ಕಾರ್ಯಕ್ರಮಗಳು
ಪುತ್ತೂರು : ಪ್ರತಿಷ್ಠಿತ ಮುಳಿಯ ಜುವೆಲ್ಸ್ʼ ನಲ್ಲಿ ಮಾನಸಿ ಸುಧೀರ್ ರವರಿಂದ ́ಕನ್ನಡ-ಬದುಕು-ಬಂಗಾರʼ ವಿಶಿಷ್ಟ ಕಾರ್ಯಕ್ರಮ | ಇದೇ ವೇಳೆ 45 ವರ್ಷಗಳ ಹಿಂದಿನ ನೆಕ್ಲೆಸ್ ಡಿಸೈನ್ ಗೆ ಇದ್ದಕ್ಕಿದಂತೆ ಸೃಷ್ಟಿಯಾದ ಬೇಡಿಕೆ
ಪುತ್ತೂರು, ನ. 10: ಕನ್ನಡ-ಬದುಕು-ಬಂಗಾರ ಎಂಬ ವಿನೂತನ ಕನ್ನಡ ಭಾವಗೀತಾಭಿನಯ ಕಾರ್ಯಕ್ರಮವನ್ನು ಪುತ್ತೂರಿನ ಮುಳಿಯ ಜುವೆಲ್ಸ್ ಸಂಸ್ಥೆಯಲ್ಲಿ ಕರ್ನಾಟಕ ರಾಜ್ಯೋತ್ಸವದ ಅಂಗವಾಗಿ ಬುಧವಾರ ಹಮ್ಮಿಕೊಳ್ಳಲಾಗಿತ್ತು. ಪ್ರತಿಷ್ಠಿತ ಚಿನ್ನಾಭರಣ ಮಳಿಗೆ ಮುಳಿಯ ಜುವೆಲ್ಸ್ ಸಂಸ್ಥೆಯೂ ನಡೆಸಿಕೊಂಡು ಬರುತ್ತಿರುವ ʼಬೆಳೆಸೋಣ ನಮ್ಮತನʼ ಮಾಲಿಕೆಯ ಭಾಗವಾಗಿ ಈ ವಿಶಿಷ್ಟ ಮಾದರಿಯ ಕಾರ್ಯಕ್ರಮವನ್ನು ಉಡುಪಿ ಕೊಡೆವೂರಿನ ನೃತ್ಯ ನಿಕೇತನ ಸಂಸ್ಥೆಯ ಮಾನಸಿ ಸುಧೀರ್ ನಡೆಸಿಕೊಟ್ಟರು.
ಮುಳಿಯದ ಬಂಗಾರ ಮತ್ತು ಬದುಕು ಬಂಗಾರ ಎಂಬ ಪರಿಕಲ್ಪನೆಯನ್ನು ಕನ್ನಡ ಗೀತೆಗಳನ್ನು ಹಾಡುವ ಹಾಗೂ ಭಾವಭಿನಯದ ಮೂಲಕ ಪ್ರದರ್ಶಿಸುವ ಮೂಲಕ ಪ್ರಸ್ತುತ ಪಡಿಸಿದರು. ಈಗಾಗಲೇ ತನ್ನ ವಿಶಿಷ್ಟ ಮ್ಯಾನರಿಸಂ ಮೂಲಕ ಕನ್ನಡ ಗೀತೆಗಳನ್ನು ಜನ ಮಾನಸಕ್ಕೆ ಹತ್ತಿರವಾಗಿಸುವಲ್ಲಿ ಯಶಸ್ವಿಯಾಗಿರುವ, ತನ್ನ ಸೊಷೀಯಲ್ ಮೀಡಿಯಾ ಖಾತೆಗಳ ಮೂಲಕ ಭಾರೀ ಜನಪ್ರಿಯತೆಯನ್ನು ಗಳಿಸಿರುವ ಮಾನಸಿ ಸುಧೀರ್ ಇಲ್ಲೂ ಅದೇ ದಾಟಿಯ ಹಲವು ಗೀತೆಗಳನ್ನು ಪ್ರಸ್ತುತ ಪಡಿಸಿ ಬದುಕು ಬಂಗಾರವಾಗಲಿ ಎಂದರು .

