ಅಪರಾಧ
Puttur | ಪುತ್ತೂರು: ‘ತಲ್ಲೈ- ಪೊಲ್ಲೈ’ ಅದೃಷ್ಟದಾಟವಾಡಿ ಪೊಲೀಸರ ಅತಿಥಿಗಳಾದ 7 ಜನ
ಪುತ್ತೂರು: ತಲ್ಲೈ- ಪೊಲ್ಲೈ ಅದೃಷ್ಟದಾಟವಾಡಿ 7 ಜನ ಪುತ್ತೂರು (Puttur) ಗ್ರಾಮಾಂತರ ಪೊಲೀಸರ ಅತಿಥಿಗಳಾದ ಘಟನೆ ಅ.25 ರಂದು ನಡೆದಿದೆ.
ಪುತ್ತೂರು ಗ್ರಾಮಾಂತರ ಠಾಣಾ ವ್ಯಾಪ್ತಿಯ ಅರಿಯಡ್ಕ ಗ್ರಾಮದ ಕೌಡಿಚ್ಚಾರಿನ ಸಿ.ಆರ್.ಸಿ. ಕಾಲೊನಿ ಬಳಿಯ ಸಾರ್ವಜನಿಕ ತೆರೆದ ಮೈದಾನದಲ್ಲಿ ಯಾವುದೇ ಅನುಮತಿ ಇಲ್ಲದೇ ಕೆಲವು ಜನರು ಹಣವನ್ನು ಪಣವಾಗಿಟ್ಟು ತಲೈ-ಪೊಲ್ಲೈ ಎಂಬ ಜೂಜಾಟ ಆಡುತ್ತಿದ್ದಾರೆ ಎಂಬುದಾಗಿ ಖಚಿತ ಮಾಹಿತಿ ಮೆರೆಗೆ ಪೊಲೀಸ್ ದಾಳಿ ನಡೆಸಿದ್ದಾರೆ.
ಗುಂಪು ಸೇರಿಕೊಂಡ 6 ಜನರಲ್ಲಿ ಓರ್ವ 2 ನಾಣ್ಯಗಳನ್ನು ತನ್ನ ಕೈಯಲ್ಲಿ ಹಿಡಿದುಕೊಂಡು ಸದ್ರಿ ನಾಣ್ಯಗಳಲ್ಲಿರುವ ಸಿಂಹದ ಮುಖವಿರುವ ಭಾಗವನ್ನು ತೋರಿಸಿ “ತಲ್ಲೈ” ಎಂದು ಹೇಳಿದಾಗ, ಅಲ್ಲಿ ಸೇರಿದವರ ಪೈಕಿ ಕೆಲವರು ತಮ್ಮದು ತಲ್ಲೈ ನೂರು ರೂಪಾಯಿ,” ಎಂದು ಹೇಳಿ ಹಣವನ್ನು ಪಣವಾಗಿ ಕಟ್ಟುತ್ತಿದ್ದರು. ನಾಣ್ಯಗಳಲ್ಲಿರುವ ನಂಬರ್ ಇರುವ ಭಾಗವನ್ನು ತೋರಿಸಿ “ಪೊಲ್ಲೈ” ಎಂದು ಹೇಳಿದಾಗ, ಅಲ್ಲಿ ಸೇರಿದವರ ಪೈಕಿ ಕೆಲವರು ತಮ್ಮದು ಪೊಲ್ಲೈ ನೂರು ರೂಪಾಯಿ,” ಎಂದು ಹೇಳಿ ಹಣವನ್ನು ಪಣವಾಗಿ ಕಟ್ಟುತ್ತಿದ್ದರು.
