ಉದ್ಯೋಗ
Government Recruitment : ಕರ್ನಾಟಕ ಸರ್ಕಾರಿ ಉದ್ಯೋಗ: ವಿವಿಧ ಇಲಾಖೆಯ 5000ಕ್ಕೂ ಮಿಕ್ಕಿ ಹುದ್ದೆಗಳಿಗೆ ಅಧಿಸೂಚನೆ :10th, ಪಿಯು, ಡಿಪ್ಲೊಮ, ಡಿಗ್ರಿ, ಪಿಜಿ ಪಾಸಾದವರಿಗೆ ಅವಕಾಶ
ಸರ್ಕಾರಿ ಉದ್ಯೋಗಕ್ಕಾಗಿ ಚಾತಕ ಪಕ್ಷಿಯಂತೆ ಕಾಯುತ್ತಿದ್ದ ಅಭ್ಯರ್ಥಿಗಳಿಗೆ ಕರ್ನಾಟಕ ಸರಕಾರ ಸಿಹಿ ನೀಡಿದೆ 5000ಕ್ಕೂ ಹೆಚ್ಚು ಹುದ್ದೆಗಳ ನೇಮಕಾತಿಗೆ ಅರ್ಜಿಗಳನ್ನು ಅಹ್ವಾನಿಸಿದೆ . ಎಸ್ಎಸ್ಎಲ್ಸಿ, ಪಿಯುಸಿ, ಪದವಿ, ಸ್ನಾತಕೋತ್ತರ ಪದವಿ ಪಾಸಾದವರು ಅರ್ಹ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು. ಸರಕಾರದ ವಿವಿಧ ಇಲಾಖೆಗಳ ಹುದ್ದೆಗಳಿಗೆ ಒಟ್ಟು 5 ಬೇರೆ ಅಧಿಸೂಚನೆಗಳು ಪ್ರಕಟವಾಗಿವೆ . ಇದರಲ್ಲಿ ಸಿಂಹ ಪಾಲು ಕರ್ನಾಟಕ ಪೊಲೀಸ್ ಇಲಾಖೆಗೆ ಸೇರಿದೆ.
ಎಲ್ಲ ಹುದ್ದೆಗಳ ವಿವರ ಅರ್ಜಿ ಸಲ್ಲಿಸಲು ಬೇಕಾದ ವಿದ್ಯಾರ್ಹತೆ, ಸಿಗುವ ವೇತನ, ನೆನಪಿನಲ್ಲಿ ಇಟ್ಟುಕೊಳ್ಳಬೇಕಾದ ಪ್ರಮುಖ ದಿನಾಂಕಗಳ ಬಗ್ಗೆ ಇಲ್ಲಿ ಮಾಹಿತಿ ನೀಡಲಾಗಿದೆ. ಅರ್ಜಿ ಸಲ್ಲಿಕೆಗೂ ಮೊದಲು ಸಂಬಂಧಪಟ್ಟ ಅಧಿಸೂಚನೆಯನ್ನು ವಿವರವಾಗಿ ಓದಿಕೊಳ್ಳುವುದು ಉತ್ತಮ.
ಕೆಪಿಎಸ್ಸಿ ಇಂದ 75 ಸಹಾಯಕ ಸಾಂಖ್ಯಿಕ ಅಧಿಕಾರಿಗಳಿಗೆ ಅಧಿಸೂಚನೆ ಪ್ರಕಟ.
ಕಿರಿಯ ಇಂಜಿನಿಯರ್ (ಗ್ರೂಪ್ ಸಿ)
ಉದ್ಯೋಗ ಇಲಾಖೆ : ಜಲ ಸಂಪನ್ಮೂಲ ಇಲಾಖೆ
ಹುದ್ದೆಗಳ ಹೆಸರು : ಕಿರಿಯ ಇಂಜಿನಿಯರ್ (ಗ್ರೂಪ್ ಸಿ)
ಹುದ್ದೆಗಳ ಸಂಖ್ಯೆ : 169
ವಿದ್ಯಾರ್ಹತೆ : ಡಿಪ್ಲೊಮ ಇನ್ ಸಿವಿಲ್ /ಮೆಕ್ಯಾನಿಕಲ್ ಇಂಜಿನಿಯರಿಂಗ್ ಪಾಸ್ ಆಗಿರಬೇಕು.
ಆಯ್ಕೆಯಾದ ಅಭ್ಯರ್ಥಿಗಳಿಗೆ ರೂ.33,450- 62,600 ವರೆಗೆ ವೇತನ ಶ್ರೇಣಿ ಸೌಲಭ್ಯ ಇರುತ್ತದೆ.
ಈ ಹುದ್ದೆಗಳಿಗೆ ಅಕ್ಟೋಬರ್ 19 ರಿಂದ ನವೆಂಬರ್ 17 ರವರೆಗೆ ಅರ್ಜಿ ಸಲ್ಲಿಸಲು ಅವಕಾಶ ಇರುತ್ತದೆ.
ಇತರೆ ಹೆಚ್ಚಿನ ಮಾಹಿತಿಗಳಿಗಾಗಿ https://www.kpsc.kar.nic.in/index.html ಲಿಂಕ್ ಅನ್ನು ಕ್ಲಿಕ್ ಮಾಡಿ ಓದಿರಿ.
