Connect with us

ಆರೋಗ್ಯ

ನೆಲಕಡಲೆ ಇದು ‘ಬಡವರ ಬಾದಾಮಿ’ !!!
ಇದರ ಸೇವನೆಯಿಂದ ಗಂಭೀರವಾದ ಆರೋಗ್ಯ ‌ಸಮಸ್ಯೆಯಿಂದ ಕಾಪಾಡಿಕೊಳ್ಳುವುದು ಹೇಗೆ? ಈ ಸ್ಟೋರಿ ಓದಿ

ನೆಲಕಡಲೆ
Peanut
Ground but
ಕಡಲೆಕಾಯಿ
ಶೇಂಗಾ

Published

on

Ad Widget

Ad Widget

Ad Widget

Ad Widget

ನಮ್ಮ ಈಗಿನ ಜೀವನಶೈಲಿಯಿಂದಾಗಿ ಅನೇಕ ಗಂಭೀರ ಖಾಯಿಲೆಗಳು ಜನರನ್ನು ಆವರಿಸುತ್ತಿದೆ. ಅಧಿಕ ರಕ್ತದೊತ್ತಡ, ಸಕ್ಕರೆ ಖಾಯಿಲೆ, ಸ್ಥೂಲಕಾಯ ಹೀಗೆ ಇನ್ನಿತರ ಖಾಯಿಲೆಗಳು ಅನಾಯಾಸವಾಗಿ ಎಲ್ಲರನ್ನು ಕಾಡುತ್ತಿದೆ. ಇದಕ್ಕಾಗಿ ಆರೋಗ್ಯಕರಲ್ಲದ ಆಹಾರ ಪದ್ಧತಿಯನ್ನು ಬದಲಾಯಿಸಿಕೊಳ್ಳುವುದು ಬಹಳ ಮುಖ್ಯ.

Ad Widget

Ad Widget

Ad Widget

Ad Widget

ಕೆಟ್ಟ ಜೀರ್ಣಾಂಗ ವ್ಯವಸ್ಥೆಗೆ ತುತ್ತಾಗಿ ತೂಕವು ವೇಗವಾಗಿ ಬೆಳೆಯಲು ಪ್ರಾರಂಭಿಸುತ್ತದೆ. ಜೊತೆಗೆ ಹಲವಾರು ರೀತಿಯ ಖಾಯಿಲೆಗಳಿಗೆ ತುತ್ತಾಗುತ್ತಿದ್ದೇವೆ.

Ad Widget

Ad Widget alt="Ad Widget"/>

Ad Widget

ಅದಕ್ಕೆ ಪರಿಹಾರೋಪಯಗಳು ಹಲವಾರಿದೆ. ಅದರಲ್ಲೂ ಪ್ರತಿನಿತ್ಯ ಕಡಲೆಕಾಯಿ ಅಥವಾ ಶೇಂಗಾ ತಿನ್ನುವುದರಿಂದ ದೇಹದಲ್ಲಿನ ಜೀರ್ಣಾಂಗ ವ್ಯವಸ್ಥೆಯು ಸರಿಯಾಗಿರುತ್ತದೆ ಎಂಬುದು ಆರೋಗ್ಯ ತಜ್ಞರ ಅಭಿಪ್ರಾಯ. ಕಡಲೆಕಾಯಿ ಸೇವನೆಯಿಂದ ದೇಹವು ಶಕ್ತಿಯನ್ನು ಪಡೆಯುತ್ತದೆ ಮತ್ತು ಕೊಬ್ಬು ಕ್ರಮೇಣವಾಗಿ ಕಡಿಮೆಯಾಗುತ್ತದೆ.

Ad Widget

Ad Widget <> Ad Widget

ಕಡಲೆಕಾಯಿಯಲ್ಲಿ ಅನೇಕ ಪ್ರಯೋಜನಕಾರಿ ಅಂಶಗಳು ಕಂಡುಬರುತ್ತವೆ. ಒಂದೊಂದಾಗಿ ತಿಳಿಯೋಣ ಬನ್ನಿ.

