ಆರೋಗ್ಯ
Anger management : ಕೋಪವನ್ನು ನಿಯಂತ್ರಿಸುವ ಸುಲಭ ಉಪಾಯಗಳು
ಕೆಲವರು ಮಾತು ಮಾತಿಗೂ ಕೋಪಗೊಳ್ಳುವುದು(Anger), ಕಿರುಚಾಡುವುದು (Screaming) ಮಾಡಲು ಶುರು ಮಾಡುತ್ತಾರೆ. ನಾವು ನಮ್ಮ ನಿತ್ಯ ಜೀವನದಲ್ಲಿ ಬಹಳಷ್ಟು ಮಂದಿಯನ್ನು ನೋಡುತ್ತೇವೆ. ವಿನಾ ಕಾರಣ ಅವರಿಗೆ ಕೋಪ ಬರುತ್ತದೆ. ಅವರ ಮುಂದೆ ನಿಂತು ಏನು ಮಾತನಾಡಿದರೂ ಕಷ್ಟವೇ (Problem). ಕೋಪ ಎಷ್ಟೊಂದು ಅಪಾಯಕಾರಿಯೆಂದರೆ(Danger), ಅದು ಸ್ವಯಂ ಹಾಗೂ ಅಕ್ಕಪಕ್ಕದವರ ನೆಮ್ಮದಿಗೆ (Peace)ಭಂಗ ತರುತ್ತದೆ. ಜೀವನದಲ್ಲಿ ಖುಷಿ ಹಾಗೂ ತೊಂದರೆಗಳು ಬರುತ್ತಲೇ ಇರುತ್ತವೆ. ಹೀಗಾಗಿ ಕೋಪದ ಮೂಲಕ ಸಂಬಂಧದಲ್ಲಿ(Relationship) ಬಿರುಕನ್ನುಂಟು ಮಾಡಿಕೊಳ್ಳಬಾರದು
ಪ್ರತಿಯೊಬ್ಬ ವ್ಯಕ್ತಿಗೆ ಕೋಪ ಬಂದಾಗ ಆ ಕೋಪವನ್ನು ಇನ್ನೊಂದರ ಮೇಲೆ ತೋರಿಸಿಕೊಳ್ಳುವುದು ಸಾಮಾನ್ಯ. ಏಕೆಂದರೆ ಅದು ಮಾನವನ ಭಾವನಾತ್ಮಕ ಪ್ರತಿಕ್ರಿಯೆ. ಆದಾಗ್ಯೂ, ಸಂದರ್ಭಕ್ಕೆ ಅನುಗುಣವಾಗಿ ಕೋಪ ಅಥವಾ ಕೋಪದ ತೀವ್ರತೆಯನ್ನು ಕಡಿಮೆ ಮಾಡಬಹುದು.
ಕೆಲವರು ಸಹಿಸಲು ಸಾಧ್ಯವಾಗದಂತಹ ವಿಷಯಗಳ ಬಗ್ಗೆ ಕೋಪಗೊಳ್ಳುತ್ತಾರೆ. ಇದು ಅನೇಕ ಪರಿಣಾಮಗಳನ್ನು ಉಂಟುಮಾಡಬಹುದು. ಆದರೆ ಇನ್ನೂ ಕೆಲವರು ಸಣ್ಣ ಪುಟ್ಟ ವಿಷಯಗಳ ಬಗ್ಗೆ ಸುಲಭವಾಗಿ ಕೋಪಗೊಳ್ಳುತ್ತಾರೆ. ಆದ್ದರಿಂದ ನಿಮ್ಮ ಕೋಪವನ್ನು ಸುಲಭವಾಗಿ ನಿಯಂತ್ರಿಸಲು ನಿಮಗೆ ಸಾಧ್ಯವಾಗದಿದ್ದರೆ, ಇಲ್ಲಿ ನಾವು ಕೋಪವನ್ನು ನಿಯಂತ್ರಿಸುವ ಕೆಲವು ನೈಸರ್ಗಿಕ ವಿಧಾನಗಳನ್ನು ತಿಳಿಸಿಕೊಡಲಿದ್ದೇವೆ.