ಜಲ ಸಂಪನ್ಮೂಲ ಇಲಾಖೆ ನೇಮಕಾತಿ: 169 ಜೆಇ ಹುದ್ದೆಗಳಿಗೆ ಅಧಿಸೂಚನೆ ಪ್ರಕಟ
Scholarship : ವಿದ್ಯಾಸಿರಿ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಅಹ್ವಾನ – ಯಾರೆಲ್ಲ ಅರ್ಜಿ ಸಲ್ಲಿಸಬಹುದು? ನಿಯಮಗಳೇನು?
ಸಾಂಖ್ಯಿಕ ನಿರೀಕ್ಷಕರು (ಗ್ರೂಪ್ ಸಿ)
ಉದ್ಯೋಗ ಇಲಾಖೆ : ಆರ್ಥಿಕ ಮತ್ತು ಸಾಂಖ್ಯಿಕ ನಿರ್ದೇಶನಾಲಯ
ಹುದ್ದೆ ಹೆಸರು : ಸಾಂಖ್ಯಿಕ ನಿರೀಕ್ಷಕರು (ಗ್ರೂಪ್ ಸಿ)
ಹುದ್ದೆಗಳ ಸಂಖ್ಯೆ : 105 RPC
ವಿದ್ಯಾರ್ಹತೆ : ಗಣಿತ / ಕಂಪ್ಯೂಟರ್ ಸೈನ್ಸ್ / ಅರ್ಥಶಾಸ್ತ್ರ / ಸಂಖ್ಯಾಶಾಸ್ತ್ರ ಈ ನಾಲ್ಕರಲ್ಲಿ ಯಾವುದೇ ವಿಷಯದಲ್ಲಿ ಪದವಿ ಪಾಸ್ ಮಾಡಿರಬೇಕು.
ಆಯ್ಕೆಯಾದ ಅಭ್ಯರ್ಥಿಗಳಿಗೆ Rs.27,650 – 52,650 ವೇತನ ಶ್ರೇಣಿ ಇರುತ್ತದೆ.
ಅರ್ಜಿ ಸಲ್ಲಿಸಲು ಅಕ್ಟೋಬರ್ 19 ರಿಂದ ನವೆಂಬರ್ 17 ರವರೆಗೆ ಅರ್ಜಿ ಸಲ್ಲಿಸಲು ಅವಕಾಶ ಇರುತ್ತದೆ.
ಇತರೆ ಹೆಚ್ಚಿನ ಮಾಹಿತಿಗಳಿಗಾಗಿ
https://www.kpsc.kar.nic.in/index.html
ಲಿಂಕ್ ಅನ್ನು ಕ್ಲಿಕ್ ಮಾಡಿ ಓದಿರಿ.
ಆರ್ಥಿಕ ಮತ್ತು ಸಾಂಖ್ಯಿಕ ನಿರ್ದೇಶನಾಲಯದ ಸಾಂಖ್ಯಿಕ ನಿರೀಕ್ಷಕರು ಹುದ್ದೆಗೆ ಅರ್ಜಿ ಆಹ್ವಾನ.
ಸಿವಿಲ್ ಪೊಲೀಸ್ ಕಾನ್ಸ್ಟೇಬಲ್
ಉದ್ಯೋಗ ಇಲಾಖೆ : ಕರ್ನಾಟಕ ಪೊಲೀಸ್ ಇಲಾಖೆ
ಹುದ್ದೆಗಳ ಹೆಸರು : ಸಿವಿಲ್ ಪೊಲೀಸ್ ಕಾನ್ಸ್ಟೇಬಲ್
ಹುದ್ದೆಗಳ ಸಂಖ್ಯೆ : 1591
ವಿದ್ಯಾರ್ಹತೆ : ದ್ವಿತೀಯ ಪಿಯುಸಿ / 12ನೇ ತರಗತಿ ಅಥವಾ ತತ್ಸಮಾನ ವಿದ್ಯಾರ್ಹತೆ ಪಾಸ್.
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ರೂ.23500 ರಿಂದ 47650 ವರೆಗೆ ವೇತನ ಶ್ರೇಣಿ ಇರುತ್ತದೆ.
ಅರ್ಜಿ ಸಲ್ಲಿಸಲು ಅಕ್ಟೋಬರ್ 20 ರಿಂದ ನವೆಂಬರ್ 21 ರವರೆಗೆ ಅರ್ಜಿ ಅವಕಾಶ ಇರುತ್ತದೆ.
ಇತರೆ ಹೆಚ್ಚಿನ ಮಾಹಿತಿಗಳಿಗೆ https://recruitment.ksp.gov.in ಲಿಂಕ್ ಕ್ಲಿಕ್ ಮಾಡಿರಿ.
1591 ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ಗೆ ಅಧಿಸೂಚನೆ ಪ್ರಕಟ
ಸಶಸ್ತ್ರ ಪೊಲೀಸ್ ಕಾನ್ಸ್ಟೇಬಲ್
SSC CGL Recruitment 2022 : 2000 ಗ್ರೂಪ್ ಬಿ ಮತ್ತು ಗ್ರೂಪ್ ಸಿ ಹುದ್ದೆಗಳ ಅರ್ಜಿ ಸಲ್ಲಿಕೆಗೆ ಅ.13 ಕೊನೆ ದಿನ
ಉದ್ಯೋಗ ಇಲಾಖೆ : ಕರ್ನಾಟಕ ಪೊಲೀಸ್ ಇಲಾಖೆ
ಹುದ್ದೆ ಹೆಸರು : ಸಶಸ್ತ್ರ ಪೊಲೀಸ್ ಕಾನ್ಸ್ಟೇಬಲ್
ಹುದ್ದೆಗಳ ಸಂಖ್ಯೆ : 3484
ವಿದ್ಯಾರ್ಹತೆ : ಎಸ್ಎಸ್ಎಲ್ಸಿ / 10ನೇ ತರಗತಿ ಅಥವಾ ತತ್ಸಮಾನ ವಿದ್ಯಾರ್ಹತೆ ಪಾಸ್.
