Connect with us

ಅಪರಾಧ

Twist : ಕಾಣಿಯೂರು : ಮಹಿಳೆಯ ಮಾನಭಂಗ ಪ್ರಕರಣದ ಆರೋಪಿಗಳಿಂದ ಪ್ರತಿ ದೂರು – ಗುಂಪಿನಿಂದ ಹಲ್ಲೆ ಆರೋಪ | ಹಲ್ಲೆ ನಡೆಸುವ ವಿಡಿಯೋ ವೈರಲ್

Published

on



Ad Widget

Ad Widget

Ad Widget

Ad Widget

ಕಾಣಿಯೂರು : ಅ 21:  ಕಂಬಳಿ ಮಾರುವ ಸೋಗಿನಲ್ಲಿ ಬಂದು ಕಾಣಿಯೂರು ಸಮೀಪದ ದೊಳ್ಪಾಡಿಯಲ್ಲಿ  ಮಹಿಳೆಯೊಬ್ಬರ  ಮಾನ ಭಂಗಕ್ಕೆ ಯತ್ನಿಸಿದ ಬಗ್ಗೆ ಅ.20 ರಂದು ಕಡಬ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಇದೀಗ ಈ ಪ್ರಕರಣದ ಆರೋಪಿಗಳು ಬೆಳ್ಳಾರೆ ಠಾಣೆಯಲ್ಲಿ ಪ್ರತಿ ದೂರು ದಾಖಲಿಸಿದ್ದು ನಮ್ಮ ಮೇಲೆ ಗುಂಪೊಂದು ಹಲ್ಲೆ ನಡೆಸಿರುವುದಾಗಿ ಆರೋಪಿಸಿದ್ದಾರೆ.  ಹಲ್ಲೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ.

Ad Widget

Ad Widget

Ad Widget

Ad Widget

ಮಂಗಳೂರು ತಾಲೂಕಿನ ಅಡ್ಡೂರು  ಗ್ರಾಮದ ಹೊಳೆ ಬದಿ ನಿವಾಸಿ,ರಮೀಜುದ್ದಿನ್ ಮತ್ತು ಆತನ ಸಂಬಂಧಿಕ  ಮಹಮ್ಮದ್ ರಫೀಕ್ ಹಲ್ಲೆಗೊಳಗಾದ ಬಗ್ಗೆ ದೂರು ನೀಡಿದವರು. ಕಡಬ  ತಾಲೂಕಿನ ದೊಳ್ಪಾಡಿ  ಗ್ರಾಮದ ಪರಿಶಿಷ್ಠ ಜಾತಿಗೆ ಸೇರಿದ 44 ರ ಹರೆಯದ ಮಹಿಳೆಯೊಬ್ಬರು ಈ ಇಬ್ಬರು ಮಾನಭಂಗಕ್ಕೆ ಯತ್ನಿಸಿರುವ ಹಾಗೂ ಜಾತಿ ನಿಂದನೆ ಮಾಡಿದ ಬಗ್ಗೆ ಕಡಬ ಠಾಣೆಯಲ್ಲಿ ದೂರು ನೀಡಿದ್ದು ಪ್ರಕರಣ ದಾಖಲಾಗಿದೆ .

Ad Widget

Ad Widget

Ad Widget alt="Ad Widget"/>

Ad Widget

ಮಹಿಳೆ ನೀಡಿದ ದೂರಿನಲ್ಲಿ ಏನಿದೆ ?

ಸಂತ್ರಸ್ತ ಮಹಿಳೆ ಪರಿಶಿಷ್ಠ ಜಾತಿಯವರಾಗಿದ್ದು ಕೂಲಿ ಕೆಲಸ ಮಾಡಿಕೊಂಡಿರುತ್ತಾರೆ.  ಅ.20 ರಂದು ಅವರು  ಕೂಲಿ ಕೆಲಸಕ್ಕೆ ಹೋಗದೇ ಮನೆಯಲ್ಲಿದ್ದರು. ಅಂದು ಆರೋಪಿಗಳಾದ  ರಮೀಜುದ್ದಿನ್ ಮತ್ತು ಮಹಮ್ಮದ್ ರಫೀಕ್  ಮಧ್ಯಾಹ್ನ  12.30 ಗಂಟೆಗೆ  ನೀಲಿ ಬಣ್ಣದ ಕಾರಿನಲ್ಲಿ ಮನೆಗೆ ಬಂದಿದ್ದು ಬೆಡ್‌ಶೀಟ್‌ ಮಾರಾಟಕ್ಕೆ ಯತ್ನಿಸಿದ್ದಾರೆ,  ಬಾಗಿಲಿನ ಬಳಿ ಬಂದ ಆರೋಪಿಗಳು  ಬೆಡ್‌ಶೀಟ್‌ ಬೇಕಾ ಎಂದು ಕೇಳಿದ್ದು, ಮಹಿಳೆಯೂ  ದರ ವಿಚಾರಿಸಿದ್ದಾರೆ.   