ಹಾಲು ಮತ್ತು ಮೊಟ್ಟೆಗೆ ಹೋಲಿಸಿದರೆ ಕಡಲೆಕಾಯಿಯಲ್ಲಿ ಪ್ರೋಟೀನ್ ಪ್ರಮಾಣ ಹೆಚ್ಚಾಗಿದೆ. ಬಾದಾಮಿಯಲ್ಲಿರುವ ಎಲ್ಲಾ ಅಂಶಗಳಿ ಇದರಲ್ಲಿದೆ. ಅಲ್ಲದೆ ಕೈಗೆಟುಕುವ ಬೆಲೆಯಲ್ಲಿ ದೊರೆಯುತ್ತದೆ. ಹಾಗಾಗಿ ಕಡಲೆಕಾಯಿಯನ್ನು ಬಡವರ ಬಾದಾಮಿ ಎಂದೇ ಕರೆಯುತ್ತಾರೆ

Ad Widget

Ad Widget

ಕಡಲೆಕಾಯಿಯಲ್ಲಿ ಫೈಬರ್ ಮತ್ತು ವಿಟಮಿನ್‌ಗಳು ಸಹ ಹೇರಳವಾಗಿ ಕಂಡುಬರುತ್ತವೆ. ಇದರಲ್ಲಿ ಆ್ಯಂಟಿಒಕ್ಸಿಡೆಂಟ್‌ಗಳು ಮತ್ತು ಕ್ಯಾಲ್ಸಿಯಂ ಕೂಡ ಹೇರಳವಾಗಿದೆ. ಇದು ದೇಹದ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ.

ಕಡಲೆಕಾಯಿಯು ಮಹಿಳೆಯರಲ್ಲಿ ಟೈಪ್ 2 ಮಧುಮೇಹದ ಅಪಾಯವನ್ನು ಕಡಿಮೆ ಮಾಡುತ್ತದೆ ಎಂಬುದು ಸಂಶೋಧನೆಯಲ್ಲಿ ದೃಢಪಟ್ಟಿದೆ.

ಇದು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಕಾಪಾಡಬಲ್ಲದು. ದೇಹದಲ್ಲಿ ಹೆಚ್ಚುತ್ತಿರುವ ಕೊಲೆಸ್ಟ್ರಾಲ್ ಮಟ್ಟವನ್ನು ಕಡಲೆಕಾಯಿ ನಿಯಂತ್ರಿಸುತ್ತದೆ. ಇದರಿಂದಾಗಿ ಹೃದಯ ಸಂಬಂಧಿ ಕಾಯಿಲೆಗಳ ಅಪಾಯದಿಂದ ಕಾಪಾಡುತ್ತದೆ.

ಕಡಲೆಕಾಯಿ ಸೇವನೆಯಿಂದ ದೇಹದ ದೌರ್ಬಲ್ಯ ಮಾಯವಾಗಿ, ಶಕ್ತಿ ತುಂಬಿಕೊಳ್ಳುತ್ತದೆ. ಸ್ವಲ್ಪ ಕಡಲೆಕಾಯಿಯನ್ನು ರಾತ್ರಿ ಮಲಗುವ ಮುನ್ನ ನೀರಿನಲ್ಲಿ ನೆನೆಸಿಡಿ. ಅದನ್ನು ನೀವು ಹಾಗೇ ತಿನ್ನಬಹುದು, ಅಥವಾ ಉಪಹಾರದ ಜೊತೆ ಸೇವನೆ ಮಾಡಬಹುದು.

ಪ್ರೋಟೀನ್ ಮತ್ತು ನಾರಿನಂಶವೂ ಸಮೃದ್ಧವಾಗಿದೆ, ಇದು ಕೊಲೆಸ್ಟ್ರಾಲ್ ಮಟ್ಟವನ್ನು ಕಡಿಮೆ ಮಾಡುತ್ತದೆ. ಹೀಗಾಗಿ ಅಪಧಮನಿಕಾಠಿಣ್ಯದಂತಹ ಹೃದಯದ ಸ್ಥಿತಿಗಳಿಂದ ರಕ್ಷಿಸುತ್ತದೆ.