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ರೂ.23,500 – 47,650 ವರೆಗೆ ವೇತನ ಶ್ರೇಣಿ ಇದೆ.
ಅರ್ಜಿ ಸಲ್ಲಿಸಲು ಅಕ್ಟೋಬರ್ 31 ರವರೆಗೆ ಅವಕಾಶ ಇದೆ.
ಇತರೆ ಹೆಚ್ಚಿನ ಮಾಹಿತಿಗಳಿಗೆ https://recruitment.ksp.gov.in ಲಿಂಕ್ ಕ್ಲಿಕ್ ಮಾಡಿ ಓದಿರಿ.
3484 ಸಶಸ್ತ್ರ ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗೆ ಅಧಿಸೂಚನೆ ಪ್ರಕಟ
ಸಹಾಯಕ ಸಾಂಖ್ಯಿಕ ಅಧಿಕಾರಿ (ಗ್ರೂಪ್ ಸಿ)
ಉದ್ಯೋಗ ಇಲಾಖೆ : ಆರ್ಥಿಕ ಮತ್ತು ಸಾಂಖ್ಯಿಕ ನಿರ್ದೇಶನಾಲಯ
ಹುದ್ದೆ ಹೆಸರು : ಸಹಾಯಕ ಸಾಂಖ್ಯಿಕ ಅಧಿಕಾರಿ (ಗ್ರೂಪ್ ಸಿ)
ಹುದ್ದೆಗಳ ಸಂಖ್ಯೆ : 55+3 ಬ್ಯಾಕ್ಲಾಗ್, 17 ಹೈದೆರಾಬಾದ್ ಕರ್ನಾಟಕ ಹುದ್ದೆಗಳು.
ವಿದ್ಯಾರ್ಹತೆ: ಗಣಿತ/ ಪ್ಯೂರ್ ಮ್ಯಾಥೆಮೆಟಿಕ್ಸ್ / ಸ್ಟ್ಯಾಟಿಸ್ಟಿಕ್ಸ್ / ಅಪ್ಲೈಡ್ ಸ್ಟ್ಯಾಟಿಸ್ಟಿಕ್ಸ್ / ಸ್ಟ್ಯಾಟಿಸ್ಟಿಕ್ಸ್ ಜತೆಗೆ ಅರ್ಥಶಾಸ್ತ್ರ / ಕ್ವಾಂಟಿಟೇಟಿವ್ ತಂತ್ರಗಳು, ಪ್ಯೂರ್ ಎಕನಾಮಿಕ್ಸ್, ಪ್ಯೂರ್ ಮ್ಯಾಥೆಮೆಟಿಕ್ಸ್, ಅರ್ಥಶಾಸ್ತ್ರ ಅಥವಾ ಕಂಪ್ಯೂಟರ್ ಸೈನ್ಸ್ ಯಾವುದಾದರೂ ಒಂದು ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಾಸ್ ಆಗಿರಬೇಕು.
ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ Rs.37,900 – 70,850 ವೇತನ ಶ್ರೇಣಿ ಸೌಲಭ್ಯ ನೀಡಲಾಗುತ್ತದೆ.
ಈ ಹುದ್ದೆಗಳಿಗೆ ಅಕ್ಟೋಬರ್ 20 ರಿಂದ ನವೆಂಬರ್ 18, 2022 ರವರೆಗೆ ಅರ್ಜಿಗೆ ಅವಕಾಶ ಇರುತ್ತದೆ.
ಇತರೆ ಹೆಚ್ಚಿನ ಮಾಹಿತಿಗಳಿಗೆ https://www.kpsc.kar.nic.in/index.html ಲಿಂಕ್ ಕ್ಲಿಕ್ ಮಾಡಿ ಓದಿರಿ.
ಸುಳ್ಯ
Puttur-ಸುಳ್ಯ ಮತ್ತು ಪುತ್ತೂರಿನಲ್ಲಿ ವಿವಿಧ ಹುದ್ದೆಗಳ ಭರ್ತಿಗೆ ನೇರ ಸಂದರ್ಶನ
ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಕ್ಷೇತ್ರದಲ್ಲಿ ಪ್ರಸಿದ್ಧಿ ಪಡೆದಿರುವ ‘ವಿದ್ಯಾಮಾತಾ ಅಕಾಡೆಮಿ’ ಸಂಸ್ಥೆಯು ತನ್ನ ವಿವಿಧ ಶಾಖೆ ಮತ್ತು ವಿಭಾಗಗಳಿಗೆ ಅಗತ್ಯವಿರುವ ನೌಕರರ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದ್ದು, ನೇರ ಸಂದರ್ಶನವನ್ನು ಆಯೋಜಿಸಿದೆ.
