Connect with us

ಸ್ಥಳೀಯ

ಮಂಗಳೂರು : ಅನುಮಾನಕ್ಕೆ ಎರಡೂವರೆ ದಶಕದ ದಾಂಪತ್ಯ ಧಾರುಣ ಅಂತ್ಯ : ಪತ್ನಿಯ ಕೊಂದು ನೇಣಿಗೆ ಶರಣಾದ ಪತಿ

Published

on

Ad Widget

Ad Widget

Ad Widget

Ad Widget

ಉಳ್ಳಾಲ : ಅನುಮಾನ ಪಿಶಾಚಿ ಪತಿರಾಯ ಪತ್ನಿಯನ್ನು ಕತ್ತು ಹಿಸುಕಿ ಕೊಂದು ತಾನು ಆತ್ಮಹತ್ಯೆಗೆ ಶರಣಾದ ಅಘಾತಕಾರಿ ಘಟನೆ ಉಳ್ಳಾಲ ಠಾಣೆ ವ್ಯಾಪ್ತಿಯ ಪಿಲಾರು ಪಂಜಂದಾಯ ದೈವಸ್ಥಾನದ ಬಳಿ ಅ.27 ರಂದು ಬೆಳಿಗ್ಗೆ  ನಡೆದಿದೆ. ಪಿಲಾರು ನಿವಾಸಿಗಳಾದ ಶಿವಾನಂದ ಪೂಜಾರಿ (55) ಹಾಗೂ ಶೋಭಾ ಪೂಜಾರಿ(45)  ಮೃತಪಟ್ಟವರು.   ಎರಡೂವರೆ ದಶಕದ ದಾಂಪತ್ಯ ಈ ಮೂಲಕ ಧಾರುಣ ಅಂತ್ಯ ಕಂಡಿದೆ.

Ad Widget

Ad Widget

Ad Widget

Ad Widget

 ಸೈಕೋಪಾತ್‌ ನಂತೆ ಆಡುತ್ತಿದ್ದ ಶಿವಾನಂದ ಇಂದು ಬೆಳಿಗ್ಗೆ ತನ್ನ ಪತ್ನಿ ಶೋಭಾರವರ ಕತ್ತು ಹಿಸುಕಿ ಕೊಲೆ ಮಾಡಿದ್ದು ಬಳಿಕ ತೋಟಕ್ಕೆ ತೆರಳಿ ಮರವೊಂದಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆಂದು ತಿಳಿದು ಬಂದಿದೆ.  ಶಿವಾನಂದ ವಿನಾ ಕಾರಣ ಪತ್ನಿಯ ಬಗ್ಗೆ ವಿಪರೀತ ಸಂಶಯ ಪಡುತ್ತಿದ್ದ ಎಂದು ಸ್ಥಳೀಯರು ಆರೋಪಿಸಿದ್ದಾರೆ.

Ad Widget

Ad Widget alt="Ad Widget"/>

Ad Widget

 ದಂಪತಿಗಳಿಗೆ  ಓರ್ವ ಪುತ್ರಿ, ಓರ್ವ ಪುತ್ರನಿದ್ದಾನೆ. ಮಗಳು ಕಾವ್ಯಗಳಿಗೆ ಎರಡು ವರ್ಷದ ಹಿಂದೆಯಷ್ಟೆ ಮದುವೆಯಾಗಿತ್ತು.   ಮಗ ಕಾರ್ತಿಕ್ ಖಾಸಗಿ ಸಂಸ್ಥೆಯಲ್ಲಿ ಉದ್ಯೋಗಿಯಾಗಿದ್ದಾನೆ.

Ad Widget

Ad Widget <> Ad Widget

ಡಾ.ವೀರೇಂದ್ರ ಹೆಗ್ಗಡೆ, ಧರ್ಮಸ್ಥಳದ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಅಪಪ್ರಚಾರ, ಸುಳ್ಳು ಆರೋಪ ಮಾಡಿದ, ನಾಗರಿಕ ಸೇವಾ ಟ್ರಸ್ಟ್ ಅಧ್ಯಕ್ಷ ಸೋಮನಾಥ ನಾಯಕ್‌́ಗೆ ಕೆಳ ನ್ಯಾಯಾಲಯಗಳು ವಿಧಿಸಿದ ತೀರ್ಪನ್ನು ಎತ್ತಿ ಹಿಡಿದ ‘ಸುಪ್ರೀಂ’ ಕೋರ್ಟು

