ಬಿಗ್ ನ್ಯೂಸ್
WhatsApp : ಈ ತಪ್ಪುಗಳನ್ನು ಮಾಡಿದರೆ ನಿಮ್ಮ ಖಾತೆ ಬ್ಯಾನ್ ಆಗಬಹುದು – ಸುರಕ್ಷಿತ ಬಳಕೆಗೆ ಪ್ರೊಟೊಕಾಲ್ ಹೊರಡಿಸಿದ ಕಂಪೆನಿ
ವಿಶ್ವದಾದ್ಯಂತ ವಾಟ್ಸಾಪ್ (Whatsapp) ಮೆಸೇಜಿಂಗ್ ಆಪ್ ನ ಬಳಕೆಯಲ್ಲಿ ತೀವ್ರ ಹೆಚ್ಚಳವಾಗಿದೆ. ಪ್ರತಿ ದಿನ ಹೊಸ ಹೊಸ ಗ್ರಾಹಕರು ಜಗತ್ತಿನ ಅತಿದೊಡ್ಡ ಮೆಸೇಜಿಂಗ್ ಪ್ಲ್ಯಾಟ್‌ಫಾರಂ ಗೆ ಎಂಟ್ರಿ ಕೊಡುತ್ತಿದ್ದಾರೆ. ಇದರ ಬಳಕೆಯಿಂದ ಸಾರ್ವಜನಿಕ ವಲಯದಲ್ಲಿ ಸಂವಹನ ಎನ್ನುವಂಥದೂ ಚಿಟಿಕೆ ಹೊಡೆಯುವಷ್ಟು ಸುಲಭ ಎನಿಸಿದೆ.
ಅದೇ ವೇಳೆ ಇದರ ದುರ್ಬಳಕೆಯು ಮಿತಿಮೀರಿದೆ. ಫೇಕ್ ನ್ಯೂಸ್ ಗಳನ್ನು ಹಂಚಲು, ಸುಳ್ಳು ಮಾಹಿತಿಗಳನ್ನು ಹರಿ ಬಿಡಲು, ಸಮಾಜದಲ್ಲಿ ಶಾಂತಿ ಕದಡಲು, ಇನ್ನೊಬ್ಬರ ತೇಜೋವಧೆ ಮಾಡಲು, ರಾಜಕೀಯ ಲಾಭಕ್ಕಾಗಿ ಹೀಗೆ ನಾನಾ ಕಾರಣಗಳಿಗೆ ಇದರ ದುರ್ಬಳಕೆ ಆಗುತ್ತಿದೆ. ಹೀಗಾಗಿ ವಾಟ್ಸಾಪ್ ಈ ಬಗ್ಗೆ ಕಠಿಣ ಕ್ರಮಗಳನ್ನು ತೆಗೆದುಕೊಳ್ಳುತ್ತಿದೆ.
.ಮೆಟಾ-ಮಾಲೀಕತ್ವದ ಜನಪ್ರಿಯ ಮೆಸೇಜಿಂಗ್ ಪ್ಲಾಟ್ಫಾರ್ಮ್ ವಾಟ್ಸಪ್ ತನ್ನ ಅಪ್ಲಿಕೇಷನ್ ನ ದುರ್ಬಳಕೆ ತಡೆಗಟ್ಟುವ ಸಲುವಾಗಿ ಕೋಟ್ಯಾಂತರ ಬಳಕೆದಾರರ ಖಾತೆಗಳನ್ನು ನಿರ್ಬಂಧಿಸುತ್ತಿದೆ. ಹೀಗಾಗಿ ನಿಮ್ಮ ವಾಟ್ಸಪ್ ಖಾತೆಯು ಅನಿರೀಕ್ಷಿತವಾಗಿ ಬ್ಯಾನ್ ಆಗಿದೆ ಎಂದಾದರೆ ನೀವು ಈ ರೀತಿಯ ಯಾವುದಾದರೂ ಒಂದು ತಪ್ಪನ್ನು ಮಾಡಿದ್ದೀರಿ ಎಂದರ್ಥ.
ಕಳೆದ ಆಗಸ್ಟ್ ಒಂದೇ ತಿಂಗಳಲ್ಲೇ ವಾಟ್ಸಪ್ ತನ್ನ ಪ್ಲಾಟ್ಫಾರ್ಮ್ನಿಂದ 23 ಲಕ್ಷ ಖಾತೆಗಳನ್ನು ನಿಷೇಧಿಸಿದೆ. , ಒಟ್ಟಾರೆ ಕಳೆದ ಎರಡು ವರ್ಷಗಳಲ್ಲಿ 3 ಕೋಟಿಗೂ ಅಧಿಕ ಖಾತೆಗಳಳನ್ನು ಬ್ಲಾಕ್ ಮಾಡಿದೆ.
ವಾಟ್ಸಪ್ ಸಂಸ್ಥೆ ಬಹಿರಂಗ ಪಡಿಸಿರುವ ಮಾಹಿತಿಯ ಪ್ರಕಾರ ಅದು ಪ್ರತಿ ತಿಂಗಳು ಸರಾಸರಿ 20 ಲಕ್ಷ ಖಾತೆಗಳನ್ನು ನಿಷೇಧಿಸುತ್ತಿದೆ. ,ನಿಷೇಧದ ನಡುವೆಯೂ ವಾಟ್ಸಪ್ ಮೂಲಕ ನಕಲಿ ಸಂದೇಶಗಳನ್ನು ಹರಡುವ ಚಾಳಿ ಮುಂದುವರಿದಿರುವುದು ಕಳವಳಕಾರಿಯಾಗಿದೆ.