ಪುತ್ತೂರು: ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಕ್ಷೇತ್ರದಲ್ಲಿ ಪ್ರಸಿದ್ಧಿ ಪಡೆದಿರುವ ‘ವಿದ್ಯಾಮಾತಾ ಅಕಾಡೆಮಿ’ ಸಂಸ್ಥೆಯು ತನ್ನ ವಿವಿಧ ಶಾಖೆ ಮತ್ತು ವಿಭಾಗಗಳಿಗೆ ಅಗತ್ಯವಿರುವ ನೌಕರರ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದ್ದು, ನೇರ ಸಂದರ್ಶನವನ್ನು ಆಯೋಜಿಸಿದೆ.
ಸಂಸ್ಥೆಯಲ್ಲಿ ಖಾಲಿ ಇರುವ ಕಂಪ್ಯೂಟರ್ ಶಿಕ್ಷಕಿ ಹಾಗೂ ಬಿಸಿನೆಸ್ ಡೆವಲಪ್ಮೆಂಟ್ ಆಫೀಸರ್ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಾಗುತ್ತಿದ್ದು, ಆಸಕ್ತರು ಈ ಅವಕಾಶವನ್ನು ಪಡೆದುಕೊಳ್ಳಬಹುದಾಗಿದೆ.
ಸುಳ್ಯ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಕಾರ್ಯನಿರ್ವಹಿಸಲು ಮಹಿಳಾ ಕಂಪ್ಯೂಟರ್ ಶಿಕ್ಷಕಿಯ ಹುದ್ದೆಗೆ ಅರ್ಹ ಅಭ್ಯರ್ಥಿಗಳ ಅಗತ್ಯವಿದೆ. ಅದೇ ರೀತಿ, ಪುತ್ತೂರು ಹಾಗೂ ಅದರ ಸುತ್ತಮುತ್ತಲಿನ ಭಾಗಗಳಲ್ಲಿ ಕಾರ್ಯನಿರ್ವಹಿಸಲು ಬಿಸಿನೆಸ್ ಡೆವಲಪ್ಮೆಂಟ್ ಆಫೀಸರ್ (Business Development Officer) ಹುದ್ದೆಗೆ ಮಹಿಳಾ ಮತ್ತು ಪುರುಷ ಅಭ್ಯರ್ಥಿಗಳಿಂದ ಅರ್ಜಿ ಕರೆಯಲಾಗಿದೆ. ತಮ್ಮ ವೃತ್ತಿಜೀವನವನ್ನು ಉತ್ತಮ ರೀತಿಯಲ್ಲಿ ರೂಪಿಸಿಕೊಳ್ಳಲು ಬಯಸುವ ಹಾಗೂ ಕ್ರಿಯಾಶೀಲವಾಗಿ ಕಾರ್ಯನಿರ್ವಹಿಸುವ ಅಭ್ಯರ್ಥಿಗಳಿಗೆ ಇದು ಸೂಕ್ತ ವೇದಿಕೆಯಾಗಿದೆ.
ಈ ಹುದ್ದೆಗಳಿಗೆ ಸಂಬಂಧಿಸಿದಂತೆ ನೇರ ಸಂದರ್ಶನವು ದಿನಾಂಕ 26-10-2026 ರಂದು ಬೆಳಿಗ್ಗೆ 10ಕ್ಕೆ ನಡೆಯಲಿದೆ.
ಉದ್ಯೋಗ
Puttur-Salesನಿಂದ Technicianವರೆಗೆ; ಪುತ್ತೂರಿನ ಶ್ರೀ ತಿರುಮಲಾ TVSನಲ್ಲಿ ಭರ್ಜರಿ Job Opening
ಉದ್ಯೋಗ ಹುಡುಕುತ್ತಿರುವ ಯುವಕ-ಯುವತಿಯರಿಗೆ ಇಲ್ಲಿದೆ ಉತ್ತಮ ಅವಕಾಶ. ದ್ವಿಚಕ್ರ ವಾಹನ ಕ್ಷೇತ್ರದಲ್ಲಿ ವೃತ್ತಿಜೀವನ ರೂಪಿಸಿಕೊಳ್ಳಲು ಬಯಸುವವರಿಗೆ ಪುತ್ತೂರಿನ ಶ್ರೀ ತಿರುಮಲಾ TVS ಸಂಸ್ಥೆಯಲ್ಲಿ ಸೇಲ್ಸ್, ಸರ್ವೀಸ್, ಅಕೌಂಟ್ಸ್, ಫೈನಾನ್ಸ್, ಇನ್ಶೂರೆನ್ಸ್ ಸೇರಿದಂತೆ ವಿವಿಧ ವಿಭಾಗಗಳಲ್ಲಿ ಹಲವು ಹುದ್ದೆಗಳಿಗೆ ನೇಮಕಾತಿ ನಡೆಯುತ್ತಿದೆ.
ಪುತ್ತೂರು: ಉದ್ಯೋಗ ಹುಡುಕುತ್ತಿರುವ ಯುವಕ-ಯುವತಿಯರಿಗೆ ಇಲ್ಲಿದೆ ಉತ್ತಮ ಅವಕಾಶ. ದ್ವಿಚಕ್ರ ವಾಹನ ಕ್ಷೇತ್ರದಲ್ಲಿ ವೃತ್ತಿಜೀವನ ರೂಪಿಸಿಕೊಳ್ಳಲು ಬಯಸುವವರಿಗೆ ಪುತ್ತೂರಿನ ಶ್ರೀ ತಿರುಮಲಾ TVS ಸಂಸ್ಥೆಯಲ್ಲಿ ಸೇಲ್ಸ್, ಸರ್ವೀಸ್, ಅಕೌಂಟ್ಸ್, ಫೈನಾನ್ಸ್, ಇನ್ಶೂರೆನ್ಸ್ ಸೇರಿದಂತೆ ವಿವಿಧ ವಿಭಾಗಗಳಲ್ಲಿ ಹಲವು ಹುದ್ದೆಗಳಿಗೆ ನೇಮಕಾತಿ ನಡೆಯುತ್ತಿದೆ.