ಕೆಲಸಕ್ಕೆ ತೆರಳಿದ್ದ ಮಗ 12 ಗಂಟೆ ಸುಮಾರಿಗೆ ತಾಯಿಗೆ ಕರೆ ಮಾಡಿದ್ದು, ಆಕೆ  ಪೋನ್‌ ಕರೆ ಸ್ವೀಕರಿಸುತ್ತಿರಲಿಲ್ಲ. ಹಲವು ಬಾರಿ ಕರೆ ಮಾಡಿದರು, ತಾಯಿ ಪೋನ್‌ ರಿಸೀವ್‌ ಮಾಡದಿದ್ದಾಗ , ಪುತ್ರ ಕಾರ್ತಿಕ್‌ ಪಕ್ಕದ ಮನೆಯವರಿಗೆ ಕರೆ ಮಾಡಿ ಮನೆ ಬಳಿ ಹೋಗಿ ನೋಡುವಂತೆ ವಿನಂತಿಸಿದ್ದಾರೆ. ಹೀಗಾಗಿ ಪಕ್ಕದ ಮನೆಯ ಶಕುಂತಳ ಶೆಟ್ಟಿ ಅವರು ಶೋಭಾ ಅವರ ಮನೆಗೆ ತೆರಳಿದ್ದಾರೆ. ಮನೆಯೊಳಗೆ ಬೆಡ್‌ ರೂಮ್‌ ನಲ್ಲಿ ಶೋಭಾ ಮೃತದೇಹ ಕಾಣಿಸಿತ್ತು.

Ad Widget

Ad Widget

ಕೂಡಲೇ  ಶಕುಂತಳಾ ರವರು ಕಾರ್ತಿಕ್‌ ಹಾಗೂ ತನ್ನ ಮನೆಯವರಿಗೆ ವಿಷಯ ಮುಟ್ಟಿಸಿದ್ದಾರೆ. ಬಳಿಕ ಸ್ಥಳೀಯರು ಹುಡುಕಾಡಿದಾಗ, ಪಕ್ಕದ ತೋಟದಲ್ಲಿ ಮರಕ್ಕೆ ಗಂಡ ಶಿವಾನಂದ ಅವರು ನೇಣು ಬಿಗಿದುಕೊಂಡಿದ್ದು ತಿಳಿದುಬಂದಿದೆ. ತಾಯಿ ಹಾಗೂ ತಂದೆಯ ಸಾವಿನ ವಾರ್ತೆ ಕೇಳಿ ಮನೆಗೆ ಆಗಮಿಸಿದ ಮಗಳು ಹಾಗೂ ಮಗು ತಂದೆಯ ವರ್ತನೆಗೆ ಸಾರ್ವಜನಿಕವಾಗಿ ಕಿಡಿ ಕಾರಿರುವುದಾಗಿ ವರದಿಯಾಗಿದೆ. ಉಳ್ಳಾಲ ಠಾಣೆ ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿ, ಮೃತದೇಹಗಳನ್ನ ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ‌.

 ಶಿವಾನಂದ ಪೂಜಾರಿ ಅವರು ಪೈಂಟರ್ ಕೆಲಸ ಮಾಡುತ್ತಿದ್ದು ಪತ್ನಿ ಅಲ್ಲದೆ ಮಗಳ ಮೇಲೂ ನಿರಂತರವಾಗಿ ಸಂಶಯ ಪಡುತ್ತಿದ್ದರು ಎನ್ನಲಾಗಿದೆ ಜತೆಗೆ ಅಸುಪಾಸಿನ ಮನೆಯವರ ಜತೆಗೂ ವಿನಾಕಾರಣ ಗಲಾಟೆ ಮಾಡುತ್ತಿದ್ದ ಎಂಬ ಆರೋಪ ವ್ಯಕ್ತವಾಗಿದೆ.

Coorg | ಗದ್ದೆಯಲ್ಲಿ ದನ ಕಟ್ಟಲು ಹೋದ ಕಾಲೇಜು ವಿದ್ಯಾರ್ಥಿನಿ ಕೆರೆಗೆ ಬಿದ್ದು ಮೃತ್ಯು – ದೀಪಾವಳಿ ಸಂಭ್ರಮದಲ್ಲಿದ್ದ ಮನೆಯಲ್ಲಿ ಶೋಕ ಸಾಗರ  

Ad Widget
Click to comment

Leave a Reply

ಕ್ರೀಡೆ

Vivekananda-ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನ ಭುವನ್‌ರಾಮ್ ಭಾರ ಎತ್ತುವ ಸ್ಪರ್ಧೆಯಲ್ಲಿ ವಿಟಿಯು ತಂಡಕ್ಕೆ ಆಯ್ಕೆ

