ಆರೋಗ್ಯ
ಸಣ್ಣ ಎದೆನೋವು ಕೂಡ ಹೃದಯಾಘಾತದ ಲಕ್ಷಣವಿರಬಹುದು ನಿರ್ಲಕ್ಷಬೇಡ, ಎಚ್ಚರಿಕೆ ವಹಿಸಿ!!! ಈ ಸ್ಟೋರಿ ಓದಿ
ಹೃದಯಾಘಾತ
ಹೃದಯ
Heartbeat
ಹೃದಯ ಬಡಿತ
Heart
ವಿಶ್ವದಲ್ಲಿ ಅತೀ ಹೆಚ್ಚು ಹೃದಯ ಸಮಸ್ಯೆಯಿಂದ ಬಳಲುತ್ತಿರುವ ದೇಶಗಳಲ್ಲಿ ಭಾರತವೂ ಒಂದು. ಹೃದ್ರೋಗಿಗಳ ಸಂಖ್ಯೆಗಳಲ್ಲಿ ಮತ್ತಷ್ಟು ಏರಿಕೆ ಕಾಣುತ್ತಲೇ ಇದೆ. ಹೃದಯಾಘಾತದಿಂದಲೇ ಪ್ರಾಣ ಕಳೆದುಕೊಳ್ಳುತ್ತಿರುವ ಸಂಖ್ಯೆ ಹೆಚ್ಚುತ್ತಿದೆ. ಅನಾರೋಗ್ಯಕರ ಜೀವನಶೈಲಿ ಮತ್ತು ಆಹಾರ ಪದ್ಧತಿಯೇ ಇದಕ್ಕೆ ಪ್ರಮುಖ ಕಾರಣ. ಕೆಲವೊಮ್ಮೆ ಅನುವಂಶೀಯ ವಾಗಿಯೂ ಹೃದಯ ಸಮಸ್ಯೆ ಕಾಣಿಸಿಕೊಳ್ಳಬಹುದು. ತಮ್ಮ ಆರೋಗ್ಯದ ಬಗ್ಗೆ ಜಾಗೃತರಾಗಿರುವ ಜನರು ನಿಯಮಿತ ವ್ಯಾಯಾಮ ಮತ್ತು ಆರೋಗ್ಯಕರ ಆಹಾರ ಕ್ರಮ ಅನುಸರಿಸುತ್ತಾರೆ. ಯಾವುದೇ ವ್ಯಕ್ತಿ ಕೂಡ ಹೃದ್ರೋಗವನ್ನು ಲಘುವಾಗಿ ಪರಿಗಣಿಸಬಾರದು. ಇದರ ಸರಿಯಾದ ಮಾಹಿತಿ ತಿಳಿದುಕೊಳ್ಳುವುದು ಎಚ್ಚರವಹಿಸದಿದ್ದರೆ ನಿಮ್ಮ ಅಮೂಲ್ಯ ಜೀವವನ್ನೇ ಕಳೆದುಕೊಳ್ಳಬೇಕಾಬಹುದು 
ಹೃದಯಾಘಾತಕ್ಕೆ ಕಾರಣವೇನು ?
ಇತ್ತೀಚೆಗಿನ ದಿನಗಳಲ್ಲಿ ನಾವು ಹೆಚ್ಚು ಎಣ್ಣೆಯುಕ್ತ ಆಹಾರ ಸೇವಿಸುತ್ತಿದ್ದೇವೆ ಅದಲ್ಲದೆ ದೈಹಿಕ ಚಟುವಟಿಕೆಗಳಿಗೆ ಗಮನ ಕೊಡುವುದನ್ನು ಕಡಿಮೆ ಮಾಡುತ್ತಿದ್ದೇವೆ. ಹೃದಯದಲ್ಲಿರುವ ಎರಡು ನಾಳಗಳಲ್ಲಿ ಅಪಧಮನಿಯಲ್ಲಿ ಕೆಟ್ಟ ಕೊಲೆಸ್ಟ್ರಾಲ್ ಸಂಗ್ರಹಗೊಳ್ಳಲು ಪ್ರಾರಂಭಿಸುತ್ತದೆ. ಇದರಿಂದ ರಕ್ತನಾಳಗಳಲ್ಲಿ ರಕ್ತ ಸಂಚಾರಕ್ಕೆ ಅಡಚಣೆ ಉಂಟಾಗುತ್ತದೆ. ಇಂತಹ ಪರಿಸ್ಥಿತಿಯಲ್ಲಿ ರಕ್ತವು ಹೃದಯ ತಲುಪಲು ಸಾಕಷ್ಟು ಪ್ರಯತ್ನಗಳನ್ನು ಮಾಡಬೇಕಾಗುತ್ತದೆ. ಇದರಿಂದಾಗಿ ರಕ್ತದೊತ್ತಡವು ಹೆಚ್ಚಾಗುತ್ತದೆ ಬಳಿಕ ಹೃದಯಾಘಾತವಾಗುತ್ತದೆ. ಸರಿಯಾದ ಸಮಯಕ್ಕೆ ಇದರ ಅಪಾಯ ಗುರುತಿಸುವುದು ಹೇಗೆ ಎಂದು ತಿಳಿದುಕೊಳ್ಳಬಹುದು.
