ಮಂಗಳೂರು
Billavas | ಜನಾರ್ಧನ ಪೂಜಾರಿ ನೇತೃತ್ವದಲ್ಲಿ ಬಿಲ್ಲವರಿಗೆ ಮೀಸಲಾತಿಗಾಗಿ ಮಂಗಳೂರಿನಲ್ಲಿ ಶಕ್ತಿಪ್ರದರ್ಶನಕ್ಕೆ ಸಿದ್ದತೆ
ಮಂಗಳೂರು: ಬಿಲ್ಲವ(Billavas) , ಈಡಿಗ ಸೇರಿ 26 ಪಂಗಡಗಳ ಅಭಿವೃದ್ಧಿಗಾಗಿ ಹಾಗೂ ಈ ಸಮುದಾಯಗಳಿಗೆ ನ್ಯಾಯಯುತವಾಗಿ ಸಿಗಬೇಕಾದ ಸವಲತ್ತುಗಳನ್ನು ಪಡೆಯಲು ಸಮಾಜದ ಅಗ್ರಮಾನ್ಯ ನಾಯಕರಾದ ಬಿ.ಜನಾರ್ದನ ಪೂಜಾರಿಯವರ ಮುಂದಾಳತ್ವದಲ್ಲಿ 2023ರ ಫೆಬ್ರವರಿ ತಿಂಗಳಿನಲ್ಲಿ ನಗರದಲ್ಲಿ ಬೃಹತ್ ಸಮಾವೇಶ ನಡೆಸಿ ಸರ್ಕಾರದ ಮೇಲೆ ಒತ್ತಡ ಹೇರಲು ಬಿಲ್ಲವ ಸಂಘಟನೆಗಳು ನಿರ್ಧರಿಸಿವೆ.
ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಭಾನುವಾರ ಪೂರ್ವಭಾವಿ ಸಭೆ ನಡೆಸಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ವಿವಿಧ ಬಿಲ್ಲವ ಸಂಘಟನೆಗಳ ಪ್ರಮುಖರು ಪಕ್ಷ ಭೇದವಿಲ್ಲದೆ ಒಗ್ಗಟ್ಟಿನ ಮೂಲಕ ಸಮಾಜದ ಶಕ್ತಿಪ್ರದರ್ಶನ ನಡೆಸುವ ಬಗ್ಗೆ ಒಕ್ಕೊರಲ ನಿರ್ಣಯ ಕೈಗೊಂಡರು.
ಬ್ರಹ್ಮಶ್ರೀ ನಾರಾಯಣಗುರುಗಳ ಹೆಸರಿನಲ್ಲಿ ನಿಗಮ ಸ್ಥಾಪಿಸಿ ಅದರಡಿ ಬಿಲ್ಲವರಿಗೆ ವಿಶೇಷ ಸವಲತ್ತು ಕಲ್ಪಿಸಬೇಕು ಹಾಗೂ ಬಿಲ್ಲವರನ್ನು ಪ್ರವರ್ಗ 1ಕ್ಕೆ ಸೇರಿಸಬೇಕು ಎಂಬ ನಿರ್ಣಯಗಳನ್ನು ಈ ಹಿಂದೆ ಬ್ರಹ್ಮಾವರದಲ್ಲಿ ನಡೆದಿದ್ದ ಬಿಲ್ಲವರ ಸಮಾವೇಶದಲ್ಲಿ ಕೈಗೊಳ್ಳಲಾಗಿತ್ತು. ಈ ಬೇಡಿಕೆಗಳನ್ನು ಸರ್ಕಾರ ಇನ್ನೂ ಈಡೇರಿಸದ ಬಗ್ಗೆ ಮುಖಂಡರು ಆಕ್ರೋಶ ವ್ಯಕ್ತಪಡಿಸಿದರು.
ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ಖಜಾಂಚಿ ಪದ್ಮರಾಜ್ ಮಾತನಾಡಿ, ಬಿಲ್ಲವ ಸಮಾಜವನ್ನು ರಾಜಕೀಯ ಪಕ್ಷಗಳು ಬಳಸಿಕೊಳ್ಳುತ್ತಿವೆ. ಆದರೆ ಸಮುದಾಯದವರಿಗೆ ಸವಲತ್ತು ಸಿಗುತ್ತಿದೆಯೇ ಎಂದು ಆತ್ಮವಿಮರ್ಶೆ ಮಾಡಿಕೊಳ್ಳಬೇಕಿದೆ. ಬಿಲ್ಲವರನ್ನು ಪ್ರವರ್ಗ 2ಎ ಅಡಿ ಸೇರಿಸಲಾಗಿದೆ. 100ಕ್ಕೂ ಅಧಿಕ ಜಾತಿಗಳು ಈ ಪ್ರವರ್ಗದಲ್ಲಿವೆ. ಈಗ ರಾಜ್ಯದ ಕೆಲವು ಪ್ರಬಲ ಜಾತಿಯವರು ತಮ್ಮನ್ನೂ ಪ್ರವರ್ಗ 2ಎ ಗೆ ಸೇರಿಸಲು ಸರ್ಕಾರದ ಮೇಲೆ ಒತ್ತಡ ಹೇರುತ್ತಿವೆ. ಇದರಿಂದ ಬಿಲ್ಲವರು ಮತ್ತಷ್ಟು ಸವಲತ್ತು ವಂಚಿತರಾಗಬೇಕಾದ ಸ್ಥಿತಿ ನಿರ್ಮಾಣವಾಗಬಹುದು ಎಂದು ಆತಂಕ ವ್ಯಕ್ತಪಡಿಸಿದರು.
ಶ್ರೀ ನಾರಾಯಣಗುರು ವಿಚಾರ ವೇದಿಕೆ ರಾಜ್ಯಾಧ್ಯಕ್ಷರಾದ ಸತ್ಯಜಿತ್ ಸುರತ್ಕಲ್ ಮಾತನಾಡಿ, ಉಭಯ ಜಿಲ್ಲೆಗಳಲ್ಲಿ ಬಿಲ್ಲವ ಸಮಾಜ ಬಹುಸಂಖ್ಯಾತರಾಗಿದ್ದರೂ ರಾಜಕೀಯ ಪಕ್ಷಗಳು ಸ್ಪರ್ಧಿಸುವ ಅವಕಾಶನ್ನೇ ನೀಡುತ್ತಿಲ್ಲ. 8 ವಿಧಾನಸಭಾ ಸ್ಥಾನ ಇರುವ ಜಿಲ್ಲೆಗಳಲ್ಲಿ ಕೇವಲ 1 ಸ್ಥಾನ ಮಾತ್ರ ಬಹುಸಂಖ್ಯಾತ ಬಿಲ್ಲವರಿಗೆ ನೀಡಿ ವಂಚಿಸಲಾಗುತ್ತಿದೆ. ನಾವು ಸಂಘಟಿತರಾಗಿ ನಮ್ಮ ಹಕ್ಕನ್ನು ಪಡೆದುಕೊಳ್ಳಬೇಕು ಎಂದರು.
ಸರ್ಕಾರಗಳು ನಮ್ಮ ಸಮಾಜದ ಅಭಿವೃದ್ಧಿ ಮನವಿಗೆ ಸ್ಪಂದಿಸುತ್ತಿಲ್ಲ ನಮ್ಮ ಹಕ್ಕುಗಳನ್ನು ನಾವೆಲ್ಲರೂ ಸೇರಿ ಒಗ್ಗಟ್ಟಿನಿಂದ ಸಮಾಜದಲ್ಲಿ ಜಾಗೃತಿ ಉಂಟುಮಾಡುವ ಮೂಲಕ ನಮ್ಮ ಹಕ್ಕುಗಳನ್ನು ಪಡೆದುಕೊಂಡು ಸಮಾವೇಶವನ್ನು ಯಶಸ್ವಿಗೊಳಿಸಬೇಕು ಎಂದು ರಾಷ್ಟ್ರೀಯ ಬಿಲ್ಲವರ ಮಹಾಮಂಡಲ ಅಧ್ಯಕ್ಷ ರಾಜಶೇಖರ್ ಕೋಟ್ಯಾನ್ ಮನವಿ ಮಾಡಿದರು.
ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರ ಅಭಿವೃದ್ಧಿ ಸಮಿತಿ ಅಧ್ಯಕ್ಷ ದೇವೇಂದ್ರ ಪೂಜಾರಿ, ಶ್ರೀಕ್ಷೇತ್ರ ಗೆಜ್ಜೆಗಿರಿ ಅಧ್ಯಕ್ಷ ಪೀತಾಂಬರ ಹೆರಾಜೆ, ರಾಷ್ಟ್ರೀಯ ಬಿಲ್ಲವರ ಮಹಾಮಂಡಲದ ಉಪಾಧ್ಯಕ್ಷ ಸೂರ್ಯಕಾಂತ್ ಜಯ ಸುವರ್ಣ, ಉಡುಪಿ ಬಿಲ್ಲವ ಯುವ ವೇದಿಕೆ ಅಧ್ಯಕ್ಷ ಪ್ರವೀಣ್ ಪೂಜಾರಿ, ಬಿಲ್ಲವ ಪರಿಷತ್ ಅಧ್ಯಕ್ಷ ನವೀನ್ ಅಮೀನ್, ಪ್ರಮುಖರಾದ ಜಯಂತ ನಡುಬೈಲ್, ಅಚ್ಚುತ್ತ ಕಲ್ಮಾಡಿ, ಲೀಲಾಕ್ಷ ಕರ್ಕೇರ, ಜಗನ್ನಾಥ ಕೋಟೆ, ಅನಿಲ್ ಕುಮಾರ್, ಬೇಬಿ ಕುಂದರ್, ಪಿ.ಎ.ಪೂಜಾರಿ, ಸದಾನಂದ ಪೂಜಾರಿ, ಎಂ.ಎಸ್. ಕೋಟ್ಯಾನ್, ಚಿದಾನಂದ ಎಲ್ದಕ್ಕ, ಎಲ್ದಪ್ಪ ಪೂಜಾರಿ, ಜಯವಿಕ್ರಮ್, ಡಾ.ಅನುಸೂಯ, ಸುಖಲಾಕ್ಷಿ ಸುವರ್ಣ, ಮಾಜಿ ಮೇಯರ್ ವಿಜಯ ಅರುಣಾ, ಶ್ರೀಲತಾ ಹಾಗೂ ಉಭಯ ಜಿಲ್ಲೆಗಳ ಬಿಲ್ಲವ ಸಂಘಗಳು ಮತ್ತು ಯುವ ಸಂಘಟನೆಗಳ 500ಕ್ಕೂ ಮಿಕ್ಕಿ ಬಿಲ್ಲವ ಪ್ರತಿನಿಧಿಗಳು ಭಾಗವಹಿಸಿದ್ದರು.
ಮಂಗಳೂರು
Bantwal rape case verdict ಮಂಗಳೂರು: ಮಹಿಳೆ ಮೇಲೆ ಹಲ್ಲೆ ನಡೆಸಿ ಅತ್ಯಾಚಾರ : ಆರೋಪಿಗೆ 10 ವರ್ಷ ಜೈಲು, ₹54 ಸಾವಿರ ದಂಡ

ಬಂಟ್ವಾಳ: ಮಹಿಳೆಗೆ ಹಲ್ಲೆ ನಡೆಸಿ ಅತ್ಯಾಚಾರವೆಸಗಿ , ಜೀವ ಬೆದರಿಕೆ ಹಾಕಿದ ಅಪರಾಧಿಗೆ 10 ವರ್ಷಗಳ ಜೈಲು ಶಿಕ್ಷೆ ಹಾಗೂ ₹54 ಸಾವಿರ ದಂಡ ವಿಧಿಸಿ ಮಂಗಳೂರಿನ 6ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಆದೇಶಿಸಿದೆ.
