೆ ಆಯ್ಕೆ
ಆಳ್ವಾಸ್ ಪದವಿಪೂರ್ವ ಕಾಲೇಜು, ಮೂಡಬಿದಿರೆ ಇಲ್ಲಿ ನಡೆದ ಶಾಲಾ ಶಿಕ್ಷಣ ಇಲಾಖೆ, ಪದವಿಪೂರ್ವ ವಿಭಾಗದ ಜಿಲ್ಲಾಮಟ್ಟದ ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಭಾಗವಹಿಸಿದ್ದು 4×100 ಮೀಟರ್ ರಿಲೇ ಓಟದಲ್ಲಿ ಬಾಲಕಿಯರ ತಂಡ ತೃತೀಯ ಸ್ಥಾನ ಪಡೆದಿದ್ದಾರೆ.
ಆಳ್ವಾಸ್ ಪದವಿಪೂರ್ವ ಕಾಲೇಜು, ಮೂಡಬಿದಿರೆ ಇಲ್ಲಿ ನಡೆದ ಶಾಲಾ ಶಿಕ್ಷಣ ಇಲಾಖೆ, ಪದವಿಪೂರ್ವ ವಿಭಾಗದ ಜಿಲ್ಲಾಮಟ್ಟದ ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಭಾಗವಹಿಸಿರುತ್ತಾರೆ.
4×100 ಮೀಟರ್ ರಿಲೇ ಓಟದಲ್ಲಿ ಬಾಲಕಿಯರ ತಂಡ ತೃತೀಯ ಸ್ಥಾನ ಪಡೆದಿದ್ದಾರೆ. ತಂಡದಲ್ಲಿ ದ್ವಿತೀಯ ವಿಜ್ಞಾನ ವಿಭಾಗದ ಡಿಂಪಲ್ ಶೆಟ್ಟಿ, ಪ್ರಥಮ ವಿಜ್ಞಾನ ವಿಭಾಗದ ಪ್ರತೀಕ್ಷಾ, ಗುಣಶ್ರೀ, ದಿವಿಜ್ಞಾ ಭಾಗವಹಿಸಿರುತ್ತಾರೆ.
4×400 ಮೀಟರ್ ರಿಲೇ ಓಟದಲ್ಲಿ ಬಾಲಕಿಯರ ತಂಡ ದ್ವಿತೀಯ ಸ್ಥಾನ ಪಡೆದಿದ್ದಾರೆ. ತಂಡದಲ್ಲಿ ದ್ವಿತೀಯ ವಿಜ್ಞಾನ ವಿಭಾಗದ ಡಿಂಪಲ್ ಶೆಟ್ಟಿ, ಸಾನ್ವಿತಾ , ಪ್ರಥಮ ವಿಜ್ಞಾನ ವಿಭಾಗದ ದಿವಿಜ್ಞಾ, ಧನ್ವಿ ಭಾಗವಹಿಸಿರುತ್ತಾರೆ.
ವೈಯಕ್ತಿಕ ವಿಭಾಗ:
- ದ್ವಿತೀಯ ವಿಜ್ಞಾನ ವಿಭಾಗದ ಮೋಕ್ಷಿತ್ ಅವರು ಹೈಜಂಪ್ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನವನ್ನು ಪಡೆದು ರಾಜ್ಯಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.
- ಪ್ರಥಮ ವಿಜ್ಞಾನ ವಿಭಾಗದ ಧನ್ವಿ ಅವರು 1500 ಮೀಟರ್ ಓಟದ ಸ್ಪರ್ಧೆಯಲ್ಲಿ ತೃತೀಯ ಸ್ಥಾನವನ್ನು ಪಡೆದುಕೊಂಡಿದ್ದಾರೆ.
ತಂಡವು ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರಾದ ರವಿಶಂಕರ್ ,ಡಾ .ಜ್ಯೋತಿ ಮತ್ತು ಯತೀಶ್ ಇವರ ನೇತೃತ್ವದಲ್ಲಿ ತರಬೇತಿಯನ್ನು ಪಡೆದಿರುತ್ತಾರೆ .ಇವರನ್ನು ಕಾಲೇಜಿನ ಆಡಳಿತ ಮಂಡಳಿ ಪ್ರಾಂಶುಪಾಲರು ಹಾಗೂ ಉಪನ್ಯಾಸಕ ,ಉಪನ್ಯಾಸಕೇತರ ವೃಂದದವರು ಅಭಿನಂದಿಸಿರುತ್ತಾರೆ.