TVS ಸಂಸ್ಥೆಯ ಪ್ರೀಮಿಯಂ, EV ಹಾಗೂ IC ವಿಭಾಗಗಳಲ್ಲಿ ಉದ್ಯೋಗಾವಕಾಶ ಕಲ್ಪಿಸಲಾಗಿದ್ದು, ‘ಪುತ್ತೂರಿನ ಅತಿದೊಡ್ಡ 2-ವೀಲರ್ ಜಾಬ್ ಓಪನಿಂಗ್’ ಎಂಬ ಘೋಷಣೆಯೊಂದಿಗೆ ನೇಮಕಾತಿ ಪ್ರಕ್ರಿಯೆ ನಡೆಯುತ್ತಿದೆ.
ಸೇಲ್ಸ್ ವಿಭಾಗದಲ್ಲಿ ಹಲವು ಅವಕಾಶ
ಪುತ್ತೂರು ಸೇಲ್ಸ್ ವಿಭಾಗದಲ್ಲಿ ಸೇಲ್ಸ್ ಎಕ್ಸಿಕ್ಯೂಟಿವ್, ಸೇಲ್ಸ್ ಮ್ಯಾನೇಜರ್, ಎಕ್ಸ್ಚೇಂಜ್ ಕೋಆರ್ಡಿನೇಟರ್, ಸೇಲ್ಸ್ ಟೆಲಿಕಾಲಿಂಗ್ (CRE), ಅಕೌಂಟ್ಸ್ ಮ್ಯಾನೇಜರ್, ಫೈನಾನ್ಸ್ ಮ್ಯಾನೇಜರ್, ರಿಸೆಪ್ಷನಿಸ್ಟ್, RTO ಎಕ್ಸಿಕ್ಯೂಟಿವ್, ಇನ್ವಾಯ್ಸ್ ಎಕ್ಸಿಕ್ಯೂಟಿವ್, ಅಕೌಂಟ್ಸ್ ಎಕ್ಸಿಕ್ಯೂಟಿವ್, ಫೈನಾನ್ಸ್ ಕೋಆರ್ಡಿನೇಟರ್ ಹಾಗೂ ಇನ್ಶೂರೆನ್ಸ್ ಎಕ್ಸಿಕ್ಯೂಟಿವ್ ಸೇರಿದಂತೆ ಹಲವು ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ.

ಸರ್ವೀಸ್ ವಿಭಾಗದಲ್ಲೂ ಭರ್ಜರಿ ನೇಮಕಾತಿ
ಸರ್ವೀಸ್ ವಿಭಾಗದಲ್ಲಿ ಅಡ್ವೈಸರ್, ಫ್ಲೋರ್ ಸೂಪರ್ವೈಸರ್, ಟೆಕ್ನಿಷಿಯನ್, ಪಾರ್ಟ್ಸ್ ಪಿಕರ್, ಬಿಲ್ಲಿಂಗ್/ರಿಸೆಪ್ಷನಿಸ್ಟ್ ಎಕ್ಸಿಕ್ಯೂಟಿವ್, ಪಾರ್ಟ್ಸ್ ಮ್ಯಾನೇಜರ್, ವಾಷಿಂಗ್ ಸಿಬ್ಬಂದಿ, PDI ಟೆಕ್ನಿಷಿಯನ್, ಸರ್ವೀಸ್ ಮ್ಯಾನೇಜರ್, ನೆಟ್ವರ್ಕ್ ಕೋಆರ್ಡಿನೇಟರ್, ವಾರಂಟಿ ಇನ್ಚಾರ್ಜ್, ಅಕ್ಸಿಡೆಂಟ್ ಸೂಪರ್ವೈಸರ್, CRE ಟೆಲಿಕಾಲಿಂಗ್, CRM, PDI ಸೂಪರ್ವೈಸರ್ ಹಾಗೂ ಪೇಂಟರ್ ಮತ್ತು ಡೆಂಟಿಂಗ್ ಹುದ್ದೆಗಳಿಗೆ ಅವಕಾಶವಿದೆ.

ಬೆಳ್ಳಾರೆಯಲ್ಲೂ ಉದ್ಯೋಗದ ಬಾಗಿಲು ತೆರೆದಿದೆ
ಬೆಳ್ಳಾರೆ ಭಾಗದಲ್ಲಿಯೂ ಉದ್ಯೋಗಾವಕಾಶ ಕಲ್ಪಿಸಲಾಗಿದೆ. ಸರ್ವೀಸ್ ವಿಭಾಗದಲ್ಲಿ ಅಡ್ವೈಸರ್, ಪಾರ್ಟ್ಸ್ ಪಿಕರ್, ಬಿಲ್ಲಿಂಗ್/ರಿಸೆಪ್ಷನಿಸ್ಟ್ ಎಕ್ಸಿಕ್ಯೂಟಿವ್, ಫ್ಲೋರ್ ಸೂಪರ್ವೈಸರ್, ಟೆಕ್ನಿಷಿಯನ್ ಹಾಗೂ ವಾಷಿಂಗ್ ಸಿಬ್ಬಂದಿ ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ.