ಮೊದಲನೇಯದಾಗಿ ಹೃದಯ ಬಡಿತ
ರಕ್ತನಾಳಗಳಲ್ಲಿ ಅಥವಾ ಹೃದಯದ ಸುತ್ತ ರಕ್ತ ಹೆಪ್ಪುಗಟ್ಟಿದಾಗ ಹೃದಯ ಬಡಿತವು ಹೆಚ್ಚಾಗುತ್ತದೆ. ಸಾಮಾನ್ಯವಾಗಿ ಆರೋಗ್ಯಕರ ವಯಸ್ಕ ಹೃದಯವು ಒಂದು ನಿಮಿಷದಲ್ಲಿ 70 ರಿಂದ 72 ಬಾರಿ ಬಡಿಯುತ್ತದೆ. ಹೀಗಾಗಿ ಇದರ ಬಗ್ಗೆ ನಾವು ಹೆಚ್ಚಿನ ಗಮನ ಕೊಡಬೇಕು. ಆಗ ಮಾತ್ರ ಹೃದಯಾಘಾತದ ಅಪಾಯವನ್ನು ತಪ್ಪಿಸಬಹುದು.
ಎರಡನೇಯದಾಗಿ ನಿಶ್ಯಕ್ತಿ
ಸಾಮಾನ್ಯವಾಗಿ ನಾವು ನಿರಂತರವಾಗಿ ಕೆಲಸ ಮಾಡುವ ಮೂಲಕ ಸುಸ್ತಾಗುತ್ತೇವೆ. ಆದರೆ ಕಡಿಮೆ ಕೆಲಸದ ಹೊರೆಯ ಹೊರತಾಗಿಯೂ ನೀವು ಆಯಾಸ ಅನುಭವಿಸುತ್ತಿದ್ದರೆ ನಿಮ್ಮ ಆರೋಗ್ಯದಲ್ಲಿ ಏನೋ ಆಗಿದೆ ಅಂತಾನೇ ಅರ್ಥ. ಅಥವಾ ಮೇಲೆರುವ ಸಂದರ್ಭದಲ್ಲಿ ( ಮೆಟ್ಟಿಲು ಹತ್ತುವುದು, ಗುಡ್ಡ ಹತ್ತುವುದು ) ಬಲು ಬೇಗನೆ ಆಯಾಸ ಅಥವಾ ಸಣ್ಣಗೆ ಶುರುವಾಗುವ ನೋವಿನ ಅನುಭವ.
ಇದರರ್ಥ ರಕ್ತನಾಳಗಳಲ್ಲಿನ ಅಡಚಣೆಯಿಂದ ರಕ್ತವು ದೇಹದ ಅನೇಕ ಭಾಗಗಳನ್ನು ಸರಿಯಾಗಿ ತಲುಪಲು
ಸಾಧ್ಯವಾಗುವುದಿಲ್ಲವೆಂಬುದು. ಈ ಕಾರಣದಿಂದ ನಿಶ್ಯಕ್ತಿಯಿಂದ ಬಳಲಿ ದೊಡ್ಡ ಸಮಸ್ಯೆ ಎದುರಾಗುತ್ತದೆ. ಈ ರೀತಿಯ ಲಕ್ಷಣಗಳು ನಿಮ್ಮಲ್ಲಿ ಕಂಡುಬಂದಲ್ಲಿ ನಿರ್ಲಕ್ಷ್ಯ ಮಾಡದೆ ತಕ್ಷಣವೇ ನೀವು ವೈದ್ಯರನ್ನು ಭೇಟಿ ಮಾಡಬೇಕು.
ಮೂರನೇಯದಾಗಿ ಎದೆ ನೋವು
ಎದೆ ನೋವಿಗೆ ಹಲವಾರು ಕಾರಣಗಳಿವೆ. ಹೊಟ್ಟೆಯಲ್ಲಿ ಗ್ಯಾಸ್, ಒತ್ತಡದಿಂದ ಅಸ್ವಸ್ಥತೆ ಹೀಗೆ ಅನೇಕ ಕಾರಣಗಳಿಂದ ವ್ಯಕ್ತಿಗೆ ಎದೆನೋವು ಕಾಣಿಸಿಕೊಳ್ಳಬಹುದು. ಆದರೆ ಇದು ಹೃದ್ರೋಗದ ಲಕ್ಷಣವಾಗಿರಬಹುದು. ಎದೆ ನೋವು ಭುಜಗಳು, ತೋಳುಗಳು ಮತ್ತು ಬೆನ್ನಿನವರೆಗೂ ಹರಡಬಹುದು. ನಿಮ್ಮ ದೇಹದಲ್ಲಿ ಈ ರೀತಿಯ ಲಕ್ಷಣಗಳು ಕಂಡುಬಂದಾಗ ಅದನ್ನು ನಿರ್ಲಕ್ಷ ಮಾಡಲೇ ಬಾರದು. ತಕ್ಷಣವೇ ವೈದ್ಯರನ್ಜು ಭೇಟಿಯಾಗಿ ಪರೀಕ್ಷೆಯನ್ನು ಮಾಡಿಸಿ ಏನೆಂಬುವುದನ್ನು ಖಚಿತ ಪಡಿಸಿಕೊಂಡು ಸೂಕ್ತ ಚಿಕಿತ್ಸೆಗೆ ಒಳಗಾಗಬೇಕು.
