Connect with us

ಸ್ಥಳೀಯ

ನಾನು ಸ್ನೇಹಿತರ ಕಾರಿನಲ್ಲಿದ್ದೇನೆಂಬ ಮಾಹಿತಿ ಅವನಲ್ಲಿತ್ತು – ಕಾರು ಚಲಾಯಿಸುತ್ತಲೇ ತಲವಾರು ದಾಳಿ ಮಾಡಿದ್ದಾನೆ: ಪಡೀಲ್ ಬಳಿ ಅಟಾಕ್ ಆದಾಗಲೇ ಡಿವೈಎಸ್ಪಿಗೆ ಮಾಹಿತಿ ನೀಡಿದ್ದು, ಆದರೂ ಫರಂಗಿಪೇಟೆ ಬಳಿ ತಪ್ಪಿಸಿಕೊಂಡ : ಕೊಲೆಯತ್ನದ ಬಗ್ಗೆ ಶಾಸಕ ಹರೀಶ್ ಪೂಂಜಾ ಹೇಳಿದ್ದೇನು ಗೊತ್ತೇ?

Published

on



Ad Widget

Ad Widget

Ad Widget

Ad Widget

ಬಂಟ್ವಾಳ:  ಬೆಳ್ತಂಗಡಿ ಕ್ಷೇತ್ರದ ಶಾಸಕ ಹರೀಶ್ ಪೂಂಜಾ ಅವರು ತನ್ನಸ್ನೇಹಿತರ ಕಾರಿನಲ್ಲಿ  ಪ್ರಯಾಣಿಸುತ್ತಿದ್ದ  ವೇಳೆ  ದುಷ್ಕರ್ಮಿಯೊಬ್ಬ ಕಾರನ್ನು ಅಡ್ಡಗಟ್ಟಿ ತಲ್ವಾರ್​ ತೋರಿಸಿ ಬೆದರಿಕೆ ಹಾಕಿರುವ ಘಟನೆ  ಬಂಟ್ವಾಳ ಗ್ರಾಮಾಂತರ ಪೊಲೀಸ್​ ಠಾಣೆ ವ್ಯಾಪ್ತಿಯಲ್ಲಿ  ಗುರುವಾರ ತಡರಾತ್ರಿ ನಡೆದಿದೆ.  ಶಾಸಕರ ಕಾರು ಚಾಲಕ ನವೀನ್‌ ಈ ಬಗ್ಗೆ ಠಾಣೆಗೆ ದೂರು ನೀಡಿದ್ದು ಐಪಿಸಿ ಸೆಕ್ಷನ್‌  341,504,506 ರಂತೆ ಪ್ರಕರಣ ದಾಖಲಿಸಲಾಗಿದೆ.

Ad Widget

Ad Widget

Ad Widget

Ad Widget

ಘಟನೆಯ  ಬಗ್ಗೆ ಶಾಸಕ ಹರೀಶ್‌ ಪೂಂಜಾ ರವರು ಇಂದು ಮಧ್ಯಾಹ್ನ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ. ಇದೊಂದು ಜಿಹಾದಿ ಶಕ್ತಿಗಳ ಕೃತ್ಯ ಎಂದು ಬಣ್ಣಿಸಿರುವ ಅವರು ಇದರ ಹಿಂದಿರುವ ಶಕ್ತಿ ಹಾಗು ಷಡ್ಯಂತ್ರಗಳನ್ನು ಸರಕಾರ ಶೀಘ್ರ ಹೊರಗೆ ತರಲಿದೆ ಎಂಬ ವಿಶ್ವಾಸವನ್ನು ವ್ಯಕ್ತಪಡಿಸಿದರು. ಕೇರಳ ನೋಂದಣಿಯ ಬಿಳಿ ಬಣ್ಣದ ಸ್ಕಾರ್ಪಿಯೋ ಕಾರಿನಲ್ಲಿ  ಬಂದ ದುಷ್ಕರ್ಮಿ ಕೃತ್ಯ ಎಸಗಿದ್ದಾನೆ . ಕಾರಿನ ನಂಬರನ್ನು ಪೊಲೀಸ್‌ ಇಲಾಖೆಗೆ ನೀಡಲಾಗಿದೆ ಎಂದು ತಿಳಿಸಿದರು.

Ad Widget

Ad Widget

Ad Widget alt="Ad Widget"/>

Ad Widget

ಶಾಸಕರು ವಿವರಿಸಿದ್ದು ಹೀಗೆ :

