ಶಿಕ್ಷಣ
ಹಿಜಾಬ್ ಕುರಿತು ಸುಪ್ರೀಂಕೋರ್ಟ್ನಿಂದ ವಿಭಜಿತ ತೀರ್ಪು -ಪ್ರಕರಣ ಮುಖ್ಯ ನ್ಯಾಯಮೂರ್ತಿಗಳ ಅಂಗಣಕ್ಕೆ
ನವದೆಹಲಿ, ಅ. 13 : ಹಿಜಾಬ್ ವಿವಾದದ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಇಬ್ಬರು ನ್ಯಾಯಾದೀಶರು ವಿಭಿನ್ನ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದ ಹಿನ್ನಲೆಯಲ್ಲಿ ಪ್ರಕರಣವು ಮುಖ್ಯ ನ್ಯಾಯಾಮೂರ್ತಿಗಳ ಅಂಗಣ ತಲುಪಿದೆ. ಹೀಗಾಗಿ ಇಂದಿನ ತೀರ್ಪಿನಲ್ಲಿ ಸುಪ್ರೀಂ ಕೋರ್ಟು ಸ್ಪಷ್ಟ ತೀರ್ಪು ನೀಡಿಲ್ಲ.
ಹಿಜಾಬ್ ಕುರಿತು ಬಂದಿದ್ದ ಹೈಕೋರ್ಟ್ ತೀರ್ಪನ್ನು ಪ್ರಶ್ನಿಸಿ ಹಿಜಾಬ್ ಪರವಾದ ಮುಸ್ಲಿಂ ವಿದ್ಯಾರ್ಥಿನಿಯರ ಗುಂಪೊಂದು ಸುಪ್ರೀಂ ಕೋರ್ಟ್ ಮಟ್ಟಿಲೇರಿದ್ದರು. ವಿಚಾರಣೆ ನಡೆಸಿದ ನ್ಯಾ. ಹೇಮಂತ್ ಗುಪ್ತ ಹಾಗೂ ನ್ಯಾ. ಸುಧಾಂಶು ದುಲಿಯಾರ ದ್ವಿಸದಸ್ಯ ಪೀಠ ಒಮ್ಮತದ ತೀರ್ಮಾನಕ್ಕೆ ಬರಲು ವಿಫಲವಾಯಿತು.ಹೀಗಾಗಿ ಸೂಕ್ತ ನಿರ್ದೇಶನಗಳಿಗಾಗಿ ಈ ಪ್ರಕರಣವನ್ನು ಸುಪ್ರಿಂ ಕೋರ್ಟ್ ನ ಮುಖ್ಯ ನ್ಯಾಯಾಧೀಶರ ಮುಂದೆ ಇಡಲು ಇಬ್ಬರು ನ್ಯಾಯದೀಶರು ನಿರ್ಧರಿಸಿದರು.
ಒಬ್ಬ ನ್ಯಾಯಮೂರ್ತಿ ಹಿಜಾಬ್ ಪರವಾಗಿ ತೀರ್ಪು ನೀಡಿದ್ದರೆ, ಮತ್ತೊಬ್ಬರು ಹಿಜಾಬ್ ವಿರುದ್ಧ ತೀರ್ಪು ನೀಡಿದ್ದಾರೆ. ಇಬ್ಬರು ವಿಭಿನ್ನ ತೀರ್ಪು ನೀಡಿರುವುದರಿಂದ ವಿಚಾರಣೆಯನ್ನು ಮುಖ್ಯ ನ್ಯಾಯಮೂರ್ತಿಗಳ ನ್ಯಾಯಪೀಠಕ್ಕೆ (Chief Justice Bench) ವರ್ಗಾವಣೆ ಮಾಡಲಾಗಿದೆ. ನ್ಯಾ. ಹೇಮಂತ್ ಹೈಕೋರ್ಟ್ ಆದೇಶವನ್ನು ಎತ್ತಿ ಹಿಡಿದ್ದಾರೆ.ನ್ಯಾ. ಸುಧಾಂಶು ಹೈಕೋರ್ಟ್ ಆದೇಶವನ್ನು ರದ್ದುಗೊಳಿಸಿದ್ದಾರೆ.