Ad Widget

Ad Widget <> Ad Widget

ಆದರೇ ರೇಟ್‌ ಹೇಳದ ಅವರು ಕಡಿಮೆ ಮಾಡಿ ಕೊಡುವ ಎಂದು ಹೇಳಿದ್ದು, ನನ್ನಲ್ಲಿ ಅಷ್ಟು ಹಣವಿಲ್ಲ, ನೀವು ರೇಟ್‌ ಹೆಳಿದರೇ ನಾನು ಬೆಡ್‌ಶೀಟ್‌ ನೋಡುತ್ತೇನೆ ಎಂದು ಮಹಿಳೆ ಉತ್ತರಿಸಿದ್ದಾರೆ. ಆಗ ಆರೋಪಿಗಳ ಪೈಕಿ ಓರ್ವ “ನಿಮ್ಮಲ್ಲಿ ಹಣವಿಲ್ಲದಿದ್ದರೇ ನೀವು ನನ್ನೊಂದಿಗೆ ಸ್ವಲ್ಪ ಅಡ್ಜೆಸ್ಟ್ ಮಾಡಿಕೊಂಡು ನಮ್ಮೋಂದಿಗೆ ಮಲಗಿದರೆ ನಿಮಗೆ ಬೇಕಾದರೇ ನಾವು ಹಣವನ್ನು ಸಹ ಕೊಟ್ಟು ಹೋಗುತ್ತೇವೆ ಎಂದು ಹೇಳಿರುವುದಾಗಿ ಆರೋಪಿಸಲಾಗಿದೆ



Ad Widget

 ನಾವು ಆ ರೀತಿ ಜನರಲ್ಲ. ನೀವು ಮನೆಯಿಂದ ಹೋಗಿ ಎಂದು  ಮಹಿಳೆ ಹೇಳಿದ್ದು ಆಗ ಆರೋಪಿಯು   ಆಕೆಯ  ಕೈಹಿಡಿದು ಎಳೆದಿದ್ದು, ಮನೆಯೊಳಗಡೆ ಬಂದು ಮಾನಭಂಗಕ್ಕೆ ಯತ್ನಿಸಿದ್ದಾನೆ . ಆಗ ಮಹಿಳೆಯು ಜೋರಾಗಿ ಬೊಬ್ಬೆ ಹೊಡೆದಿದ್ದು ಆರೋಪಿಗಳು ಪರಾರಿಯಾಗಿದ್ದಾರೆಂದು ದೂರಿನಲ್ಲಿ ತಿಳಿಸಲಾಗಿದೆ. ಆರೋಪಿಗಳ ವಿರುದ್ದ  ಐಪಿಸಿ ಕಲಂ : 448,354,ಜೊತೆಗೆ 34 ಮತ್ತು ಕಲಂ:3(2)(Va) SC and ST amendment Act  2015ರಂತೆ ಪ್ರಕರಣ ದಾಖಲಾಗಿದೆ.

Ad Widget

Ad Widget

Kadaba | ಕಾಣಿಯೂರು : ಬಟ್ಟೆ ಮಾರುವ ನೆಪದಲ್ಲಿ ಬಂದು ಹಾಡುಹಗಲೇ ಮಹಿಳೆಯ ಮಾನಭಂಗಕ್ಕೆ ಯತ್ನ – ಪರಾರಿಯಾಗುವ ವೇಳೆ ಕಾರು ಅಪಘಾತಕ್ಕಿಡಾಗಿ ಇಬ್ಬರಿಗೆ ಗಾಯ | ರಫೀಕ್, ರಮೀಜ್ ವಿರುದ್ದ ಪ್ರಕರಣ ದಾಖಲು

ಪ್ರತಿ ದೂರಿನಲ್ಲಿ ಏನಿದೆ ?

