Connect with us

ಬಿಗ್ ನ್ಯೂಸ್

ದ.ಕ. ಪರಿಷದ್‌ ಚುಣಾವಣೆ : ಪಕ್ಷೇತರ ಅಭ್ಯರ್ಥಿಯಾಗಿ ಸಹಕಾರಿ ದುರೀಣ ಡಾ ಎಂ. ಎನ್‌ ರಾಜೇಂದ್ರ ಕುಮಾರ್‌ ಸ್ಫರ್ಧೆ ಸಾಧ್ಯತೆಯ ಬಳಿಕ ಬದಲಾದ ಚುಣಾವಣಾ ಸಮೀಕರಣ |ಇಲ್ಲಿದೆ ಸೋಲು –ಗೆಲುವಿನ ಲೆಕ್ಕಚಾರ

Published

on



Ad Widget

Ad Widget

Ad Widget

Ad Widget

ರಾಜ್ಯ ವಿಧಾನ ಪರಿಷತ್ʼ ನ 25 ಸ್ಥಾನಗಳಿಗೆ  ಚುಣಾವಣೆ ಘೋಷಣೆಯಾಗಿದ್ದು, ಡಿ 10  ರಂದು  ಚುಣಾವಣೆ ನಡೆಯಲಿದ್ದು  ಅಭ್ಯರ್ಥಿ ಆಯ್ಕೆಯ ಕಸರತ್ತಿನಲ್ಲಿ ಎಲ್ಲ ರಾಜಕೀಯ ಪಕ್ಷಗಳು ತೊಡಗಿಸಿಕೊಂಡಿವೆ. ದ.ಕ. ಜಿಲ್ಲೆಯ ದ್ವಿ ಸದಸ್ಯತ್ವ ಕ್ಷೇತ್ರದಿಂದ ಅಭ್ಯರ್ಥಿ ಆಯ್ಕೆಗೆ ಎರಡು ಪಕ್ಷಗಳಲ್ಲಿ ಅಕಾಂಕ್ಷಿಗಳ ದೊಡ್ಡ ದಂಡು ಇದೆ. ಆದರ ಜತೆಗೆ ಸಹಕಾರಿ ರಂಗದ ದುರೀಣ, ಎಸ್‌ಡಿಸಿಸಿ ಬ್ಯಾಂಕ್‌ ಅಧ್ಯಕ್ಷ  ಡಾ. ಎಂ. ಎನ್.‌ ರಾಜೇಂದ್ರ ಕುಮಾರವರು ಪಕ್ಷೇತರರಾಗಿ ಸ್ಪರ್ಧಿಸಲು ಮನ ಮಾಡಿದ್ದಾರೆ ಎನ್ನಲಾಗಿದೆ. ಇದು ಎರಡು ಪಕ್ಷಗಳ ಟಿಕೆಟ್ ಅಕಾಂಕ್ಷಿಗಳ ನಿದ್ದೆಗೆಡಿಸಿದೆ.

Ad Widget

Ad Widget

Ad Widget

Ad Widget

ದಕ್ಷಿಣ ಕನ್ನಡ, ಉಡುಪಿ ಈ ಎರಡು ಜಿಲ್ಲೆಗಳ ಎಲ್ಲ  ಗ್ರಾ. ಪಂ ಸದಸ್ಯರ ಸಹಿತ ಸ್ಥಳೀಯಾಡಳಿತ ‌ ಸಂಸ್ಥೆಗಳ ಚುನಾಯಿತ ಸದಸ್ಯರು ಹಾಗೂ ಜಿ.ಪಂ ಹಾಗೂ ತಾ.ಪಂ ಸದಸ್ಯರು  ಈ ಎಂಎಲ್‌ಸಿ ಚುಣಾವಣೆಯ ಮತದಾರರಾಗಿದ್ದಾರೆ. ಆದರೆ, ಈ ಬಾರಿ ಜಿ.ಪಂ ಹಾಗೂ ತಾ.ಪಂ. ನ ಅವಧಿ ಪೂರ್ಣಗೊಂಡಿದ್ದು, ಆದರೇ ಅದರ ಚುಣಾವಣೆ ಕೊವೀಡ್‌ ಹಿನ್ನಲೆ ಮುಂದೂಡಲ್ಪಟ್ಟಿರುವುದರಿಂದ ಈ ಬಾರಿಯ  ವಿಧಾನ ಪರಿಷತ್‌ ಚುಣಾವಣೆಯಲ್ಲಿ ಅಷ್ಟು ಮತಗಳ ಕೊರತೆ  ಉಂಟಾಗಲಿದೆ.

Ad Widget

Ad Widget

Ad Widget alt="Ad Widget"/>

Ad Widget

ದಕ್ಷಿಣ ಕನ್ನಡ ಜಿಲ್ಲೆಯ ಈ ದ್ವಿ ಸದಸ್ಯ ಕ್ಷೇತ್ರಕ್ಕೆ  6500 ಮಿಕ್ಕಿ ಮತದಾರರಿದ್ದಾರೆ ಎಂದು ಅಂದಾಜಿಸಲಾಗಿದೆ.  2015ರಲ್ಲಿ ನಡೆದ ಚುಣಾವಣೆಯಲ್ಲಿ  ಒಟ್ಟು 6534 ಮತಗಳು ಚಲಾವಣೆಗೊಂಡಿದ್ದವು.  ಈ ಬಾರಿ ಜಿ.ಪಂ ಹಾಗೂ ತಾ. ಪಂ ಸದಸ್ಯರು ಮತ ಚಲಾಯಿಸಲು ಸಾಧ್ಯವಿಲ್ಲವಾದುದರಿಂದ  ಒಟ್ಟು ಮತಗಳ ಸಂಖ್ಯೆ ಕಳೆದ ಬಾರಿಗಿಂತ ಅಂದಾಜು  250 ಕಡಿಮೆಯಾಗಲಿದೆ.