ಸೇಲ್ಸ್ ವಿಭಾಗದಲ್ಲಿ 6 ಸೇಲ್ಸ್ ಎಕ್ಸಿಕ್ಯೂಟಿವ್ ಹಾಗೂ 2 ರಿಸೆಪ್ಷನಿಸ್ಟ್ ಹುದ್ದೆಗಳಿಗೂ ಅವಕಾಶವಿದೆ.
PF, ESI ಜೊತೆಗೆ ₹25 ಸಾವಿರದವರೆಗೆ ಗಳಿಕೆ!
ಆಯ್ಕೆಯಾಗುವ ಅಭ್ಯರ್ಥಿಗಳಿಗೆ PF, ESI, ಸ್ಪಾಟ್ ಇನ್ಸೆಂಟಿವ್, ಮಾಸಿಕ ಹಾಗೂ ತ್ರೈಮಾಸಿಕ ಇನ್ಸೆಂಟಿವ್ ಸೌಲಭ್ಯಗಳು ದೊರೆಯಲಿವೆ. 25 ಕಿ.ಮೀ.ಗಿಂತ ಹೆಚ್ಚಿನ ಪ್ರಯಾಣಕ್ಕೆ ಪೆಟ್ರೋಲ್ ವೋಚರ್ ನೀಡಲಾಗುತ್ತಿದ್ದು, ಅರ್ಹ ಅಭ್ಯರ್ಥಿಗಳಿಗೆ ತಿಂಗಳಿಗೆ ₹25,000 ವರೆಗೆ ಗಳಿಸುವ ಅವಕಾಶ ಇದೆ ಎಂದು ಸಂಸ್ಥೆ ತಿಳಿಸಿದೆ.
ದ್ವಿಚಕ್ರ ವಾಹನ ಕ್ಷೇತ್ರದಲ್ಲಿ ಆಸಕ್ತಿ ಹೊಂದಿರುವವರು ಮಾತ್ರವಲ್ಲದೆ, ಸೇಲ್ಸ್, ಅಕೌಂಟ್ಸ್, ಫೈನಾನ್ಸ್, ಟೆಲಿಕಾಲಿಂಗ್, ಗ್ರಾಹಕ ಸೇವೆ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಉದ್ಯೋಗ ಹುಡುಕುತ್ತಿರುವವರೂ ಈ ಅವಕಾಶವನ್ನು ಬಳಸಿಕೊಳ್ಳಬಹುದಾಗಿದೆ.
ಉದ್ಯೋಗಾವಕಾಶ ಸೀಮಿತವಾಗಿರುವುದರಿಂದ ಆಸಕ್ತ ಅಭ್ಯರ್ಥಿಗಳು ಕೂಡಲೇ ಸಂಪರ್ಕಿಸಬಹುದು.
📞 ಸಂಪರ್ಕ: +91 82965 79206
📍 ವಿಳಾಸ: ಶ್ರೀ ತಿರುಮಲಾ TVS, ಬೈಪಾಸ್ ಜಂಕ್ಷನ್, ಮಂಜಲ್ಪಡ್ಡು, ಮೇನ್ ರೋಡ್, ಬೋಳ್ವಾರ್ ವೆಸ್ಟ್, ಪುತ್ತೂರು–574201.
ಉದ್ಯೋಗ
Constable recruitment: ಕಾನ್ಸ್ಟೆಬಲ್ ನೇಮಕಾತಿ: ಸೆ.28ರಿಂದ ದೈಹಿಕ ಪರೀಕ್ಷೆ; 3,991 ಹುದ್ದೆಗಳಿಗೆ 19,396 ಅಭ್ಯರ್ಥಿಗಳು
ರಾಜ್ಯ ಪೊಲೀಸ್ ಇಲಾಖೆಯ ಸಿವಿಲ್ ಪೊಲೀಸ್ ಕಾನ್ಸ್ಟೆಬಲ್ (ಆರ್ಪಿಸಿ ಮತ್ತು ಕೆಕೆ) ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದ ದೇಹದಾರ್ಢ್ಯ ಪರೀಕ್ಷೆ (ಪಿಎಸ್ಟಿ) ಹಾಗೂ ಸಹಿಷ್ಣುತೆ ಪರೀಕ್ಷೆ (ಇಟಿ) ಸೆ.28ರಿಂದ ಆರಂಭವಾಗಲಿದೆ. ಪೊಲೀಸ್ ನೇಮಕಾತಿ ವಿಭಾಗವು ವಲಯವಾರು ವೇಳಾಪಟ್ಟಿಯನ್ನು ಪ್ರಕಟಿಸಿದೆ.
ಬೆಂಗಳೂರು, ಸೆ.25: ರಾಜ್ಯ ಪೊಲೀಸ್ ಇಲಾಖೆಯ ಸಿವಿಲ್ ಪೊಲೀಸ್ ಕಾನ್ಸ್ಟೆಬಲ್ (ಆರ್ಪಿಸಿ ಮತ್ತು ಕೆಕೆ) ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದ ದೇಹದಾರ್ಢ್ಯ ಪರೀಕ್ಷೆ (ಪಿಎಸ್ಟಿ) ಹಾಗೂ ಸಹಿಷ್ಣುತೆ ಪರೀಕ್ಷೆ (ಇಟಿ) ಸೆ.28ರಿಂದ ಆರಂಭವಾಗಲಿದೆ. ಪೊಲೀಸ್ ನೇಮಕಾತಿ ವಿಭಾಗವು ವಲಯವಾರು ವೇಳಾಪಟ್ಟಿಯನ್ನು ಪ್ರಕಟಿಸಿದೆ.
