ದಕ್ಷಿಣ ಕನ್ನಡ
Belthangady | ಬೆಳ್ತಂಗಡಿ: ರಸ್ತೆ ಗುಂಡಿಗಳಲ್ಲಿ ದೀಪಾವಳಿ ಆಚರಣೆ – ಮತ್ತೊಮ್ಮೆ ಸದ್ದು ಮಾಡಿದ ‘40%’
ಬೆಳ್ತಂಗಡಿ: ಗುಂಡಿ ಬಿದ್ದ ರಸ್ತೆಗಳನ್ನು ದುರಸ್ತಿ ಮಾಡದ ಸರ್ಕಾರ, ಜನಪ್ರತಿನಿಧಿಗಳ ಕಾರ್ಯವನ್ನು ಖಂಡಿಸಿ ಯುವಕರ ತಂಡ ರಸ್ತೆ ಗುಂಡಿಗಳಲ್ಲಿ ದೀಪ ಹಚ್ಚಿ ದೀಪಾವಳಿ ಆಚರಣೆ ಮಾಡಿ ವಿನೂತನ ಪ್ರತಿಭಟನೆ ಮಾಡಿದ ಘಟನೆ ಬೆಳ್ತಂಗಡಿಯಲ್ಲಿ (Belthangady) ನಡೆದಿದೆ.
ಬುಧವಾರ ಸಂಜೆ ಬೆಳ್ತಂಗಡಿ ಸಮೀಪದ ಲಾಯಿಲ ಗ್ರಾಮದ ರಾಘವೇಂದ್ರ ಮಠದ ಹತ್ತಿರ ರಾಷ್ಟ್ರೀಯ ಹೆದ್ದಾರಿಯ ರಸ್ತೆ ಗುಂಡಿಗಳಲ್ಲಿ ದೀಪ ಹಚ್ಚಿ ದೀಪಾವಳಿ ಆಚರಣೆ ಮಾಡಲಾಯಿತು. ಇದರಲ್ಲಿ 40% ಮತ್ತೊಮ್ಮೆ ಸದ್ದು ಮಾಡಿದೆ. ದೀಪಗಳಲ್ಲಿಯೇ ರಸ್ತೆಗಳಲ್ಲಿ 40% ಎಂದು ಬರೆದು ಪ್ರತಿಭಟಿಸಿದರು.
ಬುಧವಾರ ಸಂಜೆ ಬೆಳ್ತಂಗಡಿ ಸಮೀಪದ ಲಾಯಿಲ ಗ್ರಾಮದ ರಾಘವೇಂದ್ರ ಮಠದ ಹತ್ತಿರ ರಾಷ್ಟ್ರೀಯ ಹೆದ್ದಾರಿಯ ರಸ್ತೆ ಗುಂಡಿಗಳಲ್ಲಿ ದೀಪ ಹಚ್ಚಿ ದೀಪಾವಳಿ ಆಚರಣೆ ಮಾಡಲಾಯಿತು.
ಕಾಂಗ್ರೆಸ್ ಸಾಮಾಜಿಕ ಜಾಲತಾಣ ವಿಭಾಗದ ಜಿಲ್ಲಾ ನಾಯಕ ಸಂದೀಪ್ ಎಸ್ ಅಳದಂಗಡಿ ಮಾತನಾಡಿ ನಮ್ಮ ತಾಲೂಕಿನ ಅವ್ಯವಸ್ಥೆ ಇಡೀ ರಾಜ್ಯದಲ್ಲಿಯೇ ಕುಖ್ಯಾತಿ ಪಡೆದಿದೆ. ರಾಜ್ಯ ಸಂಪುಟ ಸಚಿವ ಸುನೀಲ್ ಕುಮಾರ್ ಇತ್ತೀಚಿಗೆ ರಸ್ತೆ ಬದಲಿಸಿ ಪ್ರಯಾಣಿಸಿರುವುದು ಶಾಸಕ, ಸಂಸದರಿಗೆ ನಾಚಿಕೆ ವಿಚಾರ ಎಂದರು.