ಹೀಗಾಗಿ ಮೆಟಾ – ವಾಟ್ಸಪ್ ಸಂಸ್ಥೆಯು ತನ್ನ ಬಳಕೆದಾರರು ತಮ್ಮ ಖಾತೆ ನಿಷೇಧವಾಗುವುದನ್ನು ತಡೆಯಲು ಅನುಸರಿಸಬೇಕಾದ ಕೆಲವು ಪ್ರೋಟೋಕಾಲ್ಗಳನ್ನು ಅಧಿಕೃತವಾಗಿ ಘೋಷಿಸಿದೆ. ವಾಟ್ಸಪ್ ತನ್ನ “ಮಾಸಿಕ ಬಳಕೆದಾರ ಸುರಕ್ಷತಾ ವರದಿ”ಯನ್ನು ಬಿಡುಗಡೆ ಮಾಡಿದ್ದು, ಇದರಲ್ಲಿ ಯಾವ ರೀತಿಯ ಖಾತೆಗಳನ್ನು ನಿರ್ಬಂಧಿಸಲಾಗಿದೆ ಮತ್ತು ಅವುಗಳಲ್ಲಿ ಎಷ್ಟು ಬ್ಯಾನ್ ಮಾಡಲಾಗಿದೆ ಎಂಬುದರ ಕುರಿತು ವಿವರಗಳನ್ನು ಒದಗಿಸಿದೆ.
ವಾಟ್ಸಪ್ ಸಂಸ್ಥೆ ಹೇಳುವಂತೆ, “ಉದ್ದೇಶಪೂರ್ವಕವಾಗಿ, ಕಂಪನಿಯ ನಿಯಮಗಳನ್ನು ಉಲ್ಲಂಘಿಸುವ ಚಟುವಟಿಕೆಯಲ್ಲಿ ತೊಡಗಿಸಿಕೊಂಡರ ಖಾತೆಗಳು ನಿಷೇಧದ ಅಪಾಯದಲ್ಲಿದೆ. ಅಸಹಜ ನಡವಳಿಕೆಯಲ್ಲಿ ತೊಡಗಿರುವ ವಾಟ್ಸಪ್ ಖಾತೆಗಳನ್ನು ಗುರುತಿಸಲು ಮತ್ತು ಕ್ರಮ ತೆಗೆದುಕೊಳ್ಳಲು ವಾಟ್ಸಪ್ ಸ್ಪ್ಯಾಮ್ ಪತ್ತೆ ತಂತ್ರಜ್ಞಾನವನ್ನು ಕಂಪೆನಿ ಬಳಸುತ್ತದೆ.
ಆದ್ದರಿಂದ, ನೀವು ಹಲವಾರು “ಗುಡ್ ಮಾರ್ನಿಂಗ್” ಸಂದೇಶಗಳನ್ನು ಫಾರ್ವರ್ಡ್ ಮಾಡಿದರೂ ಸಹ, ನಿಮ್ಮ ವಾಟ್ಸಪ್ ಖಾತೆಯನ್ನು ಬ್ಯಾನ್ ಮಾಡುವ ಅಪಾಯವಿದೆ. ಹಾಗಾದರೆ, ನಿಮ್ಮ ವಾಟ್ಸಪ್ ಖಾತೆಯನ್ನು ಬ್ಯಾನ್ ಆಗದಂತೆ ತಡೆಯಲು ಯಾವೆಲ್ಲಾ ಕ್ರಮಗಳನ್ನು ಅನುಸರಿಸಬೇಕು ಎಂದು ತಿಳಿಯೋಣ ಬನ್ನಿ.
, ಅಶ್ಲೀಲ, ಮಾನಹಾನಿಕರ ಮತ್ತು ಬೆದರಿಕೆ ಸಂದೇಶ ಕಳುಹಿಸಬೇಡಿ!
ವಾಟ್ಸಪ್ ನಿಯಮದ ಪ್ರಕಾರ, ನೀವು ಅಶ್ಲೀಲ, ಅಕ್ರಮ, ಅನಗತ್ಯ, ಬೆದರಿಕೆ ಮತ್ತು ಮಾನಹಾನಿಕಾರಕ ಸಂದೇಶಗಳನ್ನು ಕಳುಹಿಸುವಂತಿಲ್ಲ.
ಹಿಂಸೆಗೆ ಪ್ರಚೋದನೆ ನಿಡುವಂತಿಲ್ಲ.
ಯಾವುದೇ ರೀತಿಯ ಹಿಂಸಾಕೃತ್ಯಗಳಿಗೆ ಪ್ರಚೋದನೆ ನೀಡುವ ಪೋಸ್ಟ್ ಅನ್ನು ನೀವು ಸೃಷ್ಟಿಸಿದರೆ, ಹಂಚಿಕೊಂಡರೆ ಮತ್ತು ಪ್ರಸರಿಸಲು ವಾಟ್ಸಪ್ ಬಳಕೆ ಮಾಡಿಕೊಂಡರೆ, ನಿಮ್ಮ ಖಾತೆ ಬ್ಲಾಕ್ ಆಗಬಹುದು.
ನಕಲಿ ಖಾತೆ ಸೃಷ್ಟಿಸಬೇಡಿ.
ಇನ್ನೊಬ್ಬರ ಹೆಸರಿನಲ್ಲಿ ನಕಲಿ ಖಾತೆ ಸೃಷ್ಟಿಸಬೇಡಿ. ಯಾರದೋ ಫೋಟೋ ವಾಟ್ಸಪ್ ಡಿಪಿ, ಹೆಸರು ಬಳಸಿಕೊಂಡು ಇನ್ನೊಬ್ಬರ ಹೆಸರಿನಲ್ಲಿ ನೀವು ವಾಟ್ಸಪ್ ಬಳಸುವುದು ನಿಯಮಬಾಹಿರವಾಗಿದೆ. ಇದಕ್ಕೆ ಸೂಕ್ತ ಕ್ರಮವನ್ನು ವಾಟ್ಸಪ್ ಕೈಗೊಳ್ಳುತ್ತದೆ.
ಗುರುತು ಪರಿಚಯ ಇಲ್ಲದವರಿಗೆ ಸಂದೇಶ
ನಿಮ್ಮ ಕಾಂಟಾಕ್ಟ್ನಲ್ಲಿ ಇಲ್ಲದೇ ಇರುವವರಿಗೆ, ಯಾವುದೇ ಗುರುತು ಪರಿಚಯವೇ ಇಲ್ಲದ ವ್ಯಕ್ತಿಗೆ ನೀವು ಅನಗತ್ಯವಾಗಿ ವಾಟ್ಸಪ್ ಮೂಲಕ ಮೆಸೇಜ್ ಕಳುಹಿಸುವುದು, ಕಿರಿಕಿರಿ ಉಂಟುಮಾಡುವುದು, ಪದೇಪದೇ ಮೆಸೇಜ್, ವಾಟ್ಸಪ್ ಕಾಲ್ ಮಾಡುವುದು ಕೂಡ ನಿಮಗೆ ಸಮಸ್ಯೆ ತರುತ್ತದೆ.
