ಬಿಗ್ ನ್ಯೂಸ್
Arecanut | ಅಡಿಕೆ ಆಮದಿಗೆ ನಿರ್ಮಲ ಸೀತರಾಮನ್ ಹೆಚ್ಚಿನ ತೆರಿಗೆ ವಿಧಿಸಿದ ಕಾರಣ ಆಮದು ನಿಂತಿದೆ : ಆದರೆ ಅಡಿಕೆ ಮೇಲೆ ತೂಗುಗತ್ತಿ ಇದ್ದೇ ಇದೆ..! ತಾಳೆ ಕೃಷಿ ಬಗ್ಗೆ ಕರಾವಳಿಯ ರೈತರು ಯೋಚಿಸಬೇಕು : ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ – ಅಡಿಕೆ ಕೃಷಿ ಭವಿಷ್ಯದ ಬಗ್ಗೆ ಆತಂಕ ವ್ಯಕ್ತಪಡಿಸಿದ ಕೇಂದ್ರ ಹಾಗೂ ರಾಜ್ಯ ಸಚಿವರು : ಕಾಣಿಯೂರು ಪಂಚಾಯತ್ ಸಭಾಭವನ ಹಾಗೂ ರಸ್ತೆ ಉದ್ಘಾಟನೆ
ಪುತ್ತೂರು: ಅಡಿಕೆ (Arecanut) ಆಮದಿಗೆ ಹೆಚ್ಚಿನ ತೆರಿಗೆ ವಿಧಿಸಿದ ಕಾರಣ ಆಮದು ನಿಂತಿದೆ , ಆದರೆ ಅಡಿಕೆ ಮೇಲೆ ತೂಗುಗತ್ತಿ ಇದ್ದೇ ಇದೆ, ಅಡಿಕೆ ಬಿಟ್ಟು ಪರೋಕ್ಷ ತಾಳೆ ಕೃಷಿ ಬಗ್ಗೆ ಕರಾವಳಿಯ ರೈತರು ಯೋಚಿಸಬೇಕು ಎಂದು ಅಡಿಕೆಯ ಭವಿಷ್ಯದ ಪರೋಕ್ಷವಾಗಿ ಕೃಷಿಕರನ್ನು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಎಚ್ಚರಿಸಿದರು. ಇದೇ ರೀತಿಯ ಎಚ್ಚರಿಕೆಯನ್ನು ರಾಜ್ಯ ಸಚಿವ ಅಂಗಾರರು ಹೇಳಿದರು.
ಕೇಂದ್ರ ಸಚಿವೆಯ ಹುಟ್ಟೂರಾದ ಕಡಬ ತಾಲೂಕಿನ ಕಾಣಿಯೂರು ಗ್ರಾಮ ಪಂಚಾಯತ್ ನ ನೂತನ ಸಭಾಭವನ ಹಾಗೂ ಬೈತಡ್ಕ ಗೆಜ್ಜರ್ಮೆ 3 ಕೋಟಿಯ ರಸ್ತೆ ಕಾಮಗಾರಿ, ಜನೌಷಧಿ ಕೇಂದ್ರ ಉದ್ಘಾಟಿಸಿದ ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಮಾತನಾಡಿದರು.
ಅಡಿಕೆ ಆಮದಿಗೆ ಮೋದಿ ಸರ್ಕಾರದಲ್ಲಿ ನಿರ್ಮಲ ಸೀತಾರಾಮನ್ ಹೆಚ್ಚಿನ ತೆರಿಗೆ ವಿಧಿಸಿದ ಕಾರಣ ಆಮದು ನಿಂತಿದೆ . ಆದರೆ ಅಡಿಕೆ ತಿನ್ನುವ ಊರಿನ ಅಡಿಕೆ ಪರೀಕ್ಷಿಸಿದ ಅಂದಿನ ಅಧಿಕಾರಿ ಅದರಲ್ಲಿ ರೋಗದ ಲಕ್ಷಣವಿದೆ ಎಂದು ಸುಪ್ರೀಂ ಕೋರ್ಟಿಗೆ ಸಲ್ಲಿಸಿರುವ ವರದಿಯಲ್ಲಿ ತಿಳಿಸಲಾಗಿದೆ. ನಾವು ಎಲ್ಲಾ ಸೇರಿ ಅಡಿಕೆ ಬೆಳೆಯುವಲ್ಲಿ ಯಾವೂದೇ ವಿಷಕಾರಿ ಅಂಶ ಸೇರಿಸುವುದಿಲ್ಲ ಎಂದು ಕೇಂದ್ರ ಸರ್ಕಾರಕ್ಕೆ ಮನವರಿಕೆ ಮಾಡಿದ್ದೇವೆ ಆದರೆ ಸುಪ್ರಿಂ ಕೋರ್ಟ್ ನ ತೂಗುಗತ್ತಿ ಅಡಿಕೆ ಮೇಲೆ ಸದಾ ಇದೆ ಎಂದು ಸಚಿವೆ ಹೇಳಿದರು.
ಅಡಿಕೆ ಕೃಷಿಗೆ ಹಳದಿ ರೋಗ ಮತ್ತು ಎಲೆಚುಕ್ಕೆ ರೋಗ ಭಾಧಿಸಿದೆ. ನಮ್ಮೂರಿನ ಹತ್ತಿರದ ದೋಳ್ಪಾಡಿಗೂ ಈ ರೋಗ ಭಾಧಿಸಿದೆ. ಇದರ ಬಗ್ಗೆ ವಿಜ್ಞಾನಿಗಳಿಂದ ಪರೀಕ್ಷೆ ನಡೆಸಲು ನಾವು ಸಭೆ ಕರೆದಿದ್ದೇವೆ ಎಂದರು.
ಭಾರತದಲ್ಲಿ ಎಲ್ಲಾ ತಿನ್ನುವ ಆಹಾರಗಳನ್ನು ಯಥೇಚ್ಛವಾಗಿ ಬೆಳೆಯುತ್ತೇವೆ, ಆದರೆ ಅಡುಗೆಗೆ ಎಣ್ಣೆ ಉಪಯೋಗಿಸುವ ಎಣ್ಣೆಗಳನ್ನು ಹೊರದೇಶದಿಂದ ತರುತ್ತೇವೆ. ಇಲ್ಲಿಯ ಅಡಿಕೆ ಕೃಷಿಕರು ಅಡುಗೆ ಎಣ್ಣೆಯ ಕೃಷಿಯಾದ ತಾಳೆ ಕೃಷಿಗೆ ಹೆಚ್ಚು ಮಹತ್ವ ಕೊಟ್ಟು ಅದನ್ನು ಬೆಳೆಸಬೇಕು, ಸ್ವಲ್ಪ ಜಾಗದಲ್ಲಿ ತಾಳೆ ಬೆಳೆಸಿ ಎಂದು ಶೋಭಾ ಅಡಿಕೆ ಕೃಷಿಕರಿಗೆ ಮನವಿ ಮಾಡಿದರು. ಮುಂದಿನ ದಿನಗಳಲ್ಲಿ ತಾಳೆ ಕೃಷಿಗೆ ಸಂಸ್ಕರಣ ಘಟಕಗಳು ಇಲ್ಲೇ ಆಗಬಹುದು ಎಂದರು.
