ಅಪರಾಧ
Rape and Murder : ಕಲಿಯಲು ಬಂದ 10ರ ಬಾಲಕಿ ಮೇಲೆ ಟ್ಯೂಷನ್ ಸೆಂಟರ್ ಸಿಬ್ಬಂದಿಯಿಂದ ಅತ್ಯಾಚಾರ, ಕೊಲೆ : ಪೋಷಕರೊಂದಿಗೆ ಸೇರಿ ಹುಡುಕಾಟದ ನಾಟಕವಾಡಿದ ಆರೋಪಿ ಶವವನ್ನು ಸಂಪ್ ಗೆ ಎಸೆದಿದ್ದ
ಮಳವಲ್ಲಿ : ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರಗೈದು ಕೊಲೆ ಮಾಡಿದ ಆರೋಪದಡಿ ಹರೆಯದ ವ್ಯಕ್ತಿಯನ್ನು ಮಂಡ್ಯ ಜಿಲ್ಲೆಯ ಮಳವಳ್ಳಿಯ ಪೊಲೀಸರು ಬಂಧಿಸಿದ್ದಾರೆ. ಮೈಸೂರು ಮೂಲದ ಕಾಂತರಾಜು ಬಂಧಿತ ಆರೋಪಿ. ಈತ ಮಳವಳ್ಳಿಯ ಟ್ಯೂಷನ್ ಸೆಂಟರ್ ನಲ್ಲಿ ಕೆಲಸ ಮಾಡುತ್ತಿದ್ದಾತ. ಇದೇ ಟ್ಯೂಷನ್ ಸೆಂಟರ್ ಗೆ ಬರುತ್ತಿದ್ದ 10 ವರ್ಷದ ಬಾಲಕಿ ಹತ್ಯೆಯಾದವಳು.
ಟ್ಯೂಶನ್ ಮುಗಿಸಿ ಮನೆಗೆ ವಾಪಸಾಗುತ್ತಿದ್ದ ವೇಳೆ ಆರೋಪಿಯು ಬಾಲಕಿಗೆ ಚಾಕಲೇಟ್ ಕೊಟ್ಟು ಪುಸಲಾಯಿಸಿ ನಿರ್ಜನ ಪ್ರದೇಶಕ್ಕೆ ಕರೆದೊಯ್ದಿದ್ದಾನೆ. ಅಲ್ಲಿ ಆಕೆಯ ಮೇಲೆ ಅತ್ಯಾಚಾರವೆಸಗಿ ಕೊಂದು ಹಾಕಲಾಗಿದೆ. ನಂತರ ಮಳವಳ್ಳಿಯ ಮೈಸೂರು ರಸ್ತೆಯ ಪಕ್ಕದಲ್ಲಿ ನಿರ್ಮಾಣ ಹಂತದ ಕಟ್ಟಡದ ಸಂಪ್ ಒಳಗೆ ಮೃತದೇಹವನ್ನು ಎಸೆದು ಹೋಗಿದ್ದಾನೆ. ಬಾಲಕಿಯ ಪೋಷಕರು ತಮ್ಮ ಮಗಳು ನಾಪತ್ತೆಯಾಗಿದ್ದಾಳೆ ಎಂದು ದೂರು ನೀಡಿದ ನಂತರ ಹುಡುಕಾಡಿದ ಮಳವಳ್ಳಿ ಪೊಲೀಸ್ ಠಾಣೆಯ ವಿಶೇಷ ತಂಡಕ್ಕೆ ಕಾಂತರಾಜು ಈ ಕುಕೃತ್ಯ ಎಸಗಿರುವ ಬಗ್ಗೆ ಸಂದೇಹ ಬಂತು.
ಕಾಂತರಾಜು ಕಳೆದ 15 ವರ್ಷಗಳಿಂದ ಈ ಟ್ಯೂಶನ್ ಸೆಂಟರ್ ನಲ್ಲಿ ಕೆಲಸ ಮಾಡುತ್ತಿದ್ದ. ಈ ಹಿಂದೆ ಕೂಡ ಬಾಲಕಿಗೆ ಅನೇಕ ಬಾರಿ ಚಾಕಲೇಟ್ ನೀಡಿದ್ದನಂತೆ. ಮೊನ್ನೆ ಚಾಕಲೇಟ್ ತೆಗೆದುಕೊಳ್ಳಲು ಹೋದಾಗ ಆಕೆಯನ್ನು ಎಳೆದು ಅತ್ಯಾಚಾರವೆಸಗಿ ಕೊಂದು ಶವವನ್ನು ಸಂಪ್ ಗೆ ಎಸೆದು ಹೋಗಿದ್ದಾನೆ ಎಂದು ಪೊಲೀಸರಿಗೆ ತಿಳಿದುಬಂದಿದೆ.
