ಚಿನ್ನ-ಬೆಳ್ಳಿ ದರ
Gold Rate Today : ಚಿನ್ನ ಹಾಗೂ ಬೆಳ್ಳಿ ದರದಲ್ಲಿ ಭಾರೀ ಇಳಿಕೆ – ದೀಪಾವಳಿ ಹಬ್ಬಕ್ಕೂ ಮುಂಚೆ ಚಿನಿವಾರ ಪೇಟೆಯಲ್ಲಿ ಹೆಚ್ಚಿದ ಉತ್ಸಾಹ
ಬೆಂಗಳೂರು Bangalore ಅ 22: ದೀಪಾವಳಿ ಹಬ್ಬದ ಸಡಗರ ಸಮೀಪಿಸುತ್ತಿರುವ ಮಧ್ಯೆಯೆ, ಚಿನಿವಾರ ಪೇಟೆಯಲ್ಲಿ ಶನಿವಾರ ಬೆಳಿಗ್ಗೆ ಗೋಲ್ಡ್ ರೇಟ್ ನಲ್ಲಿ ಭಾರೀ ಇಳಿಕೆ ಕಂಡು ಬಂದಿದೆ. ಮುಂದಿನ ವಾರ ದೀಪಾವಳಿ ಹಬ್ಬ ಆರಂಭಗೊಳ್ಳಲಿದ್ದು ಈ ವೇಳೆ ಚಿನ್ನಕ್ಕೆ ಭಾರೀ ಬೇಡಿಕೆ ಕಂಡು ಬರುವ ನಿರೀಕ್ಷೆ ಇದೆ.
ಚಿನ್ನದ ದರ 10 ಗ್ರಾಂ ಗೆ ₹ 372ರಷ್ಟು ಇಳಿಕೆ ಕಂಡು ಬಂದಿದೆ. ಹಾಗೂ ಬೆಳ್ಳಿ ಧಾರಣೆಯಲ್ಲಿ ಕೆ.ಜಿಗೆ ₹ 799ರಷ್ಟು ಇಳಿಕೆಯಾಗಿದೆ. ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಚಿನ್ನದ ದರ ಇಳಿಕೆ ಆಗಿರುವುದರಿಂದ ದೇಶದ ಮಾರುಕಟ್ಟೆಯಲ್ಲಿ ಅದರ ಪರಿಣಾಮ ಕಂಡುಬಂದಿತು ಎಂದು ಎಚ್ಡಿಎಫ್ಸಿ ಸೆಕ್ಯುರಿಟೀಸ್ ತಿಳಿಸಿದೆ.
(Gold Rate Today) ಇಂದು ಅಕ್ಟೋಬರ್ 22, ಶನಿವಾರ ಬೆಳಗಿನ ವೇಳೆಗೆ ದೇಶದಲ್ಲಿ 1 ಗ್ರಾಂ (24 ಕ್ಯಾರಟ್) ಬಂಗಾರದ ಬೆಲೆ ₹ 5,045 ದಾಖಲಾಗಿದೆ. ಬೆಂಗಳೂರಿನಲ್ಲಿ 1 ಗ್ರಾಂ (24 ಕ್ಯಾರಟ್) ಬಂಗಾರಕ್ಕೆ ₹ 5,050 ನಿಗದಿಯಾಗಿದೆ.
ದೈನಂದಿನ ಬೆಲೆ ಪ್ರಕ್ರಿಯೆಯಲ್ಲಿ ಇಂದು ಬೆಳಗಿನ ವೇಳೆಗೆ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ 10 ಗ್ರಾಂ (22 ಕ್ಯಾರಟ್) ಚಿನ್ನದ ಬೆಲೆಗೆ ₹ 46,300 ನಿಗದಿಯಾಗಿದೆ. ಬೆಂಗಳೂರಿನಲ್ಲಿ 10 ಗ್ರಾಂ ಅಪರಂಜಿ ಚಿನ್ನದ (24 ಕ್ಯಾರಟ್) ಬೆಲೆ 50,500 ರೂಪಾಯಿ ದಾಖಲಾಗಿದೆ.