ಶಿಕ್ಷಣ
Philomena-ಪುತ್ತೂರು ಸಂತ ಫಿಲೋಮಿನಾ ಸ್ವಾಯತ್ತ ಕಾಲೇಜಿನ 14 ಮಂದಿ ಕೆ-ಸೆಟ್ ನಲ್ಲಿ ತೇರ್ಗಡೆ
ವಿಶ್ವವಿದ್ಯಾನಿಲಯ ಧನಸಹಾಯ ಆಯೋಗದಿಂದ ಮಾನ್ಯತೆ ಪಡೆದಿರುವ ನೋಡಲ್ ಏಜೆನ್ಸಿ ಕೆಇಎಯು ಅಕ್ಟೋಬರ್ 11 ರಂದು ನಡೆಸಿರುವ ಕರ್ನಾಟಕ ರಾಜ್ಯ ಉಪನ್ಯಾಸಕರ ಅರ್ಹತಾ ಪರೀಕ್ಷೆ (ಕೆ-ಸೆಟ್) ಯಲ್ಲಿ ಸಂತ ಫಿಲೋಮಿನಾ ಸ್ವಾಯತ್ತ ವಿದ್ಯಾಸಂಸ್ಥೆಯ 7 ದ್ವಿತೀಯ ಸ್ನಾತಕೋತ್ತರ ವಿದ್ಯಾರ್ಥಿಗಳು ಸೇರಿದಂತೆ 14 ಮಂದಿ ಉತ್ತೀರ್ಣರಾಗಿದ್ದಾರೆ.
ಪುತ್ತೂರು ನ. 24: ವಿಶ್ವವಿದ್ಯಾನಿಲಯ ಧನಸಹಾಯ ಆಯೋಗದಿಂದ ಮಾನ್ಯತೆ ಪಡೆದಿರುವ ನೋಡಲ್ ಏಜೆನ್ಸಿ ಕೆಇಎಯು ಅಕ್ಟೋಬರ್ 11 ರಂದು ನಡೆಸಿರುವ ಕರ್ನಾಟಕ ರಾಜ್ಯ ಉಪನ್ಯಾಸಕರ ಅರ್ಹತಾ ಪರೀಕ್ಷೆ (ಕೆ-ಸೆಟ್) ಯಲ್ಲಿ ಸಂತ ಫಿಲೋಮಿನಾ ಸ್ವಾಯತ್ತ ವಿದ್ಯಾಸಂಸ್ಥೆಯ 7 ದ್ವಿತೀಯ ಸ್ನಾತಕೋತ್ತರ ವಿದ್ಯಾರ್ಥಿಗಳು ಸೇರಿದಂತೆ 14 ಮಂದಿ ಉತ್ತೀರ್ಣರಾಗಿದ್ದಾರೆ.

ಕಾಲೇಜಿನ ಸ್ನಾತಕೋತ್ತರ ಕೇಂದ್ರದ ಭೌತಶಾಸ್ತ್ರ ವಿಭಾಗದ ವಿದ್ಯಾರ್ಥಿಗಳಾದ ಆಯಿಷತ್ ಶಮಾ ಎ, ಸಿಂಚನ ಬಿ ಹಾಗೂ ಗಣಿತಶಾಸ್ತ್ರ ವಿಭಾಗದ ವಿದ್ಯಾರ್ಥಿಗಳಾದ ಅದಿತಿ, ಶ್ರೀದೇವಿ ಎನ್, ಗಣೇಶ್ ಟಿ ಡಬ್ಲ್ಯೂ ಮತ್ತು ಎಂಸಿಎ ವಿಭಾಗದ ವಿದ್ಯಾರ್ಥಿಗಳಾದ ರಂಜನ್ ಎಸ್, ರತನ್ ಎನ್ ಮೊದಲ ಪ್ರಯತ್ನದಲ್ಲೇ ಉತ್ತೀರ್ಣರಾದವರು. ಈ ಮೂಲಕ ವಿದ್ಯಾರ್ಥಿಗಳು ಸರಕಾರಿ ಮತ್ತು ಅನುದಾನಿತ ಕಾಲೇಜುಗಳಲ್ಲಿ ಸಹಾಯಕ ಪ್ರಾಧ್ಯಾಪಕ ಹುದ್ದೆಗೆ ನೇಮಕ ಹೊಂದಲು ಬೇಕಾಗಿರುವ ಅರ್ಹತಾ ಪಡೆದುಕೊಂಡಿದ್ದಾರೆ.
