ಸ್ಥಳೀಯ
Arecanut : ಎಲೆ ಚುಕ್ಕಿ ರೋಗ ಉಲ್ಭಣ – ಅತಂಕದಲ್ಲಿ ಆಡಿಕೆ ಬೆಳೆಗಾರ | ರೋಗ ನಿಯಂತ್ರಣಕ್ಕೆ ತತಕ್ಷಣ ಕೈಗೊಳ್ಳಬೇಕಾದ ಪರಿಹಾರ ಕ್ರಮಗಳ ವಿವರ ಇಲ್ಲಿದೆ
ಮಂಗಳೂರು Mangalore ಅ 19: ಅಡಿಕೆಗೆ ಬಂಗಾರದ ಬೆಲೆಯಿದೆ. ರಾಜ್ಯ ಹಾಗೂ ದೇಶದಲ್ಲಿ ಬೇರಾವುದೆ ವಾಣಿಜ್ಯ ಹಾಗೂ ತೋಟಗಾರಿಕೆ ಬೇಳೆಗಾರರಿಗಿಂತ ಅಡಿಕೆ ಬೆಳೆಗಾರನ ಸ್ಥಿತಿ ಬಹಳಷ್ಟು ಚೆನ್ನಾಗಿದೆ ಎನ್ನುವುದು ಎಲ್ಲ ಕಡೆ ಕೇಳಿ ಬರುವ ಮಾತು . ಆದರೇ ಬಹುತೇಕ ಜನರು ಊಹಿಸಿದಂತೆ ಅಡಿಕೆ ಬೆಳೆಗಾರನ ಸ್ಥಿತಿ ಹೂವಿನ ಹಾಸಿಗೆಯಾಗಿ ಈಗ ಉಳಿದಿಲ್ಲ. ಕೊಳೆ ರೋಗ , ಹಳದಿ ರೋಗ , ಕಾರ್ಮಿಕರ ಸಮಸ್ಯೆಯೊಂದಿಗೆ ಹೆಣಗಾಡುತ್ತಿದ್ದ ಅಡಿಕೆ ಕೃಷಿಕನನ್ನು ಇದೀಗ ಇನ್ನೆರಡು ಪೆಡಂಭೂತಗಳು ಕಾಡುತ್ತಿದೆ.
ಒಂದು ಸರಕಾರದ ಪಾಲಿಸಿ ಯಿಂದ ಉಂಟಾದ ಸಮಸ್ಯೆಯಾದರೆ, ಇನ್ನೊಂದು ಆಡಿಕೆ ಗಿಡಗಳನ್ನು ಕೊಲ್ಲುತ್ತಿರುವ ರೋಗದ ಸಮಸ್ಯೆ . ಭೂತನ್ ನಿಂದ ಅಡಿಕೆ ಅಮದು ಮಾಡುವ ಸರಕಾರದ ನಿರ್ಧಾರ ರೈತನ ಆತಂಕಕ್ಕೆ ಕಾರಣವಾಗಿದೆ. ಇನ್ನೊಂದೆಡೆ ಆಡಿಕೆ ಬೆಳೆಯನ್ನು ಕಾಡುತ್ತಿರುವ ಎಲೆ ಚುಕ್ಕೆ ರೋಗ ಅಡಿಕೆ ಬೆಳೆಗಾರನ ಮೂರ ಬಟ್ಟೆ ಮಾಡಿದೆ.
ಎಲೆ ಚುಕ್ಕೆ ರೋಗದ ಲಕ್ಷಣ
ಅಡಿಕೆ ಹೆಡಲಿನ ಎಲೆಯ ಮೇಲೆ ಕಂದು ಅಥವಾ ಹಳದಿ ಬಣ್ಣದ ಚುಕ್ಕೆಗಳು ಕಾಣಿಸಿಕೊಂಡು, ನಂತರ ಇಡೀ ಮರಕ್ಕೆ ಹರಡುತ್ತದೆ. ಬಳಿಕ ಎಲೆಗಳು ಒಣಗುತ್ತವೆ. ರೋಗ ಬಾಧೆಯಿಂದ ಇಳುವರಿಗೆ ಬಲವಾದ ಹೊಡೆತ ಬೀಳುತ್ತದೆ. ಈ ರೋಗ ನಿಯಂತ್ರಣಕ್ಕೆ ತರುವುದು ಸುಲಭವಲ್ಲ. ಶಿಲೀಂಧ್ರ ಮತ್ತು ಬ್ಯಾಕ್ಟೀರಿಯಾಗಳಿಂದ ರೋಗ ಹರಡುತ್ತದೆ. ವಾತಾವರಣದಲ್ಲಿ ಉಂಟಾಗುವ ವ್ಯತ್ಯಯ, ಹೆಚ್ಚುವ ತೇವಾಂಶ ಮತ್ತು ರಸಗೊಬ್ಬರ ಬಳಕೆ ಅಸಮತೋಲನ ರೋಗಕ್ಕೆ ಪ್ರಮುಖ ಕಾರಣ.
