ಚಿನ್ನ-ಬೆಳ್ಳಿ ದರ
Gold Rate Today : 3 ದಿನಗಳ ಬಳಿಕ ಏರಿಕೆ ಕಂಡ ಗೋಲ್ಡ್ – ಬೆಳ್ಳಿ ದರದಲ್ಲಿ ಕುಸಿತ – ಇಲ್ಲಿದೆ ರೇಟ್ ಲಿಸ್ಟ್
ಬೆಂಗಳೂರು: ಭಾರತದಲ್ಲಿ 3 ದಿನಗಳಿಂದ ಕುಸಿತ ಕಂಡಿದ್ದ ಚಿನ್ನದ ಬೆಲೆ (Gold Rate) ಇಂದು ಏರಿಕೆಯಾಗಿದೆ. ಇಂದು ಚಿನ್ನದ ದರ 110 ರೂ. ಏರಿಕೆಯಾಗಿದೆ. ಬೆಳ್ಳಿ ಬೆಲೆ (Silver Price) ಇಂದು 1,200 ರೂ. ಕುಸಿತವಾಗಿದೆ. ನೀವು ಕೂಡ ಬಂಗಾರ ಖರೀದಿಸಲು ಯೋಚಿಸಿದ್ದರೆ ಭಾರತದ ಪ್ರಮುಖ ನಗರಗಳಲ್ಲಿ ಇಂದಿನ ಚಿನ್ನದ ಬೆಲೆ ಎಷ್ಟಿದೆ? ಎಂಬ ಮಾಹಿತಿ ಇಲ್ಲಿದೆ.
(Gold Rate Today) ಇಂದು ಅಕ್ಟೋಬರ್ 14 ಶುಕ್ರವಾರ ಬೆಳಗಿನ ವೇಳೆಗೆ ದೇಶದಲ್ಲಿ 1 ಗ್ರಾಂ (24 ಕ್ಯಾರಟ್) ಬಂಗಾರದ ಬೆಲೆ ₹5,100 ರೂ. ದಾಖಲಾಗಿದೆ. ಬೆಂಗಳೂರಿನಲ್ಲಿ 1 ಗ್ರಾಂ (24 ಕ್ಯಾರಟ್) ಬಂಗಾರಕ್ಕೆ ₹5,105 ರೂಪಾಯಿ ನಿಗದಿಯಾಗಿದೆ.
ದೈನಂದಿನ ಬೆಲೆ ಪ್ರಕ್ರಿಯೆಯಲ್ಲಿ ಇಂದು ಬೆಳಗಿನ ವೇಳೆಗೆ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ 10 ಗ್ರಾಂ (22 ಕ್ಯಾರಟ್) ಚಿನ್ನದ ಬೆಲೆಗೆ ₹46,800 ರೂಪಾಯಿ ನಿಗದಿಯಾಗಿದೆ. ಬೆಂಗಳೂರಿನಲ್ಲಿ 10 ಗ್ರಾಂ ಅಪರಂಜಿ ಚಿನ್ನದ (24 ಕ್ಯಾರಟ್) ಬೆಲೆ ₹51,050 ರೂಪಾಯಿ ದಾಖಲಾಗಿದೆ.