Bantwal rape case verdict: ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 2021ರಲ್ಲಿ ಈ ಘಟನೆ ನಡೆದಿತ್ತು. ಸಂತ್ರಸ್ತ ಮಹಿಳೆಯ ಮನೆಯ ನೆರೆಮನೆಯ ನಿವಾಸಿಯಾಗಿದ್ದ ಅನಿಲ್ ಎಂಬಾತ ಮಹಿಳೆಯ ಮೇಲೆ ಹಲ್ಲೆ ನಡೆಸಿ ಅತ್ಯಾಚಾರವೆಸಗಿದ್ದಲ್ಲದೆ, ಜೀವ ಬೆದರಿಕೆಯನ್ನೂ ಹಾಕಿದ್ದ ಎಂದು ಆರೋಪಿಸಲಾಗಿತ್ತು. ಈ ಕುರಿತು ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಅ.ಕ್ರ. 92/2021ರಂತೆ ಭಾರತೀಯ ದಂಡ ಸಂಹಿತೆಯ ಕಲಂ 376, 448, 323, 504 ಹಾಗೂ 506ರ ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು.
ಪ್ರಕರಣದ ತನಿಖೆ ಕೈಗೆತ್ತಿಕೊಂಡಿದ್ದ ಅಂದಿನ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯ ಪೊಲೀಸ್ ಉಪನಿರೀಕ್ಷಕ ಪ್ರಸನ್ನ ಎಂ.ಎಸ್. ಅವರು ಆರೋಪಿಯನ್ನು ಪತ್ತೆಹಚ್ಚಿದ್ದರು. ಬಳಿಕ ಪ್ರಕರಣದ ತನಿಖಾಧಿಕಾರಿಗಳಾಗಿದ್ದ ಬಂಟ್ವಾಳ ವೃತ್ತ ನಿರೀಕ್ಷಕ ಟಿ.ಡಿ. ನಾಗರಾಜ್ ಅವರು ಅಗತ್ಯ ಸಾಕ್ಷ್ಯಾಧಾರಗಳನ್ನು ಸಂಗ್ರಹಿಸಿ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು.
ಮಂಗಳೂರಿನ 6ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದಲ್ಲಿ ನಡೆದ ವಿಚಾರಣೆಯಲ್ಲಿ ಆರೋಪಿತನ ವಿರುದ್ಧದ ಆರೋಪಗಳು ಸಾಬೀತಾದ ಹಿನ್ನೆಲೆಯಲ್ಲಿ ನ್ಯಾಯಾಧೀಶರಾದ ರಾಜೇಶ ಮಾರುತಿ ಕಾಮಟೆ ಅವರು ಆರೋಪಿಗೆ 10 ವರ್ಷಗಳ ಜೈಲು ಶಿಕ್ಷೆ ಹಾಗೂ ₹54,000 ದಂಡ ವಿಧಿಸಿ ಆದೇಶ ಹೊರಡಿಸಿದ್ದಾರೆ.
ಪ್ರಕರಣದಲ್ಲಿ ಸರ್ಕಾರಿ ಅಭಿಯೋಜಕ ಮೋತಿಲಾಲ ಚೌಧರಿ ಅವರು ಸರ್ಕಾರದ ಪರವಾಗಿ ಸಮರ್ಥವಾಗಿ ವಾದ ಮಂಡಿಸಿದ್ದರು.
ಮಂಗಳೂರು
Mangalore-ಮಂಗಳೂರು ವಿದ್ಯಾರ್ಥಿನಿ ಅಪಹರಣ ಪ್ರಕರಣಕ್ಕೆ ಹೊಸ ತಿರುವು: ಮನೆಯವರ ಜೊತೆ ತೆರಳಲು ಯುವತಿ ನಕಾರ..!
