Connect with us

ಕಾರ್ಯಕ್ರಮಗಳು

ಅ. 26 : ಸಮಾಜ ಸೇವಕ ಅಶೋಕ್ ಕುಮಾರ್ ರೈಯವರಿಂದ ದೀಪಾವಳಿ ಪ್ರಯುಕ್ತ 26 ಸಾವಿರ ಮಂದಿಗೆ ವಸ್ತ್ರ ವಿತರಣೆ – ಫಲಾನುಭವಿಗಳ ಬೃಹತ್‌ ಸಮಾವೇಶ | ಕಿಲ್ಲೆ ಮೈದಾನದಲ್ಲಿ ನಡೆಯುತ್ತಿದೆ ಭರದ ಸಿದ್ದತೆ  

Published

on



Ad Widget

Ad Widget

Ad Widget

Ad Widget

ಪುತ್ತೂರು Puttur ಅ 25 : ಉದ್ಯಮಿ, ಸಮಾಜ ಸೇವಕ , ಅಶೋಕ್ ಕುಮಾರ್ ರೈ ಸಾರಥ್ಯದ  ರೈ ಎಸ್ಟೇಟ್‌ ಎಜುಕೇಶನಲ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಅ.26ರಂದು ದಶ ಸಂಭ್ರಮ, ಟ್ರಸ್ಟ್‌ ಫಲಾನುಭವಿಗಳ ಸಮಾವೇಶ, ಸ್ವಾಭಿಮಾನಿ ಬಡವರಿಗೆ ಸನ್ಮಾನ, ಗೂಡುದೀಪ ಸ್ಪರ್ಧೆ, ಸ್ಮರಣ ಸಂಚಿಕೆ ಬಿಡುಗಡೆ ಮತ್ತು ದೀಪಾವಳಿ ಹಬ್ಬದ ಪ್ರಯುಕ್ತ ವಸ್ತ್ರವಿತರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ . ಇದಕ್ಕಾಗಿ ಕಾರ್ಯಕ್ರಮ ಜರುಗುವ ಕಿಲ್ಲೆ ಮೈದಾನದಲ್ಲಿ ಭರದ ಸಿದ್ದತೆ ನಡೆಯುತ್ತಿದೆ.

Ad Widget

Ad Widget

Ad Widget

Ad Widget

ಬೆಳಿಗ್ಗೆ 9.30ರಿಂದ ಸಂಜೆಯವರೆಗೆ ನಡೆಯಲಿರುವ, 30 ಸಾವಿರಕ್ಕೂ ಅಧಿಕ ಸಂಖ್ಯೆಯ ಜನರು ಭಾಗವಹಿಸುವ ನಿರೀಕ್ಷೆಯಿರುವ ಕಾರ್ಯಕ್ರಮವನ್ನು ಸಂಪೂರ್ಣ ಯಶಸ್ವಿಗೊಳಿಸಲು ನೂರಾರು ಸ್ವಯಂ ಸೇವಕರು ಸಿದ್ದತಾ ಕಾರ್ಯಕ್ರಮದಲ್ಲಿ ತೊಡಗಿಸಿಕೊಂಡಿದ್ದಾರೆ . ಸೋಮವಾರ ಬೆಳಗ್ಗಿನಿಂದಲೇ ಕಾರ್ಯಕ್ರಮದ ಸಿದ್ದತೆಗಳು ಆರಂಭಗೊಂಡಿದೆ. ಇಂದು ಕೂಡ ಸ್ವಯಂ ಸೇವಕರು ಉತ್ಸಾಹದಿಂದ ಭಾಗವಹಿಸಿದ್ದರು.

Ad Widget

Ad Widget

Ad Widget alt="Ad Widget"/>

Ad Widget

 25000  ಕ್ಕೂ ಮಿಕ್ಕಿ ಜನರಿಗೆ ಯಾವುದೇ ಗೊಂದಲ, ನೂಕು ನುಗ್ಗಲುಗಳಿಲ್ಲದೆ ವಸ್ತ್ರ ವಿತರಿಸಲು ಅಗತ್ಯ ಕೌಂಟರ್‌ ಗಳ  ತಯಾರಿ,  ಬಂದವರ ನೋಂದಣಿ ಮಾಡಿಕೊಳ್ಳಲು ಕೌಂಟರ್‌, ಬೆರಳಿಗೆ ಹಚ್ಚುವ ಶಾಯಿಗಳ  ಜೋಡಿಸುವ  ಕಾರ್ಯ ನಡೆಯುತ್ತಿದೆ. ಇನ್ನೊಂದೆಡೆ ಬಂದವರಿಗೆ ಸುಸೂತ್ರವಾಗಿ ಊಟ ಉಪಚಾರಗಳನ್ನು ಒದಗಿಸಲು ಸಕಲ ಸಿದ್ದತೆಗಳು ಜರುಗುತ್ತಿದೆ. ಮತ್ತೊಂದೆಡೆ  ಅಚ್ಚುಕಟ್ಟಾದ  ಸಭಾಂಗಣ, ವೇದಿಕೆ ಸಿದ್ದಗೊಳಿಸುವ ಕಾರ್ಯಗಳು ನಡೆಯುತ್ತಿದೆ.