ಹಬ್ಬುತ್ತಿದೆ ರೋಗ :
ಕೆಲವು ಜಿಲ್ಲೆಗಳಲ್ಲಷ್ಟೇ ಕಾಣಿಸಿಕೊಂಡಿದ್ದ ಎಲೆ ಚುಕ್ಕೆ ರೋಗವು ಮಳೆ ಹಾಗೂ ಶೀತ ವಾತಾವರಣದಿಂದಾಗಿ ರಾಜ್ಯಾದ್ಯಂತ ವ್ಯಾಪಿಸುತ್ತಿದೆ. ಅತಿ ಹೆಚ್ಚು ಅಡಿಕೆ ಬೆಳೆಯುವ ದಕ್ಷಿಣ ಕನ್ನಡ, ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು ಜಿಲ್ಲೆಗಳಲ್ಲಿ ರೋಗ ಹೆಚ್ಚಿನ ಪ್ರಮಾಣದಲ್ಲಿ ಆವರಿಸಿದ್ದರೆ, ಉತ್ತರ ಕನ್ನಡದಲ್ಲಿಯೂ ಕೆಲವೆಡೆ ಕಾಣಿಸಿಕೊಂಡಿದೆ. ಫಸಲು ಕೊಡುವ ಮರಗಳು ಮಾತ್ರವಲ್ಲದೆ ಪಾತಿಯಲ್ಲಿರುವ ಸಸಿಗಳಿಗೂ ರೋಗ ತಗುಲಿದೆ.

ಅಕಾಲಿಕ ಮಳೆ
ಈ ರೋಗದ ಹಬ್ಬುವಿಕೆಗೆ ಅತೀ ಪ್ರಮುಖ ಕಾರಣವಾಗಿರುವುದು ಅಕಾಲಿಕ ಮಳೆ. ಕರಾವಳಿ, ಮಲೆನಾಡು ಸೇರಿದಂತೆ ಅಡಿಕೆ ಬೆಳೆಯುವ ಪ್ರಮುಖ ಪ್ರದೇಶಗಳಲ್ಲಿ ಕಳೆದ ವರ್ಷದ ಡಿಸೆಂಬರ್‌ನಲ್ಲಿಯೇ ಶುರುವಾದ ಮಳೆ ಈಗಲೂ ಮುಂದುವರಿದಿದೆ. ಅಡಿಕೆಗೆ ಅಗತ್ಯವಿರುವ ಪ್ರಮಾಣದ ಬಿಸಿಲು ಸಹ ಸಿಕ್ಕಿಲ್ಲ. ಹೀಗಾಗಿ ಈ ಅಕಾಲಿಕ ಮಳೆಯೇ ಎಲೆ ಚುಕ್ಕೆ ರೋಗಕ್ಕೆ ಪ್ರಮುಖ ಕಾರಣವಾಗಿದೆ. ಬಯಲು ಸೀಮೆಯಾದ ತುಮಕೂರಲ್ಲಿಯೂ ನಿರಂತರ ಮಳೆ ಹಾಗೂ ಶೀತ ವಾತಾವರಣದಿಂದ ಎಲೆ ಚುಕ್ಕೆ ರೋಗ ಹರಡುತ್ತಿದೆ. ಇತರೆ ಜಿಲ್ಲೆಗಳಲ್ಲೂ ರೋಗಾತಂಕ ಸೃಷ್ಟಿಯಾಗುತ್ತಿದೆ.