ಕೋಪವನ್ನು ಕಡಿಮೆ ಮಾಡುವ ವಿಧಾನಗಳು
ಉಸಿರಾಟ
ನೀವು ಏನಾದರೂ ಕೋಪಗೊಂಡರೆ, ಮೊದಲನೆಯದಾಗಿ ಆಳವಾದ ಉಸಿರನ್ನು ತೆಗೆದುಕೊಳ್ಳಿ. ಇದು ನಿಮಗೆ ವಿಶ್ರಾಂತಿಯನ್ನು ನೀಡುತ್ತದೆ. ಆಳವಾದ ಉಸಿರಾಟವು ಉತ್ಸಾಹ, ಆತಂಕ, ಖಿನ್ನತೆ ಮತ್ತು ಕೋಪವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ನೀವು ಕೋಪಗೊಂಡಾಗ, ಆಳವಾದ ಉಸಿರನ್ನು ತೆಗೆದುಕೊಳ್ಳಿ, ಇದು ವಿಷಯದಿಂದ ಗಮನವನ್ನು ಬೇರೆಡೆಗೆ ತಿರುಗಿಸಲು ಸಹಾಯ ಮಾಡುತ್ತದೆ.
ಸಂಗೀತ
ಕೋಪವನ್ನು ಶಮನಗೊಳಿಸಲು ಸಂಗೀತವು ತುಂಬಾ ಸಹಾಯಕವಾಗುತ್ತದೆ. ನೀವು ಕೋಪಗೊಂಡಾಗ, ಹಾಡುಗಳನ್ನು ಕೇಳಲು ಪ್ರಾರಂಭಿಸಿ. ಉತ್ತಮ ಸಂಗೀತವನ್ನು ಕೇಳುವುದರಿಂದ ನಿಮಗೆ ವಿಶ್ರಾಂತಿ ಸಿಗುತ್ತದೆ ಮತ್ತು ನಿಮ್ಮ ಮನಸ್ಸು ಶಾಂತವಾಗುತ್ತದೆ.
ವಾಕಿಂಗ್
ನೀವು ಇದ್ದಕ್ಕಿದ್ದಂತೆ ಕೋಪಗೊಂಡಾಗ, ನಡೆಯಲು ಪ್ರಾರಂಭಿಸಿ. ಇದು ಕೋಪವನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ. ವಾಕಿಂಗ್ ದೇಹದ ಸ್ನಾಯುಗಳನ್ನು ಸಡಿಲಗೊಳಿಸುತ್ತದೆ ಮತ್ತು ನಿಮ್ಮ ಮನಸ್ಸನ್ನು ಶಾಂತಗೊಳಿಸುತ್ತದೆ. ಇದನ್ನು ಮಾಡುವುದರಿಂದ ನೀವು ಸಮಸ್ಯೆಯನ್ನು ಅರ್ಥಮಾಡಿಕೊಳ್ಳಬಹುದು ಮತ್ತು ಪರಿಸ್ಥಿತಿಯನ್ನು ಸರಿಹೊಂದಿಸಲು ಇದು ಸಹಾಯ ಮಾಡುತ್ತದೆ.
ಹಿಮ್ಮುಖವಾಗಿ ಎಣಿಸಿ
ನಿಮಗೆ ಕೋಪ ಬಂದರೆ ಅಂತಹ ಪರಿಸ್ಥಿತಿಯಲ್ಲಿ ಸುಮ್ಮನಿರಿ ಮತ್ತು ನೀವು ಏನನ್ನೂ ಹೇಳುವ ಮೊದಲು, ಏನೇ ನಿರ್ಧಾರ ಕೈಗೊಳ್ಳುವ ಮೊದಲು ಹಿಮ್ಮುಖ ಎಣಿಕೆಯನ್ನು ಎಣಿಸಲು ಪ್ರಾರಂಭಿಸಿ. ಇದು ನಿಮ್ಮ ಕೋಪವನ್ನು ನಿಧಾನಗೊಳಿಸುತ್ತದೆ. ಇದು ತಪ್ಪು ಪದಗಳನ್ನು ಬಳಸದಂತೆ ನಿಮ್ಮನ್ನು ಕಂಟ್ರೋಲ್ನಲ್ಲಿಡುತ್ತದೆ.
ನೀರು ಕುಡಿಯಿರಿ
ತೀವ್ರ ಕೋಪ ಬಂದಾಗ ಅದನ್ನು ಶಾಂತಗೊಳಿಸಲು ತಕ್ಷಣ ಒಂದು ಲೋಟ ತಣ್ಣೀರನ್ನು ಕುಡಿಯಬೇಕು. ಇದು ಕೋಪದ ತೀವ್ರತೆಯನ್ನು ಕಡಿಮೆ ಮಾಡುತ್ತದೆ. ಮತ್ತು ಕೋಪದಿಂದ ಉಂಟಾಗುವ ಯಾವುದೇ ಅಡ್ಡಪರಿಣಾಮಗಳಿಂದ ನಿಮ್ಮನ್ನು ರಕ್ಷಿಸುತ್ತದೆ.