ಮಂಗಳೂರಿನ ದೇರಳಕಟ್ಟೆಯ ಖಾಸಗಿ ವೈದ್ಯಕೀಯ ಕಾಲೇಜು ಆವರಣದಿಂದ ವೈದ್ಯಕೀಯ ವಿದ್ಯಾರ್ಥಿನಿಯನ್ನು ಮಹೀಂದ್ರಾ ಥಾರ್ ವಾಹನದಲ್ಲಿ ಬಲವಂತವಾಗಿ ಕರೆದೊಯ್ದಿದ್ದ ಪ್ರಕರಣ ಇದೀಗ ಹೊಸ ತಿರುವು ಪಡೆದುಕೊಂಡಿದೆ. ಕೇರಳಂನಲ್ಲಿ ವಿದ್ಯಾರ್ಥಿನಿಯನ್ನು ಪತ್ತೆಹಚ್ಚಿದ ಪೊಲೀಸರು ಆಕೆಯ ಹೇಳಿಕೆ ದಾಖಲಿಸಿದ್ದು, ಮನೆಯವರ ಜೊತೆ ತೆರಳಲು ತನಗೆ ಇಷ್ಟವಿಲ್ಲ ಎಂದು ಯುವತಿ ಸ್ಪಷ್ಟಪಡಿಸಿದ್ದಾಳೆ.
ಮಂಗಳೂರು: ಮಂಗಳೂರಿನ ದೇರಳಕಟ್ಟೆಯ ಖಾಸಗಿ ವೈದ್ಯಕೀಯ ಕಾಲೇಜು ಆವರಣದಿಂದ ವೈದ್ಯಕೀಯ ವಿದ್ಯಾರ್ಥಿನಿಯನ್ನು ಮಹೀಂದ್ರಾ ಥಾರ್ ವಾಹನದಲ್ಲಿ ಬಲವಂತವಾಗಿ ಕರೆದೊಯ್ದಿದ್ದ ಪ್ರಕರಣ ಇದೀಗ ಹೊಸ ತಿರುವು ಪಡೆದುಕೊಂಡಿದೆ. ಕೇರಳಂನಲ್ಲಿ ವಿದ್ಯಾರ್ಥಿನಿಯನ್ನು ಪತ್ತೆಹಚ್ಚಿದ ಪೊಲೀಸರು ಆಕೆಯ ಹೇಳಿಕೆ ದಾಖಲಿಸಿದ್ದು, ಮನೆಯವರ ಜೊತೆ ತೆರಳಲು ತನಗೆ ಇಷ್ಟವಿಲ್ಲ ಎಂದು ಯುವತಿ ಸ್ಪಷ್ಟಪಡಿಸಿದ್ದಾಳೆ.
ಏನಿದು ಪ್ರಕರಣ?
ನ.19ರ ಗುರುವಾರ ಸಂಜೆ ಕಾಲೇಜು ಆವರಣದಿಂದ ಕರೆದೊಯ್ಯಲ್ಪಟ್ಟ ಯುವತಿ ದಕ್ಷಿಣ ಕನ್ನಡ ಜಿಲ್ಲೆಯ ಪುಂಜಾಲಕಟ್ಟೆ ಮೂಲದವರಾಗಿದ್ದು, ದೇರಳಕಟ್ಟೆಯ ಕಣಚೂರು ವೈದ್ಯಕೀಯ ಕಾಲೇಜಿನಲ್ಲಿ ಪ್ರಥಮ ವರ್ಷದ ಎಂಬಿಬಿಎಸ್ ವ್ಯಾಸಂಗ ಮಾಡುತ್ತಿದ್ದಾರೆ ಎನ್ನಲಾಗಿದೆ.