ಇಳುವರಿ ಕುಸಿತ
ಎಕರೆ ತೋಟದಲ್ಲಿ ಸರಾಸರಿ 1,200 ಕೊನೆಗಳು ಬರುತ್ತಿದ್ದ ಜಾಗದಲ್ಲೀಗ ಹೆಚ್ಚೆಂದರೆ 500 – 600 ಕೊನೆಗಳು ಸಿಗುತ್ತವೆ. ಅವುಗಳು ಕೂಡ ಲೆಕ್ಕಕಷ್ಟೇ, ಕಾಯಿಗಳು ಕಡಿಮೆ ಮತ್ತು ರೋಗಪೀಡಿತವಾಗಿವೆ. ಹೀಗಾಗಿ ಅಡಿಕೆ ಬೆಳೆಗಾರರಿಗೆ ಜೀವನೋಪಾಯದ ಆತಂಕ ಶುರುವಾಗಿದೆ. ತುಮಕೂರು, ದಾವಣಗೆರೆ, ಹಾಸನ, ಮಂಡ್ಯ, ಮೈಸೂರು ಸೇರಿದಂತೆ ರಾಜ್ಯದಲ್ಲಿ 23 ಜಿಲ್ಲೆಗಳಲ್ಲಿ ಅಡಿಕೆ ಬೆಳೆಯಲಾಗುತ್ತದೆ. ಸುಮಾರು 10 ಲಕ್ಷ ಕುಟುಂಬಗಳು ಅಡಿಕೆಯನ್ನೇ ಆಶ್ರಯಿಸಿವೆ.
Gold Rate Today : ಏರಿಕೆ ಕಂಡ ಗೋಲ್ಡ್ ರೇಟ್ : ಚಿನ್ನ ಖರೀದಿಗೂ ಮುನ್ನ ಇಂದಿನ ಬೆಲೆ ತಿಳಿಯಿರಿ
ನಿರ್ವಹಣೆ :
ಮಣ್ಣು ಪರೀಕ್ಷೆ ಆಧಾರದ ಮೇಲೆ ಪೋಷಕಾಂಶ ನೀಡಬೇಕು. ಜೈವಿಕ ಗೊಬ್ಬರ ಬಳಕೆ ಮಾಡಬೇಕು. ಶಿಫಾರಸ್ಸು ಮಾಡಿರುವ ಪ್ರಮಾಣದಲ್ಲಿ ರಸಗೊಬ್ಬರ ಬಳಕೆ ಸಮತೋಲದಲ್ಲಿರಬೇಕು. ಬೇಸಿಗೆಯಲ್ಲಿ ನೀರನ್ನು ಕೊಟ್ಟು ನಿರ್ವಹಣಾ ಕ್ರಮ ಅನುಸರಿಸಬೇಕು. ಹಸಿರೆಲೆ ತಿಪ್ಪೆಗೊಬ್ಬರ ಹಾಕಬೇಕು. ಬಸಿಗಾಲುವೆಗಳನ್ನು ನಿರ್ಮಿಸಬೇಕು. ಕೀಟಗಳ ನಿರ್ವಹಣೆಗೆ ಸೂಕ್ತ ಕ್ರಮದ ಅಗತ್ಯವಿದೆ. ತಪ್ಪದೇ ಔಷಧ ಸಿಂಪಡಣೆ ಮಾಡಬೇಕು.

ತಕ್ಷಣ ಏನು ಮಾಡಬೇಕು?
ಎಲೆ ಚುಕ್ಕೆ ರೋಗ ನಿಯಂತ್ರಣಕ್ಕೆ ಔಷಧ ಸಿಂಪಡಣೆ ತುರ್ತು ಅಗತ್ಯ. 1 ಲೀಟರ್ ನೀರಿಗೆ 2 ಗ್ರಾಂ ಕಾರ್ಬನ್ ಡೈಸಿಮ್, 1 ಲೀ ನೀರಿಗೆ 2 ಗ್ರಾಂ ಮ್ಯಾಂಕೋಜೆಬ್, 1 ಲೀ. ನೀರಿಗೆ 1 ಎಂಎಲ್ ಹೆಕ್ಸಾಕೊನಜೋಲ್, 1 ಲೀಟರ್ ನೀರಿಗೆ 3 ಗ್ರಾಂ ಕಾಪರ್ ಆಕ್ಸಿಕ್ಲೋರೈಡ್ ಇವುಗಳಲ್ಲಿ ಯಾವುದಾದರೊಂದು ಔಷಧ ಸಿಂಪಡಣೆ ಮಾಡಬೇಕು. ಇಲ್ಲವೇ 100 ಲೀಟರ್ ನೀರಿಗೆ 1 ಕೆ.ಜಿ. ಮೈಲುತುತ್ತ, 1 ಕೆ.ಜಿ.ಸುಣ್ಣ ಬೆರೆಸಿ ಸಿಂಪಡಿಸಬೇಕು.