Ad Widget

Ad Widget <> Ad Widget

ಲಭ್ಯ ಮಾಹಿತಿ ಪ್ರಕಾರ  ಇವುಗಳ ಪೈಕಿ ಈ ಬಾರಿ  ಸುಮಾರು 3600 ಮತಗಳು ಬಿಜೆಪಿ ಬೆಂಬಲಿತರದು, ಅಂ 2100 ಕಾಂಗ್ರೇಸ್‌ ಬೆಂಬಲಿತ ಮತಗಳು ಹಾಗೂ 550 ಮತಗಳು ಎಸ್ಡಿಪಿಐ, ಜೆಡಿಎಸ್‌ ಹಾಗೂ ಪಕ್ಷೇತರರ ಮತಗಳಿವೆ ಎಂದು ಅಂದಾಜಿಸಲಾಗಿದೆ. 



Ad Widget

2200 ಪ್ರಥಮ ಪ್ರಾಶಸ್ತ್ಯದ ಮತ ಪಡೆದವರು ವಿಜಯದ ನಗೆ ಬೀರಲಿದ್ದಾರೆ. ಈ ಲೆಕ್ಕಚಾರದ ಪ್ರಕಾರ ಬಿಜೆಪಿ ಕೇವಲ ಒಬ್ಬ ಅಭ್ಯರ್ಥಿಯನ್ನು ಮಾತ್ರ  ಕಣಕ್ಕಿಳಿಸಿದರೆ, ತನ್ನ ಅಭ್ಯರ್ಥಿಯ ಗೆಲುವಿನ ಬಳಿಕವೂ ಅದರ ಬಳಿ ಹೆಚ್ಚುವರಿಯಾಗಿ 1400 ಮತಗಳು ಉಳಿಯಲಿವೆ.  ತನ್ನ ಪ್ರಥಮ ಆಯ್ಕೆಯಾಗಿ ಅದು ಹಾಲಿ ವಿಧಾನ ಪರಿಷತ್‌ ಸದಸ್ಯ ಹಾಗೂ ಸಚಿವ ಕೋಟ ಶ್ರೀನಿವಾಸ ಪೂಜಾರಿಯನ್ನು ಸತತ ಮೂರನೇ ಬಾರಿ ಕಣಕ್ಕಿಳಿಸುವುದು ಬಹುತೇಕ ಖಚಿತ . ಪಕ್ಷದ ಮೂಲಗಳ ಪ್ರಕಾರ ಈ ಆಯ್ಕೆ ಖಚಿತಗೊಂಡಿದ್ದು, ಅಧಿಕೃತ ಪ್ರಕಟನೆಯಷ್ಟೆ ಬಾಕಿ ಉಳಿದಿದೆ.

Ad Widget

Ad Widget

ತನ್ನ ಎಲ್ಲ  ಬೆಂಬಲಿಗರ ಮತವನ್ನು ಒಟ್ಟಾಗಿ ಉಳಿಸಿಕೊಳ್ಳುವಲ್ಲಿ ಕಾಂಗ್ರೇಸ್‌ ಪಕ್ಷ  ಸಫಲವಾದಲ್ಲಿ, ಹಿರಿಯ ಕಾಂಗ್ರೇಸ್‌ ಮುಖಂಡ  ಕುಂದಾಪುರದ ಪ್ರತಾಪ್‌ ಚಂದ್ರ ಶೆಟ್ಟಿಯವರು ಪ್ರತಿನಿಧಿಸಿದ ಸ್ಥಾನವನ್ನೂ ಈ ಬಾರಿಯೂ ತನ್ನ ಬಳಿಯೇ ಉಳಿಸಿಕೊಳ್ಳುವುದು  ಕಾಂಗ್ರೇಸ್‌ ಗೆ ಸಾಧ್ಯ. ಈ ಸರ್ತಿ ಪ್ರತಾಪ್‌ ಚಂದ್ರ ಶೆಟ್ಟಿಯವರು ಚುಣಾವಣೆಯಲ್ಲಿ ಸ್ಫರ್ಧಿಸಲು ಹಿಂದೇಟು ಹಾಕಿದ್ದಾರೆ, ಆದರೇ ಈ ಬಾರಿ  ಕಾಂಗ್ರೇಸ್‌ ನಲ್ಲಿ ಈ ಸ್ಥಾನಕ್ಕೆ ಸ್ಪರ್ಧಿಸ ಬಯಸಿ  11 ಮಂದಿ ಅಕಾಂಕ್ಷಿಗಳಿದ್ದಾರೆ.

ಜಿಲ್ಲೆಯ ಕಾಂಗ್ರೇಸ್‌ ಈ ಬಾರಿ ಎಂಎಲ್ಸಿ ಚುಣಾವಣೆಗೆ ಸ್ಪರ್ಧಿಸ ಬಯಸುವವರು ರೂಪಾಯಿ ಒಂದು ಲಕ್ಷ ಡೆಪಾಸಿಟ್‌ ಪಾವತಿಸಿ  ಅರ್ಜಿ ಸಲ್ಲಿಸುವಂತೆ ತನ್ನ ಪಕ್ಷದ ಕಾರ್ಯಕರ್ತಗೆ ಸೂಚಿಸಿತ್ತು. ಅದರಂತೆ ದಕ್ಷಿಣ ಕನ್ನಡ ಜಿಲ್ಲೆಯಿಂದ 6  ಹಾಗೂ ಉಡುಪಿ ಜಿಲ್ಲೆಯಿಂದ 5 ಮಂದಿ ಹೀಗೆ ಒಟ್ಟು 11 ಮಂದಿ  ತಲಾ  1 ಲ.ರೂ ಪಾವತಿಸಿ ಅರ್ಜಿ ಗುಜರಾಯಿಸಿದ್ದಾರೆ.

