ಪುತ್ತೂರು
ರಾಜ್ಯಮಟ್ಟದ ಈಜು ಸ್ಪರ್ಧೆಯಲ್ಲಿ ಪುತ್ತೂರು ಅಕ್ವಾಟಿಕ್ ಕ್ಲಬ್ ಗೆ 21 ಪದಕ : 6 ಈಜುಗಾರರು ರಾಷ್ಟ್ರಮಟ್ಟಕ್ಕೆ
ಪುತ್ತೂರು: ಬೆಂಗಳೂರಿನ ಬಸವನಗುಡಿ ಈಜು ಕೇಂದ್ರದಲ್ಲಿ ನಡೆದ SGFI ರಾಜ್ಯ ಮಟ್ಟದ ಶಾಲಾ ಕ್ರೀಡಾಕೂಟದ ಈಜು ಸ್ಪರ್ಧೆಯಲ್ಲಿ ಬಾಲವನದ ಪುತ್ತೂರು ಅಕ್ವಾಟಿಕ್ ಕ್ಲಬ್ ಈಜುಗಾರರು 21 ಪದಕ ಪಡೆದು ಸಾಧನೆ ಮೆರೆದು ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಪಿಎಸಿ ನ ಈಜುಗಾರರು ರಾಜ್ಯಮಟ್ಟದ ಸ್ಪರ್ಧೆ ಕೂಟದಲ್ಲಿ 7 ಚಿನ್ನದ ಪದಕ, 6 ಬೆಳ್ಳಿ ಮತ್ತು 8 ಕಂಚಿನ ಪದಕಗಳನ್ನು ಗೆದ್ದಿದ್ದಾರೆ.
ವಿವಿಧ ಶಾಲೆಗಳನ್ನು ಪ್ರತಿನಿಧಿಸುವ ಪುತ್ತೂರಿನ PAC ಯ 15 ಈಜುಗಾರರು ರಾಜ್ಯ ಮಟ್ಟದ ಸ್ಪರ್ಧೆಯಲ್ಲಿ ಭಾಗವಹಿಸಿದ್ದರು ಮತ್ತು 6 ಈಜುಗಾರರು ಈ ವರ್ಷದ ಕೊನೆಯಲ್ಲಿ ದೆಹಲಿಯಲ್ಲಿ ನಡೆಯಲಿರುವ ರಾಷ್ಟ್ರಮಟ್ಟಕ್ಕೆ ಅರ್ಹತೆ ಪಡೆದಿದ್ದಾರೆ.
ಬೆಥನಿ ಪ್ರೌಢಶಾಲೆಯ 9ನೇ ತರಗತಿಯ ವಿದ್ಯಾರ್ಥಿನಿ ಪ್ರತೀಕ್ಷಾ ಶೆಣೈ ತನ್ನ ಚೊಚ್ಚಲ ರಾಜ್ಯಮಟ್ಟದ ಸ್ಪರ್ಧೆಯಲ್ಲಿ 5 ಪದಕಗಳನ್ನು ಗೆಲ್ಲುವ ಮೂಲಕ ಅದ್ಭುತ ಪ್ರದರ್ಶನ ನೀಡಿದರು. 50,100 ಮತ್ತು 200 ಮೀಟರ್ಗಳ ಬ್ರೆಸ್ಟ್ಸ್ಟ್ರೋಕ್ನಲ್ಲಿ 3 ಚಿನ್ನದ ಪದಕಗಳನ್ನು ಗೆಲ್ಲುವ ಮೂಲಕ ರಾಷ್ಟ್ರಮಟ್ಟಕ್ಕೆ ಅರ್ಹತೆ ಪಡೆದರು.
4100 ಮೀಟರ್ಸ್ ಮೆಡ್ಲೆ ರಿಲೇಯಲ್ಲಿ 1 ಬೆಳ್ಳಿ ಪದಕ ಮತ್ತು 4100 ಫ್ರೀಸ್ಟೈಲ್ ರಿಲೇಯಲ್ಲಿ 1 ಕಂಚು ಗೆದ್ದಿದ್ದಾರೆ.