Published

on

Ad Widget

Ad Widget

Ad Widget

Ad Widget

ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಭುವನ್‌ರಾಮ್ ಜಗದೀಶ್ ಭಂಡಾರಿ ಇವರು ಅಖಿಲ ಭಾರತ ದಕ್ಷಿಣ ವಲಯ ಅಂತರ್ ವಿಶ್ವವಿದ್ಯಾನಿಲಯ ಭಾರ ಎತ್ತುವ ಸ್ಪರ್ಧೆಯಲ್ಲಿ 75 ಕೆಜಿ ವಿಭಾಗದಲ್ಲಿ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯ ತಂಡಕ್ಕೆ ಆಯ್ಕೆಯಾಗಿದ್ದಾರೆ.

Ad Widget

Ad Widget

Ad Widget

Ad Widget

ಪುತ್ತೂರು: ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಭುವನ್‌ರಾಮ್ ಜಗದೀಶ್ ಭಂಡಾರಿ ಇವರು ಅಖಿಲ ಭಾರತ ದಕ್ಷಿಣ ವಲಯ ಅಂತರ್ ವಿಶ್ವವಿದ್ಯಾನಿಲಯ ಭಾರ ಎತ್ತುವ ಸ್ಪರ್ಧೆಯಲ್ಲಿ 75 ಕೆಜಿ ವಿಭಾಗದಲ್ಲಿ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯ ತಂಡಕ್ಕೆ ಆಯ್ಕೆಯಾಗಿದ್ದಾರೆ.

Ad Widget

Ad Widget alt="Ad Widget"/>

Ad Widget

ಅಂತಿಮ ವರ್ಷದ ಮೆಕ್ಯಾನಿಕಲ್ ಇಂಜಿನಿಯರಿಂಗ್ ವಿಭಾಗದ ವಿದ್ಯಾರ್ಥಿಯಾಗಿರುವ ಇವರು ಚೆನ್ನೈನ ವಿನಾಯಕ ಮಿಶನ್ಸ್ ರೀಸರ್ಚ್ ಫೌಂಡೇಶನ್ ಆಶ್ರಯದಲ್ಲಿ ನವೆಂಬರ್ 21 ರಿಂದ 23 ರವರೆಗೆ ನಡೆಯುವ ಈ ಸ್ಪರ್ಧೆಯಲ್ಲಿ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯವನ್ನು ಪ್ರತಿನಿಧಿಸಲಿದ್ದಾರೆ.

Ad Widget

Ad Widget <> Ad Widget

ಇವರಿಗೆ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಬಾಲಚಂದ್ರ ಗೌಡ ಭಾರ್ತಿಕುಮೇರು ಮಾರ್ಗದರ್ಶನವನ್ನು ನೀಡಿದ್ದಾರೆ ಎಂದು ಪ್ರಾಂಶುಪಾಲ ಡಾ.ಪುರುಷೋತ್ತಮ ಚಿಪ್ಪಾರ್ ತಿಳಿಸಿದ್ದಾರೆ.

Ad Widget
Continue Reading

ಸ್ಥಳೀಯ

Bail-ಬೆಳ್ತಂಗಡಿ: ಯತೀಶ್ ಗೌಡ ಕೊಲೆ ಪ್ರಕರಣದಲ್ಲಿ ಆರೋಪಿಗಳಿಗೆ ರಿಲೀಫ್; ಮತ್ತಿಬ್ಬರಿಗೆ ಜಾಮೀನು

Published

on

Ad Widget

Ad Widget

Ad Widget

Ad Widget

ಗುರುವಾಯನಕೆರೆಯ ಅಲಾದಿಕೊಟ್ಟಿಗೆಯಲ್ಲಿ ಕಳೆದ ಜೂನ್ 1ರಂದು ನಡೆದ ಪೆರ್ನೆ ಮೂಲದ ಯತೀಶ್ ಗೌಡ ಕೊಲೆ ಪ್ರಕರಣದಲ್ಲಿ ಬಂಧಿತರಾಗಿದ್ದ ಉಳಿದ ಇಬ್ಬರು ಆರೋಪಿಗಳಿಗೂ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ. ಇದರೊಂದಿಗೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿದ್ದ ಮೂವರು ಆರೋಪಿಗಳಿಗೂ ಜಾಮೀನು ದೊರೆತಂತಾಗಿದೆ.

