Connect with us

ಬಿಗ್ ನ್ಯೂಸ್

Seat Belt Penalty : ಸೀಟ್ ಬೆಲ್ಟ್ ದಂಡ ಡಬ್ಬಲ್ ಮಾಡಿದ ಕರ್ನಾಟಕ ಸರಕಾರ – ಹೊಸ ನಿಯಮದಂರೆ ಯಾರೆಲ್ಲಾ ಕಡ್ಡಾಯವಾಗಿ ಸುರಕ್ಷತಾ ಬೆಲ್ಟ್ ಧರಿಸಬೇಕು ಗೊತ್ತೆ ?

Published

on

Ad Widget

Ad Widget

Ad Widget

Ad Widget

ಬೆಂಗಳೂರು Bangalore ಅ 20: 8 ಅಥಾವ ಅದಕ್ಕಿಂತ ಕಡಿಮೆ ಸಂಖ್ಯೆಯ ಸೀಟುಗಳು ಇರುವ ವಾಹನದ ಪ್ರಯಾಣದ ವೇಳೆ  ಸೀಟ್ ಬೆಲ್ಟ್ ಧರಿಸದಿದ್ದರೇ  ವಾಹನ ಚಲಾಯಿಸುವವರಿಗೆ 1,000 ರೂ. ದಂಡ ವಿಧಿಸಲು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಡಿಜಿ-ಐಜಿಪಿ ಪ್ರವೀಣ್ ಸೂದ್ ಅವರು ಅ 19 ರಂದು ಈ ಆದೇಶ ಹೊರಡಿಸಿದ್ದಾರೆ.

Ad Widget

Ad Widget

Ad Widget

Ad Widget

ಕೇಂದ್ರ ರಸ್ತೆ ಮತ್ತು ಹೆದ್ದಾರಿ ಸಚಿವಾಲಯ ಸೂಚನೆ ಮೇರೆಗೆ ಪೊಲೀಸ್ ಇಲಾಖೆ ಈ ಆದೇಶ ಹೊರಡಿಸಿದೆ. ರಾಜ್ಯದ ಎಲ್ಲಾ ಕಮಿಷನರೇಟ್ ಮತ್ತು ಪೊಲೀಸ್ ಅಧೀಕ್ಷಕರುಗಳಿಗೆ ಇಲಾಖೆಯಿಂದ ಸೂಚನೆ ನೀಡಲಾಗಿದೆ.ಇದುವರೆಗೂ ಸೀಟ್ ಬೆಲ್ಟ್ ಧರಿಸದೇ ವಾಹನ ಚಲಾಯಿಸುವವರಿಗೆ  500 ರೂ. ದಂಡ ವಿಧಿಸಲಾಗುತಿತ್ತು. ಆದರೆ, ಇತ್ತೀಚಿಗೆ ಅಪಘಾತಗಳ ಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರ ಹೊಸ ಆದೇಶ ಹೊರಡಿಸಿದ್ದು, ದಂಡದ ಮೊತ್ತವನ್ನು ಹೆಚ್ಚಿಸಲಾಗಿದೆ.

Ad Widget

Ad Widget alt="Ad Widget"/>

Ad Widget

ಪ್ರಯಾಣಿಕರ ಸಂಖ್ಯೆ 8 ಮೀರದಂತೆ ಇರುವ ವಾಹನಗಳಲ್ಲಿ  ಪ್ರಯಾಣಿಸುವವರು ಕಡ್ಡಾಯವಾಗಿ ಸೀಟ್ ಬೆಲ್ಟ್ ಹಾಕಿಕೊಳ್ಳಬೇಕು. ಕಾರು, ಖಾಸಗಿ ಬಾಡಿಗೆ ವಾಹನಗಳಲ್ಲಿ ಪ್ರಯಾಣ ಮಾಡುವ ಪ್ರಯಾಣಿಕರು ಕೂಡ ಸೀಟ್ ಬೆಲ್ಟ್ ಕಡ್ಡಾಯವಾಗಿ ಹಾಕಿಕೊಳ್ಳಬೇಕು ಎಂದು ಆದೇಶದಲ್ಲಿ ಸೂಚಿಸಲಾಗಿದೆ.