ರಕ್ತದೊತ್ತಡ ಹಾಗೂ ಸಕ್ಕರೆ ಖಾಯಿಲೆ ಸಮಸ್ಯೆಯಿಂದ ಬಳಲುವವರು ಪ್ರತಿನಿತ್ಯ ವ್ಯಾಯಾಮ ಮಾಡುತ್ತಲೇ ಇರಬೇಕು ಈ ಖಾಯಿಲೆ ಯಿಂದ ಬಳಲುವವರಿಗೂ ಹೃದಯ ಸಮಸ್ಯೆ ಹೆಚ್ಚಾಗಿ ಕಾಡುತ್ತದೆ. ಧೂಮಪಾನ ಚಟವಿರುವರಿಗೂ ಹೃದ್ರೋಗ ಸಮಸ್ಯೆ ಕಾಣಿಸಿಕೊಳ್ಳುತ್ತದೆ. ಆದ್ದರಿಂದ ಧೂಮಪಾನದಿಂದ ದೂರವಿದ್ದಷ್ಟು ಉತ್ತಮ. ಧೂಮಪಾನವು ಸೇದುವವರು ಮಾತ್ರವಲ್ಲದೆ ಇತರರಿಗೂ ಖಾಯಿಲೆಯನ್ನು ತರಿಸುತ್ತದೆ. ಆದಷ್ಟು ಆಹಾರದ ಗುಣಮಟ್ಟವನ್ನು ಪರಿಶೀಲನೆ ನಡೆಸಿ ಸೇವಿಸಬೇಕು. ಎಣ್ಣೆಯುಕ್ತ ಆಹಾರವನ್ನು ಕಡಿಮೆ ಸೇವಿಸಿ. ನಿರಂತರ ಹೃದಯಕ್ಕೆ ಸಂಬಂಧಿಸಿದ ವ್ಯಾಯಾಮ ಅಥವಾ ಯೋಗಾಭ್ಯಾಸವನ್ನು ಮಾಡಿ. ಈಗಾಗಲೇ ಹೃದಯ ಸಮಸ್ಯೆಯಿಂದ ಬಳಲುವವರು ತಮಗೆ ನೀಡಿದ ಔಷಧಗಳ ನಿರಂತರ ಸೇವನೆ (ವೈದ್ಯರ ಸೂಚನೆಯಂತೆ) ನಿರ್ಲಕ್ಷ್ಯ ಮಾಡದೆ ನೆನಪಿನಲ್ಲಿಕೊಂಡು ತೆಗೆದುಕೊಳ್ಳಿ. ನಿಮ್ಮ ಫ್ಯಾಮಿಲಿ ವೈದ್ಯರ ಸಂಪರ್ಕದಲ್ಲಿರಿ ಅವರ ಸಲಹೆ ಸೂಚನೆಗಳನ್ನು ಪಾಲಿಸುತ್ತಿರಿ.
ಆರೋಗ್ಯ
Bantwal-ಆಯುಷ್ಮಾನ್ ಭಾರತ್ ಯೋಜನೆಯಡಿ ಬಂಟ್ವಾಳ ಸರ್ಕಾರಿ ಆಸ್ಪತ್ರೆಯಲ್ಲಿ ಉಚಿತ ಹಿಪ್ ರಿಪ್ಲೇಸ್‌ಮೆಂಟ್ ಶಸ್ತ್ರಚಿಕಿತ್ಸೆ ಯಶಸ್ವಿ
ಕಳೆದ ಎಂಟು ತಿಂಗಳಿನಿಂದ ಎರಡೂ ಸೊಂಟಗಳ ತೀವ್ರ ನೋವಿನಿಂದ ಬಳಲುತ್ತಿದ್ದ 41 ವರ್ಷದ ವ್ಯಕ್ತಿಯೊಬ್ಬರಿಗೆ ಬಂಟ್ವಾಳ ತಾಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ ಆಯುಷ್ಮಾನ್ ಭಾರತ್–ಆರೋಗ್ಯ ಕರ್ನಾಟಕ ಯೋಜನೆಯಡಿ ಸಂಪೂರ್ಣ ಉಚಿತವಾಗಿ ಯಶಸ್ವಿ ಹಿಪ್ ರಿಪ್ಲೇಸ್‌ಮೆಂಟ್ ಶಸ್ತ್ರಚಿಕಿತ್ಸೆ ನಡೆಸಲಾಗಿದೆ.