ಬಳಿಕ ಮುಳಿಯ ಸಂಸ್ಥೆ ತಯಾರಿಸಿದ ಅಪೂರ್ವ ಯುನಿಕಿಯ ಸರವನ್ನು ಮಾನಸಿ ಸುಧೀರ್ ರವರು ಬಿಡುಗಡೆ ಮಾಡಿದರು. ಈ ವೇಳೆ ಮಾತನಾಡಿದ ಅವರು “ ಮುಳಿಯ ಸಂಸ್ಥೆಯು ಆಭರಣ ಕ್ಷೇತ್ರದಲ್ಲಿ ನಂಬಿಕೆ, ವಿಶ್ವಾಸದ ಪ್ರತೀಕ. ಉದ್ಯಮದ ಜತೆಗೆ ಕನ್ನಡದ ಕಂಪು ಪಸರಿಸುವ ಕಾರ್ಯವನ್ನು ಮಾಡುವ ಮೂಲಕ ನಾಡಿಗೆ ಹೊಸ ಅಭಿರುಚಿಯನ್ನು ಪರಿಚಯಿಸಿದೆ ಎಂದರು.
45 ವರ್ಷಗಳ ಹಿಂದಿನ ನೆಕ್ಲೆಸ್ ಗೆ ಬೇಡಿಕೆ :
ಮಾನಸಿ ಸುಧೀರ್ ರವರ ತಾಯಿ 45 ವರ್ಷಗಳ ಹಿಂದೆ ಮುಳಿಯದಿಂದ ನೆಕ್ಲೆಸ್ ಒಂದು ಖರೀದಿಸಿದ್ದು, ಅದನ್ನು ಇದೇ ವೇಳೆ ಪ್ರದರ್ಶಿಸಿದರು. ಅಲ್ಲದೇ, ಈ ನೆಕ್ಲೆಸ್ ನ್ನು ತಾಯಿ ನನಗೆ ಕೊಟ್ಟಿದ್ದು, ಅದನ್ನು ಇಗಲೂ ನಾನು ಬಳಸುತ್ತೇನೆ ಎಂದು ತಿಳಿಸಿದ ಅವರು ಈ ವಿಚಾರವನ್ನು ತಮ್ಮ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಬರೆದುಕೊಂಡಿರುವುದಾಗಿಯೂ ತಿಳಿಸಿದರು.
ಕೆಲ ಹೊತ್ತಿನ ಬಳಿಕ ಈ ಬಗ್ಗೆ ಮಾತನಾಡಿದ ಮುಳಿಯ ಸಂಸ್ಥೆಯ ಅಧ್ಯಕ್ಷ ಮತ್ತು ಆಡಳಿತ ನಿರ್ದೇಶಕ ಕೇಶವ ಪ್ರಸಾದ್ ಮುಳಿಯರವರು “ ಈ ಮಾದರಿಯ ನೆಕ್ಲೆಸ್ ಈಗ ಸಿಗುತ್ತಾ ಎಂದು ಇನ್ಸ್ಟಾಗ್ರಾಮ್ ಮೂಲಕ ಚೆನ್ನೈ ಹಾಗೂ ಹುಬ್ಬಳ್ಳಿಯಿಂದ ಗ್ರಾಹಕರು ವಿಚಾರಿಸಿರುವುದಾಗಿಯು ತಿಳಿಸಿದರು.

ಕನ್ನಡ ಕಸಾಪ ತಾಲೂಕು ಘಟಕದ ಮಾಜಿ ಅಧ್ಯಕ್ಷ ಬಿ.ಐತ್ತಪ್ಪ ನಾಯ್ಕ ಮಾತನಾಡಿ, “ನಮ್ಮತನವನ್ನು ಬೆಳೆಸುವುದು ಹೇಗೆ ಎನ್ನುವುದಕ್ಕೆ ಮುಳಿಯ ಸಂಸ್ಥೆಯು ಸಾಕ್ಷಿಯಾಗಿ ನಿಂತಿದೆ. ಹಲವು ತಲೆಮಾರುಗಳಿಂದ ಕನ್ನಡದ ಕಂಪನ್ನು ನಾಡಿಗೆ ಪರಿಚಯಿಸುತ್ತಿರುವ ಮುಳಿಯ ಕುಟುಂಬಸ್ಥರು ಕನ್ನಡಕ್ಕೆ ಸಂಬಂಧಿಸಿದ ಎಲ್ಲ ಕಾರ್ಯಕ್ರಮಗಳಲ್ಲಿ ಮುಂಚೂಣಿಯಲ್ಲಿ ನಿಂತು ಸಹಕಾರ ನೀಡುವವರು. ಇದು ಶ್ಲಾಘನೀಯ” ಎಂದರು.