ಪ್ರಮುಖ ನಗರಗಳಲ್ಲಿ ಇಂದು 10 ಗ್ರಾಂ ಚಿನ್ನದ ಬೆಲೆ ಹೀಗಿದೆ:
ಬೆಂಗಳೂರು: ₹46,800 (22 ಕ್ಯಾರಟ್) – ₹51,050 (24 ಕ್ಯಾರಟ್)
ಚೆನ್ನೈ: ₹47,600 (22 ಕ್ಯಾರಟ್) – ₹51,930 (24 ಕ್ಯಾರಟ್)
ದಿಲ್ಲಿ: ₹46,900 (22 ಕ್ಯಾರಟ್) – ₹51,150 (24 ಕ್ಯಾರಟ್)
ಹೈದರಾಬಾದ್: ₹46,750 (22 ಕ್ಯಾರಟ್) – ₹51,000 (24 ಕ್ಯಾರಟ್)
ಕೋಲ್ಕತಾ: ₹46,750 (22 ಕ್ಯಾರಟ್) – ₹51,000 (24 ಕ್ಯಾರಟ್)
ಮಂಗಳೂರು: ₹46,800 (22 ಕ್ಯಾರಟ್) – ₹51,050 (24 ಕ್ಯಾರಟ್)
ಮುಂಬಯಿ: ₹46,750 (22 ಕ್ಯಾರಟ್) – ₹51,000 (24 ಕ್ಯಾರಟ್)
ಮೈಸೂರು: ₹46,800 (22 ಕ್ಯಾರಟ್) – ₹51,050 (24 ಕ್ಯಾರಟ್)
ಬೆಳ್ಳಿ ದರ (Silver Rate)
ದೇಶದಲ್ಲಿ ಬೆಳ್ಳಿ ಬೆಲೆ ಒಂದು ಕೆಜಿಗೆ ₹58,300 ರೂಪಾಯಿ ದಾಖಲಾಗಿದೆ. ಬೆಂಗಳೂರಿನಲ್ಲಿ ಒಂದು ಕೆಜಿ ಬೆಳ್ಳಿ ಬೆಲೆ ₹62,500 ರೂ. ಇದೆ. ದೇಶಾದ್ಯಂತ ಕೆಲವು ನಗರಗಳನ್ನು ಹೊರತುಪಡಿಸಿ ಅನೇಕ ಕಡೆ ಬೆಳ್ಳಿ ಬೆಲೆಯಲ್ಲಿ ಏಕರೂಪವಿದೆ. ಚೆನ್ನೈ, ವಿಜಯವಾಡ, ಹೈದರಾಬಾದ್, ವಿಶಾಖಪಟ್ಟಣಂದಲ್ಲಿಯೂ ₹62,500 ರೂ. ನಿಗದಿಯಾಗಿದೆ.
Diabetes Control: ಡಯಾಬಿಟಿಸ್ ನ್ನು ನಿಯಂತ್ರಿಸಲು ಅಡುಗೆ ಮನೆಯಲ್ಲಿರುವ ಈ ಐದು ವಸ್ತುಗಳನ್ನು ಸೇವಿಸಿ
ಒಟ್ಟಾರೆ ಇಂದು ಬೆಳಗ್ಗಿನ ವೇಳೆಗೆ ದೇಶದ ಪ್ರಮುಖ ಮಹಾನಗರಗಳಲ್ಲಿ ಹಳದಿ ಲೋಹದ ಬೆಲೆಯಲ್ಲಿ ಏರಿಕೆ ಕಂಡು ಬಂದರೆ, ಬೆಳ್ಳಿ ಬೆಲೆಯಲ್ಲಿ ಕುಸಿತವಾಗಿದೆ . ಎಂದಿನಂತೆ ಬೆಳಗ್ಗೆ ಹನ್ನೊಂದು ಗಂಟೆ ವೇಳೆಗೆ ಮತ್ತೆ ಬೆಲೆ ವ್ಯತ್ಯಯವಾಗುವ ಸಾಧ್ಯತೆ ಇದೆ.
ಅಂತಾರಾಷ್ಟ್ರೀಯ ಟ್ರೆಂಡ್, ಚಿನ್ನದ ಮೇಲಿನ ಆಮದು ಸುಂಕ ಮತ್ತು ಡಾಲರ್ ಎದುರು ರೂಪಾಯಿ ಮೌಲ್ಯವನ್ನು ಆಧರಿಸಿ ಆಯಾ ದಿನದ ಬಂಗಾರ ಹಾಗೂ ಬೆಳ್ಳಿ ದರ ನಿರ್ಧಾರವಾಗುತ್ತದೆ. ನಿಮ್ಮ ನಗರಗಳಲ್ಲಿ ಇಂದಿನ ದಿನ ಚಿನ್ನ ಮತ್ತು ಬೆಳಿಗೆ ಎಷ್ಟು ದರ ಇವೆ ಅನ್ನೋದನ್ನು ಇಲ್ಲಿ ನೀವು ಪ್ರತಿ ದಿನ ತಿಳಿದುಕೊಳ್ಳಬಹುದು.