Ad Widget

Ad Widget <> Ad Widget

ಇಡೀ ಘಟನೆಯನ್ನು ಶಾಸಕ ಪೂಂಜಾ ವಿವರಿಸಿದ್ದು ಹೀಗೆ “ ನಿನ್ನೆ ಸಂಜೆ ಬೆಂಗಳೂರಿಂದ ವಿಮಾನದಲ್ಲಿ ಮಂಗಳೂರಿಗೆ ಹೊರಟು ಬಂದೆ. ಬಳಿಕ ಸರ್ಕ್ಯೂಟ್‌ ಹೌಸ್‌ ಗೆ ಬಂದು ರಾತ್ರಿ 10.45 ರ ಸುಮಾರಿಗೆ ಬೆಳ್ತಂಗಡಿಯತ್ತ ಹೊರಟೆ. ನಮ್ಮ ಬಳಿ ಎರಡು ಕಾರುಗಳಿದ್ದವು . ನನ್ನ ಅಧಿಕೃತ ಕಾರು ಇನ್ನೊವಾ . ಅದನ್ನು ನನ್ನ ಚಾಲಕ ನವೀನ್‌ ಡ್ರೈವ್‌ ಮಾಡುತ್ತಿದ್ದ. ಇನ್ನೊಂದು  ನನ್ನ ಸ್ನೇಹಿತರ ಹುಂಡೈ ಐ-20 ಕಾರು. ಅದರಲ್ಲಿ ನಾನು ಸ್ನೇಹಿತರ ಜತೆ ಪ್ರಯಾಣಿಸುತ್ತಿದೆ. ನನ್ನ ಅಧಿಕೃತ ಕಾರು ನಾನು ಪ್ರಯಾಣಿಸುತ್ತಿದ್ದ ಕಾರಿನ ಹಿಂದಿನಿಂದ ಬರುತಿತ್ತು.



Ad Widget

ಪಡೀಲ್‌ ದಾಟಿ ಹೋಗಬೇಕಾದರೆ ಸ್ಕಾರ್ಪೀಯೊ ವಾಹನ ಎರಡು- ಮೂರು ಸಲ ನನ್ನ ಅಧಿಕೃತ ಕಾರನ್ನು ಓವರ್ ಟೇಕ್‌ ಮಾಡಿತ್ತು. ಮೂರನೇ ಸಲ ಕಾರಿನ ಹತ್ತಿರಕ್ಕೆ ಬಂದು ತಲ್ವಾರ್‌ ನಿಂದ ಹೊಡೆಯಲು ಬಂದಾಗ , ನನ್ನ ಕಾರಿನ ಚಾಲಕ ಅದನ್ನು ತಪ್ಪಿಸಿದರು. ಅದಾದ ಬಳಿಕ ಅವರು ನನಗೆ ಕರೆ ಮಾಡಿ ಅಟಾಕ್‌ ಮಾಡಲು ಯತ್ನಿಸಿರುವುದನ್ನು ತಿಳಿಸಿದರು.

Ad Widget

Ad Widget
FIR ಪ್ರತಿ

ತಲವಾರು ಹೇಗಿತ್ತು ?

 ಈ ವೇಳೆ ನಾನು ನವೀನ್‌ ಬಳಿ ನಾನು ಪ್ರಯಾಣಿಸುತ್ತಿರುವ ಕಾರನ್ನು ಓವರ್‌ ಟೇಕ್‌ ಮಾಡಿ ಮುಂದೆ ಹೋಗುವಂತೆ ತಿಳಿಸಿದೆ. ಅಲ್ಲದೇ ಈ ವಿಚಾರವನ್ನು ಬಂಟ್ವಾಳ ಡಿವೈಎಸ್‌ ಪಿ ಗಮನಕ್ಕೆ ತರುವುದಾಗಿಯೂ ತಿಳಿಸಿದೆ. ಅದಾದ ಬಳಿಕ ನನ್ನ ಅಧಿಕೃತ ಕಾರು ನಾನಿರುವ ಕಾರನ್ನು ಓವರ್‌ ಟೆಕ್‌ ಮಾಡಿ ಮುಂದೆ ಹೋಯಿತು. ನಾನು ಡಿವೈಎಸ್ಪಿ ಯವರೆಗೆ ಕರೆ ಮಾಡಿ ವಿಷಯ ತಿಳಿಸಿದೆ. ಇದರ ಬಳಿಕ  ಸ್ಕಾರ್ಪಿಯೋ ಕಾರಿನಲ್ಲಿದ್ದ ದುಷ್ಕರ್ಮಿ ನಾನು  ಪ್ರಯಾಣಿಸುತ್ತಿದ್ದ ಕಾರನ್ನು ಟಾರ್ಗೆಟ್‌ ಮಾಡಿ ಎರೆಡೆರಡು ಬಾರಿ  ತಲ್ವಾರ್‌ ನಿಂದ ಕಾರಿನ ವಿಂಡೋಗೆ  ಅಟಾಕ್‌ ಮಾಡಿದ. ದುಷ್ಕರ್ಮಿ ಹಿಡಿದುಕೊಂಡಿದ್ದ ಆಯುಧ  ಕೆಳಗಡೆ ಹ್ಯಾಂಡಲ್‌ ಹೊಂದಿದ್ದು,  ತುದಿಯಲ್ಲಿ ಚೂಪಾಗಿತ್ತು.  