ಈ ನೇಮಕಾತಿ ಪ್ರಕ್ರಿಯೆಯಡಿ ಒಟ್ಟು 3,991 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದ್ದು, ರಾಜ್ಯಾದ್ಯಂತ 19,396 ಅಭ್ಯರ್ಥಿಗಳು ದೈಹಿಕ ಪರೀಕ್ಷೆಗೆ ಅರ್ಹತೆ ಪಡೆದಿದ್ದಾರೆ. ಉಳಿಕೆ ಮೂಲ ವೃಂದದ (ಆರ್ಪಿಸಿ) 3,395 ಹುದ್ದೆಗಳಿಗೆ 16,454 ಅಭ್ಯರ್ಥಿಗಳು ಹಾಗೂ ಕಲ್ಯಾಣ ಕರ್ನಾಟಕ (ಕೆಕೆ) ವೃಂದದ 596 ಹುದ್ದೆಗಳಿಗೆ 2,942 ಅಭ್ಯರ್ಥಿಗಳು ಪರೀಕ್ಷೆಗೆ ಆಯ್ಕೆಯಾಗಿದ್ದಾರೆ.
ಮಂಗಳೂರಿನಲ್ಲಿ 395 ಹುದ್ದೆಗಳಿಗೆ 1,803 ಅಭ್ಯರ್ಥಿಗಳು
ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ (ಕಾರವಾರ), ಚಿಕ್ಕಮಗಳೂರು ಹಾಗೂ ಮಂಗಳೂರು ನಗರ ಘಟಕಗಳ ವ್ಯಾಪ್ತಿಯ 395 ಹುದ್ದೆಗಳಿಗೆ 1,803 ಅಭ್ಯರ್ಥಿಗಳು ದೈಹಿಕ ಪರೀಕ್ಷೆಯಲ್ಲಿ ಭಾಗವಹಿಸಲಿದ್ದಾರೆ. ಈ ಅಭ್ಯರ್ಥಿಗಳಿಗೆ ಸೆ.28ರಿಂದ ಅ.3ರವರೆಗೆ ಮಂಗಳೂರಿನ ಲಾಲ್ಬಾಗ್ನ ಮಂಗಳ ಕ್ರೀಡಾಂಗಣದಲ್ಲಿ ದೈಹಿಕ ಪರೀಕ್ಷೆ ನಡೆಯಲಿದೆ.
ಕರೆಪತ್ರ ಡೌನ್ಲೋಡ್ಗೆ ಸೂಚನೆ
ದೈಹಿಕ ಪರೀಕ್ಷೆಗೆ ಅರ್ಹತೆ ಪಡೆದ ಅಭ್ಯರ್ಥಿಗಳು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ (ಕೆಇಎ) ಅಧಿಕೃತ ವೆಬ್ಸೈಟ್ನಿಂದ ತಮ್ಮ ಕರೆಪತ್ರವನ್ನು ಡೌನ್ಲೋಡ್ ಮಾಡಿಕೊಳ್ಳಬಹುದು. ಅಭ್ಯರ್ಥಿಗಳು ಕರೆಪತ್ರದಲ್ಲಿ ನಮೂದಿಸಿರುವ ದಿನಾಂಕದಂದು ನಿಗದಿತ ಪರೀಕ್ಷಾ ಕೇಂದ್ರಕ್ಕೆ ಕಡ್ಡಾಯವಾಗಿ ಹಾಜರಾಗುವಂತೆ ಪೊಲೀಸ್ ನೇಮಕಾತಿ ವಿಭಾಗ ಸೂಚಿಸಿದೆ.
ಕಾನ್ಸ್ಟೆಬಲ್ ಲಿಖಿತ ಪರೀಕ್ಷೆಯ ತಾತ್ಕಾಲಿಕ ಫಲಿತಾಂಶ ಪ್ರಕಟ
ಇದೇ ವೇಳೆ, ಕೆಎಸ್ಆರ್ಪಿ, ಕೆಎಸ್ಐಎಸ್ಎಫ್ ಹಾಗೂ ಐಆರ್ಬಿ ಪೊಲೀಸ್ ಕಾನ್ಸ್ಟೆಬಲ್ ನೇಮಕಾತಿಗಾಗಿ ಸೆ.20ರಂದು ನಡೆದ ಲಿಖಿತ ಪರೀಕ್ಷೆಯ ತಾತ್ಕಾಲಿಕ ಫಲಿತಾಂಶವನ್ನು ಕೇವಲ ಐದು ದಿನಗಳಲ್ಲಿ ಕೆಇಎ ಪ್ರಕಟಿಸಿದೆ.
ಪರೀಕ್ಷೆಯ ಫಲಿತಾಂಶಕ್ಕೆ ಆಕ್ಷೇಪಣೆಗಳಿದ್ದಲ್ಲಿ ಅಭ್ಯರ್ಥಿಗಳು ಸೆ.27ರೊಳಗೆ ನಿಗದಿತ ಲಿಂಕ್ ಮೂಲಕ ಸಲ್ಲಿಸಬಹುದು ಎಂದು ಕೆಇಎ ತಿಳಿಸಿದೆ.