Scholarship : ವಿದ್ಯಾಸಿರಿ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಅಹ್ವಾನ – ಯಾರೆಲ್ಲ ಅರ್ಜಿ ಸಲ್ಲಿಸಬಹುದು? ನಿಯಮಗಳೇನು?
ಚಿನ್ನ-ಬೆಳ್ಳಿ ದರ
Gold Rate Today -ಅಮೆರಿಕ-ಇರಾನ್ ಸಂಘರ್ಷದ ಎಫೆಕ್ಟ್: 10 ಗ್ರಾಂ ಚಿನ್ನಕ್ಕೆ ಬರೋಬ್ಬರಿ ₹1.48 ಲಕ್ಷ; ಬೆಳ್ಳಿಯೂ ದುಬಾರಿ
ಇಂದು 10 ಗ್ರಾಂ ಚಿನ್ನದ ಬೆಲೆಯಲ್ಲಿ ಬರೋಬ್ಬರಿ 2,940 ರೂ. ಏರಿಕೆಯಾಗಿದ್ದು, ಒಟ್ಟು ದರ 1,48,580 ರೂ. ತಲುಪಿದೆ. ಪ್ರತಿ ಗ್ರಾಂಗೆ 294 ರೂ. ಹೆಚ್ಚಳವಾಗಿದ್ದು, 14,858 ರೂ. ದಾಖಲಾಗಿದೆ. ಬೆಳ್ಳಿಯ ದರದಲ್ಲಿ ಇಂದು ಒಂದೇ ದಿನ 10,000 ರೂ. ಏರಿಕೆಯಾಗಿದ್ದು, ಕೆಜಿ ಬೆಳ್ಳಿಯ ಬೆಲೆ 2,60,000 ರೂ. ನೊಂದಿಗೆ ಹೊಸ ದಾಖಲೆ ಬರೆದಿದೆ.
ಬೆಂಗಳೂರು: ಜಾಗತಿಕ ರಾಜಕೀಯ ಬೆಳವಣಿಗೆಗಳು ಅಂತರಾಷ್ಟ್ರೀಯ ಮಾರುಕಟ್ಟೆಯ ಮೇಲೆ ಭಾರಿ ಪ್ರಭಾವ ಬೀರಿದ್ದು, ಚಿನ್ನ ಮತ್ತು ಬೆಳ್ಳಿಯ ಬೆಲೆಯಲ್ಲಿ ಭಾರಿ ಏರಿಕೆ ಕಂಡುಬಂದಿದೆ. ಅಮೆರಿಕ ಮತ್ತು ಇರಾನ್ ನಡುವಿನ ಉದ್ವಿಗ್ನ ಪರಿಸ್ಥಿತಿ ಹಾಗೂ ಮಧ್ಯಪ್ರಾಚ್ಯದ ಸಂಘರ್ಷದ ಹಿನ್ನೆಲೆಯಲ್ಲಿ ಹೂಡಿಕೆದಾರರು ಚಿನ್ನದತ್ತ ಮುಖ ಮಾಡಿರುವುದು ಈ ಬೆಲೆ ಏರಿಕೆಗೆ ಪ್ರಮುಖ ಕಾರಣವಾಗಿದೆ.