ಪ್ರಮುಖ ನಗರಗಳಲ್ಲಿ ಇಂದು 10 ಗ್ರಾಂ ಚಿನ್ನದ ಬೆಲೆ ಹೀಗಿದೆ:
ಬೆಂಗಳೂರು: ₹ 46,300 (22 ಕ್ಯಾರಟ್) – ₹ 50,500 (24 ಕ್ಯಾರಟ್)
ಚೆನ್ನೈ: ₹ 46,650 (22 ಕ್ಯಾರಟ್) – ₹ 50,900 (24 ಕ್ಯಾರಟ್)
ದಿಲ್ಲಿ: ₹ 46,350 (22 ಕ್ಯಾರಟ್) – ₹ 50,600 (24 ಕ್ಯಾರಟ್)
ಹೈದರಾಬಾದ್: ₹ 46,250 (22 ಕ್ಯಾರಟ್) – ₹ 50,450 (24 ಕ್ಯಾರಟ್)
ಕೋಲ್ಕತಾ: ₹46,250 (22 ಕ್ಯಾರಟ್) – ₹50,450 (24 ಕ್ಯಾರಟ್)
ಮಂಗಳೂರು: ₹46,300 (22 ಕ್ಯಾರಟ್) – ₹50,500 (24 ಕ್ಯಾರಟ್)
ಮುಂಬಯಿ: ₹46,250 (22 ಕ್ಯಾರಟ್) – ₹50,450 (24 ಕ್ಯಾರಟ್)
ಮೈಸೂರು: ₹46,300 (22 ಕ್ಯಾರಟ್) – ₹50,500 (24 ಕ್ಯಾರಟ್)
ಬೆಳ್ಳಿ ದರ (Silver Rate)
ಇನ್ನು ದೇಶದಲ್ಲಿ ಬೆಳ್ಳಿ ಬೆಲೆ ಒಂದು ಕೆಜಿಗೆ ₹ 56,150 ರೂಪಾಯಿ ದಾಖಲಾಗಿದ್ದು, ತಟಸ್ಥತೆ ಕಂಡುಬಂದಿದೆ. ಬೆಂಗಳೂರಿನಲ್ಲಿ ಒಂದು ಕೆಜಿ ಬೆಳ್ಳಿ ಬೆಲೆ ₹61,500 ಇದ್ದು, ಏರಿಕೆ ಕಂಡುಬಂದಿದೆ. ದೇಶಾದ್ಯಂತ ಅನೇಕ ಕಡೆ ಬೆಳ್ಳಿ ಬೆಲೆಯಲ್ಲಿ ಏರಿಕೆ ಕಂಡು ಕೆಲವೆಡೆ ಇಳಿಕೆ ಕಂಡು ಬಂದಿದೆ. ಚೆನ್ನೈ, ಹೈದರಾಬಾದ್, ಕೇರಳ, ಕೊಯಮತ್ತೂರು, ಮೈಸೂರು, ಮಂಗಳೂರಿನಲ್ಲೂ ₹61,500 ನಿಗದಿಯಾಗಿದೆ.
ಒಟ್ಟಾರೆ ಇಂದು ಬೆಳಗ್ಗಿನ ವೇಳೆಗೆ ದೇಶದ ಪ್ರಮುಖ ಮಹಾನಗರಗಳಲ್ಲಿ ಹಳದಿ ಲೋಹದ ಬೆಲೆಯಲ್ಲಿ ಇಳಿಕೆ ಕಂಡುಬಂದಿದ್ದರೆ, ಬೆಳ್ಳಿ ಬೆಲೆಯಲ್ಲೂ ಇಳಿಕೆ ಕಾಣಿಸಿದೆ.
ಚಿನ್ನ-ಬೆಳ್ಳಿ ದರ
Gold Rate Today-ಆಭರಣಪ್ರಿಯರಿಗೆ ಗುಡ್ನ್ಯೂಸ್: ಚಿನ್ನದ ಬೆಲೆಯಲ್ಲಿ ಭಾರೀ ಕುಸಿತ: 12 ಸಾವಿರ ರೂ. ಗಡಿಯೊಳಗೆ ಬಂದ ಆಭರಣ ಚಿನ್ನ..!