ನಂತರ ತನ್ನ ಕೈಯಲ್ಲಿರುವ ಎರಡೂ ನಾಣ್ಯಗಳನ್ನು ಜೋಡಿಸಿ ಏಕಕಾಲದಲ್ಲಿ ಮೇಲಕ್ಕೆ ಚಿಮ್ಮಿಸಿದಾಗ ಎರಡೂ ನಾಣ್ಯಗಳ ಸಿಂಹದ ಮುಖವಿರುವ ಭಾಗವು ಮೇಲ್ಮುಖವಾಗಿ ಬಿದ್ದರೆ ತಲ್ಲೈ ಎಂದು ಹೇಳಿದವರಿಗೆ ಅವರು ಪಣವಾಗಿ ಕಟ್ಟಿರುವ ಹಣದ ದುಪ್ಪಟ್ಟು ಹಣ ನೀಡುತ್ತಿದ್ದು, ಪೊಲ್ಲೈ ಎಂದು ಹೇಳಿದವರು ಪಣವಾಗಿಟ್ಟ ಹಣವನ್ನು ಕಳೆದುಕೊಳ್ಳುತ್ತಿದ್ದರು. ಅದೇ ರೀತಿ ಎರಡೂ ನಾಣ್ಯಗಳಲ್ಲಿ ನಂಬರ್ ಇರುವ ಭಾಗವು ಮೇಲ್ಮುಖವಾಗಿ ಬಿದ್ದರೆ ಪೊಲ್ಲೈ ಎಂದು ಹೇಳಿದವರಿಗೆ ಅವರು ಪಣವಾಗಿ ಕಟ್ಟಿರುವ ಹಣದ ದುಪ್ಪಟ್ಟು ಹಣ ನೀಡುತ್ತಿದ್ದು, ತಲ್ಲೈ ಎಂದು ಹೇಳಿದವರು ಪಣವಾಗಿಟ್ಟ ಹಣವನ್ನು ಕಳೆದುಕೊಳ್ಳುತ್ತಿದ್ದರು.
ಇದರಿಂದಾಗಿ ಸದ್ರಿಯವರು ಹಣವನ್ನು ಪಣವಾಗಿಟ್ಟು, “ತಲ್ಲೈ-ಪೊಲ್ಲೈ” ಎಂಬ ಅದೃಷ್ಟದ ಆಟ ಆಡುತ್ತಿರುವುದು ಖಚಿತವಾಗಿರುತ್ತದೆ. ಅದರಂತೆ ಸದ್ರಿ ಸ್ಥಳದಲ್ಲಿ “ತಲ್ಲೈ-ಪೊಲ್ಲೈ” ಎಂಬ ಅದೃಷ್ಟದ ಆಟ ಆಡುತ್ತಿದ್ದ ಜ್ಞಾನ ಪ್ರಕಾಶ್, ಗೋಪಾಲ ಕೃಷ್ಣ, ವನರಾಜ್, ರವೀಂದ್ರ, ಗೋವಿಂದ, ಉದಯ ಕುಮಾರ್ , ಸುಧಾಕರ ರವರನ್ನು ಬಂಧಿಸಿ ಜೂಜಾಟಕ್ಕೆ ಬಳಸಿದ ರೂ. 7222 ಸ್ವಾಧೀನಪಡಿಸಿಕೊಂಡಿದ್ದಾರೆ.
ಸ್ಥಳೀಯ
Yatnal-ಮತದಾರರ ಪಟ್ಟಿಯಿಂದ ಹೆಸರು ತೆಗೆದುಹಾಕಲು ನಕಲಿ ಮರಣ ಪ್ರಮಾಣಪತ್ರ ಲಗತ್ತಿಸಿದ ಆರೋಪ : ಯತ್ನಾಳ್ ವಿರುದ್ಧ ಎಫ್‌ಐಆರ್
ಜೀವಂತವಾಗಿರುವ ವ್ಯಕ್ತಿ ಮೃತಪಟ್ಟಿದ್ದಾರೆ ಎಂದು ನಕಲಿ ಮರಣ ಪ್ರಮಾಣಪತ್ರ ಲಗತ್ತಿಸಿ ಮತದಾರರ ಪಟ್ಟಿಯಿಂದ ಹೆಸರು ತೆಗೆದುಹಾಕಲು ಅರ್ಜಿ ಸಲ್ಲಿಸಿದ ಆರೋಪದ ಮೇಲೆ ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಇದೇ ರೀತಿಯ ಆರೋಪದಡಿ ಬಿಜೆಪಿ ಪಾಲಿಕೆ ಸದಸ್ಯ ಗಿರೀಶ ಪಾಟೀಲ ಹಾಗೂ ತಿಕೋಟಾದ ಆರು ಮಂದಿ ವಿರುದ್ಧವೂ ಪ್ರತ್ಯೇಕ ಪ್ರಕರಣಗಳು ದಾಖಲಾಗಿವೆ.