ಬಂಟ್ವಾಳ: ಕಳೆದ ಎಂಟು ತಿಂಗಳಿನಿಂದ ಎರಡೂ ಸೊಂಟಗಳ ತೀವ್ರ ನೋವಿನಿಂದ ಬಳಲುತ್ತಿದ್ದ 41 ವರ್ಷದ ವ್ಯಕ್ತಿಯೊಬ್ಬರಿಗೆ ಬಂಟ್ವಾಳ ತಾಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ ಆಯುಷ್ಮಾನ್ ಭಾರತ್–ಆರೋಗ್ಯ ಕರ್ನಾಟಕ ಯೋಜನೆಯಡಿ ಸಂಪೂರ್ಣ ಉಚಿತವಾಗಿ ಯಶಸ್ವಿ ಶಸ್ತ್ರಚಿಕಿತ್ಸೆ ನಡೆಸಲಾಗಿದೆ.
ಬಂಟ್ವಾಳ ತಾಲೂಕಿನ ನಿವಾಸಿಯಾಗಿರುವ ಈ ವ್ಯಕ್ತಿಗೆ ‘ಬೈಲ್ಯಾಟರಲ್ ಹಿಪ್ ಅವಾಸ್ಕುಲರ್ ನೆಕ್ರೋಸಿಸ್’ (Bilateral Hip Avascular Necrosis) ಎಂಬ ಕಾಯಿಲೆ ಇರುವುದು ವೈದ್ಯಕೀಯ ತಪಾಸಣೆಯಲ್ಲಿ ಪತ್ತೆಯಾಗಿತ್ತು. ಇದರಿಂದ ಎರಡೂ ಸೊಂಟದ ಮೂಳೆಗಳು ಹಾನಿಗೊಳಗಾಗಿದ್ದು, ಬಲಭಾಗಕ್ಕಿಂತ ಎಡಭಾಗದ ಮೂಳೆಯ ಸ್ಥಿತಿ ಗಂಭೀರವಾಗಿತ್ತು.
ಈ ಹಿಂದೆ ಮಂಗಳೂರಿನ ವೆನ್ಲಾಕ್ ಜಿಲ್ಲಾ ಆಸ್ಪತ್ರೆ ಸೇರಿದಂತೆ ವಿವಿಧ ಖಾಸಗಿ ಆಸ್ಪತ್ರೆಗಳು ಹಾಗೂ ಮೂಳೆ ತಜ್ಞರನ್ನು ಸಂಪರ್ಕಿಸಿದ್ದ ರೋಗಿಗೆ ಶಸ್ತ್ರಚಿಕಿತ್ಸೆಯೊಂದೇ ಶಾಶ್ವತ ಪರಿಹಾರ ಎಂದು ವೈದ್ಯರು ಸಲಹೆ ನೀಡಿದ್ದರು. ಬಳಿಕ ಸ್ಥಳೀಯರ ಸಹಕಾರದೊಂದಿಗೆ ಹೆಚ್ಚಿನ ಚಿಕಿತ್ಸೆಗಾಗಿ ಬಂಟ್ವಾಳ ತಾಲೂಕು ಸಾರ್ವಜನಿಕ ಆಸ್ಪತ್ರೆಗೆ ದಾಖಲಾಗಿದ್ದರು.
ರೋಗಿಯ ಆರ್ಥಿಕ ಹಾಗೂ ಆರೋಗ್ಯದ ಸಂಕಷ್ಟವನ್ನು ಅರಿತ ಆಸ್ಪತ್ರೆಯ ವೈದ್ಯಕೀಯ ತಂಡವು ಆಯುಷ್ಮಾನ್ ಭಾರತ್–ಆರೋಗ್ಯ ಕರ್ನಾಟಕ ಯೋಜನೆಯಡಿ ಉಚಿತವಾಗಿ ಶಸ್ತ್ರಚಿಕಿತ್ಸೆ ನಡೆಸಲು ನಿರ್ಧರಿಸಿತು. ನವೆಂಬರ್ 4ರಂದು ಯೋಜನೆಯಡಿ ಅನುಮೋದನೆಗಾಗಿ ಅರ್ಜಿ ಸಲ್ಲಿಸಲಾಗಿದ್ದು, ನವೆಂಬರ್ 11ರಂದು ಅನುಮತಿ ದೊರೆತಿತ್ತು. ಬಳಿಕ ನವೆಂಬರ್ 17ರಂದು ವೈದ್ಯರ ತಂಡ ಯಶಸ್ವಿಯಾಗಿ ಶಸ್ತ್ರಚಿಕಿತ್ಸೆ ಪೂರ್ಣಗೊಳಿಸಿದೆ.