ಇಂದಿನ ಚಿನ್ನದ ದರ ವಿವರ (ಜೂನ್ 12, 2026):
24 ಕ್ಯಾರೆಟ್ ಚಿನ್ನ (ಶುದ್ಧ ಚಿನ್ನ):
ಇಂದು 10 ಗ್ರಾಂ ಚಿನ್ನದ ಬೆಲೆಯಲ್ಲಿ ಬರೋಬ್ಬರಿ 2,940 ರೂ. ಏರಿಕೆಯಾಗಿದ್ದು, ಒಟ್ಟು ದರ 1,48,580 ರೂ. ತಲುಪಿದೆ. ಪ್ರತಿ ಗ್ರಾಂಗೆ 294 ರೂ. ಹೆಚ್ಚಳವಾಗಿದ್ದು, 14,858 ರೂ. ದಾಖಲಾಗಿದೆ.
22 ಕ್ಯಾರೆಟ್ ಚಿನ್ನ (ಆಭರಣ ಚಿನ್ನ):
ಆಭರಣ ಚಿನ್ನದ ಬೆಲೆಯೂ ಏರಿಕೆಯ ಹಾದಿಯಲ್ಲಿದ್ದು, 10 ಗ್ರಾಂಗೆ 2,700 ರೂ. ಹೆಚ್ಚಳವಾಗಿದೆ. ಇದರೊಂದಿಗೆ 22 ಕ್ಯಾರೆಟ್ ಚಿನ್ನದ ಬೆಲೆ 1,36,200 ರೂ. ಗೆ ತಲುಪಿದೆ.
ಬೆಳ್ಳಿ ಬೆಲೆಯಲ್ಲಿ ಭಾರಿ ಜಿಗಿತ:
ಬೆಳ್ಳಿಯ ದರದಲ್ಲಿ ಇಂದು ಒಂದೇ ದಿನ 10,000 ರೂ. ಏರಿಕೆಯಾಗಿದ್ದು, ಕೆಜಿ ಬೆಳ್ಳಿಯ ಬೆಲೆ 2,60,000 ರೂ. ನೊಂದಿಗೆ ಹೊಸ ದಾಖಲೆ ಬರೆದಿದೆ.
ಬೆಲೆ ಏರಿಕೆಗೆ ಕಾರಣವೇನು?
ಅಮೆರಿಕ ಮತ್ತು ಇರಾನ್ ನಡುವಿನ ಸಂಘರ್ಷ ತಾರಕಕ್ಕೇರಿರುವುದು ಜಾಗತಿಕ ಮಾರುಕಟ್ಟೆಯಲ್ಲಿ ಆತಂಕ ಮೂಡಿಸಿದೆ. ಇರಾನ್ ಪಡೆಗಳು ಗಲ್ಫ್ ರಾಷ್ಟ್ರಗಳಲ್ಲಿನ ಅಮೆರಿಕದ ಸೇನಾ ನೆಲೆಗಳ ಮೇಲೆ ದಾಳಿ ನಡೆಸಿರುವುದು ಮತ್ತು ಹಾರ್ಮುಜ್ ಜಲಸಂಧಿಯನ್ನು ಬಂದ್ ಮಾಡಿರುವುದು ತೈಲ ಬೆಲೆ ಏರಿಕೆಗೆ ದಾರಿ ಮಾಡಿಕೊಟ್ಟಿದೆ. ಇದರ ಜೊತೆಗೆ ಒಮಾನ್ ಕರಾವಳಿಯಲ್ಲಿ ಭಾರತದ ಹಡಗುಗಳ ಮೇಲೆ ಸರಣಿ ದಾಳಿಗಳು ನಡೆದಿರುವುದು ಮಾರುಕಟ್ಟೆಯ ಏರುಪೇರಿಗೆ ಕಾರಣವಾಗಿದೆ.