ವಾಟ್ಸಪ್ ಪ್ಲಸ್ ಬಳಕೆ
ವಾಟ್ಸಪ್ ಪ್ಲಸ್ ಎನ್ನುವ ಥರ್ಡ್ ಪಾರ್ಟಿ ಅಪ್ಲಿಕೇಶನ್ ಬಳಕೆ, ವಾಟ್ಸಪ್ ಗೋಲ್ಡ್, ವಾಟ್ಸಪ್ ಪ್ರೊ ಎನ್ನುವ ಅಪ್ಲಿಕೇಶನ್ ಬಳಕೆ ಕೂಡ ನಿಯಮಕ್ಕೆ ವಿರುದ್ಧವಾಗಿದೆ. ವಾಟ್ಸಪ್ ಮತ್ತು ವಾಟ್ಸಪ್ ಬಿಜಿನೆಸ್ ಎನ್ನುವ ಎರಡು ಅಪ್ಲಿಕೇಶನ್ ಹೊರತುಪಡಿಸಿ, ಬೇರಾವುದೇ ಅಪ್ಲಿಕೇಶನ್ ಅನ್ನು ವಾಟ್ಸಪ್ ಹೊಂದಿಲ್ಲ. ಈ ಬಗ್ಗೆ ಕಂಪನಿ ಕೂಡ ಅಧಿಕೃತವಾಗಿ ಪ್ರಕಟಿಸಿದೆ. ಹೀಗಾಗಿ ವಾಟ್ಸಪ್ ಹೆಸರಿನ ನಕಲಿ ಮತ್ತು ಥರ್ಡ್ ಪಾರ್ಟಿ ಅಪ್ಲಿಕೇಶನ್ ಬಳಕೆ ಸಮಸ್ಯೆ ಸೃಷ್ಟಿಸಬಹುದು.
ಹಲವರಿಂದ ಬ್ಲಾಕ್ ಆಗಿದ್ದರೆ!
ನಿಮ್ಮ ವಾಟ್ಸಪ್ ಖಾತೆ ಕುರಿತು ಹಲವರು ರಿಪೋರ್ಟ್ ಮಾಡಿದ್ದರೆ, ಅಥವಾ ಬಹಳಷ್ಟು ಮಂದಿ ನಿಮ್ಮನ್ನು ವಾಟ್ಸಪ್‌ನಲ್ಲೂ ಬ್ಲಾಕ್ ಮಾಡಿದ್ದರೆ, ನಿಮ್ಮ ಖಾತೆಯ ವಿರುದ್ಧ ವಾಟ್ಸಪ್ ಸೂಕ್ತ ಕ್ರಮ ಕೈಗೊಳ್ಳಬಹುದು. ನಿಮ್ಮ ಖಾತೆಯನ್ನೇ ಬ್ಯಾನ್ ಮಾಡುವ ಅಧಿಕಾರ ವಾಟ್ಸಪ್ಗಿದೆ.
ನಿಮ್ಮ ವಿರುದ್ಧ ದೂರು ಬಂದರೆ!
ವಾಟ್ಸಪ್ ಖಾತೆಯ ಮೂಲಕ ನೀವು ಕಾನೂನುಬಾಹಿರ ಚಟುವಟಿಕೆ ನಡೆಸುತ್ತಿದ್ದರೆ, ಅಥವಾ ನಿಮ್ಮ ವಿರುದ್ಧ ವಾಟ್ಸಪ್ ಬಳಕೆದಾರರು ದೂರು ದಾಖಲಿಸಿದ್ದರೆ, ಅಂತಹ ದೂರನ್ನು ವಾಟ್ಸಪ್ ಪರಿಶೀಲಿಸುತ್ತದೆ. ನಿಮ್ಮ ಖಾತೆಯ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುತ್ತದೆ.
ವಾಟ್ಸಪ್ ಕೋಡ್ ತಿದ್ದುವುದು
ವಾಟ್ಸಪ್ ಕೋಡ್ ಅನ್ನು ತಿರುಚುವ, ಬದಲಾಯಿಸುವ, ಕೋಡ್ ತೆಗೆದು ಅದನ್ನು ದುರುದ್ದೇಶಕ್ಕೆ ಬಳಸುವ, ರಿವರ್ಸ್ ಇಂಜಿನಿಯರ್ ಹೀಗೆ ಸಮ್ಮತವಲ್ಲದ ಕೆಲಸ ಮಾಡಿದರೆ, ವಾಟ್ಸಪ್ ನಿಯಮಕ್ಕೆ ವಿರುದ್ಧವಾಗಿದ್ದು, ನಿಮ್ಮ ವಿರುದ್ಧ ಕ್ರಮ ಕೈಗೊಳ್ಳಬಹುದು.
ವೈರಸ್, ಮಾಲ್ವೇರ್ ಹರಡಲು ಬಳಸಿದರೆ
ವಾಟ್ಸಪ್ ಮೂಲಕ ವೈರಸ್ ಹರಡುವ ಮತ್ತು ಮಾಲ್ವೇರ್ ಸೃಷ್ಟಿಸುವ ಸಂದೇಶ ಹರಿಯಬಿಡುವುದು, ಅಪ್ಲಿಕೇಶನ್ ಕಳುಹಿಸುವುದು, ಎಪಿಕೆ ಫೈಲ್ ಕಳುಹಿಸಿ ಸ್ಮಾರ್ಟ್ಫೋನ್ ಕಾರ್ಯಾಚರಣೆಗೆ ಧಕ್ಕೆಯುಂಟುಮಾಡಿದರೆ ಅಂತಹ ಖಾತೆಯನ್ನು ಬ್ಯಾನ್ ಮಾಡಲಾಗುತ್ತದೆ.