Ad Widget

Ad Widget <> Ad Widget

ನಾಳೆ ಬೆಳಿಗ್ಗೆ 9.30 ಕ್ಕೆ ಅಶೋಕ್‌ ರೈಯವರ  ತಾಯಿ ಗಿರಿಜಾ ಎಸ್.ರೈಯವರು ದೀಪ ಪ್ರಜ್ವಲಿಸುವ ಮೂಲಕ ‘ದಶ ಸಂಭ್ರಮ’ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ. ಬಳಿಕ ಸಾಂಸ್ಕೃತಿಕ ಕಾರ್ಯಕ್ರಮ ಜರಗಲಿದೆ. ಸಭಾ ಕಾರ್ಯಕ್ರಮ, ವಸ್ತ್ರ ವಿತರಣೆ, ಗೂಡು ದೀಪ ಸ್ಪರ್ಧೆ ಹಾಗೂ ಭೋಜನದ ವ್ಯವಸ್ಥೆಯೊಂದಿಗೆ ಕಾರ್ಯಕ್ರಮ ವಿಜೃಂಭಣೆಯಿಂದ ನಡೆಯಲಿದೆ.



Ad Widget

. ದಶ ಸಂಭ್ರಮ ಕಾರ್ಯಕ್ರಮದಲ್ಲಿ ಬೆಳಗ್ಗೆ 11 ಗಂಟೆಗೆ ಸರ್ವ ಧರ್ಮದವರನ್ನು ಒಳಗೊಂಡ ಸಭಾ ಕಾರ್ಯಕ್ರಮ ನಡೆಯಲಿದೆ. ಒಡಿಯೂರು ಗುರುದೇವದತ್ತ ಸಂಸ್ಥಾನದ ಶ್ರೀ ಗುರುದೇವಾನಂದ ಸ್ವಾಮೀಜಿ ಆಶೀರ್ವಚನ ನೀಡಲಿದ್ದಾರೆ. ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಸಂಸದ ಹಾಗೂ ಮಾಜಿ ಕೇಂದ್ರ ಸಚಿವ ಮಾಜಿ ಮುಖ್ಯಮಂತ್ರಿ ಡಿ.ವಿ ಸದಾನಂದ ಗೌಡರವರು ಸನ್ಮಾನ ನೆರವೇರಿಸಲಿದ್ದಾರೆ. ಮಾಜಿ ಸಚಿವ ಬಿ.ರಮಾನಾಥ ರೈ ಸ್ಮರಣ ಸಂಚಿಕೆ ಬಿಡುಗಡೆ ಮಾಡಲಿದ್ದಾರೆ. ಮಾಜಿ ಶಾಸಕಿ ಶಕುಂತಳಾ ಟಿ. ಶೆಟ್ಟಿ, ಅಕ್ಷಯ ಕಾಲೇಜಿನ ಸಂಚಾಲಕ ಜಯಂತ ನಡುಬೈಲು, ಮಾಯಿದೆ ದೇವುಸ್ ಚರ್ಚ್ ಧರ್ಮಗುರು ಲಾರೆನ್ಸ್ ಮಸ್ಕರೇನಸ್ ಮತ್ತು ಧಾರ್ಮಿಕ ಮುಖಂಡ ಕೆ.ಆರ್. ಹುಸೈನ್‌ ದಾರಿಮಿ ರೆಂಜಲಾಡಿ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.

Ad Widget

Ad Widget

  ಕಾರ್ಯಕ್ರಮಕ್ಕೆ ಆಗಮಿಸಿದ ಎಲ್ಲರಿಗೂ ಸುಮಾರು ಒಂದು ಕೋಟಿ ರೂ. ವೆಚ್ಚದಲ್ಲಿ   ವಸ್ತ್ರ ವಿತರಿಸಲಾಗುತ್ತದೆ. ಮಹಿಳೆಯರಿಗೆ ಸೀರೆ, ಪುರುಷರಿಗೆ ಲುಂಗಿ ಮತ್ತು ಶಾಲು ಹಾಗೂ ಮಕ್ಕಳಿಗೆ ಶಾಲು ವಿತರಣೆ ಮಾಡಲಾಗುತ್ತದೆ.. ಇದರೊಂದಿಗೆ ಐದು ಲಕ್ಷ.ರೂ ವೆಚ್ಚದಲ್ಲಿ ನರೈನ್ಸ್ ಅವರ ಸಿಹಿತಿಂಡಿ ವಿತರಣೆ ಕಾರ್ಯಕ್ರಮ ದೀಪಾವಳಿಯ ಶುಭದಿನದ ಪ್ರಯುಕ್ತ ನಡೆಯಲಿದೆ ಎಂದು ಹೇಳಿದರು.

ಗೂಡುದೀಪ

ದೀಪಾವಳಿ ಹಬ್ಬದ ಸಂದರ್ಭದಲ್ಲಿ ದಶ ಸಂಭ್ರಮ ಕಾರ್ಯಕ್ರಮ ನಡೆಯುತ್ತಿರುವ ಹಿನ್ನಲೆಯಲ್ಲಿ  ಗೂಡುದೀಪ ಸ್ಪರ್ಧೆ ಏರ್ಪಡಿಸಲಾಗಿದೆ. ಗೂಡುದೀಪವನ್ನು ಮನೆಯಲ್ಲೇ ತಯಾರಿಸಿ ಸಭಾಂಗಣದಲ್ಲಿ ಜೋಡಿಸುವ ಅವಕಾಶವಿದ್ದು ವಿಜೇತರಿಗೆ ಪ್ರಥಮ ಬಹುಮಾನ 7005 ರೂ, ದ್ವಿತೀಯ ಬಹುಮಾನ 5000 ರೂ ಹಾಗೂ ತೃತೀಯ 2,500ರೂ ಬಹುಮಾನ ನೀಡಲಾಗುತ್ತದೆ.