*ಪ್ರೋಟೀನ್‌ಗಳ ಉತ್ತಮ ಮೂಲ ಇದಾಗಿದ್ದು, ಪ್ರೋಟೀನ್ ಸ್ನಾಯುವಿನ ದ್ರವ್ಯರಾಶಿಯನ್ನು ನಿರ್ಮಿಸಲು ಸಹಾಯ ಮಾಡುತ್ತದೆ ಮತ್ತು ಸ್ನಾಯುವಿನ ಬೆಳವಣಿಗೆಯನ್ನು ಹೆಚ್ವಿನ ಸಹಕಾರ ನೀಡುತ್ತದೆ.

*ತೂಕ ಇಳಿಸಿಕೊಳ್ಳಲು ಬಯಸುವವರು ಕಡಲೆಕಾಯಿಯನ್ನು ಮಿತವಾಗಿ ಸೇರಿಸಬಹುದು.

*ಆರೋಗ್ಯಕರ ಮತ್ತು ತೀಕ್ಷ್ಣವಾದ ಮೆದುಳಿಗೆ, ನಿಮಗೆ ವಿಟಮಿನ್ ಬಿ 1, ನಿಯಾಸಿನ್ ಮತ್ತು ಫೋಲೇಟ್‌ನಂತಹ ಪೋಷಕಾಂಶಗಳು ಬೇಕಾಗುತ್ತವೆ. ಇವೆಲ್ಲವೂ ಇದರಲ್ಲಿದ್ದು, ಸೇವನೆಯಿಂದ ನಿಮ್ಮ ಮೆದುಳು ಹೆಚ್ಚು ಸಕ್ರಿಯ ಮತ್ತು ತೀಕ್ಷ್ಣವಾಗಿರುತ್ತದೆ.

*ಮ್ಯಾಂಗನೀಸ್ ಮತ್ತು ರಂಜಕಗಳು ಸಮೃದ್ಧವಾಗಿದೆ. ಕಡಲೆಕಾಯಿಯಲ್ಲಿರುವ ಈ ಪೋಷಕಾಂಶಗಳು ಮತ್ತು ಇತರ ವಿಟಮಿನ್‌ಗಳು ನಿಮ್ಮ ಎಲುಬುಗಳ ಬಲವನ್ನು ಕಾಪಾಡುತ್ತದೆ.

*ಕಡಲೆಕಾಳುಗಳು ರೆಸ್ವೆರಾಟ್ರೊಲ್ ಮತ್ತು ಮೊನೊಸಾಚುರೇಟೆಡ್ ಕೊಬ್ಬನ್ನು ಹೊಂದಿರುತ್ತವೆ, ಇದು ಚರ್ಮವನ್ನು ಸ್ಪಷ್ಟವಾಗಿಸುವುದು ಮಾತ್ರವಲ್ಲದೆ ದೇಹದಿಂದ ವಿಷಕಾರಿ ವಸ್ತುಗಳನ್ನು ತೊಳೆಯುವುದು.

*ಕಡಲೆಕಾಯಿಯಲ್ಲಿರುವ ಝಿಂಕ್, ಸ್ಪಷ್ಟ ದೃಷ್ಟಿಗೆ ಅಗತ್ಯವಿರುವ ವಿಟಮಿನ್ ಎ ನ್ನು ದೇಹಕ್ಕೆ ವರ್ಗಾಯಿಸಲು ಸಹಾಯ ಮಾಡುತ್ತದೆ.‌

*ರೆಸ್ವೆರಾಟ್ರೊಲ್‌ನ ಉತ್ತಮ ಅಂಶವನ್ನು ಹೊಂದಿದೆ, ಇದು ಬೆಳೆಯುತ್ತಿರುವ ಕ್ಯಾನ್ಸರ್‌ಗೆ ರಕ್ತ ಪೂರೈಕೆಯನ್ನು ಕಡಿತಗೊಳಿಸುವ ಮೂಲಕ ಮತ್ತು ಕ್ಯಾನ್ಸರ್ ಕೋಶಗಳ ಬೆಳವಣಿಗೆಯನ್ನು ತಡೆಯುತ್ತದೆ.

*ಅವುಗಳನ್ನು ನಿಯಮಿತವಾಗಿ ಸೇವಿಸುವ ಮೂಲಕ ಪಿತ್ತಗಲ್ಲುಗಳ ಅಪಾಯವನ್ನು ಕಡಿಮೆ ಮಾಡಬಹುದು.