Ad Widget

Ad Widget <> Ad Widget

How to loose weight : ದೇಹದ ತೂಕ ಇಳಿಸಲು ಬೆಳಿಗ್ಗೆ ಎದ್ದ‌ ತಕ್ಷಣ  ಹೀಗೆ ಮಾಡಿ – ವಾರದೊಳಗೆ ವ್ಯತ್ಯಾಸ ಗಮನಿಸಿ

ಮಹಾರಾಷ್ಟ್ರದಲ್ಲಿ ಸೆ.4ರಂದು ಸಂಭವಿಸಿದ ರಸ್ತೆ ಅಪಘಾತದಲ್ಲಿ ಖ್ಯಾತ ಉದ್ಯಮಿ, ಟಾಟಾ ಸಮೂಹದ ಮಾಜಿ ಮುಖ್ಯಸ್ಥ ಸೈರಸ್‌ ಮಿಸ್ತ್ರಿ ಮೃತಪಟ್ಟಿದ್ದರು. ಕಾರು ಪ್ರಯಾಣದ ವೇಳೆ ಹಿಬಂದಿ ಪ್ರಾಯಣಿಕರಾಗಿದ್ದ  ಅವರು  ಸೀಟ್‌ ಬೆಲ್ಟ್‌ ಹಾಕದೆ ಹೋಗಿದ್ದು ಸೈರಸ್‌  ಸಾವಿಗೆ ಪ್ರಮುಖ ಕಾರಣವಾಗಿತ್ತು ಎಂದು ಪೊಲೀಸರ ತನಿಖೆಯಲ್ಲಿ ಬಯಲಾಗಿತ್ತು. ಈ ಘಟನೆ ಬಳಿಕ ದೇಶಾದ್ಯಂತ ಸೀಟ್‌ ಬೆಲ್ಟ್‌ ಬಗ್ಗೆ ಜಾಗೃತಿ ಅಭಿಯಾನಗಳು ಶುರುವಾಗಿದ್ದವು

Ad Widget

Ad Widget

ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸಿದ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯದ ಸಚಿವ ನಿತಿನ್‌ ಗಡ್ಕರಿ ಅವರು, ಕಾರಿನಲ್ಲಿ ಚಾಲಕ ಸೇರಿದಂತೆ ಎಲ್ಲರೂ ಕಡ್ಡಾಯವಾಗಿ ಸೀಟ್‌ ಬೆಲ್ಟ್‌ ಹಾಕಬೇಕು. ಸೀಟ್‌ ಬೆಲ್ಟ್‌ ಹಾಕದ ತಪ್ಪಿಗೆ ವಿಧಿಸುವ ದಂಡದ ಮೊತ್ತವನ್ನು ಹೆಚ್ಚಿಸುವುದಾಗಿ ಎಚ್ಚರಿಕೆ ನೀಡಿದ್ದರು. ಅಂತೆಯೇ ಕೇಂದ್ರ ಸರ್ಕಾರವು ಸೀಟ್‌ ಬೆಲ್ಟ್‌ ಹಾಕದ ಪ್ರಕರಣಕ್ಕೆ ದಂಡವನ್ನು ಹೆಚ್ಚಿಸಿ ಆದೇಶಿಸಿತ್ತು. 3 ವರ್ಷಗಳ ಹಿಂದೆ ಸೀಟ್‌ ಬೆಲ್ಟ್‌ ದಂಡ ಮೊತ್ತವನ್ನು ಪರಿಷ್ಕರಿಸಿದ ಸರ್ಕಾರವು, 100 ರು.ನಿಂದ 500 ರು.ಗೆ ಹೆಚ್ಚಿಸಿತ್ತು. ಈಗ ಎರಡನೇ ಬಾರಿಗೆ ದಂಡ ಮೊತ್ತ ಪರಿಷ್ಕರಣೆಗೊಳಗಾಗಿದೆ.

BHEL Recruitment: ಐಟಿಐ, ಡಿಪ್ಲೊಮ, ಬಿಇ ಪಾಸಾದವರಿಗೆ ಬಿಹೆಚ್‌ಇಎಲ್‌ ನಲ್ಲಿ ಉದ್ಯೋಗ – ಇಲ್ಲಿದೆ ಅಗತ್ಯ ಮಾಹಿತಿ

ಸೋಮವಾರದಿಂದ ದಂಡ ಪ್ರಯೋಗ?:

 ಡಿಜಿಪಿ ಆದೇಶ ಹಿನ್ನಲೆಯಲ್ಲಿ ಬೆಂಗಳೂರಿನಲ್ಲಿ ಸೀಟ್‌ ಬೆಲ್ಟ್‌ ಹಾಕದ ಕಾರು ಚಾಲಕರಿಗೆ ಸೋಮವಾರದಿಂದ ಅಧಿಕೃತವಾಗಿ ಜಾರಿಗೆ ಬರುವ ಸಾಧ್ಯತೆಗಳಿವೆ. ಈ ಪರಿಷ್ಕೃತ ದಂಡ ವಿಧಿಸಲು ಪಿಡಿಎ ಯಂತ್ರಗಳು ಅಪ್‌ಡೇಟ್‌ ಆಗಬೇಕಿದೆ. ಈ ಪ್ರಕ್ರಿಯೆ ಎರಡ್ಮೂರು ದಿನಗಳಲ್ಲಿ ಪೂರ್ಣಗೊಳ್ಳಲಿದ್ದು, ಸೋಮವಾರದಿಂದ ಸೀಟ್‌ ಬೆಲ್ಟ್‌ ಹಾಕದ ವಾಹನ ಚಾಲಕರಿಗೆ ದಂಡ ವಿಧಿಸುತ್ತೇವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯ  ರಾಜ್ಯಗಳಿಗೆ ರವಾನಿಸಿರುವ ಪತ್ರದಲ್ಲಿ ಏನಿದೆ ?

