Connect with us

ಜೀವನಶೈಲಿ

Google Pixel 6a: ನಂಬಲಸಾಧ್ಯ ಬೆಲೆಯಲ್ಲಿ ಗೂಗಲ್ ಪಿಕ್ಸಲ್ 6a ಸ್ಮಾರ್ಟ್ ಫೋನ್ : 44 ಸಾವಿರವಿದ್ದ ಫೋನ್ʼನ ಈಗಿನ ಆಫರ್ ಬೆಲೆ ಎಷ್ಟು ಗೊತ್ತೆ ? ಆಫರ್ ಕೆಲವು ದಿನಗಳು ಮಾತ್ರ

Published

on

Ad Widget

Ad Widget

Ad Widget

Ad Widget

ಗೂಗಲ್ ಪಿಕ್ಸಲ್ 6a (Google Pixel 6a) ಸ್ಮಾರ್ಟ್ಫೋನ್ ಈಗ ಭಾರತದಲ್ಲಿ ಭಾರೀ ಡಿಸ್ಕೌಂಟ್ ಬೆಲೆಯಲ್ಲಿ ಸಿಗುತ್ತಿದೆ. ಇದೇ ಅಕ್ಟೋಬರ್ 23 ರಂದು ಈ ಆಫರ್ ಮುಕ್ತಾಯವಾಗಲಿದೆ. ಕೆಲವೇ ತಿಂಗಳುಗಳ ಹಿಂದೆಯಷ್ಟೇ ದೇಶದಲ್ಲಿ ಗೂಗಲ್ ಪಿಕ್ಸಲ್ 6a ಸ್ಮಾರ್ಟ್ಫೋನ್ನು ಬಿಡುಗಡೆಗೊಂಡಿತ್ತು. ಇದು ಇನ್ನೆರಡು ದಿನಗಳ ಕಾಲ ಕೇವಲ 17,299 ಕ್ಕೆ ಖರೀದಿಸಬಹುದಾಗಿದೆ. ಕಂಪೆನಿ ವಿಧಿಸಿದ ಷರತ್ತನ್ನು ಗ್ರಾಹಕ ಪೂರ್ತಿ ಮಾಡಿದರೆ ಈ ಬೆಲೆಗೆ ಪೋನ್ ಸಿಗಲಿದೆ.‌

Ad Widget

Ad Widget

Ad Widget

Ad Widget

ಇದರ ಆರಂಭಿಕ ಬೆಲೆ 43,999 ರೂಪಾಯಿಯಾಗಿತ್ತು. ಬೆಲೆಯಲ್ಲಿ ಪರಿಚಯಿಸಲಾಗಿತ್ತು. ಇದೀಗ ಕಂಪೆನಿಯು ಈ ಮೊಬೈಲ್ ಫೋನಿಗೆ ಮೆಗಾ ಡಿಸ್ಕೌಂಟ್ ಘೋಷಿಸಿದ್ದು ಬೆಲೆಯನ್ನು ಕೇವಲ 34,199 ರೂ.ಗೆ ಇಳಿಸಲಾಗಿದೆ. ಇದರ ಜೊತೆಗೆ ಲಭ್ಯವಿರುವ ಬ್ಯಾಂಕ್ ರಿಯಾಯಿತಿ ಹಾಗೂ 16,900 ರೂ.ವರೆಗಿನ ಎಕ್ಸ್ಚೇಂಜ್ ಕೊಡುಗೆಗಳನ್ನು ಗ್ರಾಹಕ ಬಳಸಿಕೊಂಡರೆ ಗೂಗಲ್ ಪಿಕ್ಸಲ್ 6a ಸ್ಮಾರ್ಟ್ ಫೋನ್‌ ಅನ್ನು ಕೇವಲ 17,299 ರೂ.ಗಳಿಗೆ ಖರೀದಿಸಬಹುದು.

Ad Widget

Ad Widget alt="Ad Widget"/>

Ad Widget

ವೈಶಿಷ್ಟ್ಯಗಳು :

Google Pixel 6a ಸ್ಮಾರ್ಟ್ ಫೋನ್‌ 6.1-ಇಂಚಿನ ಫುಲ್ HD+ (1,080 x 2,400 ಪಿಕ್ಸೆಲ್ಗಳು) OLED ಡಿಸ್ಪ್ಲೇಯನ್ನು ಹೊಂದಿದೆ. 20:9 ಅನುಪಾತದಲ್ಲಿರುವ ಈ ಸ್ಮಾರ್ಟ್ಫೋನಿನ ಡಿಸ್ಪ್ಲೇಯು ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ 3 ರಕ್ಷಣೆಯನ್ನು ಹೊಂದಿದೆ ಮತ್ತು 60Hz ರಿಫ್ರೆಶ್ ರೇಟ್ ಸಾಮರ್ಥ್ಯದಲ್ಲಿದೆ.

Ad Widget

Ad Widget <> Ad Widget

Google Pixel 6a ಸ್ಮಾರ್ಟ್ಫೋನ್ ಆಕ್ಟಾ-ಕೋರ್ ಗೂಗಲ್ ಟೆನ್ಸರ್ SoC ಮತ್ತು Titan M2 ಸೆಕ್ಯುರಿಟಿ ಕೊಪ್ರೊಸೆಸರ್ನಿಂದ ಚಾಲಿತವಾಗಿದೆ. ಈ ಪ್ರೊಸೆಸರ್ ಅನ್ನು 6GB LPDDR5 RAM ನೊಂದಿಗೆ ಜೋಡಿಸಲಾಗಿದೆ. ಆಂಡ್ರಾಯ್ಡ್ 12 ಔಟ್-ಆಫ್-ದಿ-ಬಾಕ್ಸ್ನಲ್ಲಿ ಕನಿಷ್ಟ ಐದು ವರ್ಷಗಳ ಭದ್ರತಾ ನವೀಕರಣಗಳನ್ನು ಪಡೆಯುತ್ತದೆ.