ವಿಜಯಪುರ: ಜೀವಂತವಾಗಿರುವ ವ್ಯಕ್ತಿ ಮೃತಪಟ್ಟಿದ್ದಾರೆ ಎಂದು ನಕಲಿ ಮರಣ ಪ್ರಮಾಣಪತ್ರ ಲಗತ್ತಿಸಿ ಮತದಾರರ ಪಟ್ಟಿಯಿಂದ ಹೆಸರು ತೆಗೆದುಹಾಕಲು ಅರ್ಜಿ ಸಲ್ಲಿಸಿದ ಆರೋಪದ ಮೇಲೆ ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಇದೇ ರೀತಿಯ ಆರೋಪದಡಿ ಬಿಜೆಪಿ ಪಾಲಿಕೆ ಸದಸ್ಯ ಗಿರೀಶ ಪಾಟೀಲ ಹಾಗೂ ತಿಕೋಟಾದ ಆರು ಮಂದಿ ವಿರುದ್ಧವೂ ಪ್ರತ್ಯೇಕ ಪ್ರಕರಣಗಳು ದಾಖಲಾಗಿವೆ.
ಯತ್ನಾಳ್ ವಿರುದ್ಧ ದೂರು
ವಿಜಯಪುರ ನಗರದ ಬಾಗವಾನ ಕಾಲೊನಿ ನಿವಾಸಿ ಅಬ್ದುಲ ರಜಾಕ ಬಾಗವಾನ್ (50) ಅವರು ಗುರುವಾರ ಜಲನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ತಾನು ಜೀವಂತವಾಗಿದ್ದು, ತರಕಾರಿ ವ್ಯಾಪಾರ ಮಾಡಿಕೊಂಡಿದ್ದೇನೆ. ವಿಜಯಪುರ ನಗರ ವಿಧಾನಸಭಾ ಕ್ಷೇತ್ರದ ಮತದಾರನಾಗಿದ್ದು, ಮತದಾರರ ಗುರುತಿನ ಚೀಟಿಯನ್ನೂ ಹೊಂದಿದ್ದೇನೆ ಎಂದು ಅವರು ದೂರಿನಲ್ಲಿ ತಿಳಿಸಿದ್ದಾರೆ.
ಆದರೆ, ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಅವರು ತಾನು ಮೃತಪಟ್ಟಿರುವುದಾಗಿ ನಕಲಿ ಮರಣ ಪ್ರಮಾಣಪತ್ರವನ್ನು ಲಗತ್ತಿಸಿ, ತನ್ನ ಹೆಸರನ್ನು ಮತದಾರರ ಪಟ್ಟಿಯಿಂದ ತೆಗೆದುಹಾಕುವಂತೆ ಸೆಪ್ಟೆಂಬರ್ 3ರಂದು ವಿಜಯಪುರ ಮಹಾನಗರ ಪಾಲಿಕೆ ಆಯುಕ್ತರಿಗೆ ಎಸ್‌ಐಆರ್ ಫಾರ್ಮ್-7 ಸಲ್ಲಿಸಿದ್ದಾರೆ ಎಂದು ಆರೋಪಿಸಿದ್ದಾರೆ. ಈ ಮೂಲಕ ವಂಚನೆ ಎಸಗಿರುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದ್ದಾರೆ.