ದೂರುದಾರರಾದ ರಮೀಜುದ್ದಿನ್ ಮತ್ತು ಮಹಮ್ಮದ್ ರಫೀಕ್  ರವರಿಗೆ  ಮನೆ ಮನೆಗೆ ತೆರಳಿ  ಬೆಡ್ ಶೀಟ್ ಮಾರಾಟ  ಮಾಡುವ  ಉದ್ಯೋಗ. ಅ.20 ರಂದು ಅವರು ತಮ್ಮ ಕಾರಿನಲ್ಲಿ ಕಡಬ ತಾಲೂಕಿನ  ಎಡಮಂಗಲ ಹಾಗೂ ದೋಲ್ಪಾಡಿ ಗ್ರಾಮದಲ್ಲಿ ಬೆಡ್ ಶೀಟ್ ಮಾರಾಟ  ಮಾಡಲು ಬಂದಿದ್ದಾರೆ.

 ಈ ಸಂದರ್ಭ ಮನೆಯೊಂದರದಲ್ಲಿದ್ದ  ಮಹಿಳೆಯ  ಜೊತೆ ಬೆಡ್ ಶೀಟ್ ಮಾರಾಟದ ವಿಚಾರದಲ್ಲಿ ತಕರಾರು ಉಂಟಾಗಿದೆ. ಬಳಿಕ ಅವರು  ಅಲ್ಲಿಂದ ವಾಪಸ್ಸು  ಬಂದಿದ್ದು ಮಧ್ಯಾಹ್ನ 2.00ಗಂಟೆ ಸುಮಾರಿಗೆ  ಕಾಣಿಯೂರು ಗ್ರಾಮದ ಬೆದ್ರಾಜೆ ಎಂಬಲ್ಲಿಗೆ  ತಲುಪಿದ್ದಾರೆ.  ಅಲ್ಲಿ ಉದ್ರಿಕ್ತ  ಗುಂಪೊಂದು ಪಿಕಪ್ ವಾಹನವೊಂದನ್ನು ರಸ್ತೆಗೆ ಅಡ್ಡವಾಗಿಟ್ಟು  ಕಾರನ್ನು ತಡೆದು ನಿಲ್ಲಿಸಿದ್ದಾರೆ.   ಬಳಿಕ ಕಾರಿನಲ್ಲಿದ್ದ ದೂರುದಾರರನ್ನು ರಸ್ತೆಗೆ ಬೀಳಿಸಿ ಅವಾಚ್ಯ ಶಬ್ದಗಳಿಂದ ಬೈದಿದ್ದಾರೆ. ಗುಂಪಿನಲ್ಲಿದ್ದವರು ದೊಣ್ಣೆ ಹಾಗೂ ಕಬ್ಬಿಣದ ರಾಡಿನಿಂದ  ಹೊಡೆದು,  ಕಾಲಿನಿಂದ ತುಳಿದು ರಸ್ತೆಯಲ್ಲಿ ಎಳೆದಾಡಿ ಹಿಂಸಿಸಿದ್ದಾರೆ.

ಅಲ್ಲದೇ ಕಾರನ್ನು ಹುಡಿ ಮಾಡಿ ರೂ 1.50 ಲಕ್ಷ ನಷ್ಟ ಉಂಟು ಮಾಡಿದ್ದಾರೆ. ಜತೆಗೆ ಕಾರಿನಲ್ಲಿದ್ದ 25 ಸಾವಿರ ರೂಪಾಯಿ ಮೌಲ್ಯದ ಬೆಡ್‌ ಶೀಟ್‌ ಅನ್ನು ಬಿಸಾಡಿ ಹಾನಿ ಮಾಡಿರುವುದಾಗಿ ಆರೋಪಿಸಲಾಗಿದೆ. ಗುಂಪು ಹಲ್ಲೆಯಿಂದ ದೂರುದಾರರ ದೇಹವಿಡಿ  ತರಚಿದ,ಗುದ್ದಿದ ಗಾಯಗಳಾಗಿವೆ ಎಂದು ದೂರಲಾಗಿದೆ.