Gold Rate Today : ಚಿನ್ನ ಹಾಗೂ ಬೆಳ್ಳಿ ದರದಲ್ಲಿ ಭಾರೀ ಇಳಿಕೆ – ದೀಪಾವಳಿ ಹಬ್ಬಕ್ಕೂ ಮುಂಚೆ ಚಿನಿವಾರ ಪೇಟೆಯಲ್ಲಿ ಹೆಚ್ಚಿದ ಉತ್ಸಾಹ

Ad Widget

Ad Widget

Google Pixel 6a ಸ್ಮಾರ್ಟ್ಫೋನ್ ಡ್ಯುಯಲ್ ರಿಯರ್ ಕ್ಯಾಮೆರಾ ಸೆಟಪ್ ನೊಂದಿಗೆ ಬಿಡುಗಡೆಯಾಗಿದೆ. ರಿಯರ್ ಕ್ಯಾಮೆರಾವು f/1.7 ಅಪಾರ್ಚರ್ ನೊಂದಿಗೆ ಲೆನ್ಸ್ನೊಂದಿಗೆ 12.2-ಮೆಗಾಪಿಕ್ಸೆಲ್ ಪ್ರಾಥಮಿಕ ಸಂವೇದಕವ ಮತ್ತು 12-ಮೆಗಾಪಿಕ್ಸೆಲ್ ಸೆಕೆಂಡರಿ ಸಂವೇದಕದೊಂದಿಗೆ ಅಲ್ಟ್ರಾ-ವೈಡ್-ಆಂಗಲ್ ಕ್ಯಾಮೆರಾವನ್ನು ಒಳಗೊಂಡಿದೆ.

oogle Pixel 6a ಸ್ಮಾರ್ಟ್ಫೋನಿನಲ್ಲಿ f/2.0 ಅಪರ್ಚರ್ ಲೆನ್ಸ್ನೊಂದಿಗೆ 8-ಮೆಗಾಪಿಕ್ಸೆಲ್ ಕ್ಯಾಮೆರಾವನ್ನು ಅಳವಡಿಸಲಾಗಿದೆ. ಹಿಂದಿನ ಕ್ಯಾಮರಾವು 30fps ನಲ್ಲಿ 4K ವೀಡಿಯೊ ರೆಕಾರ್ಡಿಂಗ್ ಅನ್ನು ನೀಡುತ್ತದೆ ಮತ್ತು ಮುಂಭಾಗದ ಕ್ಯಾಮರಾ 30fps ನಲ್ಲಿ 1080p ವರೆಗೆ ವೀಡಿಯೊ ರೆಕಾರ್ಡಿಂಗ್ ಮಾಡಬಹುದು.

Google Pixel 6a ಸ್ಮಾರ್ಟ್ಫೋನ್ 128GB ಅಂತರ್ಗತ ಸಂಗ್ರಹಣೆಯನ್ನು ಹೊಂದಿದೆ. ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G, 4G LTE, Wi-Fi 6E, ಬ್ಲೂಟೂತ್ 5.2, ಮತ್ತು USB ಟೈಪ್-C ಪೋರ್ಟ್ ವೈಶಿಷ್ಟ್ಯಗಳು ಸೇರಿವೆ. ವೇಗದ ಚಾರ್ಜಿಂಗ್ ಬೆಂಬಲದೊಂದಿಗೆ ಬಂದಿರುವ Pixel 6a ನಲ್ಲಿ Google 4,410mAh ಬ್ಯಾಟರಿಯನ್ನು ಒದಗಿಸಲಾಗಿದ್ದು, ಇದು 24 ಗಂಟೆಗಳ ಬ್ಯಾಟರಿ ಅವಧಿಯನ್ನು ನೀಡುತ್ತದೆ ಮತ್ತು 72 ಗಂಟೆಗಳವರೆಗೆ ಬ್ಯಾಕಪ್ ಹೊಂದಿದೆ.

ಸಣ್ಣ ಎದೆನೋವು ಕೂಡ ಹೃದಯಾಘಾತದ ಲಕ್ಷಣವಿರಬಹುದು ನಿರ್ಲಕ್ಷಬೇಡ, ಎಚ್ಚರಿಕೆ ವಹಿಸಿ!!! ಈ ಸ್ಟೋರಿ ಓದಿ

Ad Widget
Click to comment

Leave a Reply

ಆರೋಗ್ಯ

Puttur-ಪುತ್ತೂರು: ಸಿಟಿ ಆಸ್ಪತ್ರೆಯಲ್ಲಿ ಉಚಿತ ಮೂಳೆ ಖನಿಜ ಸಾಂದ್ರತೆ (BMD) ಚಿಕಿತ್ಸಾ ಶಿಬಿರ

Published

on

Ad Widget

Ad Widget

Ad Widget

Ad Widget

ಪುತ್ತೂರು ಸಿಟಿ ಆಸ್ಪತ್ರೆ ಚಾರಿಟೇಬಲ್ ಟ್ರಸ್ಟ್ ಹಾಗೂ ಇನ್ನರ್ ವೀಲ್ ಕ್ಲಬ್ ಪುತ್ತೂರು ಇವರ ಸಹಯೋಗದಲ್ಲಿ ಇಂದು (ನ.19) ಬೆಳಿಗ್ಗೆ 9.30ರಿಂದ ಮಧ್ಯಾಹ್ನ 2.30ರವರೆಗೆ ಉಚಿತ ಮೂಳೆ ಖನಿಜ ಸಾಂದ್ರತೆ (BMD) ಚಿಕಿತ್ಸಾ ಶಿಬಿರವು ನಡೆಯಿತು. ಪುತ್ತೂರು ಸಿಟಿ ಆಸ್ಪತ್ರೆಯಲ್ಲಿ ಶಿಬಿರವನ್ನು ಏರ್ಪಡಿಸಲಾಗಿತ್ತು.