ನಿತ್ಯ ಧ್ಯಾನ ಮಾಡಿ
ಹೆಚ್ಚು ಕೋಪಗೊಳ್ಳುವವರು ಖಂಡಿತವಾಗಿಯೂ ಪ್ರತಿದಿನ ಸ್ವಲ್ಪ ಧ್ಯಾನ ಮಾಡಲೇಬೇಕು. ನಿಮ್ಮ ದಿನಚರಿಯಲ್ಲಿ ಧ್ಯಾನವನ್ನು ಸೇರಿಸುವುದು ನಿಮ್ಮ ಮಾನಸಿಕ ಆರೋಗ್ಯದ ಮೇಲೆ ಸಕಾರಾತ್ಮಕ ಪರಿಣಾಮ ಬೀರುತ್ತದೆ. ಇದರಿಂದ ನೀವು ಕ್ರಮೇಣ ಕೋಪವನ್ನು ನಿಯಂತ್ರಿಸಲು ಕಲಿಯುತ್ತೀರಿವ
ಆರೋಗ್ಯ
Bantwal-ಆಯುಷ್ಮಾನ್ ಭಾರತ್ ಯೋಜನೆಯಡಿ ಬಂಟ್ವಾಳ ಸರ್ಕಾರಿ ಆಸ್ಪತ್ರೆಯಲ್ಲಿ ಉಚಿತ ಹಿಪ್ ರಿಪ್ಲೇಸ್ಮೆಂಟ್ ಶಸ್ತ್ರಚಿಕಿತ್ಸೆ ಯಶಸ್ವಿ
ಕಳೆದ ಎಂಟು ತಿಂಗಳಿನಿಂದ ಎರಡೂ ಸೊಂಟಗಳ ತೀವ್ರ ನೋವಿನಿಂದ ಬಳಲುತ್ತಿದ್ದ 41 ವರ್ಷದ ವ್ಯಕ್ತಿಯೊಬ್ಬರಿಗೆ ಬಂಟ್ವಾಳ ತಾಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ ಆಯುಷ್ಮಾನ್ ಭಾರತ್–ಆರೋಗ್ಯ ಕರ್ನಾಟಕ ಯೋಜನೆಯಡಿ ಸಂಪೂರ್ಣ ಉಚಿತವಾಗಿ ಯಶಸ್ವಿ ಹಿಪ್ ರಿಪ್ಲೇಸ್ಮೆಂಟ್ ಶಸ್ತ್ರಚಿಕಿತ್ಸೆ ನಡೆಸಲಾಗಿದೆ.
ಬಂಟ್ವಾಳ: ಕಳೆದ ಎಂಟು ತಿಂಗಳಿನಿಂದ ಎರಡೂ ಸೊಂಟಗಳ ತೀವ್ರ ನೋವಿನಿಂದ ಬಳಲುತ್ತಿದ್ದ 41 ವರ್ಷದ ವ್ಯಕ್ತಿಯೊಬ್ಬರಿಗೆ ಬಂಟ್ವಾಳ ತಾಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ ಆಯುಷ್ಮಾನ್ ಭಾರತ್–ಆರೋಗ್ಯ ಕರ್ನಾಟಕ ಯೋಜನೆಯಡಿ ಸಂಪೂರ್ಣ ಉಚಿತವಾಗಿ ಯಶಸ್ವಿ ಶಸ್ತ್ರಚಿಕಿತ್ಸೆ ನಡೆಸಲಾಗಿದೆ.
ಬಂಟ್ವಾಳ ತಾಲೂಕಿನ ನಿವಾಸಿಯಾಗಿರುವ ಈ ವ್ಯಕ್ತಿಗೆ ‘ಬೈಲ್ಯಾಟರಲ್ ಹಿಪ್ ಅವಾಸ್ಕುಲರ್ ನೆಕ್ರೋಸಿಸ್’ (Bilateral Hip Avascular Necrosis) ಎಂಬ ಕಾಯಿಲೆ ಇರುವುದು ವೈದ್ಯಕೀಯ ತಪಾಸಣೆಯಲ್ಲಿ ಪತ್ತೆಯಾಗಿತ್ತು. ಇದರಿಂದ ಎರಡೂ ಸೊಂಟದ ಮೂಳೆಗಳು ಹಾನಿಗೊಳಗಾಗಿದ್ದು, ಬಲಭಾಗಕ್ಕಿಂತ ಎಡಭಾಗದ ಮೂಳೆಯ ಸ್ಥಿತಿ ಗಂಭೀರವಾಗಿತ್ತು.