ಟ್ಯೂಶನ್ ಗೆ ಹೋದ ಮಗಳು ಸಂಜೆಯಾದರೂ ಮನೆಗೆ ವಾಪಸ್ ಬರದಿದ್ದಾಗ ಮನೆಯವರು ಹಾಗೂ ಟ್ಯೂಷನ್ ಸೆಂಟರ್ ನವರು ಇತರರು ಹುಡುಕಾಟ ನಡೆಸಿದ್ದಾರೆ. ಈ ವೇಳೆ ಆರೋಪಿಯು ಅವರ ಜತೆ ಹುಡುಕಾಡುವ ನಾಟಕವಾಡಿದ್ದಾನೆ. ನಿರ್ಮಾಣ ಹಂತದ ಸೈಟ್ ನ ಸಂಪ್ ನಲ್ಲಿ ಮಗಳ ಮೃತದೇಹವಿರುವುದು ಅಕ್ಕಪಕ್ಕದವರಿಂದ ಗೊತ್ತಾಗಿ ಪೊಲೀಸರಿಗೆ ತಿಳಿಸಿದರು.
ಹೆಚ್ಚುವರಿ ಸೂಪರಿಂಟೆಂಡೆಂಟ್ ನೇತೃತ್ವದಲ್ಲಿ ಪೊಲೀಸ್ ತಂಡ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿತು. ಕೂಡಲೇ ಪೊಲೀಸರು ಕಾಂತರಾಜುವನ್ನು ಬಂಧಿಸಿದ್ದು ಆತನ ಬಾಯಿ ಬಿಡಿಸಿದಾಗ ಮಾಡಿರುವ ನೀಚ ಕೃತ್ಯವನ್ನು ಒಪ್ಪಿಕೊಂಡಿದ್ದಾನೆ.
Scholarship : ವಿದ್ಯಾಸಿರಿ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಅಹ್ವಾನ – ಯಾರೆಲ್ಲ ಅರ್ಜಿ ಸಲ್ಲಿಸಬಹುದು? ನಿಯಮಗಳೇನು?
ಪ್ರತಿಭಟನೆ:
ಬಾಲಕಿ ಅತ್ಯಾಚಾರ, ಹತ್ಯೆ ಖಂಡಿಸಿ ಕುರುಬರ ಸಂಘ, ಜನವಾದಿ ಮಹಿಳಾ ಸಂಘಟನೆ, ಕೃಷಿಕೂಲಿಕಾರರ ಸಂಘ, ಕಾಂಗ್ರೆಸ್ ಕಾರ್ಯಕರ್ತರು ಸೇರಿದಂತೆ ಮೃತ ಬಾಲಕಿಯ ಸಂಬಂಧಿಕರು ಪ್ರತಿಭಟನೆ ನಡೆಸಿದರು. ಆರೋಪಿಯನ್ನು ಬಂಧಿಸಿ ಕಠಿಣ ಶಿಕ್ಷೆ ಒಳಪಡಿಸಬೇಕು. ಆರೋಪಿಯನ್ನು ತಮ್ಮ ವಶಕ್ಕೆ ನೀಡಿದರೆ ತಕ್ಕ ಪಾಠ ಕಲಿಸುವುದಾಗಿ ಆಗ್ರಹಿಸಿದರು.
ರಾಜಕೀಯ ನಾಯಕರ ಕಂಬನಿ, ಕಠಿಣ ಕ್ರಮಕ್ಕೆ ಆಗ್ರಹ:
ಮಂಡ್ಯ ಜಿಲ್ಲೆ ಮಳವಳ್ಳಿ ತಾಲ್ಲೂಕಿನಲ್ಲಿ ಟ್ಯೂಶನ್ಗೆ ಹೋಗಿದ್ದ ದಿವ್ಯ ಎಂಬ ಬಾಲಕಿಯನ್ನು ಕರೆದೊಯ್ದು ಅತ್ಯಾಚಾರ ವೆಸಗಿ ಕೊಲೆ ಮಾಡಿರುವ ವಿಷಯ ತಿಳಿದು ಮನಸ್ಸಿಗೆ ತೀವ್ರ ಆಘಾತವಾಗಿದೆ.ಇಂತಹ ಘಟನೆಗಳು ಮಾನವ ಕುಲಕ್ಕೆ ನಾಚಿಕೆಯ ಸಂಗತಿ. ಇಂತಹ ನೀಚ ಕಾರ್ಯವೆಸಗಿರುವ ಪಾಪಿಗಳಿಗೆ ಯಾವ ಶಿಕ್ಷೆ ಕೊಟ್ಟರೂ ಕಡಿಮೆಯೇ.ರಾಜ್ಯ ಸರ್ಕಾರ ಕೂಡಲೇ ಆರೋಪಿ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಿ ಎಂದು ಜೆಡಿಎಸ್ ಯುವ ನಾಯಕ ನಿಖಿಲ್ ಕುಮಾರಸ್ವಾಮಿ ಒತ್ತಾಯಿಸಿದ್ದಾರೆ.