ಸಾಂಸ್ಕೃತಿಕ ರಸದೌತಣ

ಬೆಳಿಗ್ಗೆ 10ರಿಂದ ವಿಠಲ್ ನಾಯಕ್ ಕಲ್ಲಡ್ಕರವರಿಂದ ಗೀತ ಸಾಹಿತ್ಯ ಸಂಭ್ರಮ ಹಾಗೂ ಮಧ್ಯಾಹ್ನ 12 ಗಂಟೆಯಿಂದ ಶ್ರೀ ಶಾರದಾ ಅಂಧರ ಗೀತ ಗಾಯನ ಕಲಾ ಸಂಘ ಶೃಂಗೇರಿ ಇದರ ಸದಸ್ಯರಿಂದ ಗೀತ ಗಾಯನ ಕಾರ್ಯಕ್ರಮ ನಡೆಯಲಿದೆ. ಮಧ್ಯಾಹ್ನ ಕಾರ್ಕಳದ ಪ್ರಸಿದ್ಧ ಅಡುಗೆಯವರು ತಯಾರಿಸಿ ಶುಚಿ ರುಚಿಯಾದ ಸಹಭೋಜನದ ವ್ಯವಸ್ಥೆ  ಇರಲಿದೆ.

‘ಧರ್ಮಾತ್ಮ….ಬಡವರ ಬೆಳಕು’ ಕೃತಿ ಬಿಡುಗಡೆ

ಅಶೋಕ್ ಕುಮಾರ್ ರೈಯವರ ಕುರಿತಾಗಿ ರಚಿಸಲಾಗಿರುವ ‘ಧರ್ಮಾತ್ಮ….ಬಡವರ ಬೆಳಕು’ ಕೃತಿ ಬಿಡುಗಡೆ ದಶಸಂಭ್ರಮ ಕಾರ್ಯಕ್ರಮದಲ್ಲಿ ನಡೆಯಲಿದೆ. ಅಶೋಕ್ ರೈಯವರ ಬಾಲ್ಯ, ವಿದ್ಯಾಭ್ಯಾಸ, ಉದ್ಯಮ, ಸೇವಾ ಕಾರ್ಯ, ಟ್ರಸ್ಟ್‌ ಮೂಲಕ ನಡೆದ ಸಮಾಜ ಸೇವೆ, ಸಾಧನೆ ಮುಂತಾದ ವಿವರವನ್ನು ಒಳಗೊಂಡ ಕೃತಿಯಲ್ಲಿ ವಿವಿಧ ಧರ್ಮದ ಧರ್ಮಗುರುಗಳ ಸಹಿತ ಹಲವು ಪ್ರಮುಖರ ಶುಭ ಸಂದೇಶ, ಅಶೋಕ್ ರೈಯವರ ಮನೆ ಮಂದಿಯ ಶುಭ ಹಾರೈಕೆ, ಅಶೋಕ್ ರೈಯವರ ನೇತೃತ್ವದಲ್ಲಿ ಜೀರ್ಣೋದ್ಧಾರ ಮತ್ತು ಬ್ರಹ್ಮಕಲಶೋತ್ಸವ ನಡೆದ ದೇವಸ್ಥಾನಗಳ ಪ್ರಮುಖರ ಅನಿಸಿಕೆ, ಟ್ರಸ್ಟ್ ಫಲಾನುಭವಿಗಳ ಕೃತಜ್ಞತಾ ನುಡಿ ಸಹಿತ ಹಲವು ವಿವರಗಳು ಇರಲಿದೆ. ಪತ್ರಕರ್ತ ಸಂತೋಷ್ ಕುಮಾರ್ ಶಾಂತಿನಗರ ಅವರ ಸಂಪಾದಕತ್ವದಲ್ಲಿ ಮೂಡಿ ಬಂದಿರುವ ‘ಧರ್ಮಾತ್ಮ…ಬಡವರ ಬೆಳಕು’ ಕೃತಿಯ ಸಂಪಾದಕೀಯ ಬಳಗದಲ್ಲಿ ಅಮ್ಮುಂಜೆಗುತ್ತು ಅಲಿಮಾರ ಜತೀಂದ್ರ ಶೆಟ್ಟಿ, ಜಯಪ್ರಕಾಶ್ ಬದಿನಾರು ಮತ್ತು ಸುಮ ಅಶೋಕ್ ರೈ ಕಾರ್ಯ ನಿರ್ವಹಿಸಿದ್ದಾರೆ.