ಈ ಹಿಂದೆ ಮಂಗಳೂರಿನ ವೆನ್ಲಾಕ್ ಜಿಲ್ಲಾ ಆಸ್ಪತ್ರೆ ಸೇರಿದಂತೆ ವಿವಿಧ ಖಾಸಗಿ ಆಸ್ಪತ್ರೆಗಳು ಹಾಗೂ ಮೂಳೆ ತಜ್ಞರನ್ನು ಸಂಪರ್ಕಿಸಿದ್ದ ರೋಗಿಗೆ ಶಸ್ತ್ರಚಿಕಿತ್ಸೆಯೊಂದೇ ಶಾಶ್ವತ ಪರಿಹಾರ ಎಂದು ವೈದ್ಯರು ಸಲಹೆ ನೀಡಿದ್ದರು. ಬಳಿಕ ಸ್ಥಳೀಯರ ಸಹಕಾರದೊಂದಿಗೆ ಹೆಚ್ಚಿನ ಚಿಕಿತ್ಸೆಗಾಗಿ ಬಂಟ್ವಾಳ ತಾಲೂಕು ಸಾರ್ವಜನಿಕ ಆಸ್ಪತ್ರೆಗೆ ದಾಖಲಾಗಿದ್ದರು.
ರೋಗಿಯ ಆರ್ಥಿಕ ಹಾಗೂ ಆರೋಗ್ಯದ ಸಂಕಷ್ಟವನ್ನು ಅರಿತ ಆಸ್ಪತ್ರೆಯ ವೈದ್ಯಕೀಯ ತಂಡವು ಆಯುಷ್ಮಾನ್ ಭಾರತ್–ಆರೋಗ್ಯ ಕರ್ನಾಟಕ ಯೋಜನೆಯಡಿ ಉಚಿತವಾಗಿ ಶಸ್ತ್ರಚಿಕಿತ್ಸೆ ನಡೆಸಲು ನಿರ್ಧರಿಸಿತು. ನವೆಂಬರ್ 4ರಂದು ಯೋಜನೆಯಡಿ ಅನುಮೋದನೆಗಾಗಿ ಅರ್ಜಿ ಸಲ್ಲಿಸಲಾಗಿದ್ದು, ನವೆಂಬರ್ 11ರಂದು ಅನುಮತಿ ದೊರೆತಿತ್ತು. ಬಳಿಕ ನವೆಂಬರ್ 17ರಂದು ವೈದ್ಯರ ತಂಡ ಯಶಸ್ವಿಯಾಗಿ ಶಸ್ತ್ರಚಿಕಿತ್ಸೆ ಪೂರ್ಣಗೊಳಿಸಿದೆ.
ಜಿಲ್ಲಾ ಆರೋಗ್ಯಾಧಿಕಾರಿ ಡಾ. ತಿಮ್ಮಯ್ಯ ಅವರ ಮಾರ್ಗದರ್ಶನದಲ್ಲಿ ಮಾರ್ಗದರ್ಶಕ ಶಸ್ತ್ರಚಿಕಿತ್ಸಕ ಡಾ. ಅಭಿಷೇಕ್ ಶೆಟ್ಟಿ ಹಾಗೂ ಬಂಟ್ವಾಳ ಸರ್ಕಾರಿ ಆಸ್ಪತ್ರೆಯ ಮೂಳೆ ತಜ್ಞ ಡಾ. ಚೇತನ್ರಾಜ್ ಅವರ ನೇತೃತ್ವದಲ್ಲಿ ಶಸ್ತ್ರಚಿಕಿತ್ಸೆ ನೆರವೇರಿತು.
ಅರವಳಿಕೆ ತಜ್ಞರಾದ ಡಾ. ವಿದ್ಯಾಸಾಗರ್ ಹಾಗೂ ಡಾ. ತುಷಾರ್ ಕೆ., ಶಸ್ತ್ರಚಿಕಿತ್ಸಾ ವಿಭಾಗದ ಶುಶ್ರೂಷಾಧಿಕಾರಿಗಳಾದ ವಾಣಿ, ಪುಷ್ಪಾ, ಕೀರ್ತಿಶಾಲಿನಿ, ತಂತ್ರಜ್ಞರಾದ ಧನ್ಯಾ ಮತ್ತು ಶಶಿಕಲಾ ಹಾಗೂ ಡಿ-ದರ್ಜೆ ನೌಕರರಾದ ಸವಿತಾ, ಜಲಜಾ ಮತ್ತು ಚಂದ್ರಾವತಿ ಅವರು ಶಸ್ತ್ರಚಿಕಿತ್ಸೆಗೆ ಸಹಕರಿಸಿದರು.