ಕುಮಾರಸ್ವಾಮಿ ಆಕ್ರೋಶ
ಮಳವಳ್ಳಿಯಲ್ಲಿ ಟ್ಯೂಶನ್ ಗೆ ಬಂದ 10 ವರ್ಷದ ಶಾಲಾ ಬಾಲಕಿಯ ಮೇಲೆ ಅತ್ಯಾಚಾರ ಎಸಗಿ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ನಾಗರೀಕ ಸಮಾಜ ತಲೆ ತಗ್ಗಿಸುವಂತಹ ಹೇಯ ಘಟನೆ. ತಪ್ಪು ಮಾಡಿದ ಅಪರಾಧಿಗೆ ಕಠಿಣ ಶಿಕ್ಷೆ ಆಗಲೇಬೇಕು ಹಾಗೂ ಆ ಪಾತಕಿಗೆ ಕ್ಷಮೆ ಎನ್ನುವುದೇ ಇರಬಾರದು. ಭವಿಷ್ಯದಲ್ಲಿ ಇಂಥ ನೀಚ ಘಟನೆಗಳು ಮರುಕಳಿಸದಂತೆ ಪೊಲೀಸರು ಕಟ್ಟೆಚ್ಚರ ವಹಿಸಬೇಕು ಎಂದು ಜೆಡಿಎಸ್ ನಾಯಕ, ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಆಗ್ರಹಿಸಿದ್ದಾರೆ.
ಸಂಸದೆ ಸುಮಾಲತಾ ಕಂಬನಿ
ಪುಟ್ಟ ಬಾಲಕಿ ಮೇಲೆ ಅಮಾನುಷ ಕೃತ್ಯ ಎಸಗಿರುವ ಅಪರಾಧಿಗೆ ಯಾವ ಶಿಕ್ಷೆಯು ಕಡಿಮೆ. ಅಪರಾಧಿಗೆ ಕಾನೂನಿನಲ್ಲಿ ಕೊಡಬಹುದಾದ ಅತ್ಯಂತ ಕಠಿಣ ಶಿಕ್ಷೆ ಅತಿ ಶೀಘ್ರದಲ್ಲಿ ಕೊಡುವಂತೆ ಪೊಲೀಸ್ ಮತ್ತು ನ್ಯಾಯಾಂಗದ ಮೂಲಕ ತೆಗೆದುಕೊಳ್ಳಬೇಕಾದ ಎಲ್ಲಾ ಕ್ರಮಗಳಿಗೆ ನಾನು ಬದ್ಧಳಾಗಿದ್ದೇನೆ. ಈ ಅಪರಾಧಿಗೆ ಸಿಗುವ ಶಿಕ್ಷೆ ಎಲ್ಲರಿಗೂ ಎಚ್ಚರಿಕೆಯಾಗಿರಬೇಕು, ಸಮಾಜಘಾತುಕರಿಗೆ ಒಂದು ಮರೆಯಲಾಗದ ಪಾಠವಾಗಬೇಕು. ಶಿಕ್ಷಕನನ್ನು ವಶಕ್ಕೆ ಪಡೆದ ಪೊಲೀಸರು ಇಂತಹ ಘೋರ ಕೃತ್ಯಗಳು ಇನ್ನು ಮುಂದೆ ಆಗದಂತೆ ತಡೆಯುವುದರಿಂದ ಮಾತ್ರ ನಾವು ಆಕೆಯ ಆತ್ಮಕ್ಕೆ ಶಾಂತಿ ಕೋರಲು ಸಾಧ್ಯ.