Knee pain Treatment : ಕೀಲುನೋವು, ಸಂಧಿವಾತ ಉಪಶಮನಕ್ಕೆ ಹಸಿ ಪಪ್ಪಾಯವನ್ನು ಕ್ರಮಬದ್ದವಾಗಿ ಹೀಗೆ ಸೇವಿಸಿ
ಅಪರಾಧ
Bantwal-ಬಂಟ್ವಾಳ: 17 ವರ್ಷಗಳಿಂದ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿದ್ದ ಆರೋಪಿ ಅರೆಸ್ಟ್..!
ಸುಮಾರು 17 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ, ವಾರೆಂಟ್ ಜಾರಿಯಾಗಿದ್ದ ಆರೋಪಿ ಬಂಟ್ವಾಳದ ತಲಪಾಡಿ ನಿವಾಸಿ ಹನೀಫ್ ಅಲಿಯಾಸ್ ಕೊಕ್ಕಡ ಹನೀಫ್ (57)ನನ್ನು ಬಂಟ್ವಾಳ ನಗರ ಪೊಲೀಸರು ಬಂಧಿಸಿದ್ದಾರೆ.
ಬಂಟ್ವಾಳ: ಸುಮಾರು 17 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ, ವಾರೆಂಟ್ ಜಾರಿಯಾಗಿದ್ದ ಆರೋಪಿ ಬಂಟ್ವಾಳದ ತಲಪಾಡಿ ನಿವಾಸಿ ಹನೀಫ್ ಅಲಿಯಾಸ್ ಕೊಕ್ಕಡ ಹನೀಫ್ (57)ನನ್ನು ಬಂಟ್ವಾಳ ನಗರ ಪೊಲೀಸರು ಬಂಧಿಸಿದ್ದಾರೆ.
2009ರಲ್ಲಿ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಕರ್ನಾಟಕ ಅಬಕಾರಿ ಕಾಯ್ದೆಯ ವಿವಿಧ ಕಲಂಗಳಡಿ ದಾಖಲಾಗಿದ್ದ ಪ್ರಕರಣದಲ್ಲಿ ಹನೀಫ್ ಆರೋಪಿಯಾಗಿದ್ದ. ಈ ಪ್ರಕರಣಕ್ಕೆ ಸಂಬಂಧಿಸಿ ಸುಮಾರು 17 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಎನ್ನಲಾಗಿದೆ.
ಇದಲ್ಲದೆ, 2023ರಲ್ಲಿ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಅ.ಕ್ರ 143/2023 ಕಲಂ 143,147, 448, 427, 436, 307, 149 IPC ಪ್ರಕರಣದಲ್ಲಿ ಆರೋಪಿಯಾಗಿದ್ದ ಆತನ ವಿರುದ್ಧ ವಾರೆಂಟ್ ಜಾರಿಯಾಗಿತ್ತು.
ಅಕ್ಟೋಬರ್ 9ರಂದು ಮೂಡುಬಿದಿರೆಯ ಶಿರ್ತಾಡಿ ಎಂಬಲ್ಲಿ ಬಂಟ್ವಾಳ ನಗರ ಠಾಣೆಯ ಎಎಸ್‌ಐ ಬಶೀರ್, ಹೆಡ್ ಕಾನ್‌ಸ್ಟೆಬಲ್‌ಗಳಾದ ಜಗದೀಶ್ ಮತ್ತು ಸಂತೋಷ್ ಹಾಗೂ ಪೊಲೀಸ್ ಕಾನ್‌ಸ್ಟೆಬಲ್ ಗವಿಸಿದ್ದಪ್ಪ ಅವರ ತಂಡ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಿದೆ.