ಸೈಂಟ್ ಫಿಲೋಮಿನಾ ಆಂಗ್ಲ ಮಾಧ್ಯಮ ಶಾಲೆಯ 6ನೇ ತರಗತಿಯ ವಿದ್ಯಾರ್ಥಿ ಲಿಖಿತ್ ರಾಮಚಂದ್ರ 200 ಮೀಟರ್ಸ್ ವೈಯಕ್ತಿಕ ಮೆಡ್ಲೆಯಲ್ಲಿ ಬೆಳ್ಳಿ ಪದಕ ಗೆಲ್ಲುವ ಮೂಲಕ ರಾಷ್ಟ್ರಮಟ್ಟಕ್ಕೆ ಅರ್ಹತೆ ಪಡೆದಿದ್ದಾರೆ. ಅವರು 100 ಮೀಟರ್ ಬ್ಯಾಕ್ಸ್ಟ್ರೋಕ್ನಲ್ಲಿ 1 ಕಂಚಿನ ಪದಕವನ್ನು ಗೆದ್ದರು ಮತ್ತು 4100 ಮೀಟರ್ಸ್ ಫ್ರೀಸ್ಟೈಲ್ ರಿಲೇ ಮತ್ತು 4100 ವೈಯಕ್ತಿಕ ಮೆಡ್ಲೆ ರಿಲೇಯಲ್ಲಿ 2 ಬೆಳ್ಳಿ ಪದಕ ಗೆದ್ದಿದ್ದಾರೆ.
ನರಿಮೊಗರು ಸಾಂದೀಪನಿ ಗ್ರಾಮೀಣ ಶಿಕ್ಷಣ ಸಂಸ್ಥೆಯ 9ನೇ ತರಗತಿ ವಿದ್ಯಾರ್ಥಿ ಅಮನರಾಜ್ 50 ಮೀಟರ್ ಬ್ಯಾಕ್ ಸ್ಟ್ರೋಕ್ನಲ್ಲಿ ಚಿನ್ನದ ಪದಕ ಗೆಲ್ಲುವ ಮೂಲಕ ರಾಷ್ಟ್ರಮಟ್ಟಕ್ಕೆ ಅರ್ಹತೆ ಪಡೆದಿದ್ದಾರೆ.
ಸುದಾನ ವಸತಿ ಶಾಲೆಯ 8ನೇ ತರಗತಿ ವಿದ್ಯಾರ್ಥಿ ನಿಕೋಲಸ್ ರೋನಿನ್ ಮಥಾಯಿಸ್ 50 ಮತ್ತು 100 ಮೀಟರ್ಸ್ ಬ್ರೆಸ್ಟ್ ಸ್ಟ್ರೋಕ್ ನಲ್ಲಿ 2 ಚಿನ್ನದ ಪದಕಗಳನ್ನು ಗೆಲ್ಲುವ ಮೂಲಕ ರಾಷ್ಟ್ರೀಯ ಸ್ಪರ್ಧೆಗೆ ಅರ್ಹತೆ ಪಡೆದಿದ್ದಾರೆ. ಅವರು 4100 ಮೀಟರ್ಸ್ ಫ್ರೀಸ್ಟೈಲ್ ರಿಲೇ ಮತ್ತು 4100 ಮೀಟರ್ಸ್ ಮೆಡ್ಲೆ ರಿಲೇಯಲ್ಲಿ 2 ಬೆಳ್ಳಿ ಪದಕಗಳನ್ನು ಗೆದ್ದಿದ್ದಾರೆ.
ಸುದಾನ ವಸತಿ ಶಾಲೆಯ 10ನೇ ತರಗತಿ ವಿದ್ಯಾರ್ಥಿ ನಂದನ್ 50 ಮೀಟರ್ ಬ್ರೆಸ್ಟ್ ಸ್ಟ್ರೋಕ್ ನಲ್ಲಿ 1 ಬೆಳ್ಳಿ ಪದಕ ಗೆಲ್ಲುವ ಮೂಲಕ ರಾಷ್ಟ್ರಮಟ್ಟಕ್ಕೆ ಅರ್ಹತೆ ಪಡೆದಿದ್ದಾರೆ. 200 ಮೀಟರ್ಸ್ ಬ್ರೆಸ್ಟ್ಸ್ಟ್ರೋಕ್ನಲ್ಲಿ 1 ಕಂಚಿನ ಪದಕ ಗೆದ್ದಿದ್ದಾರೆ.