ಸರ್ಕಾರಿ ಆಸ್ಪತ್ರೆಯಲ್ಲೇ ಯಾವುದೇ ವೆಚ್ಚವಿಲ್ಲದೆ ಗುಣಮಟ್ಟದ ಚಿಕಿತ್ಸೆ ದೊರೆತಿರುವುದಕ್ಕೆ ರೋಗಿಯ ಕುಟುಂಬಸ್ಥರು ಹಾಗೂ ಸಾರ್ವಜನಿಕರು ವೈದ್ಯಕೀಯ ತಂಡಕ್ಕೆ ಕೃತಜ್ಞತೆ ಸಲ್ಲಿಸಿದ್ದಾರೆ ಎಂದು ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ. ದಿನೇಶ್ ಕಾಮತ್ ತಿಳಿಸಿದ್ದಾರೆ.
ಆರೋಗ್ಯ
Puttur-ಪುತ್ತೂರು: ಸಿಟಿ ಆಸ್ಪತ್ರೆಯಲ್ಲಿ ಉಚಿತ ಮೂಳೆ ಖನಿಜ ಸಾಂದ್ರತೆ (BMD) ಚಿಕಿತ್ಸಾ ಶಿಬಿರ
ಪುತ್ತೂರು ಸಿಟಿ ಆಸ್ಪತ್ರೆ ಚಾರಿಟೇಬಲ್ ಟ್ರಸ್ಟ್ ಹಾಗೂ ಇನ್ನರ್ ವೀಲ್ ಕ್ಲಬ್ ಪುತ್ತೂರು ಇವರ ಸಹಯೋಗದಲ್ಲಿ ಇಂದು (ನ.19) ಬೆಳಿಗ್ಗೆ 9.30ರಿಂದ ಮಧ್ಯಾಹ್ನ 2.30ರವರೆಗೆ ಉಚಿತ ಮೂಳೆ ಖನಿಜ ಸಾಂದ್ರತೆ (BMD) ಚಿಕಿತ್ಸಾ ಶಿಬಿರವು ನಡೆಯಿತು. ಪುತ್ತೂರು ಸಿಟಿ ಆಸ್ಪತ್ರೆಯಲ್ಲಿ ಶಿಬಿರವನ್ನು ಏರ್ಪಡಿಸಲಾಗಿತ್ತು.
ಪುತ್ತೂರು: ಪುತ್ತೂರು ಸಿಟಿ ಆಸ್ಪತ್ರೆ ಚಾರಿಟೇಬಲ್ ಟ್ರಸ್ಟ್ ಹಾಗೂ ಇನ್ನರ್ ವೀಲ್ ಕ್ಲಬ್ ಪುತ್ತೂರು ಇವರ ಸಹಯೋಗದಲ್ಲಿ ಇಂದು (ನ.19) ಬೆಳಿಗ್ಗೆ 9.30ರಿಂದ ಮಧ್ಯಾಹ್ನ 2.30ರವರೆಗೆ ಉಚಿತ ಮೂಳೆ ಖನಿಜ ಸಾಂದ್ರತೆ (BMD) ಚಿಕಿತ್ಸಾ ಶಿಬಿರವು ನಡೆಯಿತು. ಪುತ್ತೂರು ಸಿಟಿ ಆಸ್ಪತ್ರೆಯಲ್ಲಿ ಶಿಬಿರವನ್ನು ಏರ್ಪಡಿಸಲಾಗಿತ್ತು.
ಬೆನ್ನು ನೋವು, ಮೊಣಕಾಲು ನೋವು, ಸೊಂಟ ನೋವು ಹಾಗೂ ಸ್ನಾಯು ನೋವು ಮುಂತಾದ ಸಮಸ್ಯೆಗಳು ಮೂಳೆ ಸವೆತ ಅಥವಾ ಮುಂದಿನ ದಿನಗಳಲ್ಲಿ ಮೂಳೆ ಮುರಿತಕ್ಕೆ ಕಾರಣವಾಗುವ ಸಾಧ್ಯತೆಯಿದೆ. ಇಂತಹ ಲಕ್ಷಣಗಳನ್ನು ನಿರ್ಲಕ್ಷಿಸದೆ ಆರಂಭದಲ್ಲೇ ತಪಾಸಣೆ ಮಾಡಿಸಿಕೊಂಡು ಸೂಕ್ತ ಚಿಕಿತ್ಸೆ ಪಡೆಯುವುದು ಅಗತ್ಯ. ಈ ನಿಟ್ಟಿನಲ್ಲಿ ಸಾರ್ವಜನಿಕರಿಗೆ ಅನುಕೂಲವಾಗುವಂತೆ ಉಚಿತ BMD ಶಿಬಿರವನ್ನು ಆಯೋಜಿಸಲಾಗಿತ್ತು. ಆರೋಗ್ಯ ಸೇವಾ ವಿಭಾಗದ ಇಂಡ್ಕೆಮಿ ಹೆಲ್ತ್ ಸ್ಪೆಷಾಲಿಟಿ ಪ್ರೈವೇಟ್ ಲಿಮಿಟೆಡ್ ಪ್ರಾಯೋಜಕತ್ವದಲ್ಲಿ ಶಿಬಿರ ನಡೆಯಿತು.