ಈ ವೇಳೆ ನಾನು ನನ್ನ ಕಾರು ಚಾಲಕ ನವೀನ್‌ ಗೆ ಕರೆ ಮಾಡಿ, ಕಾರನ್ನು ಸ್ಲೋ ಮಾಡುವಂತೆ ತಿಳಿಸಿದ್ದು, ನಮ್ಮ ಎರಡು ಕಾರು ರಸ್ತೆಯಲ್ಲಿ ಪ್ಯಾರಲಾಲ್‌ (ಒಟ್ಟೊಟ್ಟಿಗೆ) ಆಗಿ ಹೋಗುವ ಎಂದು ಸೂಚಿಸಿದೆ.  ಮಂಗಳೂರು ಟು ಬಿಸಿರೋಡ್‌ ಚತುಷ್ಪಥ ರಸ್ತೆ.  ಹೀಗಾಗಿ ಅಕ್ಕಪಕ್ಕದ ಎರಡು ರಸ್ತೆಯಲ್ಲಿ ಜತೆಯಾಗಿ ಎರಡು ಕಾರಿನಲ್ಲಿ ಹೋದರೆ ಆಗ ಸ್ಕಾರ್ಪಿಯೋ ಚಾಲಕನಿಗೆ ಓವರ್‌ ಟೇಕ್‌ ಮಾಡಲು ಕಷ್ಟ.  ಇದೇ ಉದ್ದೇಶದಿಂದ ನಾನು ನನ್ನ ಅಧಿಕೃತ ಕಾರಿನ ಡ್ರೈವರ್‌ ಗೆ ಈ ಮಾಹಿತಿ ರವಾನಿಸಿದೆ.

ಯಶಸ್ವಿನಿ ಹಾಲ್‌ ನ  ಬಳಿಯಿಂದ  ನಮ್ಮ ಎರಡು ಕಾರುಗಳು  ಜತೆಯಾಗಿಯೇ ಸಾಗಿದೆವು. ಸ್ಕಾರ್ಪಿಯೋ ನಮ್ಮ ಬೆನ್ನ ಹಿಂದೆ ಬರುತಿತ್ತು. ನಾನು ಮೊದಲೇ ಡಿವೈಎಸ್‌ ಪಿಯವರಿಗೆ ಮಾಹಿತಿ ನೀಡಿದ ಹಿನ್ನಲೆಯಲ್ಲಿ ಪೊಲೀಸರು ಫರಂಗಿಪೇಟೆ ಬಳಿ ಬ್ಯಾರಿಕೇಡ್‌  ಅಳವಡಿಸಿ ಸ್ಕಾರ್ಪಿಯೋ ವನ್ನು ತಡೆಯಲು ತಯಾರಿ ನಡೆಸಿದ್ದರು. ಹೀಗಾಗಿ ನಮ್ಮ ಕಾರು ಅಲ್ಲಿ ತಲುಪುತ್ತಲೇ ಎರಡು ಕಾರನ್ನು ಸ್ಲೋ ಮಾಡಿದೆವು. ಈ ವೇಳೆ ಹಿಂದಿನಿಂದ ಬರುತ್ತಿದ್ದ ಇನ್ನೆರಡು ಕಾರುಗಳ ನಡುವೆ ಸ್ಕಾರ್ಪಿಯೋ ವಾಹನ ತೂರಿಕೊಂಡು ಬಿಸಿರೋಡ್‌ ನತ್ತ ಪರಾರಿಯಾಯಿತು ಎಂದು ವಿವರಿಸಿದರು.

ದೂರಿನ ಪ್ರತಿ

 ನನ್ನ ಕಾರಿನಲ್ಲಿ ನಾನು ಇಲ್ಲಂತ ಅವನಿಗೆ ಮೊದಲೇ ಗೊತ್ತಿತ್ತು

ಸ್ಕಾರ್ಪೀಯೊ ಕಾರಿನಲ್ಲಿ ಒಬ್ಬನೇ ವ್ಯಕ್ತಿಯಿದ್ದದು. ಅವನೇ ಕಾರು ಚಲಾಯಿಸುತ್ತಿದ್ದ ಹಾಗೂ ತಲ್ವಾರ್‌ ನಿಂದ ಅಟಾಕ್‌ ಮಾಡುತ್ತಿದ್ದ. ರಸ್ತೆಯ ಎರಡು ಬದಿಯಿಂದ, ಆಚೀಚೆ ಎರಡು ಕಡೆಯಿಂದ ದಾಳಿ ಮಾಡಿದ್ದಾನೆ. ಅವನಿಗೆ ನಾನು ನನ್ನ ಅಧಿಕೃತ ಕಾರಿನಲ್ಲಿ ಇಲ್ಲ ಎಂದು ಗೊತ್ತಿತ್ತು. ಹಾಗಾಗಿಯೇ ಅವನು ನನ್ನ ಅಧಿಕೃತ ಕಾರು ಇನ್ನೋವಾದ ಮೇಲೆ ಮಾಡಿದ್ದು. ಅದು ನನ್ನ ಕಾರನ್ನು ಓವರ್‌ ಟೆಕ್‌ ಮಾಡಿ ಹೋಗಲಿ ಎನ್ನುವುದೇ ಯೋಜನೆಯಾಗಿದ್ದು. ಅದು ಹೋದ ಕೂಡಲೇ ನನ್ನ ಕಾರಿನ ಮೇಲೆ ಸುಲಭದಲ್ಲಿ ಧಾಳಿ ಮಾಡಬಹುದೆಂದು ಆತ ಯೋಚಿಸಿದಂತೆ ಕಾಣುತಿತ್ತು. ಒಂದೊಮ್ಮೆ ನನ್ನ ಅಧಿಕೃತ ಕಾರು ಮುಂದೆ ಹೋಗುತ್ತಲೇ, ನಾನು ಪ್ರಯಾಣಿಸುತ್ತಿದ್ದ ಕಾರಿನ ಮೇಲೆ ದಾಳಿ ಮಾಡಲು ಆರಂಭಿಸಿದ್ದಾನೆ.