ಬೆಥನಿ ಪ್ರೌಢಶಾಲೆಯ 10 ನೇ ತರಗತಿ ವಿದ್ಯಾರ್ಥಿನಿ ಪ್ರಾಧಿ ಕ್ಲೇರ್ ಪಿಂಟೊ 50 ಮೀಟರ್ ಬ್ಯಾಕ್ಸ್ಟ್ರೋಕ್ನಲ್ಲಿ 1 ಬೆಳ್ಳಿ ಪದಕ ಗೆಲ್ಲುವ ಮೂಲಕ ರಾಷ್ಟ್ರಮಟ್ಟಕ್ಕೆ ಅರ್ಹತೆ ಪಡೆದಿದ್ದಾರೆ. 200 ಮೀಟರ್ ಬ್ಯಾಕ್ಸ್ಟ್ರೋಕ್ ಮತ್ತು 4*100 ಫ್ರೀಸ್ಟೈಲ್ನಲ್ಲಿ ಕಂಚು ಮತ್ತು 4×100 ಮೀಟರ್ ವೈಯಕ್ತಿಕ ಮೆಡ್ಲೆ ರಿಲೇಯಲ್ಲಿ ಬೆಳ್ಳಿ ಪದಕವನ್ನು ಗೆದ್ದಿದ್ದಾರೆ.
ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ 10ನೇ ತರಗತಿ ವಿದ್ಯಾರ್ಥಿ ಧನ್ವಿತ್ 4×100 ಮೀಟರ್ ಫ್ರೀಸ್ಟೈಲ್ ರಿಲೇಯಲ್ಲಿ 1 ಚಿನ್ನದ ಪದಕ ಹಾಗೂ 100 ಮೀಟರ್ ಫ್ರೀಸ್ಟೈಲ್ ನಲ್ಲಿ ಕಂಚಿನ ಪದಕ ಗೆದ್ದಿದ್ದಾರೆ.
ಸುದಾನ ವಸತಿ ಶಾಲೆಯ 10ನೇ ತರಗತಿಯ ವಿದ್ಯಾರ್ಥಿ ಅನಿಕೇತ್ 200 ಮೀಟರ್ಸ್ ವೈಯಕ್ತಿಕ ಮೆಡ್ಲೆ ಮತ್ತು 400 ಮೀಟರ್ಸ್ ವೈಯಕ್ತಿಕ ಮೆಡ್ಲೆ ರಿಲೇಯಲ್ಲಿ 2 ಕಂಚಿನ ಪದಕ ಗೆದ್ದಿದ್ದಾರೆ.
ಸುದಾನ ವಸತಿ ಶಾಲೆಯ 8ನೇ ತರಗತಿ ವಿದ್ಯಾರ್ಥಿನಿ ಅನಿಕಾ 200 ಮೀಟರ್ಸ್ ಫ್ರೀಸ್ಟೈಲ್ನಲ್ಲಿ ಕಂಚಿನ ಪದಕ ಗೆದ್ದಿದ್ದಾರೆ.
ಅನ್ವಿತ್ ರೈ ಬಾರಿಕೆ, ಚರಿತ್ , ಪ್ರತೀಕ್ಷಾ ಆಳ್ವ, ಮಾಹಿನ್ ಜೋಯಲ್ ಡಿ ಸೋಜಾ, ಮಾನ್ವಿ ರಾಜ್ಯ ಮಟ್ಟದ ಸ್ಪರ್ಧೆಯಲ್ಲಿ ಭಾಗವಹಿಸಿದ್ದರೆ.
ಈ ಎಲ್ಲಾ ಈಜುಪಟುಗಳಿಗೆ ಪುತ್ತೂರಿನ ಡಾ.ಶಿವರಾಮ ಕಾರಂತ ಬಾಲವನ ಈಜುಕೊಳ ಮತ್ತು ಮಂಗಳೂರಿನ ಸೇಂಟ್ ಅಲೋಶಿಯಸ್ ಈಜುಕೊಳದಲ್ಲಿ ಕೋಚ್ ಪಾರ್ಥ ವಾರಣಾಶಿ, ನಿರೂಪ್, ರೋಹಿತ್ ಮತ್ತು ದೀಕ್ಷಿತ್ ತರಬೇತಿ ನೀಡಿದ್ದಾರೆ.