ಆದರೆ ನೆನಪಿಡಬೇಕಾದ ಒಂದು ಮಾಹಿತಿ ಏನೆಂದರೆ ಕಡಲೆಕಾಯಿಯನ್ನು ರಾತ್ರಿ ಸೇವನೆ ಮಾಡಬಾರದು. ಕಾರಣ ಇಷ್ಟೇ ಜೀರ್ಣವಾಗಲು ಹೆಚ್ಚು ಸಮಯ ತೆಗೆದುಕೊಳ್ಳುತ್ತದೆ. ರಾತ್ರಿ ನಾವು ಯಾವುದೇ ವ್ಯಾಯಾಮಾದಿಗಳನ್ನು ಮಾಡುವುದಿಲ್ಲ. ಬೆಳಗ್ಗಿನ ವರೆಗೆ ನಿದ್ರಿಸುತ್ತೇವೆ. ಅಜೀರ್ಣವಾಗುವ ಸಾಧ್ಯತೆ ಇದೆ.

ಇಷ್ಟು ಮಾಹಿತಿಯನ್ನು ತಿಳಿದ ಬಳಿಕ ನಾವ್ಯಾಕೆ ಇನ್ಮುಂದೆ ಪ್ರತಿನಿತ್ಯ ನೆಲಕಡಲೆಯನ್ನು ತಿನ್ನಬಾರದು.? ಎನ್ನುವ ಪ್ರಶ್ನೆ ಮೂಡುತ್ತದೆ. ಹಾಗಾಗಿ ನೆಲಕಡಲೆ ಯನ್ನು ತಿನ್ನೋಣ ಹಲವು ಆರೋಗ್ಯ ಸಮಸ್ಯೆಗಳಿಂದ ದೂರವಿರೋಣ

Ad Widget
Click to comment

Leave a Reply

ಆರೋಗ್ಯ

Puttur-ಪುತ್ತೂರು: ಸಿಟಿ ಆಸ್ಪತ್ರೆಯಲ್ಲಿ ಉಚಿತ ಮೂಳೆ ಖನಿಜ ಸಾಂದ್ರತೆ (BMD) ಚಿಕಿತ್ಸಾ ಶಿಬಿರ

Published

on

Ad Widget

Ad Widget

Ad Widget

Ad Widget

ಪುತ್ತೂರು ಸಿಟಿ ಆಸ್ಪತ್ರೆ ಚಾರಿಟೇಬಲ್ ಟ್ರಸ್ಟ್ ಹಾಗೂ ಇನ್ನರ್ ವೀಲ್ ಕ್ಲಬ್ ಪುತ್ತೂರು ಇವರ ಸಹಯೋಗದಲ್ಲಿ ಇಂದು (ನ.19) ಬೆಳಿಗ್ಗೆ 9.30ರಿಂದ ಮಧ್ಯಾಹ್ನ 2.30ರವರೆಗೆ ಉಚಿತ ಮೂಳೆ ಖನಿಜ ಸಾಂದ್ರತೆ (BMD) ಚಿಕಿತ್ಸಾ ಶಿಬಿರವು ನಡೆಯಿತು. ಪುತ್ತೂರು ಸಿಟಿ ಆಸ್ಪತ್ರೆಯಲ್ಲಿ ಶಿಬಿರವನ್ನು ಏರ್ಪಡಿಸಲಾಗಿತ್ತು.

Ad Widget

Ad Widget

Ad Widget

Ad Widget

ಪುತ್ತೂರು: ಪುತ್ತೂರು ಸಿಟಿ ಆಸ್ಪತ್ರೆ ಚಾರಿಟೇಬಲ್ ಟ್ರಸ್ಟ್ ಹಾಗೂ ಇನ್ನರ್ ವೀಲ್ ಕ್ಲಬ್ ಪುತ್ತೂರು ಇವರ ಸಹಯೋಗದಲ್ಲಿ ಇಂದು (ನ.19) ಬೆಳಿಗ್ಗೆ 9.30ರಿಂದ ಮಧ್ಯಾಹ್ನ 2.30ರವರೆಗೆ ಉಚಿತ ಮೂಳೆ ಖನಿಜ ಸಾಂದ್ರತೆ (BMD) ಚಿಕಿತ್ಸಾ ಶಿಬಿರವು ನಡೆಯಿತು. ಪುತ್ತೂರು ಸಿಟಿ ಆಸ್ಪತ್ರೆಯಲ್ಲಿ ಶಿಬಿರವನ್ನು ಏರ್ಪಡಿಸಲಾಗಿತ್ತು.