ಉಡುಪಿ ಚಿಕ್ಕಮಗಳೂರು, ದಕ್ಷಿಣ ಕನ್ನಡದಲ್ಲಿ ನೀರಿನ ಸಮಸ್ಯೆ ಇಲ್ಲ, ಇಲ್ಲಿರುವುದು ಕೇವಲ ಮೂಲಭೂತ ಸೌಕರ್ಯ ಸಮಸ್ಯೆ ಮಾತ್ರ. ನಮ್ಮೂರಿನ ಒಳಭಾಗದ ರಸ್ತೆಗಳನ್ನು ನಾನು ನಿನ್ನೆ ನೋಡಿದೆ , ರಸ್ತೆಗಳು ತೀರ ಕೆಟ್ಟ ಸ್ಥಿತಿಯಲ್ಲಿದೆ. ರಾಜ್ಯದ ಬೇರೆ ಜಿಲ್ಲೆಗಳಿಗೆ ಹೋದರೆ ಅವರ ಸಮಸ್ಯೆಗಳೇ ಬೇರೆ ಎಂದು ಕೇಂದ್ರ ಸಚಿವೆ ಹೇಳಿದರು.
ಅಧ್ಯಕ್ಷತೆ ವಹಿಸಿದ್ದ ಮೀನುಗಾರಿಕಾ ಸಚಿವ ಅಂಗಾರ ಮಾತನಾಡಿ ಅಡಿಕೆ ಕೃಷಿಗೆ ಹಳದಿ ಹಾಗೂ ಎಲೆಚುಕ್ಕೆ ರೋಗ ಬಂದ ನಂತರ ಬದಲಿ ಕೃಷಿ ಬಗ್ಗೆ ಯೋಚನೆ ಮಾಡಬೇಕು ಎಂದರು. ಒಳನಾಡ ಮೀನು ಸಾಕಾಣಿಕೆ, ಬಯೋಪ್ಲಾಕ್ ಮೀನುಗಾರಿಕೆ ಬಗ್ಗೆ ಮಾಹಿತಿ ನೀಡಿದರು. ತಾಳೆ ಕೃಷಿಯಲ್ಲಿ ಹಲವು ಸಮಸ್ಯೆಗಳಿವೆ ಎಂದು ಅಂಗಾರ ಹೇಳಿದರು. ರಸ್ತೆ ಸಮಸ್ಯೆಗಳನ್ನು ಹಂತ ಹಂತವಾಗಿ ಅನುದಾನ ತರಲಾಗುವುದು ಒಮ್ಮೆಲೆ ಎಲ್ಲಾ ತರಲು ಯಾರಿಂದಲೂ ಸಾಧ್ಯವಿಲ್ಲ ಎಂದರು. ಫಸಲ್ ಭೀಮಾ ಯೋಜನೆ ಪಡೆದ ಯಾರೂ ಕೂಡ ಹಣ ಬಂದಿದೆ ಎಂದು ಹೇಳುತ್ತಿಲ್ಲ. ಕಾಂಗ್ರೇಸ್ , ದಳದವರಿಗೂ ಹಣ ಬಂದಿದೆ ಆದರೆ ಅವರ್ಯಾರು ಹೇಳುತ್ತಿಲ್ಲ ಎಂದು ಸಚಿವ ಅಂಗಾರ ಹೇಳಿದರು.
ಕಡಬ ತಾಲೂಕು ಪಂಚಾಯತ್ ಕಾರ್ಯನಿರ್ವಾಹಣಾಧಿಕಾರಿ ನವೀನ್ ಭಂಡಾರಿ ಶುಭಹಾರೈಸಿದರು. ಗ್ರಾಮ ಪಂಚಾಯಿತ್ ಅಧ್ಯಕ್ಷೆ ಲಲಿತಾ ದರ್ಖಾಸ್ತು, ಪಿಡಿಓ ದೇವರಾಜ್ ಹಾಗೂ ಪಂಚಾಯತ್ ಸದಸ್ಯರು ಉಪಸ್ಥಿತರಿದ್ದರು.
ಸಭೆಯಲ್ಲಿ ಕರ್ನಾಟಕ ರತ್ನ ಪ್ರಶಸ್ತಿ ಪಡೆದ ಖೋಖೋ ಆಟಗಾರ್ತಿ ದೀಕ್ಷಾ ಕುಕ್ಕುನಡ್ಕ ಮತ್ತು ಯೋಗಾ ಸಾಧಕಿ ಪ್ರಣಮ್ಯ ಅಗರಿಯನ್ನು ಸನ್ಮಾನಿಸಲಾಯಿತು.