ಜಿಲ್ಲಾ ಆರೋಗ್ಯಾಧಿಕಾರಿ ಡಾ. ತಿಮ್ಮಯ್ಯ ಅವರ ಮಾರ್ಗದರ್ಶನದಲ್ಲಿ ಮಾರ್ಗದರ್ಶಕ ಶಸ್ತ್ರಚಿಕಿತ್ಸಕ ಡಾ. ಅಭಿಷೇಕ್ ಶೆಟ್ಟಿ ಹಾಗೂ ಬಂಟ್ವಾಳ ಸರ್ಕಾರಿ ಆಸ್ಪತ್ರೆಯ ಮೂಳೆ ತಜ್ಞ ಡಾ. ಚೇತನ್‌ರಾಜ್ ಅವರ ನೇತೃತ್ವದಲ್ಲಿ ಶಸ್ತ್ರಚಿಕಿತ್ಸೆ ನೆರವೇರಿತು.
ಅರವಳಿಕೆ ತಜ್ಞರಾದ ಡಾ. ವಿದ್ಯಾಸಾಗರ್ ಹಾಗೂ ಡಾ. ತುಷಾರ್ ಕೆ., ಶಸ್ತ್ರಚಿಕಿತ್ಸಾ ವಿಭಾಗದ ಶುಶ್ರೂಷಾಧಿಕಾರಿಗಳಾದ ವಾಣಿ, ಪುಷ್ಪಾ, ಕೀರ್ತಿಶಾಲಿನಿ, ತಂತ್ರಜ್ಞರಾದ ಧನ್ಯಾ ಮತ್ತು ಶಶಿಕಲಾ ಹಾಗೂ ಡಿ-ದರ್ಜೆ ನೌಕರರಾದ ಸವಿತಾ, ಜಲಜಾ ಮತ್ತು ಚಂದ್ರಾವತಿ ಅವರು ಶಸ್ತ್ರಚಿಕಿತ್ಸೆಗೆ ಸಹಕರಿಸಿದರು.
ಸರ್ಕಾರಿ ಆಸ್ಪತ್ರೆಯಲ್ಲೇ ಯಾವುದೇ ವೆಚ್ಚವಿಲ್ಲದೆ ಗುಣಮಟ್ಟದ ಚಿಕಿತ್ಸೆ ದೊರೆತಿರುವುದಕ್ಕೆ ರೋಗಿಯ ಕುಟುಂಬಸ್ಥರು ಹಾಗೂ ಸಾರ್ವಜನಿಕರು ವೈದ್ಯಕೀಯ ತಂಡಕ್ಕೆ ಕೃತಜ್ಞತೆ ಸಲ್ಲಿಸಿದ್ದಾರೆ ಎಂದು ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ. ದಿನೇಶ್ ಕಾಮತ್ ತಿಳಿಸಿದ್ದಾರೆ.
ಆರೋಗ್ಯ
Puttur-ಪುತ್ತೂರು: ಸಿಟಿ ಆಸ್ಪತ್ರೆಯಲ್ಲಿ ಉಚಿತ ಮೂಳೆ ಖನಿಜ ಸಾಂದ್ರತೆ (BMD) ಚಿಕಿತ್ಸಾ ಶಿಬಿರ
ಪುತ್ತೂರು ಸಿಟಿ ಆಸ್ಪತ್ರೆ ಚಾರಿಟೇಬಲ್ ಟ್ರಸ್ಟ್ ಹಾಗೂ ಇನ್ನರ್ ವೀಲ್ ಕ್ಲಬ್ ಪುತ್ತೂರು ಇವರ ಸಹಯೋಗದಲ್ಲಿ ಇಂದು (ನ.19) ಬೆಳಿಗ್ಗೆ 9.30ರಿಂದ ಮಧ್ಯಾಹ್ನ 2.30ರವರೆಗೆ ಉಚಿತ ಮೂಳೆ ಖನಿಜ ಸಾಂದ್ರತೆ (BMD) ಚಿಕಿತ್ಸಾ ಶಿಬಿರವು ನಡೆಯಿತು. ಪುತ್ತೂರು ಸಿಟಿ ಆಸ್ಪತ್ರೆಯಲ್ಲಿ ಶಿಬಿರವನ್ನು ಏರ್ಪಡಿಸಲಾಗಿತ್ತು.
ಪುತ್ತೂರು: ಪುತ್ತೂರು ಸಿಟಿ ಆಸ್ಪತ್ರೆ ಚಾರಿಟೇಬಲ್ ಟ್ರಸ್ಟ್ ಹಾಗೂ ಇನ್ನರ್ ವೀಲ್ ಕ್ಲಬ್ ಪುತ್ತೂರು ಇವರ ಸಹಯೋಗದಲ್ಲಿ ಇಂದು (ನ.19) ಬೆಳಿಗ್ಗೆ 9.30ರಿಂದ ಮಧ್ಯಾಹ್ನ 2.30ರವರೆಗೆ ಉಚಿತ ಮೂಳೆ ಖನಿಜ ಸಾಂದ್ರತೆ (BMD) ಚಿಕಿತ್ಸಾ ಶಿಬಿರವು ನಡೆಯಿತು. ಪುತ್ತೂರು ಸಿಟಿ ಆಸ್ಪತ್ರೆಯಲ್ಲಿ ಶಿಬಿರವನ್ನು ಏರ್ಪಡಿಸಲಾಗಿತ್ತು.