Ad Widget

Ad Widget

Ad Widget

Ad Widget

ಬೆಳ್ತಂಗಡಿ: ಗುರುವಾಯನಕೆರೆಯ ಅಲಾದಿಕೊಟ್ಟಿಗೆಯಲ್ಲಿ ಕಳೆದ ಜೂನ್ 1ರಂದು ನಡೆದ ಪೆರ್ನೆ ಮೂಲದ ಯತೀಶ್ ಗೌಡ ಕೊಲೆ ಪ್ರಕರಣದಲ್ಲಿ ಬಂಧಿತರಾಗಿದ್ದ ಉಳಿದ ಇಬ್ಬರು ಆರೋಪಿಗಳಿಗೂ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ. ಇದರೊಂದಿಗೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿದ್ದ ಮೂವರು ಆರೋಪಿಗಳಿಗೂ ಜಾಮೀನು ದೊರೆತಂತಾಗಿದೆ.

Ad Widget

Ad Widget alt="Ad Widget"/>

Ad Widget

ಪ್ರಕರಣದ ಆರೋಪಿಗಳಾದ ಬೆಳ್ತಂಗಡಿ ತಾಲೂಕಿನ ಮಿತ್ತಬಾಗಿಲಿನ ಯಶೋಧರ ಹಾಗೂ ಕಡಬ ತಾಲೂಕಿನ ಚಾರ್ವಾಕದ ಮೋಹನ್ ಅವರಿಗೆ ಮಂಗಳೂರಿನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಜಾಮೀನು ನೀಡಿದೆ.

Ad Widget

Ad Widget <> Ad Widget

ಕೆಲ ದಿನಗಳ ಹಿಂದೆಯಷ್ಟೇ ಇದೇ ಪ್ರಕರಣದ ಮತ್ತೊಬ್ಬ ಆರೋಪಿ, ಬೆಳ್ತಂಗಡಿ ತಾಲೂಕಿನ ಪಡಂಗಡಿಯ ಇಬ್ರಾಹಿಂ ಅವರಿಗೂ ನ್ಯಾಯಾಲಯ ಜಾಮೀನು ಮಂಜೂರು ಮಾಡಿತ್ತು.

ಪ್ರಕರಣದ ಹಿನ್ನೆಲೆ:
ಜೂನ್ 1ರಂದು ಬೆಳಗ್ಗೆ ಬೆಳ್ತಂಗಡಿ ತಾಲೂಕಿನ ಗುರುವಾಯನಕೆರೆಯ ಅಲಾದಿಕೊಟ್ಟಿಗೆ ಎಂಬಲ್ಲಿ ಅಪರಿಚಿತ ಯುವಕನ ಮೃತದೇಹ ಪತ್ತೆಯಾಗಿತ್ತು. ಈ ಸಂಬಂಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಅನುಮಾನಾಸ್ಪದ ಸಾವು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಲಾಗಿತ್ತು.

Ad Widget

Ad Widget

ಬಳಿಕ ಮೃತ ವ್ಯಕ್ತಿ ಪೆರ್ನೆ ಮೂಲದ ಯತೀಶ್ ಗೌಡ ಎಂಬುದು ಗುರುತಿಸಲ್ಪಟ್ಟಿತ್ತು. ಅವರ ಸಹೋದರ ನಿತಿನ್ ಹಾಗೂ ಸಂಬಂಧಿಕರು ಸ್ಥಳಕ್ಕೆ ಭೇಟಿ ನೀಡಿ ಮೃತದೇಹದ ಗುರುತು ಪತ್ತೆಹಚ್ಚಿದ್ದರು.

ಪ್ರಕರಣದ ತನಿಖೆ ನಡೆಸಿದ ಬೆಳ್ತಂಗಡಿ ಪೊಲೀಸರು ಕೊಲೆ ಆರೋಪದಡಿ ಯಶೋಧರ, ಮೋಹನ್ ಹಾಗೂ ಇಬ್ರಾಹಿಂ ಎಂಬ ಮೂವರನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದರು. ಇದೀಗ ಪ್ರಕರಣದ ಮೂವರು ಆರೋಪಿಗಳಿಗೂ ನ್ಯಾಯಾಲಯದಿಂದ ಜಾಮೀನು ದೊರೆತಿದೆ.