ಈ ವಿದ್ಯಾರ್ಥಿಗಳೊಂದಿಗೆ ಸಹಾಯಕ ಪ್ರಾದ್ಯಾಪಕರುಗಳಾದ ಸಂತೋಷ್ ಶೆಟ್ಟಿ ಅವರು ರಾಜಕೀಯ ಶಾಸ್ತ್ರ, ರಶ್ಮಿ ವಿ, ಶ್ರದ್ಧಾ ಎ ಎಸ್ ಅವರು ಕಂಪ್ಯೂಟರ್ ಸೈನ್ಸ್, ಪೃಥ್ವಿ ಕೆ ಅವರು ಕಾಮರ್ಸ್, ಸುಜಿತ್ ಎಸ್, ಕೃತಿ ಎ ಅವರು ಭೌತಶಾಸ್ತ್ರ ಹಾಗೂ ಅಂಜು ಜೇಮ್ಸ್ ಅವರು ಗಣಿತ ಶಾಸ್ತ್ರ ವಿಷಯದಲ್ಲಿ ಕೆ-ಸೆಟ್ ತೇರ್ಗಡೆಯಾಗಿದ್ದಾರೆ.

ಪ್ರಸ್ತುತ ವಿದ್ಯಾರ್ಥಿಗಳಿಗೆ ಸಾಮಾನ್ಯ ವಿಷಯದ ಕುರಿತು ಕಾಲೇಜಿನ ವೃತ್ತಿ ಮಾರ್ಗದರ್ಶನ ಘಟಕದಿಂದ ಹಾಗೂ ವಿಷಯವಾರು ಪತ್ರಿಕೆಗಳಿಗೆ ಆಯಾ ವಿಭಾಗಗಳಿಂದ ತರಬೇತಿ ನೀಡಲಾಗಿತ್ತು. ವಿಶಿಷ್ಟ ಸಾಧನೆಗೈದ ಈ ವಿದ್ಯಾರ್ಥಿಗಳನ್ನು ಹಾಗೂ ಪ್ರಾದ್ಯಾಪಕರುಗಳನ್ನು ಸಂಚಾಲಕ ರೆ. ಡಾ. ಜೆ. ಬಿ. ಸಲ್ದಾನ್ಹ, ಪ್ರಾಂಶುಪಾಲ ರೆ. ಡಾ. ಆ್ಯಂಟನಿ ಪ್ರಕಾಶ್ ಮೊಂತೇರೊ, ಸ್ನಾತಕೋತ್ತರ ವಿಭಾಗ ಸಂಯೋಜಕರುಗಳಾದ ಡಾ. ವಿನಯಚಂದ್ರ, ಡಾ. ವಿಪಿನ್ ನಾಯ್ಕ್, ಪ್ರತೀಕ್ಷಾ ಅಭಿನಂದಿಸಿದ್ದಾರೆ.
ಶಿಕ್ಷಣ
Ambika-ಅಂಬಿಕಾ ವಿದ್ಯಾಲಯದಲ್ಲಿ ಆರ್ಟ್ ಆಫ್ ಲಿವಿಂಗ್‌ನ ಸಹಜ ಸಮಾಧಿ ಧ್ಯಾನ ಶಿಬಿರ
ನಟ್ಟೋಜ ಫೌಂಡೇಶನ್ ಟ್ರಸ್ಟ್ ಪ್ರವರ್ತಿತ ಬಪ್ಪಳಿಗೆಯ ಅಂಬಿಕಾ ವಿದ್ಯಾಲಯ ಸಿಬಿಎಸ್‌ಇ ಸಂಸ್ಥೆಯಲ್ಲಿ ಆರ್ಟ್ ಆಫ್ ಲಿವಿಂಗ್ ಪುತ್ತೂರು ಘಟಕದ ವತಿಯಿಂದ “ಸಹಜ ಸಮಾಧಿ ಧ್ಯಾನ ಯೋಗ” ಶಿಬಿರವನ್ನು ಹಮ್ಮಿಕೊಳ್ಳಲಾಯಿತು.