ಭಾರತ ಸರ್ಕಾರದ ಅಧೀನ ಕಾರ್ಯದರ್ಶಿ ಎಸ್ ಕೆ ಗೀವಾ ಅವರು ರಾಜ್ಯಗಳಿಗೆ   ಅದರಲ್ಲಿ “  ಮೋಟಾರು ವಾಹನ ಕಾಯ್ದೆ 1988 ರ ಸೆಕ್ಷನ್ 194 ಬಿ ಯಂತೆ  ಸುರಕ್ಷತಾ (ಸೀಟ್‌ ) ಬೆಲ್ಟ್‌ಗಳ ಬಳಕೆಯನ್ನು ಕಡ್ಡಾಯಗೊಳಿಸಿ ಆದೇಶಿಸಲಾಗಿದೆ .

194B ನ ಉಪ-ವಿಭಾಗ 1 ರ ಪ್ರಕಾರ, “ಸೀಟ್ ಬೆಲ್ಟ್ ಧರಿಸದೆ ಮೋಟಾರು ವಾಹನವನ್ನು ಓಡಿಸುವವರು ಅಥವಾ ಸುರಕ್ಷತಾ ಬೆಲ್ಟ್ ಧರಿಸದ ಪ್ರಯಾಣಿಕರನ್ನು ಸಾಗಿಸುವವರಿಗೆ 1000  ರೂ  ದಂಡ ವಿಧಿಸಲಾಗುತ್ತದೆ. ” CMVR, 1989 ರ ನಿಯಮ -125 (1)ರಂತೆ  “ಮೋಟಾರ್ ಸೈಕಲ್‌ಗಳು ಮತ್ತು 3 ವೀಲರ್‌ಗಳನ್ನು ಹೊರತುಪಡಿಸಿ ಎಲ್ಲಾ ಮೋಟಾರು ವಾಹನಗಳು ಚಾಲಕ ಮತ್ತು ಮುಂಭಾಗದ ಸೀಟಿನಲ್ಲಿ ಕುಳಿತುಕೊಳ್ಳುವ ವ್ಯಕ್ತಿಗಳು  ಸೀಟ್ ಬೆಲ್ಟ್  ಧರಿಸಿರಬೇಕು.

Health Tips :ಮೊಸರು ಸೇವನೆಯಿಂದ ಸಿಗಲಿದೆ ಈ ಆರು ಪ್ರಯೋಜನಗಳು

 CMVR ನ  ನಿಯಮ -125(1) (a) ರಂತೆ  ಪ್ರಯಾಣಿಕ ಸಾಗಣಿಕೆಗೆ  ಬಳಸುವ M1 ವರ್ಗದ ಮೋಟಾರು ವಾಹನಗಳು, ಚಾಲಕ ಸೀಟಿನ ಜೊತೆಗೆ ಎಂಟು ಆಸನಗಳಿಗಿಂತ ಹೆಚ್ಚಿಲ್ಲದ G & IGP ಗಳನ್ನು ಒಳಗೊಂಡಿದೆ. ಈ ವಾಹನದಲ್ಲಿ ಮುಂಭಾಗ ಹಾಗೂ  ಹಿಂಭಾಗದ ಸೀಟಿನಲ್ಲಿ ಕುಳಿತು ಪ್ರಯಾಣಿಸುವ ಪ್ರಾಣಿಕರು  ಸೀಟ್ ಬೆಲ್ಟ್ ಅನ್ನು ಧರಿಸಿರಬೇಕು  ಎಂದು  ತಿಳಿಸುತ್ತದೆ.   ಇದರ ಜತೆಗ ಮುಂಭಾಗದ ಆಸನಗಳನ್ನು ಹೊಂದಿರುವ M1 ವರ್ಗದ ವಾಹನಗಳ ಎಲ್ಲಾ ಪ್ರಯಾಣಿಕರು ಸೀಟ್ ಬೆಲ್ಟ್‌ಗಳನ್ನು ಧರಿಸಬೇಕು ಎಂದು ಸೂಚಿಸಿದೆ.  ಪ್ರಯಾಣಿಕರ ಆಸನಗಳ ಮೇಲಿನ ಸೀಟ್ ಕವರ್‌ಗಳು ಸೀಟ್ ಬೆಲ್ಟ್‌ನ ಲಾಕ್ ಮತ್ತು ಅನ್‌ಲಾಕ್‌ಗೆ ಅಡ್ಡಿಯಾಗಬಾರದು ಎಂದು ತಿಳಿಸಲಾಗಿದೆ