Ad Widget

Ad Widget

Ad Widget

Ad Widget

ಪುತ್ತೂರು: ಪುತ್ತೂರು ಸಿಟಿ ಆಸ್ಪತ್ರೆ ಚಾರಿಟೇಬಲ್ ಟ್ರಸ್ಟ್ ಹಾಗೂ ಇನ್ನರ್ ವೀಲ್ ಕ್ಲಬ್ ಪುತ್ತೂರು ಇವರ ಸಹಯೋಗದಲ್ಲಿ ಇಂದು (ನ.19) ಬೆಳಿಗ್ಗೆ 9.30ರಿಂದ ಮಧ್ಯಾಹ್ನ 2.30ರವರೆಗೆ ಉಚಿತ ಮೂಳೆ ಖನಿಜ ಸಾಂದ್ರತೆ (BMD) ಚಿಕಿತ್ಸಾ ಶಿಬಿರವು ನಡೆಯಿತು. ಪುತ್ತೂರು ಸಿಟಿ ಆಸ್ಪತ್ರೆಯಲ್ಲಿ ಶಿಬಿರವನ್ನು ಏರ್ಪಡಿಸಲಾಗಿತ್ತು.

Ad Widget

Ad Widget alt="Ad Widget"/>

Ad Widget

ಬೆನ್ನು ನೋವು, ಮೊಣಕಾಲು ನೋವು, ಸೊಂಟ ನೋವು ಹಾಗೂ ಸ್ನಾಯು ನೋವು ಮುಂತಾದ ಸಮಸ್ಯೆಗಳು ಮೂಳೆ ಸವೆತ ಅಥವಾ ಮುಂದಿನ ದಿನಗಳಲ್ಲಿ ಮೂಳೆ ಮುರಿತಕ್ಕೆ ಕಾರಣವಾಗುವ ಸಾಧ್ಯತೆಯಿದೆ. ಇಂತಹ ಲಕ್ಷಣಗಳನ್ನು ನಿರ್ಲಕ್ಷಿಸದೆ ಆರಂಭದಲ್ಲೇ ತಪಾಸಣೆ ಮಾಡಿಸಿಕೊಂಡು ಸೂಕ್ತ ಚಿಕಿತ್ಸೆ ಪಡೆಯುವುದು ಅಗತ್ಯ. ಈ ನಿಟ್ಟಿನಲ್ಲಿ ಸಾರ್ವಜನಿಕರಿಗೆ ಅನುಕೂಲವಾಗುವಂತೆ ಉಚಿತ BMD ಶಿಬಿರವನ್ನು ಆಯೋಜಿಸಲಾಗಿತ್ತು. ಆರೋಗ್ಯ ಸೇವಾ ವಿಭಾಗದ ಇಂಡ್‌ಕೆಮಿ ಹೆಲ್ತ್ ಸ್ಪೆಷಾಲಿಟಿ ಪ್ರೈವೇಟ್ ಲಿಮಿಟೆಡ್ ಪ್ರಾಯೋಜಕತ್ವದಲ್ಲಿ ಶಿಬಿರ ನಡೆಯಿತು.

Ad Widget

Ad Widget <> Ad Widget

ಶಿಬಿರದಲ್ಲಿ ಮೂಳೆ ತಜ್ಞರಾದ ಡಾ. ಭಾಸ್ಕರ್ ಎಸ್. (D’Ortho), ಆಡಳಿತ ನಿರ್ದೇಶಕರು, ಪುತ್ತೂರು ಸಿಟಿ ಆಸ್ಪತ್ರೆ ಇವರು ತಪಾಸಣೆ ಹಾಗೂ ಸಲಹೆ ನೀಡಿದರು.

ಇನ್ನರ್‌ ವೀಲ್‌ ಕ್ಲಬ್ ನ ನಿರ್ದೇಶಕಿ ಮಂಜುಳ ಭಾಸ್ಕರ್, ಅಧ್ಯಕ್ಷೆ ಮನೋರಮಾ ಸೂರ್ಯ, ಖಜಾಂಜಿ ಕವಿತಾ ಕೊಳತ್ತಾಯ, ಕಾರ್ಯದರ್ಶಿ ಶ್ರುತಿ ಎಸ್.‌ ಬಂಗೇರ ಶಿಬಿರದಲ್ಲಿ ಉಪಸ್ಥಿತರಿದ್ದರು.

Continue Reading

ಲೇಖನಗಳು

Rahu-Ketu-18 ತಿಂಗಳ ಬಳಿಕ ರಾಹು-ಕೇತು ರಾಶಿ ಬದಲಾವಣೆ; 12 ರಾಶಿಗಳ ಭವಿಷ್ಯ ಹೇಗಿರಲಿದೆ?

Published

on

Ad Widget

Ad Widget

Ad Widget

Ad Widget

ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, 2026ರ ಡಿಸೆಂಬರ್ 5ರಂದು ರಾಹು ಮತ್ತು ಕೇತು ಗ್ರಹಗಳು ಸುಮಾರು 18 ತಿಂಗಳ ಬಳಿಕ ರಾಶಿ ಬದಲಾವಣೆ ಮಾಡಲಿವೆ. ಈ ಸಂಚಾರದ ವೇಳೆ ರಾಹು ಮಕರ ರಾಶಿಗೆ ಪ್ರವೇಶಿಸಿದರೆ, ಕೇತು ಕರ್ಕಾಟಕ ರಾಶಿಯನ್ನು ಪ್ರವೇಶಿಸಲಿದ್ದಾನೆ. ಈ ಗ್ರಹಗಳ ಸಂಚಾರವು ವೃತ್ತಿಜೀವನ, ಆರ್ಥಿಕ ಸ್ಥಿತಿ, ಕುಟುಂಬ, ಸಂಬಂಧಗಳು ಹಾಗೂ ವೈಯಕ್ತಿಕ ಜೀವನದ ಮೇಲೆ ಪರಿಣಾಮ ಬೀರಲಿದೆ ಎಂದು ವೈದಿಕ ಜ್ಯೋತಿಷ್ಯದಲ್ಲಿ ಹೇಳಲಾಗುತ್ತದೆ.