ವಾಟ್ಸಪ್ ಸರ್ವರ್ ಹ್ಯಾಕ್ ಮಾಡಲು ಯತ್ನಿಸಿದರೆ.
ವಾಟ್ಸಪ್‌ನ ಸರ್ವರ್ ಅನ್ನು ಹ್ಯಾಕ್ ಮಾಡಲು ಯತ್ನಿಸಿದರೆ, ಅಥವಾ ಮತ್ಯಾರದೋ ಖಾತೆಯನ್ನು ಹ್ಯಾಕ್ ಮಾಡಿ ಅವರ ಮಾಹಿತಿಯನ್ನು ದೋಚಿದರೆ ನಿಮಗೆ ವಾಟ್ಸಪ್ ನಿಯಮದ ಪ್ರಕಾರ ಸೂಕ್ತ ಕ್ರಮ ಕೈಗೊಳ್ಳಲಾಗುತ್ತದೆ.
ಸುಳ್ಯ
Suresh Raina-ಟೀಂ ಇಂಡಿಯಾ ಮಾಜಿ ಕ್ರಿಕೆಟಿಗ ಸುರೇಶ್ ರೈನಾ ಸುಳ್ಯದ ‘ರಸಪಾಕ ಗ್ರಾಂಡ್’ ಹೋಟೆಲ್ ಗೆ ಭೇಟಿ
ಭಾರತ ಕ್ರಿಕೆಟ್ ತಂಡದ ಮಾಜಿ ಆಟಗಾರ ಹಾಗೂ ಖ್ಯಾತ ಕ್ರಿಕೆಟಿಗ ಸುರೇಶ್ ರೈನಾ ಸುಳ್ಯಕ್ಕೆ ಭೇಟಿ ನೀಡಿದರು. ಮಡಿಕೇರಿಗೆ ಪ್ರವಾಸ ಬಂದಿದ್ದ ರೈನಾ ಮಂಗಳೂರು ವಿಮಾನ ನಿಲ್ದಾಣದಿಂದ ಮಡಿಕೇರಿ ತೆರಳುವ ಮಾರ್ಗಮಧ್ಯೆ ಬುಧವಾರ ರಾತ್ರಿ ಸುಳ್ಯದ ‘ಶ್ರೀಕೃಷ್ಣ ರಸಪಾಕ ಗ್ರಾಂಡ್ ಹೋಟೆಲ್’ ಗೆ ಆಗಮಿಸಿದ ಅವರು, ಕೆಲಕಾಲ ತಂಗಿ ಚಹಾ ಸೇವಿಸಿ ಮುಂದಿನ ಪ್ರಯಾಣ ಬೆಳೆಸಿದರು.
ಸುಳ್ಯ: ಭಾರತ ಕ್ರಿಕೆಟ್ ತಂಡದ ಮಾಜಿ ಆಟಗಾರ ಹಾಗೂ ಖ್ಯಾತ ಕ್ರಿಕೆಟಿಗ ಸುರೇಶ್ ರೈನಾ ಸುಳ್ಯಕ್ಕೆ ಭೇಟಿ ನೀಡಿದರು.
ಮಡಿಕೇರಿಗೆ ಪ್ರವಾಸ ಬಂದಿದ್ದ ರೈನಾ ಮಂಗಳೂರು ವಿಮಾನ ನಿಲ್ದಾಣದಿಂದ ಮಡಿಕೇರಿ ತೆರಳುವ ಮಾರ್ಗಮಧ್ಯೆ ಬುಧವಾರ ರಾತ್ರಿ ಸುಳ್ಯದ ‘ಶ್ರೀಕೃಷ್ಣ ರಸಪಾಕ ಗ್ರಾಂಡ್ ಹೋಟೆಲ್’ ಗೆ ಆಗಮಿಸಿದ ಅವರು, ಕೆಲಕಾಲ ತಂಗಿ ಚಹಾ ಸೇವಿಸಿ ಮುಂದಿನ ಪ್ರಯಾಣ ಬೆಳೆಸಿದರು.
ಈ ಸಂದರ್ಭದಲ್ಲಿ ಹೋಟೆಲ್ ಮಾಲಕರಾದ ನಾರಾಯಣ ಕೇಕಡ್ಕ ಹಾಗೂ ಸಿಬ್ಬಂದಿ ಸುರೇಶ್ ರೈನಾ ಅವರನ್ನು ಆತ್ಮೀಯವಾಗಿ ಸ್ವಾಗತಿಸಿದರು.
ಇತ್ತಿಚೆಗಷ್ಟೇ ರಸಪಾಕ ಗ್ರಾಂಡ್ ಗೆ ಇನ್ಫೋಸೀಸ್ ಪ್ರತಿಷ್ಠಾನದ ಸುಧಾಮೂರ್ತಿ ಸಹಿತ ಹಲವು ಸೆಲೆಬ್ರಿಟಿಗಳು ಭೇಟಿ ನೀಡುತ್ತಿದ್ದಾರೆ.
ಸ್ಥಳೀಯ
Uppinangadi-ಉಪ್ಪಿನಂಗಡಿ: ಇಂದಿನಿಂದ ವಳಾಲು ಟೋಲ್ ಕಾರ್ಯಾರಂಭ; ಶೀಘ್ರದಲ್ಲೇ ಬ್ರಹ್ಮರಕೂಟ್ಲು ಟೋಲ್ ಗೇಟ್ ತೆರವು..!
ಬಿ.ಸಿ. ರೋಡ್–ಅಡ್ಡಹೊಳೆ ಚತುಷ್ಪಥ ಕಾಂಕ್ರೀಟ್ ಹೆದ್ದಾರಿ ಅಭಿವೃದ್ಧಿ ಯೋಜನೆಯ ಭಾಗವಾಗಿ ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿ ಸಮೀಪದ ಬಜತ್ತೂರು ಗ್ರಾಮದ ವಳಾಲಿನಲ್ಲಿ ನಿರ್ಮಿಸಿರುವ ಹೊಸ ಟೋಲ್ ಪ್ಲಾಝಾ ನ. 26ರಂದು ಬೆಳಗ್ಗೆ 8 ಗಂಟೆಯಿಂದ ಅಧಿಕೃತವಾಗಿ ಕಾರ್ಯಾರಂಭಿಸಲಿದೆ ಎಂದು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ತಿಳಿಸಿದೆ.