ಮಂಗಳೂರು
Bantwal rape case verdict ಮಂಗಳೂರು: ಮಹಿಳೆ ಮೇಲೆ ಹಲ್ಲೆ ನಡೆಸಿ ಅತ್ಯಾಚಾರ : ಆರೋಪಿಗೆ 10 ವರ್ಷ ಜೈಲು, ₹54 ಸಾವಿರ ದಂಡ

ಬಂಟ್ವಾಳ: ಮಹಿಳೆಗೆ ಹಲ್ಲೆ ನಡೆಸಿ ಅತ್ಯಾಚಾರವೆಸಗಿ , ಜೀವ ಬೆದರಿಕೆ ಹಾಕಿದ ಅಪರಾಧಿಗೆ 10 ವರ್ಷಗಳ ಜೈಲು ಶಿಕ್ಷೆ ಹಾಗೂ ₹54 ಸಾವಿರ ದಂಡ ವಿಧಿಸಿ ಮಂಗಳೂರಿನ 6ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಆದೇಶಿಸಿದೆ.
Bantwal rape case verdict: ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 2021ರಲ್ಲಿ ಈ ಘಟನೆ ನಡೆದಿತ್ತು. ಸಂತ್ರಸ್ತ ಮಹಿಳೆಯ ಮನೆಯ ನೆರೆಮನೆಯ ನಿವಾಸಿಯಾಗಿದ್ದ ಅನಿಲ್ ಎಂಬಾತ ಮಹಿಳೆಯ ಮೇಲೆ ಹಲ್ಲೆ ನಡೆಸಿ ಅತ್ಯಾಚಾರವೆಸಗಿದ್ದಲ್ಲದೆ, ಜೀವ ಬೆದರಿಕೆಯನ್ನೂ ಹಾಕಿದ್ದ ಎಂದು ಆರೋಪಿಸಲಾಗಿತ್ತು. ಈ ಕುರಿತು ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಅ.ಕ್ರ. 92/2021ರಂತೆ ಭಾರತೀಯ ದಂಡ ಸಂಹಿತೆಯ ಕಲಂ 376, 448, 323, 504 ಹಾಗೂ 506ರ ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು.
ಪ್ರಕರಣದ ತನಿಖೆ ಕೈಗೆತ್ತಿಕೊಂಡಿದ್ದ ಅಂದಿನ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯ ಪೊಲೀಸ್ ಉಪನಿರೀಕ್ಷಕ ಪ್ರಸನ್ನ ಎಂ.ಎಸ್. ಅವರು ಆರೋಪಿಯನ್ನು ಪತ್ತೆಹಚ್ಚಿದ್ದರು. ಬಳಿಕ ಪ್ರಕರಣದ ತನಿಖಾಧಿಕಾರಿಗಳಾಗಿದ್ದ ಬಂಟ್ವಾಳ ವೃತ್ತ ನಿರೀಕ್ಷಕ ಟಿ.ಡಿ. ನಾಗರಾಜ್ ಅವರು ಅಗತ್ಯ ಸಾಕ್ಷ್ಯಾಧಾರಗಳನ್ನು ಸಂಗ್ರಹಿಸಿ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು.
ಮಂಗಳೂರಿನ 6ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದಲ್ಲಿ ನಡೆದ ವಿಚಾರಣೆಯಲ್ಲಿ ಆರೋಪಿತನ ವಿರುದ್ಧದ ಆರೋಪಗಳು ಸಾಬೀತಾದ ಹಿನ್ನೆಲೆಯಲ್ಲಿ ನ್ಯಾಯಾಧೀಶರಾದ ರಾಜೇಶ ಮಾರುತಿ ಕಾಮಟೆ ಅವರು ಆರೋಪಿಗೆ 10 ವರ್ಷಗಳ ಜೈಲು ಶಿಕ್ಷೆ ಹಾಗೂ ₹54,000 ದಂಡ ವಿಧಿಸಿ ಆದೇಶ ಹೊರಡಿಸಿದ್ದಾರೆ.