ತನ್ನ ತೀರಪಿನ ವೇಳೆ ನ್ಯಾಯಮೂರ್ತಿ ಧುಲಿಯಾ: ನಾನು ಕರ್ನಾಟಕ ಹೈಕೋರ್ಟ್ ಆದೇಶವನ್ನು ಬದಿಗೆ ಸರಿಸುತ್ತಿದ್ದು (ರಾಜ್ಯ) ಸರ್ಕಾರದ ಆದೇಶವನ್ನು ರದ್ದುಗೊಳಿಸುತ್ತಿದ್ದೇನೆ. ಅಗತ್ಯ ಧಾರ್ಮಿಕ ಆಚರಣೆ ಕುರಿತು ಚಿಂತಿಸುವ ಅಗತ್ಯವಿಲ್ಲ ಮತ್ತು ನ್ಯಾಯಾಲಯ (ಕರ್ನಾಟಕ ಹೈಕೋರ್ಟ್) ತಪ್ಪು ಹೆಜ್ಜೆ ಇರಿಸಿದೆ…. ನನಗೆ ಹೆಣ್ಣು ಮಗುವಿನ ಶಿಕ್ಷಣವೇ ಉನ್ನತ ಆದ್ಯತೆಯ ವಿಚಾರ. ಎಂದರು. ಇನ್ನು ನ್ಯಾ. ಹೇಮಂತ್ ಗುಪ್ತಾ ಅವರು ಹಿಜಾಬ್ ನಿಷೇಧದ ಪರ ಕರ್ನಾಟಕ ಹೈಕೋರ್ಟ್ ನೀಡಿದ್ದ ತೀರ್ಪನ್ನು ಎತ್ತಿಹಿಡಿದಿದ್ದಾರೆ
ಉಡುಪಿಯಲ್ಲಿ ಆರಂಭವಾದ ಈ ವಿವಾದ ದೇಶಾದ್ಯಂತ ಹಬ್ಬಿತ್ತು. ಈ ಕುರಿತು ವಿಚಾರಣೆ ನಡೆಸಿದ್ದ ಹೈಕೋರ್ಟ್ ಶಾಲಾ, ಕಾಲೇಜಿನ ತರಗತಿಗಳಿಗೆ ಹಿಜಾಬ್ ಧರಿಸಿ ಹಾಜರಾಗುವುದನ್ನು ನಿಷೇಧಿಸಿ ಸರ್ಕಾರ ಹೊರಡಿಸಿದ್ದ ಆದೇಶವನ್ನು ಎತ್ತಿಹಿಡಿತ್ತು. ಅಲ್ಲದೆ, ಹಿಜಾಬ್ ಧಾರಣೆ ಇಸ್ಲಾಂನ ಅವಿಭಾಜ್ಯ ಅಂಗವಲ್ಲ ಎಂದೂ ವ್ಯಾಖ್ಯಾನಿಸಿತ್ತು. ಹೈಕೋರ್ಚ್ ತೀರ್ಪು ಪ್ರಶ್ನಿಸಿ ವಿದ್ಯಾರ್ಥಿಗಳು ಸುಪ್ರೀಂ ಕೋರ್ಚ್ ಮೊರೆ ಹೋಗಿದ್ದರು. ಶಾಲಾ ಕಾಲೇಜುಗಳಲ್ಲಿ ಸಮಾನತೆ, ಸಮಗ್ರತೆ ಮತ್ತು ಸಾರ್ವಜನಿಕ ಸುವ್ಯವಸ್ಥೆಗೆ ಭಂಗ ತರುವಂತಹ ಬಟ್ಟೆಗಳನ್ನು ಧರಿಸುವುದನ್ನು ನಿಷೇಧಿಸಿದ ರಾಜ್ಯ ಸರ್ಕಾರದ ಫೆಬ್ರವರಿ 5, 2022 ರ ಆದೇಶ ಸೇರಿದಂತೆ ವಿವಿಧ ಅಂಶಗಳ ಬಗ್ಗೆ ಅರ್ಜಿದಾರರ ಪರ ವಕೀಲರು ವಾದಿಸಿದ್ದರು.