ಆದರೆ, ಅಂತಿಮವಾಗಿ ಅಮೆರಿಕ ಅಧ್ಯಕ್ಷ ಟ್ರಂಪ್ ಅವರು ಇರಾನ್ ಮೇಲಿನ ಯೋಜಿತ ದಾಳಿಯನ್ನು ರದ್ದುಗೊಳಿಸಿ, ಶಾಂತಿ ಸಂಧಾನಕ್ಕೆ ಮುಂದಾಗುವುದಾಗಿ ಹೇಳಿರುವುದು ಮಾರುಕಟ್ಟೆಯಲ್ಲಿ ಸಕಾರಾತ್ಮಕ ಸಂಚಲನ ಮೂಡಿಸಿದೆ. ಸುರಕ್ಷಿತ ಹೂಡಿಕೆಯ ದೃಷ್ಟಿಯಿಂದ ಚಿನ್ನ ಮತ್ತು ಬೆಳ್ಳಿಗೆ ಬೇಡಿಕೆ ಹೆಚ್ಚಾಗಿರುವುದು ಬೆಲೆ ಏರಿಕೆಗೆ ಪುಷ್ಟಿ ನೀಡಿದೆ.
ಚಿನ್ನ-ಬೆಳ್ಳಿ ದರ
Gold Rate Today -ಆಭರಣ ಪ್ರಿಯರಿಗೆ ಬಂಪರ್ ಗುಡ್ ನ್ಯೂಸ್: ಒಂದೇ ದಿನ ಸಾವಿರ ರೂಪಾಯಿ ಇಳಿಕೆ ಕಂಡ ಚಿನ್ನದ ಬೆಲೆ..!
ವಾರದ ಮೊದಲ ದಿನವಾದ ಸೋಮವಾರ ಆಭರಣ ಖರೀದಿದಾರರಿಗೆ ದೊಡ್ಡ ಸಿಹಿ ಸುದ್ದಿ ಸಿಕ್ಕಿದೆ. ಜೂನ್ ತಿಂಗಳ ಆರಂಭದಿಂದಲೇ ಇಳಿಕೆಯ ಹಾದಿ ಹಿಡಿದಿರುವ ಚಿನ್ನದ ಬೆಲೆ, ಇಂದು ಮತ್ತಷ್ಟು ಕುಸಿತ ಕಾಣುವ ಮೂಲಕ ಗ್ರಾಹಕರ ಮುಖದಲ್ಲಿ ಮಂದಹಾಸ ಮೂಡಿಸಿದೆ.
ಬೆಂಗಳೂರು: ವಾರದ ಮೊದಲ ದಿನವಾದ ಸೋಮವಾರ ಆಭರಣ ಖರೀದಿದಾರರಿಗೆ ದೊಡ್ಡ ಸಿಹಿ ಸುದ್ದಿ ಸಿಕ್ಕಿದೆ. ಜೂನ್ ತಿಂಗಳ ಆರಂಭದಿಂದಲೇ ಇಳಿಕೆಯ ಹಾದಿ ಹಿಡಿದಿರುವ ಚಿನ್ನದ ಬೆಲೆ, ಇಂದು ಮತ್ತಷ್ಟು ಕುಸಿತ ಕಾಣುವ ಮೂಲಕ ಗ್ರಾಹಕರ ಮುಖದಲ್ಲಿ ಮಂದಹಾಸ ಮೂಡಿಸಿದೆ.
ಬೆಲೆ ಇಳಿಕೆಗೆ ಕಾರಣಗಳೇನು?
ಜಾಗತಿಕ ಮಾರುಕಟ್ಟೆಯಲ್ಲಿನ ಏರುಪೇರುಗಳು ಚಿನ್ನದ ಬೆಲೆಯ ಮೇಲೆ ನೇರ ಪರಿಣಾಮ ಬೀರಿವೆ. ಅಮೆರಿಕ ಮತ್ತು ಇರಾನ್ ನಡುವಿನ ಯುದ್ಧದ ಭೀತಿ, ಕಚ್ಚಾ ತೈಲ ಬೆಲೆಯಲ್ಲಿನ ಏರಿಕೆ ಹಾಗೂ ಹಣದುಬ್ಬರದ ಅಪಾಯಗಳ ನಡುವೆಯೂ ಹೂಡಿಕೆದಾರರು ಹೆಚ್ಚಿನ ಬಡ್ಡಿದರ ಸಿಗುವ ಸುರಕ್ಷಿತ ಕಡೆಗಳಲ್ಲಿ ಹೂಡಿಕೆ ಮಾಡುತ್ತಿದ್ದಾರೆ. ಈ ಕಾರಣದಿಂದಾಗಿ ಚಿನ್ನದ ಮೇಲಿನ ಬೇಡಿಕೆ ಕುಸಿದು ಬೆಲೆಯಲ್ಲಿ ಇಳಿಕೆಯಾಗಿದೆ ಎಂದು ವರದಿಯಾಗಿದೆ.