ಯುವತಿ ಮಂಗಳೂರಿನ ಮತ್ತೊಂದು ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಡಿಎಸ್ ವ್ಯಾಸಂಗ ಮಾಡುತ್ತಿರುವ ಯುವಕನನ್ನು ಪ್ರೀತಿಸುತ್ತಿದ್ದಳು ಎನ್ನಲಾಗಿದೆ. ಈ ವಿಚಾರ ತಿಳಿದ ಯುವತಿಯ ಪೋಷಕರು ಹಾಗೂ ಸಂಬಂಧಿಕರು ಕಾಲೇಜು ಆವರಣಕ್ಕೆ ಆಗಮಿಸಿ, ಆಕೆಯ ಇಚ್ಛೆಗೆ ವಿರುದ್ಧವಾಗಿ ಬಲವಂತವಾಗಿ ಎಳೆದೊಯ್ದು ಮಹೀಂದ್ರಾ ಥಾರ್ ವಾಹನದಲ್ಲಿ ಕರೆದೊಯ್ದಿದ್ದರು. ಈ ಘಟನೆಗೆ ಸಂಬಂಧಿಸಿದ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದವು.
ಘಟನೆಯ ಬಳಿಕ ಕಾರ್ಯಾಚರಣೆ ನಡೆಸಿದ ಪೊಲೀಸರು, ಕೇರಳಂನ ಸಂಬಂಧಿಕರ ಮನೆಯಲ್ಲಿದ್ದ ವಿದ್ಯಾರ್ಥಿನಿಯನ್ನು ಪತ್ತೆಹಚ್ಚಿ ಸುರಕ್ಷಿತವಾಗಿ ಮಂಗಳೂರಿಗೆ ಕರೆತಂದಿದ್ದಾರೆ.
ಮನೆಯವರ ಜೊತೆ ಹೋಗಲು ನಿರಾಕರಣೆ
ಪೊಲೀಸರು ರಕ್ಷಿಸಿದ ಬಳಿಕ ಯುವತಿಯ ಹೇಳಿಕೆ ದಾಖಲಿಸಿದ್ದು, ತನ್ನ ಪೋಷಕರು ಅಥವಾ ಮನೆಯವರ ಜೊತೆ ಹೋಗಲು ಇಚ್ಛಿಸುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾಳೆ ಎನ್ನಲಾಗಿದೆ. ಯುವತಿ ವಯಸ್ಕಳಾಗಿರುವುದರಿಂದ ತಾನು ಎಲ್ಲಿ ವಾಸಿಸಬೇಕು ಎಂಬುದನ್ನು ನಿರ್ಧರಿಸುವ ಕಾನೂನುಬದ್ಧ ಹಕ್ಕು ಆಕೆಗಿದೆ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತರು ತಿಳಿಸಿದ್ದಾರೆ.
ವೈದ್ಯಕೀಯ ತಪಾಸಣೆಯ ಬಳಿಕ ಯುವತಿಯ ಇಚ್ಛೆಯ ಸ್ಥಳಕ್ಕೆ ಅಥವಾ ಸಾಂತ್ವನ ಕೇಂದ್ರಕ್ಕೆ ಪೊಲೀಸ್ ರಕ್ಷಣೆಯಲ್ಲಿ ಕಳುಹಿಸಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ವರದಿಯಾಗಿದೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಭಾರತೀಯ ನ್ಯಾಯ ಸಂಹಿತೆ (BNS) ಸೆಕ್ಷನ್ 140(3) ಮತ್ತು 126ರ ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು, ಇಬ್ಬರನ್ನು ವಿಚಾರಣೆಗೆ ಕರೆಸಲಾಗಿದೆ. ಏಳು ವರ್ಷಕ್ಕಿಂತ ಕಡಿಮೆ ಶಿಕ್ಷೆಯಿರುವ ಅಪರಾಧವಾಗಿರುವ ಹಿನ್ನೆಲೆಯಲ್ಲಿ ಬಿಎನ್ಎಸ್ಎಸ್ ಅಡಿಯಲ್ಲಿ ನೋಟಿಸ್ ಜಾರಿ ಮಾಡುವ ಪ್ರಕ್ರಿಯೆ ನಡೆಯುತ್ತಿದೆ ಎಂದು ವರದಿಯಾಗಿದೆ.