‘ನಾವು ಹಿಂದುತ್ವ, ಹಿಂದು ಕಾರ್ಯಕರ್ತರು, ಹಿಂದು ಸಮಾಜದ ಪರವಾಗಿ ಇರುವುವರು. ಅವರು ಯಾಕೆ ನನ್ನನ್ನು ಟಾರ್ಗೆಟ್​ ಮಾಡಿದರು ಎಂದು ಗೊತ್ತಾಗಿಲ್ಲ. ತನಿಖೆ ನಂತರ ಗೊತ್ತಾಗುತ್ತೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆಯುತ್ತಿರುವ ಘಟನೆಗಳನ್ನು ಗಮನಿಸಿದರೆ ಇದರ ಹಿಂದೆ ಬೇರೆ ಬೇರೆ ವ್ಯವಸ್ಥೆಗಳು ಅಡಗಿರಬಹುದು ಎಂದು ನನಗೆ ಬಲವಾಗಿ ಅನ್ನಿಸುತ್ತಿದೆ. ಇಂದು ಬೆಳಗ್ಗೆ ಗೃಹಸಚಿವರು ನನಗೆ ಕರೆ ಮಾಡಿ ಘಟನೆ ಬಗ್ಗೆ ಮಾಹಿತಿ ಪಡೆದಿದ್ದಾರೆ ಎಂದು ಶಾಸಕರು ತಿಳಿಸಿದರು.

ಶಾಸಕ ಹರೀಶ್‌ ಪೂಂಜಾ ಹೇಳಿಕೆಯ ಪೂರ್ತಿ ವಿಡಿಯೋ ಇಲ್ಲಿ ನೋಡಿ :

Ad Widget
Click to comment

Leave a Reply

ಬಿಗ್ ನ್ಯೂಸ್

Kaavu-BIG BREAKING: ಕಾವು ಬಳಿ ಹೆದ್ದಾರಿಗೆ ಉರುಳಿದ ಮರಗಳು, ಹೈಟೆನ್ಷನ್ ವಿದ್ಯುತ್ ಕಂಬ : ಮಾಣಿ – ಮೈಸೂರು ಹೈವೆಯಲ್ಲಿ ವಾಹನ ಸಂಚಾರ ಸ್ಥಗಿತ

Published

on



Ad Widget

Ad Widget

Ad Widget

Ad Widget

ಭಾರೀ ಗಾಳಿ ಮಳೆಗೆ ಮಾಣಿ–ಮೈಸೂರು ಹೆದ್ದಾರಿಯ ಕಾವು ಬಳಿ ಮರ ಹಾಗೂ ಹೈಟೆನ್ಷನ್ ವಿದ್ಯುತ್ ಕಂಬ ರಸ್ತೆಗೆ ಉರುಳಿಬಿದ್ದ ಪರಿಣಾಮ ವಾಹನ ಸಂಚಾರ ಸಂಪೂರ್ಣ ಸ್ಥಗಿತಗೊಂಡಿದೆ. ಇದರಿಂದ ಸುಳ್ಯ, ಮಡಿಕೇರಿ ಹಾಗೂ ಮೈಸೂರು ಕಡೆಗೆ ತೆರಳುವ ವಾಹನ ಸವಾರರು ತೊಂದರೆ ಅನುಭವಿಸುವಂತಾಗಿದೆ.

Ad Widget

Ad Widget

Ad Widget

Ad Widget

ಪುತ್ತೂರು: ಭಾರೀ ಗಾಳಿ ಮಳೆಗೆ ಮಾಣಿ–ಮೈಸೂರು ಹೆದ್ದಾರಿಯ ಕಾವು ಬಳಿ ಮರ ಹಾಗೂ ಹೈಟೆನ್ಷನ್ ವಿದ್ಯುತ್ ಕಂಬ ರಸ್ತೆಗೆ ಉರುಳಿಬಿದ್ದ ಪರಿಣಾಮ ವಾಹನ ಸಂಚಾರ ಸಂಪೂರ್ಣ ಸ್ಥಗಿತಗೊಂಡಿದೆ. ಇದರಿಂದ ಸುಳ್ಯ, ಮಡಿಕೇರಿ ಹಾಗೂ ಮೈಸೂರು ಕಡೆಗೆ ತೆರಳುವ ವಾಹನ ಸವಾರರು ತೊಂದರೆ ಅನುಭವಿಸುವಂತಾಗಿದೆ.