 ವಿಡಿಯೋ ವೈರಲ್‌

ದೂರಿನಲ್ಲಿ ಅಪರಿಚಿತರು ಹಲ್ಲೆ ನಡೆಸಿರುವುದಾಗಿ ತಿಳಿಸಲಾಗಿದ್ದು, ತೋರಿಸಿದರೆ ಗುರುತು ಪತ್ತೆ ಹಚ್ಚುವುದಾಗಿಯೂ ತಿಳಿಸಿದ್ದಾರೆ .  ಅಪರಿಚಿತ ಆರೋಪಿಗಳ ವಿರುದ್ದ ಬೆಳ್ಳಾರೆ ಠಾಣೆಯಲ್ಲಿ ಐಪಿಸಿ ಕಲಂ 143,144,341,504,323,324,427,ಜೊತೆಗೆ 149 ರಂತೆ ಪ್ರಕರಣ ದಾಖಲಾಗಿದೆ.  ಗುಂಪು ಇಬ್ಬರ ಮೇಲೆ ಹಲ್ಲೆ ನಡೆಸುವ ಎರಡು ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ. ರಾಷ್ಟ್ರೀಯ ಚಾನೆಲ್‌ ಒಂದರ ವರದಿಗಾರರು ಟ್ವಿಟರ್‌ ನಲ್ಲಿ ಈ ವಿಡಿಯೋವನ್ನು ಹಂಚಿಕೊಂಡಿದ್ದಾರೆ.

Health Tips :ಮೊಸರು ಸೇವನೆಯಿಂದ ಸಿಗಲಿದೆ ಈ ಆರು ಪ್ರಯೋಜನಗಳು

Ad Widget
Click to comment

Leave a Reply

ಅಂತರ ರಾಜ್ಯ

Arrested-ಕಾಸರಗೋಡು: ಮದುವೆಯ ನೆಪದಲ್ಲಿ ಹತ್ತಾರು ಯುವತಿಯರಿಗೆ ವಂಚನೆ: ಮದುವೆಯಾದ ಮೂರೇ ದಿನಕ್ಕೆ ಚಿನ್ನ, ಹಣದೊಂದಿಗೆ ಪರಾರಿ; ಆರೋಪಿ ಬಿಜು ಆಂಟನಿ ಬಂಧನ

Published

on



Ad Widget

Ad Widget

Ad Widget

Ad Widget

ವೈದ್ಯ, ಎಂಜಿನಿಯರ್ ಎಂದು ಪರಿಚಯಿಸಿಕೊಂಡು ಮದುವೆಯಾಗುವುದಾಗಿ ನಂಬಿಸಿ ಹತ್ತಾರು ಯುವತಿಯರಿಗೆ ವಂಚಿಸಿ ಚಿನ್ನಾಭರಣ ಹಾಗೂ ಹಣದೊಂದಿಗೆ ಪರಾರಿಯಾಗುತ್ತಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಮಂಜೇಶ್ವರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಅತ್ಯಾಚಾರ ಪ್ರಕರಣ ಸೇರಿದಂತೆ ಹಲವು ವಂಚನೆ ಪ್ರಕರಣಗಳಿಗೆ ಸಂಬಂಧಿಸಿದಂತೆ ವಯನಾಡು ಜಿಲ್ಲೆಯ ಮಾನಂತವಾಡಿ, ವೆಳ್ಳರ, ಚೆನ್ನಿಕ್ಕರ ನಿವಾಸಿ ಬಿಜು ಆಂಟನಿ (45) ಬಂಧಿತ ಆರೋಪಿ.

Ad Widget

Ad Widget

Ad Widget

Ad Widget

ಕಾಸರಗೋಡು: ವೈದ್ಯ, ಎಂಜಿನಿಯರ್ ಎಂದು ಪರಿಚಯಿಸಿಕೊಂಡು ಮದುವೆಯಾಗುವುದಾಗಿ ನಂಬಿಸಿ ಹತ್ತಾರು ಯುವತಿಯರಿಗೆ ವಂಚಿಸಿ ಚಿನ್ನಾಭರಣ ಹಾಗೂ ಹಣದೊಂದಿಗೆ ಪರಾರಿಯಾಗುತ್ತಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಮಂಜೇಶ್ವರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಅತ್ಯಾಚಾರ ಪ್ರಕರಣ ಸೇರಿದಂತೆ ಹಲವು ವಂಚನೆ ಪ್ರಕರಣಗಳಿಗೆ ಸಂಬಂಧಿಸಿದಂತೆ ವಯನಾಡು ಜಿಲ್ಲೆಯ ಮಾನಂತವಾಡಿ, ವೆಳ್ಳರ, ಚೆನ್ನಿಕ್ಕರ ನಿವಾಸಿ ಬಿಜು ಆಂಟನಿ (45) ಬಂಧಿತ ಆರೋಪಿ.