ಬೈತಡ್ಕ ಗೆಜ್ಜರ್ಮೆ ರಸ್ತೆ ಕಾಮಗಾರಿ ಮಾಡಿದ ಜಲೀಲ್ ಬೈತಡ್ಕ, ಪಂಚಾಯತ್ ಸಭಾಭವನ ನಿರ್ಮಾಣ ಕಾಮಗಾರಿ ಮಾಡಿದ ಹಸೈನಾರ್ ಅಭಿನಂದಿಸಲಾಯಿತು.
ಗ್ರಾಮ ಪಂಚಾಯತ್ ಉಪಾಧ್ಯಕ್ಷ ಗಣೇಶ್ ಉದನಡ್ಕ ಪ್ರಸ್ತಾವಿಕ ಮಾತನಾಡಿ ಸ್ವಾಗತಿಸಿದರು. ಸದಸ್ಯ ರಾಮಣ್ಣ ಗೌಡ ಮುಗರಂಜ ಧನ್ಯವಾದಗೈದರು.
ಮಂಗಳೂರು
Mangalore-ರಿಕ್ಷಾದಲ್ಲಿ ಬಿಟ್ಟುಹೋದ 48 ಗ್ರಾಂ ಚಿನ್ನದ ನೆಕ್ಲೇಸ್ ವಾಪಸ್ ನೀಡಿ ಪ್ರಾಮಾಣಿಕತೆ ಮೆರೆದ ಚಾಲಕ
ಸುಲ್ತಾನ್ ಗೋಲ್ಡ್ ಶಾಪ್‌ನಲ್ಲಿ 48 ಗ್ರಾಂ ತೂಕದ ಚಿನ್ನದ ನೆಕ್ಲೇಸ್ ಸರ ಖರೀದಿಸಿ ರಿಕ್ಷಾದಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಚಿನ್ನವಿದ್ದ ಬ್ಯಾಗನ್ನು ರಿಕ್ಷಾದಲ್ಲೇ ಮರೆತುಹೋದ ಮಹಿಳೆಗೆ, ರಿಕ್ಷಾ ಚಾಲಕರೊಬ್ಬರು ಅದನ್ನು ಸುರಕ್ಷಿತವಾಗಿ ವಾರಸುದಾರರಿಗೆ ಹಸ್ತಾಂತರಿಸುವ ಮೂಲಕ ಪ್ರಾಮಾಣಿಕತೆ ಮೆರೆದಿದ್ದಾರೆ.
ಮಂಗಳೂರು: ಸುಲ್ತಾನ್ ಗೋಲ್ಡ್ ಶಾಪ್‌ನಲ್ಲಿ 48 ಗ್ರಾಂ ತೂಕದ ಚಿನ್ನದ ನೆಕ್ಲೇಸ್ ಸರ ಖರೀದಿಸಿ ರಿಕ್ಷಾದಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಚಿನ್ನವಿದ್ದ ಬ್ಯಾಗನ್ನು ರಿಕ್ಷಾದಲ್ಲೇ ಮರೆತುಹೋದ ಮಹಿಳೆಗೆ, ರಿಕ್ಷಾ ಚಾಲಕರೊಬ್ಬರು ಅದನ್ನು ಸುರಕ್ಷಿತವಾಗಿ ವಾರಸುದಾರರಿಗೆ ಹಸ್ತಾಂತರಿಸುವ ಮೂಲಕ ಪ್ರಾಮಾಣಿಕತೆ ಮೆರೆದಿದ್ದಾರೆ.