ಈ ಸಂದರ್ಭದಲ್ಲಿ ಯುವ ಕಾಂಗ್ರೆಸ್ ಅಧ್ಯಕ್ಷ ಅನಿಲ್ ಪೈ, ಜಿಲ್ಲಾ ಯುವ ಕಾಂಗ್ರೆಸ್ ಕಾರ್ಯದರ್ಶಿ ಪ್ರಜ್ವಲ್ ಜೈನ್, ಯುವ ಇಂಟೆಕ್ ಅಧ್ಯಕ್ಷ ನವೀನ್ ಗೌಡ ಸವಣಾಲು, ಗಣೇಶ್ ಕಣಿಯೂರು, ಸಾಮಾಜಿಕ ಕಾರ್ಯಕರ್ತರಾದ ಅಲ್ತಾಫ್, ಆಲ್ವಿನ್, ನೌಷದ್ ಕೈಕಂಬ ಮತ್ತು ಇತರರು ಉಪಸ್ಥಿತರಿದ್ದರು.
ಶಿಕ್ಷಣ
Vivekananda-ವಿವೇಕಾನಂದ ಪಾಲಿಟೆಕ್ನಿಕ್‌ನಲ್ಲಿ “ಯೂನಿಮೆಕ್ ಏರೋಸ್ಪೇಸ್” ಸಂಸ್ಥೆ ವತಿಯಿಂದ ಕ್ಯಾಂಪಸ್ ಸಂದರ್ಶನ
ವಿವೇಕಾನಂದ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಮೆಕ್ಯಾನಿಕಲ್ ಮತ್ತು ಆಟೋಮೊಬೈಲ್ ಇಂಜಿನಿಯರಿಂಗ್ ವಿಭಾಗದ ವಿದ್ಯಾರ್ಥಿಗಳಿಗಾಗಿ ಬೆಂಗಳೂರಿನ “ಯೂನಿಮೆಕ್ ಏರೋಸ್ಪೇಸ್” ಸಂಸ್ಥೆಯ ವತಿಯಿಂದ ಕ್ಯಾಂಪಸ್ ಸಂದರ್ಶನವನ್ನು ಹಮ್ಮಿಕೊಳ್ಳಲಾಗಿತ್ತು. ಈ ಪ್ರಕ್ರಿಯೆಯಲ್ಲಿ 14 ವಿದ್ಯಾರ್ಥಿಗಳು ಆಯ್ಕೆಯಾಗಿದ್ದಾರೆ.

ಪುತ್ತೂರು: ವಿವೇಕಾನಂದ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಮೆಕ್ಯಾನಿಕಲ್ ಮತ್ತು ಆಟೋಮೊಬೈಲ್ ಇಂಜಿನಿಯರಿಂಗ್ ವಿಭಾಗದ ವಿದ್ಯಾರ್ಥಿಗಳಿಗಾಗಿ ಬೆಂಗಳೂರಿನ “ಯೂನಿಮೆಕ್ ಏರೋಸ್ಪೇಸ್” ಸಂಸ್ಥೆಯ ವತಿಯಿಂದ ಕ್ಯಾಂಪಸ್ ಸಂದರ್ಶನವನ್ನು ಹಮ್ಮಿಕೊಳ್ಳಲಾಗಿತ್ತು. ಈ ಪ್ರಕ್ರಿಯೆಯಲ್ಲಿ 14 ವಿದ್ಯಾರ್ಥಿಗಳು ಆಯ್ಕೆಯಾಗಿದ್ದಾರೆ.
ಲಿಖಿತ ಪರೀಕ್ಷೆ ಹಾಗೂ ನೇರ ಸಂದರ್ಶನದ ಮೂಲಕ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಯಿತು. ಕಂಪನಿಯ ಹೆಚ್.ಆರ್. ಅಧಿಕಾರಿ ಸುನಿಲ್ ಹಾಗೂ ನೇಮಕಾತಿ ಅಧಿಕಾರಿ ಸಂತೋಷ್.ವಿ.ಜೋಸ್ ಸಂದರ್ಶನ ಪ್ರಕ್ರಿಯೆಯನ್ನು ನಡೆಸಿಕೊಟ್ಟರು.