Ad Widget

Ad Widget

Ad Widget alt="Ad Widget"/>

Ad Widget

ಶುಕ್ರವಾರ (ಅ. 9) ಮಧ್ಯಾಹ್ನ ಸುಮಾರು 4 ಗಂಟೆಗೆ ಕಾವು ಪರಿಸರದಲ್ಲಿ ಭಾರೀ ಗಾಳಿ ಮಳೆಯಾಗಿದೆ. ಈ ವೇಳೆ ಮರ ಹಾಗೂ ವಿದ್ಯುತ್ ಕಂಬ ಹೆದ್ದಾರಿಗೆ ಅಡ್ಡಲಾಗಿ ಬಿದ್ದಿದ್ದು, ಮಡ್ಯಂಗಳ , ಮದ್ಲ ಎಂಬಲ್ಲಿ ಹಲವು ಮರಗಳು ಧರೆಗುರುಳಿವೆ. ಪೆರಿಗೇರಿ ರಸ್ತೆಯಲ್ಲೂ ಒಂದು ಮರ ಧರೆಗುರುಳಿದೆ ಜೊತೆಗೆ ವಿದ್ಯುತ್ ತಂತಿಗಳೂ ರಸ್ತೆಗೆ ಬಿದ್ದಿವೆ. ಇದರಿಂದ ಈ ಮಾರ್ಗದಲ್ಲಿ ವಾಹನ ಸಂಚಾರಕ್ಕೆ ಅಡ್ಡಿಯುಂಟಾಗಿದೆ.

Ad Widget

Ad Widget <> Ad Widget

ಸ್ಥಳೀಯರ ನೆರವಿನೊಂದಿಗೆ ಮೆಸ್ಕಾಂ, ತಾಲೂಕು ಆಡಳಿತ ಹಾಗೂ ಅರಣ್ಯ ಇಲಾಖೆಯ ಸಿಬ್ಬಂದಿ ಮರ, ವಿದ್ಯುತ್ ಕಂಬ ಮತ್ತು ತಂತಿಗಳನ್ನು ತೆರವುಗೊಳಿಸುವ ಕಾರ್ಯದಲ್ಲಿ ತೊಡಗಿದ್ದಾರೆ. ಪುತ್ತೂರು ಗ್ರಾಮಾಂತರ ಠಾಣೆಯ ಪೊಲೀಸರು ಸ್ಥಳದಲ್ಲಿ ಸಂಚಾರ ನಿಯಂತ್ರಿಸುತ್ತಿದ್ದಾರೆ.



Ad Widget

ತೆರವು ಕಾರ್ಯಾಚರಣೆಗೆ ಸುಮಾರು 3ರಿಂದ 4 ಗಂಟೆಗಳ ಕಾಲ ಬೇಕಾಗುವ ಸಾಧ್ಯತೆಯಿದ್ದು, ಪುತ್ತೂರಿನಿಂದ ಮೈಸೂರು ಕಡೆಗೆ ತೆರಳುವ ವಾಹನ ಸವಾರರು ಪರ್ಯಾಯ ಮಾರ್ಗ ಬಳಸುವಂತೆ ಪುತ್ತೂರು ಗ್ರಾಮಾಂತರ ಠಾಣೆಯ ಎಸ್ಐ ಸುಷ್ಮಾ ಭಂಡಾರಿ ತಿಳಿಸಿದ್ದಾರೆ.

Ad Widget

Ad Widget

ಪರ್ಯಾಯ ಮಾರ್ಗ: ಪುತ್ತೂರಿನಿಂದ ಬೆಳ್ಳಾರೆ ಮಾರ್ಗವಾಗಿ ಸುಳ್ಯ ತಲುಪಿ ಅಲ್ಲಿಂದ ಮೈಸೂರು ಕಡೆಗೆ ಪ್ರಯಾಣಿಸಬಹುದು ಎಂದು ಅವರು ಮಾಹಿತಿ ನೀಡಿದ್ದಾರೆ.

Ad Widget
Continue Reading

ಅಪರಾಧ

Puttur-ಪುತ್ತೂರು: ಅಕ್ರಮ ಗೋ ಸಾಗಾಟ ಪ್ರಕರಣ; ಪರಾರಿಯಾಗಿದ್ದ ಇಬ್ಬರು ವಶಕ್ಕೆ, ಆರೋಪಿ ಶಿವಪ್ರಸಾದ್ ಮನೆ ಮಹಜರು?

Published

on



Ad Widget

Ad Widget

Ad Widget

Ad Widget

ಪಿಕಪ್ ವಾಹನದಲ್ಲಿ 11 ಜಾನುವಾರುಗಳನ್ನು ಹಿಂಸಾತ್ಮಕ ರೀತಿಯಲ್ಲಿ ತುಂಬಿಸಿ, ಅಗತ್ಯ ಪರವಾನಿಗೆ ಇಲ್ಲದೆ ಕೇರಳದ ಕಡೆಗೆ ಸಾಗಿಸುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿ, ಪೊಲೀಸ್ ಕಾರ್ಯಾಚರಣೆ ವೇಳೆ ಪರಾರಿಯಾಗಿದ್ದ ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಜಾನುವಾರುಗಳನ್ನು ಪರವಾನಿಗೆ ಇಲ್ಲದೆ ಮಾರಾಟ ಮಾಡಿದ ಆರೋಪದ ಮೇಲೆ ಬಂಧಿತನಾಗಿರುವ ಆರ್ಯಾಪು ನಿವಾಸಿ ಶಿವಪ್ರಸಾದ್‌ಗೆ ಸೇರಿದ ದೇವಸ್ಯದಲ್ಲಿರುವ ಮನೆಯನ್ನು ಪೊಲೀಸರು ಮಹಜರು ನಡೆಸಲಿದ್ದಾರೆ ಎಂದು ತಿಳಿದುಬಂದಿದೆ.