ಅಫ್ಜಿಲಾ ಎಂಬವರು ಸುಲ್ತಾನ್ ಗೋಲ್ಡ್ ಶಾಪ್‌ನಲ್ಲಿ 48 ಗ್ರಾಂ ತೂಕದ ಚಿನ್ನದ ನೆಕ್ಲೇಸ್ ಸರವನ್ನು ಖರೀದಿಸಿದ್ದರು. ಬಳಿಕ ರಿಕ್ಷಾದಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಚಿನ್ನದ ಸರವಿದ್ದ ಬ್ಯಾಗನ್ನು ರಿಕ್ಷಾದಲ್ಲೇ ಬಿಟ್ಟು ಇಳಿದಿದ್ದರು.
ರಿಕ್ಷಾ ಚಾಲಕ ಬಸವರಾಜ ಅವರಿಗೆ ಬ್ಯಾಗ್ ಪತ್ತೆಯಾಗಿದ್ದು, ಅದರಲ್ಲಿ ಚಿನ್ನದ ನೆಕ್ಲೇಸ್ ಇರುವುದನ್ನು ಗಮನಿಸಿದ್ದಾರೆ. ಬಳಿಕ ಯಾವುದೇ ಆಸೆ, ಆಮಿಷಕ್ಕೆ ಒಳಗಾಗದೆ ಬ್ಯಾಗನ್ನು ಸುರಕ್ಷಿತವಾಗಿ ವಾರಸುದಾರರಿಗೆ ಮರಳಿಸಿದ್ದಾರೆ.
ಚಿನ್ನದ ಸರವನ್ನು ಮರಳಿ ಪಡೆದ ಅಫ್ಜಿಲಾ ಅವರು ರಿಕ್ಷಾ ಚಾಲಕ ಬಸವರಾಜ ಅವರ ಪ್ರಾಮಾಣಿಕತೆಗೆ ಕೃತಜ್ಞತೆ ಸಲ್ಲಿಸಿದ್ದಾರೆ. ಚಾಲಕನ ಈ ನಡೆ ಸಾರ್ವಜನಿಕ ವಲಯದಲ್ಲಿ ಮೆಚ್ಚುಗೆಗೆ ಪಾತ್ರವಾಗಿದೆ.
ಬಿಗ್ ನ್ಯೂಸ್
Half helmet-ಕರ್ನಾಟಕದಲ್ಲಿ ಹಾಫ್ ಹೆಲ್ಮೆಟ್ ಸಂಪೂರ್ಣ ನಿಷೇಧ
ರಸ್ತೆ ಅಪಘಾತಗಳನ್ನು ತಡೆಗಟ್ಟುವ ಹಾಗೂ ದ್ವಿಚಕ್ರ ವಾಹನ ಸವಾರರ ಸುರಕ್ಷತೆಯನ್ನು ಹೆಚ್ಚಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಮಹತ್ವದ ಕ್ರಮ ಕೈಗೊಂಡಿದ್ದು, ರಾಜ್ಯಾದ್ಯಂತ ಹಾಫ್ ಹೆಲ್ಮೆಟ್‌ಗಳ ಬಳಕೆ, ತಯಾರಿಕೆ ಮತ್ತು ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ತಿಳಿಸಿದೆ.
ಬೆಂಗಳೂರು: ರಸ್ತೆ ಅಪಘಾತಗಳನ್ನು ತಡೆಗಟ್ಟುವ ಹಾಗೂ ದ್ವಿಚಕ್ರ ವಾಹನ ಸವಾರರ ಸುರಕ್ಷತೆಯನ್ನು ಹೆಚ್ಚಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಮಹತ್ವದ ಕ್ರಮ ಕೈಗೊಂಡಿದ್ದು, ರಾಜ್ಯಾದ್ಯಂತ ಹಾಫ್ ಹೆಲ್ಮೆಟ್‌ಗಳ ಬಳಕೆ, ತಯಾರಿಕೆ ಮತ್ತು ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ತಿಳಿಸಿದೆ.