ಶಿಕ್ಷಣ
Vivekananda-ತಾಲೂಕು ಮಟ್ಟದ ಕಬಡ್ಡಿ ಪಂದ್ಯಾಟ – ವಿವೇಕಾನಂದ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳ ಸಾಧನೆ
ಶಾಲಾ ಶಿಕ್ಷಣ ಇಲಾಖೆ ಪದವಿಪೂರ್ವ ವಿಭಾಗ ತಾಲೂಕು ಮಟ್ಟದ ಕಬಡ್ಡಿ ಪಂದ್ಯಾಟ ಸರಕಾರಿ ಪದವಿಪೂರ್ವ ಕಾಲೇಜು ಕಬಕ ಇವರ ಸಹಯೋಗದಲ್ಲಿ ಕೊಂಬೆಟ್ಟು ಕ್ರೀಡಾಂಗಣದಲ್ಲಿ ನಡೆಯಿತು. ವಿವೇಕಾನಂದ ಪದವಿಪೂರ್ವ ಕಾಲೇಜಿನ ಬಾಲಕರ ತಂಡ ದ್ವಿತೀಯ ಹಾಗೂ ಬಾಲಕಿಯರ ತಂಡ ಪ್ರಥಮ ಸ್ಥಾನ ಪಡೆದಿರುತ್ತಾರೆ.

ಶಾಲಾ ಶಿಕ್ಷಣ ಇಲಾಖೆ ಪದವಿಪೂರ್ವ ವಿಭಾಗ ತಾಲೂಕು ಮಟ್ಟದ ಕಬಡ್ಡಿ ಪಂದ್ಯಾಟ ಸರಕಾರಿ ಪದವಿಪೂರ್ವ ಕಾಲೇಜು ಕಬಕ ಇವರ ಸಹಯೋಗದಲ್ಲಿ ಕೊಂಬೆಟ್ಟು ಕ್ರೀಡಾಂಗಣದಲ್ಲಿ ನಡೆಯಿತು.
ವಿವೇಕಾನಂದ ಪದವಿಪೂರ್ವ ಕಾಲೇಜಿನ ಬಾಲಕರ ತಂಡ ದ್ವಿತೀಯ ಹಾಗೂ ಬಾಲಕಿಯರ ತಂಡ ಪ್ರಥಮ ಸ್ಥಾನ ಪಡೆದಿರುತ್ತಾರೆ.
ಬಾಲಕರ ತಂಡದಲ್ಲಿ ಪ್ರಥಮ ಪಿಯುಸಿಯ ವಿದ್ಯಾರ್ಥಿಗಳಾದ ಕಿಶನ್ ಕೆ ವೈ, ತ್ರಿಶಿಕ್ ಕೆ. ಗೌಡ , ಯಶ್ವಿತ್ ಗೌಡ, ಪವನ್ ಕುಮಾರ್, ಮೋಕ್ಷಿತ್ ಕೆ.ಜೆ, ಅನ್ವಿತ್ ಎಸ್ .ಪಿ, ನಿದೀಶ್ ಶೆಟ್ಟಿ, ಮನ್ವಂತ್ ದ್ವಿತೀಯ ಪಿಯುಸಿ ಪ್ರಣಮ್ ಪಿ ಶೆಟ್ಟಿ ,ಚಿಂತನ್ ಕೆ, ಕೆ ಆರ್ ದಿಶಾಂತ್ ಹಾಗೂ ಬಾಲಕಿಯರ ತಂಡದಲ್ಲಿ ಪ್ರಥಮ ಪಿಯುಸಿ ವಿನ್ಯಾ ರೈ, ಸೃಷ್ಟಿ ಎಸ್. ಆರ್. ರೈ, ವೀಕ್ಷಾ ಬಿ. ಆರ್, ಧರಣಿ ಕೆ. ಟಿ, ಶ್ರಾವ್ಯ, ಕೆ. ಸುಶಾನಿ, ಸಿ. ಎಸ್. ಚಿನ್ಮಯ್ ಗೌಡ, ಪಾವನಿ ಕೆ. ವಸಿಷ್ಠ, ಸಾನ್ವಿ ಎಸ್, ತನ್ವಿ ದ್ವಿತೀಯ ಪಿಯುಸಿ ಧನ್ವಿ ಎ. ಆರ್ ಭಾಗವಹಿಸಿರುತ್ತಾರೆ.