ಮಂಗಳೂರು
Mulki-ಮೂಲ್ಕಿ: ಚಲಿಸುತ್ತಿದ್ದ ಮಂಗಳೂರು – ಕಾರ್ಕಳ ಎಕ್ಸ್ ಪ್ರೆಸ್ ಬಸ್‌ಗೆ ಬಡಿದ ಗಿಡುಗ: ಗಾಜು ಪುಡಿಪುಡಿ, ಪುತ್ತೂರು ಮೂಲದ ಚಾಲಕನ ಸಮಯಪ್ರಜ್ಞೆಯಿಂದ ತಪ್ಪಿದ ಭಾರಿ ಅವಘಡ
ಮೂಲ್ಕಿ ಸಮೀಪದ ಹಳೆಯಂಗಡಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಚಲಿಸುತ್ತಿದ್ದ ಮಂಗಳೂರು- ಕಾರ್ಕಳ ಎಕ್ಸ್‌ಪ್ರೆಸ್ ಬಸ್‌ನ ಮುಂಭಾಗದ ಗಾಜಿಗೆ ಗಿಡುಗವೊಂದು ಬಡಿದ ಪರಿಣಾಮ ಗಾಜು ಪುಡಿಪುಡಿಯಾದ ಘಟನೆ ನಡೆದಿದೆ. ಘಟನೆಯಲ್ಲಿ ಒಬ್ಬರಿಗೆ ಗಾಯವಾಗಿದೆ ಎಂದು ತಿಳಿದುಬಂದಿದೆ.
ಮಂಗಳೂರು: ಮೂಲ್ಕಿ ಸಮೀಪದ ಹಳೆಯಂಗಡಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಚಲಿಸುತ್ತಿದ್ದ ಮಂಗಳೂರು- ಕಾರ್ಕಳ ಎಕ್ಸ್‌ಪ್ರೆಸ್ ಬಸ್‌ನ ಮುಂಭಾಗದ ಗಾಜಿಗೆ ಗಿಡುಗವೊಂದು ಬಡಿದ ಪರಿಣಾಮ ಗಾಜು ಪುಡಿಪುಡಿಯಾದ ಘಟನೆ ನಡೆದಿದೆ. ಘಟನೆಯಲ್ಲಿ ಒಬ್ಬರಿಗೆ ಗಾಯವಾಗಿದೆ ಎಂದು ತಿಳಿದುಬಂದಿದೆ.
ಲಕ್ಷ್ಮಿ ಗಣೇಶ್ ಹೆಸರಿನ ಎಕ್ಸ್‌ಪ್ರೆಸ್ ಬಸ್ ಸಂಚರಿಸುತ್ತಿದ್ದ ವೇಳೆ ಏಕಾಏಕಿ ಗಿಡುಗ ಬಸ್‌ನ ಮುಂಭಾಗದ ಗಾಜಿಗೆ ಬಡಿದಿದೆ. ಇದರಿಂದ ಗಾಜು ಒಡೆದು ಚೂರುಚೂರಾಗಿದೆ.
ಘಟನೆಯಿಂದ ಪ್ರಯಾಣಿಕರಲ್ಲಿ ಆತಂಕದ ವಾತಾವರಣ ನಿರ್ಮಾಣವಾದರೂ, ಚಾಲಕ ಹರೀಶ್ ಪೂಜಾರಿ ಅವರು ವಿಚಲಿತರಾಗದೆ ಸಮಯಪ್ರಜ್ಞೆಯಿಂದ ಬಸ್ ನಿಲ್ಲಿಸಿದ್ದಾರೆ. ಅವರ ಈ ನಡೆಗೆ ಸಾರ್ವಜನಿಕರಿಂದ ಮೆಚ್ಚುಗೆ ವ್ಯಕ್ತವಾಗಿದೆ.
ಬಸ್ ಚಾಲಕ ಪುತ್ತೂರಿನ ಸಂಟ್ಯಾರು ಕೂರೇಲು ನಿವಾಸಿ ಹರೀಶ್ ಪೂಜಾರಿ ಮೇಲೆ ಗಾಜಿನ ಚೂರುಗಳು ಬಿದ್ದು ಗಾಯಗೊಂಡಿದ್ದರು ಅವರು ವೇಗವಾಗಿ ಹೋಗುತ್ತಿದ್ದ ಬಸ್ ನ್ನು ತಕ್ಷಣ ನಿಯಂತ್ರಿಸಿದ್ದಾರೆ. ಅವಘಡ ಸಂದರ್ಭ ಡ್ರೈವರ್ ಸ್ಟೇರೀಂಗ್ ಕೈಬಿಟ್ಟದ್ದರೂ ಬಸ್ ಡಿವೈಡರ್ ಹಾರಿ ಭಾರೀ ಅವಘಡ ಸಂಭವಿಸುತ್ತಿತ್ತು ಎನ್ನಲಾಗಿದೆ.