ಶಿಬಿರದಲ್ಲಿ ಮೂಳೆ ತಜ್ಞರಾದ ಡಾ. ಭಾಸ್ಕರ್ ಎಸ್. (D’Ortho), ಆಡಳಿತ ನಿರ್ದೇಶಕರು, ಪುತ್ತೂರು ಸಿಟಿ ಆಸ್ಪತ್ರೆ ಇವರು ತಪಾಸಣೆ ಹಾಗೂ ಸಲಹೆ ನೀಡಿದರು.
ಇನ್ನರ್ ವೀಲ್ ಕ್ಲಬ್ ನ ನಿರ್ದೇಶಕಿ ಮಂಜುಳ ಭಾಸ್ಕರ್, ಅಧ್ಯಕ್ಷೆ ಮನೋರಮಾ ಸೂರ್ಯ, ಖಜಾಂಜಿ ಕವಿತಾ ಕೊಳತ್ತಾಯ, ಕಾರ್ಯದರ್ಶಿ ಶ್ರುತಿ ಎಸ್. ಬಂಗೇರ ಶಿಬಿರದಲ್ಲಿ ಉಪಸ್ಥಿತರಿದ್ದರು.
ಆರೋಗ್ಯ
‘Ritu Taare’ scheme-35 ವರ್ಷ ಮೇಲ್ಪಟ್ಟ ಮಹಿಳೆಯರ ಆರೋಗ್ಯಕ್ಕೆ ‘ಋತು ತಾರೆ’ ಯೋಜನೆ; ದ.ಕ.ದಲ್ಲಿ ಮೂರು ತಿಂಗಳ ಪ್ರಾಯೋಗಿಕ ಅನುಷ್ಠಾನ..! ನಟಿ ರಮ್ಯಾ ರಾಯಭಾರಿ
35 ವರ್ಷ ಮೇಲ್ಪಟ್ಟ ಮಹಿಳೆಯರ ಆರೋಗ್ಯ ಮತ್ತು ಆರೈಕೆಗೆ ವಿಶೇಷ ಆದ್ಯತೆ ನೀಡುವ ಉದ್ದೇಶದಿಂದ ರಾಜ್ಯ ಸರಕಾರ ‘ಋತು ತಾರೆ’ ಎಂಬ ಮಧ್ಯವಯಸ್ಕ ಮಹಿಳೆಯರ ಆರೋಗ್ಯ ಮತ್ತು ಮೆನೋಪಾಸ್ ಕಾರ್ಯಕ್ರಮವನ್ನು ಜಾರಿಗೆ ತಂದಿದೆ. ಈ ಕಾರ್ಯಕ್ರಮದ ರಾಯಭಾರಿಯಾಗಿ ಚಿತ್ರನಟಿ ರಮ್ಯಾ ಕಾರ್ಯನಿರ್ವಹಿಸಲಿದ್ದಾರೆ.
ಬೆಂಗಳೂರು: 35 ವರ್ಷ ಮೇಲ್ಪಟ್ಟ ಮಹಿಳೆಯರ ಆರೋಗ್ಯ ಮತ್ತು ಆರೈಕೆಗೆ ವಿಶೇಷ ಆದ್ಯತೆ ನೀಡುವ ಉದ್ದೇಶದಿಂದ ರಾಜ್ಯ ಸರಕಾರ ‘ಋತು ತಾರೆ’ ಎಂಬ ಮಧ್ಯವಯಸ್ಕ ಮಹಿಳೆಯರ ಆರೋಗ್ಯ ಮತ್ತು ಮೆನೋಪಾಸ್ ಕಾರ್ಯಕ್ರಮವನ್ನು ಜಾರಿಗೆ ತಂದಿದೆ.