ದ್ವಿಚಕ್ರ ವಾಹನ ಸವಾರರು ಕಡ್ಡಾಯವಾಗಿ ಬ್ಯೂರೋ ಆಫ್ ಇಂಡಿಯನ್ ಸ್ಟ್ಯಾಂಡರ್ಡ್ಸ್ (BIS) ಅಥವಾ ಐಎಸ್‌ಐ ಗುಣಮಟ್ಟದ ಮಾನದಂಡ ಹೊಂದಿರುವ ಸುರಕ್ಷಿತ ಹೆಲ್ಮೆಟ್‌ಗಳನ್ನೇ ಧರಿಸಬೇಕು. ತಪಾಸಣೆಯಿಂದ ತಪ್ಪಿಸಿಕೊಳ್ಳುವ ಉದ್ದೇಶದಿಂದ ಕಳಪೆ ಗುಣಮಟ್ಟದ ಅಥವಾ ಹಾಫ್ ಹೆಲ್ಮೆಟ್‌ಗಳನ್ನು ಬಳಸುವುದರಿಂದ ಅಪಘಾತ ಸಂಭವಿಸಿದ ಸಂದರ್ಭದಲ್ಲಿ ಗಂಭೀರ ತಲೆಪೆಟ್ಟಾಗುವ ಅಪಾಯ ಹೆಚ್ಚಿರುವ ಹಿನ್ನೆಲೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ.
ಹಾಫ್ ಹೆಲ್ಮೆಟ್‌ಗಳನ್ನು ಬಳಸುವ ಸವಾರರ ವಿರುದ್ಧ ಮಾತ್ರವಲ್ಲದೆ, ಕಳಪೆ ಗುಣಮಟ್ಟದ ಹೆಲ್ಮೆಟ್‌ಗಳನ್ನು ತಯಾರಿಸುವ ಘಟಕಗಳು ಹಾಗೂ ಅವುಗಳನ್ನು ಮಾರಾಟ ಮಾಡುವ ಅಂಗಡಿಗಳ ವಿರುದ್ಧವೂ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ. ಅನಧಿಕೃತವಾಗಿ ಇಂತಹ ಹೆಲ್ಮೆಟ್‌ಗಳನ್ನು ಮಾರಾಟ ಮಾಡುವವರ ವಿರುದ್ಧ ವ್ಯಾಪಕ ಕಾರ್ಯಾಚರಣೆ ನಡೆಸಲು ಸಾರಿಗೆ ಇಲಾಖೆ ಸಿದ್ಧತೆ ನಡೆಸಿದೆ.
ಸರ್ಕಾರದ ನಿಯಮ ಉಲ್ಲಂಘಿಸಿ ಹಾಫ್ ಹೆಲ್ಮೆಟ್ ಧರಿಸಿ ವಾಹನ ಚಲಾಯಿಸುವ ಸವಾರರ ವಿರುದ್ಧ ಪೊಲೀಸರು ಹಾಗೂ ಸಾರಿಗೆ ಅಧಿಕಾರಿಗಳು ದಂಡ ಸೇರಿದಂತೆ ಕಾನೂನು ಕ್ರಮ ಕೈಗೊಳ್ಳಲಿದ್ದಾರೆ.