ಪಾಲಿಕೆ ಸದಸ್ಯ ಗಿರೀಶ ಪಾಟೀಲ ವಿರುದ್ಧವೂ ಪ್ರಕರಣ
ವಿಜಯಪುರ ನಗರದ ನಿಸಾರಮಡ್ಡಿ ನಿವಾಸಿ ಜಾವೀದ್ ಇಂಡಿಕರ್ (32) ಅವರು ಮಹಾನಗರ ಪಾಲಿಕೆ ಬಿಜೆಪಿ ಸದಸ್ಯ ಹಾಗೂ ಶಾಸಕ ಯತ್ನಾಳ್ ಅವರ ಬೆಂಬಲಿಗ ಗಿರೀಶ ಪಾಟೀಲ ವಿರುದ್ಧ ಗಾಂಧಿಚೌಕ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ತಾನು ನಿಸಾರಮಡ್ಡಿಯಲ್ಲಿ ವಾಸವಿಲ್ಲ ಎಂಬುದಾಗಿ ಸುಳ್ಳು ದಾಖಲೆ ಸೃಷ್ಟಿಸಿ, ತನ್ನ ಹೆಸರನ್ನು ಮತದಾರರ ಪಟ್ಟಿಯಿಂದ ಅಳಿಸುವಂತೆ ಗಿರೀಶ ಪಾಟೀಲ ಅವರು ಎಸ್‌ಐಆರ್ ಫಾರ್ಮ್-7 ಸಲ್ಲಿಸಿದ್ದಾರೆ ಎಂದು ಜಾವೀದ್ ಆರೋಪಿಸಿದ್ದಾರೆ. ಈ ಸಂಬಂಧ ಅಕ್ಟೋಬರ್ 6ರಂದು ದೂರು ದಾಖಲಿಸಿದ್ದು, ಕಾನೂನು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ.
ತಿಕೋಟಾದ ಆರು ಮಂದಿ ವಿರುದ್ಧ ಎಫ್‌ಐಆರ್
ತಿಕೋಟಾ ಪಟ್ಟಣದ ನಿವಾಸಿ ಹಾಜಿಲಾಲ ಕೊಟ್ಟಲಗಿ (68) ಅವರ ಹೆಸರನ್ನು ಮತದಾರರ ಪಟ್ಟಿಯಿಂದ ತೆಗೆದುಹಾಕಲು ಎಸ್‌ಐಆರ್ ಫಾರ್ಮ್-7 ಸಲ್ಲಿಸಿದ ಆರೋಪದ ಮೇಲೆ ಆರು ಮಂದಿ ವಿರುದ್ಧ ತಿಕೋಟಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಭೀಮು ಗೊಳಸಂಗಿ, ವಿನಾಯಕ ಮಮದಾಪುರ, ಮಹೇಶ ಮುಕರ್ತಿಹಾಳ, ಆನಂದ ಅಂಬಿಗೇರ, ಹುಚ್ಚಪ್ಪ ಗಾಣಿಗೇರ ಹಾಗೂ ಗೋವಿಂದ ಮುದನೂರ ವಿರುದ್ಧ ಹಾಜಿಲಾಲ ಕೊಟ್ಟಲಗಿ ಅಕ್ಟೋಬರ್ 6ರಂದು ದೂರು ನೀಡಿದ್ದಾರೆ.
ತಾನು ಮುಸ್ಲಿಂ ಎಂಬ ಕಾರಣಕ್ಕೆ ಮತದಾರರ ಪಟ್ಟಿಯಿಂದ ಹೆಸರು ತೆಗೆದುಹಾಕುವ ಉದ್ದೇಶದಿಂದ ನಕಲಿ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಲಾಗಿದೆ ಎಂದು ಅವರು ದೂರಿನಲ್ಲಿ ಆರೋಪಿಸಿದ್ದಾರೆ. ಈ ಬಗ್ಗೆ ಸಂಬಂಧಪಟ್ಟವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದ್ದಾರೆ.