ಪ್ರಕರಣದಲ್ಲಿ ಸರ್ಕಾರಿ ಅಭಿಯೋಜಕ ಮೋತಿಲಾಲ ಚೌಧರಿ ಅವರು ಸರ್ಕಾರದ ಪರವಾಗಿ ಸಮರ್ಥವಾಗಿ ವಾದ ಮಂಡಿಸಿದ್ದರು.
ಶಿಕ್ಷಣ
Puttur-ಪುತ್ತೂರಿನ ಸುಪ್ರಜಾ ರಾವ್ ಗೆ ರಾಜ್ಯೋತ್ಸವ ಸಾಧಕ ಪುರಸ್ಕಾರ
ಕನ್ನಡ ರಾಜ್ಯೋತ್ಸವ ಆಚರಣಾ ಸಮಿತಿ ಕಲ್ಕೂರ ಪ್ರತಿಷ್ಠಾನ(ರಿ) ಕನ್ನಡ ರಾಜ್ಯೋತ್ಸವದ ಅಂಗವಾಗಿ ನ 20 ರಂದು ಮಂಗಳೂರಿನ ಕೊಡಿಯಾಲ್ ಬೈಲ್ ಶಾರದಾ ವಿದ್ಯಾಲಯ ಸಭಾಭವನದಲ್ಲಿ ನಡೆದ ರಾಜ್ಯೋತ್ಸವ ಸಂದೇಶ – ಗೌರವ ಪುರಸ್ಕಾರ ಕಾರ್ಯಕ್ರಮದಲ್ಲಿ ಪುತ್ತೂರಿನ ಸುಪ್ರಜಾ ರಾವ್ ಗೆ ರಾಜ್ಯೋತ್ಸವ ಸಾಧಕ ಪುರಸ್ಕಾರವನ್ನು ನೀಡಿ ಗೌರವಿಸಲಾಯಿತು.
ಪುತ್ತೂರು: ಕನ್ನಡ ರಾಜ್ಯೋತ್ಸವ ಆಚರಣಾ ಸಮಿತಿ ಕಲ್ಕೂರ ಪ್ರತಿಷ್ಠಾನ(ರಿ) ಕನ್ನಡ ರಾಜ್ಯೋತ್ಸವದ ಅಂಗವಾಗಿ ನ 20 ರಂದು ಮಂಗಳೂರಿನ ಕೊಡಿಯಾಲ್ ಬೈಲ್ ಶಾರದಾ ವಿದ್ಯಾಲಯ ಸಭಾಭವನದಲ್ಲಿ ನಡೆದ ರಾಜ್ಯೋತ್ಸವ ಸಂದೇಶ – ಗೌರವ ಪುರಸ್ಕಾರ ಕಾರ್ಯಕ್ರಮದಲ್ಲಿ ಪುತ್ತೂರಿನ ಸುಪ್ರಜಾ ರಾವ್ ಗೆ
ರಾಜ್ಯೋತ್ಸವ ಸಾಧಕ ಪುರಸ್ಕಾರವನ್ನು ನೀಡಿ ಗೌರವಿಸಲಾಯಿತು.
ಇವರು ಮಂಗಳೂರಿನ ಸಹ್ಯಾದ್ರಿ ಇಂಜಿನಿಯರಿಂಗ್ ಕಾಲೇಜ್ ನ ಪ್ರಾಧ್ಯಾಪಕರಾದ ಡಾ.ಪ್ರಶಾಂತ್ ರಾವ್ ಹಾಗೂ ಪುತ್ತೂರಿನ ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕರಾದ ಸುಮನಾ ರಾವ್ ದಂಪತಿಗಳ ಪುತ್ರಿಯಾಗಿದ್ದು, ಪ್ರಸಕ್ತ ವಿವೇಕಾನಂದ ಪದವಿ ಪೂರ್ವ ಕಾಲೇಜಿನಲ್ಲಿ ಪ್ರಥಮ ಪಿಯುಸಿ ವ್ಯಾಸಂಗ ಮಾಡುತ್ತಿದ್ದಾರೆ.