ನಿಧನ ವಾರ್ತೆ
Mudbidri-ಮಂಗಳೂರಿನಲ್ಲಿ ಮೇಲ್ಛಾವಣಿ ಕೆಲಸದ ವೇಳೆ ಅವಘಡ: ಮೂಡುಬಿದಿರೆ ತಾ.ಪಂ. ಮಾಜಿ ಉಪಾಧ್ಯಕ್ಷ ಸಾವು
ಮೂಡುಬಿದಿರೆ ತಾಲೂಕು ಪಂಚಾಯತ್ನ ಮಾಜಿ ಉಪಾಧ್ಯಕ್ಷ ಸಂತೋಷ್ ಅವರು ಮಂಗಳೂರಿನಲ್ಲಿ ಮನೆಯ ಮೇಲ್ಛಾವಣಿಯಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಆಯತಪ್ಪಿ ಕೆಳಗೆ ಬಿದ್ದು ಮೃತಪಟ್ಟಿದ್ದಾರೆ. ಗುರುವಾರ ಸಂಭವಿಸಿದ ಈ ದುರಂತ ಘಟನೆ ದುಃಖಕ್ಕೆ ಕಾರಣವಾಗಿದೆ.
ಮೂಡುಬಿದಿರೆ, ನ.20: ಮೂಡುಬಿದಿರೆ ತಾಲೂಕು ಪಂಚಾಯತ್ನ ಮಾಜಿ ಉಪಾಧ್ಯಕ್ಷ ಸಂತೋಷ್ ಅವರು ಮಂಗಳೂರಿನಲ್ಲಿ ಮನೆಯ ಮೇಲ್ಛಾವಣಿಯಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಆಯತಪ್ಪಿ ಕೆಳಗೆ ಬಿದ್ದು ಮೃತಪಟ್ಟಿದ್ದಾರೆ. ಗುರುವಾರ ಸಂಭವಿಸಿದ ಈ ದುರಂತ ಘಟನೆ ದುಃಖಕ್ಕೆ ಕಾರಣವಾಗಿದೆ.
ಮೂಡುಬಿದಿರೆ ತಾಲೂಕಿನ ಬೆಳುವಾಯಿ ನಿವಾಸಿಯಾಗಿದ್ದ ಸಂತೋಷ್ ಅವರು ಬೆಳುವಾಯಿ ಕ್ಷೇತ್ರದಿಂದ ತಾಲೂಕು ಪಂಚಾಯತ್ ಸದಸ್ಯರಾಗಿ ಆಯ್ಕೆಯಾಗಿದ್ದರು. ಹೊಸದಾಗಿ ರಚನೆಯಾಗಿದ್ದ ಮೂಡುಬಿದಿರೆ ತಾಲೂಕು ಪಂಚಾಯತ್ನ ಮೊದಲ ಅವಧಿಯಲ್ಲಿ ಉಪಾಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು.
ಸಂತೋಷ್ ಅವರು ಪ್ರತಿದಿನ ಕೆಲಸದ ನಿಮಿತ್ತ ಮಂಗಳೂರಿಗೆ ತೆರಳುತ್ತಿದ್ದರು. ಗುರುವಾರ ಬೇರೆ ಸ್ಥಳದಲ್ಲಿ ಬದಲಿ ಕೆಲಸಗಾರನಾಗಿ ಕೆಲಸಕ್ಕೆ ತೆರಳಿದ್ದ ಅವರು, ಮನೆಯೊಂದರ ಮೇಲ್ಛಾವಣಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದ ವೇಳೆ ಆಕಸ್ಮಿಕವಾಗಿ ಕಾಲು ಜಾರಿ ಕೆಳಕ್ಕೆ ಬಿದ್ದಿದ್ದಾರೆ ಎನ್ನಲಾಗಿದೆ.
ಘಟನೆಯಲ್ಲಿ ಗಂಭೀರ ಗಾಯಗೊಂಡ ಅವರನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ.