Ad Widget

Ad Widget

Ad Widget alt="Ad Widget"/>

Ad Widget

ಚೇರ್ತಲ ಪೊಲೀಸರು ಆರೋಪಿಯನ್ನು ಬಂಧಿಸಿದ್ದು, ಸುಲ್ತಾನ್ ಬತ್ತೇರಿ ಮೂಲದ ಪತ್ನಿ ಮತ್ತು ಮಕ್ಕಳೊಂದಿಗೆ ವಾಸಿಸುತ್ತಿದ್ದ ವೇಳೆ ಆತ ಸಿಕ್ಕಿಬಿದ್ದಿದ್ದಾನೆ ಎಂದು ತಿಳಿದುಬಂದಿದೆ.

Ad Widget

Ad Widget <> Ad Widget

ವೈದ್ಯನೆಂದು ನಂಬಿಸಿ ಅತ್ಯಾಚಾರ ಆರೋಪ
ವೈದ್ಯನೆಂದು ಪರಿಚಯಿಸಿಕೊಂಡು ತಳಿಪರಂಬ ಮೂಲದ ಯುವತಿಯೊಬ್ಬಳನ್ನು ಮಂಜೇಶ್ವರದ ಹೊಸಂಗಡಿಯ ಲಾಡ್ಜ್‌ಗೆ ಕರೆದೊಯ್ದು ಅತ್ಯಾಚಾರ ಎಸಗಿದ ಆರೋಪ ಬಿಜು ಆಂಟನಿ ವಿರುದ್ಧವಿದೆ. ಈ ಸಂಬಂಧ ಮಂಜೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಯುವತಿಯಿಂದ ಮೂರೂವರೆ ಪವನ್ ಚಿನ್ನಾಭರಣವನ್ನೂ ಪಡೆದಿದ್ದಾನೆ ಎಂದು ಆರೋಪಿಸಲಾಗಿದೆ.



Ad Widget

ಮದುವೆಯಾದ ಮೂರೇ ದಿನಕ್ಕೆ ಪರಾರಿ
ಆರೋಪಿ 2020ರಲ್ಲಿ ತನ್ನ ವಂಚನೆಯ ಜಾಲ ಆರಂಭಿಸಿದ್ದ ಎನ್ನಲಾಗಿದೆ. ಚೇರ್ತಲ ಸಮೀಪದ ನಿವಾಸಿ ರಮ್ಯಾ ಎಂಬ ಯುವತಿಯನ್ನು ರಾಜೇಶ್ ಎಂಬ ಹೆಸರಿನಲ್ಲಿ ಮದುವೆಯಾಗಿದ್ದ ಆತ, ಮದುವೆಯಾದ ಮೂರನೇ ದಿನವೇ ₹30 ಸಾವಿರ ನಗದು ಮತ್ತು ಏಳು ಪವನ್ ಚಿನ್ನಾಭರಣ ಪಡೆದುಕೊಂಡು ಪರಾರಿಯಾಗಿದ್ದಾನೆ ಎಂದು ಆರೋಪಿಸಲಾಗಿದೆ.

Ad Widget

Ad Widget

ಈ ಸಂಬಂಧ ರಮ್ಯಾ ನೀಡಿದ ದೂರಿನ ಮೇರೆಗೆ ಚೇರ್ತಲ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದರು. ಆದರೆ, ಆರೋಪಿಯನ್ನು ಪತ್ತೆಹಚ್ಚಲು ಸಾಧ್ಯವಾಗಿರಲಿಲ್ಲ. ಇದೀಗ ಸುಮಾರು ಆರು ವರ್ಷಗಳ ಬಳಿಕ ಅದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜು ಆಂಟನಿಯನ್ನು ಬಂಧಿಸಲಾಗಿದೆ.

ಬೇರೆ ಬೇರೆ ಹೆಸರುಗಳಲ್ಲಿ ವಂಚನೆ
ವೈದ್ಯನೆಂದು ಹೇಳಿಕೊಂಡು ಮದುವೆ ಜಾಹೀರಾತುಗಳನ್ನು ನೀಡುವ ಮೂಲಕ ಮಹಿಳೆಯರನ್ನು ಪರಿಚಯಿಸಿಕೊಳ್ಳುತ್ತಿದ್ದ ಆರೋಪಿ, ಬಳಿಕ ಮದುವೆಯಾಗುವುದಾಗಿ ನಂಬಿಸಿ ಅವರಿಂದ ಚಿನ್ನಾಭರಣ ಹಾಗೂ ಹಣ ಪಡೆದು ಪರಾರಿಯಾಗುತ್ತಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

ವಿವಿಧ ಸ್ಥಳಗಳಲ್ಲಿ ಬೇರೆ ಬೇರೆ ಹೆಸರುಗಳನ್ನು ಬಳಸಿಕೊಂಡು ಮಹಿಳೆಯರಿಗೆ ವಂಚಿಸುತ್ತಿದ್ದ ಎಂಬುದು ಪೊಲೀಸ್ ತನಿಖೆಯಿಂದ ತಿಳಿದುಬಂದಿದೆ. ಆರೋಪಿಯ ವಿರುದ್ಧದ ಪ್ರಕರಣಗಳ ಕುರಿತು ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.