ಹೀಗಾಗಿ ಕಳೆದ ಬಾರಿಯಂತೆ ಈ ಬಾರಿಯೂ ಕಾಂಗ್ರೇಸಿನಿಂದ ಒಮ್ಮತದ ಅಭ್ಯರ್ಥಿ ಕಣಕ್ಕಿಳಿಯುವುದು ಬಹುತೇಕ ಕಷ್ಟ ಸಾಧ್ಯ ಎನ್ನಲಾಗುತ್ತಿದೆ. ಕಳೆದ ಬಾರಿ ಕಾಂಗ್ರೇಸ್‌ ನ ಅಧಿಕೃತ ಅಭ್ಯರ್ಥಿ ಪ್ರತಾಪ್‌ ಚಂದ್ರ ಶೆಟ್ಟಿ ವಿರುದ್ದ ಜಯಪ್ರಕಾಶ್‌ ಹೆಗ್ಡೆ ಹಾಗೂ ಹರಿಕೃಷ್ಣ ಬಂಟ್ವಾಳ ಬಂಡಾಯವಾಗಿ ಸ್ಪರ್ಧಿಸಿದ್ದರು. ಈ ಬಾರಿ ಇದೇ ರೀತಿ ಪಕ್ಷದ ಅಭ್ಯರ್ಥಿ ಆಯ್ಕೆಯಲ್ಲಿ ಒಡಕು ಉಂಟಾದರೆ ಅದರ ಲಾಭ ಪಡೆಯಲು ಬಿಜೆಪಿ ಹವಣಿಸುತ್ತಿದೆ.

ಈ ಸಂದರ್ಭ ಅದು ಒಂದೋ  ತನ್ನ ಎರಡನೇ ಅಭ್ಯರ್ಥಿಯನ್ನು ಕಣಕ್ಕಿಳಿಸುವ ಸಾಧ್ಯತೆಯಿದೆ ಅಥಾವ ಪಕ್ಷೇತರರಾಗಿ ಸ್ಪರ್ಧಿಸುವ ಅಭ್ಯರ್ಥಿಗೆ ತನ್ನ ಹೆಚ್ಚುವರಿ ಮತಗಳನ್ನು  ನೀಡುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.. ಈ ಸಾಧ್ಯತೆಯನ್ನು ಗಮನಿಸಿರುವ ಸಹಕಾರಿ ದುರೀಣ ಡಾ. ಎಂ.ಎನ್.‌ ರಾಜೇಂದ್ರ ಕುಮಾರ್‌  ತನ್ನ ದಾಳ ಉರುಳಿಸಿದ್ದಾರೆ ಎನ್ನಲಾಗಿದೆ.   ವಿಧಾನ ಪರಿಷತ್ತಿನ ಬಹುತೇಕ ಮತದಾರರು  ಸಹಕಾರಿ ಹಿನ್ನಲೆಯವರಾಗಿರುವುದು ರಾಜೇಂದ್ರ ಕುಮಾರ್‌ ರವರಿಗೆ ಪ್ಲಸ್‌ ಪಾಯಿಂಟ್‌ .

ದಕ್ಷಿಣ ಕನ್ನಡ, ಉಡುಪಿ  ಜಿಲ್ಲೆಯ ಬಹುತೇಕ  ಗ್ರಾ. ಪಂ ಸದಸ್ಯರು ನವೋದಯ ಅಥಾವ ಇನ್ನಿತರ ಸಹಕಾರಿ ಸಂಘದಲ್ಲಿ ಗುರುತಿಸಿಕೊಂಡವರು. ಒಂದು ಲೆಕ್ಕಚಾರದ ಪ್ರಕಾರ  ಉಭಯ ಜಿಲ್ಲೆಗಳ ಸುಮಾರು 30% ಮಹಿಳಾ ಗ್ರಾ. ಪಂ ಸದಸ್ಯರು ನವೋದಯದ ಭಾಗವಾಗಿದ್ದವರು . ಕಾಂಗ್ರೇಸ್‌ ಹಾಗೂ ಬಿಜೆಪಿ ಎರಡು ಪಕ್ಷದ ಬೆಂಬಲಿತರು ಇದರಲ್ಲಿ ಸೇರಿದ್ದಾರೆ. ಹಾಗಾಗಿಯೇ ರಾಜೇಂದ್ರ ಕುಮಾರ್‌ ಈ ಎಂಎಲ್ಸಿ ಚುಣಾವಣೆಯಲ್ಲಿ ಸ್ಪರ್ಧಿಸಲು ಉತ್ಸುಕತೆ ತೋರಿದ್ದಾರೆ ಎಂದು ಹೇಳಲಾಗಿದೆ .

ಬಹುತೇಕ ಅವರು ನ . 17 ರಂದು ಸ್ಪರ್ಧೆ ಬಯಸಿ ನಾಮಪತ್ರ ಸಲ್ಲಿಸಲಿದ್ದಾರೆ. ಅವರನ್ನು ಬಿಜೆಪಿಯ ಹೆಚ್ಚುವರಿ ಮತಗಳು ಗೆಲುವಿನ ದಡ ತಲುಪಿಸಲಿದೆ ಎಂದು ರಾಜಕೀಯ ಪಂಡಿತರು ವಿಶ್ಲೇಷಿಸುತ್ತಿದ್ದಾರೆ. ಬಿಜೆಪಿಯಲ್ಲಿರುವ ಹೆಚ್ಚುವರಿ 1400 ಮತಗಳು, ಕಾಂಗ್ರೇಸ್‌ , ಬಿಜೆಪಿಯೇತರ ಸದಸ್ಯರ ಸುಮಾರು 500 ಕ್ಕೂ ಹೆಚ್ಚು ಮತಗಳು ಹಾಗೂ ಕಾಂಗ್ರೇಸ್‌ ನಿಂದ ಒಂದಷ್ಟು ಮತಗಳು ಲಭಿಸಿದರೆ ಸುಲಭದಲ್ಲಿ ಅವರು ಗೆಲುವಿನತ್ತ ಹೆಜ್ಜೆ ಹಾಕಲಿದ್ದಾರೆ . ಜತೆಗೆ ಸಹಕಾರಿ ಕ್ಷೇತ್ರದ ಮತದಾರರು ದೊಡ್ಡ ಸಂಖ್ಯೆಯಲ್ಲಿ  ಎಂಎನ್‌ ಅರ್‌ ಪರ ಮತ ಚಲಾಯಿಸಿದರೆ ಆಗ ದೊಡ್ಡ ಪಲ್ಲಟಗಳು ಆಗುವ ಸಾಧ್ಯತೆಯನ್ನು ತಳ್ಳಿ ಹಾಕುವಂತಿಲ್ಲ