ಸಮಾಜವೇ ತಲೆ ತಗ್ಗಿಸುವಂತಹ ಈ ಕೃತ್ಯ ನನ್ನ ಮನಸ್ಸನ್ನು ಛಿದ್ರಗೊಳಿಸಿದೆ. ಯಾವ ತಂದೆ ತಾಯಿಗೂ ಬರಬಾರದ ನೋವು ಸಹಿಸಿಕೊಳ್ಳುವುದಾದರು ಹೇಗೆ. ಭಗವಂತ ಈ ನೋವನ್ನು ಇನ್ನು ಯಾರಿಗೂ ಕೊಡಬೇಡ ಎಂದು ಬೇಡಿಕೊಳ್ಳುತ್ತೇನೆ ಎಂದು ಸಂಸದೆ ಸುಮಲತಾ ಅಂಬರೀಷ್ ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ
ಸುಳ್ಯ
Sullia-ಸುಳ್ಯ: ಜಾನುವಾರು ಕಳ್ಳತನಕ್ಕೆ ಯತ್ನ: ಇಬ್ಬರು ಪೊಲೀಸ್ ವಶಕ್ಕೆ
ಮಾಂಸ ಮಾಡಿ ಮಾರಾಟ ಮಾಡುವ ಉದ್ದೇಶದಿಂದ ಜಾನುವಾರುಗಳನ್ನು ಕಳ್ಳತನ ಮಾಡಲು ಯತ್ನಿಸಿದ ಇಬ್ಬರನ್ನು ಸುಳ್ಯ ಪೊಲೀಸರು ವಶಕ್ಕೆ ಪಡೆದ ಘಟನೆ ನ.18ರ ಮುಂಜಾನೆ ಸುಳ್ಯ ಕಸಬಾ ಗ್ರಾಮದ ಗಾಂಧಿನಗರ ಶಾಲಾ ಮೈದಾನದ ಬಳಿ ನಡೆದಿದೆ.
ಸುಳ್ಯ: ಮಾಂಸ ಮಾಡಿ ಮಾರಾಟ ಮಾಡುವ ಉದ್ದೇಶದಿಂದ ಜಾನುವಾರುಗಳನ್ನು ಕಳ್ಳತನ ಮಾಡಲು ಯತ್ನಿಸಿದ ಇಬ್ಬರನ್ನು ಸುಳ್ಯ ಪೊಲೀಸರು ವಶಕ್ಕೆ ಪಡೆದ ಘಟನೆ ನ.18ರ ಮುಂಜಾನೆ ಸುಳ್ಯ ಕಸಬಾ ಗ್ರಾಮದ ಗಾಂಧಿನಗರ ಶಾಲಾ ಮೈದಾನದ ಬಳಿ ನಡೆದಿದೆ.
ಜಾನುವಾರುಗಳನ್ನು ಕಳ್ಳತನ ಮಾಡಿ ಸಾಗಾಟ ಮಾಡಲು ಯತ್ನಿಸುತ್ತಿರುವ ಬಗ್ಗೆ ಸುಳ್ಯ ಪೊಲೀಸ್ ಠಾಣೆಯ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಪೊಲೀಸ್ ಉಪನಿರೀಕ್ಷಕ ಉದಯ ರವಿ ಅವರಿಗೆ ಮಾಹಿತಿ ಲಭಿಸಿತ್ತು. ತಕ್ಷಣ ಸಿಬ್ಬಂದಿಗಳೊಂದಿಗೆ ಸ್ಥಳಕ್ಕೆ ತೆರಳಿ ಪರಿಶೀಲಿಸಿದಾಗ, ಶಾಲಾ ಮೈದಾನದಲ್ಲಿದ್ದ ಕಂಬವೊಂದಕ್ಕೆ ಎರಡು ಜಾನುವಾರುಗಳನ್ನು ಹಗ್ಗದಿಂದ ಕಟ್ಟಿ ಹಾಕಿರುವುದು ಕಂಡುಬಂದಿದೆ.
ಸ್ಥಳದಲ್ಲಿದ್ದ ಇಬ್ಬರನ್ನು ವಶಕ್ಕೆ ಪಡೆದು ವಿಚಾರಿಸಿದಾಗ, ಅವರು ಸುಳ್ಯ ಆಲೆಟ್ಟಿ ನಿವಾಸಿಗಳಾದ ಹಾಶಿರ್ (28) ಮತ್ತು ಸಂಶುದ್ದೀನ್ (25) ಎಂದು ತಿಳಿದುಬಂದಿದೆ.