ಕಾರ್ಯಕ್ರಮಗಳು
Puttur-ಪುತ್ತೂರಿನಲ್ಲಿ ‘ಸಾಮರಸ್ಯದ ತುಡರ್’ ಕಾರ್ಯಕ್ರಮ: ಮಹಾಲಿಂಗೇಶ್ವರ ದೇವಸ್ಥಾನದಿಂದ ಮನೆಮನೆಗೆ ದೀಪದ ಬೆಳಕು
ಸಾಮರಸ್ಯ ವೇದಿಕೆ ಪುತ್ತೂರು ಜಿಲ್ಲೆ ಹಾಗೂ ಸಾಮರಸ್ಯ ವೇದಿಕೆ ಪುತ್ತೂರು ನಗರ ಘಟಕದ ವತಿಯಿಂದ ‘ಸಾಮರಸ್ಯದ ತುಡರ್’ ಕಾರ್ಯಕ್ರಮ ನಡೆಯಿತು. ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಗರ್ಭಗುಡಿಯಲ್ಲಿ ಉರಿಯುತ್ತಿದ್ದ ದೀಪದಿಂದ ಉರ್ಲಾಂಡಿ, ಮಣ್ಣಾಪು, ಶೇವಿರೆ ಹಾಗೂ ಬ್ರಹ್ಮನಗರ ಪ್ರದೇಶದ ಉಪೇಕ್ಷಿತ ಬಂಧುಗಳು ತಂದ ದೀಪಗಳನ್ನು ದೇವಸ್ಥಾನದ ಅರ್ಚಕರು ಬೆಳಗಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಪುತ್ತೂರು: ಸಾಮರಸ್ಯ ವೇದಿಕೆ ಪುತ್ತೂರು ಜಿಲ್ಲೆ ಹಾಗೂ ಸಾಮರಸ್ಯ ವೇದಿಕೆ ಪುತ್ತೂರು ನಗರ ಘಟಕದ ವತಿಯಿಂದ ‘ಸಾಮರಸ್ಯದ ತುಡರ್’ ಕಾರ್ಯಕ್ರಮ ನಡೆಯಿತು.
ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಗರ್ಭಗುಡಿಯಲ್ಲಿ ಉರಿಯುತ್ತಿದ್ದ ದೀಪದಿಂದ ಉರ್ಲಾಂಡಿ, ಮಣ್ಣಾಪು, ಶೇವಿರೆ ಹಾಗೂ ಬ್ರಹ್ಮನಗರ ಪ್ರದೇಶದ ಉಪೇಕ್ಷಿತ ಬಂಧುಗಳು ತಂದ ದೀಪಗಳನ್ನು ದೇವಸ್ಥಾನದ ಅರ್ಚಕರು ಬೆಳಗಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಬಳಿಕ ದೇವಸ್ಥಾನದಲ್ಲಿ ಬೆಳಗಿಸಿದ ದೀಪವನ್ನು ಮೆರವಣಿಗೆಯ ಮೂಲಕ ಕೊಂಡೊಯ್ದು ಉರ್ಲಾಂಡಿ, ಮಣ್ಣಾಪು, ಶೇವಿರೆ ಹಾಗೂ ಬ್ರಹ್ಮನಗರ ಪ್ರದೇಶಗಳ ಸುತ್ತಮುತ್ತಲಿನ ಮನೆಗಳಲ್ಲಿ ದೀಪ ಬೆಳಗಿಸಲಾಯಿತು.
ಕಾರ್ಯಕ್ರಮದಲ್ಲಿ ಮಂಗಳೂರು ವಿಭಾಗದ ಸಾಮರಸ್ಯ ಸಂಯೋಜಕ ರವೀಂದ್ರ, ಜಿಲ್ಲಾ ಸಾಮರಸ್ಯ ಸಂಯೋಜಕ ಶ್ರೀಕುಮಾರ್ ಸುಬ್ರಹ್ಮಣ್ಯ, ದಾಮೋದರ ಪಾಟಲಿ, ಅಪ್ಪಯ್ಯ ಮಣಿಯಾಣಿ, ರಮೇಶ್ ಪ್ರಭು, ಸಂತೋಷ್ ಬೊನಂತಾಯ, ರಮೇಶ್ ನೆಗಳಗುಳಿ, ದಯಾನಂದ ಬೋಲ್ವಾರ್, ಸಚಿನ್ ಶೆಣೈ, ರಮೇಶ್ ಉರ್ಲಾಂಡಿ, ಅಶೋಕ್ ಬ್ರಹ್ಮನಗರ ಸೇರಿದಂತೆ ಪ್ರಮುಖರು ಹಾಗೂ ಮಾತೆಯರು ಉಪಸ್ಥಿತರಿದ್ದರು.