Ad Widget
Click to comment

Leave a Reply

ಮಂಗಳೂರು

Mangaluru-ಬೆಳೆ ವಿಮೆ ಅನ್ಯಾಯ ಆರೋಪ: ಅ.9ರಂದು ಮಂಗಳೂರಿನಲ್ಲಿ ರೈತರ ಬೃಹತ್ ಹಕ್ಕೊತ್ತಾಯ | ಸಹಕಾರ ಭಾರತಿ – ಬಿಜೆಪಿ ಬೆಂಬಲ

Published

on



Ad Widget

Ad Widget

Ad Widget

Ad Widget

ಬೆಳೆ ವಿಮೆ ಪಾವತಿಯಲ್ಲಿ ರೈತರಿಗೆ ಅನ್ಯಾಯವಾಗಿದೆ ಎಂದು ಆರೋಪಿಸಿ ಸಹಕಾರ ಭಾರತಿ ಹಾಗೂ ಬಿಜೆಪಿ ನೇತೃತ್ವದಲ್ಲಿ ಅ.9ರಂದು ಮಂಗಳೂರಿನಲ್ಲಿ ಬೃಹತ್ ಹಕ್ಕೊತ್ತಾಯ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಮಂಗಳೂರಿನ ಟೌನ್‌ಹಾಲ್‌ನಲ್ಲಿ ಶುಕ್ರವಾರ ಬೆಳಗ್ಗೆ 10.30ಕ್ಕೆ ಕಾರ್ಯಕ್ರಮ ನಡೆಯಲಿದೆ.

Ad Widget

Ad Widget

Ad Widget

Ad Widget

ಮಂಗಳೂರು: ಬೆಳೆ ವಿಮೆ ಪಾವತಿಯಲ್ಲಿ ರೈತರಿಗೆ ಅನ್ಯಾಯವಾಗಿದೆ ಎಂದು ಆರೋಪಿಸಿ ಸಹಕಾರ ಭಾರತಿ ಹಾಗೂ ಬಿಜೆಪಿ ನೇತೃತ್ವದಲ್ಲಿ ಅ.9ರಂದು ಮಂಗಳೂರಿನಲ್ಲಿ ಬೃಹತ್ ಹಕ್ಕೊತ್ತಾಯ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

Ad Widget

Ad Widget

Ad Widget alt="Ad Widget"/>

Ad Widget

ಮಂಗಳೂರಿನ ಟೌನ್‌ಹಾಲ್‌ನಲ್ಲಿ ಶುಕ್ರವಾರ ಬೆಳಗ್ಗೆ 10.30ಕ್ಕೆ ಕಾರ್ಯಕ್ರಮ ನಡೆಯಲಿದೆ. ಬೆಳೆ ವಿಮೆ ಯೋಜನೆಯಡಿ ರೈತರಿಗೆ ಸೂಕ್ತ ಪರಿಹಾರ ದೊರೆಯದಿರುವುದು ಸೇರಿದಂತೆ ವಿಮೆ ಪಾವತಿಗೆ ಸಂಬಂಧಿಸಿದ ಸಮಸ್ಯೆಗಳ ಕುರಿತು ಸಭೆಯಲ್ಲಿ ಧ್ವನಿ ಎತ್ತಲಾಗುತ್ತದೆ.

Ad Widget

Ad Widget <> Ad Widget

ಬೆಳೆ ವಿಮೆ ಯೋಜನೆಯಡಿ ರೈತರಿಗೆ ನ್ಯಾಯಯುತ ಪರಿಹಾರ ದೊರೆಯಬೇಕು ಹಾಗೂ ವಿಮೆ ಪಾವತಿಯಲ್ಲಿ ಉಂಟಾಗಿರುವ ಸಮಸ್ಯೆಗಳಿಗೆ ಶೀಘ್ರ ಪರಿಹಾರ ಕಲ್ಪಿಸಬೇಕು ಎಂಬುದು ಪ್ರಮುಖ ಬೇಡಿಕೆಯಾಗಿದೆ.



Ad Widget

ದಕ್ಷಿಣ ಕನ್ನಡ ಜಿಲ್ಲೆಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಸದಸ್ಯರು ಸೇರಿದಂತೆ ರೈತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಬೆಳೆ ವಿಮೆಯಲ್ಲಿ ಆಗಿರುವ ಅನ್ಯಾಯದ ವಿರುದ್ಧ ಒಗ್ಗಟ್ಟಿನಿಂದ ಹಕ್ಕೊತ್ತಾಯ ಮಂಡಿಸುವಂತೆ ಆಯೋಜಕರು ಮನವಿ ಮಾಡಿದ್ದಾರೆ.

Continue Reading

ಸ್ಥಳೀಯ

Dharmasthala-ಅ. 11 ರಿಂದ 19 : ಧರ್ಮಸ್ಥಳದಲ್ಲಿ ನವರಾತ್ರಿ ವೈಭವ

Published

on



Ad Widget

Ad Widget

Ad Widget

Ad Widget

ನವರಾತ್ರಿ ಪ್ರಯುಕ್ತ ಧರ್ಮಸ್ಥಳದಲ್ಲಿ ಇದೇ 11 ರಿಂದ 19 ರ ವರೆಗೆ ವಿಶೇಷ ಕಾರ್ಯಕ್ರಮಗಳು ನಡೆಯಲಿವೆ. ಪ್ರತಿ ದಿನ ರಾತ್ರಿ ಅಮ್ಮನವರ ಸನ್ನಿಧಿಯಲ್ಲಿ ವಿಶೇಷ ಪೂಜೆ ನಡೆಯುತ್ತದೆ.

Ad Widget

Ad Widget

Ad Widget

Ad Widget

ಉಜಿರೆ: ನವರಾತ್ರಿ ಪ್ರಯುಕ್ತ ಧರ್ಮಸ್ಥಳದಲ್ಲಿ ಇದೇ 11 ರಿಂದ 19 ರ ವರೆಗೆ ವಿಶೇಷ ಕಾರ್ಯಕ್ರಮಗಳು ನಡೆಯಲಿವೆ. ಪ್ರತಿ ದಿನ ರಾತ್ರಿ ಅಮ್ಮನವರ ಸನ್ನಿಧಿಯಲ್ಲಿ ವಿಶೇಷ ಪೂಜೆ ನಡೆಯುತ್ತದೆ.