2015 ರ ಮತ ವಿಭಜನೆಯ ವಿವರ :

 2015ರ ಚುಣಾವಣೆಯಲ್ಲಿ ಒಟ್ಟು ಚಲಾವಣೆಯಾದ ಮತಗಳು : 6534 ಗೆಲುವು

ಕೋಟಾ ಶ್ರೀನಿವಾಸ ಪೂಜಾರಿ (ಬಿಜೆಪಿ) ಪಡೆದ ಮತಗಳು : 2977 ಗೆಲುವು

 ಪ್ರತಾಪ್‌ ಚಂದ್ರ ಶೆಟ್ಟಿ ( ಕಾಂಗ್ರೇಸ್)‌ ಪಡೆದ ಮತಗಳು : 2237 ಸೋಲು

ಜಯಪ್ರಕಾಶ್‌ ಹೆಗ್ಡೆ ( ಕಾಂಗ್ರೇಸ್‌ ಬಂಡಾಯ ) ಪಡೆದ ಮತಗಳು : 872 ಸೋಲು

ಹರಿಕೃಷ್ಣ ಬಂಟ್ವಾಳ ( ಕಾಂಗ್ರೇಸ್‌ ಬಂಡಾಯ ) ಪಡೆದ ಮತಗಳು : 127 ಸೋಲು

ಪ್ರವೀಣ್‌ ಚಂದ್ರ ಜೈನ್‌  ( ಜೆಡಿಎಸ್‌ ) ಪಡೆದ ಮತಗಳು : 30 ಸೋಲು

ತಿರಸ್ಕೃತ ಮತಗಳು : 231

ನೋಟಾ : 02

Ad Widget
Click to comment

Leave a Reply

ಅಂತರ ರಾಜ್ಯ

Nana Patekar-ಕಾರ್ಗಿಲ್ ಯುದ್ಧದ ವೇಳೆ ಸೈನಿಕನಾಗಿಯೂ ದೇಶ ಸೇವೆ ಮಾಡಿದ್ದ ನಾನಾ ಪಾಟೇಕರ್

Published

on



Ad Widget

Ad Widget

Ad Widget

Ad Widget

ರಂಗಭೂಮಿ, ಮರಾಠಿ ಹಾಗೂ ಹಿಂದಿ ಚಿತ್ರರಂಗದಲ್ಲಿ ತಮ್ಮ ವಿಶಿಷ್ಟ ಅಭಿನಯದ ಮೂಲಕ ಅಪಾರ ಅಭಿಮಾನಿಗಳನ್ನು ಸಂಪಾದಿಸಿದ್ದ ಹಿರಿಯ ನಟ ನಾನಾ ಪಾಟೇಕರ್ (75) ಗುರುವಾರ ಮುಂಜಾನೆ ಗೋವಾದಲ್ಲಿ ಹೃದಯಾಘಾತದಿಂದ ನಿಧನರಾಗಿದ್ದಾರೆ. ಗೋವಾದ ತಮ್ಮ ನಿವಾಸದಲ್ಲಿ ಅಸ್ವಸ್ಥರಾಗಿ ಪತ್ತೆಯಾದ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ, ವೈದ್ಯರ ಪ್ರಯತ್ನ ಫಲಿಸದೆ ಬೆಳಗ್ಗೆ 5.20ರ ಸುಮಾರಿಗೆ ನಿಧನರಾದರು.

Ad Widget

Ad Widget

Ad Widget

Ad Widget

ನವದೆಹಲಿ: ರಂಗಭೂಮಿ, ಮರಾಠಿ ಹಾಗೂ ಹಿಂದಿ ಚಿತ್ರರಂಗದಲ್ಲಿ ತಮ್ಮ ವಿಶಿಷ್ಟ ಅಭಿನಯದ ಮೂಲಕ ಅಪಾರ ಅಭಿಮಾನಿಗಳನ್ನು ಸಂಪಾದಿಸಿದ್ದ ಹಿರಿಯ ನಟ ನಾನಾ ಪಾಟೇಕರ್ (75) ಗುರುವಾರ ಮುಂಜಾನೆ ಗೋವಾದಲ್ಲಿ ಹೃದಯಾಘಾತದಿಂದ ನಿಧನರಾಗಿದ್ದಾರೆ. ಗೋವಾದ ತಮ್ಮ ನಿವಾಸದಲ್ಲಿ ಅಸ್ವಸ್ಥರಾಗಿ ಪತ್ತೆಯಾದ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ, ವೈದ್ಯರ ಪ್ರಯತ್ನ ಫಲಿಸದೆ ಬೆಳಗ್ಗೆ 5.20ರ ಸುಮಾರಿಗೆ ನಿಧನರಾದರು.

Ad Widget

Ad Widget

Ad Widget alt="Ad Widget"/>

Ad Widget

ನಾನಾ ಪಾಟೇಕರ್ ಕೇವಲ ಬೆಳ್ಳಿತೆರೆಯ ನಟನಾಗಿ ಮಾತ್ರ ಗುರುತಿಸಿಕೊಂಡವರಲ್ಲ. ಸರಳತೆ, ಸಾಮಾಜಿಕ ಕಳಕಳಿ ಹಾಗೂ ದೇಶಪ್ರೇಮಕ್ಕೂ ಅವರು ಹೆಸರಾಗಿದ್ದರು. ಭಾರತೀಯ ಸೇನೆಯೊಂದಿಗೆ ಅವರಿಗಿದ್ದ ನಂಟು ಕೂಡ ಅವರ ಬದುಕಿನ ಪ್ರಮುಖ ಅಧ್ಯಾಯವಾಗಿತ್ತು.