ಕಾಲೇಜಿನ ಹಿರಿಯ ವಿದ್ಯಾರ್ಥಿಯೂ ಆಗಿರುವ ಸಂತೋಷ್.ವಿ.ಜೋಸ್ ಅವರು ವಿದ್ಯಾರ್ಥಿಗಳಿಗೆ ಉತ್ತಮ ವೃತ್ತಿ ಜೀವನ ರೂಪಿಸಿಕೊಳ್ಳುವ ಕುರಿತು ಮತ್ತು ಭವಿಷ್ಯದ ಅವಕಾಶಗಳ ಬಗ್ಗೆ ವಿವರಿಸಿದರು.
ಈ ಸಂದರ್ಭದಲ್ಲಿ ಸಂಸ್ಥೆಯ ಪ್ಲೇಸ್‌ಮೆಂಟ್ ವಿಭಾಗದ ಅಧಿಕಾರಿ ಉಷಾಕಿರಣ್ ಹಾಗೂ ಮೆಕ್ಯಾನಿಕಲ್ ಮತ್ತು ಆಟೋಮೊಬೈಲ್ ಇಂಜಿನಿಯರಿಂಗ್ ವಿಭಾಗದ ಬೋಧಕ, ಬೋಧಕೇತರ ಸಿಬ್ಬಂದಿಗಳು ಉಪಸ್ಥಿತರಿದ್ದರು.
ಅಪರಾಧ
Mangalore-ಮಂಗಳೂರು: ನಕಲಿ ಪಾಸ್‌ಪೋರ್ಟ್ ಪ್ರಕರಣ; 2020ರಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ
ನಕಲಿ ಪಾಸ್‌ಪೋರ್ಟ್ ಪ್ರಕರಣದಲ್ಲಿ ಶಿಕ್ಷೆಗೆ ಗುರಿಯಾಗಿ 2020ರಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಮಂಗಳೂರು ಉತ್ತರ ಉಪವಿಭಾಗದ ಎಸಿಪಿ ನೇತೃತ್ವದ ತಂಡ ಬಂಧಿಸಿದೆ. ಬಂಧಿತನನ್ನು ಕಾಸರಗೋಡು ಜಿಲ್ಲೆಯ ವೇಲಾಯುಧನ್ (54) ಎಂದು ಗುರುತಿಸಲಾಗಿದೆ.
ಮಂಗಳೂರು: ನಕಲಿ ಪಾಸ್‌ಪೋರ್ಟ್ ಪ್ರಕರಣದಲ್ಲಿ ಶಿಕ್ಷೆಗೆ ಗುರಿಯಾಗಿ 2020ರಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಮಂಗಳೂರು ಉತ್ತರ ಉಪವಿಭಾಗದ ಎಸಿಪಿ ನೇತೃತ್ವದ ತಂಡ ಬಂಧಿಸಿದೆ.
ಬಂಧಿತನನ್ನು ಕಾಸರಗೋಡು ಜಿಲ್ಲೆಯ ವೇಲಾಯುಧನ್ (54) ಎಂದು ಗುರುತಿಸಲಾಗಿದೆ.
2010ರ ಜೂನ್ 22ರಂದು ನಕಲಿ ಪಾಸ್‌ಪೋರ್ಟ್ ಪಡೆದು ಬಜಪೆ ವಿಮಾನ ನಿಲ್ದಾಣದ ಮೂಲಕ ವಿದೇಶಕ್ಕೆ ತೆರಳಲು ಯತ್ನಿಸುತ್ತಿದ್ದ ವೇಳೆ ಇಮಿಗ್ರೇಷನ್ ಅಧಿಕಾರಿಗಳು ಆತನನ್ನು ವಶಕ್ಕೆ ಪಡೆದು ಬಜಪೆ ಪೊಲೀಸರಿಗೆ ಒಪ್ಪಿಸಿದ್ದರು.