Ad Widget

Ad Widget alt="Ad Widget"/>

Ad Widget

ಬೆನ್ನು ನೋವು, ಮೊಣಕಾಲು ನೋವು, ಸೊಂಟ ನೋವು ಹಾಗೂ ಸ್ನಾಯು ನೋವು ಮುಂತಾದ ಸಮಸ್ಯೆಗಳು ಮೂಳೆ ಸವೆತ ಅಥವಾ ಮುಂದಿನ ದಿನಗಳಲ್ಲಿ ಮೂಳೆ ಮುರಿತಕ್ಕೆ ಕಾರಣವಾಗುವ ಸಾಧ್ಯತೆಯಿದೆ. ಇಂತಹ ಲಕ್ಷಣಗಳನ್ನು ನಿರ್ಲಕ್ಷಿಸದೆ ಆರಂಭದಲ್ಲೇ ತಪಾಸಣೆ ಮಾಡಿಸಿಕೊಂಡು ಸೂಕ್ತ ಚಿಕಿತ್ಸೆ ಪಡೆಯುವುದು ಅಗತ್ಯ. ಈ ನಿಟ್ಟಿನಲ್ಲಿ ಸಾರ್ವಜನಿಕರಿಗೆ ಅನುಕೂಲವಾಗುವಂತೆ ಉಚಿತ BMD ಶಿಬಿರವನ್ನು ಆಯೋಜಿಸಲಾಗಿತ್ತು. ಆರೋಗ್ಯ ಸೇವಾ ವಿಭಾಗದ ಇಂಡ್‌ಕೆಮಿ ಹೆಲ್ತ್ ಸ್ಪೆಷಾಲಿಟಿ ಪ್ರೈವೇಟ್ ಲಿಮಿಟೆಡ್ ಪ್ರಾಯೋಜಕತ್ವದಲ್ಲಿ ಶಿಬಿರ ನಡೆಯಿತು.

Ad Widget

Ad Widget <> Ad Widget

ಶಿಬಿರದಲ್ಲಿ ಮೂಳೆ ತಜ್ಞರಾದ ಡಾ. ಭಾಸ್ಕರ್ ಎಸ್. (D’Ortho), ಆಡಳಿತ ನಿರ್ದೇಶಕರು, ಪುತ್ತೂರು ಸಿಟಿ ಆಸ್ಪತ್ರೆ ಇವರು ತಪಾಸಣೆ ಹಾಗೂ ಸಲಹೆ ನೀಡಿದರು.

ಇನ್ನರ್‌ ವೀಲ್‌ ಕ್ಲಬ್ ನ ನಿರ್ದೇಶಕಿ ಮಂಜುಳ ಭಾಸ್ಕರ್, ಅಧ್ಯಕ್ಷೆ ಮನೋರಮಾ ಸೂರ್ಯ, ಖಜಾಂಜಿ ಕವಿತಾ ಕೊಳತ್ತಾಯ, ಬಿಎಂ.ಡಿ ಕ್ಯಾಂಪ್‌ ಕಾರ್ಯದರ್ಶಿ ಶ್ರುತಿ ಎಸ್.‌ ಬಂಗೇರ ಶಿಬಿರದಲ್ಲಿ ಉಪಸ್ಥಿತರಿದ್ದರು.

Continue Reading

ಆರೋಗ್ಯ

‘Ritu Taare’ scheme-35 ವರ್ಷ ಮೇಲ್ಪಟ್ಟ ಮಹಿಳೆಯರ ಆರೋಗ್ಯಕ್ಕೆ ‘ಋತು ತಾರೆ’ ಯೋಜನೆ; ದ.ಕ.ದಲ್ಲಿ ಮೂರು ತಿಂಗಳ ಪ್ರಾಯೋಗಿಕ ಅನುಷ್ಠಾನ..! ನಟಿ ರಮ್ಯಾ ರಾಯಭಾರಿ