ಮಂಗಳೂರು
Ujire-ಭಾರೀ ಜನಸ್ತೋಮದೊಂದಿಗೆ ಸೌಜನ್ಯ ನ್ಯಾಯದ ನಡಿಗೆ
ಧರ್ಮಸ್ಥಳದ ಸೌಜನ್ಯ ಪ್ರಕರಣದ ಮರುತನಿಖೆಗೆ ಆಗ್ರಹಿಸಿ ಸೌಜನ್ಯ ಪರ ಹೋರಾಟಗಾರರು ಉಜಿರೆಯಿಂದ ಬೆಳ್ತಂಗಡಿವರೆಗೆ ನ್ಯಾಯದ ನಡಿಗೆ ಹಮ್ಮಿಕೊಂಡಿದ್ದಾರೆ.

ಮಂಗಳೂರು: ಧರ್ಮಸ್ಥಳದ ಸೌಜನ್ಯ ಪ್ರಕರಣದ ಮರುತನಿಖೆಗೆ ಆಗ್ರಹಿಸಿ ಸೌಜನ್ಯ ಪರ ಹೋರಾಟಗಾರರು ಉಜಿರೆಯಿಂದ ಬೆಳ್ತಂಗಡಿವರೆಗೆ ನ್ಯಾಯದ ನಡಿಗೆ ಹಮ್ಮಿಕೊಂಡಿದ್ದಾರೆ.
ಉಜಿರೆಯಿಂದ ಆರಂಭವಾದ ಬೃಹತ್ ಜಾಥಾದಲ್ಲಿ ಸಾವಿರಾರು ಸಂಖ್ಯೆಯಲ್ಲಿ ಜನರು ಭಾಗವಹಿಸಿದ್ದು, ಮೌನ ಮೆರವಣಿಗೆಯ ಮೂಲಕ ಸೌಜನ್ಯಳಿಗೆ ನ್ಯಾಯ ದೊರಕಿಸಿಕೊಡಬೇಕೆಂದು ಆಗ್ರಹಿಸಲಾಯಿತು. ಸುಮಾರು ಐದು ಕಿಲೋಮೀಟರ್ ದೂರದವರೆಗೆ ಹೋರಾಟಗಾರರು ನಡಿಗೆಯಲ್ಲಿ ಸಾಗಲಿದ್ದಾರೆ.
ನ್ಯಾಯದ ನಡಿಗೆಯ ಬಳಿಕ ಬೆಳ್ತಂಗಡಿಯ ಮೈದಾನದಲ್ಲಿ ಬೃಹತ್ ಅಭಿನಂದನಾ ಸಮಾವೇಶ ನಡೆಯಲಿದೆ. ಸೌಜನ್ಯ ಪರವಾಗಿ ಸುಪ್ರೀಂ ಕೋರ್ಟ್ ಮತ್ತು ಹೈಕೋರ್ಟ್‌ನಲ್ಲಿ ವಾದ ಮಂಡಿಸಿದ ವಕೀಲರ ತಂಡಕ್ಕೆ ಈ ಸಂದರ್ಭದಲ್ಲಿ ಅಭಿನಂದನೆ ಸಲ್ಲಿಸಲಾಗುತ್ತದೆ. ಕಾರ್ಯಕ್ರಮದಲ್ಲಿ ವಕೀಲರು ಸೇರಿದಂತೆ ಹಲವು ಗಣ್ಯರು ಭಾಗವಹಿಸಲಿದ್ದಾರೆ ಎಂದು ತಿಳಿದುಬಂದಿದೆ.