Ad Widget
Click to comment

Leave a Reply

ಬಿಗ್ ನ್ಯೂಸ್

Puttur-ಎಸ್‌ಡಿಪಿಐ ನಿರಂತರ ಪ್ರಯತ್ನ: ಪುತ್ತೂರಿನ ಅಲ್ಪಸಂಖ್ಯಾತರ ಸೇವಾ ಕೇಂದ್ರ ಪುನರಾರಂಭ

Published

on

Ad Widget

Ad Widget

Ad Widget

Ad Widget

ಕಳೆದ ಮೂರು ವರ್ಷಗಳಿಂದ ಕಾರ್ಯಾಚರಣೆ ಸ್ಥಗಿತಗೊಂಡಿದ್ದ ಪುತ್ತೂರು ಅಲ್ಪಸಂಖ್ಯಾತರ ಸಾಮಾನ್ಯ ಸೇವಾ ಕೇಂದ್ರ ಇದೀಗ ಮತ್ತೆ ಸಾರ್ವಜನಿಕರ ಸೇವೆಗೆ ಲಭ್ಯವಾಗಿದೆ. ಕೇಂದ್ರವನ್ನು ಪುನರಾರಂಭಿಸುವಂತೆ ಎಸ್‌ಡಿಪಿಐ ಪುತ್ತೂರು ನಗರ ಸಮಿತಿಯು ಸಂಬಂಧಪಟ್ಟ ಅಧಿಕಾರಿಗಳ ಗಮನ ಸೆಳೆದು ನಿರಂತರ ಪ್ರಯತ್ನ ನಡೆಸಿತ್ತು.

Ad Widget

Ad Widget

Ad Widget

Ad Widget

ಪುತ್ತೂರು: ಕಳೆದ ಮೂರು ವರ್ಷಗಳಿಂದ ಕಾರ್ಯಾಚರಣೆ ಸ್ಥಗಿತಗೊಂಡಿದ್ದ ಪುತ್ತೂರು ಅಲ್ಪಸಂಖ್ಯಾತರ ಸಾಮಾನ್ಯ ಸೇವಾ ಕೇಂದ್ರ ಇದೀಗ ಮತ್ತೆ ಸಾರ್ವಜನಿಕರ ಸೇವೆಗೆ ಲಭ್ಯವಾಗಿದೆ.

Ad Widget

Ad Widget alt="Ad Widget"/>

Ad Widget

ಕೇಂದ್ರವನ್ನು ಪುನರಾರಂಭಿಸುವಂತೆ ಎಸ್‌ಡಿಪಿಐ ಪುತ್ತೂರು ನಗರ ಸಮಿತಿಯು ಸಂಬಂಧಪಟ್ಟ ಅಧಿಕಾರಿಗಳ ಗಮನ ಸೆಳೆದು ನಿರಂತರ ಪ್ರಯತ್ನ ನಡೆಸಿತ್ತು. ಸಾರ್ವಜನಿಕರಿಗೆ ಅನುಕೂಲವಾಗುವ ಈ ಸೇವಾ ಕೇಂದ್ರವನ್ನು ಮತ್ತೆ ಆರಂಭಿಸಬೇಕೆಂದು ಸಮಿತಿಯು ಒತ್ತಾಯಿಸಿತ್ತು.

Ad Widget

Ad Widget <> Ad Widget

ಈ ನಡುವೆ, ಕೇಂದ್ರಕ್ಕೆ ಸಂಬಂಧಿಸಿದ ಕಟ್ಟಡವನ್ನು ಹಾಸ್ಟೆಲ್ ಬಳಕೆಗೆ ಪರಿವರ್ತಿಸಲು ಪುತ್ತೂರು ಶಾಸಕರು ಪ್ರಯತ್ನಿಸಿದ್ದರು ಎಂಬ ವಿಚಾರ ವಿವಾದಕ್ಕೆ ಕಾರಣವಾಗಿತ್ತು.