ಚಿನ್ನ ಹಾಗೂ ಬೆಳ್ಳಿ ಬೆಲೆಯಲ್ಲಿ ಇಳಿಕೆಯ ಪ್ರವೃತ್ತಿ ಮುಂದುವರಿದಿದ್ದು, ಆಭರಣ ಖರೀದಿದಾರರಿಗೆ ತುಸು ನೆಮ್ಮದಿ ತಂದಿದೆ. ನಿನ್ನೆ ಪ್ರತಿ ಗ್ರಾಂ ಚಿನ್ನದ ಬೆಲೆ 255 ರೂ. ಇಳಿಕೆಯಾಗಿದ್ದರೆ, ಇಂದು ಮತ್ತೆ 235 ರೂ. ಕುಸಿತ ಕಂಡಿದೆ. ಇದರಿಂದ ಕೇವಲ ಎರಡು ದಿನಗಳಲ್ಲಿ ಚಿನ್ನದ ಬೆಲೆ 490 ರೂ. ಇಳಿಕೆಯಾಗಿದೆ. ಕಳೆದ 10 ದಿನಗಳಲ್ಲಿ ಒಟ್ಟು 1,275 ರೂ. ಕಡಿಮೆಯಾಗಿರುವುದು ಗಮನಾರ್ಹ.
ನವದೆಹಲಿ: ಚಿನ್ನ ಹಾಗೂ ಬೆಳ್ಳಿ ಬೆಲೆಯಲ್ಲಿ ಇಳಿಕೆಯ ಪ್ರವೃತ್ತಿ ಮುಂದುವರಿದಿದ್ದು, ಆಭರಣ ಖರೀದಿದಾರರಿಗೆ ತುಸು ನೆಮ್ಮದಿ ತಂದಿದೆ. ನಿನ್ನೆ ಪ್ರತಿ ಗ್ರಾಂ ಚಿನ್ನದ ಬೆಲೆ 255 ರೂ. ಇಳಿಕೆಯಾಗಿದ್ದರೆ, ಇಂದು ಮತ್ತೆ 235 ರೂ. ಕುಸಿತ ಕಂಡಿದೆ. ಇದರಿಂದ ಕೇವಲ ಎರಡು ದಿನಗಳಲ್ಲಿ ಚಿನ್ನದ ಬೆಲೆ 490 ರೂ. ಇಳಿಕೆಯಾಗಿದೆ. ಕಳೆದ 10 ದಿನಗಳಲ್ಲಿ ಒಟ್ಟು 1,275 ರೂ. ಕಡಿಮೆಯಾಗಿರುವುದು ಗಮನಾರ್ಹ.
ಚಿನ್ನದ ಬೆಲೆ ಇಳಿಕೆಯಿಂದ 22 ಕ್ಯಾರಟ್ ಆಭರಣ ಚಿನ್ನದ ದರ ಪ್ರತಿ ಗ್ರಾಂಗೆ 12,000 ರೂ. ಗಡಿಯೊಳಗೆ ಬಂದಿದೆ. ಬೆಳ್ಳಿ ಬೆಲೆಯೂ ಇಳಿಕೆಯಾಗಿದ್ದು, ಇಂದು ಪ್ರತಿ ಗ್ರಾಂಗೆ 5 ರೂ. ಕಡಿಮೆಯಾಗಿದೆ.
ನವೆಂಬರ್ 19ರ ದರದ ಪ್ರಕಾರ, ಭಾರತದಲ್ಲಿ 10 ಗ್ರಾಂ 22 ಕ್ಯಾರಟ್ ಚಿನ್ನದ ಬೆಲೆ 1,19,800 ರೂ. ಇದ್ದರೆ, 24 ಕ್ಯಾರಟ್ ಶುದ್ಧ ಚಿನ್ನದ ಬೆಲೆ 10 ಗ್ರಾಂಗೆ 1,30,690 ರೂ. ಇದೆ. 100 ಗ್ರಾಂ ಬೆಳ್ಳಿಯ ಬೆಲೆ 18,000 ರೂ. ಆಗಿದೆ. ಬೆಂಗಳೂರಿನಲ್ಲಿಯೂ ಇದೇ ದರ ಮುಂದುವರಿದಿದೆ.
ನವೆಂಬರ್ 19ರಂದು ಭಾರತದಲ್ಲಿ ಚಿನ್ನ, ಬೆಳ್ಳಿ ದರ
- 24 ಕ್ಯಾರಟ್ ಚಿನ್ನ (1 ಗ್ರಾಂ): 13,069 ರೂ.
- 22 ಕ್ಯಾರಟ್ ಚಿನ್ನ (1 ಗ್ರಾಂ): 11,980 ರೂ.
- 18 ಕ್ಯಾರಟ್ ಚಿನ್ನ (1 ಗ್ರಾಂ): 9,802 ರೂ.
- ಬೆಳ್ಳಿ (1 ಗ್ರಾಂ): 180 ರೂ.