Ad Widget
Continue Reading

ನಿಧನ ವಾರ್ತೆ

Mudbidri-ಮಂಗಳೂರಿನಲ್ಲಿ ಮೇಲ್ಛಾವಣಿ ಕೆಲಸದ ವೇಳೆ ಅವಘಡ: ಮೂಡುಬಿದಿರೆ ತಾ.ಪಂ. ಮಾಜಿ ಉಪಾಧ್ಯಕ್ಷ ಸಾವು

Published

on

Ad Widget

Ad Widget

Ad Widget

Ad Widget

ಮೂಡುಬಿದಿರೆ ತಾಲೂಕು ಪಂಚಾಯತ್‌ನ ಮಾಜಿ ಉಪಾಧ್ಯಕ್ಷ ಸಂತೋಷ್ ಅವರು ಮಂಗಳೂರಿನಲ್ಲಿ ಮನೆಯ ಮೇಲ್ಛಾವಣಿಯಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಆಯತಪ್ಪಿ ಕೆಳಗೆ ಬಿದ್ದು ಮೃತಪಟ್ಟಿದ್ದಾರೆ. ಗುರುವಾರ ಸಂಭವಿಸಿದ ಈ ದುರಂತ ಘಟನೆ ದುಃಖಕ್ಕೆ ಕಾರಣವಾಗಿದೆ.

Ad Widget

Ad Widget

Ad Widget

Ad Widget

ಮೂಡುಬಿದಿರೆ, ನ.20: ಮೂಡುಬಿದಿರೆ ತಾಲೂಕು ಪಂಚಾಯತ್‌ನ ಮಾಜಿ ಉಪಾಧ್ಯಕ್ಷ ಸಂತೋಷ್ ಅವರು ಮಂಗಳೂರಿನಲ್ಲಿ ಮನೆಯ ಮೇಲ್ಛಾವಣಿಯಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಆಯತಪ್ಪಿ ಕೆಳಗೆ ಬಿದ್ದು ಮೃತಪಟ್ಟಿದ್ದಾರೆ. ಗುರುವಾರ ಸಂಭವಿಸಿದ ಈ ದುರಂತ ಘಟನೆ ದುಃಖಕ್ಕೆ ಕಾರಣವಾಗಿದೆ.

Ad Widget

Ad Widget alt="Ad Widget"/>

Ad Widget

ಮೂಡುಬಿದಿರೆ ತಾಲೂಕಿನ ಬೆಳುವಾಯಿ ನಿವಾಸಿಯಾಗಿದ್ದ ಸಂತೋಷ್ ಅವರು ಬೆಳುವಾಯಿ ಕ್ಷೇತ್ರದಿಂದ ತಾಲೂಕು ಪಂಚಾಯತ್ ಸದಸ್ಯರಾಗಿ ಆಯ್ಕೆಯಾಗಿದ್ದರು. ಹೊಸದಾಗಿ ರಚನೆಯಾಗಿದ್ದ ಮೂಡುಬಿದಿರೆ ತಾಲೂಕು ಪಂಚಾಯತ್‌ನ ಮೊದಲ ಅವಧಿಯಲ್ಲಿ ಉಪಾಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು.

Ad Widget

Ad Widget <> Ad Widget

ಸಂತೋಷ್ ಅವರು ಪ್ರತಿದಿನ ಕೆಲಸದ ನಿಮಿತ್ತ ಮಂಗಳೂರಿಗೆ ತೆರಳುತ್ತಿದ್ದರು. ಗುರುವಾರ ಬೇರೆ ಸ್ಥಳದಲ್ಲಿ ಬದಲಿ ಕೆಲಸಗಾರನಾಗಿ ಕೆಲಸಕ್ಕೆ ತೆರಳಿದ್ದ ಅವರು, ಮನೆಯೊಂದರ ಮೇಲ್ಛಾವಣಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದ ವೇಳೆ ಆಕಸ್ಮಿಕವಾಗಿ ಕಾಲು ಜಾರಿ ಕೆಳಕ್ಕೆ ಬಿದ್ದಿದ್ದಾರೆ ಎನ್ನಲಾಗಿದೆ.

ಘಟನೆಯಲ್ಲಿ ಗಂಭೀರ ಗಾಯಗೊಂಡ ಅವರನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ.

Ad Widget

Ad Widget

ಮೃತ ಸಂತೋಷ್ ಅವರು ಪತ್ನಿ ಹಾಗೂ ಪುಟ್ಟ ಮಗುವನ್ನು ಅಗಲಿದ್ದಾರೆ. ಜನಪ್ರತಿನಿಧಿಯಾಗಿ ಸೇವೆ ಸಲ್ಲಿಸಿದ್ದ ಅವರ ಅಕಾಲಿಕ ನಿಧನಕ್ಕೆ ಸ್ಥಳೀಯರು ಹಾಗೂ ಗಣ್ಯರು ಸಂತಾಪ ಸೂಚಿಸಿದ್ದಾರೆ.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!