ಇದೀಗ ಮೂರು ವರ್ಷಗಳ ಬಳಿಕ ಅಲ್ಪಸಂಖ್ಯಾತರ ಸಾಮಾನ್ಯ ಸೇವಾ ಕೇಂದ್ರ ಮತ್ತೆ ಕಾರ್ಯಾರಂಭ ಮಾಡಿದ್ದು, ಸಾರ್ವಜನಿಕರಿಗೆ ಸೇವೆ ಲಭ್ಯವಾಗಿರುವುದಾಗಿ ಎಸ್‌ಡಿಪಿಐ ಪುತ್ತೂರು ನಗರ ಸಮಿತಿ ಪ್ರಕಟಣೆಯಲ್ಲಿ ತಿಳಿಸಿದೆ.

Continue Reading

ಅಂತರ ರಾಜ್ಯ

Toll Plaza-ವಾಹನ ಸವಾರರೇ ಗಮನಿಸಿ; ಇನ್ಮುಂದೆ ಟೋಲ್‌ನಲ್ಲೇ ವಾಹನ ವಿಮೆ ಪರಿಶೀಲನೆ: ಅವಧಿ ಮುಗಿದಿದ್ದರೆ ಮೊಬೈಲ್‌ಗೆ SMS, 10 ಸಾವಿರ ರೂ.ವರೆಗೆ ದಂಡ..!

Published

on

Ad Widget

Ad Widget

Ad Widget

Ad Widget

ವಾಹನ ಸವಾರರಿಗೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (NHAI) ಹೊಸ ವ್ಯವಸ್ಥೆಯೊಂದನ್ನು ಜಾರಿಗೆ ತರಲು ಸಿದ್ಧತೆ ನಡೆಸಿದೆ. ಇನ್ಮುಂದೆ ರಾಷ್ಟ್ರೀಯ ಹೆದ್ದಾರಿಗಳ ಟೋಲ್ ಪ್ಲಾಜಾಗಳಲ್ಲಿ ವಾಹನಗಳ ನೋಂದಣಿ ಸಂಖ್ಯೆಯ ಆಧಾರದ ಮೇಲೆ ವಿಮೆಯ ಮಾನ್ಯತೆಯನ್ನು ಪರಿಶೀಲಿಸುವ ವ್ಯವಸ್ಥೆ ಪರಿಚಯಿಸಲು ಮುಂದಾಗಿದೆ.

Ad Widget

Ad Widget

Ad Widget

Ad Widget

ನವದೆಹಲಿ: ವಾಹನ ಸವಾರರಿಗೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (NHAI) ಹೊಸ ವ್ಯವಸ್ಥೆಯೊಂದನ್ನು ಜಾರಿಗೆ ತರಲು ಸಿದ್ಧತೆ ನಡೆಸಿದೆ. ಇನ್ಮುಂದೆ ರಾಷ್ಟ್ರೀಯ ಹೆದ್ದಾರಿಗಳ ಟೋಲ್ ಪ್ಲಾಜಾಗಳಲ್ಲಿ ವಾಹನಗಳ ನೋಂದಣಿ ಸಂಖ್ಯೆಯ ಆಧಾರದ ಮೇಲೆ ವಿಮೆಯ ಮಾನ್ಯತೆಯನ್ನು ಪರಿಶೀಲಿಸುವ ವ್ಯವಸ್ಥೆ ಪರಿಚಯಿಸಲು ಮುಂದಾಗಿದೆ.

Ad Widget

Ad Widget alt="Ad Widget"/>

Ad Widget

ಈ ವ್ಯವಸ್ಥೆಯ ಪ್ರಕಾರ, ಟೋಲ್ ಪ್ಲಾಜಾ ದಾಟುವ ವಾಹನದ ವಿಮೆ ಚಾಲ್ತಿಯಲ್ಲಿದೆಯೇ ಎಂಬುದನ್ನು ಸ್ವಯಂಚಾಲಿತವಾಗಿ ಪರಿಶೀಲಿಸಲಾಗುತ್ತದೆ. ಒಂದು ವೇಳೆ ವಿಮೆಯ ಅವಧಿ ಮುಗಿದಿದ್ದರೆ, ವಾಹನದ ಮಾಲೀಕರ ನೋಂದಾಯಿತ ಮೊಬೈಲ್ ಸಂಖ್ಯೆಗೆ ತಕ್ಷಣವೇ SMS ಮೂಲಕ ಎಚ್ಚರಿಕೆ ಸಂದೇಶ ಕಳುಹಿಸಲಾಗುತ್ತದೆ. ವಿಮೆ ಇಲ್ಲದೆ ವಾಹನ ಚಲಾಯಿಸುವವರಿಗೆ ನಿಯಮಾನುಸಾರ 10,000 ರೂ.ವರೆಗೆ ದಂಡ ವಿಧಿಸುವ ಅವಕಾಶವೂ ಇದೆ.