ತಂಡವು ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರಾದ ರವಿಶಂಕರ್, ಡಾ .ಜ್ಯೋತಿ ಮತ್ತು ಯತೀಶ್ ಇವರ ನೇತೃತ್ವದಲ್ಲಿ ತರಬೇತಿಯನ್ನು ಪಡೆದಿರುತ್ತಾರೆ. ಇವರನ್ನು ಕಾಲೇಜಿನ ಆಡಳಿತ ಮಂಡಳಿ ಪ್ರಾಂಶುಪಾಲರು ಹಾಗೂ ಉಪನ್ಯಾಸಕ, ಉಪನ್ಯಾಸಕೇತರ ವೃಂದದವರು ಅಭಿನಂದಿಸಿರುತ್ತಾರೆ.
ಶಿಕ್ಷಣ
Puttur-ಸಂತ ಫಿಲೋಮಿನಾ ಕಾಲೇಜು (ಸ್ವಾಯತ್ತ), ಪುತ್ತೂರಿನ ವಿದ್ಯಾರ್ಥಿ ನಿಖಿಲ್ ಬಿ.ಕೆ.ಗೆ ಯೋಗಾಸನದಲ್ಲಿ ಚಿನ್ನ; ಅಖಿಲ ಭಾರತ ಅಂತರ್ ವಿಶ್ವವಿದ್ಯಾಲಯ ಸ್ಪರ್ಧೆಗೆ ಆಯ್ಕೆ
ಸಂತ ಫಿಲೋಮಿನಾ ಕಾಲೇಜು (ಸ್ವಾಯತ್ತ), ಪುತ್ತೂರಿನ ವಿದ್ಯಾರ್ಥಿ ನಿಖಿಲ್ ಬಿ.ಕೆ. ಅವರು ಮಂಗಳೂರಿನ ಎಸ್‌ಡಿಎಂನಲ್ಲಿ ನಡೆದ ಮಂಗಳೂರು ವಿಶ್ವವಿದ್ಯಾಲಯ ಅಂತರ್ ಕಾಲೇಜು ಯೋಗಾಸನ ಸ್ಪರ್ಧೆಯಲ್ಲಿ ಚಿನ್ನದ ಪದಕ ಗೆದ್ದು, ಅಖಿಲ ಭಾರತ ಅಂತರ್ ವಿಶ್ವವಿದ್ಯಾಲಯ ಯೋಗಾಸನ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.
ಪುತ್ತೂರು, ಅ. 4: ಸಂತ ಫಿಲೋಮಿನಾ ಕಾಲೇಜು (ಸ್ವಾಯತ್ತ), ಪುತ್ತೂರಿನ ವಿದ್ಯಾರ್ಥಿ ನಿಖಿಲ್ ಬಿ.ಕೆ. ಅವರು ಮಂಗಳೂರಿನ ಎಸ್‌ಡಿಎಂನಲ್ಲಿ ನಡೆದ ಮಂಗಳೂರು ವಿಶ್ವವಿದ್ಯಾಲಯ ಅಂತರ್ ಕಾಲೇಜು ಯೋಗಾಸನ ಸ್ಪರ್ಧೆಯಲ್ಲಿ ಚಿನ್ನದ ಪದಕ ಗೆದ್ದು, ಅಖಿಲ ಭಾರತ ಅಂತರ್ ವಿಶ್ವವಿದ್ಯಾಲಯ ಯೋಗಾಸನ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.