Published

on

Ad Widget

Ad Widget

Ad Widget

Ad Widget

35 ವರ್ಷ ಮೇಲ್ಪಟ್ಟ ಮಹಿಳೆಯರ ಆರೋಗ್ಯ ಮತ್ತು ಆರೈಕೆಗೆ ವಿಶೇಷ ಆದ್ಯತೆ ನೀಡುವ ಉದ್ದೇಶದಿಂದ ರಾಜ್ಯ ಸರಕಾರ ‘ಋತು ತಾರೆ’ ಎಂಬ ಮಧ್ಯವಯಸ್ಕ ಮಹಿಳೆಯರ ಆರೋಗ್ಯ ಮತ್ತು ಮೆನೋಪಾಸ್ ಕಾರ್ಯಕ್ರಮವನ್ನು ಜಾರಿಗೆ ತಂದಿದೆ. ಈ ಕಾರ್ಯಕ್ರಮದ ರಾಯಭಾರಿಯಾಗಿ ಚಿತ್ರನಟಿ ರಮ್ಯಾ ಕಾರ್ಯನಿರ್ವಹಿಸಲಿದ್ದಾರೆ.

Ad Widget

Ad Widget

Ad Widget

Ad Widget

ಬೆಂಗಳೂರು: 35 ವರ್ಷ ಮೇಲ್ಪಟ್ಟ ಮಹಿಳೆಯರ ಆರೋಗ್ಯ ಮತ್ತು ಆರೈಕೆಗೆ ವಿಶೇಷ ಆದ್ಯತೆ ನೀಡುವ ಉದ್ದೇಶದಿಂದ ರಾಜ್ಯ ಸರಕಾರ ‘ಋತು ತಾರೆ’ ಎಂಬ ಮಧ್ಯವಯಸ್ಕ ಮಹಿಳೆಯರ ಆರೋಗ್ಯ ಮತ್ತು ಮೆನೋಪಾಸ್ ಕಾರ್ಯಕ್ರಮವನ್ನು ಜಾರಿಗೆ ತಂದಿದೆ.

Ad Widget

Ad Widget alt="Ad Widget"/>

Ad Widget

ಈ ಕುರಿತು ಆರೋಗ್ಯ ಇಲಾಖೆ ಆದೇಶ ಹೊರಡಿಸಿದ್ದು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮೂರು ತಿಂಗಳ ಕಾಲ ಪ್ರಾಯೋಗಿಕವಾಗಿ ಕಾರ್ಯಕ್ರಮ ಅನುಷ್ಠಾನಗೊಳ್ಳಲಿದೆ. ಈ ಹಂತದ ಅನುಭವದ ಆಧಾರದಲ್ಲಿ ಬಳಿಕ ರಾಜ್ಯದಾದ್ಯಂತ ವಿಸ್ತರಿಸಲು ಸರಕಾರ ಉದ್ದೇಶಿಸಿದೆ.

Ad Widget

Ad Widget <> Ad Widget

ಮಹಿಳೆಯರ ಆರೋಗ್ಯವು ಕೇವಲ ತಾಯ್ತನಕ್ಕೆ ಸೀಮಿತವಾಗಿಲ್ಲ. ಮೆನೋಪಾಸ್ ಹಂತದಲ್ಲಿ ನಿದ್ರಾಹೀನತೆ, ದೇಹದಲ್ಲಿ ಏಕಾಏಕಿ ಬಿಸಿಯ ಅನುಭವ, ಕೀಲು ನೋವು, ಮೂಳೆಗಳ ದುರ್ಬಲತೆ, ಆತಂಕ ಹಾಗೂ ಮಾನಸಿಕ ಏರುಪೇರು ಸೇರಿದಂತೆ ಹಲವು ಸಮಸ್ಯೆಗಳು ಕಾಣಿಸಿಕೊಳ್ಳಬಹುದು. ಇವುಗಳನ್ನು ವಯಸ್ಸಿನ ಸಹಜ ಬದಲಾವಣೆ ಎಂದು ನಿರ್ಲಕ್ಷಿಸದೆ ಸೂಕ್ತ ತಪಾಸಣೆ ಮತ್ತು ಚಿಕಿತ್ಸೆ ಪಡೆಯುವುದು ಅಗತ್ಯ ಎಂದು ಸರಕಾರ ತಿಳಿಸಿದೆ.