ಈ ಕುರಿತು ಆರೋಗ್ಯ ಇಲಾಖೆ ಆದೇಶ ಹೊರಡಿಸಿದ್ದು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮೂರು ತಿಂಗಳ ಕಾಲ ಪ್ರಾಯೋಗಿಕವಾಗಿ ಕಾರ್ಯಕ್ರಮ ಅನುಷ್ಠಾನಗೊಳ್ಳಲಿದೆ. ಈ ಹಂತದ ಅನುಭವದ ಆಧಾರದಲ್ಲಿ ಬಳಿಕ ರಾಜ್ಯದಾದ್ಯಂತ ವಿಸ್ತರಿಸಲು ಸರಕಾರ ಉದ್ದೇಶಿಸಿದೆ.
ಮಹಿಳೆಯರ ಆರೋಗ್ಯವು ಕೇವಲ ತಾಯ್ತನಕ್ಕೆ ಸೀಮಿತವಾಗಿಲ್ಲ. ಮೆನೋಪಾಸ್ ಹಂತದಲ್ಲಿ ನಿದ್ರಾಹೀನತೆ, ದೇಹದಲ್ಲಿ ಏಕಾಏಕಿ ಬಿಸಿಯ ಅನುಭವ, ಕೀಲು ನೋವು, ಮೂಳೆಗಳ ದುರ್ಬಲತೆ, ಆತಂಕ ಹಾಗೂ ಮಾನಸಿಕ ಏರುಪೇರು ಸೇರಿದಂತೆ ಹಲವು ಸಮಸ್ಯೆಗಳು ಕಾಣಿಸಿಕೊಳ್ಳಬಹುದು. ಇವುಗಳನ್ನು ವಯಸ್ಸಿನ ಸಹಜ ಬದಲಾವಣೆ ಎಂದು ನಿರ್ಲಕ್ಷಿಸದೆ ಸೂಕ್ತ ತಪಾಸಣೆ ಮತ್ತು ಚಿಕಿತ್ಸೆ ಪಡೆಯುವುದು ಅಗತ್ಯ ಎಂದು ಸರಕಾರ ತಿಳಿಸಿದೆ.
‘ಋತು ತಾರೆ’ ಯೋಜನೆಯಡಿ ಮಹಿಳೆಯರಿಗಾಗಿ ಪ್ರತ್ಯೇಕ ಕ್ಲಿನಿಕ್ಗಳನ್ನು ತೆರೆಯಲಾಗುತ್ತದೆ. ಇಲ್ಲಿ ಸಮಗ್ರ ಆರೋಗ್ಯ ತಪಾಸಣೆ, ಮಾನಸಿಕ ಆರೋಗ್ಯ ಮತ್ತು ಪೌಷ್ಟಿಕ ಆಹಾರದ ಕುರಿತು ಮಾರ್ಗದರ್ಶನ ನೀಡಲಾಗುತ್ತದೆ. ಅಗತ್ಯವಿರುವವರಿಗೆ ತಜ್ಞ ವೈದ್ಯರಿಂದ ಚಿಕಿತ್ಸೆ ಒದಗಿಸುವುದರ ಜೊತೆಗೆ, ಆರೋಗ್ಯದ ವಿವರಗಳನ್ನು ದಾಖಲಿಸಲು ‘ಮಿಡ್-ಲೈಫ್ ಹೆಲ್ತ್ ಕಾರ್ಡ್’ ವಿತರಿಸಲಾಗುತ್ತದೆ.
ಈ ಕಾರ್ಯಕ್ರಮದ ರಾಯಭಾರಿಯಾಗಿ ಚಿತ್ರನಟಿ ರಮ್ಯಾ ಕಾರ್ಯನಿರ್ವಹಿಸಲಿದ್ದಾರೆ. ಮೆನೋಪಾಸ್ ಹಾಗೂ ಮಧ್ಯವಯಸ್ಕ ಮಹಿಳೆಯರ ಆರೋಗ್ಯದ ಕುರಿತು ಜಾಗೃತಿ ಮೂಡಿಸಿ, ಕಾರ್ಯಕ್ರಮದ ಸಂದೇಶವನ್ನು ರಾಜ್ಯದ ಮೂಲೆಮೂಲೆಗೂ ತಲುಪಿಸಲು ಅವರು ಸಹಕರಿಸಲಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮೂರು ತಿಂಗಳ ಪ್ರಾಯೋಗಿಕ ಅನುಷ್ಠಾನ ಪೂರ್ಣಗೊಂಡ ಬಳಿಕ ಯೋಜನೆಯನ್ನು ರಾಜ್ಯಾದ್ಯಂತ ವಿಸ್ತರಿಸಲಾಗುವುದು. ಮಹಿಳೆಯರ ಬದುಕಿನ ಪ್ರತಿಯೊಂದು ಹಂತದಲ್ಲೂ ಉತ್ತಮ ಆರೋಗ್ಯ ಸೇವೆ, ಸೂಕ್ತ ಆರೈಕೆ ಮತ್ತು ಘನತೆಯ ಬದುಕು ದೊರೆಯಬೇಕು ಎಂಬ ಉದ್ದೇಶದಿಂದ ಈ ಕಾರ್ಯಕ್ರಮ ರೂಪಿಸಲಾಗಿದೆ ಎಂದು ಸರಕಾರ ತಿಳಿಸಿದೆ.