ವಿವಿಧ ನಗರಗಳಲ್ಲಿ 22 ಕ್ಯಾರಟ್ ಚಿನ್ನದ ದರ (1 ಗ್ರಾಂ)
ಬೆಂಗಳೂರು 11,980 ರೂ.
ಚೆನ್ನೈ 11,980 ರೂ.
ಮುಂಬೈ 11,980 ರೂ.
ದೆಹಲಿ 11,995 ರೂ.
ಕೋಲ್ಕತಾ 11,980 ರೂ.
ಕೇರಳ 11,980 ರೂ.
ಅಹ್ಮದಾಬಾದ್ 11,985 ರೂ.
ಜೈಪುರ 11,995 ರೂ.
ಲಕ್ನೋ 11,995 ರೂ.
ಭುವನೇಶ್ವರ್ 11,980 ರೂ.
ಎಂಸಿಎಕ್ಸ್ ಫ್ಯೂಚರ್ಸ್ ದರ (ಡಿ.4ರ ಡೆಲಿವರಿ)
- ಎಂಸಿಎಕ್ಸ್ ಚಿನ್ನ (1 ಗ್ರಾಂ): 13,138 ರೂ.
- ಎಂಸಿಎಕ್ಸ್ ಬೆಳ್ಳಿ (1 ಗ್ರಾಂ): 164 ರೂ.
ಭಾರತದ ಸ್ಪಾಟ್ ದರ
- ಚಿನ್ನ (1 ಗ್ರಾಂ): 13,353 ರೂ.
- ಬೆಳ್ಳಿ (1 ಗ್ರಾಂ): 169 ರೂ.
ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಚಿನ್ನ, ಬೆಳ್ಳಿ ದರ
- ಸ್ಪಾಟ್ ಗೋಲ್ಡ್ (1 ಗ್ರಾಂ): 121.71 ಡಾಲರ್ (ಸುಮಾರು 11,669 ರೂ.)
- ಸ್ಪಾಟ್ ಸಿಲ್ವರ್ (1 ಗ್ರಾಂ): 1.478 ಡಾಲರ್ (ಸುಮಾರು 143 ರೂ.)
ವಿವಿಧ ದೇಶಗಳಲ್ಲಿ 24 ಕ್ಯಾರಟ್ ಚಿನ್ನದ ದರ (1 ಗ್ರಾಂ)
ಭಾರತ 13,069 ರೂ.
ಮಲೇಷ್ಯಾ 11,525 ರೂ.
ದುಬೈ 11,486 ರೂ.
ಅಮೆರಿಕ 11,515 ರೂ.
ಸಿಂಗಾಪುರ 11,952 ರೂ.
ಕತಾರ್ 11,587 ರೂ.
ಸೌದಿ ಅರೇಬಿಯಾ 11,607 ರೂ.
ಓಮನ್ 11,588 ರೂ.
ಕುವೇತ್ 11,457 ರೂ.
ವಿವಿಧ ನಗರಗಳಲ್ಲಿ ಬೆಳ್ಳಿ ದರ (1 ಗ್ರಾಂ)
ಬೆಂಗಳೂರು, ಚೆನ್ನೈ, ಮುಂಬೈ, ದೆಹಲಿ, ಕೋಲ್ಕತಾ, ಕೇರಳ, ಅಹ್ಮದಾಬಾದ್, ಜೈಪುರ, ಲಕ್ನೋ, ಭುವನೇಶ್ವರ್ ಹಾಗೂ ಪುಣೆ ನಗರಗಳಲ್ಲಿ ಬೆಳ್ಳಿ ಬೆಲೆ ಪ್ರತಿ ಗ್ರಾಂಗೆ 180 ರೂ. ಇದೆ.
ಚಿನ್ನ-ಬೆಳ್ಳಿ ದರ
Gold Rate Today -ಅಮೆರಿಕ-ಇರಾನ್ ಸಂಘರ್ಷದ ಎಫೆಕ್ಟ್: 10 ಗ್ರಾಂ ಚಿನ್ನಕ್ಕೆ ಬರೋಬ್ಬರಿ ₹1.48 ಲಕ್ಷ; ಬೆಳ್ಳಿಯೂ ದುಬಾರಿ
ಇಂದು 10 ಗ್ರಾಂ ಚಿನ್ನದ ಬೆಲೆಯಲ್ಲಿ ಬರೋಬ್ಬರಿ 2,940 ರೂ. ಏರಿಕೆಯಾಗಿದ್ದು, ಒಟ್ಟು ದರ 1,48,580 ರೂ. ತಲುಪಿದೆ. ಪ್ರತಿ ಗ್ರಾಂಗೆ 294 ರೂ. ಹೆಚ್ಚಳವಾಗಿದ್ದು, 14,858 ರೂ. ದಾಖಲಾಗಿದೆ. ಬೆಳ್ಳಿಯ ದರದಲ್ಲಿ ಇಂದು ಒಂದೇ ದಿನ 10,000 ರೂ. ಏರಿಕೆಯಾಗಿದ್ದು, ಕೆಜಿ ಬೆಳ್ಳಿಯ ಬೆಲೆ 2,60,000 ರೂ. ನೊಂದಿಗೆ ಹೊಸ ದಾಖಲೆ ಬರೆದಿದೆ.