ಉಪ್ಪಿನಂಗಡಿ: ಬಿ.ಸಿ. ರೋಡ್–ಅಡ್ಡಹೊಳೆ ಚತುಷ್ಪಥ ಕಾಂಕ್ರೀಟ್ ಹೆದ್ದಾರಿ ಅಭಿವೃದ್ಧಿ ಯೋಜನೆಯ ಭಾಗವಾಗಿ ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿ ಸಮೀಪದ ಬಜತ್ತೂರು ಗ್ರಾಮದ ವಳಾಲಿನಲ್ಲಿ ನಿರ್ಮಿಸಿರುವ ಹೊಸ ಟೋಲ್ ಪ್ಲಾಝಾ ನ. 26ರಂದು ಬೆಳಗ್ಗೆ 8 ಗಂಟೆಯಿಂದ ಅಧಿಕೃತವಾಗಿ ಕಾರ್ಯಾರಂಭಿಸಲಿದೆ ಎಂದು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ತಿಳಿಸಿದೆ.
ವಳಾಲು ಟೋಲ್ ಪ್ಲಾಝಾದಲ್ಲಿ ಈಗಾಗಲೇ ಪರೀಕ್ಷಾರ್ಥ ಕಾರ್ಯಾಚರಣೆ ನಡೆಸಲಾಗಿದ್ದು, ಇದೀಗ ಅಧಿಕೃತವಾಗಿ ಶುಲ್ಕ ವಸೂಲಿ ಆರಂಭವಾಗಲಿದೆ. ಶುಲ್ಕ ಸಂಗ್ರಹದ ಟೆಂಡರ್ ಪ್ರಕ್ರಿಯೆ ಪೂರ್ಣಗೊಂಡಿದ್ದು, ಮಂಗಳೂರಿನ ಕೋರಲ್ ಸಂಸ್ಥೆ ನಿರ್ವಹಣೆಯ ಗುತ್ತಿಗೆ ಪಡೆದುಕೊಂಡಿದೆ. ವಾಹನಗಳಿಗೆ ನಿಗದಿಪಡಿಸಿರುವ ಶುಲ್ಕದ ವಿವರಗಳ ಫಲಕಗಳನ್ನೂ ಹೆದ್ದಾರಿ ಪ್ರಾಧಿಕಾರ ಅಳವಡಿಸಿದೆ.
ಬಿ.ಸಿ. ರೋಡ್–ಅಡ್ಡಹೊಳೆ ಚತುಷ್ಪಥ ಹೆದ್ದಾರಿ ಕಾಮಗಾರಿ ಸುಮಾರು ಶೇ. 95ರಷ್ಟು ಪೂರ್ಣಗೊಂಡಿದೆ. ಉಪ್ಪಿನಂಗಡಿಯಿಂದ ನೆಲ್ಯಾಡಿ ಕಡೆಗೆ ಸುಮಾರು 8 ಕಿ.ಮೀ. ದೂರದಲ್ಲಿರುವ ವಳಾಲಿನಲ್ಲಿ ಟೋಲ್ ಪ್ಲಾಝಾ ನಿರ್ಮಾಣವನ್ನು ಹೆದ್ದಾರಿ ಗುತ್ತಿಗೆ ಸಂಸ್ಥೆ ಕೆಎನ್‌ಆರ್ ಕನ್ಸ್ಟ್ರಕ್ಷನ್ ನಿರ್ವಹಿಸಿದೆ. ಹೆದ್ದಾರಿಯಲ್ಲಿ ಎರಡೂ ದಿಕ್ಕುಗಳಿಗೆ ತಲಾ ನಾಲ್ಕು ಲೇನ್‌ಗಳಿದ್ದು, ದ್ವಿಚಕ್ರ ವಾಹನಗಳು ಹಾಗೂ ರಿಕ್ಷಾಗಳ ಸಂಚಾರಕ್ಕೆ ಪ್ರತ್ಯೇಕ ಲೇನ್‌ಗಳನ್ನು ವ್ಯವಸ್ಥೆಗೊಳಿಸಲಾಗಿದೆ.
ರಾಷ್ಟ್ರೀಯ ಹೆದ್ದಾರಿ 75ರ ಬೆಂಗಳೂರು–ಮಂಗಳೂರು ಮಾರ್ಗದಲ್ಲಿ ನೆಲಮಂಗಲದಿಂದ ಸಕಲೇಶಪುರದವರೆಗೆ ಈಗಾಗಲೇ ಐದು ಟೋಲ್ ಪ್ಲಾಝಾಗಳಿದ್ದು, ಇದೀಗ ದಕ್ಷಿಣ ಕನ್ನಡ ಜಿಲ್ಲೆಯ ವ್ಯಾಪ್ತಿಯಲ್ಲಿ ವಳಾಲು ಟೋಲ್ ಕೂಡ ಸೇರ್ಪಡೆಯಾಗಿದೆ.
ಟೋಲ್ ಶುಲ್ಕ ಎಷ್ಟು?
ಕಾರು, ಜೀಪು, ವ್ಯಾನ್ ಹಾಗೂ ಲಘು ಮೋಟಾರು ವಾಹನಗಳಿಗೆ ಏಕಮುಖ ಪ್ರಯಾಣಕ್ಕೆ 140 ರೂ. ಹಾಗೂ ಅದೇ ದಿನದೊಳಗೆ ಹಿಂದಿರುಗುವ ಪ್ರಯಾಣಕ್ಕೆ 205 ರೂ. ಶುಲ್ಕ ನಿಗದಿಪಡಿಸಲಾಗಿದೆ.