ಯೋಗಾಸನ ಸ್ಪರ್ಧೆಯಲ್ಲಿ ಉತ್ತಮ ಪ್ರದರ್ಶನ ನೀಡಿದ ನಿಖಿಲ್ ಬಿ.ಕೆ. ಅವರ ಸಾಧನೆಯ ಹಿನ್ನೆಲೆಯಲ್ಲಿ ಮುಂದಿನ ಹಂತವಾದ ಅಖಿಲ ಭಾರತ ಅಂತರ್ ವಿಶ್ವವಿದ್ಯಾಲಯ ಯೋಗಾಸನ ಸ್ಪರ್ಧೆಗೆ ಅವರು ಆಯ್ಕೆಯಾಗಿದ್ದಾರೆ.
ಅವರಿಗೆ ತರಬೇತುದಾರ ನವೀನ್ ಕುಮಾರ್ ಬಿ. ಕೆಯೂರ್ ತರಬೇತಿ ನೀಡಿದ್ದರು.
ಕಾಲೇಜಿನ ಪ್ರಾಂಶುಪಾಲ ರೆ. ಡಾ. ಆಂಟನಿ ಪ್ರಕಾಶ್ ಮೊಂತೆರೋ ಅವರು ನಿಖಿಲ್ ಬಿ.ಕೆ. ಹಾಗೂ ತರಬೇತುದಾರರನ್ನು ಅಭಿನಂದಿಸಿ, ಮುಂದಿನ ಹಂತದ ಸ್ಪರ್ಧೆಯಲ್ಲೂ ಉತ್ತಮ ಸಾಧನೆ ಮಾಡುವಂತೆ ಶುಭ ಹಾರೈಸಿದರು.
ಸ್ಥಳೀಯ
Manila-ಮಾಣಿಲದಲ್ಲಿ ಸ್ವಯಂಪ್ರೇರಿತ ಶ್ರಮದಾನ
ಮಾಣಿಲ ಗ್ರಾಮದ ಮುರುವ ಕೊಮ್ಮುಂಜೆ ರಸ್ತೆಯಲ್ಲಿ ಮುರುವ ಬಸ್ ನಿಲ್ದಾಣದಿಂದ ಅಂಗನವಾಡಿ ಬಳಿವರೆಗೆ ”ಸ್ವಚ್ಛತೆಯೇ ಸೇವೆ-2026” ಅಭಿಯಾನದಡಿ ಗುರುವಾರದಂದು ಸ್ವಯಂಪ್ರೇರಿತ ಶ್ರಮದಾನ ಕಾರ್ಯಕ್ರಮ ನಡೆಯಿತು.
ಮಾಣಿಲ : ಮಾಣಿಲ ಗ್ರಾಮದ ಮುರುವ ಕೊಮ್ಮುಂಜೆ ರಸ್ತೆಯಲ್ಲಿ ಮುರುವ ಬಸ್ ನಿಲ್ದಾಣದಿಂದ ಅಂಗನವಾಡಿ ಬಳಿವರೆಗೆ ”ಸ್ವಚ್ಛತೆಯೇ ಸೇವೆ-2026” ಅಭಿಯಾನದಡಿ ಗುರುವಾರದಂದು ಸ್ವಯಂಪ್ರೇರಿತ ಶ್ರಮದಾನ ಕಾರ್ಯಕ್ರಮ ನಡೆಯಿತು.
ಶ್ರಮದಾನದಲ್ಲಿ ಗ್ರಾಮಸ್ಥರಾದ ಚಂದ್ರಶೇಖರ ರಾವ್ ಕೊಮ್ಮುಂಜೆ, ರಾಜಾರಾಮ ನಾಯಕ್ ಮುರುವ, ಬಾಬು ಮೂಲ್ಯ ಮುರುವ, ಭರತ್ ಕುಮಾರ್ ಬೈಕುಂಜ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಕೃಷ್ಣ ಕುಮಾರ ಕಮ್ಮಜೆ, ಗ್ರಾ.ಪಂ ಕಾರ್ಯದರ್ಶಿ ರಾಮ ನಾಯ್ಕ ಎಮ್, ಗ್ರಾಮ ಪಂಚಾಯತ್ ಸಿಬ್ಬಂದಿಗಳಾದ ಜಗದೀಶ್ ನಾಯಕ್, ಭವಾನಿ.ಪಿ, ಮಮತಾ ಎಸ್, ಅವಿನಾಶ್ ಯಂ, ನೇತ್ರಾವತಿ ಒಕ್ಕೂಟದ ಪೂರ್ಣಿಮ ಬಿ, ಕೃಷಿ ಸಖಿ ಪಾರ್ವತಿ, ಪಶು ಸಖಿ ಬಾಲಮಣಿ, ದಿಶಾ ಕೊಂದಲಕೋಡಿ ಭಾಗವಹಿಸಿದರು.