ಪುತ್ತೂರು: ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಪ್ರವರ್ತಿತ ಬಪ್ಪಳಿಗೆಯ ಅಂಬಿಕಾ ವಿದ್ಯಾಲಯ ಸಿಬಿಎಸ್‌ಇ ಸಂಸ್ಥೆಯಲ್ಲಿ ಆರ್ಟ್ ಆಫ್ ಲಿವಿಂಗ್ ಪುತ್ತೂರು ಘಟಕದ ವತಿಯಿಂದ “ಸಹಜ ಸಮಾಧಿ ಧ್ಯಾನ ಯೋಗ” ಶಿಬಿರವನ್ನು ಹಮ್ಮಿಕೊಳ್ಳಲಾಯಿತು.
ಅಷ್ಟಾಂಗ ಯೋಗದ ಪ್ರಕಾರ ಧ್ಯಾನದ ಅತ್ಯಂತ ಆಳವಾದ ಸ್ಥಿತಿಯಾದ ಸಮಾಧಿ ಸ್ಥಿತಿಯನ್ನು ಅನಾಯಾಸವಾಗಿ ಸರಳವಾಗಿ ನಿತ್ಯವೂ ಅನುಭವಿಸಲು ಸಹಕಾರಿಯಾದ ಈ ಯೋಗ ಶಿಬಿರವನ್ನು ಆರ್ಟ್ ಆಫ್ ಲಿವಿಂಗ್‌ನ ಅಂತರಾಷ್ಟ್ರೀಯ ಶಿಕ್ಷಕ ಯಾದವ ಜೀ ನಡೆಸಿಕೊಟ್ಟರು. ಶಿಬಿರದಲ್ಲಿ ೮೮ ಮಂದಿ ಭಾಗವಹಿಸಿ ಧ್ಯಾನ ಮಾಡುವ ಕ್ರಮವನ್ನು ಕಲಿತುಕೊಂಡರು.
ಸಹಾಯಕ ಶಿಕ್ಷಕರಾಗಿ ಮಂಗಳೂರಿನ ರಜನಿ ರೈ ಸಹಕರಿಸಿದರು. ಸಹಜ ಸಮಾಧಿ ಧ್ಯಾನವನ್ನು ಕಲಿಸುವುದಕ್ಕಾಗಿ ತರಬೇತಿಯನ್ನು ಪಡೆಯುತ್ತಿರುವ ಶರಾವತಿ ರವಿ ನಾರಾಯಣ, ಆರ್ಟ್ ಆಫ್ ಲಿವಿಂಗ್ ಪುತ್ತೂರಿನ ಮುಖ್ಯಸ್ಥರಾದ ಕುಮಾರ ಸುಬ್ರಹ್ಮಣ್ಯ ಭಟ್, ಸತ್ಯವತಿ ಕೆ ಎಸ್, ಸುಧಾ ಹೆಬ್ಬಾರ್, ಭಾರತಿ ಜಯರಾಮ್ ಹಾಗೂ ಸಂಸ್ಥೆಯ ಎಲ್ಲಾ ಸ್ವಯಂಸೇವಕರು ಶಿಬಿರವನ್ನು ಯಶಸ್ವಿಯಾಗಿ ಆಯೋಜಿಸಿದರು.
ಸಮಾರೋಪ ಸಮಾರಂಭದಲ್ಲಿ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಸುಬ್ರಹ್ಮಣ್ಯ ನಟ್ಟೋಜ ಭಾಗವಹಿಸಿ, ಪ್ರೇರಣೆ ನೀಡಿದರು.