ಸಾಧಕರಿಗೆ ಗೌರವ
ಇದೇ ಸಂದರ್ಭದಲ್ಲಿ ಸಾಧಕರಾದ ಪಾಂಡುರಂಗ ನಾಯಕ್ ಮತ್ತು ರವಿ ರಾಮಕುಂಜ ಅವರನ್ನು ಸಮ್ಮಾನಿಸಲಾಯಿತು. ಮುಳಿಯ ಸಂಸ್ಥೆಯ ಹಿರಿಯರಾದ ಸುಲೋಚನಾ ಶ್ಯಾಮ ಭಟ್, ಆಡಳಿತ ನಿರ್ದೇಶಕ ಕೃಷ್ಣ ನಾರಾಯಣ ಮುಳಿಯ, ಕೃಷ್ಣವೇಣಿ ಮತ್ತಿತರರು ಉಪಸ್ಥಿತರಿದ್ದರು. ಸಂಸ್ಥೆಯ ಮಾರುಕಟ್ಟೆ ವಿಭಾಗದ ಪ್ರಬಂಧಕ ನಾಮ್ ದೇವ್ ಮಲ್ಯ ಸ್ವಾಗತಿಸಿದರು. ಮಾರುಕಟ್ಟೆ ಸಲಹೆಗಾರ ವೇಣುಶರ್ಮ ಸಮ್ಮಾನಿತರ ಪರಿಚಯ ವಾಚಿಸಿದರು. ಶಿವಪ್ರಸಾದ್ ಕಾರ್ಯಕ್ರಮ ನಿರ್ವಹಿಸಿದರು.
ಕಾರ್ಯಕ್ರಮಗಳು
Saptaka Foundation-ಬೆಂಗಳೂರಿನ ಸಪ್ತಕ ಸಂಸ್ಥೆ ವತಿಯಿಂದ ವಿಟ್ಲ ಬಸ್ ನಿಲ್ದಾಣದಲ್ಲಿ ಕುಡಿಯುವ ತಂಪು ನೀರಿನ ವ್ಯವಸ್ಥೆ ಉದ್ಘಾಟನೆ; ಅಳಿಕೆ ಸತ್ಯಸಾಯಿ ಆಸ್ಪತ್ರೆಗೆ ನೀರಿನ ಡಿಸ್ಪೆನ್ಸರ್ ಕೊಡುಗೆ
ಬೆಂಗಳೂರಿನ ಸಪ್ತಕ ಸಂಸ್ಥೆಯು ವಿಟ್ಲದಲ್ಲಿ ಇತ್ತೀಚೆಗೆ ತನ್ನ ಶಾಖೆಯನ್ನು ತೆರೆದ ಸುರತ್ಕಲ್‌ನ ಚಿರಂತನ ಚಾರಿಟೇಬಲ್ ಟ್ರಸ್ಟ್ ಮೂಲಕ ಪುತ್ತೂರು ರಸ್ತೆಯಲ್ಲಿರುವ ವಿಟ್ಲ ಪಟ್ಟಣ ಪಂಚಾಯತ್‌ನ ಬಸ್ ನಿಲ್ದಾಣದಲ್ಲಿ ಸಾರ್ವಜನಿಕರ ಅನುಕೂಲಕ್ಕಾಗಿ ಕುಡಿಯುವ ತಂಪು ನೀರಿನ ವ್ಯವಸ್ಥೆಯನ್ನು ಕಲ್ಪಿಸಿದೆ.