ಅಪರಾಧ
Udupi-ಭೂಗತ ಪಾತಕಿ ಹೇಮಂತ್ ಪೂಜಾರಿ ಹೆಸರಿನಲ್ಲಿ ಬೆದರಿಕೆ ಕರೆ : ಉಡುಪಿ, ಮೂಲ್ಕಿಯಲ್ಲಿ 4 ಪ್ರಕರಣ ದಾಖಲು
ಮುದರಂಗಡಿಯ ಉದ್ಯಮಿ ಡೇವಿಡ್ ಡಿಸೋಜಾ ಕೊಲೆ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿರುವ ಭೂಗತ ಪಾತಕಿ ಹೇಮಂತ್ ಪೂಜಾರಿ ಹೆಸರಿನಲ್ಲಿ ಉದ್ಯಮಿಗಳು ಹಾಗೂ ಪ್ರತಿಷ್ಠಿತ ವ್ಯಕ್ತಿಗಳಿಗೆ ಬೆದರಿಕೆ ಕರೆಗಳು ಬರುತ್ತಿರುವ ಪ್ರಕರಣಗಳು ವರದಿಯಾಗಿವೆ. ಉಡುಪಿ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ಮೂರು ಹಾಗೂ ಮೂಲ್ಕಿ ಪೊಲೀಸ್ ಠಾಣೆಯಲ್ಲಿ ಒಂದು ಸೇರಿದಂತೆ ಒಟ್ಟು ನಾಲ್ಕು ಪ್ರಕರಣಗಳು ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
ಉಡುಪಿ, ಅ.8: ಮುದರಂಗಡಿಯ ಉದ್ಯಮಿ ಡೇವಿಡ್ ಡಿಸೋಜಾ ಕೊಲೆ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿರುವ ಭೂಗತ ಪಾತಕಿ ಹೇಮಂತ್ ಪೂಜಾರಿ ಹೆಸರಿನಲ್ಲಿ ಉದ್ಯಮಿಗಳು ಹಾಗೂ ಪ್ರತಿಷ್ಠಿತ ವ್ಯಕ್ತಿಗಳಿಗೆ ಬೆದರಿಕೆ ಕರೆಗಳು ಬರುತ್ತಿರುವ ಪ್ರಕರಣಗಳು ವರದಿಯಾಗಿವೆ. ಉಡುಪಿ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ಮೂರು ಹಾಗೂ ಮೂಲ್ಕಿ ಪೊಲೀಸ್ ಠಾಣೆಯಲ್ಲಿ ಒಂದು ಸೇರಿದಂತೆ ಒಟ್ಟು ನಾಲ್ಕು ಪ್ರಕರಣಗಳು ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
ಕೊಲೆಯಾದ ಉದ್ಯಮಿ ಡೇವಿಡ್ ಡಿಸೋಜಾ ಅವರ ಪುತ್ರನಿಗೆ ವಾಟ್ಸಾಪ್ ಕರೆ ಮಾಡಿರುವ ಅಪರಿಚಿತ ವ್ಯಕ್ತಿಯೊಬ್ಬ, ₹5 ಕೋಟಿ ನೀಡುವಂತೆ ಬೇಡಿಕೆ ಇಟ್ಟು ಜೀವ ಬೆದರಿಕೆ ಹಾಕಿದ್ದಾನೆ ಎನ್ನಲಾಗಿದೆ.