-
Uncategorized19 hours ago
ಫುತ್ತೂರು : ಗುತ್ತಿಗೆದಾರರ ಸಹಾಯಕಿಗೆ ಲೈಂಗಿಕ ದೌರ್ಜನ್ಯ, ವಿಡಿಯೋ ಚಿತ್ರೀಕರಣ , ಕಾರು ಹತ್ತಿಸಲು ಯತ್ನ ಆರೋಪ; ಮೆಸ್ಕಾಂ ಸಿಬ್ಬಂದಿ ವಿರುದ್ಧ ಕೇಸ್
-
ಕ್ರೈಂ6 hours agoMurder-ಕನ್ಯಾನ: ಚಿಕ್ಕಪ್ಪನ ಎದೆಗೆ ಕತ್ತಿಯಿಂದ ಇರಿದು ಹತ್ಯೆಗೈದ ಯುವತಿ ಅರೆಸ್ಟ್
-
ನಿಧನ ವಾರ್ತೆ6 hours agoAccident-ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇನಲ್ಲಿ ಭೀಕರ ಅಪಘಾತ: 8 ವರ್ಷದ ಬಾಲಕಿ ಸೇರಿ ಇಬ್ಬರು ಸ್ಥಳದಲ್ಲೇ ಸಾವು; ನಾಲ್ವರ ಸ್ಥಿತಿ ಗಂಭೀರ
-
ಬಿಗ್ ನ್ಯೂಸ್6 hours agoRakesh Shetty-ಸ್ಟಿಂಗ್ ಆಪರೇಷನ್ ಪ್ರಕರಣ: ಜಾಮೀನು ಅರ್ಜಿ ವಾಪಸ್ ಪಡೆದ ರಾಕೇಶ್ ಶೆಟ್ಟಿ
-
ಕಾರ್ಯಕ್ರಮಗಳು5 hours agoPuttur-ಪುತ್ತೂರು: ನ.27ರಂದು ಅತ್ಯಾಧುನಿಕ ಬಹುಮಹಡಿ ವಾಣಿಜ್ಯ ಸೌಧ ‘ದ್ವಾರಕಾ ಕಮರ್ಶಿಯಲ್ಸ್’ ಲೋಕಾರ್ಪಣೆ; ಒಂದೇ ಸೂರಿನಡಿ ಹೈಪರ್ ಮಾರ್ಕೆಟ್ ಸಹಿತ ಹಲವು ಸೇವೆಗಳು
-
ಶಿಕ್ಷಣ24 hours agoVivekananda-ದ.ಕ ಜಿಲ್ಲಾಮಟ್ಟದ ಶಾಂತಿವನ ಟ್ರಸ್ಟ್ ಸ್ಪರ್ಧೆಯಲ್ಲಿ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ಚಿಂತನ ಎಂ. ಚಿತ್ರಕಲೆಯಲ್ಲಿ ಪ್ರಥಮ
-
ಅಪರಾಧ4 hours agoExcise raid-ಬಾಳ್ತಿಲ, ಮೆಲ್ಕಾರ್ನಲ್ಲಿ ಅಬಕಾರಿ ದಾಳಿ: ₹20.37 ಲಕ್ಷ ಮೌಲ್ಯದ ಗೋವಾ ಮದ್ಯ, 2 ಕಾರುಗಳು ವಶ
-
ಶಿಕ್ಷಣ24 hours agoNarendra-ನರೇಂದ್ರ ಪ.ಪೂ. ಕಾಲೇಜಿನ ವಿದ್ಯಾರ್ಥಿನಿ ಇಚ್ಚಿಕ ಜೈನ್ ಇವರು ಕರಾಟೆ ಸ್ಪರ್ಧೆಯಲ್ಲಿ ಸ್ಕೂಲ್ ಗೇಮ್ಸ್ ಫೆಡರೇಶನ್ ಆಫ್ ಇಂಡಿಯಾ (SGFI)ಗೆ ಆಯ್ಕೆ