‘ಋತು ತಾರೆ’ ಯೋಜನೆಯಡಿ ಮಹಿಳೆಯರಿಗಾಗಿ ಪ್ರತ್ಯೇಕ ಕ್ಲಿನಿಕ್‌ಗಳನ್ನು ತೆರೆಯಲಾಗುತ್ತದೆ. ಇಲ್ಲಿ ಸಮಗ್ರ ಆರೋಗ್ಯ ತಪಾಸಣೆ, ಮಾನಸಿಕ ಆರೋಗ್ಯ ಮತ್ತು ಪೌಷ್ಟಿಕ ಆಹಾರದ ಕುರಿತು ಮಾರ್ಗದರ್ಶನ ನೀಡಲಾಗುತ್ತದೆ. ಅಗತ್ಯವಿರುವವರಿಗೆ ತಜ್ಞ ವೈದ್ಯರಿಂದ ಚಿಕಿತ್ಸೆ ಒದಗಿಸುವುದರ ಜೊತೆಗೆ, ಆರೋಗ್ಯದ ವಿವರಗಳನ್ನು ದಾಖಲಿಸಲು ‘ಮಿಡ್-ಲೈಫ್ ಹೆಲ್ತ್ ಕಾರ್ಡ್’ ವಿತರಿಸಲಾಗುತ್ತದೆ.

Ad Widget

Ad Widget

ಈ ಕಾರ್ಯಕ್ರಮದ ರಾಯಭಾರಿಯಾಗಿ ಚಿತ್ರನಟಿ ರಮ್ಯಾ ಕಾರ್ಯನಿರ್ವಹಿಸಲಿದ್ದಾರೆ. ಮೆನೋಪಾಸ್ ಹಾಗೂ ಮಧ್ಯವಯಸ್ಕ ಮಹಿಳೆಯರ ಆರೋಗ್ಯದ ಕುರಿತು ಜಾಗೃತಿ ಮೂಡಿಸಿ, ಕಾರ್ಯಕ್ರಮದ ಸಂದೇಶವನ್ನು ರಾಜ್ಯದ ಮೂಲೆಮೂಲೆಗೂ ತಲುಪಿಸಲು ಅವರು ಸಹಕರಿಸಲಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮೂರು ತಿಂಗಳ ಪ್ರಾಯೋಗಿಕ ಅನುಷ್ಠಾನ ಪೂರ್ಣಗೊಂಡ ಬಳಿಕ ಯೋಜನೆಯನ್ನು ರಾಜ್ಯಾದ್ಯಂತ ವಿಸ್ತರಿಸಲಾಗುವುದು. ಮಹಿಳೆಯರ ಬದುಕಿನ ಪ್ರತಿಯೊಂದು ಹಂತದಲ್ಲೂ ಉತ್ತಮ ಆರೋಗ್ಯ ಸೇವೆ, ಸೂಕ್ತ ಆರೈಕೆ ಮತ್ತು ಘನತೆಯ ಬದುಕು ದೊರೆಯಬೇಕು ಎಂಬ ಉದ್ದೇಶದಿಂದ ಈ ಕಾರ್ಯಕ್ರಮ ರೂಪಿಸಲಾಗಿದೆ ಎಂದು ಸರಕಾರ ತಿಳಿಸಿದೆ.

Ad Widget
Continue Reading

ಆರೋಗ್ಯ

Puttur-ಸೆ.29: ವಿಶ್ವ ಹೃದಯ ದಿನ: ಪುತ್ತೂರಿನ ಮೆಡ್‌ಲ್ಯಾಂಡ್ ಆಸ್ಪತ್ರೆಯಲ್ಲಿ ಹೃದಯ ತಪಾಸಣಾ ಶಿಬಿರ

Published

on

Ad Widget

Ad Widget

Ad Widget

Ad Widget

ವಿಶ್ವ ಹೃದಯ ದಿನದ ಅಂಗವಾಗಿ ಪುತ್ತೂರಿನ ಸಂಪ್ಯದಲ್ಲಿರುವ ಮೆಡ್‌ಲ್ಯಾಂಡ್ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಸೆ.29, ಮಂಗಳವಾರದಂದು ಸಂಜೆ ಗಂಟೆ 3ರಿಂದ ವಿಶೇಷ ಹೃದಯ ತಪಾಸಣಾ ಶಿಬಿರ ಹಾಗೂ ಮಾಹಿತಿ ಕಾರ್ಯಾಗಾರವನ್ನು ಆಯೋಜಿಸಲಾಗಿದೆ.