ಉಳಿಕೆ ಮೂಲ ವೃಂದದ 1,13,390 ಹಾಗೂ ಕಲ್ಯಾಣ ಕರ್ನಾಟಕ ವೃಂದದ 33,061 ಅಭ್ಯರ್ಥಿಗಳು ಲಿಖಿತ ಪರೀಕ್ಷೆ ಬರೆದಿದ್ದರು. ಪರೀಕ್ಷೆ ನಡೆದ ದಿನವೇ ಎಲ್ಲ ಅಭ್ಯರ್ಥಿಗಳ ಒಎಂಆರ್ ಉತ್ತರ ಪತ್ರಿಕೆಗಳನ್ನು ಸ್ಕ್ಯಾನ್ ಮಾಡಿ ವೆಬ್ಸೈಟ್ನಲ್ಲಿ ಅಪ್ಲೋಡ್ ಮಾಡಲಾಗಿತ್ತು ಎಂದು ಕೆಇಎ ಕಾರ್ಯನಿರ್ವಾಹಕ ನಿರ್ದೇಶಕ ಎಚ್. ಪ್ರಸನ್ನ ತಿಳಿಸಿದ್ದಾರೆ.
-
ಅಪರಾಧ18 hours agoMangalore-ಕಣಚೂರು ಮೆಡಿಕಲ್ ಕಾಲೇಜು ಆವರಣದಲ್ಲೇ ವಿದ್ಯಾರ್ಥಿನಿ ಅಪಹರಣ..! ಹಿಂದೂ ಯುವಕ ಲವ್ ಆರೋಪ – ವಿಡಿಯೋ ವೈರಲ್ : ತನಿಖೆಗೆ ಕಮಿಷನರ್ ಸೂಚನೆ
-
ರಾಜಕೀಯ18 hours agoBJP leaders-ಗಡಿಪಾರಿಗೊಳಗಾದ ನರಸಿಂಹ ಮಾಣಿ ಮನೆಗೆ ಬಿಜೆಪಿ ಮುಖಂಡರ ಭೇಟಿ; ಕುಟುಂಬಕ್ಕೆ ಆತ್ಮಸ್ಥೈರ್ಯ
-
ಚಿನ್ನ-ಬೆಳ್ಳಿ ದರ23 hours agoGold Rate Today-ಆಭರಣಪ್ರಿಯರಿಗೆ ಗುಡ್ನ್ಯೂಸ್: ಚಿನ್ನದ ಬೆಲೆಯಲ್ಲಿ ಭಾರೀ ಕುಸಿತ: 12 ಸಾವಿರ ರೂ. ಗಡಿಯೊಳಗೆ ಬಂದ ಆಭರಣ ಚಿನ್ನ..!
-
ಬಿಗ್ ನ್ಯೂಸ್17 hours agoHigh Court-Social Media ಅಕೌಂಟ್ ಇದ್ದ ಮಾತ್ರಕ್ಕೆ ಮನಸ್ಸಿಗೆ ಬಂದಿದ್ದನ್ನೆಲ್ಲ ಪೋಸ್ಟ್ ಮಾಡುವ Free Licence ಇಲ್ಲ : ಬೆಳ್ತಂಗಡಿಯ ಮೋಹನ್ ಬೋಳಂಗಡಿ – ಶುಭಾ ರೈ ವಿರುದ್ಧ ದಾಖಲಾದ ಪ್ರಕರಣದಲ್ಲಿ ಹೈಕೋರ್ಟ್ ಮಹತ್ವದ ಎಚ್ಚರಿಕೆ
-
ಸಿನೆಮಾ23 hours agoArjun Sarja-ಪುತ್ರಿ ಐಶ್ವರ್ಯಾ ವಿರುದ್ಧ ಅವಹೇಳನಕಾರಿ ವರದಿ: ಮಾಧ್ಯಮಗಳ ವಿರುದ್ಧ ಸಿಡಿದೆದ್ದ ಅರ್ಜುನ್ ಸರ್ಜಾ; ಅಧಿಕೃತ ದೂರು ದಾಖಲು
-
ಸ್ಥಳೀಯ24 hours agoBaindoor-ರೈಲಿನಲ್ಲಿ ಮೊಬೈಲ್ ಕಳವು, UPI ಮೂಲಕ ಹಣ ವರ್ಗಾವಣೆ: ಬೈಂದೂರು ಪೊಲೀಸರಿಂದ ಕುಖ್ಯಾತ ಆರೋಪಿ ಬಂಧನ
-
ಅಪರಾಧ23 hours agoManipal police-ಪಟಾಕಿ ಪ್ರಕರಣ: ಮಣಿಪಾಲ ಪೊಲೀಸರ ವಿರುದ್ಧ ದೌರ್ಜನ್ಯ ಆರೋಪ: ಸಿಎಂಗೆ ಇ-ಮೇಲ್ ಮಾಡಿದ ವಿದ್ಯಾರ್ಥಿಗಳು
-
ಅಪರಾಧ24 hours agoMangalore-ಮಂಗಳೂರು: ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ಆರೋಪ: ಮತ್ತೊಂದು ಪೋಕ್ಸೋ ಪ್ರಕರಣದಲ್ಲಿ ಧರ್ಮಗುರು ಮರುಬಂಧನ