ಈ ಸಂಬಂಧ ಬಜಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಆರೋಪಿಯ ವಿರುದ್ಧ ಭಾರತೀಯ ದಂಡ ಸಂಹಿತೆಯ ಕಲಂ 419, 420, 468 ಹಾಗೂ 34 ಮತ್ತು ಪಾಸ್‌ಪೋರ್ಟ್ ಕಾಯ್ದೆ-1967ರ ಕಲಂ 12(1)(b), (d), (e) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿತ್ತು.
ಪ್ರಕರಣದ ತನಿಖೆ ನಡೆಸಿದ ಪೊಲೀಸರು ನ್ಯಾಯಾಲಯಕ್ಕೆ ದೋಷಾರೋಪಣಾ ಪತ್ರ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ಸೇಷನ್ಸ್ ನ್ಯಾಯಾಲಯವು 2020ರ ಡಿಸೆಂಬರ್ 1ರಂದು ಆರೋಪಿಗೆ ಒಂದು ವರ್ಷ ಆರು ತಿಂಗಳ ಶಿಕ್ಷೆ ವಿಧಿಸಿತ್ತು.
ಇದನ್ನು ಪ್ರಶ್ನಿಸಿ ವೇಲಾಯುಧನ್ ಕರ್ನಾಟಕ ಹೈಕೋರ್ಟ್‌ನಲ್ಲಿ ಕ್ರಿಮಿನಲ್ ರಿವಿಷನ್ ಪಿಟಿಷನ್ ಸಂಖ್ಯೆ 104/2021 ಸಲ್ಲಿಸಿದ್ದ. ಆದರೆ ಹೈಕೋರ್ಟ್ ಆತನ ಅರ್ಜಿಯನ್ನು ತಿರಸ್ಕರಿಸಿತ್ತು. ಬಳಿಕ ನ್ಯಾಯಾಲಯದ ಆದೇಶದ ಹಿನ್ನೆಲೆಯಲ್ಲಿ ಬಂಧನಕ್ಕೆ ಒಳಗಾಗದೆ ವೇಲಾಯುಧನ್ ತಲೆಮರೆಸಿಕೊಂಡಿದ್ದ.
ಸುಮಾರು ಆರು ವರ್ಷಗಳಿಂದ ಪೊಲೀಸರಿಗೆ ಸಿಗದೆ ತಲೆಮರೆಸಿಕೊಂಡಿದ್ದ ಆತನನ್ನು ಅಕ್ಟೋಬರ್ 8ರಂದು ಮಂಗಳೂರು ಉತ್ತರ ಉಪವಿಭಾಗದ ಎಸಿಪಿ ನೇತೃತ್ವದ ತಂಡ ವಶಕ್ಕೆ ಪಡೆದುಕೊಂಡಿದೆ. ಬಳಿಕ ಮುಂದಿನ ಕಾನೂನು ಕ್ರಮಕ್ಕಾಗಿ ಆತನನ್ನು ಬಜಪೆ ಪೊಲೀಸ್ ಠಾಣೆಗೆ ಹಸ್ತಾಂತರಿಸಲಾಗಿದೆ.
ಅಪರಾಧ
Uppinangadi-ಉಪ್ಪಿನಂಗಡಿ: ತೋಟದ ಕೆಲಸಕ್ಕೆ ಬರುತ್ತೇನೆಂದು ಹಣ ಪಡೆದು ನಾಪತ್ತೆ
ತೋಟದ ಕೆಲಸಕ್ಕೆ ಬರುತ್ತೇನೆಂದು ಹೇಳಿ ತೋಟದ ಮಾಲಕರೊಬ್ಬರಿಂದ ₹2 ಸಾವಿರ ಪಡೆದು ವ್ಯಕ್ತಿಯೊಬ್ಬ ನಾಪತ್ತೆಯಾಗಿರುವ ಘಟನೆ ಕೋಡಿಂಬಾಡಿ ಪರಿಸರದಲ್ಲಿ ನಡೆದಿದೆ.