Ad Widget

Ad Widget

Ad Widget alt="Ad Widget"/>

Ad Widget

ದೇವಸ್ಥಾನದ ಎದುರು ಇರುವ ಪ್ರವಚನಮಂಟಪದಲ್ಲಿ ಸಂಜೆ ಆರು ಗಂಟೆಯಿಂದ ಒಂಭತ್ತು ಗಂಟೆ ವರೆಗೆ ನಾಡಿನ ಖ್ಯಾತ ಕಲಾವಿದರಿಂದ ಸಾಂಸ್ಕೃತಿಕ ಕಾರ್ಯಕ್ರಮ ಆಯೋಜಿಸಲಾಗಿದೆ.

Ad Widget

Ad Widget <> Ad Widget

ಅ. 11: ಭಾನುವಾರ: ಕುಮಾರಿ ಪ್ರಾಪ್ತಿ ಶೆಟ್ಟಿ, ಧರ್ಮಸ್ಥಳ ಮತ್ತು ಕುಮಾರಿ ಆದ್ವಿ, ನಿಡಿಗಲ್ (ಭಕ್ತಿಸಂಗೀತ), ಅ. 12: ಸೋಮವಾರ: ಪವಿತ್ರವಿನಯ್ ಮಯ್ಯ ಅರ್ಕುಳ, ಮಂಗಳೂರು (ಸುಗಮ ಸಂಗೀತ), ಅ. 13: ಮಂಗಳವಾರ: ಕುಮಾರಿ ಮಾನ್ಸಿ, ಮೈಸೂರು (ಭಕ್ತಿಸಂಗೀತ), ಅ. 14: ಬುಧವಾರ: ಮಾಸ್ಟರ್ ಆಗಮ, ಪೆರ್ಲ, ಮಂಗಳೂರು (ಕರ್ನಾಟಕ ಶಾಸ್ತ್ರೀಯ ಸಂಗೀತ), ಅ. 15: ಗುರುವಾರ: ಕುಮಾರಿ ಧೃತಿ ಬಿ. ಆತ್ರೇಯಾಸ್, ಕುಮಾರಿ ಧನ್ವಿ ಬಿ. ಆತ್ರೇಯಾಸ್ ಮತ್ತು ಮಾಸ್ಟರ್ ಅಸ್ರಮೇಯ ಗುರುಪ್ರಸಾದ್, ಬೆಂಗಳೂರು (ನೃತ್ಯ, ಗಾನಲಹರಿ), ಅ. 16: ಶುಕ್ರವಾರ: ಸನತ್‌ಕುಮಾರ್, ಬೆಂಗಳೂರು (ವಯಲಿನ್ ವಾದನ), ಅ. 17: ಶನಿವಾರ: ಕುಮಾರಿ ಮಯೂರಿ ಭಟ್ ಪೊಳಲಿ, ಬಂಟ್ವಾಳ (ಕರ್ನಾಟಕ ಶಾಸ್ತ್ರೀಯ ಸಂಗೀತ), ಅ. 18: ಆದಿತ್ಯವಾರ: ಕುಮಾರಿ ಐಶ್ವರ್ಯ ಜೋಗಿ ಮತ್ತು ತಂಡ, ಕುಂದಾಪುರ (ಸುಮಧುರ ಗಾನವೈಭವ), ಅ. 19: ಸೋಮವಾರ: ಕುಮಾರಿ ಅರ್ಚಿಷಾ ರಾವ್ ಮತ್ತು ಬಳಗ, ಬೆಂಗಳೂರು (ಸಂಜೆ ಗಂಟೆ 6.30 ರಿಂದ 8.30). ಮಲ್ಲಿಕಾಮಟ್ಟಿ ಮತ್ತು ಬಳಗ, ಪೊಳಲಿ (ರಾತ್ರಿ ಗಂಟೆ 9 ರಿಂದ 11.30) ಭಕ್ತಿ ಸಂಗೀತ.



Ad Widget
Ad Widget
Continue Reading

ಸ್ಥಳೀಯ

Excel-ಎಕ್ಸೆಲ್ ಗುರು ನಮನ 2026: ಸಾಮರಸ್ಯವೇ ಸಮಾಜದ ಉನ್ನತಿಗೆ ತಳಪಾಯ: ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿ

Published

on



Ad Widget

Ad Widget

Ad Widget

Ad Widget

ಎಕ್ಸೆಲ್ ಗುರುವಾಯನ ಕೆರೆಯಲ್ಲಿ ನಡೆದ ಗುರು ನಮನ 2026 ಕಾರ್ಯಕ್ರಮದಲ್ಲಿ ಮಾಣಿಲ ಶ್ರೀ ದುರ್ಗಾ ಮಹಾಲಕ್ಷ್ಮೀ ಕ್ಷೇತ್ರದ ಪರಮ ಪೂಜ್ಯ ಶ್ರೀ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿಯವರು ಮಾತನಾಡಿದರು.