Ad Widget

Ad Widget

Ad Widget

Ad Widget

ಪುತ್ತೂರು: ಪಿಕಪ್ ವಾಹನದಲ್ಲಿ 11 ಜಾನುವಾರುಗಳನ್ನು ಹಿಂಸಾತ್ಮಕ ರೀತಿಯಲ್ಲಿ ತುಂಬಿಸಿ, ಅಗತ್ಯ ಪರವಾನಿಗೆ ಇಲ್ಲದೆ ಕೇರಳದ ಕಡೆಗೆ ಸಾಗಿಸುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿ, ಪೊಲೀಸ್ ಕಾರ್ಯಾಚರಣೆ ವೇಳೆ ಪರಾರಿಯಾಗಿದ್ದ ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಜಾನುವಾರುಗಳನ್ನು ಪರವಾನಿಗೆ ಇಲ್ಲದೆ ಮಾರಾಟ ಮಾಡಿದ ಆರೋಪದ ಮೇಲೆ ಬಂಧಿತನಾಗಿರುವ ಆರ್ಯಾಪು ನಿವಾಸಿ ಶಿವಪ್ರಸಾದ್‌ಗೆ ಸೇರಿದ ದೇವಸ್ಯದಲ್ಲಿರುವ ಮನೆಯನ್ನು ಪೊಲೀಸರು ಮಹಜರು ನಡೆಸಿದ್ದಾರೆ ಎಂದು ಹೇಳಲಾಗುತ್ತಿದೆ. ಆದರೇ ಪೊಲೀಸ್‌ ಇಲಾಖೆ ಅದನ್ನು ಖಚಿತ ಪಡಿಸಿಲ್ಲ.

Ad Widget

Ad Widget

Ad Widget alt="Ad Widget"/>

Ad Widget

ಬಲ್ನಾಡಿನಲ್ಲಿ 11 ಜಾನುವಾರುಗಳ ರಕ್ಷಣೆ
ಕೇರಳದ ಕಡೆಗೆ ಅಕ್ರಮವಾಗಿ ಜಾನುವಾರುಗಳನ್ನು ಸಾಗಿಸಲಾಗುತ್ತಿದೆ ಎಂಬ ಮಾಹಿತಿ ಮೇರೆಗೆ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯ ಉಪನಿರೀಕ್ಷಕಿ ಸುಷ್ಮಾ ಭಂಡಾರಿ ಅವರು ಸಿಬ್ಬಂದಿಯೊಂದಿಗೆ ಬಲ್ನಾಡು ಗ್ರಾಮದ ಬೆಳೆಯೂರುಕಟ್ಟೆ ಬಳಿ ಕಾರ್ಯಾಚರಣೆ ನಡೆಸಿದ್ದರು.

Ad Widget

Ad Widget <> Ad Widget

ಈ ವೇಳೆ ಪಿಕಪ್ ವಾಹನವನ್ನು ತಡೆದು ಪರಿಶೀಲಿಸಿದಾಗ, ವಾಹನದೊಳಗೆ 11 ಜಾನುವಾರುಗಳನ್ನು ಹಿಂಸಾತ್ಮಕ ರೀತಿಯಲ್ಲಿ ತುಂಬಿಸಿರುವುದು ಪತ್ತೆಯಾಗಿತ್ತು. ಪೊಲೀಸರು ವಾಹನವನ್ನು ತಡೆದ ಸಂದರ್ಭದಲ್ಲಿ ಚಾಲಕ ಹಾಗೂ ಮತ್ತೋರ್ವ ವ್ಯಕ್ತಿ ಸ್ಥಳದಿಂದ ಪರಾರಿಯಾಗಿದ್ದರು.



Ad Widget

ಜಾನುವಾರುಗಳನ್ನು ಅಗತ್ಯ ಪರವಾನಿಗೆ ಇಲ್ಲದೆ ಮಾಂಸಕ್ಕಾಗಿ ಮಾರಾಟ ಮಾಡುವ ಉದ್ದೇಶದಿಂದ ಕೇರಳದ ಕಡೆಗೆ ಸಾಗಿಸಲಾಗುತ್ತಿತ್ತು ಎಂಬ ಆರೋಪದ ಮೇರೆಗೆ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

Ad Widget

Ad Widget

ಪರಾರಿಯಾಗಿದ್ದ ಇಬ್ಬರು ವಶಕ್ಕೆ
ಪ್ರಕರಣದ ತನಿಖೆ ಮುಂದುವರಿಸಿದ ಪೊಲೀಸರು, ಅಗತ್ಯ ಪರವಾನಿಗೆ ಇಲ್ಲದೆ ಜಾನುವಾರುಗಳನ್ನು ಮಾರಾಟ ಮಾಡಿದ ಆರೋಪದ ಮೇಲೆ ಆರ್ಯಾಪು ನಿವಾಸಿ ಶಿವಪ್ರಸಾದ್‌ನನ್ನು ಬಂಧಿಸಿದ್ದರು. ಬಳಿಕ ಪರಾರಿಯಾಗಿದ್ದ ಪಿಕಪ್ ಚಾಲಕ ಹಾಗೂ ಮತ್ತೋರ್ವ ಆರೋಪಿಯ ಪತ್ತೆಗಾಗಿ ಕಾರ್ಯಾಚರಣೆ ಮುಂದುವರಿಸಿದ್ದರು.