Ad Widget

Ad Widget

Ad Widget

Ad Widget

ಪುತ್ತೂರು: ವಿಶ್ವ ಹೃದಯ ದಿನದ ಅಂಗವಾಗಿ ಪುತ್ತೂರಿನ ಸಂಪ್ಯದಲ್ಲಿರುವ ಮೆಡ್‌ಲ್ಯಾಂಡ್ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಸೆ.29, ಮಂಗಳವಾರದಂದು ಸಂಜೆ ಗಂಟೆ 3ರಿಂದ ವಿಶೇಷ ಹೃದಯ ತಪಾಸಣಾ ಶಿಬಿರ ಹಾಗೂ ಮಾಹಿತಿ ಕಾರ್ಯಾಗಾರವನ್ನು ಆಯೋಜಿಸಲಾಗಿದೆ.

Ad Widget

Ad Widget alt="Ad Widget"/>

Ad Widget

ಶಿಬಿರದಲ್ಲಿ ಹೃದಯದ ಆರೋಗ್ಯಕ್ಕೆ ಸಂಬಂಧಿಸಿದಂತೆ ಇ.ಸಿ.ಜಿ., ಇಕೋ (ECHO), ಟಿ.ಎಂ.ಟಿ. (TMT) ಸೇರಿದಂತೆ ಅಗತ್ಯ ತಪಾಸಣೆಗಳನ್ನು ನಡೆಸಲಾಗುವುದು. ತಪಾಸಣೆಯ ಬಳಿಕ ಹೃದ್ರೋಗ ತಜ್ಞ ವೈದ್ಯರಿಂದ ಸೂಕ್ತ ಸಲಹೆ ಮತ್ತು ಮಾರ್ಗದರ್ಶನವೂ ದೊರೆಯಲಿದೆ.

Ad Widget

Ad Widget <> Ad Widget

ಹೃದಯ ಸಂಬಂಧಿ ಕಾಯಿಲೆಗಳನ್ನು ಆರಂಭಿಕ ಹಂತದಲ್ಲೇ ಪತ್ತೆಹಚ್ಚಿ ಸೂಕ್ತ ಚಿಕಿತ್ಸೆ ಪಡೆಯಲು ಶಿಬಿರವು ಸಾರ್ವಜನಿಕರಿಗೆ ಉಪಯುಕ್ತ ಅವಕಾಶವಾಗಲಿದೆ. ವಿಶೇಷವಾಗಿ ಎದೆನೋವು, ಉಸಿರಾಟದ ತೊಂದರೆ, ಹೃದಯ ಬಡಿತದಲ್ಲಿ ವ್ಯತ್ಯಾಸ, ಅಧಿಕ ರಕ್ತದೊತ್ತಡ, ಮಧುಮೇಹ ಅಥವಾ ಕುಟುಂಬದಲ್ಲಿ ಹೃದಯ ಕಾಯಿಲೆಯ ಹಿನ್ನೆಲೆ ಹೊಂದಿರುವವರು ಶಿಬಿರದ ಪ್ರಯೋಜನ ಪಡೆಯುವಂತೆ ಆಸ್ಪತ್ರೆಯ ಆಡಳಿತ ಮಂಡಳಿ ಮನವಿ ಮಾಡಿದೆ.

ಹೃದಯದ ಆರೋಗ್ಯದ ಬಗ್ಗೆ ಮುನ್ನೆಚ್ಚರಿಕೆ ವಹಿಸುವುದು ಹಾಗೂ ನಿಯಮಿತ ತಪಾಸಣೆ ಮಾಡಿಸಿಕೊಳ್ಳುವ ಮೂಲಕ ಆರೋಗ್ಯಕರ ಜೀವನಶೈಲಿಯನ್ನು ರೂಢಿಸಿಕೊಳ್ಳುವಂತೆ ಆಸ್ಪತ್ರೆ ತಿಳಿಸಿದೆ.

Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!