-
ನಿಧನ ವಾರ್ತೆ15 hours agoMumbai-ಪ್ರೀತಿಸಿ ಮದುವೆಯಾಗಿದ್ದ ಜೋಡಿಯ ದುರಂತ ಅಂತ್ಯ? ಸರಪಳಿಯಿಂದ ಕಾಲು ಕಟ್ಟಿದ ಸ್ಥಿತಿಯಲ್ಲಿ ಶವ ಪತ್ತೆ
-
ಮಂಗಳೂರು13 hours agoUjire-ಭಾರೀ ಜನಸ್ತೋಮದೊಂದಿಗೆ ಸೌಜನ್ಯ ನ್ಯಾಯದ ನಡಿಗೆ
-
ಮಂಗಳೂರು11 hours agoMulki-ಮೂಲ್ಕಿ: ಚಲಿಸುತ್ತಿದ್ದ ಮಂಗಳೂರು – ಕಾರ್ಕಳ ಎಕ್ಸ್ ಪ್ರೆಸ್ ಬಸ್‌ಗೆ ಬಡಿದ ಗಿಡುಗ: ಗಾಜು ಪುಡಿಪುಡಿ, ಪುತ್ತೂರು ಮೂಲದ ಚಾಲಕನ ಸಮಯಪ್ರಜ್ಞೆಯಿಂದ ತಪ್ಪಿದ ಭಾರಿ ಅವಘಡ
-
ಅಂತರ ರಾಜ್ಯ15 hours agoArrested-ಕಾಸರಗೋಡು: ಮದುವೆಯ ನೆಪದಲ್ಲಿ ಹತ್ತಾರು ಯುವತಿಯರಿಗೆ ವಂಚನೆ: ಮದುವೆಯಾದ ಮೂರೇ ದಿನಕ್ಕೆ ಚಿನ್ನ, ಹಣದೊಂದಿಗೆ ಪರಾರಿ; ಆರೋಪಿ ಬಿಜು ಆಂಟನಿ ಬಂಧನ
-
ರಾಜ್ಯ14 hours agoRobotic technology-ರೋಬೋಟಿಕ್ ತಂತ್ರಜ್ಞಾನದ ಅದ್ಭುತ: ಸ್ಪೇನ್ನಲ್ಲಿ ಕುಳಿತು ಕರ್ನಾಟಕದ ಮಹಿಳೆಗೆ ಹೃದಯ ಶಸ್ತ್ರಚಿಕಿತ್ಸೆ
-
ಅಂತರ ರಾಜ್ಯ14 hours agoJantar Mantar-ಸಿಜೆಪಿ ಪ್ರತಿಭಟನೆಗೆ ದೆಹಲಿಯಲ್ಲಿ ಬಿಗಿ ಭದ್ರತೆ – ಪಂಚರ್ ಆಗಲು ರಸ್ತೆಗಳಿಗೆ ತಡೆಬೇಲಿ..! ವಿಮಾನದಲ್ಲೇ ಅಭಿಜಿತ್ ದಿಪ್ಕೆ ಪೊಲೀಸ್ ವಶಕ್ಕೆ..! ಸಾವಿರಕ್ಕೂ ಮಿಕ್ಕಿ ಪ್ರತಿಭಟನಾಕಾರರೂ ವಶಕ್ಕೆ-ಸುಪ್ರೀಂ ಕೋರ್ಟ್ ವಕೀಲರಿಗೆ ತಡೆ..! ತೀವ್ರ ಅಡೆತಡೆಗಳ ನಡುವೆ ಜಂತರ್ ಮಂತರ್ ಗೆ ಹರಿದು ಬರುತ್ತಿರುವ ಜನಸಾಗರ
-
ಅಂತರ ರಾಜ್ಯ14 hours agoBy-election results-ಉಪಚುನಾವಣೆ ಫಲಿತಾಂಶ: ಪಶ್ಚಿಮ ಬಂಗಾಳ, ಅಸ್ಸಾಂನಲ್ಲಿ ಬಿಜೆಪಿಗೆ ಭರ್ಜರಿ ಮುನ್ನಡೆ, ತಮಿಳುನಾಡಿನಲ್ಲಿ ಟಿವಿಕೆ ಅಬ್ಬರ
-
ಅಂತರ ರಾಜ್ಯ16 hours agoDhruv Rati-BIG BREAKING: ದೆಹಲಿಯ ಜಂತರ್ ಮಂತರ್ ನಲ್ಲಿ ಸಿಜೆಪಿ ಪ್ರತಿಭಟನೆ ಹಿನ್ನಲೆ – ಯೂಟ್ಯೂಬರ್ ಧ್ರುವ್ ರಾಠಿ ಪೊಲೀಸ್ ವಶಕ್ಕೆ?


