ವಿಟ್ಲ: ಬೆಂಗಳೂರಿನ ಸಪ್ತಕ ಸಂಸ್ಥೆಯು ವಿಟ್ಲದಲ್ಲಿ ಇತ್ತೀಚೆಗೆ ತನ್ನ ಶಾಖೆಯನ್ನು ತೆರೆದ ಸುರತ್ಕಲ್‌ನ ಚಿರಂತನ ಚಾರಿಟೇಬಲ್ ಟ್ರಸ್ಟ್ ಮೂಲಕ ಪುತ್ತೂರು ರಸ್ತೆಯಲ್ಲಿರುವ ವಿಟ್ಲ ಪಟ್ಟಣ ಪಂಚಾಯತ್‌ನ ಬಸ್ ನಿಲ್ದಾಣದಲ್ಲಿ ಸಾರ್ವಜನಿಕರ ಅನುಕೂಲಕ್ಕಾಗಿ ಕುಡಿಯುವ ತಂಪು ನೀರಿನ ವ್ಯವಸ್ಥೆಯನ್ನು ಕಲ್ಪಿಸಿದೆ.
ನೂತನ ವ್ಯವಸ್ಥೆಯನ್ನು ಸಪ್ತಕ ಸಂಸ್ಥೆಯ ಜಿ.ಎಸ್. ಹೆಗಡೆ ಅವರು ಉದ್ಘಾಟಿಸಿದರು. ಬಸ್ ನಿಲ್ದಾಣಕ್ಕೆ ಆಗಮಿಸುವ ಪ್ರಯಾಣಿಕರು ಹಾಗೂ ವಿಟ್ಲದ ಸಾರ್ವಜನಿಕರಿಗೆ ಈ ವ್ಯವಸ್ಥೆಯಿಂದ ಅನುಕೂಲವಾಗಲಿದೆ.
ಕಾರ್ಯಕ್ರಮದಲ್ಲಿ ಪಟ್ಟಣ ಪಂಚಾಯತ್‌ನ ಮಾಜಿ ಅಧ್ಯಕ್ಷರಾದ ರಮಾನಾಥ್ ವಿಟ್ಲ, ರಾಮದಾಸ್ ಶೆಣೈ, ರವೀಶ್ ವಿಟ್ಲ, ಅಶ್ರಫ್, ಚಿರಂತನದ ಭಾರವಿ ದೇರಾಜೆ ಹಾಗೂ ಶಿವಾನಂದ ರೈ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಅಳಿಕೆಯ ಸತ್ಯಸಾಯಿ ಆಸ್ಪತ್ರೆಗೆ ನೀರಿನ ಡಿಸ್ಪೆನ್ಸರ್ ಕೊಡುಗೆ
ಇದೇ ವೇಳೆ, ಬೆಂಗಳೂರಿನ ಸಪ್ತಕ ಸಂಸ್ಥೆಯ ವತಿಯಿಂದ ಚಿರಂತನ ಚಾರಿಟೇಬಲ್ ಟ್ರಸ್ಟ್ ಮೂಲಕ ಅಳಿಕೆಯ ಶ್ರೀ ಸತ್ಯ ಸಾಯಿ ಆಸ್ಪತ್ರೆಗೆ ಬಿಸಿ ನೀರು ಹಾಗೂ ತಂಪು ನೀರಿನ ಡಿಸ್ಪೆನ್ಸರ್‌ಗಳನ್ನು ಒದಗಿಸಲಾಗಿದೆ.
ಮಂಗಳೂರು
Mangalore Dasara-ಮಂಗಳೂರು ದಸರಾಕ್ಕೆ ಚಾಲನೆ: ಸಿಎಂ ಆಗಮನ ಮುಂದೂಡಿಕೆ
ಪ್ರಸಿದ್ಧ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ಮಂಗಳೂರು ದಸರಾ ಮಹೋತ್ಸವಕ್ಕೆ ರವಿವಾರ ವಿಧ್ಯುಕ್ತ ಚಾಲನೆ ದೊರೆಯಿತು. ಕ್ಷೇತ್ರದ ಅಭಿವೃದ್ಧಿಯ ರೂವಾರಿ, ಕೇಂದ್ರದ ಮಾಜಿ ಸಚಿವ ಬಿ. ಜನಾರ್ದನ ಪೂಜಾರಿ ಅವರ ಉಪಸ್ಥಿತಿಯಲ್ಲಿ ದರ್ಬಾರು ಮಂಟಪದಲ್ಲಿ ವಿವಿಧ ದೇವಿ ವಿಗ್ರಹಗಳನ್ನು ಪ್ರತಿಷ್ಠಾಪಿಸುವ ಮೂಲಕ ನವರಾತ್ರಿ ಮಹೋತ್ಸವಕ್ಕೆ ಚಾಲನೆ ನೀಡಲಾಯಿತು.