ಜಾನುವಾರುಗಳನ್ನು ಕಳ್ಳತನ ಮಾಡಿ ಮಾಂಸವನ್ನಾಗಿ ಮಾಡಿ ಮಾರಾಟ ಮಾಡುವ ಉದ್ದೇಶ ಹೊಂದಿದ್ದಾಗಿ ಆರೋಪಿಗಳು ವಿಚಾರಣೆ ವೇಳೆ ತಿಳಿಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
ಕೃತ್ಯಕ್ಕೆ ಬಳಸಲು ಸ್ಥಳಕ್ಕೆ ತಂದಿದ್ದ ದ್ವಿಚಕ್ರ ವಾಹನ ಹಾಗೂ ಎರಡು ಜಾನುವಾರುಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಈ ಕುರಿತು ಸುಳ್ಯ ಪೊಲೀಸ್ ಠಾಣೆಯಲ್ಲಿ ಅಪರಾಧ ಸಂಖ್ಯೆ 161/2026ರಂತೆ ಭಾರತೀಯ ನ್ಯಾಯ ಸಂಹಿತೆ (BNS) 2023ರ ಕಲಂ 303(2) ಜೊತೆಗೆ 62 ಹಾಗೂ ಕರ್ನಾಟಕ ಗೋಹತ್ಯೆ ನಿಷೇಧ ಕಾಯ್ದೆಯ ಕಲಂ 7 ಮತ್ತು 15ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
ಅಪರಾಧ
Madikeri-ಗಾಂಜಾ ಸೇವಿಸಿದವನಿಗೆ ವಿಭಿನ್ನ ಶಿಕ್ಷೆ: ದಿನವಿಡೀ ಟ್ರಾಫಿಕ್ ಕರ್ತವ್ಯ ನಿರ್ವಹಿಸಿದ ಆರೋಪಿ
ಗಾಂಜಾ ಸೇವನೆ ಪ್ರಕರಣದಲ್ಲಿ ನ್ಯಾಯಾಲಯ ವಿಧಿಸಿದ ಶಿಕ್ಷೆಯ ಭಾಗವಾಗಿ ಆರೋಪಿಯೊಬ್ಬರು ಪೊಲೀಸರೊಂದಿಗೆ ಕೈಜೋಡಿಸಿ ಸಾರ್ವಜನಿಕರ ಸಂಚಾರ ನಿಯಂತ್ರಣ ಕರ್ತವ್ಯ ನಿರ್ವಹಿಸಿದ ಅಪರೂಪದ ಘಟನೆ ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲ್ಲೂಕಿನ ಸಿದ್ದಾಪುರ ಪಟ್ಟಣದಲ್ಲಿ ನಡೆದಿದೆ.
ಮಡಿಕೇರಿ, ನ.17: ಗಾಂಜಾ ಸೇವನೆ ಪ್ರಕರಣದಲ್ಲಿ ನ್ಯಾಯಾಲಯ ವಿಧಿಸಿದ ಶಿಕ್ಷೆಯ ಭಾಗವಾಗಿ ಆರೋಪಿಯೊಬ್ಬರು ಪೊಲೀಸರೊಂದಿಗೆ ಕೈಜೋಡಿಸಿ ಸಾರ್ವಜನಿಕರ ಸಂಚಾರ ನಿಯಂತ್ರಣ ಕರ್ತವ್ಯ ನಿರ್ವಹಿಸಿದ ಅಪರೂಪದ ಘಟನೆ ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲ್ಲೂಕಿನ ಸಿದ್ದಾಪುರ ಪಟ್ಟಣದಲ್ಲಿ ನಡೆದಿದೆ.
ಗಾಂಜಾ ಸೇವನೆ ಮಾಡಿದ ಆರೋಪದಡಿ ಸಿದ್ದಾಪುರ ನಿವಾಸಿ ಆಸೀಮ್ ಎಂಬಾತನಿಗೆ ನ್ಯಾಯಾಲಯ ₹5,000 ದಂಡ ವಿಧಿಸಿತ್ತು. ಇದರೊಂದಿಗೆ ಸಮುದಾಯ ಸೇವೆಯನ್ನೂ ಶಿಕ್ಷೆಯ ಭಾಗವಾಗಿ ನೀಡುವಂತೆ ಆದೇಶಿಸಿತ್ತು.
ದಿನವಿಡೀ ಸಂಚಾರ ನಿಯಂತ್ರಣ ಕರ್ತವ್ಯ
ನ್ಯಾಯಾಲಯದ ಆದೇಶದಂತೆ ನವೆಂಬರ್ 15ರಂದು ಆಸೀಮ್ ಸಿದ್ದಾಪುರ ಪಟ್ಟಣದಲ್ಲಿ ಪೊಲೀಸರ ಮೇಲ್ವಿಚಾರಣೆಯಲ್ಲಿ ಸಂಚಾರ ನಿಯಂತ್ರಣ ಕಾರ್ಯದಲ್ಲಿ ತೊಡಗಿಸಿಕೊಂಡರು. ಪಟ್ಟಣದ ಮುಖ್ಯ ರಸ್ತೆಯಲ್ಲಿ ವಾಹನಗಳ ಸುಗಮ ಸಂಚಾರಕ್ಕೆ ವ್ಯವಸ್ಥೆ ಮಾಡುವುದರ ಜೊತೆಗೆ ಪಾದಚಾರಿಗಳ ಸಂಚಾರವನ್ನೂ ನಿಯಂತ್ರಿಸಿ ದಿನವಿಡೀ ಕರ್ತವ್ಯ ನಿರ್ವಹಿಸುವ ಮೂಲಕ ನ್ಯಾಯಾಲಯ ವಿಧಿಸಿದ್ದ ಸಮುದಾಯ ಸೇವೆಯ ಶಿಕ್ಷೆಯನ್ನು ಪೂರ್ಣಗೊಳಿಸಿದರು.