“ನಿನ್ನ ತಂದೆಯಿಂದ ನನ್ನ ಸಹೋದರನಿಗೆ ಸಾಕಷ್ಟು ನಷ್ಟವಾಗಿತ್ತು. ಆ ಕಾರಣಕ್ಕೆ ನಾನೇ ಕೊಲೆ ಮಾಡಿಸಿದ್ದೆ. ನಮಗಾಗಿರುವ ನಷ್ಟವನ್ನು ತುಂಬಿಕೊಡಲು ₹5 ಕೋಟಿ ನೀಡಬೇಕು” ಎಂದು ಕರೆ ಮಾಡಿದ ವ್ಯಕ್ತಿ ಬೆದರಿಕೆ ಹಾಕಿದ್ದಾನೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಈ ಸಂಬಂಧ ಶಿರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇನ್ನೊಬ್ಬ ಉದ್ಯಮಿ ಹಾಗೂ ಖಾಸಗಿ ಸಂಸ್ಥೆಯ ವ್ಯಕ್ತಿಗೂ ಹೇಮಂತ್ ಪೂಜಾರಿ ಹೆಸರಿನಲ್ಲಿ ವಾಟ್ಸಾಪ್ ಕರೆಗಳು ಬಂದಿದ್ದು, ಹಣಕ್ಕೆ ಬೇಡಿಕೆ ಇಟ್ಟು ಜೀವ ಬೆದರಿಕೆ ಹಾಕಲಾಗಿದೆ ಎನ್ನಲಾಗಿದೆ. ಈ ಸಂಬಂಧ ಪಡುಬಿದ್ರಿ ಪೊಲೀಸ್ ಠಾಣೆಯಲ್ಲೂ ಪ್ರಕರಣಗಳು ದಾಖಲಾಗಿವೆ.
25 ವರ್ಷಗಳಿಂದ ಪೊಲೀಸರಿಗೆ ಬೇಕಾಗಿರುವ ಆರೋಪಿ
ಮುದರಂಗಡಿಯ ಉದ್ಯಮಿ ಡೇವಿಡ್ ಡಿಸೋಜಾ ಕೊಲೆ ಪ್ರಕರಣದಲ್ಲಿ ಭೂಗತ ಪಾತಕಿ ಹೇಮಂತ್ ಪೂಜಾರಿ ಪ್ರಮುಖ ಆರೋಪಿಯಾಗಿದ್ದಾನೆ. ಆತನ ಸಹೋದರ ಹಾಗೂ ಇತರ ಸಹಚರರ ನೆರವಿನಿಂದ ಹೊರರಾಜ್ಯದ ಶೂಟರ್‌ಗಳನ್ನು ಕರೆಸಿ ಕೊಲೆ ಮಾಡಿಸಲಾಗಿದೆ ಎಂಬ ಆರೋಪ ಪ್ರಕರಣದಲ್ಲಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಹೇಮಂತ್ ಪೂಜಾರಿಯನ್ನು ಹೊರತುಪಡಿಸಿ ಉಳಿದ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ ಎನ್ನಲಾಗಿದೆ.
ಕಳೆದ 25 ವರ್ಷಗಳಿಂದ ಪೊಲೀಸರಿಗೆ ಬೇಕಾಗಿರುವ ಹೇಮಂತ್ ಪೂಜಾರಿ ಬಗ್ಗೆ ಇದುವರೆಗೂ ಸ್ಪಷ್ಟ ಸುಳಿವು ಲಭ್ಯವಾಗಿಲ್ಲ. ಈ ನಡುವೆ ಆತನ ಹೆಸರಿನಲ್ಲಿ ಉದ್ಯಮಿಗಳು ಹಾಗೂ ಪ್ರತಿಷ್ಠಿತ ವ್ಯಕ್ತಿಗಳಿಗೆ ಬೆದರಿಕೆ ಕರೆಗಳು ಬಂದಿರುವುದು ಪೊಲೀಸರ ಗಮನ ಸೆಳೆದಿದೆ.
ಕರೆ ಮಾಡುತ್ತಿರುವವರು ಯಾರು?
ಹೇಮಂತ್ ಪೂಜಾರಿಯೇ ಕರೆ ಮಾಡುತ್ತಿದ್ದಾನೆಯೇ ಅಥವಾ ಆತನ ಹೆಸರನ್ನು ದುರ್ಬಳಕೆ ಮಾಡಿಕೊಂಡು ಬೇರೆಯವರು ಬೆದರಿಕೆ ಹಾಕುತ್ತಿದ್ದಾರೆಯೇ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. ಕರೆಗಳ ಮೂಲ, ಹಣದ ಬೇಡಿಕೆಯ ಹಿಂದಿನ ಉದ್ದೇಶ ಹಾಗೂ ಪ್ರಕರಣಗಳ ನಡುವಿನ ಸಂಬಂಧದ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಸ್ಥಳೀಯ
Ganja-ಸಾಗರದ ಲಾಡ್ಜ್‌ನಲ್ಲಿ ಗಾಂಜಾ ಸೇವನೆ: ಯುವತಿ ಸೇರಿ ನಾಲ್ವರು ವಶಕ್ಕೆ – ಗಾಂಜಾ ಸಾಗಾಟಗಾರನ ಮಾಹಿತಿ ಬಿಚ್ಚಿಟ್ಟ ಯುವತಿ..!