-
ಮಂಗಳೂರು10 hours agoMangalore-ಮಂಗಳೂರು ವಿದ್ಯಾರ್ಥಿನಿ ಅಪಹರಣ ಪ್ರಕರಣಕ್ಕೆ ಹೊಸ ತಿರುವು: ಮನೆಯವರ ಜೊತೆ ತೆರಳಲು ಯುವತಿ ನಕಾರ..!
-
ಬಿಗ್ ನ್ಯೂಸ್17 hours agoBail rejected-ಸಿದ್ದರಾಮಯ್ಯ ವಿರುದ್ಧದ ‘ಸ್ಟಿಂಗ್’ ಪ್ರಕರಣ: ಕೃಪಾ ಆಳ್ವಾ, ರಾಕೇಶ್ ಶೆಟ್ಟಿ ಸೇರಿ 6 ಮಂದಿಯ ಜಾಮೀನು ಅರ್ಜಿ ವಜಾ
-
ಅಂತರ ರಾಜ್ಯ15 hours agoFormer CBI officer-ಅಧಿಕಾರ, ಹಣ, ಐಷಾರಾಮಿ ಬದುಕಿಗೆ ಗುಡ್ಬೈ; ಗುಹೆಯಲ್ಲಿ ಧ್ಯಾನ ಮಾಡುತ್ತಿರುವ ಮಾಜಿ ಸಿಬಿಐ ಅಧಿಕಾರಿ..!
-
ನಿಧನ ವಾರ್ತೆ16 hours agoHeart attack-ಸಾಲಿಗ್ರಾಮ: ಕಚೇರಿಯಲ್ಲೇ ಹೃದಯಾಘಾತ; ಬಹುಮುಖ ಪ್ರತಿಭೆ ದಿನೇಶ್ ಹೊಳ್ಳ ನಿಧನ
-
ಸಿನೆಮಾ15 hours agoDawood-‘ಧುರಂಧರ್ ‘ ನಲ್ಲಿ ದಾವೂದ್ ನ ತೋರಿಸಿದ ರೀತಿ ವಾಸ್ತವವಲ್ಲ…! ಮೋಸ್ಟ್ ವಾಂಟೆಡ್ ಪಾತಕಿ ಈಗ ಹೇಗಿದ್ದಾನೆ ಗೊತ್ತೇ..? ಮಾಜಿ FBI ಅಧಿಕಾರಿ ಹೇಳಿದ್ದೇನೂ..?
-
ನಿಧನ ವಾರ್ತೆ16 hours agoMudbidri-ಮಂಗಳೂರಿನಲ್ಲಿ ಮೇಲ್ಛಾವಣಿ ಕೆಲಸದ ವೇಳೆ ಅವಘಡ: ಮೂಡುಬಿದಿರೆ ತಾ.ಪಂ. ಮಾಜಿ ಉಪಾಧ್ಯಕ್ಷ ಸಾವು
-
ಅಂತರ ರಾಜ್ಯ9 hours agoArrested-14ವರ್ಷಗಳ ಹಿಂದೆ ನಿಗೂಢವಾಗಿ ನಾಪತ್ತೆಯಾಗಿ ಅಪಹರಣಕಾರರ ಬೇಡಿಕೆಯಂತೆ 25ಲಕ್ಷ ರೂ ನೀಡಿದರೂ ಮರಳಿ ಬಾರದ ಶಿಕ್ಷಕನ ಪ್ರಕರಣಕ್ಕೆ ಮಹತ್ವದ ತಿರುವು..!
-
ನಿಧನ ವಾರ್ತೆ16 hours agoOne-sided love-ಇನ್ಸ್ಟಾಗ್ರಾಮ್ ಇನ್ಫ್ಲುಯೆನ್ಸರ್ ಮೇಲಿನ ಒನ್ಸೈಡೆಡ್ ಲವ್; ಹಲ್ಲೆಗೊಳಗಾದ ಯುವಕ ಸಾವು