ಸಾಮಾಜಿಕ ಜವಾಬ್ದಾರಿ ಮೂಡಿಸುವ ಉದ್ದೇಶ
ಅಪರಾಧಿಗಳಿಗೆ ಕೇವಲ ದಂಡ ಅಥವಾ ಜೈಲು ಶಿಕ್ಷೆ ವಿಧಿಸುವ ಬದಲು, ಸಾರ್ವಜನಿಕ ಸೇವೆಯಲ್ಲಿ ತೊಡಗಿಸುವ ಮೂಲಕ ಅವರಲ್ಲಿ ಸಾಮಾಜಿಕ ಜವಾಬ್ದಾರಿ ಹಾಗೂ ತಮ್ಮ ತಪ್ಪಿನ ಅರಿವು ಮೂಡಿಸುವ ಉದ್ದೇಶದಿಂದ ನ್ಯಾಯಾಲಯ ಇಂತಹ ವಿಭಿನ್ನ ಶಿಕ್ಷೆಯನ್ನು ವಿಧಿಸಿದೆ.
ಇದೇ ವರ್ಷದ ಮಾರ್ಚ್ನಲ್ಲಿ ಕಡೂರು ಉಪವಿಭಾಗದಲ್ಲಿ ಮದ್ಯಪಾನ ಮಾಡಿ ಬೈಕ್ ಚಾಲನೆ ಮಾಡಿದ್ದ ವ್ಯಕ್ತಿಯೊಬ್ಬರಿಗೆ ರಸ್ತೆ ಬದಿಯಲ್ಲಿ ನಿಂತು ಸಂಚಾರ ನಿಯಮಗಳ ಜಾಗೃತಿ ಫಲಕ ಹಿಡಿಯುವಂತೆ ನ್ಯಾಯಾಲಯ ಆದೇಶಿಸಿತ್ತು.
ಸಿದ್ದಾಪುರದಲ್ಲಿ ಜಾರಿಗೊಂಡಿರುವ ಈ ವಿಭಿನ್ನ ಶಿಕ್ಷೆಯ ಮಾದರಿ ಸಾರ್ವಜನಿಕ ವಲಯದಲ್ಲಿ ಗಮನ ಸೆಳೆದಿದ್ದು, ಅಪರಾಧಿಗಳಿಗೆ ಪಾಠ ಕಲಿಸುವುದರ ಜೊತೆಗೆ ಸಮಾಜಮುಖಿ ಚಿಂತನೆ ಬೆಳೆಸುವ ಪ್ರಯತ್ನವಾಗಿ ಮೆಚ್ಚುಗೆಗೆ ಪಾತ್ರವಾಗಿದೆ.
ಅಪರಾಧ
Mangalore-Big Shocking : ಮಂಗಳೂರು: ‘ಕೋಲ್ಡ್ ಪ್ರೆಸ್ಡ್’ ಹೆಸರಿನಲ್ಲಿ ಗ್ರಾಹಕರಿಗೆ ವಂಚನೆ ಆರೋಪ; ಪ್ರತಿಷ್ಠಿತ ‘ಬೋಳಾಸ್’ ಆಗ್ರೋ ಘಟಕದಿಂದ 1,240 ಕೆ.ಜಿ. ಅಡುಗೆ ಎಣ್ಣೆ ವಶ..!
ಗ್ರಾಹಕರನ್ನು ದಾರಿತಪ್ಪಿಸುವ ರೀತಿಯಲ್ಲಿ ಮಿಸ್ಬ್ರಾಂಡಿಂಗ್ ಹಾಗೂ ಲೇಬಲಿಂಗ್ ನಿಯಮಗಳನ್ನು ಉಲ್ಲಂಘಿಸಿರುವ ಆರೋಪದ ಹಿನ್ನೆಲೆಯಲ್ಲಿ, ದಕ್ಷಿಣ ಕನ್ನಡ ಜಿಲ್ಲೆಯ ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿರುವ ‘ಬೋಲಾಸ್ ಆಗ್ರೋ ಪ್ರೈವೇಟ್ ಲಿಮಿಟೆಡ್’ ಆಹಾರೋತ್ಪನ್ನ ಘಟಕದ ಮೇಲೆ ಆಹಾರ ಸುರಕ್ಷತಾ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಈ ವೇಳೆ ಒಟ್ಟು 1,240 ಕೆ.ಜಿ. ಅಡುಗೆ ಎಣ್ಣೆಯನ್ನು ವಶಪಡಿಸಿಕೊಳ್ಳಲಾಗಿದೆ.