Ad Widget

Ad Widget

Ad Widget

Ad Widget

ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, 2026ರ ಡಿಸೆಂಬರ್ 5ರಂದು ರಾಹು ಮತ್ತು ಕೇತು ಗ್ರಹಗಳು ಸುಮಾರು 18 ತಿಂಗಳ ಬಳಿಕ ರಾಶಿ ಬದಲಾವಣೆ ಮಾಡಲಿವೆ. ಈ ಸಂಚಾರದ ವೇಳೆ ರಾಹು ಮಕರ ರಾಶಿಗೆ ಪ್ರವೇಶಿಸಿದರೆ, ಕೇತು ಕರ್ಕಾಟಕ ರಾಶಿಯನ್ನು ಪ್ರವೇಶಿಸಲಿದ್ದಾನೆ. ಈ ಗ್ರಹಗಳ ಸಂಚಾರವು ವೃತ್ತಿಜೀವನ, ಆರ್ಥಿಕ ಸ್ಥಿತಿ, ಕುಟುಂಬ, ಸಂಬಂಧಗಳು ಹಾಗೂ ವೈಯಕ್ತಿಕ ಜೀವನದ ಮೇಲೆ ಪರಿಣಾಮ ಬೀರಲಿದೆ ಎಂದು ವೈದಿಕ ಜ್ಯೋತಿಷ್ಯದಲ್ಲಿ ಹೇಳಲಾಗುತ್ತದೆ.

Ad Widget

Ad Widget alt="Ad Widget"/>

Ad Widget

ಈ ಸಂಚಾರವು 2028ರ ಜೂನ್‌ವರೆಗೆ ಮುಂದುವರಿಯುವ ನಿರೀಕ್ಷೆಯಿದೆ. ರಾಹುವನ್ನು ಮಹತ್ವಾಕಾಂಕ್ಷೆ, ಭೌತಿಕ ಆಸೆ ಮತ್ತು ಅನಿರೀಕ್ಷಿತ ಬೆಳವಣಿಗೆಗಳ ಸಂಕೇತವಾಗಿ ಪರಿಗಣಿಸಿದರೆ, ಕೇತುವನ್ನು ಆಧ್ಯಾತ್ಮಿಕತೆ, ವೈರಾಗ್ಯ ಮತ್ತು ಅಂತಃಪ್ರಜ್ಞೆಯ ಸಂಕೇತವೆಂದು ನಂಬಲಾಗಿದೆ. ಹಾಗಾದರೆ ಈ ಸಂಚಾರವು 12 ರಾಶಿಗಳ ಮೇಲೆ ಯಾವ ರೀತಿಯ ಪರಿಣಾಮ ಬೀರಬಹುದು ನೋಡೋಣ.

Ad Widget

Ad Widget <> Ad Widget

ಮೇಷ ರಾಶಿ
ಮೇಷ ರಾಶಿಯವರಿಗೆ ವೃತ್ತಿಜೀವನದಲ್ಲಿ ಹೊಸ ಅವಕಾಶಗಳು ಎದುರಾಗಬಹುದು. ಉದ್ಯೋಗ ಬದಲಾವಣೆ, ಬಡ್ತಿ ಹಾಗೂ ವ್ಯಾಪಾರ ವಿಸ್ತರಣೆಗೆ ಅನುಕೂಲಕರ ಸಮಯವಾಗಬಹುದು. ಕೆಲಸದ ಜವಾಬ್ದಾರಿ ಹೆಚ್ಚಾದರೂ ಅದಕ್ಕೆ ತಕ್ಕ ಪ್ರತಿಫಲ ದೊರೆಯುವ ಸಾಧ್ಯತೆಯಿದೆ. ಮನೆ, ವಾಹನ ಮತ್ತು ಆಸ್ತಿ ಖರೀದಿಸುವ ಯೋಜನೆಗಳು ಕಾರ್ಯರೂಪಕ್ಕೆ ಬರಬಹುದು. ಹಳೆಯ ವಾಹನ ಬದಲಿಸಿ ಹೊಸ ವಾಹನ ಖರೀದಿಸುವ ಯೋಗವೂ ಇದೆ.

ವೃಷಭ ರಾಶಿ
ವೃಷಭ ರಾಶಿಯವರಿಗೆ ಧೈರ್ಯ ಮತ್ತು ಆತ್ಮವಿಶ್ವಾಸ ಹೆಚ್ಚಾಗಬಹುದು. ಬಹುಕಾಲದಿಂದ ಮುಂದೂಡಿದ್ದ ಕೆಲಸಗಳನ್ನು ಪೂರ್ಣಗೊಳಿಸಲು ಸಾಧ್ಯವಾಗಬಹುದು. ಕುಟುಂಬದಲ್ಲಿ ಸಂತೋಷ ಮತ್ತು ಸಾಮರಸ್ಯ ನೆಲೆಸುವ ನಿರೀಕ್ಷೆಯಿದೆ. ಅನಿರೀಕ್ಷಿತ ಆರ್ಥಿಕ ಲಾಭದ ಅವಕಾಶಗಳು ಎದುರಾಗಬಹುದು. ದೂರದ ಪ್ರಯಾಣ, ಧಾರ್ಮಿಕ ಕಾರ್ಯಗಳು ಹಾಗೂ ಹೊಸ ಅನುಭವಗಳಿಗೆ ಅವಕಾಶ ದೊರೆಯಬಹುದು.