Ad Widget

Ad Widget

Ad Widget

Ad Widget

ಗುರುವಾಯನಕೆರೆ, ಅ.4 : “ಸಮಾಜದಲ್ಲಿ ಎಲ್ಲರಿಗೂ ಬದುಕುವ ಅವಕಾಶವಿದೆ. ಪ್ರತಿಯೊಂದು ವರ್ಗ, ಸಮುದಾಯಕ್ಕೂ ಈ ಸಮಾಜ ಆಶ್ರಯ ನೀಡಿದೆ. ಪ್ರತಿಯೊಬ್ಬರ ನಂಬಿಕೆ ಆಚರಣೆಗಳು ಬೇರೆ ಬೇರೆಯಾಗಿರುತ್ತವೆ. ಅವರವರ ನಂಬಿಕೆ ಮತ್ತು ಆಚರಣೆಗಳನ್ನು ತಿರಸ್ಕರಿಸಿದಾಗ ಸಮಾಜದಲ್ಲಿ ಘರ್ಷಣೆಗಳು ಏರ್ಪಡುತ್ತವೆ. ಪ್ರತಿಯೊಬ್ಬರನ್ನೂ ಸಾಮರಸ್ಯದಿಂದ ನೋಡುವ ಗುಣ ನಮ್ಮದಾಗಬೇಕು. ಸಾಮರಸ್ಯವೇ ಸಮಾಜದ ಉನ್ನತಿಗೆ ಅಡಿಪಾಯವಿದ್ದಂತೆ” ಎಂದು ಎಕ್ಸೆಲ್ ಗುರುವಾಯನ ಕೆರೆಯಲ್ಲಿ ನಡೆದ ಗುರು ನಮನ 2026 ಕಾರ್ಯಕ್ರಮದಲ್ಲಿ ಮಾಣಿಲ ಶ್ರೀ ದುರ್ಗಾ ಮಹಾಲಕ್ಷ್ಮೀ ಕ್ಷೇತ್ರದ ಪರಮ ಪೂಜ್ಯ ಶ್ರೀ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿಯವರು ಹೇಳಿದರು.

Ad Widget

Ad Widget

Ad Widget alt="Ad Widget"/>

Ad Widget

ಸ್ವಾಮೀಜಿಯವರು ಮಾತನಾಡುತ್ತಾ ಎಕ್ಸೆಲ್ ವಿದ್ಯಾಸಂಸ್ಥೆಯು ಸುಂದರ ಪರಿಸರದಲ್ಲಿ ನಿರ್ಮಾಣಗೊಂಡಿದೆ. ಈ ವಿದ್ಯಾಸಂಸ್ಥೆಯಿಂದ ವಿದ್ಯಾರ್ಥಿಗಳ ಭವಿಷ್ಯ ರೂಪಗೊಳ್ಳುತ್ತದೆ. ವಿದ್ಯಾರ್ಥಿಗಳು ಪರಸ್ಪರ ಗೌರವಿಸಿರಿ. ಈ ಸಮಾಜಕ್ಕೆ ಒಳ್ಳೆಯದನ್ನು ಬಯಸಿ. ನೀವು ಓದಿದ ವಿದ್ಯಾ ಸಂಸ್ಥೆಗೆ ಚಿರಋಣಿಯಾಗಿರಬೇಕೆಂದು, ಈ ಸಂಸ್ಥೆಯು ಸಾವಿರಾರು ಶಿಕ್ಷಕರನ್ನು ನಿರಂತರವಾಗಿ ಗೌರವಿಸುತ್ತಾ ಬಂದಿರುವುದು ನಿಜವಾಗಿಯೂ ಅತ್ಯುತ್ತಮ ಬೆಳವಣಿಗೆಯಾಗಿದೆ. ಇದು ಸುಮಂತ್ ಕುಮಾರ್ ಅವರ ಈ ನಿಸ್ವಾರ್ಥ ಸೇವೆಗೆ ಸಾಕ್ಷಿಯಾಗಿದೆ ಎಂದರು.

Ad Widget

Ad Widget <> Ad Widget

ಸುಬ್ರಮಣ್ಯದ ಶ್ರೀ ಕುಕ್ಕೆ ಸುಬ್ರಹ್ಮಣ್ಯ ಪದವಿಪೂರ್ವ ಕಾಲೇಜಿನ ಪ್ರಾಚಾರ್ಯರಾದ ಸೋಮಶೇಖರ್ ನಾಯಕ್ ಇವರು ಮಾತನಾಡುತ್ತಾ ” ವಿದ್ಯಾರ್ಥಿಗಳು ಕಷ್ಟಕರ ವಿಷಯಗಳ ಕಡೆಗೆ ಹೆಚ್ಚು ಗಮನ ಕೊಡಬೇಕು. ನೀವೆಲ್ಲ ಎಕ್ಸೆಲ್ ವಿದ್ಯಾಸಂಸ್ಥೆಯಲ್ಲಿ ಓದುತ್ತಿರುವುದು ನಿಮ್ಮೆಲ್ಲರ ಅದೃಷ್ಟವೇ ಸರಿ. ಈ ಸಂಸ್ಥೆಯ ಅಧ್ಯಕ್ಷರಾದ ನುಮಂತ್ ಕುಮಾರ್ ಜೈನ್ ಇವರು ಉದಾರ ವ್ಯಕ್ತಿತ್ವದ ವ್ಯಕ್ತಿ. ಅವರ ಸೇವಾ ಮನೋಭಾವದಿಂದಲೇ ಈ ಶಿಕ್ಷಣ ಸಂಸ್ಥೆಯು ಎತ್ತರಕ್ಕೆ ಬೆಳೆಯುತ್ತಿದೆ. ಜಿಲ್ಲೆಯ ಯಾವುದೇ ಶೈಕ್ಷಣಿಕ ಸಾಮಾಜಿಕ ಧಾರ್ಮಿಕ ಕಾರ್ಯಕ್ರಮಗಳಿಗೆ ಸುಮಂತ್ ಅವರ ಕೊಡುಗೆ ಅಪಾರವಾದದ್ದು. ಈ ಸಂಸ್ಥೆಗೆ ನನ್ನನ್ನು ಆಹ್ವಾನಿಸಿ ಸನ್ಮಾನಿಸಿದ್ದೀರಿ. ನನ್ನಲ್ಲಿ ಕೃತಾರ್ಥತೆ ಭಾವ ಮೂಡುತ್ತಿದೆ. ಎಕ್ಸೆಲ್ ವಿದ್ಯಾಸಂಸ್ಥೆಗೆ ನಾನು ಚಿರಋಣಿ” ಎಂದು ಸಂತಸ ವ್ಯಕ್ತಪಡಿಸಿದರು.