Ad Widget
Continue Reading

ಅಪರಾಧ

Puttur-ಪುತ್ತೂರು: ಅಕ್ರಮ ಗೋ ಸಾಗಾಟ ಪ್ರಕರಣ; ಪರಾರಿಯಾಗಿದ್ದ ಇಬ್ಬರು ವಶಕ್ಕೆ, ಆರೋಪಿ ಶಿವಪ್ರಸಾದ್ ಮನೆ ಮಹಜರು?

Published

on



Ad Widget

Ad Widget

Ad Widget

Ad Widget

ಪಿಕಪ್ ವಾಹನದಲ್ಲಿ 11 ಜಾನುವಾರುಗಳನ್ನು ಹಿಂಸಾತ್ಮಕ ರೀತಿಯಲ್ಲಿ ತುಂಬಿಸಿ, ಅಗತ್ಯ ಪರವಾನಿಗೆ ಇಲ್ಲದೆ ಕೇರಳದ ಕಡೆಗೆ ಸಾಗಿಸುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿ, ಪೊಲೀಸ್ ಕಾರ್ಯಾಚರಣೆ ವೇಳೆ ಪರಾರಿಯಾಗಿದ್ದ ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಜಾನುವಾರುಗಳನ್ನು ಪರವಾನಿಗೆ ಇಲ್ಲದೆ ಮಾರಾಟ ಮಾಡಿದ ಆರೋಪದ ಮೇಲೆ ಬಂಧಿತನಾಗಿರುವ ಆರ್ಯಾಪು ನಿವಾಸಿ ಶಿವಪ್ರಸಾದ್‌ಗೆ ಸೇರಿದ ದೇವಸ್ಯದಲ್ಲಿರುವ ಮನೆಯನ್ನು ಪೊಲೀಸರು ಮಹಜರು ನಡೆಸಲಿದ್ದಾರೆ ಎಂದು ತಿಳಿದುಬಂದಿದೆ.

Ad Widget

Ad Widget

Ad Widget

Ad Widget

ಪುತ್ತೂರು: ಪಿಕಪ್ ವಾಹನದಲ್ಲಿ 11 ಜಾನುವಾರುಗಳನ್ನು ಹಿಂಸಾತ್ಮಕ ರೀತಿಯಲ್ಲಿ ತುಂಬಿಸಿ, ಅಗತ್ಯ ಪರವಾನಿಗೆ ಇಲ್ಲದೆ ಕೇರಳದ ಕಡೆಗೆ ಸಾಗಿಸುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿ, ಪೊಲೀಸ್ ಕಾರ್ಯಾಚರಣೆ ವೇಳೆ ಪರಾರಿಯಾಗಿದ್ದ ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಜಾನುವಾರುಗಳನ್ನು ಪರವಾನಿಗೆ ಇಲ್ಲದೆ ಮಾರಾಟ ಮಾಡಿದ ಆರೋಪದ ಮೇಲೆ ಬಂಧಿತನಾಗಿರುವ ಆರ್ಯಾಪು ನಿವಾಸಿ ಶಿವಪ್ರಸಾದ್‌ಗೆ ಸೇರಿದ ದೇವಸ್ಯದಲ್ಲಿರುವ ಮನೆಯನ್ನು ಪೊಲೀಸರು ಮಹಜರು ನಡೆಸಿದ್ದಾರೆ ಎಂದು ಹೇಳಲಾಗುತ್ತಿದೆ. ಆದರೇ ಪೊಲೀಸ್‌ ಇಲಾಖೆ ಅದನ್ನು ಖಚಿತ ಪಡಿಸಿಲ್ಲ.