Ad Widget

Ad Widget <> Ad Widget

ಟೋಲ್ ಪ್ಲಾಜಾದಲ್ಲಿ ವಿಮೆ ಪರಿಶೀಲನೆ ಹೇಗೆ?
ಹೊಸ ವ್ಯವಸ್ಥೆಯು ರಾಷ್ಟ್ರೀಯ ಮಾಹಿತಿ ಕೇಂದ್ರ (NIC) ನಿರ್ವಹಿಸುವ ‘ವಾಹನ್’ (VAHAN) ಡೇಟಾಬೇಸ್‌ನಲ್ಲಿರುವ ವಾಹನಗಳ ನೋಂದಣಿ ಹಾಗೂ ವಿಮೆಯ ಮಾಹಿತಿಯನ್ನು ಆಧರಿಸಿ ಕಾರ್ಯನಿರ್ವಹಿಸಲಿದೆ.

ವಾಹನ ಟೋಲ್ ಪ್ಲಾಜಾ ದಾಟುವಾಗ ಅದರ ನೋಂದಣಿ ಸಂಖ್ಯೆಯನ್ನು ಗುರುತಿಸಿ, ಡೇಟಾಬೇಸ್‌ನಲ್ಲಿರುವ ವಿಮೆಯ ವಿವರಗಳೊಂದಿಗೆ ಹೋಲಿಕೆ ಮಾಡಲಾಗುತ್ತದೆ. ಈ ಮೂಲಕ ವಿಮೆ ಚಾಲ್ತಿಯಲ್ಲಿದೆಯೇ ಅಥವಾ ಅವಧಿ ಮುಗಿದಿದೆಯೇ ಎಂಬುದನ್ನು ತಂತ್ರಜ್ಞಾನದ ಸಹಾಯದಿಂದ ಪರಿಶೀಲಿಸಲಾಗುತ್ತದೆ.

Ad Widget

Ad Widget

ವಿಮೆಯ ಅವಧಿ ಮುಗಿದಿದ್ದರೆ ಕೆಲವೇ ನಿಮಿಷಗಳಲ್ಲಿ ವಾಹನ ಮಾಲೀಕರ ಮೊಬೈಲ್‌ಗೆ SMS ರವಾನೆಯಾಗಲಿದೆ.

SMSನಲ್ಲಿ ಯಾವ ಮಾಹಿತಿ ಇರಲಿದೆ?
ವಾಹನದ ವಿಮೆ ಅವಧಿ ಮುಗಿದಿದ್ದರೆ ಮಾಲೀಕರಿಗೆ ಕಳುಹಿಸುವ ಸಂದೇಶದಲ್ಲಿ ಈ ಕೆಳಗಿನ ವಿವರಗಳಿರಲಿವೆ:

  • ವಾಹನದ ನೋಂದಣಿ ಸಂಖ್ಯೆ.
  • ಟೋಲ್ ಪ್ಲಾಜಾ ದಾಟಿದ ದಿನಾಂಕ ಮತ್ತು ಸಮಯ.
  • ವಾಹನದ ವಿಮೆ ಅವಧಿ ಮುಗಿದ ದಿನಾಂಕ.
  • ವಿಮೆಯನ್ನು ನವೀಕರಿಸಿಕೊಳ್ಳುವಂತೆ ಸೂಚನೆ.
    ಈ ಮೂಲಕ ವಾಹನ ಮಾಲೀಕರು ವಿಮೆಯನ್ನು ತಕ್ಷಣ ನವೀಕರಿಸಿಕೊಳ್ಳಲು ಎಚ್ಚರಿಕೆ ನೀಡುವ ಉದ್ದೇಶ ಹೊಂದಲಾಗಿದೆ.
  • ವಿಮೆ ಇಲ್ಲದೆ ವಾಹನ ಚಲಾಯಿಸಿದರೆ ಎಷ್ಟು ದಂಡ?
  • ಮೋಟಾರು ವಾಹನ ಕಾಯ್ದೆಯ ಪ್ರಕಾರ ಸಾರ್ವಜನಿಕ ರಸ್ತೆಗಳಲ್ಲಿ ಸಂಚರಿಸುವ ಪ್ರತಿಯೊಂದು ವಾಹನಕ್ಕೂ ಮಾನ್ಯವಾದ ಥರ್ಡ್ ಪಾರ್ಟಿ ವಿಮೆ ಹೊಂದಿರುವುದು ಕಡ್ಡಾಯವಾಗಿದೆ. ಅಪಘಾತ ಸಂಭವಿಸಿದಾಗ ಮತ್ತೊಬ್ಬ ವ್ಯಕ್ತಿಗೆ ಗಾಯ, ಸಾವು ಅಥವಾ ಆಸ್ತಿಗೆ ಹಾನಿಯಾದರೆ ಪರಿಹಾರ ನೀಡಲು ಈ ವಿಮೆ ನೆರವಾಗುತ್ತದೆ.