ಸಾಗರದ ಜೋಗ ರಸ್ತೆಯಲ್ಲಿರುವ ಲಾಡ್ಜ್‌ನಲ್ಲಿ ಗಾಂಜಾ ಸೇವಿಸುತ್ತಿದ್ದ ಆರೋಪದ ಮೇಲೆ ಯುವತಿ ಸೇರಿದಂತೆ ನಾಲ್ವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಸಾಗರ ಟೌನ್ ಪೊಲೀಸರು, ಮೂವರು ಯುವಕರು ಹಾಗೂ ಓರ್ವ ಯುವತಿಯನ್ನು ವಶಕ್ಕೆ ಪಡೆದು ತನಿಖೆ ಕೈಗೊಂಡಿದ್ದಾರೆ.
ಶಿವಮೊಗ್ಗ, ಅ. 8: ಸಾಗರದ ಜೋಗ ರಸ್ತೆಯಲ್ಲಿರುವ ಲಾಡ್ಜ್‌ನಲ್ಲಿ ಗಾಂಜಾ ಸೇವಿಸುತ್ತಿದ್ದ ಆರೋಪದ ಮೇಲೆ ಯುವತಿ ಸೇರಿದಂತೆ ನಾಲ್ವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಸಾಗರ ಟೌನ್ ಪೊಲೀಸರು, ಮೂವರು ಯುವಕರು ಹಾಗೂ ಓರ್ವ ಯುವತಿಯನ್ನು ವಶಕ್ಕೆ ಪಡೆದು ತನಿಖೆ ಕೈಗೊಂಡಿದ್ದಾರೆ.
ಬಂಧಿತ ಆರೋಪಿಗಳನ್ನು ಶಿವಮೊಗ್ಗದ ಕಾರ್ತಿಕ್ (19), ಬೆಂಗಳೂರಿನ ಶಶಾಂಕ್ (26), ಸಾಗರದ ನಿಶಾಂತ್ (25) ಹಾಗೂ ಯುವತಿ ಎಂದು ಗುರುತಿಸಲಾಗಿದೆ.
ಲಾಡ್ಜ್ ಮೇಲೆ ದಿಢೀರ್ ದಾಳಿ
ಹೆಚ್ಚುವರಿ ಪೊಲೀಸ್ ಅಧೀಕ್ಷಕರ ನಿರ್ದೇಶನದಂತೆ ಪಿಎಸ್‌ಐ ಶಾಂತರಾಜ್ ಎಚ್.ಜಿ. ಹಾಗೂ ಸಿಬ್ಬಂದಿ ಲಾಡ್ಜ್ ಮೇಲೆ ದಾಳಿ ನಡೆಸಿದರು. ಕೊಠಡಿಯನ್ನು ಪರಿಶೀಲಿಸಿದಾಗ ಮೂವರು ಯುವಕರು ಹಾಗೂ ಯುವತಿಯು ಸಿಗರೇಟ್‌ನಲ್ಲಿ ಗಾಂಜಾ ತುಂಬಿಕೊಂಡು ಸೇವಿಸುತ್ತಿರುವುದು ಪತ್ತೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಬಳಿಕ ನಾಲ್ವರನ್ನು ವಶಕ್ಕೆ ಪಡೆದು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಯಿತು. ಕಾರ್ತಿಕ್, ಶಶಾಂಕ್ ಹಾಗೂ ಯುವತಿ ಗಾಂಜಾ ಸೇವಿಸಿರುವುದು ವೈದ್ಯಕೀಯ ಪರೀಕ್ಷೆಯಲ್ಲಿ ದೃಢಪಟ್ಟಿದೆ ಎಂದು ವರದಿಯಾಗಿದೆ.