-
ನಿಧನ ವಾರ್ತೆ11 hours agoUppinangadi-ಉಪ್ಪಿನಂಗಡಿ: ಸೇತುವೆ ಮೇಲೆ ಬೈಕ್, ಮೊಬೈಲ್ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ನದಿಯಲ್ಲಿ ಶವವಾಗಿ ಪತ್ತೆ
-
ಬಿಗ್ ನ್ಯೂಸ್16 hours agoBantwal-Big Breaking-ದ.ಕ. ಜಿಲ್ಲೆಯಲ್ಲಿ ಗುಡುಗು-ಮಿಂಚಿನ ಮಳೆ: ಸಿಡಿಲು ಬಡಿದು ಮನೆ ಜಖಂ-ಮಹಿಳೆ ಅಸ್ವಸ್ಥ
-
ಅಪರಾಧ17 hours agoPuttur-ಪುತ್ತೂರು: ಹಿಂಸಾತ್ಮಕ ರೀತಿಯಲ್ಲಿ 11 ಗೋವುಗಳ ಸಾಗಾಟ; ವಾಹನ ಪತ್ತೆ, ಇಬ್ಬರು ಪರಾರಿ
-
ಅಂತರ ರಾಜ್ಯ15 hours agoMurder-ಆಸ್ತಿಗಾಗಿ ಬೆಲ್ಟ್ನಿಂದ ಕುತ್ತಿಗೆ ಬಿಗಿದು ಪತಿಯ ಕೊಲೆ: ಆಕಸ್ಮಿಕ ಸಾವೆಂದು ನಂಬಿಸಿದ್ದ ಪತ್ನಿ ಅರೆಸ್ಟ್
-
ಸ್ಥಳೀಯ16 hours agoCrop insurance-ಬೆಳೆ ವಿಮೆಯಲ್ಲಿ ಭಾರೀ ಇಳಿಕೆ – ದ.ಕ. ಜಿಲ್ಲೆಯ ಅಡಿಕೆ, ಕಾಳುಮೆಣಸು ಬೆಳೆಗಾರರು ಶಾಕ್..!; ಬೇಗನೆ ಜಮೆಯಾದರೂ ಪರಿಹಾರ ಮೊತ್ತದಲ್ಲಿ ಭಾರೀ ಇಳಿಕೆ; ಲೆಕ್ಕಾಚಾರ ಬಹಿರಂಗಕ್ಕೆ ಆಗ್ರಹ
-
ನಿಧನ ವಾರ್ತೆ14 hours agoAccident-ಹುತಾತ್ಮ ಸೈನಿಕನ ಮೃತದೇಹ ಕೊಂಡೊಯ್ಯುತ್ತಿದ್ದ ಆಂಬ್ಯುಲೆನ್ಸ್ ಅಪಘಾತ: ಸೈನಿಕನ ಮಗ, ಸಹೋದರ ಸೇರಿ ನಾಲ್ವರು ಸಾವು
-
ನಿಧನ ವಾರ್ತೆ16 hours agoLalitamma-ಸುಂಟರಗಾಳಿ’, ‘ಜಂಗ್ಲಿ’ ಖ್ಯಾತಿಯ ಹಿರಿಯ ನಟಿ ಲಲಿತಮ್ಮ ನಿಧನ
-
ರಾಜಕೀಯ10 hours agoPuttur-ಪುತ್ತೂರು: ಅಲ್ಪಸಂಖ್ಯಾತ ಸೇವಾ ಕೇಂದ್ರ ಉದ್ಘಾಟನೆಗೆ ಬಿಜೆಪಿ ಮೋರ್ಚಾದಿಂದ ಆಗ್ರಹ




