Ad Widget

Ad Widget

ಮಿಥುನ ರಾಶಿ
ಮಿಥುನ ರಾಶಿಯವರಿಗೆ ಜೀವನದಲ್ಲಿ ಕೆಲವು ಅನಿರೀಕ್ಷಿತ ಬದಲಾವಣೆಗಳು ಸಂಭವಿಸಬಹುದು. ವಿದೇಶಿ ಸಂಪರ್ಕಗಳು ಹೆಚ್ಚಾಗುವ ಜೊತೆಗೆ ಉದ್ಯೋಗ ಅಥವಾ ವ್ಯಾಪಾರದ ನಿಮಿತ್ತ ವಿದೇಶ ಪ್ರಯಾಣ ಮಾಡುವ ಅವಕಾಶ ಸಿಗಬಹುದು. ಆರ್ಥಿಕ ಲಾಭದ ಸಾಧ್ಯತೆಯೂ ಇದೆ. ಆದರೆ ಕೆಲವು ಕೆಲಸಗಳಲ್ಲಿ ವಿಳಂಬ ಮತ್ತು ಅಡೆತಡೆಗಳು ಎದುರಾಗಬಹುದು. ಕುಟುಂಬದ ವಿಚಾರದಲ್ಲಿ ಮಾತನಾಡುವಾಗ ಸಂಯಮ ಇರಲಿ. ಆರೋಗ್ಯದ ಕಡೆಗೂ ಗಮನ ನೀಡುವುದು ಅಗತ್ಯ.

ಕರ್ಕಾಟಕ ರಾಶಿ
ಕರ್ಕಾಟಕ ರಾಶಿಯವರಿಗೆ ಸಮಾಜದಲ್ಲಿ ಗೌರವ ಮತ್ತು ಸ್ಥಾನಮಾನ ಹೆಚ್ಚಾಗುವ ಸಾಧ್ಯತೆಯಿದೆ. ವ್ಯಕ್ತಿತ್ವದಲ್ಲಿ ಬದಲಾವಣೆ ಕಂಡುಬರಬಹುದು. ಹೊಸ ಸ್ನೇಹಿತರು ಮತ್ತು ಪರಿಚಯಗಳು ಬೆಳೆಯಲಿವೆ. ವಿದೇಶದಲ್ಲಿ ಉದ್ಯೋಗ ಅಥವಾ ವ್ಯಾಪಾರ ಆರಂಭಿಸಲು ಅವಕಾಶಗಳು ದೊರೆಯಬಹುದು. ಆದರೆ ವೈವಾಹಿಕ ಜೀವನ ಮತ್ತು ವ್ಯಾಪಾರ ಪಾಲುದಾರಿಕೆಯಲ್ಲಿ ಪರಸ್ಪರ ನಂಬಿಕೆ ಹಾಗೂ ಉತ್ತಮ ಸಂವಹನಕ್ಕೆ ಆದ್ಯತೆ ನೀಡಬೇಕು.

ಸಿಂಹ ರಾಶಿ
ಸಿಂಹ ರಾಶಿಯವರಿಗೆ ಕಳೆದ ಒಂದೂವರೆ ವರ್ಷಗಳಿಂದ ಎದುರಾಗುತ್ತಿದ್ದ ಸಮಸ್ಯೆಗಳು ಕ್ರಮೇಣ ಕಡಿಮೆಯಾಗಬಹುದು. ಉದ್ಯೋಗ ಮತ್ತು ವ್ಯಾಪಾರದಲ್ಲಿ ಯಶಸ್ಸು ದೊರೆಯುವ ಸಾಧ್ಯತೆಯಿದೆ. ವಿರೋಧಿಗಳು ಹಾಗೂ ಸ್ಪರ್ಧಿಗಳ ವಿರುದ್ಧ ಮೇಲುಗೈ ಸಾಧಿಸಬಹುದು. ಬಾಕಿ ಉಳಿದಿರುವ ಕಾನೂನು ವಿವಾದಗಳು ಮತ್ತು ಆಸ್ತಿ ವಿಚಾರಗಳಲ್ಲಿ ಅನುಕೂಲಕರ ಬೆಳವಣಿಗೆ ನಿರೀಕ್ಷಿಸಬಹುದು. ವಿದೇಶಿ ಉದ್ಯೋಗದ ಪ್ರಯತ್ನಗಳಿಗೂ ಉತ್ತಮ ಅವಕಾಶಗಳು ಸಿಗಬಹುದು.

ಕನ್ಯಾ ರಾಶಿ
ಕನ್ಯಾ ರಾಶಿಯವರಿಗೆ ಉದ್ಯೋಗ, ಆರ್ಥಿಕ ಸ್ಥಿತಿ ಮತ್ತು ಕುಟುಂಬದ ವಿಚಾರಗಳಲ್ಲಿ ಶುಭ ಬೆಳವಣಿಗೆಗಳು ಕಂಡುಬರಬಹುದು. ಉದ್ಯೋಗಾಕಾಂಕ್ಷಿಗಳಿಗೆ ಹೊಸ ಅವಕಾಶಗಳು ದೊರೆಯಬಹುದು. ಈಗಾಗಲೇ ಉದ್ಯೋಗದಲ್ಲಿರುವವರಿಗೆ ಬಡ್ತಿ ಅಥವಾ ಹೊಸ ಜವಾಬ್ದಾರಿಗಳು ಸಿಗುವ ಸಾಧ್ಯತೆಯಿದೆ. ಮಕ್ಕಳಿಂದ ಸಂತೋಷದ ಸುದ್ದಿ ಸಿಗಬಹುದು. ಬಹುಕಾಲದಿಂದ ಬಾಕಿ ಉಳಿದಿರುವ ಹಣಕಾಸು ಮತ್ತು ಆಸ್ತಿ ಸಂಬಂಧಿತ ವಿಚಾರಗಳು ಬಗೆಹರಿಯುವ ನಿರೀಕ್ಷೆಯಿದೆ.