ಮಂಗಳೂರು: ಪ್ರಸಿದ್ಧ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ಮಂಗಳೂರು ದಸರಾ ಮಹೋತ್ಸವಕ್ಕೆ ರವಿವಾರ ವಿಧ್ಯುಕ್ತ ಚಾಲನೆ ದೊರೆಯಿತು. ಕ್ಷೇತ್ರದ ಅಭಿವೃದ್ಧಿಯ ರೂವಾರಿ, ಕೇಂದ್ರದ ಮಾಜಿ ಸಚಿವ ಬಿ. ಜನಾರ್ದನ ಪೂಜಾರಿ ಅವರ ಉಪಸ್ಥಿತಿಯಲ್ಲಿ ದರ್ಬಾರು ಮಂಟಪದಲ್ಲಿ ವಿವಿಧ ದೇವಿ ವಿಗ್ರಹಗಳನ್ನು ಪ್ರತಿಷ್ಠಾಪಿಸುವ ಮೂಲಕ ನವರಾತ್ರಿ ಮಹೋತ್ಸವಕ್ಕೆ ಚಾಲನೆ ನೀಡಲಾಯಿತು.
ಬೆಳಗ್ಗೆ ಗುರುಪ್ರಾರ್ಥನೆ, ಪುಣ್ಯಾಹ ಹೋಮ ಹಾಗೂ ನವಕಲಶಾಭಿಷೇಕ ನೆರವೇರಿತು. ಮಧ್ಯಾಹ್ನ 12 ಗಂಟೆಯ ಸುಮಾರಿಗೆ ಶ್ರೀ ಮಹಾಗಣಪತಿ, ಶ್ರೀ ಶಾರದಾ ಮಾತೆ, ಆದಿಶಕ್ತಿ ಹಾಗೂ ಸ್ಕಂದಮಾತೆ, ಕಾತ್ಯಾಯಿನಿ, ಮಹಾಕಾಳಿ, ಮಹಾಗೌರಿ, ಸಿದ್ಧಿಧಾತ್ರಿ, ಶೈಲಪುತ್ರಿ, ಬ್ರಹ್ಮಚಾರಿಣಿ, ಚಂದ್ರಘಂಟಾ ಮತ್ತು ಕೂಷ್ಮಾಂಡಿನಿ ದೇವಿಯರ ವಿಗ್ರಹಗಳನ್ನು ಪ್ರತಿಷ್ಠಾಪಿಸಲಾಯಿತು.
ರವಿವಾರದ ರಜೆಯ ಹಿನ್ನೆಲೆಯಲ್ಲಿ ಸಾವಿರಾರು ಭಕ್ತರು ಕ್ಷೇತ್ರಕ್ಕೆ ಭೇಟಿ ನೀಡಿ ದೇವಿಯರ ವಿಗ್ರಹಗಳ ಪ್ರತಿಷ್ಠಾಪನೆಯ ಅಪೂರ್ವ ಕ್ಷಣಕ್ಕೆ ಸಾಕ್ಷಿಯಾದರು.
ಶಾಸಕ ವೇದವ್ಯಾಸ ಕಾಮತ್, ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ಹಾಗೂ ನಗರ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು.