ಟೋಲ್ ಪ್ಲಾಝಾದ ಒಟ್ಟು ಎಂಟು ಲೇನ್‌ಗಳ ಪೈಕಿ ಆರು ಲೇನ್‌ಗಳನ್ನು (3+3) ಫಾಸ್ಟ್‌ಟ್ಯಾಗ್ ಹೊಂದಿರುವ ವಾಹನಗಳಿಗಾಗಿ ಮೀಸಲಿಡಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ನೋಂದಣಿ ಹೊಂದಿರುವ ವಾಹನಗಳಿಗೆ ಶೇ. 50ರಷ್ಟು ರಿಯಾಯಿತಿ ನೀಡಲಾಗಿದ್ದು, ಟೋಲ್ ಕೇಂದ್ರದ 20 ಕಿ.ಮೀ. ವ್ಯಾಪ್ತಿಯ ನಿವಾಸಿಗಳಿಗೆ 360 ರೂ. ಮಾಸಿಕ ಪಾಸ್ ವ್ಯವಸ್ಥೆ ಇರಲಿದೆ ಎಂದು ಸಂಸ್ಥೆ ತಿಳಿಸಿದೆ.
ಶೀಘ್ರದಲ್ಲೇ ಬ್ರಹ್ಮರಕೂಟ್ಲು ಟೋಲ್ ಗೇಟ್ ತೆರವು
ಇದೇ ವೇಳೆ, ದಶಕಗಳಿಂದ ಕಾರ್ಯಾಚರಿಸುತ್ತಿರುವ ಬ್ರಹ್ಮರಕೂಟ್ಲು ರಾಷ್ಟ್ರೀಯ ಹೆದ್ದಾರಿ ಟೋಲ್ ಗೇಟ್ ಶೀಘ್ರದಲ್ಲೇ ಬಂದ್ ಆಗುವ ಸಾಧ್ಯತೆ ಇದೆ. ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯದ ಹಿರಿಯ ಅಧಿಕಾರಿಗಳೊಂದಿಗಿನ ಸಮಿತಿ ಸಭೆಯಲ್ಲಿ ಟೋಲ್ ತೆರವಿಗೆ ಅನುಮತಿ ದೊರೆತಿದ್ದು, ಅಧಿಕೃತ ಆದೇಶ ಪ್ರಕಟವಾಗುವುದಷ್ಟೇ ಬಾಕಿ ಇದೆ.
ಬಿ.ಸಿ. ರೋಡ್‌ನಿಂದ ಬೆಂಗಳೂರು ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿ 75 ಹಾಗೂ ಪುಂಜಾಲಕಟ್ಟೆಯಿಂದ ಚಾರ್ಮಾಡಿ ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿ 73ರ ಅಭಿವೃದ್ಧಿ ಕಾಮಗಾರಿಗಳು ಪೂರ್ಣಗೊಂಡ ಬಳಿಕ ಬ್ರಹ್ಮರಕೂಟ್ಲು ಟೋಲ್ ತೆರವುಗೊಳ್ಳಲಿದೆ. ರಾಷ್ಟ್ರೀಯ ಹೆದ್ದಾರಿ 73ರ ಮಡಂತ್ಯಾರು ಸಮೀಪದ ಪಣಕಜೆ ಬಳಿ ಹೊಸ ಟೋಲ್ ಗೇಟ್ ನಿರ್ಮಾಣವಾಗಲಿದ್ದು, ಅದರೊಂದಿಗೆ ಬ್ರಹ್ಮರಕೂಟ್ಲು ಟೋಲ್ ವಿಲೀನಗೊಳ್ಳಲಿದೆ.
ಸುರತ್ಕಲ್ ಟೋಲ್ ಗೇಟ್ ತೆರವಿನ ಬಳಿಕ ಇದೀಗ ಬ್ರಹ್ಮರಕೂಟ್ಲು ಟೋಲ್ ಕೂಡ ತೆರವುಗೊಳ್ಳುವ ನಿರೀಕ್ಷೆ ಮೂಡಿದ್ದು, ಈ ಭಾಗದ ಪ್ರಯಾಣಿಕರಿಗೆ ದೊಡ್ಡ ನಿರಾಳತೆ ಸಿಗಲಿದೆ.
ಅಧಿಕೃತ ಆದೇಶಕ್ಕಾಗಿ ಕಾಯಲಾಗುತ್ತಿದೆ
ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಸಮಿತಿಯು ಈ ವಿಚಾರವಾಗಿ ಕಳೆದ ನಾಲ್ಕು ತಿಂಗಳಲ್ಲಿ ಮೂರು ಸಭೆಗಳನ್ನು ನಡೆಸಿದ್ದು, ಅಂತಿಮವಾಗಿ ಟೋಲ್ ತೆರವಿಗೆ ಅನುಮತಿ ದೊರೆತಿದೆ. ಅಧಿಕೃತ ಆದೇಶದ ಪ್ರತಿ ಕೈ ಸೇರಿದ ಬಳಿಕ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಯೋಜನಾ ನಿರ್ದೇಶಕ ಅಬ್ದುಲ್ಲಾ ಜಾವೆದ್ ಅಝ್ಮಿ ತಿಳಿಸಿದ್ದಾರೆ.
13 ವರ್ಷಗಳಿಂದ ಕಾರ್ಯಾಚರಣೆ
2013ರಲ್ಲಿ ಆರಂಭಗೊಂಡ ಬ್ರಹ್ಮರಕೂಟ್ಲು ಟೋಲ್ ಪ್ಲಾಝಾ ಕಳೆದ 13 ವರ್ಷಗಳಿಂದ ಕಾರ್ಯಾಚರಿಸುತ್ತಿದೆ. ಮಂಗಳೂರು ಬಂದರು ಸಂಪರ್ಕ ಯೋಜನೆಯ ರಸ್ತೆಯ ನಿರ್ವಹಣೆಯ ಭಾಗವಾಗಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಈ ಟೋಲ್ ಕೇಂದ್ರವನ್ನು ಆರಂಭಿಸಿತ್ತು. ಇದಕ್ಕೂ ಮೊದಲು ಪಾಣೆಮಂಗಳೂರಿನ ನೇತ್ರಾವತಿ ಸೇತುವೆ ಬಳಿ ಟೋಲ್ ಶುಲ್ಕ ಸಂಗ್ರಹಿಸಲಾಗುತ್ತಿತ್ತು.