-
ಬಿಗ್ ನ್ಯೂಸ್21 hours agoSting Operation | ಸ್ಟಿಂಗ್ ಆಪರೇಷನ್ ಚರ್ಚೆ: ಪುತ್ತೂರಿಗೂ ವ್ಯಾಪಿಸಿದೆಯೇ ರಾಜಕೀಯದ ‘ಸ್ಟಿಂಗ್’ ಸದ್ದು..?
-
ಬಿಗ್ ನ್ಯೂಸ್20 hours agoSDPI-ಮಕ್ಕಳ ಆಟದ ಉಪಕರಣಗಳೇ ಹಾಳು: ಕಾರಂತರ ಬಾಲವನದ ದುಸ್ಥಿತಿಗೆ ಎಸ್ಡಿಪಿಐ ಅಸಮಾಧಾನ
-
ಬಿಗ್ ನ್ಯೂಸ್20 hours agoReservation-ದ.ಕ. ಜಿ.ಪಂ., ತಾ.ಪಂ. ಮೀಸಲಾತಿ ಪ್ರಕಟ: ಮಹಿಳೆಯರಿಗೆ ತಾ.ಪಂ. 65, ಜಿ.ಪಂ. 18 ಸ್ಥಾನ ಮೀಸಲು
-
ಅಪರಾಧ20 hours agoDigital Arrest-‘ಡಿಜಿಟಲ್ ಅರೆಸ್ಟ್’ ಹೆಸರಿನಲ್ಲಿ 75 ವರ್ಷದ ಮಹಿಳೆಗೆ ₹2 ಕೋಟಿ ವಂಚನೆ
-
ಅಂತರ ರಾಜ್ಯ19 hours agoNana Patekar-ಕಾರ್ಗಿಲ್ ಯುದ್ಧದ ವೇಳೆ ಸೈನಿಕನಾಗಿಯೂ ದೇಶ ಸೇವೆ ಮಾಡಿದ್ದ ನಾನಾ ಪಾಟೇಕರ್
-
ಅಂತರ ರಾಜ್ಯ19 hours agoDK Shivakumar-‘ಸ್ಟಿಂಗ್ ಆಪರೇಷನ್’ ಬಗ್ಗೆ ಎಲ್ಲಾ ಮಾಹಿತಿ ಇದೆ..! ಚರ್ಚೆಗೆಂದು ಬಂದು ಏನೇನು ಮಾಡಿದ್ದಾರೆ ಎಂದು ಗೊತ್ತಿದೆ : ಇದರ ಪಿತಾಮಹ ಯಾರೆಂದೂ ತಿಳಿದಿದೆ : ಡಿಕೆಶಿ ಸ್ಫೋಟಕ ಹೇಳಿಕೆ
-
ಅಂತರ ರಾಜ್ಯ20 hours agoCEC Jnanesh Kumar-ವಿಪಕ್ಷಗಳ ಪ್ರತಿಭಟನೆ ತೀವ್ರ: ಸಿಇಸಿ ಜ್ಞಾನೇಶ್ ಕುಮಾರ್ ನಿವಾಸಕ್ಕೆ ತೀವ್ರ ಭದ್ರತೆ
-
ಮಂಗಳೂರು18 hours agoMangaluru-ಬೆಳೆ ವಿಮೆ ಅನ್ಯಾಯ ಆರೋಪ: ಅ.9ರಂದು ಮಂಗಳೂರಿನಲ್ಲಿ ರೈತರ ಬೃಹತ್ ಹಕ್ಕೊತ್ತಾಯ | ಸಹಕಾರ ಭಾರತಿ – ಬಿಜೆಪಿ ಬೆಂಬಲ


