ಮಾನ್ಯ ವಿಮೆ ಇಲ್ಲದೆ ವಾಹನ ಚಲಾಯಿಸುವುದು ಕಾನೂನು ಉಲ್ಲಂಘನೆಯಾಗಿದ್ದು, ಮೋಟಾರು ವಾಹನ ಕಾಯ್ದೆಯ ಸೆಕ್ಷನ್ 196ರ ಅಡಿಯಲ್ಲಿ ಮೊದಲ ಬಾರಿಗೆ ತಪ್ಪು ಎಸಗಿದರೆ 2,000 ರೂ. ಹಾಗೂ ಮರುಕಳಿಸಿದರೆ 4,000 ರೂ. ದಂಡ ಅಥವಾ ಕಾಯ್ದೆಯಲ್ಲಿ ನಿಗದಿಪಡಿಸಿರುವ ಇತರ ಶಿಕ್ಷೆ ವಿಧಿಸಬಹುದು.

ಸದ್ಯ ಒಂದು ಟೋಲ್ ಪ್ಲಾಜಾದಲ್ಲಿ ಮಾತ್ರ ಪ್ರಾಯೋಗಿಕ ಪರೀಕ್ಷೆ
ಪ್ರಸ್ತುತ ದೆಹಲಿಯ ಅರ್ಬನ್ ಎಕ್ಸ್‌ಟೆನ್ಷನ್ ರಸ್ತೆ-2 (UER-II)ಯ ಮುಂಡ್ಯಾ ಟೋಲ್ ಪ್ಲಾಜಾದಲ್ಲಿ ಈ ವ್ಯವಸ್ಥೆಯ ಪ್ರಾಯೋಗಿಕ ಪರೀಕ್ಷೆ ನಡೆಯುತ್ತಿದೆ. ಪ್ರಯೋಗ ಯಶಸ್ವಿಯಾದರೆ ದೇಶದ ಇತರ ಟೋಲ್ ಪ್ಲಾಜಾಗಳಿಗೂ ವಿಸ್ತರಿಸುವ ಕುರಿತು NHAI ಚಿಂತನೆ ನಡೆಸಿದೆ.

ಆದರೆ ದೇಶಾದ್ಯಂತ ಈ ವ್ಯವಸ್ಥೆ ಯಾವಾಗ ಜಾರಿಗೆ ಬರಲಿದೆ ಎಂಬ ಬಗ್ಗೆ ಪ್ರಾಧಿಕಾರ ಇನ್ನೂ ಅಧಿಕೃತ ದಿನಾಂಕ ಪ್ರಕಟಿಸಿಲ್ಲ. ಪ್ರಾಯೋಗಿಕ ಪರೀಕ್ಷೆಯ ಫಲಿತಾಂಶಗಳ ಆಧಾರದ ಮೇಲೆ ಮುಂದಿನ ನಿರ್ಧಾರ ಕೈಗೊಳ್ಳುವ ಸಾಧ್ಯತೆಯಿದೆ.

ವಾಹನ ಸವಾರರೇ ಎಚ್ಚರ: ನಿಮ್ಮ ವಾಹನದ ವಿಮೆಯ ಅವಧಿಯನ್ನು ಆಗಾಗ್ಗೆ ಪರಿಶೀಲಿಸಿ. ಅವಧಿ ಮುಗಿಯುವ ಮೊದಲೇ ವಿಮೆಯನ್ನು ನವೀಕರಿಸಿಕೊಳ್ಳಿ. ವಿಮೆ ಇಲ್ಲದೆ ವಾಹನ ಚಲಾಯಿಸುವುದು ಕಾನೂನುಬಾಹಿರವಾಗಿದ್ದು, ಅಪಘಾತ ಸಂಭವಿಸಿದ ಸಂದರ್ಭದಲ್ಲಿ ದೊಡ್ಡ ಆರ್ಥಿಕ ಹೊರೆ ಎದುರಿಸಬೇಕಾಗಬಹುದು.