ಕುದ್ರೋಳಿ ಕ್ಷೇತ್ರದ ಅಧ್ಯಕ್ಷ ಜೈರಾಜ್ ಎಚ್. ಸೋಮಸುಂದರಂ, ಉಪಾಧ್ಯಕ್ಷೆ ಊರ್ಮಿಳಾ ರಮೇಶ್, ಕಾರ್ಯದರ್ಶಿ ಬಿ. ಮಾಧವ ಸುವರ್ಣ, ಕ್ಷೇತ್ರಾಡಳಿತ ಮಂಡಳಿಯ ಟ್ರಸ್ಟಿಗಳು, ಕ್ಷೇತ್ರ ಅಭಿವೃದ್ಧಿ ಸಮಿತಿಯ ಪದಾಧಿಕಾರಿಗಳು ಹಾಗೂ ಹಲವು ಗಣ್ಯರು ಉಪಸ್ಥಿತರಿದ್ದರು.
ಈ ಬಾರಿ ಮಹಿಳಾ ದಸರಾ ವಿಶೇಷ ಆಕರ್ಷಣೆ
ಕ್ಷೇತ್ರದ ಖಜಾಂಚಿ ಪದ್ಮರಾಜ್ ಆರ್. ಪೂಜಾರಿ ಮಾಧ್ಯಮದವರೊಂದಿಗೆ ಮಾತನಾಡಿ, ಬಿ. ಜನಾರ್ದನ ಪೂಜಾರಿ ಅವರ ನೇತೃತ್ವದಲ್ಲಿ ಆಡಳಿತ ಮಂಡಳಿ ಹಾಗೂ ಅಭಿವೃದ್ಧಿ ಸಮಿತಿಯ ಸಹಯೋಗದೊಂದಿಗೆ ಈ ಬಾರಿಯ ಮಂಗಳೂರು ದಸರಾ ನಡೆಯುತ್ತಿದೆ ಎಂದು ತಿಳಿಸಿದರು.
ಕಳೆದ ವರ್ಷ ಆರಂಭಿಸಿದ್ದ ಮಕ್ಕಳ ದಸರಾ ಮತ್ತು ಕಿನ್ನಿಪಿಲಿ ಕಾರ್ಯಕ್ರಮಗಳನ್ನು ಈ ಬಾರಿಯೂ ಮುಂದುವರಿಸಲಾಗುವುದು. ಇದೇ ಮೊದಲ ಬಾರಿಗೆ ಮಹಿಳಾ ದಸರಾ ಆಯೋಜಿಸಲಾಗುತ್ತಿದ್ದು, ಮಹಿಳೆಯರಿಗಾಗಿ ವಿವಿಧ ಸ್ಪರ್ಧೆಗಳು ಹಾಗೂ ವಿಶೇಷ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ಹೇಳಿದರು.
ಭಕ್ತರ ಬೇಡಿಕೆಯಂತೆ ಅಕ್ಟೋಬರ್ 20ರಂದು ಅಕ್ಷರಾಭ್ಯಾಸ ಕಾರ್ಯಕ್ರಮವನ್ನೂ ಆಯೋಜಿಸಲಾಗಿದೆ. ಈ ಬಾರಿ ಕ್ಷೇತ್ರಕ್ಕೆ ಭೇಟಿ ನೀಡುವ ಭಕ್ತರ ಸಂಖ್ಯೆ ಶೇ. 25ರಿಂದ 30ರಷ್ಟು ಹೆಚ್ಚಾಗುವ ನಿರೀಕ್ಷೆಯಿದ್ದು, ವ್ಯವಸ್ಥಿತ ನಿರ್ವಹಣೆಗಾಗಿ ಒಂದು ಸಾವಿರಕ್ಕೂ ಹೆಚ್ಚು ಸ್ವಯಂಸೇವಕರನ್ನು ನಿಯೋಜಿಸಲಾಗಿದೆ ಎಂದು ತಿಳಿಸಿದರು.