ಉಪ್ಪಿನಂಗಡಿ: ತೋಟದ ಕೆಲಸಕ್ಕೆ ಬರುತ್ತೇನೆಂದು ಹೇಳಿ ತೋಟದ ಮಾಲಕರೊಬ್ಬರಿಂದ ₹2 ಸಾವಿರ ಪಡೆದು ವ್ಯಕ್ತಿಯೊಬ್ಬ ನಾಪತ್ತೆಯಾಗಿರುವ ಘಟನೆ ಕೋಡಿಂಬಾಡಿ ಪರಿಸರದಲ್ಲಿ ನಡೆದಿದೆ.
ಕೋಡಿಂಬಾಡಿ ಪರಿಸರದ ಪ್ರಗತಿಪರ ಕೃಷಿಕರೊಬ್ಬರ ಮನೆಗೆ ನಾಲ್ಕು ದಿನಗಳ ಹಿಂದೆ ತೆರಳಿದ ಅಪರಿಚಿತ ವ್ಯಕ್ತಿ, ತಾನು ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆಯವನು ಎಂದು ಪರಿಚಯಿಸಿಕೊಂಡಿದ್ದಾನೆ. ತೋಟದ ಕೆಲಸಕ್ಕೆ ಶಾಶ್ವತವಾಗಿ ಕಾರ್ಮಿಕರು ಬೇಕೇ ಎಂದು ವಿಚಾರಿಸಿದ್ದಾನೆ. ಕೆಲಸಗಾರರ ಅಗತ್ಯವಿದ್ದ ಹಿನ್ನೆಲೆಯಲ್ಲಿ ಕೃಷಿಕರು ಬೇಕು ಎಂದು ತಿಳಿಸಿದಾಗ, ತಾನು ಸದ್ಯ ಗೇರುಕಟ್ಟೆಯಲ್ಲಿ ಕೆಲಸ ಮಾಡುತ್ತಿದ್ದು, ಅಲ್ಲಿಂದ ತನ್ನ ಬಟ್ಟೆ-ಬರೆ ಹಾಗೂ ಇತರ ಸಾಮಗ್ರಿಗಳನ್ನು ತೆಗೆದುಕೊಂಡು, ಹೆಂಡತಿ-ಮಕ್ಕಳೊಂದಿಗೆ ಬರುವುದಾಗಿ ಹೇಳಿದ್ದಾನೆ.
ಆದರೆ ರಿಕ್ಷಾ ಮಾಡಿಕೊಂಡು ಬರಲು ತನ್ನ ಬಳಿ ಹಣವಿಲ್ಲ ಎಂದು ಹೇಳಿ ಮೊದಲಿಗೆ ₹1 ಸಾವಿರ ಕೇಳಿದ್ದಾನೆ. ಆತನ ಮಾತನ್ನು ನಂಬಿದ ತೋಟದ ಮಾಲಕರು ಹಣ ನೀಡಿದ್ದಾರೆ. ಬಳಿಕ ಅಂಗಡಿಯಲ್ಲಿ ಸ್ವಲ್ಪ ಸಾಲವಿದ್ದು, ಅದನ್ನು ತೀರಿಸಲು ಮತ್ತೊಂದು ₹1 ಸಾವಿರ ನೀಡುವಂತೆ ಕೇಳಿಕೊಂಡಿದ್ದಾನೆ. ಇದಕ್ಕೂ ಒಪ್ಪಿದ ಕೃಷಿಕರು ಒಟ್ಟು ₹2 ಸಾವಿರ ನೀಡಿದ್ದಾರೆ.