ಬ್ರಹ್ಮರಕೂಟ್ಲು ಟೋಲ್ ಗೇಟ್ ಅನ್ನು ಅಂತರದ ಮಾನದಂಡ ಹಾಗೂ ಸಾರ್ವಜನಿಕರ ಬೇಡಿಕೆಯ ಹಿನ್ನೆಲೆಯಲ್ಲಿ ಸ್ಥಳಾಂತರಿಸುವಂತೆ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯಕ್ಕೆ ಮನವಿ ಸಲ್ಲಿಸಿದ್ದೇನೆ. ಸಚಿವಾಲಯವು ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿದ್ದು, ಶೀಘ್ರದಲ್ಲೇ ಆದೇಶ ಪ್ರಕಟವಾಗುವ ನಿರೀಕ್ಷೆಯಿದೆ ಎಂದು ಸಂಸದ ಕ್ಯಾ. ಬ್ರಿಜೇಶ್ ಚೌಟ ತಿಳಿಸಿದ್ದಾರೆ.
ಅಂತರ ರಾಜ್ಯ
Insurance policy-ವಿಮೆ ಇಲ್ಲದ ವಾಹನಗಳಿಗೆ ಕಡಿವಾಣ: ಹೊಸ ನಿಯಮ ಜಾರಿಗೆ ಕೇಂದ್ರ ಚಿಂತನೆ; ಕಾರಿಗೆ 4 ವರ್ಷ, ಬೈಕ್‌ಗೆ 6 ವರ್ಷಗಳ ವಿಮೆ
ವಿಮೆ ಇಲ್ಲದೆ ರಸ್ತೆಗಿಳಿಯುವ ವಾಹನಗಳ ಸಮಸ್ಯೆಗೆ ಕಡಿವಾಣ ಹಾಕುವ ಉದ್ದೇಶದಿಂದ ಕೇಂದ್ರ ರಸ್ತೆ ಸಾರಿಗೆ ಸಚಿವಾಲಯವು ಹೊಸ ಕ್ರಮಗಳನ್ನು ಜಾರಿಗೆ ತರಲು ಚಿಂತನೆ ನಡೆಸಿದೆ. ಇದರ ಭಾಗವಾಗಿ ಕಾರುಗಳಿಗೆ ನಾಲ್ಕು ವರ್ಷ ಹಾಗೂ ದ್ವಿಚಕ್ರ ವಾಹನಗಳಿಗೆ ಆರು ವರ್ಷಗಳ ವಿಮಾ ಪಾಲಿಸಿಯನ್ನು ಪರಿಚಯಿಸುವ ಪ್ರಸ್ತಾವವಿದ್ದು, ಈ ಅವಧಿಗೆ ಅನ್ವಯವಾಗುವ ಪ್ರೀಮಿಯಂ ಅನ್ನು ಒಂದೇ ಬಾರಿಗೆ ಪಾವತಿಸುವ ವ್ಯವಸ್ಥೆ ರೂಪಿಸುವ ಕುರಿತು ಚರ್ಚೆ ನಡೆಯುತ್ತಿದೆ.
ಹೊಸದಿಲ್ಲಿ, ನ.25: ವಿಮೆ ಇಲ್ಲದೆ ರಸ್ತೆಗಿಳಿಯುವ ವಾಹನಗಳ ಸಮಸ್ಯೆಗೆ ಕಡಿವಾಣ ಹಾಕುವ ಉದ್ದೇಶದಿಂದ ಕೇಂದ್ರ ರಸ್ತೆ ಸಾರಿಗೆ ಸಚಿವಾಲಯವು ಹೊಸ ಕ್ರಮಗಳನ್ನು ಜಾರಿಗೆ ತರಲು ಚಿಂತನೆ ನಡೆಸಿದೆ. ಇದರ ಭಾಗವಾಗಿ ಕಾರುಗಳಿಗೆ ನಾಲ್ಕು ವರ್ಷ ಹಾಗೂ ದ್ವಿಚಕ್ರ ವಾಹನಗಳಿಗೆ ಆರು ವರ್ಷಗಳ ವಿಮಾ ಪಾಲಿಸಿಯನ್ನು ಪರಿಚಯಿಸುವ ಪ್ರಸ್ತಾವವಿದ್ದು, ಈ ಅವಧಿಗೆ ಅನ್ವಯವಾಗುವ ಪ್ರೀಮಿಯಂ ಅನ್ನು ಒಂದೇ ಬಾರಿಗೆ ಪಾವತಿಸುವ ವ್ಯವಸ್ಥೆ ರೂಪಿಸುವ ಕುರಿತು ಚರ್ಚೆ ನಡೆಯುತ್ತಿದೆ.
ಪ್ರಸ್ತುತ ಹೊಸ ವಾಹನ ಖರೀದಿಸುವಾಗ ನೀಡಲಾಗುವ ವಿಮೆಯ ಅವಧಿ ಮುಗಿದ ಬಳಿಕ ಪ್ರತಿ ವರ್ಷ ವಿಮೆಯನ್ನು ನವೀಕರಿಸಬೇಕಾಗುತ್ತದೆ. ಆದರೆ ಅನೇಕ ವಾಹನ ಮಾಲೀಕರು ವಿಮೆ ನವೀಕರಿಸದೆ ವಾಹನ ಚಲಾಯಿಸುತ್ತಿರುವುದರಿಂದ ಈ ಸಮಸ್ಯೆ ನಿವಾರಿಸಲು ದೀರ್ಘಾವಧಿಯ ವಿಮಾ ಪಾಲಿಸಿಯನ್ನು ಪರಿಚಯಿಸುವ ಚಿಂತನೆ ನಡೆದಿದೆ.
ಇದರೊಂದಿಗೆ, ಹಿಂದಿನ ವರ್ಷ ವಾಹನದ ವಿರುದ್ಧ ದಾಖಲಾಗಿರುವ ನಿರ್ದಿಷ್ಟ ಸಂಚಾರ ನಿಯಮ ಉಲ್ಲಂಘನೆಗಳ ಆಧಾರದ ಮೇಲೆ ವಿಮಾ ಪ್ರೀಮಿಯಂ ಹೆಚ್ಚಿಸುವ ಪ್ರಸ್ತಾವವೂ ಇದೆ.