ಬೆನ್ನು ನೋವು, ಮೊಣಕಾಲು ನೋವು, ಸೊಂಟ ನೋವು ಹಾಗೂ ಸ್ನಾಯು ನೋವು ಮುಂತಾದ ಸಮಸ್ಯೆಗಳು ಮೂಳೆ ಸವೆತ ಅಥವಾ ಮುಂದಿನ ದಿನಗಳಲ್ಲಿ ಮೂಳೆ ಮುರಿತಕ್ಕೆ ಕಾರಣವಾಗುವ ಸಾಧ್ಯತೆಯಿದೆ. ಇಂತಹ ಲಕ್ಷಣಗಳನ್ನು ನಿರ್ಲಕ್ಷಿಸದೆ ಆರಂಭದಲ್ಲೇ ತಪಾಸಣೆ ಮಾಡಿಸಿಕೊಂಡು ಸೂಕ್ತ ಚಿಕಿತ್ಸೆ ಪಡೆಯುವುದು ಅಗತ್ಯ. ಈ ನಿಟ್ಟಿನಲ್ಲಿ ಸಾರ್ವಜನಿಕರಿಗೆ ಅನುಕೂಲವಾಗುವಂತೆ ಉಚಿತ BMD ಶಿಬಿರವನ್ನು ಆಯೋಜಿಸಲಾಗಿತ್ತು. ಆರೋಗ್ಯ ಸೇವಾ ವಿಭಾಗದ ಇಂಡ್‌ಕೆಮಿ ಹೆಲ್ತ್ ಸ್ಪೆಷಾಲಿಟಿ ಪ್ರೈವೇಟ್ ಲಿಮಿಟೆಡ್ ಪ್ರಾಯೋಜಕತ್ವದಲ್ಲಿ ಶಿಬಿರ ನಡೆಯಿತು.
ಶಿಬಿರದಲ್ಲಿ ಮೂಳೆ ತಜ್ಞರಾದ ಡಾ. ಭಾಸ್ಕರ್ ಎಸ್. (D’Ortho), ಆಡಳಿತ ನಿರ್ದೇಶಕರು, ಪುತ್ತೂರು ಸಿಟಿ ಆಸ್ಪತ್ರೆ ಇವರು ತಪಾಸಣೆ ಹಾಗೂ ಸಲಹೆ ನೀಡಿದರು.
ಇನ್ನರ್ ವೀಲ್ ಕ್ಲಬ್ ನ ನಿರ್ದೇಶಕಿ ಮಂಜುಳ ಭಾಸ್ಕರ್, ಅಧ್ಯಕ್ಷೆ ಮನೋರಮಾ ಸೂರ್ಯ, ಖಜಾಂಜಿ ಕವಿತಾ ಕೊಳತ್ತಾಯ, ಕಾರ್ಯದರ್ಶಿ ಶ್ರುತಿ ಎಸ್. ಬಂಗೇರ ಶಿಬಿರದಲ್ಲಿ ಉಪಸ್ಥಿತರಿದ್ದರು.
ಆರೋಗ್ಯ
‘Ritu Taare’ scheme-35 ವರ್ಷ ಮೇಲ್ಪಟ್ಟ ಮಹಿಳೆಯರ ಆರೋಗ್ಯಕ್ಕೆ ‘ಋತು ತಾರೆ’ ಯೋಜನೆ; ದ.ಕ.ದಲ್ಲಿ ಮೂರು ತಿಂಗಳ ಪ್ರಾಯೋಗಿಕ ಅನುಷ್ಠಾನ..! ನಟಿ ರಮ್ಯಾ ರಾಯಭಾರಿ
35 ವರ್ಷ ಮೇಲ್ಪಟ್ಟ ಮಹಿಳೆಯರ ಆರೋಗ್ಯ ಮತ್ತು ಆರೈಕೆಗೆ ವಿಶೇಷ ಆದ್ಯತೆ ನೀಡುವ ಉದ್ದೇಶದಿಂದ ರಾಜ್ಯ ಸರಕಾರ ‘ಋತು ತಾರೆ’ ಎಂಬ ಮಧ್ಯವಯಸ್ಕ ಮಹಿಳೆಯರ ಆರೋಗ್ಯ ಮತ್ತು ಮೆನೋಪಾಸ್ ಕಾರ್ಯಕ್ರಮವನ್ನು ಜಾರಿಗೆ ತಂದಿದೆ. ಈ ಕಾರ್ಯಕ್ರಮದ ರಾಯಭಾರಿಯಾಗಿ ಚಿತ್ರನಟಿ ರಮ್ಯಾ ಕಾರ್ಯನಿರ್ವಹಿಸಲಿದ್ದಾರೆ.