ಬೆಂಗಳೂರು: ಜಾಗತಿಕ ರಾಜಕೀಯ ಬೆಳವಣಿಗೆಗಳು ಅಂತರಾಷ್ಟ್ರೀಯ ಮಾರುಕಟ್ಟೆಯ ಮೇಲೆ ಭಾರಿ ಪ್ರಭಾವ ಬೀರಿದ್ದು, ಚಿನ್ನ ಮತ್ತು ಬೆಳ್ಳಿಯ ಬೆಲೆಯಲ್ಲಿ ಭಾರಿ ಏರಿಕೆ ಕಂಡುಬಂದಿದೆ. ಅಮೆರಿಕ ಮತ್ತು ಇರಾನ್ ನಡುವಿನ ಉದ್ವಿಗ್ನ ಪರಿಸ್ಥಿತಿ ಹಾಗೂ ಮಧ್ಯಪ್ರಾಚ್ಯದ ಸಂಘರ್ಷದ ಹಿನ್ನೆಲೆಯಲ್ಲಿ ಹೂಡಿಕೆದಾರರು ಚಿನ್ನದತ್ತ ಮುಖ ಮಾಡಿರುವುದು ಈ ಬೆಲೆ ಏರಿಕೆಗೆ ಪ್ರಮುಖ ಕಾರಣವಾಗಿದೆ.
ಇಂದಿನ ಚಿನ್ನದ ದರ ವಿವರ (ಜೂನ್ 12, 2026):
24 ಕ್ಯಾರೆಟ್ ಚಿನ್ನ (ಶುದ್ಧ ಚಿನ್ನ):
ಇಂದು 10 ಗ್ರಾಂ ಚಿನ್ನದ ಬೆಲೆಯಲ್ಲಿ ಬರೋಬ್ಬರಿ 2,940 ರೂ. ಏರಿಕೆಯಾಗಿದ್ದು, ಒಟ್ಟು ದರ 1,48,580 ರೂ. ತಲುಪಿದೆ. ಪ್ರತಿ ಗ್ರಾಂಗೆ 294 ರೂ. ಹೆಚ್ಚಳವಾಗಿದ್ದು, 14,858 ರೂ. ದಾಖಲಾಗಿದೆ.
22 ಕ್ಯಾರೆಟ್ ಚಿನ್ನ (ಆಭರಣ ಚಿನ್ನ):
ಆಭರಣ ಚಿನ್ನದ ಬೆಲೆಯೂ ಏರಿಕೆಯ ಹಾದಿಯಲ್ಲಿದ್ದು, 10 ಗ್ರಾಂಗೆ 2,700 ರೂ. ಹೆಚ್ಚಳವಾಗಿದೆ. ಇದರೊಂದಿಗೆ 22 ಕ್ಯಾರೆಟ್ ಚಿನ್ನದ ಬೆಲೆ 1,36,200 ರೂ. ಗೆ ತಲುಪಿದೆ.
ಬೆಳ್ಳಿ ಬೆಲೆಯಲ್ಲಿ ಭಾರಿ ಜಿಗಿತ:
ಬೆಳ್ಳಿಯ ದರದಲ್ಲಿ ಇಂದು ಒಂದೇ ದಿನ 10,000 ರೂ. ಏರಿಕೆಯಾಗಿದ್ದು, ಕೆಜಿ ಬೆಳ್ಳಿಯ ಬೆಲೆ 2,60,000 ರೂ. ನೊಂದಿಗೆ ಹೊಸ ದಾಖಲೆ ಬರೆದಿದೆ.
ಬೆಲೆ ಏರಿಕೆಗೆ ಕಾರಣವೇನು?