ಬಿಗ್ ನ್ಯೂಸ್
Puttur-ಪುತ್ತೂರು : ಕೋಟಿ- ಚೆನ್ನಯ KSRTC ಬಸ್ ನಿಲ್ದಾಣದ ನಿಲ್ದಾಣಾಧಿಕಾರಿಯಾಗಿ ಕೆ. ಭಾಸ್ಕರ ಶೆಟ್ಟಿ ಬಜನಿಗುತ್ತು ಪದೋನ್ನತಿ
ಸುಳ್ಯ ತಾಲೂಕಿನ ಬಾಳಿಲ ಗ್ರಾಮದ ಬಜನಿಗುತ್ತು ಕೆ.ಭಾಸ್ಕರ ಶೆಟ್ಟಿಯವರು ಸಹಾಯಕ ಸಂಚಾರ ನಿರೀಕ್ಷಕರಾಗಿ ಪದನ್ನೋತಿ ಹೊಂದಿ ಪುತ್ತೂರು ಕೋಟಿ- ಚೆನ್ನಯ KSRTC ಬಸ್ ನಿಲ್ದಾಣದ ನಿಲ್ದಾಣಾಧಿಕಾರಿಯಾಗಿ ನಿಯೋಜನೆಗೊಂಡಿದ್ದಾರೆ. 1992 ರಲ್ಲಿ ನಿರ್ವಾಹಕರಾಗಿ KSRTC ಮಂಗಳೂರು ವಿಭಾಗದಲ್ಲಿ ನೇಮಕಗೊಂಡರು.
ಪುತ್ತೂರು : ಸುಳ್ಯ ತಾಲೂಕಿನ ಬಾಳಿಲ ಗ್ರಾಮದ ಬಜನಿಗುತ್ತು ಕೆ.ಭಾಸ್ಕರ ಶೆಟ್ಟಿಯವರು ಸಹಾಯಕ ಸಂಚಾರ ನಿರೀಕ್ಷಕರಾಗಿ ಪದನ್ನೋತಿ ಹೊಂದಿ ಪುತ್ತೂರು ಕೋಟಿ- ಚೆನ್ನಯ KSRTC ಬಸ್ ನಿಲ್ದಾಣದ ನಿಲ್ದಾಣಾಧಿಕಾರಿಯಾಗಿ ನಿಯೋಜನೆಗೊಂಡಿದ್ದಾರೆ.
1992 ರಲ್ಲಿ ನಿರ್ವಾಹಕರಾಗಿ KSRTC ಮಂಗಳೂರು ವಿಭಾಗದಲ್ಲಿ ನೇಮಕಗೊಂಡರು.
2022ರಲ್ಲಿ ಸಂಚಾರ ನಿಯಂತ್ರಕರಾಗಿ ಕುಕ್ಕೆ ಸುಬ್ರಹ್ಮಣ್ಯ ಬಸ್ ನಿಲ್ದಾಣದಲ್ಲಿ ಸೇವೆ ಸಲ್ಲಿಸಿದ ಭಾಸ್ಕರ ಶೆಟ್ಟಿಯವರು 2024ರಿಂದ ಪುತ್ತೂರು ಬಸ್ ನಿಲ್ದಾಣದಲ್ಲಿ ಮುಂಗಡ ಟಿಕೆಟ್ ಕಾಯ್ದಿರಿಸುವ ಕೌಂಟರ್ ನಲ್ಲಿ ಕಾರ್ಯನಿರ್ವಹಿಸಿ, 2026 ಜೂನ್ ನಲ್ಲಿ ಬಸ್ ನಿಲ್ದಾಣದ ಸಹಾಯಕ ಸಂಚಾರ ನಿರೀಕ್ಷಕರಾಗಿ ಪದೋನ್ನತಿ ಹೊಂದಿದ್ದಾರೆ.
ಬಜನಿಯಲ್ಲಿ ಕೃಷಿಕರಾಗಿಯೂ ತಮ್ಮನ್ನು ತೊಡಗಿಸಿಕೊಂಡಿರುವ ಭಾಸ್ಕರ ಶೆಟ್ಟಿಯವರ ಪತ್ನಿ ಸೀಮಾ ಬಿ. ಶೆಟ್ಟಿ, ಹಿರಿಯ ಪುತ್ರಿ ಕು. ಸನ್ಮಿತಾ ಶೆಟ್ಟಿ ಬಿ.ಇ ಪದವೀಧರೆಯಾಗಿ ಬೆಂಗಳೂರಿನಲ್ಲಿ ಸಾಫ್ಟ್‌ವೇರ್ ಇಂಜಿನಿಯರ್ ಆಗಿ ಉದ್ಯೋಗದಲ್ಲಿದ್ದಾರೆ.