ಇಂದಿನ ಚಿನ್ನದ ಬೆಲೆ ವಿವರ (ಜೂನ್ 8):
24 ಕ್ಯಾರೆಟ್ ಚಿನ್ನ (ಅಪರಂಜಿ): ಇಂದು 10 ಗ್ರಾಂ ಚಿನ್ನದ ಬೆಲೆಯಲ್ಲಿ 1,040 ರೂಪಾಯಿ ಭಾರಿ ಇಳಿಕೆಯಾಗಿದೆ. ಇದರಿಂದಾಗಿ ಒಂದು ಗ್ರಾಂ 24 ಕ್ಯಾರೆಟ್ ಚಿನ್ನದ ಬೆಲೆ 15,169 ರೂಪಾಯಿಗೆ ತಲುಪಿದೆ.
22 ಕ್ಯಾರೆಟ್ ಚಿನ್ನ (ಆಭರಣ ಚಿನ್ನ): ಇಂದು 10 ಗ್ರಾಂ ಚಿನ್ನದ ಬೆಲೆಯಲ್ಲಿ 950 ರೂಪಾಯಿ ಕುಸಿತ ಕಂಡಿದೆ. ಇದರೊಂದಿಗೆ ಒಂದು ಗ್ರಾಂ 22 ಕ್ಯಾರೆಟ್ ಚಿನ್ನದ ಬೆಲೆ 13,905 ರೂಪಾಯಿಯಾಗಿದೆ.
ಕಳೆದ 10 ದಿನಗಳ ಟ್ರೆಂಡ್:
ಕಳೆದ ಹತ್ತು ದಿನಗಳಿಂದ ಚಿನ್ನದ ಬೆಲೆ ನಿರಂತರವಾಗಿ ಇಳಿಯುತ್ತಲೇ ಸಾಗಿದೆ. ಕಳೆದ 10 ದಿನಗಳಲ್ಲಿ 24 ಕ್ಯಾರೆಟ್ 10 ಗ್ರಾಂ ಚಿನ್ನದ ಮೇಲೆ ಬರೋಬ್ಬರಿ 5,350 ರೂಪಾಯಿ ಹಾಗೂ 22 ಕ್ಯಾರೆಟ್ ಚಿನ್ನದ ಮೇಲೆ 4,900 ರೂಪಾಯಿ ಇಳಿಕೆಯಾಗಿರುವುದು ಮಧ್ಯಮ ವರ್ಗದ ಜನರಿಗೆ ನಿಟ್ಟುಸಿರು ಬಿಡುವಂತೆ ಮಾಡಿದೆ.
ಚಿನ್ನ-ಬೆಳ್ಳಿ ದರ
Gold Rate Today -ಕದನ ವಿರಾಮದ ಬೆನ್ನಲ್ಲೇ ಭಾರಿ ಏರಿಕೆ ಕಂಡ ಚಿನ್ನ ಮತ್ತು ಬೆಳ್ಳಿ ದರ..! ಒಂದೇ ದಿನ ಕೆ.ಜಿ ಬೆಳ್ಳಿಗೆ ₹11,000 ಹೆಚ್ಚಳ..!