ತುಲಾ ರಾಶಿ
ತುಲಾ ರಾಶಿಯವರಿಗೆ ಮನೆ, ವಾಹನ ಮತ್ತು ವೃತ್ತಿಜೀವನದಲ್ಲಿ ಬದಲಾವಣೆಗಳು ಸಂಭವಿಸಬಹುದು. ಸ್ವಂತ ಮನೆ ಖರೀದಿಸುವ ಅಥವಾ ಹೊಸ ಆಸ್ತಿ ಪಡೆಯುವ ಯೋಜನೆಗಳು ಈಡೇರಬಹುದು. ಉದ್ಯೋಗದಲ್ಲಿ ಮೇಲಧಿಕಾರಿಗಳ ಮೆಚ್ಚುಗೆ ಮತ್ತು ಹೊಸ ಜವಾಬ್ದಾರಿಗಳು ದೊರೆಯಬಹುದು. ಆದರೆ ತಾಯಿಯ ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ವಹಿಸಬೇಕು. ಕುಟುಂಬದ ಅಗತ್ಯಗಳಿಗಾಗಿ ಹೆಚ್ಚುವರಿ ಖರ್ಚು ಎದುರಾಗುವ ಸಾಧ್ಯತೆಯಿದೆ.

ಧನು ರಾಶಿ
ಧನು ರಾಶಿಯವರಿಗೆ ಆರ್ಥಿಕವಾಗಿ ಪ್ರಗತಿ ಸಾಧಿಸುವ ಅವಕಾಶಗಳು ದೊರೆಯಬಹುದು. ಆದಾಯದ ಹೊಸ ಮೂಲಗಳು ತೆರೆದುಕೊಳ್ಳಬಹುದು. ವಿದೇಶಿ ಸಂಪರ್ಕಗಳಿಂದ ಲಾಭವಾಗುವ ಸಾಧ್ಯತೆಯಿದೆ. ಉದ್ಯೋಗಿಗಳಿಗೆ ಬಡ್ತಿ ಅಥವಾ ವೇತನ ಹೆಚ್ಚಳದ ನಿರೀಕ್ಷೆಯಿದೆ. ವ್ಯಾಪಾರಸ್ಥರಿಗೆ ಹೊಸ ಗ್ರಾಹಕರು ದೊರೆಯಬಹುದು. ಕುಟುಂಬದಲ್ಲಿ ಸಂತೋಷ ಮತ್ತು ನೆಮ್ಮದಿ ಹೆಚ್ಚಾಗಲಿದ್ದು, ಶುಭಕಾರ್ಯಗಳು ನಡೆಯುವ ಸಾಧ್ಯತೆಯಿದೆ. ಮಾತಿನ ಮೇಲೆ ಹಿಡಿತವಿರಲಿ.

ವೃಶ್ಚಿಕ ರಾಶಿ
ವೃಶ್ಚಿಕ ರಾಶಿಯವರಿಗೆ ಧೈರ್ಯ, ಆತ್ಮವಿಶ್ವಾಸ ಮತ್ತು ಕೆಲಸ ಮಾಡುವ ಉತ್ಸಾಹ ಹೆಚ್ಚಾಗಬಹುದು. ಉದ್ಯೋಗ ಹಾಗೂ ವ್ಯಾಪಾರದಲ್ಲಿ ಹೊಸ ಪ್ರಯತ್ನಗಳಿಗೆ ಉತ್ತಮ ಅವಕಾಶಗಳು ದೊರೆಯಲಿವೆ. ಬಹುಕಾಲದಿಂದ ಬಾಕಿ ಉಳಿದಿದ್ದ ಕೆಲಸಗಳು ಪೂರ್ಣಗೊಳ್ಳಬಹುದು. ಪ್ರಭಾವಿ ವ್ಯಕ್ತಿಗಳ ಪರಿಚಯದಿಂದ ವೃತ್ತಿಜೀವನದಲ್ಲಿ ಅನುಕೂಲವಾಗಬಹುದು. ರಾಜಕೀಯ ಕ್ಷೇತ್ರದಲ್ಲಿರುವವರಿಗೂ ಹೊಸ ಅವಕಾಶಗಳು ಎದುರಾಗುವ ಸಾಧ್ಯತೆಯಿದೆ.

ಮಕರ ರಾಶಿ
ಮಕರ ರಾಶಿಯವರಿಗೆ ಈ ಸಂಚಾರದಲ್ಲಿ ಮಹತ್ವದ ಬದಲಾವಣೆಗಳು ಎದುರಾಗಬಹುದು. ಉದ್ಯೋಗ ಮತ್ತು ವೃತ್ತಿಜೀವನದ ಕಾರಣದಿಂದ ಸ್ಥಳಾಂತರಗೊಳ್ಳುವ ಸಂದರ್ಭ ಬರಬಹುದು. ಹೊಸ ಕೆಲಸ ಅಥವಾ ವೃತ್ತಿ ಆರಂಭಿಸುವ ಆಲೋಚನೆಗಳು ಮೂಡಬಹುದು. ಆರಂಭದಲ್ಲಿ ಕೆಲವು ಗೊಂದಲಗಳು ಎದುರಾದರೂ ಮುಂದಿನ ದಿನಗಳಲ್ಲಿ ಹೊಸ ಅವಕಾಶಗಳು ತೆರೆದುಕೊಳ್ಳಬಹುದು. ವ್ಯಾಪಾರ ಪಾಲುದಾರಿಕೆ ಮತ್ತು ವೈವಾಹಿಕ ಸಂಬಂಧಗಳಲ್ಲಿ ಎಚ್ಚರಿಕೆ ಹಾಗೂ ಪರಸ್ಪರ ತಿಳುವಳಿಕೆ ಅಗತ್ಯ.