-
Uncategorized17 hours ago
ಪುತ್ತೂರು : ಬಾಡಿಗೆ ಮನೆಯಲ್ಲಿ ಮಲಗಿದ್ದ ಸ್ಥಿತಿಯಲ್ಲೇ ಯುವಕ ಸಾವು
-
Uncategorized19 hours ago
Puttur Court retaining wall collapse : ಹತ್ತು ತಿಂಗಳ ಹಿಂದಷ್ಟೇ ಉದ್ಘಾಟನೆ; ಪುತ್ತೂರು ಹೊಸ ನ್ಯಾಯಾಲಯದ ತಡೆಗೋಡೆ ಕುಸಿತ- ಕಾಮಗಾರಿಯ ಗುಣಮಟ್ಟದ ಬಗ್ಗೆ ಚರ್ಚೆ
-
ಮಂಗಳೂರು22 hours agoAuto passengers-ದಕ್ಷಿಣ ಕನ್ನಡದಲ್ಲಿ ಆಟೊ ಪ್ರಯಾಣಿಕರಿಗೆ ಮತ್ತೊಂದು ದರ ಏರಿಕೆ ಶಾಕ್: ಇಲ್ಲಿದೆ ಪರಿಷ್ಕೃತ ರೇಟ್ ಕಾರ್ಡ್
-
ಅಂತರ ರಾಜ್ಯ21 hours agoBlackmail-ದೋಸೆಯಲ್ಲಿ ಸತ್ತ ಇಲಿ ಪತ್ತೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್; ದೂರು ನೀಡಿದ್ದ ಮಹಿಳೆಯಿಂದಲೇ ₹25 ಲಕ್ಷಕ್ಕೆ ಬ್ಲ್ಯಾಕ್ಮೇಲ್..!
-
ಉದ್ಯೋಗ23 hours agoPuttur-Salesನಿಂದ Technicianವರೆಗೆ; ಪುತ್ತೂರಿನ ಶ್ರೀ ತಿರುಮಲಾ TVSನಲ್ಲಿ ಭರ್ಜರಿ Job Opening
-
ಬಿಗ್ ನ್ಯೂಸ್22 hours agoPuttur-ಪುತ್ತೂರು : ಕೋಟಿ- ಚೆನ್ನಯ KSRTC ಬಸ್ ನಿಲ್ದಾಣದ ನಿಲ್ದಾಣಾಧಿಕಾರಿಯಾಗಿ ಕೆ. ಭಾಸ್ಕರ ಶೆಟ್ಟಿ ಬಜನಿಗುತ್ತು ಪದೋನ್ನತಿ
-
ಅಂತರ ರಾಜ್ಯ22 hours agoPremananda Ashram-ಪ್ರೇಮಾನಂದ ಆಶ್ರಮದ ಶಿಷ್ಯನ ಸಾವು ಪ್ರಕರಣಕ್ಕೆ ಟ್ವಿಸ್ಟ್: ರಕ್ತದ ಕಲೆ, ಸಿಸಿಟಿವಿ ದೃಶ್ಯಗಳ ಪರಿಶೀಲನೆ
-
Uncategorized5 hours ago
Naana Paatekar No More : ವ್ಯವಸ್ಥೆಯ ವಿರುದ್ಧದ ಧ್ವನಿಗೆ ರೂಪ ನೀಡಿದ, ತನ್ನ ಡೈಲಾಗ್ ನಿಂದಲೇ ಅಸಂಖ್ಯಾತ ಅಭಿಮಾನಿಗಳನ್ನು ಗಳಿಸಿದ್ದ ಅಭಿಜಾತ ಕಲಾವಿದ ನಾನಾಪಾಟೇಕರ್ ಇನ್ನಿಲ್ಲ


