Ad Widget

Ad Widget <> Ad Widget

ಸೇನಾ ತರಬೇತಿ ಪಡೆದು ಟೆರಿಟೋರಿಯಲ್ ಆರ್ಮಿಗೆ ಸೇರ್ಪಡೆ
1991ರಲ್ಲಿ ತೆರೆಕಂಡ ತಮ್ಮ ಪ್ರಸಿದ್ದ ‘ಪ್ರಹಾರ್: ದಿ ಫೈನಲ್ ಅಟ್ಯಾಕ್’ ಸಿನಿಮಾದ ಕಮಾಂಡೋ ಪಾತ್ರಕ್ಕಾಗಿ ನಾನಾ ಪಾಟೇಕರ್ ಅವರು ಯಾವುದೇ ಶಾರ್ಟ್‌ಕಟ್ ಬಳಸದೆ, ಮರಾಠಾ ಲೈಟ್ ಇನ್ವೆಂಟ್ರಿ ಜೊತೆ ಮೂರು ವರ್ಷಗಳ ಕಾಲ ಕಠಿಣ ಮಿಲಿಟರಿ ತರಬೇತಿ ಪಡೆದಿದ್ದರು. ಈ ತರಬೇತಿಯ ನಂತರ ಅವರು 1980ರ ದಶಕದ ಉತ್ತರಾರ್ಧದಲ್ಲಿ ಟೆರಿಟೋರಿಯಲ್ ಆರ್ಮಿಗೆ (ಪ್ರಾದೇಶಿಕ ಸೇನೆ) ಅಧಿಕೃತವಾಗಿ ಸೇರ್ಪಡೆಗೊಂಡಿದ್ದರು.



Ad Widget

1999ರಲ್ಲಿ ಕಾರ್ಗಿಲ್ ಯುದ್ಧ ಆರಂಭವಾದಾಗ ಗಡಿಯಲ್ಲಿ ಸೈನಿಕರೊಂದಿಗೆ ಸೇವೆ ಸಲ್ಲಿಸುವ ಇಚ್ಛೆಯನ್ನು ಅವರು ವ್ಯಕ್ತಪಡಿಸಿದ್ದರು. ಅನುಮತಿ ಪಡೆದ ಬಳಿಕ ತಮ್ಮ ನಟನಾ ವೃತ್ತಿಜೀವನವನ್ನು ಕೆಲಕಾಲ ಬದಿಗೊತ್ತಿ ಸೇನೆಯ ಕ್ವಿಕ್ ರಿಯಾಕ್ಷನ್ ಟೀಮ್‌ನೊಂದಿಗೆ ಗಡಿ ಪ್ರದೇಶದಲ್ಲಿ ಸೇವೆ ಸಲ್ಲಿಸಿದ್ದರು.

Ad Widget

Ad Widget

ಶ್ರೀನಗರ, ಡ್ರಾಸ್ ಹಾಗೂ ಲೇಹ್ ಸೇರಿದಂತೆ ಕಠಿಣ ಹವಾಮಾನವಿರುವ ಪ್ರದೇಶಗಳಲ್ಲಿ ಸೈನಿಕರೊಂದಿಗೆ ಸುಮಾರು ಎರಡು ತಿಂಗಳು ಕಳೆದಿದ್ದರು. ಈ ಅವಧಿಯಲ್ಲಿ ಸುಮಾರು 20 ಕೆ.ಜಿ. ತೂಕ ಕಳೆದುಕೊಂಡಿದ್ದಾಗಿ ಅವರು ಹಿಂದಿನ ಸಂದರ್ಶನಗಳಲ್ಲಿ ಹೇಳಿಕೊಂಡಿದ್ದರು.

ಗಣ್ಯರಿಂದ ಸಂತಾಪ
ನಾನಾ ಪಾಟೇಕ‌ರ್ ಅವರ ಅಗಲಿಕೆಗೆ ಪ್ರಧಾನಿ ನರೇಂದ್ರ ಮೋದಿ, ಬಾಲಿವುಡ್ ನಟರಾದ ಅಕ್ಷಯ್ ಕುಮಾರ್, ರಿತೇಶ್ ದೇಶ್‌ಮುಖ್ ಸೇರಿದಂತೆ ದೇಶದ ಪ್ರಮುಖ ರಾಜಕಾರಣಿಗಳು, ಚಲನಚಿತ್ರ ರಂಗದ ಗಣ್ಯರು ಹಾಗೂ ಕ್ರೀಡಾಪಟುಗಳು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