Ad Widget

Ad Widget

Ad Widget alt="Ad Widget"/>

Ad Widget

ಬಲ್ನಾಡಿನಲ್ಲಿ 11 ಜಾನುವಾರುಗಳ ರಕ್ಷಣೆ
ಕೇರಳದ ಕಡೆಗೆ ಅಕ್ರಮವಾಗಿ ಜಾನುವಾರುಗಳನ್ನು ಸಾಗಿಸಲಾಗುತ್ತಿದೆ ಎಂಬ ಮಾಹಿತಿ ಮೇರೆಗೆ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯ ಉಪನಿರೀಕ್ಷಕಿ ಸುಷ್ಮಾ ಭಂಡಾರಿ ಅವರು ಸಿಬ್ಬಂದಿಯೊಂದಿಗೆ ಬಲ್ನಾಡು ಗ್ರಾಮದ ಬೆಳೆಯೂರುಕಟ್ಟೆ ಬಳಿ ಕಾರ್ಯಾಚರಣೆ ನಡೆಸಿದ್ದರು.

Ad Widget

Ad Widget <> Ad Widget

ಈ ವೇಳೆ ಪಿಕಪ್ ವಾಹನವನ್ನು ತಡೆದು ಪರಿಶೀಲಿಸಿದಾಗ, ವಾಹನದೊಳಗೆ 11 ಜಾನುವಾರುಗಳನ್ನು ಹಿಂಸಾತ್ಮಕ ರೀತಿಯಲ್ಲಿ ತುಂಬಿಸಿರುವುದು ಪತ್ತೆಯಾಗಿತ್ತು. ಪೊಲೀಸರು ವಾಹನವನ್ನು ತಡೆದ ಸಂದರ್ಭದಲ್ಲಿ ಚಾಲಕ ಹಾಗೂ ಮತ್ತೋರ್ವ ವ್ಯಕ್ತಿ ಸ್ಥಳದಿಂದ ಪರಾರಿಯಾಗಿದ್ದರು.



Ad Widget

ಜಾನುವಾರುಗಳನ್ನು ಅಗತ್ಯ ಪರವಾನಿಗೆ ಇಲ್ಲದೆ ಮಾಂಸಕ್ಕಾಗಿ ಮಾರಾಟ ಮಾಡುವ ಉದ್ದೇಶದಿಂದ ಕೇರಳದ ಕಡೆಗೆ ಸಾಗಿಸಲಾಗುತ್ತಿತ್ತು ಎಂಬ ಆರೋಪದ ಮೇರೆಗೆ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

Ad Widget

Ad Widget

ಪರಾರಿಯಾಗಿದ್ದ ಇಬ್ಬರು ವಶಕ್ಕೆ
ಪ್ರಕರಣದ ತನಿಖೆ ಮುಂದುವರಿಸಿದ ಪೊಲೀಸರು, ಅಗತ್ಯ ಪರವಾನಿಗೆ ಇಲ್ಲದೆ ಜಾನುವಾರುಗಳನ್ನು ಮಾರಾಟ ಮಾಡಿದ ಆರೋಪದ ಮೇಲೆ ಆರ್ಯಾಪು ನಿವಾಸಿ ಶಿವಪ್ರಸಾದ್‌ನನ್ನು ಬಂಧಿಸಿದ್ದರು. ಬಳಿಕ ಪರಾರಿಯಾಗಿದ್ದ ಪಿಕಪ್ ಚಾಲಕ ಹಾಗೂ ಮತ್ತೋರ್ವ ಆರೋಪಿಯ ಪತ್ತೆಗಾಗಿ ಕಾರ್ಯಾಚರಣೆ ಮುಂದುವರಿಸಿದ್ದರು.

ಇದೀಗ ಸರೋಳಿ ನಿವಾಸಿ ಇಸ್ಮಾಯಿಲ್ ಅವರ ಪುತ್ರ ಹಸ್ಪರ್ ಅಲಿಯಾಸ್ ಅಮ್ಮಿ ಹಾಗೂ ಕದಿಲ ಗ್ರಾಮದ ಸತ್ತಿಕಲು ನಿವಾಸಿ ಅಬ್ಬಾಸ್ ಅವರ ಪುತ್ರ ಇಬ್ರಾಹಿಂ ಮಾಡಲಾ ಎಂಬಿಬ್ಬರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಜಾನುವಾರುಗಳನ್ನು ಪರವಾನಿಗೆ ಇಲ್ಲದೆ ಮಾರಾಟ ಮಾಡಿದ ಆರೋಪ ಎದುರಿಸುತ್ತಿರುವ ಶಿವಪ್ರಸಾದ್‌ಗೆ ಸೇರಿದ ಆರ್ಯಾಪು ಗ್ರಾಮದ ದೇವಸ್ಯದಲ್ಲಿರುವ ಮನೆಯನ್ನು ಪೊಲೀಸರು ಮಹಜರು ನಡೆಸಿದ್ದಾರೆ ಎಂದು ಮೂಲಗಳಿಂದ ತಿಳಿದುಬಂದಿದ್ದು ಸೀಜ್‌ ಮಾಡುವ ಅಧಿಕೃತ ಪ್ರಕ್ರಿಯೆ ಸಹಾಯಕ ಆಯುಕ್ತರ ಆದೇಶದ ಬಳಿಕ ನಡೆಯಲಿದೆ ಎಂದು ತಿಳಿದು ಬಂದಿದೆ. ಪ್ರಕರಣದ ಕುರಿತು ಹೆಚ್ಚಿನ ತನಿಖೆ ಮುಂದುವರಿದಿದೆ.