Ad Widget

ಮೂಲ್ಕಿಯ ವಿಜಯ ಕಾಲೇಜಿನ ವಿಶ್ರಾಂತ ಪಾಚಾರ್ಯರಾದ ಡಾ .ನಾರಾಯಣ ಪೂಜಾರಿ ಮತ್ತು ಸಾಮಾಜಿಕ ಮತ್ತು ಧಾರ್ಮಿಕ ಮುಖಂಡರಾದ ಸಂತೋಷ್ ಕುಮಾರ್ ಕಾಪಿನಡ್ಕ ಇವರು ವಿದ್ಯಾರ್ಥಿಗಳ ಭವಿಷ್ಯಕ್ಕೆ ಶುಭ ಕೋರಿದರು.

Ad Widget

Ad Widget

ಎಕ್ಸೆಲ್ ವಿದ್ಯಾ ಸಂಸ್ಥೆಯ ಹಿತೈಷಿಗಳಾದ ರತ್ನರಾಜ್ ಜೈನ್ ಮತ್ತು ಪತ್ರಿಕೋದ್ಯಮಿಗಳಾದ ಸಂತೋಷ್ ಕೋಟ್ಯಾನ್ ಇವರು ಈ ಕಾರ್ಯಕ್ರಮದ ಭಾಗವಾಗಿ ಸನ್ಮಾನ ಸ್ವೀಕರಿಸಿದರು.

ಸಂಸ್ಥೆಯ ಅಧ್ಯಕ್ಷರಾದ ಸುಮಂತ್ ಕುಮಾರ್ ಜೈನ್ ಅವರು ಅಧ್ಯಕ್ಷೀಯ ಭಾಷಣವನ್ನು ಮಾಡುತ್ತಾ “ನಮ್ಮ ಎಕ್ಸೆಲ್ ಸಂಸ್ಥೆಯ ವಿದ್ಯಾರ್ಥಿಗಳು ದೇಶವಿದೇಶಗಳಲ್ಲಿ ಉನ್ನತ ಶಿಕ್ಷಣವನ್ನು ಮಾಡುತ್ತಿದ್ದಾರೆ . ಇಲ್ಲಿ ಓದಿದ ವಿದ್ಯಾರ್ಥಿಗಳು ಆದರ್ಶ ವ್ಯಕ್ತಿಗಳಾಗಿ ರೂಪಗೊಳ್ಳುತ್ತಿದ್ದಾರೆ. ಈ ಕಾರ್ಯಕ್ರಮದಲ್ಲಿ ಗುರುಗಳನ್ನು ಗೌರವಿಸುವ ಮೂಲಕ ನಮ್ಮಲ್ಲಿ ಧನ್ಯತಾಭಾವ ಮೂಡಿದೆ. ಶಿಕ್ಷಕರು ಜಗತ್ತಿನ ಪ್ರಥಮ ಪೂಜ್ಯರು . ಅಂತಹ ಶಿಕ್ಷಕರನ್ನು ಸನ್ಮಾನಿಸುವುದು ನಮ್ಮ ಸೌಭಾಗ್ಯ” ಎಂದು ಹೇಳಿದರು.

ಕಾಲೇಜಿನ ಬ್ರೋಚರ್ಸ್ ಅನ್ನು ಈ ಸಂದರ್ಭದಲ್ಲಿ ಲೋಕಾರ್ಪಣೆ ಮಾಡಲಾಯಿತು.ಕರ್ನಾಟಕ ರಾಜ್ಯದ ವಿವಿಧ ಜಿಲ್ಲೆ, ತಾಲೂಕು ಗ್ರಾಮಗಳಲ್ಲಿ ಶಿಕ್ಷಕ ವೃತ್ತಿಯನ್ನು ಮಾಡುತ್ತ ವಿದ್ಯಾರ್ಥಿಗಳ ಭವಿಷ್ಯವನ್ನು ರೂಪಿಸುತ್ತಿರುವ 300 ಹೆಚ್ಚು ಶಿಕ್ಷಕರನ್ನು ಗೌರವಿಸಿದ್ದು ಅತ್ಯಂತ ವಿರಳ ಮತ್ತು ಸೃಜನಾತ್ಮಕ ಕಾರ್ಯಕ್ರಮವಾಗಿತ್ತು. ಎಲ್ಲ ಶಿಕ್ಷಕರಿಗೆ ಹಾರ , ಶಾಲು, ಪೇಟ ಮತ್ತು ಸ್ಮರಣಿಕೆ, ಉಡುಗೊರೆಗಳನ್ನು ನೀಡಿ ಸನ್ಮಾನಿಸಲಾಯಿತು. ಪ್ರಾಂಶುಪಾಲರಾದ ಡಾ ನವೀನ್ ಕುಮಾರ್ ಮರಿಕೆ ಸ್ವಾಗತಿಸಿದರು. ಎಕ್ಸೆಲ್ ಟೆಕ್ನೋ ಸ್ಕೂಲ್ ವೇಣೂರಿನ ಮುಖ್ಯೋಪಾಧ್ಯಯರಾದ ಶಾಂತಿರಾಜ್ ಜೈನ್ ವಂದಿಸಿದರು.