ಮುಖ್ಯಮಂತ್ರಿ ಆಗಮನ ಮುಂದೂಡಿಕೆ
ಸೋಮವಾರ ಸಂಜೆ 6.30ಕ್ಕೆ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಮಂಗಳೂರು ದಸರಾ ಮಹೋತ್ಸವವನ್ನು ಉದ್ಘಾಟಿಸಬೇಕಿತ್ತು. ಆದರೆ ತುರ್ತು ಕಾರಣದಿಂದ ದೆಹಲಿಗೆ ತೆರಳಬೇಕಾದ ಹಿನ್ನೆಲೆಯಲ್ಲಿ ಅವರ ಪ್ರವಾಸ ರದ್ದಾಗಿದೆ. ಅಕ್ಟೋಬರ್ 15 ಅಥವಾ 16ರಂದು ಮುಖ್ಯಮಂತ್ರಿ ಕ್ಷೇತ್ರಕ್ಕೆ ಭೇಟಿ ನೀಡುವ ನಿರೀಕ್ಷೆಯಿದೆ ಎಂದು ಪದ್ಮರಾಜ್ ಆರ್. ಪೂಜಾರಿ ತಿಳಿಸಿದರು.
ಮಂಗಳೂರು
Mangaluru-ಬೆಳೆ ವಿಮೆ ಅನ್ಯಾಯ ಆರೋಪ: ಅ.9ರಂದು ಮಂಗಳೂರಿನಲ್ಲಿ ರೈತರ ಬೃಹತ್ ಹಕ್ಕೊತ್ತಾಯ | ಸಹಕಾರ ಭಾರತಿ – ಬಿಜೆಪಿ ಬೆಂಬಲ
ಬೆಳೆ ವಿಮೆ ಪಾವತಿಯಲ್ಲಿ ರೈತರಿಗೆ ಅನ್ಯಾಯವಾಗಿದೆ ಎಂದು ಆರೋಪಿಸಿ ಸಹಕಾರ ಭಾರತಿ ಹಾಗೂ ಬಿಜೆಪಿ ನೇತೃತ್ವದಲ್ಲಿ ಅ.9ರಂದು ಮಂಗಳೂರಿನಲ್ಲಿ ಬೃಹತ್ ಹಕ್ಕೊತ್ತಾಯ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಮಂಗಳೂರಿನ ಟೌನ್‌ಹಾಲ್‌ನಲ್ಲಿ ಶುಕ್ರವಾರ ಬೆಳಗ್ಗೆ 10.30ಕ್ಕೆ ಕಾರ್ಯಕ್ರಮ ನಡೆಯಲಿದೆ.
ಮಂಗಳೂರು: ಬೆಳೆ ವಿಮೆ ಪಾವತಿಯಲ್ಲಿ ರೈತರಿಗೆ ಅನ್ಯಾಯವಾಗಿದೆ ಎಂದು ಆರೋಪಿಸಿ ಸಹಕಾರ ಭಾರತಿ ಹಾಗೂ ಬಿಜೆಪಿ ನೇತೃತ್ವದಲ್ಲಿ ಅ.9ರಂದು ಮಂಗಳೂರಿನಲ್ಲಿ ಬೃಹತ್ ಹಕ್ಕೊತ್ತಾಯ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಮಂಗಳೂರಿನ ಟೌನ್‌ಹಾಲ್‌ನಲ್ಲಿ ಶುಕ್ರವಾರ ಬೆಳಗ್ಗೆ 10.30ಕ್ಕೆ ಕಾರ್ಯಕ್ರಮ ನಡೆಯಲಿದೆ. ಬೆಳೆ ವಿಮೆ ಯೋಜನೆಯಡಿ ರೈತರಿಗೆ ಸೂಕ್ತ ಪರಿಹಾರ ದೊರೆಯದಿರುವುದು ಸೇರಿದಂತೆ ವಿಮೆ ಪಾವತಿಗೆ ಸಂಬಂಧಿಸಿದ ಸಮಸ್ಯೆಗಳ ಕುರಿತು ಸಭೆಯಲ್ಲಿ ಧ್ವನಿ ಎತ್ತಲಾಗುತ್ತದೆ.