Ad Widget
Continue Reading

ಸ್ಥಳೀಯ

Navoor clinic-ನಾವೂರು ಕ್ಲಿನಿಕ್‌ಗೆ ಬೆಂಕಿ ಹಚ್ಚಿದ ಪ್ರಕರಣ: ಘಟನಾ ಸ್ಥಳಕ್ಕೆ ಎಎಸ್ಪಿ ಭೇಟಿ, ಪರಿಶೀಲನೆ

Published

on



Ad Widget

Ad Widget

Ad Widget

Ad Widget

ಡೀಸೆಲ್ ಸುರಿದು ಬೆಂಕಿ ಹಚ್ಚಲಾಗಿದ್ದ ನಾವೂರು ಆರೋಗ್ಯ ಕ್ಲಿನಿಕ್‌ಗೆ ದಕ್ಷಿಣ ಕನ್ನಡ ಜಿಲ್ಲೆಯ ಹೆಚ್ಚುವರಿ ಪೊಲೀಸ್ ಅಧೀಕ್ಷಕ ಅನಿಲ್ ಕುಮಾರ್ ಎಸ್. ಭೂಮರೆಡ್ಡಿ ಅವರು ಅ. 8ರ ಸಂಜೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

Ad Widget

Ad Widget

Ad Widget

Ad Widget

ನಾವೂರು: ಡೀಸೆಲ್ ಸುರಿದು ಬೆಂಕಿ ಹಚ್ಚಲಾಗಿದ್ದ ನಾವೂರು ಆರೋಗ್ಯ ಕ್ಲಿನಿಕ್‌ಗೆ ದಕ್ಷಿಣ ಕನ್ನಡ ಜಿಲ್ಲೆಯ ಹೆಚ್ಚುವರಿ ಪೊಲೀಸ್ ಅಧೀಕ್ಷಕ ಅನಿಲ್ ಕುಮಾರ್ ಎಸ್. ಭೂಮರೆಡ್ಡಿ ಅವರು ಅ. 8ರ ಸಂಜೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

Ad Widget

Ad Widget

Ad Widget alt="Ad Widget"/>

Ad Widget

ಈ ವೇಳೆ ಘಟನಾ ಸ್ಥಳವನ್ನು ಪರಿಶೀಲಿಸಿದ ಅವರು, ಕ್ಲಿನಿಕ್‌ನ ವೈದ್ಯ ಡಾ. ಪ್ರದೀಪ್ ಅವರಿಂದ ಘಟನೆಯ ಕುರಿತು ಮಾಹಿತಿ ಪಡೆದುಕೊಂಡರು.

Ad Widget

Ad Widget <> Ad Widget

ಪ್ರಕರಣದ ಕುರಿತು ಸಮಗ್ರ ತನಿಖೆ ನಡೆಸಿ, ಕೃತ್ಯದಲ್ಲಿ ಭಾಗಿಯಾದ ಆರೋಪಿಗಳನ್ನು ಶೀಘ್ರ ಪತ್ತೆಹಚ್ಚಿ ನ್ಯಾಯ ಒದಗಿಸುವ ಭರವಸೆಯನ್ನು ಅವರು ನೀಡಿದರು.



Ad Widget

ಈ ಸಂದರ್ಭದಲ್ಲಿ ಬೆಳ್ತಂಗಡಿ ಪೊಲೀಸ್ ಠಾಣೆಯ ಅಧಿಕಾರಿಗಳು ಹಾಗೂ ಸ್ಥಳೀಯ ಗ್ರಾಮಸ್ಥರು ಉಪಸ್ಥಿತರಿದ್ದರು.

Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!

Discover more from Nikhara News | Kannada News Website

Subscribe now to keep reading and get access to the full archive.

Continue reading