ಅಮೆರಿಕ ಮತ್ತು ಇರಾನ್ ನಡುವಿನ ಸಂಘರ್ಷ ತಾರಕಕ್ಕೇರಿರುವುದು ಜಾಗತಿಕ ಮಾರುಕಟ್ಟೆಯಲ್ಲಿ ಆತಂಕ ಮೂಡಿಸಿದೆ. ಇರಾನ್ ಪಡೆಗಳು ಗಲ್ಫ್ ರಾಷ್ಟ್ರಗಳಲ್ಲಿನ ಅಮೆರಿಕದ ಸೇನಾ ನೆಲೆಗಳ ಮೇಲೆ ದಾಳಿ ನಡೆಸಿರುವುದು ಮತ್ತು ಹಾರ್ಮುಜ್ ಜಲಸಂಧಿಯನ್ನು ಬಂದ್ ಮಾಡಿರುವುದು ತೈಲ ಬೆಲೆ ಏರಿಕೆಗೆ ದಾರಿ ಮಾಡಿಕೊಟ್ಟಿದೆ. ಇದರ ಜೊತೆಗೆ ಒಮಾನ್ ಕರಾವಳಿಯಲ್ಲಿ ಭಾರತದ ಹಡಗುಗಳ ಮೇಲೆ ಸರಣಿ ದಾಳಿಗಳು ನಡೆದಿರುವುದು ಮಾರುಕಟ್ಟೆಯ ಏರುಪೇರಿಗೆ ಕಾರಣವಾಗಿದೆ.
ಆದರೆ, ಅಂತಿಮವಾಗಿ ಅಮೆರಿಕ ಅಧ್ಯಕ್ಷ ಟ್ರಂಪ್ ಅವರು ಇರಾನ್ ಮೇಲಿನ ಯೋಜಿತ ದಾಳಿಯನ್ನು ರದ್ದುಗೊಳಿಸಿ, ಶಾಂತಿ ಸಂಧಾನಕ್ಕೆ ಮುಂದಾಗುವುದಾಗಿ ಹೇಳಿರುವುದು ಮಾರುಕಟ್ಟೆಯಲ್ಲಿ ಸಕಾರಾತ್ಮಕ ಸಂಚಲನ ಮೂಡಿಸಿದೆ. ಸುರಕ್ಷಿತ ಹೂಡಿಕೆಯ ದೃಷ್ಟಿಯಿಂದ ಚಿನ್ನ ಮತ್ತು ಬೆಳ್ಳಿಗೆ ಬೇಡಿಕೆ ಹೆಚ್ಚಾಗಿರುವುದು ಬೆಲೆ ಏರಿಕೆಗೆ ಪುಷ್ಟಿ ನೀಡಿದೆ.
ಚಿನ್ನ-ಬೆಳ್ಳಿ ದರ
Gold Rate Today -ಆಭರಣ ಪ್ರಿಯರಿಗೆ ಬಂಪರ್ ಗುಡ್ ನ್ಯೂಸ್: ಒಂದೇ ದಿನ ಸಾವಿರ ರೂಪಾಯಿ ಇಳಿಕೆ ಕಂಡ ಚಿನ್ನದ ಬೆಲೆ..!
ವಾರದ ಮೊದಲ ದಿನವಾದ ಸೋಮವಾರ ಆಭರಣ ಖರೀದಿದಾರರಿಗೆ ದೊಡ್ಡ ಸಿಹಿ ಸುದ್ದಿ ಸಿಕ್ಕಿದೆ. ಜೂನ್ ತಿಂಗಳ ಆರಂಭದಿಂದಲೇ ಇಳಿಕೆಯ ಹಾದಿ ಹಿಡಿದಿರುವ ಚಿನ್ನದ ಬೆಲೆ, ಇಂದು ಮತ್ತಷ್ಟು ಕುಸಿತ ಕಾಣುವ ಮೂಲಕ ಗ್ರಾಹಕರ ಮುಖದಲ್ಲಿ ಮಂದಹಾಸ ಮೂಡಿಸಿದೆ.
ಬೆಂಗಳೂರು: ವಾರದ ಮೊದಲ ದಿನವಾದ ಸೋಮವಾರ ಆಭರಣ ಖರೀದಿದಾರರಿಗೆ ದೊಡ್ಡ ಸಿಹಿ ಸುದ್ದಿ ಸಿಕ್ಕಿದೆ. ಜೂನ್ ತಿಂಗಳ ಆರಂಭದಿಂದಲೇ ಇಳಿಕೆಯ ಹಾದಿ ಹಿಡಿದಿರುವ ಚಿನ್ನದ ಬೆಲೆ, ಇಂದು ಮತ್ತಷ್ಟು ಕುಸಿತ ಕಾಣುವ ಮೂಲಕ ಗ್ರಾಹಕರ ಮುಖದಲ್ಲಿ ಮಂದಹಾಸ ಮೂಡಿಸಿದೆ.