ಬೆಂಗಳೂರು: 35 ವರ್ಷ ಮೇಲ್ಪಟ್ಟ ಮಹಿಳೆಯರ ಆರೋಗ್ಯ ಮತ್ತು ಆರೈಕೆಗೆ ವಿಶೇಷ ಆದ್ಯತೆ ನೀಡುವ ಉದ್ದೇಶದಿಂದ ರಾಜ್ಯ ಸರಕಾರ ‘ಋತು ತಾರೆ’ ಎಂಬ ಮಧ್ಯವಯಸ್ಕ ಮಹಿಳೆಯರ ಆರೋಗ್ಯ ಮತ್ತು ಮೆನೋಪಾಸ್ ಕಾರ್ಯಕ್ರಮವನ್ನು ಜಾರಿಗೆ ತಂದಿದೆ.
ಈ ಕುರಿತು ಆರೋಗ್ಯ ಇಲಾಖೆ ಆದೇಶ ಹೊರಡಿಸಿದ್ದು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮೂರು ತಿಂಗಳ ಕಾಲ ಪ್ರಾಯೋಗಿಕವಾಗಿ ಕಾರ್ಯಕ್ರಮ ಅನುಷ್ಠಾನಗೊಳ್ಳಲಿದೆ. ಈ ಹಂತದ ಅನುಭವದ ಆಧಾರದಲ್ಲಿ ಬಳಿಕ ರಾಜ್ಯದಾದ್ಯಂತ ವಿಸ್ತರಿಸಲು ಸರಕಾರ ಉದ್ದೇಶಿಸಿದೆ.
ಮಹಿಳೆಯರ ಆರೋಗ್ಯವು ಕೇವಲ ತಾಯ್ತನಕ್ಕೆ ಸೀಮಿತವಾಗಿಲ್ಲ. ಮೆನೋಪಾಸ್ ಹಂತದಲ್ಲಿ ನಿದ್ರಾಹೀನತೆ, ದೇಹದಲ್ಲಿ ಏಕಾಏಕಿ ಬಿಸಿಯ ಅನುಭವ, ಕೀಲು ನೋವು, ಮೂಳೆಗಳ ದುರ್ಬಲತೆ, ಆತಂಕ ಹಾಗೂ ಮಾನಸಿಕ ಏರುಪೇರು ಸೇರಿದಂತೆ ಹಲವು ಸಮಸ್ಯೆಗಳು ಕಾಣಿಸಿಕೊಳ್ಳಬಹುದು. ಇವುಗಳನ್ನು ವಯಸ್ಸಿನ ಸಹಜ ಬದಲಾವಣೆ ಎಂದು ನಿರ್ಲಕ್ಷಿಸದೆ ಸೂಕ್ತ ತಪಾಸಣೆ ಮತ್ತು ಚಿಕಿತ್ಸೆ ಪಡೆಯುವುದು ಅಗತ್ಯ ಎಂದು ಸರಕಾರ ತಿಳಿಸಿದೆ.
‘ಋತು ತಾರೆ’ ಯೋಜನೆಯಡಿ ಮಹಿಳೆಯರಿಗಾಗಿ ಪ್ರತ್ಯೇಕ ಕ್ಲಿನಿಕ್‌ಗಳನ್ನು ತೆರೆಯಲಾಗುತ್ತದೆ. ಇಲ್ಲಿ ಸಮಗ್ರ ಆರೋಗ್ಯ ತಪಾಸಣೆ, ಮಾನಸಿಕ ಆರೋಗ್ಯ ಮತ್ತು ಪೌಷ್ಟಿಕ ಆಹಾರದ ಕುರಿತು ಮಾರ್ಗದರ್ಶನ ನೀಡಲಾಗುತ್ತದೆ. ಅಗತ್ಯವಿರುವವರಿಗೆ ತಜ್ಞ ವೈದ್ಯರಿಂದ ಚಿಕಿತ್ಸೆ ಒದಗಿಸುವುದರ ಜೊತೆಗೆ, ಆರೋಗ್ಯದ ವಿವರಗಳನ್ನು ದಾಖಲಿಸಲು ‘ಮಿಡ್-ಲೈಫ್ ಹೆಲ್ತ್ ಕಾರ್ಡ್’ ವಿತರಿಸಲಾಗುತ್ತದೆ.