ಜಾಗತಿಕ ಮಾರುಕಟ್ಟೆಯಲ್ಲಿ ಎರಡು ವಾರಗಳ ಕದನ ವಿರಾಮ ಘೋಷಣೆಯಾದ ಬೆನ್ನಲ್ಲೇ, ದೇಶೀಯ ಮಾರುಕಟ್ಟೆಯಲ್ಲಿ ಚಿನ್ನ ಮತ್ತು ಬೆಳ್ಳಿಯ ದರಗಳು ಭಾರಿ ಏರಿಕೆ ಕಂಡಿವೆ. ಅಖಿಲ ಭಾರತ ಸರಾಫ್ ಅಸೋಸಿಯೇಷನ್ ನೀಡಿರುವ ಮಾಹಿತಿಯಂತೆ, ಬುಧವಾರ ಚಿನಿವಾರ ಪೇಟೆಯಲ್ಲಿ ಈ ಬೆಲೆಬಾಳುವ ಲೋಹಗಳ ಬೆಲೆ ಹೊಸ ದಾಖಲೆ ಬರೆದಿದೆ.
ನವದೆಹಲಿ: ಜಾಗತಿಕ ಮಾರುಕಟ್ಟೆಯಲ್ಲಿ ಎರಡು ವಾರಗಳ ಕದನ ವಿರಾಮ ಘೋಷಣೆಯಾದ ಬೆನ್ನಲ್ಲೇ, ದೇಶೀಯ ಮಾರುಕಟ್ಟೆಯಲ್ಲಿ ಚಿನ್ನ ಮತ್ತು ಬೆಳ್ಳಿಯ ದರಗಳು ಭಾರಿ ಏರಿಕೆ ಕಂಡಿವೆ. ಅಖಿಲ ಭಾರತ ಸರಾಫ್ ಅಸೋಸಿಯೇಷನ್ ನೀಡಿರುವ ಮಾಹಿತಿಯಂತೆ, ಬುಧವಾರ ಚಿನಿವಾರ ಪೇಟೆಯಲ್ಲಿ ಈ ಬೆಲೆಬಾಳುವ ಲೋಹಗಳ ಬೆಲೆ ಹೊಸ ದಾಖಲೆ ಬರೆದಿದೆ.
ಬೆಳ್ಳಿಯ ದರದಲ್ಲಿ ಭಾರಿ ಜಿಗಿತ:
ಬೆಳ್ಳಿಯ ದರವು ಪ್ರತಿ ಕೆ.ಜಿಗೆ ಬರೋಬ್ಬರಿ ₹11,000 ರಷ್ಟು ಏರಿಕೆಯಾಗಿದೆ. ಇದರಿಂದಾಗಿ ದೇಶದಲ್ಲಿ ಬೆಳ್ಳಿಯ ಬೆಲೆ ಈಗ ₹2.51 ಲಕ್ಷದ ಗಡಿ ತಲುಪಿದೆ.
ಚಿನ್ನದ ಬೆಲೆ ಎಷ್ಟು ಹೆಚ್ಚಳ?:
ಚಿನ್ನದ ದರದಲ್ಲೂ ದೊಡ್ಡ ಮಟ್ಟದ ಏರಿಕೆ ಕಂಡುಬಂದಿದ್ದು, 10 ಗ್ರಾಂ (ಶೇ 99.9ರಷ್ಟು ಪರಿಶುದ್ಧತೆ) ಚಿನ್ನದ ಬೆಲೆಯಲ್ಲಿ ₹3,200 ಹೆಚ್ಚಳವಾಗಿದೆ. ಇದರೊಂದಿಗೆ 10 ಗ್ರಾಂ ಚಿನ್ನದ ಮಾರುಕಟ್ಟೆ ದರವು ₹1,56,400ಕ್ಕೆ ತಲುಪಿದೆ.
ಜಾಗತಿಕ ಮಾರುಕಟ್ಟೆಯಲ್ಲಿನ ಹಠಾತ್ ಬೆಳವಣಿಗೆಗಳು ಮತ್ತು ಹೂಡಿಕೆದಾರರ ಒಲವು ದೇಶದ ಮಾರುಕಟ್ಟೆಯ ಮೇಲೆ ನೇರ ಪರಿಣಾಮ ಬೀರಿದ್ದು, ಆಭರಣ ಖರೀದಿದಾರರಿಗೆ ಬೆಲೆ ಏರಿಕೆಯ ಬಿಸಿ ತಟ್ಟಿದೆ.