ಕುಂಭ ರಾಶಿ
ಕುಂಭ ರಾಶಿಯವರಿಗೆ ಕಳೆದ ಒಂದೂವರೆ ವರ್ಷಗಳಿಂದ ಎದುರಾಗುತ್ತಿದ್ದ ಸಮಸ್ಯೆಗಳು ಕಡಿಮೆಯಾಗುವ ಸಾಧ್ಯತೆಯಿದೆ. ಜಮೀನು ಅಥವಾ ನಿವೇಶನ ಖರೀದಿಸಿ ಮನೆ ನಿರ್ಮಿಸುವ ಯೋಜನೆಗಳು ಮುಂದುವರಿಯಬಹುದು. ವಾಹನ ಖರೀದಿಸುವ ಯೋಗವೂ ಇದೆ. ಮಕ್ಕಳಿಂದ ಸಂತೋಷದ ಸುದ್ದಿ ದೊರೆಯಬಹುದು. ದಾಂಪತ್ಯ ಜೀವನದಲ್ಲಿ ಸಾಮರಸ್ಯ ಹೆಚ್ಚಾಗುವ ನಿರೀಕ್ಷೆಯಿದೆ. ವಿದೇಶಿ ಉದ್ಯೋಗದ ಪ್ರಯತ್ನಗಳು ಮತ್ತು ರಾಜಕೀಯ ಕ್ಷೇತ್ರದಲ್ಲಿರುವವರಿಗೆ ಹೊಸ ಅವಕಾಶಗಳು ಸಿಗಬಹುದು.

ಮೀನ ರಾಶಿ
ಮೀನ ರಾಶಿಯವರಿಗೆ ಆರ್ಥಿಕವಾಗಿ ಉತ್ತಮ ಬೆಳವಣಿಗೆಗಳು ಕಂಡುಬರಬಹುದು. ಅನಿರೀಕ್ಷಿತ ಮೂಲಗಳಿಂದ ಹಣ ಲಭಿಸುವ ಸಾಧ್ಯತೆಯಿದೆ. ಆಸ್ತಿ-ಪಾಸ್ತಿ ಸಂಬಂಧಿತ ವಿಚಾರಗಳಲ್ಲಿ ಅನುಕೂಲಕರ ಫಲಿತಾಂಶ ದೊರೆಯಬಹುದು. ವ್ಯಾಪಾರಸ್ಥರಿಗೆ ಹೊಸ ಗ್ರಾಹಕರು ಮತ್ತು ಸಂಪರ್ಕಗಳಿಂದ ಲಾಭವಾಗಬಹುದು. ಮಕ್ಕಳ ಸಾಧನೆಯಿಂದ ಸಂತೋಷ ಸಿಗಬಹುದು. ವಿದೇಶದಲ್ಲಿ ಉದ್ಯೋಗ ಪಡೆಯಲು ಪ್ರಯತ್ನಿಸುತ್ತಿರುವವರಿಗೆ ಹೊಸ ಅವಕಾಶಗಳು ಎದುರಾಗಬಹುದು.

Ad Widget
Continue Reading

ಆರೋಗ್ಯ

‘Ritu Taare’ scheme-35 ವರ್ಷ ಮೇಲ್ಪಟ್ಟ ಮಹಿಳೆಯರ ಆರೋಗ್ಯಕ್ಕೆ ‘ಋತು ತಾರೆ’ ಯೋಜನೆ; ದ.ಕ.ದಲ್ಲಿ ಮೂರು ತಿಂಗಳ ಪ್ರಾಯೋಗಿಕ ಅನುಷ್ಠಾನ..! ನಟಿ ರಮ್ಯಾ ರಾಯಭಾರಿ

Published

on

Ad Widget

Ad Widget

Ad Widget

Ad Widget

35 ವರ್ಷ ಮೇಲ್ಪಟ್ಟ ಮಹಿಳೆಯರ ಆರೋಗ್ಯ ಮತ್ತು ಆರೈಕೆಗೆ ವಿಶೇಷ ಆದ್ಯತೆ ನೀಡುವ ಉದ್ದೇಶದಿಂದ ರಾಜ್ಯ ಸರಕಾರ ‘ಋತು ತಾರೆ’ ಎಂಬ ಮಧ್ಯವಯಸ್ಕ ಮಹಿಳೆಯರ ಆರೋಗ್ಯ ಮತ್ತು ಮೆನೋಪಾಸ್ ಕಾರ್ಯಕ್ರಮವನ್ನು ಜಾರಿಗೆ ತಂದಿದೆ. ಈ ಕಾರ್ಯಕ್ರಮದ ರಾಯಭಾರಿಯಾಗಿ ಚಿತ್ರನಟಿ ರಮ್ಯಾ ಕಾರ್ಯನಿರ್ವಹಿಸಲಿದ್ದಾರೆ.

Ad Widget

Ad Widget

Ad Widget

Ad Widget

ಬೆಂಗಳೂರು: 35 ವರ್ಷ ಮೇಲ್ಪಟ್ಟ ಮಹಿಳೆಯರ ಆರೋಗ್ಯ ಮತ್ತು ಆರೈಕೆಗೆ ವಿಶೇಷ ಆದ್ಯತೆ ನೀಡುವ ಉದ್ದೇಶದಿಂದ ರಾಜ್ಯ ಸರಕಾರ ‘ಋತು ತಾರೆ’ ಎಂಬ ಮಧ್ಯವಯಸ್ಕ ಮಹಿಳೆಯರ ಆರೋಗ್ಯ ಮತ್ತು ಮೆನೋಪಾಸ್ ಕಾರ್ಯಕ್ರಮವನ್ನು ಜಾರಿಗೆ ತಂದಿದೆ.