ದಕ್ಷಿಣ ಕನ್ನಡ, ನ.17: ಗ್ರಾಹಕರನ್ನು ದಾರಿತಪ್ಪಿಸುವ ರೀತಿಯಲ್ಲಿ ಮಿಸ್ಬ್ರಾಂಡಿಂಗ್ ಹಾಗೂ ಲೇಬಲಿಂಗ್ ನಿಯಮಗಳನ್ನು ಉಲ್ಲಂಘಿಸಿರುವ ಆರೋಪದ ಹಿನ್ನೆಲೆಯಲ್ಲಿ, ದಕ್ಷಿಣ ಕನ್ನಡ ಜಿಲ್ಲೆಯ ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿರುವ ‘ಬೋಲಾಸ್ ಆಗ್ರೋ ಪ್ರೈವೇಟ್ ಲಿಮಿಟೆಡ್’ ಆಹಾರೋತ್ಪನ್ನ ಘಟಕದ ಮೇಲೆ ಆಹಾರ ಸುರಕ್ಷತಾ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಈ ವೇಳೆ ಒಟ್ಟು 1,240 ಕೆ.ಜಿ. ಅಡುಗೆ ಎಣ್ಣೆಯನ್ನು ವಶಪಡಿಸಿಕೊಳ್ಳಲಾಗಿದೆ.
ಕಚ್ಚಾ ಎಣ್ಣೆಗೆ ‘ಕೋಲ್ಡ್ ಪ್ರೆಸ್ಡ್’ ಲೇಬಲ್!
ಭಾರತೀಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರದ (FSSAI) ಅಧಿಕಾರಿಗಳು ಘಟಕದಲ್ಲಿ ಪರಿಶೀಲನೆ ನಡೆಸಿದಾಗ ಲೇಬಲಿಂಗ್ ಹಾಗೂ ಬ್ರಾಂಡಿಂಗ್ ಪ್ರಕ್ರಿಯೆಯಲ್ಲಿ ಹಲವು ಲೋಪದೋಷಗಳು ಕಂಡುಬಂದಿವೆ.
ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆಯಿಂದ ಕಚ್ಚಾ ಕಡಲೆಕಾಯಿ ಎಣ್ಣೆಯನ್ನು (Raw Groundnut Oil) ಖರೀದಿಸಿ, ಅದನ್ನು ‘ಕೋಲ್ಡ್ ಪ್ರೆಸ್ಡ್ ಕಡಲೆಕಾಯಿ ಎಣ್ಣೆ’ (Cold Pressed Groundnut Oil) ಎಂಬ ಹೆಸರಿನಲ್ಲಿ ಮರುಪ್ಯಾಕ್ ಮಾಡಲಾಗುತ್ತಿತ್ತು ಎಂಬುದು ಪರಿಶೀಲನೆ ವೇಳೆ ಬೆಳಕಿಗೆ ಬಂದಿದೆ. ಉತ್ಪನ್ನದ ನೈಜ ಸ್ವರೂಪಕ್ಕೆ ವಿರುದ್ಧವಾಗಿ ಲೇಬಲ್ ಬಳಸುವ ಮೂಲಕ ಗ್ರಾಹಕರನ್ನು ದಾರಿತಪ್ಪಿಸಲಾಗುತ್ತಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಅಧಿಕಾರಿಗಳು ಜಪ್ತಿ ಕ್ರಮ ಕೈಗೊಂಡಿದ್ದಾರೆ.
ವಶಪಡಿಸಿಕೊಂಡ ಎಣ್ಣೆಯ ಪ್ರಮಾಣ ಹೀಗಿದೆ:
ಘಟಕದಿಂದ ಒಟ್ಟು 1,240 ಕೆ.ಜಿ. ತೂಕದ ಅಡುಗೆ ಎಣ್ಣೆಯನ್ನು ಅಧಿಕಾರಿಗಳು ವಶಪಡಿಸಿಕೊಂಡಿದ್ದು, ಅದರ ವಿವರ ಹೀಗಿದೆ:
- ಕಡಲೆಕಾಯಿ ಎಣ್ಣೆ (ಬಾಕ್ಸ್): ತಲಾ 10 ಕೆ.ಜಿ. ತೂಕದ 11 ಬಾಕ್ಸ್ಗಳು.
- ಕಡಲೆಕಾಯಿ ಎಣ್ಣೆ (ಕ್ಯಾನ್): ತಲಾ 35 ಲೀಟರ್ನ 30 ಕ್ಯಾನ್ಗಳು.
- ತೆಂಗಿನ ಎಣ್ಣೆ (ಬಾಕ್ಸ್): ತಲಾ 20 ಕೆ.ಜಿ. ತೂಕದ 4 ಬಾಕ್ಸ್ಗಳು.