ಸಾಮಾಜಿಕ ಜಾಲತಾಣದಲ್ಲಿ”ಎಕ್ಸ್”ನಲ್ಲಿ ಪೋಸ್ಟ್ ಮಾಡಿರುವ ಪ್ರಧಾನಿ ನರೇಂದ್ರ ಮೋದಿ, ‘ನಾನಾ ಪಾಟೇಕರ್‌ಜಿ ಅವರ ಅಭಿನಯದಲ್ಲಿನ ವಿಶಿಷ್ಟತೆ, ತೀವ್ರತೆ ಹಾಗೂ ಪ್ರಭಾವಶಾಲಿ ವ್ಯಕ್ತಿತ್ವ ಕೆಲವೇ ಕೆಲವು ಕಲಾವಿದರಲ್ಲಿ ಮಾತ್ರ ಕಾಣಸಿಗುತ್ತದೆ. ತಮ್ಮ ಪಾತ್ರಗಳ ಮೂಲಕ ಜ್ವಾಲಾಮುಖಿಯಂತೆ ಸ್ಫೋಟಿಸುವ ಪ್ರತಿಭೆ ಹಾಗೂ ಸೃಜನಶೀಲತೆಯನ್ನು ಅವರು ಪ್ರದರ್ಶಿಸುತ್ತಿದ್ದರು. ಬೆಳ್ಳಿತೆರೆಯ ಮೇಲೆ ಅವರು ಜೀವ ತುಂಬಿದ ಪಾತ್ರಗಳು ಹಲವು ತಲೆಮಾರುಗಳ ನೆನಪಿನಲ್ಲಿ ಶಾಶ್ವತವಾಗಿ ಉಳಿಯಲಿವೆ. ನೇರ ಹಾಗೂ ಸ್ಪಷ್ಟ ಅಭಿಪ್ರಾಯಗಳಿಗೆ ಹೆಸರಾಗಿದ್ದ ನಾನಾ ಪಾಟೇಕರ್ ಅವರದು ಅದೇ ವಿಶಿಷ್ಟ ಛಾಪು. ತಾವು ಕಂಡ ಸಂಗತಿಗಳ ಕುರಿತು ಯಾವುದೇ ಮುಚ್ಚುಮರೆಯಿಲ್ಲದೆ ಅತ್ಯಂತ ಸ್ಪಷ್ಟವಾಗಿ ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸುತ್ತಿದ್ದರು’ ಎಂದು ಹೇಳಿದ್ದಾರೆ.

ಅವರ ಅಗಲಿಕೆಗೆ ಸಂತಾಪ ಸೂಚಿಸಿರುವ ನಟ ಅಕ್ಷಯ್ ಕುಮಾರ್, “ಅವರ ಗಂಭೀರ ಧ್ವನಿ, ನಟನೆಯಲ್ಲಿನ ತೀವ್ರತೆ ಹಾಗೂ ಪ್ರಾಮಾಣಿಕತೆ ಅವರನ್ನು ಅನನ್ಯ ವ್ಯಕ್ತಿಯನ್ನಾಗಿ ಮಾಡಿತ್ತು. ವೆಲ್ಕಮ್ ಹಾಗೂ ಇತ್ತೀಚಿನ ಹೌಸ್‌ಫುಲ್ 5 ಚಿತ್ರಗಳಲ್ಲಿ ಅವರೊಂದಿಗೆ ಕೆಲಸ ಮಾಡಿದ ನೆನಪುಗಳು ಎಂದಿಗೂ ನನ್ನೊಂದಿಗಿರುತ್ತವೆ” ಎಂದಿದ್ದಾರೆ.

ನಟ ರಿತೇಶ್ ದೇಶ್‌ಮುಖ್ ಪ್ರತಿಕ್ರಿಯಿಸಿ, “ನಾನಾ ಪಾಟೇಕರ್ ಅವರು ಬೆಳ್ಳಿಪರದೆಯ ಮೇಲಷ್ಟೇ ಅಲ್ಲದೆ, ನಿಜ ಜೀವನದಲ್ಲೂ ಒಬ್ಬ ರಿಯಲ್ ಹೀರೋ ಆಗಿದ್ದರು. ಅವರು ಕೈಗೊಂಡ ಸಾಮಾಜಿಕ ಕಾರ್ಯಗಳು ಅಪಾರವಾದವು. ನಾಯಕನಾಗಿ, ಖಳನಾಯಕನಾಗಿ ಹಾಗೂ ಹಾಸ್ಯನಟನಾಗಿ ಎಲ್ಲಾ ರೀತಿಯ ಪಾತ್ರಗಳಿಗೂ ಜೀವ ತುಂಬುತ್ತಿದ್ದ ಅವರ ಅಗಲಿಕೆ ಚಿತ್ರರಂಗಕ್ಕೆ ಬಹುದೊಡ್ಡ ನಷ್ಟ” ಎಂದು ಸ್ಮರಿಸಿದ್ದಾರೆ.

Ad Widget
Continue Reading

ಬಿಗ್ ನ್ಯೂಸ್

Reservation-ದ.ಕ. ಜಿ.ಪಂ., ತಾ.ಪಂ. ಮೀಸಲಾತಿ ಪ್ರಕಟ: ಮಹಿಳೆಯರಿಗೆ ತಾ.ಪಂ. 65, ಜಿ.ಪಂ. 18 ಸ್ಥಾನ ಮೀಸಲು

Published

on



Ad Widget

Ad Widget

Ad Widget

Ad Widget

ದಕ್ಷಿಣ ಕನ್ನಡ ಜಿಲ್ಲಾ ಪಂಚಾಯಿತಿ ಹಾಗೂ ತಾಲೂಕು ಪಂಚಾಯಿತಿ ಚುನಾವಣೆಗೆ ಸಂಬಂಧಿಸಿದಂತೆ ವರ್ಗವಾರು ಮೀಸಲಾತಿ ವಿವರ ಪ್ರಕಟಗೊಂಡಿದ್ದು, ಜಿಲ್ಲೆಯ ರಾಜಕೀಯ ವಲಯದಲ್ಲಿ ಟಿಕೆಟ್‌ ಆಕಾಂಕ್ಷಿಗಳ ಲೆಕ್ಕಾಚಾರ ಆರಂಭವಾಗಿದೆ.

Ad Widget

Ad Widget

Ad Widget

Ad Widget

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಪಂಚಾಯಿತಿ ಹಾಗೂ ತಾಲೂಕು ಪಂಚಾಯಿತಿ ಚುನಾವಣೆಗೆ ಸಂಬಂಧಿಸಿದಂತೆ ವರ್ಗವಾರು ಮೀಸಲಾತಿ ವಿವರ ಪ್ರಕಟಗೊಂಡಿದ್ದು, ಜಿಲ್ಲೆಯ ರಾಜಕೀಯ ವಲಯದಲ್ಲಿ ಟಿಕೆಟ್‌ ಆಕಾಂಕ್ಷಿಗಳ ಲೆಕ್ಕಾಚಾರ ಆರಂಭವಾಗಿದೆ.