ಬೆಳೆ ವಿಮೆ ಯೋಜನೆಯಡಿ ರೈತರಿಗೆ ನ್ಯಾಯಯುತ ಪರಿಹಾರ ದೊರೆಯಬೇಕು ಹಾಗೂ ವಿಮೆ ಪಾವತಿಯಲ್ಲಿ ಉಂಟಾಗಿರುವ ಸಮಸ್ಯೆಗಳಿಗೆ ಶೀಘ್ರ ಪರಿಹಾರ ಕಲ್ಪಿಸಬೇಕು ಎಂಬುದು ಪ್ರಮುಖ ಬೇಡಿಕೆಯಾಗಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಸದಸ್ಯರು ಸೇರಿದಂತೆ ರೈತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಬೆಳೆ ವಿಮೆಯಲ್ಲಿ ಆಗಿರುವ ಅನ್ಯಾಯದ ವಿರುದ್ಧ ಒಗ್ಗಟ್ಟಿನಿಂದ ಹಕ್ಕೊತ್ತಾಯ ಮಂಡಿಸುವಂತೆ ಆಯೋಜಕರು ಮನವಿ ಮಾಡಿದ್ದಾರೆ.
-
ನಿಧನ ವಾರ್ತೆ10 hours agoSullia-Big Breaking: ಸುಳ್ಯ: ವಿದ್ಯುತ್ ಶಾಕ್ಗೆ ಇಬ್ಬರು ಯುವಕರು ಬಲಿ; ಬಾಲಕನಿಗೆ ಗಾಯ
-
Uncategorized24 hours ago
Digitel Arrest ಡಿಜಿಟಲ್ ಅರೆಸ್ಟ್ ಹೆಸರಿನಲ್ಲಿ ಪುತ್ತೂರಿನ ವ್ಯಕ್ತಿಗೆ ₹1.31 ಕೋಟಿ ವಂಚನೆ
-
ಸ್ಥಳೀಯ9 hours agoArrested-1,000 ಅಡಿ ಆಳದ ಪ್ರಪಾತದಲ್ಲಿ ಇಂಜಿನಿಯರಿಂಗ್ ವಿದ್ಯಾರ್ಥಿನಿ ಶವ ಪತ್ತೆ; ಆತ್ಮಹತ್ಯೆ ಕತೆ ಕಟ್ಟಿದ ಪ್ರಿಯಕರ ಅರೆಸ್ಟ್..!
-
ಮಂಗಳೂರು8 hours agoSoujanya Case-BIG BREAKING NEWS: ಸೌಜನ್ಯ ಪ್ರಕರಣ: ಮಂಗಳೂರಿನಲ್ಲಿ ಎಸ್ಐಟಿ ಮಹತ್ವದ ಸಭೆ; ಸೌಜನ್ಯ ದೇಹ ಸಿಕ್ಕ ಸ್ಥಳಕ್ಕೆ ಭೇಟಿ ಸಾಧ್ಯತೆ
-
ಸ್ಥಳೀಯ10 hours agoSatish Patri-ಚಿಕ್ಕಮಗಳೂರು: ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆ ಮೇಲೆ ಅತ್ಯಾಚಾರ ಆರೋಪ; ತಲೆಮರೆಸಿಕೊಂಡಿದ್ದ ಅರ್ಚಕ ಸತೀಶ್ ಪಾತ್ರಿ ಅರೆಸ್ಟ್..!
-
ನಿಧನ ವಾರ್ತೆ5 hours agoKalmadka-ಸುಳ್ಯ ಕಲ್ಮಡ್ಕದಲ್ಲಿ ದುರಂತ: ವಿದ್ಯುತ್ ಸ್ಪರ್ಶಿಸಿ ಮೀನು ಹಿಡಿಯಲು ಹೋದ ಬಾವ–ಬಾಮೈದ ಸಾವು
-
ಬಿಗ್ ನ್ಯೂಸ್5 hours agoVitla-ವಿಟ್ಲ: ಕಾರು–ಆಕ್ಟಿವಾ ಡಿಕ್ಕಿ; ಸವಾರನಿಗೆ ಗಂಭೀರ ಗಾಯ
-
ರಾಜಕೀಯ9 hours agoSudha Yadav-ಆರು ರಾಜ್ಯಗಳಿಗೆ ರಾಜ್ಯಪಾಲರ ಬದಲಾವಣೆ: ಕರ್ನಾಟಕಕ್ಕೆ ನೂತನ ರಾಜ್ಯಪಾಲರಾಗಿ ಸುಧಾ ಯಾದವ್




