- ಮಿಸ್ಬ್ರಾಂಡಿಂಗ್ ಹಾಗೂ ಲೇಬಲಿಂಗ್ ನಿಯಮಗಳ ಉಲ್ಲಂಘನೆ ವಿರುದ್ಧ ಆಹಾರ ಸುರಕ್ಷತಾ ಇಲಾಖೆ ಕೈಗೊಂಡಿರುವ ಈ ಕ್ರಮವು ಗ್ರಾಹಕರ ಹಿತಾಸಕ್ತಿ ಮತ್ತು ಆಹಾರ ಉತ್ಪನ್ನಗಳ ಗುಣಮಟ್ಟದ ದೃಷ್ಟಿಯಿಂದ ಮಹತ್ವ ಪಡೆದುಕೊಂಡಿದೆ.
-
ರಾಜಕೀಯ21 hours agoPuttur-Big Breaking: ನಾಳೆ ಪುತ್ತೂರಿಗೆ ಬಿಜೆಪಿ ಘಟಾನುಘಟಿ ನಾಯಕರ ದಂಡು; ವಿಜಯೇಂದ್ರ, ಆರ್. ಅಶೋಕ್ ಸಹಿತ ಹಲವು ಹಿರಿಯ ನಾಯಕರ ಭೇಟಿ
-
ಸಿನೆಮಾ21 hours agoRamya Krishnan-ಪತಿಯಿಂದ ದೂರವಿದ್ದರೂ ದಾಂಪತ್ಯ ಗಟ್ಟಿಯಾಗಿದೆ..! ವಿಚ್ಛೇದನ ವದಂತಿಗೆ ರಮ್ಯಾ ಕೃಷ್ಣನ್ ಸ್ಪಷ್ಟನೆ
-
ಅಂತರ ರಾಜ್ಯ21 hours agoElection Commission-ಯುಪಿಯಲ್ಲಿ 1.27 ಕೋಟಿ ಹಿಂದೂ ಮತದಾರರು ನಾಪತ್ತೆ? ಆದಿತ್ಯನಾಥ್ ಆರೋಪಕ್ಕೆ ಚುನಾವಣಾ ಆಯೋಗದ ಸ್ಪಷ್ಟನೆ
-
ಬಿಗ್ ನ್ಯೂಸ್4 hours agoPuttur-ಪುತ್ತೂರು: ದರ್ಬೆಯಲ್ಲಿ ಭೀಕರ ಕಾರು ಅಪಘಾತ: ಓರ್ವ ಮೃತ್ಯು, ಮತ್ತೊಬ್ಬರಿಗೆ ಗಂಭೀರ ಗಾಯ
-
ಕಾರ್ಯಕ್ರಮಗಳು21 hours agoPuttur-ಪುತ್ತೂರು: ವಿದ್ಯಾಭಾರತಿ ಅಖಿಲ ಭಾರತ ಶಿಕ್ಷಾ ಸಂಸ್ಥಾನ ಹಾಗೂ ವಿವೇಕಾನಂದ ಸೆಂಟ್ರಲ್ ಸ್ಕೂಲ್ ಸಹಯೋಗದಲ್ಲಿ ರಾಷ್ಟ್ರೀಯ ಈಜು ಚಾಂಪಿಯನ್ಶಿಪ್-2026
-
ಅಂತರ ರಾಜ್ಯ21 hours agoChinmaya Krishna Das-ಚಟ್ಟೋಗ್ರಾಮ್ನಿಂದ ಢಾಕಾ ಜೈಲಿಗೆ ಸ್ಥಳಾಂತರ: ಹಿಂದೂ ಸನ್ಯಾಸಿ ಚಿನ್ಮಯ ಕೃಷ್ಣ ದಾಸ್ ಆರೋಗ್ಯದ ಬಗ್ಗೆ ವಕೀಲರ ಕಳವಳ
-
ಬಿಗ್ ನ್ಯೂಸ್4 hours agoTransfer-ರಾಜ್ಯ ಪೊಲೀಸ್ ಇಲಾಖೆಯಲ್ಲಿ ಭಾರಿ ಬದಲಾವಣೆ: 32 ಐಪಿಎಸ್ ಅಧಿಕಾರಿಗಳ ವರ್ಗಾವಣೆ – ಪಶ್ಚಿಮ ವಲಯ ಐಜಿಪಿಯಾಗಿ ಶಶಿಕುಮಾರ್
-
ಮಂಗಳೂರು4 hours agoFarmers-ಕೋಳಿ ಫಾರಂಗಳಿಂದ ಹೆಚ್ಚುತ್ತಿರುವ ನೊಣಗಳು : ಕಂಪನಿಗಳ ವಿರುದ್ಧ ಹೋರಾಟಕ್ಕೆ ರೈತರು ಸಜ್ಜು