Ad Widget

Ad Widget

Ad Widget alt="Ad Widget"/>

Ad Widget

ಜಿಲ್ಲೆಯ ವಿವಿಧ ಜಿಲ್ಲಾ ಪಂಚಾಯಿತಿ ಹಾಗೂ ತಾಲೂಕು ಪಂಚಾಯಿತಿ ಕ್ಷೇತ್ರಗಳನ್ನು ಪರಿಶಿಷ್ಟ ಜಾತಿ (ಎಸ್‌ಸಿ), ಪರಿಶಿಷ್ಟ ಪಂಗಡ (ಎಸ್‌ಟಿ), ಹಿಂದುಳಿದ ವರ್ಗ ಹಾಗೂ ಸಾಮಾನ್ಯ ವರ್ಗದಡಿ ಮೀಸಲಿಡಲಾಗಿದೆ.

Ad Widget

Ad Widget <> Ad Widget

ತಾಲೂಕು ಪಂಚಾಯಿತಿ:
ದಕ್ಷಿಣ ಕನ್ನಡ ಜಿಲ್ಲೆಯ ತಾಲೂಕು ಪಂಚಾಯಿತಿಗಳಲ್ಲಿ ಒಟ್ಟು 126 ಸ್ಥಾನಗಳಿದ್ದು, 65 ಸ್ಥಾನಗಳು ಮಹಿಳೆಯರಿಗೆ ಮೀಸಲಾಗಿದೆ. ಪರಿಶಿಷ್ಟ ಜಾತಿಗೆ 13 ಸ್ಥಾನಗಳಿದ್ದು, ಈ ಪೈಕಿ 9 ಮಹಿಳೆಯರಿಗೆ ಮೀಸಲಾಗಿದೆ. ಪರಿಶಿಷ್ಟ ಪಂಗಡಕ್ಕೆ 10 ಸ್ಥಾನಗಳಿದ್ದು, 9 ಸ್ಥಾನಗಳು ಮಹಿಳೆಯರಿಗೆ ಮೀಸಲಾಗಿವೆ.



Ad Widget

ಹಿಂದುಳಿದ ವರ್ಗ ‘ಎ’ಗೆ 29 ಸ್ಥಾನಗಳು ಮೀಸಲಾಗಿದ್ದು, 16 ಸ್ಥಾನಗಳು ಮಹಿಳೆಯರಿಗೆ ಮೀಸಲು. ಹಿಂದುಳಿದ ವರ್ಗ ‘ಬಿ’ಗೆ 7 ಸ್ಥಾನಗಳಿದ್ದು, 4 ಸ್ಥಾನಗಳು ಮಹಿಳೆಯರಿಗೆ ಮೀಸಲಾಗಿವೆ. ಸಾಮಾನ್ಯ ವರ್ಗದ 67 ಸ್ಥಾನಗಳ ಪೈಕಿ 27 ಸ್ಥಾನಗಳು ಮಹಿಳೆಯರಿಗೆ ಮೀಸಲಾಗಿವೆ.

Ad Widget

Ad Widget

ತಾಲೂಕುವಾರು ಗಮನಿಸಿದರೆ ಮೂಲ್ಕಿಯಲ್ಲಿ 7, ಮೂಡುಬಿದಿರೆಯಲ್ಲಿ 9, ಸುಳ್ಯದಲ್ಲಿ 11, ಉಳ್ಳಾಲದಲ್ಲಿ 12, ಪುತ್ತೂರಿನಲ್ಲಿ 12, ಮಂಗಳೂರಿನಲ್ಲಿ 14, ಬೆಳ್ತಂಗಡಿಯಲ್ಲಿ 14, ಕಡಬದಲ್ಲಿ 22 ಹಾಗೂ ಬಂಟ್ವಾಳದಲ್ಲಿ 25 ತಾಲೂಕು ಪಂಚಾಯಿತಿ ಕ್ಷೇತ್ರಗಳಿವೆ. ಬಂಟ್ವಾಳದಲ್ಲಿ ಅತಿ ಹೆಚ್ಚು 25 ಹಾಗೂ ಮೂಲ್ಕಿಯಲ್ಲಿ ಅತಿ ಕಡಿಮೆ 7 ಕ್ಷೇತ್ರಗಳಿವೆ.

ಜಿಲ್ಲಾ ಪಂಚಾಯಿತಿ:
ದಕ್ಷಿಣ ಕನ್ನಡ ಜಿಲ್ಲಾ ಪಂಚಾಯಿತಿಯಲ್ಲಿ ಒಟ್ಟು 35 ಸ್ಥಾನಗಳಿದ್ದು, 18 ಸ್ಥಾನಗಳು ಮಹಿಳೆಯರಿಗೆ ಮೀಸಲಾಗಿದೆ. ಪರಿಶಿಷ್ಟ ಜಾತಿಗೆ 3 ಸ್ಥಾನಗಳಿದ್ದು, 2 ಮಹಿಳೆಯರಿಗೆ ಮೀಸಲು. ಪರಿಶಿಷ್ಟ ಪಂಗಡಕ್ಕೆ 2 ಸ್ಥಾನಗಳಿದ್ದು, 1 ಸ್ಥಾನ ಮಹಿಳೆಯರಿಗೆ ಮೀಸಲಾಗಿದೆ.

ಹಿಂದುಳಿದ ವರ್ಗ ‘ಎ’ಗೆ 10 ಸ್ಥಾನಗಳಿದ್ದು, 5 ಸ್ಥಾನಗಳು ಮಹಿಳೆಯರಿಗೆ ಮೀಸಲಾಗಿವೆ. ಹಿಂದುಳಿದ ವರ್ಗ ‘ಬಿ’ಗೆ 2 ಸ್ಥಾನಗಳಿದ್ದು, 1 ಸ್ಥಾನ ಮಹಿಳೆಯರಿಗೆ ಮೀಸಲು. ಸಾಮಾನ್ಯ ವರ್ಗದ 18 ಸ್ಥಾನಗಳ ಪೈಕಿ 9 ಸ್ಥಾನಗಳು ಮಹಿಳೆಯರಿಗೆ ಮೀಸಲಾಗಿವೆ.