ಉಪನ್ಯಾಸಕರಾದ ಪ್ರಸನ್ನ ಭೋಜ, ತಿಪ್ಪೇಸ್ವಾಮಿ, ಪ್ರಜ್ವಿತ್ ರೈ, ಅನನ್ಯ ಜೈನ್, ವೈಷ್ಣವಿಯವರು ಕಾರ್ಯಕ್ರಮವನ್ನು ನಿರೂಪಿಸಿದರು. ದ್ವಿತೀಯ ಪಿಯು ವಿದ್ಯಾರ್ಥಿಗಳು ಪ್ರಾರ್ಥನೆ ಹಾಡುವ ಮೂಲಕ ಈ ಕಾರ್ಯಕ್ರಮಕ್ಕೆ ಆರಂಭವನ್ನು ಒದಗಿಸಿದರು.

ಪ್ರಾಂಶುಪಾಲರಾದ ಡಾ. ನವೀನ್ ಕುಮಾರ್ ಮರಿಕೆ, ಡಾ. ಪ್ರಜ್ವಲ್, ಉಪ ಪ್ರಾಚಾರ್ಯರಾದ ರೋಹಿತ್, ಹರೀಶ್ ಕುಮಾರ್ ಗುರುವಾಯನಕೆರೆ ಟೆಕ್ನೋ ಸ್ಕೂಲಿನ ಮುಖ್ಯ ಶಿಕ್ಷಕಿ ಸುಮಿತ್ರ, ವೇಣೂರು ಶಾಲೆಯ ಮುಖ್ಯೋಪಾಧ್ಯಾಯರಾದ ಶಾಂತಿರಾಜ್ ಜೈನ್, ವಿದ್ಯಾರ್ಥಿಗಳು, ಪೋಷಕರು, ಬೋಧಕ ಬೋಧಕೇತರ ಸಿಬ್ಬಂದಿಯವರು ಭಾಗವಹಿಸಿದ್ದರು.

ಎಕ್ಸೆಲ್ ಸಿಬ್ಬಂದಿಯಿಂದ ಸಾಂಸ್ಕೃತಿಕ ವೈಭವ: ಗಿರಿಜಾ ಕಲ್ಯಾಣ ಹಾಗೂ ತಾರಕಾಸುರ ವಧೆ ಯಕ್ಷಗಾನ ಪ್ರದರ್ಶನ

ಗುರು ನಮನ ಕಾರ್ಯಕ್ರಮದ ಅಂಗವಾಗಿ ಎಕ್ಸೆಲ್ ಶಿಕ್ಷಣ ಸಂಸ್ಥೆಗಳ ಬೋಧಕ ಮತ್ತು ಬೋಧಕೇತರ ಸಿಬ್ಬಂದಿಯವರಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಆಯೋಜನೆಗೊಂಡಿದ್ದವು. ಎಕ್ಸೆಲ್ ಪಿಯು ಕಾಲೇಜಿನ ಸಿಬ್ಬಂದಿಯ ಜೊತೆಗೆ ಎಕ್ಸೆಲ್ ಟೆಕ್ನೋ ಸ್ಕೂಲ್ ಗುರುವಾಯನಕೆರೆ ಮತ್ತು ವೇಣೂರು ಶಾಲೆಗಳ ಸಿಬ್ಬಂದಿಯವರು ಭಾಗವಹಿಸಿದ್ದರು.

ಈ ಕಾರ್ಯಕ್ರಮದಲ್ಲಿ ಸಿಬ್ಬಂದಿ ವರ್ಗದವರು ವಿವಿಧ ನೃತ್ಯ,ಹಾಡು, ರೂಪಕ, ಭರತನಾಟ್ಯ ವೈವಿಧ್ಯಮಯ ಕಾರ್ಯಕ್ರಮಗಳನ್ನು ನಡೆಸಿಕೊಡುವ ಮೂಲಕ ಸರ್ವರನ್ನು ರೋಮಾಂಚನಗೊಳಿಸಿದರು. ಗಿರಿಜಾ ಕಲ್ಯಾಣ ಮತ್ತು ತಾರಕಾಸುರ ವಧೆ ಎನ್ನುವ ಯಕ್ಷಗಾನ ಪ್ರಸಂಗವನ್ನು ಪ್ರದರ್ಶಿಸಿದರು.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!

Discover more from Nikhara News | Kannada News Website

Subscribe now to keep reading and get access to the full archive.

Continue reading