Ad Widget
Continue Reading

ಬಿಗ್ ನ್ಯೂಸ್

Puttur-ಪುತ್ತೂರು: ಕುಂಬಾರರ ಗುಡಿ ಕೈಗಾರಿಕಾ ಸಹಕಾರ ಸಂಘಕ್ಕೆ ರಾಜ್ಯಮಟ್ಟದ ಉತ್ತಮ ಸಹಕಾರ ಸಂಘ ಪ್ರಶಸ್ತಿ

Published

on

Ad Widget

Ad Widget

Ad Widget

Ad Widget

ಗ್ರಾಮೀಣ ಗುಡಿ ಕೈಗಾರಿಕೆಯಾದ ಕುಂಬಾರಿಕೆ ಕ್ಷೇತ್ರದ ಅಭಿವೃದ್ಧಿಗೆ ಸಹಕಾರಿ ವಲಯದ ಮೂಲಕ ನಿರಂತರವಾಗಿ ಶ್ರಮಿಸುತ್ತಿರುವ, 69 ವರ್ಷಗಳ ಸುದೀರ್ಘ ಇತಿಹಾಸ ಹೊಂದಿರುವ ಕುಂಬಾರರ ಗುಡಿ ಕೈಗಾರಿಕಾ ಸಹಕಾರ ಸಂಘವು ರಾಜ್ಯಮಟ್ಟದ ಉತ್ತಮ ಸಹಕಾರ ಸಂಘ ಪ್ರಶಸ್ತಿಗೆ ಆಯ್ಕೆಯಾಗಿದೆ.

Ad Widget

Ad Widget

Ad Widget

Ad Widget

ಪುತ್ತೂರು: ಗ್ರಾಮೀಣ ಗುಡಿ ಕೈಗಾರಿಕೆಯಾದ ಕುಂಬಾರಿಕೆ ಕ್ಷೇತ್ರದ ಅಭಿವೃದ್ಧಿಗೆ ಸಹಕಾರಿ ವಲಯದ ಮೂಲಕ ನಿರಂತರವಾಗಿ ಶ್ರಮಿಸುತ್ತಿರುವ, 69 ವರ್ಷಗಳ ಸುದೀರ್ಘ ಇತಿಹಾಸ ಹೊಂದಿರುವ ಕುಂಬಾರರ ಗುಡಿ ಕೈಗಾರಿಕಾ ಸಹಕಾರ ಸಂಘವು ರಾಜ್ಯಮಟ್ಟದ ಉತ್ತಮ ಸಹಕಾರ ಸಂಘ ಪ್ರಶಸ್ತಿಗೆ ಆಯ್ಕೆಯಾಗಿದೆ.

Ad Widget

Ad Widget alt="Ad Widget"/>

Ad Widget

73ನೇ ಅಖಿಲ ಭಾರತ ಸಹಕಾರ ಸಪ್ತಾಹದ ಅಂಗವಾಗಿ ಈ ಪ್ರಶಸ್ತಿಯನ್ನು ಪ್ರದಾನ ಮಾಡಲಾಗುತ್ತದೆ.

Ad Widget

Ad Widget <> Ad Widget

ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ 18 ಶಾಖೆಗಳನ್ನು ಹೊಂದಿರುವ ಈ ಸಂಘವು ಕುಂಬಾರಿಕೆ ಉದ್ಯಮದ ಉತ್ತೇಜನ ಹಾಗೂ ಗ್ರಾಮೀಣ ಕುಶಲಕರ್ಮಿಗಳ ಅಭಿವೃದ್ಧಿಗೆ ವಿಶೇಷ ಆದ್ಯತೆ ನೀಡುತ್ತಿದೆ.

ಪುತ್ತೂರು ತಾಲೂಕಿನ ಅರಿಯಡ್ಕ ಗ್ರಾಮದಲ್ಲಿ ಸಂಘವು ಕುಂಬಾರಿಕೆ ಉತ್ಪಾದನಾ ತರಬೇತಿ ಕೇಂದ್ರವನ್ನು ಹೊಂದಿದೆ. ಇಲ್ಲಿ ಗ್ರಾಮೀಣ ಕುಂಬಾರಿಕೆಯ ಉತ್ಪಾದನೆ ಹಾಗೂ ತರಬೇತಿ ನೀಡಲಾಗುತ್ತಿದ್ದು, ಇಂತಹ ಸೌಲಭ್ಯ ಹೊಂದಿರುವ ರಾಜ್ಯದ ಏಕೈಕ ಸಹಕಾರಿ ಸಂಸ್ಥೆ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ.

Ad Widget

Ad Widget

ಸಂಘದ ಅಧ್ಯಕ್ಷ ಭಾಸ್ಕರ್ ಪೆರುವಾಯಿ ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜನಾರ್ದನ ಮೂಲ್ಯ ಅವರು ಪ್ರಶಸ್ತಿಯನ್ನು ಸ್ವೀಕರಿಸಲಿದ್ದಾರೆ ಎಂದು ಸಂಘದ ಪ್ರಕಟಣೆ ತಿಳಿಸಿದೆ.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!