ಮೀಸಲಾತಿ ವಿವರ ಪ್ರಕಟಗೊಂಡಿರುವ ಹಿನ್ನೆಲೆಯಲ್ಲಿ ವಿವಿಧ ರಾಜಕೀಯ ಪಕ್ಷಗಳಲ್ಲಿ ಟಿಕೆಟ್‌ ಆಕಾಂಕ್ಷಿಗಳ ಲೆಕ್ಕಾಚಾರ ಆರಂಭವಾಗಿದೆ. ಯಾವ ಕ್ಷೇತ್ರದಲ್ಲಿ ಯಾವ ವರ್ಗಕ್ಕೆ ಮೀಸಲಾತಿ ದೊರೆತಿದೆ ಎಂಬುದನ್ನು ಆಧರಿಸಿ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆ ನಡೆಯುವ ಸಾಧ್ಯತೆಯಿದೆ. ಹೀಗಾಗಿ ಮುಂದಿನ ದಿನಗಳಲ್ಲಿ ಜಿಲ್ಲಾ ಹಾಗೂ ತಾಲೂಕು ಮಟ್ಟದಲ್ಲಿ ರಾಜಕೀಯ ಚಟುವಟಿಕೆಗಳು ಮತ್ತಷ್ಟು ಚುರುಕುಗೊಳ್ಳುವ ನಿರೀಕ್ಷೆಯಿದೆ.

Ad Widget
Continue Reading

ಅಂತರ ರಾಜ್ಯ

CEC Jnanesh Kumar-ವಿಪಕ್ಷಗಳ ಪ್ರತಿಭಟನೆ ತೀವ್ರ: ಸಿಇಸಿ ಜ್ಞಾನೇಶ್ ಕುಮಾರ್ ನಿವಾಸಕ್ಕೆ ತೀವ್ರ ಭದ್ರತೆ

Published

on



Ad Widget

Ad Widget

Ad Widget

Ad Widget

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR)ಗೆ ಸಂಬಂಧಿಸಿದಂತೆ ವಿಪಕ್ಷಗಳ ಪ್ರತಿಭಟನೆ ತೀವ್ರಗೊಂಡಿರುವ ಹಿನ್ನೆಲೆಯಲ್ಲಿ ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರ ನಿವಾಸದ ಹೊರಗೆ ಹೆಚ್ಚುವರಿ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಿ ಭದ್ರತೆ ಹೆಚ್ಚಿಸಲಾಗಿದೆ.

Ad Widget

Ad Widget

Ad Widget

Ad Widget

ಹೊಸದಿಲ್ಲಿ: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR)ಗೆ ಸಂಬಂಧಿಸಿದಂತೆ ವಿಪಕ್ಷಗಳ ಪ್ರತಿಭಟನೆ ತೀವ್ರಗೊಂಡಿರುವ ಹಿನ್ನೆಲೆಯಲ್ಲಿ ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರ ನಿವಾಸದ ಹೊರಗೆ ಹೆಚ್ಚುವರಿ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಿ ಭದ್ರತೆ ಹೆಚ್ಚಿಸಲಾಗಿದೆ.

Ad Widget

Ad Widget

Ad Widget alt="Ad Widget"/>

Ad Widget

ಜ್ಞಾನೇಶ್ ಕುಮಾರ್ ಅವರಿಗೆ ಈಗಾಗಲೇ Z-ಪ್ಲಸ್ ಭದ್ರತಾ ವ್ಯವಸ್ಥೆ ಕಲ್ಪಿಸಲಾಗಿದೆ. ಆದರೆ ಇತ್ತೀಚಿನ ಗುಪ್ತಚರ ಮಾಹಿತಿ ಹಾಗೂ ದಿಲ್ಲಿಯಲ್ಲಿ ನಡೆಯುತ್ತಿರುವ ಪ್ರತಿಭಟನೆಗಳನ್ನು ಗಮನದಲ್ಲಿಟ್ಟುಕೊಂಡು ಅವರ ನಿವಾಸದ ಸುತ್ತಮುತ್ತ ಹೆಚ್ಚುವರಿ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

Ad Widget

Ad Widget <> Ad Widget

ದಿಲ್ಲಿಯಲ್ಲಿ ವಿವಿಧ ಪ್ರತಿಭಟನೆಗಳು ನಡೆಯುತ್ತಿರುವ ಹಿನ್ನೆಲೆಯಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಎಲ್ಲಾ ಭದ್ರತಾ ಏಜೆನ್ಸಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸುವಂತೆ ಸೂಚಿಸಲಾಗಿದೆ ಎಂದು ತಿಳಿದುಬಂದಿದೆ.



Ad Widget

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಅಕ್ರಮಗಳು ನಡೆದಿವೆ ಎಂದು ಆರೋಪಿಸಿ ವಿಪಕ್ಷಗಳು ಪ್ರತಿಭಟನೆ ನಡೆಸುತ್ತಿವೆ. ಈ ಹಿನ್ನೆಲೆಯಲ್ಲಿ ಸಿಇಸಿ ಜ್ಞಾನೇಶ್ ಕುಮಾರ್ ಅವರ ವಿರುದ್ಧ ಪ್ರತಿಭಟನೆಗಳು ದೇಶದ ವಿವಿಧೆಡೆ ತೀವ್ರಗೊಳ್ಳುತ್ತಿರುವ ನಡುವೆಯೇ ಅವರ ಭದ್ರತೆಯನ್ನು ಮತ್ತಷ್ಟು ಹೆಚ್ಚಿಸಲಾಗಿದೆ.

Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!

Discover more from Nikhara News | Kannada News Website

Subscribe now to keep reading and get access to the full archive.

Continue reading