ಬೆಲೆ ಇಳಿಕೆಗೆ ಕಾರಣಗಳೇನು?
ಜಾಗತಿಕ ಮಾರುಕಟ್ಟೆಯಲ್ಲಿನ ಏರುಪೇರುಗಳು ಚಿನ್ನದ ಬೆಲೆಯ ಮೇಲೆ ನೇರ ಪರಿಣಾಮ ಬೀರಿವೆ. ಅಮೆರಿಕ ಮತ್ತು ಇರಾನ್ ನಡುವಿನ ಯುದ್ಧದ ಭೀತಿ, ಕಚ್ಚಾ ತೈಲ ಬೆಲೆಯಲ್ಲಿನ ಏರಿಕೆ ಹಾಗೂ ಹಣದುಬ್ಬರದ ಅಪಾಯಗಳ ನಡುವೆಯೂ ಹೂಡಿಕೆದಾರರು ಹೆಚ್ಚಿನ ಬಡ್ಡಿದರ ಸಿಗುವ ಸುರಕ್ಷಿತ ಕಡೆಗಳಲ್ಲಿ ಹೂಡಿಕೆ ಮಾಡುತ್ತಿದ್ದಾರೆ. ಈ ಕಾರಣದಿಂದಾಗಿ ಚಿನ್ನದ ಮೇಲಿನ ಬೇಡಿಕೆ ಕುಸಿದು ಬೆಲೆಯಲ್ಲಿ ಇಳಿಕೆಯಾಗಿದೆ ಎಂದು ವರದಿಯಾಗಿದೆ.
ಇಂದಿನ ಚಿನ್ನದ ಬೆಲೆ ವಿವರ (ಜೂನ್ 8):
24 ಕ್ಯಾರೆಟ್ ಚಿನ್ನ (ಅಪರಂಜಿ): ಇಂದು 10 ಗ್ರಾಂ ಚಿನ್ನದ ಬೆಲೆಯಲ್ಲಿ 1,040 ರೂಪಾಯಿ ಭಾರಿ ಇಳಿಕೆಯಾಗಿದೆ. ಇದರಿಂದಾಗಿ ಒಂದು ಗ್ರಾಂ 24 ಕ್ಯಾರೆಟ್ ಚಿನ್ನದ ಬೆಲೆ 15,169 ರೂಪಾಯಿಗೆ ತಲುಪಿದೆ.
22 ಕ್ಯಾರೆಟ್ ಚಿನ್ನ (ಆಭರಣ ಚಿನ್ನ): ಇಂದು 10 ಗ್ರಾಂ ಚಿನ್ನದ ಬೆಲೆಯಲ್ಲಿ 950 ರೂಪಾಯಿ ಕುಸಿತ ಕಂಡಿದೆ. ಇದರೊಂದಿಗೆ ಒಂದು ಗ್ರಾಂ 22 ಕ್ಯಾರೆಟ್ ಚಿನ್ನದ ಬೆಲೆ 13,905 ರೂಪಾಯಿಯಾಗಿದೆ.
ಕಳೆದ 10 ದಿನಗಳ ಟ್ರೆಂಡ್:
ಕಳೆದ ಹತ್ತು ದಿನಗಳಿಂದ ಚಿನ್ನದ ಬೆಲೆ ನಿರಂತರವಾಗಿ ಇಳಿಯುತ್ತಲೇ ಸಾಗಿದೆ. ಕಳೆದ 10 ದಿನಗಳಲ್ಲಿ 24 ಕ್ಯಾರೆಟ್ 10 ಗ್ರಾಂ ಚಿನ್ನದ ಮೇಲೆ ಬರೋಬ್ಬರಿ 5,350 ರೂಪಾಯಿ ಹಾಗೂ 22 ಕ್ಯಾರೆಟ್ ಚಿನ್ನದ ಮೇಲೆ 4,900 ರೂಪಾಯಿ ಇಳಿಕೆಯಾಗಿರುವುದು ಮಧ್ಯಮ ವರ್ಗದ ಜನರಿಗೆ ನಿಟ್ಟುಸಿರು ಬಿಡುವಂತೆ ಮಾಡಿದೆ.