-
ಮಂಗಳೂರು10 hours agoMangalore-ಮಂಗಳೂರು ವಿದ್ಯಾರ್ಥಿನಿ ಅಪಹರಣ ಪ್ರಕರಣಕ್ಕೆ ಹೊಸ ತಿರುವು: ಮನೆಯವರ ಜೊತೆ ತೆರಳಲು ಯುವತಿ ನಕಾರ..!
-
ಬಿಗ್ ನ್ಯೂಸ್17 hours agoBail rejected-ಸಿದ್ದರಾಮಯ್ಯ ವಿರುದ್ಧದ ‘ಸ್ಟಿಂಗ್’ ಪ್ರಕರಣ: ಕೃಪಾ ಆಳ್ವಾ, ರಾಕೇಶ್ ಶೆಟ್ಟಿ ಸೇರಿ 6 ಮಂದಿಯ ಜಾಮೀನು ಅರ್ಜಿ ವಜಾ
-
ಅಂತರ ರಾಜ್ಯ15 hours agoFormer CBI officer-ಅಧಿಕಾರ, ಹಣ, ಐಷಾರಾಮಿ ಬದುಕಿಗೆ ಗುಡ್ಬೈ; ಗುಹೆಯಲ್ಲಿ ಧ್ಯಾನ ಮಾಡುತ್ತಿರುವ ಮಾಜಿ ಸಿಬಿಐ ಅಧಿಕಾರಿ..!
-
ನಿಧನ ವಾರ್ತೆ16 hours agoHeart attack-ಸಾಲಿಗ್ರಾಮ: ಕಚೇರಿಯಲ್ಲೇ ಹೃದಯಾಘಾತ; ಬಹುಮುಖ ಪ್ರತಿಭೆ ದಿನೇಶ್ ಹೊಳ್ಳ ನಿಧನ
-
ಸಿನೆಮಾ15 hours agoDawood-‘ಧುರಂಧರ್ ‘ ನಲ್ಲಿ ದಾವೂದ್ ನ ತೋರಿಸಿದ ರೀತಿ ವಾಸ್ತವವಲ್ಲ…! ಮೋಸ್ಟ್ ವಾಂಟೆಡ್ ಪಾತಕಿ ಈಗ ಹೇಗಿದ್ದಾನೆ ಗೊತ್ತೇ..? ಮಾಜಿ FBI ಅಧಿಕಾರಿ ಹೇಳಿದ್ದೇನೂ..?
-
ನಿಧನ ವಾರ್ತೆ16 hours agoMudbidri-ಮಂಗಳೂರಿನಲ್ಲಿ ಮೇಲ್ಛಾವಣಿ ಕೆಲಸದ ವೇಳೆ ಅವಘಡ: ಮೂಡುಬಿದಿರೆ ತಾ.ಪಂ. ಮಾಜಿ ಉಪಾಧ್ಯಕ್ಷ ಸಾವು
-
ಅಂತರ ರಾಜ್ಯ9 hours agoArrested-14ವರ್ಷಗಳ ಹಿಂದೆ ನಿಗೂಢವಾಗಿ ನಾಪತ್ತೆಯಾಗಿ ಅಪಹರಣಕಾರರ ಬೇಡಿಕೆಯಂತೆ 25ಲಕ್ಷ ರೂ ನೀಡಿದರೂ ಮರಳಿ ಬಾರದ ಶಿಕ್ಷಕನ ಪ್ರಕರಣಕ್ಕೆ ಮಹತ್ವದ ತಿರುವು..!
-
ನಿಧನ ವಾರ್ತೆ15 hours agoOne-sided love-ಇನ್ಸ್ಟಾಗ್ರಾಮ್ ಇನ್ಫ್ಲುಯೆನ್ಸರ್ ಮೇಲಿನ ಒನ್ಸೈಡೆಡ್ ಲವ್; ಹಲ್ಲೆಗೊಳಗಾದ ಯುವಕ ಸಾವು