-
ನಿಧನ ವಾರ್ತೆ16 hours agoUppinangadi-ಉಪ್ಪಿನಂಗಡಿ: ಸೇತುವೆ ಮೇಲೆ ಬೈಕ್, ಮೊಬೈಲ್ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ನದಿಯಲ್ಲಿ ಶವವಾಗಿ ಪತ್ತೆ
-
ಬಿಗ್ ನ್ಯೂಸ್22 hours agoBantwal-Big Breaking-ದ.ಕ. ಜಿಲ್ಲೆಯಲ್ಲಿ ಗುಡುಗು-ಮಿಂಚಿನ ಮಳೆ: ಸಿಡಿಲು ಬಡಿದು ಮನೆ ಜಖಂ-ಮಹಿಳೆ ಅಸ್ವಸ್ಥ
-
ಅಂತರ ರಾಜ್ಯ21 hours agoMurder-ಆಸ್ತಿಗಾಗಿ ಬೆಲ್ಟ್ನಿಂದ ಕುತ್ತಿಗೆ ಬಿಗಿದು ಪತಿಯ ಕೊಲೆ: ಆಕಸ್ಮಿಕ ಸಾವೆಂದು ನಂಬಿಸಿದ್ದ ಪತ್ನಿ ಅರೆಸ್ಟ್
-
ಅಪರಾಧ22 hours agoPuttur-ಪುತ್ತೂರು: ಹಿಂಸಾತ್ಮಕ ರೀತಿಯಲ್ಲಿ 11 ಗೋವುಗಳ ಸಾಗಾಟ; ವಾಹನ ಪತ್ತೆ, ಇಬ್ಬರು ಪರಾರಿ
-
ಸ್ಥಳೀಯ21 hours agoCrop insurance-ಬೆಳೆ ವಿಮೆಯಲ್ಲಿ ಭಾರೀ ಇಳಿಕೆ – ದ.ಕ. ಜಿಲ್ಲೆಯ ಅಡಿಕೆ, ಕಾಳುಮೆಣಸು ಬೆಳೆಗಾರರು ಶಾಕ್..!; ಬೇಗನೆ ಜಮೆಯಾದರೂ ಪರಿಹಾರ ಮೊತ್ತದಲ್ಲಿ ಭಾರೀ ಇಳಿಕೆ; ಲೆಕ್ಕಾಚಾರ ಬಹಿರಂಗಕ್ಕೆ ಆಗ್ರಹ
-
Uncategorized10 hours ago
ಪುತ್ತೂರು : ಪರವಾನಿಗೆ ರಹಿತವಾಗಿ ಹಿಂಸಾತ್ಮಕವಾಗಿ 11 ಗೋವುಗಳ ಸಾಗಾಟ; ಶಿವಪ್ರಸಾದ್ ಬಂಧನ
-
ನಿಧನ ವಾರ್ತೆ19 hours agoAccident-ಹುತಾತ್ಮ ಸೈನಿಕನ ಮೃತದೇಹ ಕೊಂಡೊಯ್ಯುತ್ತಿದ್ದ ಆಂಬ್ಯುಲೆನ್ಸ್ ಅಪಘಾತ: ಸೈನಿಕನ ಮಗ, ಸಹೋದರ ಸೇರಿ ನಾಲ್ವರು ಸಾವು
-
ರಾಜಕೀಯ16 hours agoPuttur-ಪುತ್ತೂರು: ಅಲ್ಪಸಂಖ್ಯಾತ ಸೇವಾ ಕೇಂದ್ರ ಉದ್ಘಾಟನೆಗೆ ಬಿಜೆಪಿ ಮೋರ್ಚಾದಿಂದ ಆಗ್ರಹ


