ಇದೀಗ ಸರೋಳಿ ನಿವಾಸಿ ಇಸ್ಮಾಯಿಲ್ ಅವರ ಪುತ್ರ ಹಸ್ಪರ್ ಅಲಿಯಾಸ್ ಅಮ್ಮಿ ಹಾಗೂ ಕದಿಲ ಗ್ರಾಮದ ಸತ್ತಿಕಲು ನಿವಾಸಿ ಅಬ್ಬಾಸ್ ಅವರ ಪುತ್ರ ಇಬ್ರಾಹಿಂ ಮಾಡಲಾ ಎಂಬಿಬ್ಬರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಜಾನುವಾರುಗಳನ್ನು ಪರವಾನಿಗೆ ಇಲ್ಲದೆ ಮಾರಾಟ ಮಾಡಿದ ಆರೋಪ ಎದುರಿಸುತ್ತಿರುವ ಶಿವಪ್ರಸಾದ್‌ಗೆ ಸೇರಿದ ಆರ್ಯಾಪು ಗ್ರಾಮದ ದೇವಸ್ಯದಲ್ಲಿರುವ ಮನೆಯನ್ನು ಪೊಲೀಸರು ಮಹಜರು ನಡೆಸಿದ್ದಾರೆ ಎಂದು ಮೂಲಗಳಿಂದ ತಿಳಿದುಬಂದಿದ್ದು ಸೀಜ್‌ ಮಾಡುವ ಅಧಿಕೃತ ಪ್ರಕ್ರಿಯೆ ಸಹಾಯಕ ಆಯುಕ್ತರ ಆದೇಶದ ಬಳಿಕ ನಡೆಯಲಿದೆ ಎಂದು ತಿಳಿದು ಬಂದಿದೆ. ಪ್ರಕರಣದ ಕುರಿತು ಹೆಚ್ಚಿನ ತನಿಖೆ ಮುಂದುವರಿದಿದೆ.

Ad Widget
Continue Reading

ಮಂಗಳೂರು

MRPL accident-MRPL ಅವಘಡದಲ್ಲಿ ಮೃತಪಟ್ಟ ಕರ್ಕಡ ಕುಟುಂಬಕ್ಕೆ EPFO ಕ್ಲೈಮ್ ಸಂದಾಯ

Published

on



Ad Widget

Ad Widget

Ad Widget

Ad Widget

MRPL ಕಾರ್ಮಿಕರ ಭವಿಷ್ಯ ನಿಧಿ ಸಂಘಟನೆ (EPFO), ಮಂಗಳೂರು ಪ್ರಾದೇಶಿಕ ಕಚೇರಿಯು, 30.09.2026 ರಂದು ಮಂಗಳೂರು ಪೆಟ್ರೋಕೆಮಿಕಲ್ಸ್ ಲಿಮಿಟೆಡ್ ನಲ್ಲಿ ಸಂಭವಿಸಿದ ಕೈಗಾರಿಕಾ ಅಪಘಾತದಲ್ಲಿ ಮರಣ ಹೊಂದಿದ ಭವಿಷ್ಯ ನಿಧಿ ಚಂದಾದಾರರಾದ ದಿವಂಗತ ಮನೀಶ್ ಕರ್ಕಡ ಅವರ ಕುಟುಂಬದ ಅವಲಂಬಿತರ ಸಾಮಾಜಿಕ ಭದ್ರತಾ ಸೌಲಭ್ಯಗಳ ಕ್ಷೇಮುಗಳನ್ನು ತ್ವರಿತವಾಗಿ ಇತ್ಯರ್ಥಪಡಿಸಲಾಗಿದೆ.

Ad Widget

Ad Widget

Ad Widget

Ad Widget

ಮಂಗಳೂರು : MRPL ಕಾರ್ಮಿಕರ ಭವಿಷ್ಯ ನಿಧಿ ಸಂಘಟನೆ (EPFO), ಮಂಗಳೂರು ಪ್ರಾದೇಶಿಕ ಕಚೇರಿಯು, 30.09.2026 ರಂದು ಮಂಗಳೂರು ಪೆಟ್ರೋಕೆಮಿಕಲ್ಸ್ ಲಿಮಿಟೆಡ್ ನಲ್ಲಿ ಸಂಭವಿಸಿದ ಕೈಗಾರಿಕಾ ಅಪಘಾತದಲ್ಲಿ ಮರಣ ಹೊಂದಿದ ಭವಿಷ್ಯ ನಿಧಿ ಚಂದಾದಾರರಾದ ದಿವಂಗತ ಮನೀಶ್ ಕರ್ಕಡ ಅವರ ಕುಟುಂಬದ ಅವಲಂಬಿತರ ಸಾಮಾಜಿಕ ಭದ್ರತಾ ಸೌಲಭ್ಯಗಳ ಕ್ಷೇಮುಗಳನ್ನು ತ್ವರಿತವಾಗಿ ಇತ್ಯರ್ಥಪಡಿಸಲಾಗಿದೆ.