ಏನೇನು ಪ್ರಸ್ತಾವಗಳಿವೆ?
- ಕಾರುಗಳಿಗೆ ನಾಲ್ಕು ವರ್ಷ ಹಾಗೂ ದ್ವಿಚಕ್ರ ವಾಹನಗಳಿಗೆ ಆರು ವರ್ಷಗಳ ವಿಮಾ ಪಾಲಿಸಿ ಪರಿಚಯಿಸುವ ಚಿಂತನೆ.
- ವಿಮೆಯ ಸಂಪೂರ್ಣ ಅವಧಿಗೆ ಅನ್ವಯವಾಗುವ ಪ್ರೀಮಿಯಂ ಅನ್ನು ಒಂದೇ ಬಾರಿಗೆ ಪಾವತಿಸುವ ವ್ಯವಸ್ಥೆ.
- ಹಿಂದಿನ ವರ್ಷ ವಾಹನದ ವಿರುದ್ಧ ದಾಖಲಾಗಿರುವ ಸಂಚಾರ ನಿಯಮ ಉಲ್ಲಂಘನೆಗಳ ಆಧಾರದ ಮೇಲೆ ವಿಮಾ ಪ್ರೀಮಿಯಂ ಹೆಚ್ಚಳ.
- ‘ವಿಮೆ ಇಲ್ಲದಿದ್ದರೆ ಇಂಧನವಿಲ್ಲ’ ಅಭಿಯಾನ ಆರಂಭಿಸುವಂತೆ ಸುಪ್ರೀಂಕೋರ್ಟ್‌ನ ರಸ್ತೆ ಸುರಕ್ಷತಾ ಸಮಿತಿ ಸೂಚನೆ.
- ಈ ಅಭಿಯಾನವನ್ನು ಪ್ರಾಯೋಗಿಕವಾಗಿ ಹರಿಯಾಣ ಮತ್ತು ಉತ್ತರ ಪ್ರದೇಶದ ತಲಾ ಐದು ಪೆಟ್ರೋಲ್ ಬಂಕ್‌ಗಳಲ್ಲಿ ಆರಂಭಿಸಲು ಸಲಹೆ.
- ಪೆಟ್ರೋಲ್ ಬಂಕ್‌ಗಳಲ್ಲಿ ವಾಹನಗಳ ನಂಬರ್ ಪ್ಲೇಟ್ ಆಧರಿಸಿ ಕ್ಯಾಮೆರಾಗಳ ಮೂಲಕ ವಿಮೆಯ ಮಾನ್ಯತೆಯನ್ನು ಪರಿಶೀಲಿಸುವ ವ್ಯವಸ್ಥೆ.
-
ಬಿಗ್ ನ್ಯೂಸ್22 hours agoRain-ಸುಳ್ಯ-ಪುತ್ತೂರು ಭಾಗಗಳಲ್ಲಿ ಹಲವೆಡೆ ಮಳೆ : ಎಷ್ಟು ದಿನ ಮಳೆಯಾಗಲಿದೆ ಗೊತ್ತೇ..?
-
ಅಪರಾಧ21 hours agoMangalore-ಚಿನ್ನ ಕಳ್ಳಸಾಗಣೆ ಜಾಲ: ಮಂಗಳೂರು ವಿಮಾನ ನಿಲ್ದಾಣದ ಇಬ್ಬರು ಸಿಬ್ಬಂದಿ ಸಹಿತ ಮೂವರು ಡಿಆರ್ಐ ವಶಕ್ಕೆ
-
ಸುಳ್ಯ16 hours agoSuresh Raina-ಟೀಂ ಇಂಡಿಯಾ ಮಾಜಿ ಕ್ರಿಕೆಟಿಗ ಸುರೇಶ್ ರೈನಾ ಸುಳ್ಯದ ‘ರಸಪಾಕ ಗ್ರಾಂಡ್’ ಹೋಟೆಲ್ ಗೆ ಭೇಟಿ
-
ಅಂತರ ರಾಜ್ಯ19 hours agoCM post battle-ಉತ್ತರ ಪ್ರದೇಶ ಬಿಜೆಪಿಯಲ್ಲಿ ಸಿಎಂ ಕುರ್ಚಿ ಕದನ: ಚುನಾವಣೆಗೂ ಮುನ್ನವೇ ಭಿನ್ನಮತ?
-
ನಿಧನ ವಾರ್ತೆ20 hours agoAccident-ಯುಎಇಯಲ್ಲಿ ಭೀಕರ ಬಸ್–ಲಾರಿ ಅಪಘಾತ; ಕಾಸರಗೋಡಿನ ಅಶ್ರಫ್ ಸೇರಿ ನಾಲ್ವರು ಕೇರಳಿಗರು ಸಾವು
-
ಅಂತರ ರಾಜ್ಯ19 hours agoInsurance policy-ವಿಮೆ ಇಲ್ಲದ ವಾಹನಗಳಿಗೆ ಕಡಿವಾಣ: ಹೊಸ ನಿಯಮ ಜಾರಿಗೆ ಕೇಂದ್ರ ಚಿಂತನೆ; ಕಾರಿಗೆ 4 ವರ್ಷ, ಬೈಕ್‌ಗೆ 6 ವರ್ಷಗಳ ವಿಮೆ
-
ಸ್ಥಳೀಯ16 hours agoUppinangadi-ಉಪ್ಪಿನಂಗಡಿ: ಇಂದಿನಿಂದ ವಳಾಲು ಟೋಲ್ ಕಾರ್ಯಾರಂಭ; ಶೀಘ್ರದಲ್ಲೇ ಬ್ರಹ್ಮರಕೂಟ್ಲು ಟೋಲ್ ಗೇಟ್ ತೆರವು..!
-
ನಿಧನ ವಾರ್ತೆ21 hours agoಮಂಗಳೂರು: ಬೈಕ್ ಢಿಕ್ಕಿಯಿಂದ ಗಾಯಗೊಂಡಿದ್ದ ನರ್ಸಿಂಗ್ ವಿದ್ಯಾರ್ಥಿನಿ ಸಾವು