ಹಣ ಪಡೆದುಕೊಂಡು ತೆರಳಿದ ವ್ಯಕ್ತಿ ನಾಲ್ಕು ದಿನ ಕಳೆದರೂ ಮತ್ತೆ ಕೃಷಿಕರ ಮನೆಗೆ ಬಂದಿಲ್ಲ. ಆತನ ಮೊಬೈಲ್ ನಂಬರ್ ಕೇಳಿದಾಗ ತನ್ನ ಬಳಿ ಮೊಬೈಲ್ ಇಲ್ಲ ಎಂದು ಹೇಳಿದ್ದ ಎನ್ನಲಾಗಿದೆ.
-
ಮಂಗಳೂರು18 hours agoAuto passengers-ದಕ್ಷಿಣ ಕನ್ನಡದಲ್ಲಿ ಆಟೊ ಪ್ರಯಾಣಿಕರಿಗೆ ಮತ್ತೊಂದು ದರ ಏರಿಕೆ ಶಾಕ್: ಇಲ್ಲಿದೆ ಪರಿಷ್ಕೃತ ರೇಟ್ ಕಾರ್ಡ್
-
Uncategorized13 hours ago
ಪುತ್ತೂರು : ಬಾಡಿಗೆ ಮನೆಯಲ್ಲಿ ಮಲಗಿದ್ದ ಸ್ಥಿತಿಯಲ್ಲೇ ಯುವಕ ಸಾವು
-
Uncategorized16 hours ago
Puttur Court retaining wall collapse : ಹತ್ತು ತಿಂಗಳ ಹಿಂದಷ್ಟೇ ಉದ್ಘಾಟನೆ; ಪುತ್ತೂರು ಹೊಸ ನ್ಯಾಯಾಲಯದ ತಡೆಗೋಡೆ ಕುಸಿತ- ಕಾಮಗಾರಿಯ ಗುಣಮಟ್ಟದ ಬಗ್ಗೆ ಚರ್ಚೆ
-
ಅಂತರ ರಾಜ್ಯ17 hours agoBlackmail-ದೋಸೆಯಲ್ಲಿ ಸತ್ತ ಇಲಿ ಪತ್ತೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್; ದೂರು ನೀಡಿದ್ದ ಮಹಿಳೆಯಿಂದಲೇ ₹25 ಲಕ್ಷಕ್ಕೆ ಬ್ಲ್ಯಾಕ್ಮೇಲ್..!
-
ಉದ್ಯೋಗ19 hours agoPuttur-Salesನಿಂದ Technicianವರೆಗೆ; ಪುತ್ತೂರಿನ ಶ್ರೀ ತಿರುಮಲಾ TVSನಲ್ಲಿ ಭರ್ಜರಿ Job Opening
-
ಅಂತರ ರಾಜ್ಯ23 hours agoಕಾಸರಗೋಡು: ಆರ್ಎಸ್ಎಸ್ ವಕ್ತಾರರ ಭಾಗವಹಿಸುವಿಕೆ ವಿರೋಧಿಸಿ ಪ್ರತಿಭಟನೆ; ಘರ್ಷಣೆಯಲ್ಲಿ ಮೂವರು ವಿದ್ಯಾರ್ಥಿಗಳಿಗೆ ಗಾಯ
-
ಬಿಗ್ ನ್ಯೂಸ್18 hours agoPuttur-ಪುತ್ತೂರು : ಕೋಟಿ- ಚೆನ್ನಯ KSRTC ಬಸ್ ನಿಲ್ದಾಣದ ನಿಲ್ದಾಣಾಧಿಕಾರಿಯಾಗಿ ಕೆ. ಭಾಸ್ಕರ ಶೆಟ್ಟಿ ಬಜನಿಗುತ್ತು ಪದೋನ್ನತಿ
-
ಸ್ಥಳೀಯ23 hours agoBeltangadi-ಬೆಳ್ತಂಗಡಿ: ಚಾಲಕನ ಸಮಯಪ್ರಜ್ಞೆ; ಬಸ್ನಲ್ಲಿ ಅಸ್ವಸ್ಥಗೊಂಡ ಮಹಿಳೆ ಅಪಾಯದಿಂದ ಪಾರು


