Ad Widget

Ad Widget

Ad Widget alt="Ad Widget"/>

Ad Widget

ಕಾರ್ಮಿಕರ ಭವಿಷ್ಯ ನಿಧಿ ಸಂಘಟನೆ (EPFO) ವತಿಯಿಂದ ಕುಟುಂಬಕ್ಕೆ ಪಾವತಿಸಬೇಕಾದ ಉದ್ಯೋಗಿಗಳ ಭವಿಷ್ಯ ನಿಧಿ ಹಾಗೂ ಉದ್ಯೋಗಿಗಳ ಠೇವಣಿ ಆಧಾರಿತ ವಿಮಾ ಸೌಲಭ್ಯಗಳ ಕ್ಷೇಮುಗಳನ್ನು ಇತ್ಯರ್ಥಪಡಿಸಲಾಗಿದೆ.

Ad Widget

Ad Widget <> Ad Widget

ಇದರೊಂದಿಗೆ ಉದ್ಯೋಗಿಗಳ ಪಿಂಚಣಿ ಯೋಜನೆ 2026ರ ಅಡಿಯಲ್ಲಿ, ಮಾಸಿಕ ಪಿಂಚಣಿಯನ್ನೂ ಮಂಜೂರು ಮಾಡಿ ಪಾವತಿ ಪ್ರಾರಂಭಿಸಲಾಗಿದೆ. ಈ ಎಲ್ಲಾ ಸೌಲಭ್ಯಗಳನ್ನು 08.10.2026 ರಂದು ಇತ್ಯರ್ಥಪಡಿಸಿ ಜಾರಿಗೊಳಿಸಲಾಗಿದೆ ಹಾಗೂ ಮೊತ್ತವನ್ನು ಪಾವತಿಸಲಾಗಿದೆ.



Ad Widget

ದುಃಖತಪ್ತ ಕುಟುಂಬಕ್ಕೆ ಸಂತಾಪ ಹಾಗೂ ಸಾಂತ್ವನ ಸಲ್ಲಿಸುವ ಉದ್ದೇಶದಿಂದ, ಪ್ರಾದೇಶಿಕ ಭವಿಷ್ಯ ನಿಧಿ ಆಯುಕ್ತರಾದ ಸಂದೀಪ್ ಬಿಸ್ವಾಸ್ ಅವರು, ಸಹಾಯಕ ಭವಿಷ್ಯ ನಿಧಿ ಆಯುಕ್ತರಾದ ಅಂಕಿತ್ ಸಿಂಗ್ ಹಾಗೂ ಪ್ರವರ್ತನಾಧಿಕಾರಿಯಾದ ಶ್ರೀಮತಿ ಅನಿತಾ ಆರ್ ಅವರೊಂದಿಗೆ 09.10.2026 ರಂದು ದಿವಂಗತ ಶ್ರೀ ಮನೀಶ್ ಕರ್ಕಡ ಅವರ ನಿವಾಸಕ್ಕೆ ಭೇಟಿ ನೀಡಿ, ಫಲಾನುಭವಿಗೆ ಪಿಂಚಣಿ ಪಾವತಿ ಆದೇಶವನ್ನು (PPO) ಹಸ್ತಾಂತರಿಸಿದರು. ಈ ಭೇಟಿಯು ಸಂಕಷ್ಟದ ಸಂದರ್ಭದಲ್ಲಿ ತನ್ನ ಸದಸ್ಯರ ಕುಟುಂಬಗಳೊಂದಿಗೆ ನಿಲ್ಲುವ EPFO ಸಂಸ್ಥೆಯ ಮಾನವೀಯ ಕಾಳಜಿ ಮತ್ತು ಬದ್ಧತೆಯನ್ನು ಪ್ರತಿಬಿಂಬಿಸುತ್ತದೆ.

Ad Widget

Ad Widget

ಅನಿರೀಕ್ಷಿತ ದುರಂತಗಳ ಸಂದರ್ಭದಲ್ಲಿ ತನ್ನ ಸದಸ್ಯರ ಕುಟುಂಬಗಳಿಗೆ ಸಲ್ಲಬೇಕಾದ ಸಾಮಾಜಿಕ ಭದ್ರತಾ ಸೌಲಭ್ಯಗಳನ್ನು ಸಕಾಲದಲ್ಲಿ ಒದಗಿಸುವುದು EPFO ಸಂಸ್ಥೆಯ ಬದ್ಧತೆಯಾಗಿದೆ ಎಂಬುದನ್ನು ಈ ತ್ವರಿತ ಇತ್ಯರ್ಥವು ಮತ್ತೊಮ್ಮೆ ದೃಢಪಡಿಸಿದೆ.

EPFO ಸಂಸ್ಥೆಯು ಮೃತ ಸದಸ್ಯರ ಕುಟುಂಬಕ್ಕೆ ತನ್ನ ತೀವ್ರ ಸಂತಾಪವನ್ನು ವ್ಯಕ್ತಪಡಿಸುತ್ತಿದ್ದು, ಈ ಕಷ್ಟದ ಸಮಯದಲ್ಲಿ ಅಗತ್ಯವಿರುವ ಎಲ್ಲಾ ರೀತಿಯ ನೆರವು ನೀಡಲು ಬದ್ಧವಾಗಿದೆ.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!

Discover more from Nikhara News | Kannada News Website

Subscribe now to keep reading and get access to the full archive.

Continue reading