-
ಶಿಕ್ಷಣ23 hours agoVidyamata Academy-ಕರ್ನಾಟಕ ರಾಜ್ಯ ಅರ್ಹತಾ ಪರೀಕ್ಷೆಯಲ್ಲೂ ಅಮೋಘ ಸಾಧನೆ ಮುಂದುವರಿಸಿದ ವಿದ್ಯಾಮಾತಾ ಅಕಾಡೆಮಿ
-
ಮಂಗಳೂರು23 hours agoGirish Mattannavar-ಸೌಜನ್ಯ ಪ್ರಕರಣ: ಎಸ್ಐಟಿಗೆ ದಾಖಲೆಗಳ ʼಬ್ಯಾಗ್ʼ ಸಲ್ಲಿಸಿದ ಗಿರೀಶ್ ಮಟ್ಟಣ್ಣನವರ್; ಸೌಜನ್ಯ ಪ್ರಕರಣದಲ್ಲಿ ಆರ್. ಅಶೋಕ್ ಪಾತ್ರದ ಕುರಿತು ಸ್ಪೋಟಕ ಹೇಳಿಕೆ..!
-
ಅಪರಾಧ6 hours agoMangalore-Big Breaking:ಮಂಗಳೂರು: ಕದ್ರಿ ಯುದ್ಧ ಸ್ಮಾರಕದಲ್ಲಿರುವ ಟಿ-55 ಟ್ಯಾಂಕ್ ಮೇಲೆ ಹತ್ತಿ ಯುವಕರ ಹುಚ್ಚಾಟ; ವಿಡಿಯೋ ವೈರಲ್, ಸಾರ್ವಜನಿಕರ ಆಕ್ರೋಶ
-
ಅಪರಾಧ23 hours agoArrest-ಸಾಲದ ಇಎಂಐ ಕಟ್ಟಲು ಸ್ನೇಹಿತನನ್ನೇ ಕೊಂದು ₹63 ಸಾವಿರ ದೋಚಿದ ಆರೋಪ: ಉತ್ತರ ಪ್ರದೇಶದಲ್ಲಿ ಆರೋಪಿ ಬಂಧನ
-
ಬಿಗ್ ನ್ಯೂಸ್4 hours agoBantwal-ಬಂಟ್ವಾಳ: ತಂದೆ ಗದರಿಸಿದ್ದಕ್ಕೆ ಮನೆ ಬಿಟ್ಟ ಬ್ಯಾಂಕ್ ಉದ್ಯೋಗಿ ಯುವತಿ ನಾಪತ್ತೆ..!
-
ಮಂಗಳೂರು5 hours agoPugasarum-ಅಡಕೆ, ವೀಳ್ಯದೆಲೆಯ ‘ಪೂಗಸಾರಂ’ನಿಂದ ಕ್ಯಾನ್ಸರ್ ಬೆಳವಣಿಗೆಗೆ ಕಡಿವಾಣ? ಮಂಗಳೂರಿನ ವಿಜ್ಞಾನಿಗಳ ಸಂಶೋಧನೆಯಲ್ಲಿ ಮಹತ್ವದ ಅಂಶ ಪತ್ತೆ..!
-
ಸ್ಥಳೀಯ5 hours agoSubrahmanya-ಸುಬ್ರಹ್ಮಣ್ಯ: ಮನೆಗೆ ರಾತ್ರಿ ನಕ್ಸಲರ ಭೇಟಿ ಪ್ರಕರಣ: ಮಾಜಿ ನಕ್ಸಲರಾದ ರವೀಂದ್ರ, ಸುಂದರಿ, ದಿಶಾರಿಂದ ಸ್ಥಳ ಮಹಜರು
-
ಅಂತರ ರಾಜ್ಯ5 hours agoFIR-ಮದುವೆಯಾಗುವ ಭರವಸೆ ನೀಡಿ ದೈಹಿಕ ಸಂಪರ್ಕ: ಬಿಗ್ ಬಾಸ್ ವಿಜೇತ ಮುತ್ತುಕುಮಾರನ್ ವಿರುದ್ಧ ಇನ್ಫ್ಲುಯೆನ್ಸರ್ ವಹಿದಾ ದೂರು – ಎಫ್ಐಆರ್ ದಾಖಲು..!