Ad Widget

Ad Widget alt="Ad Widget"/>

Ad Widget

ಈ ಕುರಿತು ಆರೋಗ್ಯ ಇಲಾಖೆ ಆದೇಶ ಹೊರಡಿಸಿದ್ದು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮೂರು ತಿಂಗಳ ಕಾಲ ಪ್ರಾಯೋಗಿಕವಾಗಿ ಕಾರ್ಯಕ್ರಮ ಅನುಷ್ಠಾನಗೊಳ್ಳಲಿದೆ. ಈ ಹಂತದ ಅನುಭವದ ಆಧಾರದಲ್ಲಿ ಬಳಿಕ ರಾಜ್ಯದಾದ್ಯಂತ ವಿಸ್ತರಿಸಲು ಸರಕಾರ ಉದ್ದೇಶಿಸಿದೆ.

Ad Widget

Ad Widget <> Ad Widget

ಮಹಿಳೆಯರ ಆರೋಗ್ಯವು ಕೇವಲ ತಾಯ್ತನಕ್ಕೆ ಸೀಮಿತವಾಗಿಲ್ಲ. ಮೆನೋಪಾಸ್ ಹಂತದಲ್ಲಿ ನಿದ್ರಾಹೀನತೆ, ದೇಹದಲ್ಲಿ ಏಕಾಏಕಿ ಬಿಸಿಯ ಅನುಭವ, ಕೀಲು ನೋವು, ಮೂಳೆಗಳ ದುರ್ಬಲತೆ, ಆತಂಕ ಹಾಗೂ ಮಾನಸಿಕ ಏರುಪೇರು ಸೇರಿದಂತೆ ಹಲವು ಸಮಸ್ಯೆಗಳು ಕಾಣಿಸಿಕೊಳ್ಳಬಹುದು. ಇವುಗಳನ್ನು ವಯಸ್ಸಿನ ಸಹಜ ಬದಲಾವಣೆ ಎಂದು ನಿರ್ಲಕ್ಷಿಸದೆ ಸೂಕ್ತ ತಪಾಸಣೆ ಮತ್ತು ಚಿಕಿತ್ಸೆ ಪಡೆಯುವುದು ಅಗತ್ಯ ಎಂದು ಸರಕಾರ ತಿಳಿಸಿದೆ.

‘ಋತು ತಾರೆ’ ಯೋಜನೆಯಡಿ ಮಹಿಳೆಯರಿಗಾಗಿ ಪ್ರತ್ಯೇಕ ಕ್ಲಿನಿಕ್‌ಗಳನ್ನು ತೆರೆಯಲಾಗುತ್ತದೆ. ಇಲ್ಲಿ ಸಮಗ್ರ ಆರೋಗ್ಯ ತಪಾಸಣೆ, ಮಾನಸಿಕ ಆರೋಗ್ಯ ಮತ್ತು ಪೌಷ್ಟಿಕ ಆಹಾರದ ಕುರಿತು ಮಾರ್ಗದರ್ಶನ ನೀಡಲಾಗುತ್ತದೆ. ಅಗತ್ಯವಿರುವವರಿಗೆ ತಜ್ಞ ವೈದ್ಯರಿಂದ ಚಿಕಿತ್ಸೆ ಒದಗಿಸುವುದರ ಜೊತೆಗೆ, ಆರೋಗ್ಯದ ವಿವರಗಳನ್ನು ದಾಖಲಿಸಲು ‘ಮಿಡ್-ಲೈಫ್ ಹೆಲ್ತ್ ಕಾರ್ಡ್’ ವಿತರಿಸಲಾಗುತ್ತದೆ.

Ad Widget

Ad Widget

ಈ ಕಾರ್ಯಕ್ರಮದ ರಾಯಭಾರಿಯಾಗಿ ಚಿತ್ರನಟಿ ರಮ್ಯಾ ಕಾರ್ಯನಿರ್ವಹಿಸಲಿದ್ದಾರೆ. ಮೆನೋಪಾಸ್ ಹಾಗೂ ಮಧ್ಯವಯಸ್ಕ ಮಹಿಳೆಯರ ಆರೋಗ್ಯದ ಕುರಿತು ಜಾಗೃತಿ ಮೂಡಿಸಿ, ಕಾರ್ಯಕ್ರಮದ ಸಂದೇಶವನ್ನು ರಾಜ್ಯದ ಮೂಲೆಮೂಲೆಗೂ ತಲುಪಿಸಲು ಅವರು ಸಹಕರಿಸಲಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮೂರು ತಿಂಗಳ ಪ್ರಾಯೋಗಿಕ ಅನುಷ್ಠಾನ ಪೂರ್ಣಗೊಂಡ ಬಳಿಕ ಯೋಜನೆಯನ್ನು ರಾಜ್ಯಾದ್ಯಂತ ವಿಸ್ತರಿಸಲಾಗುವುದು. ಮಹಿಳೆಯರ ಬದುಕಿನ ಪ್ರತಿಯೊಂದು ಹಂತದಲ್ಲೂ ಉತ್ತಮ ಆರೋಗ್ಯ ಸೇವೆ, ಸೂಕ್ತ ಆರೈಕೆ ಮತ್ತು ಘನತೆಯ ಬದುಕು ದೊರೆಯಬೇಕು ಎಂಬ ಉದ್ದೇಶದಿಂದ ಈ ಕಾರ್ಯಕ್ರಮ ರೂಪಿಸಲಾಗಿದೆ ಎಂದು ಸರಕಾರ ತಿಳಿಸಿದೆ.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!