ಈ ಕಾರ್ಯಕ್ರಮದ ರಾಯಭಾರಿಯಾಗಿ ಚಿತ್ರನಟಿ ರಮ್ಯಾ ಕಾರ್ಯನಿರ್ವಹಿಸಲಿದ್ದಾರೆ. ಮೆನೋಪಾಸ್ ಹಾಗೂ ಮಧ್ಯವಯಸ್ಕ ಮಹಿಳೆಯರ ಆರೋಗ್ಯದ ಕುರಿತು ಜಾಗೃತಿ ಮೂಡಿಸಿ, ಕಾರ್ಯಕ್ರಮದ ಸಂದೇಶವನ್ನು ರಾಜ್ಯದ ಮೂಲೆಮೂಲೆಗೂ ತಲುಪಿಸಲು ಅವರು ಸಹಕರಿಸಲಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮೂರು ತಿಂಗಳ ಪ್ರಾಯೋಗಿಕ ಅನುಷ್ಠಾನ ಪೂರ್ಣಗೊಂಡ ಬಳಿಕ ಯೋಜನೆಯನ್ನು ರಾಜ್ಯಾದ್ಯಂತ ವಿಸ್ತರಿಸಲಾಗುವುದು. ಮಹಿಳೆಯರ ಬದುಕಿನ ಪ್ರತಿಯೊಂದು ಹಂತದಲ್ಲೂ ಉತ್ತಮ ಆರೋಗ್ಯ ಸೇವೆ, ಸೂಕ್ತ ಆರೈಕೆ ಮತ್ತು ಘನತೆಯ ಬದುಕು ದೊರೆಯಬೇಕು ಎಂಬ ಉದ್ದೇಶದಿಂದ ಈ ಕಾರ್ಯಕ್ರಮ ರೂಪಿಸಲಾಗಿದೆ ಎಂದು ಸರಕಾರ ತಿಳಿಸಿದೆ.
-
ಅಪರಾಧ14 hours agoMangalore-Big Breaking:ಮಂಗಳೂರು: ಕದ್ರಿ ಯುದ್ಧ ಸ್ಮಾರಕದಲ್ಲಿರುವ ಟಿ-55 ಟ್ಯಾಂಕ್ ಮೇಲೆ ಹತ್ತಿ ಯುವಕರ ಹುಚ್ಚಾಟ; ವಿಡಿಯೋ ವೈರಲ್, ಸಾರ್ವಜನಿಕರ ಆಕ್ರೋಶ
-
ಬಿಗ್ ನ್ಯೂಸ್11 hours agoBantwal-ಬಂಟ್ವಾಳ: ತಂದೆ ಗದರಿಸಿದ್ದಕ್ಕೆ ಮನೆ ಬಿಟ್ಟ ಬ್ಯಾಂಕ್ ಉದ್ಯೋಗಿ ಯುವತಿ ನಾಪತ್ತೆ..!
-
ಸ್ಥಳೀಯ12 hours agoBank-ಚಿನ್ನದ ಬೆಲೆ ಕುಸಿತದ ಎಫೆಕ್ಟ್: ಗೋಲ್ಡ್ ಲೋನ್ ಪಡೆದವರಿಗೆ ಬ್ಯಾಂಕ್ಗಳಿಂದ ಶಾಕ್; ಒಡವೆ ಹರಾಜಿನ ಎಚ್ಚರಿಕೆ..!
-
ಮಂಗಳೂರು12 hours agoPugasarum-ಅಡಕೆ, ವೀಳ್ಯದೆಲೆಯ ‘ಪೂಗಸಾರಂ’ನಿಂದ ಕ್ಯಾನ್ಸರ್ ಬೆಳವಣಿಗೆಗೆ ಕಡಿವಾಣ? ಮಂಗಳೂರಿನ ವಿಜ್ಞಾನಿಗಳ ಸಂಶೋಧನೆಯಲ್ಲಿ ಮಹತ್ವದ ಅಂಶ ಪತ್ತೆ..!
-
ನಿಧನ ವಾರ್ತೆ8 hours agoBabu Gowda-ಧರ್ಮಸ್ಥಳ: ದಿ. ಸೌಜನ್ಯ ಅಜ್ಜ ಪಾಂಗಳ ನಿವಾಸಿ ಬಾಬು ಗೌಡ ನಿಧನ
-
ಅಂತರ ರಾಜ್ಯ13 hours agoFIR-ಮದುವೆಯಾಗುವ ಭರವಸೆ ನೀಡಿ ದೈಹಿಕ ಸಂಪರ್ಕ: ಬಿಗ್ ಬಾಸ್ ವಿಜೇತ ಮುತ್ತುಕುಮಾರನ್ ವಿರುದ್ಧ ಇನ್ಫ್ಲುಯೆನ್ಸರ್ ವಹಿದಾ ದೂರು – ಎಫ್ಐಆರ್ ದಾಖಲು..!
-
ಮಂಗಳೂರು13 hours agoMangalore-ಮಂಗಳೂರು: ರಾತ್ರಿ 11:45ರಿಂದ ಬೆಳಗ್ಗೆ 5:30ರವರೆಗೆ ವ್ಯಾಪಾರ ನಿರ್ಬಂಧ; ಪೊಲೀಸ್ ಆಯುಕ್ತರಿಂದ ಹೊಸ ಆದೇಶ
-
ಸ್ಥಳೀಯ13 hours agoSubrahmanya-ಸುಬ್ರಹ್ಮಣ್ಯ: ಮನೆಗೆ ರಾತ್ರಿ ನಕ್ಸಲರ ಭೇಟಿ ಪ್ರಕರಣ: ಮಾಜಿ ನಕ್ಸಲರಾದ ರವೀಂದ್ರ, ಸುಂದರಿ, ದಿಶಾರಿಂದ ಸ್ಥಳ ಮಹಜರು