-
ಅಪರಾಧ9 hours agoMangalore-Big Breaking:ಮಂಗಳೂರು: ಕದ್ರಿ ಯುದ್ಧ ಸ್ಮಾರಕದಲ್ಲಿರುವ ಟಿ-55 ಟ್ಯಾಂಕ್ ಮೇಲೆ ಹತ್ತಿ ಯುವಕರ ಹುಚ್ಚಾಟ; ವಿಡಿಯೋ ವೈರಲ್, ಸಾರ್ವಜನಿಕರ ಆಕ್ರೋಶ
-
ಬಿಗ್ ನ್ಯೂಸ್6 hours agoBantwal-ಬಂಟ್ವಾಳ: ತಂದೆ ಗದರಿಸಿದ್ದಕ್ಕೆ ಮನೆ ಬಿಟ್ಟ ಬ್ಯಾಂಕ್ ಉದ್ಯೋಗಿ ಯುವತಿ ನಾಪತ್ತೆ..!
-
ಮಂಗಳೂರು7 hours agoPugasarum-ಅಡಕೆ, ವೀಳ್ಯದೆಲೆಯ ‘ಪೂಗಸಾರಂ’ನಿಂದ ಕ್ಯಾನ್ಸರ್ ಬೆಳವಣಿಗೆಗೆ ಕಡಿವಾಣ? ಮಂಗಳೂರಿನ ವಿಜ್ಞಾನಿಗಳ ಸಂಶೋಧನೆಯಲ್ಲಿ ಮಹತ್ವದ ಅಂಶ ಪತ್ತೆ..!
-
ಸ್ಥಳೀಯ6 hours agoBank-ಚಿನ್ನದ ಬೆಲೆ ಕುಸಿತದ ಎಫೆಕ್ಟ್: ಗೋಲ್ಡ್ ಲೋನ್ ಪಡೆದವರಿಗೆ ಬ್ಯಾಂಕ್ಗಳಿಂದ ಶಾಕ್; ಒಡವೆ ಹರಾಜಿನ ಎಚ್ಚರಿಕೆ..!
-
ಅಂತರ ರಾಜ್ಯ7 hours agoFIR-ಮದುವೆಯಾಗುವ ಭರವಸೆ ನೀಡಿ ದೈಹಿಕ ಸಂಪರ್ಕ: ಬಿಗ್ ಬಾಸ್ ವಿಜೇತ ಮುತ್ತುಕುಮಾರನ್ ವಿರುದ್ಧ ಇನ್ಫ್ಲುಯೆನ್ಸರ್ ವಹಿದಾ ದೂರು – ಎಫ್ಐಆರ್ ದಾಖಲು..!
-
ಸ್ಥಳೀಯ7 hours agoSubrahmanya-ಸುಬ್ರಹ್ಮಣ್ಯ: ಮನೆಗೆ ರಾತ್ರಿ ನಕ್ಸಲರ ಭೇಟಿ ಪ್ರಕರಣ: ಮಾಜಿ ನಕ್ಸಲರಾದ ರವೀಂದ್ರ, ಸುಂದರಿ, ದಿಶಾರಿಂದ ಸ್ಥಳ ಮಹಜರು
-
ಮಂಗಳೂರು8 hours agoMangalore-ಮಂಗಳೂರು: ರಾತ್ರಿ 11:45ರಿಂದ ಬೆಳಗ್ಗೆ 5:30ರವರೆಗೆ ವ್ಯಾಪಾರ ನಿರ್ಬಂಧ; ಪೊಲೀಸ್ ಆಯುಕ್ತರಿಂದ ಹೊಸ ಆದೇಶ
-
ಅಂತರ ರಾಜ್ಯ7 hours agoWhatsApp Web: WhatsApp Web ಬಳಕೆದಾರರೇ ಎಚ್ಚರ..! ಟ್ಯಾಬ್ ಮುಚ್ಚಿದರೆ ಸಾಲದು, ಲಾಗೌಟ್ ಆಗದಿದ್ದರೆ ನಿಮ್ಮ ಖಾಸಗಿ ಚಾಟ್ ಬೇರೆಯವರ ಪಾಲು; ಕೇಂದ್ರ ಸರಕಾರದಿಂದ ಮಹತ್ವದ ಎಚ್ಚರಿಕೆ















